Tag: district hospital

  • ಯುವತಿಗೆ ಬಣ್ಣ ಹಚ್ಚಿದ್ದಕ್ಕೆ ಕಾನೂನು ವಿದ್ಯಾರ್ಥಿ ಕಿಡ್ನಾಪ್‌ಗೈದು ಥಳಿತ – ಆರೋಪಿಗಳ ಬಂಧನ

    ಯುವತಿಗೆ ಬಣ್ಣ ಹಚ್ಚಿದ್ದಕ್ಕೆ ಕಾನೂನು ವಿದ್ಯಾರ್ಥಿ ಕಿಡ್ನಾಪ್‌ಗೈದು ಥಳಿತ – ಆರೋಪಿಗಳ ಬಂಧನ

    ಕೋಲಾರ: ಯುವತಿಗೆ ಬಣ್ಣ ಹಚ್ಚಿದ ಹಿನ್ನೆಲೆ, ಕಾನೂನು ವಿದ್ಯಾರ್ಥಿಯನ್ನು ಕಿಡ್ನಾಪ್ (Kidnap) ಮಾಡಿ ಹಲ್ಲೆ (Attack) ಮಾಡಿರುವ ಘಟನೆ ಕೋಲಾರದ (Kolar) ಬೆಳಮಾರನಹಳ್ಳಿಯಲ್ಲಿ ನಡೆದಿದೆ.

    ಅಂತಿಮ ಕಾನೂನು (Law) ವಿದ್ಯಾರ್ಥಿ ಬಿ.ಸಿ.ಮಧು ಹಲ್ಲೆಗೊಳಗಾದ ಯುವಕ. ಹೋಳಿ ಹಬ್ಬದ ದಿನದಂದು ತನ್ನದೇ ಗ್ರಾಮದ ಎಂಜಿನಿಯರ್ (Engineer) ವಿದ್ಯಾರ್ಥಿನಿ ಅನುಪ್ರಿಯಾಗೆ ಮಧು ಬಣ್ಣ ಹಚ್ಚಿದ್ದ. ಇದರಿಂದ ಕೋಪಗೊಂಡ ಅನುಪ್ರಿಯಾ ಆತನ ಮೇಲೆ ಹಲ್ಲೆ ನಡೆಸಲು ಸುಪಾರಿ ನೀಡಿದ್ದಾಳೆ. ಇದನ್ನೂ ಓದಿ: 4 ದಿನದ ನವಜಾತ ಶಿಶುವನ್ನು ತುಳಿದು ಸಾಯಿಸಿದ ಪೊಲೀಸ್

    ಅನುಪ್ರಿಯಾ ಅದೇ ಗ್ರಾಮದವಳಾಗಿದ್ದು ಮಧುವಿನ ಪಕ್ಕದ ಮನೆಯಲ್ಲಿ ವಾಸವಿದ್ದಳು. ಈ ಸಲುಗೆಯಿಂದ ಮಧು ಹೋಳಿ ಹಬ್ಬದ ದಿನದಂದು ಕಾಲೇಜಿಗೆ ಬಸ್‌ನಲ್ಲಿ ಹೋಗುವ ಸಂದರ್ಭ ಆಕೆಗೆ ಬಣ್ಣ ಹಾಕಿದ್ದಾನೆ. ಇದರಿಂದ ಕೋಪಗೊಂಡ ಅನುಪ್ರಿಯಾ ಪಕ್ಕದ ದಾನಹಳ್ಳಿ ಗ್ರಾಮದ ಡಿಎನ್‌ಡಿ ಮಧು ಮತ್ತು ಆತನ ಸಹಚರರಿಗೆ ಸುಪಾರಿ ಕೊಟ್ಟು ಮಧುವಿಗೆ ಹೊಡೆಯುವಂತೆ ತಿಳಿಸಿದ್ದಾಳೆ. ಸುಪಾರಿ ಪಡೆದ ಡಿಎನ್‌ಡಿ ಮಧು ಅದೇ ಗ್ರಾಮದ ಪ್ರಮೋದ್, ಶಿವರಾಜ್, ಸುದರ್ಶನ್ ಅವರ ಸಹಾಯದಿಂದ ಮಧುಗೆ ದೂರವಾಣಿ ಮುಖಾಂತರ ಕರೆ ಮಾಡಿದ್ದಾರೆ.

    ಮಾ.17 ರಂದು ಮನೆಯಲ್ಲಿದ್ದ ಬಿ.ಸಿ.ಮಧು ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಬಳಿಕ ಬೇಕರಿ ಬಳಿ ಕರೆಸಿಕೊಂಡ ಡಿಎನ್‌ಡಿ ಮಧು, ತನ್ನ ಸಹಚರರೊಂದಿಗೆ ಮಧುವನ್ನು ಕಾರಿನಲ್ಲಿ ಕೂರಿಸಿಕೊಂಡು ಗ್ರಾಮದ ಹೊರವಲಯಕ್ಕೆ ಬಂದಿದ್ದಾರೆ. ನಂತರ ದಾನಹಳ್ಳಿ ಮತ್ತು ವಿಶ್ವನಾಥಪುರ ಗ್ರಾಮದ ಮಧ್ಯೆ ಇರುವ ನೀಲಗಿರಿ ತೋಪಿನಲ್ಲಿ ಇಳಿಸಿ ಅಲ್ಲಿಯೇ ಇದ್ದ ನೀಲಗಿರಿ ರೆಂಬೆಗಳಿಂದ ಚೆನ್ನಾಗಿ ಥಳಿಸಿ, ಕಾರಿನ ಹಿಂಭಾಗದ ಡಿಕ್ಕಿಯಲ್ಲಿ ಹಾಕಿಕೊಂಡು ಬಂದಿದ್ದಾರೆ. ಬಳಿಕ ಶೆಡ್‌ವೊಂದರಲ್ಲಿ ಮಧುವನ್ನು ಕೂಡಿ ಹಾಕಿ ಅರೆಬೆತ್ತಲೆಗೊಳಿಸಿ ಮರದ ತುಂಡುಗಳಿಂದ ಮತ್ತು ಟ್ಯೂಬ್‌ಗಳಿಂದ ಹೊಡೆದು ಅಮಾನವೀಯ ಕೃತ್ಯವೆಸಗಿದ್ದಾರೆ. ಸುಮಾರು ಎರಡು ದಿನಗಳವರೆಗೆ ಮಧು ಅವರನ್ನು ಚೆನ್ನಾಗಿ ಥಳಿಸಿದ್ದಾರೆ. ಅಲ್ಲದೇ ಮಧು ಕೈಯಾರೆ ಅವರ ಮನೆಗೆ ಪೋನ್ ಮಾಡಿಸಿ ನಾನು ಧರ್ಮಸ್ಥಳ (Dharmasthala) ಹೋಗುತ್ತಿದ್ದು, ಎರಡು ದಿನಗಳ ಕಾಲ ಮನೆಗೆ ಬರುವುದಿಲ್ಲವೆಂದು ಹೇಳಿಸಿದ್ದಾರೆ. ಇದನ್ನೂ ಓದಿ: ಬೆಡ್‌ರೂಂನಲ್ಲಿ ಮಲಗಿದ್ದ 6 ಅಡಿ ಬುಸ್ ಬುಸ್ ಹಾವು – ಎದ್ನೋ ಬಿದ್ನೋ ಅಂತಾ ಓಡಿದ ಮಹಿಳೆ! 

    ಹಲ್ಲೆಯಿಂದಾಗಿ ಮಾರಣಾಂತಿಕವಾಗಿ ಗಾಯಗೊಂಡ ಮಧುವನ್ನು ಇದೇ ಕಿರಾತಕರು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಇದು ಪೊಲೀಸ್ ಕೇಸ್ ಮಾಡಬೇಕು ಎಂದು ವೈದ್ಯರು ಹೇಳಿದಾಗ ಆತನಿಗೆ ಚಿಕಿತ್ಸೆ ಕೊಡಿಸಿ ಮಾ.19 ರಂದು ಗ್ರಾಮದ ಹೊರವಲಯದಲ್ಲಿ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ. ಯಾರಿಗಾದರೂ ಹೇಳಿದರೆ ನಿನ್ನನ್ನು ಮತ್ತು ಕುಟುಂಬದವರನ್ನ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ತೀವ್ರ ಗಾಯಗೊಂಡ ಮಧು ಮನೆಗೆ ಬಂದಾಗ ಅವರ ಪೋಷಕರು ಕೂಡಲೇ ಆತನನು ಆಸ್ಪತ್ರೆಗೆ ದಾಖಲಿಸಿ ವಿಚಾರಿಸಿದಾಗ ಸತ್ಯ ಬಯಲಿಗೆ ಬಂದಿದೆ. ಗಂಭೀರವಾಗಿ ಗಾಯಗೊಂಡಿರುವ ಮಧು ಕೋಲಾರ ಜಿಲ್ಲಾಸ್ಪತ್ರೆಯಲ್ಲಿ (District Hospital) ಚಿಕಿತ್ಸೆ ಪಡೆಯುತ್ತಿದ್ದಾನೆ. ಇದನ್ನೂ ಓದಿ: ಪೊಲೀಸರ ಭರ್ಜರಿ ಕಾರ್ಯಾಚರಣೆ – ದಾಖಲೆ ಇಲ್ಲದ 9 ಕೆಜಿ ಚಿನ್ನ ಜಪ್ತಿ

    ವೇಮಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಸಿದ್ದಾರೆ. ಈ ಕೃತ್ಯಕ್ಕೆ ಕಾರಣರಾದ ಅನುಪ್ರಿಯಾ ಮತ್ತು ಮತ್ತಿಬ್ಬರನ್ನು ಪೊಲೀಸರು ಬಂದಿಸಿದ್ದು, ಪ್ರಮುಖ ಆರೋಪಿ ಡಿಎನ್‌ಡಿ ಮಧು ಪರಾರಿಯಾಗಿದ್ದಾನೆ. ಒಟ್ಟು 15ಕ್ಕೂ ಹೆಚ್ಚು ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಜನಿಕಾಂತ್ ಪುತ್ರಿ ಮನೆಯಲ್ಲಿ ಕಳ್ಳತನ: ಆ ಕಳ್ಳಿ ಕೋಟಿ ರೂಪಾಯಿ ಮನೆಯ ಒಡತಿ

  • ನರ್ಸ್ ವೇಷ ಧರಿಸಿ ಮಗು ಕಿಡ್ನಾಪ್ – ಮರಳಿ ತಾಯಿಯ ಮಡಿಲು ಸೇರಿದ ನವಜಾತ ಶಿಶು

    ನರ್ಸ್ ವೇಷ ಧರಿಸಿ ಮಗು ಕಿಡ್ನಾಪ್ – ಮರಳಿ ತಾಯಿಯ ಮಡಿಲು ಸೇರಿದ ನವಜಾತ ಶಿಶು

    ಹಾವೇರಿ: ನರ್ಸ್ ವೇಷ ಧರಿಸಿ ಬಂದು ಒಂದು ದಿನದ ನವಜಾತ ಶಿಶುವನ್ನು ಕದ್ದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ (Haveri) ಮಹಿಳಾ ಠಾಣಾ ಪೊಲೀಸರು ಮಗುವನ್ನು ಪತ್ತೆ ಹಚ್ಚಿದ್ದಾರೆ. ಶನಿವಾರ ಸಂಜೆ ಐದು ಗಂಟೆಯಿಂದ ಆರೂವರೆ ಗಂಟೆಯ ಸಮಯದಲ್ಲಿ, ಮಗುವಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವುದಾಗಿ ಹೇಳಿ ಅಜ್ಜಿಯನ್ನು ಯಾಮಾರಿಸಿ ಮಹಿಳೆ ಮಗುವಿನೊಂದಿಗೆ ಪರಾರಿಯಾಗಿದ್ದಳು.

    ಒಂದು ದಿನದ ಹೆಣ್ಣು ಮಗು ನಾಪತ್ತೆ ಆಗಿದ್ದ ಹಿನ್ನೆಲೆ ಮಗುವಿನ ಅಜ್ಜ ಹಾವೇರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಮಗುವನ್ನು ತೆಗೆದುಕೊಂಡು ಹೋದ ಮಹಿಳೆ ಮತ್ತು ಮಗುವಿನ ಚಹರೆ ಪಟ್ಟಿಯ ಆಧಾರದ ಮೇಲೆ ಮತ್ತು ಜಿಲ್ಲಾಸ್ಪತ್ರೆಯಲ್ಲಿನ (District Hospital) ಸಿಸಿಟಿವಿ (CCTV) ದೃಶ್ಯಾವಳಿಗಳ ಆಧಾರದ ಮೇಲೆ ತನಿಖೆಗೆ ಇಳಿದ ಹಾವೇರಿ ಮಹಿಳಾ ಠಾಣಾ ಪೊಲೀಸರು ನಾಪತ್ತೆಯಾಗಿದ್ದ ಹಸುಗೂಸನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಮಾಡಿ ಹೆತ್ತವರ ಮಡಿಲು ಸೇರುವಂತೆ ಮಾಡಿದ್ದಾರೆ. ಇದನ್ನೂ ಓದಿ: ಹುಟ್ಟೂರಿನ ಮಣ್ಣಲ್ಲಿ ಧ್ರುವನಾರಾಯಣ್ ಲೀನ – ರಾಜಕೀಯದ ಅಜಾತಶತ್ರು ಇನ್ನು ನೆನಪು ಮಾತ್ರ 

    ಮಗುವಿನೊಂದಿಗೆ ಪರಾರಿಯಾಗಿದ್ದ ಮಹಿಳೆ ತಾನು ಈ ಹಿಂದೆ ಬೆಂಗಳೂರಿನಲ್ಲಿ (Bengaluru) ಕೆಲಸ ಮಾಡುತ್ತಿದ್ದೆ ಎಂದು ಹೇಳಿದ್ದಾಳೆ. ಅಲ್ಲದೇ ನರ್ಸ್ ಡ್ರೆಸ್ ಹಾಕಿಕೊಂಡು ಮಗುವನ್ನು ತೆಗೆದುಕೊಂಡು ಹೋಗಿರುವುದಾಗಿಯೂ ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾಳೆ. ಇದನ್ನೂ ಓದಿ: ನರ್ಸ್ ವೇಷ ಧರಿಸಿ ಜಿಲ್ಲಾಸ್ಪತ್ರೆಯಿಂದ ನವಜಾತ ಶಿಶು ಕಳ್ಳತನ

    ತಾನು ಹಾವೇರಿ ನಗರದ ನಾಗೇನಮಟ್ಟಿ (Nagenammati) ನಿವಾಸಿಯಾಗಿದ್ದು, ಐದು ವರ್ಷಗಳಿಂದ ಮಕ್ಕಳಾಗದ ಕಾರಣ ಮಗುವನ್ನು ತೆಗೆದುಕೊಂಡು ಹೋಗಿದ್ದೆ. ಮಗು ನೋಡಿ ಆಸೆಯಾಯಿತು. ಮಗುವನ್ನು ಕಳ್ಳತನ ಮಾಡಿ ಮಣ್ಣು ತಿನ್ನುವ ಕೆಲಸ ಮಾಡಿಬಿಟ್ಟೆ. ಮಗು ಅಳುವುದನ್ನು ನೋಡಿ ರಾತ್ರಿಯೇ ಹೆತ್ತವರಿಗೆ ವಾಪಸ್ ಕೊಡಬೇಕು ಎಂದು ಬಂದೆ. ಆದರೆ ಧೈರ್ಯ ಸಾಕಾಗದ ಕಾರಣ ವಾಪಸ್ ಹೋದೆ ಎಂದು ಪೊಲೀಸರ ಬಳಿ ಬಾಯಿ ಬಿಟ್ಟಿದ್ದಾಳೆ. ಈ ಕುರಿತು ಪೊಲೀಸರು ಇನ್ನಷ್ಟು ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಬೆಂಗಳೂರಿನಿಂದ ಮಂಗಳೂರಿಗೆ ಬೇಗ ತಲುಪಿ!

    ಒಟ್ಟಿನಲ್ಲಿ ಪೊಲೀಸರ ಕಾರ್ಯಾಚರಣೆಯಿಂದ ನಾಪತ್ತೆಯಾಗಿದ್ದ ಮಗು ಕೆಲವೇ ಗಂಟೆಗಳಲ್ಲಿ ಮರಳಿ ತಾಯಿಯ ಮಡಿಲು ಸೇರಿದೆ. ಅಲ್ಪ ಸಮಯದಲ್ಲಿ ಮಗುವನ್ನು ಪತ್ತೆ ಮಾಡಿದ ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಇದನ್ನೂ ಓದಿ: ಲಿಂಗಭೈರವಿ ದೇವಿಯ ಮೋರೆ ಹೋದ ಸಮಂತಾ

  • ನರ್ಸ್ ವೇಷ ಧರಿಸಿ ಜಿಲ್ಲಾಸ್ಪತ್ರೆಯಿಂದ ನವಜಾತ ಶಿಶು ಕಳ್ಳತನ

    ನರ್ಸ್ ವೇಷ ಧರಿಸಿ ಜಿಲ್ಲಾಸ್ಪತ್ರೆಯಿಂದ ನವಜಾತ ಶಿಶು ಕಳ್ಳತನ

    ಹಾವೇರಿ: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವುದಾಗಿ ಯಾಮಾರಿಸಿ ನವಜಾತ ಶಿಶುವನ್ನು (Newborn Baby) ಕಳ್ಳತನ ಮಾಡಿದ ಘಟನೆ ಹಾವೇರಿಯಲ್ಲಿ (Haveri) ನಡೆದಿದೆ.

    ಬ್ಯಾಡಗಿ ತಾಲೂಕಿನ (Byadagi Taluk) ಗುಡ್ಡದಹೊಸಳ್ಳಿ ಗ್ರಾಮದ ರಂಜಿತಾ ಕುಂಬಾರ ಎಂಬುವವರು ಶುಕ್ರವಾರ ಸಂಜೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ (District Hospital) ಹೆಣ್ಣುಮಗುವಿಗೆ ಜನ್ಮ ನೀಡಿದ್ದರು. ಶನಿವಾರ ಸಂಜೆ ಮಹಿಳೆಯೊಬ್ಬಳು ನರ್ಸ್ ವೇಷದಲ್ಲಿ ಬಂದು ಮಗುವಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವುದಾಗಿ ಹೇಳಿ ಶಿಶುವಿನ ಅಜ್ಜಿಯನ್ನು ಯಾಮಾರಿಸಿ ಮಗುವನ್ನು ಕಳ್ಳತನ ಮಾಡಿದ್ದಾಳೆ. ಇದನ್ನೂ ಓದಿ: ಕಾಂಗ್ರೆಸ್ ನನ್ನ ಸಮಾಧಿ ಮಾಡುವ ಕನಸು ಕಾಣುತ್ತಿದೆ: ಮೋದಿ ವಾಗ್ದಾಳಿ

    ಶಿಶುವಿಗೆ ಚಿಕಿತ್ಸೆ ಕೊಡಿಸುವುದಾಗಿ ಹೇಳಿದ ನರ್ಸ್ ವೇಷಧಾರಿ, ಅಜ್ಜಿ ಹಾಗೂ ಶಿಶುವನ್ನು ನಗರದ ವಿವಿಧ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಳು. ಮರಳಿ ಜಿಲ್ಲಾಸ್ಪತ್ರೆಗೆ ಬರುವ ಸಂದರ್ಭ ಮಾರ್ಗಮಧ್ಯದಲ್ಲಿ ಹಣ್ಣು ತೆಗೆದುಕೊಂಡು ಬರುವುದಾಗಿ ಅಜ್ಜಿಯನ್ನು ನಂಬಿಸಿ ಶಿಶುವನ್ನು ಕಳ್ಳತನ ಮಾಡಿದ್ದಾಳೆ. ಕಳ್ಳತನದ ದೃಶ್ಯ ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನವಜಾತ ಶಿಶುವನ್ನು ಕಳೆದುಕೊಂಡ ಪೋಷಕರು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ. ಇದನ್ನೂ ಓದಿ: ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ ಲೋಕಾರ್ಪಣೆಗೊಳಿಸಿದ ಮೋದಿ    

    ಈ ಕುರಿತು ಹಾವೇರಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಜನಾರ್ದನ ರೆಡ್ಡಿ ಭರ್ಜರಿ ರೋಡ್ ಶೋ – ಬಾಗೇಪಲ್ಲಿಯಲ್ಲಿ ಅಭ್ಯರ್ಥಿ ನಿಲ್ಲಿಸಲು ತಯಾರಿ

  • ಜಿಲ್ಲಾಧಿಕಾರಿ ಕಚೇರಿಯಲ್ಲೇ ಮಕ್ಕಳ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

    ಜಿಲ್ಲಾಧಿಕಾರಿ ಕಚೇರಿಯಲ್ಲೇ ಮಕ್ಕಳ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

    ಬೆಳಗಾವಿ: ವಿಶ್ವ ಮಹಿಳಾ ದಿನದಂದೇ ತನ್ನ ಮೂವರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ (Suicide Attempt) ಘಟನೆ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ (DC Office) ನಡೆದಿದೆ.

    ಬೆಳಗಾವಿಯ (Belagavi) ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ (Bailahongala) ಜನತಾ ಫ್ಲ್ಯಾಟ್‌ ನಿವಾಸಿ ಸರಸ್ವತಿ ಅದೃಶ್ಯಪ್ಪ ಹಂಪಣ್ಣವರ (40) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಆಕೆ ಜೊತೆ ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದ ಮಕ್ಕಳಾದ ಸೃಷ್ಟಿ (14), ಸಾಕ್ಷಿ (8), ಸಾನ್ವಿ (3) ಅವರಿಗೂ ಫಿನಾಯಿಲ್ (Phenyl) ಕುಡಿಸಿದ್ದಾರೆ. ಇದನ್ನೂ ಓದಿ: ಧ್ವನಿಯಿಂದ ಎದುರಿಸಿದ ಟೀಕೆ ಬಗ್ಗೆ ಬಾಯ್ಬಿಟ್ಟ ರಾಣಿ ಮುಖರ್ಜಿ

    ಕಳೆದ ಹಲವು ವರ್ಷಗಳಿಂದ ಪತಿ ಅದೃಶ್ಯಪ್ಪ ಹಂಪಣ್ಣವರ ಜೊತೆಗೆ ಬೆಳಗಾವಿಯ ಅನಗೋಳದ ಬಾಡಿಗೆ ಮನೆಯಲ್ಲಿ ಸರಸ್ವತಿ ವಾಸವಿದ್ದರು. ಅನಗೋಳದ ಸಲೂನ್ ಶಾಪ್‌ನಲ್ಲಿ ಅದೃಶ್ಯಪ್ಪ ಹಂಪಣ್ಣವರ ಕೆಲಸ ಮಾಡುತ್ತಿದ್ದರು. ಕೈತುಂಬ ಸಾಲ ಮಾಡಿ 15 ದಿನಗಳ ಹಿಂದೆಯೇ ಪತ್ನಿ ಹಾಗೂ ತನ್ನ ಮೂವರು ಹೆಣ್ಣು ಮಕ್ಕಳನ್ನು ಬಿಟ್ಟು ಅದೃಶ್ಯಪ್ಪ ಹೋಗಿದ್ದರು. ಇದನ್ನೂ ಓದಿ: ಬಿಜೆಪಿಯಿಂದ ಹೋಗುವವರನ್ನು ಗೌರವಯುತವಾಗಿ ಕಳುಹಿಸಿಕೊಡುತ್ತೇವೆ: ಬಿಎಸ್‌ವೈ

    ತುತ್ತು ಅನ್ನಕ್ಕೂ ಗತಿಯಿಲ್ಲದೇ ಸರಸ್ವತಿ ತನ್ನ ಮಕ್ಕಳ ಜೊತೆಗೆ ಜಿಲ್ಲಾಧಿಕಾರಿ ಭೇಟಿಗಾಗಿ ಡಿಸಿ ಕಚೇರಿಗೆ ಆಗಮಿಸಿದ್ದರು. ಈ ವೇಳೆ ಮಹಿಳೆಯನ್ನು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗಳು ವಿಚಾರಿಸಿದ್ದಾರೆ. ಆಗ ಜ್ಯೂಸ್ ಎಂದು ನನ್ನ ತಾಯಿ ಏನೋ ಕುಡಿಸಿದ್ದಾಳೆಂದು ಸಿಬ್ಬಂದಿ ಎದುರು ಹಿರಿಯ ಪುತ್ರಿ ಸೃಷ್ಟಿ ಹೇಳಿದ್ದಾಳೆ. ಬಳಿಕ ಸರಸ್ವತಿ ಹಾಗೂ ಮೂವರು ಮಕ್ಕಳು ವಾಂತಿ ಮಾಡಿಕೊಳ್ಳಲು ಆರಂಭಿಸಿದ್ದಾರೆ. ತಕ್ಷಣ ಅಲರ್ಟ್ ಆದ ಡಿಸಿ ಕಚೇರಿ ಸಿಬ್ಬಂದಿಗಳು ಡಿಸಿ ಕಚೇರಿ ಬಳಿಯ ಪೊಲೀಸರ ನೆರವು ಪಡೆದು ಜಿಲ್ಲಾಸ್ಪತ್ರೆಗೆ ಅಸ್ವಸ್ಥರನ್ನು ಶಿಫ್ಟ್ ಮಾಡಿದ್ದಾರೆ. ಸದ್ಯ ಸರಸ್ವತಿ ಹಾಗೂ ಮೂವರು ಹೆಣ್ಣು ಮಕ್ಕಳಿಗೆ ಜಿಲ್ಲಾಸ್ಪತ್ರೆಯಲ್ಲಿ (District Hospital) ಚಿಕಿತ್ಸೆ ಮುಂದುವರೆಸಲಾಗಿದೆ. ಇದನ್ನೂ ಓದಿ: ನಡುಬೀದಿಯಲ್ಲಿಯೇ ಹೊಡೆದಾಡಿಕೊಂಡ ಯುವತಿಯರು!

  • ಸಾವು-ಬದುಕಿನ ನಡುವೆ ಹೋರಾಡ್ತಿದ್ದ 185 ಕೆಜಿ ತೂಕದ ಮಹಿಳೆ ಜೀವ ಉಳಿಸಿದ ವೈದ್ಯರು

    ಸಾವು-ಬದುಕಿನ ನಡುವೆ ಹೋರಾಡ್ತಿದ್ದ 185 ಕೆಜಿ ತೂಕದ ಮಹಿಳೆ ಜೀವ ಉಳಿಸಿದ ವೈದ್ಯರು

    ಹಾವೇರಿ: ತೀವ್ರ ಉಸಿರಾಟದ ಸಮಸ್ಯೆಯಿಂದ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ 185 ಕೆಜಿ ತೂಕದ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ವೈದ್ಯರು ಜೀವ ಉಳಿಸಿದ್ದಾರೆ.

    ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಸೋಮಲಾಪುರ ಗ್ರಾಮದ 48 ವರ್ಷದ ಚಂದ್ರಮ್ಮ ಎಂಬ ಮಹಿಳೆಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಚಂದ್ರಮ್ಮ ಬರೋಬ್ಬರಿ 185 ಕೆಜಿ ತೂಕವಿದ್ದು, ಹೊಟ್ಟೆಯಲ್ಲಿನ ಕರಳುಗಳು ಒಂದಕ್ಕೊಂದು ತಳುಕು ಹಾಕಿಕೊಂಡಿದ್ದವು. ದೇಹದ ತೂಕ ಅಧಿಕವಾಗಿದ್ದು ಒಂದೆಡೆಯಾದರೆ, ಕರುಳುಗಳು ಒಂದಕ್ಕೊಂದು ತಳುಕು ಹಾಕಿಕೊಂಡಿದ್ದವು. ಇದರಿಂದ ಆಗಾಗ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಚಂದ್ರಮ್ಮಳಿಗೆ ಕೆಲವು ದಿನಗಳಿಂದ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಉಸಿರಾಟದ ಪ್ರಮಾಣ ಸಾಮಾನ್ಯವಾಗಿ 90 ರಿಂದ 92 ಇರಬೇಕಿತ್ತು. ಆದರೆ ಚಂದ್ರಮ್ಮಳ ಉಸಿರಾಟದ ಪ್ರಮಾಣ ಕೇವಲ 40 ಇತ್ತು. ಇದರಿಂದ ತಾಯಿ ಬದುಕುವುದೇ ಇಲ್ಲವೆಂದು ಚಂದ್ರಮ್ಮಳ ಪುತ್ರಿ ಚೈತ್ರಾ ಭಾವಿಸಿದ್ದಳು. ಇದನ್ನೂ ಓದಿ: ಆಡಳಿತದಲ್ಲಿ ಗುಜರಾತ್ ಮಾದರಿ, ಟಿಕೆಟ್ ಹಂಚಿಕೆಯಲ್ಲಿ ಪಕ್ಷ ನಿಷ್ಠೆ ಗೆಲುವಿಗೆ ಮಾನದಂಡವಾಗುತ್ತೆ: ಪ್ರಹ್ಲಾದ್‌ ಜೋಶಿ

    ತಾಯಿಗೆ ತೀವ್ರ ಉಸಿರಾಟದ ಸಮಸ್ಯೆ ಆಗುತ್ತಿದ್ದಂತೆ ಆಕೆಯನ್ನು ಉಳಿಸಿಕೊಳ್ಳಲು ಮಗಳು ಚೈತ್ರಾ ಸಾಕಷ್ಟು ಆಸ್ಪತ್ರೆಗಳನ್ನು ಸುತ್ತಿದ್ದಾಳೆ. ಬಹುತೇಕ ಆಸ್ಪತ್ರೆಗಳಲ್ಲಿನ ವೈದ್ಯರು ಶಸ್ತ್ರಚಿಕಿತ್ಸೆ ಮಾಡಲು ನಿರಾಕರಿಸಿ ಮನೆಗೆ ಕಳಿಸಿದ್ದರು. ತೂಕದ ಪ್ರಮಾಣ ಸಾಕಷ್ಟು ಹೆಚ್ಚಿದ್ದರಿಂದ ವಿವಿಧ ಆಸ್ಪತ್ರೆಗಳಲ್ಲಿನ ವೈದ್ಯರು ರಿಸ್ಕ್ ತೆಗೆದುಕೊಂಡು ಶಸ್ತ್ರಚಿಕಿತ್ಸೆ ಮಾಡಲು ನಿರಾಕರಿಸಿದ್ದರಂತೆ. ಸಾಕಷ್ಟು ಆಸ್ಪತ್ರೆಗಳನ್ನು ಸುತ್ತಾಡಿ ಕೊನೆಗೆ ಚೈತ್ರಾ ತನ್ನ ತಾಯಿಯನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದಿದ್ದಾಳೆ. ಆರಂಭದಲ್ಲಿ ಜಿಲ್ಲಾಸ್ಪತ್ರೆಯಿಂದಲೂ ಚಂದ್ರಮ್ಮಳನ್ನು ಬೇರೆ ಆಸ್ಪತ್ರೆಗೆ ಸೇರಿಸಲು ಹೇಳಲಾಗಿತ್ತು. ನಂತರ ಮತ್ತೊಮ್ಮೆ ಚೈತ್ರಾ ತಾಯಿಯನ್ನು ಕರೆದುಕೊಂಡು ಜಿಲ್ಲಾಸ್ಪತ್ರೆಗೆ ಬಂದ ಮೇಲೆ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದಾರೆ.

    ಜಿಲ್ಲಾಸ್ಪತ್ರೆಯ ಡಾ.ನಿರಂಜನ ನೇತೃತ್ವದ ವೈದ್ಯರು ಹಾಗೂ ಸಿಬ್ಬಂದಿ ತಂಡ ಬರೋಬ್ಬರಿ ನಾಲ್ಕು ಗಂಟೆಗೂ ಅಧಿಕ ಕಾಲ ಚಂದ್ರಮ್ಮಳಿಗೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಕೊಳೆತ ಭಾಗವನ್ನು ಕತ್ತರಿಸಿ ತೆಗೆದು ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿ ಚಂದ್ರಮ್ಮಳ ಜೀವ ಉಳಿಸಿದ್ದಾರೆ. ಯಶಸ್ವಿ ಶಸ್ತ್ರಚಿಕಿತ್ಸೆ ಬಳಿಕ ಚಂದ್ರಮ್ಮಳ ಆರೋಗ್ಯ ಸಹಜ ಸ್ಥಿತಿಗೆ ಮರಳಿದೆ. ಇದನ್ನೂ ಓದಿ: ಹೆಡ್ ಕಾನ್ಸ್‌ಟೇಬಲ್ ಮನೆಗೆ ಕನ್ನ

    Live Tv
    [brid partner=56869869 player=32851 video=960834 autoplay=true]

  • ಜಿಲ್ಲಾಸ್ಪತ್ರೆಯ ನಿರ್ಲಕ್ಷ್ಯ – ಪ್ರಸವದ ವೇಳೆ ಬಾಣಂತಿ, ಅವಳಿ ಶಿಶುಗಳು ಸಾವು

    ಜಿಲ್ಲಾಸ್ಪತ್ರೆಯ ನಿರ್ಲಕ್ಷ್ಯ – ಪ್ರಸವದ ವೇಳೆ ಬಾಣಂತಿ, ಅವಳಿ ಶಿಶುಗಳು ಸಾವು

    ತುಮಕೂರು: ಪ್ರಸವ ವೇಳೆ ಅನಾಥ ಬಾಣಂತಿ ಹಾಗೂ ಅವಳಿ ಶಿಶುಗಳು (twin babies) ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ. ಬಾಣಂತಿ ಹಾಗೂ ಅವಳಿ ಮಕ್ಕಳ ಸಾವಿಗೆ ಜಿಲ್ಲಾಸ್ಪತ್ರೆಯ (Hospital) ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಲಾಗಿದೆ.

    ಭಾರತೀನಗರದ ಅಭಯ ಆಂಜನೇಯ ದೇವಸ್ಥಾನದ ಬಳಿ ವಾಸವಿದ್ದ ತುಂಬು ಗರ್ಭಿಣಿ ಕಸ್ತೂರಿ (30) ಬುಧವಾರ ಹೆರಿಗೆಗೆಂದು ಜಿಲ್ಲಾಸ್ಪತ್ರೆಗೆ ತೆರಳಿದ್ದರು. ಆದರೆ ತಾಯಿಗೆ ಆಧಾರ್ ಕಾರ್ಡ್ ಇಲ್ಲದ ಕಾರಣಕ್ಕೆ ಕಸ್ತೂರಿಯವರನ್ನು ವೈದ್ಯಕೀಯ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿಕೊಳ್ಳದೇ, ವಾಪಸ್ ಕಳುಹಿಸಿದ್ದಾರೆ.

     

    ಇಂದು ಬೆಳಗ್ಗೆ ಕಸ್ತೂರಿಗೆ ಮನೆಯಲ್ಲಿಯೇ ಹೆರಿಗೆ ಆಗಿದೆ. ಆದರೆ ಸೂಕ್ತ ಚಿಕಿತ್ಸೆ ಸಿಗದೇ ಅವಳಿ ಶಿಶುಗಳ ಜೊತೆಗೆ ಬಾಣಂತಿಯೂ ಮೃತಪಟ್ಟಿದ್ದಾರೆ. ಕಸ್ತೂರಿ ಮೂಲತಃ ತಮಿಳುನಾಡಿನವರಾಗಿದ್ದು, ಕಳೆದ 1 ತಿಂಗಳಿನಿಂದ ಭಾರತಿ ನಗರದಲ್ಲಿ ವಾಸವಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಪೊಲೀಸ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ – 2 ವರ್ಷ ವಯೋಮಿತಿ ಸಡಿಲ

    ಇದೀಗ ಬಾಣಂತಿ ಹಾಗೂ ಅವಳಿ ಮಕ್ಕಳ ಸಾವಿಗೆ ಕಾರಣವಾಗಿರುವ ಆರೋಗ್ಯ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ತಪ್ಪಿತಸ್ಥರನ್ನು ಅಮಾನತುಗೊಳಿಸುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಹೊನ್ನಾಳಿ ಚಂದ್ರು ಸಾವಿನ ಸುತ್ತ 5 ಅನುಮಾನ

    ಘಟನಾ ಸ್ಥಳಕ್ಕೆ ಡಿ.ಹೆಚ್.ಒ ಡಾ. ಮಂಜುನಾಥ್ ಹಾಗೂ ಡಾ. ವೀಣಾ ಭೇಟಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಮಂಜುನಾಥ್, ಜಿಲ್ಲಾ ಆಸ್ಪತ್ರೆ ಸಿಬ್ಬಂದಿಯಿಂದ ಕರ್ತವ್ಯ ಲೋಪ ಆಗಿರುವುದು ಕಂಡುಬಂದಿರುವುದರಿಂದ ಆ ವೇಳೆ ಕರ್ತವ್ಯದಲ್ಲಿದ್ದ ಡಾ.ಉಷಾ ಸೇರಿ ನರ್ಸ್ಗಳನ್ನು ಅಮಾನತುಗೊಳಿಸಲಾಗುವುದು. ತುರ್ತು ಸಂದರ್ಭದಲ್ಲಿ ದಾಖಲಾತಿ ಕೇಳುವ ಅಗತ್ಯ ಇಲ್ಲ. ಯಾವುದೇ ಮುಲಾಜಿಲ್ಲದೆ ಅವರನ್ನು ಅಮಾನತುಗೊಳಿಸಲಾಗುವುದು ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿಷಕಾರಿ ಹಾವು ಕಚ್ಚಿ ನಾಲ್ಕು ವರ್ಷದ ಮಗು ಸಾವು

    ವಿಷಕಾರಿ ಹಾವು ಕಚ್ಚಿ ನಾಲ್ಕು ವರ್ಷದ ಮಗು ಸಾವು

    ಚಿಕ್ಕೋಡಿ(ಬೆಳಗಾವಿ): ವಿಷಕಾರಿ ಹಾವು ಕಚ್ಚಿ ಮಗುವೊಂದು ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯರನಾಳ ಗ್ರಾಮದಲ್ಲಿ ನಡೆದಿದೆ.

    SNAKE

    ಇಶಾಂತ್ ರಾಘವೇಂದ್ರ ಕಾಂಬಳೆ (04) ಮೃತ ಮಗು. ಯರನಾಳ ಗ್ರಾಮದಲ್ಲಿ ನಿನ್ನೆ ರಾತ್ರಿ ಮಗು ಮನೆಯಲ್ಲಿ ಮಲಗಿದ್ದಾಗ ವಿಷಪೂರಿತ ಹಾವು ಕಚ್ಚಿದ ಪರಿಣಾಮ ಮಗು ಸಾವನ್ನಪ್ಪಿದೆ. ಹಾವು ಕಚ್ಚಿದ ಪರಿಣಾಮ ಮಗು ಅಳಲು ಆರಂಭಿಸಿದಾಗ ಮಗುವನ್ನು ಬೆಳಗಾವಿಯ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ. ಇದನ್ನೂ ಓದಿ: ಆಂಧ್ರಪ್ರದೇಶದ ಕಾರ್ಖಾನೆಯಲ್ಲಿ ಅನಿಲ ಸೋರಿಕೆ – 200 ಮಹಿಳಾ ಕಾರ್ಮಿಕರು ಅಸ್ವಸ್ಥ

    ಮಗು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಟೀ ಅಂಗಡಿಯಲ್ಲಿ ಅಗ್ನಿ ಅವಘಡ- ಬಾಲಕಿ ಗಂಭೀರ

  • ಇಲಿ ಕಚ್ಚಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ ಯುಪಿ ಸಚಿವ – ಚಿಕಿತ್ಸೆ ಬಳಿಕ ಡಿಸ್ಚಾರ್ಜ್

    ಇಲಿ ಕಚ್ಚಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ ಯುಪಿ ಸಚಿವ – ಚಿಕಿತ್ಸೆ ಬಳಿಕ ಡಿಸ್ಚಾರ್ಜ್

    ಲಕ್ನೋ: ಉತ್ತರಪ್ರದೇಶದ ಬಾಂದಾ ಜಿಲ್ಲೆಗೆ ನಿನ್ನೆ ಭೇಟಿ ನೀಡಿದ್ದ ವೇಳೆ ಇಲ್ಲಿನ ಸರ್ಕೀಟ್ ಹೌಸ್‌ನಲ್ಲಿ ತಂಗಿದ್ದ ಸಚಿವರಿಗೆ ಇಲಿ ಕಚ್ಚಿದ್ದರಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಅಚ್ಚರಿಯ ಘಟನೆಯೊಂದು ಬೆಳಕಿಗೆ ಬಂದಿದೆ.

    ಯುವಜನ ಅಭಿವೃದ್ಧಿ ಮತ್ತು ಕ್ರೀಡಾ ಸಚಿವ ಗಿರೀಶ್‌ಚಂದ್ರ ಯಾದವ್ ಅವರು ಬಾಂದಾ ಜಿಲ್ಲೆಗೆ ತೆರಳಿದ್ದರು. ರಾತ್ರಿ ಮಾವೈ ಬೈಪಾಸ್‌ನಲ್ಲಿರುವ ಒಂದು ಸರ್ಕಿಟ್ ಹೌಸ್‌ನಲ್ಲಿ ಉಳಿದುಕೊಂಡಿದ್ದರು. ರಾತ್ರಿ ಮಲಗಿದ್ದ ವೇಳೆ ಅವರಿಗೆ ಇಲಿಕಚ್ಚಿದೆ. ಸ್ವಲ್ಪ ಸಮಯ ಕಳೆದ ಬಳಿಕ ಅವರು ಕೊಂಚ ಅಸ್ವಸ್ಥರಾಗಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಟ್ವೀಟ್ ಬಯೋದಿಂದ ‘ಕೈ’ ಚಿಹ್ನೆ ಬಿಟ್ಟ ಹಾರ್ದಿಕ್ ಪಟೇಲ್

    RAT

    ಇದು ಅಲ್ಲಿನ ಸಿಬ್ಬಂದಿಯ ಗಮನಕ್ಕೆ ಬಂದಿದ್ದು, ಕೆಲವೇ ಕ್ಷಣಗಳಲ್ಲಿ ಅವರನ್ನು ಲಕ್ನೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ಬಳಿಕ, ಡಿಸ್ಚಾರ್ಜ್ ಮಾಡಲಾಗಿದೆ. ಸಧ್ಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗುತ್ತಿದೆ.

    ಸಚಿವರ ಬಲಗೈ ಬೆರಳಿಗೆ ಏನೋ ಕಚ್ಚಿರುವ ಗುರುತು ಪತ್ತೆಯಾಗಿದ್ದು, ಹಾವು, ಚೇಳು ಕಚ್ಚಿದೆ ಎಂದು ಗಾಬರಿಗೊಂಡಿದ್ದರು. ಸ್ಥಳ ಪರಿಶೀಲನೆ ಮಾಡಿದಾಗ ಇಲಿ ಇದ್ದಿದ್ದು ಕಂಡುಬಂದಿದೆ. ಸೋಮವಾರ ಮುಂಜಾನೆ 3 ಗಂಟೆಯಲ್ಲಿ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಚಿಕಿತ್ಸೆ ನೀಡಲಾಗಿದ್ದು ಆರೋಗ್ಯ ಸ್ಥಿರವಾಗಿದೆ ಎಂದು ಜಿಲ್ಲಾ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕ (ಸಿಎಂಎಸ್) ಡಾ.ಎಸ್.ಎನ್.ಮಿಶ್ರಾ ತಿಳಿಸಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಆಸ್ಪತ್ರೆಗೆ ದಾಖಲು – ಪರಿಸ್ಥಿತಿ ಗಂಭೀರ

    Yogi Adityanath

    ಭೇಟಿ ನೀಡಿದ್ದು ಏಕೆ? : ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚನೆಯ ಮೇರೆಗೆ ಬಾಂದಾ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದರು. ಸರ್ಕಾರದ ಆಡಳಿತದ ಬಗ್ಗೆ ಅಲ್ಲಿನ ಜನರಿಗೆ ಇರುವ ಅಭಿಪ್ರಾಯವೇನು? ಜನರ ಫೀಡ್‌ಬ್ಯಾಕ್ ಏನು ಎಂಬುದನ್ನು ತಿಳಿದು, ಕುಂದುಕೊರತೆ ಆಲಿಸಲು ಅವರು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದರು. ಹಾಗೇ, ಜಿಲ್ಲೆಗಳಿಗೆ, ಯಾವುದೇ ಹಳ್ಳಿಗಳಿಗೆ ಭೇಟಿಕೊಡುವ ಸಚಿವರು, ಸರ್ಕಾರಿ ಅಧಿಕಾರಿಗಳು ಅಲ್ಲಿಯೇ ತಂಗುವ ಸಂದರ್ಭ ಬಂದಾಗ ಹೋಟೆಲ್‌ಗಳ ಬದಲಿಗೆ ಸರ್ಕಾರಿ ವ್ಯವಸ್ಥೆಯಲ್ಲೇ ಇರಬೇಕು ಎಂದು ಸಿಎಂ ತಿಳಿಸಿದ್ದರು. ಹಾಗಾಗಿ ಅವರು ಸರ್ಕೀಟ್ ಹೌಸ್‌ನಲ್ಲಿ ತಂಗಿದ್ದರು.

  • ಪತಿ ಬಿಟ್ಟು ಪ್ರಿಯಕರನ ಜೊತೆ ಹೋಗಿದ್ದ ಮಹಿಳೆ ಅಸಹಜ ಸಾವು!

    ಪತಿ ಬಿಟ್ಟು ಪ್ರಿಯಕರನ ಜೊತೆ ಹೋಗಿದ್ದ ಮಹಿಳೆ ಅಸಹಜ ಸಾವು!

    ಚಿತ್ರದುರ್ಗ: ಪತಿಯನ್ನು ಬಿಟ್ಟು ಪ್ರಿಯಕರನ ಜೊತೆ ಮನೆ ಬಿಟ್ಟು ಹೋಗಿದ್ದ ಮಹಿಳೆ ಅಸಹಜವಾಗಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.

    ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕೆಂಕೆರೆ ಗ್ರಾಮದ ನಿವಾಸಿಯಾಗಿದ್ದ ಮೃತ ದಿವ್ಯಾ(22) 3 ತಿಂಗಳ ಹಿಂದೆ ಪತಿಯನ್ನು ಬಿಟ್ಟು ಪ್ರಿಯಕರ ಮಂಜುನಾಥ್ ಜೊತೆ ತೆರಳಿದ್ದಳು. ಈಕೆ ಪ್ರಿಯಕರನ ಜೊತೆ ಹಿರಿಯೂರಲ್ಲಿ ವಾಸವಾಗಿದ್ದಳು. ಕಳೆದ ಕೆಲವು ದಿನಗಳಿಂದ ದಿವ್ಯಾಗೆ ಜ್ವರ ಬಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಳು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಸೋದರಮಾವನ ಜೊತೆ ಸೇರಿ ಪತಿಯನ್ನೇ ಕೊಂದಳು!

    ದಿವ್ಯಾ ಮೈ ಮೇಲೆ ಬರೆ ಮತ್ತು ಪರಚಿದ ಗಾಯಗಳಾಗಿದ್ದು, ಈಕೆ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ ಎಂದು ಪೋಷಕರ ಮಂಜುನಾಥ್ ಮೇಲೆ ಆರೋಪ ಮಾಡುತ್ತಿದ್ದಾರೆ. ಇದೇ ವೇಳೆ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಆತ್ಮಹತ್ಯೆಗೆ ಕಾರಣ ಕೇಳಿದರೆ, ದಿವ್ಯಾ ಸಾವಿನಿಂದ ನೊಂದು ವಿಷ ಸೇವಿಸಿದ್ದೇನೆ ಎಂದಿದ್ದಾನೆ. ಚಿತ್ರದುರ್ಗ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಎಂಜಿನಿಯರ್ಸ್ ಭೇಟಿ, ಪರಿಶೀಲನೆ

    ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಎಂಜಿನಿಯರ್ಸ್ ಭೇಟಿ, ಪರಿಶೀಲನೆ

    ಚಿಕ್ಕಬಳ್ಳಾಪುರ: ಜಿಲ್ಲಾಸ್ಪತ್ರೆ ಕಟ್ಟಡ ಕುಸಿತ ಆತಂಕ ಪ್ರಕರಣ ಸಂಬಂಧಪಟ್ಟಂತೆ ಪಬ್ಲಿಕ್ ಟಿವಿ ವರದಿಯಿಂದ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು, ಇಂದು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಆರೋಗ್ಯ ಇಲಾಖೆಯ ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

     AEE ಶಿವಕುಮಾರ್ ನೇತೃತ್ವದ ಆರು ಮಂದಿ ಎಂಜಿನಯರ್ ಗಳ ತಂಡ ನೆಲಮಹಡಿಗೆ ಭೇಟಿ ನೀಡಿ ಪಿಲ್ಲರ್ ಗಳ ಪರಿಶೀಲನೆ ನಡೆಸಿತು. ಆಸ್ಪತ್ರೆಯ ನೆಲಮಹಡಿಯ ಪಿಲ್ಲರ್ ಗಳು ಹಾಗೂ ಗೋಡೆಗಳು ಸಂದುಗಳಿಂದ ಅಂರ್ತಜಲ ಹೆಚ್ಚಾಗಿ ನೀರು ಉಕ್ಕುತ್ತಿದ್ದು, ಡ್ರೈನೇಜ್ ಸಿಸ್ಟಂ ಸರಿಯಿಲ್ಲ. ಹೀಗಾಗಿ ಸಮಸ್ಯೆ ಆಗಿದ್ದು, ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಎಂಬಂತೆ ತತ್ ಕ್ಷಣ ಎಂಬಂತೆ ಕ್ರಮಗಳನ್ನ ಕೈಗೊಳ್ಳಲಾಗುವುದು. ಇದನ್ನೂ ಓದಿ: ಚಿಕ್ಕಬಳ್ಳಾಪುರ ಆಸ್ಪತ್ರೆ ಕಟ್ಟಡಕ್ಕೆ ಕಾದಿದೆ ಬಹುದೊಡ್ಡ ಅಪಾಯ-ಉರುಳಲಿದೆಯಾ ಜಿಲ್ಲಾಸ್ಪತ್ರೆ..!

    ಅಲ್ಲದೆ ಶಾಶ್ವತ ಪರಿಹಾರಕ್ಕಾಗಿ ಇಲಾಖೆಗೆ ಹಣದ ಅನುಮೋದನೆಗಾಗಿ ಪತ್ರ ರವಾನೆ ಮಾಡಿದ್ದು, ಅದಷ್ಟು ಬೇಗ ಶಾಶ್ವತ ಪರಿಹಾರ ಕಾರ್ಯ ಮಾಡುವುದಾಗಿ ಎಇಇ ಶಿವಕುಮಾರ್ ತಿಳಿಸಿದ್ದಾರೆ. ಇದೇ ವೇಳೆ ಅಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ರಮೇಶ್ ಮಾತನಾಡಿ, ಸಮಸ್ಯೆ ಬಗ್ಗೆ ಗಮನ ಹರಿಸಿದ್ದು ಆದಷ್ಟು ಬೇಗ ಬಗೆಹರಿಸುವ ಭರವಸೆ ನೀಡಿದ್ರು.