ದಾವಣಗೆರೆ: ಇಲ್ಲಿನ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ವೈದ್ಯನೊಬ್ಬ ಭಾರೀ ಎಡವಟ್ಟು ಮಾಡಿದ್ದಾನೆ. ಸಿಸೇರಿಯನ್ ಮಾಡುವ ವೇಳೆ ಹೊಟ್ಟೆಯಲ್ಲಿದ್ದ ಮಗುವಿನ ಮರ್ಮಾಂಗವನ್ನೇ ವೈದ್ಯ ಕೊಯ್ದ ಘಟನೆ ನಡೆದಿದೆ.
ವೈದ್ಯನನ್ನು ನಿಜಾಮುದ್ದೀನ್ ಎಂದು ಗುರುತಿಸಲಾಗಿದೆ. ಇದೀಗ ಈತನ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ಘಟನೆ ವಿವರ: ದಾವಣಗೆರೆ ಕೊಂಡಜ್ಜಿ ರಸ್ತೆಯಲ್ಲಿರೋ ಅರ್ಜುನ್ ಪತ್ನಿ ತುಂಬು ಗರ್ಭಿಣಿ ಅಮೃತಾ ಹೆರಿಗೆಗೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಅಂತೆಯೇ ಅವರಿಗೆ ಜೂನ್ 27 ರಂದು ಅಮೃತಾಗೆ ಸಿಸೇರಿಯನ್ ಮಾಡಿ ಮಗು ತೆಗೆಯಲಾಗಿತ್ತು. ಈ ವೇಳೆ ವೈದ್ಯ ಹೊಟ್ಟೆಯಲ್ಲಿದ್ದ ಮಗುವಿನ ಮರ್ಮಾಂಗಕ್ಕೆ ಕತ್ತರಿ ಹಾಕಿದ್ದಾನೆ.
ವೈದ್ಯನ ಬೇಜಾವ್ದಾರಿತನಕ್ಕೆ ರೊಚ್ಚಿಗೆದ್ದ ಮಗುವಿನ ಕುಟುಂಬಸ್ಥರು ಜಿಲ್ಲಾಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಮಗುವಿನ ಸಾವಿಗೆ ಕಾರಣನಾದ ವೈದ್ಯನನ್ನ ಕೂಡಲೇ ಅಮಾನತು ಮಾಡಿ, ಕಠಿಣ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.
ಜಂಗ್‌ಪುರ ಸಿ ಬ್ಲಾಕ್‌ನಲ್ಲಿರುವ ವಸತಿ ಕಟ್ಟಡದ ಮೊದಲ ಮಹಡಿಯಲ್ಲಿ ವೈದ್ಯ ಚಂದ್ರ ಪಾಲ್ ವಾಸವಾಗಿದ್ದರು. ಅವರ ಮನೆಯಲ್ಲಿ ದರೋಡೆಯಾಗಿರುವ ಬಗ್ಗೆ ಪೊಲೀಸರಿಗೆ ಕುರುಹು ಸಿಕ್ಕಿದೆ. ಆದರೆ ಸಂಪೂರ್ಣ ತನಿಖೆಯ ನಂತರ ಹೆಚ್ಚಿನ ಮಾಹಿತಿ ತಿಳಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.
ಬೆಂಗಳೂರು: ಲೋಕಸಭಾ ಚುನಾವಣೆಯ (Loksabha Elections 2024) ಮೊದಲ ಹಂತದ ಮತದಾನ ಅತ್ಯಂತ ಬಿರುಸಿನಿಂದ ನಡೆಯುತ್ತಿದೆ. ಸೆಲೆಬ್ರಿಟಿಗಳು, ವೃದ್ಧರು ಸೇರಿದಂತೆ ಮತದಾರರು ಬೇಗಬೇಗನೇ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಮತದಾನ ಮಾಡಲು ಬಂದಾಗ ಮಹಿಳೆಯೊಬ್ಬರಿಗೆ ಹೃದಯ ಸ್ತಂಭನವಾಗಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ವೈದ್ಯರು ಆಕೆಯ ಜೀವವನ್ನು ಉಳಿಸಿದ್ದಾರೆ.
— Dr Ganesh Srinivasa Prasad (@thisis_drgsp) April 26, 2024
ಬೊಮ್ಮಸಂದ್ರದ ನಾರಾಯಣ ಆರೋಗ್ಯ ಕೇಂದ್ರದ ತಜ್ಞ ವೈದ್ಯ ಡಾ.ಗಣೇಶ್ ಶ್ರೀನಿವಾಸ ಪ್ರಸಾದ್ ಅವರು ಜೆ.ಪಿ.ನಗರ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತಿದ್ದರು. ಈ ವೇಳೆ 50 ವರ್ಷ ಆಸುಪಾಸಿನ ಮಹಿಳೆಯೊಬ್ಬರು ಏಕಾಏಕಿ ಕುಸಿದುಬಿದ್ದರು. ಈ ವೇಳೆ ಅಲ್ಲೇ ಇದ್ದ ಕೆಲವರು ಮಹಿಳೆಗೆ ನೀರು ಕುಡಿಸಿದರು. ಈವಿಚಾರ ಡಾ. ಗಣೇಶ್ ಗಮನಕ್ಕೆ ಬರುತ್ತಿದ್ದಂತೆಯೇ ಕಾರ್ಯಪ್ರವೃತ್ತರಾಗಿ ಮಹಿಳೆಯ ಪ್ರಾಣವನ್ನು ಉಳಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ 38.23% ಮತದಾನ -ಬೆಂಗಳೂರು ನಗರದಲ್ಲಿ ಅತಿ ಕಡಿಮೆ ಮತದಾನ
ಬಳಿಕ ಮಾತನಾಡಿದ ವೈದ್ಯ, ಮಹಿಳೆ ಕುಸಿದು ಬೀಳುತ್ತಿದ್ದಂತೆಯೇ ಅವರ ನಾಡಿಮಿಡಿತವನ್ನು ಪರಿಶೀಲಿಸಿದೆ. ಅವರ ದೇಹವು ಯಾವುದೇ ಪ್ರತಿಕ್ರಿಯೆಯನ್ನು ತೋರಿಸಲಿಲ್ಲ. ಜೊತೆಗೆ ಅವರಿಗೆ ಉಸಿರುಗಟ್ಟುತ್ತಿತ್ತು. ನಾನು ತಕ್ಷಣ CPR ಮಾಡಿದ್ದೇನೆ. ಬಳಿಕ ಚುನಾವಣಾ ಕರ್ತವ್ಯದಲ್ಲಿದ್ದವರು ಧಾವಿಸಿ ಜ್ಯೂಸ್ ನೀಡಿದರು. ನಂತರ ಅಂಬುಲೆನ್ಸ್‌ನಲ್ಲಿ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಸದ್ಯ ಅವರ ಸ್ಥಿತಿ ಸುಧಾರಿಸಿದೆ. ಸ್ವಲ್ಪ ತಡವಾಗುತ್ತಿದ್ದರೂ ಹೆಚ್ಚು ಕಡಿಮೆ ಆಗುತ್ತಿತ್ತು ಎಂದು ಅವರು ತಿಳಿಸಿದರು.
ಗದಗ: ಕಾಂಗ್ರೆಸ್ (Congress) ಮುಖಂಡನ ಹೆಸರನ್ನ ಡೆತ್ ನೋಟ್‌ನಲ್ಲಿ (Death Note) ಬರೆದಿಟ್ಟು ವೈದ್ಯ ಆತ್ಮಹತ್ಯೆ (Suicide) ಶರಣಾಗಿರುವ ಘಟನೆ ರೋಣ ತಾಲೂಕಿನ ಹಿರೇಹಾಳ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಡಾ. ಶಶಿಧರ ಹಟ್ಟಿ ಡೆತ್ ನೋಟ್ ಬರೆದಿಟ್ಟು ಮನೆಯಲ್ಲೇ ಲುಂಗಿಯಿಂದ ನೇಣಿಗೆ ಶರಣಾಗಿದ್ದಾರೆ. ಮರಳು ದಂಧೆಯಲ್ಲಿ ಪಾಲುದಾರಾಗಿದ್ದ ಶರಣಗೌಡ ಪಾಟೀಲ್ ಹಾಗೂ ತನ್ನ ನಡುವೆ ಉಂಟಾದ ಹಣಕಾಸಿನ ಒತ್ತಡಕ್ಕೆ ವೈದ್ಯ ಶಶಿಧರ ಬಲಿಯಾಗಿದ್ದಾರೆ. ಕಳೆದ ಮೂರು ತಿಂಗಳ ಹಿಂದೆ ರೋಣ ತಾಲೂಕಿನ ಹೊಳೆಮಣ್ಣೂರು ಬಳಿ ಮರಳಿನ ಪಾಯಿಂಟ್ ಮಾಡಿಕೊಂಡಿದ್ದರು. ಇದನ್ನೂ ಓದಿ: ನಿಖಿಲ್ ಮಂಡ್ಯ ಕಣದಿಂದ ಹಿಂದೆ ಸರಿದಿದ್ದೇಕೆ?
ಇದರಲ್ಲಿ ರಾಜು ಶಿರಗುಂಪಿ, ಅಶೋಕ ವಾಸವಿ ಶೆಟ್ಟರ್, ಗಜೇಂದ್ರಗಡ ತಾಲೂಕಿನ ಸರ್ಜಾಪೂರ ಗ್ರಾಮದ ಶರಣಗೌಡ ಎಲ್ ಪಾಟೀಲ ಹಾಗೂ ಇನ್ನೂ ಕೆಲವರ ಜೊತೆ ವೈದ್ಯ ಶಶಿಧರ ಮರಳು ವ್ಯವಹಾರ ಮಾಡುತ್ತಿದ್ದರು. ಆರೋಪಿ ಶರಣಗೌಡ ಪಾಟೀಲ, ವೈದ್ಯ ಶಶಿಧರಗೆ ನಿತ್ಯವೂ ಮರಳಿನ ವ್ಯವಹಾರದ ಲೆಕ್ಕ ಪತ್ರ, ಹಣ ಕೊಡುವಂತೆ ಒತ್ತಡ ಹಾಕುತ್ತಿದ್ದರು. ನಿತ್ಯ ಹಣ ಕೊಡಲೇಬೇಕು ಎಂದು ಮಾನಸಿಕ ಕಿರುಕುಳ ನೀಡುತ್ತಾ ಬಂದಿದ್ದರು ಎಂದು ಶಶಿಧರ್ ಹಟ್ಟಿ ಆರೋಪಿಸಿದ್ದಾರೆ. ಇದನ್ನೂ ಓದಿ: ಬೇಸಿಗೆಗೂ ಮುನ್ನವೇ ಕುಡಿಯೋ ನೀರಿಗೆ ಹಾಹಾಕಾರ – ವಾಟರ್ ಟ್ಯಾಂಕರ್ ಮಾಲೀಕರಿಂದ ದುಪ್ಪಟ್ಟು ದರ ಸುಲಿಗೆ!
ಡೆತ್ ನೋಟ್‌ನಲ್ಲಿ ಏನಿದೆ?
ಡೈರಿಯ ಮೊದಲ ಪುಟದಲ್ಲಿ ದನದಾಹಿ ಶರಣಗೌಡನಿಗೆ ಧಿಕ್ಕಾರ, ದನ ಪಿಶಾಚಿ ಶರಣಗೌಡನಿಗೆ ಬೋಮ್ಮಸಾಗರ ದುರ್ಗಮ್ಮನ ಶಾಪ ತಟ್ಟಲಿ. ಮೇಲೆ ಬಸಪ್ಪ ಒಳಗೆ ವಿಷಪ್ಪನಾದ ಶರಣಗೌಡನೇ ನನ್ನ ಸಾವಿಗೆ ಕಾರಣ ಎಂದು ಡೆತ್ ನೋಟ್ ಬರೆದು ಆರೋಪಿಸಿದ್ದಾರೆ. ಇದನ್ನೂ ಓದಿ: ಇಂದು ರೈತರಿಂದ ʻದೆಹಲಿ ಚಲೋʼ – ಗಡಿಯಲ್ಲಿ 5,000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಬೀಜಿಂಗ್: ಕಣ್ಣಿನ ವೈದ್ಯರೊಬ್ಬರು (Eye Doctor) ಶಸ್ತ್ರಚಿಕಿತ್ಸೆ ವೇಳೆ ವೃದ್ಧೆಯ ತಲೆಗೆ ಮೂರು ಬಾರಿ ಹೊಡೆದ ಘಟನೆ ಚೀನಾದಲ್ಲಿ (China) ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.
ಈ ಘಟನೆ 2019ರಲ್ಲಿ ನಡೆದಿದ್ದು, ಇದರ ವೀಡಿಯೋ ಸಾಕಷ್ಟು ವೈರಲ್ (Viral Video) ಆಗಿದೆ. ಈ ಸಂಬಂಧ ಆಸ್ಪತ್ರೆಯೂ ಕೂಡ ಸ್ಪಷ್ಟನೆಯ ಹೇಳಿಕೆ ಬಿಡುಗಡೆ ಮಾಡಿತ್ತು. ಸದ್ಯ ವೈದ್ಯನನ್ನೇ ಆಸ್ಪತ್ರೆಯಿಂದ ಅಮಾನತು ಮಾಡಲಾಗಿದೆ.
ನಡೆದಿದ್ದೇನು..?: 82 ವರ್ಷದ ವೃದ್ಧೆಯೊಬ್ಬರು ಕಣ್ಣಿನ ಶಸ್ತ್ರಚಿಕಿತ್ಸೆಗಾಗಿ (Eye Surgery) ಆಸ್ಪತ್ರೆಗೆ ಹೋದರು. ಈ ವೇಳೆ ವೈದ್ಯರು ವೃದ್ಧೆಗೆ ಅನಸ್ತೇಶಿಯಾ ನೀಡಿದ್ದಾರೆ. ಈ ವೇಳೆ ವೈದ್ಯರು ಭಾಷೆ ವೃದ್ಧೆಗೆ ಅರ್ಥವಾಗುತ್ತಿರಲಿಲ್ಲ. ವೃದ್ಧೆ ಸ್ಥಳೀಯ ಭಾಷೆ ಮಾತನಾಡುತ್ತಿದ್ದರಿಂದ ಆಕೆಗೆ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ವೈದ್ಯರ ಎಚ್ಚರಿಕೆಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ಪರಿಣಾಮ ತನ್ನ ಮಾತಿಗೆ ವೃದ್ಧೆ ಪ್ರತಿಕ್ರಿಯಿಸುತ್ತಿಲ್ಲ ಎಂದು ಸಿಟ್ಟುಗೊಂಡು ತಲೆಗೆ ಮೂರು ಬಾರಿ ಹೊಡೆದಿದ್ದಾರೆ.
ಈ ಘಟನೆ ತುಂಬಾ ಹಳೆಯದ್ದಾಗಿದ್ದು, ಅಂದರೆ 2019ರಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಈ ಘಟನೆಯ ಸಂಪೂರ್ಣ ವೀಡಿಯೋ ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವೀಡಿಯೋವನ್ನು ಆಸ್ಪತ್ರೆಯ ವೈದ್ಯರೊಬ್ಬರು ತಮ್ಮ ಸಾಮಾಜಿಕ ಜಾಲತಾಣದ ಖಾತೆಯೊಂದರಲ್ಲಿ ಹಂಚಿಕೊಂಡಿದ್ದರು. ಬಳಿಕ ಈ ವೀಡಿಯೋ ಸಾಕಷ್ಟು ವೈರಲ್ ಆಗಿತ್ತು, ಈಗಲೂ ವೈರಲ್ ಆಗುತ್ತಿದೆ.
ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ಆಸ್ಪತ್ರೆ ಕೂಡ ಸ್ಪಷ್ಟನೆ ನೀಡಿದೆ. ಶಸ್ತ್ರಚಿಕಿತ್ಸೆಗಾಗಿ ರೋಗಿಗೆ ಅನಸ್ತೇಶಿಯಾ ನೀಡಲಾಯಿತು. ಆದರೆ ವೃದ್ಧೆ ಅದನ್ನು ಸಹಿಸಿಕೊಳ್ಳಲು ತಯಾರಿರಲಿಲ್ಲ. ಇಷ್ಟು ಮಾತ್ರವಲ್ಲದೇ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ವೃದ್ಧೆ ತನ್ನ ತಲೆ ಮತ್ತು ಕಣ್ಣುಗುಡ್ಡೆಗಳನ್ನು ಚಲಿಸುತ್ತಲೇ ಇದ್ದಳು. ರೋಗಿಯು ಸ್ಥಳೀಯ ಉಪಭಾಷೆಯನ್ನು ಮಾತನಾಡುತ್ತಿದ್ದರಿಂದ ಮ್ಯಾಂಡರಿನ್‌ನಲ್ಲಿ ವೈದ್ಯರ ಎಚ್ಚರಿಕೆಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ತುರ್ತು ಪರಿಸ್ಥಿತಿಯಲ್ಲಿಯೂ ರೋಗಿಗೆ ವೈದ್ಯರು ಚಿಕಿತ್ಸೆ ನೀಡಿದರು ಎಂದು ಆಸ್ಪತ್ರೆ ಸ್ಪಷ್ಟನೆ ನೀಡಿದೆ.
ಆದರೂ ವೃದ್ಧೆಯ ಮೇಲೆ ವೈದ್ಯರು ತೋರಿದ ಅಮಾನವೀಯತೆಗೆ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶದ ಜೊತೆಗೆ ಖಂಡನೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯು ಸದ್ಯ ವೈದ್ಯನನ್ನು ಅಮಾನತು ಮಾಡಿದೆ. ಅಲ್ಲದೆ ವೃದ್ಧೆಯ ಕ್ಷಮೆಯಾಚಿಸಿ ಆಸ್ಪತ್ರೆಯು ಆಕೆಗೆ 5,800 ರೂ. ಪರಿಹಾರವನ್ನು ನೀಡಿತು. ಈ ನಡುವೆ ತನ್ನ ತಾಯಿಯ ಎಡಗಣ್ಣು ಕುರುಡಾಗಿದೆ ಎಂದು ವೃದ್ಧೆಯ ಮಗ ಗಂಭೀರ ಆರೋಪ ಮಾಡಿದ್ದಾನೆ. ಆದರೆ ಇದು ಇದೇ ಘಟನೆಯಿಂದಾಗಿ ಇದು ಸಂಭವಿಸಿದೆ ಎಂದು ಸೂಚಿಸುವ ಯಾವುದೇ ವೈದ್ಯಕೀಯ ವರದಿಗಳಿಲ್ಲ ಎಂದು ಆಸ್ಪತ್ರೆ ಹೇಳಿದೆ.
ತುಮಕೂರು: ಹೆರಿಗೆ ಮಾಡಿಸಲು ಲಂಚಕ್ಕೆ ಬೇಡಿಕೆಯಿಟ್ಟ ತುರುವೇಕೆರೆ (Turuvekere) ಸರ್ಕಾರಿ ಆಸ್ಪತ್ರೆಯ ವೈದ್ಯನನ್ನು (Doctor) ಲೋಕಾಯುಕ್ತ ಪೊಲೀಸರು (Lokayukta Police) ಬಂಧಿಸಿದ್ದಾರೆ.
ಡಾ.ಹರಿಪ್ರಸಾದ್ (44) ಎಂಬಾತ ಲೋಕಾಯುಕ್ತ ಬಲೆಗೆ ಬಿದ್ದ ವೈದ್ಯಾನಾಗಿದ್ದಾನೆ. ತುರುವೇಕೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಹರಿಪ್ರಸಾದ್ ಮಹಿಳೆಯೊಬ್ಬರಿಗೆ ಹೆರಿಗೆ ಮಾಡಿಸಲು 3 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ. ಈ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ಮಹಿಳೆ ಸಂಬಂಧಿಯೊಬ್ಬರು ದೂರು ನೀಡಿದ್ದರು. ಇದನ್ನೂ ಓದಿ: ಸಚಿವ ಪರಮೇಶ್ವರ್ ಭೇಟಿಯಾಗಿ ನಟ ಸುದೀಪ್ ಮಾತುಕತೆ
ಟಾಸ್ಕ್ ನಲ್ಲಿ ಗಾಯಗಳಾಗೋದು ಸಹಜ. ಎಷ್ಟೋ ಬಾರಿ ವಿಪರೀತ ಏಟು ಮಾಡಿಕೊಂಡು ಬಿಗ್ ಬಾಸ್ (Bigg Boss Kannada) ಮನೆಯಿಂದ ಆಚೆ ಬಂದವರು ಇದ್ದಾರೆ. ಈ ಸೀಸನ್ ನಲ್ಲಿ ತನಿಷಾ ಏಟು ಮಾಡಿಕೊಂಡು ಆಸ್ಪತ್ರೆ ಪಾಲಾಗಿದ್ದರು. ಹುಷಾರಾಗಿ ಮತ್ತೆ ಮನೆ ಪ್ರವೇಶ ಮಾಡಿದರು. ಮೊನ್ನೆ ಮೊನ್ನೆಯಷ್ಟೇ ಪ್ರತಾಪ್ ಮತ್ತು ಸಂಗೀತಾ ಕೂಡ ಕಣ್ಣಿಗೆ ಕೆಮಿಕಲ್ ನೀರು ಹಾಕಿಸಿಕೊಂಡು ಆಸ್ಪತ್ರೆ ಸೇರಿಕೊಂಡಿದ್ದರು. ನಿನ್ನೆ ನಡೆದ ಟಾಸ್ಕ್ ನಲ್ಲಿ ವಿನಯ್ ಮತ್ತು ಕಾರ್ತಿಕ್ ಇಬ್ಬರೂ ಗಾಯಗೊಂಡಿದ್ದಾರೆ. ಅದರಲ್ಲೂ ವಿನಯ್ ಬೆರಳಿಗೆ ಬಲವಾಗಿಯೇ ಏಟು ಬಿದ್ದಿದೆ.
ಟಾಸ್ಕ್ ನಲ್ಲಿ ವಿನಯ್ (Vinay) ಗೌಡ ಸಿಕ್ಕಾಪಟ್ಟೆ ಅಗ್ರೆಸಿವ್ ಆಗಿ ಆಡುತ್ತಾರೆ. ಅವರನ್ನು ಕಂಟ್ರೋಲ್ ಮಾಡೋದು ತುಂಬಾ ಕಷ್ಟ. ಕುಸ್ತಿ ಪಟುವಿನಂತೆ ಸದಾ ಮುಸಿಮುಸಿ ಅನ್ನುತ್ತಲೇ ಇರುತ್ತಾರೆ. ನಿನ್ನೆ ನಡೆದ ಕಲೆ ಒಳ್ಳೆಯದಲ್ಲ ಟಾಸ್ಕ್ ನಲ್ಲೂ ಅವರು ಸಖತ್ ಅಗ್ರೆಸಿವ್ ಆಗಿಯೇ ಆಟವಾಡಿದರು. ಪರಿಣಾಮ ಬೆರಳಿಗೆ ಏಟು ಮಾಡಿಕೊಂಡರು. ಅದಕ್ಕಾಗಿ ಅವರು ಆ ಟಾಸ್ಕ್ ನಿಂದಲೇ ಹೊರ ಬರಬೇಕಾಯಿತು. ಬೆರಳಿಗೆ ತೀವ್ರ ತರಹದ ಗಾಯವಾಗಿದ್ದರಿಂದ ಟಾಸ್ಕ್ ನಲ್ಲಿ ಭಾಗಿ ಆಗದಂತೆ ವೈದ್ಯರು ಸಲಹೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಟಾಸ್ಕ್ ನಲ್ಲಿ ಭಾಗಿಯಾಗಬೇಡಿ ಎಂದು ಬಿಗ್ ಬಾಸ್ ಕೂಡ ಅನೌನ್ಸ್ ಮಾಡಿದ್ದಾರೆ.
ಅಗ್ರೆಸಿವ್ ಕಾರಣದಿಂದಾಗಿಯೇ ಈ ಹಿಂದೆಯೂ ಆಟ ರದ್ದಾದ ಉದಾಹರಣೆ ಇದೆ. ಅದು ವಿನಯ್ ಕಾರಣದಿಂದಾಗಿಯೇ ಟಾಸ್ಕ್ ರದ್ದಾಗಿದೆ. ಹಾಗಾಗಿ ವಿನಯ್ ಆಡುವಾಗ ಪದೇ ಪದೇ ತುಕಾಲಿ ಸಂತು, ಅದನ್ನು ನೆನಪಿಸುತ್ತಲೇ ಇದ್ದರು. ತುಕಾಲಿ ಏನೇ ಹೇಳಿದರೂ, ಅವರ ಮಾತನ್ನು ಕೇಳಲಿಲ್ಲ ವಿನಯ್. ಹಾಗಾಗಿ ಬೆರಳಿಗೆ ಏಟು ಮಾಡಿಕೊಳ್ಳುವಂತಹ ಪ್ರಸಂಗ ಎದುರಾಯಿತು. ಅದರಲ್ಲೂ ವಿನಯ್, ಕಾರ್ತಿಕ್ ಮತ್ತು ಅವಿನಾಶ್ ಶೆಟ್ಟಿ ನಡುವಿನ ಗಲಾಟೆ ತಾರಕಕ್ಕೇರಿತ್ತು. ಮೂವರು ಪರಸ್ಪರ ಕಿತ್ತಾಡಿಕೊಂಡ ಪರಿಣಾಮ ಕಾರ್ತಿಕ್ ಅವರಿಗೆ ಬೆನ್ನಿಗೆ ಏಟಾಗಿದೆ. ಅವರು ಕೂಡ ಆರೈಕೆಯಲ್ಲಿದ್ದಾರೆ.
ಟಾಸ್ಕ್ ಗೆಲ್ಲಲು ಹೋರಾಡೋದು ಸಹಜ. ಆದರೆ, ಅದನ್ನು ಜಟ್ಟಿಗಳಂತೆ ಕಿತ್ತಾಡುವುದು ಸರಿಯಾದ ಕ್ರಮವಲ್ಲ. ವಿನಯ್ ವಿಷಯದಲ್ಲಿ ಟಾಸ್ಕ್ ಅಂದರೆ, ಅದೊಂದು ಕುಸ್ತಿ ಪಂದ್ಯವೇ. ಜಗಳಕ್ಕೆ ಅವರು ಯಾವತ್ತಿಗೂ ಮುಂದು. ಒಟ್ಟಾರೆ ಪರಿಣಾಮ ಗಾಯ ಮಾಡಿಕೊಳ್ಳೋದು. ವಿನಯ್ ಗಾಯ ಮಾಡಿಕೊಂಡಿದ್ದಾರೆ. ಟಾಸ್ಕ್ ನಲ್ಲಿ ಭಾಗಿ ಆಗಬಾರದು ಎಂದು ವೈದ್ಯರು (Doctor) ಸಲಹೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ವಿನಯ್, ಹೇಗೆ ಇರಲಿದ್ದಾರೆ ಎನ್ನುವ ಕುತೂಹಲ ಎಲ್ಲರದ್ದು.
ಯಾದಗಿರಿ: ವೈದ್ಯರ (Doctor) ನಡುವೆ ಜಗಳ ನಡೆದು ಕಳೆದ ಒಂದು ವಾರದಿಂದ ಪ್ರಸೂತಿ ತಜ್ಞೆ ರಜೆ ಹಾಕಿ ಹೋಗಿದ್ದು, ಗರ್ಭಿಣಿಯರು ಸಮಸ್ಯೆ ಎದುರಿಸುತ್ತಿರುವ ಘಟನೆ ಶಹಾಪುರ (Shahapur) ತಾಲೂಕು ಆಸ್ಪತ್ರೆಯಲ್ಲಿ (Hospital) ನಡೆದಿದೆ.
ಹತ್ತಾರು ಹಳ್ಳಿಗಳ ಜನರ ಪಾಲಿಗೆ ಈ ಆಸ್ಪತ್ರೆಯೇ ಸಂಜೀವಿನಿಯಾಗಿದ್ದು, ವೈದ್ಯರ ಕೊರತೆಯಿಂದ ರೋಗಿಗಳು ನಿತ್ಯವೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ವೈದ್ಯರು ಇಲ್ಲದ ಕಾರಣ ರೋಗಿಗಳು ಬಂದ ದಾರಿಗೆ ಸುಂಕ ಇಲ್ಲ ಎಂಬಂತೆ ವಾಪಸ್ ಹೋಗುತ್ತಿದ್ದಾರೆ. ಇತ್ತೀಚೆಗೆ ವೈದ್ಯರ ನಡುವೆ ಗಲಾಟೆ ಆಗಿದ್ದು, ಇದೇ ವಿಚಾರಕ್ಕೆ ಪ್ರಸೂತಿ ತಜ್ಞ ವೈದ್ಯೆ ಕಳೆದ ಒಂದು ವಾರದಿಂದ ರಜೆ ಹಾಕಿಕೊಂಡು ಹೋಗಿದ್ದಾರೆ ಎಂಬ ಆರೋಪ ಸಹ ಕೇಳಿ ಬಂದಿದೆ. ಇದನ್ನೂ ಓದಿ: ಇಲ್ಲಿಯವರೆಗೆ ಸಿಕ್ಕಿರಲಿಲ್ಲ, ಮೋದಿಗೆ ಖರ್ಗೆ ಮ್ಯಾಚ್ ಆಗಬಲ್ಲ ನಾಯಕ – ಸತೀಶ್ ಜಾರಕಿಹೊಳಿ
ಪ್ರಸೂತಿ ತಜ್ಞೆ ಡಾ.ಸರೋಜಾ ಪಾಟೀಲ್ ಮತ್ತು ಇಲ್ಲಿನ ಕೆಲವು ವೈದ್ಯರ ನಡುವೆ ಹೊಂದಾಣಿಕೆಯ ಕೊರತೆಯಿದೆ ಎಂದು ಹೇಳಲಾಗುತ್ತಿದೆ. ಇದೇ ಕಾರಣಕ್ಕೆ ವೈದ್ಯೆ ರಜೆಯ ಮೇಲೆ ತೆರಳಿದ್ದಾರೆ. ಇದರಿಂದ ಹೆರಿಗೆ ಕೆಲಸವನ್ನ ನರ್ಸ್‍ಗಳಿಗೆ ನೀಡಲಾಗಿದ್ದು, ಸಾಮಾನ್ಯ ಹೆರಿಗೆಗಳನ್ನು ನರ್ಸ್‍ಗಳೆ ಮಾಡುತ್ತಾರೆ. ಸಿಜೇರಿಯನ್ ಕೇಸ್‍ಗಳು ಬಂದಾಗ ನರ್ಸ್‍ಗಳ ಕೈಯಿಂದ ಆಗುವುದಿಲ್ಲ. ಇದರಿಂದ ಯಾದಗಿರಿ ಜಿಲ್ಲಾಸ್ಪತ್ರೆಗೆ ವೈದ್ಯರು ಗರ್ಭಿಣಿಯರನ್ನು ಕಳಿಸುತ್ತಿದ್ದಾರೆ.
ಆಸ್ಪತ್ರೆಗೆ ಕಳೆದ ಒಂದು ವಾರದಲ್ಲೇ ಸುಮಾರು 90 ಕ್ಕೂ ಅಧಿಕ ಗರ್ಭಿಣಿಯರು ಹೆರಿಗೆಗಾಗಿ ಬಂದಿದ್ದಾರೆ. ಇದರಲ್ಲಿ 60 ಜನರಿಗೆ ನಾರ್ಮಲ್ ಹೆರಿಗೆಯಾಗಿದ್ದು, 13 ಮಹಿಳೆಯರಿಗೆ ಸಿಜೇರಿಯನ್‍ಗಾಗಿ ಯಾದಗಿರಿ ಜಿಲ್ಲಾಸ್ಪತ್ರೆಗೆ ಕಳಿಸಲಾಗಿದೆ. ಈ ಬಗ್ಗೆ ಜಿಲ್ಲಾ ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ ಅವರ ಸ್ವಕ್ಷೇತ್ರದಲ್ಲೇ ಈ ಪರಿಸ್ಥಿತಿ ಉಂಟಾಗಿದ್ದು, ಅಲ್ಲಿನ ಜನ ಹೆಚ್ಚಿನ ವೈದ್ಯರನ್ನು ನೇಮಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಅಮಿತ್ ಶಾ ಭೇಟಿಯಾದ ಸಿಎಂ – ಬರ ಪರಿಹಾರ ಬಿಡುಗಡೆಗೆ ಆಗ್ರಹ
ತಿರುವನಂತಪುರಂ: ಕೇರಳದ (Kerala) ವೈದ್ಯೆಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದು, ವರದಕ್ಷಿಣೆಗೆಬೇಡಿಕೆ ಇಟ್ಟದ್ದೇ ಇದಕ್ಕೆ ಕಾರಣ ಎಂಬ ಆರೋಪ ಕೇಳಿ ಬಂದಿದೆ.
ಮೃತಳನ್ನು ಶಹನಾ (26) ಎಂದು ಗುರುತಿಸಲಾಗಿದೆ. ಇದೀಗ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ (Veena George) ಅವರು ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸೂಚಿಸಿದ್ದಾರೆ.
ತಿರುವನಂತಪುರಂ ಮೆಡಿಕಲ್ ಕಾಲೇಜಿನ ಸರ್ಜರಿ ವಿಭಾಗದ ಪಿಜಿ ವಿದ್ಯಾರ್ಥಿನಿ ಶಹಾನಾ (Shahana) ಮಂಗಳವಾರ ಬೆಳಗ್ಗೆ ಸಂಸ್ಥೆಯ ಬಳಿಯ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸ್ನೇಹಿತ ಮದುವೆಯ ಪ್ರಸ್ತಾಪದಿಂದ ಹಿಂದೆ ಸರಿದ ನಂತರ ಶಹನಾ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಆಕೆಯ ಸಂಬಂಧಿಕರು ಆರೋಪಿಸಿದ್ದಾರೆ.
ಗೆಳೆಯನ ಕುಟುಂಬವು ಚಿನ್ನ, ಜಮೀನು ಹಾಗೂ ಬಿಎಂಡಬ್ಲ್ಯು ಕಾರಿನ ರೂಪದಲ್ಲಿ ವರದಕ್ಷಿಣೆ ನೀಡುವಂತೆ ಬೇಡಿಕೆ ಇಟ್ಟಿತ್ತು. ಆದರೆ ಈ ಬೇಡಿಕೆಗಳನ್ನು ಈಡೇರಿಸಲು ಶಹಾನಾ ಕುಟುಂಬಕ್ಕೆ ಸಾಧ್ಯವಾಗಲಿಲ್ಲ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಪಿಜಿ ವೈದ್ಯರ ಸಂಘದ ಪ್ರತಿನಿಧಿಯೂ ಆಗಿದ್ದ ವೈದ್ಯ ಈಕೆಯ ಜೊತೆಗಿನ ಸಂಬಂಧವನ್ನು ಕೊನೆಗೊಳಿಸಿದ್ದಾನೆ.
ಸದ್ಯ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆ ಸಂಬಂಧ ಕೇರಳ ಮಹಿಳಾ ಆಯೋಗದ ಅಧ್ಯಕ್ಷೆ ಅಡ್ವೊಕೇಟ್ ಸತಿದೇವಿಯವರು ಶಹಾನಾ ಮನೆಗೆ ತೆರಳಿ ತಾಯಿಯನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ತಾಯಿ ಒತ್ತಾಯಿಸಿದ್ದಾರೆ.
ವೈದ್ಯನ ಮನೆಯವರು ವರದಕ್ಷಿಣೆಗೆ (Dowry) ಬೇಡಿಕೆ ಇಟ್ಟರೆ ಅವರ ವಿರುದ್ಧ ವರದಕ್ಷಿಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಸತಿದೇವಿ ತಿಳಿಸಿದ್ದಾರೆ. ಇತ್ತ ವೈದ್ಯಕೀಯ ಪಿಜಿ ವೈದ್ಯರ ಸಂಘವು ಆರೋಪಿ ವೈದ್ಯನನ್ನು ತಮ್ಮ ಸಂಘಟನೆಯ ಎಲ್ಲಾ ಜವಾಬ್ದಾರಿಗಳಿಂದ ತೆಗೆದುಹಾಕಿದೆ.
ಲಕ್ನೋ: ವೈದ್ಯನೊಬ್ಬ (Doctor) ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ತಾನು ಕೂಡಾ ಆತ್ಮಹತ್ಯೆಗೆ (Suicide) ಶರಣಾಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ (Uttar Pradesh) ರಾಯ್‌ಬರೇಲಿಯಲ್ಲಿ (Rae Bareli) ನಡೆದಿದೆ.
ಮಂಗಳವಾರ ತಡರಾತ್ರಿ ಈ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವೈದ್ಯನನ್ನು ಅರುಣ್ ಕುಮಾರ್ ಸಿಂಗ್ (45) ಎಂದು ಗುರುತಿಸಲಾಗಿದೆ. ಮಾಡರ್ನ್ ರೈಲ್ ಕೋಚ್ ಫ್ಯಾಕ್ಟರಿ ಆಸ್ಪತ್ರೆಯ ನೇತ್ರ ತಜ್ಞನಾಗಿದ್ದ ಸಿಂಗ್‌ಗೆ ತನ್ನ ಕುಟುಂಬದವರು ಹಾಗೂ ಸಹೋದ್ಯೋಗಿಗಳು ಕರೆ ಮಾಡಿದ್ದರು. ಕರೆಯನ್ನು ಸ್ವೀಕರಿಸದೇ ಹೋದಾಗ ಆಸ್ಪತ್ರೆಯ ಸಂಕೀರ್ಣದ ಒಳಗೆಯೇ ಇರುವ ಮನೆಯನ್ನು ಪರಿಶೀಲಿಸಿದ್ದಾರೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ.
ಮನೆಯ ಬಾಗಿಲನ್ನು ತೆರೆದಾಗ ಅರುಣ್ ಪತ್ನಿ ಅರ್ಚನಾ (40) ಮಕ್ಕಳಾದ ಅರಿಬಾ (12) ಹಾಗೂ ಆರವ್ (4) ಶವವಾಗಿ ಪತ್ತೆಯಾಗಿದ್ದಾರೆ. ಸಿಂಗ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಸಿಂಗ್ ಮಕ್ಕಳಿಗೆ ಚುಚ್ಚು ಮದ್ದು ನೀಡಿ, ಅವರನ್ನು ಪ್ರಜ್ಞಾಹೀನರನ್ನಾಗಿ ಮಾಡಿ ಬಳಿಕ ಕೊಂದಿದ್ದಾನೆ. ಅವರಿಬ್ಬರ ತಲೆಯಲ್ಲಿ ಬಲವಾಗಿ ಹೊಡೆದಿರುವ ಗಾಯಗಳಾಗಿವೆ. ನಂತರ ಆತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ಮೇಲ್ನೋಟಕ್ಕೆ ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಚಂಡಮಾರುತಕ್ಕೆ ಬಾಲಿವುಡ್ ನಟ ಆಮೀರ್ ಸಿಲುಕಿದ್ದು ಹೇಗೆ?
ವೈದ್ಯ ಖಿನ್ನತೆಯಿಂದ ಬಳಲುತ್ತಿದ್ದು, ಈ ಹಿನ್ನೆಲೆ ತನ್ನ ಪತ್ನಿ, ಮಕ್ಕಳನ್ನು ಕೊಂದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದ್ದಾಗಿ ಹೇಳಿದ್ದಾರೆ. ಸಿಂಗ್‌ನ ನೆರೆಹೊರೆಯವರ ಪ್ರಕಾರ ಆತನ ಕುಟುಂಬದವರು 2 ದಿನಗಳ ಹಿಂದೆ ಭಾನುವಾರ ಕೊನೆಯದಾಗಿ ಕಾಣಿಸಿಕೊಂಡಿದ್ದರು ಎಂದು ತಿಳಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿಯ 10 ಸಂಸದರಿಂದ ಸಂಸತ್ ಸ್ಥಾನಕ್ಕೆ ರಾಜೀನಾಮೆ