Tag: Diwali Festival

  • `ದೀಪದ ಬೆಳಕಲ್ಲಿ ಬದುಕಿನ ಪ್ರತಿರೂಪ’ – ಪ್ರತಿದಿನವೂ ಹಬ್ಬವೇ

    `ದೀಪದ ಬೆಳಕಲ್ಲಿ ಬದುಕಿನ ಪ್ರತಿರೂಪ’ – ಪ್ರತಿದಿನವೂ ಹಬ್ಬವೇ

    ಕೈಯಲ್ಲಿ ಸುರ್‌ಸುರ್‌ ಬತ್ತಿ ಸುತ್ತಿಸುತ್ತ, ಕಾಲಿನಡಿ ‘ಕೃಷ್ಣನ ಚಕ್ರ’ ತಿರುಗಿಸುತ್ತಾ ಬೆಳಕಿನ ಚಿತ್ತಾರದಲ್ಲಿ ಕುಣಿದಾಡುವ ಕಲರ್‌ಫುಲ್‌ ದೀಪಾವಳಿ ಹಬ್ಬ (Deepavali Festival) ಆಚರಿಸೋದು ಯಾರಿಗೆ ತಾನೇ ಇಷ್ಟವಾಗಲ್ಲ ಹೇಳಿ? ಹಾಗೇ ಕಿವಿ ಗಡಚಿಕ್ಕುವಂತೆ ಶಬ್ಧ ಮಾಡುವ ಪಟಾಕಿ, ಆಕಾಶಕ್ಕೆ ಮಿಂಚು ಹೊಡೆದಂತೆ ಮಾಡುವ ಬಗೆ ಬಗೆಯ ರಾಕೆಟ್‌ ಹಾರಿಸೋದೇ ಒಂದು ಚೆಂದ. ಎಲ್ಲ ಸಮುದಾಯದ ಜನರೂ ಸಹ ಅಪ್ಪಿ.. ಒಪ್ಪಿ ಸ್ವಾಗತಿಸುವ ಈ ಹಬ್ಬಕ್ಕಾಗಿ ವರ್ಷದಿಂದ ಕಾಯುತ್ತಿರುತ್ತಾರೆ. ಈ ಹಬ್ಬಕ್ಕೆ ಇಂದು ತೆರೆ ಎಳೆಯುವ ಸಮಯ ಬಂದುಬಿಟ್ಟಿದೆ.

    ದೀಪಾವಳಿ ಕತ್ತಲು ಸರಿಸಿ ಬೆಳಗುವ ಹಬ್ಬ ಮಾತ್ರವಲ್ಲ, ನಮ್ಮೊಳಗೂ ಬೆಳಕು ಹರಿವ ಧ್ಯೋತಕವೂ ಹೌದು. ದುಃಖ ದುಮ್ಮಾನಗಳನ್ನು ಸರಿಸಿ ಸಂತಸದ ಹಣತೆ ಹೊತ್ತಿಸುವ ದಿನವೇ ಈ ದೀಪಾವಳಿ.

    ಹಬ್ಬದ ಆಚರಣೆ ಹಿಂದಿನ ಪುರಾಣಗಳೂ ಇದೇ ಸಾರವನ್ನ ಜಗತ್ತಿಗೆ ಸಾರಿವೆ. ಮನೆಯ ಮುಂದೆ ಹಚ್ಚಿಟ್ಟ ಸಾಲು ಸಾಲು ಹಣತೆಗಳು, ಬಾನಲ್ಲಿ ಬೆಳಕಿನ ಚಿತ್ತಾರ, ಒಮ್ಮೊಮ್ಮೆ ಬೆಚ್ಚಿಬೀಳಿಸುವ ಪಟಾಕಿ ಶದ್ಧ, ಹೊಸ ಬಟ್ಟೆ, ಸಿಹಿತಿನಿಸಿಗಳು… ದೀಪಾವಳಿ ಎಂದಾಕ್ಷಣ ಮನದಲ್ಲಿ ತೆರೆದುಕೊಳ್ಳುವ ಚಿತ್ರಗಳಿವು. ಆದ್ರೆ ಇವೆಲ್ಲದರೊಂದಿಗೆ ದೀಪಾವಳಿ ಶ್ರೇಷ್ಠ ಅನ್ನಿಸುವುದು ಅದರ ಆಚರಣೆ ಹಿಂದಿನ ಪುರಾಣಗಳಿಂದ, ಅವು ಸಾರಿರುವ ಸಂದೇಶಗಳಿಂದ. ಕತ್ತಲನ್ನು ಹೊಡೆದೋಡಿಸುವ ಸಂಕೇತವಾಗಿ ಆಚರಿಸುವ ದೀಪಾವಳಿ ಹಿಂದೆ ಹಲವು ಕಥೆಗಳಿವೆ. ಬೆಳಕಿನ ಈ ಹಬ್ಬಕ್ಕೆ ಪುರಾಣದ, ಸಂಪ್ರದಾಯ-ಸಂಸ್ಕೃತಿಯ ದೊಡ್ಡ ಹಿನ್ನೆಲೆಯೇ ಇದೆ.

    ಹಲವು ಧರ್ಮಗಳಲ್ಲಿ ದೀಪಾವಳಿ ಆಚರಣೆ ನಡೆಯುತ್ತದೆ. ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು ಈ ಹಬ್ಬವನ್ನು ವಿವಿಧ ಕಾರಣಗಳಿಗೆ ಆಚರಿಸುತ್ತಾರೆ. ಹಿಂದೂಗಳ ಪ್ರಕಾರ, ರಾವಣನನ್ನು ಸಂಹರಿಸಿ ಅಯೋಧ್ಯೆಗೆ ಮರಳಿದ ರಾಮನಿಗೆ, ಊರಿನಲ್ಲಿ ಸಾಲು ದೀಪಗಳ ಸ್ವಾಗತ ನೀಡಿ, ಅಂದು ದೀಪಾವಳಿಯನ್ನು ಆಚರಿಸಲಾಯಿತು. ದುಷ್ಟಶಕ್ತಿ ಸಂಹಾರದ ಗುರುತಾಗಿ ಈ ಹಬ್ಬದ ಆಚರಣೆ ನಡೆಯಿತಂತೆ.

    ಜೈನರಲ್ಲಿ, ಮಹಾವೀರರು ಮೋಕ್ಷ ಪಡೆದ ದಿನದ ಗುರುತಿಗೆ ಈ ದಿನ ಹಬ್ಬ ಆಚರಿಸುತ್ತಾರೆ. ಮಹಾವೀರರ ನಿರ್ವಾಣ ಸ್ಥಳವಾದ ಬಿಹಾರದ ಪಾವಾಪುರಿಗೆ ಯಾತ್ರೆ ಕೈಗೊಳ್ಳುವುದೂ ಇದೆ. ಸಿಖ್ಖರಿಗೆ ಗುರು ಹರಗೋವಿಂದರು ಮೊಘಲರಿಂದ ಬಿಡುಗಡೆಗೊಂಡ, ಹಲವು ರಾಜರನ್ನೂ ಬಂಧನದಿಂದ ಮುಕ್ತಗೊಳಿಸಿದ ದಿನ. ಈ ಹಬ್ಬ ಮನದ ದುಃಖವೆಂಬ ಬಂಧನದಿಂದ ಬಿಡುಗಡೆಗೊಳ್ಳುವ ಸೂಚಕವೂ ಹೌದಂತೆ.

    ದಕ್ಷಿಣ ಭಾರತದಲ್ಲಿ ದೀಪಾವಳಿಯನ್ನು ಮೂರು ದಿನಗಳ ಕಾಲ ಆಚರಿಸುವ ರೂಢಿಯಿದೆ. ಆಚರಣೆಯು ಪ್ರದೇಶಗಳ ಮೇಲೆ ಅವಲಂಬಿತವಾಗಿರುತ್ತದೆ. ಜಗತ್ತಿಗೆ ಕಂಟಕನಾದ ನರಕಾಸುರನನ್ನು ಸಂಹಾರ ಮಾಡಿದ ದಿನವೇ ನರಕ ಚತುರ್ದಶಿ ಎಂದು ಆಚರಿಸಲಾಗುತ್ತದೆ. 2ನೇ ದಿನ ಲಕ್ಷ್ಮೀ ಪೂಜೆ, 3ನೇ ಬಲಿಪಾಢ್ಯಮಿ ದಿನದಂದು ಗೋ ಪೂಜೆ ಆಚರಿಸಲಾಗುತ್ತದೆ.

    ರೈತಾಪಿ ವರ್ಗ ಕೃಷಿ ಕಾರ್ಯ ಮುಗಿಸುವ ಸಮಯ ಇದಾಗಿದ್ದು, ಮೈಗೊತ್ತಿಕೊಂಡಿರುವ ಭತ್ತದ ಜುಂಗನ್ನು ಬಿಡಿಸಲು ಕೊಯ್ಲು ಕೆಲಸ ಸಂಪೂರ್ಣ ಮುಗಿದ ನಂತರ ತೈಲಾಭ್ಯಂಜನ ಮಾಡಿಕೊಳ್ಳುತ್ತಿದ್ದರು. ಚರ್ಮಕ್ಕೆ ಆದ ತುರಿಕೆ, ನವೆಯನ್ನು ನಿವಾರಿಸಿಕೊಳ್ಳುವ ಚಿಕಿತ್ಸಾ ಪದ್ಧತಿಯಾಗಿ ಸ್ನಾನ ನಡೆಯುತ್ತಿತ್ತು. ಇದನ್ನೇ ನೀರು ತುಂಬುವ ಹಬ್ಬ ಎಂದು ಆಚರಿಸಲಾಗುತ್ತೆ. ಆ ದಿನ ಕೆಲವು ಔಷಧಿಯ ಗಿಡಮೂಲಿಕೆಗಳನ್ನು ನೀರಿಗೆ ಸೇರಿಸಿ ಕಾಯಿಸಿ, ಕುದಿಸಿ ಔಷಧಿಯ ಸಂಶಗಳನ್ನು ಎಣ್ಣೆಗೆ ಸೇರಿಸಿ, ವಿಶೇಷವಾಗಿ ತಯಾರಿಸಿ ಮೈಗೆ ಹಚ್ಚಿಕೊಂಡು ಬಿಸಿನೀರಿನಲ್ಲಿ ಸ್ನಾನ ಮಾಡಲಾಗುತ್ತದೆ. ಇದು ಸ್ನಾಯುಗಳನ್ನು ಗಟ್ಟಿಗೊಳಿಸುತ್ತದೆ. ಜೊತೆಗೆ ದೇಹ, ಮನಸ್ಸಿನ ಜಡ್ಡನ್ನು ತೊಡೆದುಹಾಕುತ್ತದೆ ಅನ್ನೋದು ನಂಬಿಕೆ.

    ಹೀಗೆ ಹಲವು ವಿಧಗಳನ್ನ ದೀಪಾವಳಿ ಆಚರಣೆ ನಡೆಯುತ್ತದೆ. ಆದ್ರೆ ಆಚರಣೆಯ ಕವಲುಗಳು ಹಲವು ಇದ್ದರೂ ಉದ್ದೇಶ ಒಂದೇ. ಕತ್ತಲನ್ನು ತೊಲಗಿಸಿ, ಜ್ಞಾನ ದೀವಿಗೆಯನ್ನು ಮನದಲ್ಲಿ ಹೊತ್ತಿಸುವುದು ಆ ಬೆಳಕಿನಲ್ಲೇ ಬದುಕನ್ನು ನಡೆಸುವುದು. ಅದಕ್ಕಾಗಿ ಬದುಕಲ್ಲಿ ಮತ್ತೆ ಮತ್ತೆ ದೀಪಾವಳಿ ಆಚರಿಸೋಣ….

  • ಕಾರ್ಗಿಲ್ ಯುದ್ಧಭೂಮಿಯಲ್ಲಿ ಯೋಧರೊಂದಿಗೆ ದೀಪಾವಳಿ ಆಚರಿಸಿದ ಮೋದಿ

    ಕಾರ್ಗಿಲ್ ಯುದ್ಧಭೂಮಿಯಲ್ಲಿ ಯೋಧರೊಂದಿಗೆ ದೀಪಾವಳಿ ಆಚರಿಸಿದ ಮೋದಿ

    ನವದೆಹಲಿ: ಇಂದು ಬೆಳ್ಳಂಬೆಳಗ್ಗೆ ಕಾರ್ಗಿಲ್ (Kargil) ಯುದ್ಧಭೂಮಿಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ (Naendra Modi) ಯೋಧರೊಂದಿಗೆ ಸಂಭ್ರಮದಿಂದ ದೀಪಾವಳಿ ಆಚರಿಸಿದ್ದಾರೆ.

    2014 ರಲ್ಲಿ ಅಧಿಕಾರಕ್ಕೆ ಬಂದಾಗಿನಿಂದಲೂ ಪ್ರಧಾನಿ (Prime Minister) ನರೇಂದ್ರ ಮೋದಿ (Narendra Modi) ಪ್ರತಿ ವರ್ಷದ ದೀಪಾವಳಿ ಆಚರಣೆಗೆ ವಿವಿಧ ಮಿಲಿಟರಿ ಸೌಲಭ್ಯ ಕೇಂದ್ರಗಳಿಗೆ ಭೇಟಿ ನೀಡುತ್ತಿದ್ದಾರೆ. ಅದರಂತೆ ಇಂದು ಕಾರ್ಗಿಲ್ ಯುದ್ಧಭೂಮಿಗೆ ತೆರಳಿ ಯೋಧರೊಂದಿಗೆ ದೀಪಾವಳಿ ಆಚರಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಝೈದ್ ಖಾನ್ ನಟನೆಯ ‘ಬನಾರಸ್’ ಸಿನಿಮಾದ ಪ್ರಿರಿಲೀಸ್ ಕಾರ್ಯಕ್ರಮ

    ಬಳಿಕ ದೀಪಾವಳಿ (Diwali) ಸಂದೇಶ ನೀಡಿರುವ ಮೋದಿ ಅವರು, ದೇಶದ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು. ದೀಪಾವಳಿ ಹಬ್ಬ ಕಾಂತಿ ಹಾಗೂ ಹೊಳಪಿಗೆ ಸಂಬಂಧಿಸಿದೆ. ಈ ಪವಿತ್ರ ಹಬ್ಬವು ನಮ್ಮ ಜೀವನದಲ್ಲಿ ಸಂತೋಷ ಮತ್ತು ಯೋಗಕ್ಷೇಮದ ಉತ್ಸಾಹ ಹೆಚ್ಚಿಸಲಿ. ನೀವು ನಿಮ್ಮ ಕುಟುಂಬ, ಸ್ನೇಹಿತರೊಂದಿಗೆ ದೀಪಾವಳಿ ಆಚರಿಸುತ್ತೀರಿ ಎಂದು ನಾನು ಭಾವಿಸುತ್ತೇನೆ ಎಂಬುದಾಗಿ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ದೀಪಾವಳಿಯಂದು ಪಟಾಕಿ ಸಿಡಿಸಲ್ಲ- ಮಕ್ಕಳಿಂದ ಪ್ರತಿಜ್ಞೆ

    ದೀಪಾವಳಿಯಂದು ಪಟಾಕಿ ಸಿಡಿಸಲ್ಲ- ಮಕ್ಕಳಿಂದ ಪ್ರತಿಜ್ಞೆ

    ಚಾಮರಾಜನಗರ: ಪರಿಸರ ರಕ್ಷಣೆಗಾಗಿ ದೀಪಾವಳಿ ಹಬ್ಬದ ದಿನ ಪಟಾಕಿ ಸಿಡಿಸಲ್ಲ ಎಂದು ಚಾಮರಾಜನಗರದ ಸರ್ಕಾರಿ ಶಾಲೆಯೊಂದರ ಮಕ್ಕಳು ಪ್ರತಿಜ್ಞೆ ಮಾಡಿದ್ದಾರೆ.

    ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹೊಂಗಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳು ದೀಪಾವಳಿ ಹಬ್ಬದ ಪಟಾಕಿ ಸಂಭ್ರಮಕ್ಕೆ ಬ್ರೇಕ್ ಹಾಕಿದ್ದಾರೆ. ಹಬ್ಬದಂದು ಪಟಾಕಿ ಸಿಡಿಸುವುದರ ಬದಲು ಪರಿಸರ ಉಳಿಸಲು ಗಿಡ ನೆಡಲು ಮನಸ್ಸು ಮಾಡಿದ್ದಾರೆ.

    ಈ ನಿಟ್ಟಿನಲ್ಲಿ ದೀಪಾವಳಿ ಹಬ್ಬದಲ್ಲಿ ಪಟಾಕಿ ಸಿಡಿಸದೆ ಶಬ್ದ ಮಾಲಿನ್ಯ, ವಾಯು ಮಾಲಿನ್ಯ ಮತ್ತು ಪರಿಸರ ಮಾಲಿನ್ಯ ನಿಯಂತ್ರಣ ಮಾಡುತ್ತೇವೆ ಎಂದು ಪುಟಾಣಿಗಳು ಪ್ರತಿಜ್ಞೆ ಮಾಡಿದ್ದಾರೆ. ಶಾಲಾ ಮಕ್ಕಳ ಈ ನಡೆಗೆ ಪರಿಸರ ಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ದೀಪಾವಳಿ ಪಟಾಕಿ ಪ್ರಿಯರಿಗೆ ಕಹಿ ಸುದ್ದಿ – 2 ಗಂಟೆ ಮಾತ್ರ ಹೊಡೆಯಬಹುದು- ಆದೇಶದಲ್ಲಿ ಏನಿದೆ?

    ದೀಪಾವಳಿ ಪಟಾಕಿ ಪ್ರಿಯರಿಗೆ ಕಹಿ ಸುದ್ದಿ – 2 ಗಂಟೆ ಮಾತ್ರ ಹೊಡೆಯಬಹುದು- ಆದೇಶದಲ್ಲಿ ಏನಿದೆ?

    ಬೆಂಗಳೂರು: ಹಲವರ ನೆಚ್ಚಿನ ದೀಪಾವಳಿ ಹಬ್ಬಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಲು ಸಿದ್ಧತೆ ನಡೆಸಿದ್ದ ಮಂದಿಗೆ ಕಹಿ ಸುದ್ದಿ ನೀಡಿದ್ದು, ಪಟಾಕಿ ಸಿಡಿಸಲು ರಾತ್ರಿ 8 ಗಂಟೆಯಿಂದ 10 ಗಂಟೆ ವರೆಗೆ ಮಾತ್ರ ಅವಕಾಶ ನೀಡಲಾಗಿದೆ.

    ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿಸುವ ನಿಯಮಗಳ ಕುರಿತಂತೆ ಸುಪ್ರೀಂ ಕೋರ್ಟ್ ನೀಡಿದ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಸಚಿವಾಲಯ ಸುತ್ತೋಲೆ ನೀಡಿದೆ. ಈ ಕುರಿತು ಕೆಲ ನಿಯಮಗಳನ್ನು ಪ್ರಕಟಿಸಿದೆ. ಪ್ರಮುಖವಾಗಿ ಹೆಚ್ಚು ಸ್ಫೋಟಕ ಹೊಂದಿರುವ ಪಟಾಕಿ ಮಾರಾಟಕ್ಕೆ ಹಾಗೂ ಬಳಕೆಗೆ ನಿಷೇಧ ಹೇರಲಾಗಿದೆ. ದೀಪಾವಳಿ ಹಬ್ಬದ ಹಿಂದಿನ 7 ದಿನ ಹಾಗೂ ಹಬ್ಬ ಮುಗಿದ ಮೇಲೆ 7 ದಿನ ಕಟ್ಟೆಚ್ಚೆರ ವಹಿಸುವಂತೆ ಹಾಗೂ ಪೊಲೀಸ್ ಇಲಾಖೆಯ ನಿಗದಿತ ನಿಯಮ ಪಾಲನೆ ಬಗ್ಗೆ ಎಚ್ಚರ ವಹಿಸುವಂತೆ ಸೂಚನೆ ನೀಡಿದೆ.

    ಉಳಿದಂತೆ ಸ್ಥಳೀಯ ಪಾಲಿಕೆಯಿಂದ ಪಟಾಕಿ ಹೊಡೆಯುವ ಸಮಯ ಹಾಗೂ ಪಟಾಕಿ ವಿಧಾನದ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ಅವಧಿ ಮೀರಿ ಪಟಾಕಿ ಸಿಡಿಸಿದರೆ ಕ್ರಮ ಕೈಗೊಳ್ಳಲು ಪೊಲೀಸರಿಗೆ ಅವಕಾಶ ನೀಡಲಾಗಿದೆ. ಪಟಾಕಿ ಮಾರಾಟದ ಮೇಲೂ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ. ಜೊತೆಗೆ ನಿರ್ಬಂಧಿತ ಸ್ಫೋಟಕ ಪಟಾಕಿಗಳ ಬಗ್ಗೆಯೂ ಎಚ್ಚರವಾಗಿರಬೇಕು ತಿಳಿಸಿದ್ದು, ಸಮೂಹಿಕವಾಗಿ ಪಟಾಕಿ ಸಿಡಿಸುವ ಸಾಧ್ಯತೆಗಳ ಕುರಿತು ಸ್ಥಳೀಯ ಸಂಸ್ಥೆಗಳು ಚಿಂತನೆ ನಡೆಸುವ ಕುರಿತು ಉಲ್ಲೇಖಿಸಿದೆ.

    ಒಂದೊಮ್ಮೆ ನಿಯಮ ಉಲ್ಲಂಘಿಸಿ ಪಟಾಕಿ ಸಿಡಿಸಿದರೆ ಆ ವ್ಯಾಪ್ತಿಯ ಪೊಲೀಸ್ ಠಾಣಾಧಿಕಾರಿಗಳೇ ಹೊಣೆ ಮಾಡಲಾಗಿದೆ. ನ್ಯಾಯಾಲಯದ ಆದೇಶ ಉಲ್ಲಂಘನೆಯ ತಪ್ಪಿತಸ್ಥರೆಂದು ಪೊಲೀಸರನ್ನು ಗುರಿ ಮಾಡಲಾಗುವುದು ಎನ್ನುವ ಆದೇಶದಲ್ಲಿ ಸೂಚನೆ ನೀಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv