Tag: Doddaballapur Police Station

  • ನಾಮಕರಣಕ್ಕೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿ – ಮಗು ಸೇರಿ ಮೂವರಿಗೆ ತೀವ್ರ ಗಾಯ

    ನಾಮಕರಣಕ್ಕೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿ – ಮಗು ಸೇರಿ ಮೂವರಿಗೆ ತೀವ್ರ ಗಾಯ

    ದೊಡ್ಡಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ ಪಲ್ಟಿಯಾಗಿದ್ದು, ಮಗು ಸೇರಿ ಮೂವರು ತೀವ್ರ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ಮೇಷ್ಟ್ರು ಮನೆ ಕ್ರಾಸ್‌ನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

    ತುಮಕೂರು (Tumkur) ಜಿಲ್ಲೆಯ ಶಿರಾದ (Sira) ಗಿಡ್ಡನಹಳ್ಳಿಯಿಂದ ಯಲಹಂಕದಲ್ಲಿ ನಡೆಯುತ್ತಿದ್ದ ನಾಮಕರಣ ಕಾರ್ಯಕ್ರಮಕ್ಕೆ ತೆರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ನಿಖರ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ: Champions Trophy 2025 | ಟಾಸ್‌ಗೆದ್ದ ಪಾಕ್‌ ಬ್ಯಾಟಿಂಗ್‌ ಆಯ್ಕೆ

    ಮಗು ಸೇರಿ ಮೂವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಬಸ್ಸಿನಲ್ಲಿ 25 ಮಂದಿ ಪ್ರಯಾಣಿಸುತ್ತಿದ್ದರು. ಗಾಯಾಳುಗಳನ್ನು ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಇವತ್ತೇ ಚುನಾವಣೆ ನಡೆದರೆ ಕಾಂಗ್ರೆಸ್‌ಗೆ ಕೇವಲ 20 ಸೀಟು ಬರುತ್ತದೆ – ಗೋವಿಂದ ಕಾರಜೋಳ

  • ಸಹೋದರ ಮೊಬೈಲ್ ಪಾಸ್‌ವರ್ಡ್ ಬದಲಾಯಿಸಿದ್ದಕ್ಕೆ ಯುವತಿ ಆತ್ಮಹತ್ಯೆ

    ಸಹೋದರ ಮೊಬೈಲ್ ಪಾಸ್‌ವರ್ಡ್ ಬದಲಾಯಿಸಿದ್ದಕ್ಕೆ ಯುವತಿ ಆತ್ಮಹತ್ಯೆ

    ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಮೊಬೈಲ್ (Mobile) ಗೀಳು ಎಲ್ಲ ವಯಸ್ಕರಲ್ಲೂ ಹೆಚ್ಚಾಗಿದೆ. ಯಾವುದೇ ವಿಷಯಕ್ಕೂ ಮೊಬೈಲ್ ತೆಗೆದು ನೋಡುವಂತಾಗಿದ್ದು, ನಮ್ಮ ಜೀವನದ ಒಂದು ಭಾಗವೇ ಆಗಿಬಿಟ್ಟಿದೆ. ಮೊಬೈಲ್ ಇಲ್ಲದ ದಿನವನ್ನು ಕಲ್ಪಿಸಿಕೊಳ್ಳೋದಕ್ಕೂ ಸಾಧ್ಯವಾಗದಷ್ಟು ಗೀಳು ಹೆಚ್ಚಾಗಿದೆ.

    ಇದೇ ರೀತಿ ಮೊಬೈಲ್ ಗೀಳು ಅತಿಯಾಗಿ ಅಂಟಿಸಿಕೊಂಡಿದ್ದ ಯುವತಿ, ತನ್ನ ಸಹೋದರ ಪಾಸ್‌ವರ್ಡ್ (Mobile Password) ಬದಲಾಯಿಸಿದ್ದಕ್ಕೆ ಮನನೊಂದು ಆತ್ಮಹತ್ಯೆ (Suicide) ಮಾಡಿಕೊಂಡಿರುವ ದೊಡ್ಡಬಳ್ಳಾಪುರ ನಗರದ ಗಾಣಿಗರಪೇಟೆಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಬೆಳಗಾವಿ ಲಾಕಪ್‌ಡೆತ್ ಕೇಸ್: ಪೊಲೀಸರಿಂದ್ಲೇ ಚಿತ್ರಹಿಂಸೆ – ಮೃತನ ಪುತ್ರಿ ಆರೋಪ

    ಏನಿದು ಘಟನೆ?
    ಯುವತಿ ರುಚಿತಾ (19) ಅತಿಯಾಗಿ ಮೊಬೈಲ್ ಬಳಸುತ್ತಿದ್ದರು. ಮೊಬೈಲ್ ಬಳಕೆಯಿಂದ ಬೇಸತ್ತಿದ್ದ ಯುವತಿಯ ತಮ್ಮ ಪಾಸ್‌ವರ್ಡ್ ಬದಲಾವಣೆ ಮಾಡಿದ್ದಾನೆ. ಇದರಿಂದ ಕೋಪಗೊಂಡ ಅಕ್ಕ ಮೊಬೈಲ್ ಪಾಸ್ ವರ್ಡ್ ಹೇಳುವಂತೆ ತಮ್ಮನಿಗೆ ಪಿಡಿಸಿದ್ದಳು. ಆದರೆ ಸಹೋದರ ಮೊಬೈಲ್ ಬಳಕೆ ಮಾಡಬೇಡ ಎಂದು ಸಲಹೆ ನೀಡುತ್ತಲೇ ಇದ್ದ. ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿತ್ತು. ಅಷ್ಟಾದರೂ ತಮ್ಮ ಪಾರ್ಸ್ವರ್ಡ್ ಹೇಳದೇ ಇದ್ದರಿಂದ ಮೊಬೈಲ್‌ಗಾಗಿ ಹಠಹಿಡಿದಿದ್ದ ಯುವತಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ (Doddaballapur Police Station) ಪ್ರಕರಣ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]