Tag: DKShivakumar

  • 5 ವರ್ಷ ಸಿದ್ದರಾಮಯ್ಯನವರೇ ಸಿಎಂ – ಯತೀಂದ್ರ ಬ್ಯಾಟಿಂಗ್‌

    5 ವರ್ಷ ಸಿದ್ದರಾಮಯ್ಯನವರೇ ಸಿಎಂ – ಯತೀಂದ್ರ ಬ್ಯಾಟಿಂಗ್‌

    ಮೈಸೂರು: ನನ್ನ ಪ್ರಕಾರ 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೇಳಿದ್ದಾರೆ.

    ಮೈಸೂರಿನಲ್ಲಿ (Mysuru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಪ್ರಕಾರ 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ. ಸಿಎಂ ಬದಲಾವಣೆ ಚರ್ಚೆ ಹೈಕಮಾಂಡ್‌ ಮುಂದೆ ನಡೆದಿಲ್ಲ. ಎಐಸಿಸಿ ಕಾರ್ಯದರ್ಶಿ ಈಗಾಗಲೇ ಇದನ್ನು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಚೀತಾಗಳ ಉಡುಗೊರೆ ನೀಡಿದ್ದಕ್ಕೆ ಧನ್ಯವಾದ: ನಮೀಬಿಯಾಗೆ ಮೋದಿ ಕೃತಜ್ಞತೆ

    ಇನ್ನೂ ಓಬಿಸಿ ಸಮಿತಿಗೆ ಸಿಎಂ ಆಯ್ಕೆ ಕುರಿತ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಾರ್ರಿ ಹೇಳಿದ್ದು ಮುಖ್ಯಮಂತ್ರಿ ಆದವರನ್ನ ಓಬಿಸಿ ಕಮಿಟಿಗೆ ಕಳುಹಿಸಿದ್ರೆ ಪ್ರಮೋಷನ್ನಾ? ಅಂತ ಕೆಂಡಾಮಂಡಲರಾದರು. ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗದ ನಾಯಕ. ದೇಶದಲ್ಲಿರುವ ಹಿಂದುಳಿದ ವರ್ಗಗಳ ನಾಯಕರು ಆ ಕಮಿಟಿಯಲ್ಲಿದ್ದಾರೆ. ಹಾಗಾಗಿ ಅಲ್ಲಿ ಸದಸ್ಯರಾಗಿರುತ್ತಾರೆ. ಅದಕ್ಕೂ ಸಿಎಂ ಬದಲಾವಣೆ ವಿಚಾರಕ್ಕೂ ಸಂಬಂಧ ಕಲ್ಪಿಸುವ ಅಗತ್ಯ ಇಲ್ಲ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಹಳಸಿದ ದಾಲ್‌ ಬಡಿಸಿದ್ದಕ್ಕೆ ಶಾಸಕನಿಂದ ಕ್ಯಾಂಟೀನ್‌ ಸಿಬ್ಬಂದಿ ಮೇಲೆ ಹಲ್ಲೆ – ಕ್ಯಾಂಟೀನ್‌ ಲೈಸೆನ್ಸೇ ರದ್ದು

    ಬಿಜೆಪಿ ಹೇಳೋದನ್ನೆಲ್ಲ ನೀವು ನಂಬಿದ್ರೆ ಆಗಲ್ಲ. ನಮ್ಮ ಸರ್ಕಾರ ಬಂದಾಗಿಂದ ಸರ್ಕಾರ ಬದಲಾಗುತ್ತೆ, ಸಿಎಂ ಬದಲಾಗ್ತಾರೆ ಅಂತಿದ್ದಾರೆ. ನವೆಂಬರ್ ತಿಂಗಳಿಗೆ ನಮ್ಮ ತಂದೆ ಎರಡೂವರೆ ವರ್ಷ ಪೂರೈಕೆ ಮಾಡ್ತಾರೆ. ಹಾಗಾಗಿ ಸಿಎಂ ಆಸೆ ಇಟ್ಟುಕೊಂಡಿರೋರು ಕೇಳ್ತಾರೆ. ಕೇಳೋದ್ರಲ್ಲ ತಪ್ಪಿಲ್ಲ, ತೀರ್ಮಾನ ಮಾಡೋದು ಹೈಕಮಾಂಡ್ ಹಾಗೂ ಶಾಸಕರು. ಸರ್ಕಾರ ಬಂದಾಗಿದ ಈ ಪ್ರಶ್ನೆಗೆ ಉತ್ತರ ಮಾಡುತ್ತಿದ್ದೇನೆ ದಯವಿಟ್ಟು ಆ ಪ್ರಶ್ನೆ ಕೇಳಬೇಡಿ ಅಂತ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಜು.28ರಂದು ಮದ್ದೂರಿಗೆ ಸಿಎಂ – 1,400 ಕೋಟಿ ವೆಚ್ಚದ 75 ಕಾಮಗಾರಿಗಳ ಉದ್ಘಾಟನೆ

    ರಂಭಾಪುರಿ ಶ್ರೀ ಹೇಳಿಕೆಗೆ ತಿರುಗೇಟು
    ಇನ್ನೂ ಉಚಿತ ಭಾಗ್ಯಗಳಿಂದ ಜನ ಸೋಮಾರಿ ಆಗುತ್ತಿದ್ದಾರೆ ಅನ್ನೋ ರಂಭಾಪುರಿ ಶ್ರೀಗಳ ಹೇಳಿಕೆಗೆ ಪ್ರತಿಕ್ರಿಯಿಸಿ, ಇದನ್ನ ಈಗಲ್ಲ, ಕಳೆದಬಾರಿ ಭಾಗ್ಯಗಳನ್ನ ಕೊಟ್ಟಾಗಲೂ ಹೀಗೆ ಹೇಳ್ತಿದ್ರು. ಯಾರೂ ಸೋಮಾರಿಗಳಾಗಲ್ಲ, ಬಡವರು ಹೊಟ್ಟೆ ತುಂಬಾ ಊಟ ಮಾಡಿ ಸೋಮಾರಿ ಆಗೋದಿಲ್ಲ. ಕೇವಲ ಅಕ್ಕಿ ಕೊಟ್ಟ ತಕ್ಷಣ ಎಲ್ಲಾ ಸಿಗುತ್ತಾ? ಜೀವನಕ್ಕಾಗಿ ಅವರೂ ದುಡಿಯುತ್ತಾರೆ. ಇದು ತಲತಲಾಂತರದಿಂದ ಬೇರೊಬ್ಬರ ಕೈಲಿ ದುಡಿಸಿಕೊಂಡು ಸುಖವಾಗಿ ಬಂದಿರೋರು ಹೇಳುವ ಮಾತುಗಳು ಎಂದು ತಿರುಗೇಟು ನೀಡಿದ್ದಾರೆ.

    ಇದೇ ಪ್ರಶ್ನೆಯನ್ನ ಶ್ರೀಮಂತರ ಸಾಲ ಮನ್ನ ಮಾಡುವ ಕೇಂದ್ರ ಸರ್ಕಾರಕ್ಕೆ ಕೇಳಲಿ. ಆವಾಗ ಕೇಳದ ಇವರಿಗೆ ಬಡವರಿಗೆ ಕೊಟ್ಟಾಗೆ ಯಾಕೆ ಕಣ್ಣುರಿ? ಯಾರು ಏನೇ ಟೀಕೆ ಮಾಡಿದ್ರೂ ನಾವು ಕೊಟ್ಟೇ ಕೊಡ್ತೀವಿ ಎಂದು ತಿಳಿಸಿದ್ದಾರೆ.

  • ಈ ಸಲ ಕಪ್ ನಮ್ದು – ಆರ್‌ಸಿಬಿ ದಿಗ್ವಿಜಯಕ್ಕೆ ಸಿದ್ದರಾಮಯ್ಯ, ಡಿಕೆಶಿ, ಹೆಚ್‌ಡಿಕೆ ಅಭಿನಂದನೆ

    ಈ ಸಲ ಕಪ್ ನಮ್ದು – ಆರ್‌ಸಿಬಿ ದಿಗ್ವಿಜಯಕ್ಕೆ ಸಿದ್ದರಾಮಯ್ಯ, ಡಿಕೆಶಿ, ಹೆಚ್‌ಡಿಕೆ ಅಭಿನಂದನೆ

    – ಆರ್‌ಸಿಬಿ ಹುಡುಗರು ಅಭಿಮಾನಿಗಳ ಕನಸು ನನಸಾಗಿಸಿದ್ದಾರೆ: ಸಿಎಂ

    ಪಿಎಲ್‌ ಚಾಂಪಿಯನ್‌ ಪಟ್ಟಕ್ಕೇರಿದ ಆರ್‌ಸಿಬಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್‌ ಹಾಗೂ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.

    ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಸಿಎಂ ಸಿದ್ದರಾಮಯ್ಯ, ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್‌ಸಿಬಿಯ ಹುಡುಗರು ನನಸಾಗಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ.

    ಡಿಸಿಎಂ ಡಿ.ಕೆ ಶಿವಕುಮಾರ್‌, ಈ ಸಲಾ ಕಪ್ ನಮ್ದೇ, ನೀವು ಪ್ರತಿಯೊಬ್ಬ ಕನ್ನಡಿಗನ ಕನಸನ್ನು ನನಸಾಗಿಸಿದ್ದೀರಿ ಎಂದು ಆರ್‌ಸಿಬಿ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

    ಈ ಬಗ್ಗೆ ಎಕ್ಸ್‌ನಲ್ಲಿ, ವೀಡಿಯೋ ಹಂಚಿಕೊಂಡಿರುವ ಹೆಚ್‌ಡಿಕೆ, ಬೆಂಗಳೂರು ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಆರೂವರೆ ಕೋಟಿ ಕನ್ನಡಿಗರ ಕನಸನ್ನು ನನಸು ಮಾಡಿದ ಪಟಿದಾರ್ ಪಡೆಯ ಶ್ರೇಷ್ಠ ಕ್ರಿಕೆಟ್ ಕನ್ನಡಿಗರು ಮಾತ್ರವಲ್ಲದೆ, ಇಡೀ ಜಗತ್ತಿನ ಕ್ರಿಕೆಟ್ ಪ್ರೇಮಿಗಳ ಮನಸೂರೆಗೊಂಡಿದೆ ಎಂದು ಹೇಳಿದ್ದಾರೆ.

    ಕರ್ನಾಟಕದ ಕ್ರಿಕೆಟ್ ಇತಿಹಾಸದಲ್ಲಿಯೇ ಈ ಗೆಲುವು ಮಹೋನ್ನತ ಮೈಲುಗಲ್ಲು ಎಂಬುದು ನನ್ನ ಅಭಿಪ್ರಾಯ, ಮುಖ್ಯವಾಗಿ 18 ವರ್ಷಗಳಷ್ಟು ಸುದೀರ್ಘ ಕಾಲ ತಂಡ ಶ್ರೇಯಸ್ಸಿಗಾಗಿ ತಮ್ಮನ್ನು ಸಮರ್ಪಣೆ ಮಾಡಿಕೊಂಡ ಹಿರಿಯ ಆಟಗಾರ ಕೋಹ್ಲಿಯವರಿಗೆ ಅಭಿನಂದಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.

  • ಅ.2 ರಂದು ರಾಜ್ಯಾದ್ಯಂತ `ಗಾಂಧಿ ನಡಿಗೆ’; ಒಂದು ವರ್ಷ ಕಾರ್ಯಕ್ರಮ ಆಯೋಜನೆ – ಡಿಕೆಶಿ

    ಅ.2 ರಂದು ರಾಜ್ಯಾದ್ಯಂತ `ಗಾಂಧಿ ನಡಿಗೆ’; ಒಂದು ವರ್ಷ ಕಾರ್ಯಕ್ರಮ ಆಯೋಜನೆ – ಡಿಕೆಶಿ

    – ಸ್ವಚ್ಛತೆಯ ಪ್ರತಿಜ್ಞಾವಿಧಿ ಸ್ವೀಕಾರ

    ಬೆಂಗಳೂರು: ಅ.2 ರಂದು ರಾಜ್ಯಾದ್ಯಂತ `ಗಾಂಧಿ ನಡಿಗೆ’ ಹಾಗೂ `ಸ್ವಚ್ಛತೆಯ ಪ್ರತಿಜ್ಞಾ ಸ್ವೀಕಾರ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ತಿಳಿಸಿದರು.

    ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಯವರು (Mahatma Gandhi) ಬೆಳಗಾವಿಯಲ್ಲಿ (Belagavi) ಸ್ವಾತಂತ್ರ‍್ಯ ಸಂಗ್ರಾಮದ ನೇತೃತ್ವ ವಹಿಸಿಕೊಂಡು 100 ವರ್ಷವಾಗಿರುವ ಹಿನ್ನೆಲೆಯಲ್ಲಿ ಒಂದು ವರ್ಷಗಳ ಕಾಲ ವಿಭಿನ್ನ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಕಾರ್ಯಕ್ರಮದ ಮೊದಲ ಭಾಗವಾಗಿ ಅ.2 ಗಾಂಧಿ ಜಯಂತಿಯಂದು 1 ಕಿ.ಮೀ. ‘ಗಾಂಧಿ ನಡಿಗೆ’ ಮತ್ತು ‘ಸ್ವಚ್ಛತಾ ಪ್ರತಿಜ್ಞಾ ಸ್ವೀಕಾರ’ ಅಭಿಯಾನ ಹಮ್ಮಿಕೊಳ್ಳಲಾಗುವುದು. ರಾಜ್ಯಾದ್ಯಂತ ಜಿಲ್ಲಾ, ತಾಲೂಕು ಕೇಂದ್ರ ಹಾಗೂ ಪಾಲಿಕೆ ಮಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಅವ್ರು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ: ಪ್ರದೀಪ್ ಈಶ್ವರ್

    ಬೆಂಗಳೂರಿನಲ್ಲಿ ಬುಧವಾರ ಬೆಳಗ್ಗೆ 9 ಗಂಟೆಗೆ ಗಾಂಧಿ ಭವನದಿಂದ ವಿಧಾನಸೌಧದ ಗಾಂಧಿ ಪ್ರತಿಮೆವರೆಗೂ ನಡಿಗೆ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು ಎಂದಿದ್ದಾರೆ.

    500 ಶಾಲಾ ಮಕ್ಕಳಿಗೆ ಜೂಮ್ ಮೂಲಕ ಪ್ರತಿಜ್ಞಾವಿಧಿ:
    ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ (Lal Bahadur Shastri) ಇಬ್ಬರ ಜನ್ಮದಿನವೂ ಒಂದೇ ದಿನ ಆಗಿರುವ ಕಾರಣ ಇಬ್ಬರ ಪ್ರತಿಮೆಗೂ ಮಾಲಾರ್ಪಣೆ ಮಾಡಲಾಗುವುದು. ನಂತರ ನಡಿಗೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಹಾಗೂ ಬೆಂಗಳೂರಿನ 500 ಶಾಲಾ, ಕಾಲೇಜು ಮಕ್ಕಳಿಗೆ ಜೂಮ್ ಮೂಲಕ ಪ್ರತಿಜ್ಞಾ ವಿಧಿ ಬೋಧನೆ ಮಾಡಲಾಗುವುದು. ಇದು ಸರ್ಕಾರದ ಕಾರ್ಯಕ್ರಮ, ಗಾಂಧಿ ಅವರ ಆದರ್ಶವನ್ನು ಯುವ ಪೀಳಿಗೆಗೆ ತಲುಪಿಸಲು ಈ ಕಾರ್ಯಕ್ರಮ ರೂಪಿಸಿದೆ ಎಂದರು.

    ಶ್ವೇತ ವಸ್ತ್ರ ಧರಿಸಿ ನಡಿಗೆ:
    ಜಿಲ್ಲಾ ಕೇಂದ್ರದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ತಾಲೂಕು ಮಟ್ಟದಲ್ಲಿ ಸ್ಥಳೀಯ ಶಾಸಕರು ಭಾಗವಹಿಸಲಿದ್ದಾರೆ. ಈ ನಡಿಗೆ ವೇಳೆ ಬಿಳಿ ವಸ್ತ್ರ, ಗಾಂಧಿ ಟೋಪಿ ಧರಿಸಿ ಹೆಜ್ಜೆ ಹಾಕುವಂತೆ ಮನವಿ ಮಾಡಲಾಗುವುದು. ಗಾಂಧಿ ಜಯಂತಿಯನ್ನು ವಿಶಿಷ್ಟವಾಗಿ ಆಚರಣೆ ಮಾಡುತ್ತಿದ್ದು, ಇಡೀ ವರ್ಷ ಗಾಂಧೀಜಿ ಅವರ ಆಚಾರ ವಿಚಾರವನ್ನು ಯುವ ಪೀಳಿಗೆಗೆ ತಿಳಿಸಲು ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತ್ಯೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.ಇದನ್ನೂ ಓದಿ: ಮೈಸೂರು ದಸರಾದಲ್ಲಿ ತುತ್ತೂರಿ ಬ್ಯಾನ್

    ಪ್ರತಿಜ್ಞಾ ವಿಧಿಗಾಗಿ ಆಪ್ ಮೂಲಕ ನೋಂದಣಿ:
    ರಾಜ್ಯದಲ್ಲಿ ಸಾರ್ವಜನಿಕರು ಪ್ರತಿಜ್ಞಾ ವಿಧಿ ತೆಗೆದುಕೊಳ್ಳಲು ಒಂದು ಆಪ್ ಸಿದ್ಧಪಡಿಸಲಾಗಿದ್ದು, ಈಗಾಗಲೇ 35 ಸಾವಿರ ಮಂದಿ ಈ ಆಪ್‌ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಪ್ರತಿಜ್ಞಾ ವಿಧಿ ಪಡೆದವರಿಗೆ ಆನ್‌ಲೈನ್‌ನಲ್ಲೇ ಪ್ರಮಾಣಪತ್ರ ನೀಡಲಾಗುವುದು. ಇದು ಮೊದಲ ಹಂತದ ಕಾರ್ಯಕ್ರಮವಾಗಿದ್ದು, ಇಡೀ ವರ್ಷ ಬೇರೆ ಬೇರೆ ಕಾರ್ಯಕ್ರಮ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

  • ಸ್ಕೈವಾಕ್‌  ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿ – ಡಿಕೆಶಿಗೆ ಸೂರ್ಯ ಪತ್ರ

    ಸ್ಕೈವಾಕ್‌ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿ – ಡಿಕೆಶಿಗೆ ಸೂರ್ಯ ಪತ್ರ

    ಬೆಂಗಳೂರು: ಕೈ  (Congress) ಸರ್ಕಾರದಿಂದ ನಗರದ ಅಭಿವೃದ್ಧಿಗಾಗಿ ದುಡ್ಡು ಬಿಡುಗಡೆ ಮಾಡುವಂತೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ (Tejasvi Surya)  ಡಿಸಿಎಂ ಡಿಕೆ.ಶಿವಕುಮರ್‌ಗೆ  (D.K. Shivakumar) ಪತ್ರ ಬರೆದಿದ್ದಾರೆ.

    ಕಾಂಗ್ರೆಸ್ ಸರ್ಕಾರದಲ್ಲಿ ಬೆಂಗಳೂರು ಅಭಿವೃದ್ಧಿಗೆ ದುಡ್ಡು ಬಿಡುಗಡೆ ಮಾಡುವಂತೆ ಬಿಜೆಪಿ ನಾಯಕರು ಒತ್ತಡ ನೀಡುತ್ತಿದ್ದಾರೆ. ಈ ಹಿಂದೆ ಇದೇ ವಿಚಾರವಾಗಿ ಶಾಸಕ ಮುನಿರತ್ನ ಮನವಿ ಮಾಡಿದ್ದರು. ಈಗ ತೇಜಸ್ವಿ ಸೂರ್ಯ ಡಿಕೆಶಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ:  ಮುಸ್ಲಿಮರಿಗೆ ಉಡುಗೊರೆ, ರೈತರಿಗೆ ಗಾಯದ ಮೇಲೆ ಬರೆ: ಅಶೋಕ್‌ ಕಿಡಿ

    ನಗರದ ಸಂಚಾರ ದೃಷಿಯಿಂದ ಬಹುಮುಖ್ಯ ಪ್ರದೇಶವಾಗಿರುವ ಬನಶಂಕರಿಯಲ್ಲಿ ಬಿಎಂಟಿಸಿ ಬಸ್ ನಿಲ್ದಾಣ ಮತ್ತು ಮೆಟ್ರೋ ನಿಲ್ದಾಣಗಳ ನಡುವೆ ಸಾರ್ವಜನಿಕರ ಸಂಚಾರಕ್ಕೆ ಬಹಳ ತೊಂದರೆಯಾಗುತ್ತಿದೆ. ಇವುಗಳ ಮಧ್ಯೆ ದಿನನಿತ್ಯ ಸಂಚಾರ ಮಾಡುವ ಜನರಿಗಾಗಿ ಸ್ಕೈವಾಕ್‌ ನಿರ್ಮಾಣ ಮಾಡಬೇಕು. ಸ್ಕೈವಾಕ್‌ ನಿರ್ಮಾಣಕ್ಕೆ ಸರ್ಕಾರದಿಂದ ದುಡ್ಡು ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ನಿಖಿಲ್ ಮಂಡ್ಯ ಕಣದಿಂದ ಹಿಂದೆ ಸರಿದಿದ್ದೇಕೆ?

    ಇದೇ ವಿಚಾರವನ್ನು ಹಲವಾರು ಬಾರಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ ಮತ್ತು ನಿಮ್ಮ ಗಮನಕ್ಕೂ ತಂದಿದ್ದೇನೆ. ಅದಕ್ಕೆ ತಾವು ಸಕಾರಾತ್ಮಕವಾಗಿ ಸ್ಪಂದಿಸಿದ್ದೀರಿ. ಸಾಕಷ್ಟು ಬಾರಿ ದೂರವಾಣಿ ಕರೆ ಮಾಡಿದ್ದೇನೆ. ಆದರೆ ಕಾಮಗಾರಿ ಬಗ್ಗೆ ಮಾತ್ರ ಇನ್ನೂ ಸ್ಪಷ್ಟನೆ ಇಲ್ಲ. ನಾವು ಅಲ್ಲಿ ಸ್ಕೈವಾಕ್‌ ನಿರ್ಮಿಸುವುದರಿಂದ 50 ಸಾವಿರ ಜನಕ್ಕೆ ಪ್ರಯೋಜನವಾಗಲಿದೆ. ಹೀಗಾಗಿ ಬಿಬಿಎಂಪಿ ಬಜೆಟ್‌ನಲ್ಲಿ ಅನುದಾನ ಮೀಸಲಿಡಿ ಎಂದು ಡಿಕೆ.ಶಿವಕುಮಾರ್ ಅವರಿಗೆ ತೇಜಸ್ವಿ ಸೂರ್ಯ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಬೇಸಿಗೆಗೂ ಮುನ್ನವೇ ಕುಡಿಯೋ ನೀರಿಗೆ ಹಾಹಾಕಾರ – ವಾಟರ್‌ ಟ್ಯಾಂಕರ್‌ ಮಾಲೀಕರಿಂದ ದುಪ್ಪಟ್ಟು ದರ ಸುಲಿಗೆ!

  • ಬಡವರಿಗೆ ಕೇಂದ್ರದಿಂದ ದ್ರೋಹ – ಜೂ.20ಕ್ಕೆ ಕಾಂಗ್ರೆಸ್‌ನಿಂದ ರಾಜ್ಯವ್ಯಾಪಿ ಪ್ರತಿಭಟನೆ: ಡಿಕೆಶಿ

    ಬಡವರಿಗೆ ಕೇಂದ್ರದಿಂದ ದ್ರೋಹ – ಜೂ.20ಕ್ಕೆ ಕಾಂಗ್ರೆಸ್‌ನಿಂದ ರಾಜ್ಯವ್ಯಾಪಿ ಪ್ರತಿಭಟನೆ: ಡಿಕೆಶಿ

    ಬೆಂಗಳೂರು: ಕೇಂದ್ರ ಸರ್ಕಾರ ಅಕ್ಕಿ (Rice) ಕೊಡದ ವಿಚಾರವನ್ನೇ ಮುಂದಿಟ್ಟುಕೊಂಡು ಕಾಂಗ್ರೆಸ್‌ (Congress) ಈಗ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲು ಮುಂದಾಗಿದೆ. ಜೂನ್‌ 20 ರಂದು ಜಿಲ್ಲಾ ಕೇಂದ್ರದಲ್ಲಿ ಕಾಂಗ್ರೆಸ್‌ ಪ್ರತಿಭಟನೆ (Protest) ನಡೆಸಲು ತೀರ್ಮಾನ ತೆಗೆದುಕೊಂಡಿದೆ.

    ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar), ಕಾಂಗ್ರೆಸ್ಸಿಗೆ ಬಡವರು ಮತ ಹಾಕಿದ್ದಾರೆ. ಅವರಿಗೆ ಧಿಕ್ಕಾರ‌ ಮಾಡಲು ಬಿಜೆಪಿ (BJP) ಹೊರಟಿದೆ. ಬಡವರಿಗೆ ದ್ರೋಹ ಮಾಡಲು ಹೊರಟ ಕೇಂದ್ರ ಸರ್ಕಾರದ ವಿರುದ್ಧ ಜೂನ್‌ 20 ರಂದು ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.

     

    ಕೆಪಿಸಿಸಿಯಿಂದ (KPCC) ನಡೆಯುವ ಈ ಪ್ರತಿಭಟನೆಯಲ್ಲಿ ಜಿಲ್ಲೆಯ ಶಾಸಕರು, ಕಾರ್ಯಕರ್ತರು ಭಾಗವಹಿಸಬೇಕು. ನಮ್ಮನ್ನು ಕೇಂದ್ರ ಸರ್ಕಾರ ಹೆದರಿಸುತ್ತಿದ್ದು ಇದರ ವಿರುದ್ಧ ನಾವು ಸಿಡಿಯುತ್ತೇವೆ ಎಂದು ವಾಗ್ದಾಳಿ ನಡೆಸಿದರು.  ಇದನ್ನೂ ಓದಿ: ಯೋಗದಿಂದ ಪರಿವರ್ತನೆ – ಅಂದು ಖೈದಿಯಾಗಿದ್ದಾತ ಈಗ ಯೋಗ ಗುರು

    ಬೇರೆ ರಾಜ್ಯಗಳಲ್ಲಿ ನಾವು ಅಕ್ಕಿ ಖರೀದಿಯ ಬಗ್ಗೆ ವಿಚಾರಿಸುತ್ತಿದ್ದೇವೆ. ಪಾರದರ್ಶಕವಾಗಿ ಖರೀದಿ ಮಾಡಬೇಕಿದೆ. ಕೇಂದ್ರದ ಬಳಿ ಏಳು ಲಕ್ಷ ಮೆಟ್ರಿಕ್ ಟನ್ ಅಕ್ಕಿ ಇದೆ. ನಾವು 2.80 ಲಕ್ಷ ಮೆಟ್ರಿಕ್ ಟನ್ ಕೇಳುತ್ತಿದ್ದೇವೆ. ಯೋಜನೆ ಜಾರಿಯಾಗಲು ಒಂದೆರೆಡು ದಿನಗಳು ತಡವಾಗಬಹುದು ಎಂದರು.

    ಅಕ್ಕಿ ಹೊಂದಿಸಲು ತಡವಾಗಬಹುದು ಎಂದು ಹೇಳುವ ಮೂಲಕ ಪರೋಕ್ಷವಾಗಿ ಅನ್ನಭಾಗ್ಯ ಯೋಜನೆ ಜಾರಿಯಾಗುವುದು ತಡವಾಗಬಹುದು ಎಂಬದುನ್ನು ಡಿ‌ಕೆ ಶಿವಕುಮಾರ್ ಒಪ್ಪಿಕೊಂಡರು.

  • ಇಂದು ಬಿಡುಗಡೆ ಆಗಬೇಕಿದ್ದ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಗೆ ತಡೆ – ಡಿಕೆಶಿ ಹೇಳಿದ್ದೇನು?

    ಇಂದು ಬಿಡುಗಡೆ ಆಗಬೇಕಿದ್ದ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಗೆ ತಡೆ – ಡಿಕೆಶಿ ಹೇಳಿದ್ದೇನು?

    ಬೆಂಗಳೂರು: ಕಾಂಗ್ರೆಸ್ (Congress) ಅಭ್ಯರ್ಥಿಗಳ ಮೊದಲ ಪಟ್ಟಿ ಇವತ್ತು ಬಿಡುಗಡೆ ಮಾಡುತ್ತಿಲ್ಲ, ಆದರೆ ಇನ್ನೂ ಎರಡು, ಮೂರು ದಿನಗಳಲ್ಲಿ ಮೊದಲ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ತಿಳಿಸಿದರು.

    ಮಂಗಳವಾರ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿತ್ತು. ಆದರೆ ಹಲವು ರಾಜಕೀಯ ಬೆಳವಣಿಗೆಗಳ ಬೆನ್ನಲ್ಲೇ ಪಟ್ಟಿ ಬಿಡುಗಡೆಯನ್ನು ಮುಂದೂಡಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವತ್ತು ಮೊದಲ ಪಟ್ಟಿ ಬಿಡುಗಡೆ ಮಾಡಬೇಕಿತ್ತು. ಮಲ್ಲಿಕಾರ್ಜುನ ಖರ್ಗೆ ಅವರು ಹಬ್ಬಕ್ಕೆ ಬೆಂಗಳೂರಿಗೆ (Bengaluru) ಬಂದಿದ್ದಾರೆ. ಹೀಗಾಗಿ ಎರಡು ಮೂರು ದಿನಗಳಲ್ಲಿ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಭರವಸೆ ನೀಡಿದರು.

    ಈ ಸಂದರ್ಭದಲ್ಲಿ ಯುಗಾದಿ ಹಬ್ಬದ ಶುಭಾಶಯ ಕೋರಿದ ಅವರು, ಕಳೆದ 3 ವರ್ಷಗಳಿಂದ ಜನ ಸಾಕಷ್ಟು ಸಂಕಷ್ಟ ಅನುಭವಿಸುತ್ತಿದ್ದಾರೆ. ಯುಗಾದಿ ಸಂದರ್ಭದಲ್ಲಿ ಈ ಕೆಟ್ಟ ಆಡಳಿತ ತೊಲಗಲಿ. ಈ ರೀತಿ ನೀವೂ ಹಾರೈಸಿ. ಕಾಂಗ್ರೆಸ್ ಸರ್ಕಾರ ಜನಪರವಾಗಿರಲಿದೆ. ಹಲವಾರು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೀವಿ. ಬಿಜೆಪಿಯವರ ತರಹ ನಾವು ಸುಳ್ಳು ಆಶ್ವಾಸನೆ ಕೊಡಲ್ಲ ಎಂದು ಹೇಳಿದರು. ಇದನ್ನೂ ಓದಿ: ಬೆಳಗಾವಿಯಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ ಮುಂದಾದ ಅನಿಲ್ ಬೆನಕೆ

    ಪ್ರತಿಯೊಬ್ಬರ ಅಕೌಂಟ್‍ಗೆ 15 ಲಕ್ಷ ರೂ. ಕೊಡುತ್ತೇವೆ ಎಂದರು. ಉದ್ಯೋಗ ಸೃಷ್ಟಿ ಭರವಸೆ ನೀಡಿದ್ರು ಏನಾದ್ರೂ ಮಾಡಿದ್ರಾ? ಆದರೆ ನಾವು ಕೊಟ್ಟ ಭರವಸೆಗಳನ್ನು ಈಡೇರಿಸಲು ಏನು ಮಾಡಬೇಕು ಎಂಬ ಬಗ್ಗೆ ನಾವು ಈಗಾಗಲೇ ಚರ್ಚೆ ಮಾಡಿದ್ದೇವೆ. ನಮ್ಮ ಗ್ಯಾರಂಟಿ ಭರವಸೆಗಳನ್ನು ನಾವು ಈಡೇರಿಸಿಯೇ ತೀರುತ್ತೇವೆ ಎಂದರು. ಇದನ್ನೂ ಓದಿ: ಟಿಕೆಟ್ ಘೋಷಣೆಗೂ ಮುನ್ನವೇ ಅಭ್ಯರ್ಥಿಯಾದ ಮಂಡ್ಯ ಕಾಂಗ್ರೆಸ್ ಮುಖಂಡ

  • ಬಸವ ಕಲ್ಯಾಣದಿಂದ ಸಿದ್ದರಾಮಯ್ಯ, ಕುರಡುಮಲೆಯಿಂದ ಡಿಕೆಶಿ ಬಸ್ ಯಾತ್ರೆ- ಫೆ. 3ರಿಂದ ಆರಂಭ

    ಬಸವ ಕಲ್ಯಾಣದಿಂದ ಸಿದ್ದರಾಮಯ್ಯ, ಕುರಡುಮಲೆಯಿಂದ ಡಿಕೆಶಿ ಬಸ್ ಯಾತ್ರೆ- ಫೆ. 3ರಿಂದ ಆರಂಭ

    ಬೆಂಗಳೂರು: ಫೆ. 3ರಂದು ಬೀದರ್‌ನ ಬಸವ ಕಲ್ಯಾಣದಿಂದ ಬಸ್‌ ಯಾತ್ರೆಯನ್ನು ಪ್ರಾರಂಭಿಸಲಾಗುವುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ. ಅದೇ ದಿನ ಮುಳಬಾಗಿಲಿನ ಕುರುಡುಮಲೆಯಿಂದ ಬಸ್ ಯಾತ್ರೆ ಆರಂಭಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿರ್ಧರಿಸಿದ್ದಾರೆ. ಜಂಟಿ ಬಸ್ ಯಾತ್ರೆ ಮಾಡಿರುವ ಉಭಯ ನಾಯಕರು ಈಗ ರಾಜ್ಯದ ಎರಡು ದಿಕ್ಕಿನಿಂದ ಪ್ರತ್ಯೇಕ ಬಸ್ ಯಾತ್ರೆ ಆರಂಭಿಸಲಿದ್ದಾರೆ.

    ಅನುಭವ ಮಂಟಪಕ್ಕೆ ಭೇಟಿ ನೀಡಿ ಪ್ರಜಾಧ್ವನಿ ಯಾತ್ರೆ ಪ್ರಾರಂಭಿಸಲಿರುವ ಸಿದ್ದರಾಮಯ್ಯ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಾರ್ವಜನಿಕ ಸಭೆ ನಡೆಸಿ ಅದೇ ದಿನ ಬಾಲ್ಕಿಯಲ್ಲಿ ಪ್ರಜಾಧ್ವನಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಕುರುಡುಮಲೆ ಗಣಪತಿಗೆ ಪೂಜೆ ಸಲ್ಲಿಸಿ ಬಸ್ ಯಾತ್ರೆ ಆರಂಭಿಸಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಂದೇ 2 ಸಮಾವೇಶಗಳಲ್ಲಿ ಭಾಗವಹಿಸಲಿದ್ದಾರೆ.

    ಸಿದ್ದರಾಮಯ್ಯ ಬಸ್ ಯಾತ್ರೆ ವಿವರ: ಫೆ.4ರಂದು ಔರಾದ್, ಬೀದರ್ ಹಾಗೂ ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಪ್ರಜಾಧ್ವನಿ ನಡೆಯಲಿದ್ದು, ಆ ದಿನದ ಸಂಜೆ ಹುಮ್ನಾಬಾದ್‌ನಲ್ಲಿ ಪ್ರಜಾಧ್ವನಿ ಸಮಾವೇಶ ಹಾಗೂ ಅದೇ ದಿನ ಕಲಬುರ್ಗಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.

    ಫೆ.6 ರಂದು ಕಲಬುರಗಿ ಗ್ರಾಮೀಣ, ಚಿಂಚೋಳಿ, ಸೇಡಂನಲ್ಲಿ ಪ್ರಜಾಧ್ವನಿ ನಡೆಯಲಿದೆ. ಫೆ.7ರಂದು ಆಳಂದ, ಅಫ್ಜಲಪುರ, ಯಡ್ರಾಮಿ ಜೇವರ್ಗಿ ಕ್ಷೇತ್ರದಲ್ಲಿ ಹಾಗೂ ಫೆ. 8ರಂದು ಚಿತ್ತಾಪುರದಲ್ಲಿ ಪ್ರಜಾಧ್ವನಿ ಸಮಾವೇಶ ನಡೆಯಲಿದೆ. ಫೆ. 10ರಂದು ಸುರಪೂರ, ಶಹಪುರ, ಕಲಬುರ್ಗಿ ಉತ್ತರ ಹಾಗೂ ದಕ್ಷಿಣ ಕ್ಷೇತ್ರಗಳಲ್ಲಿ ಹಾಗೂ ಫೆ. 11ರಂದು ಸಿಂಧಗಿ, ಇಂಡಿ, ನಾಗಠಾಣಾ ಪ್ರಜಾಧ್ವನಿ ಸಮಾವೇಶ ನಡೆಯಲಿದೆ. ಫೆ. 12ರಂದು ಬಬಲೇಶ್ವರ, ದೇವರ ಹಿಪ್ಪರಗಿ, ಬಸವನಬಾಗೇವಾಡಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಬಸ್ ಯಾತ್ರೆ ನಡೆಸಲಿದ್ದಾರೆ.

    ಡಿ.ಕೆ. ಶಿವಕುಮಾರ್ ನೇತೃತ್ವದ ಬಸ್ ಯಾತ್ರೆ ವಿವರ: ಫೆ.3ರಂದು ಮುಳಬಾಗಿಲು, ಕೆಜಿಎಫ್ ಕ್ಷೇತ್ರ ಹಾಗೂ ಫೆ. 4ರಂದು ಮಾಲೂರು, ದೇವನಹಳ್ಳಿ ಕ್ಷೇತ್ರದಲ್ಲಿ ಪ್ರಜಾಧ್ವನಿ (Praja Dhwani) ಸಮಾವೇಶ ನಡೆಯಲಿದೆ. ಫೆ.6ರಂದು ಹಿರಿಯೂರು, ಚಳ್ಳಕೆರೆ, ಮೊಳಕಾಲ್ಮೂರು, ಫೆ. 7ರಂದು ಚಿತ್ರದುರ್ಗ, ಹೊಳಲ್ಕೆರೆ, ಹೊಸದುರ್ಗ, ಫೆ. 8ರಂದು ಶಿಕಾರಿಪುರ, ಸೊರಬ, ಸಾಗರ ತಾಲೂಕಿನಲ್ಲಿ ಹಾಗೂ ಫೆ. 9ರಂದು ತೀರ್ಥಹಳ್ಳಿ, ಭದ್ರಾವತಿಯಲ್ಲಿ ಡಿಕೆಶಿವಕುಮಾರ್ ಪ್ರಜಾಧ್ವನಿ ಬಸ್ ಯಾತ್ರೆ ಸಾಗಲಿದೆ. ಉಭಯ ನಾಯಕರು ಒಂದೇ ದಿನ ರಾಜ್ಯದ ಬೇರೆ ಬೇರೆ ದಿಕ್ಕಿನಿಂದ ಬಸ್ ಯಾತ್ರೆ ಆರಂಭಿಸಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಿದ್ದರಾಮಯ್ಯ ಏಳು ಬಾರಿ ಪಕ್ಷ ಬದಲಿಸಿದ ದೊಡ್ಡ ಪಕ್ಷಾಂತರಿ: ಪ್ರಮೋದ್ ಮಧ್ವರಾಜ್ ವಾಗ್ದಾಳಿ

    ಸಿದ್ದರಾಮಯ್ಯ ಏಳು ಬಾರಿ ಪಕ್ಷ ಬದಲಿಸಿದ ದೊಡ್ಡ ಪಕ್ಷಾಂತರಿ: ಪ್ರಮೋದ್ ಮಧ್ವರಾಜ್ ವಾಗ್ದಾಳಿ

    ಉಡುಪಿ: ಸಿದ್ದರಾಮಯ್ಯ (Siddaramaiah) ಏಳು ಸಲ ಪಕ್ಷಾಂತರ ಮಾಡಿದ ರಾಜಕಾರಣಿ. ನಾನು ಹುಟ್ಟಿನಿಂದ ಎಂಟು ತಿಂಗಳ ಹಿಂದೆಯವರೆಗೆ ಕಾಂಗ್ರೆಸ್‍ನಲ್ಲಿ ಇದ್ದೆ. ಈಗ ಬಿಜೆಪಿ (BJP) ಸೇರಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಮೋದ್ ಮಧ್ವರಾಜ್ (Pramod Madhwaraj) ವಾಗ್ದಾಳಿ ನಡೆಸಿದ್ದಾರೆ.

    ಉಡುಪಿಯಲ್ಲಿ ನಡೆದ ಪ್ರಜಾ ಧ್ವನಿ ಕಾಂಗ್ರೆಸ್ ಸಮಾವೇಶದಲ್ಲಿ ಪ್ರಮೋದ್ ವಿರುದ್ಧ ಕಾಂಗ್ರೆಸ್ (Congress) ನಾಯಕರು ಸಿಡಿದೆದ್ದಿದ್ದರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ (D.K Shivakumar) ವಿರುದ್ಧ ಪ್ರಮೋದ್ ಮಧ್ವರಾಜ್ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಈವರೆಗೆ ಏಳು ಬಾರಿ ಪಕ್ಷವನ್ನು ಬದಲಿಸಿದ್ದಾರೆ. ಸಿದ್ದರಾಮಯ್ಯ 1978ರಲ್ಲಿ ರೈತಸಂಘದಲ್ಲಿದ್ದರು. 1983ರಲ್ಲಿ ಭಾರತೀಯ ಲೋಕದಳ, ಸಮಾಜಪಕ್ಷ ಜನತಾದಳ, ಜಾತ್ಯಾತೀತ ಜನತಾದಳ, ಅಹಿಂದ ಸೇರಿಕೊಂಡರು. ಸಿದ್ದರಾಮಯ್ಯ ಅಶಿಸ್ತಿನ ವಾತಾವರಣ ಸೃಷ್ಟಿ ಮಾಡಿ ವಜಾವಾಗಿದ್ದರು. ಹಾಗಾದ್ರೆ, ಬೇರೆ ಪಕ್ಷದಿಂದ ಕಾಂಗ್ರೆಸ್‍ಗೆ ಬರಬೇಡಿ ಎಂದು ಘೋಷಿಸಿ ಎಂದು ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ಗೆ ಪ್ರಮೋದ್ ಮಧ್ವರಾಜ್ ಸವಾಲೆಸೆದಿದ್ದಾರೆ. ಇದನ್ನೂ ಓದಿ: ಯೋಗ್ಯತೆ ಮೀರಿ ನನಗೆ ಕೇಂದ್ರ ಸರ್ಕಾರ ಗೌರವ ನೀಡಿದೆ: ಎಸ್.ಎಂ.ಕೃಷ್ಣ

    ಸನ್ನಿವೇಶಕ್ಕೆ ಅನುಗುಣವಾಗಿ ದೇಶದಲ್ಲಿ ಪಕ್ಷಾಂತರ ಸಾಮಾನ್ಯ. ನನ್ನನ್ನು ಅಸಾಮಿ, ಗಿರಾಗಿ ಅಂತ ಹೇಳಿದ್ದಾರೆ. ನಾನು ಸಿದ್ದರಾಮಯ್ಯ ಕ್ಯಾಬಿನೆಟ್‍ನಲ್ಲಿ ಮಂತ್ರಿಯಾಗಿದ್ದೆ. ನನ್ನ ಬಗ್ಗೆಯೇ ಹೀಗೆ ಮಾತನಾಡುವಾಗ, ಜನಸಾಮಾನ್ಯರ ಬಗ್ಗೆ ಸಿದ್ದರಾಮಯ್ಯ ಹೇಗೆ ಮಾತನಾಡಬಹುದು ಆಲೋಚಿಸಿ. ಸಿದ್ದರಾಮಯ್ಯ ವಿರುದ್ಧ ಕೆಟ್ಟದ್ದಾಗಿ ಮಾತನಾಡಲು ಎಲ್ಲರಿಗೂ ಬರುತ್ತದೆ. ತಂದೆ ತಾಯಿ ನನಗೆ ಸಂಸ್ಕಾರ ಸೌಜನ್ಯತೆ ಕಲಿಸಿದ್ದಾರೆ ಹಾಗಾಗಿ ಮಾತನಾಡಲ್ಲ ಎಂದಿದ್ದಾರೆ. ಇದನ್ನೂ ಓದಿ: ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು

    ಉಡುಪಿ, ಚಿಕ್ಕಮಗಳೂರು, ಉ.ಕನ್ನಡ ಮೈತ್ರಿ ಸೀಟ್ ಆಗಿತ್ತು. ಸಿದ್ದರಾಮಯ್ಯ ಮೈಸೂರು ಕ್ಷೇತ್ರ ಉಳಿಸಲು ಸ್ವಾರ್ಥ ಸಾಧನೆ ಮಾಡಿದರು. ಜೆಡಿಎಸ್‍ನಲ್ಲಿ ಟಿಕೆಟ್ ಪಡೆಯೋ ಮೊದಲು ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಪರವಾನಿಗೆ ಪಡೆದಿದ್ದೇನೆ. ಸಿದ್ದರಾಮಯ್ಯ ಅವರ ಸುಳ್ಳಿನ ಬಗ್ಗೆ ಆಕ್ಷೇಪ ಇದೆ ಖಂಡಿಸುತ್ತೇನೆ. ಜೆಡಿಎಸ್‌ನಿಂದ ಹಣ ಪಡೆದಿದ್ದಾನೆ ಎಂದು ಆರೋಪಿಸಿದ್ದಾರೆ. ಜೆಡಿಎಸ್‍ನಿಂದ (JDS) ಬಂದ ಫಂಡನ್ನು ಜಿಲ್ಲಾ ಕಾಂಗ್ರೆಸ್ ಪಡೆದಿದೆ ಎಲ್ಲಾ ಹಂಚಿಕೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜಾರಕಿಹೊಳಿಗೆ ಪ್ಯಾಂಟ್‌ ಬಿಚ್ಚು ಅಂತ ನಾನು ಹೇಳಿಕೊಟ್ಟಿದ್ನಾ..?

    ಜಾರಕಿಹೊಳಿಗೆ ಪ್ಯಾಂಟ್‌ ಬಿಚ್ಚು ಅಂತ ನಾನು ಹೇಳಿಕೊಟ್ಟಿದ್ನಾ..?

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಿದ್ದರಾಮಯ್ಯ ಆಯ್ತು, ಇದೀಗ ಬೇರೆ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲು ಡಿಕೆಶಿಗೆ ಡಿಮ್ಯಾಂಡ್

    ಸಿದ್ದರಾಮಯ್ಯ ಆಯ್ತು, ಇದೀಗ ಬೇರೆ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲು ಡಿಕೆಶಿಗೆ ಡಿಮ್ಯಾಂಡ್

    ಬೆಂಗಳೂರು: ಇದು ಡಿಮ್ಯಾಂಡ್ ಕ್ರಿಯೇಟ್ ಮಾಡುವ ಸ್ಟ್ರಾಟಜಿನಾ? ಕಾರ್ಯಕರ್ತರ ಒತ್ತಾಯದ ಕರೆನಾ? ಸಿದ್ದರಾಮಯ್ಯ ನಂತರ ಬೇರೆ ಬೇರೆ ಕ್ಷೇತ್ರಗಳ ಸ್ಪರ್ಧೆಗೆ ಡಿಕೆಶಿ (DK Shivakumar) ಹೆಸರು ಕೂಡ ಚಾಲ್ತಿಗೆ ಬಂದಿದೆ.

    ಸಿದ್ದರಾಮಯ್ಯ (Siddaramaiah) ಅಷ್ಟೆ ಅಲ್ಲ ಡಿಕೆಶಿಯು ಅಷ್ಟೆ ಬಹು ಬೇಡಿಕೆಯಾ ನಾಯಕ ಎಂದು ಬಿಂಬಿಸುವ ಲೆಕ್ಕಾಚಾರವೂ ನಡೆದಿದೆ. ಅಲ್ಲದೆ ಒಕ್ಕಲಿಗರ ಕೋಟೆಯಲ್ಲಿ ಜೆಡಿಎಸ್‍ಗೆ ಠಕ್ಕರ್ ಕೊಡಲು ಡಿಕೆಶಿಯೇ ಬರಲಿ ಎನ್ನುವ ಲೆಕ್ಕಾಚಾರವೂ ಇದೆ. ಡಿಕೆಶಿ ಮದ್ದೂರು (Madduru) ಕಾಲಿಂಗ್ ಹಿಂದಿನ ಅಸಲಿಯತ್ತೇ ಅದು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಡಿಕೆಶಿ ಮದ್ದೂರಿನಿಂದ ಸ್ಪರ್ಧೆ ಮಾಡಲಿ ಎಂಬ ಆಹ್ವಾನ ಕೈ ನಾಯಕರಿಂದಲೇ ಬಂದಿದೆ. ಇದನ್ನೂ ಓದಿ: ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧಿಸಲ್ಲ: ಯಡಿಯೂರಪ್ಪ

    ಸಿದ್ದರಾಮಯ್ಯಗೆ ಬೇರೆ ಬೇರೆ ಕಡೆಯಿಂದ ಸ್ಪರ್ಧೆಗೆ ಆಹ್ವಾನ ಬಂದ ಬೆನ್ನಲ್ಲೇ ಈಗ ಡಿಕೆಶಿಗೂ ಆಹ್ವಾನ ಆರಂಭವಾಗಿದೆ ಎನ್ನಲಾಗಿದೆ. ಇದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಮೇಜ್ ಹೆಚ್ಚಿಸುವ ಲೆಕ್ಕಾಚಾರನಾ? ಇಲ್ಲವೇ ಒಕ್ಕಲಿಗರ ಭದ್ರಕೋಟೆಯಲ್ಲಿ ಜೆಡಿಎಸ್‍ಗೆ (JDS) ಕೌಂಟರ್ ಕೊಡಲು ಡಿಕೆಶಿ ಹೆಸರನ್ನ ಮುನ್ನಲೆಗೆ ತರುತ್ತಿದ್ದಾರಾ ಅನ್ನೋದೆ ಸದ್ಯದ ಕುತೂಹಲ. ಇದನ್ನೂ ಓದಿ: ಕಾಂಗ್ರೆಸ್ ಮಾಡಿರುವ ಕರ್ಮಕಾಂಡ ಮುಚ್ಚಿಹಾಕಲೆಂದೇ ಲೋಕಾಯುಕ್ತ ಮುಚ್ಚಿದರು: ಬೊಮ್ಮಾಯಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k