Tag: doctors protest

  • Fifth And Final Call | ಮಾತುಕತೆಗಾಗಿ ಪ್ರತಿಭಟನಾನಿರತ ವೈದ್ಯರಿಗೆ ಅಂತಿಮ ಆಹ್ವಾನ ಕೊಟ್ಟ ದೀದಿ

    Fifth And Final Call | ಮಾತುಕತೆಗಾಗಿ ಪ್ರತಿಭಟನಾನಿರತ ವೈದ್ಯರಿಗೆ ಅಂತಿಮ ಆಹ್ವಾನ ಕೊಟ್ಟ ದೀದಿ

    ಕೋಲ್ಕತ್ತಾ: ಆರ್‌.ಜಿ ಕರ್‌ ವೈದ್ಯಕೀಯ ಕಾಲೇಜು (RG Kar Medical College) ಮತ್ತು ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿರುವ ಕಿರಿಯ ವೈದ್ಯರೊಂದಿಗೆ ಮಾತುಕತೆಗಾಗಿ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ಸರ್ಕಾರ 5ನೇ ಹಾಗೂ ಕೊನೇ ಬಾರಿ ಆಹ್ವಾನ ನೀಡಿದೆ.

    ಕಳೆದ ಕೆಲ ದಿನಗಳಿಂದ ಟ್ರೈನಿ ವೈದ್ಯೆ ʻಹತ್ಯಾʼಚಾರ ಪ್ರಕರಣ ಖಂಡಿಸಿ ಕಿರಿಯ ವೈದ್ಯರು ಪ್ರತಿಭಟನೆಯಲ್ಲಿ (Doctors Protest) ತೊಡಗಿದ್ದಾರೆ. ಪ್ರಕರಣದಲ್ಲಿ ನ್ಯಾಯ ಸಿಗುವವರೆಗೆ ಮತ್ತು ಕಿರುಕುಳ ನೀಡುತ್ತಿರುವ ಕೆಲ ಉನ್ನತಾಧಿಕಾರಿಗಳನ್ನ ಕಿತ್ತೊಗೆಯುವವರೆಗೆ ಸೇವೆಗೆ ಸೇರಲು ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಕಾಲಿಘಾಟ್ ನಿವಾಸದಲ್ಲಿ ಸೋಮವಾರ (ಸೆ.16) ಸಂಜೆ 5 ಗಂಟೆಗೆ ವೇಳೆಗೆ ಸಭೆಗೆ ಪತ್ರದ ಮೂಲಕ ಆಹ್ವಾನ ನೀಡಲಾಗಿದೆ.

    ಇದು 5ನೇ ಮತ್ತು ಕೊನೇ ಬಾರಿಗೆ ಸಿಎಂ ನಿಮ್ಮನ್ನು ಆಹ್ವಾನಿಸಿದ್ದಾರೆ. ವೈದ್ಯರು ಈಗ ಸಾಮಾನ್ಯ ಸಭೆ ನಡೆಸುತ್ತಿದ್ದಾರೆ. ನಂತರ ಕಿರಿಯ ವೈದ್ಯರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಸಿಎಂ ಅವರ ಆಪ್ತ ಕಾರ್ಯದರ್ಶಿ ಮನೋಜ್ ಪಂತ್ ವೈದ್ಯರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಮುಂಬೈ ಮೂಲದ ಮಾಡೆಲ್‍ಗೆ ಕಿರುಕುಳ – ಆಂಧ್ರದ ಮೂವರು ಐಪಿಎಸ್ ಅಧಿಕಾರಿಗಳು ಸಸ್ಪೆಂಡ್

    ಸಭೆಯಲ್ಲಿ ಯಾವುದೇ ಲೈವ್‌ ಸ್ಟ್ರೀಮಿಂಗ್‌ ಅಥವಾ ವೀಡಿಯೋಗ್ರಫಿ ಮಾಡಲಾಗುವುದಿಲ್ಲ. ಬದಲಿಗೆ ಸಭೆಯ ನಡಾವಳಿಗಳನ್ನು ಎರಡೂ ಪಕ್ಷಗಳು ದಾಖಲಿಸಿ, ಕಡತಕ್ಕೆ ಸಹಿ ಮಾಡಲಿವೆ. ನಿಮ್ಮ ಸಕಾರಾತ್ಮಕ ಪ್ರತಿಕ್ರಿಯೆ ನಾವು ಎದುರು ನೋಡುತ್ತಿದ್ದೇವೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ವರದಕ್ಷಿಣೆಯಾಗಿ ಬೈಕ್ ಕೇಳಿದ್ದ ಪತಿ – ಕೊಡದಿದ್ದಕ್ಕೆ ತವರು ಮನೆಯಿಂದ ಕರೆತಂದು ಪತ್ನಿಯನ್ನೇ ಕೊಂದ!

    ಬಿಜೆಪಿ ತರಾಟೆ:
    ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ಐಟಿ-ಸೆಲ್‌ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು, ಮಮತಾ ಬ್ಯಾನರ್ಜಿ ಕಿರಿಯ ವೈದ್ಯರ ಸಭೆಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಕಿರಿಯ ವೈದ್ಯರನ್ನು ಪತ್ರದ ಮೂಲಕ ಸಭೆಗೆ ಆಹ್ವಾನಿಸಿದ್ದು, ಇದು ಬೆರಿಕೆಯಿಂದ ಕೂಡಿದೆ, ಅಲ್ಲದೇ ರಾಜಕೀಯ ಉದ್ದೇಶಗಳಿಗಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಟ್ರೈನಿ ವೈದ್ಯೆ ಅತ್ಯಾಚಾರ ಕೇಸನ್ನ ಆತ್ಮಹತ್ಯೆ ಅಂತ ಬಿಂಬಿಸಲು ಯತ್ನಿಸಿದ್ದರು: ಸಿಬಿಐ ರಿಮ್ಯಾಂಡ್‌ ಕಾಪಿಯಲ್ಲಿ ರಹಸ್ಯ ಸ್ಫೋಟ!

  • ಇಂದು ಸರ್ಕಾರಿ, ಖಾಸಗಿ ಆಸ್ಪತ್ರೆಗಳ ಓಪಿಡಿ ಬಂದ್ – ಹೊರರೋಗಿಗಳಿಗಿಲ್ಲ ಚಿಕಿತ್ಸೆ

    ಇಂದು ಸರ್ಕಾರಿ, ಖಾಸಗಿ ಆಸ್ಪತ್ರೆಗಳ ಓಪಿಡಿ ಬಂದ್ – ಹೊರರೋಗಿಗಳಿಗಿಲ್ಲ ಚಿಕಿತ್ಸೆ

    – ಕೋಲ್ಕತ್ತ ವೈದ್ಯೆಯ ಹತ್ಯೆ ಖಂಡಿಸಿ ಐಎಂಎ ಪ್ರತಿಭಟನೆಗೆ ಕರೆ; ಸರ್ಕಾರಿ ವೈದ್ಯರ ಬೆಂಬಲ
    – ತುರ್ತು ಸೇವೆಗಳು ಮಾತ್ರ ಲಭ್ಯ

    ಬೆಂಗಳೂರು: ಕೋಲ್ಕತ್ತ ವೈದ್ಯೆಯ (Kolkata Doctor) ಹತ್ಯೆ ಖಂಡಿಸಿ ಐಎಂಎ ಪ್ರತಿಭಟನೆಗೆ ಕರೆ ಕೊಟ್ಟಿದ್ದು, ರಾಜ್ಯದಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಓಪಿಡಿ ಇಂದು ಬಂದ್ (OPD Bandh) ಆಗಲಿವೆ. ತುರ್ತು ಸೇವೆಗಳು ಮಾತ್ರ ಲಭ್ಯವಿರಲಿವೆ.

    ಕೋಲ್ಕತ್ತದಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಹತ್ಯೆಯನ್ನ ಖಂಡಿಸಿ ಇಂದು ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಪ್ರತಿಭಟನೆಗೆ ಕರೆ ಕೊಟ್ಟಿದೆ. ಐಎಂಎ ಕೊಟ್ಟಿರುವ ಕರೆಗೆ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಖಾಸಗಿ ಆಸ್ಪತ್ರೆಗಳ ಒಕ್ಕೂಟ ಮತ್ತು ಹಲವು ವೈದ್ಯಕೀಯ ಅಸೋಸಿಯೇಶನ್‌ಗಳು ಬೆಂಬಲ ಕೊಟ್ಟಿದ್ದು, ಇಂದು ಬೆಳಗ್ಗೆ 6 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆಯವರೆಗೂ ಓಪಿಡಿ ಬಂದ್ ಆಗಲಿದೆ. ಅಂದರೆ 24 ಗಂಟೆಗಳ ಕಾಲ ಓಪಿಡಿ ಸೇವೆ ಸ್ಥಗಿತ ಆಗಲಿದೆ. ಇದನ್ನೂ ಓದಿ: ಸುಡಾನ್ ಅರೆಸೇನಾ ಪಡೆಯಿಂದ ನಾಗರಿಕರ ಮೇಲೆ ದಾಳಿ – 80 ಜನರ ಬಲಿ

    ಓಪಿಡಿ ಸೇವೆ ಬಂದ್ ಆಗುವ ಕಾರಣ ರೋಗಿಗಳು ಆಸ್ಪತ್ರೆಗೆ ಹೋದರೆ ಚಿಕಿತ್ಸೆ ಸಿಗುವುದಿಲ್ಲ. ತುರ್ತು ಸೇವೆ ಮಾತ್ರ ಲಭ್ಯವಿರಲಿದೆ. ಬೆಂಗಳೂರಿನಲ್ಲಿ ಇರುವ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲೂ ಪ್ರತಿಭಟನೆ ಕಾವು ಜೋರಾಗಿ ಇರಲಿದೆ.

    ಇಂದಿನ ವೈದ್ಯರ ಪ್ರತಿಭಟನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೂಡ ಪರೋಕ್ಷವಾಗಿ ಬೆಂಬಲಿಸಿದ್ದಾರೆ. ಪ್ರತಿಭಟನೆ ಉದ್ದೇಶ ಸರಿ ಇದೆ. ಅವರ ಹಕ್ಕನ್ನ ಅವರು ವ್ಯಕ್ತಪಡಿಸಲಿ. ಸಾರ್ವಜನಿಕರಿಗೆ ತೊಂದರೆ ಆಗದೇ ಇರೋಥರ ಮಾಡಲಿ ಎಂದಿದ್ದಾರೆ. ಜೊತೆಗೆ ಪ್ರತಿಭಟನೆ ಇರುವ ಹಿನ್ನೆಲೆ ಇಂದು ವೈದ್ಯರಿಗೆ ರಜೆ ಮಂಜೂರು ಮಾಡದಂತೆ ಸರ್ಕಾರ ಕೂಡ ಆದೇಶ ಮಾಡಿದೆ. ಇದನ್ನೂ ಓದಿ: ಐಫೋನ್ ತಯಾರಕ ಫಾಕ್ಸ್‌ಕಾನ್ ಕಂಪನಿ ಮುಖ್ಯಸ್ಥನ ಜೊತೆ ಸಿಎಂ, ಡಿಸಿಎಂ ಡಿನ್ನರ್

    ಪ್ರತಿಭಟನೆಗೆ ಯರ‍್ಯಾರ ಬೆಂಬಲ?
    ರಾಜ್ಯಾದ್ಯಂತ ಐಎಂಎ ವ್ಯಾಪ್ತಿಯಲ್ಲಿ 30,000 ವೈದ್ಯರಿದ್ದು, ಪ್ರತಿಭಟನೆಗೆ ಎಲ್ಲರೂ ಬೆಂಬಲ ವ್ಯಕ್ತಪಡಿಸಿದ್ದಾರೆ. ಖಾಸಗಿ ಆಸ್ಪತ್ರೆಗಳ ಒಕ್ಕೂಟ, ಸರ್ಕಾರಿ ವೈದ್ಯಾಧಿಕಾರಿಗಳ ಅಸೋಸಿಯೇಶನ್, ಮಕ್ಕಳ ವೈದ್ಯರ ಅಸೋಸಿಯೇಶನ್, ಅರ್ಥೋಪಿಡಿಕ್ ಅಸೋಸಿಯೇಶನ್, ಮೆಡಿಕಲ್ ಕಾಲೇಜ್ ವೈದ್ಯರ ಅಸೋಸಿಯೇಶನ್, ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿವೆ.

  • ಯಾದಗಿರಿ ನಗರದ ಖಾಸಗಿ ಆಸ್ಪತ್ರೆಗಳ OPD ಬಂದ್

    ಯಾದಗಿರಿ ನಗರದ ಖಾಸಗಿ ಆಸ್ಪತ್ರೆಗಳ OPD ಬಂದ್

    ಯಾದಗಿರಿ: ನಗರದ ಆದರ್ಶ ಆಸ್ಪತ್ರೆಯಲ್ಲಿ ಶನಿವಾರ ನಡೆದಿದ್ದ ಗಲಾಟೆ ಪ್ರಕರಣ ಖಂಡಿಸಿ, ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಸದಸ್ಯ ವೈದ್ಯರು ನಗರದ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ ಮಾಡಿ ಸಾಂಕೇತಿಕ ಧರಣಿ ನಡೆಸಿದ್ದಾರೆ.

    ಶನಿವಾರ ಮನಗಿನಾಳ ಗ್ರಾಮದ ಕಲಾವತಿ ಹೆರಿಗೆ ನಂತರ ಆದರ್ಶ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಆಸ್ಪತ್ರೆ ಆವರಣದಲ್ಲಿ ಜಮಾಯಿಸಿದ್ದ ಕಲಾವತಿ ಕುಟುಂಬಸ್ಥರು ಗಲಾಟೆ ನಡೆಸಿ ಗಾಜು ಒಡೆದು, ವೈದ್ಯೆ ಪ್ರೇಮಾ ರೆಡ್ಡಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ವೈದ್ಯರು ನಗರದ 25 ಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಯ ಒಪಿಡಿ ಹಾಗೂ ಲ್ಯಾಬ್ ಗಳನ್ನ ಬಂದ್ ಮಾಡಿ ಸಾಂಕೇತಿಕ ಧರಣಿ ನಡೆಸುತ್ತಿದ್ದಾರೆ.

    ಈ ರೀತಿಯ ಗಲಾಟೆಗಳ ನಡೆದಾಗ ಆಸ್ಪತ್ರೆ ಮತ್ತು ಸಿಬ್ಬಂದಿಗೆ ಸೂಕ್ತ ಭದ್ರತೆಯನ್ನು ನೀಡಬೇಕೆಂದು ವೈದ್ಯ ಮಂಡಳಿಯ ಸದಸ್ಯರು ಆಗ್ರಹಿಸಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆಯವರನ್ನ ಭೇಟಿಯಾಗಿ ಮನವಿ ಸಲ್ಲಿಸಲಿದ್ದಾರೆ.

  • ವೈದ್ಯರ ಪ್ರತಿಭಟನೆ- ಕರವೇ ಅಶ್ವಿನಿಗೌಡ ಸೇರಿ 15ಕ್ಕೂ ಹೆಚ್ಚು ಜನ ಶರಣಾಗಲು ನಿರ್ಧಾರ

    ವೈದ್ಯರ ಪ್ರತಿಭಟನೆ- ಕರವೇ ಅಶ್ವಿನಿಗೌಡ ಸೇರಿ 15ಕ್ಕೂ ಹೆಚ್ಚು ಜನ ಶರಣಾಗಲು ನಿರ್ಧಾರ

    ಬೆಂಗಳೂರು: ಕರವೇ ಅಶ್ವಿನಿ ಗೌಡ ಸೇರಿದಂತೆ 15 ಜನ ಕಾರ್ಯಕರ್ತರು ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರು ದಕ್ಷಿಣ ಡಿಸಿಪಿ ಕಚೇರಿಯಲ್ಲಿ ಶರಣಾಗಲಿದ್ದಾರೆ.

    ಕರವೇ ಅಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ತಡರಾತ್ರಿ ಸಭೆ ನಡೆಸಿ ಪೊಲೀಸರಿಗೆ ಶರಣಾಗುವ ಬಗ್ಗೆ ತೀರ್ಮಾನಿಸಿದ್ದಾರೆ. ಈ ಬಗ್ಗೆ ಮಾತನಾಡಿದ ನಾರಾಯಣಗೌಡ ಹಾಗೂ ಹಲ್ಲೆ ಆರೋಪಿ ಅಶ್ವಿನಿಗೌಡ, ವೈದ್ಯರಿಗೆ ಹೆದರಿ ಈ ತೀರ್ಮಾನ ತೆಗೆದುಕೊಂಡಿಲ್ಲ. ಜನರಿಗೆ ತೊಂದರೆಯಾಗಬಾರದೆಂದು ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

    ಕಳೆದ ಒಂದು ವಾರದಿಂದ ನಡೆಯುತ್ತಿರುವ ಸರ್ಕಾರಿ ಕಿರಿಯ ವೈದ್ಯರ ಪ್ರತಿಭಟನೆಗೆ ಐಎಂಎ ಕೈ ಜೋಡಿಸಿದೆ. ವೈದ್ಯರ ಮೇಲೆ ಹಲ್ಲೆ ಮಾಡಿರುವ ಕರವೇ ಕಾರ್ಯಕರ್ತರನ್ನ ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆಯಲ್ಲಿ ವೈದ್ಯರು ಭಾಗಿಯಾಗಲಿದ್ದಾರೆ. ಸರ್ಕಾರಿ ಆಸ್ಪತ್ರೆಯ ಜೊತೆಗೆ ಇಂದು ರಾಜ್ಯದ ಖಾಸಗಿ ಆಸ್ಪತ್ರೆಯ ಹೊರ ರೋಗಿ ವಿಭಾಗವನ್ನ 24 ಗಂಟೆಗಳ ಸಂಪೂರ್ಣ ಬಂದ್ ಮಾಡುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಿದ್ಧರಾಗಿದ್ದಾರೆ.

    ಇಂದು ಬೆಳಗ್ಗೆ 6ರಿಂದ ನಾಳೆ ಬೆಳಗ್ಗೆ 6 ರವರೆಗೆ ಖಾಸಗಿ ಆಸ್ಪತ್ರೆಯ ಓಪಿಡಿ ಸೇರಿದಂತೆ ಬಹುತೇಕ ಕ್ಲಿನಿಕ್ ಗಳು ಸಹ ಬಂದ್ ಆಗಲಿದ್ದು, ರೋಗಿಗಳಿಗೆ ಚಿಕಿತ್ಸೆ ದೊರೆಯುವುದು ಅನುಮಾನವಾಗಿದೆ. ಇದರಿಂದ ರೋಗಿಗಳಿಗೆ ತೊಂದರೆ ಆಗಲಿದೆ.  ಇತ್ತ ಕರವೇ ಕಾರ್ಯಕರ್ತರು ಶರಣಾಗಲು ಒಪ್ಪಿಕೊಂಡಿದ್ದರಿಂದ ವೈದ್ಯರು ಪ್ರತಿಭಟನೆಯಿಂದ ಹಿಂದೆ ಸರಿಯುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

  • ಇಂದು ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆ ವೈದ್ಯರ ಪ್ರತಿಭಟನೆ

    ಇಂದು ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆ ವೈದ್ಯರ ಪ್ರತಿಭಟನೆ

    ಬೆಂಗಳೂರು: ನಗರದ ಮಿಂಟೋ ಕಣ್ಣಿನ ಆಸ್ಪತ್ರೆ ವೈದ್ಯರ ಮುಷ್ಕರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಪ್ರತಿಭಟನೆ ಮಾಡುತ್ತಿದ್ದಾರೆ.

    ಮಿಂಟೋ ಆಸ್ಪತ್ರೆಯಲ್ಲಿ ಕಣ್ಣಿನ ಚಿಕಿತ್ಸೆಗೆ ಒಳಗಾಗಿ ಕೆಲವರು ದೃಷ್ಟಿ ಕಳೆದುಕೊಂಡಿದ್ದರು. ಇದನ್ನು ಪ್ರಶ್ನಿಸಲು ಅಶ್ವಿನಿ ಗೌಡ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ಆಸ್ಪತ್ರೆಗೆ ತೆರಳಿದ್ದರು. ಕರವೇ ಕಾರ್ಯಕರ್ತರು-ವೈದ್ಯರ ವಾಗ್ವಾದ ಇಂಗ್ಲಿಷ್-ಕನ್ನಡ ಹೋರಾಟದ ರೂಪ ಪಡೆದಿತ್ತು. ಅಲ್ಲದೆ ಕರವೇ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ಮಿಂಟೋ ಆಸ್ಪತ್ರೆ ಸಿಬ್ಬಂದಿ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸಿದ್ದರು.

    ಇತ್ತ ವೈದ್ಯರ ನಡೆಯನ್ನು ಖಂಡಿಸಿ ಕರವೇ ಕಾರ್ಯಕರ್ತರು ಸಹ ಪ್ರತಿಭಟನೆ ನಡೆಸಲಿದ್ದಾರೆ. ಟೌನ್‌ಹಾಲ್‌ನಿಂದ ಫ್ರೀಡಂಪಾರ್ಕ್ ವರೆಗೆ ಕರವೇ ರ‍್ಯಾಲಿ ನಡೆಸಲಿದ್ದಾರೆ. ರ‍್ಯಾಲಿ ಸಾಗುವ ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆಗಳಿವೆ.

    ಡಿಸಿಎಂ ಅಶ್ವಥ್ ನಾರಾಯಣ ಅವರ ಸಂಧಾನಕ್ಕೂ ವೈದ್ಯರು ಒಪ್ಪಿಲ್ಲ. ಇದೀಗ ರಾಜ್ಯವ್ಯಾಪಿ ಪ್ರತಿಭಟನೆಗೆ ಮುಂದಾಗಿದ್ದು ಇಂದು ಒಪಿಡಿ ಬಂದ್ ಮಾಡಿದ್ದಾರೆ. ಈ ಮಧ್ಯೆ ಕಣ್ಣು ಕಳೆದುಕೊಂಡವರಿಗೆ 3 ಲಕ್ಷ ಪರಿಹಾರ ಘೋಷಿಸಿರುವ ಅಶ್ವಥ್ ನಾರಾಯಣ, ದೃಷ್ಟಿ ದೋಷ ಇರುವವರಿಗೆ ಸರ್ಕಾರದಿಂದಲೇ ಚಿಕಿತ್ಸೆ ನೀಡುತ್ತೇವೆ ಅಂದಿದ್ದಾರೆ. ಆಸ್ಪತ್ರೆಯಲ್ಲಿ ಹೆಚ್ಚಿನ ಸಿಸಿಟಿವಿ ಅಳವಡಿಕೆ, ವೈದ್ಯರಿಗೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಹಾಗೂ ಕರ್ನಾಟಕ ಭದ್ರತಾ ಪಡೆಗಳಿಂದ ಭದ್ರತೆ ನೀಡಲು ಡಿಸಿಎಂ ಸೂಚಿಸಿದ್ದಾರೆ.

  • ವೈದ್ಯರ ಮುಷ್ಕರ- ಬಾಗಲಕೋಟೆ ಸರ್ಕಾರಿ ಆಸ್ಪತ್ರೆ ವೈದ್ಯರಿಗಿಲ್ಲ ರಜೆ

    ವೈದ್ಯರ ಮುಷ್ಕರ- ಬಾಗಲಕೋಟೆ ಸರ್ಕಾರಿ ಆಸ್ಪತ್ರೆ ವೈದ್ಯರಿಗಿಲ್ಲ ರಜೆ

    ಬಾಗಲಕೋಟೆ: ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಸ್ಥೆ ಪ್ರತಿಭಟನೆಗೆ ಕರೆಕೊಟ್ಟಿದ್ದು, ರಾಜ್ಯದಲ್ಲೂ ವೈದ್ಯಕೀಯ ಸೇವೆ ವ್ಯತ್ಯಯವಾಗಲಿದೆ. ಆದರೆ ಬಾಗಲಕೋಟೆ ಸರ್ಕಾರಿ ವೈದ್ಯರು ಮಾತ್ರ ಕಡ್ಡಾಯವಾಗಿ ಕರ್ತವ್ಯಕ್ಕೆ ಬರಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ ಹೊರಡಿಸಿದ್ದಾರೆ.

    ವೈದ್ಯರ ಮೇಲೆ ಹಲ್ಲೆಗೆ ಖಂಡಿಸಿ ಇಂದು ರಾಜ್ಯಾದ್ಯಂತ ಮುಷ್ಕರ ನಡೆಸಲಾಗುತ್ತಿದೆ. ಆದರೆ ಈ ಹಿನ್ನೆಲೆಯಲ್ಲಿ ಬಾಗಲಕೋಟೆ ಸರ್ಕಾರಿ ಆಸ್ಪತ್ರೆಗಳ ವೈದ್ಯರಿಗೆ ರಜೆ ಇಲ್ಲ. ಎಲ್ಲಾ ಸರ್ಕಾರಿ ಆಸ್ಪತ್ರೆ ವೈದ್ಯರು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಅನಂತ್ ದೇಸಾಯಿ ಸೂಚನೆ ನೀಡಿದ್ದಾರೆ. ಜೊತೆಗೆ ಜಿಲ್ಲಾಸ್ಪತ್ರೆಯ ವೈದ್ಯರು ಕೂಡ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಿರಲು ಜಿಲ್ಲಾಸ್ಪತ್ರೆ ಸರ್ಜನ್ ಪ್ರಕಾಶ್ ಬಿರಾದಾರ ಅವರು ಕೂಡ ಸೂಚಿಸಿದ್ದಾರೆ. ಇದನ್ನೂ ಓದಿ:ಇಂದು ದೇಶಾದ್ಯಂತ ವೈದ್ಯರ ಮುಷ್ಕರ- ಆಸ್ಪತ್ರೆಗಳ ಓಪಿಡಿ ಬಂದ್

    ಇಂದು ಬಾಗಲಕೋಟೆ ಜಿಲ್ಲಾದ್ಯಂತ ಖಾಸಗಿ ಆಸ್ಪತ್ರೆ ವೈದ್ಯರು ಮಾತ್ರ ಮುಷ್ಕರ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳ ಓಪಿಡಿ ಸ್ತಬ್ಧವಾಗಿರುತ್ತದೆ. ಆದರೆ ತುರ್ತು ಚಿಕಿತ್ಸೆ ಮಾತ್ರ ತೆರೆದಿರುತ್ತದೆ. ಇಂದು ಬೆಳಗ್ಗೆ 6 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆವರೆಗೂ ಖಾಸಗಿ ಆಸ್ಪತ್ರೆಗಳ ಓಪಿಡಿ ಸೇವೆ ಸ್ಥಗಿತವಾಗಿರುತ್ತದೆ.

    ಅಲ್ಲದೆ ಇಂದು ಸಂಜೆ ಬಾಗಲಕೋಟೆ ಬಸವೇಶ್ವರ ವೃತ್ತದಲ್ಲಿ ಕ್ಯಾಂಡಲ್ ಲೈಟ್ ಮೂಲಕ ವೈದರು ಪ್ರತಿಭಟನೆ ನಡೆಸಲಿದ್ದೇವೆ ಎಂದು ಭಾರತೀಯ ವೈದ್ಯಕೀಯ ಸಂಘ ಬಾಗಲಕೋಟೆ ಜಿಲ್ಲಾಧ್ಯಕ್ಷೆ ಜಯಶ್ರೀ ತಿಳಿಸಿದ್ದಾರೆ.

  • ವೈದ್ಯರ ಮುಷ್ಕರಕ್ಕೆ ದ.ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿ- ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ವಿದ್ಯಾರ್ಥಿನಿ ಸಾವು

    ವೈದ್ಯರ ಮುಷ್ಕರಕ್ಕೆ ದ.ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿ- ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ವಿದ್ಯಾರ್ಥಿನಿ ಸಾವು

    ಮಂಗಳೂರು: ಕಳೆದ ನಾಲ್ಕು ದಿನಗಳಿಂದ ರಾಜ್ಯಾದ್ಯಂತ ನಡೆಯುತ್ತಿದ್ದ ಮುಷ್ಕರ ಇಂದು ಕೂಡ ಮುಂದುವರೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿದ್ಯಾರ್ಥಿನಿಯೊಬ್ಬರು ಮೊದಲ ಬಲಿಯಾಗಿದ್ದಾರೆ.

    19 ವರ್ಷದ ಪೂಜಾ ಮೃತಪಟ್ಟ ದುರ್ದೈವಿ ವಿದ್ಯಾರ್ಥಿನಿ. ಈಕೆ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ದ್ವಿತೀಯ ಬಿಕಾಂ ಓದುತ್ತಿದ್ದರು. ಕಿಡ್ನಿ ವೈಫಲ್ಯದಿಂದ ಬಳಲುತ್ತಿರೋ ಪೂಜಾ ವಾರಕ್ಕೆ ಎರಡು ಬಾರಿ ಡಯಾಲಿಸಿಸ್ ಗೆ ಒಳಗಾಗುತ್ತಿದ್ದರು. ಆದ್ರೆ ವೈದ್ಯರ ಮುಷ್ಕರದಿಂದ ಡಯಾಲಿಸಿಸ್ ನಡೆದಿರಲಿಲ್ಲ.

    ಇದರಿಂದಾಗಿ ಅನಾರೋಗ್ಯ ತೀವ್ರಗೊಂಡಿದ್ದು, ಪೂಜಾರನ್ನು ಚಿಕಿತ್ಸೆಗಾಗಿ ಪುತ್ತೂರು ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಆಸ್ಪತ್ರೆಯಲ್ಲಿ ತಜ್ಞರಿಲ್ಲದೇ ಹಾಗೂ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಪೂಜಾ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ.

    https://www.youtube.com/watch?v=8rzl4Fi8sog

    https://www.youtube.com/watch?v=etOqW7PwH00

  • ಮಸೂದೆ ಬದಲಾಯಿಸಿ, ಸಮಸ್ಯೆ ಬಗೆಹರಿಸಿ- ಸಿಎಂಗೆ ಹೆಚ್‍ಡಿಕೆ ಮನವಿ

    ಮಸೂದೆ ಬದಲಾಯಿಸಿ, ಸಮಸ್ಯೆ ಬಗೆಹರಿಸಿ- ಸಿಎಂಗೆ ಹೆಚ್‍ಡಿಕೆ ಮನವಿ

    ಬೆಂಗಳೂರು: ಸುಮಾರು 36 ಮಂದಿ ಅಮಾಯಕ ರೋಗಿಗಳನ್ನು ಬಲಿ ಪಡೆದ ಖಾಸಗಿ ವೈದ್ಯರ ಮುಷ್ಕರ ಐದನೇ ದಿನವೂ ಮುಂದುವರಿದಿದ್ದು, ಈ ಹಿನ್ನೆಲೆಯಲ್ಲಿ ಇಂದು ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಸಿದ್ದಾರೆ.

    ದೂರವಾಣಿ ಮೂಲಕ ಸಿಎಂ ಹಾಗೂ ಕಾನೂನು ಸಚಿವ ಟಿಬಿ ಜಯಚಂದ್ರ ಜೊತೆ ಮಾತನಾಡಿದ ಹೆಚ್‍ಡಿಕೆ, ವೈದ್ಯರ ಸಮಸ್ಯೆಯನ್ನು ನಾಜೂಕಾಗಿ ಪರಿಹರಿಸುವಂತೆ ಸಲಹೆ ನೀಡಿದ್ರು. ರಾಜ್ಯಾದ್ಯಂತ ರೋಗಿಗಳು ಸಾವನ್ನಪ್ಪುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಮಸ್ಯೆಯನ್ನು ಆದಷ್ಟು ಬೇಗ ಮಾತುಕತೆ ಮೂಲಕ ಬಗೆಹರಿಸಿ. ವಿಧೇಯಕದಲ್ಲಿ ಒಂದಷ್ಟು ಬದಲಾವಣೆ ಮಾಡಿ. ವೈದ್ಯರು ಸ್ಥಳೀಯ ಪ್ರಾಧಿಕಾರದ ಮುಂದೆ ಹೋಗಿ ಕೈ ಕಟ್ಟಿ ನಿಲ್ಲುವಂತಾಗುವುದು ಸರಿಯಲ್ಲ ಅಂತ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಜನಸಾಮಾನ್ಯರಿಗೆ ಅನುಕೂಲವಾಗುವ ಅಂಶಗಳಿರಲಿ. ಆದ್ರೆ ವೈದ್ಯರಿಗೆ ಮುಜುಗರ ಆಗುವಂತ ಅಂಶಗಳನ್ನು ಕೈ ಬಿಡುವುದು ಉತ್ತಮ. ಆರೋಗ್ಯ ಸಚಿವರೊಂದಿಗೆ ಮಾತನಾಡಿ ಇವತ್ತೇ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡಿ. ವೈದ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡರೆ ಎಲ್ಲವೂ ಸರಿಯಾಗತ್ತೆ ಅಂತ ಹೆಚ್‍ಡಿಕೆ ಹೇಳಿದ್ದಾರೆ. ಸದ್ಯ ಕುಮಾರಸ್ವಾಮಿ ಮಾತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಇನ್ನು ಭಾರತೀಯ ವೈದ್ಯಕೀಯ ಸಂಘ ಯಾವುದೇ ಆಸ್ಪತ್ರೆಗಳ ಬಂದ್‍ಗೆ ಕರೆ ನೀಡಿಲ್ಲ. ಬೆಂಗಳೂರಿನ ವೈದ್ಯರಷ್ಟೇ ಕರೆ ನೀಡಿದ್ರು ಅಂತಾ ಐಎಂಎ ರಾಜ್ಯಾಧ್ಯಕ್ಷ ಡಾ. ಹೆಚ್‍ಎಸ್ ರವೀಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳು ಕರೆ ನೀಡಿದ್ದ ಬಂದ್ ವಾಪಸ್ ಪಡೆದಿದ್ದಾರೆ. ನಾನು ಅಮರಣಾಂತ ಉಪವಾಸ ಮಾಡುತ್ತಿದ್ದೇನೆ. ಯಾವುದೇ ಬಂದ್ ಗೆ ಕರೆ ನೀಡಿಲ್ಲ. ಮಧ್ಯಾಹ್ನ 2 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಒಮ್ಮತದ ನಿರ್ಧಾರಕ್ಕೆ ಬರುತ್ತೇವೆ ಎಂಬ ವಿಶ್ವಾಸವಿದೆ. ಮಧ್ಯಾಹ್ನದ ಬಳಿಕ ಮುಂದಿನ ನಿರ್ಧಾರಗಳ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಅಂತಾ ರವೀಂದ್ರ ಹೇಳಿದ್ದಾರೆ.

  • ಇದು ಜನರ ಜೀವನ್ಮರಣದ ಪ್ರಶ್ನೆ, ಮುಷ್ಕರವನ್ನು ಕೈಬಿಡಿ: ವೈದ್ಯರಲ್ಲಿ ಹೈಕೋರ್ಟ್ ಮನವಿ

    ಇದು ಜನರ ಜೀವನ್ಮರಣದ ಪ್ರಶ್ನೆ, ಮುಷ್ಕರವನ್ನು ಕೈಬಿಡಿ: ವೈದ್ಯರಲ್ಲಿ ಹೈಕೋರ್ಟ್ ಮನವಿ

    ಬೆಂಗಳೂರು: ರೋಗಿಗಳು ತೊಂದರೆ ಅನುಭವಿಸುತ್ತಿದ್ದು, ಮೊದಲು ಮಾತುಕತೆ ನಡೆಸಿ ತೀರ್ಮಾನಕ್ಕೆ ಬನ್ನಿ. ಈ ಕೂಡಲೇ ಮುಷ್ಕರವನ್ನು ಕೈಬಿಡಿ ಎಂದು ಹೈಕೋರ್ಟ್ ಖಾಸಗಿ ಆಸ್ಪತ್ರೆಗಳ ವೈದ್ಯರಲ್ಲಿ ಮನವಿ ಮಾಡಿದೆ.

    ವೈದ್ಯರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ವಕೀಲರಾದ ಎನ್.ಪಿ.ಅಮೃತೇಶ್, ಜಿ.ಆರ್.ಮೋಹನ್ ಹಾಗೂ ಆದಿನಾರಾಯಣ ಎಂಬುವರು ಸಲ್ಲಿಸಿದ್ದ ಮೂರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಗುರುವಾರ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ. ರಮೇಶ್ ಹಾಗೂ ನ್ಯಾ.ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

    ಸರ್ಕಾರದ ಪರ ವಾದ ಮಂಡನೆ ಮಾಡಿದ ಅಡ್ವೋಕೇಟ್ ಜನರಲ್ ಮಧುಸೂದನ್ ನಾಯಕ್, ನಾವು ಇನ್ನು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ಮಸೂದೆಯನ್ನು(ಕೆಪಿಎಂಇ) ಮಂಡನೆ ಮಾಡಿಲ್ಲ. ಅಷ್ಟೇ ಅಲ್ಲದೇ ವೈದ್ಯರ ಜೊತೆ ಮುಖ್ಯಮಂತ್ರಿಗಳು ಮತ್ತು ಆರೋಗ್ಯ ಸಚಿವರು ಮಾತುಕತೆ ನಡೆಸಲು ಸಿದ್ಧರಿದ್ದಾರೆ. ಆದರೂ ವೈದ್ಯರು ಮುಷ್ಕರ ಮಾಡುತ್ತಿದ್ದಾರೆ ಎಂದು ವಾದಿಸಿದರು.

    ಮಧ್ಯಪ್ರವೇಶ ಮಾಡಿದ ಖಾಸಗಿ ವೈದ್ಯರ ಪರ ವಕೀಲ ಬಸವರಾಜು, ಈ ಮಸೂದೆ ಮಂಡನೆಯಾದರೆ ವೈದ್ಯರು ತಮ್ಮ ವೃತ್ತಿಯನ್ನೇ ಬಿಡಬೇಕಾಗುತ್ತದೆ. ಅಷ್ಟೇ ಅಲ್ಲದೇ ವೈದ್ಯರು ಸ್ವಯಂ ಪ್ರೇರಿತರಾಗಿ ಮುಷ್ಕರ ಮಾಡುತ್ತಿದ್ದಾರೆ ಹೊರತು ಭಾರತೀಯ ವೈದ್ಯ ಸಂಘ(ಐಎಂಎ) ಮುಷ್ಕರಕ್ಕೆ ಕರೆ ನೀಡಿಲ್ಲ. ಆರೋಗ್ಯ ಸಚಿವರು ವೈದ್ಯರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂದು ವಾದ ಮಂಡಿಸಿದರು.

    ಈ ವೇಳೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ.ರಮೇಶ್, ಈಗಾಗಲೇ ಮುಷ್ಕರದಿಂದ ಸಾಕಷ್ಟು ರೋಗಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ನಿಮ್ಮ ವೈದ್ಯರಿಗೆ ಮುಷ್ಕರ ವಾಪಸ್ ಪಡೆಯಲು ಹೇಳಿ ಎಂದು ವಕೀಲರಲ್ಲಿ ಮನವಿ ಮಾಡಿದರು.

    ಸರ್ಕಾರ ಮಾತುಕತೆಗೆ ಸಿದ್ಧವಿದೆ ಎಂದು ಈಗಾಗಲೇ ಹೇಳಿದೆ. ಅಷ್ಟೇ ಅಲ್ಲದೇ ಅಧಿವೇಶನದಲ್ಲಿ ಇನ್ನೂ ಮಸೂದೆ ಮಂಡನೆಯೇ ಆಗಿಲ್ಲ. ರೋಗಿಗಳಿಗೆ ಬಹಳಷ್ಟು ತೊಂದರೆ ಆಗುತ್ತಿದೆ. ಪರಿಸ್ಥಿತಿ ಅರ್ಥಮಾಡಿಕೊಳ್ಳಿ. ಇದು ಜನರ ಜೀವನ್ಮರಣದ ಪ್ರಶ್ನೆ. ಕೂಡಲೇ ಸೇವೆಗೆ ಮರಳಿ ಚಿಕಿತ್ಸೆ ನೀಡಿ ಎಂದು ನ್ಯಾಯಮೂರ್ತಿಗಳು ಪರಿಪರಿಯಾಗಿ ಮನವಿ ಮಾಡಿದರು.

    ಸರ್ಕಾರದ ಮುಖ್ಯ ಕಾರ್ಯದರ್ಶಿ ಗೆ ನೋಟಿಸ್ ಜಾರಿಗೆ ಆದೇಶಿಸಿರುವ ನ್ಯಾಯಪೀಠ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ. ಒಂದು ವೇಳೆ ಮುಷ್ಕರ ಕೈ ಬಿಡದೇ ಇದ್ದಲ್ಲಿ ಶುಕ್ರವಾರ ಹೈಕೋರ್ಟ್ ಖಡಕ್ ಆದೇಶ ಪ್ರಕಟಿಸುವ ಸಾಧ್ಯತೆಯಿದೆ.

    img class=”alignnone size-full wp-image-194314″ src=”https://publictv.in/wp-content/uploads/2017/11/doctors-protest-19.png” alt=”” width=”786″ height=”576″ />

  • ಮುಷ್ಕರ ಕೈಬಿಟ್ಟ ಖಾಸಗಿ ವೈದ್ಯರು: ಶುಕ್ರವಾರದಿಂದ ಸೇವೆಗೆ ಹಾಜರ್

    ಮುಷ್ಕರ ಕೈಬಿಟ್ಟ ಖಾಸಗಿ ವೈದ್ಯರು: ಶುಕ್ರವಾರದಿಂದ ಸೇವೆಗೆ ಹಾಜರ್

    ಬೆಂಗಳೂರು: ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ಮಸೂದೆಯನ್ನು(ಕೆಪಿಎಂಇ) ವಿರೋಧಿಸಿ ನಡೆಸುತ್ತಿದ್ದ ಖಾಸಗಿ ಆಸ್ಪತ್ರೆಗಳ ವೈದ್ಯರು ತಮ್ಮ ಮುಷ್ಕರವನ್ನು ಹೈಕೋರ್ಟ್ ಮನವಿಗೆ ಒಪ್ಪಿ ತಾತ್ಕಾಲಿಕವಾಗಿ ಹಿಂದಕ್ಕೆ ಪಡೆದಿದ್ದಾರೆ.

    ನಾಳೆಯಿಂದ ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆ ಲಭ್ಯವಾಗಲಿದ್ದು, ಎಂದಿನಂತೆ ಖಾಸಗಿ ಆಸ್ಪತ್ರೆ ವೈದ್ಯರು ಕಾರ್ಯನಿರ್ವಹಿಸಲಿದ್ದಾರೆ. ಫನಾ ಮುಖ್ಯಸ್ಥ ಜಯಣ್ಣ ನೇತೃತ್ವದಲ್ಲಿ ಚಾಮರಾಜಪೇಟೆಯಲ್ಲಿರುವ ಐಎಂಎನಲ್ಲಿ ನಡೆದ ಸಭೆಯಲ್ಲಿ ಹೈಕೋರ್ಟ್ ಮನವಿಗೆ ಒಪ್ಪಿ ಮುಷ್ಕರವನ್ನು ಕೈಬಿಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

    ಖಾಸಗಿ ವೈದ್ಯರ ತುರ್ತು ಸಭೆ ಮುಕ್ತಾಯವಾದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಫನಾ ಮುಖ್ಯಸ್ಥ ಜಯಣ್ಣ, ಹೈಕೋರ್ಟ್ ಮುಷ್ಕರ ಕೈಬಿಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಎಲ್ಲಾ ವೈದ್ಯರು ಸೇವೆಗೆ ತೆರಳುವ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈಗಾಗಲೇ ತುರ್ತು ಸೇವೆಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಶುಕ್ರವಾರ ನಮ್ಮ ಕೆಲ ಪದಾಧಿಕಾರಿಗಳು ಬೆಳಗಾವಿಗೆ ಹೋಗಲಿದ್ದಾರೆ  ಎಂದು ತಿಳಿಸಿದರು.

    ಮುಂದುವರಿದ ಗೊಂದಲ: ಖಾಸಗಿ ಆಸ್ಪತ್ರೆಗಳ ಮುಷ್ಕರ ವಾಪಸ್ ಪಡೆಯುವ ವಿಚಾರದಲ್ಲಿ ವೈದ್ಯಕೀಯ ಸಂಘಟನೆಗಳಲ್ಲಿ ಭಿನ್ನಾಭಿಪ್ರಾಯ ಮುಂದುವರಿದಿದೆ. ಹೈಕೋರ್ಟ್ ಸೂಚನೆಯನ್ವಯ ಸಭೆ ನಡೆಸಿದ ಫನಾ ಸಂಘಟನೆ ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗೋದಾಗಿ ಪ್ರಕಟಿಸಿದೆ. ಆದ್ರೆ ವಿರೋಧ ವ್ಯಕ್ತಪಡಿಸಿದ ಐಎಂಎ ಸಂಘಟನೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯರೊಂದಿಗೆ ಚರ್ಚಿಸಿದ ಬಳಿಕವಷ್ಟೇ ಅಂತಿಮ ನಿರ್ಧಾರ ಕೈಗೊಳ್ಳೋದಾಗಿ ಹೇಳಿದೆ. ಹೀಗಾಗಿ ಮುಷ್ಕರ ವಾಪಸ್ ವಿಚಾರದಲ್ಲಿ ಗೊಂದಲ ಮುಂದುವರಿದಿದೆ.

    ಇನ್ನು ನಾಳೆ ಮಧ್ಯಾಹ್ನ 2 ಗಂಟೆ ಮುಷ್ಕರ ನಿರತ ವೈದ್ಯರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಇದಕ್ಕೆ ಪೂರ್ವಬಾವಿಯಾಗಿ ಆರೋಗ್ಯ ಸಚಿವ ರಮೇಶ್ ಕುಮಾರ್ ಅವರನ್ನು ಪ್ರವಾಸಿ ಮಂದಿರದಲ್ಲಿ ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ವೈದ್ಯಕೀಯ ತಿದ್ದುಪಡಿ ವಿಧೇಯಕವನ್ನು ಮಂಡಿಸಬೇಕೇ ಅಥವಾ ಬೇಡವೇ ಎಂಬುದರ ಬಗ್ಗೆ ಚರ್ಚೆ ನಡೆಸಿದ್ದಾರೆ.

     

    https://youtu.be/rAMDIHQ6ZjE