Tag: Dixit Shetty

  • ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ: ಅನಿಮೇಷನ್ ಟೀಸರ್ ಗೆ ಮೆಚ್ಚುಗೆ

    ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ: ಅನಿಮೇಷನ್ ಟೀಸರ್ ಗೆ ಮೆಚ್ಚುಗೆ

    ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ದಂತಹ ಯಶಸ್ವಿ ಚಿತ್ರಗಳ ನಿರ್ಮಾಪಕ ಹೆಚ್.ಕೆ ಪ್ರಕಾಶ್  ನಿರ್ಮಾಣದ, “ದಿಯಾ” ಸೇರಿದಂತೆ ಅನೇಕ ಯಶಸ್ವಿ ಸಿನಿಮಾಗಳ ಮೂಲಕ ಜನಪ್ರಿಯರಾಗಿರುವ ದೀಕ್ಷಿತ್ ಶೆಟ್ಟಿ (Dixit Shetty) ನಾಯಕರಾಗಿ ನಟಿಸಿರುವ ಹಾಗೂ ಅಭಿಷೇಕ್ ಎಂ ನಿರ್ದೇಶನದ “ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ” (Bank of Bhagyalakshmi) ಚಿತ್ರದ ಅನಿಮೇಷನ್‌ ಟೀಸರ್ (Animation Teaser) ಇತ್ತೀಚಿಗೆ ಬಿಡುಗಡೆಯಾಗಿದೆ. ಕನ್ನಡ ಚಿತ್ರರಂಗದಲ್ಲೇ ಹೊಸ ಪ್ರಯೋಗ ಎನ್ನಬಹುದಾದ ಈ ಟೀಸರ್ ಮೂಲಕ ಚಿತ್ರದ ಕಥೆ ಹೇಳುವ ಪ್ರಯತ್ನ ಮಾಡಲಾಗಿದೆ. ಈ ಅನಿಮೇಷನ್‌ ಟೀಸರ್ ಗಾಗಿ ಏಳೆಂಟು ಜನ ನುರಿತ ತಂತ್ರಜ್ಞರು ಸುಮಾರು ತಿಂಗಳ ಕಾಲ ಶ್ರಮ ಪಟ್ಟಿದ್ದಾರೆ‌. ಅನಿಮೇಷನ್‌ ಟೀಸರ್ ಗೆ ಬರುತ್ತಿರುವ ರೆಸ್ಪಾನ್ಸ್ ಗೆ ಬಹಳ ಖುಷಿಯಾಗಿದೆ ಎನ್ನುತ್ತಾರೆ ನಿರ್ದೇಶಕರು.

    ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಬೆಂಗಳೂರು, ತುಮಕೂರು ಹಾಗೂ ಚಿತ್ರದುರ್ಗದಲ್ಲಿ ಚಿತ್ರೀಕರಣ ನಡೆದಿದೆ.ಕೆಲವು ದಿನಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ದೀಕ್ಷಿತ್ ಶೆಟ್ಟಿ ಅವರಿಗೆ ನಾಯಕಿಯಾಗಿ “ಪ್ರೇಮಂ ಪೂಜ್ಯಂ” ಹಾಗೂ “ಕೌಸಲ್ಯ ಸುಪ್ರಜಾ ರಾಮ” ಚಿತ್ರಗಳ ಮೂಲಕ ಜನಪ್ರಿಯರಾಗಿರುವ  ಬೃಂದಾ ಆಚಾರ್ಯ ನಾಯಕಿಯಾಗಿ ಅಭಿನಯಿಸಿದ್ದಾರೆ. ಸಾಧುಕೋಕಿಲ, ಗೋಪಾಲ ಕೃಷ್ಣ ದೇಶಪಾಂಡೆ,ಉಷಾ ಭಂಡಾರಿ, ಭರತ್,ವಿಶ್ವನಾಥ್, ಹರೀಶ್ ಸಮಷ್ಟಿ, ಅಶ್ವಿನ್ ರಾವ್ ಪಲ್ಲಕ್ಕಿ, ಶ್ರೇಯಸ್ ಶರ್ಮಾ, ಶ್ರೀ ವತ್ಸ, ವಿನುತ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

    ಖ್ಯಾತ ನಿರ್ದೇಶಕ ಸಿಂಪಲ್ ಸುನಿ ಅವರ ಜೊತೆ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದ ಅಭಿಷೇಕ್ ಎಂ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಅಭಿಷೇಕ್ ಅವರೆ ಬರೆದಿದ್ದಾರೆ. ಹೆಸರಾಂತ ನಟ ರಕ್ಷಿತ್ ಶೆಟ್ಟಿ, ನಿರ್ದೇಶಕ ಸಚಿನ್ ಹಾಗೂ ಅಭಿಷೇಕ್ ಅವರ ಸಾರಥ್ಯದ “ಪಿನಾಕ” ವಿ ಎಫ್ ಎಕ್ಸ್ ಸ್ಟುಡಿಯೋದಲ್ಲೇ “ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ” ಚಿತ್ರದ ಟೀಸರ್ ನ ಅನಿಮೇಷನ್‌ ವರ್ಕ್ ನಡೆದಿದೆ.

    ಕನ್ನಡ ಹಾಗೂ ತೆಲುಗು ಎರಡು ಭಾಷೆಗಳಲ್ಲಿ ಈ ಚಿತ್ರ ಮೂಡಿಬರಲಿದೆ. ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಅಭಿಷೇಕ್ ಜಿ ಕಾಸರಗೋಡು ಛಾಯಾಗ್ರಹಣ, ರಘು ಮೈಸೂರ್ ಕಲಾ ನಿರ್ದೇಶನ ಹಾಗೂ ಭೂಷಣ್ ಮಾಸ್ಟರ್ ನೃತ್ಯ ಈ ಚಿತ್ರಕ್ಕಿದೆ.

  • ಗಣರಾಜ್ಯೋತ್ಸವ ದಿನದಂದು ನಟ ದೀಕ್ಷಿತ್ ಶೆಟ್ಟಿ ಸಂಕಲ್ಪ

    ಗಣರಾಜ್ಯೋತ್ಸವ ದಿನದಂದು ನಟ ದೀಕ್ಷಿತ್ ಶೆಟ್ಟಿ ಸಂಕಲ್ಪ

    ದೀಕ್ಷಿತ್ ಶೆಟ್ಟಿ (Dixit Shetty) ಹಾಗೂ ಚೈತ್ರ ಆಚಾರ್‍ (Chaitra Achar) ಮುಖ್ಯಭೂಮಿಯಲ್ಲಿ ನಟಿಸಿರುವ ‘ಬ್ಲಿಂಕ್’ (Blink) ಚಿತ್ರತಂಡ, ಚಿತ್ರೀಕರಣದ ದಿನದಿಂದಲೂ ತಮ್ಮ ವಿನೂತನ ಪ್ರಚಾರ ತಂತ್ರಗಳಿಂದ ಚಂದನವನದಲ್ಲಿ ಗಮನ ಸೆಳೆದಿದೆ. ತಮ್ಮ ಚಿತ್ರವನ್ನು ಜನರಿಗೆ ಮುಟ್ಟಿಸುವಲ್ಲಿ ಗೆಲ್ಲಲೇಬೇಕು ಎಂದು ಶಪಥ ಮಾಡಿರುವ ಈ ತಂಡ ಯಾವುದೇ ಮುಚ್ಚು ಮರೆ ಇಲ್ಲದೆ , ನೂತನ ಚಿತ್ರಗಳನ್ನು ಕಟ್ಟುವಲ್ಲಿ , ಜನರಿಗೆ ತಲುಪಿಸುವಲ್ಲಿ ಇರುವ ಸಮಸ್ಯೆಗಳನ್ನು ತಿಳಿಸಲು ವಿನೂತನ ಪ್ರಯೋಗ ಮಾಡಿದ್ದು ‘ಜನರಿಂದಲೇ ಸಿನಿಮಾ, ಜನರೇ ಸಿನಿಮಾ’ ಎಂಬಾ ವಿಶಿಷ್ಟ ಸಾಲುಗಳು ಜನರ ಮನಸ್ಸನ್ನು ಗೆಲ್ಲುತ್ತಿವೆ. ಚಿತ್ರಮಂದಿರದಿಂದ ದೂರ ಉಳಿದಿರುವ ಜನರಿಗೆ, ಮತ್ತೆ ಚಿತ್ರಮಂದಿರದ ಆ ಮಾಂತ್ರಿಕ ಜಗತ್ತಿನ ವಿಶೇಷತೆಯನ್ನು ಮನಮುಟ್ಟುವಂತೆ ನಿರೂಪಿಸಿದ್ದಾರೆ.

    ಈಗಾಗಲೇ ತಮ್ಮ ಹೊಸತನದಿಂದ ಜನರ ಗಮನಸೆಳೆದಿರುವ ಬ್ಲಿಂಕ್ ತಂಡವು ಮಾರ್ಚ್ ನಲ್ಲಿ ಚಿತ್ರಮಂದಿರದೊಳಗೆ ಪ್ರವೇಶಿಸಲು ಎಲ್ಲಾ ಸಿದ್ದತೆ ಮಾಡಿಕೊಂಡಿದೆ. ಜನನಿ ಪಿಕ್ಚರ್ಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಬ್ಲಿಂಕ್ ಚಿತ್ರವು ಸೈಫೈ ಪ್ರಕಾರದ ಚಿತ್ರವಾಗಿದ್ದು ಪ್ರೇಕ್ಷಕರನ್ನು ಸೆಳಿದಿಟ್ಟುಕೊಳ್ಳುವುದು ಖಂಡಿತವೆಂದು ನಿರ್ಮಾಪಕ ರವಿಚಂದ್ರ ಎ ಜೆ ಹೇಳುತ್ತಾರೆ .

    ತಮ್ಮ ಚೊಚ್ಚಲ ನಿರ್ದೇಶನದಲ್ಲೇ ಚಿತ್ರದ ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸನ್ನು ಗೆದ್ದಿರುವ ನಿರ್ದೇಶಕ ಶ್ರೀನಿಧಿ ಬೆಂಗಳೂರುರವರು, ಇದೊಂದು ಕಾಲ್ಪನಿಕ ಕಥೆಯಾಗಿದ್ದು ..ಕನ್ನಡ ಚಿತ್ರರಂಗದಲ್ಲಿ ಈ ಪ್ರಕಾರದ ಚಿತ್ರಗಳು ತೀರಾ ಕಡಿಮೆ ತೆರೆಕಂಡಿದ್ದು  ಈ ಚಿತ್ರವು ನೋಡುಗರಲ್ಲಿ ಹೊಸತನ ಮೂಡಿಸುತ್ತದೆ ಎಂದು ನಿರ್ದೇಶಕ ಶ್ರೀನಿಧಿ ಬೆಂಗಳೂರು ಹೇಳುತ್ತಾರೆ ದಿಯಾ, ದಸರಾ ಖ್ಯಾತಿಯ ನಟ ದೀಕ್ಷಿತ್ ಶೆಟ್ಟಿಯವರು ನಾಯಕ ನಟನ ಜವಬ್ದಾರಿಯನ್ನು ಹೊತ್ತಿದ್ದಾರೆ.. ಹಾಗೂ ಹೊಸ ದಿನಚರಿ ಖ್ಯಾತಿಯ ಮಂದಾರ ಬಟ್ಟಲಹಳ್ಳಿ ನಾಯಕಿನಟಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

     

    ಇತ್ತೀಚಿಗೆ ತೆರೆಕಂಡ ಟೋಬಿ ಮತ್ತು ಸಪ್ತಸಾಗರದಾಚೆ ಎಲ್ಲೋ 2 ಚಿತ್ರದ ಸುರಭಿ ಪಾತ್ರಧಾರಿ ಚೈತ್ರ ಜೆ ಆಚಾರ್ ಬ್ಲಿಂಕ್ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದಾರೆ ಹಾಗೂ ವಜ್ರಧೀರ್ ಜೈನ್, ಗೋಪಾಲಕೃಷ್ಣ ದೇಶಪಾಂಡೆ, ಕಿರಣ್ ನಾಯ್ಕ್, ಮುರುಳಿ ಶೃಂಗೇರಿ, ಸುರೇಶ್ ಅನಗಹಳ್ಳಿ ಸೇರಿದಂತೆ ಇನ್ನು ದೊಡ್ಡ ತಾರಬಳಗವಿದೆ. ಈ ಚಿತ್ರಕ್ಕೆ ಪ್ರಸನ್ನ ಕುಮಾರ್ ಎಂ ಎಸ್ ರವರ ಸಂಗೀತ ನಿರ್ದೇಶನವಿದ್ದು , ಅವಿನಾಶ ಶಾಸ್ರ್ತಿ ಅವರ ಕ್ಯಾಮೆರಾ ಕೈ ಚಳಕವಿದೆ.

  • ’ಬ್ಲಿಂಕ್’ ಸಿನಿಮಾದ ಮೆಲೋಡಿ ಹಾಡು ರಿಲೀಸ್: ಸಖಿಯೆ ಎಂದ ದೀಕ್ಷಿತ್ ಶೆಟ್ಟಿ

    ’ಬ್ಲಿಂಕ್’ ಸಿನಿಮಾದ ಮೆಲೋಡಿ ಹಾಡು ರಿಲೀಸ್: ಸಖಿಯೆ ಎಂದ ದೀಕ್ಷಿತ್ ಶೆಟ್ಟಿ

    ಟೀಸರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಬ್ಲಿಂಕ್ (Blink) ಸಿನಿಮಾದ ಎರಡನೇ ಹಾಡು ರಿಲೀಸ್ ಆಗಿದೆ. ಈ ಹಿಂದೆ ಬಿಡುಗಡೆಯಾಗಿದ್ದ ಆಗಂತುಕ ಸಾಂಗ್ (Song) ಗೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿತ್ತು. ಇದೀಗ ಬ್ಲಿಂಕ್ ಅಂಗಳದಿಂದ ಸಖಿಯೆ ಎಂಬ ಮೆಲೋಡಿ ಹಾಡು ಅನಾವರಣಗೊಂಡಿದೆ. ಪ್ರಮೋದ್ ಮರವಂತೆ ಸಾಹಿತ್ಯದ ಗೀತೆಗೆ ಸಿದ್ದಾರ್ಥ್ ಬೆಳ್ಮಣ್ಣು ಧ್ವನಿಯಾಗಿದ್ದು, ಪ್ರಸನ್ನ ಕುಮಾರ್ ಎಂ.ಎಸ್ ಸಾಹಿತ್ಯ ಒದಗಿಸಿದ್ದಾರೆ. ಬೆಂಗಳೂರಿನ ಎಸ್ ಆರ್ ವಿ ಥಿಯೇಟರ್ ನಲ್ಲಿ ಹಾಡು ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ವೇಳೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

    ನಿರ್ದೇಶಕ ಶ್ರೀನಿಧಿ ಬೆಂಗಳೂರು (Srinidhi Bangalore) ಮಾತನಾಡಿ, ರಂಗಭೂಮಿ ಜೊತೆ ಜೊತೆಯಲಿ ಸಿನಿಮಾ ಮಾಡಬೇಕೆಂಬ ಕನಸು ಇತ್ತು. ಕೋವಿಡ್ ಸಮಯದಲ್ಲಿ ಒಂದಿಷ್ಟು ಸಿನಿಮಾ ನೋಡ್ತಾ ನಾವು ಯಾಕೆ ಈ ರೀತಿ ಸಿನಿಮಾಗಳನ್ನು ಕನ್ನಡದಲ್ಲಿ ಮಾಡಬಾರದೆಂಬ ಯೋಚನೆ ಬಂತು. ಸ್ನೇಹಿತರು ಮತ್ತು ರಂಗಭೂಮಿ ಗೆಳೆಯರಿಂದ ಈ ಸಿನಿಮಾ ತಯಾರಾಗಿದೆ. ಸಿನಿಮಾ ಮಾಡಬೇಕೆಂಬ ಆಲೋಚನೆ ನಮ್ಮದು. ಸಿನಿಮಾ ಆಗಿದ್ದೆಲ್ಲಾ ಪ್ರಕೃತಿ ನಮಗೆ ಮಾಡಿದ ಬೆಂಬಲ ಮಾಡಿದೆ ಎಂದರು.

    ನಾಯಕ ದೀಕ್ಷಿತ್ (Dixit Shetty) ಮಾತನಾಡಿ, ಬ್ಲಿಂಕ್ ಸಿನಿಮಾ ಯಾವುದೇ ಪರ್ಟಿಕ್ಯೂಲರ್ ಜಾನರ್ ಗೆ ಬೀಳಲ್ಲ. ಸೈನ್ಸ್ ಫಿಕ್ಷನ್ ಸಣ್ಣ ಎಳೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಮನುಷ್ಯತ್ವ, ಮನುಷ್ಯ ಪ್ರೀತಿ ಅನ್ನೋವುದನ್ನು ಸಿನಿಮಾ ತೋರಿಸಿಕೊಡುತ್ತದೆ. ಸೈನ್ಸ್ ಫಿಕ್ಷನ್ ಎಂದರೆ ಒಂದು ಲ್ಯಾಬ್ ಅಥವಾ ಬೇರೆ ಪ್ರಪಂಚದಲ್ಲಿ ನಡೆಯುವ ಕಥೆಯಾಗಿರುತ್ತದೆ. ಬಟ್ ಇದು ಹಾಗಲ್ಲ. ನಮ್ಮಂತಹ ಮಧ್ಯಮ ವರ್ಗದ ನಡುವೆ ಸೈನ್ಸ್ ಫಿಕ್ಷನ್ ಆದರೆ ಏನೆಲ್ಲ ಕಳವಳ ಆಗಬಹುದು.. ಏನೆಲ್ಲಾ ಸನ್ನಿವೇಶ ಎದುರಿಸಬಹುದು ಅನ್ನೋದು ಈ ಸಿನಿಮಾದ ಮುಖ್ಯಕಥೆ ಎಂದರು.

    ನಾಯಕಿ ಮಂದಾರ ಮಾತನಾಡಿ, ನಾನು ಸ್ವಪ್ನ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ನಮ್ಮ ನಿರ್ದೇಶಕರು ನನಗೆ ಐದಾರು ವರ್ಷಗಳಿಂದ ಪರಿಚಯ. ಅವರೇ ನಾಟಕಗಳನ್ನು ಬರೆದು ನಟಿಸಿ ನಿರ್ದೇಶಿಸುತ್ತಿದ್ದರು. ಅಂದಿನಿಂದ ಅವರು ನನಗೆ ಸ್ನೇಹಿತರು. ಬ್ಲಿಂಕ್ ಸಿನಿಮಾದ ಸ್ಕ್ರೀಪ್ಟ್ ಕೇಳಿದಾಗ ಖುಷಿಯಾಯಿತು. ನಾನು ಮಧ್ಯಮ ವರ್ಗದ ಹುಡುಗಿಯಾಗಿ ಕಾಣಿಸಿಕೊಂಡಿದ್ದೇನೆ. ಸಿನಿಮಾದ ಎಲ್ಲಾ ಹಾಡುಗಳು ಅದ್ಭುತವಾಗಿ ಮೂಡಿಬಂದಿದೆ. ಕನ್ನಡದಲ್ಲಿ ಲೂಸಿಯಾ, ಬೆಲ್ ಬಾಟಂ, ರಂಗಿತರಂಗ ಸಿನಿಮಾಗಳು ಹೇಗೆ ಕ್ರಾಂತಿ ಮಾಡಿದವೋ. ಹಾಗೆಯೇ ಈ ಚಿತ್ರವೂ ಮೈಲಿಗಲ್ಲಾಗಲಿದೆ ಎಂಬ ಭರವಸೆ ಇದೆ ಎಂದರು.

    ಜನನಿ ಪಿಕ್ಚರ್ಸ್ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ ಮೂಡಿ ಬರ್ತಿರುವ ಬ್ಲಿಂಕ್ ಕನ್ನಡದಲ್ಲಿ ಒಂದು ಹೊಸ ಶೈಲಿಯ ಸಿನಿಮಾ , ವಿನೂತನ ಚಿತ್ರಕಥೆಯ ಈ ಚಿತ್ರ ಕನ್ನಡದ ಮಟ್ಟಿಗೆ ಹೊಸ ಪ್ರಯೋಗ. ಬ್ಲಿಂಕ್ ಸಿನಿಮಾಗೆ ರವಿಚಂದ್ರ ಎ ಜೆ ಬಂಡವಾಳ ಹೂಡಿದ್ದು, ಶ್ರೀನಿಧಿ ಬೆಂಗಳೂರು ಆಕ್ಷನ್ ಕಟ್ ಹೇಳಿದ್ದಾರೆ. ಇದು ಇವರ ಚೊಚ್ಚಲ ಹೆಜ್ಜೆ. ಮಿಡಲ್ ಕ್ಲಾಸ್ ಹುಡುಗನ ಜೀವನದಲ್ಲಿ ನಡೆಯುವ unexpected ಘಟನೆಗಳು ಹೇಗೆ ಆವನ ಸುತ್ತ- ಮುತ್ತಲಿನ ವಾತಾವರಣ ಬದಲಿಸುತ್ತದೆ ಎಂಬುದು ಈ ಕಥೆಯ ಸಾರಾಂಶ. Sci-Fi ಶೈಲಿಯಲ್ಲಿ ಮೂಡಿಬರುತ್ತಿರುವ ಬ್ಲಿಂಕ್ ಚಿತ್ರಕ್ಕೆ ನಾಯಕ ನಟರಾಗಿ ದಿಯಾ ಹಾಗೂ ದಸರಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ಅಭಿನಯಿಸಿದ್ದಾರೆ. ನಾಯಕಿಯಾರಾಗಿ ಮಂದಾರ ಬಟ್ಟಲಹಳ್ಳಿ ಹಾಗೂ ಚೈತ್ರ ಜೆ ಆಚಾರ್ ನಟಿಸುತ್ತಿದ್ದು, ವಜ್ರಧೀರ್ ಜೈನ್ , ಗೋಪಾಲ ಕೃಷ್ಣದೇಶಪಾಂಡೆ , ಕಿರಣ್ ನಾಯ್ಕ್ ಮತ್ತು ಹಲವಾರು ಕಲಾವಿದರ ತಾರಗಣವಿದ್ದು,  ಅವಿನಾಶ ಶಾಸ್ರ್ತಿ ರವರ ಛಾಯಾಗ್ರಹಣ, ಮತ್ತು  ಸಂಜೀವ್ ಜಾಗಿರ್ದಾರ್ ರವರ ಸಂಕಲನವಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಲಾಲ್ ಬಾಗ್ ನಲ್ಲಿ ರಿಲೀಸ್ ಆಯಿತು ಬ್ಲಿಂಕ್ ಚಿತ್ರದ ‘ಆಗಂತುಕ’ ಸಾಂಗ್

    ಲಾಲ್ ಬಾಗ್ ನಲ್ಲಿ ರಿಲೀಸ್ ಆಯಿತು ಬ್ಲಿಂಕ್ ಚಿತ್ರದ ‘ಆಗಂತುಕ’ ಸಾಂಗ್

    ನನಿ ಪಿಕ್ಚರ್ಸ್ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ ರವಿಚಂದ್ರ ಎ ಜೆ ನಿರ್ಮಿಸುತ್ತಿರುವ , ಶ್ರೀನಿಧಿ ಬೆಂಗಳೂರು (Srinidhi Bangalore) ನಿರ್ದೇಶನದ ಚೊಚ್ಚಲ ಸಿನಿಮಾ ‘ಬ್ಲಿಂಕ್’ (Blink). ಈಗಾಗಲೇ ಎಲ್ಲಾ ಕೆಲಸಗಳನ್ನು ಮುಗಿಸಿ ಬೆಳ್ಳಿಪರದೆಗೆ ಬರಲು ಸಿನಿಮಾ ಸಜ್ಜಾಗಿದೆ.

    ಈ ನಿಟ್ಟಿನಲ್ಲಿ ಚಿತ್ರದ ಮೊದಲನೇ ಹಾಡನ್ನು ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿತ್ತು. ಇದೀಗ ರಿಲೀಸ್ ಮಾಡಿದೆ. ಇದು  ರಾಪ್ ಶೈಲಿಯ ಹಾಡಾಗಿದ್ದು (Song) ಭಾರತದ ಪಾರಂಪರಿಕ ಸಂಗೀತವನ್ನು ಒಳಗೊಂಡಿದೆ. ಇದನ್ನೂ ಓದಿ:ಅಪ್ಪನ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರೂಪೇಶ್ ಶೆಟ್ಟಿ

    ನಮ್ಮ ಮಣ್ಣಿನ ಪ್ರಖ್ಯಾತ ರಾಪರ್ ಆದ ಅನೂಪ್ ( ಕಾಟಕೊಡು) ರಾಪ್ ಭಾಗವನ್ನು ಅತ್ಯುತ್ತಮವಾದ ಸಾಹಿತ್ಯದ ಜೊತೆಗೆ ಅವರ ದನಿಯ ಮೂಲಕ ಮೆರಗು ನೀಡಿದ್ದಾರೆ. ಬ್ಲಿಂಕ್ ಚಿತ್ರದ ಸಂಗೀತ ನಿರ್ದೇಶಕರಾದ ಪ್ರಸನ್ನ ಕುಮಾರ್ ಎಂ ಎಸ್ ಈ ಹಾಡಿಗೆ ಸಂಗೀತ ಸಂಯೋಜಿಸಿದ್ದಾರೆ. ಕೌಮುದಿಯವರು ಈ ಹಾಡಿಗೆ ದನಿಯಾಗುವ ಮೂಲಕ ಕನ್ನಡ ನಾಡಿನ ಜನತೆಗೆ ಪರಿಚಯವಾಗಲಿದ್ದಾರೆ.

     

    ಈ ಚಿತ್ರದ ಮುಖ್ಯಭೂಮಿಕೆಯಲ್ಲಿ ದೀಕ್ಷಿತ್ ಶೆಟ್ಟಿ(Dixit Shetty) , ಚೈತ್ರ ಜೆ ಆಚಾರ್ (Chaitra Achar), ಮಂದಾರ ಬಟ್ಟಲಹಳ್ಳಿ , ವಜ್ರಧೀರ್ ಜೈನ್ , ಗೋಪಾಲ ಕೃಷ್ಣದೇಶಪಾಂಡೆ , ಕಿರಣ್ ನಾಯ್ಕ್ ಮತ್ತು ಹಲವಾರು ಕಲಾವಿದರ  ತಾರಾಗಣದಲ್ಲಿದ್ದು,  ಅವಿನಾಶ ಶಾಸ್ರ್ತಿ ಛಾಯಾಗ್ರಹಣ, ಮತ್ತು  ಸಂಜೀವ್ ಜಾಗಿರ್ದಾರ್ ಸಂಕಲನವಿದೆ., ಆಗಂತುಕ ಶೀರ್ಷಿಕೆಯೊಂದಿಗೆ ಹೊರ ಬರುತ್ತಿರುವ ಈ ಹಾಡು  ಆಗಸ್ಟ್ 15 ರಂದು ಲಾಲ್ ಭಾಗ್ ನಲ್ಲಿ ಪುಷ್ಪ ಪ್ರದರ್ಶನದಲ್ಲಿ ಬಿಡುಗಡೆಯಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾನಿ ಸಿನಿಮಾದಲ್ಲಿ ‘ದಿಯಾ’ ಖ್ಯಾತಿಯ ದೀಕ್ಷಿತ್ ಶೆಟ್ಟಿ ನಟನೆ

    ನಾನಿ ಸಿನಿಮಾದಲ್ಲಿ ‘ದಿಯಾ’ ಖ್ಯಾತಿಯ ದೀಕ್ಷಿತ್ ಶೆಟ್ಟಿ ನಟನೆ

    ‘ದಿಯಾ’ (Diya) ಸಿನಿಮಾ ಮೂಲಕ ಖ್ಯಾತಿ ಗಳಿಸಿರುವ ದೀಕ್ಷಿತ್ ಶೆಟ್ಟಿ (Dixit Shetty) ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ಬೆಳ್ಳಿ ತೆರೆ ಮೇಲೆ ಮಿಂಚಲು ರೆಡಿಯಾಗಿದ್ದಾರೆ. ‘ದಿಯಾ’ ಸಿನಿಮಾದಲ್ಲಿ ಸಿಂಪಲ್ ಹುಡುಗನ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದ ದೀಕ್ಷಿತ್ ನ್ಯಾಚುರಲ್ ಸ್ಟಾರ್ ನಾನಿ (Nani) ಅಭಿನಯದ ‘ದಸರಾ’ (Dasara) ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದನ್ನು ನಿಭಾಯಿಸಿದ್ದಾರೆ. ಇದೇ ಮಾರ್ಚ್ 30ರಂದು ‘ದಸರಾ’ ವರ್ಲ್ಡ್ ವೈಡ್ ಬಿಡುಗಡೆಯಾಗುತ್ತಿದ್ದು, ಸೂರಿ ಪಾತ್ರದ ಮೂಲಕ ದೀಕ್ಷಿತ್ ಶೆಟ್ಟಿ ತೆರೆ ಮೇಲೆ ಬರ್ತಿದ್ದಾರೆ.

    ಶ್ರೀಕಾಂತ್ ಒಡೆಲಾ ನಿರ್ದೇಶನದಲ್ಲಿ ನ್ಯಾಚುರಲ್ ಸ್ಟಾರ್ ನಾನಿ, ಕೀರ್ತಿ ಸುರೇಶ್ ಅಭಿನಯದ ‘ದಸರಾ’ ಸಖತ್ ಬಝ್ ಕ್ರಿಯೇಟ್ ಮಾಡಿದೆ. ಟೀಸರ್ ಮೂಲಕ ವರ್ಲ್ಡ್ ವೈಡ್ ಸಖತ್ ಸೌಂಡ್ ಮಾಡಿರುವ ಈ ಚಿತ್ರ ನಾನಿ ಬಹು ನಿರೀಕ್ಷಿತ  ಪ್ಯಾನ್ ಇಂಡಿಯಾ ಪ್ರಾಜೆಕ್ಟ್. ಈ ಚಿತ್ರದಲ್ಲಿ ಕನ್ನಡದ ನಟ ದೀಕ್ಷಿತ್ ಶೆಟ್ಟಿ ನ್ಯಾಚುರಲ್ ಸ್ಟಾರ್ ಜೊತೆ ಸ್ಕ್ರೀನ್ ಶೇರ್ ಮಾಡಿರೋದು ವಿಶೇಷ. ಇದನ್ನೂ ಓದಿ: Biffes 2023- ಇಂದು ಸಂಜೆ 4.30ಕ್ಕೆ ಬೆಂಗಳೂರು ಚಿತ್ರೋತ್ಸವಕ್ಕೆ ಚಾಲನೆ

    ನಾನಿ ಸರ್ ಪ್ರೊಡಕ್ಷನ್ ಹೌಸ್ ನಡಿ ನಿರ್ಮಾಣವಾದ ‘ಮೀಟ್ ಕ್ಯೂಟ್’ ವೆಬ್ ಸೀರೀಸ್ ನಲ್ಲಿ ನಟಿಸಿದ್ದೆ. ವೆಬ್ ಸೀರೀಸ್ ಸಹ ನಿರ್ದೇಶಕರಾದ ವಿನಯ್ ನನ್ನ ಅಭಿನಯ ನೋಡಿ ದಸರಾ ಸಿನಿಮಾಗೆ ರೆಫರ್ ಮಾಡಿದ್ರು. ನಾನಿ ಸರ್ ಕೂಡ ವೆಬ್ ಸೀರೀಸ್ ನಲ್ಲಿ ನನ್ನ ಅಭಿನಯ ನೋಡಿ ಮೆಚ್ಚಿಕೊಂಡಿದ್ರು ಇದ್ರಿಂದ ದಸರಾ ಸಿನಿಮಾದಲ್ಲಿ ನಟಿಸೋ ಅವಕಾಶ ಸಿಕ್ತು ಎನ್ನುತ್ತಾರೆ ದೀಕ್ಷಿತ್ ಶೆಟ್ಟಿ.

    ಚಿತ್ರದಲ್ಲಿ ಸೂರಿ ಎಂಬ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದೇನೆ. ಇಡೀ ಸಿನಿಮಾದಲ್ಲಿ ಈ ಪಾತ್ರ ಕ್ಯಾರಿಯಾಗುತ್ತೆ. ಹತ್ತು ತಿಂಗಳು ‘ದಸರಾ’ ಸಿನಿಮಾ ತಂಡದೊಂದಿಗೆ ಕೆಲಸ ಮಾಡಿದ್ದೇನೆ. ಈ ಚಿತ್ರ ಅದ್ಭುತ ಅನುಭವ ನೀಡಿದೆ. ನಿರ್ದೇಶಕರ ಜೊತೆಗೆ ನಾನಿ ಸರ್ ಕೂಡ ನನ್ನ ಪಾತ್ರ ನಿರ್ವಹಿಸಲು ಒಂದಿಷ್ಟು ಸಲಹೆ ನೀಡುತ್ತಿದ್ರು ಎಂದು ತಮ್ಮ ಪಾತ್ರ ಹಾಗೂ ‘ದಸರಾ’ ತಂಡದ ಬಗ್ಗೆ ಸಂತಸ ಹಂಚಿಕೊಂಡಿದ್ದಾರೆ ದೀಕ್ಷಿತ್ ಶೆಟ್ಟಿ.

    ‘ದಿಯಾ’ ನಂತರ ದೀಕ್ಷಿತ್ ಶೆಟ್ಟಿ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಒಂದೇ ರೀತಿಯ ಕಥೆ, ಪಾತ್ರಕ್ಕೆ ಸೀಮಿತವಾಗದೇ  ಅಳೆದು ತೂಗಿ ಸಿನಿಮಾವನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಸದ್ಯ ‘ಕೆಟಿಎಂ’ ಹಾಗೂ ‘ಬ್ಲಿಂಕ್’ ಸಿನಿಮಾಗಳು ಕನ್ನಡದಲ್ಲಿ ಬಿಡುಗಡೆಗೆ ರೆಡಿಯಾಗಿವೆ.  ಅದಕ್ಕೂ ಮೊದಲು ‘ದಸರಾ’ ಮೂಲಕ ಸೂರಿ ಪಾತ್ರದಲ್ಲಿ ತೆರೆ ಮೇಲೆ ರಂಜಿಸಲು ರೆಡಿಯಾಗಿದ್ದಾರೆ ದೀಕ್ಷಿತ್ ಶೆಟ್ಟಿ.

  • 50 ಜನ ಸೆಲೆಬ್ರೆಟಿಗಳಿಂದ ‘ಕೆಟಿಎಂ’ ಸಿನಿಮಾದ ಟೀಸರ್ ರಿಲೀಸ್

    50 ಜನ ಸೆಲೆಬ್ರೆಟಿಗಳಿಂದ ‘ಕೆಟಿಎಂ’ ಸಿನಿಮಾದ ಟೀಸರ್ ರಿಲೀಸ್

    ದಿಯಾ ಸಿನಿಮಾ ಖ್ಯಾತಿಯ ದೀಕ್ಷಿತ್ ಶೆಟ್ಟಿ (Dixit Shetty) ನಟನೆಯ ‘ಕೆಟಿಎಂ’ ಸಿನಿಮಾ ಟೀಸರ್ (Teaser) ಬಿಡುಗಡೆಯಾಗಿದೆ. ವಿಶೇಷವಾಗಿ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಎಲ್ಲರ ಗಮನ ಸೆಳೆದಿದೆ. ಸ್ಯಾಂಡಲ್ ವುಡ್ ಅಂಗಳದ 50 ಜನ ಸೆಲೆಬ್ರೆಟಿಗಳು ‘ಕೆಟಿಎಂ’ ಟೀಸರ್ ಬಿಡುಗಡೆ ಮಾಡಿರೋದು ವಿಶೇಷ. ಏಕಕಾಲದಲ್ಲಿ ಐವತ್ತು ಜನ ಸೆಲೆಬ್ರೆಟಿಗಳು ಸೋಶಿಯಲ್ ಮೀಡಿಯಾದಲ್ಲಿ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

    ‘ಅಥರ್ವ’ ಸಿನಿಮಾ ಖ್ಯಾತಿಯ ಅರುಣ್ (Arun) ನಿರ್ದೇಶನದಲ್ಲಿ ಮೂಡಿ ಬಂದಿರುವ ಎರಡನೇ ಸಿನಿಮಾ ‘ಕೆಟಿಎಂ’. ಚಿತ್ರೀಕರಣ ಕೆಲಸ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಚಿತ್ರತಂಡ ಚಿತ್ರದ ಪ್ರಚಾರ ಕಾರ್ಯವನ್ನು ಆರಂಭಿಸಿದ್ದು, ಇಂಟ್ರಸ್ಟಿಂಗ್ ಟೀಸರ್ ತುಣುಕನ್ನು ಬಿಡುಗಡೆ ಮಾಡಿದೆ. ವಿಕ್ರಮ್ ರವಿಚಂದ್ರನ್, ಶೃತಿ ಹರಿಹರನ್ (Shruti Hariharan), ವಿಜಯ ರಾಘವೇಂದ್ರ, ದೀಪಿಕಾ ದಾಸ್, ಅನುಪಮಾ ಗೌಡ, ನವೀನ್ ಶಂಕರ್, ಮೇಘಾ ಶೆಟ್ಟಿ, ಸಿದ್ದು ಮೂಲಿಮನಿ, ಖುಷಿ ರವಿ, ಇಶಾನ್, ಶೈನ್ ಶೆಟ್ಟಿ ಸೇರಿದಂತೆ 50 ಸೆಲೆಬ್ರೆಟಿಗಳು ಡಿಜಿಟಲಿ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಸಾಥ್ ನೀಡಿದ್ದಾರೆ. ಇದನ್ನೂ ಓದಿ: ಸಾನ್ಯ ಎಲಿಮಿನೇಟ್‌ ಆದಮೇಲೆ ಅವಳ ಬೆಲೆ ರೂಪೇಶ್‌ ಶೆಟ್ಟಿಗೆ ಗೊತ್ತಾಯ್ತು: ದೀಪಿಕಾ ದಾಸ್

    ನವಿರಾದ ಪ್ರೇಮ್ ಕಹಾನಿ ಹೊತ್ತ ‘ಕೆಟಿಎಂ’ ಚಿತ್ರದಲ್ಲಿ ದೀಕ್ಷಿತ್ ಶೆಟ್ಟಿ ನಾಯಕ ನಟನಾಗಿ ನಟಿಸಿದ್ದು, ನಾಲ್ಕು ಶೇಡ್ ನಲ್ಲಿ ತೆರೆ ಮೇಲೆ ಕಾಣಸಿಗಲಿದ್ದಾರೆ. ಕಾಜಲ್ ಕುಂದರ್ ಹಾಗೂ ಸಂಜನಾ ಡೋಸ್ ಚಿತ್ರದಲ್ಲಿ ನಾಯಕಿಯರಾಗಿ ತೆರೆ ಹಂಚಿಕೊಂಡಿದ್ದಾರೆ. ಉಷಾ ಭಂಡಾರಿ, ಪ್ರಕಾಶ್ ತುಮಿನಾಡು, ರಘು ರಮಣಕೊಪ್ಪ, ಶಾನಿಲ್ ಗುರು, ಬಾಬು ಹಿರಿಯಣಯ್ಯ, ದೇವ್ ದೇವಯ್ಯ,ಅಭಿಷೇಕ್, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸಂತೋಷ್ ಸೇರಿದಂತೆ ಹಲವು  ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

    ಮಹಾಸಿಂಹ ಮೂವೀಸ್ ಬ್ಯಾನರ್ ನಡಿ ವಿನಯ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ನವೀನ್ ಕ್ಯಾಮೆರಾ ವರ್ಕ್, ಚೇತನ್ ಸಂಗೀತ ನಿರ್ದೇಶನ ಕೆಟಿಎಂ ಚಿತ್ರಕ್ಕಿದೆ. ಉಡುಪಿ, ಮಂಗಳೂರು, ಕಾರ್ಕಳ, ಬೆಂಗಳೂರಿನಲ್ಲಿ ಸಿನಿಮಾವನ್ನು ಸೆರೆ ಹಿಡಿಯಲಾಗಿದೆ. ಪೋಸ್ಟ್ ಪ್ರೊಡಕ್ಷನ್ ಕೊನೆಯ ಹಂತದಲ್ಲಿರುವ ಚಿತ್ರತಂಡ ಮಾರ್ಚ್ ನಲ್ಲಿ ಸಿನಿಮಾ ತೆರೆಗೆ ತರಲು ಪ್ಲ್ಯಾನ್ ಮಾಡಿಕೊಂಡಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k