Tag: Doda

  • ಜಮ್ಮು-ಕಾಶ್ಮೀರದಲ್ಲಿ ಮತ್ತೆ ಮೇಘಸ್ಫೋಟ – ಹಠಾತ್ ಪ್ರವಾಹಕ್ಕೆ 10ಕ್ಕೂ ಹೆಚ್ಚು ಮನೆಗಳು ನಾಶ

    ಜಮ್ಮು-ಕಾಶ್ಮೀರದಲ್ಲಿ ಮತ್ತೆ ಮೇಘಸ್ಫೋಟ – ಹಠಾತ್ ಪ್ರವಾಹಕ್ಕೆ 10ಕ್ಕೂ ಹೆಚ್ಚು ಮನೆಗಳು ನಾಶ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರದ (Jammu Kashmir) ದೋಡಾ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ (Cloudburst) 10ಕ್ಕೂ ಹೆಚ್ಚು ಮನೆಗಳಿಗೆ ನಾಶವಾಗಿವೆ.

    ಇತ್ತೀಚಿಗಷ್ಟೇ ಹವಾಮಾನ ಇಲಾಖೆಯು (IMD ಕಥುವಾ, ಸಾಂಬಾ, ದೋಡಾ, ಜಮ್ಮು, ರಾಂಬನ್ ಮತ್ತು ಕಿಶ್ತ್ವಾರ್ ಜಿಲ್ಲೆಗಳು ಸೇರಿದಂತೆ ಜಮ್ಮುವಿನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿತ್ತು. ಅದರ ಬೆನ್ನಲ್ಲೇ ಮೇಘಸ್ಫೋಟ ಸಂಭವಿಸಿದೆ. ಮೇಘಸ್ಫೋಟದಲ್ಲಿ 10ಕ್ಕೂ ಅಧಿಕ ಮನೆಗಳು ನಾಶವಾಗಿದ್ದು, ಈವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ.ಇದನ್ನೂ ಓದಿ: ಉಚ್ಛಾಟನೆಗೆ ಹೆದರಿ ಕ್ಷಮೆಯಾಚಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್: ಜೆಡಿಎಸ್ ಲೇವಡಿ

    ಈ ಕುರಿತು ಅಧಿಕಾರಿಯೊಬ್ಬರು ಮಾತನಾಡಿ, ಪ್ರತಿಕೂಲ ಹವಾಮಾನದ ಹಿನ್ನೆಲೆ ಜಮ್ಮುವಿನಾದ್ಯಂತ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜೊತೆಗೆ ಜಮ್ಮುವಿನಲ್ಲಿ ಪ್ರವಾಹದ ಎಚ್ಚರಿಕೆ ನೀಡಲಾಗಿದ್ದು, ಜನರು ಭೂಕುಸಿತ ಪೀಡಿತ ಪ್ರದೇಶಗಳಿಂದ ದೂರವಿರಲು ಸೂಚಿಸಲಾಗಿದೆ. ತಾವಿ ನದಿ ಸೇರಿದಂತೆ ಅನೇಕ ನದಿಗಳು ಮತ್ತು ಹೊಳೆಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ರಾತ್ರಿ ವೇಳೆ ನೀರಿನ ಪ್ರಮಾಣದಲ್ಲಿ ಗಮನಾರ್ಹ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.

    ಇನ್ನೂ ಕಾಶ್ಮೀರದ ದಕ್ಷಿಣ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಎತ್ತರದ ಪ್ರದೇಶಗಳಲ್ಲಿ ಮಳೆ ಪ್ರಮಾಣದಲ್ಲಿ ಏರಿಕೆಯಾಗಿದೆ. ಝೀಲಂ ನದಿಗೆ ಯಾವುದೇ ಪ್ರವಾಹ ಎಚ್ಚರಿಕೆ ನೀಡಲಾಗಿಲ್ಲವಾದರೂ, ನೀರಿನ ಮಟ್ಟ ಏರಿಕೆಯಾಗುವ ನಿರೀಕ್ಷೆಯಿದೆ. ಮಧ್ಯ ಕಾಶ್ಮೀರದಲ್ಲಿ ಹಗುರದಿಂದ ಮಧ್ಯಮ ಮಳೆಯಾಗಿದ್ದರೆ, ಉತ್ತರ ಕಾಶ್ಮೀರದಲ್ಲಿ ಹಗುರ ಮಳೆ ಅಥವಾ ಒಣ ಹವಾಮಾನ ಕಂಡುಬಂದಿದೆ.

    ಆ.27ರವರೆಗೆ ಎತ್ತರದ ಪ್ರದೇಶಗಳಲ್ಲಿ ಮೇಘಸ್ಫೋಟ, ಹಠಾತ್ ಪ್ರವಾಹ ಮತ್ತು ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ. ದುರ್ಬಲ ಪ್ರದೇಶಗಳಲ್ಲಿ ರಕ್ಷಣಾ ತಂಡಕ್ಕೆ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ಹಬ್ಬಕ್ಕೆ ಬಟ್ಟೆ ಖರೀದಿಸುತ್ತಿದ್ದಾಗ ಕುಸಿದು ಬಿದ್ದು 17ರ ವಿದ್ಯಾರ್ಥಿ ಸಾವು

  • ಜಮ್ಮು-ಕಾಶ್ಮೀರ: ಭಯೋತ್ಪಾದಕರ ವಿರುದ್ಧದ ಎನ್‌ಕೌಂಟರ್‌ನಲ್ಲಿ ಭಾರತೀಯ ಸೇನಾ ಕ್ಯಾಪ್ಟನ್‌ ಹುತಾತ್ಮ

    ಜಮ್ಮು-ಕಾಶ್ಮೀರ: ಭಯೋತ್ಪಾದಕರ ವಿರುದ್ಧದ ಎನ್‌ಕೌಂಟರ್‌ನಲ್ಲಿ ಭಾರತೀಯ ಸೇನಾ ಕ್ಯಾಪ್ಟನ್‌ ಹುತಾತ್ಮ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಬುಧವಾರ ನಡೆದ ಭಯೋತ್ಪಾದಕರ ಎನ್‌ಕೌಂಟರ್‌ನಲ್ಲಿ ಭಾರತೀಯ ಸೇನೆಯ ಕ್ಯಾಪ್ಟನ್ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ದೋಡಾ ಜಿಲ್ಲೆಯ ಆಪ್ ಅಸ್ಸಾರ್‌ನಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ 48 ರಾಷ್ಟ್ರೀಯ ರೈಫಲ್ಸ್‌ನ ಭಾರತೀಯ ಸೇನೆಯ ಕ್ಯಾಪ್ಟನ್ ಹುತಾತ್ಮರಾಗಿದ್ದಾರೆ.

    ಅಸ್ಸಾರ್ ಪ್ರದೇಶದಲ್ಲಿ ಮಂಗಳವಾರ ಆರಂಭವಾದ ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ. ನಂತರ ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶೋಧ ಕಾರ್ಯಾಚರಣೆ ಭಾಗವಾಗಿದ್ದಾರೆ. ಭಾರಿ ಗುಂಡಿನ ಚಕಮಕಿಯ ನಡುವೆ ಭಯೋತ್ಪಾದಕರಿಗಾಗಿ ಶೋಧ ಮುಂದುವರಿದಿದೆ. ಶೋಧ ತಂಡವನ್ನು ಮುನ್ನಡೆಸುತ್ತಿರುವ ಒಬ್ಬ ಅಧಿಕಾರಿ ಗಾಯಗೊಂಡಿದ್ದಾರೆ.

    ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆ ಸಂಬಂಧಿತ ಘಟನೆಗಳ ಕುರಿತು ಇಂದು ಬೆಳಗ್ಗೆ ಮಹತ್ವದ ಸಭೆ ನಡೆಸಿದ್ದರು. ರಕ್ಷಣಾ ಕಾರ್ಯದರ್ಶಿ ಗಿರಿಧರ್ ಅರಮನೆ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ-ಲೆಫ್ಟಿನೆಂಟ್ ಜನರಲ್ ಪ್ರತೀಕ್ ಶರ್ಮಾ ಮತ್ತು ಭದ್ರತಾ ಸಂಬಂಧಿತ ಏಜೆನ್ಸಿಗಳ ಮುಖ್ಯಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು.

  • ಜಮ್ಮು ಕಾಶ್ಮೀರದ ದೋಡಾದಲ್ಲಿ ಎನ್‌ಕೌಂಟರ್‌ – ಅಧಿಕಾರಿ ಸೇರಿದಂತೆ ನಾಲ್ವರು ಯೋಧರು ಹುತಾತ್ಮ

    ಜಮ್ಮು ಕಾಶ್ಮೀರದ ದೋಡಾದಲ್ಲಿ ಎನ್‌ಕೌಂಟರ್‌ – ಅಧಿಕಾರಿ ಸೇರಿದಂತೆ ನಾಲ್ವರು ಯೋಧರು ಹುತಾತ್ಮ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರದ (Jammu Kashmir) ದೋಡಾ ಜಿಲ್ಲೆಯಲ್ಲಿ ಉಗ್ರರ ಜೊತೆ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ (Encounter) ಓರ್ವ ಅಧಿಕಾರಿ ಸೇರಿದಂತೆ ನಾಲ್ವರು ಭಾರತೀಯ ಸೇನಾ (Indian Army) ಯೋಧರು ಹುತಾತ್ಮರಾಗಿದ್ದಾರೆ.

    ಭಯೋತ್ಪಾದಕರು ಅಡಗಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ದೋಡಾದ (Doda) ದೇಸಾದ ಅರಣ್ಯ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ರಾತ್ರಿ 9 ಗಂಟೆಯಿಂದ ಉಗ್ರರ ಜೊತೆ ಗುಂಡಿನ ಕಾಳಗ ಆರಂಭವಾಗಿದೆ. ಉಗ್ರರು ಬೆಟ್ಟದ ತುದಿಯಲ್ಲಿ ಅವಿತುಕೊಂಡು ದಾಳಿ ಮಾಡುತ್ತಿರುವ ಕಾರಣ ಕಾರ್ಯಾಚರಣೆ ಕಷ್ಟವಾಗುತ್ತಿದೆ.

    ಕಳೆದ ವಾರ ಕಥುವಾದಲ್ಲಿ ಐವರು ಯೋಧರು ಹುತಾತ್ಮರಾದ ನಂತರ ಜಮ್ಮು ಪ್ರದೇಶದಲ್ಲಿ ನಡೆದ ಎರಡನೇ ಪ್ರಮುಖ ಎನ್‌ಕೌಂಟರ್ ಇದಾಗಿದೆ. ಈ ದಾಳಿಯಲ್ಲಿ ಐವರು ಸೈನಿಕರು ಗಾಯಗೊಂಡಿದ್ದರು, ಕನಿಷ್ಠ 12 ಸೈನಿಕರನ್ನು ಹೊತ್ತ ಎರಡು ಟ್ರಕ್‌ಗಳ ಮೇಲೆ ಉಗ್ರರು ದಾಳಿ ನಡೆಸಿದ್ದರು. ಇದನ್ನೂ ಓದಿ: ಹೆಬ್ಬಾಳೆ ಸೇತುವೆ ಮುಳುಗಡೆ , ಕಳಸ-ಹೊರನಾಡು ಸಂರ್ಪಕ ಕಡಿತ

    ಭಯೋತ್ಪಾದಕರು 500 ಮೀಟರ್ ದೂರದಿಂದ ಟ್ರಕ್‌ಗಳನ್ನು ಗುರಿಯಾಗಿಸಿ ಗ್ರೆನೇಡ್‌ ಎಸೆದಿದ್ದರು. ಉಗ್ರರು ಅಸಾಲ್ಟ್‌ ರೈಫಲ್‌ ಬಳಸಿ ದಾಳಿ ನಡೆಸಿದ್ದರು. ಜಮ್ಮು ಪ್ರದೇಶ ಭಯೋತ್ಪಾದನೆಯಿಂದ ಮುಕ್ತವಾಗಿತ್ತು. ಲೋಕಸಭಾ ಚುನಾವಣಾ ಸಮಯದಲ್ಲಿ ಜಮ್ಮು ಭಾಗದಲ್ಲಿ ಭಾರೀ ಪ್ರಮಾಣದ ಮತದಾನ ನಡೆದಿತ್ತು. ಳೆದ 32 ತಿಂಗಳುಗಳಲ್ಲಿ ಜಮ್ಮು ಪ್ರದೇಶದಲ್ಲಿ ಉಗ್ರರ ಜೊತೆಗಿನ ಕಾಳಗದಲ್ಲಿ 48 ಯೋಧರು ಹುತಾತ್ಮರಾಗಿದ್ದಾರೆ.

     

  • 200 ಅಡಿ ಆಳದ ಕಮರಿಗೆ ಉರುಳಿದ ಬಸ್ – ಇಬ್ಬರು ಸಾವು, 25 ಮಂದಿಗೆ ಗಾಯ

    200 ಅಡಿ ಆಳದ ಕಮರಿಗೆ ಉರುಳಿದ ಬಸ್ – ಇಬ್ಬರು ಸಾವು, 25 ಮಂದಿಗೆ ಗಾಯ

    ಶ್ರೀನಗರ: 28 ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ ಬಸ್‌ವೊಂದು (Bus) ಸ್ಕಿಡ್ ಆಗಿ 200 ಅಡಿ ಆಳದ ಕಮರಿಗೆ ಉರುಳಿದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ (Jammu Kashmir) ದೋಡಾ (Doda) ಜಿಲ್ಲೆಯಲ್ಲಿ ನಡೆದಿದೆ.

    ಖಾಸಗಿ ಬಸ್ ಭಾಲೆಸ್ಸಾದಿಂದ ಥಾತ್ರಿಗೆ ತೆರಳುತ್ತಿದ್ದಾಗ ಬೆಳಗ್ಗೆ 10:30ರ ಸುಮಾರಿಗೆ ಭತ್ಯಾಸ್ ಬಳಿ ದುರಂತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳದಲ್ಲೇ ಒಬ್ಬ ಮಹಿಳೆ ಮೃತಪಟ್ಟಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಅನಂತ್‌ ಅಂಬಾನಿ ಮದುವೆ ಸಮಾರಂಭದಲ್ಲಿ ದೀದಿ – ಹರಿದು ಬಂತು ರಾಜಕೀಯ ನಾಯಕರ ದಂಡು!

    ಘಟನೆಯಲ್ಲಿ 9 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಭಾರತೀಯ ಸೇನೆ ಮತ್ತು ಸ್ಥಳೀಯರ ನೆರವಿನಿಂದ ಗಾಯಾಳುಗಳಿಗೆ ದೋಡಾದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಹಿಮಾಚಲದಲ್ಲಿ ಆರ್ಥಿಕ ಸಂಕಷ್ಟ – ತೆರಿಗೆ ಪಾವತಿಸೋ ಮಂದಿಗೆ ಉಚಿತ ವಿದ್ಯುತ್‌ ಕಟ್

  • ಜಮ್ಮು ಕಾಶ್ಮೀರದ ದೋಡಾದ ಸೇನಾ ಪೋಸ್ಟ್‌ ಮೇಲೆ ಉಗ್ರರ ದಾಳಿ

    ಜಮ್ಮು ಕಾಶ್ಮೀರದ ದೋಡಾದ ಸೇನಾ ಪೋಸ್ಟ್‌ ಮೇಲೆ ಉಗ್ರರ ದಾಳಿ

    ಶ್ರೀನಗರ: ಜಮ್ಮು ಕಾಶ್ಮೀರದ (Jammu Kashmir) ದೋಡಾದಲ್ಲಿ (Doda) ಮಂಗಳವಾರ ರಾತ್ರಿ ಸೇನಾ ಪೋಸ್ಟ್‌ ಮೇಲೆ ದಾಳಿ (Terrorists Attack ) ನಡೆಸಿದ ನಂತರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ದಾಳಿ ನಡೆಯುತ್ತಿದೆ ಎಂದು ವರದಿಯಾಗಿದೆ.

    ರಿಯಾಸಿಯಲ್ಲಿ (Reasi Attack) ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್‌ ಮೇಲೆ ದಾಳಿ, ಕಥುವಾದಲ್ಲಿ (Kathua) ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ ಒಬ್ಬ ನಾಗರಿಕ ಗಾಯಗೊಂಡ ನಂತರ ನಡೆದ ಮೂರನೇ ಘಟನೆ ಇದಾಗಿದೆ.


    ರಾತ್ರಿ ಕಥುವಾದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿರುವ ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆನಂದ್ ಜೈನ್ ಹೇಳಿದ್ದಾರೆ. ಇದನ್ನೂ ಓದಿ: 30 ಲಕ್ಷಕ್ಕೆ ಡೀಲ್‌ – ಕೊಲೆ ಮಾಡಿ ದರ್ಶನ್ ಟೀಂ ಸಿಕ್ಕಿಬಿದ್ದಿದ್ದೇ ರೋಚಕ!

    ದೋಡಾ ಘಟನೆಯ ಬಗ್ಗೆ ಮಾತನಾಡಿದ ಅವರು, ತಡರಾತ್ರಿ ಚಟರ್ಗಾಲಾ ಪ್ರದೇಶದ ಸೇನಾ ನೆಲೆಯಲ್ಲಿ ಪೊಲೀಸರು ಮತ್ತು ರಾಷ್ಟ್ರೀಯ ರೈಫಲ್ಸ್ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ ಎಂದು ತಿಳಿಸಿದರು.

    ಭದ್ರತಾ ಪಡೆಗಳು ಈಗ ಕಥುವಾದ ಹೀರಾನಗರ ಪ್ರದೇಶದಲ್ಲಿ ಡ್ರೋನ್‌ ಬಳಸಿಕೊಂಡು ಉಳಿದಿರುವ ಭಯೋತ್ಪಾದಕನನ್ನು ಹುಡುಕುತ್ತಿವೆ.

  • ಓವರ್‌ಟೇಕ್ ಭರದಲ್ಲಿ ಕಂದಕಕ್ಕೆ ಬಿದ್ದ ಬಸ್ – 38 ಮಂದಿ ಸಾವು

    ಓವರ್‌ಟೇಕ್ ಭರದಲ್ಲಿ ಕಂದಕಕ್ಕೆ ಬಿದ್ದ ಬಸ್ – 38 ಮಂದಿ ಸಾವು

    ನವದೆಹಲಿ: ಆಳವಾದ ಕಂದಕಕ್ಕೆ ಬಸ್ಸೊಂದು ಬಿದ್ದ ಪರಿಣಾಮ ಕನಿಷ್ಠ 38 ಜನರು ಸಾವನ್ನಪ್ಪಿದ್ದು, ಹಲವು ಜನರು ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ (Jammu and Kashmir) ದೋಡಾ (Doda) ಜಿಲ್ಲೆಯ ಅಸ್ಸಾರ್ ಪ್ರದೇಶದಲ್ಲಿ ನಡೆದಿದೆ. ದೋಡಾ ಜಿಲ್ಲೆಯಲ್ಲಿ ಒಂದು ವಾರದಲ್ಲಿ ನಡೆದ ಎರಡನೇ ರಸ್ತೆ ಅಪಘಾತ ಇದಾಗಿದೆ.

    ಬಸ್ ಬಟೋಟ್-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯ ಟ್ರುಂಗಲ್-ಅಸ್ಸಾರ್ ಬಳಿ ಸ್ಕಿಡ್ ಆಗಿ 300 ಅಡಿ ಕೆಳಗೆ ಬಿದ್ದಿದೆ ಎನ್ನಲಾಗಿದೆ. ಬಸ್ ಸುಮಾರು 40 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, ಕೆಲವು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಬ್ಯಾಡಗಿಯಲ್ಲಿ ಖಾಸಗಿ ಬಸ್ ಪಲ್ಟಿ – ಪ್ರಯಾಣಿಕರಿಗೆ ಗಾಯ

    ದೋಡಾದ ಅಸ್ಸಾರ್‌ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಜೀವಹಾನಿಯಿಂದ ತೀವ್ರ ನೋವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಸಂತ್ರಸ್ತ ವ್ಯಕ್ತಿಗಳಿಗೆ ಅಗತ್ಯವಿರುವ ಎಲ್ಲಾ ನೆರವು ನೀಡುವಂತೆ ಡಿವಿ ಕಾಮ್ ಮತ್ತು ಡಿಸ್ಟ್ ಅಡ್ಮಿನ್‌ಗೆ ನಿರ್ದೇಶನ ನೀಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ತಿಳಿಸಿದ್ದಾರೆ. ಇದನ್ನೂ ಓದಿ: ಅಕ್ರಮ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ಹರಿದು ಪೊಲೀಸ್‌ ಸಾವು; ಇದೇನು ಹೊಸದಲ್ಲ ಎಂದ ಸಚಿವ

    ಪ್ರಧಾನಿ ನರೇಂದ್ರ ಮೋದಿ (Narendra Modi) ಘಟನೆಯ ಕುರಿತು ಸಂತಾಪ ಸೂಚಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಸಂಭವಿಸಿದ ಬಸ್ ಅಪಘಾತ ದುಃಖಕರವಾಗಿದೆ. ತಮ್ಮ ಹತ್ತಿರದ ಮತ್ತು ಆತ್ಮೀಯರನ್ನು ಕಳೆದುಕೊಂಡ ಕುಟುಂಬಗಳಿಗೆ ನಾನು ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಪಿಎಂಒ ಎಕ್ಸ್‌ನಲ್ಲಿ (X) ಪೋಸ್ಟ್ ಮಾಡಿದೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ಹೇಳಿದ್ದಾರೆ. ಅಲ್ಲದೇ ಗಾಯಗೊಂಡವರಿಗೆ 50,000 ರೂ. ನೆರವು ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿಲಿಂಡರ್ ಸ್ಫೋಟಕ್ಕೆ ಮನೆ ಛಿದ್ರ ಛಿದ್ರ – ಮೂವರು ಗಂಭೀರ

    ಓವರ್‌ಟೇಕ್ ಮಾಡುವ ಪೈಪೋಟಿಯಲ್ಲಿ ಅಪಘಾತ:
    ಈ ಮಾರ್ಗದಲ್ಲಿ ಮೂರು ಬಸ್‌ಗಳು ಒಟ್ಟಿಗೆ ಸಂಚರಿಸುತ್ತಿದ್ದವು. ಪರಸ್ಪರ ಓವರ್‌ಟೇಕ್ ಮಾಡುವ ಪೈಪೋಟಿಯಲ್ಲಿ ಈ ಭಾರಿ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಲಕ್ಷ್ಮೀ ಪೂಜೆಗಿಟ್ಟಿದ್ದ ವಜ್ರಾಭರಣ ಹೊತ್ತೊಯ್ದ ಕಳ್ಳರು

    ಜಿಲ್ಲಾಧಿಕಾರಿ, ಎಸ್‌ಎಸ್‌ಪಿ ದೋಡಾ ಮತ್ತು ಇತರ ಹಲವು ಅಧಿಕಾರಿಗಳು ಜಿಎಂಸಿ ದೋಡಾ ತಲುಪಿದ್ದಾರೆ. ಗಾಯಾಳುಗಳಿಗೆ ತಕ್ಷಣವೇ ಸೂಕ್ತ ಚಿಕಿತ್ಸೆ ದೊರೆಯುವಂತೆ ಮಾಡಲು ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಪಟಾಕಿಗೆ ಆಕಸ್ಮಿಕ ಬೆಂಕಿ – ಕುರ್ಚಿ ಸಮೇತ ಹಾರಿ ಬಿದ್ದು ಯುವಕ ಸಾವು