Tag: donald trump

  • ಡೊನಾಲ್ಡ್ ಟ್ರಂಪ್ ಜೊತೆ ಗಾಲ್ಫ್ ಆಡಿದ ಧೋನಿ!

    ಡೊನಾಲ್ಡ್ ಟ್ರಂಪ್ ಜೊತೆ ಗಾಲ್ಫ್ ಆಡಿದ ಧೋನಿ!

    ವಾಷಿಂಗ್ಟನ್: ಯುಎಸ್ ಓಪನ್ ಟೆನಿಸ್ ಟೂರ್ನಿಯ ಅಲೆಕ್ಸಾಂಡರ್ ಜ್ವೆರೆವ್ ಮತ್ತು ಕಾರ್ಲೋಸ್ ಅಲ್ಕರಾಜ್ ನಡುವಿನ ಕ್ವಾರ್ಟರ್ ಫೈನಲ್ ಪಂದ್ಯವನ್ನು ವೀಕ್ಷಿಸಿ ಸುದ್ದಿಯಾಗಿದ್ದ ಮಹೇಂದ್ರ ಸಿಂಗ್ ಧೋನಿ (MS Dhoni), ಇದೀಗ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಜೊತೆ ಗಾಲ್ಫ್ (Golf) ಆಡಿ ಸುದ್ದಿಯಾಗಿದ್ದಾರೆ.

    ಟ್ರಂಪ್ ಮತ್ತು ಧೋನಿ ಗಾಲ್ಫ್ ಆಡುತ್ತಿರುವ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ದುಬೈ ಮೂಲದ ಉದ್ಯಮಿ ಹಿತೇಶ್ ಸಾಂಘ್ವಿ ಅವರು ಟ್ರಂಪ್ ನ್ಯಾಷನಲ್ ಗಾಲ್ಫ್ ಕ್ಲಬ್ ಬೆಡ್‍ಮಿನ್‍ಸ್ಟರ್‌ನಲ್ಲಿ ಧೋನಿ ಮತ್ತು ಟ್ರಂಪ್ ಗಾಲ್ಫ್ ಆಡುತ್ತಿರುವ ಫೋಟೋವನ್ನು ಟ್ವಿಟರ್ ಮತ್ತು ಇನ್ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಭಾರತ ಪಾಕ್ ಪಂದ್ಯಕ್ಕೆ ವರುಣನ ಅಡ್ಡಗಾಲು: ಮ್ಯಾಚ್ ರದ್ದಾದರೆ ಗತಿ ಏನು?

    ಈ ಬಾರಿಯ 16ನೇ ಆವೃತ್ತಿಯ ಐಪಿಎಲ್‍ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಐದನೇ ಬಾರಿ ಚಾಂಪಿಯನ್ ಪಟ್ಟಕೇರಿಸಿದ ಧೋನಿ ಈಗ ಜಾಲಿ ಮೂಡ್‍ನಲ್ಲಿ ಪ್ರವಾಸದಲ್ಲಿದ್ದಾರೆ.

    ಬುಧವಾರ ನಡೆದ ಯುಎಸ್ ಓಪನ್‍ನ ಕ್ವಾರ್ಟರ್‌ಫೈನಲ್ ವಿಶ್ವದ ನಂ.1 ಆಟಗಾರ ಅಲ್ಕರಾಜ್ ಮತ್ತು ಜ್ವೆರೆವ್ ವಿರುದ್ಧದ ಹೋರಾಟವನ್ನು ವೀಕ್ಷಿಸಲು ಧೋನಿ ತೆರಳಿದ್ದರು. ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕಾರ್ಲೋಸ್ ಅಲ್ಕರಾಜ್ 6-3, 6-2, 6-4 ನೇರ ಸೆಟ್‍ನಿಂದ ಮಣಿಸಿ ಸೆಮಿಫೈನಲ್ ಪ್ರವೇಶಿಸಿದ್ದರು.‌ ಇದನ್ನೂ ಓದಿ: Asia Cup 2023: ಈ ಬಾರಿ ಪಾಕಿಸ್ತಾನಕ್ಕೆ ಏಷ್ಯಾಕಪ್‌ ಕಿರೀಟ – ಮಾಜಿ ಕ್ರಿಕೆಟಿಗರ ಭವಿಷ್ಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚುನಾವಣಾ ಅಕ್ರಮ ಆರೋಪ – ಡೊನಾಲ್ಡ್ ಟ್ರಂಪ್ ಅರೆಸ್ಟ್

    ಚುನಾವಣಾ ಅಕ್ರಮ ಆರೋಪ – ಡೊನಾಲ್ಡ್ ಟ್ರಂಪ್ ಅರೆಸ್ಟ್

    ವಾಷಿಂಗ್ಟನ್: ಅಮೆರಿಕದ (America) ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರನ್ನು ಚುನಾವಣಾ (Election) ಅಕ್ರಮದ ಆರೋಪದ ಮೇಲೆ ಗುರುವಾರ ಜಾರ್ಜಿಯಾದಲ್ಲಿ ಬಂಧಿಸಲಾಗಿತ್ತು. ಬಳಿಕ 1.65 ಕೋಟಿ ರೂ. (200,000 ಡಾಲರ್) ಬಾಂಡ್ ಮೇರೆಗೆ ಬಿಡುಗಡೆ ಮಾಡಲಾಗಿದೆ.

    2020ರ ಚುನಾವಣಾ ಫಲಿತಾಂಶವನ್ನು ರದ್ದುಗೊಳಿಸಲು 18 ಆರೋಪಿಗಳೊಂದಿಗೆ ಸೇರಿ ಸಂಚು ರೂಪಿಸಲು ಸಹಕರಿಸಿದ ಆರೋಪವನ್ನು ಅವರು ಎದುರಿಸುತ್ತಿದ್ದಾರೆ. ಈ ರೀತಿಯ ಆರೋಪ ಎದುರಿಸುತ್ತಿರುವ ಅಮೆರಿಕದ ಮೊದಲನೇ ಮಾಜಿ ಅಧ್ಯಕ್ಷ ಇವರಾಗಿದ್ದಾರೆ. ಬಂಧನದ ಬಳಿಕ ಜಾರ್ಜಿಯಾ ಜೈಲಿನಲ್ಲಿ ಅವರಿಗೆ ಕೈದಿ ಸಂಖ್ಯೆ `ಪಿಓ1135809′ ನೀಡಲಾಗಿತ್ತು. ಇದನ್ನೂ ಓದಿ: ನಮ್ಗೆ ಚಂದ್ರನ ಬಳಿಗೆ ಹೋಗುವ ಅಗತ್ಯವಿಲ್ಲ, ಚಂದ್ರನ ಮೇಲೆಯೇ ಬದುಕುತ್ತಿದ್ದೇವೆ: ಪಾಕ್‌ ಪ್ರಜೆ ವ್ಯಂಗ್ಯ

    ಬಂಧನದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್ ಇದು ಅಮೆರಿಕಕ್ಕೆ ಬಹಳ ದುಃಖದ ದಿನ. ಇಲ್ಲಿ ನಡೆದಿರುವುದು ನ್ಯಾಯದ ಅಣಕವಾಗಿದೆ. ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿಕೊಂಡಿದ್ದಾರೆ.

    ಅವರು ಏಪ್ರಿಲ್‍ನಿಂದ ನಾಲ್ಕು ಬಾರಿ ಕ್ರಿಮಿನಲ್ ದೋಷಾರೋಪಣೆಗೆ ಒಳಗಾಗಿದ್ದಾರೆ. ನ್ಯೂಯಾರ್ಕ್‍ನಲ್ಲಿ ನೀಲಿಚಿತ್ರದ ನಟಿಗೆ ಹಣ ಪಾವತಿಸಿದ ಆರೋಪ, ಫ್ಲೋರಿಡಾದಲ್ಲಿ ಸರ್ಕಾರದ ಉನ್ನತ ರಹಸ್ಯ ದಾಖಲೆಗಳನ್ನು ತಪ್ಪಾಗಿ ನಿರ್ವಹಿಸಿದ ಆರೋಪವನ್ನು ಅವರು ಎದುರಿಸುತ್ತಿದ್ದಾರೆ. ಇದನ್ನೂ ಓದಿ: ಬ್ರಿಕ್ಸ್‌ ಸದಸ್ಯರ ವಿಸ್ತರಣೆಗೆ ಭಾರತದ ಬೆಂಬಲ: ನರೇಂದ್ರ ಮೋದಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಟ್ರಂಪ್‌ ಮನೆಯ ಬೆಡ್‌ರೂಮ್‌, ಬಾತ್‌ರೂಮ್‌ನಲ್ಲಿ ರಹಸ್ಯ ದಾಖಲೆಗಳು

    ಟ್ರಂಪ್‌ ಮನೆಯ ಬೆಡ್‌ರೂಮ್‌, ಬಾತ್‌ರೂಮ್‌ನಲ್ಲಿ ರಹಸ್ಯ ದಾಖಲೆಗಳು

    ನ್ಯೂಯಾರ್ಕ್‌: ವರ್ಗೀಕೃತ ಸರ್ಕಾರಿ ದಾಖಲೆಗಳನ್ನು ಮರಳಿಸದೆಯೇ ಅಮೆರಿಕ (America) ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಅವರು ತಮ್ಮ ನಿವಾಸದ ಬೆಡ್‌ರೂಮ್‌, ಬಾತ್‌ರೂಮ್‌ನಲ್ಲಿ ಜೋಡಿಸಿಟ್ಟಿದ್ದಾರೆ ಎನ್ನಲಾದ ಫೋಟೋಗಳು ವೈರಲ್‌ ಆಗಿವೆ.

    ವರ್ಗೀಕೃತ ಸರ್ಕಾರಿ ದಾಖಲೆಗಳನ್ನು ವಾಪಸ್‌ ನೀಡದೇ ತಮ್ಮ ಬಳಿಯೇ ಇಟ್ಟುಕೊಂಡು ಕಾನೂನು ಪ್ರಕ್ರಿಯೆಗೆ ತೊಡಕುಂಟು ಮಾಡಿದ್ದಾರೆಂಬ ಆರೋಪದ ಮೇಲೆ ಟ್ರಂಪ್‌ ವಿರುದ್ಧ ಫೆಡರಲ್‌ ಗ್ರ್ಯಾಂಡ್‌ ಜ್ಯೂರಿ ದೋಷರೋಪಪಟ್ಟಿ ಸಲ್ಲಿಸಿತ್ತು. ಇದರ ಬೆನ್ನಲ್ಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ಫೋಟೋಗಳು ಬಿಡುಗಡೆಯಾಗಿವೆ. ಇದನ್ನೂ ಓದಿ: ವರ್ಗೀಕೃತ ದಾಖಲೆಗಳ ಕೇಸ್ – ಡೊನಾಲ್ಡ್ ಟ್ರಂಪ್ ವಿರುದ್ಧ ದೋಷಾರೋಪಪಟ್ಟಿ ಸಲ್ಲಿಕೆ

    ಫ್ಲೋರಿಡಾದ ಮಾರ್-ಎ-ಲಾಗೊ ಎಸ್ಟೇಟ್‌ನಲ್ಲಿರುವ ಟ್ರಂಪ್‌ ನಿವಾಸದಲ್ಲಿ ಸರ್ಕಾರಿ ದಾಖಲೆಗಳನ್ನು ಹೊಂದಿರುವ ಬಾಕ್ಸ್‌ಗಳ ಫೋಟೋಗಳು ಬಿಡುಗಡೆಯಾಗಿದೆ. ಟ್ರಂಪ್‌ ನಿವಾಸದ ಬೆಡ್‌ರೂಮ್‌, ಬಾತ್‌ರೂಮ್‌ನಲ್ಲೂ ದಾಖಲೆಗಳನ್ನು ಸಂಗ್ರಹಿಸಿರುವುದನ್ನು ಫೋಟೋದಲ್ಲಿ ಕಾಣಬಹುದಾಗಿದೆ.

    ಅಮೆರಿಕದ ಪರಮಾಣ ಶಸ್ತ್ರಾಸ್ತ್ರ ಕಾರ್ಯಯೋಜನೆ, ಯುಎಸ್‌ ಮತ್ತು ಮಿತ್ರರಾಷ್ಟ್ರಗಳ ಸಂಬಂಧ, ಪ್ರತೀಕಾರದ ಮಿಲಿಟರಿ ದಾಳಿಯ ಯುಎಸ್‌ ಯೋಜನೆ ಇತ್ಯಾದಿ ಪ್ರಮುಖ ಮಾಹಿತಿ ದಾಖಲಿಸಲಾಗಿರುವ ಫೈಲ್‌ಗಳು ಇವಾಗಿವೆ. ಅವುಗಳನ್ನು ಅಕ್ರಮವಾಗಿ ಟ್ರಂಪ್ ಇಟ್ಟುಕೊಂಡಿದ್ದಾರೆ ಎಂಬ ಗಂಭೀರ ಆರೋಪವಿದೆ.

    80 ಬಾಕ್ಸ್‌ಗಳಲ್ಲಿ ಈ ಪೈಲ್‌ಗಳನ್ನು ಸಂಗ್ರಹಿಸಿ ಇಡಲಾಗಿದೆ. ದೋಷಾರೋಪಪಟ್ಟಿಯಲ್ಲಿ ಹೆಸರಿಸಲಾಗಿರುವ ಟ್ರಂಪ್‌ ಆಪ್ತರೂ ಆಗಿರುವ ಮತ್ತೊಬ್ಬ ಆರೋಪಿ ವಾಲ್ಟ್‌ ನೌಟಾ ಅವರು ತನ್ನ ಸಹದ್ಯೋಗಿಗೆ ಪೆಟ್ಟಿಗೆಗಳಿರುವ ಫೋಟೋ ತೆಗೆದು ಕಳುಹಿಸಿದ್ದಾರೆ. “ನಾನು ಕೋಣೆಗಳ ಬಾಗಿಲು ತೆರೆದಾಗ, ಇದು ಕಂಡುಬಂತು” ಎಂದು ಸಂದೇಶ ಕೂಡ ಕಳುಹಿಸಿದ್ದಾರೆ. ಇದನ್ನೂ ಓದಿ: ಕೊರೊನಾ ವೇಳೆ ಪಾರ್ಟಿ ಮಾಡಿ ಪಿಎಂ ಸ್ಥಾನ ಕಳೆದುಕೊಂಡಿದ್ದ ಬೋರಿಸ್ ಜಾನ್ಸನ್ ಬ್ರಿಟನ್ ಸಂಸತ್ ಸದಸ್ಯ ಸ್ಥಾನಕ್ಕೂ ರಾಜೀನಾಮೆ

  • ವರ್ಗೀಕೃತ ದಾಖಲೆಗಳ ಕೇಸ್ – ಡೊನಾಲ್ಡ್ ಟ್ರಂಪ್ ವಿರುದ್ಧ ದೋಷಾರೋಪಪಟ್ಟಿ ಸಲ್ಲಿಕೆ

    ವರ್ಗೀಕೃತ ದಾಖಲೆಗಳ ಕೇಸ್ – ಡೊನಾಲ್ಡ್ ಟ್ರಂಪ್ ವಿರುದ್ಧ ದೋಷಾರೋಪಪಟ್ಟಿ ಸಲ್ಲಿಕೆ

    ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ವರ್ಗೀಕೃತ ದಾಖಲೆಗಳ ಪ್ರಕರಣದಲ್ಲಿ (Classified Documents) ಸಿಲುಕಿದ್ದು, ಅವರ ವಿರುದ್ಧ ದೋಷಾರೋಪಣೆ ಹೊರಿಸಲಾಗಿದೆ.

    ವರ್ಗೀಕೃತ ಸರ್ಕಾರಿ ದಾಖಲೆಗಳನ್ನು ಮರಳಿಸದೇ ಹೋಗಿದ್ದು ಹಾಗೂ ಶ್ವೇತ ಭವನ ತೊರೆದ ಬಳಿಕವೂ ತಮ್ಮ ದಾಖಲೆಗಳನ್ನು ಫ್ಲೋರಿಡಾದ ನಿವಾಸದಲ್ಲೇ ಉಳಿಸಿಕೊಳ್ಳುವ ಮೂಲಕ ಕಾನೂನಿನ ಪ್ರಕ್ರಿಯೆಗೆ ಅಡಚಣೆ ಉಂಟು ಮಾಡಿದ ಆರೋಪದ ಮೇಲೆ ಫೆಡರಲ್ ಗ್ರ‍್ಯಾಂಡ್ ಜ್ಯೂರಿ ಟ್ರಂಪ್ ವಿರುದ್ಧ ದೋಷಾರೋಪಣೆ ಹೊರಿಸಿದೆ.

    ವರ್ಗೀಕೃತ ದಾಖಲೆಗಳನ್ನು ಅನಧಿಕೃತವಾಗಿ ತಮ್ಮ ಬಳಿಯೇ ಇಟ್ಟುಕೊಂಡಿರುವುದು, ತಪ್ಪು ಹೇಳಿಕೆಗಳನ್ನು ನೀಡಿರುವುದು ಮತ್ತು ಕಾನೂನಿಗೆ ಅಡಚಣೆ ಸೇರಿದಂತೆ ಟ್ರಂಪ್ 7 ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಇದು ಟ್ರಂಪ್ ವಿರುದ್ಧದ 2ನೇ ದೋಷಾರೋಪಣೆ ಮಾತ್ರವಲ್ಲದೇ, ಮಾಜಿ ಅಧ್ಯಕ್ಷರ ಮೊದಲ ಫೆಡರಲ್ ದೋಷಾರೋಪಣೆಯಾಗಿದೆ. ಇದನ್ನೂ ಓದಿ: ಸಿದ್ದು ಪ್ರಮಾಣವಚನ ವೇಳೆ ವೇದಿಕೆಯಲ್ಲಿ ಕ್ರಿಮಿನಲ್‌ ಹಿನ್ನಲೆಯುಳ್ಳ ವ್ಯಕ್ತಿ – ತನಿಖೆಗೆ ರಾಜ್ಯಪಾಲರ ಪತ್ರ

    ಈ ಕ್ರಿಮಿನಲ್ ಪ್ರಕರಣವನ್ನು ಅಮೆರಿಕದ ಕಾನೂನು ವಿಭಾಗವೇ ಹೊರತಂದಿರುವುದರಿಂದ ಟ್ರಂಪ್ ಮೇಲೆ ಭಾರೀ ಪರಿಣಾಮ ಬೀರುವ ಸಾಧ್ಯತೆ ಇದೆ. ಮುಂದಿನ ವರ್ಷ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯಾಗಿರುವ ಟ್ರಂಪ್‌ಗೆ ವರ್ಗೀಕೃತ ಕಡತಗಳ ಪ್ರಕರಣ ಮುಳುವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಶಾಲೆಯಲ್ಲಿ ಅಬಯಾ ಧರಿಸಬಾರದು ಎಂದಿದ್ದಕ್ಕೆ ಪ್ರಿನ್ಸಿಪಾಲ್‌ಗೆ ಭಯೋತ್ಪಾದಕರಿಂದ ಬೆದರಿಕೆ

  • ನನ್ನ ಮಕ್ಕಳ ಮೇಲಾಣೆ – ಅತ್ಯಾಚಾರ ಆರೋಪ ಮಾಡಿದ ಮಹಿಳೆಯನ್ನು ನಾನೆಂದೂ ಭೇಟಿಯಾಗಿಲ್ಲ: ಟ್ರಂಪ್

    ನನ್ನ ಮಕ್ಕಳ ಮೇಲಾಣೆ – ಅತ್ಯಾಚಾರ ಆರೋಪ ಮಾಡಿದ ಮಹಿಳೆಯನ್ನು ನಾನೆಂದೂ ಭೇಟಿಯಾಗಿಲ್ಲ: ಟ್ರಂಪ್

    ವಾಷಿಂಗ್ಟನ್: ಇತ್ತೀಚೆಗೆ ಅಮೆರಿಕದ (America) ಬರಹಗಾರ್ತಿಯೊಬ್ಬರು 30 ವರ್ಷಗಳ ಹಿಂದೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾಗಿ ಆರೋಪ ಹೊರಿಸಿದ್ದರು. ಈ ಆರೋಪ ಶುದ್ಧ ಸುಳ್ಳು, ಅಂತಹ ಯಾವುದೇ ಮಹಿಳೆಯನ್ನು ನಾನು ಎಂದೂ ಭೇಟಿಯಾಗಿಲ್ಲ ಎಂದು ಟ್ರಂಪ್ ಹೇಳಿದ್ದಾರೆ.

    ಬುಧವಾರ ಸಂದರ್ಶನವೊಂದರಲ್ಲಿ ಮಾತನಾಡಿದ ಅಮೆರಿಕದ ಮಾಜಿ ಅಧ್ಯಕ್ಷ, 1990ರ ದಶಕದಲ್ಲಿ ಡಿಪಾರ್ಟ್ಮೆಂಟ್ ಸ್ಟೋರ್ ಡ್ರೆಸ್ಸಿಂಗ್ ರೂಮ್‌ನಲ್ಲಿ ಬರಹಗಾರ್ತಿ ಇ ಜಿನ್ ಕ್ಯಾರೋಲ್ (E Jean Carroll) ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಒಂದು ಕಟ್ಟು ಕಥೆ. ಆ ಮಹಿಳೆಯ ಪರಿಚಯ ನನಗಿಲ್ಲ. ನಾನು ಆಕೆಯನ್ನು ಎಂದಿಗೂ ಭೇಟಿಯಾಗಿಲ್ಲ. ಆಕೆ ಯಾರೆಂಬುದೇ ನನಗೆ ತಿಳಿದಿಲ್ಲ ಎಂದಿದ್ದಾರೆ.

    ನಾನು ನನ್ನ ಮಕ್ಕಳ ಮೇಲೆ ಪ್ರಮಾಣ ಮಾಡಿ ಹೇಳುತ್ತೇನೆ, ಅಂತಹ ಕೃತ್ಯ ನಾನು ಎಂದಿಗೂ ಮಾಡಿಲ್ಲ. ಆ ಮಹಿಳೆ ಯಾರೆಂದು ನನಗೆ ತಿಳಿದಿಲ್ಲ ಇದೊಂದು ಕಟ್ಟುಕಥೆ ಎಂದು ಟ್ರಂಪ್ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಪತಿಗೆ ವಿಚ್ಛೇದನ ಘೋಷಿಸಿ, ಸ್ನೇಹಿತರಾಗಿ ಇರ್ತೀವಿ ಅಂದ ನಿರ್ಗಮಿತ ಪ್ರಧಾನಿ ಸನ್ನಾ ಮರಿನ್‌

     

    ಪ್ರತಿಷ್ಠಿತ ಎಲ್ಲೆ ಮ್ಯಾಗಜಿನ್‌ನ ಅಂಕಣಗಾರ್ತಿಯಾಗಿರುವ ಇ ಜಿನ್ ಕ್ಯಾರೋಲ್(79) 1995-1996ರ ಸಂದರ್ಭದಲ್ಲಿ ಮ್ಯಾನ್‌ಹ್ಯಾಟನ್‌ನ ಬರ್ಗ್ಡಾರ್ಫ್ ಗುಡ್‌ಮ್ಯಾನ್ ಡಿಪಾರ್ಟ್ಮೆಂಟ್ ಸ್ಟೋರ್ ಡ್ರೆಸ್ಸಿಂಗ್ ರೂಮ್‌ನಲ್ಲಿ ಟ್ರಂಪ್ ತನ್ನ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಆರೋಪ ಹೊರಿಸಿದ್ದಾರೆ. ಈ ವಿಚಾರವನ್ನು 2022 ರಲ್ಲಿ ನಾನು ಬಹಿರಂಗಪಡಿಸಿದ್ದಾಗ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ನನ್ನ ಬಗ್ಗೆ ವಂಚನೆ, ಸುಳ್ಳು, ಕುತಂತ್ರವೆಂದು ಬರೆದಿದ್ದರು. ಹಾಗೂ ನನ್ನ ಖ್ಯಾತಿಯನ್ನು ಹಾಳು ಮಾಡಿದರು ಎಂದು ಕ್ಯಾರೋಲ್ ಆರೋಪಿಸಿದ್ದಾರೆ. ಇದನ್ನೂ ಓದಿ: ಇಮ್ರಾನ್ ಖಾನ್ ಅರೆಸ್ಟ್- ಪ್ರತಿಭಟನೆಯಲ್ಲಿ 8 ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ

  • ಟ್ರಂಪ್ ನನ್ನ ರೇಪ್ ಮಾಡಿದ್ದರು: ಅಮೆರಿಕನ್ ಬರಹಗಾರ್ತಿ ಆರೋಪ

    ಟ್ರಂಪ್ ನನ್ನ ರೇಪ್ ಮಾಡಿದ್ದರು: ಅಮೆರಿಕನ್ ಬರಹಗಾರ್ತಿ ಆರೋಪ

    ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಸುಮಾರು 30 ವರ್ಷಗಳ ಹಿಂದೆ ನನ್ನ ಮೇಲೆ ಅತ್ಯಾಚಾರವೆಸಗಿದ್ದರು (Rape) ಎಂದು ಅಮೆರಿಕದ (America) ಬರಹಗಾರ್ತಿ ಇ ಜೀನ್ ಕ್ಯಾರೋಲ್ (E Jean Carroll) ಆರೋಪಿಸಿದ್ದಾರೆ. ಈ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.

    ಪ್ರತಿಷ್ಠಿತ ಎಲ್ಲೆ ಮ್ಯಾಗಜಿನ್‌ನಲ್ಲಿ ಅಂಕಣಗಾರ್ತಿಯಾಗಿರುವ ಇ ಜೀನ್ ಕ್ಯಾರೋಲ್ (79), ಡೊನಾಲ್ಡ್ ಟ್ರಂಪ್ ನನ್ನ ಮೇಲೆ ಅತ್ಯಾಚಾರವೆಸಗಿದ್ದು, ಈ ಹಿನ್ನೆಲೆ ನಾನು ನ್ಯಾಯಾಲಯದ ಮೊರೆಹೋಗಿದ್ದೇನೆ. ಈ ಬಗ್ಗೆ ನಾನು ಬರೆದಿದ್ದಾಗ ಟ್ರಂಪ್ ನನ್ನ ಆರೋಪಗಳನ್ನು ಸುಳ್ಳು, ಇಂತಹುದು ಯಾವುದೂ ನಡೆದೇ ಇಲ್ಲ ಎಂದು ಹೇಳಿದ್ದರು. ಅವರು ನನ್ನ ಖ್ಯಾತಿಯನ್ನು ಛಿದ್ರಗೊಳಿಸಿದ್ದಾರೆ. ನನ್ನ ಮಾನವನ್ನು ಮರಳಿ ಪಡೆಯುವ ಸಲುವಾಗಿ ನಾನಿಲ್ಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.

    ನನ್ನ ಮೇಲೆ 1995-1996ರ ವೇಳೆಯಲ್ಲಿ ಅತ್ಯಾಚಾರ ನಡೆದಿದೆ. ಬರ್ಗ್ಡಾರ್ಪ್ ಗುಡ್‌ಮ್ಯಾನ್ ಡಿಪಾರ್ಟ್ಮೆಂಟ್ ಸ್ಟೋರ್‌ನ ಡ್ರೆಸ್ಸಿಂಗ್ ರೂಮ್‌ನಲ್ಲಿ ಟ್ರಂಪ್ ನನ್ನ ಮೇಲೆ ಅತ್ಯಾಚಾರವೆಸಗಿದ್ದರು. ಆ ಸಂದರ್ಭ ನಾನು ಅಲ್ಲಿಂದ ಓಡಿಹೋಗಲು ಪ್ರಯತ್ನಿಸಿದ್ದೆ. ಆ ಘಟನೆಯ ಬಳಿಕ ನನ್ನ ಜೀವನದ ಮೇಲೆ ನನಗೆ ಜಿಗುಪ್ಸೆ ಉಂಟಾಯಿತು ಎಂದು ಕ್ಯಾರೊಲ್ ಆರೋಪಿಸಿದ್ದಾರೆ. ಇದನ್ನೂ ಓದಿ: ಬಲವಂತದಿಂದ ಮಕ್ಕಳಿಗೆ ಹಚ್ಚೆ, ಚರ್ಮ ಕಿತ್ತು ಅಳಿಸುವ ಪ್ರಯತ್ನ – ಯುಎಸ್ ದಂಪತಿಗಳು ಅರೆಸ್ಟ್

    ನನ್ನ ಆರೋಪಗಳನ್ನು ಟ್ರಂಪ್ ವಂಚನೆ, ಸುಳ್ಳು ಹಾಗೂ ಕುತಂತ್ರವೆಂದು ಸಾಮಾಜಿಕ ಜಾಲತಾಣವಾದ ಟ್ರೂತ್‌ನಲ್ಲಿ ಬರೆದುಕೊಂಡಿದ್ದಾರೆ. ಆದರೆ ನಾನು ಅಂತಹ ಕೆಳಮಟ್ಟದ ವ್ಯಕ್ತಿಯಲ್ಲ. ಸುಳ್ಳು ಹೇಳಿಕೆಗಳನ್ನು ನೀಡಿ ನನ್ನನ್ನು ನಾನು ಮಾರಿಕೊಳ್ಳುವುದಿಲ್ಲ ಎಂದು ಕ್ಯಾರೋಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕಳೆದ ಕೆಲ ದಿನಗಳ ಹಿಂದಷ್ಟೇ ಅಮೆರಿಕದ ಮಾಜಿ ಅಧ್ಯಕ್ಷ ಟ್ರಂಪ್ ಅನೈತಿಕ ಸಂಬಂಧದ ಬಗ್ಗೆ ಎಲ್ಲಿಯೂ ಬಾಯಿ ಬಿಡದಂತೆ ನೀಲಿ ಚಿತ್ರ ತಾರೆಯೊಬ್ಬರಿಗೆ ಹಣ ನೀಡಿದ ಆರೋಪವನ್ನು ಹೊತ್ತಿದ್ದರು. ಈ ಬಗ್ಗೆಯೂ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಇದನ್ನೂ ಓದಿ: ನಮ್ಮ ಬ್ಲಡ್‌ ಗ್ರೂಪ್‌ RCB ಪಾಸಿಟಿವ್‌ – ಫ್ಯಾನ್ಸ್‌ ಪೋಸ್ಟರ್‌ ವೈರಲ್‌

  • ಮಾನಹಾನಿ ಕೇಸ್‌ನಲ್ಲಿ ನೀಲಿಚಿತ್ರ ನಟಿಗೆ ಸೋಲು – 1 ಕೋಟಿ ಪಾವತಿಸುವಂತೆ ಕೋರ್ಟ್ ಆದೇಶ

    ಮಾನಹಾನಿ ಕೇಸ್‌ನಲ್ಲಿ ನೀಲಿಚಿತ್ರ ನಟಿಗೆ ಸೋಲು – 1 ಕೋಟಿ ಪಾವತಿಸುವಂತೆ ಕೋರ್ಟ್ ಆದೇಶ

    ವಾಷಿಂಗ್ಟನ್: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ವಿರುದ್ಧದ ಮಾನಹಾನಿ ಪ್ರಕರಣದಲ್ಲಿ ನೀಲಿಚಿತ್ರ ನಟಿ ಸ್ಟಾರ್ಮಿ ಡೇನಿಯಲ್ಸ್‌ಗೆ (Stormy Daniels) ಸೋಲಾಗಿದೆ. ಹೀಗಾಗಿ ಟ್ರಂಪ್ ಅವರ ವಕೀಲರಿಗೆ 121,000 ಡಾಲರ್ ಮೊತ್ತ (ಸುಮಾರು 1 ಕೋಟಿ ರೂ.) ಪಾವತಿಸುವಂತೆ ಕ್ಯಾಲಿಫೋರ್ನಿಯಾದ ಸರ್ಕ್ಯೂಟ್ ನ್ಯಾಯಾಲಯವು (Circuit Court) ಸೂಚಿಸಿದೆ.

    ಟ್ರಂಪ್ ವಿರುದ್ಧ ಯಾವುದೇ ಆರೋಪ ಮಾಡದಂತೆ ಟ್ವಿಟ್ಟರ್‌ನಲ್ಲಿ ಅನಾಮಿಕ ವ್ಯಕ್ತಿ ಬೆದರಿಕೆ ಹಾಕಿದ್ದ. ತನ್ನ ವಿರುದ್ಧ ಟ್ರಂಪ್ ಕಡೆಯವರೇ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಸ್ಟಾರ್ಮಿ ಡೇನಿಯಲ್ಸ್ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ಸಾಬೀತಾಗದ ಹಿನ್ನೆಲೆಯಲ್ಲಿ ಕೋರ್ಟ್ ಸ್ಟಾರ್ಮಿ ಡೇನಿಯಲ್ಸ್‌ಗೆ ದಂಡ ವಿಧಿಸಿದೆ.

    ಸ್ಟಾರ್ಮಿ ಡೇನಿಯಲ್ಸ್ ಹಾಗೂ ಟ್ರಂಪ್ ನಡುವಿನ ಸಂಬಂಧ ಮರೆಮಾಚಲು ಆಕೆಗೆ ಹಣ ಪಾವತಿಸಲಾಗಿತ್ತು ಎಂಬ ಪ್ರಕರಣದಲ್ಲಿ ಬಂಧಿಸಿ, ವಿಚಾರಣೆ ಬಳಿಕ ಬಿಡುಗಡೆ ಮಾಡಲಾಗಿತ್ತು. ಮ್ಯಾನ್ ಹಾಟನ್ ಜಿಲ್ಲಾ ಅಟಾರ್ನಿಯ ಕೋರ್ಟ್ ಸಭಾಂಗಣದಲ್ಲಿ ಟ್ರಂಪ್ ಶರಣಾದರು. ಬಳಿಕ ಅವರನ್ನು ಬಂಧಿಸಿದ ಪೊಲೀಸರು ಬಿಗಿ ಭದ್ರತೆಯಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ವಿಚಾರಣೆ ಬಳಿಕ ಅವರನ್ನು ಬಿಡುಗಡೆಗೊಳಿಸಲಾಯಿತು.

    ಈ ವೇಳೆ ಟ್ರಂಪ್ ವಿರುದ್ಧ ಲೈಂಗಿಕ ಪ್ರಕರಣ ಮುಚ್ಚಿಡಲು ಹಣ ನೀಡಿದ್ದು, ಸೇರಿದಂತೆ ಹಣ ವಂಚನೆಯ 34 ದೋಷಾರೋಪಗಳನ್ನು ಹೊರಿಸಲಾಗಿತ್ತು. ಕಾನೂನು ಸಲಹಾ ಸಿಬ್ಬಂದಿ ಜೊತೆ ಬಂದಿದ್ದ ಟ್ರಂಪ್, ನಾನು ತಪ್ಪು ಮಾಡಿಲ್ಲ. 34 ಆರೋಪಗಳಲ್ಲಿ ನಾನು ನಿರಪರಾಧಿ ಎಂದು ವಾದಿಸಿದ್ದರು. ಇದನ್ನೂ ಓದಿ: ನೀಲಿಚಿತ್ರ ನಟಿಗೆ ಹಣ ವರ್ಗಾವಣೆ – ಡೊನಾಲ್ಡ್ ಟ್ರಂಪ್ ಬಂಧನ

    ಸುಮಾರು ಒಂದು ಗಂಟೆ ಕಾಲ ವಿಚಾರಣೆ ನಡೆಯಿತು. ವಿಚಾರಣೆಯ ನಂತರ ಟ್ರಂಪ್, ತಮ್ಮ ವಾಹನದಲ್ಲಿ ವಿಮಾನ ನಿಲ್ದಾಣಕ್ಕೆ ತೆರಳಿದರು. ಈ ಮೂಲಕ ಅಮೆರಿಕದ ಇತಿಹಾಸದಲ್ಲೇ ಕ್ರಿಮಿನಲ್ ಆರೋಪ ಪ್ರಕರಣದ ವಿಚಾರಣೆ ಎದುರಿಸಿ ಬಂಧನಕ್ಕೆ ಒಳಗಾದ ಮೊದಲ ಅಮೆರಿಕದ ಮಾಜಿ ಅಧ್ಯಕ್ಷರಾಗಿದ್ದಾರೆ.

    ಬಳಿಕ ಅಮೆರಿಕ ಅಧ್ಯಕ್ಷ ಜೋ ಬೈಡನ್ ವಿರುದ್ಧ ವಾಗ್ದಾಳಿ ನಡೆಸಿರುವ ಟ್ರಂಪ್, ದೇಶಕ್ಕೆ ಇಂತಹ ಪರಿಸ್ಥಿತಿ ಬರುತ್ತೆ ಎಂದು ನಾನೆಂದು ಭಾವಿಸಿರಲಿಲ್ಲ. ದೇಶವಿಂದು ಕತ್ತಲಿನಲ್ಲಿದೆ, ದೇಶದ ಶಕ್ತಿ ಕ್ಷೀಣಿಸುತ್ತಿದೆ. ಜಗತ್ತು ಅಮೆರಿಕದತ್ತ ನೋಡಿ ನಗುತ್ತಿದೆ. ಆಫ್ಘನ್‌ನಿಂದ ಪಡೆಗಳ ವಾಪಸ್ ನಿರ್ಧಾರ ನಗೆಪಾಟಲಿಗೀಡಾಗಿದೆ. ದೇಶಾದ್ಯಂತ ಇರುವ ಅತಿವಾದ ಎಡಪಂಥೀಯ ಶಕ್ತಿಗಳು ನನ್ನ ದಮನಕ್ಕೆ ಪ್ರಯತ್ನಿಸ್ತಿವೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: PlayBoyಗೆ ಪೋಸ್‌ ಕೊಟ್ಟ ಫ್ರೆಂಚ್‌ ಸಚಿವೆ ನಡೆಗೆ ವ್ಯಾಪಕ ವಿರೋಧ

    ಏನಿದು ಕಳ್ಳ ಸಂಬಂಧ ಕೇಸ್?
    ಟ್ರಂಪ್ ಅವರು ಈ ಹಿಂದೆ ಪೋರ್ನ್ ಸ್ಟಾರ್ ಸ್ಟಾರ್ಮಿ ಡೇನಿಯಲ್ಸ್ (ನಿಜವಾದ ಹೆಸರು ಸ್ಟೆಫನಿ ಕ್ಲಿಫರ್ಡ್) ಅವರೊಂದಿಗೆ ಸಂಬಂಧ ಹೊಂದಿದ್ದರು ಎನ್ನಲಾಗಿದೆ. 2016ರ ಚುನಾವಣೆ ವೇಳೆ ಈ ಸಂಬಂಧ ಬಹಿರಂಗಪಡಿಸುವುದನ್ನು ತಡೆಯಲು ಟ್ರಂಪ್ ಆಕೆಗೆ 1,30,000 ಡಾಲರ್ (ಸುಮಾರು 1,07,00,000 ರೂ.) ನೀಡಿದ್ದರು ಎಂಬ ಆರೋಪ ಕೇಳಿ ಬಂದಿದೆ.

  • ನೀಲಿಚಿತ್ರ ನಟಿಗೆ ಹಣ ವರ್ಗಾವಣೆ – ಡೊನಾಲ್ಡ್ ಟ್ರಂಪ್ ಬಂಧನ

    ನೀಲಿಚಿತ್ರ ನಟಿಗೆ ಹಣ ವರ್ಗಾವಣೆ – ಡೊನಾಲ್ಡ್ ಟ್ರಂಪ್ ಬಂಧನ

    – ಬಂಧನವಾದ ಕೆಲವೇ ಗಂಟೆಗಳಲ್ಲಿ ಟ್ರಂಪ್‌ ಮತ್ತೆ ಬಿಡುಗಡೆ

    ನ್ಯೂಯಾರ್ಕ್: ನೀಲಿಚಿತ್ರ ನಟಿಗೆ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕದ (America) ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರನ್ನು ಬಂಧಿಸಿದ ಕೆಲವೇ ಗಂಟೆಗಳಲ್ಲಿ ಬಿಡುಗಡೆ ಮಾಡಿದ್ದಾರೆ.

    ಮ್ಯಾನ್ ಹಾಟನ್ ಜಿಲ್ಲಾ ಅಟಾರ್ನಿಯ ಕೋರ್ಟ್ ಸಭಾಂಗಣದಲ್ಲಿ ಟ್ರಂಪ್ ಶರಣಾದರು. ಬಳಿಕ ಅವರನ್ನು ಬಂಧಿಸಿದ ಪೊಲೀಸರು ಬಿಗಿ ಭದ್ರತೆಯಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ವಿಚಾರಣೆ ಬಳಿಕ ಅವರನ್ನು ಬಿಡುಗಡೆಗೊಳಿಸಲಾಯಿತು.

    ಈ ವೇಳೆ ಟ್ರಂಪ್ ವಿರುದ್ಧ ಲೈಂಗಿಕ ಪ್ರಕರಣ ಮುಚ್ಚಿಡಲು ಹಣ ನೀಡಿದ್ದು, ಸೇರಿದಂತೆ ಹಣ ವಂಚನೆಯ 34 ದೋಷಾರೋಪಗಳನ್ನು ಹೊರಿಸಲಾಯಿತು. ಕಾನೂನು ಸಲಹಾ ಸಿಬ್ಬಂದಿ ಜೊತೆ ಬಂದಿದ್ದ ಟ್ರಂಪ್, ನಾನು ತಪ್ಪು ಮಾಡಿಲ್ಲ. 34 ಆರೋಪಗಳಲ್ಲಿ ನಾನು ನಿರಪರಾಧಿ ಎಂದಿದ್ದಾರೆ.

    ಸುಮಾರು ಒಂದು ಗಂಟೆ ಕಾಲ ವಿಚಾರಣೆ ನಡೆಯಿತು. ವಿಚಾರಣೆಯ ನಂತರ ಟ್ರಂಪ್, ತಮ್ಮ ವಾಹನದಲ್ಲಿ ವಿಮಾನ ನಿಲ್ದಾಣಕ್ಕೆ ತೆರಳಿದರು. ಈ ಮೂಲಕ ಅಮೆರಿಕದ ಇತಿಹಾಸದಲ್ಲೇ ಕ್ರಿಮಿನಲ್ ಆರೋಪ ಪ್ರಕರಣದ ವಿಚಾರಣೆ ಎದುರಿಸಿ ಬಂಧನಕ್ಕೆ ಒಳಗಾದ ಮೊದಲ ಅಮೆರಿಕದ ಮಾಜಿ ಅಧ್ಯಕ್ಷರಾಗಿದ್ದಾರೆ. ಇದನ್ನೂ ಓದಿ: Swiggy, Zomatoಗೆ ಕೌಂಟರ್ – ಹೋಟೆಲ್ ಅಸೋಸಿಯೇಷನ್‍ನಿಂದ ಹೊಸ ಆ್ಯಪ್‌ಗೆ ಸಿದ್ಧತೆ

    ಕೋರ್ಟ್ ಹಾಲ್‍ಗೆ ಕರೆದೊಯ್ಯುವ ಮೊದಲು ಟ್ರಂಪ್ ಅವರ ಬೆರಳಚ್ಚುಗಳ ಮಾದರಿಯನ್ನು ಪೊಲೀಸರು ಪಡೆದರು. ಹೆಸರು, ವಯಸ್ಸು, ಎತ್ತರ, ತೂಕ ಒಳಗೊಂಡಂತೆ ವ್ಯಕ್ತಿಗತ ಮಾಹಿತಿ ಪಡೆದರು. ಅವರ ವಿರುದ್ಧ ಯಾವುದಾದರೂ ವಾರೆಂಟ್ ಬಾಕಿ ಇದೆಯೇ ಎಂದು ಪರಿಶೀಲಿಸಿದರು. ಇದನ್ನೂ ಓದಿ: ಹತ್ತು ವರ್ಷದಿಂದ ನಾಪತ್ತೆಯಾಗಿದ್ದ ನಟೋರಿಯಸ್ ರೌಡಿಶೀಟರ್‌ಗಳ ಬಂಧನ

    ಏನಿದು ಕೇಸ್‌: ಟ್ರಂಪ್ ಅವರು ಈ ಹಿಂದೆ ಪೋರ್ನ್ ಸ್ಟಾರ್ ಸ್ಟಾರ್ಮಿ ಡೇನಿಯಲ್ (ನಿಜವಾದ ಹೆಸರು ಸ್ಟೆಫನಿ ಕ್ಲಿಫರ್ಡ್) ಅವರೊಂದಿಗೆ ಸಂಬಂಧ ಹೊಂದಿದ್ದರು ಎನ್ನಲಾಗಿದೆ. 2016ರ ಚುನಾವಣೆ ವೇಳೆ ಈ ಸಂಬಂಧ ಬಹಿರಂಗಪಡಿಸುವುದನ್ನು ತಡೆಯಲು ಟ್ರಂಪ್ ಆಕೆಗೆ 1,30,000 ಡಾಲರ್ (ಸುಮಾರು 1,07,00,000 ರೂ.) ನೀಡಿದ್ದರು ಎಂಬ ಆರೋಪ ಕೇಳಿ ಬಂದಿದೆ.

  • ಪೋರ್ನ್ ಸ್ಟಾರ್‌ಗೆ ಹಣ – ಟ್ರಂಪ್ ವಿರುದ್ಧ ದೋಷಾರೋಪಣೆ

    ಪೋರ್ನ್ ಸ್ಟಾರ್‌ಗೆ ಹಣ – ಟ್ರಂಪ್ ವಿರುದ್ಧ ದೋಷಾರೋಪಣೆ

    – ಬಂಧನದ ಭೀತಿ
    – ಕ್ರಿಮಿನಲ್ ಆರೋಪ ಹೊತ್ತಿರೋ ಮೊದಲ ಅಮೆರಿಕ ಮಾಜಿ ಅಧ್ಯಕ್ಷ

    ವಾಷಿಂಗ್ಟನ್: 2016ರ ಚುನಾವಣಾ ಪ್ರಚಾರದ ವೇಳೆ ನೀಲಿಚಿತ್ರ ತಾರೆಗೆ (Porn Star) ಡೊನಾಲ್ಡ್‌ ಟ್ರಂಪ್‌ (Donald Trump) ಹಣ ನೀಡಿರುವ ಕುರಿತು ನ್ಯೂಯಾರ್ಕ್ ಗ್ರ್ಯಾಂಡ್ ಜ್ಯೂರಿ ಗುರುವಾರ ದೋಷಾರೋಪಣೆ ಮಾಡಿದೆ. ಇದೀಗ ಟ್ರಂಪ್ ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿರುವ ಮೊದಲ ಅಮೆರಿಕದ ಮಾಜಿ ಅಧ್ಯಕ್ಷ (Former US President) ಎಂಬ ಅಪಖ್ಯಾತಿಗೆ ಒಳಗಾಗಿದ್ದಾರೆ.

    ತಮ್ಮ ವಿರುದ್ಧದ ಆರೋಪಗಳನ್ನು ತಿರಸ್ಕರಿಸಿರುವ ಡೊನಾಲ್ಡ್ ಟ್ರಂಪ್, ನ್ಯೂಯಾರ್ಕ್ ಗ್ರ್ಯಾಂಡ್ ಜ್ಯೂರಿಯ ತೀರ್ಪನ್ನು ತಮ್ಮ ಅಧ್ಯಕ್ಷೀಯ ಚುನಾವಣಾ ಪ್ರಚಾರದ ತಂತ್ರದ ಭಾಗವಾಗಿ ಬಳಸುತ್ತಿದೆ. ಅಲ್ಲದೇ ಈಗಿನ ಅಧ್ಯಕ್ಷ ಜೋ ಬೈಡನ್ ಈ ತಪ್ಪಿಗಾಗಿ ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

    ಏನಿದು ಪ್ರಕರಣ?
    ವರದಿಗಳ ಪ್ರಕಾರ ಟ್ರಂಪ್ ಅವರು ಈ ಹಿಂದೆ ಪೋರ್ನ್ ಸ್ಟಾರ್ ಸ್ಟಾರ್ಮಿ ಡೇನಿಯಲ್ (ನಿಜವಾದ ಹೆಸರು ಸ್ಟೆಫನಿ ಕ್ಲಿಫರ್ಡ್) ಅವರೊಂದಿಗೆ ಸಂಬಂಧ ಹೊಂದಿದ್ದರು ಎನ್ನಲಾಗಿದೆ. 2016ರ ಚುನಾವಣೆ ವೇಳೆ ಈ ಸಂಬಂಧ ಬಹಿರಂಗಪಡಿಸುವುದನ್ನು ತಡೆಯಲು ಟ್ರಂಪ್ ಆಕೆಗೆ 1,30,000 ಡಾಲರ್ (ಸುಮಾರು 1,07,00,000 ರೂ.) ನೀಡಿದ್ದರು ಎಂಬುದು ತಿಳಿದುಬಂದಿದೆ. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಹಿಂದೂ ವೈದ್ಯನ ಗುಂಡಿಕ್ಕಿ ಹತ್ಯೆ – ತಿಂಗಳಲ್ಲಿ 2ನೇ ಘಟನೆ

    ಬಂಧನದ ಬಗ್ಗೆ ಭಾರೀ ಚರ್ಚೆ:
    ಇದೀಗ ಟ್ರಂಪ್ ಮುಂಬರುವ ಮಂಗಳವಾರ ಶರಣಾಗುವ ಸಾಧ್ಯತೆಯಿದೆ. ಆದರೆ ಅವರ ಬಂಧನ ಬಗೆಗಿನ ಚರ್ಚೆಯೇ ಹೆಚ್ಚು ಸದ್ದು ಮಾಡುತ್ತಿದೆ. ಏಕೆಂದರೆ ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿರುವ ಅಮೆರಿಕದ ಮೊದಲ ಮಾಜಿ ಅಧ್ಯಕ್ಷ ಇವರಾಗಿದ್ದಾರೆ. ಅಪರಾಧ ಪ್ರಕರಣಗಳ ಬಂಧನ ಪ್ರಕ್ರಿಯೆಯೇ ಟ್ರಂಪ್ ಅವರಿಗೂ ಅನ್ವಯಿಸಲಿದೆಯೇ ಎಂಬುದು ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

    ಒಂದುವೇಳೆ ಟ್ರಂಪ್ ಬಂಧನವಾದರೆ ಪೊಲೀಸರು ಅವರಿಗೆ ಮೊದಲು ಕೈಕೊಳ ತೊಡಿಸಲಿದ್ದಾರೆ. ನಂತರ ಅವರ ಬೆರಳಚ್ಚು ಪಡೆದು ಸಾಮಾನ್ಯ ಅಪರಾಧಿಯಂತೆಯೇ ಛಾಯಾಚಿತ್ರವನ್ನೂ ತೆಗೆಯಲಿದ್ದಾರೆ. ಅಪರಾಧ ಆರೋಪದ ಮೇಲೆ ಬಂಧಿತರಾಗುವವರಿಗೆ ಕೈಕೊಳ ಹಾಕುವುದು ಮಾನದಂಡ. ಮಾಜಿ ಅಧ್ಯಕ್ಷರಿಗೆ ಇದರ ವಿನಾಯಿತಿ ನೀಡಲಾಗುತ್ತದೆಯೇ ಎಂಬುದು ಅಸ್ಪಷ್ಟವಾಗಿದೆ. ಇದನ್ನೂ ಓದಿ: ಇಂದೋರ್ ದೇವಾಲಯ ದುರಂತ – ಸಾವಿನ ಸಂಖ್ಯೆ 35ಕ್ಕೆ ಏರಿಕೆ

  • ಪೋರ್ನ್ ಸ್ಟಾರ್‌ಗೆ ಹಣ – ಶೀಘ್ರವೇ ಟ್ರಂಪ್ ಬಂಧನ?

    ಪೋರ್ನ್ ಸ್ಟಾರ್‌ಗೆ ಹಣ – ಶೀಘ್ರವೇ ಟ್ರಂಪ್ ಬಂಧನ?

    ವಾಷಿಂಗ್ಟನ್: 2016ರ ಚುನಾವಣೆಗೂ ಮುನ್ನ ಪೋರ್ನ್ ಸ್ಟಾರ್ (Porn Star) ಒಬ್ಬರಿಗೆ ಹಣ ನೀಡಿರುವ ಆರೋಪದ ಮೇಲೆ ಮಂಗಳವಾರ ಅಮೆರಿಕದ (America) ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರನ್ನು ಬಂಧಿಸುವ (Arrest) ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ. ಈ ಹಿನ್ನೆಲೆ ಟ್ರಂಪ್ ತಮ್ಮ ಬೆಂಬಲಿಗರಿಗೆ ಬಂಧನದ ವಿರುದ್ಧ ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದಾರೆ.

    ವರದಿಗಳ ಪ್ರಕಾರ ಟ್ರಂಪ್ ಅವರು ಈ ಹಿಂದೆ ಪೋರ್ನ್ ಸ್ಟಾರ್ ಸ್ಟಾರ್ಮಿ ಡೇನಿಯಲ್ (ನಿಜವಾದ ಹೆಸರು ಸ್ಟೆಫನಿ ಕ್ಲಿಫರ್ಡ್) ಅವರೊಂದಿಗೆ ಸಂಬಂಧ ಹೊಂದಿದ್ದರು ಎನ್ನಲಾಗಿದೆ. 2016ರ ಚುನಾವಣೆ ವೇಳೆ ಈ ಸಂಬಂಧ ಬಹಿರಂಗಪಡಿಸುವುದನ್ನು ತಡೆಯಲು ಟ್ರಂಪ್ ಆಕೆಗೆ 1,30,000 ಡಾಲರ್ (ಸುಮಾರು 1,07,00,000 ರೂ.) ನೀಡಿದ್ದರು ಎಂಬುದು ತಿಳಿದುಬಂದಿದೆ. ಇದನ್ನೂ ಓದಿ: ಈಕ್ವೆಡಾರ್‌ನಲ್ಲಿ 6.8 ತೀವ್ರತೆಯ ಭಾರೀ ಭೂಕಂಪ – 14 ಜನ ಬಲಿ

    ಈ ಪ್ರಕರಣದಲ್ಲಿ ಟ್ರಂಪ್ ವಿರುದ್ಧ ಆರೋಪ ಹೊರಿಸಬೇಕೆ ಎಂಬ ಬಗ್ಗೆ ಪ್ರಾಸಿಕ್ಯೂಟರ್‌ಗಳು ಚಿಂತನೆ ನಡೆಸುತ್ತಿದ್ದಾರೆ. ಒಂದು ವೇಳೆ ಮ್ಯಾನ್‌ಹ್ಯಾಟನ್ ಜಿಲ್ಲಾ ವಕೀಲರು ಟ್ರಂಪ್ ವಿರುದ್ಧ ದೋಷಾರೋಪಣೆ ಮಾಡಿದರೆ ಅಪರಾಧದ ಆರೋಪ ಹೊತ್ತ ಮೊದಲ ಅಮೆರಿಕದ ಮಾಜಿ ಅಧ್ಯಕ್ಷ ಎನಿಸಿಕೊಳ್ಳುತ್ತಾರೆ. ಆದರೆ ಟ್ರಂಪ್ ತಾವು ಡೇನಿಯಲ್ ಜೊತೆಗಿನ ಸಂಬಂಧವನ್ನು ನಿರಾಕರಿಸಿದ್ದಾರೆ. ಇದನ್ನೂ ಓದಿ: ಖಲಿಸ್ತಾನಿ ಹೋರಾಟಗಾರ ಅಮೃತ್‌ಪಾಲ್‌ ಸಿಂಗ್‌ ಪರಾರಿ – ಪಂಜಾಬ್‌ ಹಲವೆಡೆ ಇಂಟರ್‌ನೆಟ್‌ ಸ್ಥಗಿತ