Tag: doctorate

  • ಗೌರವ ಡಾಕ್ಟರೇಟ್ ಪದವಿಯನ್ನು ನಿರಾಕರಿಸಿದ ಸಿಎಂ

    ಗೌರವ ಡಾಕ್ಟರೇಟ್ ಪದವಿಯನ್ನು ನಿರಾಕರಿಸಿದ ಸಿಎಂ

    ಬೆಂಗಳೂರು: ಮೈಸೂರು ವಿಶ್ವಿದ್ಯಾಲಯದಿಂದ ಗೌರವ ಡಾಕ್ಟರೇಟ್ ನೀಡಬೇಕೆಂಬ ಶಿಫಾರಸ್ಸನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸಿದ್ದಾರೆ.

    ಸಿಎಂ ಸಿದ್ದರಾಮಯ್ಯಗೆ ಮೈಸೂರು ವಿಶ್ವ ವಿದ್ಯಾಲಯ ಗೌರವ ಡಾಕ್ಟರೇಟ್ ನೀಡುವ ಪ್ರಸ್ತಾಪವನ್ನ ಸಿದ್ದರಾಮಯ್ಯ ಅವರು ತಿರಸ್ಕರಿಸಿದ್ದಾರೆ ಎಂದು ಕಚೇರಿ ಮೂಲಗಳು ತಿಳಿಸಿವೆ.

    2018ನೇ ಸಾಲಿನ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಸಿದ್ದರಾಮಯ್ಯ ಅವರಿಗೆ ಗೌರವ ಡಾಕ್ಟರೇಟ್ ನೀಡುವಂತೆ ವಿವಿಯ ಸಿಂಡಿಕೇಟ್ ಸದಸ್ಯ ಎಂಎಸ್‍ಎಸ್ ಕುಮಾರ್ ಅವರು ವಿವಿ ಕುಲಪತಿಗೆ ಮನವಿ ಮಾಡಿದ್ದರು.

    ಸಮಾಜದಲ್ಲಿ ಗಣ್ಯವ್ಯಕ್ತಿಗಳಿಗೆ ನೀಡುವ ಗೌರವ ಡಾಕ್ಟರೇಟ್ ಪದವಿಗೆ ಸಿದ್ದರಾಮಯ್ಯ ಅವರು ಅರ್ಹರಿದ್ದಾರೆ. ಅವರು ಇದೇ ವಿವಿಯಲ್ಲಿ ಪದವಿ ಕೂಡ ಪಡೆದಿದ್ದಾರೆ. ಮೈಸೂರಿನಿಂದ ಹೋಗಿ ರಾಜ್ಯದ ಚುಕ್ಕಾಣಿ ಹಿಡಿದು ಉತ್ತಮ ಆಡಳಿತ ನಡೆಸಿದ್ದಾರೆ. ಇಂಥವರಿಗೆ ಡಾಕ್ಟರೇಟ್ ನೀಡಿದರೆ ಮೈಸೂರು ವಿವಿಯ ಘನತೆ ಹೆಚ್ಚಲಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯನವರಿಗೆ ಈ ಸಾಲಿನ ಗೌರವ ಡಾಕ್ಟರೇಟ್ ನೀಡುವಂತೆ ಶಿಫಾರಸ್ಸು ಮಾಡುತ್ತಿದ್ದೇನೆ ಎಂದು ಸಿಂಡಿಕೇಟ್ ಸದಸ್ಯ ಕುಮಾರ್ ಪತ್ರದಲ್ಲಿ ವಿವರಿಸಿದ್ದರು.

    ಇದರ ಜೊತೆಗೆ ಇತರೆ ಸಿಂಡಿಕೇಟ್ ಸದಸ್ಯರು ಸುತ್ತೂರು ಶ್ರೀ, ಸಾಲು ಮರದ ತಿಮ್ಮಕ್ಕ, ಇಸ್ರೋ ಅಧ್ಯಕ್ಷ ಕಿರಣ್‍ಕುಮಾರ್ ಅವರಿಗೆ ಕೂಡ ಗೌರವ ಡಾಕ್ಟರೇಟ್ ನೀಡುವಂತೆ ಶಿಫಾರಸ್ಸು ಮಾಡಿದ್ದರು.

  • ಮೈಸೂರು ವಿವಿಯಿಂದ ಸಿಎಂ ಗೆ ಗೌರವ ಡಾಕ್ಟರೇಟ್ ನೀಡುವಂತೆ ಶಿಫಾರಸ್ಸು

    ಮೈಸೂರು ವಿವಿಯಿಂದ ಸಿಎಂ ಗೆ ಗೌರವ ಡಾಕ್ಟರೇಟ್ ನೀಡುವಂತೆ ಶಿಫಾರಸ್ಸು

    ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ನೀಡುವಂತೆ ವಿವಿಯ ಸಿಂಡಿಕೇಟ್ ಸದಸ್ಯರೊಬ್ಬರು ಶಿಫಾರಸ್ಸು ಮಾಡಿದ್ದಾರೆ.

    ವಿವಿಯ ಸಿಂಡಿಕೇಟ್ ಸದಸ್ಯ ಎಂಎಸ್‍ಎಸ್ ಕುಮಾರ್ ಎಂಬವರು ಮೈಸೂರು ವಿವಿಯ ಕುಲಪತಿಗಳಿಗೆ ಈ ಕುರಿತು ಪತ್ರ ಬರೆದಿದ್ದಾರೆ. 2018ನೇ ಸಾಲಿನ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಸಿದ್ದರಾಮಯ್ಯ ಅವರಿಗೆ ಗೌರವ ಡಾಕ್ಟರೇಟ್ ನೀಡುವಂತೆ ಸಿಂಡಿಕೇಟ್ ಸದಸ್ಯ ಮನವಿ ಮಾಡಿದ್ದಾರೆ.

    ಸಮಾಜದಲ್ಲಿ ಗಣ್ಯವ್ಯಕ್ತಿಗಳಿಗೆ ನೀಡುವ ಗೌರವ ಡಾಕ್ಟರೇಟ್ ಪದವಿಗೆ ಸಿದ್ದರಾಮಯ್ಯ ಅವರು ಅರ್ಹರಿದ್ದಾರೆ. ಅವರು ಇದೇ ವಿವಿಯಲ್ಲಿ ಪದವಿ ಕೂಡ ಪಡೆದಿದ್ದಾರೆ. ಮೈಸೂರಿನಿಂದ ಹೋಗಿ ರಾಜ್ಯದ ಚುಕ್ಕಾಣಿ ಹಿಡಿದು ಉತ್ತಮ ಆಡಳಿತ ನಡೆಸಿದ್ದಾರೆ. ಇಂಥವರಿಗೆ ಡಾಕ್ಟರೇಟ್ ನೀಡಿದರೆ ಮೈಸೂರು ವಿವಿಯ ಘನತೆ ಹೆಚ್ಚಲಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯನವರಿಗೆ ಈ ಸಾಲಿನ ಗೌರವ ಡಾಕ್ಟರೇಟ್‍ನೀಡುವಂತೆ ಶಿಫಾರಸ್ಸು ಮಾಡುತ್ತಿದ್ದೇನೆ ಎಂದು ಸಿಂಡಿಕೇಟ್ ಸದಸ್ಯ ಕುಮಾರ್ ಪತ್ರದಲ್ಲಿ ವಿವರಿಸಿದ್ದಾರೆ.

    ಇದರ ಜೊತೆಗೆ ಇತರೆ ಸಿಂಡಿಕೇಟ್ ಸದಸ್ಯರು ಸುತ್ತೂರು ಶ್ರೀ, ಸಾಲು ಮರದ ತಿಮ್ಮಕ್ಕ, ಇಸ್ರೋ ಅಧ್ಯಕ್ಷ ಕಿರಣ್‍ಕುಮಾರ್ ಅವರಿಗೆ ಕೂಡ ಗೌರವ ಡಾಕ್ಟರೇಟ್ ನೀಡುವಂತೆ ಶಿಫಾರಸ್ಸು ಮಾಡಿದ್ದಾರೆ.

  • ಸಚಿವ ಮಹದೇವಪ್ಪ ಪುತ್ರ ಈಗ ಆಗಿದ್ದಾರೆ ಡಾ. ಸುನೀಲ್‍ಬೋಸ್!

    ಸಚಿವ ಮಹದೇವಪ್ಪ ಪುತ್ರ ಈಗ ಆಗಿದ್ದಾರೆ ಡಾ. ಸುನೀಲ್‍ಬೋಸ್!

    ಮೈಸೂರು: ಲೋಕೋಪಯೋಗಿ ಸಚಿವ ಡಾ.ಹೆಚ್‍ಸಿ ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಅವರಿಗೆ ಡಾಕ್ಟರೇಟ್ ಪದವಿ ಪಡೆದಿದ್ದಾರಾ..? ಅವರು ಇನ್ಮುಂದೆ ಬರೀ ಸುನೀಲ್ ಬೋಸ್ ಅಲ್ಲ ಡಾ.ಸುನೀಲ್ ಬೋಸ್ ಎನ್ನುವಂತಾಗಿದೆ.

    ಇದೇನಪ್ಪಾ ಸುನೀಲ್ ಬೋಸ್ ಯಾವಾಗ ಡಾಕ್ಟರೇಟ್ ಪಡೆದರು? ಯಾವ ವಿಚಾರದಲ್ಲಿ ಸಂಶೋಧನೆ ನಡೆಸಿ ಪ್ರಬಂಧ ಮಂಡಿಸಿದ್ರು? ಅಥವಾ ಅವರ ಉತ್ತಮ ಸೇವೆ ಗುರುತಿಸಿ ಯಾವುದಾದರೂ ವಿಶ್ವವಿದ್ಯಾನಿಲಯ ಅವರಿಗೆ ಗೌರವ ಡಾಕ್ಟರೇಟ್ ಕೊಟ್ಟು ಬಿಡ್ತಾ ಅಂತಾ ನೀವು ಪ್ರಶ್ನೆ ಕೇಳಿದರೆ ನಮ್ಮ ಬಳಿಯೂ ಉತ್ತರ ಇಲ್ಲ.

    ಈ ಪ್ರಶ್ನೆಗೆ ಉತ್ತರ ಗೊತ್ತಿರುವುದು ಮೈಸೂರು ಜಿಲ್ಲೆಯ ಛಲವಾದಿ ಮಹಾ ಸಭಾ ಸಂಘಟನೆಗೆ ಮಾತ್ರ. ಏಕೆಂದರೆ ಆ ಸಂಘಟನೆಯೇ ತನ್ನ ಪೋಸ್ಟರ್ ಹಾಕಿ ಡಾ.ಸುನೀಲ್ ಬೋಸ್ ಅವರಿಗೆ ಶುಭಾಶಯ ಕೋರಿದೆ. ಟಿ. ನರಸೀಪುರದಲ್ಲಿ ಬಹುತೇಕ ಫ್ಲೆಕ್ಸ್, ಪೋಸ್ಟರ್ ಗಳಲ್ಲಿ ಡಾ.ಸುನಿಲ್ ಬೋಸ್ ಎಂದೇ ಬರೆಯಲಾಗಿದೆ.

    ಛಲವಾದಿ ಮಹಾಸಭಾದ ಸಂಘಟಕರು ಡಾಕ್ಟರೇಟ್ ಕೊಡುವ ಮೂಲಕ ಫ್ಲೆಕ್ಸ್ ಗಳಲ್ಲಿ ಸುನಿಲ್ ಬೋಸ್ ಅವರನ್ನು ಹೊಗಳಿ ತಮ್ಮ ನಾಯಕನ ಮೇಲಿನ ಪ್ರೀತಿ ಪ್ರದರ್ಶಿಸಿದ್ದಾರೆ. ಸಮಾಜಕ್ಕೆ ಉತ್ತಮ ಸೇವೆ ಹಾಗೂ ಕೊಡುಗೆಗಳನ್ನ ನೀಡುವ ವ್ಯಕ್ತಿಗಳಿಗೆ ಗೌರವ ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಲಾಗುತ್ತೆ. ಆದರೆ ಇತ್ತೀಚೆಗಷ್ಟೆ ರಾಜಕೀಯದಲ್ಲಿ ಗುರುತಿಸಿಕೊಂಡಿರುವ ಸುನಿಲ್ ಬೋಸ್ ಅವರಿಗೆ ಈ ರೀತಿ ಡಾಕ್ಟರೇಟ್ ಸೇರಿಸಿದ್ದು ಎಷ್ಟು ಸಮಂಜಸ ಎನ್ನುವ ಪ್ರಶ್ನೆ ಟಿ.ನರಸೀಪುರದ ಜನರಲ್ಲಿ ಮೂಡಿದೆ.

  • ಗೌರವ ಡಾಕ್ಟರೇಟನ್ನು ಸಿದ್ಧಗಂಗಾ ಕಿರಿಯ ಶ್ರೀ ನಿರಾಕರಿಸಿದ್ದು ಯಾಕೆ?

    ಗೌರವ ಡಾಕ್ಟರೇಟನ್ನು ಸಿದ್ಧಗಂಗಾ ಕಿರಿಯ ಶ್ರೀ ನಿರಾಕರಿಸಿದ್ದು ಯಾಕೆ?

    ತುಮಕೂರು: ಇಲ್ಲಿನ ವಿಶ್ವ ವಿದ್ಯಾಲಯದ ಗೌರವ ಡಾಕ್ಟರೇಟ್ ಅನ್ನು ಸಿದ್ಧಗಂಗಾ ಮಠದ ಕಿರಿಯ ಶ್ರೀಗಳಾದ ಸಿದ್ಧಲಿಂಗ ಸ್ವಾಮೀಜಿ ನಿರಾಕರಿಸಿದ್ದಾರೆ.

    ವಿವಿಯ 10 ನೇ ಘಟಿಕೋತ್ಸವದ ಅಂಗವಾಗಿ ಇಬ್ಬರಿಗೆ ಡಾಕ್ಟರೇಟ್ ಪ್ರಧಾನ ಮಾಡಲು ವಿವಿ ಸಿಂಡಿಕೇಟ್ ನಿರ್ಧರಿಸಿತ್ತು. ಪವಾಡ ರಹಸ್ಯ ಬಯಲು ಖ್ಯಾತಿಯ ಹುಲಿಕಲ್ ನಟರಾಜ್ ಮತ್ತು ಧಾರ್ಮಿಕ ಕ್ಷೇತ್ರದಿಂದ ಸಿದ್ಧಲಿಂಗ ಸ್ವಾಮೀಜಿ ಅವರನ್ನು ಆಯ್ಕೆ ಮಾಡಲಾಗಿತ್ತು.

    ಈ ಇಬ್ಬರಿಗೆ ಡಾಕ್ಟರೇಟ್ ನೀಡಲು ರಾಜ್ಯಪಾಲ ವಿಆರ್ ವಾಲಾ ಅನುಮೋದನೆ ಕೂಡಾ ಮಾಡಿದ್ದರು. ಆದರೆ ಧಾರ್ಮಿಕ ಕ್ಷೇತ್ರದಲ್ಲಿ ಸಾಧಿಸುವುದು ಇನ್ನೂ ಬಹಳಷ್ಟಿದೆ ಎಂಬ ಕಾರಣ ನೀಡಿ, ಸಿದ್ಧಲಿಂಗ ಸ್ವಾಮೀಜಿ ಡಾಕ್ಟರೇಟ್ ಪಡೆಯದಿರಲು ನಿರ್ಧರಿಸಿದ್ದಾರೆ.

    ಇತ್ತೀಚೆಗೆ ಟೀಂ ಇಂಡಿಯಾದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ಕ್ರಿಕೆಟ್ ಸಾಧನೆಯನ್ನು ಗುರುತಿಸಿ ಬೆಂಗಳೂರು ವಿವಿ ಗೌರವ ಡಾಕ್ಟರೇಟ್ ನೀಡಲು ಮುಂದಾಗಿತ್ತು. ಆದರೆ ದ್ರಾವಿಡ್, ಕ್ರಿಕೆಟ್ ಆಡಿದ್ದಕ್ಕೆ ಡಾಕ್ಟರೇಟ್ ಪದವಿ ನೀಡುವುದು ಬೇಡ. ಕ್ರಿಕೆಟ್‍ಗೆ ಸಂಬಂಧಪಟ್ಟಂತೆ ಶೈಕ್ಷಣಿಕ ಪ್ರಬಂಧ ಮಂಡಿಸಿ ನಾನು ಡಾಕ್ಟರೇಟ್ ಪದವಿಯನ್ನು ಪಡೆಯುತ್ತೇನೆ ಎಂದು ವಿವಿಗೆ ತಿಳಿಸಿ ಗೌರವ ಡಾಕ್ಟರೇಟ್ ನಿರಾಕಸಿದ್ದರು.