Tag: DJ Sound

  • ಗೆಳೆಯನ ಮದುವೆ ಮೆರವಣಿಗೆಯಲ್ಲಿ ಕುಣಿಯುತ್ತಿದ್ದ ಯುವಕ ಕುಸಿದು ಬಿದ್ದು ಸಾವು – ವೀಡಿಯೋ ವೈರಲ್

    ಗೆಳೆಯನ ಮದುವೆ ಮೆರವಣಿಗೆಯಲ್ಲಿ ಕುಣಿಯುತ್ತಿದ್ದ ಯುವಕ ಕುಸಿದು ಬಿದ್ದು ಸಾವು – ವೀಡಿಯೋ ವೈರಲ್

    ಚಿತ್ರದುರ್ಗ: ಗೆಳೆಯನ ಮದುವೆ (Marriage) ಮೆರವಣಿಗೆಯಲ್ಲಿ ಕುಣಿಯುತ್ತಿದ್ದ ಯುವಕ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಚಿತ್ರದುರ್ಗ (Chitradurga)  ಜಿಲ್ಲೆ ಚಳ್ಳಕೆರೆ (Challakere) ತಾಲೂಕಿನ ಪಗಡಲಬಂಡೆ ಗ್ರಾಮದಲ್ಲಿ ನಡೆದಿದೆ.

    ಪಗಡಲಬಂಡೆ ಗ್ರಾಮದ ಆದರ್ಶ (25) ಮೃತ ಯುವಕ. ಈತ ಗೆಳೆಯನ ಮದುವೆ ಮೆರವಣಿಗೆ ವೇಳೆ ಡಿಜೆ ಸೌಂಡ್‌ಗೆ (DJ Sound) ಕುಣಿಯುತ್ತಿದ್ದ. ನೃತ್ಯದ ವೇಳೆ ಏಕಾಏಕಿ ಕುಸಿದು ಬಿದ್ದ ಯುವಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಇದನ್ನೂ ಓದಿ:  Tumakuru| ಬಡ ವಿದ್ಯಾರ್ಥಿಗಳ ವಿಮಾನಯಾನ ಕನಸು ನನಸಾಗಿಸಿದ ಶಿಕ್ಷಕ

    ನ.14ರಂದು ಘಟನೆ ನಡೆದಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪರಶುರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಪೊಲೀಸರ ಮೇಲೆ ದಾಳಿ – ಆರೋಪಿ ಕಾಲಿಗೆ ಗುಂಡೇಟು

  • ಡಿಜೆ ಸದ್ದಿಗೆ ಯುವಕನಿಗೆ ಹೃದಯಾಘಾತ

    ಡಿಜೆ ಸದ್ದಿಗೆ ಯುವಕನಿಗೆ ಹೃದಯಾಘಾತ

    ಕೊಪ್ಪಳ: ಗಣೇಶ ವಿಸರ್ಜನೆ ವೇಳೆ ಡಿಜೆ ಸೌಂಡ್‍ಗೆ ಯುವಕ ಬಲಿಯಾದ ಘಟನೆ ಕೊಪ್ಪಳ (Koppala) ಜಿಲ್ಲೆಯಲ್ಲಿ ನಡೆದಿದೆ. ಸುದೀಪ್ ಸಜ್ಜನ್ (30) ಮೃತ ಯುವಕ. ಈತನಿಗೆ ಡಿಜೆ ಸೌಂಡ್ ಗೆ (DJ Sound) ಡ್ಯಾನ್ಸ್ ಮಾಡುತ್ತಿದ್ದ ವೇಳೆ ಹೃದಯಾಘಾತವಾಗಿದೆ.

    ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ 21 ದಿನದ ಗಣೇಶ ವಿಸರ್ಜನೆ ನಡೆದಿದೆ. ಗಂಗಾವತಿಯ ಪ್ರಶಾಂತ ನಗರದ ಯುವಕರಿಂದ ಡಿಜೆ ಮೆರವಣಿಗೆ ಆಯೋಜನೆ ಮಾಡಲಾಗಿತ್ತು. ಅಂತೆಯೇ ಬೆಳ್ಳಂಬೆಳಗ್ಗೆ ಮೆರವಣಿಗೆ ಸಂದರ್ಭದಲ್ಲಿ ಡಿಜೆ ಸೌಂಡ್ ಹಾಕಿ ಡ್ಯಾನ್ಸ್ ಮಾಡಲಾಗುತ್ತಿತ್ತು. ಇದನ್ನೂ ಓದಿ: ಹಮಾಸ್ ಉಗ್ರರ ನಡೆಗೆ ಮೋದಿ ಖಂಡನೆ- ಇಸ್ರೇಲ್ ಪರ ನಿಂತ ಭಾರತ

    ಮೆರವಣಿಗೆ ಸಾಗುತ್ತಿದ್ದ ವೇಳೆ ಸುದೀಪ್ ಡ್ಯಾನ್ಸ್ ಮಾಡುತ್ತಿದ್ದು, ಕೆಲ ಹೊತ್ತಿನ ಬಳಿಕ ಕುಸಿದು ಬಿದ್ದಿದ್ದಾನೆ. ಘಟನೆಯಿಂದ ಸ್ವಯಂ ಪ್ರೇರಿತವಾಗಿ ಯುವಕರು ಅರ್ಧಕ್ಕೆ ಡಿಜೆ ಬಂದ್ ಮಾಡಿದರು. ಯುವಕನ ಮೃತ ದೇಹ ಗಂಗಾವತಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

    ಗಂಗಾವತಿ ನಗರ ಠಾಣೆ ಪೆÇಲೀಸರು ಡಿಜೆ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಗಂಗಾವತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡಿಜೆ ಸೌಂಡ್ ವಿಚಾರಕ್ಕೆ ಎರಡು ಗುಂಪುಗಳ ಮಧ್ಯ ಮಾರಾಮಾರಿ- ಒಬ್ಬ ಸಾವು

    ಡಿಜೆ ಸೌಂಡ್ ವಿಚಾರಕ್ಕೆ ಎರಡು ಗುಂಪುಗಳ ಮಧ್ಯ ಮಾರಾಮಾರಿ- ಒಬ್ಬ ಸಾವು

    ಬೀದರ್: ಅಂಗಡಿ ಪೂಜೆ ವೇಳೆ ಡಿಜೆ ಸೌಂಡ್ ವಿಚಾರಕ್ಕೆ ಎರಡು ಗುಂಪುಗಳ ಮಧ್ಯ ಮಾರಾಮಾರಿ ನಡೆದು, ಓರ್ವ ಕೊಲೆಯಾದ ಘಟನೆ ಭಾಲ್ಕಿ ತಾಲೂಕಿನ ಸಿಕ್ಕಂದರ್‌ಬಾದ್ವಾಡಿ ಗ್ರಾಮದಲ್ಲಿ ನಡೆದಿದೆ.

    ಸಿಕ್ಕಂದರ್‌ಬಾದ್ವಾಡಿ ಗ್ರಾಮದ ಜರೆಪ್ಪ (35) ಕೊಲೆಯಾದ ವ್ಯಕ್ತಿ. ಜರೆಪ್ಪ ಅವರು ಮಂಗಳವಾರ ತನ್ನ ಸ್ನೇಹಿತನ ಅಂಗಡಿ ಪೂಜೆಗೆ ಹೋಗಿದ್ದರು. ಈ ವೇಳೆ ಸ್ನೇಹಿತರು ಡಿಜೆ ಹಚ್ಚಿ ಸಂಭ್ರಮಿಸುತ್ತಿದ್ದರು. ಇದರಿಂದಾಗಿ ಕೋಪಗೊಂಡ ಗ್ರಾಮದ ಮತ್ತೊಂದು ಗುಂಪಿನ ಯುವಕರು ಡಿಜೆ ಸೌಂಡ್ ಕಡಿಮೆ ಮಾಡುವಂತೆ ತಿಳಿಸಿದ್ದಾರೆ. ಆದರೆ ಎರಡೂ ಗುಂಪುಗಳ ಮಧ್ಯೆ ಮಾರಾಮಾರಿ ಉಂಟಾಗಿದೆ.

    ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಜರೆಪ್ಪ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಜರೆಪ್ಪನ ಸಂಬಂಧಿಕರು ವೈದ್ಯರ ಸಲಹೆಯಂತೆ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೈದ್ರಾಬಾದ್‍ಗೆ ಕರೆದೊಯ್ಯ ಮುಂದಾಗಿದ್ದರು. ಆದರೆ ಹೈದ್ರಾಬಾದ್‍ಗೆ ತೆಗೆದುಕೊಂಡು ಹೋಗುವಾಗ ಮಾರ್ಗ ಮಧ್ಯ ಜರೆಪ್ಪ ಮೃತಪಟ್ಟಿದ್ದಾರೆ.

    ಗುಂಪು ಘರ್ಷಣೆಯಲ್ಲಿ ವ್ಯಕ್ತಿ ಸಾವನ್ನಪ್ಪಿದರಿಂದ ಸಿಕ್ಕಂದರ್‌ಬಾದ್ವಾಡಿ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಗ್ರಾಮದಲ್ಲಿ ಪೊಲೀಸ್ ಭೀಗಿ ಭದ್ರತೆ ಮಾಡಲಾಗಿದೆ. ಗ್ರಾಮಕ್ಕೆ ಎಸ್‍ಪಿ ಟಿ.ಶ್ರೀಧರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಖಟಕ್ ಚಿಂಚೋಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.