Tag: Document

  • ದಾಖಲೆ ಕೇಳಿದ ಟ್ರಾಫಿಕ್‌ ಪೊಲೀಸಪ್ಪನನ್ನೇ ಕೆಲ ಮೀಟರ್‌ ಎಳೆದೊಯ್ದ ಚಾಲಕ!

    ದಾಖಲೆ ಕೇಳಿದ ಟ್ರಾಫಿಕ್‌ ಪೊಲೀಸಪ್ಪನನ್ನೇ ಕೆಲ ಮೀಟರ್‌ ಎಳೆದೊಯ್ದ ಚಾಲಕ!

    ನವದೆಹಲಿ: ಡಾಕ್ಯುಮೆಂಟ್‌ (Vehicle Document) ದಾಖಲೆಗಳನ್ನು ಕೇಳಿದ ನಂತರ ವೇಗವಾಗಿ ಬಂದ ವಾಹನವೊಂದು ಟ್ರಾಫಿಕ್ ಪೊಲೀಸರನ್ನು (Traffic Police) ಎಳೆದೊಯ್ದ ಘಟನೆ ಹರಿಯಾಣದ ಫರಿದಾಬಾದ್‌ನಲ್ಲಿ ತಿಳಿಸಿದೆ.

    ಬಲ್ಲಭಗಢ ಬಸ್ ನಿಲ್ದಾಣ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಘಟನೆಯ ಸಂಪೂರ್ಣ ದೃಶ್ಯ ವೀಡಿಯೋದಲ್ಲಿ ಸೆರೆಯಾಗಿದ್ದು, ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ವೀಡಿಯೋದಲ್ಲಿ ಏನಿದೆ..?: ಟ್ರಾಫಿಕ್‌ ಪೊಲೀಸರು ವಾಹನವನ್ನು ನಿಲ್ಲಿಸಿ ದಾಖಲೆಗಳನ್ನು ನೀಡುವಂತೆ ಕೇಳುತ್ತಾರೆ. ಈ ವೇಳೆ ಕುಡಿದ ಅಮಲಿನಲ್ಲಿದ್ದ ಚಾಲಕ ಸಡನ್‌ ಆಗಿ ಆಕಿಲರೇಟರ್‌ ತುಳಿದಿದ್ದಾನೆ. ಪರಿಣಾಮ ಟ್ರಾಫಿಕ್‌ ಪೊಲೀಸ್‌ ಸಹಿತ ವಾಹನ ವೇಗವಾಗಿ ಮುಂದೆ ಚಲಿಸಿದ್ದು, ಅಧಿಕಾರಿಯನ್ನು ಕೆಲ ಮೀಟರ್‌ಗಳಷ್ಟು ದೂರ ಎಳೆದುಕೊಂಡು ಹೋಗಿದೆ.

    ಇದೇ ವೇಳೆ ಸ್ಥಳೀಯರು ಹಾಗೂ ಇತರ ಟ್ರಾಫಿಕ್‌ ಪೊಲೀಸರ ಸಹಾಯದಿಂದ ವಾಹವನನ್ನು ನಿಲ್ಲಿಸಿ, ಸಿಲುಕಿಕೊಂಡ ಪೊಲೀಸ್‌ ಅಧಿಕಾರಿಯನ್ನು ರಕ್ಷಿಸಿರುವುದನ್ನು ನಾವು ವೀಡಿಯೋದಲ್ಲಿ ಕಾಣಬಹುದಾಗಿದೆ. ಘಟನೆ ಸಂಬಂಧ ಪೊಲೀಸರು ಚಾಲಕನನ್ನು ಗುರುತಿಸಿದ್ದು, ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

  • ದಾಖಲೆ ಇಲ್ಲದ ಹಣವನ್ನು ಸೊಂಟಕ್ಕೆ ಕಟ್ಟಿಕೊಂಡು ಬಂದ ಖತರ್ನಾಕ್ ವ್ಯಕ್ತಿಗಳು!

    ದಾಖಲೆ ಇಲ್ಲದ ಹಣವನ್ನು ಸೊಂಟಕ್ಕೆ ಕಟ್ಟಿಕೊಂಡು ಬಂದ ಖತರ್ನಾಕ್ ವ್ಯಕ್ತಿಗಳು!

    ದಾವಣಗೆರೆ: ಚುನಾವಣೆ ಘೋಷಣೆಯಾದ ನಂತರ ದಾವಣಗೆರೆ ಜಿಲ್ಲೆಯ 36 ಕಡೆಗಳಲ್ಲಿ ಚೆಕ್ ಪೋಸ್ಟ್ (Check post) ನಿರ್ಮಾಣ ಮಾಡಲಾಗಿದೆ. ಪ್ರತಿಯೊಂದು ವಾಹನವನ್ನು ತಪಾಸಣೆ ಮಾಡುವ ಕೆಲಸವನ್ನು ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ಮಾಡುತ್ತಿದ್ದು, ಈ ವೇಳೆ ಇಬ್ಬರು ಖತರ್ನಾಕ್ ವ್ಯಕ್ತಿಗಳು ಸಿಕ್ಕಿ ಹಾಕಿಕೊಂಡಿದ್ದಾರೆ.

    ಹೌದು. ದಾವಣಗೆರೆ (Davanagere) ಜಿಲ್ಲೆಯ ಹೊನ್ನಾಳಿ ನ್ಯಾಮತಿ ತಾಲೂಕಿನ ಜೀನಹಳ್ಳಿ ಚೆಕ್ ಪೊಸ್ಟ್ ನಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಆ ವ್ಯಕ್ತಿಯನ್ನು ತಡೆದು ತಪಾಸಣೆ ನಡೆಸಿದಾಗ ಆತನ ಸೊಂಟದಲ್ಲಿ 7.5 ಲಕ್ಷ ರೂಪಾಯಿ ಪತ್ತೆಯಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಒಟ್ಟು 22.79 ಕೋಟಿ ನಗದು, 1,52 ಕೋಟಿ ಮೌಲ್ಯದ ಲಿಕ್ಕರ್ ವಶ

    ಬೈಕ್‍ನಲ್ಲಿ ತೆರಳುತ್ತಿದ್ದ ಸೈಫುಲ್ಲಾ ಮತ್ತು ಕುಮಾರ್ ಬಳಿ ಹಣ ಪತ್ತೆಯಾಗಿದೆ. ಸೈಫುಲ್ಲಾ ಮತ್ತು ಕುಮಾರ್ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಮೂಲದವರು ಎನ್ನಲಾಗಿದೆ. ತಪಾಸಣೆ ಬಳಿಕ ಅಧಿಕಾರಿಗಳು ವಿಚಾರಣೆ ವೇಳೆ ಸರಿಯಾದ ಮಾಹಿತಿ ನೀಡದ ಸೈಫುಲ್ಲಾ ಮತ್ತು ಕುಮಾರ್ ಇಬ್ಬರು ತಡಬಡಾಯಿಸಿಕೊಂಡು ದಾವಣಗೆರೆಯಿಂದ ಬಂದಿದ್ದು, ಹೊನ್ನಾಳಿಯಿಂದ ಬಂದಿದ್ದು ಎಂದು ಗೊಂದಲ ಸೃಷ್ಟಿ ಮಾಡಿದ್ದಾರೆ.

    ಈ ವೇಳೆ ಅನುಮಾನಕ್ಕೊಳಗಾದ ಚೆಕ್ ಪೋಸ್ಟ್ ಅಧಿಕಾರಿಗಳು, ಪೋಲಿಸರು ಹಣ ವಶಕ್ಕೆ ಪಡೆದು ಸೂಕ್ತ ದಾಖಲೆ ನೀಡುವಂತೆ ಹೇಳಿದರು. ಬುಧವಾರ ತಡರಾತ್ರಿ 12 ಗಂಟೆ ಸರಿಸುಮಾರು ನಡೆದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ನ್ಯಾಮತಿ ತಾಲೂಕಿನ ಜೀನಹಳ್ಳಿ ಚೆಕ್ ಪೊಸ್ಟ್ ಬಳಿ ಕಳೆದ ದಿನ ನಡೆದಿದ್ದು, ಇದು ದಾವಣಗೆರೆ ಜಿಲ್ಲೆಯ ಮೊದಲ ದಾಖಲೆ ಇಲ್ಲದ ಹಣ ಸೀಜ್ ಮಾಡಿರುವುದಾಗಿ ಚೆಕ್ ಪೋಸ್ಟ್ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

  • ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಮರಾಠಿ ಸದಸ್ಯರ ಪುಂಡಾಟ

    ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಮರಾಠಿ ಸದಸ್ಯರ ಪುಂಡಾಟ

    ಬೆಳಗಾವಿ: ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಮರಾಠಿ ಭಾಷೆಯ ಸದಸ್ಯರು ಪುಂಡಾಟ ನಡೆಸಿದ್ದು, ಸರ್ಕಾರಿ ದಾಖಲೆಗಳನ್ನು ಮರಾಠಿ ಭಾಷೆಯಲ್ಲಿ ನೀಡುವಂತೆ ಒತ್ತಾಯ ಮಾಡಿದ್ದಾರೆ.

    ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಈ ಕುರಿತು ಜಿ.ಪಂ ಸದಸ್ಯ ಜಯರಾಮ್ ದೇಸಾಯಿ ಸರ್ಕಾರಿ ದಾಖಲೆಗಳನ್ನು ಮರಾಠಿ ಭಾಷೆಯಲ್ಲಿ ನೀಡುವಂತೆ ಪಟ್ಟು ಹಿಡಿದರು. ಅಲ್ಲದೇ ಅಧಿಕಾರಿಗಳು ನಮ್ಮ ಮಾತು ಕೇಳದೇ ಭಾಷಾವಾದ ಮಾಡುತ್ತಿದ್ದಾರೆ. ನಮಗೆ ಕನ್ನಡದಲ್ಲಿ ಕೊಟ್ಟ ದಾಖಲೆಗಳು ತಿಳಿಯುತ್ತಿಲ್ಲ. ಅದ್ದರಿಂದ ಕೂಡಲೇ ಮರಾಠಿ ಭಾಷೆಯಲ್ಲಿ ದಾಖಲೆ ನೀಡುವಂತೆ ಅಧಿಕಾರಿಗಳಿಗೆ ಆದೇಶ ನೀಡಲು ಒತ್ತಾಯ ಮಾಡಿದರು. ಆದರೆ ಅವರ ಇದನ್ನು ನಿರಾಕರಿಸಿದ ಅಧ್ಯಕ್ಷರು ಮರಾಠಿಯಲ್ಲಿ ದಾಖಲೆ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

    ಏಕವಚನ ಪ್ರಯೋಗ:
    ಈ ವೇಳೆ ಜಿಲ್ಲಾ ಪಂಚಾಯಿತಿಯ ಉಪಾಧ್ಯಕ್ಷರಿಗೆ ಏಕವಚನದಲ್ಲಿ ಮಾತನಾಡಿ ಬಾಯಿಮುಚ್ಚಿ ಎಂದು ಮರಾಠಿ ಸದಸ್ಯೆ ಸರಸ್ವತಿ ಪಾಟೀಲ್ ಉದ್ಧಟತನ ಮೆರೆದರು. ತಮ್ಮ ವ್ಯಾಪ್ತಿಯಲ್ಲಿ ಒಂದು ವಾರದ ಹಿಂದೆ ಗ್ರಾಮಕ್ಕೆ ಚಿರತೆ ಬಂದಾಗ ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪ ಮಾಡಿದ ಸರಸ್ವತಿ ಕ್ರಮ ಕೈಗೊಳ್ಳಲು ನಿರ್ಲಕ್ಷ್ಯ ವಹಿಸಿದ್ದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು. ಈ ವೇಳೆ ಮಧ್ಯ ಪ್ರವೇಶ ಮಾಡಿದ ಉಪಾಧ್ಯಕ್ಷ ಅರುಣ ಕಟಾಂಬ್ಳೆ ಅವರಿಗೆ ಏಕವಚನದಲ್ಲಿ ಮಾತನಾಡಿ ಸರಸ್ವತಿ ಉದ್ಧಟನ ಮೆರೆದರು.

    ಈ ಮಾತಿಗೆ ಆಕ್ರೋಶಗೊಂಡ ಕನ್ನಡ ಸದಸ್ಯರು ಸಭೆ ನಡುವೆಯೇ ಸರಸ್ವತಿ ಅವರನ್ನು ತರಾಟೆಗೆ ತೆಗೆದುಕೊಂಡರು. ಅಲ್ಲದೇ ಉಪಾಧ್ಯಕ್ಷರನ್ನು ಏಕವಚನದಲ್ಲಿ ಮಾತನಾಡುವುದು ಸರಿಯಲ್ಲ. ಈ ಕುರಿತು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಈ ಸಮಯದಲ್ಲಿ ಮಧ್ಯಪ್ರವೇಶ ಮಾಡಿದ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಶಾ ಐಹೊಳೆ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಹಾಸನಾಂಬೆ ದೇವಾಲಯಕ್ಕೆ ಭಕ್ತರಿಂದ ಹರಿದು ಬಂತು ದಾಖಲೆ ಪ್ರಮಾಣದ ಹಣ

    ಹಾಸನಾಂಬೆ ದೇವಾಲಯಕ್ಕೆ ಭಕ್ತರಿಂದ ಹರಿದು ಬಂತು ದಾಖಲೆ ಪ್ರಮಾಣದ ಹಣ

    ಹಾಸನ: ಭಾನುವಾರ ಬೆಳಗ್ಗೆ ಆರಂಭಗೊಂಡಿದ್ದ ಹಾಸನಾಂಬೆ ದೇವಾಲಯದ ಹುಂಡಿ ಎಣಿಕೆ ಕಾರ್ಯ ಸಂಜೆ ವೇಳೆ ಮುಕ್ತಾಯಗೊಂಡಿದ್ದು, ದಾಖಲೆ ಪ್ರಮಾಣದ ಆದಾಯ ಹರಿದು ಬಂದಿದೆ. ಅಲ್ಲದೇ ಹುಂಡಿ ಎಣಿಕೆ ವೇಳೆ ಭಕ್ತರ ವಿಚಿತ್ರ ಪತ್ರಗಳು ಸಿಕ್ಕಿವೆ.

    ಒಂದು ಸಾವಿರ ಬೆಲೆಯ ಟಿಕೆಟ್‍ನಿಂದ 1.3 ಕೋಟಿ ರೂಪಾಯಿ, 300 ರೂಪಾಯಿ ಟಿಕೆಟ್‍ನಿಂದ 1.2ಕೋಟಿ ರೂಪಾಯಿ ಆದಾಯ ಬಂದಿದೆ. ಇನ್ನೂ ಪ್ರಸಾದದ ಆದಾಯ 70 ಲಕ್ಷ ರೂಪಾಯಿ ಬಂದಿದೆ. ಒಟ್ಟು ಈ ಬಾರಿಯ ಜಾತ್ರೆಯಲ್ಲಿ 4.14 ಕೋಟಿ ರೂ. ಆದಾಯ ಬಂದಿದೆ.

    ಬ್ಯಾಂಕ್ ಸಿಬ್ಬಂದಿ ಸೇರಿದಂತೆ ಒಟ್ಟು 50 ಜನ ಹುಂಡಿ ಎಣಿಕೆ ಮಾಡಿದ್ದರು. 4 ಸಿಸಿ ಕ್ಯಾಮರಾವನ್ನು ಅಳವಡಿಸಲಾಗಿತ್ತು. ಚಿಕ್ಕದು, ದೊಡ್ಡದು ಸೇರಿ ಒಟ್ಟು 16 ಹುಂಡಿಗಳಿದ್ದು, ಎಲ್ಲಾ ಹುಂಡಿಗಳ ಎಣಿಕಾ ಕಾರ್ಯ ಮುಕ್ತಾಯವಾಗಿದೆ. ಅಹೋರಾತ್ರಿ ಹಾಸನಾಂಬೆ ದರ್ಶನ ಮತ್ತು ಶೀಘ್ರ ದರ್ಶನಕ್ಕೆ 300 ರೂ. ಜೊತೆಗೆ 1 ಸಾವಿರ ರೂ. ಶುಲ್ಕ ನಿಗದಿ ಮಾಡಿದ್ದರಿಂದ ಈ ಬಾರಿ ಸುಮಾರು 5 ಕೋಟಿ ರೂ. ಅಧಿಕ ಆದಾಯವನ್ನು ನಿರೀಕ್ಷಿಸಲಾಗಿತ್ತು.

    ಕಳೆದ ವರ್ಷ ಹಾಸನಾಂಬೆ ಜಾತ್ರೆಯಲ್ಲಿ ಸಂಗ್ರಹವಾಗಿದ್ದ 2.36 ಕೋಟಿ ರೂ. ಈವರೆಗಿನ ಅತ್ಯಧಿಕ ಆದಾಯವಾಗಿತ್ತು. ಈ ಬಾರಿ ಒಟ್ಟು 10 ದಿನಗಳ ಕಾಲ 6 ರಿಂದ 7 ಲಕ್ಷ ಭಕ್ತರು, ದೇವಿಯ ದರ್ಶನ ಪಡೆದಿದ್ದಾರೆ ಎಂದು ಅಂದಾಜಿಸಲಾಗಿದೆ.

    ವಿಶೇಷವಾಗಿ ಹುಂಡಿ ಎಣಿಕೆ ವೇಳೆ ಭಕ್ತರ ವಿಚಿತ್ರ ಪತ್ರಗಳು ಸಿಕ್ಕಿದ್ದು, ನಾನು ಪ್ರೀತಿಸುವ ಹುಡುಗಿ ನನಗೆ ಸಿಗುವಂತೆ ಮಾಡು. ನನ್ನ ಮುಖದ ಮೊಡವೆಗಳನ್ನ ನಿವಾರಣೆ ಮಾಡು. ನನ್ನ ಸೌಂದರ್ಯವನ್ನ ಹೆಚ್ಚಿಸು. ಅತ್ತೆ ಮನೆ ಕಿರುಕುಳದಿಂದ ಪಾರು ಮಾಡು. ನನ್ನ ರೋಗ ನಿವಾರಿಸು ಎಂಬ ನಾನಾ ಕೋರಿಕೆಗಳನ್ನು ದೇವಿ ಬಳಿ ಭಕ್ತರು ಕೇಳಿಕೊಂಡಿದ್ದಾರೆ.