Tag: district collector

  • ನಡುಗಡ್ಡೆಯಲ್ಲಿ ಸಿಲುಕಿದ 500 ದನಕರುಗಳು – ಹಸುಗಳನ್ನು ಕಾಪಾಡುವಂತೆ ಡಿಸಿಗೆ ಮನವಿ

    ನಡುಗಡ್ಡೆಯಲ್ಲಿ ಸಿಲುಕಿದ 500 ದನಕರುಗಳು – ಹಸುಗಳನ್ನು ಕಾಪಾಡುವಂತೆ ಡಿಸಿಗೆ ಮನವಿ

    ಕೊಪ್ಪಳ: ತುಂಗಭದ್ರಾ ಡ್ಯಾಂ ನಿಂದ ಒಂದು ಲಕ್ಷ ಕ್ಯೂಸೆಕ್ ಗೂ ಅಧಿಕ ಪ್ರಮಾಣದ ನೀರು ನದಿಗೆ ಬಿಡುಗಡೆ ಮಾಡಲಾಗಿದ್ದು, ಕೊಪ್ಪಳ ತಾಲೂಕಿನ ಶಿವಪುರ ಮಾರ್ಕಂಡೇಶ್ವರ ಬಳಿ ಇರುವ ನಡುಗಡ್ಡೆಯಲ್ಲಿ ಜಾನುವಾರುಗಳು ಸಿಲುಕಿಹಾಕಿಕೊಂಡಿವೆ. ಹೀಗಾಗಿ ಅವುಗಳನ್ನು ಸುರಕ್ಷಿತ ಜಾಗಕ್ಕೆ ತಲುಪಿಸಲು ದನಗಾಯಿ ವೀಡಿಯೋ ಮೂಲಕ ಕೊಪ್ಪಳ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.

    ಶಿವಪುರ ಬಳಿ ಇರುವ ತುಂಗಭದ್ರಾ ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಮೂಕಪ್ರಾಣಿಗಳು ಮಳೆ ಚಳಿಗೆ ರೋಧಿಸುತ್ತಿವೆ. ಸುಮಾರು 500 ದನಕರುಗಳು ಕಳೆದ 4 ದಿನದಿಂದ ಆಹಾರವಿಲ್ಲದೆ ನಡುಗಡ್ಡೆಯಲ್ಲಿ ನಿತ್ರಾಣಗೊಂಡಿವೆ. ನದಿ ದಾಟಲು ಆಗದೇ ನಡುಗಡ್ಡೆಯಲ್ಲಿ ಸಿಲುಕಿರುವ ದನಕರುಗಳು ಮೇವು ಇಲ್ಲದೆ ನಿತ್ರಾಣವಾಗಿದ್ದು, ಔಷಧಿ ಪೂರೈಸುವಂತೆ ದನಗಾಯಿಗರು ಮನವಿ ಮಾಡಿದ್ದಾರೆ. ಇದನ್ನೂ ಓದಿ:  ಬಿಜೆಪಿ ಅಂದ್ರೆ ಭಾರತೀಯ ಜೂಟಾ ಪಾರ್ಟಿ: ಈಶ್ವರ್ ಖಂಡ್ರೆ

    ದನಗಾಯಿಗರು ಶೆಡ್ ಇಲ್ಲದೆ, ಮೂಕ ಪ್ರಾಣಿಗಳನ್ನು ಕಾಯುತ್ತಿದ್ದಾರೆ. ದನಕರುಗಳ ರೋಧನೆ ಕಂಡು ದನಗಾಯಿ ಮಂಜುನಾಥ್ ಕಣ್ಣೀರು ಹಾಕುತ್ತಿದ್ದಾರೆ. ಮೇವು ಸಿಗದೇ ಈಗಾಗಲೇ ಎರಡು ಕರು ಮೃತಪಟ್ಟಿದ್ದು, ದನಕರುಗಳ ಚಿಕಿತ್ಸೆಗೆ ಪಶು ವೈದ್ಯರ ಅವಶ್ಯಕತೆ ಇದೆ. ಕೂಡಲೇ ಏನಾದ್ರೂ ವ್ಯವಸ್ಥೆ ಮಾಡಿ ಎಂದು ಜಿಲ್ಲಾಧಿಕಾರಿಗಳಿಗೆ ದನಗಾಯಿಗಳು ಮನವಿ ಮಾಡಿದ್ದಾರೆ.

  • ಚಾಮುಂಡಿಬೆಟ್ಟ ಭೂಕುಸಿತ ದುರಸ್ತಿ ಕಾರ್ಯ ತ್ವರಿತವಾಗಿ ನಡೆಸಿ : ಎಸ್‌ಟಿಎಸ್‌ ಸೂಚನೆ

    ಚಾಮುಂಡಿಬೆಟ್ಟ ಭೂಕುಸಿತ ದುರಸ್ತಿ ಕಾರ್ಯ ತ್ವರಿತವಾಗಿ ನಡೆಸಿ : ಎಸ್‌ಟಿಎಸ್‌ ಸೂಚನೆ

    ಮೈಸೂರು: ಸತತ 10 ದಿನಗಳಿಂದ ಬಿದ್ದ ಭಾರೀ ಮಳೆಯ ಪರಿಣಾಮ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ದುರಸ್ತಿ ಕಾರ್ಯ ತ್ವರಿತವಾಗಿ ನಡೆಸಲು ಜಿಲ್ಲಾಧಿಕಾರಿಗಳಿಗೆ ಸಹಕಾರ ಸಚಿವ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅವರು ಖಡಕ್ ಸೂಚನೆ ನೀಡಿದ್ದಾರೆ.

    ಬುಧವಾರ ಸಂಜೆ ಸುರಿದ ಧಾರಾಕಾರ ಮಳೆಯಿಂದಾಗಿ ಚಾಮುಂಡಿಬೆಟ್ಡದಲ್ಲಿ ಬೃಹತ್ ನಂದಿ ಪ್ರತಿಮೆಗೆ ತೆರಳುವ ಮಾರ್ಗದಲ್ಲಿ ಭೂಕುಸಿತ ಉಂಟಾಗಿ ರಸ್ತೆ ಹಾನಿಗೀಡಾಗಿರುವುದು ದುರದೃಷ್ಟಕರ. ಜಿಲ್ಲಾಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿ ತುರ್ತು ಕ್ರಮ ಕೈಗೊಳ್ಳಬೇಕು. ಮುಂದಾಗಬಹುದಾದ ಅನಾಹುತ ತಪ್ಪಿಸಲು ಕೂಡಲೇ ಆ ರಸ್ತೆ ಸಂಚಾರವನ್ನು ಬಂದ್ ಮಾಡಿ, ದುರಸ್ತಿ ಕಾರ್ಯವನ್ನು ಕೈಗೊಳ್ಳಬೇಕು. ಆದಷ್ಟು ಶೀಘ್ರದಲ್ಲಿ ನಾನು ಬಂದು ಪರಿಶೀಲಿಸುತ್ತೇನೆ. ದುರಸ್ತಿ ಕಾರ್ಯವನ್ನು ಸಮರೋಪಾದಿಯಲ್ಲಿ ತೆಗೆದುಕೊಂಡು ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಬೇಕೆಂದು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಮಧ್ಯರಾತ್ರಿ ಸಿಎಂಗೆ ಝೀರೋ ಟ್ರಾಫಿಕ್‌ – ಅರ್ಧಗಂಟೆ ಸರ್ವಿಸ್‌ ರಸ್ತೆಯಲ್ಲಿ ನಿಂತ ವಾಹನಗಳು

    ಕಳೆದ ಕೆಲದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಬೆಂಗಳೂರು ಸಹಿತ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಹಿಂಗಾರು ಮಾರುತಗಳಿಂದ ಅಕ್ಟೋಬರ್ ಕೊನೆಯ ವಾರದಲ್ಲಿ ಮತ್ತೆ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಭಾರೀ ಮಳೆ – ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ

  • ಇಂದು, ನಾಳೆ ಚಾಮುಂಡಿ ಬೆಟ್ಟ ಓಪನ್: ಎಸ್.ಟಿ.ಸೋಮಶೇಖರ್

    ಇಂದು, ನಾಳೆ ಚಾಮುಂಡಿ ಬೆಟ್ಟ ಓಪನ್: ಎಸ್.ಟಿ.ಸೋಮಶೇಖರ್

    ಮೈಸೂರು: ರಾತ್ರಿ ಎಂಟು ಗಂಟೆಗೆ ಬಂದ್ ಆಗುತ್ತಿದ್ದ ಚಾಮುಂಡೇಶ್ವರಿ ದೇವಸ್ಥಾನವನ್ನು ಇಂದು ಮತ್ತು ನಾಳೆ ರಾತ್ರಿ 10 ಗಂಟೆಯವರೆಗೆ ತೆರೆದು ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಜಿಲ್ಲಾಧಿಕಾರಿ ಅವರಿಗೆ ಸೂಚನೆ ನೀಡಲಾಗಿದೆ ಎಂದು ಸಹಕಾರ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

    ಅರಮನೆ ಆವರಣದಲ್ಲಿ ಇಂದು ಬೆಳಗ್ಗೆ ಮಾವುತರು ಮತ್ತು ಕಾವಾಡಿಗರಿಗೆ ಆಯೋಜಿಸಿದ್ದ ಉಪಹಾರ ಕೂಟದಲ್ಲಿ ಭಾಗವಹಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡೇಶ್ವರಿ ದೇವಸ್ಥಾನವನ್ನು ರಾತ್ರಿ 8 ಗಂಟೆಗೆ ಬಂದ್ ಮಾಡಲಾಗುತ್ತಿತ್ತು. ನಗರದ ದೀಪಾಲಂಕಾರ ನೋಡಿಕೊಂಡು ದೇವಸ್ಥಾನಕ್ಕೆ ತೆರಳುವವರು ತಾಯಿ ಚಾಮುಂಡೇಶ್ವರಿಯ ದರ್ಶನ ಮಾಡಲೆಂದು ಶುಕ್ರವಾರದವರೆಗೆ ರಾತ್ರಿ 10 ಗಂಟೆಯವರೆಗೆ ದರ್ಶನದ ಅವಧಿ ವಿಸ್ತರಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.

    ಜಂಬೂಸವಾರಿಗೆ ಎಲ್ಲ ಸಿದ್ಧತೆ ಆಗಿದೆ. ಕೋವಿಡ್ ನಿಯಮಗಳನ್ನು ಉಲ್ಲಂಘಿಸದೇ 500 ಜನರಿಗೆ ಜಂಬೂಸವಾರಿ ವೀಕ್ಷಿಸಲು ಅವಕಾಶ ನೀಡಲಾಗಿದೆ. ಕೆಲವರು ಒಂದು ವಾರ, ಮತ್ತೆ ಕೆಲವರು ದೀಪಾವಳಿವರೆಗೆ ದೀಪಾಲಂಕಾರ ವಿಸ್ತರಣೆ ಮಾಡುವಂತೆ ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಅವರ ಬಳಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ನಾಡಿನೆಲ್ಲೆಡೆ ಆಯುಧಪೂಜೆಯ ಸಂಭ್ರಮ – ರಾಜವಂಶಸ್ಥರ ಆಯುಧಗಳಿಗೆ ಪೂಜೆ ಸಲ್ಲಿಸಲಿರುವ ಯದುವೀರ್

    ಇದೇ ವೇಳೆ ಡಿಕೆ. ಶಿವಕುಮಾರ್ ಪರ್ಸಂಟೇಜ್ ವಿಚಾರ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದ ಹಿರಿಯ ನಾಯಕರು ಈ ಬಗ್ಗೆ ಹೇಳಿದ್ದಾರೆ. ನಾನು ಶಾಸಕನಾಗಿದ್ದಾಗ ಇದೇನು ಇರಲಿಲ್ಲ. ಆದರೆ ಈಗ ಅವರಿಗೆ ಗೊತ್ತಿರಬಹುದು ಅದಕ್ಕೆ ಹೇಳಿದ್ದಾರೆ. ಕಾಂಗ್ರೆಸ್‍ನಲ್ಲಿ ಷಡ್ಯಂತ್ರ ನಡೆಯುತ್ತಿದೆ ಎಂದು ಹಿಂದೆಯೇ ಹೇಳಿದ್ದೆ. ಸಿದ್ದರಾಮಯ್ಯ ವರ್ಸಸ್ ಡಿಕೆ. ಶಿವಕುಮಾರ್ ಷಡ್ಯಂತ್ರ ನಡೆಯುಸುತ್ತಿದ್ದಾರೆ. ಇದು ಆ ಪಕ್ಷದ ಆಂತರಿಕ ವಿಚಾರ ಎಂದು ಉತ್ತರಿಸಿದ್ದಾರೆ. ಇದನ್ನೂ ಓದಿ: ಸಿಂಹಕ್ಕೂ ಅಂಜದೇ ಮಾಂಸ ತಿನ್ನಿಸಿದ ರಾಕಿ ಬಾಯ್ – ವೀಡಿಯೋ ವೈರಲ್

    23 ಸಚಿವರನ್ನು ಸಿದ್ದರಾಮಯ್ಯ ಬೀದಿಪಾಲು ಮಾಡಿದರು ಎಂಬ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ಕುರಿತಂತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಪಕ್ಷ ಬಿಡುವಂತೆ ಹೇಳಿಲ್ಲ. ಇದು ಹಳೇ ವಿಷಯ, ಇದನ್ನೇ ಮತ್ತೆ, ಮತ್ತೆ ಹೇಳುವುದು ಸರಿಯಲ್ಲ. ಕುಮಾರಸ್ವಾಮಿ ಅವರು ರಾತ್ರಿ 10 ಗಂಟೆಗೆ ಮಲಗಿ, ಕಣ್ಮುಚ್ಚಿಕೊಂಡು ಯೋಚಿಸಿದರೆ 23 ಜನ ಯಾಕೆ ಹೋದರು ಅಂತ ಗೊತ್ತಾಗುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.

  • ದಸರಾ, ಕಾವೇರಿ ತೀರ್ಥೋದ್ಭವ ಹಿನ್ನೆಲೆ ಕೊಡಗಿನಲ್ಲಿ ಮದ್ಯ ಮಾರಾಟ ಬಂದ್

    ದಸರಾ, ಕಾವೇರಿ ತೀರ್ಥೋದ್ಭವ ಹಿನ್ನೆಲೆ ಕೊಡಗಿನಲ್ಲಿ ಮದ್ಯ ಮಾರಾಟ ಬಂದ್

    ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾ ಹಾಗೂ ಗೋಣಿಕೊಪ್ಪದಲ್ಲಿ ಅಕ್ಟೋಬರ್ 14 ಮತ್ತು 15ರಂದು ನಡೆಯಲಿರುವ ಆಯುಧ ಪೂಜೆ ಮತ್ತು ದಸರಾ ಕಾರ್ಯಕ್ರಮ ಹಾಗೂ ಅಕ್ಟೋಬರ್ 17ರಂದು ನಡೆಯಲಿರುವ ಕಾವೇರಿ ತೀರ್ಥೋದ್ಭವದ ಹಿನ್ನೆಲೆ ಜಿಲ್ಲೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶ ಹೊರಡಿಸಿದ್ದಾರೆ.

    ಮಡಿಕೇರಿ ಗೋಣಿಕೊಪ್ಪದಲ್ಲಿ ಈ ಬಾರಿ ದಸರಾ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಅಕ್ಟೋಬರ್ 14ರ ಬೆಳಗ್ಗೆ 6ಗಂಟೆಯಿಂದ 16ರ ಬೆಳಗ್ಗೆ 6ಗಂಟೆಯವರೆಗೆ ಮಡಿಕೇರಿ ನಗರ ಠಾಣೆ ಮತ್ತು ಗೋಣಿಕೊಪ್ಪ ಠಾಣೆ ಸರಹದ್ದಿನ 10 ಕಿ.ಮೀ.ವ್ಯಾಪ್ತಿಯೊಳಗೆ ಬರುವ ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೊಟೇಲ್ ಮುಂತಾದವುಗಳಲ್ಲಿ ಎಲ್ಲಾ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ಮಾಜಿ ಸಚಿವ ವಿರುಪಾಕ್ಷಪ್ಪ ಅಗಡಿ ನಿಧನ

    ಮತ್ತೊಂದಡೆ ಅಕ್ಟೋಬರ್ 17ರಂದು ಮಡಿಕೇರಿ ತಾಲೂಕಿನ ತಲಕಾವೇರಿಯಲ್ಲಿ ನಡೆಯಲಿರುವ ಕಾವೇರಿ ತೀರ್ಥೋದ್ಭವ ಹಿನ್ನೆಲೆ ಅಕ್ಟೋಬರ್ 16ರ ಬೆಳಗ್ಗೆ 6 ಗಂಟೆಯಿಂದ 18ರ ಬೆಳಗ್ಗೆ 6 ಗಂಟೆಯವರೆಗೆ ಭಾಗಮಂಡ ಠಾಣಾ ಸರಹದ್ದಿನ 20 ಕಿ.ಮೀ. ವ್ಯಾಪ್ತಿಯೊಳಗೆ ಬರುವ (ಚೇರಂಬಾಣೆ ಸೇರಿದಂತೆ) ಎಲ್ಲಾ ಗ್ರಾಮಗಳಲ್ಲಿರುವ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್ ಕ್ಲಬ್, ಹೊಟೇಲ್‍ಗಳಲ್ಲಿ ಮದ್ಯ ಮಾರಾಟ ನಿಷೇಧಿಸಿರುವುದಾಗಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿಂದು ಹಲವೆಡೆ ವಿದ್ಯುತ್ ಕಡಿತ – ಬೆಸ್ಕಾಂನಿಂದ ಮಾಹಿತಿ

  • ನೀರು ಕುಡಿಯಲು ಬಂದು ಅಕ್ರಮ ವಿದ್ಯುತ್‍ಗೆ ವ್ಯಕ್ತಿ ಬಲಿ

    ನೀರು ಕುಡಿಯಲು ಬಂದು ಅಕ್ರಮ ವಿದ್ಯುತ್‍ಗೆ ವ್ಯಕ್ತಿ ಬಲಿ

    – ಬಚಾವಾಗಲು ಶವ ಬಿಸಾಡಿದ ಕೇರಳದ ದಂಪತಿ!

    ಚಾಮರಾಜನಗರ: ಜಮೀನಿನ ಬೆಳೆ ರಕ್ಷಣೆಗೆ ಹಾಯಿಸಿದ್ದ ಅಕ್ರಮ ವಿದ್ಯುತ್‍ಗೆ ನೀರು ಕುಡಿಯಲು ಬಂದ ವ್ಯಕ್ತಿಯೊಬ್ಬರು ಬಲಿಯಾದ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಕಗ್ಗಳದಹುಂಡಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಶಿವಪ್ಪ(57) ಮೃತ ದುರ್ದೈವಿ. ಕೇರಳದ ವೈನಾಡಿನ ಅಬ್ದುಲ್ ಸುಕುರ್ ಎನ್ನುವವರು ಗ್ರಾಮದಲ್ಲಿ ಜಮೀನನ್ನು ಗುತ್ತಿಗೆ ಪಡೆದು ವ್ಯವಸಾಯ ಮಾಡುತ್ತಿದ್ದು. ಜಮೀನಿನ ಬೆಳೆ ರಕ್ಷಣೆಗೆ ಅಕ್ರಮವಾಗಿ ವಿದ್ಯುತ್ ಹಾಯಿಸಿದ್ದರು. ಈ ವೇಳೆ ದನ ಮೇಯಿಸುತ್ತಿದ್ದ ಶಿವಪ್ಪ ನೀರು ಕುಡಿಯಲು ಅಬ್ದುಲ್ ಸುಕುರ್ ಜಮೀನಿಗೆ ತೆರಳಿದಾಗ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ:  ನಾಗಮಂಗಲದ ಸರ್ಕಾರಿ ಕಾಲೇಜಿನ 28 ವಿದ್ಯಾರ್ಥಿನಿಯರಿಗೆ ಕೊರೊನಾ

    ಶಿವಪ್ಪ ಮೃತಪಟ್ಟಿರುವುದನ್ನು ಗಮನಿಸಿದ ಸುಕುರ್ ದಂಪತಿ ಅವರ ಶವವನ್ನು ಜಮೀನಿನಿಂದ 30 ಅಡಿ ದೂರದ ಬೇಲಿ ಬಳಿ ಬಿಸಾಡಿ ತಮಗೇನು ಗೊತ್ತಿಲ್ಲದಂತೆ ಸುಮ್ಮನಾಗಿದ್ದಾರೆಂದು ಮೃತನ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿ, ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಇದನ್ನೂ ಓದಿ:  ರಾತ್ರಿ ರಾಜಕಾರಣ ಮಾಡುವ ಸಂಸ್ಕೃತಿ ಬಿಜೆಪಿಯದ್ದಲ್ಲ ಕಾಂಗ್ರೆಸ್ಸಿನದ್ದು: ಸಂಜಯ್ ಪಾಟೀಲ್

    ಈ ಹಿನ್ನೆಲೆ ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ಸುಕರ್ ದಂಪತಿ ವಿರುದ್ಧ ಕೇಸ್ ದಾಖಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

  • ರಾತ್ರೋರಾತ್ರಿ ಪ್ರತಿಷ್ಠಾಪಿಸಿದ್ದ ವಿಶ್ವಗುರುಬಸವಣ್ಣ ಮೂರ್ತಿ ತೆರವು

    ರಾತ್ರೋರಾತ್ರಿ ಪ್ರತಿಷ್ಠಾಪಿಸಿದ್ದ ವಿಶ್ವಗುರುಬಸವಣ್ಣ ಮೂರ್ತಿ ತೆರವು

    ಹಾವೇರಿ: ರಾತ್ರೋರಾತ್ರಿ ಪ್ರತಿಷ್ಠಾಪನೆ ಆಗಿದ್ದ ಬಸವಣ್ಣನ ಮೂರ್ತಿ ತೆರವು ಮಾಡಿದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಸೋಮಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪ್ರಮುಖ ವೃತ್ತದಲ್ಲಿ ಭಾನುವಾರ ರಾತ್ರಿ ಬಸವಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದರು.

    basavanna

    ರಾಜಕೀಯ ನಾಯಕರ ಮೂರ್ತಿ ಪ್ರತಿಷ್ಠಾಪನೆಗೆ ಯೋಜನೆ ರೂಪಿಸಿಲಾಗಿದೆ ಅಂದುಕೊಂಡು ಗ್ರಾಮದ ಕೆಲವರು ಬಸವಣ್ಣನ ಮೂರ್ತಿ ಪ್ರತಿಷ್ಠಾಪನೆಯನ್ನು ಮಾಡಿದ್ದರು. ಸ್ಥಳಕ್ಕೆ ಹಾವೇರಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರು ಭೇಟಿ ನೀಡಿ ಯಾವುದೇ ಮೂರ್ತಿ ಸ್ಥಾಪನೆ ಮಾಡಬೇಕಾದರೆ ಅನುಮತಿ ಪಡೆಯಬೇಕು. ಯಾರು ಬೇಕಾದರೂ ಮೂರ್ತಿ ಸ್ಥಾಪನೆ ಮಾಡಲು ಆಗುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ರಾತ್ರಿಯೆಲ್ಲಾ ಸುರಿದ ಮಳೆ – ಜೈನ್ ಆಸ್ಪತ್ರೆಗೆ ನುಗ್ಗಿದ ನೀರು

    basavanna

    ಸರ್ಕಾರದ ಅನುಮತಿ ಪಡೆದು ಗೌರವಯುತವಾಗಿ ಮೂರ್ತಿ ಪ್ರತಿಷ್ಠಾಪನೆ ಮಾಡೋಣ ಅಂತಾ ತಿಳಿ ಹೇಳಿ ಬಸವಣ್ಣನ ಮೂರ್ತಿಯನ್ನು ತೆರವು ಮಾಡಿಸಿದ್ದಾರೆ. ಭಾನುವಾರ ರಾತ್ರಿ ಪ್ರತಿಷ್ಠಾಪನೆ ಆಗಿದ್ದ ಮೂರ್ತಿಯನ್ನು ಸೋಮವಾರ ರಾತ್ರಿ ಅಧಿಕಾರಿಗಳು ತೆರವು ಮಾಡಿಸಿ, ಮೂರ್ತಿ ಪ್ರತಿಷ್ಠಾಪನೆ ಗಲಾಟೆಗೆ ತೆರೆ ಎಳೆದಿದ್ದಾರೆ. ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಕಾಲಿನಲ್ಲಿ ತುಳಿಯುವುದಲ್ಲದೆ ನೆಕ್ಕಿ ರಸ್ಕ್ ಪ್ಯಾಕ್ – ವೀಡಿಯೋ ವೈರಲ್

  • ವಿಸರ್ಜನೆ ಸಂಬಂಧ ಜಿಲ್ಲಾಡಳಿತ, ಗಣಪತಿ ಮಂಡಳಿ ನಡುವೆ ಜಟಾಪಟಿ

    ವಿಸರ್ಜನೆ ಸಂಬಂಧ ಜಿಲ್ಲಾಡಳಿತ, ಗಣಪತಿ ಮಂಡಳಿ ನಡುವೆ ಜಟಾಪಟಿ

    ಚಾಮರಾಜನಗರ: ವಿದ್ಯಾ ಗಣಪತಿ ವಿಸರ್ಜನಾ ಮಹೋತ್ಸವ ಕಗ್ಗಂಟಾಗಿದ್ದು, ಜಿಲ್ಲಾಡಳಿತ ಹಾಗೂ ವಿದ್ಯಾಗಣಪತಿ ಮಂಡಳಿ ನಡುವೆ ಜಟಾಪಟಿ ನಡೆಯುತ್ತಿದೆ.

    ನಿಗಧಿಯಾಗಿದ್ದಂತೆ ಇಂದು ಗಣೇಶ ವಿಸರ್ಜನೆ ನಡೆಯಬೇಕಿತ್ತು. ಆದರೆ ಜಿಲ್ಲಾಧಿಕಾರಿ ಮೆರವಣಿಗೆ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಈ ಪರಿಣಾಮ ಮೆರವಣಿಗೆ ಇಲ್ಲದೆ ವಿಸರ್ಜನೆ ಮಾಡದಿರಲು ವಿದ್ಯಾಗಣಪತಿ ಮಂಡಳಿ ನಿರ್ಧಾರ ಮಾಡಿದ್ದು, ಅನಿರ್ದಿಷ್ಟಾವಧಿವರೆಗೆ ಗಣಪತಿ ವಿಸರ್ಜನೆ ಮುಂದೂಡಿದೆ. ಇದನ್ನೂ ಓದಿ:  ಆನೆ ಓಡಿಸಲು ಹೋದ ವ್ಯಕ್ತಿ ನಾಪತ್ತೆ-ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ

    ಕೋವಿಡ್ ನಿಯಮಗಳೊಂದಿಗೆ ಸರಳ ಮೆರವಣಗೆಗೆ ಜಿಲ್ಲಾಡಳಿತ ಸಮ್ಮತಿ ಸೂಚಿಸಿತ್ತು. ಆದರೆ ಏಕಾಏಕಿ ಮೆರವಣಿಗೆ ನಿಷೇಧ ಮಾಡಲಾಗಿದ್ದು, ಜಿಲ್ಲಾಧಿಕಾರಿಗಳು ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ವಿದ್ಯಾಗಣಪತಿ ಮಂಡಳಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕೋವಿಡ್ ನಿಯಮಗಳೊಂದಿಗೆ ಸರಳವಾಗಿ ಮೆರವಣಿಗೆ ಮೂಲಕ ವಿಸರ್ಜನೆಗೆ ಜಿಲ್ಲಾಡಳಿತ ಒಪ್ಪಿಕೊಂಡಿತ್ತು. ಆದರೆ ಈಗ ಏಕಾಏಕಿ ಜಿಲ್ಲಾಡಳಿತ ಮೆರವಣಿಗೆ ನಿಷೇಧ ಮಾಡಿದ್ದು, ಲಕ್ಷಾಂತರ ಹಿಂದೂಗಳ ಭಾವನೆಗೆ ಧಕ್ಕೆ ಉಂಟುಮಾಡಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮೇಲಾಧಿಕಾರಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಆರೋಗ್ಯ ನಿರೀಕ್ಷಕ

    ಈ ಹಿನ್ನೆಲೆ ಮಂಡಳಿ ಅಧ್ಯಕ್ಷ ಚಿಕ್ಕರಾಜು ಮೆರವಣಿಗೆಗೆ ಅವಕಾಶ ನೀಡುವವರೆಗೂ ಗಣಪತಿ ವಿಸರ್ಜನೆ ಮಾಡುವುದಿಲ್ಲ. ಎಷ್ಟು ದಿನವಾದರು ಸರಿ ಎಂದು ಹೇಳಿದ್ದಾರೆ.

  • ಬೆಳಗಾವಿಯಲ್ಲಿ ದೇವಸ್ಥಾನಗಳ ತೆರವುಗೊಳಿಸದಂತೆ ಜಿಲ್ಲಾಧಿಕಾರಿಗಳಿಗೆ ಮನವಿ

    ಬೆಳಗಾವಿಯಲ್ಲಿ ದೇವಸ್ಥಾನಗಳ ತೆರವುಗೊಳಿಸದಂತೆ ಜಿಲ್ಲಾಧಿಕಾರಿಗಳಿಗೆ ಮನವಿ

    ಬೆಳಗಾವಿ: ನಗರದಲ್ಲಿ ಯಾವುದೇ ಕಾರಣಕ್ಕೂ ಹಿಂದೂ ದೇವಸ್ಥಾನಗಳನ್ನು ತೆರವುಗೊಳಿಸಬಾರದು ಎಂದು ಆಗ್ರಹಿಸಿ ಬೆಳಗಾವಿ ನಗರ ದೇವಸ್ಥಾನ ಮಂಡಳದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.

    ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 46 ಧಾರ್ಮಿಕ ಕೇಂದ್ರಗಳಿದ್ದು, ಅವುಗಳಲ್ಲಿ ಈಗಾಗಲೇ 17 ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸಲಾಗಿದೆ. ಬೆಳಗಾವಿ ನಗರ ದೇವಸ್ಥಾನ ಮಂಡಳ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ಹಿಂದೂ ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸಬಾರದು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು. ಇದನ್ನೂ ಓದಿ: ಚಿತ್ರದುರ್ಗದ ಮಕ್ಕಳಲ್ಲಿ ವಿಚಿತ್ರ ರೋಗ – ಸರ್ಕಾರಿ ಜಿಲ್ಲಾಸ್ಪತ್ರೆ ಹೌಸ್ ಫುಲ್

    ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ರಮಾಕಾಂತ್ ಕೊಂಡೂಸ್ಕರ್, ಒಂದು ವೇಳೆ ಹಿಂದೂ ದೇವಸ್ಥಾನಗಳನ್ನು ತೆರವುಗೊಳಿಸಲು ಮುಂದಾದ್ರೆ ಲಕ್ಷಾಂತರ ಹಿಂದೂಗಳು ಬೀದಿಗೆ ಬಂದು ಹೋರಾಟ ಮಾಡಲಿದ್ದಾರೆ. ಹೀಗಾಗಿ ಮುಂದೆ ಆಗುವ ಅನಾಹುತಗಳಿಗೆ ಜಿಲ್ಲಾಡಳಿತವೇ ನೇರ ಹೊಣೆಯಾಗುತ್ತದೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ಸರ್ವೋಚ್ಚ ನ್ಯಾಯಾಲಯದ ತೀರ್ಮಾನಕ್ಕೆ ಬೆಲೆ ಕೊಡುವುದರ ಜೊತೆಗೆ ಧಾರ್ಮಿಕ ಕ್ಷೇತ್ರಗಳಿಗೆ ಬೆಲೆ ಕೊಡಬೇಕಿದೆ: ಎಸ್ಡಿಪಿಐ

    ಈ ಸಂದರ್ಭದಲ್ಲಿ ಬೆಳಗಾವಿ ನಗರ ದೇವಸ್ಥಾನ ಮಂಡಳದ ಅಧ್ಯಕ್ಷ ರಂಜೀತ್ ಚವ್ಹಾಣ್ ಪಾಟೀಲ್, ಪದಾಧಿಕಾರಿಗಳಾದ ಸಾಗರ ಪಾಟೀಲ್, ವಿ.ಎಮ್.ಹಲಗೇಕರ್, ಎಂ.ಬಿ.ಬಾರದೇಶಕರ್, ವಿಕಾಸ ಕಲಘಟಗಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

  • ಕೊಡಗಿನಲ್ಲಿ ವ್ಯಾಕ್ಸಿನ್ ಪಡೆದ 953 ಮಂದಿಗೆ ಮತ್ತೆ ಕೊರೊನಾ

    ಕೊಡಗಿನಲ್ಲಿ ವ್ಯಾಕ್ಸಿನ್ ಪಡೆದ 953 ಮಂದಿಗೆ ಮತ್ತೆ ಕೊರೊನಾ

    ಮಡಿಕೇರಿ: ಕೊರೊನಾ ವ್ಯಾಕ್ಸಿನ್ ಪಡೆದಿದ್ದರೂ ಕೂಡ ಕೊಡಗಿನಲ್ಲಿ 953 ಮಂದಿಗೆ ಮತ್ತೆ ಕೊರೊನಾ ಸೋಂಕು ತಗುಲಿದೆ.

    ಮೊದಲ ಡೋಸ್ ವ್ಯಾಕ್ಸಿನ್ ಪಡೆದು ಹೇಗೆ ಬೇಕೋ, ಹಾಗೇ ಓಡಾಕೊಂಡಿದ್ದ ಕೊಡಗಿನ 953 ಜನರಿಗೆ ಮತ್ತೆ ಮಹಾಮಾರಿ ಕೊರೊನಾ ವಕ್ಕರಿಸಿದೆ. ಕೊರೊನಾ ಸೋಂಕಿನ ಲಕ್ಷಣ ಕಂಡು ಬಂದವರನ್ನು ಪರೀಕ್ಷಿಸಿದಾಗ ಅವರಿಗೆಲ್ಲಾ ಸೋಂಕು ಇರುವುದು ದೃಢಪಟ್ಟಿದೆ. ಇದೀಗ ಸೋಂಕಿತರಿಗೆ ಆಸ್ಪತ್ರೆ ಮತ್ತು ಹೋಂ ಐಸೋಲೇಷನ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಎಲ್ಲರೂ ಗುಣಮುಖರಾಗಿದ್ದಾರೆ. ಅಲ್ಲದೇ ಎರಡು ಡೋಸ್ ವ್ಯಾಕ್ಸಿನ್ ಪಡೆದವರಿಗೆ ಇಲ್ಲಿಯವರೆಗೂ ಸೋಂಕು ದೃಢಪಟ್ಟ ಪ್ರಕರಣಗಳಿಲ್ಲ ಎಂದು ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹೇಳಿದ್ದಾರೆ. ಇದನ್ನೂ ಓದಿ: ಕಲಬುರಗಿ ಪಾಲಿಕೆ ಗದ್ದುಗೆ ಹಿಡಿಯಲು ಏನು ತಂತ್ರಗಾರಿಕೆ ಮಾಡ್ಬೇಕೋ ಮಾಡ್ತೇವೆ: ಜೋಶಿ

    Madikeri DC

    ಈಗಾಗಲೇ ಕೊರೊನಾ ಮಹಾಮಾರಿ ಮೂರನೇ ಅಲೆ ಹರಡುವ ಆತಂಕದಲ್ಲಿ ಜಿಲ್ಲೆಯ ಗಡಿಭಾಗದಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ. ಕೇರಳದಿಂದ ಬರುವವರಿಗೆ ಕಟ್ಟುನಿಟ್ಟಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ಸೂಚನೆ ನೀಡಿದೆ. ಆದರೂ ಈಗಾಗಲೇ ವ್ಯಾಕ್ಸಿನೇಷನ್ ಪಡೆದವರಿಗೆ ಸೋಂಕು ಮತ್ತೆ ಹರಡುತ್ತಿದೆ. ಅಷ್ಟೇ ಅಲ್ಲದೇ ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಮಾಣ ಶೇಕಡಾ 0.5 ಒಳಗೆ ಇತ್ತು. ಆದರೆ ಇಂದು ಮತ್ತೆ ಜಿಲ್ಲೆಯಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿದ್ದು, ಪಾಸಿಟಿವ್ ದರ ಶೇಕಡಾ 2.84 ಏರಿಕೆಯಾಗಿದೆ.  ಇದನ್ನೂ ಓದಿ: ಅರಣ್ಯ ಇಲಾಖೆಯ ಹುತಾತ್ಮ ಅಧಿಕಾರಿ, ಸಿಬ್ಬಂದಿಗೆ ಗೌರವ ನಮನ ಸಲ್ಲಿಕೆ

    ಒಟ್ಟಾರೆ ಮುಂದಿನ ದಿನಗಳಲ್ಲಿ ತಮಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಓಡಾಡಿಕೊಂಡಿದ್ದ ಜನರಿಗೆ ಇದೀಗಾ ಮತ್ತೆ ಕೊರೊನಾ ಸ್ಫೋಟಗೊಂಡಿರುವುದು ಕಂಡು ಆತಂಕಕ್ಕೆ ಒಳಗಾಗುತ್ತಿದ್ದಾರೆ.

  • ಬಾಲ್ಯ ವಿವಾಹ ತಡೆಯುವಂತೆ ಜಿಲ್ಲಾಧಿಕಾರಿ ಸೂಚನೆ

    ಬಾಲ್ಯ ವಿವಾಹ ತಡೆಯುವಂತೆ ಜಿಲ್ಲಾಧಿಕಾರಿ ಸೂಚನೆ

    ತುಮಕೂರು: ಜಿಲ್ಲೆಯಲ್ಲಿ ಬಾಲ್ಯವಿವಾಹಗಳು ನಡೆಯದಂತೆ ತಡೆಯಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ, ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ಸಂರಕ್ಷಣಾ ಅಧಿನಿಯಮ 2005ರಡಿಯ ಮತ್ತು ಸಖಿ ಯೋಜನೆಯ ಅನುಷ್ಠಾನ ಕುರಿತ ಜಿಲ್ಲಾ ಸಮನ್ವಯ ಸಮಿತಿ ಹಾಗೂ ವರದಕ್ಷಿಣೆ ನಿಷೇಧ ಕಾಯ್ದೆಯ ಸಮರ್ಪಕ ಅನುಷ್ಠಾನ, ಸ್ಥೈರ್ಯನಿಧಿ ಯೋಜನೆಯ ಸಮರ್ಪಕ ಅನುಷ್ಠಾನ ಕುರಿತು ಜಿಲ್ಲಾ ಸಮಿತಿ ಮತ್ತು ಜಿಲ್ಲಾ ಮಟ್ಟದ ವಿಧವಾ ಕೋಶ ಮತ್ತು ಶೆಲ್ಟರ್ ಹೋಮ್ಸ್ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮ ಮಟ್ಟದ ಅಧಿಕಾರಿಗಳು ಸೇರಿದಂತೆ ಬೀಟ್ ಪೊಲೀಸರು ಬಾಲ್ಯ ವಿವಾಹ ತಡೆಯವ ಕಾರ್ಯಕ್ಕೆ ಮೊದಲಾದ್ಯತೆ ನೀಡಬೇಕು ಎಂದು ನಿರ್ದೇಶಿಸಿದರು.

    ಸಾಮಾಜಿಕ ಪಿಡುಗಾಗಿ ಕಾಡುತ್ತಿರುವ ಹಾಗೂ ಸಮಾಜದಲ್ಲಿ ಅನಿಷ್ಟ ಪದ್ಧತಿಗಳಲ್ಲಿ ಒಂದಾದ ಬಾಲ್ಯವಿವಾಹಗಳನ್ನು ತಡೆಯಲು ಸರ್ಕಾರವು ಎಲ್ಲಾ ಇಲಾಖೆಗಳ ಗ್ರಾಮ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳನ್ನು ಬಾಲ್ಯವಿವಾಹ ನಿಷೇಧ ತಡೆ ಅಧಿಕಾರಿಗಳನ್ನಾಗಿ ನೇಮಕ ಮಾಡಿದೆ. ಹಾಗಾಗಿ ಬಾಲ್ಯವಿವಾಹ ತಡೆಯುವುದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜವಾಬ್ದಾರಿ ಮಾತ್ರವಲ್ಲ. ಎಲ್ಲಾ ಇಲಾಖೆಗಳ ಅಧಿಕಾರಿಗಳು ಇದರ ಜವಾಬ್ದಾರಿ ಹೊತ್ತು ಬಾಲ್ಯವಿವಾಹಕ್ಕೆ ಕಡಿವಾಣ ಹಾಕಬೇಕು. ವಿಶೇಷವಾಗಿ ಶಾಲೆಗಳ ಶಾಲಾ ಮುಖ್ಯೋಪಾಧ್ಯಾಯರು, ಪಿಡಿಒ, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯ ಪೆÇಲೀಸ್ ಸಬ್ ಇನ್ಸ್ ಪೆಕ್ಟರ್ ಗಳು ಬಾಲ್ಯವಿವಾಹ ತಡೆಗೆ ಶ್ರಮಿಸಬೇಕು. ಬಾಲ್ಯ ವಿವಾಹ ನಡೆದಲ್ಲಿ ಅಲ್ಲಿನ ವ್ಯಾಪ್ತಿಗೆ ಸಂಬಂಧಿಸಿದ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಪ್ರತಿಯೊಂದು ಗ್ರಾಮಗಳಲ್ಲಿ ಬಾಲ್ಯವಿವಾಹ ನಡೆಸದಂತೆ ಅರಿವು ಮೂಡಿಸಿ, ತಾಲೂಕು ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪಿಡಿಒ, ಗ್ರಾಮ ಲೆಕ್ಕಾಧಿಕಾರಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಶ್ರಮಿಸಬೇಕೆಂದು ಸೂಚಿಸಿದರು.

    ಬಾಲ್ಯ ವಿವಾಹ ಮಾಡುವುದರಿಂದ ಹೆಣ್ಣು ಮಗುವಿನ ಆರೋಗ್ಯ ಹಾಗೂ ಮಾನಸಿಕ ಸ್ಥಿತಿಯ ಮೇಲೆ ತೀವ್ರವಾದ ಪರಿಣಾಮ ಉಂಟಾಗುತ್ತದೆ. ಇದನ್ನು ತಪ್ಪಿಸಬೇಕಾದರೆ ಬಾಲ್ಯ ವಿವಾಹ ನಡೆಯುವ ಮುನ್ನವೇ ಕ್ರಮ ಕೈಗೊಂಡು ಅದನ್ನು ತಡೆಯುವುದು ಅತ್ಯವಶ್ಯಕ. ಬಾಲ್ಯವಿವಾಹವನ್ನು ಪೋತ್ಸಾಹಿಸುವ ಅಥವಾ ಒತ್ತಾಯಪೂರ್ವಕವಾಗಿ ಮದುವೆ ನಡೆಸುವ ಪೋಷಕರ ಮೇಲೆ ಹಾಗೂ ಒಂದು ವೇಳೆ ಹುಡುಗ ಪ್ರಾಪ್ತ ವಯಸ್ಸಿನವನಾಗಿದ್ದರೆ ಅವನ ಮೇಲೂ ಸಹ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.

    ಬಾಲ್ಯ ವಿವಾಹ ತಡೆ, ಕೌಟುಂಬಿಕ ದೌರ್ಜನ್ಯ, ವರದಕ್ಷಿಣೆ ನಿಷೇಧ ಹಾಗೂ ಮಹಿಳಾ ಅಭಿವೃದ್ಧಿ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಜೊತೆಗೆ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗಿ ಕಂಡು ಬರುವ ಸಮುದಾಯಗಳಿಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದು ತಿಳಿಸಿದರು. ಬಾಲ್ಯ ವಿವಾಹ ನಿಷೇಧ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ ಸೇರಿದಂತೆ ಇತರೆ ಕಾಯ್ದೆಯಡಿ ದಾಖಲಾಗಿ ಬಾಕಿ ಉಳಿದಿರುವ ಪ್ರಕರಣಗಳನ್ನು ಸಕಾಲಕ್ಕೆ ಇತ್ಯರ್ಥಗೊಳಿಸಬೇಕು ಎಂದು ಸೂಚಿಸಿದರು.

    ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಎಸ್.ನಟರಾಜು ಮಾತನಾಡಿ, 2021-22ನೇ ಸಾಲಿನ ಜೂನ್ ಅಂತ್ಯಕ್ಕೆ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ 31 ಬಾಲ್ಯ ವಿವಾಹ ಪ್ರಕರಣ ದಾಖಲಾಗಿದ್ದು, ಅವುಗಳಲ್ಲಿ 28 ಬಾಲ್ಯವಿವಾಹಗಳನ್ನು ತಡೆಹಿಡಿಯಲಾಗಿದೆ. ಮೂರು ಬಾಲ್ಯವಿವಾಹ ನಡೆದಿದ್ದು, ಈ ಬಗ್ಗೆ ಎಫ್ ಐಆರ್ ದಾಖಲಾಗಿದೆ ಎಂದರು.

    ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಯಡಿ 20 ಪ್ರಕರಣಗಳು ದಾಖಲಾಗಿದ್ದು, ಎರಡು ಪ್ರಕರಣಗಳು ಇತ್ಯರ್ಥಗೊಂಡಿವೆ. ಉಳಿದಂತೆ ಸಂರಕ್ಷಣಾಧಿಕಾರಿಗಳ ಹಂತದಲ್ಲಿ 16, ನ್ಯಾಯಾಲಯದ ಹಂತದಲ್ಲಿ 2 ಪ್ರಕರಣಗಳಿವೆ. ಸಾಂತ್ವಾನ ಯೋಜನೆಯಡಿ ಕೌಟುಂಬಿಕ ಕಲಹದಲ್ಲಿ 142 ಪ್ರಕರಣಗಳು ದಾಖಲಾಗಿದ್ದು, 82 ಪ್ರಕರಣಗಳು ಇತ್ಯರ್ಥಗೊಂಡು 60 ಪ್ರಕರಣಗಳು ಬಾಕಿ ಇವೆ. ವರದಕ್ಷಿಣೆ ನಿಷೇಧ ಕಾಯ್ದೆಯಡಿ 23 ಪ್ರಕರಣಗಳು ದಾಖಲಾಗಿದ್ದು, 7 ಪ್ರಕರಣಗಳು ವಿಲೇವಾರಿಯಾಗಿದೆ ಹಾಗೂ 16 ಬಾಕಿ ಉಳಿದಿವೆ ಎಂದು ತಿಳಿಸಿದರು.

    ಸಭೆಯಲ್ಲಿ ಸ್ವಯಂ ಸಂಸ್ಥೆಗಳ ಮುಖ್ಯಸ್ಥರು, ಪ್ರತಿನಿಧಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು. ಇದನ್ನೂ ಓದಿ:ಭಟ್ಕಳದಲ್ಲಿ ಚೌಥನಿ ನದಿ ಭರ್ತಿ – ಹಲವು ಮನೆಗಳು ಜಲಾವೃತ