ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಅವರು ಬಸವಣ್ಣನವರ ವಚನದ ಮೂಲಕ ಅನರ್ಹ ಶಾಸಕರ ಪರಿಸ್ಥಿತಿಯ ಕುರಿತು ಲೇವಡಿ ಮಾಡಿದ್ದಾರೆ.
ಟ್ವೀಟ್ ಮಾಡಿರುವ ಮಾಜಿ ಸಿಎಂ, ಕಾಲಲಿ ಕಟ್ಟಿದ ಗುಂಡು… ಕೊರಳಲಿ ಕಟ್ಟಿದ ಬೆಂಡು… ತೇಲಲೀಯದು ಗುಂಡು.. ಮುಳುಗಲೀಯದು ಬೆಂಡು… ಇಂತಪ್ಪ ಸಂಸಾರಶರಧಿಯ ದಾಂಟಿಸಿ ಕಾಲಾಂತಕನೆ ಕಾಯೋ ಕೂಡಲಸಂಗಮ. ಅರ್ಹತೆ ಕಳೆದುಕೊಂಡ ಶಾಸಕರ ಪಾಡು ನೋಡಿ ಹೇಳಬೇಕೆನಿಸಿದ್ದು ಎಂದು ವ್ಯಂಗ್ಯವಾಡಿದ್ದಾರೆ.
ಕಾಲಲಿ ಕಟ್ಟಿದ ಗುಂಡು ಕೊರಳಲಿ ಕಟ್ಟಿದ ಬೆಂಡು ತೇಲಲೀಯದು ಗುಂಡು ಮುಳುಗಲೀಯದು ಬೆಂಡು ಇಂತಪ್ಪ ಸಂಸಾರಶರಧಿಯ ದಾಂಟಿಸಿ ಕಾಲಾಂತಕನೆ ಕಾಯೋ ಕೂಡಲಸಂಗಮ.
ಅರ್ಹತೆ ಕಳೆದುಕೊಂಡ ಶಾಸಕರ ಪಾಡು ನೋಡಿ ಹೇಳಬೇಕೆನಿಸಿದ್ದು.
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) September 26, 2019
ಸಂಸಾರದಲ್ಲಿ ವ್ಯಕ್ತಿಯ ಕರುಣಾಜನಕ ಸ್ಥಿತಿಯನ್ನು ವಿಶ್ವಗುರು ಬಸವಣ್ಣನವರು ತಮ್ಮ ವಚನದ ಮೂಲಕ ತಿಳಿಸಿದ್ದಾರೆ. ಈ ವಚವನ್ನು ಎಚ್.ಡಿ.ಕುಮಾರಸ್ವಾಮಿ ಅವರು ಅನರ್ಹ ಶಾಸಕರಿಗೆ ಹೋಲಿಕೆ ಮಾಡಿದ್ದಾರೆ. ಅನರ್ಹರ ಪರಿಸ್ಥಿತಿ ಹೇಗಾಗಿದೆ ಎಂದರೆ ಅತ್ತಲೂ ಇಲ್ಲ, ಇತ್ತಲೂ ಎಂದು ಗೇಲಿ ಮಾಡಿದ್ದಾರೆ.
ಇದಕ್ಕೂ ಮುನ್ನ ನಗರದ ಜೆ.ಪಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಮಾಜಿ ಸಿಎಂ, ಉಪ ಚುನಾವಣೆಗೆ ಸುಪ್ರೀಂಕೋರ್ಟ್ ತಡೆ ನೀಡಿರುವುದಕ್ಕೆ ಕೇಂದ್ರ ಸರ್ಕಾರ, ಬಿಜೆಪಿ ಹಾಗೂ ಚುನಾವಣಾ ಆಯೋಗದ ವಿರುದ್ಧ ಕಿಡಿಕಾರಿದ್ದರು. ಇತಿಹಾಸದಲ್ಲಿ ಮೊದಲ ಬಾರಿಗೆ ಚುನಾವಣೆ ಆಯೋಗ ಕೋರ್ಟ್ ಮುಂದೆ ಚುನಾವಣೆ ಮುಂದೂಡಬಹುದು ಎಂದು ಸ್ವಯಂಕೃತವಾಗಿ ಹೇಳಿದೆ. ಸಾಂವಿಧಾನಿಕ ಸಂಸ್ಥೆಯ ಈ ನಡವಳಿಕೆ ಸರಿಯಲ್ಲ. ಚುನಾವಣೆ ಆಯೋಗದ ಮೇಲೆ ಪ್ರಭಾವ ಬೀರಿದ್ದು ಯಾರು ಅನ್ನುವುದು ಯಕ್ಷ ಪ್ರಶ್ನೆಯಾಗಿದೆ. ಆದರೆ ಕೇಂದ್ರ ಸರ್ಕಾರ ಸಾಂವಿಧಾನಿಕ ಮತ್ತು ಸ್ವತಂತ್ರ ಸಂಸ್ಥೆಗಳನ್ನು ಕೈ ಗೊಂಬೆ ಮಾಡಿಕೊಂಡಿದೆ ಎಂದು ಹೇಳಿದ್ದರು.
ನೆರೆ ಪರಿಹಾರ ತರಲು ಕೇಂದ್ರ ನಾಯಕರನ್ನು ಭೇಟಿ ಮಾಡಲು ಯಡಿಯೂರಪ್ಪನವರಿಗೆ ಸಮಯ ಇಲ್ಲ. ಆದರೆ ಚುನಾವಣೆ ಘೋಷಣೆಯಾದ ಕೂಡಲೇ ತರಾತುರಿಯಲ್ಲಿ ಯಡಿಯೂರಪ್ಪ ದೆಹಲಿಗೆ ಹೋದರು. ಅಲ್ಲಿ ಏನು ಚರ್ಚೆ ಆಗಿದೆ. ನೆರೆ ಪರಿಹಾರದ ಬಗ್ಗೆ ಚರ್ಚೆ ಆಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಬೆಂಗಳೂರು: ಸುಪ್ರೀಂಕೋರ್ಟ್ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಅನುಕೂಲಕ್ಕೆ ತಕ್ಕಂತೆ ತೀರ್ಪು ಕೊಡಬೇಕಿತ್ತಾ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರಶ್ನಿಸಿ ಕಿಡಿಕಾರಿದ್ದಾರೆ.
ಎಚ್.ಡಿ.ದೇವೇಗೌಡ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿಎಂ, ದೇವೇಗೌಡರ ಪ್ರತಿಯೊಂದ ಶಬ್ದಕ್ಕೂ ಗೌರವ ಇದೆ. ಸುಪ್ರೀಂಕೋರ್ಟ್ ಬಗ್ಗೆ ಹಗುರವಾಗಿ ಮಾತನಾಡುವುದು ಎಷ್ಟು ಸರಿ? ಅವರಿಂದ ಇಂತಹ ಹೇಳಿಕೆಯನ್ನು ನಾನು ನಿರೀಕ್ಷೆ ಮಾಡಿರಲಿಲ್ಲ. ದೇವೇಗೌಡರ ಹೇಳಿಕೆಯಿಂದ ನನಗೆ ತುಂಬ ನೋವಾಗಿದೆ. ಅವರು ತಮ್ಮ ಹೇಳಿಕೆ ವಾಪಸ್ ತೆಗೆದುಕೊಳ್ಳಲಿ ಎಂದು ಹೇಳಿದರು.
ವಿಪಕ್ಷಗಳು ಅನಗತ್ಯವಾಗಿ ಸುಪ್ರೀಂಕೋರ್ಟ್ ತೀರ್ಮಾನದ ಬಗ್ಗೆ ಹಗುರವಾಗಿ ಮಾತನಾಡುತ್ತಿರುವುದು ಸರಿಯಲ್ಲ. ತೀರ್ಪು ಬರುವವರೆಗೂ ಕಾದು ನೋಡಿ ಮಾತನಾಡಬೇಕು. ಸುಪ್ರೀಂಕೋರ್ಟ್ ತೀರ್ಪು ಐತಿಹಾಸಿಕ ಎಂದು ಹೇಳಿದರು.
ಉಪಚುನಾವಣೆಗೆ ತಡೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿಎಂ, ಸುಪ್ರೀಂಕೋರ್ಟ್ ಕೂಲಂಕುಶವಾಗಿ ಪರಿಶೀಲನೆ ಮಾಡಿ ಅನರ್ಹ ಶಾಸಕರ ಬಗ್ಗೆ ತೀರ್ಮಾನ ಕೈಗೊಂಡಿದೆ. ಚುನಾವಣೆಯನ್ನು ಮುಂದಿನ ತಿಂಗಳು 22 ರವರೆಗೆ ವಿಚಾರಣೆ ಮುಂದೂಡಿದೆ. ವಿರೋಧ ಪಕ್ಷಗಳು ಸುಪ್ರೀಂಕೋರ್ಟ್ ಮೇಲೆಯೇ ಅನುಮಾನ ವ್ಯಕ್ತಪಡಿಸುತ್ತಿರುವುದು ನನಗೆ ಆಶ್ಚರ್ಯ ತಂದಿದೆ. ಉಪ ಚುನಾವಣೆ ತಡೆಯಿಂದ ಅನರ್ಹ ಶಾಸಕರಿಗೆ ರಿಲೀಫ್ ಸಿಕ್ಕಿದೆ ಎಂದು ಹೇಳಿದರು.
ಎಚ್‍ಡಿಡಿ ಹೇಳಿದ್ದೇನು?:
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಎಚ್.ಡಿ.ದೇವೇಗೌಡ ಅವರು, ಸುಪ್ರೀಂಕೋರ್ಟಿನಲ್ಲಿ ಚುನಾವಣೆ ಆಯೋಗ ಈ ಚುನಾವಣೆಯನ್ನು ಮುಂದೂಡಬಹುದು ಎಂದು ಹೇಳಿದೆ. ಹೀಗಾಗಿ ಉಪಚುನಾವಣೆ ಮುಂದೂಡಿಕೆಯಾಗಿದೆ. ಆಯೋಗಕ್ಕೆ ಕೇಂದ್ರ ಸರ್ಕಾರ ಸೂಚಿಸಿರಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಈ ಬೆಳವಣಿಗೆಯಿಂದಾಗಿ ಸ್ವಾಯತ್ತ ಸಂಸ್ಥೆಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿವೆಯೇ ಎಂಬ ಪ್ರಶ್ನೆ ಮೂಡುತ್ತದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪ್ರಭಾವ ಕೇಂದ್ರ ಸರ್ಕಾರದ ಮೇಲೆ ಇರಬಹುದು. ಕೇಂದ್ರ ಸರ್ಕಾರವೇ ಚುನಾವಣಾ ಆಯೋಗದ ಮೂಲಕ ಹೀಗೆ ಮಾಡಿಸಿರಬಹುದು. ಹೀಗಾಗಿ ಚುನಾವಣಾ ಆಯೋಗ ಅನರ್ಹ ಶಾಸಕರ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್‍ನಲ್ಲಿ ಮಧ್ಯಸ್ಥಿಕೆವಹಿಸಿದೆ ಅನ್ನಿಸುತ್ತಿದೆ ಎಂದು ಎಚ್‍ಡಿಡಿ ಕೇಂದ್ರದ ವಿರುದ್ಧ ಹರಿಹಾಯ್ದಿದ್ದರು.
ಬೆಂಗಳೂರು: ರಾಜ್ಯ ಹಾಗೂ ಕೇಂದ್ರ ಚುನಾವಣಾ ಆಯೋಗಗಳ ಮಧ್ಯೆಯೇ ಗೊಂದಲವಿದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಚುನಾವಣಾ ಆಯೋಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಜೆ.ಪಿ.ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೋರ್ಟ್ ಆದೇಶಕ್ಕೆ ತಲೆ ಬಾಗುತ್ತೇನೆ. ಕೋರ್ಟ್ ಅದೇಶದ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ, ರಾಜ್ಯ ಚುನಾವಣಾ ಆಯುಕ್ತರು ಅನರ್ಹರು ಚುನಾವಣೆಗೆ ನಿಲ್ಲಲು ಸಾಧ್ಯವಿಲ್ಲ ಎನ್ನುತ್ತಾರೆ. ಅತ್ತ ಸುಪ್ರೀಂ ಕೋರ್ಟ್‍ನಲ್ಲಿ ಕೇಂದ್ರ ಚುನಾವಣಾ ಆಯೋಗದವರು ಸ್ಪರ್ಧೆ ಮಾಡಬಹುದು ಎನ್ನುತ್ತಾರೆ. ಈ ಗೊಂದಲ ನಮಗೆ ಅನುಮಾನ ಮೂಡಿಸಿದೆ ಎಂದು ಚುನಾವಣಾ ಆಯೋಗದ ವಿರುದ್ಧ ಹರಿಹಾಯ್ದರು.
ಚುನಾವಣಾ ಆಯೋಗದ ಈ ನಡವಳಿಕೆ ಹಿಂದೆ ಯಾರಿದ್ದಾರೆ ನಮಗೆ ಗೊತ್ತಿಲ್ಲ. ರಾಜ್ಯ ಚುನಾವಣಾ ಆಯುಕ್ತರು ದೊಡ್ಡವರಾ ಅಥವಾ ಕೇಂದ್ರ ಚುನಾವಣಾ ಆಯೋಗ ದೊಡ್ಡದಾ ಹೊತ್ತಿಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳು ಈ ಬಗ್ಗೆ ಧ್ವನಿ ಎತ್ತಬೇಕು. ಈ ಕುರಿತು ರಾಜ್ಯದ ಜನತೆ ನಿರ್ಧರಿಸುತ್ತಾರೆ. ಸ್ಪೀಕರ್ ಆದೇಶಕ್ಕೆ ಕೋರ್ಟ್ ತಡೆ ಕೊಟ್ಟಿಲ್ಲ. ಅದಿನ್ನು ಜೀವಂತವಾಗಿ ಇದೆ. ಮುಂದೆ ಏನಾಗುತ್ತೋ ಕಾದು ನೋಡೋಣ ಎಂದು ತಿಳಿಸಿದರು.
ಉಪಚುನಾವಣೆ ಹಿನ್ನೆಲೆ ಕ್ಷೇತ್ರಗಳ ಉಸ್ತುವಾರಿಗಳನ್ನು ನೇಮಿಸಲಾಗಿತ್ತು. ಇದೀಗ ಚುನಾವಣೆ ರದ್ದಾಗಿದೆ. ಕೆ.ಆರ್.ಪೇಟೆ ಕ್ಷೇತ್ರಕ್ಕೆ ಪುಟ್ಟರಾಜು, ಹುಣಸೂರು ಕ್ಷೇತ್ರಕ್ಕೆ ಕುಮಾರಸ್ವಾಮಿ, ದೇವೇಗೌಡರು ಹಾಗೂ ಸಾ.ರಾ.ಮಹೇಶ್ ನೇತೃತ್ವ ವಹಿಸಲಿದ್ದಾರೆ. 15 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳು ತಯಾರಿದ್ದಾರೆ. ಆದರೆ ಸುಪ್ರೀಂ ಕೋರ್ಟ್ ಉಪಚುನಾವಣೆಗೆ ತಡೆ ನೀಡಿದೆ. ಹೀಗಾಗಿ ನಮ್ಮ ನಾಯಕರು ಕ್ಷೇತ್ರದ ಮುಖಂಡರ ಜೊತೆ ಚರ್ಚಿಸುತ್ತಾರೆ. ಎರಡೂ ಪಕ್ಷಕ್ಕೆ ಸ್ಪರ್ಧೆ ನಿಡುವ ಅಭ್ಯರ್ಥಿಗಳನ್ನು ಹಾಕುತ್ತೇವೆ. ಚುನಾವಣೆ ಮುಂದೂಡಿದರೂ ನಮ್ಮ ಕ್ಷೇತ್ರದ ಕೆಲಸಗಳನ್ನು ಮಾಡುತ್ತೇವೆ. ಪಕ್ಷದ ಸಂಘಟನೆ ಮುಂದುವರಿಯುತ್ತದೆ ಎಂದು ಮಾಹಿತಿ ನೀಡಿದರು.
ನವದೆಹಲಿ: ಅಹರ್ನ ಶಾಸಕರ ಪ್ರಕರಣ ಇತ್ಯರ್ಥವಾದ ಬಳಿಕ ಉಪ ಚುನಾವಣೆ ನಡೆಸಬಹುದು ಎಂದು ಸುಪ್ರೀಂಕೋರ್ಟ್ ಅಭಿಪ್ರಾಯ ಪಟ್ಟಿದೆ. ಈ ಆದೇಶದಿಂದ ಅನರ್ಹ ಶಾಸಕರು ಹಾಗೂ ಬಿಜೆಪಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಅನರ್ಹರ ಪರ ಹಿರಿಯ ವಕೀಲ ಮುಕುಲ್ ರೊಹ್ಟಗಿ, ವಿ.ಗಿರಿ, ಸಿ.ಎ. ಸುಂದರಂ, ಕೆ.ವಿ. ವಿಶ್ವನಾಥನ್, ಸಜ್ಜನ್ ಪೂವಯ್ಯ ಅವರು ಬುಧವಾರ ವಾದ ಮಂಡಿಸಿದ್ದರು. ಜೊತೆಗೆ ಸ್ಪೀಕರ್ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹಾಗೂ ಕಾಂಗ್ರೆಸ್ ಪರ ದೇವದತ್ತ ಕಾಮತ್ ವಾದಿಸಿದ್ದರು.
ವಿಚಾರಣೆಯನ್ನು ಗುರುವಾರ ಮುಂದೂಡಿದ್ದ ಕೋರ್ಟ್ ಕಾಂಗ್ರೆಸ್ ಪರ ಕಪಿಲ್ ಸಿಬಲ್ ವಾದ ಮಂಡಿಸಲು ಅವಕಾಶ ನೀಡಿತ್ತು. ಈ ನಿಟ್ಟಿನಲ್ಲಿ ಕಪಿಲ್ ಸಿಬಲ್ ಅವರು ಇಂದು ಸುದೀರ್ಘ ವಾದ ಮಂಡಿಸಿದರು.
ಕಪಿಲ್ ಸಿಬಲ್ ವಾದ ಹೀಗಿತ್ತು:
ಅನರ್ಹ ಶಾಸಕರು ಅವಸರದಲ್ಲಿ ರಾಜೀನಾಮೆ ನೀಡಿ, ಬಳಿಕ ರಾಜ್ಯಪಾಲರ ಬಳಿ ತೆರಳಿ ಭೇಟಿಯಾಗಿದ್ದರು. ಅಲ್ಲಿಂದ ಹೊರ ಬಂದ ಅನರ್ಹ ಶಾಸಕರು ವಿಶೇಷ ವಿಮಾನದಲ್ಲಿ ಮುಂಬೈಗೆ ತೆರಳಿದ್ದರು. ಖಾಸಗಿ ಹೋಟೆಲ್‍ನಲ್ಲಿ ಎಲ್ಲ ಅನರ್ಹ ಶಾಸಕರು ಉಳಿದುಕೊಂಡಿದ್ದರು. ಆದರೆ ಕಾಂಗ್ರೆಸ್ ನೀಡಿದ ನೋಟಿಸ್‍ಗೆ ಯಾವುದೇ ಉತ್ತರ ಕೊಡಲಿಲ್ಲ.
ಅನರ್ಹ ಶಾಸಕರಿಗೆ ಸ್ಪೀಕರ್ ಕೂಡ ನೋಟಿಸ್ ಜಾರಿ ಮಾಡಿದ್ದರು. ರಾಜೀನಾಮೆ ನೀಡಿದ ಬಳಿಕ ಅನರ್ಹರ ಜೊತೆಗೆ ಬಿಜೆಪಿ ನಾಯಕರು ಗುರುತಿಸಿಕೊಂಡಿದ್ದರು. ಎಲ್ಲರೂ ಒಂದೇ ದಿನ ರಾಜೀನಾಮೆ ನೀಡಿದ್ದಾರೆ. ಇದರ ಹಿಂದಿನ ಉದ್ದೇಶ ಏನು ಎಂಬುದು ಮುಖ್ಯ. ಇದನ್ನು ಪ್ರಶ್ನಿಸುವ ಅಧಿಕಾರ ಹಾಗೂ ಪರಿಶೀಲನೆ ನಡೆಸುವ ಹಕ್ಕು ಸ್ಪೀಕರ್ ಅವರಿಗೆ ಇದೆ.
ರಾಜೀನಾಮೆ ಸ್ವಯಂಪ್ರೇರಿತ ಮತ್ತು ನೈಜವಾಗಿದೆಯೇ ಎಂಬುದನ್ನು ಸ್ಪೀಕರ್ ಪರಿಶೀಲನೆ ನಡೆಸಬೇಕು. ಅವರು ಎಲ್ಲವನ್ನು ಪರಿಶೀಲನೆ ನಡೆಸಿಯೇ ಶಾಸಕರನ್ನು ಅನರ್ಹಗೊಳಿಸಿದ್ದಾರೆ. ಶಾಸಕರು ನಿಜವಾಗಿಯೂ ಸ್ವಯಂಪ್ರೇರಿತರಾಗಿ ರಾಜೀನಾಮೆ ನೀಡಿದ್ದಾರಾ? ಸರ್ಕಾರದ ಮೇಲೆ ನಿಜಕ್ಕೂ ಅಸಮಾಧಾನ ಇತ್ತಾ ಅಥವಾ ಬೇರೆ ಉದ್ದೇಶಗಳಿದ್ವಾ ಎಂಬ ವಿಚಾರಗಳನ್ನು ತಿಳಿಯಲು ಸ್ಪೀಕರ್ ಮೂರು ದಿನ ಅವಕಾಶ ಕೊಟ್ಟರೂ ಅನರ್ಹರು ವಿಚಾರಣೆ ಹಾಜರಾಗಲಿಲ್ಲ. ಅನರ್ಹರು ಕೋರ್ಟ್ ದಾರಿ ತಪ್ಪಿಸಲು ಯತ್ನಿಸುತ್ತಿದ್ದಾರೆ.
ಸ್ಪೀಕರ್ ಆದೇಶ ಬೇಕಾದ ಹಾಗೇ ಬದಲಿಸಲು ಸಾಧ್ಯವಿಲ್ಲ. ರಾಜೀನಾಮೆ ಸ್ವಯಂಪ್ರೇರಿತ ಮತ್ತು ನೈಜ ಹೌದಾ ಅಲ್ಲವೂ ಎಂಬುದು ಪರಿಶೀಲನೆ ನಡೆಸುವ ಹಕ್ಕು ಸ್ಪೀಕರ್ ಅವರಿಗೆ ಇದೆ. ರಾಜೀನಾಮೆ ಕೊಟ್ಟು ಮುಂಬೈ ಹೋಗುತ್ತಾರೆ, ಸುಪ್ರೀಂಕೋರ್ಟ್ ಬರುತ್ತಾರೆ. ಆದರೆ ಬೆಂಗಳೂರಿಗೆ ಬರುವುದಿಲ್ಲ. ಇದನ್ನೇಲ್ಲ ನೋಡಿ ಸ್ಪೀಕರ್ ಏನೆಂದು ಪರಿಗಣಿಸಬೇಕು? ಸುಪ್ರೀಂಕೋರ್ಟ್ ನಿಂದ ನೆರವು ಪಡೆದು ಪಾರಾಗುವ ತಂತ್ರ ಅನರ್ಹ ಶಾಸಕರದ್ದು. ಶಾಸಕರು ರಾಜೀನಾಮೆಗೂ ವಿಶ್ವಾಸಮತಕ್ಕೂ ಸಂಬಂಧವಿದೆ. ವಿಶ್ವಾಸ ಮತ ಇದ್ದ ಹಿನ್ನೆಲೆ ರಾಜೀನಾಮೆ ನೀಡಿದ್ದಾರೆ. ವಾಸ್ತವದಲ್ಲಿ ಏನು ನಡೆದಿದೆ ಎಂಬದುನ್ನು ಅರ್ಥ ಮಾಡಿಕೊಳ್ಳಬೇಕು.
ಕಾಂಗ್ರೆಸ್ ಪಕ್ಷದಲ್ಲಿ ಉಳಿದಿದ್ದೇವೆ ಎನ್ನುವ ಮೂಲಕ ಅಪಾಯದಿಂದ ಪಾರಾಗಲು ಪ್ರಯತ್ನ ಮಾಡುತ್ತಿದ್ದಾರೆ. ಚುನಾವಣಾ ಆಯೋಗ ನೇರವಾಗಿ ಬಂದು ಸುಪ್ರೀಂಕೋರ್ಟಿಗೆ ಹೇಳುತ್ತೆ ಅಂದ್ರೆ ಏನು ಅರ್ಥ? ಚುನಾವಣಾ ಆಯೋಗ ಅನರ್ಹ ಮಾಡಿಲ್ಲ. ಚುನಾವಣಾ ಆಯೋಗ ಬಂದು ಅನರ್ಹರು ಸ್ಪರ್ಧೆ ಮಾಡಬಹುದು ಎಂದು ಹೇಳುವುದು ಎಷ್ಟು ಸರಿ? ಯಾವುದು ಮಧ್ಯಂತರ ಆದೇಶದ ಅವಶ್ಯಕತೆ ಇಲ್ಲ ಎಂದು ಚುನಾವಣಾ ಆಯೋಗ ಹೇಳಿಕೆ ವಿರೋಧಿಸಿದರು.
ನ್ಯಾ. ವೆಂಕಟಾಚಲ ಹೆಗಡೆ ಹೇಳಿದ್ದಾರೆ ಇಂತಹ ಪ್ರಕರಣಗಳಲ್ಲಿ ಮಧ್ಯಂತರ ಆದೇಶ ನೀಡಬಾರದು. ಕೆಪಿಜೆಪಿ ಕಾಂಗ್ರೆಸ್ ವಿಲೀನವಾಗಿದೆ ಎಂದು ಕಪಿಲ್ ಸಿಬಲ್ ಹೇಳಿ ನ್ಯಾಯಾಲಯಕ್ಕೆ ದಾಖಲೆ ಸಲ್ಲಿಸಿದರು. ರಾಜೀನಾಮೆ ನೀಡಿರುವ ಬಗ್ಗೆ ದಿನಾಂಕಗಳ ಸಹಿತ ವಿವರಣೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು.
ರಾಜೀನಾಮೆ ನೀಡಿದ ದಿನಾಂಕ, ಅನರ್ಹ ತೆಗೆ ಮನವಿ ಮಾಡಿದ ದಿನಾಂಕ, ನೋಟಿಸ್ ನೀಡಿದ ದಿನಾಂಕ ಪ್ರಕರಣ ಪ್ರಮುಖ ಘಟ್ಟಗಳನ್ನು ಕಪಿಲ್ ಸಿಬಲ್ ವಿವರಣೆ ನೀಡಿದರು. ಎಲ್ಲ ಅನರ್ಹ ಶಾಸಕರು ಒಟ್ಟಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ. ಯಾರು ಕೂಡ ಕ್ಷೇತ್ರದ ಜನರ ಅಭಿಪ್ರಾಯ ಕೇಳಿಲ್ಲ ಎಂದು ಕೋರ್ಟಿಗೆ ತಿಳಿಸಿದರು.
ಕೆಪಿಜೆಪಿ ಪಕ್ಷೇತರ ಅಭ್ಯರ್ಥಿಯೇ? 13+1 ಒಟ್ಟು 14 ಮಂದಿ ಕಾಂಗ್ರೆಸ್‍ನಿಂದ ಆಯ್ಕೆಯಾಗಿ ರಾಜೀನಾಮೆ ನೀಡಿದ್ದಾರೆ. ಕೆಪಿಜೆಪಿಯಿಂದ ಆಯ್ಕೆಯಾದ ಒಬ್ಬರು ಕಾಂಗ್ರೆಸ್ ಜೊತೆ ವಿಲೀನ ಆಗಿದ್ದಾರಾ ಎಂದು ಅನರ್ಹ ಶಾಸಕ ಆರ್.ಶಂಕರ್ ಬಗ್ಗೆ ನ್ಯಾಯಾಧೀಶ ಎನ್.ವಿ.ರಮಣ ಅವರು, ಕಪಿಲ್ ಸಿಬಲ್ ಅವರಿಗೆ ಪ್ರಶ್ನೆ ಕೇಳಿದರು.
ಯಾವ್ಯಾವ ಪಕ್ಷದಿಂದ ಎಷ್ಟು ಮಂದಿ ರಾಜೀನಾಮೆ ನೀಡಿದ್ದಾರೆ ಸ್ಪಷ್ಟವಾಗಿ ಹೇಳಿ. ಜೆಡಿಎಸ್ ನಿಂದ ಮೂವರು ರಾಜೀನಾಮೆ ನೀಡಿದ್ದಾರೆ ಎಂದು ನ್ಯಾಯಾಧೀಶರಾದ ರಮಣ ಕೇಳಿದರು. ರಾಜೀನಾಮೆ ನೀಡಿದ್ದ ಶಾಸಕರನ್ನು ಅನರ್ಹ ಮಾಡಲು ಮನವಿ ಮಾಡಿದ್ದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಮನವಿ, ಕೆಪಿಜೆಪಿ ಕಾಂಗ್ರೆಸ್ ಜೊತೆಗೆ ವಿಲೀನದ ನಿಯಮಗಳ ವಿವರಣೆಯನ್ನು ನ್ಯಾಯಧೀಶರಾದ ಎನ್.ವಿ.ರಮಣ, ಕೃಷ್ಣ ಮುರಳಿ ಹಾಗೂ ಸಂಜಯ್ ಖನ್ನಾ ನ್ಯಾಯಪೀಠವು ಪರಿಶೀಲಿಸಿತು.
ಮುಂಬೈನಲ್ಲಿ ಅನರ್ಹ ಶಾಸಕರಿಗೆ ಮಹಾರಾಷ್ಟ್ರ ಸರ್ಕಾರದಿಂದ ಹೈ ಸೆಕ್ಯುರಿಟಿ ನೀಡಲಾಗಿತ್ತು. ಬಿಜೆಪಿಯು ಶಾಸಕರಿಗೆ ಮಂತ್ರಿ ಸ್ಥಾನದ ಆಮಿಷ ಒಡ್ಡಿದೆ, ಹಣಕಾಸಿನ ಆಸೆಗಳನ್ನು ಹುಟ್ಟಿಸಿದೆ. ಎಲ್ಲ ಸತ್ಯಾಂಶಗಳನ್ನು ಪರಿಗಣಿಸಬೇಕು. ರಾಜೀನಾಮೆ ನೀಡಿದ ಶಾಸಕರಿಗೆ ಅಭಿಪ್ರಾಯ ತಿಳಿಸಲು ಇಷ್ಟು ದಿನ ಕಾಲ ಮೀತಿ ನೀಡಬೇಕು ಎಂದು ನಿಯಮವಿಲ್ಲ. ಸ್ಪೀಕರ್ ನಿರ್ಧಾರಕ್ಕೆ ಯಾರು ಸೂಚನೆ ನೀಡುವಂತಿಲ್ಲ. ರಾಜೀನಾಮೆಯೇ ಮೊದಲು ಅಂಗೀಕರಿಸಿ ಎಂದು ಸೂಚಿಸುವಂತಿಲ್ಲ ಎಂಬ ವಿವರಣೆಯನ್ನು ನ್ಯಾಯಾಧೀಶರು ಪರಿಶೀಲಿಸಿದರು.
ಸ್ಪೀಕರ್ ಸ್ವಯಂ ನಿರ್ಧಾರ ತೆಗೆದುಕೊಳ್ಳಬಹುದು. ಸ್ಪೀಕರ್ ಪ್ರಕರಣ ಪರಿಶೀಲಿಸಿ ಅನರ್ಹತೆ ಮಾಡಿದ್ದಾರೆ. ಅನರ್ಹ ಶಾಸಕರ ಜೊತೆ ಮಹಾರಾಷ್ಟ್ರ ಸರ್ಕಾರದ ಸಚಿವರು ರಾಜಕಾರಣಿಗಳು ಗುರುತಿಸಿಕೊಂಡಿದ್ದರು. ಬೆಂಗಳೂರಿನಿಂದ ಬಿಜೆಪಿ ನಾಯಕರು ಮುಂಬೈ ತೆರಳಿದ್ದರು. ಸಿಎಂ ಬಿಎಸ್ ಯಡಿಯೂರಪ್ಪ ಆಪ್ತ ಸಂತೋಷ್, ಡಿಸಿಎಂ ಅಶ್ವಥ್ ನಾರಾಯಣ್ ಅನರ್ಹ ಶಾಸಕರ ಜೊತೆ ಕಾಣಿಸಿಕೊಂಡಿದ್ದಾರೆ. ರಾಜೀವ್ ಚಂದ್ರಶೇಖರ್ ಅವರ ವಿಶೇಷ ವಿಮಾನ ಬಳಕೆಯಾಗಿದೆ. ರಾಜೀವ್ ಚಂದ್ರಶೇಖರ್ ಬಿಜೆಪಿ ರಾಜ್ಯಸಭಾ ಸದಸ್ಯರು ಎಂದು ಕಪಿಲ್ ಸಿಬಲ್ ವಾದ ಮಂಡಿಸಿದರು.
ಪಕ್ಷ ವಿರೋಧಿ ಚಟುವಟಿಕೆ ನಡೆದ ಬಗ್ಗೆ ವಿವರಣೆ ನೀಡಿದ ಕಪಿಲ್ ಸಿಬಲ್ ಅವರು, ಅನರ್ಹ ಶಾಸಕರ ಪೈಕಿ ಕೆಲವರು ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರನ್ನು ಭೇಟಿ ಮಾಡಿದ್ದರು. ಇದನೆಲ್ಲ ಏನೆಂದು ಕರಿಯಬೇಕು ಎಂದು ಸಿಬಲ್ ನ್ಯಾಯಾಧೀಶರಲ್ಲಿ ಕೇಳಿದರು.
ರಾಜೀನಾಮೆ ಪರಿಶೀಲನೆ ನಡೆಸುವುದು ಸ್ಪೀಕರ್ ಸಂವಿಧಾನಿಕ ಕೆಲಸ. ರಾಜೀನಾಮೆ ಕೊಟ್ಟ ಬಳಿವೂ ನಾನು ಕಾಂಗ್ರೆಸ್‍ನಲ್ಲಿದ್ದೇವೆ ಎಂದು ಅನರ್ಹರು ಬುಧವಾರ ಹೇಳಿದ್ದಾರೆ. ಜುಲೈ 10ರಂದು ಅನರ್ಹಗೊಳಿಸಿ ಆದೇಶ ಹೊರಡಿಸಲಾಗಿದೆ. 10 ಕ್ಷೇತ್ರದಲ್ಲಿ ಅಭ್ಯರ್ಥಿಗಳು ಅಂತಿಮ. ಜುಲೈ 9ರಂದು ಅನರ್ಹ ಶಾಸಕರು ಬಿಜೆಪಿ ನಾಯಕರ ಜೊತೆ ಸಭೆ ಮಾಡಿದ್ದಾರೆ. ಅನರ್ಹರ ಜೊತೆಗೆ ಬಹಿರಂಗವಾಗಿ ಅಶ್ವಥ್ ನಾರಾಯಣ ಮತ್ತು ಸಂತೋಷ್ ಗುರುತಿಸಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಉಳಿದುಕೊಂಡಿದ್ದರೆ ಪಕ್ಷದ ಸಭೆಗಳಿಗೆ ತೆರಳಬೇಕಿತ್ತು. ಯಾಕೆ ಹೋಗಲಿಲ್ಲ? ಹೀಗಾಗಿ ಸ್ಪೀಕರ್ ತಮ್ಮ ವಿವೇಚನಾಧಿಕಾರ ಬಳಸಿ ಕ್ರಮ ತೆಗೆದುಕೊಂಡಿದ್ದಾರೆ ಎಂದು ಕಪಿಲ್ ಸಿಬಲ್ ವಾದ ಮಂಡಿಸಿದರು.
ಈ ವೇಳೆ ತಮಿಳುನಾಡು ಪ್ರಕರಣ, ಹಳೆಯ ಪ್ರಕರಣಗಳ ವಿವರಣೆಯನ್ನು ಕಪಿಲ್ ಸಿಬಲ್ ಕೋರ್ಟಿಗೆ ಸಲ್ಲಿಸಿದರು. ಆ ಪ್ರಕರಣದಲ್ಲಿ ಕೋರ್ಟ್ ಸ್ಪೀಕರ್ ಕಾರ್ಯವೈಖರಿಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಅಂತ ಹೇಳಿದೆ ಎಂದರು.
ಪ್ಯಾರಾ ಉಲ್ಲೇಖಿಸಿ ಓದಿ ಎಂದು ನ್ಯಾಯಾಧೀಶ ರಮಣ ಕೇಳಿದರು. ಆಗ ಕಪಿಲ್ ಸಿಬಲ್, ರಾಜ್ಯಪಾಲರ ಭೇಟಿಯಾಗಿದ್ದು ಮಹತ್ವದ ಅಂಶ ಗಮನಿಸಬೇಕು. ಅನರ್ಹ ಶಾಸಕರು ರಾಜೀನಾಮೆ ವಿಚಾರದಲ್ಲಿ ಮಧ್ಯಪ್ರವೇಶಕ್ಕೆ ಮನವಿ ಮಾಡಿದ್ದರು. ಸ್ಪೀಕರ್ ವ್ಯಾಪ್ತಿಯಲ್ಲಿ ರಾಜ್ಯಪಾಲರು ಮಧ್ಯಪ್ರವೇಶ ಮಾಡಬಹುದೇ ಎಂದು ರಾಜ್ಯಪಾಲರು ಸ್ಪೀಕರ್ ಗೆ ನಿರ್ದೇಶನ ಮಾಡಿದ ಬಗ್ಗೆ ವಿವರಣೆ ನೀಡಿದರು.
ಸ್ಪೀಕರ್ ಕಚೇರಿಯಲ್ಲಿ ನಡೆದ ವಾದ ಪ್ರತಿ ವಾದಗಳ ಬಗ್ಗೆ ವಿವರಣೆ ನೀಡುತ್ತಾ ವಾದ ಮುಂದುವರಿಸಿದ ಕಪಿಲ್ ಸಿಬಲ್ ಅವರು, ಅನರ್ಹ ಶಾಸಕರು ಸ್ಪೀಕರ್ ಕಚೇರಿಗೆ ಬರುವ ಬಗ್ಗೆ ಮಾಹಿತಿ ಕೊಡಲಿಲ್ಲ. ಕಚೇರಿ ಫೋನ್‍ಗೆ ಕನಿಷ್ಠ ಒಂದು ಕರೆ ಮಾಡಿ ಹೇಳಬಹುದಿತ್ತು. ಎಲ್ಲವೂ ಲೆಕ್ಕಾಚಾರ ಹಾಕಿ ಮಾಡಿದ್ದಾರೆ. ಎಲ್ಲರನ್ನೂ ದಾರಿ ತಪ್ಪಿಸಲು ಹೀಗೆ ಮಾಡಿದ್ದಾರೆ ಎಂದು ರಮೇಶ್ ಕುಮಾರ್ ಪರ ಬ್ಯಾಟ್ ಬೀಸಿದರು.
ಸ್ಪಿಕರ್ ಕೆಲಸ ಮಾಡದಾಗ ಅನರ್ಹ ಶಾಸಕರು ರಾಜ್ಯಪಾಲರ ಬಳಿ ಹೋಗಿದ್ದರು ಎಂದು ಅನರ್ಹರ ಪರ ವಕೀಲ ಮುಕುಲ್ ರೊಹ್ಟಗಿ ಮಧ್ಯಪ್ರವೇಶ ಮಾಡಿದರು. ಸ್ಪೀಕರ್ ಇಲ್ಲ ಅಂತ ಅಲ್ಲ, ಅವರು ಸರಿಯಾಗಿ ತಮ್ಮ ಜವಾಬ್ದಾರಿ ನಿರ್ವಹಿಸಿಲ್ಲ ಎಂದರು. ಇದರಿಂದ ಕೋಪಗೊಂಡ ಕಪಿಲ್ ಸಿಬಲ್, ಅದಕ್ಕೆ ರಾಜೀನಾಮೆ ನೀಡಿ ಹಿಂದೆ ಬಾಗಿಲಿನಿಂದ ಓಡಿದರು ಎಂದರು.
ರಾಜೀನಾಮೆ ಪತ್ರಗಳು ಸರಿಯಾದ ಮಾದರಿಯಲ್ಲಿ ಇರಲಿಲ್ಲ. ಬಳಿಕ ಮಾದರಿಯಂತೆ ಪ್ರಕಾರ ಪಡೆಯಲಾಯಿತು. ರಾಜ್ಯಪಾಲರ ಭೇಟಿ ಮಾಡುವ ಮೂಲಕ ಸ್ಪೀಕರ್ ಮೇಲೆ ಒತ್ತಡ ಹಾಕಿದರು ಎಂದರು.
ಸುಪ್ರೀಂಕೋರ್ಟ್ ಹೇಳಿದ ಬಳಿಕ ಮತ್ತೆ ವಿಶೇಷ ವಿಮಾನದಲ್ಲಿ ಬಂದು ರಾಜೀನಾಮೆ ನೀಡಿದರು. ರಾಜೀನಾಮೆ ಕೊಟ್ಟ ಬಳಿಕ ಏಕಾಏಕಿ ಅಂಗಿಕರಿಸಬೇಕಿಲ್ಲ. ರಾಜೀನಾಮೆ ನೀಡಿದ ಬಳಿಕವೂ ವಿಶೇಷ ವಿಮಾನದಲ್ಲಿ ಮುಂಬೈಗೆ ಹಾರಿದರು. ಈ ನಡೆ ಅನುಮಾನ ಮೂಡಿಸಿದೆ ಎಂದು ಕಪಿಲ್ ಸಿಬಲ್ ಕೋರ್ಟಿಗೆ ತಿಳಿಸಿದರು.
ಭದ್ರತೆಯಲ್ಲಿ ಬಂದು ಭಧ್ರತೆಯಲ್ಲಿ ಹೋದರು. ಸುಪ್ರೀಂಕೋರ್ಟಿಗೆ ಮನವಿಯ ಅರ್ಜಿ ಏನನ್ನು ಸೂಚಿಸುತ್ತದೆ. ಸ್ಪೀಕರ್ ಮೇಲೆ ತೀವ್ರ ಒತ್ತಡ ಹೇರುವ ಪ್ರಯತ್ನವೇ ಎಂದು ಪ್ರಶ್ನಿಸಿ, ಸುಪ್ರೀಂಕೋರ್ಟ್ ಕೂಡ ಈ ಪ್ರಕರಣದಲ್ಲಿ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದರು.
ಈ ವೇಳೆ ಮಧ್ಯಪ್ರವೇಶ ಮಾಡಿದ ರೊಹ್ಟಗಿ ಸಿಬಲ್ ವಾದದಲ್ಲಿ ಸುಳ್ಳು ಸೇರಿದೆ ಎಂದರು. ಇದೆಲ್ಲದರ ಬಗ್ಗೆ ಮಾಹಿತಿ ದಾಖಲೆ ಇದೆ. ಇದನ್ನು ಸುಳ್ಳು ಎನ್ನುವುದಾದರೆ ನಿಮ್ಮ ಅರ್ಜಿಯಲ್ಲಿ ಸುಳ್ಳು ಎಂದು ಎಲ್ಲೂ ಹೇಳಿಲ್ಲ ಎಂದು ಸಿಬಲ್, ರೊಹ್ಟಗಿಗೆ ತಿರುಗೇಟು ನೀಡಿದರು.
ವಿಶ್ವಾಸ ಮತ ಸಂದರ್ಭದಲ್ಲಿ ಕಡ್ಡಾಯವಾಗಿ ಶಾಸಕರು ಹಾಜರಿರಬೇಕು. ಇದು ಸರ್ಕಾರದ ಅಳಿವು ಉಳಿವಿನ ಪ್ರಶ್ನೆಯಾಗಿರುತ್ತದೆ. ಹಾಗಾಗಿ ವಿಪ್ ನೀಡಲು ಪಕ್ಷಕ್ಕೆ ಅಧಿಕಾರವಿದೆ. ವಿಪ್ ನೀಡುವ ಉದ್ದೇಶವೇ ಹಾಜರಾತಿಗಾಗಿ. ಅದನ್ನು ಈ ಎಲ್ಲಾ ಶಾಸಕರು ಉಲ್ಲಂಘನೆ ಮಾಡಿದ್ದಾರೆ
ಈ ವೇಳೆ ಎಷ್ಟು ಪ್ರತ್ಯೇಕ ಆದೇಶಗಳಿವೆ? ಸ್ಪೀಕರ್ ನೀಡಿದ ಆದೇಶಗಳು. ಕಾಂಗ್ರೆಸ್, ಜೆಡಿಎಸ್ ಮತ್ತು ಪಕ್ಷೇತರರಿಗೆ ಪ್ರತ್ಯೇಕ ಆದೇಶಗಳಿವೆ ಎಂದು ಅನರ್ಹ ಶಾಸಕರ ಪರ ವಕೀಲರು ಹೇಳಿದರು.
ಎಲ್ಲವೂ ಕೂಡ ಸತ್ಯವಾಗಿದೆ. ರಾಜ್ಯಪಾಲರ ಬಳಿ ಹೋಗಿದ್ದು ಸುಳ್ಳಾ ಎಂದು ಸಿಬಲ್ ಜೋರು ಧ್ವನಿಯಲ್ಲಿ ಪ್ರಶ್ನಿಸಿದರು. ಮಾಧ್ಯಮಗಳು ಅನರ್ಹ ಶಾಸಕರ ಹೇಳಿಕೆ ಪ್ರಸಾರ ಮಾಡಿವೆ. ಎಲ್ಲ ಸಂಗತಿಗಳು ಮಾಧ್ಯಮಗಳಲ್ಲಿ ಪ್ರಸಾರವಾಗಿವೆ. ಮುಂಬೈಗೆ ಹೋಗಿಲ್ಲ ಬಿಜೆಪಿ ನಾಯಕರ ಜೊತೆಗೆ ಗುರುಸಿಕೊಂಡಿಲ್ಲ ಅಂತ ಹೇಳಲಿ ಎಂದು ಗಟ್ಟಿಯಾಗಿ ವಾದ ಮಂಡಿಸಿದರು.
ವಿಶೇಷ ವಿಮಾನ ಸೇರಿದ್ದು, ಅನರ್ಹ ಶಾಸಕರ ಜೊತೆ ಯಾರಿದ್ದರು, ಎಲ್ಲಿಗೆ ಹೋಗಿದ್ದರು. ಎಲ್ಲವೂ ಸತ್ಯ ಅಲ್ಲವೇ ನಾನು ಅದನ್ನೇ ಹೇಳುತ್ತಿದ್ದೇನೆ ಎಂದರು. ಆರಂಭದಲ್ಲಿ ಸ್ಪೀಕರ್ ಗೆ ನೇರವಾಗಿ ರಾಜೀನಾಮೆ ಪತ್ರ ನೀಡಿರಲಿಲ್ಲ. ಸ್ಪೀಕರ್ ಕಡೆಯಿಂದ ಸಮಯ ಪಡೆದಿರಲಿಲ್ಲ. ಸುಪ್ರೀಂಕೋರ್ಟ್ ಸೂಚನೆ ನೀಡಿದ ಬಳಿಕ ಸ್ಪೀಕರ್ ಕೈಗೆ ರಾಜೀನಾಮೆ ಪತ್ರ ನೀಡಿದ್ದಾರೆ. ನಿಯಮಗಳನ್ನು ಉಲ್ಲಂಘಿಸಿ ಮನ ಬಂದಂತೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ನೀಡುವುದಕ್ಕೂ ಕೆಲವು ಪ್ರಕ್ರಿಯೆಗಳಿವೆ ಅದನ್ನು ಎಲ್ಲರೂ ಪಾಲಿಸಬೇಕು ಎಂದರು.
ಶಾಸಕರು ಪಕ್ಷ ಬಿಡುವುದಕ್ಕೆ ಬೇರೆ ಬೇರೆ ದಾರಿಗಳಿದ್ದವು. ಎಲ್ಲರೂ ಒಟ್ಟಾಗಿ ಕೊಡುವ ಅವಶ್ಯಕತೆ ಇಲ್ಲ. ಎಲ್ಲರೂ ಒಮ್ಮಲೇ ನಿರ್ಧಾರ ಮಾಡಿ ಬಂದು ರಾಜೀನಾಮೆ ನೀಡಿದ್ದಾರೆ. ಇದು ಇನ್ ಮಾರೇಲ್ ಬಿಹ್ವೇವ್. ಸಂವಿಧಾನದ ನೈತಿಕತೆಯನ್ನು ಗೌರಿಸಬೇಕಲ್ವೆ? ಈಗ ಮಧ್ಯಂತರ ಆದೇಶ ನೀಡಬಾರದು ಎಂದು ಕೋರ್ಟಿಗೆ ಸಿಬಲ್ ಮನವಿ ಮಾಡಿಕೊಂಡರು.
ನೀವೂ ಸ್ಪೀಕರ್ ಆದೇಶವನ್ನು ಎತ್ತಿ ಹಿಡಿಬೇಕು ಎಂದ ಸಿಬಲ್ ಅವರಿಗೆ ಪ್ರಶ್ನಿಸಿದ ನ್ಯಾ.ಸಂಜಯ್ ಖನ್ನಾ ಅವರು, ಮಧ್ಯಂತರ ಆದೇಶ ನೀಡದೇ ಬೇರೆನು ಮಾಡಬಹುದು? ಬೇರೆ ಅವಕಾಶಗಳಿದ್ದರೆ ಹೇಳಿ. ಚುನಾವಣಾ ಆಯೋಗ ಸ್ಪರ್ಧೆಗೆ ಅವಕಾಶ ಎಂದು ಹೇಳಿದೆ. ಸುಪ್ರೀಂಕೋರ್ಟ್ ಯಾವ ಆದೇಶ ನೀಡದಿದ್ದರೆ ಚುನಾವಣೆ ನಡೆಯುತ್ತದೆ ಎಂದು ಕೇಳಿದರು.
ಬೇರೆನು ಅವಕಾಶಗಳಿಲ್ಲ. 10 ಶೆಡ್ಯೂಲ್ ಅಡಿ ಅವರನ್ನು ಈಗಾಗಲೇ ಅನರ್ಹ ಮಾಡಲಾಗಿದೆ. ಅವರು ಈಗ ಸದನದ ಸದಸ್ಯರಲ್ಲ ಎಂದು ಸಿಬಲ್ ಕೋರ್ಟ್ ಗೆ ಉತ್ತರಿಸಿದರು.
ವೈಟ್ ಟ್ಯಾಪಿಂಗ್ ಬೇಡ ಅಂತ ನಾವು ಹೇಳಿದ್ದೇವೆ. ಆದರೆ ಈಗ ಮತ್ತೆ ಮುಂದುವರಿಸುತ್ತಿದ್ದಾರೆ. ಬೆಂಗಳೂರು ಶಾಸಕರು ಸೇರಿ ಸಿಎಂ ಮನೆ ಮುಂದೆ ಧರಣಿ ಕೂರುತ್ತೇವೆ. ಬಿಬಿಎಂಪಿ, ವಿಧಾನಸೌಧದಲ್ಲೂ ಹೋರಾಟ ಮುಂದುವರಿಸುತ್ತೇವೆ, ಮೇಯರ್, ಉಪಮೇಯರ್ ಸ್ಥಾನಕ್ಕೆ ಅಭ್ಯರ್ಥಿ ಹಾಕುತ್ತೇವೆ. ಸ್ಪೀಕರ್ ಆದೇಶ ಎತ್ತಿ ಹಿಡಿಯುವುದು ಕೊನೆಯ ಅವಕಾಶ ಎಂದು ಸಿಬಲ್ ಹೇಳಿದರು.
ಈಗ ಅನರ್ಹ ಶಾಸಕರು ಚುನಾವಣೆ ಸ್ಪರ್ಧೆಗೆ ವಿನಾಯಿತಿ ಕೊಳ್ಳುತ್ತಿದ್ದಾರಲ್ಲಾ ಎಂದು ನ್ಯಾಯಾಧೀಶರು ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಬಲ್, ಚುನಾವಣೆಗೆ ಅಧಿಸೂಚನೆ ಹೊರಡಿಸಬೇಕು ಅಷ್ಟೇ. ಸ್ಪರ್ಧೆ ಮಾಡಿವ ಬಗ್ಗೆ ಹೇಳುವಂತಿಲ್ಲ. ವಿಧಾನಸಭೆ ಅಂತ್ಯದವರೆಗೂ ಅನರ್ಹ ಮಾಡಿದೆ ಎಂದರು.
ಸಾಕಷ್ಟು ಅಂಶಗಳು ವಿಚಾರಣೆ ನಡೆಯಬೇಕಿದೆ. ಸ್ಪೀಕರ್ ಪರಮಾಧಿಕಾರ ಮತ್ತು ಕರ್ತವ್ಯ ನಿರ್ವಹಣೆಯಂತಹ ವಿಷಯವು ಗಂಭೀರವಾದ ಅಂಶ ಒಳಗೊಂಡಿದೆ. ಸಾಂವಿಧಾನಿಕ ಪೀಠದೆದುರು ವಿಚಾರಣೆ ನಡೆಯಬೇಕು. ಸ್ಪೀಕರ್ ಕಾರ್ಯವೈಖರಿಗೆ ಕೋರ್ಟ್ ಹಸ್ತಕ್ಷೇಪ ಮಾಡಬಾರದು. ಸ್ಪೀಕರ್ ತಮ್ಮದೇ ಆದ ಕಾರ್ಯ ವ್ಯಾಪ್ತಿ ಹೊಂದಿದ್ದಾರೆ. ಸ್ಪೀಕರ್ ಹುದ್ದೆಗೆ ತನ್ನದೆಯಾದ ಮೂಲಭೂತ ಹಕ್ಕುಗಳಿವೆ ಎಂದು ಸಿಬಲ್ ತಿಳಿಸಿದರು.
ದಾಖಲೆ ಪರಿಶೀಲನೆ ಮಾಡುವುದು, ರಾಜೀನಾಮೆ ಅಂಗಿಕರಿಸುವುದು ಸ್ಪೀಕರ್ ಮೇಲೆ ಅವಲಂಬಿಸಿದೆ. ಸ್ಪೀಕರ್ ಕಾರ್ಯ ವ್ಯಾಪ್ತಿಯಲ್ಲಿ ನ್ಯಾಯಾಂಗ ಮಧ್ಯ ಪ್ರವೇಶ ಮಾಡಿದರೆ ಪ್ರಕರಣ ಮತ್ತುಷ್ಟು ದೊಡ್ಡದಾಗಲಿದೆ. ರಾಜೀನಾಮೆಯ ಅಷ್ಟೂ ಪ್ರಕ್ರಿಯೆಯನ್ನು ಸ್ಪೀಕರ್ ರೆಕಾರ್ಡ್ ಮಾಡಿದ್ದಾರೆ. ಅದನ್ನೂ ಪರಿಶೀಲನೆಗೆ ಒಳಪಡಿಸಬೇಕಾಗುತ್ತದೆ. ಅದಕ್ಕಾಗಿ ತಜ್ಞರ ವರದಿ ತರಿಸಿಕೊಳ್ಳಬೇಕಾಗುತ್ತದೆ. ಶಾಸಕರಿಗೆ ಒತ್ತಾಯ ಮಾಡಬೇಡಿ ಎಂದು ಸುಪ್ರೀಂಕೋರ್ಟ್ ಹೇಳುತ್ತದೆ. ಕಲಾಪಕ್ಕೆ ಹಾಜರಾಗುವ ವಿಚಾರಕ್ಕೆ ಸಂಬಂಧಿಸಿದಂತೆ ಜುಲೈ 17ಕ್ಕೆ ಈ ಆದೇಶ ನೀಡಿತ್ತು. ಕೆಲವು ಯೋಜನೆ ಮತ್ತು ಕಾನೂನು ಜಾರಿ ತರಬೇಕಾದ ಸಂದರ್ಭದಲ್ಲಿ ಸಂವಿಧಾನ ಅಡಿ ಶಾಸಕರು ಸದನದಲ್ಲಿ ಹಾಜರರಿಬೇಕು. ಹೀಗಾಗಿ ರಾಜಕೀಯ ಪಕ್ಷಗಳು ತಮ್ಮ ಪಕ್ಷದ ಶಾಸಕರಿಗೆ ವಿಪ್ ಜಾರಿ ಮಾಡುತ್ತದೆ. ಆದ್ದರಿಂದಲೇ ವಿಶ್ವಾಸಮತ ಯಾಚನೆ ದಿನ ವಿಪ್ ಜಾರಿ ಮಾಡಿದೆ. ಸರ್ಕಾರ ಬೀಳುವಂತ ಪರಿಸ್ಥಿತಿಯಲ್ಲಿ ಶಾಸಕರು ಸದನಕ್ಕೆ ಬಾರದಿದ್ರೆ ಹೇಗೆ? ಆಯ್ಕೆಯಾದ ಪಕ್ಷವೇ ವಿಶ್ವಾಸ ಮತ ಯಾಚನೆ ಮಾಡಿದರೆ ಶಾಸಕರು ಬರಲೇ ಬೇಕು ಎಂದು ವಾದಿಸಿದರು.
ಅದು ಬಜೆಟ್ ಅಂಗೀಕರಿಸುವ ಅಧಿವೇಶನವೂ ಕೂಡ ಆಗಿತ್ತು. ಲೇಖಾನುದಾನಕ್ಕೆ ಒಪ್ಪಿಗೆ ಪಡೆಯುವ ಸಂದರ್ಭ ಸದನದಲ್ಲಿತ್ತು. ಆದರೆ ಶಾಸಕರು ಬೇರೆ ಪಕ್ಷದ ನಾಯಕರ ಮಾತು ಕೇಳಿ ಸದನಕ್ಕೆ ಗೈರಾಗಿದ್ದರು. ಶಾಸಕರು ಸದನದ ನಿಯಮಗಳಿಗೆ ತಕ್ಕಂತೆ ವರ್ತಿಸಬೇಕು. ಒಂದು ಪಕ್ಷವನ್ನು ಪ್ರತಿನಿಧಿಸಿ ಶಾಸಕರಾದಾಗ ವಿಶ್ವಾಸಮತ ಯಾಚನೆ ವೇಳೆ ಕಲಾಪಕ್ಕೆ ಹಾಜರಾಗಬೇಕು. ವಿಪ್ ಜಾರಿ ಮಾಡಿದ್ದಾರೆ ಎಂಬ ಕಾರಣದಿಂದ ಅಲ್ಲ. ಸರ್ಕಾರ ರಕ್ಷಣೆಗಾಗಿ ಹಾಜರಾಗಬೇಕು. ಆದರೆ ಆಯಾ ಪಕ್ಷಗಳ ಸದಸ್ಯರಾಗಿದ್ದೇವೆ ಎಂದು ಹೇಳುತ್ತಿರುವ ಅನರ್ಹರು ಸರ್ಕಾರ ಬೀಳುವ ಸಂದರ್ಭ ಕಲಾಪಕ್ಕೆ ಗೈರಾಗಿದ್ದೇಕೆ? ವಿಧಾನಸಭೆ ಅವಧಿ ಮುಗಿದಾಗ ಮಾತ್ರ ಅನರ್ಹತೆಯ ಅವಧಿಯು ಮುಗಿಯುತ್ತದೆ ಎಂದು ತಿಳಿಸಿದರು.
ಶಾಸಕರಾದವರು ಪಕ್ಷ ಬಿಡಬೇಕು ಅಥವಾ ಬದಲಿಸಬೇಕೆಂದರೆ ಅವರಾಗಿ ಅವರೇ ರಾಜೀನಾಮೆ ನೀಡಬೇಕು ಅಥವಾ ಅವರನ್ನು ಅನರ್ಹಗೊಳಿಸಬೇಕು. ಈ ಪ್ರಕರಣದಲ್ಲಿ ರಾಜೀನಾಮೆಯನ್ನು ನೀಡಲಾಗಿದೆ. ಶಾಸಕರನ್ನು ಅನರ್ಹಗೊಳಿಸಲಾಗಿದೆ. ಇದಕ್ಕೆ ಪ್ರಕರಣದಲ್ಲಿ ಏನು ಮಾಡಬೇಕು ಎಂದು ನ್ಯಾ.ಸಂಜೀವ್ ಖನ್ನಾ ಅವರು ಕಪಿಲ್ ಸಿಬಲ್ ಅವರಗೆ ಪ್ರಶ್ನಿಸಿದರು.
ಕರ್ನಾಟಕದಿಂದ ಸ್ವರ್ಧೆ ಸಾಧ್ಯ ಇಲ್ಲ. ಬೇರೆ ರಾಜ್ಯದ ವಿಧಾನಸಭೆಯಿಂದ ಸ್ಪರ್ಧೆ ಮಾಡಬಹುದಾ? ವಿಧಾನಸಭಾ ಅನರ್ಹರಾಗಿರುವವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಬಹುದಾ ಎಂದು ರಮಣ ಪ್ರಶ್ನೆ ಮಾಡಿದರು. ಇದಕ್ಕೆ ಕಪಿಲ್ ಸಿಬಲ್ ಸ್ಪರ್ಧಿಸಬಹುದು ಎಂದು ಉತ್ತರಿಸಿದರು.
ಸಂವಿಧಾನಸ 191/1 ವಿಧಿ ಉಲ್ಲೇಖಿಸಿ ಉತ್ತರ ನೀಡಿದ ಕಪಿಲ್ ಸಿಬಲ್, 191/1 ಪ್ರಕಾರ ಅನರ್ಹ ಮಾಡಿದರೆ ಚುನಾವಣೆಗೆ ಸ್ವರ್ಧೆ ಸಾಧ್ಯವಿಲ್ಲ. ಲೋಕಸಭೆ ಅಥವಾ ವಿಧಾನಸಭೆ ಎಲ್ಲಿ ಅನರ್ಹ ಆಗಿರುತ್ತಾರೆ ಅಲ್ಲಿ ಆ ಅವಧಿಗೆ ಸ್ಪರ್ಧೆ ಸಾಧ್ಯವಿಲ್ಲ ಎಂದರು.
ಉಪ ಚುನಾವಣೆ ಹೊಸ ಎಲೆಕ್ಷನ್ ಅಲ್ಲ ಎಂದು ಸಿಬಲ್ ಹೇಳಿದರು. ಆಗ ನ್ಯಾ.ರಮಣ ಅವರು, ಅನರ್ಹ ಶಾಸಕರು ಸ್ವರ್ಧೆಗೆ ಒಂದು ಸರ್ಕಾರದ ಅವಧಿ ಮುಗಿಬೇಕು, ಇಲ್ಲ ಸರ್ಕಾರ ವಿಸರ್ಜನೆ ಬೇಕೇ ಎಂದು ಪ್ರಶ್ನಿಸಿದರು. ಉತ್ತರ ನೀಡಿದ ಸಿಬಲ್, ಇದನ್ನ ಮಾತ್ರ ಫ್ರೆಶ್ ಎಲೆಕ್ಷನ್ ಎನ್ನಬಹುದು. ಆ ಅವಧಿಯ ವಿಧಾನಸಭಾ ಮುಗಿಯುವವರೆಗೂ ಅನರ್ಹರು ಚುನಾವಣೆಗೆ ಸ್ಪರ್ಧೆ ಮಾಡುವಂತಿಲ್ಲ. ಜೊತೆಗೆ ಯಾವುದೇ ಲಾಭದಾಯಕ ಹುದ್ದೆ ಹೊಂದುವಂತಿಲ್ಲ ಎಂದರು.
ಶಾಸಕರನ್ನು ಅನರ್ಹಗೊಳಿಸಿದ ಕ್ಷೇತ್ರಗಳಿಗೆ ಚುನಾವಣೆ ಬರಲೇ ಬೇಕಲ್ವಾ? ಆರು ತಿಂಗಳ ಒಳಗೆ ಚುನಾವಣೆ ಬರಲೇ ಬೇಕು. ಆಗ ಅನರ್ಹರು ಸ್ಪರ್ಧೆ ಮಾಡಲು ಏನು ತೊಂದರೆ ಎಂದು ಸಿಬಲ್‍ಗೆ ನ್ಯಾ. ಸಂಜೀವ್ ಖನ್ನಾ ಪ್ರಶ್ನೆ ಮಾಡಿದರು.
ನ್ಯಾಯಾಧೀಶರ ಪ್ರಶ್ನೆಗೆ ಉತ್ತರ ನೀಡಿದ ಸಿಬಲ್ ಅವರು, ಶಾಸಕರನ್ನು ಅನರ್ಹಗೊಳಿಸಿರುವುದು ವಿಧಾನಸಭೆಯ ಅವಧಿ ಮುಗಿಯುವವರೆಗೆ ಹೊರತು ಅವರ ಕ್ಷೇತ್ರದಲ್ಲಿ ಚುನಾವಣೆ ಬರುವರೆಗೆ ಮಾತ್ರವಲ್ಲ. ವಿಧಾನಸಭೆ ಪೂರ್ಣ ಅವಧಿ ಚುನಾವಣಾ ಸ್ಪರ್ಧೆ ಸಾಧ್ಯವಿಲ್ಲ ಎಂದರು.
ಆರ್ಟಿಕಲ್ 192 ಬಗ್ಗೆ ನ್ಯಾಯಧೀಶರು ಪರಿಶೀಲನೆ ನಡೆಸಿದರು. ಈ ವೇಲೆ ಪ್ರಶ್ನೆ ಎತ್ತಿದ ನ್ಯಾ. ಸಂಜೀವ್ ಖನ್ನಾ ಅವರು, ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡಿದ ಮೇಲೆ ಚುನಾವಣೆ ಆಗಲೇ ಬೇಕಲ್ಲವೇ ಎಂದು ಕೇಳಿದರು. ಆಗ ಕಪಿಲ್ ಸಿಬಲ್, ಸ್ಪೀಕರ್ ಕಚೇರಿ ಸಂವಿಧಾನದತ್ತ ಸ್ವಾಯತ್ತ ಸಂಸ್ಥೆ. ಅನರ್ಹಗೊಳಿಸುವಾಗ ಅವಧಿ ನಿಗದಿಗೊಳಿಸುವ ಅಧಿಕಾರ ಸ್ಪೀಕರ್ ಗೆ ಇದೆ ಎಂದು ಉತ್ತರಿಸಿದರು.
ಸ್ಪೀಕರ್ ಆದೇಶವನ್ನು ರದ್ದುಗೊಳಿಸಿದರೆ 10ನೇ ಷೆಡ್ಯೂಲ್ ದುರ್ಬಲ ಆಗುತ್ತದೆ. ಇದು ಸಾಕಷ್ಟು ಪ್ರಕರಣಗಳ ಮೇಲೆ ಪರಿಣಾಮ ಬೀರಲಿದೆ ಎಂದು ಕೋರ್ಟ್ ಗಮನಕ್ಕೆ ತಂದರು.
ಸಂಸದ ಉಮೇಶ್ ಜಾಧವ್ ರಾಜೀನಾಮೆ ಪಡೆದು ಉಳಿದವರವನ್ನು ಅನರ್ಹ ಗೊಳಿಸಲಾಗಿದೆ ಎಂದು ವಾದ ಮಾಡಿದ್ದಾರೆ. ಆದರೆ ಜಾಧವ್ ತಾವೇ ಖುದ್ದಾಗಿ ಬಂದು ರಾಜೀನಾಮೆ ನೀಡಿರುವ ಬಗ್ಗೆ ವಿವರಣೆ ನೀಡಿದ್ದಾರೆ. ಜಾಧವ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಯಿಂದ ಸ್ಪರ್ಧಿಸಿ ಸಂಸದರಾಗಿದ್ದಾರೆ ಎಂದು ಸಿಬಲ್ ಕೋರ್ಟಿಗೆ ತಿಳಿಸಿದರು.
ಬೆಂಗಳೂರು: ಸುಪ್ರೀಂ ಕೋರ್ಟಿನಲ್ಲಿ ಚುನಾವಣೆ ಆಯೋಗ ಈ ಚುನಾವಣೆಯನ್ನು ಮುಂದೂಡಬಹುದು ಎಂದು ಹೇಳಿದೆ. ಹೀಗಾಗಿ ಉಪಚುನಾವಣೆ ಮುಂದೂಡಿಕೆಯಾಗಿದೆ. ಆಯೋಗಕ್ಕೆ ಕೇಂದ್ರ ಸರ್ಕಾರ ಸೂಚಿಸಿರಬಹುದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬೆಳವಣಿಗೆಯಿಂದಾಗಿ ಸ್ವಾಯತ್ತ ಸಂಸ್ಥೆಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿವೆಯೇ ಎಂಬ ಪ್ರಶ್ನೆ ಮೂಡುತ್ತದೆ. ಯಡಿಯೂರಪ್ಪನವರ ಪ್ರಭಾವ ಕೇಂದ್ರ ಸರ್ಕಾರದ ಮೇಲೆ ಇರಬಹುದು. ಕೇಂದ್ರ ಸರ್ಕಾರವೇ ಚುನಾವಣಾ ಆಯೋಗದ ಮೂಲಕ ಹೀಗೆ ಮಾಡಿಸಿರಬಹುದು. ಹೀಗಾಗಿ ಚುನಾವಣಾ ಆಯೋಗ ಅನರ್ಹ ಶಾಸಕರ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್‍ನಲ್ಲಿ ಮಧ್ಯಸ್ಥಿಕೆವಹಿಸಿದೆ ಅನ್ನಿಸುತ್ತಿದೆ ಎಂದು ಎಚ್‍ಡಿಡಿ ಕೇಂದ್ರದ ವಿರುದ್ಧ ಹರಿಹಾಯ್ದರು.
ಮೊನ್ನೆ ಕೂಡ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್ ನೋಟಿಸ್ ನೀಡದಿದ್ದರೂ ಬಂದು ವಾದ ಮಾಡಿತ್ತು. ಈ ವಿಚಾರದಲ್ಲಿ ಚುನಾವಣೆ ಆಯೋಗದ ನಡೆ ಸರಿಯಲ್ಲ. ಆಯೋಗ ಸ್ವತಂತ್ರವಾಗಿ ಕೆಲಸ ನಿರ್ವಹಣೆ ಮಾಡಬೇಕು. ಆದರೆ ಈ ಪ್ರಕರಣದಲ್ಲಿ ಆ ರೀತಿ ನಡೆದುಕೊಂಡಿಲ್ಲ. ಚುನಾವಣಾ ಆಯೋಗದ ಮಧ್ಯಸ್ಥಿಕೆಯಿಂದ ಉಪಚುನಾವಣೆ ಮುಂದೂಡಿಕೆಯಾಗಿದೆ ಎಂದು ದೇವೇಗೌಡರು ಅಭಿಪ್ರಾಯಪಟ್ಟಿದ್ದಾರೆ.
ಇಂದು ಪಾರ್ಲಿಮೆಂಟರಿ ಬೋರ್ಡ್ ಮೀಟಿಂಗ್‍ನಲ್ಲಿ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ನಡೆದಿತ್ತು. ಅದರ ಮಧ್ಯೆಯೇ ಕೋರ್ಟ್ ತೀರ್ಪು ಬಂತು. ಪ್ರಾದೇಶಿಕ ಪಕ್ಷವಾಗಿ ಚುನಾವಣೆಗೆ ಸಿದ್ಧತೆ ಮಾಡಿಕೊಂಡಿದ್ದೆವು. ಐಕ್ಯತೆಯಿಂದ ಚುನಾವಣೆ ಎದುರಿಸಲು ಚರ್ಚೆ ಆಗಿದೆ. ಮಹಾಲಯ ಅಮಾವಾಸ್ಯೆಯಾದ ಮೇಲೆ ಅಭ್ಯರ್ಥಿ ಆಯ್ಕೆ ಮಾಡಬೇಕು ಎಂದುಕೊಂಡಿದ್ದೆವು. ಈ ಕುರಿತು ಕುಮಾರಸ್ವಾಮಿ ನಿರ್ಧಾರ ಮಾಡುತ್ತಾರೆ ಎಂದು ತಿಳಿಸಿದರು.
ಆರು ತಂಡ ರಚನೆ ಮಾಡುತ್ತೇವೆ. ಒಂದು ತಂಡದಲ್ಲಿ ಹತ್ತು ಜನರ ಇರುತ್ತಾರೆ. ಇದರಲ್ಲಿ ಮಾಜಿ ಸಚಿವರು, ಮಾಜಿ ಶಾಸಕರು ಸಹ ಇದರಲ್ಲಿ ಇರುತ್ತಾರೆ. ರಾಜ್ಯದ 30 ಜಿಲ್ಲೆಗಳಲ್ಲಿ ಪಕ್ಷ ಸಂಘಟನೆ ಮಾಡುತ್ತಾರೆ. ಸಮಸ್ತ ಜಾತಿಗೆ ಸಿಗುವ ರೀತಿ ಜಿಲ್ಲಾ, ತಾಲೂಕು ಪದಾಧಿಕಾರಿಗಳ ಆಯ್ಕೆ ಮಾಡುತ್ತೇವೆ ಎಂದು ಎಚ್‍ಡಿಡಿ ಈ ವೇಳೆ ತಿಳಿಸಿದರು.
ಕಾರವಾರ: ಅನರ್ಹ ಶಾಸಕರು ಒಂದು ರೀತಿ ನಮ್ಮ ಮನೆ ಅಳಿಯಂದಿರಿದ್ದಂತೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅನರ್ಹ ಶಾಸಕರ ಪರ ಮತ್ತೆ ಬ್ಯಾಟಿಂಗ್ ಮಾಡಿದ್ದಾರೆ.
ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹ ಶಾಸಕರು ಚುನಾವಣೆಗೆ ನಿಲ್ಲುವಂತೆ ಸುಪ್ರೀಂ ಕೋರ್ಟ್ ಅವಕಾಶ ನೀಡಿದರೆ ಅವರೇ ನಮ್ಮ ಅಭ್ಯರ್ಥಿಗಳು. ಇಲ್ಲವಾದರೆ ಅವರ ಜೊತೆ ಕೂತು ಚರ್ಚಿಸಿ ಅಭ್ಯರ್ಥಿಯನ್ನು ನಿರ್ಧಾರ ಮಾಡುತ್ತೇವೆ. ಮನೆ ಮಕ್ಕಳು ಕಡಿಮೆ ಇರುವುದರಿಂದ ಅಳಿಯಂದಿರು ಬಂದಿದ್ದಾರೆ ಎಂದು ಹೇಳುವ ಮೂಲಕ ಈಶ್ವರಪ್ಪ ಅವರು ಉಪಚುನಾವಣೆಯಲ್ಲಿ ಅನರ್ಹ ಶಾಸಕರ ನಿರ್ಣಯವೇ ಅಂತಿಮ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.
ಸಿದ್ದರಾಮಯ್ಯನವರು ರಣ ಕಹಳೆ ಊದಿ ಊದಿ ನೆಗೆದು ಬಿದ್ದುಹೋಗಿದ್ದಾರೆ. ಚಾಮುಂಡೇಶ್ವರಿಯಲ್ಲೂ ಬಿದ್ದು ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡರು. ಇದೀಗ ವಿರೋಧ ಪಕ್ಷದ ನಾಯಕರಾಗಲು ಸರ್ಕಸ್ ಮಾಡುತಿದ್ದಾರೆ. ಅದೂ ಆಗದೇ ಇದ್ದಾಗ ಸೋನಿಯಾ ಗಾಂಧಿ ಮನೆ ಬಾಗಿಲು ತಟ್ಟಿದ್ದಾರೆ. ಅಲ್ಲದೆ, ಸರ್ಕಾರ ಇದ್ದಾಗ ಒಳಗೊಳಗೆ ಬಡಿದಾಡುತಿದ್ದ ಜೆಡಿಎಸ್-ಕಾಂಗ್ರೆಸ್ ಈಗ ಮುಖಾಮುಖಿಯಾಗಿ ಬಡಿದಾಡುತ್ತಿವೆ ಎಂದು ಸಿದ್ದರಾಮಯ್ಯ ಹಾಗೂ ಮೈತ್ರಿ ಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್‍ನಲ್ಲಿ ಸೀಟು ಕೇಳುವವರೇ ಗತಿಯಿಲ್ಲ. ಬಿಜೆಪಿ ದೇಶದಲ್ಲಿ ಅತಿಹೆಚ್ಚು ಬೆಳೆದಿದೆ ಹೀಗಾಗಿ ನಮ್ಮ ಪಕ್ಷದಲ್ಲಿ ಸೀಟು ಕೇಳುತ್ತಿದ್ದಾರೆ. ಇದರರ್ಥ ಬಂಡಾಯವಲ್ಲ, ಬಿಜೆಪಿ ಅಧಿಕೃತ ಅಭ್ಯರ್ಥಿ ವಿರುದ್ಧ ನಮ್ಮ ಪಕ್ಷದವರೇ ಯಾರಾದರೂ ಸ್ಪರ್ಧಿಸಿದರೆ ಅದು ಬಂಡಾಯ ತಿಳಿಸಿದರು.
ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸಿದ್ದರಾಮಯ್ಯನವರ ಚೇಲಾರಂತೆ ವರ್ತಿಸಿದ್ದಾರೆ. ಶಾಸಕರನ್ನು ಅನರ್ಹ ಮಾಡಿದ್ದು ರಮೇಶ್ ಕುಮಾರ್ ಮಾಡಿದ ಅಕ್ಷಮ್ಯ ಅಪರಾಧ. ಸುಪ್ರೀಂ ಕೋರ್ಟ್‍ನಲ್ಲಿ ಅವರಿಗೆ ನ್ಯಾಯ ಸಿಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.
– ಕೋರ್ ಕಮಿಟಿ ಸಭೆ ಬಳಿಕ ಮಾಜಿ ಸಚಿವರ ಹೇಳಿಕೆ
– ಅನರ್ಹರಿಗೆ ಶಾಕ್ ಕೊಟ್ಟ ‘ಕಮಲ ಪಡೆ’
ಬೆಂಗಳೂರು: ನಿಗದಿತ ಅವಧಿಯಲ್ಲಿ ಉಪ ಚುನಾವಣೆ ನಡೆದರೆ ಬಿಜೆಪಿಯವರೇ ಅಭ್ಯರ್ಥಿಗಳಾಗಿ ಚುನಾವಣಾ ಕಣಕ್ಕೆ ಇಳಿಯಲಿದ್ದಾರೆ ಎಂದು ಮಾಜಿ ಸಚಿವ ಅರವಿಂದ್ ಲಿಂಬಾವಳಿ ಹೇಳಿದ್ದಾರೆ.
ಅನರ್ಹ ಶಾಸಕರಿಗೆ ಉಪ ಚುನಾವಣೆಯ ಟಿಕೆಟ್ ನೀಡುವ ವಿಚಾರವಾಗಿ ಪಕ್ಷದೊಳಗೆ ವಿರೋಧ ಎದ್ದಿದೆ. ಈ ಹಿನ್ನೆಲೆಯಲ್ಲಿ ಬಂಡಾಯ ಶಮನಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ತುರ್ತು ಕೋರ್ ಕಮಿಟಿ ಸಭೆ ಕರೆದ್ದರು. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಕೇಂದ್ರ ಸಚಿವ ಸದಾನಂದಗೌಡ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವರಾದ ಆರ್.ಅಶೋಕ್, ಸಿ.ಟಿ.ರವಿ ಹಾಗೂ ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಅನೇಕ ನಾಯಕರು ಭಾಗಿಯಾಗಿದ್ದರು.
ಸಭೆಯ ಬಳಿಕ ಮಾತನಾಡಿದ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅರವಿಂದ್ ಲಿಂಬಾವಳಿ, ಉಪ ಚುನಾವಣೆ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ಆಗಿದೆ. ನಮ್ಮ ಸಂಘಟನೆಯಿಂದ ಚುನಾವಣೆಗೆ ಭರ್ಜರಿ ತಯಾರಿ ನಡೆದಿದೆ. ಅನರ್ಹ ಶಾಸಕರ ವಿಚಾರ ಸುಪ್ರೀಂ ಕೋರ್ಟ್ ನಲ್ಲಿದೆ. ಅವರ ಪರ ವಕೀಲರು ಚುನಾವಣೆ ಮುಂದೂಡುವಂತೆ ಕೋರ್ಟ್ ಗೆ ಮನವಿ ಮಾಡಿಕೊಂಡಿದ್ದಾರೆ. ಹೀಗಾಗಿ ಉಪ ಚುನಾವಣೆ ಬಗ್ಗೆ ಅಂತಿಮ ನಿರ್ಧಾರಕ್ಕೆ ಪಕ್ಷ ಬಂದಿಲ್ಲ ಎಂದು ತಿಳಿಸಿದರು.
2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಅಭ್ಯರ್ಥಿಗಳ ವಿರೋಧದ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಸಚಿವರು, ಈಗಾಗಲೇ ಕೋರ್ಟಿನಲ್ಲಿ ಉಪ ಚುನಾವಣೆ ಮುಂದೂಡಲು ಮನವಿ ಮಾಡಿದ್ದಾರೆ. ಹಾಗಾಗಿ ನಾವು ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ಮಾಡಿಲ್ಲ. ಒಂದು ವೇಳೆ ನಿಗದಿತ ಸಮಯದಲ್ಲಿ ಚುನಾವಣೆ ಬಂದರೆ ನಮ್ಮ ಪಕ್ಷದ ಅಭ್ಯರ್ಥಿಗಳು ಎಲ್ಲ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದ್ದಾರೆ. ಅದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಿದರು.
ಉಪ ಚುನಾವಣೆಗೆ ಪಕ್ಷದ ಕಾರ್ಯಕರ್ತರನ್ನು ಸನ್ನದ್ಧಗೊಳಿಸಲು ಸೆಪ್ಟೆಂಬರ್ 27ರಂದು ಬೆಂಗಳೂರಿನಲ್ಲಿ ದಕ್ಷಿಣ ಕರ್ನಾಟಕದ ಉಪ ಚುನಾವಣಾ ಕ್ಷೇತ್ರಗಳ ಕಾರ್ಯಕರ್ತರ ಸಭೆ ನಡೆಸಲಾಗುತ್ತದೆ. ಬಳಿಕ ಸೆಪ್ಟೆಂಬರ್ 29ರಂದು ಹುಬ್ಬಳ್ಳಿಯಲ್ಲಿ ಉತ್ತರ ಕರ್ನಾಟಕದ ಕ್ಷೇತ್ರಗಳ ಕಾರ್ಯಕರ್ತರ ಸಭೆ ಕರೆಯಲಾಗಿದೆ. ಈ ವಿಚಾರವನ್ನು ಕೋರ್ ಕಮಿಟಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಮೈಸೂರು: ಇಬ್ಬರೂ ತಪ್ಪು ಮಾಡಿದ್ದೇವೆ, ವೈಯುಕ್ತಿಕ ಟೀಕೆಗಳನ್ನು ನಿಲ್ಲಿಸೋಣ ಎಂದು ಅನರ್ಹ ಶಾಸಕ ಹೆಚ್.ವಿಶ್ವನಾಥ್ ಹೇಳಿಕೆ ನೀಡಿದ್ದಾರೆ. ಇಷ್ಟು ದಿನ ಸಾರಾ ಮಹೇಶ್ ಹೇಳಿಕೆಗಳಿಗೆ ಮಾತಿನ ಚಾಟಿ ಬೀಸಿ ತಿರುಗೇಟು ನೀಡುತ್ತಿದ್ದ ವಿಶ್ವನಾಥ್ ಈಗ ಅವರ ಜೊತೆಗೆ ರಾಜಿಗೆ ಮುಂದಾಗಿದ್ದಾರೆ.
ಹೌದು. ಇಷ್ಟು ದಿನ ಹಾವು ಮುಂಗುಸಿಯಂತೆ ವಿಶ್ವನಾಥ್ ಹಾಗೂ ಸಾರಾ ಮಹೇಶ್ ಒಬ್ಬರ ಮೇಲೊಬ್ಬರು ಆರೋಪ ಮಾಡಿಕೊಂಡು ಬಂದಿದ್ದರು. ಆದರೆ ಈಗ ಇದ್ದಕ್ಕಿದ್ದಂತೆ ವಿಶ್ವನಾಥ್ ಅವರು ಸಾರಾ ಮಹೇಶ್ ಜೊತೆ ರಾಜಿಗೆ ನಿಂತಿದ್ದಾರೆ. ಇಬ್ಬರು ಗಾಜಿನ ಮನೆಯಲ್ಲಿ ಇದ್ದೇವೆ. ಜನರು ನಮ್ಮನ್ನು ನೋಡುತ್ತಿದ್ದಿದ್ದಾರೆ. ಅವರ ಮುಂದೆ ನಾವು ಜಾರಿ ಬೀಳುವುದು ಬೇಡ. ಇಬ್ಬರೂ ತಪ್ಪು ಮಾಡುತ್ತಿದ್ದೇವೆ ಅಂತ ನನಗೆ ಅನಿಸುತ್ತಿದೆ. ನಾವಿಬ್ಬರು ಒಂದೇ ಊರಿನವರು, ಪರಸ್ಪರ ಈ ರೀತಿ ಮಾತನಾಡುವುದು ಬೇಡ. ನೀವೇನೋ ಮಾಡುತ್ತೀರಾ ಅಂತ ಹೆದರಿ ಈ ಮಾತುಗಳನ್ನ ಹೇಳುತ್ತಿಲ್ಲ. ನೀವು ಬೆಳೆಯಬೇಕಿರುವ ರಾಜಕಾರಣಿ. ನನ್ನದು ನಿವೃತ್ತಿಯ ರಾಜಕಾರಣ. ಆದ್ದರಿಂದ ಇಂತಹ ಪರಸ್ಪರ ವೈಯುಕ್ತಿಕ ಮಾತುಗಳು ನಮಗೆ ಒಳ್ಳೆಯದಲ್ಲ. ಅಭಿವೃದ್ಧಿ ಹಾಗೂ ವಿಷಯಾಧಾರಿತವಾಗಿ ಮಾತನಾಡೋಣ. ಇಬ್ಬರೂ ಕೂಡ ಮಂತ್ರಿಗಳಾಗಿದ್ದವರು. ಈ ರೀತಿ ಮಾತನಾಡಿದರೆ ಜನ ನೋಡುತ್ತಾರೆ. ಇಲ್ಲಿಗೆ ಎಲ್ಲವನ್ನು ನಿಲ್ಲಿಸೋಣ. ವೈಯುಕ್ತಿಕ ಟೀಕೆಗಳನ್ನ ನಿಲ್ಲಿಸೋಣ ಎಂದು ಸಾ.ರಾ.ಮಹೇಶ್ ಅವರಲ್ಲಿ ಮನವಿ ಮಾಡಿದರು. ಇದನ್ನೂ ಓದಿ:ಕುಮಾರಸ್ವಾಮಿ ಪ್ರಜ್ಞೆ ಇಟ್ಕೊಂಡು ಮಾತನಾಡಲಿ – ಹೆಚ್‍ಡಿಕೆ ವಿರುದ್ಧ ಟಗರು ಗುಟುರು
ಯಡಿಯೂರಪ್ಪ ಸಿಎಂ ಆಗಲು ಸಿದ್ದರಾಮಯ್ಯ, ಕುಮಾರಸ್ವಾಮಿ ಕಾರಣ. ಇದನ್ನ ಸ್ವತಃ ಅವರಿಬ್ಬರೇ ಒಪ್ಪಿಕೊಂಡಿದ್ದಾರೆ. ಇದಕ್ಕೆ 17 ಜನ ಅನರ್ಹ ಶಾಸಕರು ಕಾರಣರಲ್ಲ. ನಮ್ಮ ಮೇಲೆ ಸರ್ಕಾರ ಬೀಳಿಸಿದ ಗೂಬೆ ಕೂರಿಸಿದ್ದಿರಿ ಇಷ್ಟು ದಿನ. ಈಗ ನಿಮ್ಮ ಮಾತಿನ ಮೂಲಕ ಸರ್ಕಾರ ಪತನಕ್ಕೆ ನೀವೇ ಕಾರಣ ಎನ್ನುವುದು ಸ್ಪಷ್ಟವಾಗಿದೆ. ಪರಸ್ಪರ ಅಸಮಾಧಾನ ಅಪನಂಬಿಕೆಯಲ್ಲಿ ಸರ್ಕಾರ ನಡೆಸಿದವರು ನೀವು. ಅದರ ಪರಿಣಾಮ ಸರ್ಕಾರ ಪತನವಾಯಿತು. ಈಗ ನೀವು ಹದ್ದು ಗಿಣಿ ಎಂಬ ಟೀಕೆ ಮಾಡಿಕೊಳ್ಳುತ್ತಿದ್ದೀರಿ. ಯಡಿಯೂರಪ್ಪ ಮುಖ್ಯಮಂತ್ರಿ ಆಗಲು ಕಾರಣ ಸಿದ್ದರಾಮಯ್ಯ, ಕುಮಾರಸ್ವಾಮಿ. ಕುಮಾರಸ್ವಾಮಿಯೇ ತಮ್ಮದು ಕೆಟ್ಟ ಸರ್ಕಾರ ಎಂದು ಹೇಳಿದ್ದಾರೆ. ನಾವು ಅದನ್ನ ಹೇಳಿಯೇ ಸರ್ಕಾರದಿಂದ ಹೊರ ಬಂದಿದ್ದು. ಈಗ ಅದನ್ನು ನೀವೇ ಖಚಿತ ಪಡಿಸುತ್ತಿದ್ದೀರಿ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ:ತೇಜಸ್ವಿ ಸೂರ್ಯ ರಾಕ್ಷಸ, ರಾಜ್ಯದ ಜನರ ದಿಕ್ಕು ತಪ್ಪಿಸ್ತಿದ್ದಾನೆ: ಈಶ್ವರ್ ಖಂಡ್ರೆ
ಮಾಜಿ ಸಚಿವ ರೇವಣ್ಣರನ್ನ ಹೊಗಳುವುದರ ಜೊತೆಗೆ ವಿಶ್ವನಾಥ್ ಅವರು ಟಾಂಗ್ ಕೊಟ್ಟಿದ್ದಾರೆ. ಅವರು ಕೆಲಸ ಮಾಡುವುದರಲ್ಲಿ ದೈತ್ಯರು. ಅವರ ಕೆಲಸದ ಬಗ್ಗೆ ಯಾವುದೇ ಅನುಮಾನ ಬೇಡ. ಯಾವುದೇ ಖಾತೆ ಇದ್ದರು ಅದನ್ನ ಮಾಡುತ್ತಾರೆ. ಜೊತೆಗೆ ಎಲ್ಲಾ ಖಾತೆಗೂ ಕೈಯಾಡಿಸುತ್ತಾರೆ ಎಂದು ಕಾಲೆಳೆದಿದ್ದರು.
15 ಕ್ಷೇತ್ರಗಳಿಗೆ ಉಪಚುನಾವಣೆ ವಿಚಾರವಾಗಿ ಮಾತನಾಡಿ, ಉಪಚುನಾವಣೆಯಲ್ಲಿ ಅನರ್ಹ ಶಾಸಕರ ಸ್ಪರ್ಧೆಗೆ ಅವಕಾಶ ನೀಡಿರುವ ಆಯೋಗದ ನಿರ್ಧಾರ ಸ್ವಾಗತಾರ್ಹ. ಆದರೆ ಚುನಾವಣೆ ಮುಂದೂಡಿಕೆ ಮಾಡಿ ಎನ್ನುವುದೇ ನಮ್ಮ ಮನವಿ ಎಂದು ಹೇಳಿದರು. ನಾವು ನ್ಯಾಯಾಲಯದ ಮೊರೆ ಹೋಗಿದ್ದೇವೆ. ಈಗ ನಡೆಯುತ್ತಿರುವ ಚುನಾವಣೆ ತರಾತುರಿಯಲ್ಲಿ ನಡೆಯುತ್ತಿದೆ. ಹಾಗಾಗಿ ಉಪಚುನಾವಣೆ ಈಗ ಬೇಡ ಎನ್ನುವುದು ನಮ್ಮ ಅಭಿಪ್ರಾಯ. ಅದೇನೆ ಇದ್ದರೂ ಬುಧವಾರ ಹಾಗೂ ಶುಕ್ರವಾರದವರೆಗೆ ಕಾಯಬೇಕು. ಸುಪ್ರೀಂಕೋರ್ಟ್ ತೀರ್ಮಾನದ ನಂತರ ಎಲ್ಲವು ನಿರ್ಧಾರ ಆಗಲಿದೆ. ಉಪಚುನಾವಣೆಗೆ ನಾನು ತಯಾರಿ ಮಾಡಿಕೊಳ್ಳುತ್ತಿದ್ದೇನೆ. ಹುಣಸೂರಿನ ಹಿರಿಯರು, ಮುಖಂಡರ ಜೊತೆ ಚರ್ಚೆ ಮಾಡುತ್ತೆನೆ. ಅವರ ಅಭಿಪ್ರಾಯ ಪಡೆದು ಮುಂದುವರಿಯುತ್ತೇನೆ. ಉಪಚುನಾವಣೆಗೆ ಸಮಯ ಕಡಿಮೆ ಇದೆ. ಹೀಗಾಗಿ ತಯಾರಿ ಮಾಡಿಕೊಳ್ಳಲೇಬೇಕು ಅಲ್ಲವೇ ಎಂದು ಹೇಳಿದರು.
ಹಾವೇರಿ: ಜಿಲ್ಲೆಯ ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಅನರ್ಹ ಶಾಸಕ ಆರ್. ಶಂಕರ್‌ಗೆ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಟಿಕೆಟ್ ಕೊಡಬೇಡಿ. ಒಂದು ವೇಳೆ ಅವರಿಗೆ ಟಿಕೆಟ್ ಕೊಟ್ಟಿದ್ದೇ ಆದ್ರೆ ಪಕ್ಷಕ್ಕೆ ಡ್ಯಾಮೇಜ್ ಆಗೋದು ಗ್ಯಾರಂಟಿ ಎಂದು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಹಾಗೂ 2018ರ ವಿಧಾನಸಭೆಯ ಪರಾಜಿತ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕೇಲಗಾರ ಎಚ್ಚರಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅನರ್ಹ ಶಾಸಕರಿಂದಲೇ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿದೆ. ಆದರೆ ಅವರಿಂದ ತ್ಯಾಗ, ಬಲಿದಾನ, ಶ್ರಮ, ಹೋರಾಟ ಎಂಬುದಿಲ್ಲ. ಅವರೇನು ಸ್ವಾತಂತ್ರ್ಯ ಹೋರಾಟಗಾರರಲ್ಲ. ಆಸೆ, ಆಕಾಂಕ್ಷೆ ಇಟ್ಟುಕೊಂಡೇ ಅವರು ಪಕ್ಷದಿಂದ ಹೊರಬಂದಿದ್ದಾರೆ. ಅವರಿಗೆ ಅಧಿಕಾರ ಕೊಡಿ, ಎಂಎಲ್‍ಸಿ, ಮಂತ್ರಿ, ನಿಗಮ ಮಂಡಳಿ ಕೊಡಿ. ಆದರೆ ಉಪಚುನಾವಣೆಯಲ್ಲಿ ಪಕ್ಷದ ಟಿಕೆಟ್ ಕೊಡಬೇಡಿ. ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ಕೊಡಿ ಎಂದು ಸಲಹೆ ನೀಡಿದ್ದಾರೆ.
ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಕಳೆದ ಚುನಾವಣೆಯಲ್ಲಿ ಕೊನೆ ಗಳಿಗೆಯಲ್ಲಿ ಟಿಕೆಟ್ ಸಿಕ್ಕಿತ್ತು. ಆಗ ಐವತ್ತು ಸಾವಿರ ಮತಗಳನ್ನು ಪಡೆದಿದ್ದೇನೆ. ಹೀಗಾಗಿ ಹೈಕಮಾಂಡ್ ಟಿಕೆಟ್ ಕೊಡೋ ವಿಶ್ವಾಸವಿದೆ. ನಾನು ಯಾವುದೇ ಕಾರಣಕ್ಕೂ ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲೋದಿಲ್ಲ. ಬಿಜೆಪಿ ನಮ್ಮ ಮನೆ. ಅಲ್ಲಿಯೇ ಗಟ್ಟಿಯಾಗಿ ನಿಂತು ಟಿಕೆಟ್ ತಗೋತೀನಿ. ಹೈಕಮಾಂಡ್ ಕೂಡ ಅಳೆದು ತೂಗಿ ನೋಡಿ ಟಿಕೆಟ್ ಕೊಡುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿಜಯಪುರ: ಅನರ್ಹ ಶಾಸಕರ ಪ್ರಕರಣವು ಸುಪ್ರೀಂಕೋರ್ಟ್ ನಲ್ಲಿದೆ. ಈ ಪ್ರಕರಣದ ಬಗ್ಗೆ ತೀರ್ಪು ನೀಡಲು ನಾನು ನ್ಯಾಯಾಧೀಶನಲ್ಲ. ಒಂದು ವೇಳೆ ತೀರ್ಪು ಕೊಟ್ಟರೆ ನನ್ನ ಜೈಲಿಗೆ ಹಾಕುತ್ತಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಶಾಸಕರು, ಉಪ ಚುನಾವಣೆಯಲ್ಲಿ ಅನರ್ಹ ಶಾಸಕರು ಸ್ಪರ್ಧೆ ಮಾಡುವ ಸಾಧ್ಯತೆ ಇದೆ. ಚುನಾವಣೆಯಲ್ಲಿ ಅವರಿಗೆ ಉತ್ತಮ ಫಲಿತಾಂಶ ಸಿಗಲಿದೆ. ಈ ಮೂಲಕ ಅನರ್ಹ ಶಾಸಕರಿಗೆ ಪುನರ್ಜನ್ಮ ಸಿಗುತ್ತದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.
ಉಪ ಚುನಾವಣೆಯ 15 ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲ್ಲುತ್ತಾ ಎಂಬ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಶಾಸಕರು, ನಾನೇನು ಭವಿಷ್ಯ, ಜ್ಯೋತಿಷ್ಯ ಹೇಳುವವನಲ್ಲ. ನಾನ್ಯಾಕ್ ಹೇಳಲಿ? ನಾವು 17 ಕ್ಷೇತ್ರಗಳಲ್ಲಿಯೂ ಜಯ ಸಾಧಿಸುತ್ತೇವೆ ಅಂತ ಹೇಳುತ್ತೇವೆ. ಆದರೆ ಜನ ತೀರ್ಪು ಏನು ಇರುತ್ತದೆ ಎನ್ನುವುದು ಮುಖ್ಯವಾಗಿರುತ್ತದೆ ಎಂದು ಹೇಳಿದರು.
ಕಾಂಗ್ರೆಸ್ ನನಗೆ ಬದ್ಧವೈರಿ, ಬಿಜೆಪಿಯಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಅವರು ಆತ್ಮಾವಲೋಕನ ಮಾಡಿಕೊಂಡಿದ್ದು ಖುಷಿ ತಂದಿದೆ. ಕುಮಾರಸ್ವಾಮಿ ಅವರಿಗೆ ಈಗ ಜ್ಞಾನೋದಯವಾಗಿದೆ ಎಂದು ವ್ಯಂಗ್ಯವಾಡಿದರು.