Tag: DJ Chakraborty

  • ಕಿಚ್ಚನ ಹುಟ್ಟು ಹಬ್ಬಕ್ಕೆ ‘ವೃಕ್ಷದೀಪ’ ಅಭಿಯಾನಕ್ಕೆ ಚಾಲನೆ

    ಕಿಚ್ಚನ ಹುಟ್ಟು ಹಬ್ಬಕ್ಕೆ ‘ವೃಕ್ಷದೀಪ’ ಅಭಿಯಾನಕ್ಕೆ ಚಾಲನೆ

    ಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ 50ನೇ ಹುಟ್ಟುಹಬ್ಬದ ಸಡಗರ. ಇದೇ ಸಂದರ್ಭದಲ್ಲಿ ಪತ್ರಕರ್ತ, ನಟ ಹಾಗೂ ನಿರ್ದೇಶಕ ಡಿ.ಜೆ ಚಕ್ರವರ್ತಿ (ಚಂದ್ರಚೂಡ್) (Sudeep), ‘ವೃಕ್ಷದೀಪ’ (Vrikshadeepa) ಎಂಬ ಹೆಸರಿನಲ್ಲಿ ಒಂದು ಲಕ್ಷ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಇತ್ತೀಚೆಗೆ ಕೃಷಿ ಸಚಿವರಾದ ಚಲುವರಾಯಸ್ವಾಮಿ ಅವರು ವೃಕ್ಷದೀಪ ಅಭಿಯಾನಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ‘ಅಭಿನಯ ತಿಲಕ’ ಎಂಬ ಅಭಿಮಾನದ ಹಾಡನ್ನು ಚಲವಾದಿ ಮಹಾಸಭಾದ ಜ್ಞಾನಪ್ರಕಾಶ ಸ್ವಾಮೀಜಿ ಬಿಡುಗಡೆ ಮಾಡಿದರು. ಶಾಸಕ ರಾಜು ಗೌಡ ನಾಯಕ, ವೀರಕಪುತ್ರ ಶ್ರೀನಿವಾಸ್ ಸೇರಿದಂತೆ ಅನೇಕ ಗಣ್ಯರು  ಉಪಸ್ಥಿತರಿದ್ದರು.

    ಇದೇ ಸಂದರ್ಭದಲ್ಲಿ ಮಯೂರ ಮೋಷನ್ ಪಿಕ್ಚರ್ಸ್ ಲಾಂಛನದಲ್ಲಿ ಮಂಜುನಾಥ್ ಡಿ ನಿರ್ಮಿಸುತ್ತಿರುವ, ಡಿ.ಜೆ.ಚಕ್ರವರ್ತಿ (DJ Chakravarty) ನಿರ್ದೇಶನದ ಹಾಗೂ ಮಿಲಿಂದ್ ಗೌತಮ್ ನಾಯಕರಾಗಿ ನಟಿಸುತ್ತಿರುವ ‘ಹುಲಿ ನಾಯಕ’ (Huli Nayaka) ಚಿತ್ರದ ಮೋಷನ್ ಪೋಸ್ಟರನ್ನು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಬಿಡುಗಡೆ ಮಾಡಿದರು. ಮೋಷನ್ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಕಿಚ್ಚ ಸುದೀಪ್, ಚಕ್ರವರ್ತಿ ಬಿಗ್ ಬಾಸ್ ನಿಂದ ನನಗೆ ಹತ್ತಿರವಾದರು. ಆತ  ಅದ್ಭುತ ರೈಟರ್. ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಹುಲಿನಾಯಕ ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು. ಇದನ್ನೂ ಓದಿ:Bigg Boss Kannada 10 ಪ್ರೋಮೋ ಔಟ್- ಈ ಬಾರಿ ಸಮ್‌ಥಿಂಗ್ ಸ್ಪೆಷಲ್

    ವೃಕ್ಷದೀಪ ಅಭಿಯಾನಕ್ಕೆ ಚಾಲನೆ ನೀಡಿದ ಎಲ್ಲಾ ಗಣ್ಯರಿಗೆ, ಹಾಡು ಬಿಡುಗಡೆ ಮಾಡಿಕೊಟ್ಟ ಸ್ವಾಮೀಜಿ ಅವರಿಗೆ ಹಾಗೂ ಹುಟ್ಟುಹಬ್ಬದ ಸಡಗರದಲ್ಲಿದ್ದರೂ ನಮ್ಮ ಕಾರ್ಯಕ್ರಮಕ್ಕೆ ಆಗಮಿಸಿ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿಕೊಟ್ಟ ಕಿಚ್ಚ ಸುದೀಪ್ ಅವರಿಗೆ ನನ್ನ ಧನ್ಯವಾದ. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸಿಂಧೂರ ವೀರ ಲಕ್ಷ್ಮಣ ನಾಯಕ ಅವರ ಕುರಿತಾದ ಈ ಚಿತ್ರವನ್ನು ಮಂಜುನಾಥ್ ಅವರು ನಿರ್ಮಿಸುತ್ತಿದ್ದಾರೆ‌. ಮಿಲಿಂದ್ ಗೌತಮ್ ನಾಯಕರಾಗಿ ನಟಿಸುತ್ತಿದ್ದಾರೆ‌. ನಾನು ನಿರ್ದೇಶನ ಮಾಡುತ್ತಿದ್ದೇನೆ‌. ಇಂದು ಫಸ್ಟ್ ಲುಕ್ ಹಾಗೂ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಮುಂದಿನ ದಿನಗಳಲ್ಲಿ ಚಿತ್ರದ ಬಗ್ಗೆ ಹೆಚ್ಚು ಮಾಹಿತಿ ನೀಡುತ್ತೇನೆ ಎಂದು ಡಿ.ಜೆ ಚಕ್ರವರ್ತಿ ತಿಳಿಸಿದರು.

    ಚಕ್ರವರ್ತಿ ಅವರು ಒಳ್ಳೆಯ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ಸುದೀಪ್ ಅವರು ನಮ್ಮ ಚಿತ್ರಕ್ಕೆ ಶುಭ ಹಾರೈಸಿದ್ದಾರೆ. ನನ್ನ ಮಗ ಮಿಲಿಂದ್ ಗೌತಮ್ ನಾಯಕನಾಗಿ ನಟಿಸುತ್ತಿದ್ದಾನೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಮಂಜುನಾಥ್. ನಮ್ಮ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿಕೊಟ್ಟ ಸುದೀಪ್ ಸರ್ ಅವರಿಗೆ ನಾನು ಆಭಾರಿ. ಉತ್ತಮ ಕಥೆ ಆಯ್ಕೆ ಮಾಡಿಕೊಂಡಿರುವ ಚಕ್ರವರ್ತಿ ಅವರಿಗೆ ಧನ್ಯವಾದ ಎಂದರು ನಾಯಕ ಮಿಲಿಂದ್ ಗೌತಮ್.

    ಇದೇ ಸಂದರ್ಭದಲ್ಲಿ ಡಾಲಿ ಧನಂಜಯ, ನೆನಪಿರಲಿ ಪ್ರೇಮ್, ವಸಿಷ್ಠ ಸಿಂಹ, ಪೂಜಾ ಗಾಂಧಿ, ಸಂಜನಾ ಗಲ್ರಾನಿ ಮುಂತಾದ ಕಲಾವಿದರು ಸೇರಿ ಸಿಂಧೂರ  ಲಕ್ಷ್ಮಣ್ ನಾಯಕ ಅವರ ಕುಟುಂಬದವರನ್ನು ಹಾಗೂ ನಿರ್ದೇಶಕ ಪಲ್ಲಕ್ಕಿ ರಾಧಾಕೃಷ್ಣ ಅವರನ್ನು ಸನ್ಮಾನಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಹುಲಿ ನಾಯಕ’ನಿಗೆ ಡಿ.ಜೆ.ಚಕ್ರವರ್ತಿ ಡೈರೆಕ್ಷನ್ : ಟೈಟಲ್ ಅನಾವರಣ ಮಾಡಿದ ಉಪ್ಪಿ

    ‘ಹುಲಿ ನಾಯಕ’ನಿಗೆ ಡಿ.ಜೆ.ಚಕ್ರವರ್ತಿ ಡೈರೆಕ್ಷನ್ : ಟೈಟಲ್ ಅನಾವರಣ ಮಾಡಿದ ಉಪ್ಪಿ

    ರ ಮಹಾಲಕ್ಷ್ಮಿ ಹಬ್ಬದ ಶುಭ ಸಂದರ್ಭದಂದು ರಿಯಲ್ ಸ್ಟಾರ್ ಉಪೇಂದ್ರ (Upendra) ತುಂಬು ಪ್ರೀತಿಯಿಂದ ಮಯೂರ ಮೋಶನ್ ಪಿಕ್ಚರ್ಸ್ ಸಂಸ್ಥೆ ಲಾಂಛನದಲ್ಲಿ ಮಂಜುನಾಥ್. ಡಿ ನಿರ್ಮಿಸುತ್ತಿರುವ, ಡಿ.ಜೆ ಚಕ್ರವರ್ತಿ (DJ Chakravarty) ನಿರ್ದೇಶನದ ಹಾಗೂ ಮಿಲಿಂದ್ ಗೌತಮ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರದ ಶೀರ್ಷಿಕೆ (Title) ಅನಾವರಣಗೊಳಿಸಿದ್ದಾರೆ.

    ಚಿತ್ರದ ಹೆಸರು ‘ಹುಲಿ ನಾಯಕ’ (Huli Nayaka) ಎಂದು ಘೋಷಣೆ ಮಾಡಿದ ಉಪೇಂದ್ರ, ಈ ಐತಿಹಾಸಿಕ ಚಿತ್ರ ಯಶಸ್ವಿಯಾಗಲಿ‌. ನಿರ್ದೇಶಕ ಡಿ.ಜೆ.ಚಕ್ರವರ್ತಿ, ನಿರ್ಮಾಪಕ ಮಂಜುನಾಥ್ ಹಾಗೂ ನಾಯಕ ಮಿಲಿಂದ್ ಗೌತಮ್ ಅವರಿಗೆ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ. ಇದನ್ನೂ ಓದಿ:ಧನ್ಯಾ, ಶರ್ಮಿಳಾ ಮಾಂಡ್ರೆ ಜೊತೆ ದಿಗಂತ್ ಡ್ಯುಯೇಟ್

    ಅನ್ ಲಾಕ್  ರಾಘವ ನಂತರ ಮಿಲಿಂದ್ ಗೌತಮ್ (Milind Gautam) ಸತತ ಮೂರು ತಿಂಗಳುಗಳಿಂದ ಈ ಸಿನಿಮಾಗಾಗಿ ತಯಾರಿ ನಡೆಸುತ್ತಿದ್ದಾರೆ. ಈಗಾಗಲೇ ಬೇರೆ ಬೇರೆ ನಿರ್ದೇಶಕರಿಗೆ ಹಲವು ಸಿನಿಮಾಗಳನ್ನು ಬರೆಯುತ್ತಿರುವ ಚಕ್ರವರ್ತಿ ಈ ಸಿನಿಮಾವನ್ನು ತಾವೇ ಬರೆದು ನಿರ್ದೇಶಿಸುತ್ತಿದ್ದಾರೆ.

    ಮಣಿಕಾಂತ್ ಕದ್ರಿ ಸಂಗೀತ, ಮಧು ತುಂಬನಕೆರೆ ಸಂಕಲನ, ಯೋಗೇಶ್ವರನ್ ಛಾಯಾಗ್ರಹಣ, ಕಾರ್ಯಕಾರಿ ನಿರ್ಮಾಪಕರಾಗಿ ಪ್ರಶಾಂತ್ ಬಾಗೂರು, ಡಿಜಿಟಲ್ ಮಾರ್ಕೆಟಿಂಗ್ ಸುನೀಲ್ ಮಾನೆ, ಸಹ ನಿರ್ದೇಶಕರಾಗಿ ಚಂದ್ರಶೇಖರ ಮುದಬಾವಿ ಮುಂತಾದವರ ತಂಡವಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Breaking- ಪಾದರಾಯ ಸಿನಿಮಾ: ಫಿಲ್ಮ್ ಚೇಂಬರ್ ಮೆಟ್ಟಿಲು ಏರಿದ ನಿರ್ದೇಶಕ ಡಿ.ಜೆ.ಚಕ್ರವರ್ತಿ

    Breaking- ಪಾದರಾಯ ಸಿನಿಮಾ: ಫಿಲ್ಮ್ ಚೇಂಬರ್ ಮೆಟ್ಟಿಲು ಏರಿದ ನಿರ್ದೇಶಕ ಡಿ.ಜೆ.ಚಕ್ರವರ್ತಿ

    ತ್ರಕರ್ತ, ನಿರ್ದೇಶಕ ಚಕ್ರವರ್ತಿ ಚಂದ್ರಚೂಡ (DJ Chakraborty) ಮತ್ತು ನಟ, ನಿರ್ದೇಶಕ ನಾಗಶೇಖರ್ (Nagasekhar) ಒಟ್ಟಾಗಿ ‘ಪಾದರಾಯ’ (Padaraya) ಸಿನಿಮಾ ಘೋಷಣೆ ಮಾಡಿದ್ದರು. ಈ ಸಿನಿಮಾಗೆ ಗಾಯಕಿ ಮಂಗ್ಲಿ (Mangli) ನಾಯಕಿಯನ್ನಾಗಿಯೂ ಆಯ್ಕೆ ಮಾಡಿದ್ದರು. ಈ ಸಿನಿಮಾ ಮಾಡುವುದಕ್ಕಾಗಿ ನಾಗಶೇಖರ್ ವ್ರತ ಕೂಡ ಮಾಡುತ್ತಿದ್ದರು. ಇದೀಗ ಎಲ್ಲವೂ ಆದಂತೆ ನಡೆಯುತ್ತಿಲ್ಲ. ಹಣಕಾಸಿನ ಅವ್ಯವಹಾರದ ಕಾರಣದಿಂದಾಗಿ ನಿರ್ದೇಶಕ ಡಿ.ಜೆ.ಚಕ್ರವರ್ತಿ ಸಿನಿಮಾದಿಂದ ಹೊರ ನಡೆದಿದ್ದಾರೆ. ತಾವು ನಾಗಶೇಖರ್ ಜೊತೆ ಸಿನಿಮಾ ಮಾಡುತ್ತಿಲ್ಲ ಎಂದು ಘೋಷಿಸಿದ್ದಾರೆ.

    ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಮಾತನಾಡಿದ ಚಕ್ರವರ್ತಿ, ‘ಪಾದರಾಯ ಸಿನಿಮಾ ಮಾಡುವ ಎಲ್ಲ ತಯಾರಿ ಮಾಡಿಕೊಂಡಿದ್ದೆ. ಯಾರಿಗೂ ಅಡ್ವಾನ್ಸ್ ಕೊಡದೇ ಇದ್ದರೂ, ಎಲ್ಲರನ್ನೂ ಒಟ್ಟಾಗಿಸಿಕೊಂಡು ಸಿನಿಮಾ ಕೆಲಸ ಶುರು ಮಾಡಿದ್ದೆ. ಆದರೆ, ನಾಗಶೇಖರ್ ಮತ್ತು ಅವರಿಗೆ ಗೊತ್ತಿರುವ ಕೆಲವರು ಸಿನಿಮಾ ಹೆಸರಿನಲ್ಲಿ ಹಣ ಮಾಡಲು ಶುರು ಮಾಡಿರುವ ವಿಷಯ ಗಮನಕ್ಕೆ ಬಂತು. ಈ ಸಿನಿಮಾ ಹೆಸರಿನಲ್ಲಿ ಅವರು ಸಾಲ ಮಾಡುತ್ತಿದ್ದಾರೆ ಎನ್ನುವುದು ಗೊತ್ತಾಯಿತು. ಒಬ್ಬ ನಿರ್ದೇಶಕನ ಗಮನಕ್ಕೆ ಬಾರದೇ ಏನೆಲ್ಲ ವ್ಯವಹಾರಗಳು ಆಗುತ್ತಿರುವುದು ಗಮನಿಸಿ, ನಾನು ಆ ಸಿನಿಮಾದಿಂದ ಆಚೆ ಬಂದೆ’ ಎನ್ನುತ್ತಾರೆ.

    ‘ಪಾದರಾಯ ಸಿನಿಮಾ ಹೆಸರಿನಲ್ಲಿ ಏನೆಲ್ಲ ವ್ಯವಹಾರಗಳು ಆಗಿವೆ ಮತ್ತು ನಾಗಶೇಖರ್ ಮತ್ತು ತಂಡ ಮಾಡಿರುವ ಕೆಲಸಗಳ ಕುರಿತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಿನ್ನೆ ದೂರು ನೀಡಿದ್ದೇನೆ. ಅವರು ಮಾಡಿರುವ ವ್ಯವಹಾರಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎನ್ನುವುದನ್ನು ನಾನು ಸ್ಪಷ್ಟ ಪಡಿಸಬೇಕಿತ್ತು. ಅಲ್ಲದೇ, ನಾನು ನನ್ನ ಕಥೆಯನ್ನು ಭದ್ರಪಡಿಸಿಕೊಳ್ಳಬೇಕಿತ್ತು. ಹಾಗಾಗಿ ದೂರು ಕೊಟ್ಟಿದ್ದೇನೆ’ ಎನ್ನುತ್ತಾರೆ ಚಕ್ರವರ್ತಿ.

    ಸ್ವತಃ ಚಕ್ರವರ್ತಿ ಚಂದ್ರಚೂಡ ಅವರೇ ಎರಡ್ಮೂರು ದಿನಗಳ ಹಿಂದೆ ಇದೇ ಸಿನಿಮಾದ ಕುರಿತಾಗಿ ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಪತ್ರವೊಂದನ್ನು ಬರೆದಿದ್ದರು. ಅದರಲ್ಲೂ ಕೂಡ ನಾಗಶೇಖರ್ ಮೇಲೆ ಹಲವು ಆರೋಪಗಳನ್ನು ಮಾಡಿದ್ದರು. ಆ ಎಲ್ಲ ಆರೋಪಗಳಿಗೂ ನಾನು ಈಗಲೂ ಬದ್ಧನಾಗಿದ್ದೇನೆ ಎನ್ನುವುದು ಅವರ ಮಾತು. ಹಾಗಂತ ಈ ಸಿನಿಮಾ ನಿಲ್ಲುವುದಿಲ್ಲ, ಬೇರೆ ನಿರ್ಮಾಪಕರೊಟ್ಟಿಗೆ ಸಿನಿಮಾ ಮಾಡುತ್ತೇನೆ ಎನ್ನುವುದು ಅವರ ಸ್ಪಷ್ಟನೆ.