ಟೆಹ್ರಾನ್: ನಮ್ಮ ಮೇಲೆ ದಾಳಿ ಮಾಡುವ ಮೂಲಕ ಇಸ್ರೇಲ್ (Israel) ಅತೀ ದೊಡ್ಡ ತಪ್ಪು ಮಾಡಿದೆ. ಈ ತಪ್ಪಿಗೆ ಶಿಕ್ಷೆ ಅನುಭವಿಸಲೇಬೇಕು ಎಂದು ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Ayatollah Ali Khamenei) ಹೇಳಿದ್ದಾರೆ.
ಇಸ್ರೇಲ್‌ಗೆ ಅಮೆರಿಕ (USA) ಶಸ್ತ್ರಾಸ್ತ್ರಗಳ ನೆರವು ನೀಡಬಾರದು. ನೆರವು ನೀಡಿದ್ದಲ್ಲಿ ಸರಿಪಡಿಸಲಾಗದ ಹಾನಿ ಉಂಟಾಗಲಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ (Donald Trump) ಖಮೇನಿ ಎಚ್ಚರಿಕೆ ನೀಡಿದ್ದಾರೆ.
– ಎರಡೂ ದೇಶಗಳ ಪರಸ್ಪರ ಒಪ್ಪಿಗೆ ಬಳಿಕ ಕದನ ವಿರಾಮ – ಕ್ವಾಡ್ ಸಭೆಯಲ್ಲಿ ಭಾಗಿಯಾಗಲು ಟ್ರಂಪ್‌ಗೆ ಆಹ್ವಾನ
ನವದೆಹಲಿ: ಭಾರತ ಹಾಗೂ ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆ ಕುರಿತು ಎರಡೂ ದೇಶಗಳ ಪರಸ್ಪರ ಒಪ್ಪಿಗೆ ಬಳಿಕ ಕದನ ವಿರಾಮ (Ceasefire) ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ (Donald Trump) ಪ್ರಧಾನಿ ಮೋದಿ ಸ್ಪಷ್ಟನೆ ನೀಡಿದ್ದಾರೆ.
ಜಿ7 ಶೃಂಗಸಭೆಗೆ ಭೇಟಿ ನೀಡಿದ್ದ ವೇಳೆ ಅಮೆರಿಕಗೆ ಭೇಟಿ ನೀಡುವಂತೆ ಟ್ರಂಪ್ ಮೋದಿಯನ್ನು (Narendra Modi) ಆಹ್ವಾನಿಸಿದ್ದರು. ಆದರೆ ಮೊದಲೇ ವೇಳಾಪಟ್ಟಿ ನಿಗದಿಯಾಗಿದ್ದ ಹಿನ್ನೆಲೆ ಅಮೆರಿಕಗೆ ಭೇಟಿ ನೀಡಲು ಸಾಧ್ಯವಿಲ್ಲ ಎಂದು ಮೋದಿ ತಿಳಿಸಿದ್ದಾರೆ. ಬಳಿಕ ದೂರವಾಣಿ ಮೂಲಕ ಟ್ರಂಪ್‌ಗೆ ಕರೆ ಮಾಡಿದ ಮೋದಿ, ಆಪರೇಷನ್ ಸಿಂಧೂರದ (Operation Sindoor) ಬಳಿಕ ಭಾರತ ಹಾಗೂ ಪಾಕ್ ನಡುವೆ ಕದನ ವಿರಾಮ ಘೋಷಣೆ ಕುರಿತು ಭಾರತದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ವರ್ಷಕ್ಕೆ 30 ದಿನ ಮಾತ್ರ ತೆರೆಯುವ ಕೊಟ್ಟಿಯೂರು ಶಿವ ದೇಗುಲಕ್ಕೆ ನಟ ದರ್ಶನ್ ಭೇಟಿ
ಪಾಕ್ ಮನವಿ ಬಳಿಕ ಭಾರತ ಪರಸ್ಪರ ಹೊಂದಾಣಿಕೆಯೊಂದಿಗೆ ಕದನ ವಿರಾಮ ಘೋಷಿಸಿದೆ. ಇದರಲ್ಲಿ ಯಾವ ದೇಶದ ಮಧ್ಯಸ್ಥಿಕೆಯೂ ಇರಲಿಲ್ಲ. ಯಾವುದೇ ವ್ಯಾಪಾರ ಒಪ್ಪಂದದ ಬಗ್ಗೆಯೂ ಚರ್ಚಿಸಿಲ್ಲ. ಭಾರತವು ಇನ್ನುಮುಂದೆ ಭಯೋತ್ಪಾದನೆಯನ್ನು ಪ್ರಾಕ್ಸಿ ಯುದ್ಧವಾಗಿ ನೋಡುವುದಿಲ್ಲ, ಬದಲಿಗೆ ಯುದ್ಧವಾಗಿ ನೋಡುತ್ತದೆ. ಭಾರತದ ಆಪರೇಷನ್ ಸಿಂಧೂರ ಇನ್ನೂ ಮುಂದುವರಿಯುತ್ತದೆ ಎಂದು ಮೋದಿ ಹೇಳಿದರು. ಇದನ್ನೂ ಓದಿ: ಬೆಂಗಳೂರು | ಮರದ ಕೊಂಬೆ ಬಿದ್ದು ಆಸ್ಪತ್ರೆ ಸೇರಿದ್ದ ಯುವಕನ ಬ್ರೈನ್ ಡೆಡ್
ಸುಮಾರು 35 ನಿಮಿಷಗಳ ಕಾಲ ಟ್ರಂಪ್ ಜೊತೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿಯಲ್ಲಿ ಮಾತನಾಡಿದರು. ಇದೇ ವೇಳೆ ಕ್ವಾಡ್ ಸಭೆಗೆ ಭಾಗಿಯಾಗಲು ಭಾರತಕ್ಕೆ ಬರುವಂತೆ ಟ್ರಂಪ್‌ಗೆ ಮೋದಿ ಮನವಿ ಮಾಡಿದ್ದು, ಮೋದಿ ಆಹ್ವಾನವನ್ನು ಟ್ರಂಪ್ ಸ್ವೀಕರಿಸಿದ್ದಾರೆ. ಈ ಮೊದಲು ನನ್ನ ಮಧ್ಯಸ್ಥಿಕೆಯಿಂದಲೇ ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾಗಿದೆ ಎಂದು ಟ್ರಂಪ್ ಹೇಳಿಕೊಂಡಿದ್ದರು. ಇದೀಗ ಟ್ರಂಪ್‌ಗೆ ಮೋದಿ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಇದನ್ನೂ ಓದಿ: ಮೊಬೈಲ್‌ನಲ್ಲಿ 13,500 ಅಶ್ಲೀಲ ಚಿತ್ರ – ಫೇಕ್ ಅಕೌಂಟ್‌ನಿಂದ ಮಹಿಳೆಯರ ಮಾನಹಾನಿ ಮಾಡ್ತಿದ್ದ ಕಾಮುಕ ಅರೆಸ್ಟ್
ಟೆಲ್ ಅವಿವ್/ಟೆಹ್ರಾನ್: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧಕ್ಕೆ ಅಮೆರಿಕ ಎಂಟ್ರಿಯಾಗಿದ್ದು ಅಪಾಯಕಾರಿ ಹಂತಕ್ಕೆ ತಲುಪಿದೆ. ಇಸ್ರೇಲ್ ಬೆಂಬಲಕ್ಕೆ ನಿಂತಿರುವ ಟ್ರಂಪ್ ಶರಣಾಗುವಂತೆ ಧಮ್ಕಿ ಹಾಕಿದ್ದಾರೆ. ಆದ್ರೆ ಅಮೆರಿಕ ಬೆದರಿಕೆಗೂ ಜಗ್ಗದ ಇರಾನ್‌ನ ಸರ್ವೋಚ್ಛ ನಾಯಕ (Iran’s Supreme Leader Ali Khamenei) ʻಯುದ್ಧ ಶುರುವಾಗಿದೆʼ ಎಂದು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ತಿರುಗೇಟು ನೀಡಿದ್ದಾರೆ. ಇದು ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ.
ʻನಮಿ ಹೆಸರಿನಲ್ಲಿ, ಯುದ್ಧ ಪ್ರಾರಂಭವಾಗುತ್ತದೆ. ಅಲಿ ತನ್ನ ಜುಲ್ಫಿಕರ್‌ನೊಂದಿಗೆ ಖಮೇನಿಗೆ ಹಿಂತಿರುಗುತ್ತಾನೆ. ಹೈದರ್ ಹೆಸರಿನಲ್ಲಿ ಯುದ್ಧ ಶುರುವಾಗುತ್ತೆ, ಜಿಯೋನಿಸ್ಟ್ (ಯಹೂದಿಗಳು) ಗಳಿಗೆ ಯಾವುದೇ ಕರುಣೆ ತೋರಲ್ಲ. ಎಂದು ಅಯತೊಲ್ಲಾ ಅಲಿ ಖಮೇನಿ ಅವರ ಅನುವಾದ ಪೋಸ್ಟ್ ಸೂಚಿಸಿದೆ.
ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿಯನ್ನು ಸದ್ಯಕ್ಕೆ ನಾವು ಹತ್ಯೆ ಮಾಡುವುದಿಲ್ಲ. ಬದಲಾಗಿ ಅಲಿ ಖಮೇನಿ ಶರಣಾಗಬೇಕು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ನೇರವಾಗಿ ಎಚ್ಚರಿಕೆ ನೀಡಿದ ಬೆನ್ನಲ್ಲೇ ಖಮೇನಿ ಅವರ ಈ ಪೋಸ್ಟ್ ಬಂದಿದೆ.
ಟ್ರಂಪ್ ಹೇಳಿದ್ದೇನು?
ಸುಪ್ರೀಂ ಲೀಡರ್ ಎಂದು ಕರೆಯಲ್ಪಡುವ ವ್ಯಕ್ತಿ ಅಡಗಿದ್ದಾನೆ ಎನ್ನುವುದು ನಮಗೆ ನಿಖರವಾಗಿ ತಿಳಿದಿದೆ. ಅವನನ್ನು ನಾವು ಹತ್ಯೆ ಮಾಡಲು ಹೋಗುವುದಿಲ್ಲ. ನಾಗರಿಕರು ಅಥವಾ ಅಮೇರಿಕನ್ ಸೈನಿಕರ ಮೇಲೆ ಕ್ಷಿಪಣಿಗಳು ಹಾರಿಸುವುದನ್ನು ನಾವು ಬಯಸುವುದಿಲ್ಲ. ನಮ್ಮ ಸಹನೆಯನ್ನು ಪರೀಕ್ಷೆ ಮಾಡುವುದು ಬೇಡ.
ನಾವು ಈಗ ಇರಾನ್ ಆಕಾಶದ ಮೇಲೆ ಸಂಪೂರ್ಣ ನಿಯಂತ್ರಣವನ್ನು ಹೊಂದಿದ್ದೇವೆ. ಇರಾನ್ ಉತ್ತಮ ಸ್ಕೈ ಟ್ರ್ಯಾಕರ್‌ಗಳು ಮತ್ತು ಇತರ ರಕ್ಷಣಾ ಸಾಧನಗಳನ್ನು ಹೊಂದಿತ್ತು. ಆದರೆ ಅಮೇರಿಕ ನಿರ್ಮಿತ ಸಾಮಾಗ್ರಿಗೆ ಹೋಲಿಕೆ ಮಾಡಲು ಸಾಧ್ಯವಿಲ್ಲ. ಅಮೆರಿಕ ತಯಾರಿಸಿದಂತೆ ಯಾರೂ ಉತ್ತಮವಾಗಿ ತಯಾರಿಸಲು ಸಾಧ್ಯವಿಲ್ಲ ಎಂದು ಪೋಸ್ಟ್‌ನಲ್ಲಿ ಹೇಳಿದ್ದರು.
ವಾಷಿಂಗ್ಟನ್: ಇಸ್ರೇಲ್- ಇರಾನ್ ನಡುವಿನ ಯುದ್ಧಕ್ಕೆ ಅಮೆರಿಕ ಅಧಿಕೃತವಾಗಿ ಎಂಟ್ರಿಯಾಗಿದೆ. ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿಯನ್ನು (Iran’s Supreme Leader Ali Khamenei) ಸದ್ಯಕ್ಕೆ ನಾವು ಹತ್ಯೆ ಮಾಡುವುದಿಲ್ಲ. ಬದಲಾಗಿ ಅಲಿ ಖಮೇನಿ ಶರಣಾಗಬೇಕು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ನೇರವಾಗಿ ಎಚ್ಚರಿಕೆ ನೀಡಿದ್ದಾರೆ.
ಟ್ರಂಪ್ ಹೇಳಿದ್ದೇನು?
ಸುಪ್ರೀಂ ಲೀಡರ್ ಎಂದು ಕರೆಯಲ್ಪಡುವ ವ್ಯಕ್ತಿ ಅಡಗಿದ್ದಾನೆ ಎನ್ನುವುದು ನಮಗೆ ನಿಖರವಾಗಿ ತಿಳಿದಿದೆ. ಅವನನ್ನು ನಾವು ಹತ್ಯೆ ಮಾಡಲು ಹೋಗುವುದಿಲ್ಲ. ನಾಗರಿಕರು ಅಥವಾ ಅಮೇರಿಕನ್ ಸೈನಿಕರ ಮೇಲೆ ಕ್ಷಿಪಣಿಗಳು ಹಾರಿಸುವುದನ್ನು ನಾವು ಬಯಸುವುದಿಲ್ಲ. ನಮ್ಮ ಸಹನೆಯನ್ನು ಪರೀಕ್ಷೆ ಮಾಡುವುದು ಬೇಡ ಎಂದಿದ್ದಾರೆ. ಇದನ್ನೂ ಓದಿ: ಅಮೆರಿಕಗೆ ತೆರಳಲು ನೋ ಕ್ಲಿಯರೆನ್ಸ್ – ಪ್ರಿಯಾಂಕ್ ಖರ್ಗೆಗೆ ಬಿಗ್ ಶಾಕ್
ನಾವು ಈಗ ಇರಾನ್ ಆಕಾಶದ ಮೇಲೆ ಸಂಪೂರ್ಣ ನಿಯಂತ್ರಣವನ್ನು ಹೊಂದಿದ್ದೇವೆ. ಇರಾನ್ ಉತ್ತಮ ಸ್ಕೈ ಟ್ರ್ಯಾಕರ್‌ಗಳು ಮತ್ತು ಇತರ ರಕ್ಷಣಾ ಸಾಧನಗಳನ್ನು ಹೊಂದಿತ್ತು. ಆದರೆ ಅಮೇರಿಕ ನಿರ್ಮಿತ ಸಾಮಾಗ್ರಿಗೆ ಹೋಲಿಕೆ ಮಾಡಲು ಸಾಧ್ಯವಿಲ್ಲ. ಅಮೆರಿಕ ತಯಾರಿಸಿದಂತೆ ಯಾರೂ ಉತ್ತಮವಾಗಿ ತಯಾರಿಸಲು ಸಾಧ್ಯವಿಲ್ಲ ಎಂದು ಪೋಸ್ಟ್‌ನಲ್ಲಿ ಹೇಳಿದ್ದಾರೆ.
ವಾಷಿಂಗ್ಟನ್: ಐಫೋನ್‌ಗಳನ್ನು (iPhone) ಅಮೆರಿಕದಲ್ಲಿ ಉತ್ಪಾದನೆ ಮಾಡುವಂತೆ ಆಪಲ್‌ಗ ಸೂಚಿಸಿದ್ದ ಡೊನಾಲ್ಡ್ ಟ್ರಂಪ್ (Donald Trump) ಈಗ ಮೊಬೈಲ್ ಫೋನ್ ಮತ್ತು ವಯರ್‌ಲೆಸ್ ಸೇವಾ ಉದ್ಯಮಕ್ಕೆ ಕಾಲಿಟ್ಟಿದ್ದಾರೆ. ಟ್ರಂಪ್ ಕುಟುಂಬ ಈಗ Trump Mobile T1 Phone ಹೆಸರಿನಲ್ಲಿ ಆಂಡ್ರಾಯ್ಡ್ ಫೋನ್ ಮಾರುಕಟ್ಟೆ ಬಿಡುಗಡೆ ಮಾಡಿದೆ.
ಚಿನ್ನದ ಬಣ್ಣದ ಫೋನ್ ಇದಾಗಿದ್ದು 499 ಡಾಲರ್ (ಅಂದಾಜು 43,000 ರೂ.) ದರವನ್ನು ನಿಗದಿ ಮಾಡಲಾಗಿದೆ. ಈ ಫೋನನ್ನು ಅಮೆರಿಕದಲ್ಲೇ ಉತ್ಪಾದನೆ ಮಾಡಲಾಗಿದೆ ಎಂದು ಕಂಪನಿ ತಿಳಿಸಿದೆ. The Trump Organization ನಲ್ಲಿ ಎರಿಕ್ ಟ್ರಂಪ್ ಮತ್ತು ಡೊನಾಲ್ಡ್ ಟ್ರಂಪ್ ಕಾರ್ಯನಿರ್ವಾಹಕ ಉಪಾಧ್ಯಕ್ಷರಾಗಿದ್ದಾರೆ.
T1 ಮೊಬೈಲ್ ಸೇವೆಯು ʼ47 ಪ್ಲಾನ್ʼ ಹೆಸರಿನ ಸೇವೆಯನ್ನು ನೀಡುತ್ತಿದೆ. ಟ್ರಂಪ್ ಅಮೆರಿಕದ 47ನೇ ಅಧ್ಯಕ್ಷರಾಗಿದ್ದಾರೆ. ಈ ಕಾರಣಕ್ಕೆ ಈ ಸೇವೆಗೆ 47 ಪ್ಲಾನ್ ಎಂಬ ಹೆಸರನ್ನು ಇಡಲಾಗಿದೆ
ಟ್ರಂಪ್ ಮೊಬೈಲ್ ವರ್ಚುವಲ್ ಆಪರೇಟರ್ ಆಗಿ ಕೆಲಸ ಮಾಡುತ್ತದೆ. ಅಂದರೆ ಇದು ಅಮೆರಿಕದ ಟೆಲಿಕಾಂ ದೈತ್ಯ ಕಂಪನಿಗಳಾದ Verizon, AT&T ಮತ್ತು T-Mobile ನಿಯಂತ್ರಿಸುವ ನೆಟ್‌ವರ್ಕ್‌ಗಳ ಮೂಲಕ ಸೇವೆಗಳನ್ನು ನೀಡುತ್ತದೆ. 5G ಸೇವೆಗೆ ಮಾಸಿಕ 47.45 ಡಾಲರ್(4,097 ರೂ.) ದರವನ್ನು ನಿಗದಿ ಮಾಡಲಾಗಿದೆ. ಇದನ್ನೂ ಓದಿ: ಇರಾನ್ ಜನ ತಕ್ಷಣವೇ ಟೆಹ್ರಾನ್ ಖಾಲಿ ಮಾಡಿ: ಟ್ರಂಪ್ ಸೂಚನೆ
ಫೋನಿನ ಗುಣವೈಶಿಷ್ಟ್ಯಗಳೇನು?
6.78 ಇಂಚಿನ AMOLED ಸ್ಕ್ರೀನ್, 1080 x 2460 ಪಿಕ್ಸೆಲ್, ~396 ಪಿಪಿಐ ಹೊಂದಿದೆ. ನ್ಯಾನೋ ಸಿಮ್ + ಇ ಸಿಮ್ ಹಾಕಬಹುದಾಗಿದ್ದು ಅಕ್ಟಾಕೋರ್ ಪ್ರೊಸೆಸರ್‌ನೊಂದಿಗೆ ಬಂದಿದೆ.
ಹಿಂದು ಗಡೆ 50 ಎಂಪಿ (ವೈಡ್), 2 ಎಂಪಿ(ಮ್ಯಾಕ್ರೋ), 2 ಎಂಪಿ(ಡೆಪ್ತ್) ಕ್ಯಾಮೆರಾವನ್ನು ನೀಡಲಾಗಿದೆ. ಮುಂದುಗಡೆ 16 ಎಂಪಿ ಕ್ಯಾಮೆರಾವನ್ನು ಹೊಂದಿದೆ. ಫೋನಿಗೆ ಫಿಂಗರ್ ಪ್ರಿಂಟ್ ಸ್ಕ್ಯಾನರ್ ಜೊತೆ 5000 mAh ಬ್ಯಾಟರಿಯನ್ನು ನೀಡಲಾಗಿದೆ.
ಈ ಫೋನ್ ಖರೀದಿಸುವ ಗ್ರಾಹಕರು www.trumpmobile.com ಹೋಗಿ ಪ್ರಿ ಆರ್ಡರ್ ಮಾಡಬಹುದಾಗಿದೆ.
ಒಟ್ಟಾವಾ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಬಿಕ್ಕಟ್ಟಿನಲ್ಲಿ ಇಸ್ರೇಲ್‌ಗೆ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕಿದೆ ಎಂದು G-7 ಶೃಂಗಸಭೆಯಲ್ಲಿ (G-7 Summit) ನಾಯಕರು ಅಭಿಪ್ರಾಯಪಟ್ಟಿದ್ದಾರೆ. ಆ ಮೂಲಕ ಇರಾನ್ (Iran) ಜೊತೆಗಿನ ಸಂಘರ್ಷದಲ್ಲಿ ಇಸ್ರೇಲ್‌ಗೆ (Israel) ಬೆಂಬಲ ವ್ಯಕ್ತಪಡಿಸಿದ್ದಾರೆ.
ಜಿ-7 ನಾಯಕರಾದ ನಾವು ಮಧ್ಯಪ್ರಾಚ್ಯದಲ್ಲಿ ಶಾಂತಿ ಮತ್ತು ಸ್ಥಿರತೆಗೆ ಬದ್ಧರಾಗಿದ್ದೇವೆ. ಈ ಸಂದರ್ಭದಲ್ಲಿ ಇಸ್ರೇಲ್ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕಿದೆ ಎಂಬುದು ನಮ್ಮ ಅಭಿಪ್ರಾಯ. ಇಸ್ರೇಲ್‌ನ ಸುರಕ್ಷತೆಗಾಗಿ ನಾವು ನಮ್ಮ ಬೆಂಬಲವನ್ನು ಪುನರುಚ್ಚರಿಸುತ್ತೇವೆ. ನಾಗರಿಕರ ರಕ್ಷಣೆಯ ಮಹತ್ವವನ್ನು ದೃಢೀಕರಿಸುತ್ತೇವೆ ಎಂದು ಕೆನಡಾದ ಪ್ರಧಾನ ಮಂತ್ರಿಯ ಕಚೇರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಇದನ್ನೂ ಓದಿ: ತಾರಕಕ್ಕೇರಿದ ಇರಾನ್-ಇಸ್ರೇಲ್ ಸಂಘರ್ಷ: ಭಾರತದ ನಿಲುವು ಮಾತ್ರ ತಟಸ್ಥ
ಇರಾನ್ ದೇಶವು ಪ್ರಾದೇಶಿಕ ಅಸ್ಥಿರತೆ ಮತ್ತು ಭಯೋತ್ಪಾದನೆಯ ಪ್ರಮುಖ ಮೂಲವಾಗಿದೆ. ಇರಾನ್ ಎಂದಿಗೂ ಪರಮಾಣು ಶಸ್ತ್ರಾಸ್ತ್ರವನ್ನು ಹೊಂದಲು ಸಾಧ್ಯವಿಲ್ಲ ಎಂದು ನಾವು ನಿರಂತರವಾಗಿ ಸ್ಪಷ್ಟಪಡಿಸಿದ್ದೇವೆ. ಇರಾನಿನ ಬಿಕ್ಕಟ್ಟಿನ ನಿರ್ಣಯವು ಮಧ್ಯಪ್ರಾಚ್ಯದಲ್ಲಿ ವ್ಯಾಪಕವಾದ ಹಗೆತನಕ್ಕೆ ಕಾರಣವಾಗುತ್ತದೆ ಎಂದು ತಿಳಿಸಿದೆ.
ಬ್ರಿಟನ್, ಕೆನಡಾ, ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್, ಯುನೈಟೆಡ್ ಸ್ಟೇಟ್ಸ್‌ನಿಂದ ರಾಷ್ಟ್ರದ ಮುಖ್ಯಸ್ಥರು ಮತ್ತು ಯುರೋಪಿಯನ್ ಒಕ್ಕೂಟದ ಪ್ರತಿನಿಧಿಗಳು ಮಂಗಳವಾರ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರು. ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅರ್ಧಕ್ಕೆ ಮೊಟಕು ಗೊಳಿಸಿ ಹೊರಟರು. ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದ ಕಾರಣಕ್ಕೆ ಟ್ರಂಪ್ ಅರ್ಧದಲ್ಲೇ ಎದ್ದು ಹೊರನಡೆದರು.
ವಾಷಿಂಗ್ಟನ್: ಇಸ್ರೇಲ್ ಮತ್ತು ಇರಾನ್ (Israel Iran Conflict) ಪರಸ್ಪರ ಐದನೇ ದಿನವೂ ದಾಳಿ ನಡೆಸಿವೆ. ಇರಾನ್ ಜನತೆ ತಕ್ಷಣವೇ ಟೆಹ್ರಾನ್ ತೊರೆಯುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಸೂಚಿಸಿದ್ದಾರೆ.
ಮಧ್ಯಪ್ರಾಚ್ಯದ ಪರಿಸ್ಥಿತಿಯಿಂದಾಗಿ ಟ್ರಂಪ್ ಸೋಮವಾರ ಕೆನಡಾದಲ್ಲಿ ನಡೆದ ಗ್ರೂಪ್ ಆಫ್ ಸೆವೆನ್ ಶೃಂಗಸಭೆಯಿಂದ ಒಂದು ದಿನ ಮುಂಚಿತವಾಗಿ ಹೊರಡಬೇಕಿತ್ತು ಎಂದು ಶ್ವೇತಭವನ ತಿಳಿಸಿದೆ. ಇಸ್ರೇಲ್ ಮತ್ತು ಇರಾನ್ ಕದನ ವಿರಾಮಕ್ಕೆ ಒಪ್ಪಿಗೆ ನೀಡುವುದು ತಕ್ಷಣದ ಉದ್ದೇಶವಾಗಿರುವುದರಿಂದ ಟ್ರಂಪ್ ಅವರ ಆರಂಭಿಕ ನಿರ್ಗಮನ ಸಕಾರಾತ್ಮಕವಾಗಿದೆ ಎಂದು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಹೇಳಿದ್ದಾರೆ. ಇದನ್ನೂ ಓದಿ: Iran-Israel Conflict | ಕರ್ನಾಟಕಕ್ಕೆ ಬರುತ್ತಿದ್ದ ಮಸಾಲೆ, ಡ್ರೈಫ್ರೂಟ್ಸ್ ಸಪ್ಲೈ ಬಂದ್
ನಾನು ಹೇಳಿದ ಒಪ್ಪಂದಕ್ಕೆ ಇರಾನ್ ಸಹಿ ಹಾಕಬೇಕಿತ್ತು. ಎಂತಹ ನಾಚಿಕೆಗೇಡಿನ ಸಂಗತಿ. ಮಾನವ ಜೀವ ವ್ಯರ್ಥ. ಇರಾನ್ ಪರಮಾಣು ಶಸ್ತ್ರಾಸ್ತ್ರವನ್ನು ಹೊಂದಲು ಸಾಧ್ಯವಿಲ್ಲ. ನಾನು ಅದನ್ನು ಮತ್ತೆ ಮತ್ತೆ ಹೇಳಿದ್ದೇನೆ. ಎಲ್ಲರೂ ತಕ್ಷಣ ಟೆಹ್ರಾನ್ ಅನ್ನು ಬಿಟ್ಟು ಹೊರಡಿ ಎಂದು ಎಕ್ಸ್ ಖಾತೆಯಲ್ಲಿ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.
ಮಂಗಳವಾರ ಮುಂಜಾನೆ ಟೆಹ್ರಾನ್‌ನಲ್ಲಿ ಸ್ಫೋಟಗಳು ಮತ್ತು ಭಾರೀ ವಾಯು ರಕ್ಷಣಾ ಗುಂಡಿನ ದಾಳಿ ನಡೆದಿರುವುದಾಗಿ ಇರಾನಿನ ಮಾಧ್ಯಮಗಳು ವರದಿ ಮಾಡಿವೆ. 320 ಕಿಮೀ (200 ಮೈಲುಗಳು) ದೂರದಲ್ಲಿರುವ ಪ್ರಮುಖ ಪರಮಾಣು ಸ್ಥಾಪನೆಗಳ ನೆಲೆಯಾದ ನಟಾಂಜ್‌ನಲ್ಲಿಯೂ ವಾಯು ರಕ್ಷಣಾ ಪಡೆಗಳನ್ನು ಸಕ್ರಿಯಗೊಳಿಸಲಾಗಿದೆ ಎಂದು ತಿಳಿಸಿವೆ. ಇದನ್ನೂ ಓದಿ: ಭಾರತದ ಮನವಿಗೆ ಸ್ಪಂದಿಸಿ ಭೂ ಗಡಿ ತೆರೆದ ಇರಾನ್
ಇಸ್ರೇಲ್‌ನಲ್ಲಿ ಮಧ್ಯರಾತ್ರಿಯ ನಂತರ ಟೆಲ್ ಅವೀವ್‌ನಲ್ಲಿ ವಾಯುದಾಳಿ ಸೈರನ್‌ಗಳು ಕೂಗಿದವು. ಇರಾನಿನ ಕ್ಷಿಪಣಿಗಳು ಮತ್ತೆ ಇಸ್ರೇಲ್ ಗುರಿಯಾಗಿಸಿಕೊಂಡು ದಾಳಿ ಮುಂದುವರಿಸಿದೆ.
ಐದು ದಿನಗಳಲ್ಲಿ ಇರಾನ್‌ನಲ್ಲಿ 224 ಮಂದಿ ಸಾವಿಗೀಡಾಗಿದ್ದಾರೆ. ಇಸ್ರೇಲ್‌ನಲ್ಲಿ 24 ನಾಗರಿಕರು ಸಾವನ್ನಪ್ಪಿದ್ದಾರೆ. ಇರಾನಿನ ದಾಳಿಯಿಂದ ಹಾನಿಗೊಳಗಾದ ಸುಮಾರು 3,000 ಇಸ್ರೇಲಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಇಸ್ರೇಲ್ ಹಣಕಾಸು ಸಚಿವ ಬೆಜಲೆಲ್ ಸ್ಮೋಟ್ರಿಚ್ ಹೇಳಿದ್ದಾರೆ. ಇದನ್ನೂ ಓದಿ: ಇರಾನ್ ಸರ್ಕಾರಿ ವಾಹಿನಿ ಮೇಲೆ ಬಾಂಬ್ ದಾಳಿ – ಲೈವ್‌ನಿಂದಲೇ ಓಡಿ ಹೋದ ನಿರೂಪಕಿ
– ಇರಾನ್ ಮೇಲಿನ ದಾಳಿಗೆ ಇಸ್ರೇಲ್ ಅಮೆರಿಕದ ಶಸ್ತ್ರಾಸ್ತ್ರ ಬಳಸಿಕೊಂಡಿದೆ
ವಾಷಿಂಗ್ಟನ್/ಟೆಹ್ರಾನ್: ಇಸ್ರೇಲ್ ನಡೆಸಿದ ವಾಯುದಾಳಿಗೂ (Israel Air Strike) ನಮಗೂ ಯಾವುದೇ ಸಂಬಂಧವಿಲ್ಲ. ಒಂದು ವೇಳೆ ಇರಾನ್ ಅಮೆರಿಕದ ಮೇಲೆ ದಾಳಿ ಮಾಡಿದ್ರೆ, ಹಿಂದೆಂದೂ ನೋಡಿರದ ಮಟ್ಟದಲ್ಲಿ ನಮ್ಮ ಮಿಲಿಟರಿ ಬಲವನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಎಚ್ಚರಿಕೆ ನೀಡಿದ್ದಾರೆ.
ಇಸ್ರೇಲ್ ನೆರವಿಗೆ ಬಂದರೆ ನಿಮ್ಮ ನೌಕಾನೆಲೆಗಳನ್ನು ಧ್ವಂಸಗೊಳಿಸ್ತೇವೆ ಎಂದು ಇರಾನ್ (Iran) ಎಚ್ಚರಿಕೆ ನೀಡಿದ ಬೆನ್ನಲ್ಲೇ ಟ್ರಂಪ್ ವಾರ್ನಿಂಗ್ ಕೊಟ್ಟಿದ್ದಾರೆ. ಇರಾನ್‌ನ ಅಣ್ವಸ್ತ್ರ ಮತ್ತು ಮಿಲಿಟರಿ ನೆಲೆಗಳ ಮೇಲಿನ ಇಸ್ರೇಲ್ ದಾಳಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಇರಾನ್ ನಮ್ಮ ಮೇಲೆ ಯಾವುದೇ ರೀತಿಯಲ್ಲಿ ದಾಳಿ ಮಾಡಿದ್ರೆ ಅಮೆರಿಕದ ಪಡೆಗಳ ಸಂಪೂರ್ಣ ಶಕ್ತಿ ಅಲ್ಲಿ ಬಂದಿಳಿಯಲಿದೆ. ಇಂದೆಂದೂ ನೋಡಿರದ ಮಟ್ಟದಲ್ಲಿ ಸೇನಾ ಬಲವನ್ನು (US Armed Forces) ಎದುರಿಸಬೇಕಾಗುತ್ತದೆ ಎಂದು ಭೀಕರ ದಾಳಿಯ ಮುನ್ಸೂಚನೆ ನೀಡಿದ್ದಾರೆ. ಇದನ್ನೂ ಓದಿ: Israel vs Iran War: ಹೊತ್ತಿ ಉರಿದ ಟೆಹ್ರಾನ್- ತೈಲ ಡಿಪೋ ಮೇಲೆ ಇಸ್ರೇಲ್ ದಾಳಿ
ಒಂದು ಕಾಲದಲ್ಲಿ ಇರಾನ್ ಸಾಮ್ರಾಜ್ಯ ಎಂದು ಕರೆಯಲ್ಪಡುತ್ತಿತ್ತು, ಈಗ ಅವರಲ್ಲಿ ಏನೂ ಉಳಿದಿಲ್ಲ. ಇರಾನ್‌ನ ಪರಿಸ್ಥಿತಿ ಕುರಿತಂತೆ ರಾಷ್ಟ್ರೀಯ ಭದ್ರತಾ ತಂಡದ ಜೊತೆ ಮಾತುಕತೆ ನಡೆಸಿದ್ದೇನೆ. ದಾಳಿಯಲ್ಲಿ ನಮ್ಮ ದೇಶದ ಯಾವುದೇ ಪಾತ್ರವಿಲ್ಲ. ಆದರೆ, ಇರಾನ್ ಮೇಲಿನ ದಾಳಿಗೆ ಅಮೆರಿಕದ ಶಸ್ತ್ರಾಸ್ತ್ರಗಳನ್ನು ಇಸ್ರೇಲ್ ಬಳಸಿಕೊಂಡಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕ್ಷಿಪಣಿ ದಾಳಿ, ಪ್ರತಿದಾಳಿ – ಇರಾನ್, ಇಸ್ರೇಲ್‌ನಲ್ಲಿ 80 ಮಂದಿ ಸಾವು
ಇನ್ನಷ್ಟು ವಿನಾಶವಾಗುವ ಮುನ್ನ ಇರಾನ್ ಒಪ್ಪಂದಕ್ಕೆ ಬರಲು ಮತ್ತೊಂದು ಅವಕಾಶವಿದೆ. ಇರಾನ್ ಮತ್ತು ಇಸ್ರೇಲ್ ನಡುವೆ ಸುಲಭವಾಗಿ ಒಪ್ಪಂದ ಮಾಡಿಕೊಳ್ಳಬಹುದು. ಜೊತೆಗೆ ಈ ರಕ್ತಸಿಕ್ತ ಸಂಘರ್ಷವನ್ನು ಕೊನೆಗೊಳಿಸಬಹುದು ಎಂದು ತಮ್ಮ ಸೋಷಿಯಲ್ ಮೀಡಿಯಾ ವೇದಿಕೆ ‘ಟ್ರುತ್ ಸೋಶಿಯಲ್’ನಲ್ಲಿ ಅಭಿಪ್ರಯಾ ಹಂಚಿಕೊಂಡಿದ್ದಾರೆ. ಅಲ್ಲದೇ ಇರಾನ್ ತನ್ನ ಪರಮಾಣು ಯೋಜನೆಗಳನ್ನು ಸ್ಥಗಿತಗೊಳಿಸುವ ಸಂಬಂಧ ಶೀಘ್ರ ಒಪ್ಪಂದಕ್ಕೆ ಬರುವಂತೆ ಒತ್ತಾಯಿಸಿದ್ದಾರೆ.
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಮತ್ತು ವಿಶ್ವದ ಶ್ರೀಮಂತ ವ್ಯಕ್ತಿ, ಟೆಸ್ಲಾ ಮುಖ್ಯಸ್ಥ ಎಲೋನ್ ಮಸ್ಕ್ (Elon Musk) ಮತ್ತೆ ಒಂದಾಗುವ ಲಕ್ಷಣಗಳು ಕಾಣಿಸತೊಡಗಿವೆ.
ಜೂನ್ 10 ರಂದು ಟ್ರಂಪ್ ಬಳಿ ಎಲೋನ್ ಮಸ್ಕ್ ಜೊತೆ ಮಾತನಾಡಲು ಮುಂದಾಗುತ್ತೀರಾ ಎಂದು ವರದಿಗಾರರು ಪ್ರಶ್ನೆ ಮಾಡಿದ್ದರು. ಇದಕ್ಕೆ ಟ್ರಂಪ್, ನಾನು ನಿಜವಾಗಿಯೂ ಅದರ ಬಗ್ಗೆ ಯೋಚಿಸಿಲ್ಲ. ಅವರು ನನ್ನೊಂದಿಗೆ ಮಾತನಾಡಲು ಬಯಸುತ್ತಾರೆ ಎಂದು ನಾನು ಊಹಿಸುತ್ತೇನೆ. ನಾನು ಅವರ ಸ್ಥಾನದಲ್ಲಿದ್ದರೆ ನಾನು ಮಾತನಾಡಲು ಬಯಸುತ್ತಿದ್ದೆ. ನಾವು ಉತ್ತಮ ಸಂಬಂಧವನ್ನು ಹೊಂದಿದ್ದೇವೆ ಮತ್ತು ನಾನು ಅವರಿಗೆ ಶುಭ ಹಾರೈಸುತ್ತೇನೆ ಎಂದು ಹೇಳಿದ್ದರು.
I regret some of my posts about President @realDonaldTrump last week. They went too far.
ಟ್ರಂಪ್ vs ಮಸ್ಕ್
ಮಸ್ಕ್ ಅವರು ಟ್ರಂಪ್ ಅವರನ್ನು ಉಚ್ಚಾಟಿಸಿ ಉಪಾಧ್ಯಕ್ಷ ಜೆಡಿ ವಾನ್ಸ್ (JD Vance) ಅವರನ್ನು ಅಧ್ಯಕ್ಷರನ್ನಾಗಿ ಮಾಡಬೇಕು ಎಂದು ಹೇಳಿದ ಬೆನ್ನಲ್ಲೇ ಟ್ರಂಪ್ ಮಸ್ಕ್ ಕಂಪನಿ ಜೊತೆ ಮಾಡಿಕೊಂಡಿದ್ದ ಸರ್ಕಾರಿ ಒಪ್ಪಂದಗಳನ್ನು ಕಡಿತಗೊಳಿಸುವುದಾಗಿ ಬೆದರಿಕೆ ಹಾಕಿದ್ದರು.
ಟ್ರಂಪ್ ಅವರ ಕನಸಿನ ತೆರಿಗೆ ಬಿಲ್‌ಗೆ ಸಂಬಂಧಿಸಿದಂತೆ ಉಂಟಾದ ಭಿನ್ನಭಿಪ್ರಾಯದಿಂದ DOGE ಹುದ್ದೆಯನ್ನು ಮಸ್ಕ್ ತೊರೆದಿದ್ದರು. ಈಗ ಅದೇ ವಿಚಾರವನ್ನು ಇಟ್ಟುಕೊಂಡು ಟ್ರಂಪ್ ನೀತಿಯನ್ನು ಬಹಿರಂಗವಾಗಿಯೇ ವಿರೋಧಿಸಿ ಎಕ್ಸ್‌ನಲ್ಲಿ ಪೋಸ್ಟ್ ಹಾಕುತ್ತಿದ್ದರು. ಇದನ್ನೂ ಓದಿ: ಸರ್ಕಾರದಿಂದ ಹೊರ ಬಂದ ಬೆನ್ನಲ್ಲೇ ಟ್ರಂಪ್ ವಿರುದ್ಧ ಮಸ್ಕ್ ಕೆಂಡಾಮಂಡಲ
ಕ್ಷಮಿಸಿ, ಇನ್ನು ಮುಂದೆ ನಾನು ಸಹಿಸಲಾರೆ. ಈ ಅತಿರೇಕದ ಮಸೂದೆಯು ಅಸಹ್ಯಕರವಾಗಿದೆ. ಇದಕ್ಕೆ ಮತ ಹಾಕಿದವರಿಗೆ ನಾಚಿಕೆಯಾಗಬೇಕು. ನೀವು ತಪ್ಪು ಮಾಡಿದ್ದೀರಿ ಎನ್ನುವುದು ನಿಮಗೆ ತಿಳಿದಿದೆ. ಈ ಮಸೂದೆ 2.5 ಟ್ರಿಲಿಯನ್ ಡಾಲರ್ ಬಜೆಟ್ ಕೊರತೆಯನ್ನು ಹೆಚ್ಚಿಸುತ್ತದೆ ಮತ್ತು ಅಮೆರಿಕ ಜನರ ಮೇಲೆ ಭಾರೀ ಪ್ರಮಾಣದ ಸಾಲದ ಹೊರೆಯನ್ನು ಹೊರಿಸುತ್ತದೆ ಎಂದು ಎಕ್ಸ್‌ನಲ್ಲಿ ಖಾರವಾಗಿ ಮಸ್ಕ್ ಬರೆದಿದ್ದರು.
ಡೊನಾಲ್ಡ್ ಟ್ರಂಪ್ ಅವರು ವೆಚ್ಚ ಕಡಿತಗೊಳಿಸಲು ಬಿಗ್ ಬ್ಯುಟಿಫುಲ್ ಮಸೂದೆಯನ್ನು ಪರಿಚಯಿಸಿದ್ದರು. ಈ ಮಸೂದೆಯ ಬಗ್ಗೆ ಅಮೆರಿಕದ ಆರ್ಥಿಕ ತಜ್ಞರು ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಮಸ್ಕ್, ಈ ಮಸೂದೆ ಬಜೆಟ್ ಕೊರತೆಯನ್ನು ಹೆಚ್ಚಿಸುತ್ತದೆ ಎಂದು ದೂರಿದ್ದರು.
ವ್ಯಾಪಾರದ ವಿಚಾರಗಳನ್ನು ಮುಂದಿಟ್ಟುಕೊಂಡು ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷದಲ್ಲಿ ಅಮೆರಿಕ ಮತ್ತೆ ಎಂಟ್ರಿ ಕೊಟ್ಟಿದೆ. ಜಮ್ಮು-ಕಾಶ್ಮೀರದ (Jammu & Kashmir) ಪಹಲ್ಗಾಮ್‌ನಲ್ಲಿ (Pahalgam) ಈಚೆಗೆ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸಿದ್ದರು. ಅದಕ್ಕೆ ಪ್ರತೀಕಾರವಾಗಿ ಭಾರತ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿತು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿದ್ದ ಉಗ್ರರ ತಾಣಗಳನ್ನು ಭಾರತ ಧ್ವಂಸಗೊಳಿಸಿತು. ಇದು ಭಾರತ-ಪಾಕ್ ನಡುವಿನ ಸಂಘರ್ಷ ಉದ್ವಿಗ್ನತೆಗೆ ಕಾರಣವಾಯಿತು. ಪರಸ್ಪರ ದೇಶಗಳು ದಾಳಿ-ಪ್ರತಿದಾಳಿ ನಡೆಸಿದವು. ಯುದ್ಧದ ಕಾರ್ಮೋಡ ಕವಿದಿದ್ದ ಹೊತ್ತಲ್ಲೇ ಮಧ್ಯಪ್ರವೇಶಿಸಿದ ಅಮೆರಿಕ ಉಭಯ ದೇಶಗಳ ನಡುವೆ ಸಂಧಾನಕ್ಕೆ ಒತ್ತಾಯಿಸಿತು.
ಭಾರತ ಮತ್ತು ಪಾಕಿಸ್ತಾನ (India-Pakistan War) ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ ಎಂದು ಮೊದಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದರು. ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಸ್ಪಷ್ಟಪಡಿಸಿದರು. ಅದರ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನ ಕೂಡ ಮಾತುಕತೆ ವಿಚಾರವನ್ನು ಬಹಿರಂಗಪಡಿಸಿದವು. ಅಮೆರಿಕ ವಹಿಸಿದ ಪಾತ್ರದ ಬಗ್ಗೆ ಹಲವು ಸಭೆಗಳಲ್ಲಿ ಟ್ರಂಪ್ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಸಂಘರ್ಷ ಕೊನೆಗಾಣಿಸುವ ನಿಟ್ಟಿನಲ್ಲಿ ಯುಎಸ್ ಪಾತ್ರ ಫಲಕೊಟ್ಟಿದೆ ಎಂದು ಪ್ರತಿಪಾದಿಸಿದರು. ಹೀಗೆ ಟ್ರಂಪ್ ಆಡಿರುವ ಮಾತೊಂದು ಕುತೂಹಲಕಾರಿಯಾಗಿದೆ. ‘ವ್ಯಾಪಾರ ಮಾತುಕತೆಗಳನ್ನು ದಾಳವಾಗಿ ಬಳಸಿಕೊಂಡು ಭಾರತ ಮತ್ತು ಪಾಕ್ ನಡುವಿನ ಸಂಘರ್ಷ ನಿಲ್ಲಿಸಿದೆವು’ ಎಂದು ಟ್ರಂಪ್ ಹೇಳಿದ್ದಾರೆ. ‘ನಾವು ವ್ಯಾಪಾರದ ಬಗ್ಗೆ ಮಾತನಾಡುತ್ತೇವೆ. ಪರಸ್ಪರ ಗುಂಡು ಹಾರಿಸುವ ಮತ್ತು ಸಂಭಾವ್ಯವಾಗಿ ಪರಮಾಣ ಶಸ್ತ್ರಾಸ್ತ್ರಗಳನ್ನು ಬಳಸುವ ಜನರೊಂದಿಗೆ ನಾವು ವ್ಯಾಪಾರ ಮಾಡಲು ಸಾಧ್ಯವಿಲ್ಲ’ ಎಂದು ಟ್ರಂಪ್ ಒತ್ತಿ ಹೇಳಿದ್ದಾರೆ. ಆದರೆ, ಪಾಕ್ ಜೊತೆಗಿನ ದ್ವಿಪಕ್ಷೀಯ ಮಾತುಕತೆ ವಿಚಾರದಲ್ಲಿ ಅಮೆರಿಕದ ವ್ಯಾಪಾರ ಲೆಕ್ಕಾಚಾರ ಸೇರಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ವಿಶ್ವದ ದೊಡ್ಡ ಕಂಟೇನರ್ ಹಡಗು ವಿಳಿಂಜಂ ಬಂದರಿಗೆ ಆಗಮನ
ಟ್ರಂಪ್ ಅಸಾಧಾರಣ ಹೇಳಿಕೆಗಳನ್ನು ನೀಡುವುದಕ್ಕೆ ಹೆಸರುವಾಸಿ. ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಭಾವ್ಯ ಪರಮಾಣು ಯುದ್ಧವನ್ನು ನಿಲ್ಲಿಸಿದ್ದೇವೆಂಬ ಅವರ ಹೇಳಿಕೆಗಳು ಭಾರತವನ್ನು ಮತ್ತಷ್ಟು ಕೆರಳಿಸಿದೆ. ಪಾಕಿಸ್ತಾನದೊಂದಿಗಿನ ತನ್ನ ಸಮಸ್ಯೆಗಳಿಗೆ 3ನೇ ವ್ಯಕ್ತಿಯ ಹಸ್ತಕ್ಷೇಪದ ಅಗತ್ಯವಿಲ್ಲದೇ ದ್ವಿಪಕ್ಷೀಯವಾಗಿ ಪರಿಹರಿಸಬೇಕು ಎಂಬ ಭಾರತದ ಸ್ಥಾಪಿತ ನಿಲುವಿಗೆ ಟ್ರಂಪ್ ಅವರ ಮಾತುಗಳು ವಿರುದ್ಧವಾಗಿವೆ. ಭಾರತದ ಈ ನಿಲುವಿಗೂ ಒಂದು ಕಾರಣವಿದೆ. ಉಭಯ ದೇಶಗಳ ಸಂಘರ್ಷದ ಸನ್ನಿವೇಶದಲ್ಲಿ ಮೂರನೇ ವ್ಯಕ್ತಿಯಾಗಿ ಅಮೆರಿಕವು ಹಲವು ಸಂದರ್ಭಗಳಲ್ಲಿ ಭಾರತಕ್ಕಿಂತ ಪಾಕ್ ಹಿತಾಸಕ್ತಿಗೆ ಅನುಗುಣವಾಗಿ ವರ್ತಿಸಿದೆ.
ಪಾಕ್-ಭಾರತದ ನಡುವಿನ ಸಂಘರ್ಷವೇನು? ಮೂರನೇಯವರಾಗಿ ಅಮೆರಿಕ ಹಸ್ತಕ್ಷೇಪ ಮಾಡುವುದನ್ನು ಪಾಕ್ ಯಾಕೆ ವಿರೋಧಿಸುತ್ತದೆ? ಈ ಹಿಂದಿನ ಭಾರತ-ಪಾಕ್ ನಡುವಿನ ಯುದ್ಧದ ಸಂದರ್ಭಗಳಲ್ಲಿ ಅಮೆರಿಕದ ಪಾತ್ರವೇನು ಎಂಬ ಪ್ರಶ್ನೆಗಳು ಮೂಡುವುದು ಸಹಜ. ವಿವರ ಇಲ್ಲಿದೆ.
ವಿಶ್ವಸಂಸ್ಥೆಯಲ್ಲಿ ದ್ರೋಹ
ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ನಂತರ ಕೇವಲ 2 ತಿಂಗಳಲ್ಲಿ ಪಾಕಿಸ್ತಾನದಿಂದ ಬಂದ ನುಸುಳುಕೋರರು ಜಮ್ಮು & ಕಾಶ್ಮೀರದ ಮೇಲೆ ದಾಳಿ ಮಾಡಿದರು. ವೈಸ್ರಾಯ್ ಲಾರ್ಡ್ ಲೂಯಿಸ್ ಮೌಂಟ್ ಬ್ಯಾಟನ್ ಭಾರತಕ್ಕೆ ವಿಶ್ವಸಂಸ್ಥೆ ಮೊರೆ ಹೋಗುವಂತೆ ಸಲಹೆ ನೀಡಿದರು. 1948ರ ಜನವರಿ 1ರಂದು ಭಾರತ ವಿಶ್ವಸಂಸ್ಥೆ ಕದ ತಟ್ಟಿತು. ಕಾನೂನು ಬದ್ಧವಾಗಿ ತನಗೆ ಸೇರಿರುವ ಪ್ರದೇಶದ ಮೇಲಿನ ತನ್ನ ಹಕ್ಕಗಳನ್ನು ವಿಶ್ವಸಂಸ್ಥೆಯಲ್ಲಿ ಗೌರವಿಸಲಾಗುತ್ತದೆಂಬ ನಿರೀಕ್ಷೆಯನ್ನು ಭಾರತ ಹೊಂದಿತ್ತು. ಆದರೆ, ಬ್ರಿಟಿಷರು ಭಾರತವನ್ನು ಬೆಂಬಲಿಸಲಿಲ್ಲ. ನಿಜಕ್ಕೂ ಈ ನಡೆ ಭಾರತದ ಬಗೆದ ದ್ರೋಹವಾಯಿತು. ಜಾಗತಿಕವಾಗಿ ಭಾರತವು ಅತಿದೊಡ್ಡ ಶಕ್ತಿಯಾಗಿ ಹೊರಹೊಮ್ಮುವ ಆತಂಕದಲ್ಲಿ ವಿಶ್ವಸಂಸ್ಥೆಯು ಹಿಂದೇಟು ಹಾಕಿತು. ಈ ಹೊತ್ತಲ್ಲೇ, ಪಾಕಿಸ್ತಾನವು ಕಾಶ್ಮೀರ ಸಮಸ್ಯೆಯನ್ನು ಅಂತರಾಷ್ಟ್ರೀಕರಣಗೊಳಿಸಲು ಆದ್ಯತೆ ನೀಡಿತು. ಇದನ್ನೂ ಓದಿ: ಮೋದಿ 3.0 ಸರ್ಕಾರಕ್ಕೆ ಒಂದು ವರ್ಷ
ಶೀತಲ ಸಮರದ ವರ್ಷಗಳಲ್ಲಿ ಯುಎಸ್ ನೇತೃತ್ವದ ಪಶ್ಚಿಮವು ಪಾಕಿಸ್ತಾನವನ್ನು ಸೋವಿಯತ್ ಒಕ್ಕೂಟದೊಂದಿಗಿನ ಜಗಳದಲ್ಲಿ ನಿರ್ಣಾಯಕ ಮಿತ್ರನಾಗಿ ನೋಡಿತು. ಆದರೆ, ಅಲಿಪ್ತ ನೀತಿ ಧೋರಣೆ ತಳೆದ ಭಾರತವನ್ನು ವಿಶ್ವಾಸಾರ್ಹ ಎಂದು ಪರಿಗಣಿಸಲಿಲ್ಲ. ಅಫ್ಘಾನಿಸ್ತಾನದಲ್ಲಿನ ಯುದ್ಧ ಮತ್ತು ಅಮೆರಿಕದ ‘ಭಯೋತ್ಪಾದನೆಯ ವಿರುದ್ಧದ ಯುದ್ಧ’ವು ಯುಎಸ್ ಮತ್ತು ಪಶ್ಚಿಮಕ್ಕೆ ಪಾಕಿಸ್ತಾನದ ಪ್ರಾಮುಖ್ಯತೆಯನ್ನು ಖಚಿತಪಡಿಸಿತು. ಇದು ಭಾರತಕ್ಕೆ ಅನನುಕೂಲವಾಯಿತು. ಆದರೂ, ಜಾಗತಿಕ ದಕ್ಷಿಣದ ನಾಯಕನಾಗಿ ಹೊರಹೊಮ್ಮುವ ಸಾಮರ್ಥ್ಯ ಹೊಂದಿರುವ ಭಾರತವು ತನ್ನ ಸಮಸ್ಯೆಗಳನ್ನು ಪರಿಹರಿಸಲು ದೊಡ್ಡ ಶಕ್ತಿಗಳ ಮೇಲೆ ಅವಲಂಬಿಸಬೇಕೆಂದು ಎಂದೂ ಭಾವಿಸಿಲ್ಲ.
ಅಮೆರಿಕ ಪಾತ್ರ ಏನು?
ಭಾರತ ಮತ್ತು ಪಾಕಿಸ್ತಾನ ನಡುವೆ ನಾಲ್ಕು ಯುದ್ಧಗಳು ನಡೆದಿದೆ. ಈ ಸಂದರ್ಭದಲ್ಲಿ ಅಮೆರಿಕದ ಪಾತ್ರವೇನು ಎಂಬುದನ್ನು ನೋಡಬೇಕಿದೆ. ಪಾಕಿಸ್ತಾನ ವಿಷಯ ಹೊರತುಪಡಿಸಿಯೂ, ಭಾರತ ಮತ್ತು ಅಮೆರಿಕ ಸ್ವತಂತ್ರವಾದ ದ್ವಿಪಕ್ಷೀಯ ಸಂಬಂಧವನ್ನು ಹೊಂದಿವೆ.
1947ರ ಭಾರತ-ಪಾಕಿಸ್ತಾನ ಯುದ್ಧ
ಟ್ರಂಪ್ ಈಗ ಮಾಡುತ್ತಿರುವುದಕ್ಕೆ ತದ್ವಿರುದ್ಧವಾಗಿ, 1947ರಲ್ಲಿ ಭಾರತ ಮತ್ತು ಪಾಕಿಸ್ತಾನ ತಮ್ಮ ಸಮಸ್ಯೆಗಳನ್ನು ದ್ವಿಪಕ್ಷೀಯವಾಗಿ ಪರಿಹರಿಸಿಕೊಳ್ಳಬೇಕೆಂದು ಅಮೆರಿಕ ಬಯಸಿತ್ತು. ಭಾರತ ಮತ್ತು ಪಾಕಿಸ್ತಾನ ನೇರ ಮಾತುಕತೆಯ ಮೂಲಕ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕೆಂದು ನಾವು ಹೆಚ್ಚು ಬಯಸುತ್ತೇವೆ. ಕಾಶ್ಮೀರದಲ್ಲಿ ಜನಾಭಿಪ್ರಾಯ ಸಂಗ್ರಹಣೆಯನ್ನು ಮೇಲ್ವಿಚಾರಣೆ ಮಾಡಲು ವಿಶ್ವಸಂಸ್ಥೆಯನ್ನು ವಿನಂತಿಸುವ ನಿರ್ಣಯವನ್ನು ಭಾರತ ಅಥವಾ ಪಾಕಿಸ್ತಾನ ಮಂಡಿಸಿ, ಅದನ್ನು ಯುನೈಟೆಡ್ ಕಿಂಗ್‌ಡಮ್ ಬೆಂಬಲಿಸಿದರೆ ಯುನೈಟೆಡ್ ಸ್ಟೇಟ್ಸ್ ನಿಯೋಗವು ಸಹ ನಿರ್ಣಯವನ್ನು ಬೆಂಬಲಿಸಬೇಕು ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಭಾರತದಲ್ಲಿನ ರಾಯಭಾರ ಕಚೇರಿಗೆ ಕಳುಹಿಸಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.
1962ರ ಭಾರತ-ಚೀನಾ ಯುದ್ಧ
ಈ ಯುದ್ಧದಲ್ಲಿ, ಅಮೆರಿಕವು ಭಾರತಕ್ಕೆ ಸಹಾಯ ಮಾಡಿತು. ಮಿಲಿಟರಿ ಸರಬರಾಜುಗಳನ್ನು ವಿಮಾನದ ಮೂಲಕ ಸಾಗಿಸಿತು. ಆದಾಗ್ಯೂ, ಈ ರೀತಿಯಾಗಿ ಸೃಷ್ಟಿಯಾದ ಸೌಹಾರ್ದತೆಯನ್ನು ಬಳಸಿಕೊಂಡು ಅದು ಯುಕೆ ಜೊತೆ ಸೇರಿ ಭಾರತವನ್ನು ಪಾಕಿಸ್ತಾನದೊಂದಿಗೆ ಮಾತುಕತೆಗೆ ಒತ್ತಡ ಹೇರಿತು. ಆರು ಸುತ್ತಿನ ಮಾತುಕತೆಗಳು ನಡೆದವು. ಆದರೆ ಯಾವುದೇ ಪ್ರಗತಿಯಾಗಲಿಲ್ಲ. ಆಗ ಉಭಯ ದೇಶಗಳ ನಡುವೆ ಹೆಚ್ಚಿನ ಸಂಘರ್ಷ ಆಗದಂತೆ ಯುಎಸ್ ಅಧ್ಯಕ್ಷರಾಗಿದ್ದ ಜಾನ್ ಎಫ್ ಕೆನಡಿ ತಡೆದರು.
ಯುದ್ಧದ ಸಮಯದಲ್ಲಿ ಪಾಕಿಸ್ತಾನದ ತಟಸ್ಥತೆಗೆ ಕಾಶ್ಮೀರದಲ್ಲಿ ಭಾರತದಿಂದ ಪರಿಹಾರ ಬೇಕೆಂದು ಆಗ ಪಾಕಿಸ್ತಾನದ ಅಧ್ಯಕ್ಷ ಅಯೂಬ್ ಖಾನ್, ಕೆನಡಿಗೆ ಹೇಳಿದರು. ಅಂತಹ ಯಾವುದೇ ಪರಿಹಾರವನ್ನು ಸಹಿಸಲಾಗುವುದಿಲ್ಲ. ಹಿಮಾಲಯ ಯುದ್ಧದಲ್ಲಿ ಪಾಕಿಸ್ತಾನದ ಹಸ್ತಕ್ಷೇಪವನ್ನು ಅಮೆರಿಕ ಪ್ರತಿಕೂಲ ಕೃತ್ಯವೆಂದು ನೋಡುತ್ತದೆ ಎಂದು ಕೆನಡಿ ಅಯೂಬ್‌ಗೆ ಸ್ಪಷ್ಟಪಡಿಸಿದರು.
1971ರ ಭಾರತ-ಪಾಕಿಸ್ತಾನ ಯುದ್ಧ
ಅಮೆರಿಕವು ಪಾಕಿಸ್ತಾನವನ್ನು ಅತ್ಯಂತ ಬಲವಾಗಿ ಮತ್ತು ಸಾರ್ವಜನಿಕವಾಗಿ ಬೆಂಬಲಿಸಿದ ಸಂದರ್ಭ ಇದಾಗಿತ್ತು. ಬಂಗಾಳ ಕೊಲ್ಲಿಯ ಕಡೆಗೆ ಯುದ್ಧನೌಕೆಗಳನ್ನು ಸಹ ರವಾನಿಸಿತ್ತು. ಅಮೆರಿಕ ವಿದೇಶಾಂಗ ಇಲಾಖೆಯು ಇತಿಹಾಸಕಾರರ ಕಚೇರಿ ಎಂಬ ವೆಬ್‌ಸೈಟ್ ಅನ್ನು ಹೊಂದಿದೆ. 1971ರ ಯುದ್ಧದ ಕುರಿತಾದ ಅದರ ಲೇಖನದಲ್ಲಿ, ಪಾಕಿಸ್ತಾನವು ಅಮೆರಿಕ ಮತ್ತು ಚೀನಾ ರಾಜತಾಂತ್ರಿಕ ಸಂಬಂಧಗಳನ್ನು ಪ್ರಾರಂಭಿಸಲು ಸಹಾಯ ಮಾಡಿದೆ. ಹೀಗಾಗಿ, ಅಮೆರಿಕವು ಭಾರತದ ವಿರುದ್ಧ ಪಾಕಿಸ್ತಾನವನ್ನು ಬೆಂಬಲಿಸಲು ನಿರ್ಧರಿಸಿತು ಎಂದು ಹೇಳುತ್ತದೆ.
1999ರ ಕಾರ್ಗಿಲ್ ಯುದ್ಧ
ಹಿಂದಿನ ಯುದ್ಧದಲ್ಲಿ ಅಮೆರಿಕ ಪಾಕಿಸ್ತಾನಕ್ಕೆ ಹತ್ತಿರವಾಗಿತ್ತು. ಆದರೆ, ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಭಾರತದೊಂದಿಗಿನ ತನ್ನ ಸಂಬಂಧವನ್ನು ಮರು ವ್ಯಾಖ್ಯಾನಿಸಿತು. ಪಾಕಿಸ್ತಾನವು ಕಾರ್ಗಿಲ್ ಬಳಿ ನಿಯಂತ್ರಣ ರೇಖೆಯನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದೆ ಎಂದು ಅಮೆರಿಕ ಹೇಳಿತು. ಆಗಿನ ಅಧ್ಯಕ್ಷ ಬಿಲ್ ಕ್ಲಿಂಟನ್, ಪಾಕಿಸ್ತಾನವು ಯುದ್ಧವನ್ನು ಎದುರಿಸುವ ಅಪಾಯವನ್ನುಂಟುಮಾಡಿದೆ ಎಂದು ದೂಷಿಸಲು ಕೂಡ ಹಿಂಜರಿಯಲಿಲ್ಲ. ಮೊದಲ ಬಾರಿಗೆ, ಅಮೆರಿಕದ ಆಡಳಿತವು ಪಾಕಿಸ್ತಾನದ ಆಕ್ರಮಣದ ವಿರುದ್ಧ ಭಾರತದ ಪರವಾಗಿ ಸಾರ್ವಜನಿಕವಾಗಿ ನಿಂತಿದ ಸಂದರ್ಭ ಇದಾಗಿತ್ತು. ಪಾಕಿಸ್ತಾನವನ್ನು ಐಔಅ ಹಿಂದೆ ಸರಿಯುವಂತೆ ಮಾಡುವಲ್ಲಿ ಕ್ಲಿಂಟನ್ ಪ್ರಮುಖ ಪಾತ್ರ ವಹಿಸಿದರು. ಇದರ ನಂತರ, 2000 ರಲ್ಲಿ ಕ್ಲಿಂಟನ್ ಉಪಖಂಡಕ್ಕೆ ಭೇಟಿ ನೀಡಿದರು. 20 ವರ್ಷಗಳಿಗೂ ಹೆಚ್ಚು ಅವಧಿಯಲ್ಲಿ ಭಾರತಕ್ಕೆ ಬಂದ ಮೊದಲ ಅಮೆರಿಕ ಅಧ್ಯಕ್ಷರು ಅವರು. ಈ ಯುದ್ಧಗಳಲ್ಲದೆ, 2001 ರ ಸಂಸತ್ತಿನ ದಾಳಿ ಮತ್ತು 2008 ರ ಮುಂಬೈ ಭಯೋತ್ಪಾದಕ ದಾಳಿಯ ನಂತರ ಉದ್ವಿಗ್ನತೆಯನ್ನು ಶಮನಗೊಳಿಸಲು ಅಮೆರಿಕ ಕೆಲಸ ಮಾಡಿದೆ.