Tag: dollu

  • ಮೆಕ್ಸಿಕೋ ಚಿತ್ರೋತ್ಸವದಲ್ಲಿ ಪವನ್ ಒಡೆಯರ್ ಚಿತ್ರ ಪ್ರದರ್ಶನ

    ಮೆಕ್ಸಿಕೋ ಚಿತ್ರೋತ್ಸವದಲ್ಲಿ ಪವನ್ ಒಡೆಯರ್ ಚಿತ್ರ ಪ್ರದರ್ಶನ

    ವನ್ ಒಡೆಯರ್ (Pavan Wadeyar) ನಿರ್ಮಾಣದ ಮೊದಲ ಸಿನಿಮಾ ‘ಡೊಳ್ಳು’ (Dollu) ಈಗಾಗಲೇ ಪ್ರಪಂಚ ಪರ್ಯಟನೆ ಮಾಡಿ ಬಂದಿದೆ. ಪ್ರತಿಷ್ಟಿತ ಬರ್ಲಿನ್ ಅಂತಾರಾಷ್ಟ್ರೀಯ ಚಿತ್ರೋತ್ಸವ, ಅಂತಾರಾಷ್ಟ್ರೀಯ ಢಾಕಾ  ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿರುವ ಡೊಳ್ಳು, ಎರಡು ರಾಷ್ಟ್ರಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಇದೀಗ ಈ ಚಿತ್ರ ಮತ್ತೊಂದು ಅಂತರಾಷ್ಟ್ರೀಯ ಮನ್ನಣೆಗೆ ಭಾಜನವಾಗಿದೆ.

    ಡೊಳ್ಳು ಸಿನಿಮಾ ಮೆಕ್ಸಿಕೋದಲ್ಲಿ ನಡೆಯಲಿರುವ ಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣಲಿದೆ. ಆಸ್ಕರ್ ಗೆದ್ದಿರುವ ಎಸ್. ಎಸ್. ರಾಜಮೌಳಿಯವರ RRR, ದೀಪಿಕಾ ಪಡುಕೋಣೆ ಹಾಗೂ ರಣ್ಬೀರ್ ಸಿಂಗ್ ನಟನೆಯ ಬಾಜಿರಾವ್ ಮಸ್ತಾನಿ, ಸೂರ್ಯ ನಟನೆಯ ಸೂರರೈ ಪೊಟ್ರು, ಅಜಯ್ ದೇವಗನ್ ನಟನೆಯ ತಾನಜಿ ಚಿತ್ರಗಳ ಜೊತೆಗೆ ನಮ್ಮ ಕನ್ನಡದ ಹೆಮ್ಮೆಯ ಡೊಳ್ಳು ಸಿನಿಮಾ ಪ್ರದರ್ಶನ ಕಾಣುತ್ತಿರುವುದು ಖುಷಿ ಜೊತೆಗೆ ಹೆಮ್ಮೆಯ ವಿಷಯ.

    ಡೊಳ್ಳು ಸಿನಿಮಾ ಹೆಸರೇ ಹೇಳುವಂತೆ ಡೊಳ್ಳು ಕುಣಿತದ ಸುತ್ತಮುತ್ತ ಹಾಗೂ ನಮ್ಮ ನೆಲದ ಜಾನಪದ ಸೊಗಡನ್ನು ಮುಖ್ಯವಾಗಿ ಇರಿಸಿ ಹೆಣೆದ ಕಥೆ ಇದಾಗಿದೆ. ಸಾಗರ್ ಪುರಾಣಿಕ್ (Sagar Puranik) ನಿರ್ದೇಶನ ಮೂಡಿಬಂದಿದ್ದ ಈ ಚಿತ್ರದಲ್ಲಿ ಕಾರ್ತಿಕ್ ಮಹೇಶ್ (Karthik Mahesh), ನಿಧಿ ಹೆಗ್ಡೆ ಜೋಡಿಯಾಗಿ ನಟಿಸಿದ್ದಾರೆ. ಬಾಬು ಹಿರಣ್ಣಯ್ಯ, ಚಂದ್ರ ಮಯೂರ್, ಶರಣ್ಯ ಸುರೇಶ್ ಸೇರಿದಂತೆ ಹಲವು ಮಂದಿ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

    ಸ್ಯಾಂಡಲ್ವುಡ್ನಲ್ಲಿ ಹಲವು ಯಶಸ್ವಿ ಸಿನಿಮಾಗಳನ್ನು ನೀಡಿರುವ ನಿರ್ದೇಶಕ ಪವನ್ ಒಡೆಯರ್ ತಮ್ಮದೇ ಹೋಂ ಬ್ಯಾನರ್ ಒಡೆಯರ್ ಮೂವೀಸ್ನಲ್ಲಿ ಪತ್ನಿ ಅಪೇಕ್ಷಾ ಜೊತೆಗೂಡಿ ಡೊಳ್ಳು ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.

    ಪ್ರತಿಭಾವಂತ ನಿರ್ದೇಶಕರಾಗಿರುವ ಪವನ್ ಒಡೆಯರ್, ಗೂಗ್ಲಿ, ರಣವಿಕ್ರಮ, ನಟ ಸಾರ್ವಭೌಮ ಸೇರಿದಂತೆ ಹಲವು ಹಿಟ್ ಸಿನಿಮಾಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ನಿರ್ದೇಶನ, ಬರವಣಿಗೆ ಜೊತೆಗೆ ಸಿನಿಮಾ ನಿರ್ಮಾಣ ಕೂಡ ಆರಂಭಿಸಿದ್ದು, ನಿರ್ಮಾಣ ಮಾಡಿದ ಮೊದಲ ಚಿತ್ರದ ಮೂಲಕವೇ ಸಂಚಲನ ಸೃಷ್ಟಿಸಿದ್ದಾರೆ.

  • ‘ಆಸ್ಕರ್’ ಗಾಗಿ ಭಾರತದಿಂದ ಕಳುಹಿಸುವ ಸಿನಿಮಾ ಆಯ್ಕೆ ಸಮಿತಿಯಲ್ಲಿ ನಿರ್ದೇಶಕ ಪವನ್ ಒಡೆಯರ್

    ‘ಆಸ್ಕರ್’ ಗಾಗಿ ಭಾರತದಿಂದ ಕಳುಹಿಸುವ ಸಿನಿಮಾ ಆಯ್ಕೆ ಸಮಿತಿಯಲ್ಲಿ ನಿರ್ದೇಶಕ ಪವನ್ ಒಡೆಯರ್

    ಪ್ರತಿಷ್ಠಿತ ಆಸ್ಕರ್ (Oscar) ಅವಾರ್ಡ್ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ಬಾರಿ ಆಸ್ಕರ್ ಪ್ರಶಸ್ತಿ ಯಾರ ಯಾರ ಪಾಲಾಗುತ್ತೆ ಎಂಬ ಲೆಕ್ಕಾಚಾರಗಳು ಜೋರಾಗಿದೆ. ಭಾರತದಿಂದ ಬೇರೆ ಬೇರೆ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿಗೆ ಹಲವಾರು ಸಿನಿಮಾಗಳು ನಾಮ ನಿರ್ದೇಶನವಾಗಿ ಗಮನ ಸೆಳೆಯುತ್ತಿವೆ. ಸದ್ಯ ಲೇಟೆಸ್ಟ್ ಸಮಾಚಾರವೇನಪ್ಪ ಅಂದ್ರೆ ಆಸ್ಕರ್ ಅವಾರ್ಡ್ ಜ್ಯೂರಿ (Jury) ಸದಸ್ಯರಾಗಿ ಕನ್ನಡದ ನಿರ್ದೇಶಕರು ಪಾಲ್ಗೊಂಡಿರೋದು. ಹೌದು, ಕನ್ನಡದ ಪ್ರತಿಭಾವಂತ ನಿರ್ದೇಶಕ ಹಾಗೂ ನಿರ್ಮಾಪಕ ಪವನ್ ಒಡೆಯರ್ ಆಸ್ಕರ್ ಅವಾರ್ಡ್ ಸೆಲೆಕ್ಷನ್ ಕಮಿಟಿಯ ಸದಸ್ಯರಾಗಿ ಭಾಗಿಯಾಗಿದ್ದಾರೆ. ಈ ಖುಷಿಯ ಕ್ಷಣವನ್ನು ಪವನ್ ಒಡೆಯರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

    ಈ ಬಗ್ಗೆ ಮಾತನಾಡಿರುವ ಪವನ್ ಒಡೆಯರ್ (Pawan Wodeyar) ಆಸ್ಕರ್ ಕಮಿಟಿಯಿಂದ ನನಗೆ ಕರೆ ಬರುತ್ತದೆಂದು ನಾನು ನಿರೀಕ್ಷೆ ಕೂಡ ಮಾಡಿರಲಿಲ್ಲ. ಆರಂಭದಲ್ಲಿ ನನಗೆ ನಂಬಲೂ ಸಾಧ್ಯವಾಗಲಿಲ್ಲ. ನನ್ನ ಸಿನಿಮಾ ಕೆಲಸಗಳನ್ನು ಗುರುತಿಸಿ ಜ್ಯೂರಿಯಾಗಿ ಭಾಗವಹಿಸಲು ಆಹ್ವಾನ ನೀಡಿದ್ದು ಬಹಳ ಸಾರ್ಥಕತೆ ನೀಡಿದೆ. ನನ್ನ ನಿರ್ಮಾಣದ ‘ಡೊಳ್ಳು’ ಸಿನಿಮಾ ಇಂತಹದ್ದೊಂದು ಪ್ರತಿಷ್ಠಿತ ವೇದಿಕೆಯನ್ನು ನನಗೆ ಕಲ್ಪಿಸಿಕೊಟ್ಟಿದೆ. ಇದು ಬಹಳ ದೊಡ್ಡ ಗೌರವ ಎಂದೇ ನಾನು ಭಾವಿಸುತ್ತೇನೆ. 17 ಜನರ ತಂಡದಲ್ಲಿ ಕನ್ನಡ ಚಿತ್ರರಂಗದಿಂದ ನಾನೂ ಒಬ್ಬ ಜ್ಯೂರಿಯಾಗಿ ಭಾಗವಹಿಸಿದ್ದು ಬಹಳ ಸಂತಸ ತಂದಿದೆ ಎಂದು ಪವನ್ ಒಡೆಯರ್ ಹರುಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಆಸ್ಪತ್ರೆ ದಾಖಲು: ಅಭಿಮಾನಿಗಳಿಗೆ ಹೆಚ್ಚಿದೆ ಆತಂಕ

    ಹಿಂದಿ, ಬೆಂಗಾಲಿ, ತೆಲುಗು, ತಮಿಳು, ಗುಜರಾತಿ, ಮಲಯಾಳಂ ಭಾಷೆಗಳಿಂದ ಸಿನಿಮಾಗಳು ಆಸ್ಕರ್ ಗೆ ಆಯ್ಕೆಯಾಗಿದ್ವು. ನಮ್ಮ ಭಾಷೆಯಿಂದ ಯಾವ ಸಿನಿಮಾಗಳು ಆಸ್ಕರ್ ಗೆ ಆಯ್ಕೆ ಆಗಿಲ್ಲದಿರುವುದು ಬೇಸರದ ಸಂಗತಿ. ಮುಂದಿನ ದಿನಗಳಲ್ಲಿ ಖಂಡಿತ ನಮ್ಮ ಸಿನಿಮಾಗಳು ಆಸ್ಕರ್ ಗೆ ನಾಮ ನಿರ್ದೇಶನವಾಗಲಿವೆ ಎಂದು ಭರವಸೆಯ ಮಾತುಗಳನ್ನಾಡಿದ್ದಾರೆ ಪವನ್ ಒಡೆಯರ್. ಪವನ್ ಒಡೆಯರ್ ನಿರ್ಮಾಣದಲ್ಲಿ ಮೂಡಿ ಬಂದಿರುವ ‘ಡೊಳ್ಳು’ (Dollu) ಸಿನಿಮಾ ಜನ ಮೆಚ್ಚುಗೆ ಗಳಿಸಿಕೊಂಡಿದ್ದು,  ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದೆ. ಸದ್ಯ ಪವನ್ ಒಡೆಯರ್ ನಿರ್ದೇಶನದ ‘ರೇಮೋ’ ಸಿನಿಮಾ ಬಿಡುಗಡೆಯಾಗಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಡೊಳ್ಳು ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತ ಪಡಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ

    ಡೊಳ್ಳು ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತ ಪಡಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ

    ನಾನಾ ಕಾರಣಗಳಿಂದ ಚಿತ್ರಪ್ರೇಮಿಗಳನ್ನು ಆವರಿಸಿಕೊಳ್ಳುತ್ತಿರುವ ಡೊಳ್ಳು ಸಿನಿಮಾವನ್ನು ವಿಪಕ್ಷ ನಾಯಕ,  ಸಿದ್ದರಾಮಯ್ಯ ನಿನ್ನೆ ಬೆಂಗಳೂರಿನ ಒರಾಯನ್ ಮಾಲ್ ನಲ್ಲಿ ಕಣ್ತುಂಬಿಕೊಂಡು, ಚಿತ್ರದ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜಕೀಯದ ಕೆಲಸದ ನಡುವೆಯೂ ಬಿಡುವು ಮಾಡಿಕೊಂಡು ಸಿನಿಮಾ ವೀಕ್ಷಣೆ ಅವರು, ಸಿನಿಮಾ ತುಂಬಾ ಚೆನ್ನಾಗಿದೆ. ಗ್ರಾಮೀಣ ಪ್ರದೇಶದಲ್ಲಿರುವ ಜನಪದ ಕಲೆಯನ್ನು ಬೆಳೆಸಬೇಕು, ಉಳಿಯಬೇಕು ಎಂಬ ನಿಟ್ಟಿನಲ್ಲಿ ಸಿನಿಮಾ ಮಾಡಿದ್ದಾರೆ. ಕಲೆಗೆ ಜಾತಿ ಧರ್ಮ ಲಿಂಗಭೇದ ಯಾವುದು ಇರುವುದಿಲ್ಲ. ನಾಡಿನ ಸಾಂಪ್ರದಾಯಿಕ ಡೊಳ್ಳು ಬಾರಿಸುವ ಕಲೆಯನ್ನು ಪ್ರಧಾನವಾಗಿರಿಸಿಕೊಂಡು ನಿರ್ಮಿಸಿದ ಈ ಸಿನಿಮಾ ಅತ್ಯಂತ ಸೊಗಸಾಗಿ ಮೂಡಿಬಂದಿದೆ. ಚಿತ್ರ ತಂಡಕ್ಕೆ ನನ್ನ ಶುಭ ಹಾರೈಕೆಗಳು.  ಇಂತಹ ಸಿನಿಮಾಗಳು ಬರಬೇಕು. ಇಡೀ ತಂಡ ಒಳ್ಳೆದಾಗಲಿ ಎಂದು ಶುಭ ಹಾರೈಸಿದರು.

    ತನ್ನ ವಿಭಿನ್ನ ಕಂಟೆಂಟ್ ಜೊತೆಗೆ ರಾಷ್ಟ್ರಪ್ರಶಸ್ತಿಗೂ ಭಜನವಾಗಿರುವ, ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಮೆಚ್ಚುಗೆ ಪಡೆದಿರುವ ಡೊಳ್ಳು ಸಿನಿಮಾವನ್ನು ರಾಷ್ಟ್ರಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ನಿರ್ದೆಶನ ಮಾಡಿದ್ದು, ಕಾರ್ತಿಕ್ ಮಹೇಶ್ ಮತ್ತು ನಿಧಿ ಹೆಗಡೆ ಜೊತೆಗೆ ಬಾಬು ಹಿರಣ್ಣಯ್ಯ, ಚಂದ್ರ ಮಯೂರ್, ಶರಣ್ಯ ಸುರೇಶ್​ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಇದನ್ನೂ ಓದಿ:ಮೂರನೇ ವಾರ ನಾಮಿನೇಷನ್‌ ಸ್ಟಾರ್ಟ್‌: ಉದಯ್‌ ಸೂರ್ಯಗೆ ಮನೆಯಿಂದ ಗೇಟ್‌ ಪಾಸ್?

    ನಾಡಿನ ಜಾನಪದ ಕಲೆಯನ್ನು ಜಗತ್ತಿನ ಮುಂದೆ ತೆರೆದಿಡುವಂತಹ ಈ ಸಿನಿಮಾವನ್ನು ಒಡೆಯರ್ ಮೂವೀಸ್ ಬ್ಯಾನರ್ ನಡಿ ಪವನ್ ಒಡೆಯರ್, ಪತ್ನಿ ಅಪೇಕ್ಷಾ ಜೊತೆಗೂಡಿ ನಿರ್ಮಾಣ ಮಾಡಿದ್ದಾರೆ. ಆಗಸ್ಟ್​ 26ರಂದು ‘ಡೊಳ್ಳು’ ಚಿತ್ರ ರಾಜ್ಯಾದ್ಯಂತ ರಿಲೀಸ್​ ಆಗಲಿದೆ. ಸಂಭಾಷಣೆ ಮತ್ತು ಚಿತ್ರಕಥೆಯನ್ನು ಶ್ರೀನಿಧಿ ಬರೆದಿದ್ದಾರೆ. ಅನಂತ್ ಕಾಮತ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಅಭಿಲಾಷ್ ಕಲಾಥಿ ಛಾಯಾಗ್ರಹಣ ಈ ಚಿತ್ರಕ್ಕಿದೆ. ಈ ಚಿತ್ರವನ್ನು ನೋಡುವಂತೆ ರಾಜ್ಯಪಾಲರಾದ ಥಾವರ್ ಚಂದ್​ ಗೆಹ್ಲೋಟ್ ಅವರಿಗೂ ಚಿತ್ರತಂಡ ಇತ್ತೀಚೆಗೆ ಆಮಂತ್ರಣ ನೀಡಿತ್ತು. ಶೀರ್ಘದಲ್ಲಿಯೇ ರಾಜ್ಯಪಾಲರು ಸಿನಿಮಾ ವೀಕ್ಷಣೆ ಮಾಡಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಡೊಳ್ಳು ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ಕರ್ನಾಟಕದ ಕಲೆಗೆ ಸಂದ ಗೌರವ : ಪವನ್ ಒಡೆಯರ್

    ಡೊಳ್ಳು ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ಕರ್ನಾಟಕದ ಕಲೆಗೆ ಸಂದ ಗೌರವ : ಪವನ್ ಒಡೆಯರ್

    68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಈ ಬಾರಿ ಪವನ್ ಒಡೆಯರ್ ನಿರ್ಮಾಣದಲ್ಲಿ ಮೂಡಿ ಬಂದ, ಸಾಗರ್ ಪುರಾಣಿಕ್ ನಿರ್ದೇಶನದ ಡೊಳ್ಳು ಚಿತ್ರಕ್ಕೆ ಎರಡು ಪ್ರಶಸ್ತಿಗಳು ಸಂದಿವೆ. ಈ ಸಂಭ್ರಮವನ್ನು ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಹಂಚಿಕೊಂಡ ನಿರ್ಮಾಪಕ ಪವನ್ ಒಡೆಯರ್, ರಾಷ್ಟ್ರ ಪ್ರಶಸ್ತಿಯು ಕರ್ನಾಟಕ ಕಲೆಗೆ ಸಂದ ಗೌರವ ಎಂದರು. ಈ ಸಿನಿಮಾವನ್ನು ತಾವು ದುಡ್ಡಿಗಾಗಿ ನಿರ್ಮಾಣ ಮಾಡಲಿಲ್ಲ ಎಂದಿದ್ದಾರೆ.

    ಡೊಳ್ಳು ಸಿನಿಮಾದ ಸ್ಕ್ರಿಪ್ಟ್ ಕೇಳಿದ ತಕ್ಷಣವೇ ನಾನೇ ಈ ಚಿತ್ರವನ್ನು ನಿರ್ಮಾಣ ಮಾಡಬೇಕು ಎಂದುಕೊಂಡೆ. ಇದು ಹಣ ಮಾಡುವುದಕ್ಕಾಗಿ ನಿರ್ಮಾಣ ಮಾಡಿದ ಸಿನಿಮಾವಲ್ಲ. ನನ್ನ ನಾಡಿಗೆ, ನನ್ನ ನಾಡ ಕಲೆಗೆ ನಮ್ಮಿಂದ ಋಣ ಸಂದಾಯ ಅಂದುಕೊಂಡು ಮಾಡಿದ ಚಿತ್ರ. ನನ್ನ ಸಂಸ್ಥೆಯಲ್ಲಿ ನಿರ್ಮಾಣವಾದ ಮೊದಲ ಸಿನಿಮಾ. ಈಗಾಗಲೇ ಸಾಕಷ್ಟು ಪ್ರಶಸ್ತಿಗಳನ್ನು ಡೊಳ್ಳು ಪಡೆದುಕೊಂಡಿದೆ. ಇದೀಗ ರಾಷ್ಟ್ರ ಪ್ರಶಸ್ತಿಯನ್ನೂ ಪಡೆದಿದೆ. ಇದು ಸಾರ್ಥಕ ಭಾವ ಎನ್ನುತ್ತಾರೆ ಪವನ್ ಒಡೆಯರ್‍. ಇದನ್ನೂ ಓದಿ:`ಮಾರ್ಟಿನ್’ ಆ್ಯಕ್ಷನ್ ಸೀನ್‌ಗಾಗಿ ಧ್ರುವಾ ಸರ್ಜಾ- ಎ.ಪಿ ಅರ್ಜುನ್ ಭರ್ಜರಿ ತಯಾರಿ

    ಈ ಬಾರಿ ಕನ್ನಡ ಸಿನಿಮಾಗಳಿಗೆ ಹಲವು ಪ್ರಶಸ್ತಿಗಳು ಸಂದಿದ್ದು, ಅತ್ಯುತ್ತಮ ಪರಿಸರ ಕಾಳಜಿ ಚಿತ್ರವಾಗಿ ಕೃಪಾಕರ್ ನಿರ್ದೇಶನದ, ಸಂಚಾರಿ ವಿಜಯ್ ನಟನೆಯ ‘ತಲೆದಂಡ’ ಚಿತ್ರ ರಾಷ್ಟ್ರೀಯ ಪ್ರಶಸ್ತಿ ದೊರೆತರೆ, ಲೋಕೇಷನ್ ಸೌಂಡ್ ಡಿಸೈನಿಂಗ್ ವಿಭಾಗದಲ್ಲಿ ಡೊಳ್ಳು ಸಿನಿಮಾ ಪ್ರಶಸ್ತಿ ಪಡೆದುಕೊಂಡಿದೆ. ಅತ್ಯುತ್ತಮ ಪ್ರಾದೇಶಿಕ ಚಿತ್ರ ಡೊಳ್ಳು ರಾಷ್ಟ್ರೀಯ ಪ್ರಶಸ್ತಿ ಪಡೆದುಕೊಂಡರೆ, ಅತ್ಯುತ್ತಮ ಪ್ರಾದೇಶಿಕ ತುಳು ಸಿನಿಮಾ ಪ್ರಶಸ್ತಿಯು ಸಂತೋಷ್ ನಿರ್ದೇಶನದ ‘ಜೀಟಿಗೆ’ ದೊರೆತಿದೆ. ಕಲೆ ಮತ್ತು ಸಾಂಸ್ಕೃತಿಕ ಚಿತ್ರವಾಗಿ ಗಿರೀಶ್ ಕಾಸರವಳ್ಳಿ ನಿರ್ದೇಶನ ಮಾಡಿರುವ ‘ನಾದದ ನವನೀತ’ ಚಿತ್ರಕ್ಕೆ ಪ್ರಶಸ್ತಿ ಸಂದಿದೆ.

    Live Tv
    [brid partner=56869869 player=32851 video=960834 autoplay=true]

  • Breaking- 68ನೇ ರಾಷ್ಟ್ರ ಚಲನಚಿತ್ರ ಪ್ರಶಸ್ತಿ : ಡೊಳ್ಳು, ತಲೆದಂಡ, ನಾದದ ನವನೀತ ಸಿನಿಮಾಗಳಿಗೆ ರಾಷ್ಟ್ರ ಗರಿ

    Breaking- 68ನೇ ರಾಷ್ಟ್ರ ಚಲನಚಿತ್ರ ಪ್ರಶಸ್ತಿ : ಡೊಳ್ಳು, ತಲೆದಂಡ, ನಾದದ ನವನೀತ ಸಿನಿಮಾಗಳಿಗೆ ರಾಷ್ಟ್ರ ಗರಿ

    ಇಂದು ನವದೆಹಲಿಯಲ್ಲಿ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ಕನ್ನಡದ ಸಿನಿಮಾಗಳಿಗೂ ಹಲವು ಪ್ರಶಸ್ತಿಗಳು ಸಂದಿವೆ. ಈಗಾಗಲೇ ಸಾಕಷ್ಟು ಪ್ರಶಸ್ತಿಗಳನ್ನು ಬಾಚಿಕೊಂಡಿರುವ ಸಾಗರ್ ಪುರಾಣಿಕ್ ನಿರ್ದೇಶನದ, ಪವನ್ ಒಡೆಯರ್ ನಿರ್ಮಾಣದ ಡೊಳ್ಳು ಚಿತ್ರಕ್ಕೆ ಎರಡು ಪ್ರಶಸ್ತಿಗಳು ಸಂದಿದ್ದು, ಸಂಚಾರಿ ವಿಜಯ್ ನಟನೆಯ ‘ತಲೆದಂಡ’ ಸಿನಿಮಾಗೂ ರಾಷ್ಟ್ರ ಪ್ರಶಸ್ತಿ ಸಂದಿದೆ. ಅಲ್ಲದೇ, ಗಿರೀಶ್ ಕಾಸರವಳ್ಳಿ ನಿರ್ದೇಶನದ, ವಾರ್ತಾ ಇಲಾಖೆ ನಿರ್ಮಿಸಿರುವ ಡಾ.ಪಿ.ಟಿ ವೆಂಕೇಶ್ ಕುಮಾರ್ ಬದುಕಿನ ‘ನಾದದ ನವನೀತ’ ಚಿತ್ರಕ್ಕೂ ರಾಷ್ಟ್ರೀಯ ಪ್ರಶಸ್ತಿ ಸಂದಿದೆ.

    ಅತ್ಯುತ್ತಮ ಪರಿಸರ ಕಾಳಜಿ ಚಿತ್ರವಾಗಿ ಕೃಪಾಕರ್ ನಿರ್ದೇಶನದ, ಸಂಚಾರಿ ವಿಜಯ್ ನಟನೆಯ ‘ತಲೆದಂಡ’ ಚಿತ್ರ ರಾಷ್ಟ್ರೀಯ ಪ್ರಶಸ್ತಿ ದೊರೆತರೆ, ಲೋಕೇಷನ್ ಸೌಂಡ್ ಡಿಸೈನಿಂಗ್ ವಿಭಾಗದಲ್ಲಿ ಡೊಳ್ಳು ಸಿನಿಮಾ ಪ್ರಶಸ್ತಿ ಪಡೆದುಕೊಂಡಿದೆ. ಅತ್ಯುತ್ತಮ ಪ್ರಾದೇಶಿಕ ಚಿತ್ರ ಡೊಳ್ಳು ರಾಷ್ಟ್ರೀಯ ಪ್ರಶಸ್ತಿ ಪಡೆದುಕೊಂಡರೆ, ಅತ್ಯುತ್ತಮ ಪ್ರಾದೇಶಿಕ ತುಳು ಸಿನಿಮಾ ಪ್ರಶಸ್ತಿಯು ಸಂತೋಷ್ ನಿರ್ದೇಶನದ ‘ಜೀಟಿಗೆ’ ದೊರೆತಿದೆ. ಕಲೆ ಮತ್ತು ಸಾಂಸ್ಕೃತಿಕ ಚಿತ್ರವಾಗಿ ಗಿರೀಶ್ ಕಾಸರವಳ್ಳಿ ನಿರ್ದೇಶನ ಮಾಡಿರುವ ‘ನಾದದ ನವನೀತ’ ಚಿತ್ರಕ್ಕೆ ಪ್ರಶಸ್ತಿ ಸಂದಿದೆ. ಇದನ್ನೂ ಓದಿ:`ಮಾರ್ಟಿನ್’ ಆ್ಯಕ್ಷನ್ ಸೀನ್‌ಗಾಗಿ ಧ್ರುವಾ ಸರ್ಜಾ- ಎ.ಪಿ ಅರ್ಜುನ್ ಭರ್ಜರಿ ತಯಾರಿ

    ಅತ್ಯುತ್ತಮ ಪರಿಸರ ಕಾಳಜಿ ಚಿತ್ರ : ತಲೆದಂಡ

    ಅತ್ಯುತ್ತಮ ಲೋಕೆಷನ್ ಸೌಂಡ್ ಡಿಸೈನ್ ಚಿತ್ರ : ಡೊಳ್ಳು

    ಅತ್ಯುತ್ತಮ ಕಲೆ ಮತ್ತು ಸಾಂಸ್ಕೃತಿಕ ಚಿತ್ರ : ನಾದದ ನವನೀತ

    ಅತ್ಯುತ್ತಮ ಪ್ರಾದೇಶಿಕ ಸಿನಿಮಾ : ಡೊಳ್ಳು

    ಅತ್ಯುತ್ತಮ ಪ್ರಾದೇಶಿಕ ತುಳು ಸಿನಿಮಾ : ಜೀಟಿಗೆ

    Live Tv
    [brid partner=56869869 player=32851 video=960834 autoplay=true]

  • ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದ ‘ಡೊಳ್ಳು’ ಸಿನಿಮಾದ ಟೀಸರ್ ರಿಲೀಸ್

    ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದ ‘ಡೊಳ್ಳು’ ಸಿನಿಮಾದ ಟೀಸರ್ ರಿಲೀಸ್

    ಗಾಗಲೇ ಅನೇಕ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡಿರುವ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಬಾಚಿಕೊಂಡಿರುವ ಡೊಳ್ಳು ಸಿನಿಮಾದ ಟೀಸರ್ ಇಂದು ರಿಲೀಸ್ ಆಗಿದೆ. ಪವನ್ ಒಡೆಯರ್ ನಿರ್ಮಾಣದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಾಗರ್ ಪುರಾಣಿಕ್ ಈ ಚಿತ್ರದ ನಿರ್ದೇಶಕ.ಈಗಾಗಲೇ ಹತ್ತಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದ ಹೆಗ್ಗಳಿಕೆ ಈ ಸಿನಿಮಾದ್ದು.

    ಜನಪದ ಕಲೆ ಮತ್ತು ಕಲಾವಿದರು ಗ್ರಾಮೀಣ ಭಾರತದ ತಾಯಿ ಬೇರುಗಳಿದ್ದಂತೆ. ಜನಜೀವನ ಮತ್ತು ಉನ್ನತ ಸಾಂಸ್ಕೃತಿಕ ಪರಂಪರೆ ಬಿಂಬಿಸುವ ಜನಪದ ಕಲೆಗಳು ಗ್ರಾಮೀಣ ಭಾರತದ ಜೀವಾಳ ಎಂಬ ಸಾರಂಶದೊಂದಿಗೆ ಹಳ್ಳಿಯಲ್ಲಿ ತೆರೆದುಕೊಳ್ಳುವ ಟೀಸರ್ ನಲ್ಲಿ ಡೊಳ್ಳಿನ ಮಹತ್ವದ ಬಗ್ಗೆ ತಿಳಿಸಲಾಗಿದೆ. ಕೈಲಾಸದಲ್ಲಿ ಕುಳಿತಿರುವ ಶಿವಪ್ಪನನ್ನು ಒಲಿಸಿಕೊಳ್ಳುವ ಭಕ್ತಿ ಮಾರ್ಗ ಕೂಡ ಡೊಳ್ಳು ಅಂತಾ ನಂಬಿರುವ ಹಳ್ಳಿ ಮಂದಿ ಸುತ್ತಾ, ಜನಪದ ಕಲೆ ಡೊಳ್ಳಿನ ಸುತ್ತಾ ಟೀಸರ್ ನ್ನು ಕಟ್ಟಿಕೊಡಲಾಗಿದೆ.

    ಡೊಳ್ಳು ಕುಣಿತ ಕಂಟೆಂಟ್ ಹೊಂದಿರುವ ಈ ಸಿನ್ಮಾ ಈಗಾಗ್ಲೇ ಹಲವು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಅಲ್ಲದೇ ಹಲವು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿಯೂ ಪ್ರದರ್ಶನಗೊಂಡಿದೆ. ಗೋವಿಂದಾಯ ನಮಃ, ಗೂಗ್ಲಿ, ರಣ ವಿಕ್ರಮ, ಜೆಸ್ಸಿ, ನಟರಾಜ ಸರ್ವೀಸ್ ಮತ್ತು ನಟ ಸಾರ್ವಭೌಮ ಸಿನಿಮಾಗಳನ್ನು ನಿರ್ದೇಶಿಸಿರುವ ಪವನ್ ಒಡೆಯರ್, ತಮ್ಮದೇ ಒಡೆಯರ್ ಮೂವಿಸ್’ ನಿರ್ಮಾಣ ಸಂಸ್ಥೆಯಡಿ ಡೊಳ್ಳು ಚಿತ್ರ ನಿರ್ಮಾಣ ಮಾಡಿದ್ದಾರೆ. ಇದನ್ನೂ ಓದಿ : ಜೈ ಶ್ರೀರಾಮ್ ಎನ್ನುತ್ತಾ ಮುಸ್ಲಿಮರನ್ನು ಹತ್ಯೆ ಮಾಡುವುದು, ಕಾಶ್ಮೀರ ಪಂಡಿತರ ಹತ್ಯೆಗೆ ಸಮ: ಸಾಯಿ ಪಲ್ಲವಿ ವೀಡಿಯೋ ವೈರಲ್

    ಮಹಾನ್ ಹುತಾತ್ಮ ಕಿರುಚಿತ್ರದ ಸಾರಥಿ ರಾಷ್ಟ್ರ ಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಡೊಳ್ಳು ಸಿನಿಮಾದಲ್ಲಿ . ಕಿರುತೆರೆ ನಟ ಕಾರ್ತಿಕ್ ಮಹೇಶ್ ನಾಯಕನಾಗಿ, ನಿಧಿ ಹೆಗ್ಡೆ ನಾಯಕಿ ಪಾತ್ರ ನಿರ್ವಹಿಸಲಿದ್ದಾಪರೆ. ಉಳಿದಂತೆ ಬಾಬು ಹಿರಣ್ಣಯ್ಯ, ಚಂದ್ರ ಮಯೂರ್ ಮತ್ತು ಶರಣ್ ಸುರೇಶ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಶ್ರೀನಿಧಿ ಡಿಎಸ್ ಚಿತ್ರಕಥೆ ಬರೆದಿದ್ದು, ಅನಂತ್ ಕಾಮತ್ ಸಂಗೀತ ಸಂಯೋಜಿಸಿದ್ದಾರೆ. ಅಭಿಲಾಸ್ ಕಲಾಥಿ ಛಾಯಾಗ್ರಹಣ, ಬಿಎಸ್ ಕೆಂಪರಾಜು ಸಂಕಲನವಿದೆ.

    Live Tv

  • ಡೊಳ್ಳು ಚಿತ್ರಕ್ಕೆ ಪ್ರಶಸ್ತಿಗಳ ಸುರಿಮಳೆ : ದಾಖಲೆಯ ರೀತಿಯಲ್ಲಿ ಪ್ರಶಸ್ತಿ ಪಡೆದ ಪವನ್ ಒಡೆಯರ್

    ಡೊಳ್ಳು ಚಿತ್ರಕ್ಕೆ ಪ್ರಶಸ್ತಿಗಳ ಸುರಿಮಳೆ : ದಾಖಲೆಯ ರೀತಿಯಲ್ಲಿ ಪ್ರಶಸ್ತಿ ಪಡೆದ ಪವನ್ ಒಡೆಯರ್

    ಲವು ಹಿಟ್ ಸಿನಿಮಾಗಳನ್ನು ಕೊಟ್ಟಿರುವ ನಿರ್ದೇಶಕ ಪವನ್ ಒಡೆಯರ್, ತಮ್ಮದೇ ಒಡೆಯರ್ ಮೂವೀಸ್ ಚೊಚ್ಚಲ ಬಾರಿಗೆ ನಿರ್ಮಾಣ ಮಾಡಿರುವ ಸಿನಿಮಾ ಡೊಳ್ಳು. ಡೊಳ್ಳು ಕುಣಿತದ ಸುತ್ತ ಎಣೆದಿರುವ ಈ ಚಿತ್ರಕ್ಕೆ ಪ್ರಶಸ್ತಿಗಳ ಸುರಿಮಳೆಯೇ ಹರಿದು ಬಂದಿದೆ. ಹಲವು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಬಾಚಿಕೊಂಡಿರುವ ಡೊಳ್ಳು ಸಿನಿಮಾ ಹಲವು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು ಮೆಚ್ಚುಗೆ ಪಡೆದುಕೊಂಡಿದೆ. ಇಷ್ಟೆಲ್ಲಾ ಯಶಸ್ಸಿಗೆ ಕಾರಣದವರಿಗೆ ಇಡೀ ಚಿತ್ರತಂಡ ಧನ್ಯವಾದ ಅರ್ಪಿಸಿದೆ.

    ಒಡೆಯರ್ ಮೂವೀಸ್ ನಡಿ ನಿರ್ಮಾಣದ ಮಾಡಿರುವ ಮೊದಲ ಸಿನಿಮಾವಾಗಿದ್ದು, ನಾನು ನನ್ನ ಪತ್ನಿ, ಸ್ನೇಹಿತರಾದ ಹರೀಶ್ ನಾರಾ, ಸಚಿನ್ ತಪಶೆಟ್ಟಿ, ನರಸಿಂಹ ಜೊತೆಗೂಡಿ ಚಿತ್ರ ನಿರ್ಮಾಣ ಮಾಡಿದ್ದೇವೆ. ಇದು ನಿಜವಾದ ಸಿನಿಮಾ. ಇಡೀ ತಂಡ  ಸೇರಿಕೊಂಡು ತುಂಬಾ ಅದ್ಭುತ ಸಿನಿಮಾ ಮಾಡಿದ್ದಾರೆ. ನಿರ್ಮಾಪಕನಾಗಿ ನನಗೂ ಇದು ಹೊಸ ಅನುಭವ. ಸಿನಿಮಾದ ವಿಶೇಷ ಅಂದ್ರೆ ಇಡೀ ಡೊಳ್ಳು ಕಲಾವಿದರು ಅಭಿನಯಿಸಿರುವ ಚಿತ್ರ ಇದಾಗಿದೆ ಎಂದು ನಿರ್ಮಾಪಕ ಪವನ್ ಒಡೆಯರ್ ಅಭಿಪ್ರಾಯ ಹಂಚಿಕೊಂಡರು. ಇದನ್ನೂ ಓದಿ: ಮೂಸೆವಾಲಾ ರೀತಿಯಲ್ಲೇ ಹತ್ಯೆ ಮಾಡೋದಾಗಿ ಸಲ್ಮಾನ್‌ಖಾನ್‌ಗೆ ಬೆದರಿಕೆ – ಕೃಷ್ಣಮೃಗ ಬೇಟೆಯೇ ಮುಳುವಾಯ್ತ?

    ಇಂತಹ ಅವಕಾಶ ಮಾಡಿಕೊಟ್ಟಿದ್ದಕ್ಕೆ ಪವನ್ ಸರ್ ಗೆ ಧನ್ಯವಾದ. ಕಿರುಚಿತ್ರಗಳನ್ನು ನಿರ್ದೇಶನ ಮಾಡಿದವರಿಗೆ ಸಿನಿಮಾ ಮಾಡುವುದು ದೊಡ್ದ ಸಾಹಸ. ಆ ಸಾಹಸ ಮಾಡುವುದಕ್ಕೆ ಇಡೀ ತಂಡ ಸಪೋರ್ಟ್ ಮಾಡಿದೆ. ಈ ಯಶಸ್ಸಿಗೆ ಕಾರಣವರಾದ ಎಲ್ಲರಿಗೂ ಧನ್ಯವಾದ ಎಂದು ನಿರ್ದೇಶಕ ಸಾಗರ್ ಪುರಾಣಿಕ್ ತಮ್ಮ ಅನಿಸಿಕೆ ಹಂಚಿಕೊಂಡರು.

    ಸಾಗರ್ ಪುರಾಣಿಕ್ ನಿರ್ದೇಶನದ ಚೊಚ್ಚಲ ಸಿನಿಮಾವಾಗಿರುವ ಡೊಳ್ಳು ಚಿತ್ರದಲ್ಲಿ ಕಿರುತೆರೆ ನಟ ಕಾರ್ತಿಕ್ ಮಹೇಶ್, ನಿಧಿ ಹೆಗ್ಡೆ, ನಾಯಕ-ನಾಯಕಿಯಾಗಿ ನಟಿಸಿದ್ದು, ಬಾಬು ಹಿರಣಯ್ಯ, ಚಂದ್ರ ಮಯೂರ್ ಶರಣ್ ಸುರೇಶ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಅನಂತ್ ಕಾಮತ್ ಸಂಗೀತ, ಅಭಿಲಾಷ್ ಕಲಾಥಿ ಕ್ಯಾಮೆರಾವಿರುವ ಡೊಳ್ಳು ಸಿನಿಮಾ ಸದ್ಯದಲ್ಲಿಯೇ ಥಿಯೇಟರ್ ಅಂಗಳಕ್ಕೆ ಲಗ್ಗೆ ಇಡಲಿದೆ.