Tag: District Administration

  • ಕೊಳವೆ ಬಾವಿಗೆ ಬಾಲಕ ಬಿದ್ದಿದ್ದ ಪ್ರಕರಣ – ಕಾರ್ಯಾಚರಣೆಗೆ ಬಳಸಿದ್ದ ಯಂತ್ರಗಳ 3.70 ಲಕ್ಷ ಬಿಲ್ ಬಾಕಿ

    ಕೊಳವೆ ಬಾವಿಗೆ ಬಾಲಕ ಬಿದ್ದಿದ್ದ ಪ್ರಕರಣ – ಕಾರ್ಯಾಚರಣೆಗೆ ಬಳಸಿದ್ದ ಯಂತ್ರಗಳ 3.70 ಲಕ್ಷ ಬಿಲ್ ಬಾಕಿ

    ವಿಜಯಪುರ: ಸಾತ್ವಿಕ್ ಎಂಬ ಬಾಲಕ ಕೊಳವೆ ಬಾವಿಗೆ ಬಿದ್ದಿದ್ದ ಪ್ರಕರಣ ಸಂಬಂಧ ರಕ್ಷಣಾ ಕಾರ್ಯಾಚರಣೆಗೆ ಬಳಸಲಾಗಿದ್ದ ಯಂತ್ರೋಪಕರಣಗಳ 3.70 ಲಕ್ಷ ರೂ ಬಿಲ್ ಬಾಕಿ ಉಳಿದಿದೆ.

    ಹೌದು, ಕಳೆದ ವರ್ಷ ಏಪ್ರಿಲ್ 03 ರಂದು ಜಮೀನಿನಲ್ಲಿ ಆಟವಾಡುತ್ತಿದ್ದ ಬಾಲಕ ಸಾತ್ವಿಕ್ ತೆರೆದ ಕೊಳವೆ ಬಾವಿಗೆ ಬಿದ್ದಿದ್ದ ಘಟನೆ ವಿಜಯಪುರ (Vijayapura) ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ನಡೆದಿತ್ತು. ಬಾಲಕ ಕೊಳವೆ ಬಾವಿಗೆ ಬಿದ್ದ 4 ಗಂಟೆಯಲ್ಲಿ ತಾಲೂಕು ಆಡಳಿತ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು.ಇದನ್ನೂ ಓದಿ: ಚಿಕ್ಕಮಗಳೂರು| ತಹಶೀಲ್ದಾರ್ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ!

    ಕಾರ್ಯಾಚರಣೆಯಲ್ಲಿ 2 ಹಿಟಾಚಿ, 3 ಜೆಸಿಬಿ, 4 ಟ್ರಾಕ್ಟರ್ ಬ್ರೇಕರ್ಸ್, 1 ಹ್ಯಾಂಡ್ ಡ್ರಿಲ್ಲಿಂಗ್, 1 ಸ್ಟೋನ್ ಕಟ್ಟಿಂಗ್ ಮಷಿನ್, 1 ವಾಟರ್ ಟ್ಯಾಂಕರ್ ಬಳಕೆ ಮಾಡಲಾಗಿತ್ತು. ಪರಿಸ್ಥಿತಿಯನ್ನು ಅರಿತ ಮಾಲೀಕರು ಈ ಎಲ್ಲ ಯಂತ್ರೋಪಕರಣಗಳನ್ನು ಯಾವುದೇ ಕಂಡಿಷನ್ ಇಲ್ಲದೆ ತಂದು ಕಾರ್ಯಾಚರಣೆ ಪ್ರಾರಂಭಿಸಿದ್ದರು. ಅಲ್ಲದೆ ಸಾತ್ವಿಕ್ ರಕ್ಷಣೆಗೆ ಹಗಲು ರಾತ್ರಿಯೆನ್ನದೇ ಯಂತ್ರೋಪಕರಣಗಳ ಚಾಲಕರು, ಮಾಲೀಕರು ಕಾರ್ಯಾಚರಣೆ ನಡೆಸಿದ್ದರು. ಇದರ ಫಲವಾಗಿಯೇ ಯಶಸ್ವಿಯಾಗಿ ಬಾಲಕನನ್ನು ಕೊಳವೆ ಬಾವಿಯಿಂದ ಹೊರತರಲಾಯಿತು.

    ಆದರೆ ಕಾರ್ಯಾಚರಣೆ ವೇಳೆ ಹರಸಾಹಸಪಟ್ಟು ಮಗುವನ್ನು ಬದುಕುಳಿಸಿದ್ದ ಯಂತ್ರೋಪಕರಣಗಳ ಮಾಲೀಕರು ಈಗ ಅಲೆಡಾಡುವಂತಾಗಿದೆ. ಕಾರ್ಯಾಚರಣೆಗೆ ಬಳಸಲಾಗಿದ್ದ ಯಂತ್ರಗಳ 3.70 ಲಕ್ಷ ರೂ. ಬಿಲ್‌ನ್ನು ಜಿಲ್ಲಾಡಳಿತ ಬಾಕಿ ಉಳಿಸಿಕೊಂಡಿದೆ. ಕಳೆದ 11 ತಿಂಗಳಿಂದ ಬಿಲ್ ಬಾಕಿಯಿಟ್ಟುಕೊಂಡಿದ್ದು, ಪ್ರತಿನಿತ್ಯ ಬಿಲ್ ಕೊಡಿ ಎಂದು ಯಂತ್ರೋಪಕರಣಗಳ ಮಾಲೀಕರು ಅಲೆದಾಡುವಂತಾಗಿದೆ.

    ಇದು ಕೇವಲ ಯಂತ್ರೋಪಕರಣಗಳಿಗೆ ಹಾಕಿದ ಡೀಸೆಲ್ ಬಿಲ್ ಆಗಿದ್ದು, ಅಸಲಿಗೆ 10 ಲಕ್ಷ ರೂ.ಗೂ ಅಧಿಕ ಬಿಲ್ ಬರಬೇಕು. ಕೊಳವೆ ಬಾವಿ ಕಾರ್ಯಾಚರಣೆ ವೇಳೆ ಹಿಂದೆ ಮುಂದೆ ಯೋಚಿಸದೆ ಯಂತ್ರೋಪಕರಣಗಳನ್ನ ಒದಗಿಸಿದ್ದು, ಜಿಲ್ಲಾಡಳಿತ ಕೇವಲ ಡೀಸೆಲ್ ಬಿಲ್ ಕೊಡುವುದಕ್ಕೆ ಈ ರೀತಿ ಸತಾಯಿಸುತ್ತಿದ್ದಾರೆ ಎಂದು ಮಾಲೀಕರು ಆಕ್ರೋಶ ಹೊರಹಾಕಿದ್ದಾರೆ.ಇದನ್ನೂ ಓದಿ: ಹಿಂದಿ ಬೇಡ ಅನ್ನೋರು ತಮಿಳು ಸಿನಿಮಾವನ್ನು ಯಾಕೆ ಹಿಂದಿಗೆ ಡಬ್ಬಿಂಗ್‌ ಮಾಡ್ತೀರಿ: ಪವನ್‌ ಕಲ್ಯಾಣ್‌ ಪ್ರಶ್ನೆ

     

  • ರಾಯಚೂರಿನಲ್ಲಿ ಹೆಚ್ಚಾದ ಹಕ್ಕಿ ಜ್ವರದ ಭೀತಿ – ಜಿಲ್ಲಾಡಳಿತ ಹೈ ಅಲರ್ಟ್

    ರಾಯಚೂರಿನಲ್ಲಿ ಹೆಚ್ಚಾದ ಹಕ್ಕಿ ಜ್ವರದ ಭೀತಿ – ಜಿಲ್ಲಾಡಳಿತ ಹೈ ಅಲರ್ಟ್

    ರಾಯಚೂರು: ರಾಜ್ಯದಲ್ಲಿ ಈಗ ಹಕ್ಕಿ ಜ್ವರದ ಭೀತಿ ಹೆಚ್ಚಾಗುತ್ತಿದೆ. ಆಂಧ್ರಪ್ರದೇಶ ಹಾಗೂ ತೆಲಂಗಾಣದ ಗಡಿಯಲ್ಲಿರುವ ರಾಯಚೂರು (Raichuru) ಜಿಲ್ಲೆಯಲ್ಲೂ ಆತಂಕ ಹೆಚ್ಚಾಗಿದೆ. ಜಿಲ್ಲೆಯಲ್ಲಿ ಹಕ್ಕಿಗಳು ನಿಗೂಢವಾಗಿ ಸಾವನ್ನಪ್ಪುತ್ತಿದ್ದು, ಹಕ್ಕಿ ಜ್ವರ ಶಂಕೆ ಭಯ ಹುಟ್ಟಿಸಿದೆ. ಹಕ್ಕಿಗಳ ನಿಗೂಢ ಸಾವಿನ ಬೆನ್ನಲ್ಲೇ ಇದೀಗ ಜಿಲ್ಲಾಡಳಿತ ಅಲರ್ಟ್ ಆಗಿದೆ.

    ಇದುವರೆಗೂ ಜಿಲ್ಲೆಯಲ್ಲಿ 30ಕ್ಕೂ ಹೆಚ್ಚು ವಿವಿಧ ಪಕ್ಷಿಗಳು ಸಾವನ್ನಪ್ಪಿವೆ. ಮಾನ್ವಿ ಪಟ್ಟಣ, ರಬಣಕಲ್ ಸೇರಿ ಹಲವೆಡೆ ಪ್ರತಿದಿನ ಪಕ್ಷಿಗಳು ಸಾವನ್ನಪ್ಪುತ್ತಿವೆ. ಪಾರಿವಾಳ, ಕೊಕ್ಕರೆ, ಕಾಗೆ, ಕಿಂಗ್ ಫಿಶರ್, ಸುವರ್ಣಪಕ್ಷಿ ಸೇರಿ ವಿವಿಧ ಪ್ರಭೇದದ ಪಕ್ಷಿಗಳು ನಿಗೂಢವಾಗಿ ಪ್ರಾಣ ಬಿಡುತ್ತಿವೆ. ಪಕ್ಕದ ಆಂಧ್ರಪ್ರದೇಶ ತೆಲಂಗಾಣದಲ್ಲಿ ಕಾಣಿಸಿಕೊಂಡ ಹಕ್ಕಿ ಜ್ವರ ಜಿಲ್ಲೆಗೂ ಹರಡಿರುವ ಶಂಕೆ ವ್ಯಕ್ತವಾಗಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ.ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ತಮ್ಮ ತಪ್ಪು ಮುಚ್ಚಿಕೊಳ್ಳಲು ಕ್ಷೇತ್ರ ಮರುವಿಂಗಡಣೆಗೆ ಅಪಸ್ವರ: ಬೊಮ್ಮಾಯಿ

    ಮಾನ್ವಿ ತಾಲೂಕಿನಲ್ಲಿ ಪಕ್ಷಿಗಳು ನಿಗೂಢವಾಗಿ ಸಾವನ್ನಪ್ಪುತ್ತಿರುವ ಕುರಿತ `ಪಬ್ಲಿಕ್ ಟಿವಿ’ ವರದಿ ಬಳಿಕ ಜಿಲ್ಲಾಡಳಿತ, ಪಶುಸಂಗೋಪನೆ ಇಲಾಖೆ ಎಚ್ಚೆತ್ತುಕೊಂಡಿವೆ. ತೆಲಂಗಾಣ, ಆಂಧ್ರಪ್ರದೇಶ ಗಡಿಭಾಗದಲ್ಲಿ ಹೈಅಲರ್ಟ್ ಆಗಿದೆ. ರ‍್ಯಾಪಿಡ್ ರೆಸ್ಪಾನ್ಸ್ ಟೀಂ ರಚನೆ ಮಾಡಲಾಗಿದೆ. ತೆಲಂಗಾಣ ಹಾಗೂ ಆಂಧ್ರಪ್ರದೇಶ ಗಡಿಯಿಂದ ಕೋಳಿ, ಕೋಳಿ ಉತ್ಪನ್ನ ಬರದಂತೆ ತಡೆಯಲು ಚೆಕ್ ಪೋಸ್ಟ್ನಲ್ಲಿ ಪರಿಶೀಲನೆ ಮಾಡಲಾಗುತ್ತಿದೆ.

    ಹಕ್ಕಿಗಳು ಮರದ ಮೇಲಿನಿಂದ ಏಕಾಏಕಿ ಕೆಳಗೆ ಬಿದ್ದು ಕೆಲಹೊತ್ತಿನಲ್ಲಿ ಸಾವನ್ನಪ್ಪುತ್ತಿವೆ. ಕೆಳಗೆ ಬಿದ್ದ ಬಳಿಕ ಕುಡಿಯಲು ನೀರನ್ನ ಇಟ್ಟರೂ ಕುಡಿಯದೆ ಪಕ್ಷಿಗಳು ಸಾವನ್ನಪ್ಪುತ್ತಿವೆ. ಪಕ್ಷಿಗಳ ಸಾವಿಗೆ ಕಾರಣ ತಿಳಿಯದೇ ಸ್ಥಳೀಯರಿಗೆ ಹಕ್ಕಿ ಜ್ವರದ ಆತಂಕ ಹೆಚ್ಚಾಗಿದೆ. ಈಗಾಗಲೇ ಸಾವನ್ನಪ್ಪಿದ ಪಕ್ಷಿಯ ಕಳೆಬರವನ್ನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿ ಬರುವುದು ಇನ್ನೂ ಬಾಕಿಯಿದೆ. ಆದ್ರೆ ಜನರಲ್ಲಿ ಆತಂಕ ಎಂದು ಒತ್ತಾಯಿಸಿದ್ದಾರೆ.

    ಒಟ್ಟಿನಲ್ಲಿ, ಜಿಲ್ಲೆಯಲ್ಲಿ ಪಕ್ಷಿಗಳು ಏಕಾಏಕಿ ಸಾವನ್ನಪ್ಪುತ್ತಿರುವುದು ಅಚ್ಚರಿ, ಆತಂಕವನ್ನ ಒಟ್ಟೋಟ್ಟಿಗೆ ಮೂಡಿಸಿದೆ. ಹೆಚ್ಚುತ್ತಿರುವ ತಾಪಮಾನವು ಪರಿಣಾಮ ಬೀರಿರುವ ಶಂಕೆಯಿದ್ದು, ಹಕ್ಕಿ ಜ್ವರದ ಅನುಮಾನವೂ ಇದೆ. ಗಡಿರಾಜ್ಯಗಳಿಂದ ಕೋಳಿ ಹಾಗೂ ಕೋಳಿ ಉತ್ಪನ್ನಗಳು ಬರದಂತೆ ತಡೆದು ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುತ್ತಿರುವುದು ಜನರಲ್ಲಿ ಕೊಂಚ ನಿರಾಳತೆ ಮೂಡಿಸಿದೆ.ಇದನ್ನೂ ಓದಿ: ಆತ್ಮಹತ್ಯೆಗೆ ಯತ್ನಿಸಿದ್ನಾ ಪುಣೆ ಅತ್ಯಾಚಾರ ಆರೋಪಿ? – ಬಂಧನದ ವೇಳೆ ಕುತ್ತಿಗೆಯಲ್ಲಿ ಗಾಯದ ಗುರುತು ಪತ್ತೆ

     

  • PUBLiC TV Impact | ಬಾಣಂತಿಯರ ಸಾವಿನ ವರದಿ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ – ಆಸ್ಪತ್ರೆಗೆ ಅಧಿಕಾರಿಗಳು ಭೇಟಿ

    PUBLiC TV Impact | ಬಾಣಂತಿಯರ ಸಾವಿನ ವರದಿ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ – ಆಸ್ಪತ್ರೆಗೆ ಅಧಿಕಾರಿಗಳು ಭೇಟಿ

    ರಾಯಚೂರು: ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವು ಮುಂದುವರೆದಿದ್ದು, ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಈ ಕುರಿತು `ಪಬ್ಲಿಕ್ ಟಿವಿ’ (PUBLIC TV) ವರದಿ ಬಿತ್ತರಿಸಿದ ಬೆನ್ನಲ್ಲೇ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಕಳೆದ ವಾರ ಜಿಲ್ಲೆಯ ರಿಮ್ಸ್ (RIMS) ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬರು ಸಾವನ್ನಪ್ಪಿದ್ದರು. ಈ ಮೂಲಕ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿತ್ತು. ಈ ಕುರಿತು `ಪಬ್ಲಿಕ್ ಟಿವಿ’ ಸುದ್ದಿಯೊಂದನ್ನು ಬಿತ್ತರಿಸಿತ್ತು. ವರದಿ ಬೆನ್ನಲ್ಲೇ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ.ಇದನ್ನೂ ಓದಿ: ತವರಿಗೆ ಮರಳಿದ ವಿಶ್ವ ಚೆಸ್ ಚಾಂಪಿಯನ್ – ಗುಕೇಶ್‌ಗೆ ಚೆನ್ನೈನಲ್ಲಿ ಭರ್ಜರಿ ಸ್ವಾಗತ

    ರಾಯಚೂರು (Raichuru) ತಾಲೂಕಿನ ಮಾಟಮಾರಿ (Matamari) ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾಧಿಕಾರಿ ಕೆ.ನಿತೀಶ್ ತಂಡ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದೆ. ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯದಿಂದ ಬಾಣಂತಿ ಮೃತಪಟ್ಟ ಆರೋಪದ ಹಿನ್ನೆಲೆ ದಿಢೀರ್ ಭೇಟಿ ನೀಡಲಾಗಿದೆ. ಮೃತ ಬಾಣಂತಿ 32 ವರ್ಷದ ಈಶ್ವರಿ ಮಾಟಮಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೆರಿಗೆ ಮಾಡಿಸಿಕೊಂಡಿಸಿದ್ದರು. ಬಳಿಕ ಮನೆಗೆ ತೆರಳಿದ್ದ ಅವರು, ಆರೋಗ್ಯ ಸಮಸ್ಯೆಯಿಂದಾಗಿ ಮತ್ತೆ ಆರೋಗ್ಯ ಕೇಂದ್ರಕ್ಕೆ ಬಂದಿದ್ದರು. ಆದರೆ ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ ರಿಮ್ಸ್ ಆಸ್ಪತ್ರೆಗೆ ತೆರಳಿದ್ದು, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಈ ಹಿನ್ನೆಲೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆಸ್ಪತ್ರೆಯ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿದರು.

    ರಾಯಚೂರು ಜಿಲ್ಲಾಧಿಕಾರಿ ಕೆ.ನಿತೀಶ್, ಜಿಲ್ಲಾ ಪಂಚಾಯತ್ ಸಿಇಓ ರಾಹುಲ್ ತುಕಾರಾಂ ಪಾಂಡ್ವೆ ಹಾಗೂ ಡಿಎಚ್‌ಓ ಡಾ. ಸುರೇಂದ್ರಬಾಬು ಭೇಟಿ ವೇಳೆ ಆರೋಗ್ಯ ಸಿಬ್ಬಂದಿ ತರಾಟೆಗೆ ತೆಗೆದುಕೊಂಡರು. ಆರೋಗ್ಯ ಕೇಂದ್ರದ ಸೇವೆಗಳ ಬಗ್ಗೆ ರೋಗಿಗಳಿಂದಲೂ ಮಾಹಿತಿ ಪಡೆದರು.ಇದನ್ನೂ ಓದಿ: ಶಿವಣ್ಣ ನಟನೆಯ ಮತ್ತೊಂದು ಹೊಸ ಸಿನಿಮಾ ಘೋಷಣೆ- ಮಾಸ್‌ ಲೀಡರ್‌ಗೆ ಕೈ ಜೋಡಿಸಿದ ‌’ಗೂಗ್ಲಿ’ ಡೈರೆಕ್ಟರ್

  • ವಿಜಯಪುರ ವಕ್ಫ್ ವಿವಾದ – ರೈತರ ಹೋರಾಟಕ್ಕೆ ಜಯ, ನೋಟಿಸ್ ಹಿಂಪಡೆದ ಜಿಲ್ಲಾಡಳಿತ

    ವಿಜಯಪುರ ವಕ್ಫ್ ವಿವಾದ – ರೈತರ ಹೋರಾಟಕ್ಕೆ ಜಯ, ನೋಟಿಸ್ ಹಿಂಪಡೆದ ಜಿಲ್ಲಾಡಳಿತ

    – 44 ರೈತರ ಇಂದೀಕರಣ ರದ್ದು

    ವಿಜಯಪುರ: ವಕ್ಫ್ ವಿವಾದದ (Waqf Board) ವಿಚಾರವಾಗಿ ಕರಾಳ ದೀಪಾವಳಿ ಆಚರಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ (Farmers) ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ರೈತರಿಗೆ ನೀಡಿದ್ದ ನೋಟಿಸ್ (Notice) ಅನ್ನು ಜಿಲ್ಲಾಡಳಿತ (District Administration) ಹಿಂಪಡೆದಿದೆ.

    ವಕ್ಫ್ ದಂಗಲ್ ವಿಚಾರವಾಗಿ ವಿಜಯಪುರ ರೈತರು ನೋಟಿಸ್ ಹಿಂಪಡೆಯುವಂತೆ ಕರಾಳ ದೀಪಾವಳಿ ಆಚರಿಸುತ್ತಿದ್ದರು. ರೈತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಡಿಸಿ ಭೂಬಾಲನ್ ರೈತರ ಸಮಸ್ಯೆ ಆಲಿಸಿ ಪಹಣಿಯಲ್ಲಿನ ವಕ್ಫ್ ಹೆಸರು ತೆಗೆಯೋದಾಗಿ ಭರವಸೆ ನೀಡಿದ್ದು, ಈಗಾಗಲೇ ಇಂಡಿ ತಾಲೂಕಿನ 41 ರೈತರ ಜಮೀನು ಇಂದೀಕರಣ ರದ್ದು ಮಾಡಿದ್ದೇವೆ ಎಂದರು. ಇದನ್ನೂ ಓದಿ: ಭಾರತ-ಚೀನಾ ಸೇನಾ ವಾಪಸಾತಿ ಪ್ರಕ್ರಿಯೆ ಪೂರ್ಣ – ದೀಪಾವಳಿಯಂದು ಉಭಯ ದೇಶಗಳ ಸೈನಿಕರಿಂದ ಸಿಹಿ ವಿನಿಮಯ

    ನೋಟಿಸ್ ಹಿಂಪಡೆದ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿ, ರೈತರಿಗೆ ನೀಡಿದ ನೋಟಿಸ್ ವಾಪಸ್ ಪಡೆದಿದ್ದು, 44 ರೈತರ ಇಂದೀಕರಣ ರದ್ದು ಮಾಡಿದ್ದೇವೆ. ಇನ್ನು ಮುಂದೆ ನೋಟಿಸ್ ನೀಡಲ್ಲ. ರೈತರಿಗೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ. ರೈತರ ದಾಖಲಾತಿ ಸರಿ ಪಡೆಸಲು ಟಾಸ್ಕ್‌ಫೋರ್ಸ್ ಇದೆ. ಈಗಾಗಲೇ ಟಾಸ್ಕ್‌ಫೋರ್ಸ್ ಕೆಲಸ ಶುರು ಮಾಡಿದೆ. ಉಳುಮೆ ಮಾಡುವ ರೈತರ ಫೈಲ್‌ಗಳನ್ನು ನಾವೇ ರೆಡಿ ಮಾಡಿ, ವಕ್ಫ್ ಬೋರ್ಡ್‌ನಿಂದ ಕೈ ಬಿಡಲು ನಾವೇ ಅಹವಾಲು ಇಡುತ್ತೇವೆ. ರೈತರು ಗಾಭರಿಯಾಗಬೇಡಿ. ಆತಂಕ ಪಡದೆ ದೀಪಾವಳಿ ಆಚರಿಸಿ ಎಂದು ತಿಳಿಸಿದ್ದಾರೆ. ನೋಟಿಸ್ ವಾಪಸ್ ಪಡೆಯುತ್ತಲೇ ರೈತರು ಹೋರಾಟ ಹಿಂಪಡೆದಿದ್ದಾರೆ. ಇದನ್ನೂ ಓದಿ: ಬ್ರಿಟನ್‌ ಕಿಂಗ್ ಚಾರ್ಲ್ಸ್ ದಂಪತಿಯಿಂದ ಬೆಂಗಳೂರಿಗೆ 4 ದಿನದ ರಹಸ್ಯ ಭೇಟಿ – ಇಂದು ವಾಪಸ್

  • ‘ಪಬ್ಲಿಕ್’ ಇಂಪ್ಯಾಕ್ಟ್ – ಯಾದಗಿರಿಯಲ್ಲಿ ಅನಿಷ್ಟ ಪದ್ಧತಿಗೆ ತಿಲಾಂಜಲಿ ಇಟ್ಟ ಜಿಲ್ಲಾಡಳಿತ

    ‘ಪಬ್ಲಿಕ್’ ಇಂಪ್ಯಾಕ್ಟ್ – ಯಾದಗಿರಿಯಲ್ಲಿ ಅನಿಷ್ಟ ಪದ್ಧತಿಗೆ ತಿಲಾಂಜಲಿ ಇಟ್ಟ ಜಿಲ್ಲಾಡಳಿತ

    ಯಾದಗಿರಿ: ಜಿಲ್ಲೆಯ ಸುರಪುರ (Surapura) ತಾಲೂಕಿನಲ್ಲಿ ಅನಿಷ್ಟ ಪದ್ಧತಿಯೊಂದು ಜೀವಂತವಾಗಿದ್ದು, ದೇವರಿಗೆ ಬಲಿ ಕೊಟ್ಟ ಕೋಣದ ಮಾಂಸ ತಿನ್ನದಿದ್ರೆ ದಲಿತರಿಗೆ (Dalits) ಬಹಿಷ್ಕಾರ ಹಾಕಲಾಗುತ್ತದೆ ಎಂಬ ವಿಚಾರ ಕಳೆದ ಎರಡು ದಿನದಿಂದ ಮುನ್ನೆಲೆಗೆ ಬಂದಿತ್ತು. ಈ ಕುರಿತು ನಿಮ್ಮ ಪಬ್ಲಿಕ್ ಟಿವಿ (Public Tv) ವರದಿಯನ್ನು ಪ್ರಸಾರ ಮಾಡಿದ ಹಿನ್ನೆಲೆ ಎಚ್ಚೆತ್ತ ಜಿಲ್ಲಾಡಳಿತ ಕೊನೆಗೂ ಈ ಅನಿಷ್ಟ ಪದ್ಧತಿಗೆ ತಿಲಾಂಜಲಿ ಬಿಟ್ಟಿದೆ.

    ಅನಿಷ್ಟ ಪದ್ಧತಿಯ ಕುರಿತು ಪಬ್ಲಿಕ್ ಟಿವಿಯಲ್ಲಿ ಬಿತ್ತರವಾದ ವರದಿಯಿಂದ ಯಾದಗಿರಿ ಜಿಲ್ಲಾಡಳಿತ (District Administration) ಎಚ್ಚೆತ್ತುಕೊಂಡು ದೇವಿಕೇರಾ ಗ್ರಾಮದಲ್ಲಿ ಪ್ರಾಣಿ ಬಲಿ ನಿಷೇಧಿಸಿ ಶಾಂತಿಯುತವಾಗಿ ದೇವಿ ಜಾತ್ರೆಯನ್ನು ಆಚರಣೆ ಮಾಡಿದೆ. ಕೋಣ ಬಲಿಕೊಡುವ ಜಾಗದಲ್ಲಿ ಕುಂಬಳಕಾಯಿ ಒಡೆದು ಮರೆಮ್ಮ, ಪಾಲ್ಕಮ್ಮ ಹಾಗೂ ದೇವಮ್ಮ ದೇವಿ ಜಾತ್ರೆಯನ್ನು (Fair) ಆಚರಿಸಲಾಯಿತು. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಿಕೇರಾ ಗ್ರಾಮದಲ್ಲಿ ಜಾತ್ರೆ ಆಚರಣೆ ಮಾಡಿದ್ದು, ಜಾತ್ರೆ ಹಿನ್ನೆಲೆ ದೇವಿ ಮೂರ್ತಿಗಳಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಕೆ ಮಾಡಲಾಯಿತು. ಇದನ್ನೂ ಓದಿ: ದೇವರಿಗೆ ಬಲಿಕೊಟ್ಟ ಕೋಣದ ಮಾಂಸ ತಿನ್ನದಿದ್ರೆ ದಲಿತರಿಗೆ ಬಹಿಷ್ಕಾರ – ಯಾದಗಿರಿಯಲ್ಲಿ ಅನಿಷ್ಟ ಪದ್ಧತಿ ಇನ್ನೂ ಜೀವಂತ

    ನೂರಾರು ಮುತ್ತೈದೆಯರು ಮಡಿಯಿಂದ ತಮ್ಮತಮ್ಮ ಮನೆಗಳಿಂದ ದೀಪಗಳನ್ನ ತಲೆ ಮೇಲೆ ಇಟ್ಟುಕೊಂಡು ದೇವಸ್ಥಾನಕ್ಕೆ ಆಗಮಿಸಿ ದೀಪ ಬೆಳಗಿಸಿದರು. ಅಲ್ಲದೇ ಡೊಳ್ಳು ಕುಣಿತ ಹಾಗೂ ವಿವಿಧ ಕಲಾ ತಂಡಗಳು ಜಾತ್ರೆಗೆ ಮೆರಗು ತಂದವು. ರಾತ್ರಿಯಿಂದ ಬೆಳಗ್ಗಿನ ಜಾವದವರೆಗೂ ಜರುಗಿದ ಜಾತ್ರೆಯಲ್ಲಿ ಸಾವಿರಾರು ಭಕ್ತರು ಭಾಗಿಯಾಗಿದ್ದರು. ಹಲವಾರು ವರ್ಷಗಳಿಂದ ನಡೆದುಕೊಂಡು ಬಂದಿದ್ದ ಅನಿಷ್ಠ ಪದ್ಧತಿಗೆ ಯಾದಗಿರಿ ಜಿಲ್ಲಾಡಳಿತ ಮಂಗಳ ಹಾಡಿದೆ. ದೇವಿಕೇರಾ ಗ್ರಾಮದಲ್ಲಿ ಶಾಂತಿ ಸಭೆ ನಡೆಸಿ ಗ್ರಾಮಸ್ಥರನ್ನು ಸುರಪುರ ತಹಶೀಲ್ದಾರ್ ವಿಜಯಕುಮಾರ್ ಮನವೊಲಿಸಿದ್ದಾರೆ. ಪ್ರಾಣಿ ಬಲಿ ನಿಷೇಧಕ್ಕಾಗಿ ಕಟ್ಟುನಿಟ್ಟಿನ ಮುಂಜಾಗೃತಾ ಕ್ರಮ ಕೈಗೊಂಡ ಹಿನ್ನೆಲೆ ದೇವಿಕೇರಾ ಗ್ರಾಮದಲ್ಲಿ 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳನ್ನು ಬಂದೋಬಸ್ತ್ಗೆ ನಿಯೋಜಿಸಲಾಗಿತ್ತು. ಇದನ್ನೂ ಓದಿ: 2ನೇ ಹಂತದ ಭಾರತ್ ಜೋಡೋ ಯಾತ್ರೆ ಆರಂಭಿಸಲು ಕಾಂಗ್ರೆಸ್ ನಿರ್ಧಾರ

    ಶಾಂತಿಯುತ ಜಾತ್ರೆ ಆಚರಣೆಗಾಗಿ ಸುರಪುರ ತಹಶೀಲ್ದಾರ್ ರಾತ್ರಿ ಇಡೀ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದರು. ಈ ಪರಿಣಾಮ ಮರೆಮ್ಮ, ಪಾಲ್ಕಮ್ಮ ಹಾಗೂ ದೇವಮ್ಮ ದೇವರ ಜಾತ್ರೆ ಎರಡು ದಿನಗಳ ಕಾಲ ಶಾಂತಿಯುತವಾಗಿ ಜರುಗಿದೆ. ಇದಕ್ಕೂ ಮೊದಲು ಜಾತ್ರೆಯಲ್ಲಿ ಬಲಿ ಕೊಟ್ಟ ಕೋಣದ ಮಾಂಸ ದಲಿತರು ತಿನ್ನಬೇಕಿತ್ತು. ಹಾಗೇ ಕೋಣದ ಮಾಂಸ ತಿನ್ನದೇ ಇದ್ದರೆ ಬಹಿಷ್ಕಾರ ಹಾಕುವ ಬೆದರಿಕೆಯನ್ನೂ ಒಡ್ಡಲಾಗಿತ್ತು. ಈ ಕುರಿತು ಪಬ್ಲಿಕ್ ಟಿವಿ ವಿಸ್ತೃತ ವರದಿ ಪ್ರಸಾರ ಮಾಡಿತ್ತು. ಇದನ್ನೂ ಓದಿ: 70 ಕೋಟಿ ವಂಚನೆ ಮಾಡಿದ ಟೆಕ್ಕಿ ದಂಪತಿ!

  • ಪ್ರಮೋದ್ ಮುತಾಲಿಕ್ ಶಿವಮೊಗ್ಗ ಪ್ರವೇಶಕ್ಕೆ ಒಂದು ತಿಂಗಳ ಕಾಲ ನಿರ್ಬಂಧ

    ಪ್ರಮೋದ್ ಮುತಾಲಿಕ್ ಶಿವಮೊಗ್ಗ ಪ್ರವೇಶಕ್ಕೆ ಒಂದು ತಿಂಗಳ ಕಾಲ ನಿರ್ಬಂಧ

    – ಶಿವಮೊಗ್ಗ ಪ್ರವೇಶಿಸದಂತೆ ಜಿಲ್ಲಾಡಳಿತದಿಂದ ನೋಟಿಸ್

    ಶಿವಮೊಗ್ಗ: ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಬುಧವಾರ ಶಿವಮೊಗ್ಗದ (Shivamogga) ರಾಗಿಗುಡ್ಡ (Ragigudda) ಗಲಭೆಪೀಡಿತ ಪ್ರದೇಶಕ್ಕೆ ಭೇಟಿ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಆದರೆ ಪ್ರಮೋದ್ ಮುತಾಲಿಕ್ ಅವರ ಭೇಟಿಗೆ ಜಿಲ್ಲಾಡಳಿತ ಅವಕಾಶ ನೀಡದೇ ನಿರ್ಬಂಧ ವಿಧಿಸಿದೆ.

    ಪೊಲೀಸ್ ಇಲಾಖೆಯ ಕೋರಿಕೆ ಮೇರೆಗೆ ಅಕ್ಟೋಬರ್ 17 ರಿಂದ 30 ದಿನಗಳ ಕಾಲ ಜಿಲ್ಲೆಗೆ ಭೇಟಿ ನೀಡದಂತೆ ಮುತಾಲಿಕ್‌ಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಆದೇಶಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದಿಂದ ಒಂದು ಸಾವಿರ ಕೋಟಿ ಲಂಚ ಸಂಗ್ರಹ: ಎನ್.ರವಿಕುಮಾರ್

    ಅ.1 ರಂದು ರಾಗಿಗುಡ್ಡದಲ್ಲಿ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಹಾನಿಯಾದ ಮನೆಗಳಿಗೆ ಇಂದು ಮುತಾಲಿಕ್ ಭೇಟಿ ನೀಡಿ ಸಾಂತ್ವನ ಹೇಳುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಆದರೆ ಮಂಗಳೂರಿನಿಂದ ಶಿವಮೊಗ್ಗಕ್ಕೆ ಮಂಗಳವಾರ ರಾತ್ರಿ ಬಸ್‌ನಲ್ಲಿ ಬರುತ್ತಿದ್ದ ವೇಳೆ ತಡರಾತ್ರಿ 2 ಗಂಟೆಗೆ ಹೊಸನಗರ ತಾಲೂಕಿನ ಮಾಸ್ತಿಕಟ್ಟೆ ಬಳಿ ಬಸ್ ತಡೆದ ಪೊಲೀಸರು, ಮುತಾಲಿಕ್ ಅವರನ್ನು ವಶಕ್ಕೆ ಪಡೆದು ನಿರ್ಬಂಧದ ಆದೇಶ ಪ್ರತಿ ನೀಡಿದರು. ಇದನ್ನೂ ಓದಿ: ಸತೀಶ್ ಜಾರಕಿಹೊಳಿ, ನನ್ನ ನಡುವೆ ಏನೂ ಇಲ್ಲ: ಡಿಕೆಶಿ

    ಆ ನಂತರ ಪೊಲೀಸ್ ಬೆಂಗಾವಲು ವಾಹನದೊಂದಿಗೆ ಪ್ರತ್ಯೇಕ ಕಾರಿನಲ್ಲಿ ಪ್ರಮೋದ್ ಮುತಾಲಿಕ್ ಅವರನ್ನು ದಾವಣಗೆರೆಗೆ ಪೊಲೀಸರು ಕಳುಹಿಸಿ ಕೊಟ್ಟಿದ್ದಾರೆ. ಇದನ್ನೂ ಓದಿ: ITದಾಳಿ ಜಟಾಪಟಿ; ಕಲೆಕ್ಷನ್ ಟಾಸ್ಕ್ ಸ್ಲೇಟ್ ಹಿಡಿದ ಸಚಿವರ ಪೋಸ್ಟರ್ ಹಾಕಿ ಬಿಜೆಪಿ ಟಾಂಗ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜೋರು ಮಳೆ ಬರುತ್ತೆ, ಮನೆ ಖಾಲಿ ಮಾಡಿ – ಜನರ ಆಕ್ರೋಶಕ್ಕೆ ಕಾರಣವಾಯ್ತು ಜಿಲ್ಲಾಡಳಿತದ ನೋಟಿಸ್

    ಜೋರು ಮಳೆ ಬರುತ್ತೆ, ಮನೆ ಖಾಲಿ ಮಾಡಿ – ಜನರ ಆಕ್ರೋಶಕ್ಕೆ ಕಾರಣವಾಯ್ತು ಜಿಲ್ಲಾಡಳಿತದ ನೋಟಿಸ್

    ಮಡಿಕೇರಿ: ರಾಜ್ಯಕ್ಕೆ ಮುಂಗಾರು ಪೂರ್ವ ಮಳೆ (Rain) ಅಧಿಕೃತವಾಗಿ ಪ್ರವೇಶ ಪಡೆದಿದ್ದು, ಕೊಡಗು (Kodagu) ಜಿಲ್ಲೆಯಲ್ಲಿ ಈಗಾಗಲೇ ಆಗೊಮ್ಮೆ ಈಗೊಮ್ಮೆ ಸಾಧಾರಣ ಮಳೆ ಸುರಿಯುತ್ತಿದೆ. ಆದರೆ ಜುಲೈ ಅಥವಾ ಆಗಸ್ಟ್ ತಿಂಗಳಲ್ಲಿ ಸಹಜವಾಗಿಯೇ ಅದು ವಿಪರೀತವಾಗಿ ಸುರಿಯುತ್ತದೆ.

    ಒಂದು ವೇಳೆ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದ್ದೇ ಆದಲ್ಲಿ ನದಿ ಪಾತ್ರದ ಜನರಿಗೆ ಮತ್ತೆ ಕಂಟಕ ಮಾತ್ರ ತಪ್ಪಿದ್ದಲ್ಲ. ಹೀಗಾಗಿ ಕೊಡಗು ಜಿಲ್ಲಾಡಳಿತ ಮಳೆಗಾಲವನ್ನು ಎದುರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಅಲ್ಲದೇ ಗ್ರಾಮ ಪಂಚಾಯಿತಿಯಿಂದ ನದಿ ಪಾತ್ರದ ಜನರಿಗೆ ನೋಟಿಸ್ ಒಂದು ನೀಡಿದ್ದು, ಅದು ಜನಾಕ್ರೋಶಕ್ಕೆ ಕಾರಣವಾಗಿದೆ.

    ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕರಡಿಗೋಡು ಗ್ರಾಮದಲ್ಲಿ ನದಿಪಾತ್ರದ ಜನರಿಗೆ ಸಿದ್ದಾಪುರ ಗ್ರಾಮ ಪಂಚಾಯಿತಿಯಿಂದ ಜನರು ಸುರಕ್ಷಿತ ಸ್ಥಳಗಳಿಗೆ, ಸಂಬಂಧಿಕರ ಮನೆಗಳಿಗೆ ತೆರಳುವಂತೆ ನೋಟಿಸ್ ನೀಡಿದೆ. ಆದರೆ ಪರ್ಯಾಯ ವ್ಯವಸ್ಥೆಗಳನ್ನೇ ಮಾಡದೆ ನೋಟಿಸ್ ನೀಡಿರುವುದಕ್ಕೆ ಜನರಿಂದ ಆಕ್ರೋಶ ವ್ಯಕ್ತವಾಗಿದೆ.

    ಕಳೆದ ಹಲವು ವರ್ಷಗಳಿಂದ ಪ್ರವಾಹ ಸಂತ್ರಸ್ತರಿಗೆ ಇನ್ನೂ ಮನೆಗಳು ವಿತರಣೆಯಾಗಿಲ್ಲ. ಹೀಗಿರುವಾಗಲೂ ಪರ್ಯಾಯ ವ್ಯವಸ್ಥೆ ಮಾಡದೆ ಗ್ರಾಮದ ನೂರಾರು ಕುಟುಂಬಗಳ ಮನೆಗಳ ಮುಂದೆ ನೋಟಿಸ್ ಅಂಟಿಸಿರುವ ಕ್ರಮಕ್ಕೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿ ವರ್ಷವೂ ಇಲಾಖೆಗಳಿಗೆ ಒಂದು ನೋಟಿಸ್ ನೀಡಿ ಕೈ ತೊಳೆದುಕೊಳ್ಳುತ್ತಾರೆ. ಪ್ರತಿ ಮಳೆಗಾಲ ಬಂದರೆ ಸಾಕು ಕಾಳಜಿ ಕೇಂದ್ರಕ್ಕೆ ಹೋಗುತ್ತೇವೆ. ನಂತರ ಮನೆಗಳಿಗೆ ಬಂದರೆ ಮನೆಯಲ್ಲಿ ಇರುವ ವಸ್ತುಗಳು ಪಾತ್ರೆಗಳು ಕಾವೇರಿ ನದಿಯಲ್ಲೇ ಹೋಗಿರುತ್ತದೆ. ವರ್ಷ ವರ್ಷ ನಮಗೆ ಹೋಸ ವಸ್ತುಗಳು ತೆಗೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಶಾಶ್ವತವಾದ ಒಂದು ಸೂರು ಕೊಡಿ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

    ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಕರಡಿಗೋಡು ಹಾಗೂ ಗುಹ್ಯ ಗ್ರಾಮದಲ್ಲಿ ಕಾವೇರಿ ಪ್ರವಾಹಕ್ಕೆ ನೂರಾರು ಮನೆಗಳು ತುತ್ತಾಗುತ್ತಿದೆ. ಅಲ್ಲದೇ 2019-20 ರಲ್ಲಿ ಈ ಭಾಗದಲ್ಲಿ ಹಲವಾರು ಮನೆಗಳು ಸಂಪೂರ್ಣವಾಗಿ ಕಾವೇರಿ ನದಿಯ ಪ್ರತಾಪಕ್ಕೆ ಒಳಗಾಗಿ ಮನೆಗಳು ನಾಶವಾಗಿದ್ದವು. ಈ ಸಂದರ್ಭದಲ್ಲಿ ಅಂದಿನ ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಈ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಈ ಗ್ರಾಮದ ಜನರಿಗೆ ಸುರಕ್ಷಿತ ಸ್ಥಳದಲ್ಲಿ ಒಂದು ಸೂರು ಕೊಡಿ ಎಂದು ಆಗ್ರಹಿಸಿದ್ದರು. ಇದೀಗ ಅವರೇ ಮುಖ್ಯಮಂತ್ರಿ ಆಗಿರುವುದರಿಂದ ಇಲ್ಲಿನ ಗಂಭೀರ ಸಮಸ್ಯೆಯ ಬಗ್ಗೆ ಅವರಿಗೆ ಅರಿವು ಇರುವುದರಿಂದ ಅವರಾದರೂ ಸೂರು ಕೊಡಬಹುದು ಎಂದು ಇಲ್ಲಿನ ಜನರು ನಿರೀಕ್ಷೆಯಲ್ಲಿದ್ದಾರೆ. ಇದನ್ನೂ ಓದಿ: ಜೂನ್‌ 1ಕ್ಕೆ ನಡೆಯಬೇಕಿದ್ದ ಕ್ಯಾಬಿನೆಟ್‌ ಸಭೆ ಶುಕ್ರವಾರಕ್ಕೆ ಹೋಗಿದ್ದು ಯಾಕೆ?

    ಇತ್ತ ಸಿದ್ದಾಪುರ ಗ್ರಾಮ ಪಂಚಾಯತಿ ಪಿಡಿಒ ಅವರನ್ನು ಕೇಳಿದರೆ, ಪ್ರತಿ ವರ್ಷ ಮಳೆಗಾಲದ ಸಮಯದಲ್ಲಿ ನದಿ ಪಾತ್ರದ ಜನರಿಗೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಅದರಲ್ಲೂ ಗುಹ್ಯ ಗ್ರಾಮದಲ್ಲಿ ಸುಮಾರು 78 ಜನರು ಹಾಗೂ ಕರಡಿಗೋಡು ಗ್ರಾಮದಲ್ಲಿ 115 ಕುಟುಂಬಗಳು ವಾಸ ಮಾಡುತ್ತಿದೆ. ಮಳೆ ಹೆಚ್ಚಾದರೆ ಮನೆಗಳು ಬೀಳುವ ಪರಿಸ್ಥಿತಿ ಇರುವುದರಿಂದ ಅವರಿಗೆ ಮನೆ ಖಾಲಿ ಮಾಡಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಪಂಚಾಯಿತಿಯಿಂದ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದ್ದಾರೆ.

    ಒಂದೆಡೆ ಜಿಲ್ಲಾಡಳಿತ ಮಳೆಗಾಲವನ್ನು ಎದುರಿಸಲು ಸಂಪೂರ್ಣ ಸಿದ್ಧತೆ ನಡೆಸಿದೆ ಎನ್ನುತ್ತಿದೆ. ಆದರೆ ಕಳೆದ ಬಾರಿಯ ಕಾವೇರಿ ನದಿ ಪಾತ್ರದ ಸಂತ್ರಸ್ತರಿಗೆ ಯಾವುದೇ ಬದಲಿ ವ್ಯವಸ್ಥೆ ಮಾಡದೆ, ಕೇವಲ ಮನೆ ಖಾಲಿ ಮಾಡುವಂತೆ ನೋಟಿಸ್ ನೀಡಿರುವುದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: 174 ಶಾಲೆಗಳಲ್ಲಿ ಕುಡಿಯಲೂ ನೀರಿಲ್ಲ – ಮಳೆಯಾಗುವ ತನಕ ಅರ್ಧ ದಿನ ಶಾಲೆ ತೆರೆಯಲು ಸರ್ಕಾರಕ್ಕೆ ಮನವಿ

  • ಕೊಡಗಿನಲ್ಲಿ 4 ದಿನದ ಬಳಿಕ ನಿಷೇಧಾಜ್ಞೆ ಹಿಂಪಡೆದ ಜಿಲ್ಲಾಡಳಿತ

    ಕೊಡಗಿನಲ್ಲಿ 4 ದಿನದ ಬಳಿಕ ನಿಷೇಧಾಜ್ಞೆ ಹಿಂಪಡೆದ ಜಿಲ್ಲಾಡಳಿತ

    ಮಡಿಕೇರಿ: ಕೊಡಗಿನಲ್ಲಿ 4 ದಿನಗಳಿಂದ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಜಿಲ್ಲಾಡಳಿತ ಶನಿವಾರ ಸಂಜೆ ಹಿಂಪಡೆದಿದೆ.

    ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣದ ಬಳಿಕ ಉಂಟಾದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಶುಕ್ರವಾರ ಕಾಂಗ್ರೆಸ್‌ನಿಂದ ಮಡಿಕೇರಿ ಚಲೋ ಮತ್ತು ಬಿಜೆಪಿಯಿಂದ ಜನ ಜಾಗೃತಿ ಸಮಾವೇಶ ಘೋಷಣೆಯಾಗಿತ್ತು. ಆದರೆ ಕೋಮು ಸೂಕ್ಷ್ಮ ಜಿಲ್ಲೆಯಾದ ಕೊಡಗಿನಲ್ಲಿ ಪರಿಸ್ಥಿತಿಯ ದುರ್ಲಾಭವನ್ನು ಹೊರಗಿನ ವ್ಯಕ್ತಿಗಳು ಪಡೆಯಲು ನಡೆಸಿರುವ ಹುನ್ನಾರ ಗೊತ್ತಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಆಗಸ್ಟ್ 24ರ ಬೆಳಗ್ಗೆ 6 ರಿಂದ ಇಂದು ಸಂಜೆ 6 ಗಂಟೆ ತನಕ ನಿಷೇಧಾಜ್ಞೆ ಜಾರಿಗೊಳಿಸಿತ್ತು. ಇದನ್ನೂ ಓದಿ: ಮುಂಬರುವ ಹಬ್ಬಗಳಲ್ಲಿ ಖಾದಿ ಉತ್ಪನ್ನಗಳನ್ನೇ ಗಿಫ್ಟ್ ಕೊಡಿ – ಜನರಿಗೆ ಮೋದಿ ಕರೆ

    4 ದಿನಗಳಿಂದ 144 ಸೆಕ್ಷನ್ ಇದ್ದರೂ ಜಿಲ್ಲೆಯ ಜನಜೀವನ ಎಂದಿನಂತೆಯೇ ನಡೆಯುತ್ತಿತ್ತು. ಗಾಡಿಭಾಗದ ಎಲ್ಲಾ ಚೆಕ್‌ಪೋಸ್ಟ್‌ಗಳಲ್ಲಿಯೂ ಪೊಲೀಸ್ ಇಲಾಖೆಯಿಂದ ಹೈ ಅಲರ್ಟ್ ಮಾಡಲಾಗಿತ್ತು. ಇದೀಗ ಸಂಜೆ 6 ಗಂಟೆಯ ಬಳಿಕ ನಿಷೇಧಾಜ್ಞೆಯನ್ನು ಜಿಲ್ಲಾಡಳಿತ ಹಿಂದಕ್ಕೆ ಪಡೆದಿದ್ದು, ಜಿಲ್ಲೆಯ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಇದನ್ನೂ ಓದಿ: ಭಾರತದ 49ನೇ CJI ಆಗಿ ಯುಯು ಲಲಿತ್ ಪ್ರಮಾಣ ವಚನ ಸ್ವೀಕಾರ

    Live Tv
    [brid partner=56869869 player=32851 video=960834 autoplay=true]

  • ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಗುಡ್ಡ ಕುಸಿತ – 1,200 ಕೆಜಿ ಮೇಲ್ಪಟ್ಟ ವಾಹನಗಳಿಗೆ ನಿಷೇಧ

    ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಗುಡ್ಡ ಕುಸಿತ – 1,200 ಕೆಜಿ ಮೇಲ್ಪಟ್ಟ ವಾಹನಗಳಿಗೆ ನಿಷೇಧ

    ಚಿಕ್ಕಮಗಳೂರು: ರಾಜ್ಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ಕಾಫಿನಾಡು ಚಿಕ್ಕಮಗಳೂರಿನ ಹಲವೆಡೆ ಭೂಕುಸಿತ, ಗುಡ್ಡ ಕುಸಿತಗಳು ಸಂಭವಿಸಿದೆ. ಚಂದ್ರದ್ರೋಣ ಪರ್ವತ ಸಾಲಿನ ಕೆಲ ಪ್ರವಾಸಿ ಸ್ಥಳಗಳಿಗೆ ಜಿಲ್ಲಾಡಳಿತ ಕೆಲವೊಂದು ನಿರ್ಬಂಧ ಹೇರಿದೆ.

    1,200 ಕೆ.ಜಿ ಮೇಲ್ಪಟ್ಟ ವಾಹನಗಳಿಗೆ ನಿಷೇಧ ಹೇರಲಾಗಿದೆ. ಬೆಳಗ್ಗೆ 6-9 ಹಾಗೂ ಮಧ್ಯಾಹ್ನ 2-4 ಗಂಟೆ ವರೆಗೆ ಮಾತ್ರವೇ ಪ್ರಯಾಣಕ್ಕೆ ಅವಕಾಶವಿರುತ್ತದೆ. ತಲಾ 150 ವಾಹನಗಳಂತೆ 300 ವಾಹನಗಳಿಗೆ ಮಾತ್ರವೇ ಅವಕಾಶವಿರುತ್ತದೆ. ಇದನ್ನೂ ಓದಿ: ಚಾರ್ಮಾಡಿ ಘಾಟ್‌ನಲ್ಲಿ ರಸ್ತೆಗೆ ಬಿದ್ದ ಬೃಹತ್ ಮರ – ಟ್ರಾಫಿಕ್ ಜಾಮ್

    ಮುಳ್ಳಯ್ಯನಗಿರಿ, ದತ್ತಪೀಠ, ಝರಿ ಪಾಲ್ಸ್, ಮಾಣಿಕ್ಯಧಾರ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುವವರು ಅಧಿಕೃತ ಹೋಂ ಸ್ಟೇ, ರೆಸಾರ್ಟ್ಗಳನ್ನು ಬುಕ್ಕಿಂಗ್ ಮಾಡಿದ್ದರೆ ಮಾತ್ರವೇ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತದೆ. ಗಿರಿ ಭಾಗದ ಸ್ಥಳೀಯರಿಗೆ ಯಾವುದೇ ನಿರ್ಬಂಧವಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೆಶ್ ಆದೇಶಿಸಿದ್ದಾರೆ. ಇದನ್ನೂ ಓದಿ: ಕೊಡಗಿನ ಕೊಯಿನಾಡಿನಲ್ಲಿ ಕಣ್ಣೆದುರೇ ಕುಸಿದು ಬಿದ್ದ ಗುಡ್ಡ – ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಕಾವೇರಿ

    ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಭಾರೀ ಮಳೆಯ ಹಿನ್ನೆಲೆ ಮರ, ಮಣ್ಣು, ಬಂಡೆಗಳು ರಸ್ತೆಗೆ ಉರುಳುತ್ತಿವೆ. ಕೊಳಗಾಮೆ-ಮುತ್ತೋಡಿ ಸಂಪರ್ಕ ಕಲ್ಪಿಸುವ ಗಿರಿ ಭಾಗದ ರಸ್ತೆಯಲ್ಲಿ ಭೂಕುಸಿತವಾಗಿದ್ದು, ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ.

    Live Tv
    [brid partner=56869869 player=32851 video=960834 autoplay=true]

  • ಕೊಡಗು ಜಿಲ್ಲೆಗೆ ಇಂದಿನಿಂದ ಈ ವಾಹನಗಳಿಗಿಲ್ಲ ಪ್ರವೇಶ – ಜಿಲ್ಲಾಧಿಕಾರಿ ಆದೇಶ

    ಕೊಡಗು ಜಿಲ್ಲೆಗೆ ಇಂದಿನಿಂದ ಈ ವಾಹನಗಳಿಗಿಲ್ಲ ಪ್ರವೇಶ – ಜಿಲ್ಲಾಧಿಕಾರಿ ಆದೇಶ

    ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಸ್ಥಳೀಯ ಜನರಲ್ಲಿ ಭಯ ಶುರುವಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ 2018ರಲ್ಲಾದ ಪರಿಸ್ಥಿತಿ ಮತ್ತೆ ಎದುರಾಗಲಿದೆಯೇ ಎಂಬ ಆತಂಕ ಸೃಷ್ಟಿಯಾಗಿದೆ.

    ಇದೀಗ ಕೊಡಗಿನಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದ್ದು, ಮೊದಲ ಹೆಜ್ಜೆಯಾಗಿ ಭಾರೀ ವಾಹನಗಳಿಗೆ ಜಿಲ್ಲೆಯಲ್ಲಿ ನಿರ್ಬಂಧ ಹೇರಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ವ್ಯಾಪಕ ಮಳೆಯಾಗುತ್ತಿರುವುದರಿಂದ ಭೂಕುಸಿತ, ಗುಡ್ಡ ಕುಸಿತದ ಅಪಾಯವಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಶ್ವಾನದ ಜೊತೆ ಬೈಕ್‍ನಲ್ಲಿ ಲಡಾಕ್ ಟ್ರಿಪ್‍ಗೆ ಹೊರಟ ಯುವಕ

    ಎಲ್ಲಾ ರೀತಿಯ ಮರದ ದಿಮ್ಮಿ, ಮರಳು ಸಾಗಿಸುವ ವಾಹನಗಳನ್ನು ಇಂದಿನಿಂದ ಅಕ್ಟೋಬರ್ 15ರ ವರೆಗೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ. 16,200 ಕೆ.ಜಿ ಗಿಂತ ಹೆಚ್ಚಿನ ತೂಕದ ಸರಕು ಸಾಗಣೆ ವಾಹನಗಳಿಗೆ ಪ್ರವೇಶವಿಲ್ಲ. ಬುಲೆಟ್ ಟ್ಯಾಂಕರ್, ಶಿಪ್ ಕಾರ್ಗೋ ಕಂಟೈನರ್, ಲಾಂಗ್ ಚಾಸೀಸ್(ಮಲ್ಟಿ ಆ್ಯಕ್ಸೆಲ್) ವಾಹನಗಳಿಗೂ ನಿರ್ಬಂಧಿಸಲಾಗಿದೆ.

    ಸದ್ಯ ಅಡುಗೆ ಅನಿಲ, ಇಂಧನ ಪೂರೈಕೆ, ಹಾಲು ಪೂರೈಕೆ, ಸರ್ಕಾರಿ ವಾಹನಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಸಿ. ಸತೀಶ್ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಆಪರೇಷನ್ ಅಮರನಾಥ ಚಾಲೆಂಜ್ ಆಗಿದೆ: ಕರ್ನಲ್ ವಿ.ಎಂ. ನಾಯಕ್

    Live Tv
    [brid partner=56869869 player=32851 video=960834 autoplay=true]