Tag: Divine Star

  • ಕಾಂತಾರ ನೋಡಿ, ಆದ್ರೆ ಓ.. ಎಂದು ಕೂಗ್ಬೇಡಿ – ಆಚಾರಕ್ಕೆ ಧಕ್ಕೆಯಾಗುತ್ತೆ ಎಂದ ರಿಷಬ್

    ಕಾಂತಾರ ನೋಡಿ, ಆದ್ರೆ ಓ.. ಎಂದು ಕೂಗ್ಬೇಡಿ – ಆಚಾರಕ್ಕೆ ಧಕ್ಕೆಯಾಗುತ್ತೆ ಎಂದ ರಿಷಬ್

    ಸಿನಿ ಜಗತ್ತಿನಲ್ಲಿ ಧೂಳೆಬ್ಬಿಸುತ್ತಿರುವ `ಕಾಂತಾರ’ (Kantara) ಸಿನಿಮಾ (Cinema) ಭರ್ಜರಿ ಕಮಾಲ್ ಮಾಡ್ತಿದೆ. ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು, ಹಿಂದಿ ಭಾಷೆಗಳಲ್ಲೂ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಕಾಂತಾರ ಸಿನಿಮಾದ ಭೂತಾರಾಧನೆಯ ಬಗ್ಗೆ ವಿವಾದವೊಂದು ಹುಟ್ಟಿಕೊಂಡ ಬೆನ್ನಲ್ಲೇ ಸಾರ್ವಜನಿಕರು ಸಿನಿಮಾ ನೋಡುತ್ತಾ ಓ.. ಎಂದು ಕೂಗುವುದಕ್ಕೆ ರಿಷಬ್ ಶೆಟ್ಟಿ (Rishabh Shetty) ಪ್ರತಿಕ್ರಿಯಿಸಿದ್ದಾರೆ.

    ಕಾಂತಾರ ಸಿನಿಮಾದಲ್ಲಿ ದೈವ ಆವಾಹಿಸಿದ ಸಂದರ್ಭದಲ್ಲಿ ಕೋಲ ಆಡುವ ಪಾತ್ರಧಾರಿಗಳು ಓ.. ಎಂದು ಕೂಗುತ್ತಾರೆ. ಈ ಶಬ್ಧ ಕೇಳಿ ಬಂದಾಗಲೆಲ್ಲಾ ಥಿಯೇಟರ್‌ಗಳಲ್ಲಿ ಪ್ರೇಕ್ಷಕರು ಕೂಡ ಓ ಎಂದು ಕೂಗ್ತಾರೆ. ಥಿಯೇಟರ್‌ನಿಂದ ಹೊರ ಬಂದಾಗಲೂ ಓ ಎಂದು ಕೂಗುವವರ ಸಂಖ್ಯೆ ಹೆಚ್ಚಿದೆ. ಇದನ್ನು ಗಮನಿಸಿದ ನಿರ್ದೇಶಕ ರಿಷಬ್ ಶೆಟ್ಟಿ (Rishabh Shetty), ಕಾಂತಾರ ಸಿನಿಮಾ ವೀಕ್ಷಕರಲ್ಲಿ ಒಂದು ವಿನಂತಿ.. ದಯವಿಟ್ಟು ಯಾರೂ ಕೂಡ ಈ ಸಿನಿಮಾದಲ್ಲಿ ಉಪಯೋಗಿಸಿದ ಶಬ್ಧವನ್ನು ಅನುಕರಿಸಬೇಡಿ.. ಇದೊಂದು ಆಚಾರ.. ಇದೊಂದು ಆಧ್ಯಾತ್ಮಿಕ ನಂಬಿಕೆ.. ಇದೊಂದು ಸೂಕ್ಷ್ಮವಾದ ಧಾರ್ಮಿಕ ವಿಚಾರ.. ಇದು ಸಂಪ್ರದಾಯಕ್ಕೆ ಧಕ್ಕೆ ಉಂಟು ಮಾಡಬಹುದು.. ಸುಮ್ ಸುಮ್ನೆ ಓ ಎಂದು ಕೂಗಬೇಡಿ ಅಂತಾ ಮನವಿ ಮಾಡ್ಕೊಂಡಿದ್ದಾರೆ. ಇದನ್ನೂ ಓದಿ: ‘ಕಾಂತಾರ’ ಚಿತ್ರವನ್ನು ಡೈರೆಕ್ಟ್ ಆಗಿ ಆಸ್ಕರ್ ಗೆ ಕಳುಹಿಸಿ: ಕಂಗನಾ ರಣಾವತ್

    ಕಾಂತಾರ ಸಿನಿಮಾವನ್ನು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮಂಗಳೂರಿನಲ್ಲಿ ವೀಕ್ಷಣೆ ಮಾಡಿದ್ದಾರೆ. ಕಾಂತಾರವನ್ನು ಬಾಲಿವುಡ್ ನಟಿ ಕಂಗನಾ ರಣಾವತ್ ಮೆಚ್ಚಿದ್ದಾರೆ. ಸಿನಿಮಾ ಅಂದ್ರೆ ಹೇಗಿರಬೇಕು ಅನ್ನೋದಕ್ಕೆ ಕಾಂತಾರ ಉದಾಹರಣೆ. ಈ ಸಿನಿಮಾದ ಫೀಲ್‌ನಿಂದ ಹೊರಗೆ ಬರಲು ನನಗೆ ಒಂದು ವಾರ ಹಿಡಿಸಬಹುದು. ಈಗ್ಲೂ ನನ್ನ ಶರೀರ ನಡುಗುತ್ತಿದೆ. ಇದೊಂದು ಅದ್ಭುತವಾದ ಅನುಭವ. ರಿಷಬ್ ಶೆಟ್ಟಿಗೆ ಹ್ಯಾಟ್ಸಾಫ್ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಅಭಿಮಾನಿಗಳ ಮೂಲಕ ಅಪ್ಪು ಇನ್ನೂ ಜೀವಂತವಾಗಿದ್ದಾರೆ: ನಟಿ ರಮ್ಯಾ

    ಈ ಮಧ್ಯೆ ಕಾಂತಾರ ಸಿನಿಮಾ ಆಸ್ಕರ್ ಪ್ರಶಸ್ತಿಗೆ ಅರ್ಹ ಎಂಬ ಕ್ಯಾಂಪೇನ್ ದೇಶಾದ್ಯಂತ ಸದ್ದು ಮಾಡ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರಿದ್ದಲ್ಲ – ರಿಷಬ್ ಸಮರ್ಥನೆ ತಳ್ಳಿಹಾಕಿದ ನಟ ಚೇತನ್

    ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರಿದ್ದಲ್ಲ – ರಿಷಬ್ ಸಮರ್ಥನೆ ತಳ್ಳಿಹಾಕಿದ ನಟ ಚೇತನ್

    ರಿಷಬ್‌ ಶೆಟ್ಟಿ (Rishabh Shetty) ನಟನೆಯ ಕಾಂತಾರ (Kantara) ಸಿನಿಮಾ ದೇಶ-ವಿದೇಶಗಳಲ್ಲಿ ಭರ್ಜರಿ ಪ್ರದರ್ಶನ ಕಾಣ್ತಿದೆ. ಆದರೆ ಇದಕ್ಕೆ ವ್ಯತಿರಿಕ್ತವಾಗಿ ಪ್ರತಿಕ್ರಿಯಿಸಿರುವ ನಟ ಚೇತನ್ ಅಹಿಂಸಾ (Chetan Ahimsa) ಭೂತಕೋಲವು ಹಿಂದೂ ಸಂಸ್ಕೃತಿಯಲ್ಲ ಎಂದು ಹೇಳಿದ್ದಾರೆ.

    ಕಾಂತಾರ ಕನ್ನಡ ಭಾಷೆಯಲ್ಲಿ ಮಾತ್ರವಲ್ಲದೇ ತಮಿಳು, ತೆಲುಗು ಹಾಗೂ ಹಿಂದಿ ಭಾಷೆಯಲ್ಲೂ ಯಶಸ್ವಿ ಪ್ರದರ್ಶನ ಕಾಣ್ತಿದ್ದು, ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಕೇವಲ ಸ್ಯಾಂಡಲ್ ವುಡ್‌ಗೆ ಮಾತ್ರ ಸೀಮಿತ ಆಗಿದ್ದ ರಿಷಬ್, `ಕಾಂತಾರ’ದ ಕಾಂತಿಯಿಂದ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಹಾಗಾಗಿ ಅಭಿಮಾನಿಗಳು ತಮ್ಮ ನೆಚ್ಚಿನ ನಟ, ನಿರ್ದೇಶಕನಿಗೆ `ಡಿವೈನ್ ಸ್ಟಾರ್’ ಎಂದು ಬಿರುದು ಕೊಟ್ಟಿದ್ದು, ಅದೇ ಹೆಸರಿನಿಂದ ಕರೆಯುತ್ತಿದ್ದಾರೆ. ಇದನ್ನೂ ಓದಿ: ‘ಕಾಂತಾರ’ ನಂತರ ರಿಷಬ್ ಶೆಟ್ಟಿಗೆ ಹೊಸ ಬಿರುದು: ಡಿವೈನ್ ಸ್ಟಾರ್ ಎಂದ ಫ್ಯಾನ್ಸ್

    `ಕಾಂತಾರ’ (Kantara) ಕುರಿತು ವ್ಯತಿರಿಕ್ತವಾಗಿ ಪ್ರತಿಕ್ರಿಯಿಸಿರುವ ನಟ ಚೇತನ್ ಅಹಿಂಸಾ (Chetan Ahimsa), ನಮ್ಮ ಕನ್ನಡದ ಚಲನಚಿತ್ರ `ಕಾಂತಾರ’ವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ. ಇದು ನಿಜವಲ್ಲ. ನಮ್ಮ ಪಂಬದ/ನಲಿಕೆ/ಪರವರ ಬಹುಜನ ಸಂಪ್ರದಾಯಗಳು, ವೈದಿಕ-ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆಯಾಗಲಿ, ಅದರಾಚೆಯಾಗಲಿ, ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ ಎಂದು ತಮ್ಮ ಫೇಸ್‌ಬುಕ್ ಪುಟದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ‘ಬಿಗ್ ಬಾಸ್ ಸೀಸನ್ 9’ರ ಮೊದಲ ಮಹಿಳಾ ಕ್ಯಾಪ್ಟನ್ ಆಗಿ ದೀಪಿಕಾ ದಾಸ್ ಆಯ್ಕೆ

    ಕಾಂತಾರ ಸಿನಿಮಾ ದೇಶಾದ್ಯಂತ ಜನಪ್ರಿಯತೆ ಗಳಿಸಿದೆ. ಸಿನಿಮಾವನ್ನು ಸ್ಟಾರ್ ಕಲಾವಿದರು ಕೂಡ ನೋಡಿದ್ದಾರೆ, ನೋಡಲು ಕಾಯುತ್ತಿದ್ದಾರೆ. ಬಾಲಿವುಡ್ (Bollywood) ಖ್ಯಾತ ನಟಿ ಕಂಗನಾ ರಣಾವತ್ ಕೂಡ ಕಾಂತಾರ ಸಿನಿಮಾ ನೋಡುವುದಾಗಿ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಕಾಂತಾರ’ ನಂತರ ರಿಷಬ್ ಶೆಟ್ಟಿಗೆ ಹೊಸ ಬಿರುದು: ಡಿವೈನ್ ಸ್ಟಾರ್ ಎಂದ ಫ್ಯಾನ್ಸ್

    ‘ಕಾಂತಾರ’ ನಂತರ ರಿಷಬ್ ಶೆಟ್ಟಿಗೆ ಹೊಸ ಬಿರುದು: ಡಿವೈನ್ ಸ್ಟಾರ್ ಎಂದ ಫ್ಯಾನ್ಸ್

    ರಿಷಬ್ ಶೆಟ್ಟಿ (Rishabh Shetty) ನಟನೆಯ ಕಾಂತಾರ (Kantara) ಸಿನಿಮಾ ಕೇವಲ ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಕನ್ನಡವೂ ಸೇರಿದಂತೆ ಬಹುತೇಕ ಕಡೆ ಬಾಕ್ಸ್ ಆಫೀಸ್ ಕಲೆಕ್ಷನ್ ಜೋರಾಗಿದೆ. ಕೇವಲ ಸ್ಯಾಂಡಲ್ ವುಡ್ ಗೆ ಮಾತ್ರ ಸೀಮಿತ ಆಗಿದ್ದ ರಿಷಬ್, ಇದೀಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬದಲಾಗಿದ್ದಾರೆ. ಹಾಗಾಗಿ ಅಭಿಮಾನಿಗಳು ತಮ್ಮ ನೆಚ್ಚಿನ ನಟ, ನಿರ್ದೇಶಕನಿಗೆ ಹೊಸದೊಂದು ಬಿರುದು ಕೊಡಲು ಮುಂದಾಗಿದ್ದಾರೆ.

    ರಿಯಲ್ ಸ್ಟಾರ್, ಪವರ್ ಸ್ಟಾರ್, ರಾಕಿಂಗ್ ಸ್ಟಾರ್, ಸೂಪರ್ ಸ್ಟಾರ್ ಹೀಗೆ ತಮ್ಮ ನೆಚ್ಚಿನ ಕಲಾವಿದರಿಗೆ ಅಭಿಮಾನಿಗಳು ಬಿರುದು ಕೊಟ್ಟು ಅಭಿಮಾನ ತೋರಿದ್ದಾರೆ. ರಿಷಬ್ ಶೆಟ್ಟಿ ಅವರಿಗೂ ಕೂಡ ಸದ್ಯ ‘ಡಿವೈನ್ ಸ್ಟಾರ್’ (Divine Star) ಎಂದು ಬಿರುದು ಕೊಟ್ಟಿದ್ದು, ಅನೇಕರು ಇದೇ ಹೆಸರಿನಿಂದಲೇ ಕರೆಯುತ್ತಿದ್ದಾರೆ. ಈ ಹಿಂದೆ ಕಾಂತಾರ ಸಿನಿಮಾ ನೋಡಿದ್ದ ನಿರ್ದೇಶಕ ಪ್ರಶಾಂತ್ ನೀಲ್ ಕೂಡ ‘ಡಿವೈನ್’ ಶಬ್ದವನ್ನು ಬಳಸಿಯೇ ಸಿನಿಮಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಹೀಗಾಗಿ ಅಭಿಮಾನಿಗಳು ಇನ್ಮುಂದೆ ‘ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ’ ಎಂದು ಕರೆಯಲು ನಿರ್ಧರಿಸಿರುವ ಕುರಿತು ಚರ್ಚೆ ಆಗುತ್ತಿದೆ.  ಇದನ್ನೂ ಓದಿ: ‘ಬಿಗ್ ಬಾಸ್ ಸೀಸನ್ 9’ರ ಮೊದಲ ಮಹಿಳಾ ಕ್ಯಾಪ್ಟನ್ ಆಗಿ ದೀಪಿಕಾ ದಾಸ್ ಆಯ್ಕೆ

    ಕಾಂತಾರ ಸಿನಿಮಾ ಬಗ್ಗೆ ಸಾಮಾನ್ಯ ನೋಡುಗರು ಮಾತ್ರವಲ್ಲ, ಸ್ಟಾರ್ ಕಲಾವಿದರು ಕೂಡ ನೋಡಿದ್ದಾರೆ. ನೋಡಲು ಕಾಯುತ್ತಿದ್ದಾರೆ. ಬಾಲಿವುಡ್ ಖ್ಯಾತ ನಟಿ ಕಂಗನಾ ರಣಾವತ್ (Kangana Ranaut) ಕೂಡ ಕಾಂತಾರ ಸಿನಿಮಾ ನೋಡುವುದಾಗಿ ಹೇಳಿದ್ದಾರೆ. ‘ಕಾಂತಾರ ಸಿನಿಮಾ ಕುತೂಹಲ ಹೆಚ್ಚಿಸಿದೆ. ಸಿನಿಮಾ ನೋಡಲು ನಾನೂ ಕಾಯುತ್ತಿದ್ದೇನೆ. ಶೀಘ್ರದಲ್ಲೇ ಸಿನಿಮಾ ನೋಡುವೆ’ ಎಂದು ಹೇಳಿದ್ದಾರೆ.

    ಬಾಲಿವುಡ್ (Bollywood) ಸಿನಿಮಾಗಳನ್ನು ತೆಗಳುತ್ತಲೇ ಬಂದಿರುವ ಕಂಗನಾ, ಇತ್ತೀಚಿನ ದಿನಗಳಲ್ಲಿ ದಕ್ಷಿಣದ ಸಿನಿಮಾಗಳನ್ನು ಹೊಗಳುತ್ತಿದ್ದಾರೆ. ಅಲ್ಲದೇ, ದಕ್ಷಿಣ ಭಾರತದ ಹೀರೋಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡುತ್ತಿದ್ದಾರೆ. ಬಾಲಿವುಡ್ ನಟರನ್ನು ಸದಾ ಕಾಲೆಳೆಯುವ ಕಂಗನಾ, ಈ ಹಿಂದೆ ಯಶ್ ಅವರನ್ನು ಹೊಗಳಿದ್ದರು. ಇದೀಗ ಕಾಂತಾರ ಸಿನಿಮಾದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಶೀಘ್ರದಲ್ಲೇ ಸಿನಿಮಾ ನೋಡುವುದಾಗಿಯೂ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]