Tag: Divya hagaragi

  • ರಾಜ್ಯವನ್ನೇ ಹುಡುಕಿದರೂ ಸಿಗದ ಕಿಂಗ್‌ಪಿನ್ ದಿವ್ಯಾ ಹಾಗರಗಿ ಅರೆಸ್ಟ್ ಆದ ಕಥೆಯೇ ರೋಚಕ

    ರಾಜ್ಯವನ್ನೇ ಹುಡುಕಿದರೂ ಸಿಗದ ಕಿಂಗ್‌ಪಿನ್ ದಿವ್ಯಾ ಹಾಗರಗಿ ಅರೆಸ್ಟ್ ಆದ ಕಥೆಯೇ ರೋಚಕ

    ಬೆಂಗಳೂರು/ಕಲಬುರಗಿ: ರಾಜ್ಯಾದ್ಯಂತ ಹುಡುಕಾಡಿದರೂ ಸಿಗದ ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದ ಕಿಂಗ್‌ಪಿನ್ ಆರೋಪಿ ದಿವ್ಯಾ ಹಾಗರಗಿ ಸಿಐಡಿ ಬೋನಿಗೆ ಬಿದ್ದದೆ ರೋಚಕ.

    ದಿನಕ್ಕೊಂದು ರಹಸ್ಯಗಳನ್ನು ಬಯಲು ಮಾಡುತ್ತಿದ್ದ ಈ ಪ್ರಕರಣದಲ್ಲಿ ವಿಶೇಷ ತಂಡಗಳನ್ನು ರಚಿಸಿ ಫುಲ್ ಆಕ್ಟೀವ್ ಆಗಿ ಕೆಲಸ ಮಾಡುತ್ತಿದ್ದ ಸಿಐಡಿ ಅಧಿಕಾರಿಗಳು, ಹೊಂಚುಹಾಕಿ ಸಿನಿಮೀಯ ರೀತಿಯಲ್ಲಿ ಆಕೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಜಮೀರ್‌ಗೆ ಬಿಜೆಪಿ `ಮಹಾನಾಯಕ’ನ ಬೆಂಬಲವಿದೆ, ನಮ್ಮವರೇ ಸುಲಿಗೆ ಮಾಡುತ್ತಿದ್ದಾರೆ: ಯತ್ನಾಳ್

    Divya hagaragi (2)

    ದಿವ್ಯಾ ಎಸ್ಕೇಪ್ ಆಗಿದ್ದು ಹೇಗೆ?: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ವಿಚಾರ ಕೇಳಿಬರುತ್ತಿದ್ದಂತೆ ದಿವ್ಯಾ ಹಾಗರಗಿ, ಕಾರುಚಾಲಕ ಸದ್ದಾಂ ಹುಸೇನ್‌ನ ಸಹಾಯದಿಂದ ತನ್ನ ಇನ್ನೋವಾ ಕಾರಿನಲ್ಲಿ ಅರ್ಚನಾ, ಸುನೀತಾಳನ್ನ ಕೂರಿಸಿಕೊಂಡು ಎಸ್ಕೇಪ್ ಆಗಿದ್ದಾಳೆ. ಅಷ್ಟರಲ್ಲಾಗಲೇ ಫುಲ್ ಆಕ್ಟೀವ್ ಆಗಿದ್ದ ಸಿಐಡಿಯ ಸೈಬರ್ ಕ್ರೈಂ ತಂಡವು ದಿವ್ಯಾ ಎಲ್ಲೆಲ್ಲಿ ಹೋಗ್ತಿದ್ದಾಳೆ? ಎಂಬ ಮಾಹಿತಿಯನ್ನು ಕಲೆಹಾಕತೊಡಗಿತ್ತು. ಇದಕ್ಕಾಗಿ ಸಿಐಡಿಯು 6 ವಿಶೇಷ ತಂಡಗಳನ್ನು ರಚಿಸಿಕೊಂಡಿತ್ತು. ಎಸ್ಪಿ ನಾಗೇಶ್ ಅವರ ಟೀಂ ನಿಂದ ಟೆಕ್ನಿಕಲ್ ಸಹಕಾರ ನೀಡಿತ್ತು. ಇದನ್ನೂ ಓದಿ: ತಾಕತ್ತಿದ್ದರೆ ನನ್ನ ವಿರುದ್ಧ ರೇವಣ್ಣ ನಿಲ್ಲಲಿ: ಪ್ರೀತಂ ಸವಾಲು

    divya hagaragi

    ಎಸ್ಕೇಪ್ ಆಗಿ ಸೊಲ್ಲಾಪುರಕ್ಕೆ ತೆರಳಿದ್ದ ದಿವ್ಯಾ ಅಲ್ಲಿ ಟೆಲಿಕಾಂ ಬ್ಯುಸಿನಸ್ ಮಾಡ್ತಿದ್ದ ಸುರೇಶ್ ಕಾಟ್ಗಾಂವ್ ನನ್ನ ಭೇಟಿಯಾಗಿದ್ದಳು. ನಂತರ ಆತನ ಬಳಿ ಆಶ್ರಯ ನೀಡುವಂತೆ ದುಂಬಾಲುಬಿದ್ದಿದ್ದಳು. ಈ ಹಿಂದೆ ಕಲಬುರಗಿಯ ಅಫ್ಜಲ್ ಪುರದಲ್ಲಿ ಸ್ಯಾಂಡ್ ಬ್ಯುಸಿನೆಸ್ ಮಾಡಿಕೊಂಡಿದ್ದಾಗ ಸುರೇಶ್‌ನ ಪರಿಚಯವಾಗಿತ್ತು. ದಿವ್ಯಾ ಸುರೇಶ್‌ಗೆ ಹಣಕಾಸಿನ ಸಹಾಯ ಮಾಡುತ್ತಿದ್ದಳು. ಆ ಋಣವನ್ನ ತೀರಿಸೋಕೆ ಸುರೇಶ್ ದಿವ್ಯಾ ಸಹಾಯಕ್ಕಾಗಿ ನಿಂತಿದ್ದನು.

    kalaburagi - divya

    ಅಕ್ರಮ ನೇಮಕಾತಿ ವಿಚಾರ ಬಯಲಾಗುತ್ತಿದ್ದಂತೆ ಅಫ್ಜಲ್‌ಪುರ ತಲುಪುವ ಮುನ್ನವೇ ದಿವ್ಯಾ ಮೊಬೈಲ್ ಸ್ವಿಚ್‌ಆಫ್ ಮಾಡಿಕೊಂಡಿದ್ದಾಳೆ. ನಂತರ ದಿವ್ಯಾ ಅಂಡ್ ಟೀಂ ಮೊಬೈಲ್ ಬಳಸದೇ ಮಹಾರಾಷ್ಟ್ರದ ಪುಣೆ ತಲುಪಿದೆ. ಇದಕ್ಕೂ ಮುನ್ನವೇ ಗುಜರಾತ್-ಮಹಾರಾಷ್ಟ್ರ ಭಾಗಗಳಲ್ಲಿ ಕಾರಿನಲ್ಲಿ ಓಡಾಟ ನಡೆಸಿದ್ದರು. ದಿವ್ಯಾಳ ಮೊಬೈಲ್ ಸ್ವಿಚ್ ಆಫ್ ಆಗೋಕು ಮುನ್ನ ಸುರೇಶನಿಗೆ ಕಾಲ್ ಮಾಡಿದ್ದಳು. ಈ ಆಧಾರದ ಮೇಲೆಯೇ ಸುರೇಶ್ ಚಲನವಲನದ ಬಗ್ಗೆ ಗಮನಹರಿಸಿದ್ದ ಸಿಐಡಿ ಟೀಂ ಸುರೇಶನ ಬೆಂಬಿದ್ದಿದೆ. ನಂತರ ಸುರೇಶ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ದಿವ್ಯಾಳ ಬಗ್ಗೆ ಸತ್ಯ ಬಾಯ್ಬಿಟ್ಟಿದ್ದಾನೆ. ಪುಣೆಗೆ ಹೋಗ್ತೀನಿ ಅಂದಿದ್ರು ಆದರೆ, ಎಲ್ಲಿ ಅಂತ ಗೊತ್ತಿಲ್ಲ ಎಂದು ಬಾಯ್ಬಿಟ್ಟಿದ್ದಾನೆ. ಇದನ್ನೂ ಓದಿ: ಮನೆಯಿಂದ ಹೋಗಬೇಕಾದ್ರೆ ರಾಜಕುಮಾರಿ ತರ ಹೋದ್ಳು, ಆದರೆ ಈಗ….: ಆ್ಯಸಿಡ್ ಸಂತ್ರಸ್ತೆ ತಾಯಿ ಅಳಲು 

    DIVYA - POLICE - KALBURAGI (3)

    ನಂತರ ಸಿಐಡಿ ಅಧಿಕಾರಿಗಳು ಸುರೇಶ್‌ನನ್ನು ಪುಣೆಗೆ ಕರೆದೊಯ್ದು ದಿವ್ಯಾಳಿಗೆ ಫೋನ್ ಮಾಡಿಸಿದ್ದಾರೆ. ಲಾಡ್ಜ್ ಒಂದರ ಮಾಹಿತಿಯನ್ನ ನೀಡಿದ್ದ ದಿವ್ಯಾ. ಆ ಲಾಡ್ಜ್ ನಲ್ಲಿ ಅಡುಗೆಭಟ್ಟ ಕಾಳಿದಾಸನಿಂದ ಬಗೆಬಗೆಯ ಅಡುಗೆ ಮಾಡಿಸಿಕೊಂಡು ತಿನ್ನುತ್ತಿದ್ದರು. ಕಾಳಿದಾಸನ ಮೊಬೈಲ್ ನಿಂದಲೇ ವಾಟ್ಸಪ್ ಕಾಲ್ ಮಾಡ್ತಿದ್ರು. ಇದರಿಂದ ಆಕೆ ಲಾಡ್ಜ್ನಲ್ಲಿ ಇರುವುದು ಕನ್ಫರ್ಮ್ ಆಗಿದೆ. ಲಾಡ್ಜ್ ಅನ್ನು ಸುತ್ತುವರಿದ ಪೊಲೀಸರು ದಿವ್ಯಾ, ಅರ್ಚನಾ, ಸುನೀತಾ, ಕಾರು ಚಾಲಕ ಸದ್ದಾಂನನ್ನು ಅರೆಸ್ಟ್ ಮಾಡಿದ್ದಾರೆ. ಉಳಿದಂತೆ ಎಂಎಸ್ ಬಿಲ್ಡಿಂಗ್‌ನ ಡಿಪಿಆರ್ ಸೆಕ್ಷನ್‌ನಲ್ಲಿದ್ದ ಜ್ಯೋತಿ ಸಹ ತಗಲ್ಲಾಕ್ಕೊಂಡಿದ್ದಾಳೆ.

    ಜ್ಯೋತಿ, ಶಾಂತಾಭಾಯಿ ಎಂಬಾಕೆಯನ್ನು ಪಿಎಸ್‌ಐ ಅಕ್ರಮ ನೇಮಕಾತಿ ಮಾಡಿಸಿದ್ದಳು. 15 ಉತ್ತರವನ್ನಷ್ಟೇ ಶಾಂತಾಭಾಯಿ ಉತ್ತರಿಸಿದ್ದಳು. ಆದರೆ, ಓಎಂಆರ್ ಶೀಟ್ ನಲ್ಲಿ 130 ಅಂಕ ಪಡೆಯುವಂತೆ ಮಾಡಲಾಗಿದೆ. ಒಟ್ಟಿನಲ್ಲಿ ಶಾಂತಾಭಾಯಿ ಎಸ್ಕೇಪ್ ಆಗಿದ್ದು ಆಕೆಯ ಹುಡುಕಾಟದಲ್ಲಿ ಸಿಐಡಿ ಬ್ಯುಸಿಯಾಗಿದೆ.

  • ಊಟ ನಿರಾಕರಣೆ, ಎಸಿ ಇಲ್ದೆ ನಿದ್ರೆ ಇಲ್ಲ – PSI ಅಕ್ರಮದಲ್ಲಿ ಅರೆಸ್ಟ್ ಆದ ದಿವ್ಯಾ ಹಾಗರಗಿ ಹೈಡ್ರಾಮಾ

    ಊಟ ನಿರಾಕರಣೆ, ಎಸಿ ಇಲ್ದೆ ನಿದ್ರೆ ಇಲ್ಲ – PSI ಅಕ್ರಮದಲ್ಲಿ ಅರೆಸ್ಟ್ ಆದ ದಿವ್ಯಾ ಹಾಗರಗಿ ಹೈಡ್ರಾಮಾ

    ಕಲಬುರಗಿ: ಪಿಎಸ್‍ಐ ನೇಮಕಾತಿ ಪರೀಕ್ಷೆಯ ಅಕ್ರಮಕ್ಕೆ ಸಾಥ್ ನೀಡಿರುವ ಆರೋಪದಡಿ ಬಿಜೆಪಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ದಿವ್ಯಾ ಹಾಗರಗಿಯನ್ನು ಶುಕ್ರವಾರ ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಸದ್ಯ 11 ದಿನಗಳ ಕಾಲ ದಿವ್ಯಾ ಹಾಗರಗಿಯನ್ನು ನ್ಯಾಯಾಲಯ ಸಿಐಡಿ ಕಸ್ಟಡಿಗೆ ನೀಡಿದೆ.

    ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ದಿವ್ಯಾ ಹಾಗರಗಿ ಕಳೆದ 18 ದಿನಗಳಿಂದ ತಲೆ ಮರೆಸಿಕೊಂಡಿದ್ದರು. ಆದರೆ ಸಿಐಡಿ ಅಧಿಕಾರಿಗಳು ಶುಕ್ರವಾರ ಮಹಾರಾಷ್ಟ್ರದ ಪುಣೆಯ ಹೋಟೆಲ್‍ವೊಂದರ ಬಳಿ ದಿವ್ಯಾ ಹಾಗರಗಿಯನ್ನು ಬಂಧಿಸಿದ್ದಾರೆ. ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ದಿವ್ಯಾ ಹಾಗರಗಿ ಕಳೆದ ರಾತ್ರಿ ಮಹಿಳಾ ನಿಲಯದಲ್ಲಿಯೇ ಕಾಲ ಕಳೆದಿದ್ದಾರೆ. ಇದನ್ನೂ ಓದಿ: ಪರೀಕ್ಷೆಗೆ ಹಿಜಬ್ ಧರಿಸಿ ಬಂದ ಡಿಗ್ರಿ ವಿದ್ಯಾರ್ಥಿನಿಗೆ ಅನುಮತಿ ನಿರಾಕರಣೆ

    ಸದಾ ಎಸಿ ಕೋಣೆಯಲ್ಲಿ ಮಲಗುತ್ತಿದ್ದ ದಿವ್ಯಾ ಹಾಗರಗಿ ನಿನ್ನೆ ತಡರಾತ್ರಿವರಗೆ ಫ್ಯಾನ್ ಕೆಳಗೆ ನಿದ್ರೆ ಬರದೆ ಪರದಾಡಿದ್ದಾರೆ. ಅಲ್ಲದೇ ನಿನ್ನೆ ಮಧ್ಯಾಹ್ನ ಊಟವನ್ನು ಕೂಡಾ ನಿರಾಕರಿಸಿದ್ದರು. ಆದರೆ ರಾತ್ರಿ ಸ್ವಲ್ಪ ಊಟ ಮಾಡಿದ್ದಾರೆ. ಇದನ್ನೂ ಓದಿ: ಪಿಎಸ್‍ಐ ದೈಹಿಕ ಪರೀಕ್ಷೆಯಲ್ಲೂ ಅಕ್ರಮ – ದಿವ್ಯಾ ಬಂಧನ ಸರ್ಕಾರದ ದೊಡ್ಡ ಸಾಧನೆಯಲ್ಲ: ಪ್ರಿಯಾಂಕ್ ಖರ್ಗೆ

    ಕೋಟಿ, ಕೋಟಿ ಹಣವಿದ್ದರೂ ಅಕ್ರಮದ ಜಾಲಕ್ಕೆ ಸಿಲುಕಿರುವ ದಿವ್ಯಾ ಹಾಗರಗಿ ಇದೀಗ ತಮ್ಮನ್ನು ಭೇಟಿಯಾದವರ ಮುಂದೆ ಪಶ್ಚಾತ್ತಾಪದ ಮಾತುಗಳನ್ನಾಡುತ್ತಿದ್ದಾರೆ. ಕಲಬುರಗಿ ನಗರ ಸೇರಿದಂತೆ ಸುತ್ತಮುತ್ತಲಿನ ಗ್ರಾಮದಲ್ಲಿ ದಿವ್ಯಾ ಹಾಗರಗಿ ಕೋಟ್ಯಂತರ ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಇವೆಲ್ಲವೂ ಪಿತ್ರಾರ್ಜಿತವಾಗಿ ಬಂದಿರುವ ಆಸ್ತಿಯಾಗಿದೆ.

  • ಪಿಎಸ್‍ಐ ದೈಹಿಕ ಪರೀಕ್ಷೆಯಲ್ಲೂ ಅಕ್ರಮ – ದಿವ್ಯಾ ಬಂಧನ ಸರ್ಕಾರದ ದೊಡ್ಡ ಸಾಧನೆಯಲ್ಲ: ಪ್ರಿಯಾಂಕ್ ಖರ್ಗೆ

    ಪಿಎಸ್‍ಐ ದೈಹಿಕ ಪರೀಕ್ಷೆಯಲ್ಲೂ ಅಕ್ರಮ – ದಿವ್ಯಾ ಬಂಧನ ಸರ್ಕಾರದ ದೊಡ್ಡ ಸಾಧನೆಯಲ್ಲ: ಪ್ರಿಯಾಂಕ್ ಖರ್ಗೆ

    ಕಲಬುರಗಿ: ಪಿಎಸ್‍ಐ ಪರೀಕ್ಷೆ ದೈಹಿಕ, ಓಎಮ್‍ಆರ್, ಬ್ಲೂಟೂತ್ ಸೇರಿದಂತೆ ಮೂರು ರೀತಿಯಲ್ಲಿ ಬೆಂಗಳೂರು, ಹುಬ್ಬಳ್ಳಿ, ಬೆಳಗಾವಿಯಲ್ಲೂ ಅಕ್ರಮ ನಡೆದಿದೆ ಇದರಲ್ಲಿ ನೂರಾರು ಅಭ್ಯರ್ಥಿಗಳು ಭಾಗಿಯಾಗಿದ್ದಾರೆ ಎಂದು ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ.

    ಕಲಬುರಗಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹದಿನೆಂಟು ದಿನದಿಂದ ತಲೆಮರೆಸಿಕೊಂಡಿದ್ದ ದಿವ್ಯಾ ಹಾಗರಗಿ ಬಂಧನ ಸರ್ಕಾರದ ದೊಡ್ಡ ಸಾಧನೆಯಲ್ಲ. ಅವರನ್ನು ಅರೆಸ್ಟ್ ಮಾಡಿ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ. ಇದು ಹಾಸ್ಯಾಸ್ಪದವಾಗಿದೆ. ಆರ್‌.ಡಿ ಪಾಟೀಲ್, ದಿವ್ಯಾ ಹಾಗರಗಿ ಬಂಧನ ಇದು ಪ್ರಾಥಮಿಕ ಹಂತ. ಎಲ್ಲಿ ಪರೀಕ್ಷಾ ಕೇಂದ್ರ ನಿಗದಿ ಮಾಡಿದರು. ಈ ಹಗರಣದಲ್ಲಿ ಯಾರು ಯಾರಿಗೆ ಹಣ ನೀಡಿದ್ದಾರೆ, ಹಗರಣದ ವ್ಯಾಪ್ತಿ ಎಷ್ಟು ಎಂಬುದರ ಬಗ್ಗೆ ಮಾಹಿತಿ ಎಲ್ಲಿದೆ? ಆದರೆ ಗೃಹ ಸಚಿವರು ತಮ್ಮ ಸಾಧನೆ ಹೇಳಿಕೊಂಡಿದ್ದಾರೆ. ತನಿಖೆ ಯಾವ ದಿಕ್ಕಿನಲ್ಲಿ ನಡೆಯುತ್ತಿದೆ ಎನ್ನುವ ಮಾಹಿತಿ ಅವರಿಗಿಲ್ಲ ಎಂದರು.  ಇದನ್ನೂ ಓದಿ: ಹೈಕಮಾಂಡ್‌ ಗರಂ – ಆರಗ ಖಾತೆ ಬದಲಾವಣೆ?

    ಈ ನಡುವೆ 545 ಪಿಎಸ್‍ಐ ಹುದ್ದೆ ನೇಮಕಾತಿ ಅಕ್ರಮ ಪಟ್ಟಿಯನ್ನು ರದ್ದುಗೊಳಿಸಿದ್ದು ಮರು ಪರೀಕ್ಷೆಗೆ ಆದೇಶಿಸಿರುವುದು ಸ್ವಾಗತಾರ್ಹ. ಆದರೆ, ಗೃಹ ಮಂತ್ರಿ ಪ್ರಕಾರ ಆರೋಪಿಗಳನ್ನು ಹೊರತುಪಡಿಸಿ ಉಳಿದವರಿಗೆ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಇದು ಅಸ್ಪಷ್ಟವಾಗಿದ್ದು ಸರ್ಕಾರದ ನಿರ್ಧಾರ ಗೊಂದಲಕ್ಕೆ ಕಾರಣವಾಗಿದೆ. ಮರುಪರೀಕ್ಷೆ ಎಂದರೆ ಲಿಖಿತ ಪರೀಕ್ಷೆಯೋ ಅಥವಾ ದೈಹಿಕ ಪರೀಕ್ಷೆಯೂ ಸೇರಿದೆಯಾ? ಈ ಬಗ್ಗೆ ಸ್ಪಷ್ಟತೆ ಇಲ್ಲ ಯಾಕೆಂದರೆ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಓಎಮ್‍ಆರ್ ಶಿಟ್‍ನಿಂದ ಶುರುವಾದ ಅಕ್ರಮ ಇದೀಗ ಬ್ಲೂಟೂತ್‍ಗೆ ಬಂದು ನಿಂತಿದೆ. ಕೇವಲ ಲಿಖಿತ ಪರೀಕ್ಷೆ ಅಲ್ಲದೆಯೂ ಬೆಳಗಾವಿಯಲ್ಲಿ ನಡೆದ ದೈಹಿಕ ಪರೀಕ್ಷೆಯಲ್ಲಿ ಅಕ್ರಮ ನಡೆದ ಬಗ್ಗೆ ವರದಿಗಳಿವೆ ಹಾಗಾಗಿ ದೈಹಿಕ ಪರೀಕ್ಷೆಯೂ ನಡೆಸಲಾಗುತ್ತಿದೆಯಾ? ಎನ್ನುವುದರ ಬಗ್ಗೆ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಗಲಭೆಕೋರರ ಕುಟುಂಬಕ್ಕೆ ಜಮೀರ್ ಫುಡ್‌ಕಿಟ್ ಹಂಚಿಕೆಗೆ ಬ್ರೇಕ್

    ಪಿಎಸ್‍ಐ ಪರೀಕ್ಷೆ ದೈಹಿಕ, ಓಎಮ್‍ಆರ್, ಬ್ಲೂಟೂತ್ ಸೇರಿದಂತೆ ಮೂರು ರೀತಿಯಲ್ಲಿ ಬೆಂಗಳೂರು, ಹುಬ್ಬಳ್ಳಿ, ಬೆಳಗಾವಿಯಲ್ಲೂ ಅಕ್ರಮ ನಡೆದಿದೆ ಇದರಲ್ಲಿ ನೂರಾರು ಅಭ್ಯರ್ಥಿಗಳು ಭಾಗಿಯಾಗಿದ್ದಾರೆ. 57,000 ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಕೇವಲ ಕಲಬುರಗಿ ಒಂದನ್ನೇ ಪರಿಗಣಿಸಿ ಆದರೆ ಏಳೆಂಟು ಜನ ಆರೋಪಿಗಳನ್ನು ಹೊರೆತುಪಡಿಸಿ ಉಳಿದವರನ್ನು ಪರೀಕ್ಷೆ ಬರೆಯಲು ಅವಕಾಶ ನೀಡುವ ಸರ್ಕಾರದ ನಿರ್ಧಾರ ಜನರ ಗಮನವನ್ನು ಬೇರೆಡೆ ತಿರುಗಿಸಿ ಪ್ರಕರಣ ಮುಚ್ಚಿಹಾಕುವ ಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

    ಕೆಲ ಪ್ರಾಮಾಣಿಕ ಅಭ್ಯರ್ಥಿಗಳು ತಾವು ಸರಿಯಾಗಿ ಪರೀಕ್ಷೆ ಬರೆದಿದ್ದೇವೆ ಈ ಕುರಿತು ಕೋರ್ಟ್‍ಗೆ ಹೋಗುವುದಾಗಿ ಹೇಳಿದ್ದಾರೆ. ಆದರೆ ಹೆಚ್ಚಿನ ರೀತಿಯಲ್ಲಿ ಪರೀಕ್ಷೆಯಲ್ಲಿ ಅಕ್ರಮ ನಡೆದರೆ ಮರುಪರೀಕ್ಷೆ ನಡೆಸಬಹುದು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಹಾಗಾಗಿ ಅಭ್ಯರ್ಥಿಗಳು ನ್ಯಾಯಾಲಯಕ್ಕೆ ಹೋಗಿ ತಮ್ಮ ಸಮಯ ವ್ಯರ್ಥವಾಗಿ ಕಾನೂನಿನ ಸಾಧಕ ಭಾದಕ ತಿಳಿದುಕೊಂಡು ಮುಂದುವರಿಯುವುದು ಬೇಡ ಎಂದು ಕಿವಿ ಮಾತು ಹೇಳಿದರು.

    ಇಂದೇ ಯಾಕೆ ಆದೇಶ?
    ಯಾಕೆ ನಿನ್ನೆ ಮೊನ್ನೆ ಮರುಪರೀಕ್ಷೆಗೆ ಆದೇಶ ನೀಡಲು ಯಾಕೆ ಸಾಧ್ಯವಾಗಿಲ್ಲ? ಎಂದು ಪ್ರಶ್ನಿಸಿದ ಅವರು ದೈಹಿಕ ಪರೀಕ್ಷೆಯಲ್ಲಿ ಸಹ ಅಕ್ರಮ ನಡೆದಿದೆ ದೈಹಿಕ ಮರು ಪರೀಕ್ಷೆ ನಡೆಸುತ್ತಿದ್ದೀರಾ ಅನ್ನುವ ಬಗ್ಗೆ ಸರ್ಕಾರ ಸ್ಪಷ್ಟಪಡಿಸಬೇಕು. ನನಗೆ ಅಥವಾ ಕಾಂಗ್ರೆಸ್‍ಗೆ ಉತ್ತರ ಕೊಡುವ ಬದಲು 57,000 ಅಭ್ಯರ್ಥಿಗಳಿಗೆ ಉತ್ತರ ನೀಡುವ ಮೂಲಕ ತಮ್ಮ ಸರ್ಕಾರ ಭ್ರಷ್ಟಾಚಾರ ವಿರುದ್ಧವಾಗಿದ್ದು ಪಾರದರ್ಶಕವಾಗಿದೆ ಎಂದು ಸರ್ಕಾರ ತೋರಿಸಬೇಕು ಎಂದು ಖರ್ಗೆ ಒತ್ತಾಯಿಸಿದರು. ಇದನ್ನೂ ಓದಿ: ಗಲಭೆಕೋರರ ಕುಟುಂಬಕ್ಕೆ ಜಮೀರ್ ಫುಡ್‌ಕಿಟ್ ಹಂಚಿಕೆಗೆ ಬ್ರೇಕ್

    ಸಿಐಡಿಯವರು ನೀಡಿದ ಮೊದಲನೇಯ ನೋಟಿಸ್ ಅಸ್ಪಷ್ಟ ಹಾಗೂ ಕಾನೂನುಬಾಹಿರವಾಗಿತ್ತು. ಆ ನೋಟಿಸ್‍ಗೆ ಲಿಖಿತ ಉತ್ತರ ನೀಡಿದ್ದೇನೆ. ಈಗ ಮತ್ತೆ ನೋಟಿಸ್ ಕಳುಹಿಸಿದ್ದಾರೆ. ಇದಕ್ಕೆ ಉತ್ತರ ಕೊಡುವ ಅವಶ್ಯಕತೆ ಇಲ್ಲ. ಅಭ್ಯರ್ಥಿಗಳ ಭವಿಷ್ಯದ ಹಿತದೃಷ್ಠಿಯಿಂದ ಹಗರಣವನ್ನು ಪಾರ್ದದರ್ಶಕವಾಗಿ ತನಿಖೆ ನಡೆಸಿ ಎಂದು ಆಗ್ರಹಿಸಿದವರಿಗೆ ನೋಟಿಸ್ ಕೊಡುತ್ತಿದ್ದಾರೆ. ಈ ಸರ್ಕಾರಕ್ಕೆ ತೃಪ್ತಿಯಾಗುವ ಹಾಗಿದ್ದರೆ ನನ್ನನ್ನೂ ಬಂಧಿಸಿ ಮಂಪರು ಪರೀಕ್ಷೆಗೆ ಒಳಪಡಿಸಲಿ ಅದಕ್ಕೂ ಮೊದಲು ಯುವಕರಿಗೆ ನ್ಯಾಯ ಕೊಡಿಸಲಿ ಎಂದು ಲೇವಡಿ ಮಾಡಿದರು.

    ಬಿಟ್ ಕಾಯಿನ್ ವಿಚಾರದಲ್ಲಿಯೂ ಇದೇ ತರ ಖರ್ಗೆ ಹೇಳಿಕೆ ನೀಡಿ ಅದನ್ನು ಅರ್ಧಕ್ಕೆ ನಿಲ್ಲಿಸಿದರು ಅವರಿಗೆ ಹಿಟ್ ಅಂಡ್ ರನ್ ಅಭ್ಯಾಸವಾಗಿದೆ ಹಾಗಾಗಿ ಅವರ ಮಾತುಗಳನ್ನು ಗಂಭೀರವಾಗಿ ಪರಿಗಣಿಸಬಾರದು ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಟೀಕಿಸಿರುವ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್, ಅವರ ಮಾತಿಗೆ ನಾನು ಉತ್ತರ ಕೊಡುವ ಅವಶ್ಯಕತೆ ಇಲ್ಲ. ನನ್ನ ಮಾತು ಗಂಭೀರವಾಗಿ ಪರಿಗಣಿಸುವುದು ಬೇಡ ಆದರೆ, ಈ ಪ್ರಕರಣವನ್ನು ಸಿಐಡಿಗೆ ವಹಿಸಿದ್ದೀರಿ? ನನ್ನ ಮಾತು ಗಂಭೀರವಾಗಿ ತೆಗೆದುಕೊಳ್ಳದಿದ್ದರೆ, ಕಕ ಅಭಿವೃದ್ದಿ ಮಂಡಳಿಯಿಂದ ಸಾಂಸ್ಕೃತಿಕ ಸಂಘಕ್ಕೆ ಅನುದಾನ ಯಾಕೆ ನಿಲ್ಲಿಸಿದರು? ಬಿಟ್ ಕಾಯಿನ್ ಹಗರಣವನ್ನು ಪಾರದರ್ಶಕವಾಗಿ ತನಿಖೆ ನಡೆದರೆ ಬಿಜೆಪಿಯವರಿಗೆ ಮೂರನೇಯ ಸಿಎಂ ಸಿಗುತ್ತಾರೆ ಎಂದು ನಾನು ಈ ಹಿಂದೆ ಹೇಳಿದ್ದೆ ಈಗಲೂ ಆ ಮಾತಿಗೆ ಬದ್ಧ ಎಂದರು.

    ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ ಜಿಲ್ಲೆಯ ಶಾಸಕರೊಬ್ಬರಿಗೆ ಹಣ ಕೊಡಬೇಕು ಎಂದು ಅಧಿಕಾರಿಯೊಬ್ಬರು ಗುತ್ತಿಗೆದಾರರಿಂದ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಹಣ ಪಡೆದುಕೊಂಡಿರುವುದೇ ಇದಕ್ಕೆ ಸಾಕ್ಷಿ ಎಂದು ಕಿಡಿಕಾರಿದರು.

    ಮಾಧ್ಯಮಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ, ಸಂತೋಷ ಪಾಟೀಲ ಧನ್ನೂರು, ಈರಣ್ಣ ಝಳಕಿ, ರಾಜೀವ್ ಜಾನೆ ಸೇರಿದಂತೆ ಮತ್ತಿತರಿದ್ದರು.

  • PSI ನೇಮಕಾತಿ ಅಕ್ರಮ ಪ್ರಕರಣದ ಕ್ವೀನ್‍ಪಿನ್ ದಿವ್ಯಾ ಹಾಗರಗಿ ಅರೆಸ್ಟ್

    PSI ನೇಮಕಾತಿ ಅಕ್ರಮ ಪ್ರಕರಣದ ಕ್ವೀನ್‍ಪಿನ್ ದಿವ್ಯಾ ಹಾಗರಗಿ ಅರೆಸ್ಟ್

    ಬೆಳಗಾವಿ/ಕಲಬುರಗಿ: ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣದ ಕ್ವೀನ್‍ಪಿನ್ ಬಿಜೆಪಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ದಿವ್ಯಾ ಹಾಗರಗಿಯನ್ನು ಶುಕ್ರವಾರ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

    ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಕಳೆದ 18 ದಿನಗಳಿಂದ ತಲೆ ಮರೆಸಿಕೊಂಡಿದ್ದರು. ಆದರೆ ಇಂದು ಸಿಐಡಿ ಎಸ್‌ಪಿ. ರಾಘವೇಂದ್ರ ಹೆಗಡೆ, ಡಿವೈಎಸ್‍ಪಿ, ಪ್ರಕಾಶ್ ರಾಠೋಡ್, ಡಿವೈಎಸ್‍ಪಿ ಶಂಕರಗೌಡ ನೇತೃತ್ವದ ತಂಡದಿಂದ ಮಹಾರಾಷ್ಟ್ರದ ಪುಣೆಯ ಹೋಟೆಲ್‍ವೊಂದರ ಬಳಿ ದಿವ್ಯಾ ಹಾಗರಗಿಯನ್ನು ಬಂಧಿಸಲಾಗಿದೆ. ಇದೇ ವೇಳೆ ಮತ್ತೋರ್ವ ಆರೋಪಿಯಾಗಿದ್ದ ಪರೀಕ್ಷಾ ಕೇಂದ್ರದ ಮೇಲ್ವಿಚಾರಕಿ ಹಾಗೂ ಶಿಕ್ಷಕಿ ಅರ್ಚನಾರನ್ನು ಸಹ ಅಧಿಕಾರಿಗಳು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳು ಪುಣೆಯ ಹೋಟೆಲ್‍ವೊಂದರಲ್ಲಿ ತಂಗಿದ್ದರು. ಸದ್ಯ ಅಧಿಕಾರಿಗಳು ದಿವ್ಯಾ ಹಾಗರಗಿಯನ್ನು ಪುಣೆಯಿಂದ ಕಲಬುರಗಿಗೆ ಕರೆತರುತ್ತಿದ್ದಾರೆ.  ಇದನ್ನೂ ಓದಿ:  ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣ – ಸ್ಫೋಟಕ ಆಡಿಯೋ ಔಟ್

    ಪ್ರಕರಣಕ್ಕೆ ಸಂಬಂಧಿಸಿದ ಇನ್ನೂ ಐವರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇಬ್ಬರನ್ನು ವಿಚಾರಣೆ ನಡೆಸಿ ಅಕ್ರಮದಲ್ಲಿ ಭಾಗಿಯಾಗಿದ್ದರೆ, ಅರೆಸ್ಟ್‌ ಮಾಡಲು ಸಿಐಡಿ ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್

    ದಿವ್ಯಾ ಹಾಗರಗಿ ಒಡೆತನದ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಿಎಸ್‍ಐ ನೇಮಕಾತಿ ಪರೀಕ್ಷೆ ವೇಳೆ ಅಕ್ರಮ ನಡೆದಿತ್ತು. ಇತ್ತೀಚೆಗಷ್ಟೇ ಈ ಪ್ರಕರಣದ ಪ್ರಮುಖ ಆರೋಪಿಯಾದ ಅಫಜಲಪುರ ಬ್ಲಾಕ್‍ನ ಕಾಂಗ್ರೆಸ್ ಅಧ್ಯಕ್ಷನ ಸಹೋದರನಾಗಿರುವ ಕಿಂಗ್ ಪಿನ್ ಆರ್.ಡಿ.ಪಾಟೀಲ್‍ನನ್ನು ಪೊಲೀಸರು ಬಂಧಿಸಿದ್ದರು.

  • ದಿವ್ಯಾ ಹಾಗರಗಿ ಭೇಟಿಯಾಗಿದ್ದು ನಿಜ, ನನಗೂ ನೋಟಿಸ್ ಕೊಡಲಿ: ಡಿ.ಕೆ ಶಿವಕುಮಾರ್

    ದಿವ್ಯಾ ಹಾಗರಗಿ ಭೇಟಿಯಾಗಿದ್ದು ನಿಜ, ನನಗೂ ನೋಟಿಸ್ ಕೊಡಲಿ: ಡಿ.ಕೆ ಶಿವಕುಮಾರ್

    ಬೆಂಗಳೂರು: ಆರೋಪಿ ದಿವ್ಯಾ ಹಾಗರಗಿ ಡಿ.ಕೆ ಶಿವಕುಮಾರ್ ಜೊತೆ ಮಾತನಾಡುತ್ತಿರುವ ಫೋಟೋ ವೈರಲ್ ಆಗುವುದ್ದಕ್ಕೆ ನನಗೂ ನೋಟಿಸ್ ಕೊಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

    ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು ನನಗೂ ನೋಟೀಸ್ ಕೊಡಲಿ, ನನ್ನನ್ನು ವಿಚಾರಣೆಗೆ ಕರೆಯಲಿ ನನಗೂ ಈಗ ಆ ಫೋಟೋ ಬಗ್ಗೆ ಹೇಳಿದ್ರು. ನೂರಾರು ಜನ ಬಂದು ನನ್ನ ಭೇಟಿ ಮಾಡ್ತಾರೆ. ನಾನು ಮಂತ್ರಿಯಾಗಿದ್ದವನು. ಮಂತ್ರಿ ಆಗಿದ್ದಾಗ ದಿವ್ಯಾ ಹಾಗರಗಿ ಯಾವುದೋ ಡೆಲಿಗೇಶನ್ ಕರೆ ತಂದಿದ್ದರು ಮಾತನಾಡಿ ಹೋಗಿದ್ದರು ಎಂದರು.

    ಬಿಜೆಪಿಯವರು ನಮ್ಮ ಬಗ್ಗೆ ಮಾತನಾಡುತ್ತಾರೆ. ಮತನಾಡುತ್ತಾ ಇರಬೇಕು.ನನ್ನ ಹೆಸರು ಬರಬೇಕಲ್ಲ. ಓಡಾಡ್ತಿರುತ್ತೆ ಓಡುವಷ್ಟು ದಿನ ಓಡಲಿ ಎಂದಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: PSI ನೇಮಕಾತಿಯಲ್ಲಿ ಅಕ್ರಮː ಪ್ರಮುಖ ಆರೋಪಿ ದಿವ್ಯಾ ಹಾಗರಗಿ – ಡಿಕೆಶಿ ಜೊತೆಗಿರುವ ಫೋಟೋ ವೈರಲ್

    ಇದೇ ವೇಳೆ ಪ್ರಶಾಂತ್ ಕಿಶೋರ್ ಕೈ ಸೇರ್ಪಡೆ ನಿರಾಕರಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರ ತೀರ್ಮಾನ ಅವರು ತಿಳಿಸಿದ್ದಾರೆ. ಬಹಳ ದಿನಗಳಿಂದ ಚರ್ಚೆಗಳು ನಡೆದವು. ನಾನು ಇಲ್ಲಿ ಅದರ ಬಗ್ಗೆ ಮಾತನಾಡಲ್ಲ. ರಾಷ್ಟ್ರೀಯ ನಾಯಕರು ನಿರ್ಧಾರ ಮಾಡುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ತಾಳಿ ಭಾಗ್ಯ, ಅನ್ನ ಭಾಗ್ಯದಂತಹ ದರಿದ್ರ ಭಾಗ್ಯಗಳು ಬೇಡ: ಸಿಎಂ ಮುಂದೆ ಯತ್ನಾಳ್ ಕಿಡಿ

  • PSI ನೇಮಕಾತಿಯಲ್ಲಿ ಅಕ್ರಮː ಪ್ರಮುಖ ಆರೋಪಿ ದಿವ್ಯಾ ಹಾಗರಗಿ – ಡಿಕೆಶಿ ಜೊತೆಗಿರುವ ಫೋಟೋ ವೈರಲ್

    PSI ನೇಮಕಾತಿಯಲ್ಲಿ ಅಕ್ರಮː ಪ್ರಮುಖ ಆರೋಪಿ ದಿವ್ಯಾ ಹಾಗರಗಿ – ಡಿಕೆಶಿ ಜೊತೆಗಿರುವ ಫೋಟೋ ವೈರಲ್

    ಬೆಂಗಳೂರು: ಪ್ರಸ್ತುತ ರಾಜ್ಯದಲ್ಲಿ ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ತನಿಖೆ ನಡೆಯುತ್ತಿದ್ದು, ದಿನಕ್ಕೊಂದು ಸ್ಪೋಟಕ ಮಾಹಿತಿಗಳು ಹೊರಬೀಳುತ್ತಿವೆ.

    ಈ ಬೆನ್ನಲ್ಲೇ ಪಿಎಸ್‌ಐ ನೇಮಕಾತಿ ಪರೀಕ್ಷಾ ಅಕ್ರಮದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಅವರ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಾತನಾಡುತ್ತಿರುವ ಚಿತ್ರವನ್ನು ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಮುಂದೆ ಹಲವು ಪ್ರಶ್ನೆಗಳನ್ನು ಇಟ್ಟಿದೆ. ಇದನ್ನೂ ಓದಿ: ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ, ಸಿಎಂ ಬದಲಾವಣೆ ಸಾಧ್ಯವೇ ಇಲ್ಲ: ಜಗದೀಶ್ ಶೆಟ್ಟರ್

    ಪ್ರಿಯಾಂಕ್ ಖರ್ಗೆಯವರೇ ಪೂರ್ಣ ಸರ್ಕಾರವೇ ದಿವ್ಯಾ ಹಾಗರಗಿ ಜೊತೆ ಇದೆ ಎಂದು ಆಪಾದಿಸಿದೀರಿ. ಆದರೆ ಇಲ್ಲಿ ನೋಡಿ… ಈ ಚಿತ್ರ ಏನು ಹೇಳುತ್ತದೆ? ಎಂದು ಬಿಜೆಪಿ ಪ್ರಶ್ನಿಸಿದೆ. ಎಷ್ಟೊಂದು ತನ್ಮಯತೆಯಿಂದ ಮಾತಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ದಿವ್ಯಾ ಹಾಗರಗಿ ಜೊತೆಗಿರುವ ಚಿತ್ರವನ್ನು ತಮ್ಮ ಬಿಜೆಪಿ ಕರ್ನಾಟಕ ಟ್ವೀಟ್ ಖಾತೆಯಲ್ಲಿ ಹಂಚಿಕೊಂಡಿದೆ.

    ನಿಮ್ಮ ಪಕ್ಷದ ಯಾರು ಯಾರು ಗೋಡಂಬಿ -ಬಾದಾಮಿ ತಿಂದಿರಬಹುದು ಎಂಬುದನ್ನು ವಿವರಿಸಬಹುದೇ? ಎಂದೂ ಬಿಜೆಪಿ ಲೇವಡಿ ಮಾಡಿ, ನೀವೆಷ್ಟೇ ರಹಸ್ಯ ಕಾರ್ಯಾಚರಣೆ ನಡೆಸಿದರೂ ಸತ್ಯ ಒಂದಿಲ್ಲೊಂದು ದಿನ ಬಯಲಾಗಲೇಬೇಕಲ್ಲವೇ? ಎಂದು ಪ್ರಶ್ನಿಸಿದೆ. ಇದನ್ನೂ ಓದಿ: ಕೋವಿಡ್ ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ಭಾರೀ ದಂಡ – ಯಾವ ರಾಜ್ಯದಲ್ಲಿ ಎಷ್ಟಿದೆ ಗೊತ್ತಾ?

    ಪಿಎಸ್‌ಐ ನೇಮಕ ಹಗರಣ ಕಾಂಗ್ರೆಸ್ ಕೃಪಾಪೋಷಿತರ ನಾಟಕ ಮಂಡಳಿಯ ಟೂಲ್ ಕಿಟ್ ಎಂದು ಸಾರಿ ಸಾರಿ ಹೇಳುವುದಕ್ಕೆ ಸಾಕ್ಷ್ಯ ಇಲ್ಲಿದೆ. ಕಾಂಗ್ರೆಸ್ ಟೂಲ್ ಕಿಟ್ ಷಡ್ಯಂತ್ರಕ್ಕೆ ಕೆಪಿಸಿಸಿ ಅಧ್ಯಕ್ಷರ ಸದಾಶಿವನಗರದ ಬಂಗಲೆಯೇ ಪ್ರಮುಖ ಅಡ್ಡಾವಾಗಿದೆ. ಅಧಿಕಾರ ಇಲ್ಲದೇ ಇದ್ದರೂ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ತುರುಕುವುದಕ್ಕೆ ಕಾಂಗ್ರೆಸ್ ನಾಯಕರಿಗೆ ಮಾತ್ರ ಸಾಧ್ಯ ಎಂದೂ ಹೇಳಿದೆ. ಇದನ್ನೂ ಓದಿ: ತಾಳಿ ಭಾಗ್ಯ, ಅನ್ನ ಭಾಗ್ಯದಂತಹ ದರಿದ್ರ ಭಾಗ್ಯಗಳು ಬೇಡ: ಸಿಎಂ ಮುಂದೆ ಯತ್ನಾಳ್ ಕಿಡಿ

    ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಡಿ.ಕೆ.ಶಿವಕುಮಾರ್ ನಡೆಸುತ್ತಿರುವ ಪ್ರತಿಯೊಂದು ಷಡ್ಯಂತ್ರಕ್ಕೂ ಈಗ ದಾಖಲೆ ಲಭಿಸುತ್ತಿದೆ. ಸಿಡಿ ವಿವಾದ, ಹಿಜಾಬ್ ಸಂಘರ್ಷ, 40 ಪರ್ಸೆಂಟ್ ಕಮಿಷನ್, ಹರ್ಷನ ಕೊಲೆ, ಹುಬ್ಬಳ್ಳಿ ಗಲಭೆ, ಪಿಎಸ್‌ಐ ನೇಮಕ ಹಗರಣ ಎಲ್ಲದಕ್ಕೂ ಸೂತ್ರಧಾರ ಒಬ್ಬರೇ, ಅದು ಡಿ.ಕೆ.ಶಿವಕುಮಾರ್ ಎಂದು ಬಿಜೆಪಿ ಆರೋಪಿಸಿದೆ. ಅಲ್ಲದೆ, ಪಿಎಸ್‌ಐ ನೇಮಕಾತಿ ಪರೀಕ್ಷೆಗೆ ಬ್ಲೂಟೂತ್ ಮೂಲಕ ಉತ್ತರ ರವಾನಿಸಿದ್ದ ಕಾಂಗ್ರೆಸ್ ಮುಖಂಡನ ಬಂಧನ ಎನ್ನುವ ಪತ್ರಕಾ ವರದಿಯನ್ನೂ ಟ್ವೀಟ್ ಮಾಡಿದೆ.

    d k shivakumar

    ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧವೂ ಟ್ವೀಟ್ ವಾರ್ ನಡೆಸಿರುವ ಬಿಜೆಪಿ, ಸಿದ್ದರಾಮಯ್ಯ ಅವರೇ, ಗೋವಿಂದರಾಜ್ ಡೈರಿಯಲ್ಲಿ ನಿಮ್ಮ ಪರ್ಸಂಟೇಜ್ ವ್ಯವಹಾರದ ಲೆಕ್ಕವಿತ್ತೇ? ಅಡಿಯಿಂದ ಮುಡಿಯವರೆಗೂ ಭ್ರಷ್ಟಾಚಾರ ಹೊದ್ದು ಮಲಗಿದ ಸರ್ಕಾರ ನಿಮ್ಮದಾಗಿತ್ತು ಎಂಬುದು ಡೈರಿಯೇ ಹೇಳುತ್ತಿತ್ತು. ತಾನೇ ಕಳ್ಳ ಪರರನ್ನು ನಂಬಬೇಡ ಎನ್ನುವ ಮಾತು ಸಿದ್ದರಾಮಯ್ಯ ಅವರಿಗೆ ಹೇಳಿಮಾಡಿಸಿದಂತಿದೆ ಎಂದು ಸರಣಿ ಟ್ವೀಟ್‌ಗಳನ್ನು ಮಾಡಿದೆ.

  • ದಿವ್ಯಾ ಹಾಗರಗಿ & ಟೀಂಗೆ ನೀರಿಕ್ಷಣಾ ಜಾಮೀನು ಕೊಡಬೇಡಿ: ಸಿಐಡಿ ತಕರಾರು ಅರ್ಜಿ ಸಲ್ಲಿಕೆ

    ದಿವ್ಯಾ ಹಾಗರಗಿ & ಟೀಂಗೆ ನೀರಿಕ್ಷಣಾ ಜಾಮೀನು ಕೊಡಬೇಡಿ: ಸಿಐಡಿ ತಕರಾರು ಅರ್ಜಿ ಸಲ್ಲಿಕೆ

    ಕಲಬುರಗಿ: ಪಿಎಸ್‍ಐ ಅಕ್ರಮ ಪ್ರಕರಣದಲ್ಲಿ 15 ದಿನಗಳಿಂದ ತಲೆ ಮರೆಸಿಕೊಂಡಿರುವ ದಿವ್ಯಾ ಹಾಗರಗಿ & ಟೀಂಗೆ ನಿರೀಕ್ಷಣಾ ಜಾಮೀನು ನೀಡದಂತೆ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.

    ಪಿಎಸ್‍ಐ ನೇಮಕಾತಿ ಪರೀಕ್ಷಾ ಅಕ್ರಮ ಪ್ರಮುಖ ತಾಣವಾದ ಜ್ಞಾನಜ್ಯೋತಿ ಶಾಲೆಯ ಮುಖ್ಯಸ್ಥೆ ದಿವ್ಯಾ ಹಾಗರಗಿ, ಪ್ರಾಂಶುಪಾಲ ಕಾಶಿನಾಥ್ ಮತ್ತು  ಮಂಜುನಾಥ್ ಮೇಳಕುಂದಿ, ಅರ್ಚನಾ ಹೊನಗೇರಿ ಮತ್ತು ಸುನಂದಾ ಸಿಐಡಿ ತನಿಖೆಯಿಂದ ತಲೆ ಮರೆಸಿಕೊಂಡಿದ್ದು, ಅಜ್ಞಾತ ಸ್ಥಳಕ್ಕೆ ಶಿಫ್ಟ್ ಆಗಿದ್ದಾರೆ. ಇದನ್ನೂ ಓದಿ: ಪಿಎಸ್‍ಐ ಹಗರಣಕ್ಕೆ ಮೃತಪಟ್ಟವರ ಮೊಬೈಲ್ ಬಳಕೆ

    ಅಜ್ಞಾತ ಸ್ಥಳದಿಂದಲೇ ದಿವ್ಯಾ & ಟೀಮ್ ನೀರಿಕ್ಷಣಾ ಜಾಮೀನು ಕೋರಿ ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ. ಆದರೀಗ ನೀರಿಕ್ಷಣಾ ಜಾಮೀನಿಗೆ ಸಿಐಡಿ ತಕರಾರು ಅರ್ಜಿ ಸಲ್ಲಿಸಿದೆ. ಇದು ಸಂಘಟಿಕ ಅಪರಾಧ, ಜಾಮೀನು ಕೊಟ್ಟರೆ ಸಾಕ್ಷಿ ನಾಶ ಪಡಿಸುವ ಸಾಧ್ಯತೆ ಇದೆ. ಹಾಗಾಗಿ ಈ ಐವರಿಗೆ ನಿರೀಕ್ಷಣಾ ಜಾಮೀನು ನೀಡಬೇಡಿ ಎಂದು ಕಲಬುರಗಿಯ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯಕ್ಕೆ ಸಿಐಡಿ ತಕರಾರು ಅರ್ಜಿ ಸಲ್ಲಿಸಿದೆ. ಇದನ್ನೂ ಓದಿ: ಅಸಿಸ್ಟೆಂಟ್ ಪ್ರೊಫೆಸರ್ ಎಕ್ಸಾಮ್‍ನಲ್ಲೂ ಗೋಲ್ಮಾಲ್- ಕಾಸು ಕೊಟ್ರೆ ಸರ್ಕಾರಿ ಹುದ್ದೆ..?

    ‌ಸ್ಫೋಟಕ ಮಾಹಿತಿ ಬಹಿರಂಗ:
    ಪಿಎಸ್‍ಐ ಅಕ್ರಮ ನೇಮಕಾತಿ ಕರ್ಮಕಾಂಡವು ಬಗೆದಷ್ಟು ಬಯಲಾಗುತ್ತಿದೆ. ಇದೀಗ ತನಿಖೆಯಲ್ಲಿ ಮತ್ತೊಂದು ವಿಚಾರ ಬೆಳಕಿಗೆ ಬಂದಿದೆ. ಪಿಎಸ್‍ಐ ಪರೀಕ್ಷೆ ಅಕ್ರಮಕ್ಕೆ ಕೋವಿಡ್‍ನಿಂದ ಮೃತಪಟ್ಟ ನೌಕರನ ಮೊಬೈಲ್‍ನನ್ನು ಕಿಂಗ್‍ಪಿನ್ ಆರ್‌.ಡಿ. ಪಾಟೀಲ್ ಬಳಸುತ್ತಿದ್ದ ಎನ್ನುವ ವಿಚಾರ ತನಿಖೆಯಲ್ಲಿ ಬಯಲಾಗಿದೆ.

    ತಮ್ಮ ಬಳಿಯಿರುವ ಮೊಬೈಲ್ ಬಳಸಿದರೆ ಪ್ರಕರಣ ಬಯಲಿಗೆ ಬರುತ್ತದೆ ಎಂದು ಮೃತ ವ್ಯಕ್ತಿಯ ಮೊಬೈಲ್‍ನ್ನು ಬಳಸುತ್ತಿದ್ದೆ ಎಮದು ಒಪ್ಪಿಕೊಂಡಿದ್ದಾನೆ. ಎರಡು ದಿನಗಳ ಹಿಂದೆ ಆರ್‌ಡಿ ಪಾಟೀಲ್ ಸ್ನೇಹಿತ ಮಂಜುನಾಥ್ ಮಲ್ಲುಗೌಡನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರನ್ನು ಕಲಬುರಗಿ ಜೆಎಮ್‍ಎಫ್‍ಸಿ ಕೋರ್ಟ್ 13 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿದೆ.

  • ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ನಾಪತ್ತೆ – ಸರ್ಕಾರದ ವಿರುದ್ಧ ಕಾಂಗ್ರೆಸ್ ಆರೋಪ

    ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ನಾಪತ್ತೆ – ಸರ್ಕಾರದ ವಿರುದ್ಧ ಕಾಂಗ್ರೆಸ್ ಆರೋಪ

    ಬೆಂಗಳೂರು: ಪಿಎಸ್‍ಐ ಪರೀಕ್ಷಾ ಅಕ್ರಮದ ತನಿಖೆ ಚುರುಕುಗೊಂಡಿದೆ. ಆದರೆ ಪ್ರಕರಣದ ಪ್ರಮುಖ ಆರೋಪಿ ಎನ್ನಲಾಗಿರುವ ಬಿಜೆಪಿ ನಾಯಕಿ ದಿವ್ಯಾ ಹಾಗರಗಿಯನ್ನು ಏಳು ದಿನ ಕಳೆದ್ರೂ ಪೊಲೀಸರಿಗೆ ಬಂಧಿಸಲು ಆಗಿಲ್ಲ. ಸರ್ಕಾರವೇ ದಿವ್ಯಾ ಹಾಗರಗಿಯನ್ನು ರಕ್ಷಣೆ ಮಾಡ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

    ಪಿಎಸ್‍ಐ ಸೆಲೆಕ್ಷನ್ ಲಿಸ್ಟ್‌ನಲ್ಲಿದ್ದ ಅಭ್ಯರ್ಥಿಗಳ ವಿಚಾರಣೆಯನ್ನು ಇಂದಿನಿಂದ ಸಿಐಡಿ ಆರಂಭಿಸಿದೆ. ಕೆಪಿಎಸ್‍ಸಿ ವಶದಲ್ಲಿದ್ದ 545 ಪಿಎಸ್‍ಐ ಪರೀಕ್ಷಾರ್ಥಿಗಳ ಓಎಂಆರ್ ಶೀಟ್‍ಗಳನ್ನು ಸಿಐಡಿ ಸೀಜ್ ಮಾಡಿದೆ. ಮೊದಲ ದಿನವಾದ ಇಂದು 50 ಅಭ್ಯರ್ಥಿಗಳ ಪೈಕಿ ಐವರು ಗೈರು ಹಾಜರಾಗಿದ್ರು. ಇವರ ಮೇಲೆ ಸಿಐಡಿಗೆ ಈಗ ಅನುಮಾನ ಮೂಡಿದೆ. ವಿಚಾರಣೆಗೆ ಹಾಜರಾಗಿದ್ದ 45 ಮಂದಿಯ ಓಎಂಆರ್ ಕಾರ್ಬನ್ ಶೀಟ್‍ಗಳನ್ನು ಪರಿಶೀಲಿಸಿದೆ. ನಾಳೆ ಐವತ್ತು ಅಭ್ಯರ್ಥಿಗಳನ್ನು ಸಿಐಡಿ ವಿಚಾರಣೆಗೆ ಒಳಪಡಿಸಲಿದೆ. ಇದನ್ನೂ ಓದಿ: 35 ಲಕ್ಷ ಪಾವತಿ ಮಾಡಿ 5 ಲಕ್ಷ ಸಿಗದೇ ಪೇಚಾಡಿದ – ಆಪ್ತ ಸ್ನೇಹಿತನಿಂದಲೇ ಪಿಎಸ್‌ಐ ಅಕ್ರಮ ಲೀಕ್‌ ಆಗಿದ್ದು ಹೇಗೆ?

    ಪ್ರಕರಣ ನಡೆದು ಏಳು ದಿನ ಕಳೆದರು ದಿವ್ಯಾ ಹಾಗರಗಿ ಬಂಧನವಾಗದೆ ಇರುವುದುರಿಂದ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಮುಗಿಬಿದ್ದಿವೆ. ದಿವ್ಯಾ ಹಾಗರಗಿ ರಾಜ್ಯ ಬಿಟ್ಟು ಎಲ್ಲಿಯೂ ಹೋಗಿಲ್ಲ. ಅವರು ಬೆಂಗಳೂರಿನಲ್ಲಿ ಪ್ರಭಾವಿಗಳ ರಕ್ಷಣೆಯಲ್ಲಿ ಸೇಫ್ ಆಗಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಈ ನಡುವೆ ನಾಳೆ ಕಲಬುರಗಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಹಗರಣದ ಬಿಸಿ ತಾಕುವ ಸಾಧ್ಯತೆಗಳು ಇದೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆಯಲ್ಲಿ ಪೊಲೀಸರ ಹತ್ಯೆಗೆ ಸಂಚು- ಅಟ್ಟಾಡಿಸಿ ಕೊಲ್ಲಲು ಮುಂದಾಗಿದ್ದ ಗಲಭೆಕೋರರು

  • 35 ಲಕ್ಷ ಪಾವತಿ ಮಾಡಿ 5 ಲಕ್ಷ ಸಿಗದೇ ಪೇಚಾಡಿದ – ಆಪ್ತ ಸ್ನೇಹಿತನಿಂದಲೇ ಪಿಎಸ್‌ಐ ಅಕ್ರಮ ಲೀಕ್‌ ಆಗಿದ್ದು ಹೇಗೆ?

    35 ಲಕ್ಷ ಪಾವತಿ ಮಾಡಿ 5 ಲಕ್ಷ ಸಿಗದೇ ಪೇಚಾಡಿದ – ಆಪ್ತ ಸ್ನೇಹಿತನಿಂದಲೇ ಪಿಎಸ್‌ಐ ಅಕ್ರಮ ಲೀಕ್‌ ಆಗಿದ್ದು ಹೇಗೆ?

    ಕಲಬುರಗಿ: 35 ಲಕ್ಷ ಮುಂಗಡ ಪಾವತಿ. ಉಳಿದ ಹಣಕ್ಕೆ ಬೇಡಿಕೆ. ಬೇಡಿಕೆ ಈಡೇರಿಸದ್ದಕ್ಕೆ ಪ್ರಶ್ನೆ ಪತ್ರಿಕೆಯ ಅಕ್ರಮ ವ್ಯವಹಾರ ಔಟ್‌. ಇದು ರಾಜ್ಯದಲ್ಲಿ ಸಂಚಲನಕ್ಕೆ ಕಾರಣವಾಗಿರುವ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌( ಪಿಎಸ್‌ಐ) ಹುದ್ದೆಗಳ ನೇಮಕಾತಿ ಅಕ್ರಮ ಬೆಳಕಿಗೆ ಬಂದ ಒಂದು ಪ್ಯಾರಾ ಸ್ಟೋರಿ.

    ಹೌದು. ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್‌ ಆಗುವುದು ಗೊತ್ತು. ಆದರೆ ಇಲ್ಲಿ ಪ್ರಶ್ನೆ ಪತ್ರಿಕೆ ಅಲ್ಲ. ಒಎಂಆರ್‌ ಶೀಟ್‌ನಲ್ಲೇ ಗೋಲ್ಮಾಲ್‌ ಮಾಡಲಾಗಿದೆ. ಈ ಕೃತ್ಯಕ್ಕೆ ಸಹಕಾರ ನೀಡಿದ ಸ್ನೇಹಿತನಿಂದಲೇ ಈಗ ಈ ಅಕ್ರಮ ಬಯಲಾಗಿರುವುದು ವಿಶೇಷ.

    ಅಕ್ರಮ ಎಸಗಿದ್ದು ಹೇಗೆ?
    2021ರ ಅಕ್ಟೋಬರ್‌ 3 ರಂದು ರಾಜ್ಯಾದ್ಯಂತ ಪಿಎಸ್‌ಐ ಪರೀಕ್ಷೆ ನಡೆದಿತ್ತು. ಕಲಬುರಗಿ ಜ್ಞಾನಜ್ಯೋತಿ ಶಾಲೆಯ ಮುಖ್ಯಸ್ಥೆ ದಿವ್ಯಾ ಮತ್ತು ತಂಡ ಹಣ ಬಲ ಹೊಂದಿರುವ ಅಭ್ಯರ್ಥಿಗಳ ಮಾಹಿತಿ ಸಂಗ್ರಹಿಸಿತ್ತು. ಲಕ್ಷಾಂತರ ರೂ. ನೀಡಿದವರ ಪರವಾಗಿ ಪರೀಕ್ಷೆಯಲ್ಲಿ ಅಕ್ರಮ ಮಾಡಲು ಸಹಕಾರ ನೀಡಿತ್ತು. ಪರೀಕ್ಷೆ ಮುಗಿದ ಬಳಿಕ ಕ್ಯಾಮೆರಾವನ್ನು ಬಂದ್‌ ಮಾಡಿ ಬಳಿಕ ಅಭ್ಯರ್ಥಿಗಳ ಒಎಂಆರ್‌ ಶೀಟ್‌ಗೆ ಸರಿ ಉತ್ತರವನ್ನು ಭರ್ತಿ ಮಾಡಲಾಗಿತ್ತು.

    ಬೆಳಕಿಗೆ ಬಂದಿದ್ದು ಹೇಗೆ?
    ಬಂಧನಕ್ಕೆ ಒಳಗಾದ ವೀರೇಶ್‌ಗೂ ಜ್ಞಾನ ಜ್ಯೋತಿ ಶಾಲೆಯೇ ಪರೀಕ್ಷೆ ಕೇಂದ್ರವಾಗಿತ್ತು. ವೀರೇಶ್ ಜ್ಞಾನ ಜ್ಯೋತಿ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿರುವ ವಿಚಾರ ತಿಳಿದ ಆತನ ಸ್ನೇಹಿತ, ಜ್ಞಾನಜ್ಯೋತಿ ಕೇಂದ್ರವನ್ನೇ ಬಹಳ ಜನ ಇಷ್ಟಪಟ್ಟು ಆಯ್ಕೆ ಮಾಡುತ್ತಾರೆ. ಆದರೆ ನಿನ್ನ ಅದೃಷ್ಟದಿಂದ ಜ್ಞಾನ ಜ್ಯೋತಿ ಶಾಲೆಯ ಸೆಂಟರ್ ‌ಸಿಕ್ಕಿದೆ ಎಂದು ಹೇಳಿದ್ದ.

    ಈ ವಿಚಾರ ತಿಳಿದ ವೀರೇಶ್ ಕುತೂಹಲದಿಂದ ಜ್ಞಾನ ಜ್ಯೋತಿ ಕೇಂದ್ರದ ಬಗ್ಗೆ ವಿಚಾರಿಸಿದ್ದ. ಆಗ ಪಿಎಸ್ಐ ಪರೀಕ್ಷೆಯಲ್ಲಿ ಹಣ ನೀಡಿದರೆ ನೌಕರಿ ಖಂಡಿತ ಸಿಗುತ್ತೆ ಎಂದು ಸ್ನೇಹಿತ ವೀರೇಶನನ್ನು ಸ್ನೇಹಿತ ನಂಬಿಸಿದ್ದ. ಸ್ನೇಹಿತನ ಮಾತನ್ನು ಕೇಳಿದ ವೀರೇಶ್‌ ಎಷ್ಟು ಬೇಕಾದರೂ ಹಣ ನೀಡುತ್ತೇನೆ. ಏನಾದರೂ ಮಾಡಿ ಪರೀಕ್ಷೆಯಲ್ಲಿ ಪಾಸ್‌ ಮಾಡು ಎಂದು ಬೇಡಿಕೊಂಡಿದ್ದ. ವೀರೇಶನ ಮನವಿಯಂತೆ ಸ್ನೇಹಿತ ಅಕ್ರಮದ ಕಿಂಗ್‌ಪಿನ್‌ ಬಗ್ಗೆ ಮಾಹಿತಿ ನೀಡಿದ್ದ. ಬಳಿಕ ವಿರೇಶ್ ಕಿಂಗ್‌ಪಿನ್ ಜೊತೆ ಸೇರಿಕೊಂಡು ಪಿಎಸ್ಐ ನೌಕರಿಯ ಡೀಲ್‌ ಅನ್ನು 80 ಲಕ್ಷಕ್ಕೆ ಕುದುರಿಸಿದ್ದ. ಇದನ್ನೂ ಓದಿ: ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡುವ ಆಲೋಚನೆ ಇಲ್ಲ: ಸುನಿಲ್‍ ಕುಮಾರ್

    ಈ ಡೀಲ್‌ನಂತೆ ಪರೀಕ್ಷೆಗೂ ಮುನ್ನವೇ ವೀರೇಶ್‌ 35 ಲಕ್ಷ ರೂ. ಹಣವನ್ನು ಪಾವತಿಸಿದ್ದ. ಹಣ ಕೊಟ್ಟ ಬಳಿಕ ವೀರೇಶ್‌ ಪರೀಕ್ಷೆಯಲ್ಲಿ ಕೇವಲ 20 ಅಂಕಕ್ಕೆ ಉತ್ತರ ಬರೆದಿದ್ದ. ಆದರೆ ಪರೀಕ್ಷಾ ಫಲಿತಾಂಶದ ವೇಳೆ 121 ಅಂಕ ಬಂದಿತ್ತು. ಇಷ್ಟೊಂದು ಅಂಕ ಬಂದ ಕಾರಣ ಸ್ನೇಹಿತ ವೀರೇಶ್ ಬಳಿ ಉಳಿದ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ.

    ನೀನು ಪಿಎಸ್ಐ ಆಗಲು ದಾರಿ ಹೇಳಿ ಕೊಟ್ಟವನು ನಾನು. ಹಾಗಾಗಿ ಹಣವನ್ನು ಸಂದಾಯ ಮಾಡು. ಕನಿಷ್ಟ ಐದು ಲಕ್ಷ ಹಣ ಕೊಡುವಂತೆ ಪೀಡಿಸುತ್ತಿದ್ದ. ಆದರೆ ವೀರೇಶ್‌ ಬಳಿ ಇಷ್ಟೊಂದು ಹಣ ಇರಲಿಲ್ಲ.

    ಹಣ ಕೊಡದೇ ಇದ್ದಾಗ ವಿರೇಶ್ ಸ್ನೇಹಿತನೇ ಆತನ ಒಎಂಆರ್ ಶೀಟ್ ಬೇರೆ ಅಭ್ಯರ್ಥಿಗಳಿಗೆ ಶೇರ್ ಮಾಡಿ ಅಕ್ರಮದ ಬಗ್ಗೆ ಬಾಯಿ ಬಿಟ್ಟಿದ್ದ. ಆಗ ಪರೀಕ್ಷೆಯಲ್ಲಿ ಅಕ್ರಮ ಆಗಿದೆ ಎಂದು ತಿಳಿದು ಉಳಿದ ಅಭ್ಯರ್ಥಿಗಳು ಸಿಎಂ ಮತ್ತು ಗೃಹ ಸಚಿವರಿಗೆ ದೂರು ನೀಡಿದ್ದರು. ಅಭ್ಯರ್ಥಿಗಳು ಸಲ್ಲಿಸಿದ ದೂರಿನ ಆಧಾರದ ಮೇಲೆ ಸರ್ಕಾರ ಅಕ್ರಮದ‌ ತನಿಖೆಯನ್ನು ಸಿಐಡಿ ಹೆಗಲಿಗೆ ನೀಡಿತ್ತು.

    ಸಿಐಡಿ ಅಧಿಕಾರಿಗಳು ಕಲಬುರಗಿಯ ಚೌಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಿ ಮೊದಲು ಬಂಧಿಸಿದ್ದೆ ವೀರೇಶನನ್ನು. ವೀರೇಶ್ ಬಂಧನದ ಬಳಿಕ ಅಕ್ರಮದ ಬಗ್ಗೆ ಒಂದೊಂದೇ ಮಾಹಿತಿ ಬಹಿರಂಗವಾಗತೊಡಗಿತು. ವೀರೇಶ್‌ನಂತೆ ಇನ್ನೂ ಹಲವಾರು ಅಭ್ಯರ್ಥಿಗಳು ಕಿಂಗ್‌ ಪಿನ್ ಗೆ ಹಣ ನೀಡಿದ್ದರು. ಇದನ್ನೂ ಓದಿ: ಮಠಕ್ಕೆ ನಾನು ಸಿಎಂ ಆಗಿ ಬಂದಿಲ್ಲ, ಭಕ್ತನಾಗಿ ಬಂದಿದ್ದೇನೆ: ಬೊಮ್ಮಾಯಿ

    ಕೋಟಿ ಕೋಟಿ ಹಣ ಪಡೆದ ಕಿಂಗ್‌ ಪಿನ್ ಅಭ್ಯರ್ಥಿಗಳನ್ನು ಪಾಸ್ ಮಾಡಿಸುವಲ್ಲಿ ಯಶಸ್ವಿಯಾಗಿದ್ದ. ಅಕ್ರಮದಲ್ಲಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿಗೂ ಪಾಲು ಸಂದಾಯ ಆಗಿದ್ದು, ಅದಕ್ಕಾಗಿಯೇ ಜ್ಞಾನ ಜ್ಯೋತಿ ಶಾಲೆಯ ಮೇಲ್ವಿಚಾರಕರರಿಗೆ ನಾಲ್ಕು ಸಾವಿರ ರೂ. ಹಣವನ್ನು ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಅಕ್ರಮದ‌ ಬೆಳಕಿಗೆ ಬಂದಂತೆ ದಿವ್ಯಾ ಹಾಗರಗಿ ನಾಪತ್ತೆಯಾಗಿದ್ದು ದಿವ್ಯಾ ಬಂಧನದ ಬಳಿಕವಷ್ಟೇ ಕಿಂಗ್ ಪಿನ್ ಪೂರ್ಣ  ಮಾಹಿತಿ ಹೊರ ಬರಲಿದೆ.

    ವೀರೇಶನಿಗೆ ಸಹಾಯ ಮಾಡಿದ್ದ ಸ್ನೇಹಿತ ಸಹ ಪರೀಕ್ಷೆ ಬರೆದಿದ್ದಾನೆ. ಆತ ಯಾರು? ಯಾವ ಕೇಂದ್ರದಲ್ಲಿ ಬರೆದಿದ್ದಾನೆ ಎಂಬುದರ ಬಗ್ಗೆ ಮಾಹಿತಿ ಸಿಕ್ಕಿಲ್ಲ.

  • ಅಕ್ರಮವಾಗಿ ಹಣ ಸಂಪಾದಿಸಲು ಕಾರ್ಯಕರ್ತರಿಗೆ ಸ್ವತಃ ಸರ್ಕಾರ ಸೂಚನೆ: ಶರಣಪ್ರಕಾಶ್‌

    ಅಕ್ರಮವಾಗಿ ಹಣ ಸಂಪಾದಿಸಲು ಕಾರ್ಯಕರ್ತರಿಗೆ ಸ್ವತಃ ಸರ್ಕಾರ ಸೂಚನೆ: ಶರಣಪ್ರಕಾಶ್‌

    ಕಲಬುರಗಿ: ಅಕ್ರಮ ದಾರಿ ಮೂಲಕ ಹಣ ಸಂಪಾದಿಸಿಕೊಳ್ಳಲು ಬಿಜೆಪಿ ಕಾರ್ಯಕರ್ತರಿಗೆ ಸ್ವತಃ ಸರ್ಕಾರ ಹೇಳಿಕೊಟ್ಟಿದೆ ಎಂದು ಮಾಜಿ ಸಚಿವರಾದ ಕಾಂಗ್ರೆಸ್ ಉಪಾಧ್ಯಕ್ಷ ಡಾ. ಶರಣಪ್ರಕಾಶ್‌ ಪಾಟೀಲ್ ಆರೋಪ ಮಾಡಿದರು.

    ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, 545 ಪಿಎಸ್‍ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಅಕ್ರಮದ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ ಸರ್ಕಾರಕ್ಕೆ ನಾಚಿಕೆ ಆಗಬೇಕು. ದಿವ್ಯಾ ಹಾಗರಗಿ ಬಿಜೆಪಿ ಮಾಜಿ ಮಹಿಳಾ ಮೋರ್ಚಾದ ಅಧ್ಯಕ್ಷೆಯಾಗಿದ್ದರು. ದಿಶಾ ಸಮಿತಿ ಸದಸ್ಯರಿದ್ದಾರೆ. ಜೊತೆಗೆ ಕರ್ನಾಟಕ ನಸಿರ್ಂಗ್ ಕೌನ್ಸಿಲ್ ಸದಸ್ಯರಿದ್ದಾರೆ. ಇಷ್ಟಿದ್ದರೂ ಸಹ ಹಗರಣ ಹೊರಬರುತ್ತಿದ್ದಂತೆ ದಿವ್ಯಾಗೂ ಬಿಜೆಪಿಗೂ ಸಂಬಂಧವಿಲ್ಲ ಅಂತಿದ್ದಾರೆ. ದಿವ್ಯಾ ಹಾಗರಗಿ ಮಾತ್ರವಲ್ಲ ಹಗರಣದಲ್ಲಿ ಇನ್ನೂ ಹಲವು ಬಿಜೆಪಿ ನಾಯಕರಿದ್ದಾರೆ ಎಂದು ದೂರಿದರು.

    ದಿವ್ಯಾ ಹಾಗರಗಿ ಅವರಿಗೆ ಸೇರಿದ ಜ್ಞಾನಜ್ಯೋತಿ ಶಾಲೆಗೆ ಯಾವ ಮಾನದಂಡದ ಮೇಲೆ ಪರೀಕ್ಷಾ ಕೇಂದ್ರವಾಗಿಸಲಾಗಿತ್ತು. ಕೆಲ ನಾಯಕರು ಒತ್ತಡ ಹಾಕುವ ಮುಖಾಂತರ ಪರೀಕ್ಷಾ ಕೇಂದ್ರ ಮಾಡಲಾಗಿದೆ. ಈ ಕೇಂದ್ರದ ಎಲ್ಲಾ ಅಭ್ಯರ್ಥಿಗಳ ಒಎಮ್‍ಆರ್ ಶೀಟ್ ತಪಾಸಣೆ ಮಾಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಬಿಜೆಪಿಯನ್ನು ಬೈದು ಕಾಂಗ್ರೆಸ್ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿರುವುದು ಮುರ್ಖತನ: ಬಿಸಿ ಪಾಟೀಲ್

    ಪಿಎಸ್‍ಐ ನೇಮಕಾತಿ ಹಗಣರವನ್ನು ಬಿಜೆಪಿ ಸರ್ಕಾರ ಮುಚ್ಚಿಹಾಕುವ ಯತ್ನ ಮಾಡುತ್ತಿದೆ. ಪ್ರಕರಣವನ್ನು ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳ ಮೂಲಕ ಸೂಕ್ತ ತನಿಖೆ ನಡೆಸಬೇಕು. ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಹುಬ್ಬಳ್ಳಿ ಗಲಾಟೆಗೆ ಕಾಂಗ್ರೆಸ್‍ನವರೇ ಕಾರಣ: ಬಿಎಸ್‍ವೈ