Tag: DK Brothers

  • ಡಿಕೆ ಬ್ರದರ್ಸ್ ಹೆಸ್ರಲ್ಲಿ ವಂಚನೆ ಕೇಸ್; ಸಿನಿಮಾ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಿದ್ದ `ಬಂಗಾರಿ’ ಗೌಡ!

    ಡಿಕೆ ಬ್ರದರ್ಸ್ ಹೆಸ್ರಲ್ಲಿ ವಂಚನೆ ಕೇಸ್; ಸಿನಿಮಾ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಿದ್ದ `ಬಂಗಾರಿ’ ಗೌಡ!

    ಬೆಂಗಳೂರು: ಡಿಕೆ ಬ್ರದರ್ಸ್ ಹೆಸರಿನಲ್ಲಿ ಕೋಟಿ ಕೋಟಿ ರೂ. ವಂಚನೆ ಮಾಡಿದ ಐಶ್ವರ್ಯ ಗೌಡ (Aishwarya Gowda) ಪ್ರಕರಣ ಸಂಬಂಧ ಮತ್ತೊಂದು ಸ್ಫೋಟಕ ಮಾಹಿತಿ ಹೊರಬಿದ್ದಿದೆ.

    ಡಿ.ಕೆ.ಸುರೇಶ್ (D K Suresh) ಹಾಗೂ ಡಿ.ಕೆ.ಶಿವಕುಮಾರ್ (D K Shivakumar) ಅವರು ನನ್ನ ಅಣ್ಣಂದಿರು, ನಾನು ಅವರ ತಂಗಿ ಅಂತಾ ಹೇಳಿಕೊಂಡು ವಂಚನೆ ಮಾಡಿರುವ ಐಶ್ವರ್ಯ ಗೌಡ ಪ್ರಕರಣ ಫಿಲ್ಮ್ ಚೇಂಬರ್ ಮೆಟ್ಟಿಲೇರಿದೆ. ತನಿಖೆ ವೇಳೆ ಬಂಗಾರಿ ಗೌಡ ಸಿನಿಮಾ ನಿರ್ಮಾಣ ಮಾಡೋದಕ್ಕೆ ತಯಾರಿ ನಡೆಸಿದ್ದಳು ಅನ್ನೋ ಮಾಹಿತಿ ಹೊರಬಿದ್ದಿದೆ. ಇದನ್ನೂ ಓದಿ: ಕಳ್ಳ ಸಂಬಂಧ ಆರೋಪ – ಯುವಕನನ್ನ ಥಳಿಸಿ ಚಿಕ್ಕಮ್ಮನೊಂದಿಗೆ ಮದುವೆ ಮಾಡಿಸಿದ ಗ್ಯಾಂಗ್‌

    ಐಶ್ವರ್ಯ ಗೌಡ, ಎಸ್‌ಎಲ್‌ವಿ ಪ್ರೊಡಕ್ಷನ್ಸ್ ಅನ್ನೋ ಸಂಸ್ಥೆಯನ್ನ ನೊಂದಾಯಿಸಿ ಆ ಮೂಲಕ ಸಿನಿಮಾ ನಿರ್ಮಾಣ ಮಾಡಲು ಪ್ಲ್ಯಾನ್ ಮಾಡಿದ್ದಳು ಎಂಬ ವಿಚಾರ ಬಯಲಾಗಿದೆ. ಈ ಬಗ್ಗೆ ಸ್ಪಷ್ಟನೆ ನೀಡಲು ಫಿಲ್ಮ್ ಚೇಂಬರ್‌ಗೆ (Film Chamber) ಸಿಐಡಿ ಡಿವೈಎಸ್‌ಪಿ ಅಂಜುಮಾಲ ನಾಯಕ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಮಾದರಿಯಲ್ಲಿ ಭಯಾನಕ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್‌ – ಪ್ರಮುಖ ಆರೋಪಿ ಅರೆಸ್ಟ್‌

    ಇನ್ನು ಈ ವಿಚಾರವಾಗಿ ವಾಣಿಜ್ಯ ಮಂಡಳಿಯಿಂದಲೂ ಪ್ರತಿಕ್ರಿಯೆ ಸಿಕ್ಕಿದ್ದು, ಈ ಹೆಸರಿನಲ್ಲಿ ಯಾವ ಪ್ರೊಡಕ್ಷನ್ ರಿಜಿಸ್ಟರ್ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

  • ರಾಜಕೀಯವನ್ನು ರಾಜಕೀಯ ಮೈದಾನದಲ್ಲೇ ಮಾಡಬೇಕು, ಸರ್ಕಾರಿ ಕಚೇರಿಗಳಲ್ಲಲ್ಲ: ಡಿಕೆಶಿ

    ರಾಜಕೀಯವನ್ನು ರಾಜಕೀಯ ಮೈದಾನದಲ್ಲೇ ಮಾಡಬೇಕು, ಸರ್ಕಾರಿ ಕಚೇರಿಗಳಲ್ಲಲ್ಲ: ಡಿಕೆಶಿ

    ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ (National Herald case) ವಿಚಾರಣೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಅದರ ಅಂಗಸಂಸ್ಥೆ ಯಂಗ್ ಇಂಡಿಯಾದ ಆದಾಯದ ಬೆನ್ನು ಬಿದ್ದಿದ್ದಾರೆ. ಯಂಗ್ ಇಂಡಿಯಾಗೆ ದೇಣಿಗೆ ನೀಡಿದ ಕಾಂಗ್ರೆಸ್ (Congress) ನಾಯಕರನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದು, ಇದರ ಭಾಗವಾಗಿ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಮತ್ತು ಡಿ.ಕೆ ಸುರೇಶ್ (DK Suresh) ಅವರನ್ನು ವಿಚಾರಣೆ ನಡೆಸಿದ್ದಾರೆ.

    ಇಂದು ಬೆಳಗ್ಗೆ 11 ಗಂಟೆಗೆ ಡಿ.ಕೆ ಸಹೋದರರು ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು. ಇಬ್ಬರನ್ನು ಪ್ರತ್ಯೇಕ ವಿಚಾರಣೆ ನಡೆಸಿದ ಅಧಿಕಾರಿಗಳು ಯಂಗ್ ಇಂಡಿಯಾಗೆ ನೀಡಿದ ದೇಣಿಗೆಯ ಮೂಲವನ್ನು ಪ್ರಶ್ನಿಸಿದ್ದಾರೆ. ಕಳೆದ ಎಪ್ರಿಲ್‌ನಲ್ಲಿ ಡಿ.ಕೆ ಸುರೇಶ್ 25 ಲಕ್ಷ ರೂ. ದೇಣಿಗೆ ನೀಡಿದ್ದು, ಡಿ.ಕೆ ಶಿವಕುಮಾರ್ ಆಗಾಗ ದೇಣಿಗೆ ನೀಡಿರುವುದು ತಿಳಿದುಬಂದಿದೆ.

    ಯಂಗ್ ಇಂಡಿಯಾಗೆ ದೇಣಿಗೆ ನೀಡಲು ಕಾರಣ ಏನು? ಅದರ ಉದ್ದೇಶ ಏನು? ಮತ್ತು ದೇಣಿಗೆ ನೀಡಿದ ಹಣದ ಮೂಲ ಯಾವುದು? ಎಂದು ಅಧಿಕಾರಿಗಳು ಪ್ರಶ್ನಿಸಿದ್ದಾರೆ ಎಂದು ಮೂಲಗಳು ಹೇಳಿವೆ. ದೇಣಿಗೆಯ ಉದ್ದೇಶ ಮತ್ತು ಕಾರಣಗಳನ್ನು ವಿವರಿಸಿರುವ ಡಿ.ಕೆ ಸಹೋದರರು, ದೇಣಿಗೆ ನೀಡಿದ ಹಣದ ಮೂಲದ ಬಗ್ಗೆ ಮಾಹಿತಿ ನೀಡಲು ಕಾಲಾವಕಾಶ ಕೇಳಿದ್ದಾರೆ ಎಂಬುದು ತಿಳಿದು ಬಂದಿದೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ವಿವಾದ; ಶಿವಲಿಂಗದ ವೈಜ್ಞಾನಿಕ ಪರೀಕ್ಷೆಗೆ ಆಕ್ಷೇಪ – ತೀರ್ಪಿನ ದಿನಾಂಕ ಮುಂದೂಡಿದ ವಾರಣಾಸಿ ಕೋರ್ಟ್‌

    4 ಗಂಟೆಗಳ ವಿಚಾರಣೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿ.ಕೆ ಶಿವಕುಮಾರ್, ಏನು ಕೇಳಿದರು ಎಂದು ಎಲ್ಲವೂ ಹೇಳಲು ಸಾಧ್ಯವಿಲ್ಲ. ಕೆಲವು ದಾಖಲೆಗಳನ್ನು ಸಲ್ಲಿಸಿದ್ದೇನೆ, ಇನ್ನೂ ಕೆಲವು ದಾಖಲೆಗಳನ್ನು ನೀಡುತ್ತೇನೆ ಎಂದು ಹೇಳಿದ್ದೇನೆ. ಆನ್‌ಲೈನ್ ಮೂಲಕ ದಾಖಲೆಗಳನ್ನು ಸಲ್ಲಿಸುತ್ತೇನೆ ಎಂದರು.

    ಇದೇ ವೇಳೆ ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು, ರಾಜಕೀಯವನ್ನು ರಾಜಕೀಯ ಮೈದಾನದಲ್ಲೇ ಮಾಡಬೇಕು. ಸರ್ಕಾರಿ ಏಜೆನ್ಸಿಗಳ ಕಚೇರಿ ಮೂಲಕ ಮಾಡಬಾರದು ಎಂದು ಕಿಡಿಕಾರಿದರು. ಇದನ್ನೂ ಓದಿ: ನನಗೆ ವೋಟು ಹಾಕಬೇಡಿ – ರಸ್ತೆ ದುರಸ್ತಿ ಬಗ್ಗೆ ಮಾತನಾಡಲು ಹೋದ ಗ್ರಾಮಸ್ಥರಿಗೆ ಅಪ್ಪಚ್ಚು ರಂಜನ್ ತಿರುಗೇಟು

    ಸಂಸದ ಡಿ.ಕೆ ಸುರೇಶ್ ಮಾತನಾಡಿ, ಯಂಗ್ ಇಂಡಿಯಾ ಟ್ರಸ್ಟ್‌ಗೆ ದೇಣಿಗೆ ನೀಡಿದ್ದನ್ನು ಪ್ರಶ್ನಿಸಿ ವಿಚಾರಣೆಗೆ ಕರೆದಿದ್ದರು. ಎಪ್ರಿಲ್ ತಿಂಗಳಲ್ಲಿ 25 ಲಕ್ಷ ರೂ. ದೇಣಿಗೆ ನೀಡಿದ್ದೆವು. ಈ ಬಗ್ಗೆ ಸ್ಪಷ್ಟನೆ ಕೇಳಿದ್ದಾರೆ. ತೆರಿಗೆ ನೀಡುವುದು ಬಾಕಿ ಇದ್ದರೆ ನೀಡಲು ನಾವು ಸಿದ್ದ. ಅದನ್ನು ಇಡಿ ಅಧಿಕಾರಿಗಳು ಕೇಳಿದರೆ ನೀಡಲು ನಾವು ಸಿದ್ದರಿದ್ದೇವೆ. ಕಳೆದ 10 ವರ್ಷದ ಹಣಕಾಸು ವ್ಯವಹಾರದ ಬಗ್ಗೆಯೂ ಮಾಹಿತಿ ಕೇಳಿದ್ದಾರೆ ಅದನ್ನೂ ಇ-ಮೇಲ್ ಮಾಡುತ್ತೇವೆ. ಯಾವಾಗ ಕರೆಯುತ್ತೇವೆ ಅಂದು ವಿಚಾರಣೆಗೆ ಬರಬೇಕು ಎಂದಿದ್ದಾರೆ. ಮುಂದೆ ವಿಚಾರಣೆಗೆ ಕರೆದರೆ ಬರುತ್ತೇವೆ ಎಂದು ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • Exclusive: ಜೆಡಿಎಸ್‍ಗೆ ಬಿಗ್ ಶಾಕ್ ಕೊಡಲು ಡಿಕೆಶಿ ರಣತಂತ್ರ

    Exclusive: ಜೆಡಿಎಸ್‍ಗೆ ಬಿಗ್ ಶಾಕ್ ಕೊಡಲು ಡಿಕೆಶಿ ರಣತಂತ್ರ

    ಬೆಂಗಳೂರು: ಒಂದು ಕಾಲದ ಜೋಡೆತ್ತಿ(ಹೆಚ್.ಡಿ.ಕುಮಾರಸ್ವಾಮಿ)ಗೆ ಟಕ್ಕರ್ ಕೊಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಿದ್ಧತೆ ನಡೆಸಿರುವ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಜೆಡಿಎಸ್ ಹಳೆ ಮೈಸೂರು ಭಾಗದಲ್ಲಿ ಪ್ರಾಬಲ್ಯ ಹೊಂದಿರುವ ಪಕ್ಷ. ಇಲ್ಲಿ ಕಾಂಗ್ರೆಸ್‍ಗೆ ಮೊದಲನೇ ಎದುರಾಳಿಯಾಗಿ ಜೆಡಿಎಸ್ ನಿಲ್ಲುತ್ತದೆ. ಹಾಗಾಗಿ ಜೆಡಿಎಸ್ ಪ್ರಾಬಲ್ಯ ಕುಂದಿಸುವ ನಿಟ್ಟಿನಲ್ಲಿ ಸೋದರ, ಸಂಸದ ಡಿ.ಕೆ.ಸುರೇಶ್ ಜೊತೆ ಸೇರಿ ಡಿ.ಕೆ.ಶಿವಕುಮಾರ್ ರಣತಂತ್ರ ರಚಿಸಿರುವ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಮೈಸೂರು ಭಾಗದಲ್ಲಿನ ಕೆಲ ಪ್ರಬಲ ಜೆಡಿಎಸ್ ನಾಯಕರನ್ನು ಸೆಳೆಯುವ ರಣತಂತ್ರಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ಆಪರೇಷನ್ ಕಾಂಗ್ರೆಸ್ ಗಾಗಿ ಖಾಸಗಿ ಸರ್ವೆಗೆ ಡಿ.ಕೆ.ಶಿವಕುಮಾರ್ ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

    ಏನದು ಖಾಸಗಿ ಸರ್ವೆ?
    ಮೈಸೂರು, ಮಂಡ್ಯ, ಹಾಸನ, ತುಮಕೂರು, ರಾಮನಗರ, ಬೆಂಗಳೂರು ಗ್ರಾ., ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಸಮೀಕ್ಷೆ ನಡೆಸಲು ಡಿ.ಕೆ.ಶಿವಕುಮಾರ್ ಸೂಚಿಸಿದ್ದಾರೆ ಎನ್ನಲಾಗಿದೆ. ಈ ಭಾಗದಿಂದ ಯಾರು ಬಂದ್ರೆ ಕಾಂಗ್ರೆಸ್‍ಗೆ ಒಳ್ಳೆಯದು? ಯಾವ ಭಾಗದ ಕ್ಷೇತ್ರದ ನಾಯಕರನ್ನು ಸೆಳೆಯಬಹುದು? ಯಾರನ್ನ ಕಾಂಗ್ರೆಸ್‍ಗೆ ಕರೆತಂದರೆ ಜೆಡಿಎಸ್‍ಗೆ ಹಿನ್ನಡೆ ಆಗಲಿದೆ ಎಂಬಿತ್ಯಾದಿ ವಿಷಯಗಳ ಕುರಿತು ಸಮೀಕ್ಷೆ ನಡೆಯಲಿದೆ. ಈ ಸಮೀಕ್ಷೆಯ ಆಧಾರದ ಮೇಲೆಯೇ ಮುಂದಿನ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಆಪರೇಷನ್ ಕಾಂಗ್ರೆಸ್ ಮುಂದಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಜೋಡೆತ್ತುಗಳು ಒಂಟೆತ್ತುಗಳಾಗಿವೆ, ಒಂದು ಮತ್ತೊಂದನ್ನು ಅಟ್ಟಾಡಿಸುತ್ತಿದೆ: ಕಟೀಲ್ ವ್ಯಂಗ್ಯ

    ಯಾಕೆ ಈ ಸಮೀಕ್ಷೆ?:
    ಈಗಾಗಲೇ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ಸಿನ ಮುಂದಿನ ಸಿಎಂ ಅಭ್ಯರ್ಥಿ ಎಂದು ಬಿಂಬಿತರಾಗಿದ್ದಾರೆ. ಆದ್ರೆ ಕಾಂಗ್ರೆಸ್ ನಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಬಣ ಇದನ್ನ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ನಾಯಕರು ಮುಂದಿನ ಸಿಎಂ ಬಗ್ಗೆ ಹೇಳಿಕೆ ನೀಡುತ್ತಿರುತ್ತಾರೆ. ಆದ್ದರಿಂದ ಸಿಎಂ ಕನಸು ಕಾಣುತ್ತಿರುವ ಡಿ.ಕೆ.ಶಿವಕುಮಾರ್ ತಮ್ಮ ಬೆಂಬಲಕ್ಕೂ ಪ್ರಬಲವಾದ ಶಾಸಕರ ಬಣ ಇರಬೇಕು ಎಂಬ ಉದ್ದೇಶದಿಂದ ಆಪರೇಷನ್ ಕಾಂಗ್ರೆಸ್‍ಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಅಸ್ತಿತ್ವಕ್ಕಾಗಿ ಗುದ್ದೆತ್ತುಗಳಾದ ಜೋಡೆತ್ತುಗಳು

    ಕೆಲ ದಿನಗಳ ಹಿಂದೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಮಿಷನ್ 123 ಅಡಿಯಲ್ಲಿ ಕೆಲಸ ಮಾಡಲಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದರು. ಈಗ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಶಕ್ತಿ ಕುಂದಿಸಲು ಈಗಿನಿಂದಲೇ ಡಿ.ಕೆ.ಶಿವಕುಮಾರ್ ಮುಂದಾಗಿರೋದು ದಳಪತಿಗೆ ಶಾಕ್ ನೀಡಿದಂತಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯಗೆ ಜೋಡೆತ್ತು ಗುದ್ದು – ಮಾಜಿ ಸಿಎಂ ಬೆನ್ನಿಗೆ ನಿಂತ ಡಿಕೆಶಿ

  • ಡಿ.ಕೆ.ಬ್ರದರ್ಸ್‍ಗೆ ನಿಖಿಲ್ ಕುಮಾರಸ್ವಾಮಿ ಓಪನ್ ಚಾಲೆಂಜ್

    ಡಿ.ಕೆ.ಬ್ರದರ್ಸ್‍ಗೆ ನಿಖಿಲ್ ಕುಮಾರಸ್ವಾಮಿ ಓಪನ್ ಚಾಲೆಂಜ್

    ರಾಮನಗರ: ಡಿಕೆ ಸೋದರರಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಬಹಿರಂಗವಾಗಿ ಚಾಲೆಂಜ್ ಹಾಕಿದ್ದಾರೆ.

    ರಾಮನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಪಕ್ಷದಲ್ಲಿ ಸ್ವಲ್ಪ ಗೊಂದಲಗಳಿರೋದು ನಿಜ. ಅದನ್ನ ಪರಿಹರಿಸುವ ಕೆಲಸವನ್ನ ಕುಮಾರಸ್ವಾಮಿ ಅವರು ಮಾಡುತ್ತಿದ್ದಾರೆ. ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷನಾಗಿ 30 ಜಿಲ್ಲೆಗಳ ಪ್ರವಾಸ ನಡೆಸುತ್ತಿದ್ದೇನೆ. ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಕ್ಷೇತ್ರದಲ್ಲಿ ಒಳ್ಳೆಯ ಕೆಲಸಗಳನ್ನ ಮಾಡಿದ್ದು, ಅದನ್ನ ಜನರಿಗೆ ಮನವರಿಕೆ ಮಾಡುವ ಕೆಲಸ ಮಾಡಲಾಗುತ್ತೆ. ಪಕ್ಷ ಸಂಘಟನೆಯ ಜವಾಬ್ದಾರಿಯನ್ನ ಹಿರಿಯರು ನನಗೆ ನೀಡಿದ್ದು, ಅದನ್ನ ನಿರ್ವಹಿಸುತ್ತಿದ್ದೇನೆ ಎಂದರು.

    ಎಚ್ಚರಿಕೆ ಅಂತ ಹೇಳಿದ್ಯಾರಿಗೆ?: ಕನಕಪುರ ಕ್ಷೇತ್ರದಲ್ಲಿ ಜೆಡಿಎಸ್ ಮತದಾರರು ಸಹ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ನಮ್ಮದೇ ಮತಗಳು ಕನಕಪುರದಲ್ಲಿ, 2023ಕ್ಕೆ ಇಲ್ಲಿ ಸೂಕ್ತ ಅಭ್ಯರ್ಥಿ ಇಲ್ಲಿಂದ ಸ್ಪರ್ಧೆ ಮಾಡಲಿದ್ದಾರೆ. ಕೆಲವರು ನಮ್ಮ ಕ್ಷೇತ್ರಗಳಿಗೆ ಕೈ ಹಾಕ್ತಿದ್ದಾರೆ. ಹಾಗಾಗಿ ನಾವು ಸಹ ಅವರ ಕ್ಷೇತ್ರಕ್ಕೆ ಕೈ ಹಾಕಬೇಕಾಗುತ್ತೆ ಅಂತ ಎಚ್ಚರಿಕೆ ಕೊಡಲು ಇಷ್ಟಪಡುತ್ತೇನೆ ಅಂದ್ರು.

  • RSS ಪಥ ಸಂಚಲನಕ್ಕೆ ಡಿಕೆ ಬ್ರದರ್ಸ್ ಕೂಲ್ ಟಾಂಗ್

    RSS ಪಥ ಸಂಚಲನಕ್ಕೆ ಡಿಕೆ ಬ್ರದರ್ಸ್ ಕೂಲ್ ಟಾಂಗ್

    ಬೆಂಗಳೂರು: ರಾಮನಗರದಲ್ಲಿ ಆರ್.ಎಸ್.ಎಸ್ ಕಾರ್ಯಕರ್ತರ ಪಥ ಸಂಚಲನ ಈಗ ರಾಜಕೀಯ ಗುದ್ದಾಟಕ್ಕೆ ಕಾರಣವಾಗಿದೆ. ಆರ್.ಎಸ್.ಎಸ್. ಪಥ ಸಂಚಲನಕ್ಕೆ ಕನಕಪುರದ ಡಿಕೆ ಬ್ರದರ್ಸ್ ಸೈಲೆಂಟ್ ಆಗಿಯೇ ಬಿಜೆಪಿ ಮತ್ತು ಆರ್.ಎಸ್.ಎಸ್. ಗೆ ತಿರುಗೇಟು ಕೊಟ್ಟು ಸವಾಲ್ ಹಾಕಿದ್ದಾರೆ. ಯಾರೇ ಪಥ ಸಂಚಲನ ಮಾಡಲಿ ನಮ್ಮ ಅಭ್ಯಂತರ ಇಲ್ಲ. ಶಾಂತಿ ಕದಡುವ ಕೆಲಸ ಮಾಡಿದ್ರೆ ಹುಷಾರ್ ಅಂತ ಡಿಕೆ ಬ್ರದರ್ಸ್ ಎಚ್ಚರಿಕೆ ಕೊಟ್ಟಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಸಂಸದ ಡಿಕೆ ಸುರೇಶ್ ಆರ್‍ಎಸ್‍ಎಸ್ ನಾಯಕರಿಗೆ ಎಚ್ಚರಿಕೆ ಕೊಟ್ಟು ಸವಾಲ್ ಹಾಕಿದ್ದಾರೆ. ಆರ್.ಎಸ್.ಎಸ್. ನವರು ಪಥ ಸಂಚಲನ ಮಾಡೋದಕ್ಕೆ ನಮ್ಮ ಅಭ್ಯಂತರ ಇಲ್ಲ. ಆದ್ರೆ ಶಾಂತಿಯುವಾಗಿ ಪಥ ಸಂಚಲನೆ ಮಾಡಬೇಕು. ಶಾಂತಿ ಕದಡುವ ಕೆಲಸ ಮಾಡಿದ್ರೆ ನಾವು ಸುಮ್ಮನೆ ಇರೋದಿಲ್ಲ. ಯಾರೇ ಪಥ ಸಂಚಲನ ಮಾಡಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿ ಭಂಗ ತರೋ ಕೆಲಸ ಮಾಡಬಾರದು. ಪ್ರಚೋದನಕಾರಿಯಾಗಿ ಮಾತಾಡಿ ಮತವಿಭಜನೆ ಮಾಡೋ ಕೆಲಸ ಮಾಡಬಾರದು. ಹಾಗೇನಾದ್ರು ಮಾಡಿದ್ರೆ ನಾವು ಸಕ್ರಿಯವಾಗಿ ಹೋರಾಟ ಮಾಡ್ತೀವಿ ಅಂತ ಎಚ್ಚರಿಕೆ ಕೊಟ್ಟರು.

    ಇನ್ನು ಕಲ್ಲಡ್ಕ ಪ್ರಭಾಕರ್ ಭಟ್ಟರು ಬಿಜೆಪಿ ನೆಲೆಸಲು ಈ ಪಥ ಸಂಚಲನ ಮಾಡ್ತಿದ್ದಾರಾ ಅನ್ನೋ ಪ್ರಶ್ನೆಗೆ ಉತ್ತರಿಸಿದ ಅವರು, ಕಲ್ಲಡ್ಕ ಪ್ರಭಾಕರ್ ಭಟ್ ಯಾರು ಅಂತಾನೇ ನನಗೆ ಗೊತ್ತಿಲ್ಲ. ತಲೆ ಕೆಟ್ಟವರು ಮೊನ್ನೆ ಯಡಿಯೂರಪ್ಪ ಬಗ್ಗೆ ಏನೋ ಮಾತಾಡಿದ್ರು. ಇನ್ನೊಬ್ಬರ ಬಗ್ಗೆ ಇನ್ನೇನೋ ಹೇಳುತ್ತಾರೆ. ಅವರಿಗೆಲ್ಲ ಯಾರು ಉತ್ತರ ಕೊಡ್ತಾರೆ. ಕಾಲವೇ ಎಲ್ಲದ್ದಕ್ಕೂ ಉತ್ತರ ಕೊಡುತ್ತೆ ಅಂತ ಕಿಡಿಕಾರಿದರು.

    ಇನ್ನು ಮಾಜಿ ಸಚಿವ ಡಿಕೆ ಶಿವಕುಮಾರ್ ಮಾತನಾಡಿ, ಆರ್.ಎಸ್.ಎಸ್ ನವರು ಚೆಡ್ಡಿ ಹಾಕಿಕೊಂಡು ಬೇಕಾದ್ರು ಪಥ ಸಂಚಲನ ಮಾಡಲಿ. ಪ್ಯಾಂಟ್ ಹಾಕಿಕೊಂಡು ಬೇಕಾದ್ರು ಮಾಡಲಿ. ಇಲ್ಲವೆ ಉರುಳು ಸೇವೆ ಬೇಕಾದ್ರು ಮಾಡಲಿ. ನಮ್ಮ ಅಭ್ಯಂತರ ಇಲ್ಲ ಅಂತ ಲೇವಡಿ ಮಾಡಿದರು. ನನ್ನ ತಮ್ಮ ಗೆದ್ದಿರೋದು ಪಾಪ ಬಿಜೆಪಿ ಅವ್ರಿಗೆ ಇಷ್ಟ ಇಲ್ಲ. ಹೇಗಾದ್ರು ಮಾಡಿ ಆತನಿಗೆ ತೊಂದರೆ ಕೊಡಬೇಕು ಅಂತ ಬಿಜೆಪಿ ಅವರು ಆರ್.ಎಸ್‍ಎಸ್. ಮೂಲಕ ಹೀಗೆಲ್ಲ ಮಾಡಿಸುತ್ತಿದ್ದಾರೆ. ಧರ್ಮದ ಹೆಸರಲ್ಲಿ ರಾಜಕೀಯ ಮಾಡ್ತಿದ್ದಾರೆ. ಇದಕ್ಕೆಲ್ಲ ನಾವು ಹೆದರಲ್ಲ. ಇದನ್ನ ಎದರಿಸೋ ಶಕ್ತಿ ನಮಗೆ ಇದೆ ಅಂತ ಕಿಡಿಕಾರಿದರು.

  • ಅಜ್ಜಯ್ಯನ ಮೊರೆ ಹೋದ ಡಿಕೆ ಸಹೋದರರು

    ಅಜ್ಜಯ್ಯನ ಮೊರೆ ಹೋದ ಡಿಕೆ ಸಹೋದರರು

    ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಗೊಂದಲ ಮುಂದುವರಿದ ಬೆನ್ನಲ್ಲೆ ಡಿಕೆ ಸಹೋದರರು ದೇವರ ಮೊರೆ ಹೋಗಿದ್ದಾರೆ.

    ಶುಕ್ರವಾರ ಮಧ್ಯಾಹ್ನ ಕುಣಿಗಲ್ ಸಮೀಪ ದೇವಸ್ಥಾನವೊಂದರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಡಿ.ಕೆ.ಶಿವಕುಮಾರ್ ಸಂಜೆ ನಾಲ್ಕು ಗಂಟೆ ಸುಮಾರಿಗೆ ಬೆಂಗಳೂರಿಗೆ ಬಂದಿದ್ದಾರೆ. ಸಹೋದರ ಸಂಸದ ಡಿ.ಕೆ.ಸುರೇಶ್ ಜೊತೆಗೆ ಬೆಂಗಳೂರಿನ ರಹಸ್ಯ ಸ್ಥಳವೊಂದರಲ್ಲಿ ತಮ್ಮ ನಂಬಿಕೆಯ ದೈವ ಮಾನವ ನೊಣವಿನಕೆರೆ ಅಜ್ಜಯ್ಯರನ್ನ ಭೇಟಿ ಮಾಡಿದ್ದಾರೆ.

    ಅಜ್ಜಯ್ಯನ ಗದ್ದುಗೆ ಮುಂದೆ ಸಹೋದರನ ಜೊತೆ ಸೇರಿ ಮೂರು ಗಂಟೆಗಳ ಕಾಲ ಅಜ್ಜಯ್ಯನೊಂದಿಗೆ ಮಾತುಕತೆ ನಡೆಸಿದ್ದಾರೆ. ಕೆಪಿಸಿಸಿ ಪಟ್ಟಾಭಿಷೇಕದ ಜೊತೆಗೆ ಮುಂದಿನ ರಾಜಕೀಯ ಭವಿಷ್ಯದ ಬಗ್ಗೆಯೂ ಸುದೀರ್ಘ ಚರ್ಚೆ ನಡೆಸಿದ್ದಾರೆ. ಅಜ್ಜಯ್ಯನ ಸಮ್ಮುಖದಲ್ಲಿ ಸಹೋದರರು ಗದ್ದುಗೆ ಪೂಜೆಯನ್ನು ನೆರವೇರಿಸಿದ್ದಾರೆ. ಒಟ್ಟು ಮೂರು ಗಂಟೆಗಳ ಕಾಲ ನಡೆದ ಮಾತುಕತೆ ಹಾಗೂ ಪೂಜೆ ಸಂದರ್ಭದಲ್ಲಿ ನೊಣವಿನ ಕೆರೆ ಅಜ್ಜಯ್ಯ ಡಿಕೆ ಸಹೋದರರಿಗೆ ಮುಂದಿದೆ ವಿಜಯದ ಹಾದಿ ಎಂದು ಶುಭ ಹಾರೈಸಿದ್ದಾರೆ. ವಿಜಯದ ಭವಿಷ್ಯವಾಣಿಯೊಂದಿಗೆ ಡಿಕೆಶಿ ಸಹೋದರರು ಅಜ್ಜಯ್ಯನ ಗದ್ದುಗೆ ಪೂಜೆ ಮಾಡಿ ಬಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

  • ಆಪ್ತರನ್ನೇ ಬಿಟ್ಟು ದಾಳ ಉರುಳಿಸಿದ ‘ಟಗರು’-ಒಂದೇ ಅಸ್ತ್ರ, ಎರಡು ಟಾರ್ಗೆಟ್

    ಆಪ್ತರನ್ನೇ ಬಿಟ್ಟು ದಾಳ ಉರುಳಿಸಿದ ‘ಟಗರು’-ಒಂದೇ ಅಸ್ತ್ರ, ಎರಡು ಟಾರ್ಗೆಟ್

    ಬೆಂಗಳೂರು: ಪಕ್ಷ ಸಂಘಟನೆಗೆ ಮುಂದಾಗಿರುವ ಮಾಜಿ ಸಿಎಂ, ಕಾಂಗ್ರೆಸ್ ಸಿಎಲ್‍ಪಿ ನಾಯಕ ಸಿದ್ದರಾಮಯ್ಯ ತಮ್ಮ ಆಪ್ತರ ಮೂಲಕ ಹೊಸ ದಾಳ ಉರುಳಿಸಿದ್ದಾರೆ. ಒಂದು ಅಸ್ತ್ರದ ಮೂಲಕ ಎರಡು ಗುರಿ ತಲುಪಲು ಸಿದ್ದರಾಮಯ್ಯ ಮುಂದಾಗಿದ್ದಾರೆ ಎಂಬ ಮಾಹಿತಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಹೊಸ ದಾಳದ ಮೂಲಕ ಕೆಲವರಿಗೆ ಶಾಕ್ ನೀಡಲು ಸಿದ್ದರಾಮಯ್ಯ ಪ್ಲಾನ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

    ರಿಟರ್ನ್ ಆಫರ್:
    ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿರುವ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಅವರಿಗೆ ಸಿದ್ದರಾಮಯ್ಯ ಆಫರ್ ನೀಡಿದ್ದಾರಂತೆ. ಈಗಾಗಲೇ ಯೋಗೇಶ್ವರ್ ಜೊತೆ ಸಿದ್ದರಾಮಯ್ಯರ ಅಣತಿಯಂತೆ ಆಪ್ತ ಚಲುವರಾಯ ಸ್ವಾಮಿ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಆದರೆ ಯೋಗೇಶ್ವರ್, ಮಂತ್ರಿ ಮಾಡ್ತೀನಿ ಎಂದು ಆಪರೇಷನ್ ಕಮಲಕ್ಕೆ ನನ್ನನ್ನು ಬಳಸಿಕೊಂಡರು. ಬಿಜೆಪಿಗೆ ಸೇರಿದ್ದಾಗಿದೆ, ಪಾಲಿಗೆ ಬಂದಿದ್ದು ಪಂಚಾಮೃತ ಎಂದು ಹೋಗುತ್ತಿರಬೇಕು. ಮತ್ತೆ ಕಾಂಗ್ರೆಸ್‍ಗೆ ಬರೋಣ ಅಂದ್ರೆ ಡಿಕೆ ಬ್ರದರ್ಸ್ ಭಯವಿದೆ. ನನಗೂ ಒಳ್ಳೆಯ ಕಾಲ ಬರುತ್ತೆ, ನನ್ನನ್ನು ಬಿಟ್ಟು ಬಿಡಿ ಎಂದು ಸಿದ್ದರಾಮಯ್ಯರ ಆಫರ್ ತಿರಸ್ಕರಿದ್ದಾರೆ ಎಂದು ತಿಳಿದು ಬಂದಿದೆ.

    ಸಿಪಿವೈ ಅಸ್ತ್ರ ಯಾಕೆ?
    ಸಿ.ಪಿ.ಯೋಗೇಶ್ವರ್ ಮತ್ತೆ ಕಾಂಗ್ರೆಸ್ ಗೆ ಬಂದರೆ ಪರೋಕ್ಷವಾಗಿ ರಾಮನಗರದ ಭಾಗದಲ್ಲಿ ಡಿ.ಕೆ.ಸಹೋದರರ ವಿರುದ್ಧ ಪ್ರಬಲ ನಾಯಕನನ್ನು ಕರೆ ತಂದಂತಾಗುತ್ತದೆ. ಇತ್ತ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಸ್ಪರ್ಧಿಸುವ ರಾಮನಗರದ ಪ್ರಬಲ ನಾಯಕರಾಗಿರುವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾದ್ರೆ ಬಂದ್ರೆ ಜೆಡಿಎಸ್ ಗೆ ತಿರುಗೇಟು ನೀಡಿದಂತಾಗುತ್ತದೆ. ಹಾಗಾಗಿ ಸಿದ್ದರಾಮಯ್ಯ ಇನ್ನೊಂದು ಸುತ್ತಿನ ಮಾತುಕತೆ ನಡೆಸುವಂತೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

  • ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ ಹವಾ-ಮತದಾರರ ಒಲವು ಯಾರ ಅತ್ತ?

    ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ ಹವಾ-ಮತದಾರರ ಒಲವು ಯಾರ ಅತ್ತ?

    ಬೆಂಗಳೂರು: ಜಿದ್ದಾಜಿದ್ದಿನ ಕ್ಷೇತ್ರಗಳಾದ ಮಂಡ್ಯ, ರಾಮನಗರ ಉಪಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ರಾಮನಗರದಲ್ಲಿ ಯುದ್ಧಕ್ಕೂ ಮುನ್ನವೇ ಬಿಜೆಪಿ ಶಸ್ತ್ರತ್ಯಾಗ ಮಾಡಿದೆ. ಮಂಡ್ಯದಲ್ಲಿ ಬದ್ಧ ವೈರಿಗಳೇ ದೋಸ್ತಿಗಳಾಗಿರೋದ್ರಿಂದ ಮತದಾರರು ಯಾರ ಕೈ ಹಿಡಿದಿದ್ದಾರೆ. ಇಬ್ಬರ ಜಗಳದಲ್ಲಿ ಲಾಭ ಮೂರನೇಯವರಿಗೆ ಸಿಗುತ್ತಾ? ಎಲ್ಲಕ್ಕೂ ಉತ್ತರ ಇಂದಿನ ಫಲಿತಾಂಶ

    ರಾಮನಗರದಲ್ಲಿ ಉಪ ಸಮರ ರಂಗೇರಿದ ಅನ್ನುವ ಮುನ್ನವೇ ಬಿಜೆಪಿ ಅಭ್ಯರ್ಥಿ ಶಸ್ತ್ರತ್ಯಾಗ ಮಾಡಿದ್ರೆ, ಕಾಂಗ್ರೆಸ್‍ನಿಂದ ವಲಸೆ ಬಂದ ಮುಖಂಡನನ್ನೇ ಅಭ್ಯರ್ಥಿಯಾಗಿ ನಿಲ್ಲಿಸಿ ಟಾಂಗ್ ಕೊಟ್ಟಿದ್ದೇವೆ ಅಂತ ಬೀಗುತ್ತಿದ್ದ ಯಡಿಯೂರಪ್ಪ-ಯೋಗೇಶ್ವರ್ ದಂಡಿಗೆ ಮತದಾನಕ್ಕೆ ಎರಡು ದಿನಗಳ ಹಿಂದೆ ಗರ್ವಭಂಗ ಆಯ್ತು. ಡಿಕೆಶಿ ಬ್ರದರ್ಸ್ ಆಡಿದ ಕಡೇ ಕ್ಷಣದ ಆಟದಲ್ಲಿ ಎದುರಾಳಿಯೇ ಇಲ್ಲದೇ ರಾಮನಗರದಲ್ಲಿ ಸಿಎಂ ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿಯವ್ರದ್ದೇ ಆಟವಾಗಿ ಮಾರ್ಪಟ್ಟಿತ್ತು. ಪತಿ ಖಾಲಿ ಮಾಡಿದ್ದ ಕ್ಷೇತ್ರಕ್ಕೆ ಪತ್ನಿಯೇ ಅಧಿಪತಿ ಆಗ್ತಾರಾ ಅನ್ನೋದಕ್ಕೆ ಕೆಲವೇ ಹೊತ್ತಲ್ಲಿ ಉತ್ತರ ಸಿಗಲಿದೆ.

    ರಾಮಗರದಲ್ಲಿ ಜೆಡಿಎಸ್ ನಿಂದ ಅನಿತಾ ಕುಮಾರಸ್ವಾಮಿ ಸ್ಪರ್ಧಿಸಿದ್ರೆ ಬಿಜೆಪಿಯಿಂದ ಎಲ್ ಚಂದ್ರಶೇಖರ್ ಅವರು ಅಭ್ಯರ್ಥಿಯಾಗಿದ್ದರು. ಆದ್ರೆ ಚಂದ್ರಶೇಖರ್ ಅವರು ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ರಾಮನಗರದಲ್ಲಿ ಯಾರ ನಡುವೆ ಪೈಪೋಟಿ..?
    1. ಜೆಡಿಎಸ್+ಕಾಂಗ್ರೆಸ್ ಮೈತ್ರಿಕೂಟ – ಅನಿತಾ ಕುಮಾರಸ್ವಾಮಿ
    2. ಎಲ್.ಚಂದ್ರಶೇಖರ್ – ಬಿಜೆಪಿ ( ಚುನಾವಣೆಯಿಂದ ಹಿಂದಕ್ಕೆ)

    ರಾಮನಗರ ವಿಧಾನಸಭಾ ಕ್ಷೇತ್ರದ ಚಿತ್ರಣ:
    ರಾಮನಗರ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಮತದಾರರ ಸಂಖ್ಯೆ 2,07,005 ಇದೆ. ಅದರಲ್ಲಿ ಪುರುಷರ ಸಂಖ್ಯೆ 1,02,948 ಇದ್ದು, 1,04,032 ಮಹಿಳಾ ಮತದಾರರಿದ್ದಾರೆ. ಇನ್ನು ಜಾತಿ ಲೆಕ್ಕಾಚಾರದಲ್ಲಿ ನೋಡೋದಾದ್ರೆ ಒಕ್ಕಲಿಗರು- 99,572, ಎಸ್ಸಿ/ ಎಸ್ಟಿ- 45,953, ಮುಸ್ಲಿಂ- 35,990, ಲಿಂಗಾಯತರು- 16,900 ಹಾಗೂ ಇತರ 8190 ಮತದಾರರಿದ್ದಾರೆ. ಈ ಕ್ಷೇತ್ರದಲ್ಲಿ ಒಕ್ಕಲಿಗ ಮತದಾರರೇ ನಿರ್ಣಾಯಕ ಪಾತ್ರ ವಹಿಸುತ್ತಾರೆ.

    ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ 04 ಹೋಬಳಿಗಳು ಹಾಗೂ 20 ಗ್ರಾಮ ಪಂಚಾಯತ್‍ಗಳಿವೆ. ಅದರಲ್ಲಿ 123 ಜನವಸತಿ ಇರುವ ಗ್ರಾಮಗಳಿದ್ದು, ಕ್ಷೇತ್ರದಲ್ಲಿ 2,85,466 ಜನರಿದ್ದಾರೆ. ಇದರಲ್ಲಿ ಪುರುಷರು- 1,45,187 ಹಾಗೂ 1,40,279 ಮಹಿಳಾ ಮತದಾರರಿದ್ದಾರೆ.

    ರಾಮನಗರ 2018ರ ಚುನಾವಣೆಯಲ್ಲಿ ಜೆಡಿಎಸ್ ನಿಂದ ಎಚ್ ಡಿ ಕುಮಾರಸ್ವಾಮಿ ಸ್ಪರ್ಧಿಸಿ, 92,926 ಮತಗಳನ್ನು ಪಡೆದುಕೊಂಡಿದ್ದರು. ಇನ್ನು ಕಾಂಗ್ರೆಸ್ ನಿಂದ ಇಕ್ಭಾಲ್ ಹುಸೇನ್ ಅವರು ಸ್ಪರ್ಧಿಸಿದ್ದು 69,990 ಮತಗಳನ್ನು ತಮ್ಮದಾಗಿಸಿಕೊಂಡಿದ್ದರು. ಜೆಡಿಎಸ್ ಅಭ್ಯರ್ಥಿ ಎಚ್‍ಡಿ ಕುಮಾರಸ್ವಾಮಿಯವರು 22,289 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv