Tag: Dissolution of Ganesha

  • ದಾವಣಗೆರೆಯಲ್ಲಿ ಸದ್ಯಕ್ಕೆ ನಿಷೇಧಾಜ್ಞೆ ಅಗತ್ಯವಿಲ್ಲ – ಐಜಿಪಿ ರಮೇಶ್ ಬಾನೋತ್

    ದಾವಣಗೆರೆಯಲ್ಲಿ ಸದ್ಯಕ್ಕೆ ನಿಷೇಧಾಜ್ಞೆ ಅಗತ್ಯವಿಲ್ಲ – ಐಜಿಪಿ ರಮೇಶ್ ಬಾನೋತ್

    – ಪ್ರಚೋದನಾತ್ಮಕ ಆಡಿಯೋ ವೈರಲ್ ಮಾಡಿದವರ ವಿರುದ್ಧ ಕ್ರಮ

    ದಾವಣಗೆರೆ: ಜಿಲ್ಲೆಯಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಕಲ್ಲುತೂರಾಟದಿಂದಾಗಿ ನಗರದಲ್ಲಿ ಆತಂಕ ಮನೆಮಾಡಿದ್ದು, ಭಯದ ವಾತಾವರಣ ಸೃಷ್ಟಿಯಾಗಿದೆ. ಈಗಾಗಲೇ ಪೊಲೀಸರು ಕಿಡಿಗೇಡಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣ ಸಂಬಂಧ ಜಿಲ್ಲೆಯ ಪೂರ್ವವಲಯ ಐಜಿಪಿ ರಮೇಶ್ ಬಾನೋತ್ (IGP Ramesh Banoth) ಮಾತನಾಡಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿನ್ನೆ (ಸೆ.19)ರಂದು ಸಂಜೆ ಗಣೇಶ ಮೆರವಣಿಗೆ ವೇಳೆ ಕಿಡಿಗೇಡಿಗಳಿಂದ ಕಲ್ಲುತೂರಾಟ ನಡೆದಿದ್ದು, ದಾವಣಗೆರೆ ಎಸ್ಪಿ (Davanagere) ತಕ್ಷಣ ಸ್ಥಳಕ್ಕೆ ಧಾವಿಸಿ ಅಗತ್ಯ ಕ್ರಮ ಕೈಗೊಂಡಿದ್ದಾರೆ. ಶಾಂತಿ, ಸೌಹಾರ್ದತೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಪ್ರಕರಣ ಸಂಬಂಧ ಕಿಡಿಗೇಡಿಗಳನ್ನು ಪತ್ತೆಹಚ್ಚಿ 30 ಜನರ ವಶಕ್ಕೆ ಪಡೆಯಲಾಗಿದೆ. ಜೊತೆಗೆ ಮನೆಗಳ ಮೇಲೆ ಕಲ್ಲು ತೂರಾಟ, ಸಾರ್ವಜನಿಕರ ಮೇಲೆ ಕಲ್ಲೆಸೆತ ಸೇರಿ ಒಟ್ಟು ಐದು ಕೇಸನ್ನು ದಾಖಲಿಸಲಾಗಿದೆ ಎಂದರು.ಇದನ್ನೂ ಓದಿ: ಲಾರೆನ್ಸ್ ಬಿಷ್ಣೋಯ್ ಹೆಸರು ಹೇಳಿಕೊಂಡು ಸಲ್ಮಾನ್ ಖಾನ್ ತಂದೆಗೆ ಬೆದರಿಕೆ- ಇಬ್ಬರ ಬಂಧನ

    ನಗರದಲ್ಲಿ ಇದೀಗ ವಾತಾವರಣ ಸಾಮಾನ್ಯ ಸಹಜ ಸ್ಥಿತಿಗೆ ಮರಳಿದ್ದು, ಗಣೇಶ ವಿಸರ್ಜನೆ ಸಮಯದಲ್ಲಿ ಠಾಣೆಯ ನಾಲ್ಕು ಸಿಬ್ಬಂದಿ ಮಾತ್ರ ಕರ್ತವ್ಯ ನಿರ್ವಹಿಸುತ್ತಿದ್ದರು. ಆ ವೇಳೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಸ್ಥಳೀಯರಲ್ಲಿ ಒಬ್ಬರಿಗೆ ಗಾಯವಾಗಿರುವ ದೂರು ಬಂದಿದ್ದು, ಪ್ರಕರಣ ದಾಖಲಾಗಿದೆ. ಬೇರೆಕಡೆಗಳಲ್ಲಿ ಭದ್ರತಾ ದೃಷ್ಟಿಯಿಂದ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದ್ದು, ಕಲ್ಲು ತೂರಾಟ ಮಾಡಿದವರ ಪತ್ತೆಗೆ ಕಾರ್ಯಾಚರಣೆ ಚುರುಕು ಮಾಡಲಾಗಿದೆ ಎಂದು ತಿಳಿಸಿದರು.

    ನಗರದಲ್ಲಿ ಶಾಂತಿಸಭೆ ನಡೆಸಲು ಸಿದ್ಧತೆ ನಡೆದಿದ್ದು, ಸಾಮಾಜಿಕ ಜಾಲಾಣತಾಣಗಳಲ್ಲಿ ಪ್ರಚೋದನಾತ್ಮಕ ಆಡಿಯೋ ವೈರಲ್ ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಸದ್ಯಕ್ಕೆ 144 ನಿಷೇಧಾಜ್ಞೆ ಅಗತ್ಯವಿಲ್ಲ. ಈ ಘಟನೆ ಬಳಿಕ ಎಲ್ಲರೂ ಸಹಕರಿಸಿ ಶಾಂತವಾಗಿ ಗಣೇಶ ವಿಸರ್ಜನೆ ಆಗಿದೆ. ಕೆಲ ಕಿಡಿಗೇಡಿಗಳ ಅರೆಸ್ಟ್ ಬಳಿಕ ಅಮಾಯಕರೆಂಬ ಹೇಳಿಕೆ ನೀಡುತ್ತಿದ್ದಾರೆ. ಆದರೆ ಪಕ್ಕ ಮಾಹಿತಿ ಮೇರೆಗೆ ಕಿಡಿಗೇಡಿಗಳನ್ನು ಗುರುತಿಸಿ ವಶಕ್ಕೆ ಪಡೆದಿದ್ದೇವೆ ಎಂದು ಹೇಳಿದರು.ಇದನ್ನೂ ಓದಿ: Mysuru Dasara: ಸಾಹಿತಿ ಹಂ.ಪ.ನಾಗರಾಜಯ್ಯರಿಂದ ಈ ಬಾರಿ ದಸರಾ ಉದ್ಘಾಟನೆ

    ಬೀಯರ್ ಬಾಟಲಿ ಸಂಗ್ರಹ ವಿಚಾರ:
    ಖಾಲಿ ಬೀಯರ್ ಬಾಟಲಿ ಸಂಗ್ರಹಿಸಿದ್ದ ಹತ್ತು ಜನರನ್ನು ಬಂಧಿಸಲಾಗಿದೆ. ತಪ್ಪಿತಸ್ತರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳುಲಾಗುವುದು. ಶಾಂತಿ ಕದಡುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

  • ನಾಗಮಂಗಲ ಬಳಿಕ ದಾವಣಗೆರೆಯಲ್ಲೂ ಧಗಧಗ – ಪರಿಸ್ಥಿತಿ ಈಗಲೂ ಬೂದಿ ಮುಚ್ಚಿದ ಕೆಂಡ!

    ನಾಗಮಂಗಲ ಬಳಿಕ ದಾವಣಗೆರೆಯಲ್ಲೂ ಧಗಧಗ – ಪರಿಸ್ಥಿತಿ ಈಗಲೂ ಬೂದಿ ಮುಚ್ಚಿದ ಕೆಂಡ!

    ದಾವಣಗೆರೆ: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲುತೂರಾಟ ಪ್ರಕರಣದಿಂದಾಗಿ ದಾವಣಗೆರೆ ನಗರ ಬೂದಿ ಮುಚ್ಚಿದ ಕೆಂಡದಂತಾಗಿದೆ. ದಾವಣಗೆರೆ ನಗರಾದಾದ್ಯಂತ ಭಯದ ವಾತಾವರಣಮನೆ ಮಾಡಿದ್ದು,ಕಲ್ಲು ತೂರಾಟ ನಡೆದ ಇಮಾಂನಗರದಲ್ಲಿ ರಸ್ತೆಯುದ್ದಕ್ಕು ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಹಾವೇರಿ, ಶಿವಮೊಗ್ಗ ಜಿಲ್ಲೆಗಳ ರಿಸರ್ವ್ ಪೊಲೀಸ್ ತುಕಡಿಗಳು ಸ್ಥಳದಲ್ಲಿ ಬೀಡುಬಿಟ್ಟಿದ್ದು, ರಾತ್ರಿಯಿಡೀ ನಿದ್ರೆಗಟ್ಟು ಗಸ್ತು ನಡೆಸಿವೆ. ಮತ್ತೆ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ದಾವಣಗೆರೆ ಎಸ್ಪಿ ಉಮಾ ಅವರು, ಪರಿಸ್ಥಿತಿ ಹತೋಟಿಗೆ ತರಲು ಮುಂದಾಗಿದ್ದಾರೆ.

    ಈ ಘಟನೆಯಿಂದಾಗಿ ಬೆಳ್ಳಂಬೆಳಿಗ್ಗೆ ಜನಜಂಗುಲಿಯಿಂದ ತುಂಬಿರ್ತಿದ್ದ ಇಮಾಂ ನಗರದ ಜನನಿಬಿಡ ರಸ್ತೆಗಳು ಖಾಲಿಖಾಲಿಯಾಗಿದ್ದು ಬಿಕೊ ಎನ್ನುತ್ತಿವೆ. ಇಲ್ಲಿರುವ ಮಸೀದಿ ಬಳಿ 10ಕ್ಕೂ ಹೆಚ್ಚು ಪೊಲೀಸ್ ವಾಹನಗಳನ್ನು ನಿಲ್ಲಿಸಿ ಬಿಗಿ ಭದ್ರತೆ ಒದಗಿಸಲಾಗಿದೆ. ಹಾಗೆಯೇ ಬೆಳಗಿನ ಜಾವ 5 ಗಂಟೆಗೆ ವ್ಯಾಪಾರ ವಹಿವಾಟಿಗೆ ತೆರಳುತಿದ್ದ ಜನರು ತಡವಾಗಿ ಹೊರಬರ್ತಿದ್ದು, ನಾಗರೀಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಇದನ್ನೂ ಓದಿ: ಚಿಕಿತ್ಸೆ ಪಡೆಯುತ್ತಿದ್ದ 27ರ ಒಡಿಶಾ ಗಾಯಕಿ ರುಕ್ಸಾನಾ ಬಾನೊ ಆಸ್ಪತ್ರೆಯಲ್ಲೇ ಸಾವು!

    ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ನಡೆಸಿದ್ದು, ಏಕಾಏಕಿ ಮೆರವಣೆಗೆಯಲ್ಲಿ ಕಿಡಿಗೇಡಿಗಳು ಕಲ್ಲುತೂರಾಟ ಮಾಡಿದ್ದಾರೆ. ನಗರದ ಅರಳಿಮರ ಸರ್ಕಲ್ ಬಳಿ ಮೊದಲು ಕಲ್ಲು ತೂರಾಟ ಶುರುವಾಗಿದ್ದು, ಬಳಿಕ ಕೆ.ಆರ್ ರಸ್ತೆ, ಹಂಸಬಾವಿ ಸರ್ಕಲ್, ಕೆಆರ್ ಮಾರ್ಕೇಟ್ ಸೇರಿದಂತೆ ಬಂಬೂ ಬಜಾರ್ ರಸ್ತೆ, ಮಟ್ಟಿಕಲ್ಲು ಏರಿಯಾದಲ್ಲಿಯೂ ಕಲ್ಲುತೂರಾಟ ನಡೆದಿದೆ. ತಕ್ಷಣವೇ ಘಟನಾಸ್ಥಳಕ್ಕೆ ಆಗಮಿಸಿದ ಪೊಲೀಸರು ಎಷ್ಟೇ ನಿಯಂತ್ರಿಸಿದರೂ ಕಿಡಿಗೇಡಿಗಳು ಕಲ್ಲು ತೂರಾಟ ಮುಂದುವರಿಸಿದ್ದು, ಪೊಲೀಸರ ಎದುರೇ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರು ಕೂಡ ಕಲ್ಲಿನಿಂದ ರಕ್ಷಿಸಿಕೊಳ್ಳಲು ಬೋರ್ಡ್ ಹಿಡಿದುಕೊಂಡು ತಿರುಗಾಡುವಂತಾಗಿದೆ.

    ಸ್ಥಳಕ್ಕೆ ಪೊಲೀಸರು ಆಗಮಿಸುತ್ತಲೇ ಕಿಡಿಗೇಡಿಗಳು ಅಲ್ಲಿಂದ ಪಾರಾಗಿ, ಏರಿಯಾಗಳಿಗೆ ನುಗ್ಗಿ, ಮಟ್ಟಿಕಲ್ಲು, ಅನೆಕೊಂಡಗಳಲ್ಲಿ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪುಂಡರ ಕಲ್ಲು ತೂರಾಟಕ್ಕೆ ಮಟ್ಟಿಕಲ್ಲು ನಿವಾಸಿಗಳು ದೊಣ್ಣೆ ಹಿಡಿದು ಓಡಿಸಿಕೊಂಡು ಹೋಗಿದ್ದಾರೆ.

    60 ರಿಂದ 70 ಯುವಕರ ಗುಂಪು ಮಟ್ಟಿಕಲ್ಲು, ಅನೆಕೊಂಡದ ಹಲವು ಕಡೆಗಳಲ್ಲಿ ಕಲ್ಲು ತೂರಾಟ ನಡೆಸಿದ್ದು, ಜೊತೆಗೆ ಮನೆ ಮುಂಭಾಗದಲ್ಲಿ ಇರುವ ವಾಹನಗಳಿಗೆ ಹಾನಿ ಮಾಡಿದ್ದಾರೆ. ಅಲ್ಲದೆ ಏಕಾಎಕಿ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ ಹಿನ್ನಲೆ ಭಯದ ವಾತಾವರಣ ಸೃಷ್ಟಿಯಾಗಿದೆ. ಮನೆಗಳಿಗೂ ಕೂಡ ಬೀಗ ಹಾಕಿಕೊಂಡು ಹೋಗಿದ್ದಾರೆ. ಇದರಿಂದಾಗಿ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಚಿತ್ರಮಂದಿರದಲ್ಲಿ ಅಭಿಮಾನಿಗಳೊಂದಿಗೆ ʻಉಪೇಂದ್ರʼ ಸಿನಿಮಾ ವೀಕ್ಷಿಸಿದ ಉಪೇಂದ್ರ!

    ಸದ್ಯ ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದು, ಇದುವರೆಗೂ ಎರಡು ಕಡೆಯಿಂದ 20ಕ್ಕೂ ಹೆಚ್ಚು ಜನರನ್ನು ಸೆರೆಹಿಡಿದಿದ್ದಾರೆ. ಇಡೀ ರಾತ್ರಿ ಹಳೇ ದಾವಣಗೆರೆಯನ್ನು ಪೊಲೀಸರು ಗಸ್ತು ಹೊಡೆದಿದ್ದಾರೆ. ಬೆಳ್ಳಂಬೆಳಿಗ್ಗೆ ಜನಜಂಗುಳಿಯಿಂದ ತುಂಬಿರುತ್ತಿದ್ದ ರಸ್ತೆಗಳು ಖಾಲಿಯಾಗಿದ್ದು, ಬಿಕೊ ಎನ್ನುತ್ತಿವೆ. ಹಾಲು ಖರೀದಿಸಲು ಕೂಡ ಅರಳಿಮರ ಸರ್ಕಲ್ ಜನ ಮನೆಯಿಂದ ಹೊರಬರುತ್ತಿಲ್ಲ. ಒಟ್ಟಿನಲ್ಲಿ ದಾವಣಗೆರೆಯ ಇಮಾಂನಗರ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ಭಯದ ವಾತಾವರಣ ಸೃಷ್ಟಿಯಾಗಿದೆ.

  • ಬೆಳಗಾವಿ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ – ಪರಿಸ್ಥಿತಿ ಉದ್ವಿಗ್ನ

    ಬೆಳಗಾವಿ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ – ಪರಿಸ್ಥಿತಿ ಉದ್ವಿಗ್ನ

    -ಡ್ಯಾನ್ಸ್ ಮಾಡುವಾಗ ಕಾಲು ತಾಕಿದ್ದಕ್ಕೆ ಕಿರಿಕ್

    ಬೆಳಗಾವಿ: ಗಣೇಶ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿದಿರುವ ಘಟನೆ ನಗರದ ಚೆನ್ನಮ್ಮ ವೃತ್ತದ (Chennamma Circle) ಬಳಿ ನಡೆದಿದೆ.

    ಗಾಯಾಳುಗಳನ್ನು ಸಮಾಜ ಕಲ್ಯಾಣ ವಸತಿ ನಿಲಯದ ವಿದ್ಯಾರ್ಥಿಗಳಾದ ಪ್ರವೀಣ್ ಗುಂಡ್ಯಾಗೋಳ್, ದರ್ಶನ್ ಪಾಟೀಲ್ ಮತ್ತು ಸತೀಶ್ ಪೂಜಾರಿ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಕಿಡಿಗೇಡಿಗಳ ಅಟ್ಟಹಾಸಕ್ಕೆ ನಲುಗಿದ ನಾಗಮಂಗಲ – ಬೀದಿ ಪಾಲಾದ ಬದುಕು.. ಒಟ್ಟು 2.66 ಕೋಟಿ ನಷ್ಟ!

    ಘಟನೆ ಸಂಬಂಧ ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ (Iada Martin) ಮಾಹಿತಿ ನೀಡಿದ್ದಾರೆ. ಪ್ರವೀಣ್ ಗುಂಡ್ಯಾಗೋಳ್ ಎಂಬವರ ಸ್ಥಿತಿ ಗಂಭೀರವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ ಇಬ್ಬರಿಗೆ ಬಿಮ್ಸ್ ಆಸ್ಪತ್ರೆಯಲ್ಲಿ (BIMS) ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

    ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಈ ಘಟನೆ ನಡೆದಿದ್ದು, ಡ್ಯಾನ್ಸ್ ಮಾಡುವಾಗ ಕಾಲು ತಾಕಿದ್ದಕ್ಕೆ ಹುಡುಗರು ಕಿರಿಕ್ ಮಾಡಿಕೊಂಡಿದ್ದರು. ಬಳಿಕ ಮೆರವಣಿಗೆಯಿಂದ ಹೊರಬಂದು ಗಲಾಟೆ ಮಾಡಿದ್ದಾರೆ. ಈ ವೇಳೆ ಯುವಕರ ಗ್ಯಾಂಗ್‌ವೊಂದು ಮೂವರು ಹಾಸ್ಟೆಲ್ ವಿದ್ಯಾರ್ಥಿಗಳ ಹೊಟ್ಟೆ, ಬೆನ್ನು, ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದು, ಸ್ಥಳದಿಂದ ಪಾರಾಗಿದ್ದಾರೆ.ಇದನ್ನೂ ಓದಿ: ಜಮ್ಮು-ಕಾಶ್ಮೀರ: ದಶಕದ ಮೊದಲ ವಿಧಾನಸಭಾ ಚುನಾವಣೆಗೆ ಇಂದು ಮತದಾನ

    ಬೈಕ್‌ನಲ್ಲಿ ಪಾರಾಗುತ್ತಿದ್ದ ಯುವಕರನ್ನು ಸಿಪಿಐ ವಿಶ್ವನಾಥ್ ಕಬ್ಬೂರ ಮತ್ತು ಇತರ ಸಿಬ್ಬಂದಿ ಸೆರೆಹಿಡಿದಿದ್ದಾರೆ. ಪೊಲೀಸರ ತನಿಖೆಯ ಬಳಿಕ ಚರ್ಚ್ ಗಲ್ಲಿಯ ಯುವಕರ ಗ್ಯಾಂಗ್ ಈ ಕೃತ್ಯ ಎಸಗಿದ್ದು, ವೈಯಕ್ತಿಕ ಕಾರಣದಿಂದ ಚಾಕು ಇರಿದಿದ್ದಾರೆ. ಗಾಂಜಾ ಮತ್ತಿನಲ್ಲಿ ಚಾಕು ಇರಿದಿದ್ದಾರೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಉಳಿದವರ ಬಗ್ಗೆಯೂ ಮಾಹಿತಿ ಸಿಕ್ಕಿದೆ. ಶೀಘ್ರ ಬಂಧಿಸುತ್ತೇವೆ ಎಂದು ತಿಳಿಸಿದ್ದಾರೆ.