Tag: Documents

  • ಅಕ್ಟೋಬರ್ 1ರಿಂದ ಜನನ ಪ್ರಮಾಣ ಪತ್ರ ಕಡ್ಡಾಯ

    ಅಕ್ಟೋಬರ್ 1ರಿಂದ ಜನನ ಪ್ರಮಾಣ ಪತ್ರ ಕಡ್ಡಾಯ

    ನವದೆಹಲಿ: ಇತ್ತಿಚಿಗೆ ಸಂಸತ್‌ನಲ್ಲಿ ಅನುಮೋದನೆಗೊಂಡು, ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅಂಕಿತ ಹಾಕಿದ್ದ ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಕಾನೂನು ಅಕ್ಟೋಬರ್ 1 ರಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಕೇಂದ್ರ ಗೃಹ ಇಲಾಖೆಯಿಂದ ಹೊರಡಿಸಿದ ಪ್ರಕಟಣೆಯಲ್ಲಿ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತ ಮೃತ್ಯುಂಜಯ್ ಕುಮಾರ್ ನಾರಾಯಣ್ ಈ ಮಾಹಿತಿ ನೀಡಿದ್ದಾರೆ.

    ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಕಾನೂನು ಶಿಕ್ಷಣ ಸಂಸ್ಥೆಗೆ ಪ್ರವೇಶ, ಡ್ರೈವಿಂಗ್ ಲೈಸೆನ್ಸ್ ನೀಡಿಕೆ, ಮತದಾರರ ಪಟ್ಟಿ ಸಿದ್ಧಪಡಿಸುವುದು, ಆಧಾರ್ ಸಂಖ್ಯೆ, ಮದುವೆ ನೋಂದಣಿ ಅಥವಾ ಸರ್ಕಾರಿ ಉದ್ಯೋಗಕ್ಕೆ ನೇಮಕಾತಿ ಮುಂತಾದ ಹಲವಾರು ಉದ್ದೇಶಗಳಿಗಾಗಿ ಜನನ ಪ್ರಮಾಣಪತ್ರವನ್ನು (Birth Certificate) ಒಂದೇ ದಾಖಲೆಯಾಗಿ ಬಳಸಲು ಈ ಕಾನೂನು ಅನುಮತಿಸುತ್ತದೆ. ಇದನ್ನೂ ಓದಿ: INDIA ಒಕ್ಕೂಟವು ಸನಾತನ ಧರ್ಮವನ್ನು ನಾಶ ಮಾಡಲು ಬಯಸಿದೆ: ಮೋದಿ ವಾಗ್ದಾಳಿ

    ನೋಂದಾಯಿತ ಜನನ ಮತ್ತು ಮರಣಗಳ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ದಾಖಲೆಯನ್ನು ರಚಿಸಲು ಕಾನೂನು ಸಹಾಯ ಮಾಡುತ್ತದೆ. ಇದು ಅಂತಿಮವಾಗಿ ಡಿಜಿಟಲ್ ನೋಂದಣಿ ಮೂಲಕ ಸಮರ್ಥ ಮತ್ತು ಪಾರದರ್ಶಕ ಸಾರ್ವಜನಿಕ ಸೇವೆಗಳು ಮತ್ತು ಸಾಮಾಜಿಕ ಪ್ರಯೋಜನಗಳನ್ನು ಖಚಿತಪಡಿಸುತ್ತದೆ. ಇದನ್ನೂ ಓದಿ: ಸನಾತನ ಧರ್ಮದ ವಿರುದ್ಧ ಹೇಳಿಕೆ ನಿಲ್ಲಿಸಿ, ಬಿಜೆಪಿ ಭ್ರಷ್ಟಚಾರದ ಬಗ್ಗೆ ಮಾತನಾಡಿ: ಕಾರ್ಯಕರ್ತರಿಗೆ ಸ್ಟಾಲಿನ್ ಸಲಹೆ

    ಮತದಾರ ಪಟ್ಟಿಯೊಂದಿಗೆ ಜನನ/ಮರಣ ಮಾಹಿತಿ ಜೋಡಣೆಯಿಂದ ವೋಟರ್ ಲಿಸ್ಟ್ ಪರಿಷ್ಕರಣೆ ಸ್ವಯಂಚಾಲಿತವಾಗಲಿದೆ. ಯಾವುದೇ ವ್ಯಕ್ತಿಗೆ 18 ವರ್ಷ ವಯಸ್ಸು ತುಂಬುತ್ತಲೇ ಮತದಾರರ ಗುರುತಿನ ಚೀಟಿ (ವೋಟರ್ ಐಡಿ) ಮಾಡಿಸಿಕೊಳ್ಳುವಂತೆ ಚುನಾವಣಾ ಆಯೋಗದ ಕಡೆಯಿಂದ ಸೂಚನೆ ಬರಲಿದೆ. ಅದೇ ರೀತಿ ಯಾವುದೇ ವ್ಯಕ್ತಿ ಮೃತಪಟ್ಟಲ್ಲಿ, ಚುನಾವಣಾ ಆಯೋಗವು ತಾನೇ ಆ ವ್ಯಕ್ತಿಯ ಹೆಸರನ್ನು ಮತದಾರ ಪಟ್ಟಿಯಿಂದ ಡಿಲೀಟ್ ಮಾಡಲಿದೆ. ಆದರೆ ಇದಕ್ಕೂ ಮುನ್ನ ಆ ವ್ಯಕ್ತಿಯ ಕುಟುಂಬದ ಸದಸ್ಯರಿಗೆ 15 ದಿನದೊಳಗೆ ಮರಣದ ವಿಷಯವನ್ನು ದೃಢಪಡಿಸಬೇಕಾಗುತ್ತದೆ. ಇದನ್ನೂ ಓದಿ: ಕೇರಳದಲ್ಲಿ ನಿಫಾ ವೈರಸ್ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ – ಸಂಪರ್ಕ ಪಟ್ಟಿಯಲ್ಲಿ 706 ಜನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಹಶೀಲ್ದಾರ್ ಕಚೇರಿಯಲ್ಲಿ ಬೆಂಕಿ ಅವಘಡ – ಸುಟ್ಟು ಕರಕಲಾದ ದಾಖಲೆಗಳು

    ತಹಶೀಲ್ದಾರ್ ಕಚೇರಿಯಲ್ಲಿ ಬೆಂಕಿ ಅವಘಡ – ಸುಟ್ಟು ಕರಕಲಾದ ದಾಖಲೆಗಳು

    ಬಳ್ಳಾರಿ: ಜಿಲ್ಲೆಯ ಹೊಸಪೇಟೆ ತಾಲೂಕಿನ ಹಳೇ ತಹಶೀಲ್ದಾರ್ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಅಪಾರ ಪ್ರಮಾಣದ ದಾಖಲೆ ಸುಟ್ಟು ಭಸ್ಮವಾಗಿದೆ.

    ಬೆಳಗ್ಗೆ ಸುಮಾರು 9 ಗಂಟೆಗೆ ಕಚೇರಿ ತೆರೆಯುತ್ತಿರುವಾಗಲೇ ಈ ಅವಘಡ ನಡೆದಿದ್ದು, ಎರಡು ಕಂಪ್ಯೂಟರ್ ಮತ್ತು ಸ್ಟೋರ್ ರೂಂನಲ್ಲಿಟ್ಟಿದ್ದ ದಾಖಲೆಗಳು ಬೆಂಕಿಗೆ ಆಹುತಿಯಾಗಿವೆ. ಹಠಾತ್ ಬೆಂಕಿಯಿಂದಾಗಿ ಇಡೀ ಕಚೇರಿ ತುಂಬಾ ಹೊಗೆ ಆವರಿಸಿಕೊಂಡಿತ್ತು. ಈ ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಶಾರ್ಟ್ ಸರ್ಕ್ಯೂಟ್‍ನಿಂದ ಈ ದುರ್ಘಟನೆ ನಡೆದಿದೆ ಎನ್ನಲಾಗುತ್ತಿದೆ. ಆದರೆ ಯಾವುದೇ ಪ್ರಾಣಾಪಾಯವಾಗಿಲ್ಲ. ಇತ್ತ ಕೆಲವರು ಉದ್ದೇಶಪೂರಕವಾಗಿ ಈ ಘಟನೆ ನಡೆದಿದೆ. ಯಾರೋ ಕಿಡಿಗೇಡಿಗಳು ಬೇಕಂತಲೇ ಕಚೇರಿಗೆ ಬೆಂಕಿ ಹಚ್ಚಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಈ ಬಗ್ಗೆ ಹೊಸಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ.

  • 1 ಸೂಟ್‍ಕೇಸ್, 3 ಹ್ಯಾಂಡ್ ಬ್ಯಾಗ್, 1 ಬಾಕ್ಸ್ – ಮಂದಣ್ಣ ಮನೆಯಿಂದ ದಾಖಲೆ ಹೊತ್ತೊಯ್ದ ಐಟಿ

    1 ಸೂಟ್‍ಕೇಸ್, 3 ಹ್ಯಾಂಡ್ ಬ್ಯಾಗ್, 1 ಬಾಕ್ಸ್ – ಮಂದಣ್ಣ ಮನೆಯಿಂದ ದಾಖಲೆ ಹೊತ್ತೊಯ್ದ ಐಟಿ

    – 9 ಗಂಟೆಗಳ ಕಾಲ ಕಿರಿಕ್ ಬ್ಯೂಟಿಗೆ ಐಟಿ ಡ್ರಿಲ್

    ಮಡಿಕೇರಿ: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣಗೆ ಐಟಿ ಗುನ್ನಾ ನೀಡಿದ್ದು, ಸತತ 29 ಗಂಟೆಗಳ ಬಳಿಕ ಐಟಿ ಅಧಿಕಾರಿಗಳ ತಲಾಶ್ ಮುಕ್ತಾಯವಾಗಿದೆ. 1 ಸೂಟ್‍ಕೇಸ್, 3 ಹ್ಯಾಂಡ್ ಬ್ಯಾಗ್, 1 ಬಾಕ್ಸ್ ನಲ್ಲಿ ಮಂದಣ್ಣ ಮನೆಯಲ್ಲಿ ಸಿಕ್ಕ ದಾಖಲೆಯನ್ನು ಐಟಿ ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದಾರೆ.

    ಗುರುವಾರ ಮುಂಜಾನೆ 7:30ಕ್ಕೆ ರಶ್ಮಿಕಾ ಅಭಿಮಾನಿಗಳು ಎಂದು ಎಂಟ್ರಿ ಕೊಟ್ಟಿದ್ದ ಆಂಧ್ರಪ್ರದೇಶದ ಐಟಿ ಅಧಿಕಾರಿಗಳು ಮನೆಯನ್ನು ಜಾಲಾಡಿ ದಾಖಲೆಗಳನ್ನು ಕಲೆಹಾಕಿದ್ದಾರೆ. ರಶ್ಮಿಕಾ ಮಂದಣ್ಣ ತಂದೆ ಒಡೆತನದ ಬೃಹತ್ ಬಂಗಲೆ, ಸೆರೆನಿಟಿ ಕಲ್ಯಾಣ ಮಂಟಪ, ಕಾಫಿ ತೋಟ, ಹೊಸದಾಗಿ ಖರೀದಿ ಮಾಡಿ ಬಿಟ್ಟಂಗಾಲದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿದ್ದ ಇಂಟರ್ ನ್ಯಾಷನಲ್ ರೆಸಿಡೆನ್ಸಿಯಲ್ ಸ್ಕೂಲ್, ಪೆಟ್ರೋಲ್ ಬಂಕ್ ಜಾಗದ ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ.

    ಇದರ ಮಧ್ಯೆ ನಿನ್ನೆ ಮಧ್ಯಾಹ್ನ ಐಟಿ ಅಧಿಕಾರಿಗಳ ತಂಡ ರಶ್ಮಿಕಾ ಮಂದಣ್ಣಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು. ಹೈದರಾಬಾದ್ ನಲ್ಲಿ ಶೂಟಿಂಗ್‍ನಲ್ಲಿ ನಿರತರಾಗಿದ್ದ ನಟಿ ರಶ್ಮಿಕಾ ಮಂದಣ್ಣ ವಿಮಾನದಲ್ಲಿ ಮೈಸೂರಿಗೆ ಬಂದು ಬಳಿಕ ಕಾರಿನಲ್ಲಿ ಗುರುವಾರ ರಾತ್ರಿಯೇ ಮನೆಗೆ ಧಾವಿಸಿದ್ದರು. ಮನೆಗೆ ಬಂದ ರಶ್ಮಿಕಾ, ಮನೆಯಲ್ಲಿ ಐಟಿ ದಾಳಿಯಿಂದ ಶಾಕ್ ಆಗಿದ್ದ ತಂದೆ ಮದನ್ ಮಂದಣ್ಣ, ತಾಯಿ ಸುಮನ್ ನೋಡಿ ಆರಂಭದಲ್ಲಿ ವಿಚಲಿತರಾದರು. ಬಳಿಕ ಅಪ್ಪ ಅಮ್ಮನನ್ನು ಸಂತೈಸಿ ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು.

    ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದ ನಟಿ ರಶ್ಮಿಕಾಗೆ ಐಟಿ ಅಧಿಕಾರಿಗಳು ಪ್ರಶ್ನೆ ಮೇಲೆ ಪ್ರಶ್ನೆ ಕೇಳಿದ್ದಾರೆ. ಎಲ್ಲದಕ್ಕೂ ಸಮಾಧಾನದಿಂದಲೇ ಉತ್ತರ ಕೊಟ್ಟಿದ್ದ ರಶ್ಮಿಕಾ ತನ್ನ ಬ್ಯಾಂಕ್ ಬ್ಯಾಲೆನ್ಸ್, ಅಕೌಂಟ್ ಇರುವ ಬ್ಯಾಂಕ್‍ಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಮಧ್ಯರಾತ್ರಿವರೆಗೂ ನಡೆದ ವಿಚಾರಣೆಯಲ್ಲಿ ಕುಟುಂಬದ ಆಸ್ತಿ ಮೂಲ, ತಾನು ಸಿನಿಮಾ ಇಂಡಸ್ಟ್ರಿಯಲ್ಲಿ ಗಳಿಸಿದ ಹಣದ ಬಗ್ಗೆ ಐಟಿ ಅಧಿಕಾರಿಗಳ ಮುಂದೆ ಉತ್ತರ ನೀಡಿದ್ದಾರೆ. ನಂತರ ಮಹಿಳಾ ಅಧಿಕಾರಿಯನ್ನು ಮನೆಯಲ್ಲೇ ಬಿಟ್ಟು ರಶ್ಮಿಕಾ ಮಂದಣ್ಣ ಕುಟುಂಬದ ಒಡೆತನದ ಸೆರಿನಿಟಿ ರೆಸಾರ್ಟ್ ನಲ್ಲಿಯೇ ಐಟಿ ಅಧಿಕಾರಿಗಳು ವಾಸ್ತವ್ಯ ಹೂಡಿದ್ದರು.

    ತಡರಾತ್ರಿವರೆಗೂ ರಶ್ಮಿಕಾ ಮಂದಣ್ಣನನ್ನು ವಿಚಾರಣೆ ಒಳಪಡಿಸಿದ್ದ ಐಟಿ ತಂಡ, ಮುಂಜಾನೆ ಬಿಟ್ಟು ಕಳುಹಿಸಿತ್ತು. ಮುಂಜಾನೆ ಮನೆಯಿಂದ ಹೊರಬಂದ ರಶ್ಮಿಕಾ ಮಂದಣ್ಣ ತಂದೆಗೆ ನಮಸ್ಕಾರ ಮಾಡಿ, ಮಾಧ್ಯಮಗಳ ಕ್ಯಾಮೆರಾಗೆ ಹಾಯ್ ಮಾಡಿ ತೆರಳಿದ್ದರು. ರಶ್ಮಿಕಾ ಮನೆಯಿಂದ ತೆರಳುತ್ತಿದ್ದಂತೆ ಇತ್ತ ಐಟಿ ಅಧಿಕಾರಿಗಳ ಎರಡು ತಂಡ ಮತ್ತೆ ಮನೆ ಪ್ರವೇಶ ಮಾಡಿತ್ತು.

    ಎರಡನೇ ದಿನ ಐಟಿ ದಾಳಿ ಮುಂದುವರಿಸಿದ್ದ ಐಟಿ ತಂಡ ಸುಮಾರು 12.30 ರ ವೇಳೆಗೆ ದಾಖಲೆಗಳ ಪರಿಶೀಲನೆ ಮುಕ್ತಾಯ ಮಾಡಿತು. ಮನೆಯಿಂದ ಮಹತ್ವದ ದಾಖಲೆಗಳ ಪಡೆದ ಪತ್ರಕ್ಕೆ ರಶ್ಮಿಕಾ ಕುಟುಂಬದಿಂದ ಸಹಿ ಪಡೆದು ತೆರಳಿದರು. ಐಟಿ ತಂಡ ಹೋದ ಬಳಿಕ ಮನೆಯಿಂದ ತಾಯಿ ಜೊತೆ ಹೊರ ಬಂದ ರಶ್ಮಿಕಾ ಮಂದಣ್ಣ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಐಟಿ ಅವರು ಅವರ ಕೆಲಸ ಮಾಡಿದ್ದಾರೆ. ಯಾವ ಕಾರಣಕ್ಕೆ ದಾಳಿ ಮಾಡಿದ್ದಾರೆ ನಮಗೆ ಗೊತ್ತಿಲ್ಲ. ನಾವು ಎಲ್ಲಾ ಮಾಹಿತಿಗಳನ್ನು ನೀಡಿದ್ದೇವೆ ಎಂದು ತಿಳಿಸಿದರು.

  • ಡಿಕೆಶಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿಗೆ ರಾಶಿ ರಾಶಿ ದಾಖಲೆ ಸಲ್ಲಿಸಿದ ಡಿ.ಕೆ.ಸುರೇಶ್

    ಡಿಕೆಶಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿಗೆ ರಾಶಿ ರಾಶಿ ದಾಖಲೆ ಸಲ್ಲಿಸಿದ ಡಿ.ಕೆ.ಸುರೇಶ್

    ನವದೆಹಲಿ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಸಂಸದ, ಸಹೋದರ ಡಿ.ಕೆ.ಸುರೇಶ್ ಅವರು ಜಾರಿ ನಿರ್ದೇಶನಾಲಯ ಕಚೇರಿಗೆ ರಾಶಿ ರಾಶಿ ದಾಖಲೆಗಳನ್ನು ಸಲ್ಲಿಸಿದ್ದಾರೆ.

    ಇಡಿ ಅಧಿಕಾರಿಗಳ ಸೂಚನೆಯಂತೆ ಡಿ.ಕೆ.ಸುರೇಶ್ ಅವರು ವಕೀಲರೊಂದಿಗೆ ಲೋಕಭವನದಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಗೆ ಇಂದು ಆಗಮಿಸಿದ್ದರು. ಈ ವೇಳೆ ಡಿ.ಕೆ.ಶಿವಕುಮಾರ್ ಅವರ ಆರ್ಥಿಕ ವ್ಯವಹಾರಗಳಿಗೆ ಸಂಬಂಧಿಸಿದ ಸುಮಾರು ಐದು ಸಾವಿರ ಪುಟಗಳ ದಾಖಲೆ ಸಲ್ಲಿಸಿದ್ದಾರೆ.

    ಇಡಿ ಕಚೇರಿಯಿಂದ ಹೊರಬಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಸಂಸದರು, ವಿಚಾರಣಾ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಅವರ ಆರ್ಥಿಕ ವ್ಯವಹಾರಗಳ ಸಂಬಂಧ ಇಡಿ ಅಧಿಕಾರಿಗಳು ಮಾಹಿತಿ ಕೇಳಿದ್ದರು. ಮಾಜಿ ಸಚಿವರು ಬಂಧನದಲ್ಲಿದ್ದಾರೆ. ಹೀಗಾಗಿ ಅವರ ಪರವಾಗಿ ನಾನು 5 ಸಾವಿರ ಪುಟಗಳ ದಾಖಲೆಗಳನ್ನ ಸಲ್ಲಿಸಿದ್ದೇನೆ. ಇನ್ನೂ ಹೆಚ್ಚಿನ ದಾಖಲೆಗಳನ್ನ ಕೇಳಿದ್ರೆ ತಂದು ಕೊಡುತ್ತೇವೆ ಅಂತ ಅಧಿಕಾರಿಗಳಿಗೆ ಹೇಳಿದ್ದೇನೆ ಎಂದು ತಿಳಿಸಿದರು.

    ಸಿಬಿಐ ದಾಳಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಂಸದರು, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಅಭ್ಯವಾಗಿಲ್ಲ. ಮಾಧ್ಯಮಗಳಲ್ಲಿ ತೋರಿಸುತ್ತಿದ್ದಾರೆ. ಇನ್ನು ಏನೇನ್ ಆಗಿದೆ ನೋಡಬೇಕು. ಐಟಿ ತನಿಖೆ ಮುಗಿದಿದ್ದು, ಇಡಿ ವಿಚಾರಣೆ ನಡೆಯುತ್ತಿದೆ. ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಗೆ ನೀಡಿದ್ದರಿಂದ ಅದನ್ನೂ ಎದುರಿಸಲು, ಡಿ.ಕೆ.ಶಿವಕುಮಾರ್, ನಾನು ಹಾಗೂ ನಮ್ಮ ಕುಟುಂಬ ಸಿದ್ಧವಾಗಿದೆ ಎಂದರು.

    ಸಮನ್ಸ್ ಪ್ರಶ್ನಿಸಿ ಸಲ್ಲಿಸಿದ ಅರ್ಜಿ ಅಕ್ಟೋಬರ್ 24ಕ್ಕೆ ಮುಂದೂಡಿಕೆ ಆಗಿದೆ. ತಿಹಾರ್ ಜೈಲಿನಲ್ಲಿರುವ ಡಿ.ಕೆ.ಶಿವಕುಮಾರ್ ಅವರ ಜಾಮೀನು ಅರ್ಜಿ ತೀರ್ಪು ಏನಾಗುತ್ತದೆ ಅಂತ ಕಾದು ನೋಡಬೇಕಿದೆ ಎಂದು ಹೇಳಿದರು.

  • ಇಡಿ ವಶದಲ್ಲಿದೆ ಸೋಲಾರ್ ಪವರ್ ಪ್ಲಾಂಟ್ ದಾಖಲೆ- ಟ್ರಬಲ್ ಶೂಟರ್‌ಗೆ ಹೆಚ್ಚಾದ ಸಂಕಷ್ಟ

    ಇಡಿ ವಶದಲ್ಲಿದೆ ಸೋಲಾರ್ ಪವರ್ ಪ್ಲಾಂಟ್ ದಾಖಲೆ- ಟ್ರಬಲ್ ಶೂಟರ್‌ಗೆ ಹೆಚ್ಚಾದ ಸಂಕಷ್ಟ

    ಬೆಂಗಳೂರು: ಇಡಿ ಬಂಧನದಲ್ಲಿರುವ ಟ್ರಬಲ್ ಶೂಟರ್ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ ಶಾಕ್ ಮೇಲೆ ಶಾಕ್ ನೀಡುತ್ತಿದೆ. ಇಷ್ಟು ದಿನ ದೆಹಲಿಯ ಮನೆಯಲ್ಲಿ ಸಿಕ್ಕ ಹಣದ ಬಗ್ಗೆ ವಿಚಾರಣೆ ನಡೆಸುತ್ತಿದ್ದ ಇಡಿ, ಈಗ ಬಳ್ಳಾರಿಯಲ್ಲಿನ ಸೋಲಾರ್ ಪವರ್ ಪ್ಲಾಂಟ್(ಸೌರಶಕ್ತಿ ಉತ್ಪಾದನಾ ಸ್ಥಾವರ) ಮೇಲೆ ಕಣ್ಣು ಹಾಕಿದೆ.

    ದೆಹಲಿಯಲ್ಲಿ ಸಿಕ್ಕ 8.59 ಕೋಟಿ ರೂಪಾಯಿ ಬೆನ್ನಹಿಂದೆ ಬಿದ್ದಿರುವ ಇಡಿ ಅಧಿಕಾರಿಗಳು ಈಗ ಬಳ್ಳಾರಿಯಲ್ಲಿನ ಸೋಲಾರ್ ಪವರ್ ಪ್ಲಾಂಟ್ ಮೇಲೆ ಕಣ್ಣು ಹಾಕಿದ್ದಾರೆ. ಹಗರಿಬೊಮ್ಮನ ಹಳ್ಳಿಯಲ್ಲಿ 1,950 ಎಕರೆ ಭೂಮಿಯಲ್ಲಿರುವ ಸೋಲಾರ್ ಪವರ್ ಪ್ಲಾಂಟ್ ನ ದಾಖಲೆಗಳನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

    ಈ ಯೋಜನೆಯಲ್ಲಿ ಡಿಕೆಶಿಯವರದ್ದೇ ಶೇಕಡ 60ರಷ್ಟು ಪಾಲುದಾರಿಕೆ ಇದೆ ಎನ್ನಲಾಗಿದ್ದು, ಒಂದು ವೇಳೆ ಇದು ಅಕ್ರಮವೆಂದು ಮೇಲ್ನೋಟಕ್ಕೆ ಕಂಡುಬಂದಲ್ಲಿ ಈ ಆಸ್ತಿಯನ್ನ ಮುಟ್ಟುಗೋಲು ಹಾಕಿಕೊಳ್ಳಲು ಇಡಿಗೆ ಅವಕಾಶವಿದೆ. ಸದ್ಯ ಇಡಿ ಅಧಿಕಾರಿಗಳ ಸುಪರ್ದಿಗೆ ಸೊಲಾರ್ ಪವರ್ ಪ್ಲಾಂಟ್‍ನ ದಾಖಲೆಗಳು ಸಿಕ್ಕಿರುವುದು ಡಿಕೆಶಿ ಅವರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ. ಸೋಲಾರ್ ಪವರ್ ಪ್ಲಾಂಟ್ ಬಿಡಿಸಿಕೊಳ್ಳಬೇಕು ಎಂದರೆ ಡಿಕೆಶಿ ನ್ಯಾಯಾಲಯದ ಮೊರೆ ಹೋಗಬೇಕಿದೆ.

    ಅಕ್ರಮ ಹಣ ವರ್ಗಾವಣೆ, ಹವಾಲಾ ಕೇಸ್‍ನಲ್ಲಿ ಕಳೆದೊಂದು ವಾರದಿಂದ ಇಡಿ ಹಿಡಿತದಲ್ಲಿರುವ ಕನಕಪುರ ಬಂಡೆ ಡಿಕೆಶಿ ಬಳಲಿ ಬೆಂಡಾಗಿದ್ದಾರೆ. ಡಿಕೆಶಿ ಇಂದು ಏಳನೇ ದಿನದ ವಿಚಾರಣೆ ಎದುರಿಸಲಿದ್ದಾರೆ. ಸೆಪ್ಟೆಂಬರ್ 4 ರಿಂದ 13 ರವರೆಗೂ ಅಂದರೆ ಒಟ್ಟು 10 ದಿನಗಳ ಕಾಲ ಡಿ.ಕೆ ಶಿವಕುಮಾರ್ ಅವರನ್ನು ಇಡಿ ಕಸ್ಟಡಿಗೆ ನೀಡಿ ಇಡಿ ವಿಶೇಷ ಕೋರ್ಟ್ ಆದೇಶಿಸಿತ್ತು. ಆದೇಶದಂತೆ ಇನ್ನು ಮೂರು ದಿನಗಳಲ್ಲಿ ಕಸ್ಟಡಿ ಅಂತ್ಯವಾಗಲಿದೆ.

    ಇತ್ತ ಪ್ರಕರಣದ ಮತ್ತಷ್ಟು ವಿಚಾರಣೆಗಾಗಿ ಡಿಕೆ ಶಿವಕುಮಾರ್ ಅವರನ್ನು ಇನ್ನೂ ನಾಲ್ಕು ದಿನ ಕಸ್ಟಡಿಗೆ ಕೇಳಲು ಇಡಿ ಅಧಿಕಾರಿಗಳು ಪ್ಲಾನ್ ಮಾಡಿಕೊಳ್ಳುತ್ತಿದ್ದಾರೆ. ಸೆಪ್ಟೆಂಬರ್ 13ರಂದು ಇಡಿ ಕೋರ್ಟ್ ಮುಂದೆ ಹಾಜರುಪಡಿಸಿ ಮತ್ತೆ ನಾಲ್ಕು ದಿನ ಕಸ್ಟಡಿಗೆ ಪಡೆದುಕೊಳ್ಳುವ ಲೆಕ್ಕಾಚಾರ ಇಡಿ ಅಧಿಕಾರಿಗಳು ಹಾಕಿಕೊಂಡಿದ್ದಾರೆ ಎಂದು ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ.

  • ನೀರವ್ ಬಂಧನಕ್ಕೆ ದಾಖಲೆ ಕೇಳಿದ್ರೂ ನೀಡಿಲ್ಲ- ಚೋರ್ ಮೋದಿ ರಕ್ಷಣೆಗೆ ನಿಂತ್ರಾ ಚೌಕಿದಾರ್..?

    ನೀರವ್ ಬಂಧನಕ್ಕೆ ದಾಖಲೆ ಕೇಳಿದ್ರೂ ನೀಡಿಲ್ಲ- ಚೋರ್ ಮೋದಿ ರಕ್ಷಣೆಗೆ ನಿಂತ್ರಾ ಚೌಕಿದಾರ್..?

    ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್‍ಗೆ 13 ಸಾವಿರ ಕೋಟಿ ರೂಪಾಯಿಗಳನ್ನು ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ವಜ್ರಾಭರಣ ಉದ್ಯಮಿ ನೀರವ್ ಮೋದಿಯನ್ನು ಬಂಧಿಸಲು ಇಂಗ್ಲೆಂಡ್, ಭಾರತದ ಬಳಿ ದಾಖಲೆಗಳನ್ನು ಕೇಳಿತ್ತು. ಆದ್ರೆ ಕೇಂದ್ರ ಸರ್ಕಾರ ಈ ಸಂಬಂಧ ಇದೂವರೆಗೂ ಸ್ಪಂದಿಸಿಲ್ಲ ಎಂದು ಮೂಲಗಳಿಂದ ಮಾಹಿತಿ ದೊರಕಿದೆ.

    ನೀರವ್ ಮೋದಿಗೆ ಸಂಬಂಧಿಸಿದಂತೆ ಬ್ರಿಟಿಷ್ ಪ್ರಾಧಿಕಾರ ಮಾಹಿತಿಗಾಗಿ ಹಲವು ಪ್ರಶ್ನೆಗಳನ್ನು ಭಾರತಕ್ಕೆ ಕಳುಹಿಸಿಕೊಟ್ಟಿತ್ತು. ಆದ್ರೆ ಭಾರತದಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಅಲ್ಲದೆ ನೀರವ್ ಮೋದಿ ವಿರುದ್ಧ ಕ್ರಮ ಕೈಗೊಳ್ಳಲು ಇಂಗ್ಲೆಂಡ್‍ನ ಕಾನೂನು ತಜ್ಞರ ತಂಡ ಭಾರತಕ್ಕೆ ಆಗಮಿಸಬೇಕೆ ಎಂದು ಕೇಳಿತ್ತು. ಇದಕ್ಕೂ ಭಾರತ ಸರಿಯಾಗಿ ಸ್ಪಂದಿಸಿಲ್ಲ  ಎಂದು ಎನ್ ಡಿ ಟಿವಿ ವರದಿ ಮಾಡಿದೆ.

    ಈ ಹಿಂದೆ ಬಂದ ಮಾಹಿತಿ ಪ್ರಕಾರ, ನೀರವ್ ಮೋದಿ ಪಶ್ಚಿಮ ಲಂಡನ್‍ನಲ್ಲಿರುವ ಸೊಹೊ ಪ್ರದೇಶದಲ್ಲಿ ಹೊಸ ವಜ್ರದ ವ್ಯಾಪಾರ ಆರಂಭಿಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ವಂಚಕ ನೀರವ್ ಮೋದಿಯನ್ನು ಬಂಧಿಸಲು ಭಾರತ ಸರ್ಕಾರ ಇಂಗ್ಲೆಂಡ್‍ಗೆ ಮನವಿ ಸಲ್ಲಿಸಿತ್ತು. ಈ ಕುರಿತು ಈಗ ಇಂಗ್ಲೆಂಡ್ ಆರೋಪಿ ನೀರವ್ ಮೋದಿ ವಿರುದ್ಧ ಇರುವ ದಾಖಲೆಗಳನ್ನು ನೀಡಿ, ನಂತರ ಅದನ್ನು ಪರಿಶೀಲಿಸಿ ಆರೋಪಿಯನ್ನು ಬಂಧಿಸುತ್ತೇವೆ ಎಂದು ಭಾರತಕ್ಕೆ ತಿಳಿಸಿತ್ತು. ಇದನ್ನೂ ಓದಿ:ದುಬಾರಿ ಜಾಕೆಟ್ ಧರಿಸಿ ಲಂಡನ್‍ನಲ್ಲಿ ನೀರವ್ ಮೋದಿ ಸುತ್ತಾಟ – ಪ್ರಶ್ನೆಗಳಿಗೆ ನೋ ಕಮೆಂಟ್ಸ್

    ವಿದೇಶದಲ್ಲಿ ಅಪರಾಧಿಗಳನ್ನು ಹಿಡಿಯಲು ಕಾನೂನು ನೆರವು ಬೇಗನೆ ಸಿಗುವುದಿಲ್ಲ, ಕೊಂಚ ಸಮಯ ತೆಗೆದುಕೊಳ್ಳುತ್ತದೆ. ಹೀಗಾಗಿ ಕಾನೂನು ನೆರವು ಒಪ್ಪಂದದ ಪ್ರಕಾರ ಭಾರತದ ಗೃಹ ಸಚಿವಾಲಯ ನೇರವಾಗಿ ಲಂಡನ್‍ನ ಭಾರತೀಯ ಹೈಕಮಿಷನ್‍ಗೆ ಸಮನ್ಸ್ ಅಥವಾ ವಾರೆಂಟ್‍ಗಳನ್ನು ರವಾನಿಸಬಹುದು. ಬಳಿಕ ಅದನ್ನು ಲಂಡನ್‍ನ ಭಾರತೀಯ ಹೈಕಮಿಷನ್ ಅಲ್ಲಿನ ಕೇಂದ್ರ ಪ್ರಾಧಿಕಾರಕ್ಕೆ ವರ್ಗಾಯಿಸುತ್ತದೆ. ಈ ಪ್ರಕರಣದಲ್ಲಿ, ನೀರವ್ ಮೋದಿ ವಂಚನೆ ಮಾಡಿರುವ ಬಗ್ಗೆ ದಾಖಲೆ ನೀಡಿದರೆ, ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಬ್ರಿಟನ್‍ನ ಕೇಂದ್ರೀಯ ಅಧಿಕಾರವು ತಿಳಿಸಿದೆ.

    ಏನಿದು ಪ್ರಕರಣ?:
    ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13 ಸಾವಿರ ಕೋಟಿ ರೂ. ವಂಚಿಸಿ ವಿದೇಶಕ್ಕೆ ವಜ್ರಾಭರಣ ವ್ಯಾಪಾರಿ ನೀರವ್ ಮೋದಿ ಪರಾರಿಯಾಗಿದ್ದಾರೆ. ನೀರವ್ ಮೋದಿ ಜೊತೆ ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದ ಗೀತಾಂಜಲಿ ಜುವೆಲ್ಲರಿಯ ಮೆಹುಲ್ ಚೋಕ್ಸಿ ವಿರುದ್ಧ ಕೂಡ ಸಿಬಿಐ ಎಫ್‍ಐಆರ್ ದಾಖಲಿಸಿದೆ. ಪ್ರಕರಣ ಸಂಬಂಧ ಈಗಾಗಲೇ ಮುಂಬೈ ಸೇರಿದಂತೆ ವಿದೇಶದಲ್ಲಿರುವ ನೀರವ್ ಮೋದಿ ಆಸ್ತಿಯನ್ನು ಜಾರಿ ನಿರ್ದೇಶನಾಲಯಕ್ಕೆ ಮುಟ್ಟುಗೋಲು ಹಾಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಡಿಜಿ ಲಾಕರ್ ಮೂಲಕವೇ ವಾಹನದ ದಾಖಲೆಗಳನ್ನು ತೋರಿಸಿ: ಫೈಲ್ ಸೇವ್ ಮಾಡೋದು ಹೇಗೆ? 59 ಸೆಕೆಂಡಿನ ವಿಡಿಯೋ ನೋಡಿ

    ಡಿಜಿ ಲಾಕರ್ ಮೂಲಕವೇ ವಾಹನದ ದಾಖಲೆಗಳನ್ನು ತೋರಿಸಿ: ಫೈಲ್ ಸೇವ್ ಮಾಡೋದು ಹೇಗೆ? 59 ಸೆಕೆಂಡಿನ ವಿಡಿಯೋ ನೋಡಿ

    ನವದೆಹಲಿ: ವಾಹನಗಳ ದಾಖಲೆಗಳನ್ನು ಸವಾರರು ತಮ್ಮ ಡಿಜಿ ಲಾಕರ್ ಆ್ಯಪ್ ಮೂಲಕವೇ ಪೊಲೀಸರಿಗೆ ತೋರಿಸಬಹುದೆಂದು ಕೇಂದ್ರ ಸರ್ಕಾರ ಡಿಜಿ ಲಾಕರ್ ಸೇವೆಗೆ ಅಧಿಕೃತ ಆದೇಶ ನೀಡಿದೆ.

    ಕೇಂದ್ರ ಸಾರಿಗೆ ಇಲಾಖೆಯು ದಾಖಲೆಗಳನ್ನು ಡಿಜಿ ಲಾಕರ್ ನಲ್ಲಿಯೇ ಪರಿಶೀಲಿಸಬಹುದೆಂದು ಮಾನ್ಯತೆ ನೀಡಿ, ಮಹತ್ವದ ಆದೇಶವನ್ನು ಹೊರಡಿಸಿದೆ. ಇದರಿಂದಾಗಿ ವಾಹನಸವಾರರು ಇನ್ನು ಮುಂದೆ ಪೊಲೀಸರು ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳು ವಾಹನಗಳನ್ನು ಅಡ್ಡಹಾಕಿ ದಾಖಲೆ ಕೇಳಿದರೆ, ಸವಾರರು ತಮ್ಮ ಮೊಬೈಲ್ ನಲ್ಲಿರುವ ದಾಖಲೆ ತೋರಿಸಿ ದಂಡ ಹಾಗೂ ಕಾನೂನಿನ ಕ್ರಮದಿಂದ ಪಾರಾಗಬಹುದಾಗಿದೆ.

    ಈ ಸಂಬಂಧ ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಸ್ಮಾರ್ಟ್​ಕಾರ್ಡ್ ಅಥವಾ ಕಾಗದ ರೂಪದ ದಾಖಲೆಗಳಿಗೆ ಡಿಜಿಟಲ್ ದಾಖಲೆಗಳನ್ನು ಸಲ್ಲಿಸಬಹುದೆಂದು ಉಲ್ಲೇಖಿಸಲಾಗಿದೆ. ಸದ್ಯ ಇಲಾಖೆ ಡಿಜಿಲಾಕರ್ ​ಆ್ಯಪ್​ನಲ್ಲಿ ಚಾಲನಾ ಪರವಾನಗಿ, ನೋಂದಣಿ ಪತ್ರ ಮತ್ತು ವಾಯುಮಾಲಿನ್ಯ ಪ್ರಮಾಣಪತ್ರದ ಡಿಜಿಟಲ್ ಪ್ರತಿಗಳನ್ನು ಸಂಗ್ರಹಿಸಬಹುದಾಗಿದೆ.

    ಇದಲ್ಲದೇ ಕುಡಿದು, ಅಜಾಗರೂಕ ಚಾಲನೆ ಹಾಗೂ ಇನ್ನು ಮುಂತಾದ ಸಂದರ್ಭಗಳಲ್ಲಿ ಸಂಚಾರಿ ಪೊಲೀಸರು ಸವಾರರ ಮೂಲ ಚಾಲನಾ ಪತ್ರವನ್ನು ಮುಟ್ಟುಗೊಳ್ಳುವ ಅಧಿಕಾರವನ್ನು ಹೊಂದಿರುತ್ತಾರೆ. ಅಧಿಕಾರಿಗಳು ಕಾನೂನು ರೀತಿ ಡಿಎಲ್ ಮತ್ತು ಆರ್ ಸಿ ಜಪ್ತಿಮಾಡಬೇಕಾದ ಪ್ರಕರಣಗಳಲ್ಲಿ ದಾಖಲೆಯ ಮೂಲ ಪ್ರತಿ ಅಗತ್ಯವಾಗಿರಲಿದೆ.

    ಏನಿದು ಡಿಜಿ ಲಾಕರ್?
    ಕೇಂದ್ರ ಸರ್ಕಾರವು ಆನ್‍ಲೈನ್‍ಗಳಲ್ಲಿ ಡಿಜಿಟಲ್ ರೂಪದಲ್ಲಿ ದಾಖಲೆಗಳನ್ನು ಶೇಖರಣಾ ಮಾಡಿ ನಮಗೆ ಯಾವಾಗ ಬೇಕಾದರೂ ಪಡೆಯಬಹುದಾದ ನೂತನ ಡಿಜಿ ಲಾಕರ್ ವ್ಯವಸ್ಥೆಯನ್ನು ಜಾರಿಗೊಳಿಸಿತ್ತು. ಈ ಡಿಜಿ ಲಾಕರ್ ವೆಬ್‍ಸೈಟ್‍ನಲ್ಲಿ ಒಟ್ಟು 1 ಜಿಬಿವರೆಗಿನ ದಾಖಲೆಗಳನ್ನು ಶೇಖರಿಸಿಡಬಹುದಾಗಿದೆ. ಅಲ್ಲದೇ ಯಾವುದೇ ದಾಖಲೆಗಳ ಪರಿಶೀಲನೆಗೆ ಈ ಡಿಜಿ ಲಾಕರ್ ವ್ಯವಸ್ಥೆ ಬಲು ಸುಲಭವಾಗಿದೆ. ಇದರಲ್ಲಿ ಶೈಕ್ಷಣಿಕ ಪ್ರಮಾಣ ಪತ್ರ, ಅಂಕಪಟ್ಟಿ, ಗುರುತಿನ ಚೀಟಿ, ವಾಹನ ಚಾಲನಾ ಪರವಾನಿಗೆ, ವಿಮೆ ಹಾಗೂ ಮೊದಲಾದ ದಾಖಲೆಗಳನ್ನು ಇಮೇಜ್ ರೂಪದಲ್ಲಿ ಸಂಗ್ರಹಿಸಿಡಬಹುದಾಗಿದೆ.

    ಡಿಜಿ ಲಾಕರ್ ಪಡೆಯುವುದು ಹೇಗೆ?
    ಸಾರ್ವಜನಿಕರು ತಮ್ಮ ಸ್ಮಾರ್ಟ್ ಫೋನ್‍ಗಳಲ್ಲಿ ಪ್ಲೇ ಸ್ಟೋರ್ ಹಾಗೂ ಆಪಲ್ ಐಓಎಸ್ ಮುಖಾಂತರ ಡಿಜಿಲಾಕರ್ ಆ್ಯಪ್ ಅನ್ನು ಡೌನ್ ಲೋಡ್ ಮಾಡಿ, ಸೈನ್ ಅಪ್ ಆಯ್ಕೆ ಒತ್ತಬೇಕು, ನಂತರ ಹೊಸ ಯೂಸರ್ ನೇಮ್ ಮತ್ತು ಪಾಸ್ ವರ್ಡ್ ಹಾಕಿ, ಆಧಾರ್ ಸಂಖ್ಯೆ ನಮೂದಿಸಿ ನೋಂದಣಿ ಮಾಡಿಕೊಂಡು ಸುಲಭವಾಗಿ ಬಳಸಿಕೊಳ್ಳಬಹುದಾಗಿದೆ.

    ದಿನ ನಿತ್ಯ ಜೀವನದಲ್ಲಿ ಡಿಜಿ ಲಾಕರ್ ಉಪಯೋಗವೇನು?

    ಆಧಾರ್ ಮೂಲಕ ಡಿಜಿ ಲಾಕರ್ ಬಳಸುವುದು ಹೇಗೆ?

    https://youtu.be/27U4XUl-nyg

    ಡಿಜಿ ಲಾಕರ್ ನಲ್ಲಿ ದಾಖಲೆಗಳನ್ನು ಸಂಗ್ರಹಿಸುವುದು ಹೇಗೆ?

    https://youtu.be/7P17ZJdKmts

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 58 ಕೆಜಿ ಚಿನ್ನಾಭರಣ ವಶ!

    ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 58 ಕೆಜಿ ಚಿನ್ನಾಭರಣ ವಶ!

    ಬೆಂಗಳೂರು: ಸೂಕ್ತ ದಾಖಲೆಗಳಿಲ್ಲದೆ ಸಾಗಾಣಿಕೆ ಮಾಡುತ್ತಿದ್ದ 58 ಕೆಜಿ ತೂಕದ ಚಿನ್ನಾಭರಣ ವಶಕ್ಕೆ ಪಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ತಾಲೂಕಿನ ಬಾಲೇಪುರ ಗ್ರಾಮದ ಚೆಕ್‍ಪೋಸ್ಟ್ ಬಳಿ ನಡೆದಿದೆ.

    ದೇವನಹಳ್ಳಿ ಮಾರ್ಗದಿಂದ ಹೊಸಕೋಟೆ ಕಡೆಗೆ ತೆರಳುತ್ತಿದ್ದ ಬೊಲೇರೋ ವಾಹನ ತಪಾಸಣೆ ವೇಳೆ ಚಿನ್ನ ಪತ್ತೆಯಾಗಿದೆ. ಬಾಲೇಪುರ ಚೆಕ್‍ಪೋಸ್ಟ್ ಬಳಿ ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ತೀವ್ರ ತಪಾಸಣೆಗೆ ಒಳಪಡಿಸಿದ ಸಂದರ್ಭದಲ್ಲಿ ಭಾರೀ ಪ್ರಮಾಣದ ಚಿನ್ನ ಪತ್ತೆಯಾಗಿದೆ.

    ಹೆಚ್ಚಿನ ಪ್ರಮಾಣದ ಚಿನ್ನವನ್ನು ವಿಮಾನ ನಿಲ್ದಾಣದಿಂದ ಬೇರೆಡೆಗೆ ಸಾಗಾಣಿಕೆ ಮಾಡುತ್ತಿದ್ದರು ಎನ್ನಲಾಗಿದ್ದು, ಇವುಗಳಿಗೆ ಸೂಕ್ತ ದಾಖಲೆಗಳನ್ನು ನೀಡದ ಸಂದರ್ಭದಲ್ಲಿ ಚುನಾವಣಾ ಅಧಿಕಾರಿಗಳು ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ವಶಕ್ಕೆ ಪಡೆಯಲಾಗಿರುವ ಚಿನ್ನ ಮೌಲ್ಯ ಸುಮಾರು 15 ಕೋಟಿ ರೂ. ಆಗಿದೆ.

    ಘಟನೆಗೆ ಸಂಬಂಧಿಸಿದಂತೆ ಆಕ್ರಮ ಚಿನ್ನ ಸಾಗಾಟ ನಡೆಸುತ್ತಿದ್ದ ಓರ್ವ ವ್ಯಕ್ತಿಯನ್ನ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಕುರಿತು ಕಸ್ಟಮ್ಸ್ ಹಾಗೂ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಚೆನ್ನಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • ಬೆಥೆಲ್ ಕಾಲೇಜಿಗೆ ಅಧಿಕಾರಿಗಳು ದಿಢೀರ್ ಭೇಟಿ – ದಾಖಲೆ ನೋಡೋ ನೆಪದಲ್ಲಿ ಕೋಟಿ ರೂ. ದೋಚಿದ್ರಾ?

    ಬೆಥೆಲ್ ಕಾಲೇಜಿಗೆ ಅಧಿಕಾರಿಗಳು ದಿಢೀರ್ ಭೇಟಿ – ದಾಖಲೆ ನೋಡೋ ನೆಪದಲ್ಲಿ ಕೋಟಿ ರೂ. ದೋಚಿದ್ರಾ?

    ಬೆಂಗಳೂರು: ಕಾಲೇಜಿನ ದಾಖಲಾತಿ ಪರಿಶೀಲನೆ ಮಾಡಲು ಹೋಗಿ ಬರೋಬ್ಬರಿ ಒಂದು ಕೋಟಿ ರೂ. ಹಣವನ್ನು ಅಧಿಕಾರಿಗಳು ದೋಚಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

    ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಅಧಿಕಾರಿಗಳ ಮೇಲೆ ಈ ಆರೋಪ ಕೇಳಿಬಂದಿದೆ. ಪರೀಕ್ಷೆಗೆ ನಕಲಿ ಪ್ರವೇಶ ಪತ್ರ ನೀಡುತ್ತಾರೆಂಬ ಆರೋಪದ ಮೇಲೆ ನಂದಿನಿ ಲೇಔಟ್ ನಲ್ಲಿರೋ ಬೆಥೆಲ್ ಕಾಲೇಜಿನ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದರು. ದಾಳಿ ಮಾಡಿದ ಬಳಿಕ ದಾಖಲಾತಿಗಳನ್ನು ಎತ್ತಿಕೊಳ್ಳೋದು ಅಲ್ಲದೇ ಹಣವನ್ನು ದೋಚಿದ್ದಾರೆಂಬ ಆರೋಪ ಕೇಳಿ ಬಂದಿದೆ.

    ವಿಶ್ವವಿದ್ಯಾಲಯದ ಅಧಿಕಾರಿಗಳು ಕಾಲೇಜಿಗೆ ಭೇಟಿ ನೀಡಿದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಅಧಿಕಾರಿಗಳ ವಿರುದ್ಧವೇ ಕಾಲೇಜಿನ ಮಾಲೀಕರು ದೂರು ನೀಡಿದ್ದಾರೆ. ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

  • ಸಚಿವ ಜಾರ್ಜ್ ಕ್ಷೇತ್ರದಲ್ಲಿ ಟ್ರಸ್ಟ್ ಸ್ಥಳವನ್ನು ಸರ್ಕಾರಿ ಜಾಗವನ್ನಾಗಿ ಮಾಡಲು ಮುಂದಾದ ಅಧಿಕಾರಿಗಳು!

    ಸಚಿವ ಜಾರ್ಜ್ ಕ್ಷೇತ್ರದಲ್ಲಿ ಟ್ರಸ್ಟ್ ಸ್ಥಳವನ್ನು ಸರ್ಕಾರಿ ಜಾಗವನ್ನಾಗಿ ಮಾಡಲು ಮುಂದಾದ ಅಧಿಕಾರಿಗಳು!

    ಬೆಂಗಳೂರು: ಮಠದ ಜಾಗವನ್ನು ಹೊಡೆಯಲು ಕಾಂಗ್ರೆಸ್ ನ ಮಾಜಿ ಕಾರ್ಪೊರೇಟರ್ ಪ್ರಯತ್ನಿಸಿದ್ದಾಯ್ತು. ಇದೀಗ ಸಚಿವ ಕೆಜೆ ಜಾರ್ಜ್ ಕ್ಷೇತ್ರದಲ್ಲಿ ಬರುವ ಶ್ರೀರಾಮ ಮಂದಿರದ ಟ್ರಸ್ಟ್ ಗೆ ಸೇರಿದ ಜಾಗವನ್ನು ಸರ್ಕಾರಿ ಜಾಗವನ್ನಾಗಿ ಮಾಡಲು ಅಧಿಕಾರಿಗಳು ಮುಂದಾಗಿರೋದು ಬೆಳಕಿಗೆ ಬಂದಿದೆ.

    ಬೆಂಗಳೂರಿನ ಕಾಚರಕನಹಳ್ಳಿಯಲ್ಲಿರುವ ರಾಮಮಂದಿರದ ಸುತ್ತಮುತ್ತಲಿನ ಜಾಗ ಶ್ರೀರಾಮ ಚೈತನ್ಯ ವರ್ಧಿನಿ ಟ್ರಸ್ಟ್ ಗೆ ಸೇರಿದ್ದು ಅಂತ ಕೋರ್ಟ್ ಆದೇಶಿಸಿದೆ. ಆದ್ರೆ ಈ ಜಾಗ ಸರ್ಕಾರದ್ದು ಅಂತ ತಹಶೀಲ್ದಾರ್ ಮತ್ತು ಅಧಿಕಾರಿಗಳು ತಡೆಗೋಡೆ ನಿರ್ಮಿಸಲು ಮುಂದಾಗಿದ್ದಾರೆ.

    ಈ ಕುರಿತು ಆದೇಶ ಎಲ್ಲಿದೆ ಅಂತ ಪ್ರಶ್ನಿಸಿದ್ರೆ ನಮಗೆ ಮೇಲಿಂದ ಒತ್ತಡ ಇದೆ ಅಂತ ಹೇಳುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಸರ್ಕಾರದ ಕ್ರಮಕ್ಕೆ ದೇವಸ್ಥಾನದ ಟ್ರಸ್ಟಿಗಳು ಮತ್ತು ಭಕ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಸಚಿವ ಕೆಜೆ ಜಾರ್ಜ್ ಅವರೇ ಪರೋಕ್ಷವಾಗಿ ಒತ್ತಡ ಹೇರಿ ತಡೆಗೋಡೆ ನಿರ್ಮಿಸಲು ಸೂಚಿಸಿದ್ದಾರೆ ಅಂತ ಟ್ರಸ್ಟಿಗಳು ಆರೋಪಿಸಿದ್ದಾರೆ.

    ಈ ಬಗ್ಗೆ ಅಪರ ಜಿಲ್ಲಾಧಿಕಾರಿಗಳನ್ನು ಕೇಳಿದ್ರೆ ನಮಗೆ ಯಾರ ಒತ್ತಡವೂ ಇಲ್ಲ ಅಂತ ಹೇಳುತ್ತಿದ್ದಾರೆ. ಆದ್ರೆ ದಾಖಲೆಗಳನ್ನು ಕೇಳಿದ್ರೆ ಮಾತ್ರ ತೋರಿಸಲು ಮುಂದಾಗುತ್ತಿಲ್ಲ.