Tag: dissatisfaction

  • ಸಿಎಂ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ, 2,3 ದಿನಗಳಲ್ಲಿ ನಿರ್ಧಾರ ತಿಳಿಸುವೆ: ಎಂಟಿಬಿ ನಾಗರಾಜ್

    ಸಿಎಂ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ, 2,3 ದಿನಗಳಲ್ಲಿ ನಿರ್ಧಾರ ತಿಳಿಸುವೆ: ಎಂಟಿಬಿ ನಾಗರಾಜ್

    ಬೆಂಗಳೂರು: ಕಳೆದ ಬಾರಿಯ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಈಗಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಖಾತೆ ಹಂಚಿಕೆಯಲ್ಲಿ ನನಗೆ ಅಸಮಾಧಾನವಿದೆ ಎಂದು ಸಚಿವ ಎಂಟಿಬಿ ನಾಗರಾಜ್‍ ಆಕ್ರೋಶ ಹೊರ ಹಾಕಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಎಂಟಿಬಿ, ಈ ಹಿಂದಿನ ಮುಖ್ಯಮಂತ್ರಿಗಳು ಮತ್ತು ಈಗಿನ ಮುಖ್ಯಮಂತ್ರಿಗಳು ನನಗೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಖಾತೆ ಹಂಚಿಕೆಯಲ್ಲಿ ನನಗೆ ಅಸಮಾಧಾನವಿದೆ. ಮುಂದಿನ 2-3 ದಿನಗಳಲ್ಲಿ ನನ್ನ ನಿರ್ಧಾರ ತಿಳಿಸುವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿಕ್ಕ ಖಾತೆಯಲ್ಲಿ ‘ಆನಂದ’ವಿಲ್ಲ – ಸಚಿವ ಆನಂದ್ ಸಿಂಗ್ ಅಸಮಾಧಾನ

    ಎಂಟಿಬಿ ನಾಗರಾಜ್‍ಗೆ ಪೌರಾಡಳಿತ ಹಾಗೂ ಸಣ್ಣ ಕೈಗಾರಿಕೆಗಳ ಖಾತೆಯನ್ನು ನೀಡಲಾಗಿದೆ. ಇದಕ್ಕಾಗಿ ಎಂಟಿಬಿ ಆಕ್ರೋಶ ಹೊರ ಹಾಕಿದ್ದಾರೆ. ಪರಿಸರ ಮತ್ತು ಪ್ರವಾಸೋದ್ಯಮ ಖಾತೆ ನೀಡಿದ್ದಕ್ಕೆ ಆನಂದ್ ಸಿಂಗ್ ಸಹ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

  • ಮೈತ್ರಿ ನಾಯಕರ ಬಿಜೆಪಿ ಸೇರ್ಪಡೆಗೆ ಪಕ್ಷದಲ್ಲೇ ವಿರೋಧ- ಬಿಎಸ್‍ವೈಗೆ ಹೊಸ ತಲೆನೋವು

    ಮೈತ್ರಿ ನಾಯಕರ ಬಿಜೆಪಿ ಸೇರ್ಪಡೆಗೆ ಪಕ್ಷದಲ್ಲೇ ವಿರೋಧ- ಬಿಎಸ್‍ವೈಗೆ ಹೊಸ ತಲೆನೋವು

    ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷದ ಕೆಲ ನಾಯಕರ ಬಿಜೆಪಿ ಸೇರ್ಪಡೆಗೆ ವಿರೋಧ ವ್ಯಕ್ತವಾಗುತ್ತಿದ್ದು, ಮಹಾಲಕ್ಷ್ಮೀ ಲೇಔಟ್ ಶಾಸಕ ಕೆ.ಗೋಪಾಲಯ್ಯ ಸೇರಿದಂತೆ ವಿವಿಧ ನಾಯಕರ ಸೇರ್ಪಡೆಗೆ ಬಿಜೆಪಿ ಪಾಳಯದಲ್ಲಿ ವಿರೋಧ ವ್ಯಕ್ತವಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

    ಮಾಜಿ ಉಪಮೇಯರ್ ಎಸ್.ಹರೀಶ್ ನೇತೃತ್ವದಲ್ಲಿ ನಿಯೋಗ ಇಂದು ಡಾಲರ್ಸ್ ಕಾಲೋನಿಯಲ್ಲಿರುವ ಬಿ.ಎಸ್.ಯಡಿಯೂರಪ್ಪ ನಿವಾಸದ ಬಳಿ ಆಗಮಿಸಿ, ಈ ಕುರಿತು ತಮ್ಮ ಮನವಿ ಸಲ್ಲಿಸಿದ್ದು, ಈವೆರೆಗೆ ಕಾರ್ಯಕರ್ತರು ಗೋಪಾಲಯ್ಯನವರ ವಿರುದ್ಧ ಕೆಲಸ ಮಾಡಿದ್ದಾರೆ. ಇದೀಗ ಅವರ ಪರವಾಗಿ ಕೆಲಸ ಮಾಡಲು ಹೇಗೆ ಸಾಧ್ಯ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.

    ಈ ವೇಳೆ ಬಿ.ಎಸ್.ಯಡಿಯೂರಪ್ಪ ಅವರು ಮನವಿ ಸ್ವೀಕರಿಸಿ, ಅದನ್ನೆಲ್ಲ ಹೊರಗೆ ಮಾತನಾಡಬೇಡಿ, ನಂತರ ಕುಳಿತು ಚರ್ಚೆ ಮಾಡೋಣ ಎಂದು ಕಾರ್ಯಕರ್ತರ ಮನವೊಲಿಸಿ ಕಳುಹಿಸಿದ್ದಾರೆ. ಈ ಮೂಲಕ ಯಡಿಯೂರಪ್ಪ ಅವರಿಗೆ ಹೊಸ ತಲೆನೋವು ಪ್ರಾರಂಭವಾದಂತಾಗಿದ್ದು, ಶಾಸಕರ ಸೇರ್ಪಡೆಗೆ ಪಕ್ಷದೊಳಗಿನ ವಿರೋಧ ಶಮನ ಮಾಡುವುದು ಹೇಗೆ ಎಂಬ ಸಂಕಷ್ಟ ಶುರುವಾಗಿದೆ.

    ಜೆಡಿಎಸ್ ಅತೃಪ್ತ ಶಾಸಕ ಕೆ.ಗೋಪಾಲಯ್ಯ ರಾಜೀನಾಮೆ ನೀಡಿ ಮುಂಬೈ ಹೋಟೆಲ್ ಸೇರಿದ್ದು, ರಾಜೀನಾಮೆ ಅಂಗೀಕಾರವಾದ ಬಳಿಕ ಗೋಪಾಲಯ್ಯ ಬಿಜೆಪಿ ಸೇರ್ಪಡೆಯಾಗುವ ಹಿನ್ನೆಲೆ ಮಹಾಲಕ್ಷ್ಮೀ ಲೇಔಟ್‍ನ ಕಮಲ ಮುಖಂಡರು ಆರಂಭದಲ್ಲೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

    ಇದರಿಂದ ಇತ್ತ ಗೋಪಾಲಯ್ಯನವರಿಗೂ ಸಂಕಷ್ಟ ಎದುರಾದಂತಾಗಿದ್ದು, ಗೋಪಾಲಯ್ಯ ಸೇರ್ಪಡೆಗೆ ಬಿಜೆಪಿಯಲ್ಲಿ ವಿರೋಧ ವ್ಯಕ್ತವಾಗಿದೆ. ಇತ್ತೀಚೆಗಷ್ಟೇ ನಂದೀಶ್ ರೆಡ್ಡಿ ನೇತೃತ್ವದ ನಿಯೋಗ ಬೈರತಿ ಬಸವರಾಜ್ ಬಿಜೆಪಿ ಸೇರ್ಪಡೆಗೆ ವಿರೋಧಿಸಿತ್ತು. ಶಾಸಕಾಂಗ ಪಕ್ಷದ ಸಭೆಯಲ್ಲಿ ತುಳಸಿ ಮುನಿರಾಜು, ಮುನಿರತ್ನ ಸೇರ್ಪಡೆಗೆ ವಿರೋಧಿಸಿದ್ದರು. ಹೀಗಾಗಿ ಬಿಜೆಪಿ ಸೇರುವ ಹೊಸ್ತಿಲಲ್ಲಿ ನಿಂತಿರುವ ಬೆಂಗಳೂರು ಕಾಂಗ್ರೆಸ್-ಜೆಡಿಎಸ್ ಶಾಸಕರಿಗೆ ಸಂಕಷ್ಟ ಎದುರಾಗಿದೆ.

  • ಬಂಡಾಯ ಎದ್ದರೆ ನಿರ್ದಾಕ್ಷಿಣ್ಯ ಕ್ರಮ: ಶಾಸಕರಿಗೆ ಎಚ್ಚರಿಕೆ ರವಾನಿಸಿದ ‘ಕೈ’ ಹೈಕಮಾಂಡ್

    ಬಂಡಾಯ ಎದ್ದರೆ ನಿರ್ದಾಕ್ಷಿಣ್ಯ ಕ್ರಮ: ಶಾಸಕರಿಗೆ ಎಚ್ಚರಿಕೆ ರವಾನಿಸಿದ ‘ಕೈ’ ಹೈಕಮಾಂಡ್

    – ಬಿಜೆಪಿಯವರ ಆಟ ಇದೇ ಮೊದಲೇನಲ್ಲ

    ನವದೆಹಲಿ: ಬಹಿರಂಗವಾಗಿ ಅಸಮಾಧಾನ ಹೊರಹಾಕಿದರೆ ಹಾಗೂ ಬಂಡಾಯ ಎದ್ದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಶಾಸಕರಿಗೆ ಎಚ್ಚರಿಕೆ ರವಾನಿಸಿದ್ದಾರೆ.

    ದೆಹಲಿಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ಬಳಿಕ ಮಾತನಾಡಿದ ವೇಣುಗೋಪಾಲ್ ಅವರು, ರಾಜ್ಯದಲ್ಲಿ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಎಲ್ಲವೂ ಕೂಲ್ ಆಗಿದೆ. ಬಿಜೆಪಿ ಮೊದಲ ದಿನದಿಂದಲೂ ಸರ್ಕಾರ ಕೆಡವಲು ಪ್ರಯತ್ನಿಸುತ್ತಿದೆ. ಯಾವ ಶಾಸಕರೂ ರಾಜೀನಾಮೆ ಕೊಡುವುದಿಲ್ಲ. ಶಾಸಕರು ರಾಜೀನಾಮೆ ಕೊಟ್ಟಿದಾರೆ ಅಂತ ಹೇಳಿದ್ದು ಯಾರು ಎಂದು ಪ್ರಶ್ನಿಸಿದರು.

    ಮೈತ್ರಿ ಸರ್ಕಾರಕ್ಕೆ ಸಂಕಷ್ಟ ಇಲ್ಲದೇ ಇರುವುದರಿಂದಲೇ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿದೇಶಕ್ಕೆ ಹೋಗಿದ್ದಾರೆ. ನಾನು ರಾಜ್ಯ ನಾಯಕರೊಂದಿಗೆ ಮಾತನಾಡಿದ್ದೇನೆ. ಕರ್ನಾಟಕದಲ್ಲಿ ಯಾವುದೇ ಸಮಸ್ಯೆ ಇಲ್ಲ. ನಾನು ಬೆಂಗಳೂರಿಗೆ ಹೋಗುವ ಬಗ್ಗೆ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿಸಿದರು.

    ಬಿಜೆಪಿಯವರ ಆಟ ಇದೇ ಮೊದಲೇನಲ್ಲ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾದಾಗಿನಿಂದ ಅವರು ಸರ್ಕಾರ ಬೀಳಿಸುವ ಪ್ರಯತ್ನ ನಡೆಸಿದ್ದಾರೆ. ನಮ್ಮ ಬಳಿ 20 ಜನ ಶಾಸಕರು ಇದ್ದಾರೆ, 25 ಶಾಸಕರಿದ್ದಾರೆ ಎಂದು ಹೇಳುತ್ತಾ ಬಂದರು. ಕರ್ನಾಟಕದಲ್ಲಿ ಕಾಂಗ್ರೆಸ್ ಪ್ರಬಲವಾಗಿದೆ ಎಂದರು.

  • ವಿಧಾನ ಪರಿಷತ್ ಸಭಾಪತಿ ಆಯ್ಕೆ: ಕಾಂಗ್ರೆಸ್-ಜೆಡಿಎಸ್ ಹಗ್ಗ ಜಗ್ಗಾಟ

    ವಿಧಾನ ಪರಿಷತ್ ಸಭಾಪತಿ ಆಯ್ಕೆ: ಕಾಂಗ್ರೆಸ್-ಜೆಡಿಎಸ್ ಹಗ್ಗ ಜಗ್ಗಾಟ

    ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಚುನಾವಣೆ ವಿಳಂಬಕ್ಕೆ ಆಕ್ಷೇಪ ವ್ಯಕ್ತಪಡಿಸಿ ಬಿಜೆಪಿ ಸಭಾತ್ಯಾಗ ನಡೆಸಿದ್ದು, ಸದ್ಯ ಸಭಾಪತಿ ಆಯ್ಕೆ ವಿಚಾರದಲ್ಲಿ ಸದ್ಯ ಕಾಂಗ್ರೆಸ್ ಹಾಗೂ ಜೆಡಿಎಸ್ ಮಧ್ಯೆ ಮುಸುಕಿನ ಗುದ್ದಾಟ ಮುಂದುವರಿದಿದೆ.

    ಸಭಾಪತಿ ಆಯ್ಕೆಗೆ ಬೇಕಾಗಿರುವ ಅಗತ್ಯ ಸಂಖ್ಯಾಬಲವನ್ನು ಕಾಂಗ್ರೆಸ್ ಹೊಂದಿದೆ. ಆದರೆ ಜೆಡಿಎಸ್‍ಗೆ ಸಭಾಪತಿ ಸ್ಥಾನ ನೀಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿತ್ತು. ಹೀಗಾಗಿ ಪರಿಷತ್ ಸ್ಪೀಕರ್ ಸ್ಥಾನ ಜೆಡಿಎಸ್ ಹೋಗಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‍ನಲ್ಲಿ ಭಾರೀ ಅಸಮಾಧಾನ ಕೇಳಿಬರುತ್ತಿದ್ದು, ಇದೇ ಕಾರಣಕ್ಕೆ ಸ್ಪೀಕರ್ ಆಯ್ಕೆ ಪ್ರಕ್ರಿಯೆ ವಿಳಂಬವಾಗುತ್ತಿದೆ ಎನ್ನಲಾಗಿದೆ.

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಸಚಿವ ಎಸ್.ಆರ್. ಪಾಟೀಲ್ ಪರವಾಗಿ ನಿಂತಿದ್ದು, ಸಭಾಪತಿ ಸ್ಥಾನವನ್ನು ಜೆಡಿಎಸ್‍ಗೆ ಬಿಟ್ಟು ಕೊಡಲು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

    ಅಧಿವೇಶನ ಮುಗಿಯುದರ ಒಳಗೆ ಸಭಾಪತಿ ಚುನಾವಣೆ ನಡೆಸುವುದಾಗಿ ಸರ್ಕಾರ ಹೇಳಿತ್ತು. ಆದರೆ ಈ ಕುರಿತು ಯಾವುದೇ ಮುನ್ಸೂಚನೆ ಇಲ್ಲದಾಗಿದೆ. ಇದು ಹಕ್ಕುಚ್ಯುತಿ ಆಗೋದಿಲ್ವೇ ಎಂದು ಬಿಜೆಪಿಯ ಅಯನೂರು ಮಂಜುನಾಥ್ ಪ್ರಶ್ನಿಸಿದ್ದಾರೆ.

  • ಪಕ್ಷದ ಆಂತರಿಕ ವಿಷಯ ಬೀದಿ ರಂಪಾಟವಾಗೋದು ಬೇಡ: ಸಿ.ಎಸ್.ಪುಟ್ಟರಾಜು

    ಪಕ್ಷದ ಆಂತರಿಕ ವಿಷಯ ಬೀದಿ ರಂಪಾಟವಾಗೋದು ಬೇಡ: ಸಿ.ಎಸ್.ಪುಟ್ಟರಾಜು

    ಮಂಡ್ಯ: ಖಾತೆ ಹಂಚಿಕೆಯಲ್ಲಿ ತಾರತಮ್ಯ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈಗೊಂಡ ಬೆಂಬಲಿಗರಿಗೆ ಶಾಸಕ ಸಿ.ಎಸ್.ಪುಟ್ಟರಾಜು ಅವರು ಪತ್ರಿಭಟನೆ ಕೈಬಿಡುವಂತೆ ಮನವಿ ಮಾಡಿಕೊಂಡಿದ್ದಾರೆ.

    ನನಗೆ ಯಾವುದೇ ಅಸಮಾಧಾನವಿಲ್ಲ. ಪಕ್ಷದ ಆಂತರಿಕ ವಿಷಯ ಬೀದಿ ರಂಪಾಟವಾಗಬಾರದು, ಆದ್ದರಿಂದ ಪ್ರತಿಭಟನೆಯನ್ನು ಕೈಬಿಡಿ ಎಂದು ಪುಟ್ಟರಾಜು ಅವರು ಫೋನ್ ಮೂಲಕ ಪ್ರತಿಭಟನಾಕಾರರಲ್ಲಿ ಮನವಿ ಮಾಡಿದ್ದಾರೆ.

    ನಡೆದಿದ್ದು ಏನು?
    ಜಿಲ್ಲೆಯಲ್ಲಿ ಪಕ್ಷಕ್ಕೆ ಏನು ಮಾಡದ ಡಿ.ಸಿ.ತಮ್ಮಣ್ಣಗೆ ಸಾರಿಗೆ ನೀಡಲಾಗಿದೆ. ಆದರೆ ಜಿಲ್ಲೆಯ ಜನತೆ ಹಾಗೂ ಪಕ್ಷಕ್ಕಾಗಿ ಶ್ರಮಿಸಿರುವ ಸಿ.ಎಸ್.ಪುಟ್ಟರಾಜು ಅವರಿಗೆ ಸಣ್ಣ ನೀರಾವರಿ ಖಾತೆ ನೀಡಿ ತಾರತಮ್ಯ ತೊರಿದ್ದಾರೆ ಅಂತಾ ಬೆಂಬಲಿಗರು ಪ್ರತಿಭಟನೆಗೆ ಮುಂದಾಗಿದ್ದರು. ಅಲ್ಲದೇ ಸಣ್ಣ ನೀರಾವರಿ ಖಾತೆ ಸಿಕ್ಕಿದ ಹಿನ್ನೆಲೆಯಲ್ಲಿ ಸಚಿವ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯ ನಿವೃತ್ತಿಯನ್ನು ಪಡೆಯಿರಿ ಎಂದು ಪುಟ್ಟರಾಜು ಅವರಿಗೆ ಬೆಂಬಲಿಗರು ಒತ್ತಾಯಿಸಿದ್ದರು.

    ಇತ್ತ ಸಿ.ಎಸ್.ಪುಟ್ಟರಾಜು ಅವರು ಪಕ್ಷದ ಮುಖಂಡರ ಜೊತೆಗೆ ಮಾತುಕತೆಗೆ ಮುಂದಾಗದೇ ಸರ್ಕಾರಿ ಕಾರನ್ನು ವಾಪಸ್ ನೀಡಿ ಖಾಸಗಿ ಕಾರಿನಲ್ಲಿ ಚಾಲಕ, ಪತ್ನಿಯ ಜೊತೆ ಸ್ವಕ್ಷೇತ್ರದಿಂದ ಬೇರೆ ಕಡೆಗೆ ಪ್ರಯಾಣ ಬೆಳೆಸಿದ್ದರು. ಅಷ್ಟೇ ಅಲ್ಲದೇ ತಮ್ಮ ಮೊಬೈಲ್ ಫೋನನ್ನು ಸ್ವಿಚ್ ಆಫ್ ಮಾಡಿದ್ದರು.