Tag: donald trump

  • ಎಫ್‌-35 ಖರೀದಿಸಲ್ಲ ಎಂದ ಭಾರತ – ತೆರಿಗೆ ಸಮರ ಆರಂಭಿಸಿದ ಟ್ರಂಪ್‌ಗೆ ಶಾಕ್‌

    ಎಫ್‌-35 ಖರೀದಿಸಲ್ಲ ಎಂದ ಭಾರತ – ತೆರಿಗೆ ಸಮರ ಆರಂಭಿಸಿದ ಟ್ರಂಪ್‌ಗೆ ಶಾಕ್‌

    ನವದೆಹಲಿ: ಡೊನಾಲ್ಡ್‌ ಟ್ರಂಪ್‌ (Donald Trump) ತೆರಿಗೆ ಸಮರ ಸಾರಿದ ಬೆನ್ನಲ್ಲೇ ಅಮೆರಿಕದಿಂದ ಎಫ್‌-35 ಯುದ್ಧ ವಿಮಾನವನ್ನು ಭಾರತ (India) ಖರೀದಿಸದೇ ಇರಲು ನಿರ್ಧರಿಸಿದೆ.

    ಹೌದು. ಭಾರತ ಐದನೇ ತಲೆಮಾರಿನ (Fifth Generation) ಯುದ್ಧ ವಿಮಾನ ಖರೀದಿಸಲು ಆಸಕ್ತಿ ವಹಿಸಿದೆ. ಮೋದಿ ಅವರ ಅಮೆರಿಕ ಪ್ರವಾಸದ ಸಮಯದಲ್ಲಿ ಟ್ರಂಪ್‌ ಅಮೆರಿಕ ಭಾರತಕ್ಕೆ ಎಫ್‌ 35 ವಿಮಾನ ನೀಡುವ ಆಫರ್‌ ನೀಡಿದ್ದರು.

    ಈ ಆಫರ್‌ ಪ್ರಕಟವಾದ ನಂತರ  ಭಾರತ ಎಫ್‌-35 (F-35) ಖರೀದಿ ಸಂಬಂಧ ಮಾತುಕತೆ ನಡೆಸಿತ್ತು. ಆದರೆ ಈಗ ಭಾರತದಿಂದ ಅಮೆರಿಕಕ್ಕೆ ಆಮದಾಗುವ ವಸ್ತುಗಳ ಮೇಲೆ 25% ತೆರಿಗೆ ವಿಧಿಸಿದ ಬೆನ್ನಲ್ಲೇ ಭಾರತ ಎಫ್‌-35 ಖರೀದಿಸದೇ ಇರಲು ತೀರ್ಮಾನಿಸಿದೆ ಎಂದು ಬ್ಲೂಮ್‌ಬರ್ಗ್‌ ಭಾರತದ ಖಚಿತ ಮೂಲಗಳನ್ನು ಆಧರಿಸಿ ವರದಿ ಮಾಡಿದೆ.

    ನರೇಂದ್ರ ಮೋದಿ ಸರ್ಕಾರವು ದೇಶೀಯವಾಗಿ ಜಂಟಿಯಾಗಿ ರಕ್ಷಣಾ ಉಪಕರಣಗಳನ್ನು ವಿನ್ಯಾಸಗೊಳಿಸುವುದು ಮತ್ತು ತಯಾರಿ ಮಾಡಲು ಆಸಕ್ತಿ ವ್ಯಕ್ತಪಡಿಸಿದೆ ಎಂದು ಅಮೆರಿಕಕ್ಕೆ ತಿಳಿಸಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: 69 ದೇಶಗಳಿಗೆ ಸುಂಕದ ಬರೆ – ಭಾರತಕ್ಕೆ 25%, ಪಾಕಿಸ್ತಾನಕ್ಕೆ 19% ಸುಂಕ ವಿಧಿಸಿದ ಟ್ರಂಪ್‌

    ಬ್ಲೂಮ್‌ಬರ್ಗ್‌ ಮಾಧ್ಯಮ ವರದಿಯ ಬಗ್ಗೆ ಇಲ್ಲಿಯವರೆಗೆ ಭಾರತ, ಅಮೆರಿಕ ಸರ್ಕಾರ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

    ಭಾರತದ ಬತ್ತಳಿಕೆಯಲ್ಲಿ ರಫೇಲ್‌ ಮತ್ತು ತೇಜಸ್‌ ಯುದ್ಧ ವಿಮಾನವಿದೆ. ಇದು Four and Half Generation Jet Fighters ವಿಭಾಗಕ್ಕೆ ಬರುತ್ತದೆ. ಎಫ್‌ 35 ಮತ್ತು ಸು 57 ಎರಡು ಐದನೇ ತಲೆಮಾರಿನ ಯುದ್ಧ ವಿಮಾನಗಳು. ಈ ತಲೆಮಾರಿನ ಯುದ್ಧ ವಿಮಾನಗಳು ಭಾರತದಲ್ಲಿ ಇಲ್ಲ.

     

    ಸದ್ಯ ಭಾರತದಲ್ಲಿ 2,229 ಯುದ್ಧ ವಿಮಾನಗಳಿವೆ, ಈ ಪೈಕಿ 600 ಫೈಟರ್‌ ಜೆಟ್‌ ವಿಮಾನಗಳಿವೆ. ಭಾರತ ಈಗ AMCA ಅಂದರೆ Advanced Medium Combat Aircraft ತಯಾರಿಸುತ್ತಿದೆ. ಬೆಂಗಳೂರಿನಲ್ಲಿ ನಡೆದ ಏರ್‌ಶೋದಲ್ಲಿ ಇದರ ಮಾದರಿಯನ್ನು ಅನಾವರಣಗೊಳಿಸಲಾಗಿತ್ತು. 2028ಕ್ಕೆ ಈ ವಿಮಾನ ನಿರ್ಮಾಣವಾಗುವ ಸಾಧ್ಯತೆಯಿದೆ. ಇದರ ಪ್ರಯೋಗಗಳು ಎಲ್ಲಾ ಯಶಸ್ವಿಯಾದರೆ 2034ಕ್ಕೆ ವಾಯುಸೇನೆಗೆ ಹಸ್ತಾಂತರವಾಗಬೇಕೆಂಬ ಗುರಿಯನ್ನು ಹಾಕಲಾಗಿದೆ. ಇದನ್ನೂ ಓದಿ: ಭಾರತದ್ದು ಸತ್ತೋದ ಆರ್ಥಿಕತೆ – ಹೀನ ಪದ ಬಳಸಿದ ಟ್ರಂಪ್‌

    ಇಲ್ಲೊಂದು ಸೂಕ್ಷ್ಮ ವಿಚಾರ ಇದೆ. ಆದರೆ ಅಮೆರಿಕ ಅಷ್ಟು ಸುಲಭವಾಗಿ ತಂತ್ರಜ್ಞಾನ ವರ್ಗಾವಣೆ ನೀಡುವುದಿಲ್ಲ. ಹೆಚ್‌ಎಎಲ್‌ ತೇಜಸ್‌ ವಿಮಾನಕ್ಕೆ ಎಂಜಿನ್‌ ನೀಡುವುದಾಗಿ ಅಮೆರಿಕದ General Electric ಹೇಳಿತ್ತು. ಆದರೆ ಸರಿಯಾದ ಸಮಯಕ್ಕೆ ಎಂಜಿನ್‌ ವಿತರಣೆ ಆಗಿಲ್ಲ. ಈ ಕಾರಣಕ್ಕೆ ತೇಜಸ್‌ ವಿಮಾನ ಉತ್ಪಾದನೆ ತಡವಾಗುತ್ತಿದೆ.

  • 69 ದೇಶಗಳಿಗೆ ಸುಂಕದ ಬರೆ – ಭಾರತಕ್ಕೆ 25%, ಪಾಕಿಸ್ತಾನಕ್ಕೆ 19% ಸುಂಕ ವಿಧಿಸಿದ ಟ್ರಂಪ್‌

    69 ದೇಶಗಳಿಗೆ ಸುಂಕದ ಬರೆ – ಭಾರತಕ್ಕೆ 25%, ಪಾಕಿಸ್ತಾನಕ್ಕೆ 19% ಸುಂಕ ವಿಧಿಸಿದ ಟ್ರಂಪ್‌

    – 10% ನಿಂದ 41% ವರೆಗೆ ಸುಂಕ ವಿಧಿಸುವ ಆದೇಶಕ್ಕೆ ಟ್ರಂಪ್ ‌ಸಹಿ

    ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ (Donald Trump) ಅವರು ವ್ಯಾಪಾರ ಒಪ್ಪಂದದ ಗಡುವಿಗೆ ಮುಂಚಿತವಾಗಿಯೇ ಹಲವು ವ್ಯಾಪಾರ ಪಾಲುದಾರ ದೇಶಗಳ ಮೇಲೆ ಹೆಚ್ಚಿನ ಸುಂಕದ (Tariffs) ಬರೆ ಎಳೆದಿದ್ದಾರೆ. ಸುಂಕ ವಿಧಿಸುವ ಹೊಸ ಕಾರ್ಯಕಾರಿ ಆದೇಶಕ್ಕೆ ಸಹಿ ಹಾಕಿದ್ದಾರೆ ಎಂದು ವರದಿಗಳು ತಿಳಿಸಿವೆ.

    69 ವ್ಯಾಪಾರ ಪಾಲುದಾರ (Trading Partners) ದೇಶಗಳ ಮೇಲೆ 10% ರಿಂದ 41% ರಷ್ಟು ಹೆಚ್ಚಿನ ಆಮದು ಸುಂಕ ವಿಧಿಸಿದ್ದು, ಇದು 7 ದಿನಗಳಲ್ಲಿ ಜಾರಿಗೆ ಬರುತ್ತದೆ ಎಂದು ತಿಳಿಸಿದ್ದಾರೆ. ಆದೇಶಕ್ಕೆ ಸಹಿ ಹಾಕುವಾಗ, ವರ್ಷಗಳಿಂದ ನಡೆಯುತ್ತಿರುವ ವ್ಯಾಪಾರ ಅಸಮತೋಲನ ತೆಗೆದುಹಾಕಲು ಮತ್ತು ಅಮೆರಿಕದ ಆರ್ಥಿಕ ಭದ್ರತೆ ಬಲಪಡಿಸಲು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಟ್ರಂಪ್‌ ಹೇಳಿದ್ದಾರೆ. ಇದನ್ನೂ ಓದಿ: ಭಾರತದ್ದು ಸತ್ತೋದ ಆರ್ಥಿಕತೆ – ಹೀನ ಪದ ಬಳಸಿದ ಟ್ರಂಪ್‌

    ಕೆನಡಾ (Canada) ಮೇಲೆ ಸದ್ಯ 25% ರಷ್ಟು ಸುಂಕ ವಿಧಿಸಲಾಗುತ್ತಿದ್ದು, ಅದನ್ನ ಶುಕ್ರವಾರದಿಂದ 35%ಗೆ ಹೆಚ್ಚಿಸಲಾಗುತ್ತದೆ ಎಂದು ಶ್ವೇತಭವನದ ಪ್ರಕಟಣೆ ತಿಳಿಸಿದೆ. ಅಲ್ಲದೇ ಈ ಆದೇಶದ ಅಡಿಯಲ್ಲಿ, ಭಾರತದ ಮೇಲೆ 25% ಸುಂಕ ವಿಧಿಸಲಾಗಿದೆ. ಪಾಕಿಸ್ತಾನದ ಮೇಲೆ 19%, ಬಾಂಗ್ಲಾದೇಶ ಮತ್ತು ವಿಯೆಟ್ನಾಂ ಮೇಲೆ 20%, ದಕ್ಷಿಣ ಆಫ್ರಿಕಾದ ಮೇಲೆ 30% ಮತ್ತು ಸ್ವಿಟ್ಜರ್ಲೆಂಡ್‌ನ ಮೇಲೆ 39% ರಷ್ಟು ಅತ್ಯಧಿಕ ಸುಂಕ ವಿಧಿಸಲಾಗಿದೆ. ಅಲ್ಲದೆ, ಕ್ಯಾಮರೂನ್, ಚಾಡ್, ಇಸ್ರೇಲ್, ಟರ್ಕಿಯೆ, ವೆನೆಜುವೆಲಾ ಮತ್ತು ಲೆಸೊಥೊ ದೇಶಗಳ ಮೇಲೆ 15% ಸುಂಕ ವಿಧಿಸಲಾಗಿದೆ. ಆದ್ರೆ ಚೀನಾ ಜೊತೆಗಿನ ವ್ಯಾಪಾರ ಒಪ್ಪಂದ ಇನ್ನೂ ಅಂತಿಮಗೊಂಡಿಲ್ಲ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಸುನಾಮಿ ಎಂದರೇನು? ಭೂಕಂಪಕ್ಕೂ ಇದಕ್ಕೂ ಏನು ಸಂಬಂಧ?

    ಯಾವ ದೇಶಕ್ಕೆ ಎಷ್ಟು ಸುಂಕ?
    * 41% ಸುಂಕ – ಸಿರಿಯಾ
    * 40% ಸುಂಕ – ಲಾವೋಸ್, ಮ್ಯಾನ್ಮಾರ್ (ಬರ್ಮಾ)
    * 39% ಸುಂಕ – ಸ್ವಿಟ್ಜರ್ಲೆಂಡ್
    * 35% ಸುಂಕ – ಇರಾಕ್, ಸೆರ್ಬಿಯಾ
    * 30% ಸುಂಕ – ಅಲ್ಜೀರಿಯಾ, ಬೋಸ್ನಿಯಾ ಮತ್ತು ಹರ್ಜೆಗೋವಿನಾ, ಲಿಬಿಯಾ, ದಕ್ಷಿಣ ಆಫ್ರಿಕಾ
    * 25% ಸುಂಕ – ಭಾರತ, ಬ್ರೂನಿ, ಕಝಾಕಿಸ್ತಾನ್, ಮೊಲ್ಡೊವಾ, ಟುನೀಶಿಯಾ
    * 20% ಸುಂಕ – ಬಾಂಗ್ಲಾದೇಶ, ಶ್ರೀಲಂಕಾ, ತೈವಾನ್, ವಿಯೆಟ್ನಾಂ
    * 19% ಸುಂಕ – ಪಾಕಿಸ್ತಾನ, ಮಲೇಷ್ಯಾ, ಇಂಡೋನೇಷ್ಯಾ, ಕಾಂಬೋಡಿಯಾ, ಫಿಲಿಪೈನ್ಸ್, ಥೈಲ್ಯಾಂಡ್
    * 18% ಸುಂಕ – ನಿಕರಾಗುವಾ
    * 15% ಸುಂಕ – ಇಸ್ರೇಲ್, ಜಪಾನ್, ಟರ್ಕಿ, ನೈಜೀರಿಯಾ, ಘಾನಾ ಮತ್ತು ಇತರ ಹಲವು ದೇಶಗಳು
    * 10% ಸುಂಕ – ಬ್ರೆಜಿಲ್, ಯುನೈಟೆಡ್ ಕಿಂಗ್‌ಡಮ್ (ಯುಕೆ), ಫಾಕ್‌ಲ್ಯಾಂಡ್ ದ್ವೀಪಗಳು

  • ಭಾರತದ್ದು ಸತ್ತೋದ ಆರ್ಥಿಕತೆ – ಹೀನ ಪದ ಬಳಸಿದ ಟ್ರಂಪ್‌

    ಭಾರತದ್ದು ಸತ್ತೋದ ಆರ್ಥಿಕತೆ – ಹೀನ ಪದ ಬಳಸಿದ ಟ್ರಂಪ್‌

    ವಾಷಿಂಗ್ಟನ್‌: `ಮೋದಿ (Narendra Modi) ನನ್ನ ಸ್ನೇಹಿತ, ಭಾರತ (India) ಮಿತ್ರದೇಶ’ ಎಂದು ಹೊಗಳುತ್ತಲೇ ಬಂದಿದ್ದ ಅಮೆರಿಕ ಅಧ್ಯಕ್ಷ ಟ್ರಂಪ್ (Donald Trump) ಈಗ `ಭಾರತದ ಆರ್ಥಿಕತೆಯನ್ನು ಸತ್ತೋದ ಆರ್ಥಿಕತೆ’ (Dead Economies) ಅಂತ ನಿಕೃಷ್ಟ ಪದ ಬಳಸಿದ್ದಾರೆ.

    ಭಾರತದ ಎಲ್ಲಾ ಆಮದು ವಸ್ತುಗಳ ಮೇಲೆ 25%ರಷ್ಟು ಸುಂಕ ಮತ್ತು ದಂಡ ವಿಧಿಸಿದ್ದರು. ಭಾರತವು ರಷ್ಯಾ ಜೊತೆ ತೈಲ, ಸೇನಾ ಸಾಮಗ್ರಿಗಳ ವ್ಯವಹಾರ ನಡೆಸ್ತಿದೆ ಎಂದು ಬುಧವಾರ ಟೀಕಿಸಿದ್ದರು. ಅದರ ಬೆನ್ನಲ್ಲೇ ರಷ್ಯಾ ಜೊತೆ ಭಾರತ ಏನು ಮಾಡುತ್ತೆ ಅನ್ನೋದು ನನಗೆ ಮುಖ್ಯ ಅಲ್ಲ. ಅದರ ಬಗ್ಗೆ ತಲೆಯನ್ನೂ ಕೆಡಿಸಿಕೊಳ್ಳಲ್ಲ. ಎರಡೂ ದೇಶಗಳು ತಮ್ಮ `ಸತ್ತ ಆರ್ಥಿಕತೆ’ಯನ್ನು ಒಟ್ಟಿಗೇ ನೆಲಕಚ್ಚಲಿ ಅಂತ ಶಾಪ ಹಾಕಿದ ರೀತಿ ವಿಶ್ವದ 3ನೇ ಅತಿದೊಡ್ಡ ಜಿಡಿಪಿ ದಾಖಲಿಸುವ ಸಮೀಪದಲ್ಲಿರುವ ಭಾರತದ ವಿರುದ್ಧ ಸೋಷಿಯಲ್ ಮೀಡಿಯಾ `ಟ್ರೂಥ್’ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಭಾರತದ ಮೇಲೆ 25% ಟ್ಯಾರಿಫ್‌ ಹಾಕಿ ಪಾಕಿಸ್ತಾನ ಜೊತೆ ಅಮೆರಿಕ ತೈಲ ಒಪ್ಪಂದ

    ಭಾರತದ ಜೊತೆ ನಾವು ಬಹಳ ಕಡಿಮೆ ವ್ಯವಹಾರ ಮಾಡಿದ್ದೇವೆ. ಅವರು ವಿಧಿಸುವ ತೆರಿಗೆ ಬಹಳ ಅಧಿಕ. ವಿಶ್ವದಲ್ಲೇ ಅತ್ಯಧಿಕ ಸುಂಕ ವಿಧಿಸುವ ದೇಶಗಳಲ್ಲೊಂದಾಗಿದೆ ಎಂದು ಟೀಕಿಸಿದ್ದಾರೆ. ಅಲ್ಲದೇ ರಷ್ಯಾ – ಅಮೆರಿಕ ಮಧ್ಯೆ ಯಾವುದೇ ವ್ಯಾಪಾರ ಇಲ್ಲ. ಅದು ಹಾಗೇ ಇರಲಿ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

    ಅಮೆರಿಕವು ಭಾರತಕ್ಕೆ ಬಹಳ ದೊಡ್ಡ ಮಾರುಕಟ್ಟೆಯಾಗಿದೆ. ಆದರೆ, ಅಮೆರಿಕಕ್ಕೆ ಭಾರತದ ಮಾರುಕಟ್ಟೆ ಪೂರ್ಣವಾಗಿ ಮುಕ್ತವಾಗಿಲ್ಲ. ಅಮೆರಿಕಕ್ಕೆ ಭಾರತದೊಂದಿಗೆ 40 ಬಿಲಿಯನ್ ಡಾಲರ್‌ಗೂ ಅಧಿಕ ಮೊತ್ತದಷ್ಟು ವ್ಯವಹಾರ ಕೊರತೆ ಇದೆ. ಇದರಿಂದ ಟ್ರಂಪ್ ಈ ರೀತಿ ಹೇಳಿಕೆ ಕೊಟ್ಟಿದ್ದಾರೆ ಅಂತ ವಿಮರ್ಶಿಸಲಾಗ್ತಿದೆ. ಇದನ್ನೂ ಓದಿ: ಭಾರತದ ಮೇಲೆ ಟ್ರಂಪ್‌ ತೆರಿಗೆ ಸಮರ : ಆ.1 ರಿಂದಲೇ 25% ಸುಂಕ

  • ಭಾರತದ ಮೇಲೆ 25% ಟ್ಯಾರಿಫ್‌ ಹಾಕಿ ಪಾಕಿಸ್ತಾನ ಜೊತೆ ಅಮೆರಿಕ ತೈಲ ಒಪ್ಪಂದ

    ಭಾರತದ ಮೇಲೆ 25% ಟ್ಯಾರಿಫ್‌ ಹಾಕಿ ಪಾಕಿಸ್ತಾನ ಜೊತೆ ಅಮೆರಿಕ ತೈಲ ಒಪ್ಪಂದ

    ವಾಷಿಂಗ್ಟನ್‌: ಭಾರತದಿಂದ (India) ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಶೇ.25 ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಘೋಷಿಸಿದ್ದಾರೆ. ಈ ಬೆನ್ನಲ್ಲೇ, ಪಾಕಿಸ್ತಾನದೊಂದಿಗೆ ಅಮೆರಿಕ (America) ವ್ಯಾಪಾರ ಒಪ್ಪಂದ ಮಾಡಿಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.

    ದಕ್ಷಿಣ ಏಷ್ಯಾ ರಾಷ್ಟ್ರ ಪಾಕಿಸ್ತಾನದ (Pakistan) ತೈಲ ನಿಕ್ಷೇಪಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಮೆರಿಕ ಒಪ್ಪಂದ ಮಾಡಿಕೊಂಡಿದೆ.‌ ಇದನ್ನೂ ಓದಿ: ಭಾರತದ ಮೇಲೆ ಟ್ರಂಪ್‌ ತೆರಿಗೆ ಸಮರ : ಆ.1 ರಿಂದಲೇ 25% ಸುಂಕ

    ಭಾರತದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ 25% ರಷ್ಟು ಸುಂಕ ವಿಧಿಸಲಾಗುವುದು. ರಷ್ಯಾದ ಶಸ್ತ್ರಾಸ್ತ್ರಗಳು ಮತ್ತು ಇಂಧನ ಖರೀದಿ ಮಾಡುತ್ತಿರುವುದಕ್ಕೆ ಈ ದಂಡ ವಿಧಿಸಲಾಗುತ್ತಿದೆ ಎಂದು ಟ್ರಂಪ್ ಬುಧವಾರ ಹೇಳಿದ್ದರು. ತಮ್ಮ ಟ್ರೂತ್ ಸೋಶಿಯಲ್ ಪ್ಲಾಟ್‌ಫಾರ್ಮ್‌ನಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, ಆ.1 ರಿಂದಲೇ ಭಾರತಕ್ಕೆ ಟ್ಯಾರಿಫ್‌ ಹಾಕಲಾಗುವುದು ಎಂದು ತಿಳಿಸಿದ್ದರು.

    ಭಾರತ ನಮ್ಮ ಸ್ನೇಹಿತ ಎನ್ನುತ್ತಲೇ ಟ್ರಂಪ್‌ ಟ್ಯಾರಿಫ್‌ ಹಾಕಿದ್ದಾರೆ. ಭಾರತದ ಜೊತೆ ಮಾತುಕತೆ ನಡೆಯುತ್ತಿದೆ. ವಾರದೊಳಗೆ ಮಾತುಕತೆಗೆ ಸ್ಪಷ್ಟಚಿತ್ರಣ ಸಿಗಲಿದೆ. ಏನಾಗುತ್ತದೆ ಎಂಬದನ್ನು ನೋಡೋಣ ಎಂದು ಟ್ರಂಪ್‌ ಹೇಳಿದ್ದರು. ಇದನ್ನೂ ಓದಿ: ಭಾರತದ ಜೊತೆ ಟ್ರೇಡ್ ಡೀಲ್ ಫೈನಲ್ ಆಗಿಲ್ಲ; 20-25% ಟ್ಯಾರಿಫ್ ಹಾಕ್ತೀನಿ ಎಂದ ಟ್ರಂಪ್

    ಭಾರತ ನಮ್ಮ ಸ್ನೇಹಿತನಾಗಿದ್ದರೂ, ನಾವು ಅವರೊಂದಿಗೆ ಕಡಿಮೆ ವ್ಯವಹಾರ ಮಾಡಿದ್ದೇವೆ. ಏಕೆಂದರೆ ಅವರ ಸುಂಕಗಳು ತುಂಬಾ ಹೆಚ್ಚಿವೆ. ವಿಶ್ವದಲ್ಲೇ ಅತ್ಯಧಿಕವಾಗಿವೆ. ಭಾರತ ಯಾವಾಗಲೂ ತನ್ನ ಮಿಲಿಟರಿ ಉಪಕರಣಗಳ ಬಹುಪಾಲನ್ನು ರಷ್ಯಾದಿಂದ ಖರೀದಿಸುತ್ತದೆ. ಚೀನಾದೊಂದಿಗೆ ರಷ್ಯಾದ ಅತಿದೊಡ್ಡ ಇಂಧನ ಖರೀದಿದಾರರಾಗಿದ್ದಾರೆ. ರಷ್ಯಾ-ಉಕ್ರೇನ್‌ ಯುದ್ಧ ನಿಲ್ಲಿಸಬೇಕೆಂದು ಎಲ್ಲರೂ ಬಯಸುವ ಹೊತ್ತಲ್ಲಿ, ಭಾರತ ಮತ್ತು ಚೀನಾದ ನಡೆ ಸರಿಯಲ್ಲ ಎಂದು ಟ್ರಂಪ್ ಟ್ರುತ್ ಸೋಶಿಯಲ್ ಪೋಸ್ಟ್‌ ಹಾಕಿದ್ದರು.

  • ಭಾರತದ ಮೇಲೆ ಟ್ರಂಪ್‌ ತೆರಿಗೆ ಸಮರ : ಆ.1 ರಿಂದಲೇ 25% ಸುಂಕ

    ಭಾರತದ ಮೇಲೆ ಟ್ರಂಪ್‌ ತೆರಿಗೆ ಸಮರ : ಆ.1 ರಿಂದಲೇ 25% ಸುಂಕ

    ವಾಷಿಂಗ್ಟನ್‌: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಅವರು ಭಾರತದ ಮೇಲೆ ತೆರಿಗೆ ಸಮರ ಆರಂಭಿಸಿದ್ದಾರೆ. ಆಗಸ್ಟ್‌ 1 ರಿಂದ ಭಾರತದಿಂದ (Inidia) ಆಮದಾಗುವ ವಸ್ತುಗಳ ಮೇಲೆ 25% ತೆರಿಗೆ ವಿಧಿಸಲಾಗುವುದು ಘೋಷಿಸಿದ್ದಾರೆ.

    ಈ ಸಂಬಂಧ ಟ್ರೂಥ್‌ ಸಾಮಾಜಿಕ ಜಾಲತಾಣದಲ್ಲಿ ಭಾರತದ ಮೇಲೆ ತೆರಿಗೆ ವಿಧಿಸಲಾಗುವುದು ಎಂದು ಪ್ರಕಟಿಸಿದ್ದಾರೆ. ಇದನ್ನೂ ಓದಿ: ಯುರೋಪಿಯನ್‌ ಒಕ್ಕೂಟದೊಂದಿಗೆ ಟ್ರಂಪ್‌ ಬಿಗ್‌ ಡೀಲ್‌ – ಆಮದುಗಳ ಮೇಲೆ 15% ಸುಂಕ

    ಪೋಸ್ಟ್‌ನಲ್ಲಿ ಏನಿದೆ?
    ಭಾರತ ನಮ್ಮ ಸ್ನೇಹಿತನಾಗಿದ್ದರೂ, ನಾವು ವರ್ಷಗಳಲ್ಲಿ ಅವರೊಂದಿಗೆ ತುಲನಾತ್ಮಕವಾಗಿ ಕಡಿಮೆ ವ್ಯವಹಾರ ಮಾಡಿದ್ದೇವೆ ಎಂಬುದನ್ನು ನೆನಪಿಡಿ. ಭಾರತದ ಸುಂಕ ತುಂಬ ಹೆಚ್ಚಿವೆ. ಇದು ವಿಶ್ವದಲ್ಲೇ ಹೆಚ್ಚು.

    ಎಲ್ಲರೂ ರಷ್ಯಾ (Russia) ಉಕ್ರೇನ್‌ನಲ್ಲಿ ಮಾಡುತ್ತಿರುವ ಯುದ್ಧವನ್ನು ನಿಲ್ಲಿಸಬೇಕೆಂದು ಹೇಳುತ್ತಿರುವ ಸಮಯದಲ್ಲಿ ಭಾರತ ಯಾವಗಲೂ ತಮ್ಮ ಮಿಲಿಟರಿ ಉಪಕರಣಗಳ ಬಹುಪಾಲು ರಷ್ಯಾದಿಂದ ಖರೀದಿಸಿದೆ ಮತ್ತು ಚೀನಾದೊಂದಿಗೆ (China) ರಷ್ಯಾದಿಂದ ಹೆಚ್ಚು ಇಂಧನ ಖರೀದಿ ಮಾಡುತ್ತಿದೆ. ಈ ಕಾರಣಕ್ಕೆ ಭಾರತದಿಂದ ಆಮದಾಗುವ ವಸ್ತುಗಳ ಮೇಲೆ 25% ತೆರಿಗೆ ವಿಧಿಸಲಾಗುತ್ತದೆ ಎಂದು ಹೇಳಿದ್ದಾರೆ.

  • ಭಾರತದ ಜೊತೆ ಟ್ರೇಡ್ ಡೀಲ್ ಫೈನಲ್ ಆಗಿಲ್ಲ; 20-25% ಟ್ಯಾರಿಫ್ ಹಾಕ್ತೀನಿ ಎಂದ ಟ್ರಂಪ್

    ಭಾರತದ ಜೊತೆ ಟ್ರೇಡ್ ಡೀಲ್ ಫೈನಲ್ ಆಗಿಲ್ಲ; 20-25% ಟ್ಯಾರಿಫ್ ಹಾಕ್ತೀನಿ ಎಂದ ಟ್ರಂಪ್

    ವಾಷಿಂಗ್ಟನ್‌: ಭಾರತದ ಜೊತೆ ವ್ಯಾಪಾರ ಒಪ್ಪಂದ ಆಗಿಲ್ಲ. ಹೀಗಾಗಿ, 20ರಿಂದ 25% ಸುಂಕ ಹಾಕಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತಿಳಿಸಿದ್ದಾರೆ.

    ಉಭಯ ದೇಶಗಳು ಶೀಘ್ರದಲ್ಲೇ ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸಲು ಸಾಧ್ಯವಾಗದಿದ್ದರೆ, ಭಾರತದ ಆಮದುಗಳ ಮೇಲೆ 25% ರಷ್ಟು ಸುಂಕವನ್ನು ವಿಧಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

    ಭಾರತಕ್ಕೆ 20% ರಿಂದ 25% ರ ವರೆಗೆ ಸುಂಕ ವಿಧಿಸಲಾಗುತ್ತದೆಯೇ ಎಂಬ ಪ್ರಶ್ನೆ ಕೇಳಿಬಂತು. ಅದಕ್ಕೆ ಟ್ರಂಪ್, ಹೌದು, ನಾನು ಹಾಗೆ ಭಾವಿಸುತ್ತೇನೆ. ಭಾರತವು ಆ ಪರಿಸ್ಥಿತಿ ತಂದುಕೊಂಡಿದೆ. ಆದರೆ, ಅವರು ನನ್ನ ಸ್ನೇಹಿತರು ಎಂದು ಮಾತನಾಡಿದ್ದಾರೆ.

    ಅಮೆರಿಕ ಮತ್ತು ಭಾರತ ತಿಂಗಳುಗಳಿಂದ ವ್ಯಾಪಾರ ಒಪ್ಪಂದದ ಬಗ್ಗೆ ಚರ್ಚಿಸುತ್ತಿವೆ. ಆದರೆ, ಯಾವುದೇ ಅಂತಿಮ ಒಪ್ಪಂದಕ್ಕೆ ಬಂದಿಲ್ಲ. ಭಾರತೀಯ ಮಾರುಕಟ್ಟೆಗೆ ಅಮೆರಿಕದ ಸರಕುಗಳು ಹೆಚ್ಚಾಗಿ ಪ್ರವೇಶಿಸಲು ಟ್ರಂಪ್ ಒತ್ತಾಯಿಸುತ್ತಿದ್ದಾರೆ. ಇತರ ವ್ಯಾಪಾರ ಮಾತುಕತೆಗಳಲ್ಲಿ ಅವರು ಆಗಾಗ್ಗೆ ಇದೇ ರೀತಿಯ ಬೇಡಿಕೆಗಳನ್ನು ಇಟ್ಟಿದ್ದಾರೆ.

  • ಇಂದಿರಾಗಾಂಧಿಯ ಅರ್ಧದಷ್ಟು ಧೈರ್ಯ ಇದ್ರೆ ಟ್ರಂಪ್‌ ಸುಳ್ಳುಗಾರ ಎಂದು ಮೋದಿ ಹೇಳಲಿ: ರಾಹುಲ್‌ ಗಾಂಧಿ ಸವಾಲ್‌

    ಇಂದಿರಾಗಾಂಧಿಯ ಅರ್ಧದಷ್ಟು ಧೈರ್ಯ ಇದ್ರೆ ಟ್ರಂಪ್‌ ಸುಳ್ಳುಗಾರ ಎಂದು ಮೋದಿ ಹೇಳಲಿ: ರಾಹುಲ್‌ ಗಾಂಧಿ ಸವಾಲ್‌

    – ಟ್ರಂಪ್ ಜೊತೆ ದಾಳಿಯ ಮಾಸ್ಟರ್ ಮೈಂಡ್ ಔತಣಕೂಟ
    – ಸೈನಿಕರು ಹುಲಿಗಳು – ಅವರ ಕೈ ಕಟ್ಟಿ ಹಾಕಬಾರದು

    ನವದೆಹಲಿ: ಟ್ರಂಪ್ (Donald Trump) 29 ಬಾರಿ ಕದನ ವಿರಾಮ ಮಾಡಿಸಿದ್ದು ನಾನೇ ಎಂದು ಹೇಳುತ್ತಾರೆ. ಅದು ಸುಳ್ಳಾದರೆ, ಪ್ರಧಾನಿ ಮೋದಿಗೆ (Narendra Modi) ಧೈರ್ಯ ಇದ್ದರೆ ಸದನದಲ್ಲಿ ಟ್ರಂಪ್ ಸುಳ್ಳುಗಾರ ಎಂದು ಹೇಳಲಿ. ಇಂದಿರಾಗಾಂಧಿಯವರ ಅರ್ಧದಷ್ಟು ಧೈರ್ಯ ಇದ್ದರೆ ಹೇಳಿ ಬಿಡಲಿ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಸವಾಲು ಹಾಕಿದ್ದಾರೆ.

    ಅಪರೇಷನ್‌ ಸಿಂಧೂರದ (Operation Sindoor) ಬಗ್ಗೆ ಲೋಕಸಭೆಯಲ್ಲಿ ಚರ್ಚೆ ವೇಳೆ ಅವರು ಮಾತನಾಡಿದರು. ಈ ವೇಳೆ ಪಹಲ್ಗಾಮ್ ದಾಳಿ ಬಳಿಕ ಡೊನಾಲ್ಡ್ ಟ್ರಂಪ್ ಜೊತೆಗೆ ದಾಳಿಯ ಮಾಸ್ಟರ್ ಮೈಂಡ್ ಪಾಕ್ ಸೇನಾಧಿಕಾರಿ ಜನರಲ್ ಮುನೀರ್ ಔತಣಕೂಟಕ್ಕೆ ಹೋಗುತ್ತಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅಲ್ಲಿಗೆ ಹೋಗಲು ಸಾಧ್ಯವಾಗಲಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಖರ್ಗೆ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ರಾಜ್ಯಸಭೆಯಲ್ಲಿ ಕೋಲಾಹಲ ಎಬ್ಬಿಸಿದ ನಡ್ಡಾ ಹೇಳಿಕೆ

    ಸೇನೆಯನ್ನು ಬಳಕೆ ಮಾಡಲು ರಾಜಕೀಯ ದೃಢ ಸಂಕಲ್ಪ ಇರಬೇಕು. ಸೇನೆಗೆ ಪೂರ್ಣ ಪ್ರಮಾಣದ ಸ್ವಾತಂತ್ರ್ಯ ಕೊಡಬೇಕು. 1971ರ ಯುದ್ಧ ಮತ್ತು ಆಪರೇಷನ್ ಸಿಂಧೂರವನ್ನು ರಾಜನಾಥ್ ಸಿಂಗ್ ಹೋಲಿಕೆ ಮಾಡಿದರು. ಆದರೆ 1971 ರಲ್ಲಿ ರಾಜಕೀಯ ಧೃಢ ಸಂಕಲ್ಪ ಇತ್ತು. ಜಾಗತಿಕವಾಗಿ ದೊಡ್ಡ ದೇಶಗಳು ಅಡ್ಡ ಬಂದವು. ಆದರೂ ಇಂದಿರಾಗಾಂಧಿ ಹೆದರದೇ ಸೇನೆಗೆ ಪೂರ್ಣ ಪ್ರಮಾಣದ ಸ್ವಾತಂತ್ರ್ಯ ನೀಡಿದ್ದರು. ಅಂದು ಪಾಕಿಸ್ತಾನದ ಒಂದು ಲಕ್ಷ ಸೈನಿಕರು ಶರಣಾದರು ಎಂದಿದ್ದಾರೆ.

    ಆಪರೇಷನ್‌ ಸಿಂಧೂರದ ವೇಳೆ, ಪಾಕಿಸ್ತಾನಕ್ಕೆ ದಾಳಿ ಮಾಡುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದರು. ಇದನ್ನು ರಕ್ಷಣಾ ಸಚಿವರೇ ಹೇಳಿದ್ದಾರೆ. ಮಿಲಿಟರಿ ಸ್ಥಳಗಳ ಮೇಲೆ ದಾಳಿ ಮಾಡಲ್ಲ ಎಂದು ನಮ್ಮ ವಾಯುಸೇನೆಯನ್ನು ಕಳುಹಿಸಿದ್ದರು. ಇದರ ಅರ್ಥ ಏನು? ಸೇನೆಯನ್ನು ಕಟ್ಟಿಹಾಕಿದಂತೆ ಅಲ್ವೇ? ನೀವೂ ದಾಳಿಗೂ ಮುನ್ನವೇ ರಾಜಕೀಯ ಧೃಢ ಸಂಕಲ್ಪ ತೋರಲೇ ಇಲ್ಲ. ನೀವು ಹೋರಾಟ ನಡೆಸಲು ಬಯಸುವುದಿಲ್ಲ. ನಿಮಗೆ ರಾಜಕೀಯ ಇಚ್ಛಾಶಕ್ತಿಯೇ ಇಲ್ಲ ಎಂದು ಕೇಂದ್ರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

    ಪಾಕಿಸ್ತಾನಕ್ಕೆ ಮಧ್ಯರಾತ್ರಿ ಫೋನ್ ಮಾಡಿ ಹೇಳುವ ಅಗತ್ಯ ಏನಿತ್ತು? ಇದು ಹೇಗಿದೆ ಎಂದರೆ ನಾನು ಒಂದು ಹೊಡೆಯುತ್ತೇನೆ. ನೀನು ವಾಪಸ್ ಹೊಡೆಯಬಾರದು ಎನ್ನುವಂತಿದೆ. ಪ್ರಧಾನಿ ಇಮೇಜ್ ಕಾಪಾಡಲು ಈ ಎಲ್ಲಾ ಪ್ರಯತ್ನ ಮಾಡಲಾಗಿದೆ. ಸೈನಿಕರು ಹುಲಿಗಳು, ನಾನು ಸೈನಿಕರನ್ನು ಭೇಟಿಯಾದಗ ಅವರ ಕೈ ಮುಟ್ಟುತ್ತೇನೆ. ಅವರು ದೇಶಕ್ಕಾಗಿ ಪ್ರಾಣ ತ್ಯಾಗಕ್ಕೂ ಸಿದ್ಧರಿರುತ್ತಾರೆ. ಅಂತಹ ಹುಲಿಗಳ ಕೈ ಕಟ್ಟಿಹಾಕದೇ, ಬಿಟ್ಟು ಬಿಡಬೇಕು ಎಂದಿದ್ದಾರೆ.

    ಎಲ್ಲಾ ದೇಶಗಳು ಭಯೋತ್ಪಾದಕ ದಾಳಿ ವಿರೋಧಿಸಿವೆ ಎಂದು ರಕ್ಷಣಾ ಸಚಿವರು ಹೇಳಿದ್ದಾರೆ. ಇದು ನೂರಕ್ಕೆ ನೂರರಷ್ಟು ಸತ್ಯ. ಆದರೆ ಪಹಲ್ಗಾಮ್ ದಾಳಿ ಬಳಿಕ ಪಾಕಿಸ್ತಾನವನ್ನು ಯಾರು ಟೀಕಿಸಲಿಲ್ಲ. ಎಲ್ಲರೂ ಭಯೋತ್ಪಾದನೆ ವಿರೋಧ ಮಾಡಿದರು. ಒಂದೇ ಒಂದು ದೇಶ ಪಾಕಿಸ್ತಾನವನ್ನು ಟೀಕಿಸಲಿಲ್ಲ ಎಂದಿದ್ದಾರೆ.

    ಪಹಲ್ಗಾಮ್ ದಾಳಿಯಾದಗ ನಾವು ವಿರೋಧ ಪಕ್ಷಗಳು ಒಟ್ಟಾಗಿ ಸರ್ಕಾರದ ಬೆಂಬಲಿಸಿದ್ದೆವು. ದಾಳಿ ಬಳಿಕ ಕರ್ನಾಲ್‌ಗೆ ತೆರಳಿ ಅಲ್ಲಿ ಸೈನಿಕನ ಕುಟುಂಬವೊಂದನ್ನು ಭೇಟಿ ಮಾಡಿದ್ದೆ. ಅಲ್ಲಿಯೇ ಎರಡು ಗಂಟೆ ಕಳೆದೆ, ಅದು ನಮ್ಮದೇ ಮನೆ ಎನ್ನಿಸಿತ್ತು. ಆಗ ಆ ಮನೆಯಲ್ಲಿದ್ದ ಸಹೋದರಿ ʻನಾನು ಬಾಗಿಲು ನೋಡುತ್ತಿದ್ದೇನೆ ಎಂದೂ ಸಹೋದರ ಬರಲ್ಲ ಎಂದಳು ಎಂದು ಸೈನಿಕನ ಸಹೋದರಿಯ ಮಾತನ್ನು ನೆನಪಿಸಿಕೊಂಡಿದ್ದಾರೆ. ಅಲ್ಲದೇ, ಮಗನ ಮುಂದೆಯೇ ತಂದೆಯನ್ನು ಹತ್ಯೆ ಮಾಡಲಾಗಿದ್ದ ಉತ್ತರ ಪ್ರದೇಶದಲ್ಲಿ ಬೇರೆ ಕುಟುಂಬವೊಂದನ್ನು ಭೇಟಿಯಾಗಿದ್ದೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಭಯೋತ್ಪಾದನೆ ವಿರುದ್ಧ ಹೋರಾಡಲು ಆಗದಿದ್ರೆ ಪಾಕ್‌ಗೆ ಸಹಾಯ ಮಾಡಲು ಸಿದ್ಧ: ರಾಜನಾಥ್‌ ಸಿಂಗ್

  • ಯುರೋಪಿಯನ್‌ ಒಕ್ಕೂಟದೊಂದಿಗೆ ಟ್ರಂಪ್‌ ಬಿಗ್‌ ಡೀಲ್‌ – ಆಮದುಗಳ ಮೇಲೆ 15% ಸುಂಕ

    ಯುರೋಪಿಯನ್‌ ಒಕ್ಕೂಟದೊಂದಿಗೆ ಟ್ರಂಪ್‌ ಬಿಗ್‌ ಡೀಲ್‌ – ಆಮದುಗಳ ಮೇಲೆ 15% ಸುಂಕ

    – ಅಮೆರಿಕದಿಂದ 750 ಶತಕೋಟಿ ಡಾಲರ್‌ ಮೌಲ್ಯದ ಇಂಧನ ಖರೀದಿ
    – ಯುಎಸ್‌ನಲ್ಲಿ 600 ಶತಕೋಟಿ ಡಾಲರ್‌ ಹೂಡಿಕೆ ಮಾಡಲು ಡೀಲ್‌

    ವಾಷಿಂಗ್ಟನ್‌: ಯುರೋಪಿಯನ್‌ ಒಕ್ಕೂಟದೊಂದಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಇದುವರೆಗಿನ ಅತಿದೊಡ್ಡ ವ್ಯಾಪಾರ ಒಪ್ಪಂದವನ್ನ (Biggest Trade Deal) ಘೋಷಣೆ ಮಾಡಿದ್ದಾರೆ. ಈ ಒಪ್ಪಂದದ ಅಡಿಯಲ್ಲಿ ಒಕ್ಕೂಟದಿಂದ ಬರುವ ಆಮದುಗಳ ಮೇಲೆ 15% ಸುಂಕ ವಿಧಿಸಲಾಗುತ್ತದೆ.

    ಅಮೆರಿಕದ ಅಧ್ಯಕ್ಷರಾಗಿ 2ನೇ ಬಾರಿಗೆ ಅಧಿಕಾರ ವಹಿಸಿಕೊಂಡ ಟ್ರಂಪ್‌ ತನ್ನ ದೇಶದ ವ್ಯಾಪಾರ ಸುಧಾರಿಸುವ ದೃಷ್ಟಿಯಲ್ಲಿ ಹಲವು ದೇಶಗಳ ಮೇಲೆ ಸುಂಕ ಸಮರ (Tariffs war) ಸಾರಿದ್ದಾರೆ. ಕೆಲ ದಿನಗಳ ಹಿಂದೆ ಟ್ರಂಪ್‌ 14 ದೇಶಗಳ ಮೇಲೆ ಸುಂಕ ವಿಧಿಸಿದ್ದರು. ಆಗಸ್ಟ್ 1 ರಿಂದಲೇ ಹೊಸ ಸುಂಕ ಜಾರಿಗೆ ಬರಲಿದೆ ಎಂದು ಘೋಷಿಸಿದ್ದರು. ಆದ್ರೆ ಈ ಪಟ್ಟಿಯಲ್ಲಿ ಭಾರತವನ್ನ ಹೊರಗಿಟ್ಟಿದ್ದರು. ಮುಂಬರುವ ಆಗಸ್ಟ್‌ 1ರಿಂದ ಯುರೋಪಿಯನ್‌ ಒಕ್ಕೂಟದ (European Union) ರಫ್ತಿನ ಮೇಲೆ 30% ಸುಂಕ ವಿಧಿಸುವುದಾಗಿ ಟ್ರಂಪ್‌ ಘೋಷಿದ್ದರು. ಈ ನಡುವೆ ಮಹತ್ವದ ಒಪ್ಪಂದ ಮಾಡಿಕೊಂಡಿದ್ದು, 30% ಸುಂಕದಿಂದ ಬಚಾವ್‌ ಆಗಿದೆ. ಇದನ್ನೂ ಓದಿ: ಆಸ್ಟ್ರೇಲಿಯಾದ ನೈಸರ್ಗಿಕ ವಿಪತ್ತಾದ ‘ಆಲ್ಗಲ್ ಬ್ಲೂಮ್’ – ಈ ಬಿಕ್ಕಟ್ಟಿನ ಹಿಂದಿನ ಕಾರಣವೇನು?

    ಸ್ಕಾಟ್ಲೆಂಡ್‌ನಲ್ಲಿರುವ ತಮ್ಮ ಗಾಲ್ಫ್ ರೆಸಾರ್ಟ್‌ನಲ್ಲಿ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್‌ ನಡುವಿನ ಮಹತ್ವದ ಸಭೆಯಲ್ಲಿ ಇದುವರೆಗಿನ ಅತಿದೊಡ್ಡ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲಾಗಿದೆ. ಇದರನ್ವಯ ಯುರೋಪಿನ್‌ನಿಂದ ರಫ್ತಾಗುವ ಆಟೋಮೊಬೈಲ್, ಔಷಧಗಳು ಮತ್ತು ಅರೆವಾಹಕ ಸೇರಿದಂತೆ ಇತರೇ ಸರಕುಗಳ ಮೇಲೆ 15% ಸುಂಕವನ್ನಷ್ಟೇ ವಿಧಿಸಲಾಗುತ್ತದೆ.

    ನಾವು ಒಂದೊಳ್ಳೆ ಒಪ್ಪಂದ ಮಾಡಿಕೊಂಡಿದ್ದೇವೆ. ಇದರಿಂದ ಎಲ್ಲರಿಗೂ ಅನುಕೂಲವಾಗಲಿದೆ. ಯಾವುದೇ ಸಾಮರ್ಥಯದಲ್ಲೂ ಈವರೆಗಿನ ಅತಿದೊಡ್ಡ ಒಪ್ಪಂದ ಇದೆಂದು ಟ್ರಂಪ್‌ ಹೇಳಿದ್ದಾರೆ. ಇದನ್ನೂ ಓದಿ: ಟೇಕಾಫ್‌ ವೇಳೆ ಕೈಕೊಟ್ಟ ಲ್ಯಾಂಡಿಂಗ್‌ ಗೇರ್‌ – ಬೋಯಿಂಗ್ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ

    ಮುಂದುವರಿದು… ಜೊತೆಗೆ ಒಪ್ಪಂದದ ಭಾಗವಾಗಿ 27 ರಾಷ್ಟ್ರಗಳ ಯುರೋಪಿಯನ್‌ ಒಕ್ಕೂಟ ಅಮೆರಿಕದಿಂದ 750 ಶತಕೋಟಿ ಡಾಲರ್‌ ಮೌಲ್ಯದ ಇಂಧನ ಖರೀದಿಸಲಿದೆ. ಜೊತೆಗೆ ಅಮೆರಿಕದಲ್ಲಿ 600 ಶತಕೋಟಿ ಡಾಲರ್‌ಗಿಂತಲೂ ಹೆಚ್ಚಿನ ಹೂಡಿಕೆ ಮಾಡಲಿವೆ ಎಂದು ಟ್ರಂಪ್‌ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ-ಪಾಕ್‌ನಂತೆಯೇ ಥಾಯ್ಲೆಂಡ್‌-ಕಾಂಬೋಡಿಯಾ ಯುದ್ಧ ನಿಲ್ಲಿಸಿದ್ದು ನಾನೇ: ಟ್ರಂಪ್‌

  • ಭಾರತ-ಪಾಕ್‌ನಂತೆಯೇ ಥಾಯ್ಲೆಂಡ್‌-ಕಾಂಬೋಡಿಯಾ ಯುದ್ಧ ನಿಲ್ಲಿಸಿದ್ದು ನಾನೇ: ಟ್ರಂಪ್‌

    ಭಾರತ-ಪಾಕ್‌ನಂತೆಯೇ ಥಾಯ್ಲೆಂಡ್‌-ಕಾಂಬೋಡಿಯಾ ಯುದ್ಧ ನಿಲ್ಲಿಸಿದ್ದು ನಾನೇ: ಟ್ರಂಪ್‌

    ನೋಮ್ ಪೆನ್: ಥೈಲ್ಯಾಂಡ್ ಶನಿವಾರ ತಡರಾತ್ರಿ ಕಾಂಬೋಡಿಯಾ ಜೊತೆಗಿನ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ಘೋಷಿಸಿತು.

    ಥೈಲ್ಯಾಂಡ್ ಜೊತೆಗಿನ ಗಡಿ ಸಂಘರ್ಷವನ್ನು ನಿಲ್ಲಿಸಲು ಕಾಂಬೋಡಿಯಾ ಕದನ ವಿರಾಮದ ಬಗ್ಗೆ ಚರ್ಚಿಸಲು ಸಿದ್ಧವಾಗಿದೆ ಎಂದು ಪ್ರಧಾನಿ ಹನ್ ಮಾನೆಟ್ ಭಾನುವಾರ ಹೇಳಿದ್ದಾರೆ. ಕದನ ವಿರಾಮಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮಧ್ಯಪ್ರವೇಶವನ್ನು ಸ್ವಾಗತಿಸಿದ್ದಾರೆ.

    ಥೈಲ್ಯಾಂಡ್ ಜನರೊಂದಿಗೆ ಸಮನ್ವಯ ಸಾಧಿಸಲು ತಮ್ಮ ವಿದೇಶಾಂಗ ಸಚಿವರು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರೊಂದಿಗೆ ಮಾತನಾಡುತ್ತಾರೆ ಎಂದು ಹನ್ ಮಾನೆಟ್ ಹೇಳಿದ್ದಾರೆ. ಆದರೆ, ಯಾವುದೇ ಒಪ್ಪಂದವನ್ನು ರದ್ದುಗೊಳಿಸುವುದರ ವಿರುದ್ಧ ಬ್ಯಾಂಕಾಕ್‌ಗೆ ಎಚ್ಚರಿಕೆ ನೀಡಿದ್ದಾರೆ.

    ಭಾರತ-ಪಾಕಿಸ್ತಾನ ರೀತಿಯಲ್ಲಿಯೇ ಕಾಂಬೋಡಿಯಾ-ಥಾಯ್ಲೆಂಡ್‌ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದೇನೆ ಎಂದು ಟ್ರಂಪ್‌ ಪುನರುಚ್ಚರಿಸಿದ್ದಾರೆ. ವ್ಯಾಪಾರ ಒಪ್ಪಂದದ ಎಚ್ಚರಿಕೆ ನೀಡಿ ಕದನ ವಿರಾಮ ಘೋಷಿಸುವಂತೆ ಮಾಡಿದ್ದೇವೆ ಎಂದು ಟ್ರಂಪ್‌ ತಿಳಿಸಿದ್ದಾರೆ.

    ಟ್ರೂತ್‌ ಸೋಷಿಯಲ್‌ ಮೀಡಿಯಾದಲ್ಲಿ, ಕಾಂಬೋಡಿಯಾ ಮತ್ತು ಥಾಯ್ಲೆಂಡ್‌ನ ಪ್ರಧಾನಿಗಳ ಜೊತೆ ಮಾತನಾಡಿದೆ. ಯುದ್ಧ ನಿಲ್ಲುವ ತನಕ ನಿಮ್ಮೊಂದಿಗೆ ವ್ಯಾಪಾರ ಒಪ್ಪಂದ ಮಾಡುವುದಿಲ್ಲ ಎಂದು ಹೇಳಿ ಕದನ ವಿರಾಮಕ್ಕೆ ಒಪ್ಪಿಸಿದೆ ಎಂದು ಪೋಸ್ಟ್‌ ಹಂಚಿಕೊಂಡಿದ್ದಾರೆ.

    ಹಿಂದೂ ದೇಗುಲ ವಿಚಾರಕ್ಕಾಗಿ ಕಾಂಬೋಡಿಯಾ ಮತ್ತು ಥಾಯ್ಲೆಂಡ್‌ ಗಡಿಯಲ್ಲಿ ಸಂಘರ್ಷ ನಡೆಯುತ್ತಿದೆ. ಯುದ್ಧದಿಂದಾಗಿ 33 ಮಂದಿ ಬಲಿಯಾಗಿದ್ದಾರೆ.

  • ಅಮೆರಿಕ-ಜಪಾನ್ ನಡುವೆ ವ್ಯಾಪಾರ ಒಪ್ಪಂದ; ಟ್ರಂಪ್‌ ಘೋಷಣೆ

    ಅಮೆರಿಕ-ಜಪಾನ್ ನಡುವೆ ವ್ಯಾಪಾರ ಒಪ್ಪಂದ; ಟ್ರಂಪ್‌ ಘೋಷಣೆ

    – ಒಪ್ಪಂದದ ಬೆನ್ನಲ್ಲೇ ಜಪಾನ್‌ ಮೇಲಿನ ಟ್ಯಾರಿಫ್‌ 10% ಇಳಿಸಿದ ಅಮೆರಿಕ ಅಧ್ಯಕ್ಷ

    ನ್ಯೂಯಾರ್ಕ್: ತಿಂಗಳುಗಳ ಕಾಲ ನಡೆದ ಮಾತುಕತೆಗಳ ನಂತರ, ಜಪಾನ್ (Japan) ಜೊತೆ ಬೃಹತ್‌ ವ್ಯಾಪಾರ ಒಪ್ಪಂದವನ್ನು ಮಾಡಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಘೋಷಿಸಿದ್ದಾರೆ.

    ಘೋಷಿಸಲಾದ ಒಪ್ಪಂದದ ಪ್ರಕಾರ, ಅಮೆರಿಕವು ಜಪಾನಿನ ರಫ್ತಿನ ಮೇಲೆ ಶೇ.15 ರಷ್ಟು ಸುಂಕವನ್ನು ವಿಧಿಸಿದೆ. ಜಪಾನ್, ಅಮೆರಿಕದಲ್ಲಿ 550 ಬಿಲಿಯನ್ ಡಾಲರ್ ಹೂಡಿಕೆ ಮಾಡುತ್ತದೆ ಎಂದು ಟ್ರಂಪ್ ತಿಳಿಸಿದ್ದಾರೆ. ಇದನ್ನೂ ಓದಿ: ಮುಂಬೈ ದಾಳಿಯ ರುವಾರಿ, ಸಂಸತ್‌ ಮೇಲಿನ ದಾಳಿಯ ಸಂಚುಕೋರ ಲಷ್ಕರ್ ಉಗ್ರ ಪಾಕಿಸ್ತಾನದ ಆಸ್ಪತ್ರೆಯಲ್ಲಿ ಸಾವು

    ನಾವು ಜಪಾನ್ ಜೊತೆ ಬೃಹತ್ ಒಪ್ಪಂದವನ್ನು ಪೂರ್ಣಗೊಳಿಸಿದ್ದೇವೆ. ಬಹುಶಃ ಇದುವರೆಗೆ ಮಾಡಿಕೊಂಡ ಅತಿದೊಡ್ಡ ಒಪ್ಪಂದ ಇದಾಗಿದೆ ಎಂದು ಟ್ರಂಪ್ ತಮ್ಮ ಟ್ರುತ್ ಸೋಶಿಯಲ್ ಪ್ಲಾಟ್‌ಫಾರ್ಮ್‌ನಲ್ಲಿ ಬರೆದುಕೊಂಡಿದ್ದಾರೆ.

    ನನ್ನ ನಿರ್ದೇಶನದ ಮೇರೆಗೆ ಜಪಾನ್ ಅಮೆರಿಕದಲ್ಲಿ 550 ಬಿಲಿಯನ್ ಡಾಲರ್‌ಗಳನ್ನು ಹೂಡಿಕೆ ಮಾಡುತ್ತದೆ. ಅದು ಲಾಭದ 90% ಪಡೆಯುತ್ತದೆ. ಜಪಾನ್ ಅಮೆರಿಕದ ಕಾರುಗಳು, ಅಕ್ಕಿ ಮತ್ತು ಕೆಲವು ಕೃಷಿ ಉತ್ಪನ್ನಗಳ ರಫ್ತಿಗೆ ಸಹ ಮುಕ್ತವಾಗಲಿದೆ. ಈ ಒಪ್ಪಂದವು ಲಕ್ಷಾಂತರ ಉದ್ಯೋಗಗಳನ್ನು ಸೃಷ್ಟಿಸುತ್ತದೆ ಎಂದು ಟ್ರಂಪ್‌ ತಿಳಿಸಿದ್ದಾರೆ. ಇದನ್ನೂ ಓದಿ: ಸೈಬರ್‌ ದಾಳಿಗೆ 158 ವರ್ಷದ ಹಳೆಯ ಕಂಪನಿ ಬಂದ್‌ – 700 ಮಂದಿ ಮನೆಗೆ

    ಆಗಸ್ಟ್ 1 ರಿಂದ ಹೊಸ ತೆರಿಗೆ ನೀತಿ ಜಾರಿ ಜಾರಿಯಾಗಲಿದೆ. ಈ ಮೊದಲು ಜಪಾನ್‌ಗೆ 25% ಟ್ಯಾರಿಫ್ ಅನ್ನು ಟ್ರಂಪ್‌ ವಿಧಿಸಿದ್ದರು.