Tag: donald trump

  • ರಷ್ಯಾದಿಂದ ತೈಲ ಖರೀದಿಸಿ ಬ್ರಾಹ್ಮಣರು ಶ್ರೀಮಂತರಾಗುತ್ತಿದ್ದಾರೆ: ಭಾರತದ ವಿರುದ್ಧ ಟ್ರಂಪ್‌ ಆಪ್ತನಿಂದ ಜಾತಿ ಅಸ್ತ್ರ

    ರಷ್ಯಾದಿಂದ ತೈಲ ಖರೀದಿಸಿ ಬ್ರಾಹ್ಮಣರು ಶ್ರೀಮಂತರಾಗುತ್ತಿದ್ದಾರೆ: ಭಾರತದ ವಿರುದ್ಧ ಟ್ರಂಪ್‌ ಆಪ್ತನಿಂದ ಜಾತಿ ಅಸ್ತ್ರ

    – ಡೊನಾಲ್ಡ್‌ ಟ್ರಂಪ್‌ ವ್ಯಾಪಾರ ಸಲಹೆಗಾರ ಪೀಟರ್ ನವರೊ ಹೇಳಿಕೆ
    – ರಷ್ಯಾ-ಉಕ್ರೇನ್‌ ಯುದ್ಧವನ್ನು ಮೋದಿ ಯುದ್ಧ ಎಂದಿದ್ದ ನವರೊ

    ವಾಷಿಂಗ್ಟನ್‌: ರಷ್ಯಾ-ಉಕ್ರೇನ್‌ ಯುದ್ಧವನ್ನು ಮೋದಿ ಯುದ್ಧ (Modis War) ಎಂದು ಕರೆದಿದ್ದ ಡೊನಾಲ್ಡ್‌ ಟ್ರಂಪ್‌ (Donald Trump) ವ್ಯಾಪಾರ ಸಲಹೆಗಾರ ಪೀಟರ್ ನವರೊ (Peter Navarro) ಈಗ ಭಾರತದವರನ್ನು ಪ್ರಚೋದಿಸಲು ಜಾತಿ ಅಸ್ತ್ರವನ್ನು ಪ್ರಯೋಗಿಸಿದ್ದಾರೆ.

    ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವ ಮೂಲಕ ಬ್ರಾಹ್ಮಣರು (Brahmins) ಭಾರತೀಯ ಜನರ ವೆಚ್ಚದಲ್ಲಿ ಶ್ರೀಮಂತರಾಗುತ್ತಿದ್ದಾರೆ ಎಂದು ಶಾಕಿಂಗ್‌ ಹೇಳಿಕೆ ನೀಡಿದ್ದಾರೆ. ಚೀನಾದ ಟಿಯಾಂಜಿನ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಶೃಂಗಸಭೆಯಲ್ಲಿ (SCO Summit) ಮೋದಿ, ಪುಟಿನ್‌, ಕ್ಸಿ ಜಿನ್‌ಪಿಂಗ್‌ ಮಾತುಕತೆ ನಡೆಸುತ್ತಿರುವ ಮಹತ್ವದ ಸಮಯದಲ್ಲೇ ಈ ಹೇಳಿಕೆ ಬಂದಿರುವುದು ವಿಶೇಷ.

    ಟಿವಿ ವಾಹಿನಿಯ ಜೊತೆ ಮಾತನಾಡಿದ ಪೀಟರ್ ನವರೊ, ಮೋದಿ ಒಬ್ಬ ಮಹಾನ್ ನಾಯಕ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವಾಗ ಅವರು ಪುಟಿನ್ ಮತ್ತು ಕ್ಸಿ ಜಿನ್‌ಪಿಂಗ್ ಜೊತೆ ಯಾಕೆ ಮಾತನಾಡುತ್ತಿದ್ದಾರೆ ಎನ್ನುವುದು ಅರ್ಥವಾಗುತ್ತಿಲ್ಲ. ನಾನು ಭಾರತೀಯ ಜನರಿಗೆ ಹೇಳುತ್ತೇನೆ, ದಯವಿಟ್ಟು ಏನು ನಡೆಯುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳಿ. ಭಾರತೀಯ ಜನರ ವೆಚ್ಚದಲ್ಲಿ ಬ್ರಾಹ್ಮಣರು ಲಾಭ ಗಳಿಸಿ ಶ್ರೀಮಂತರಾಗುತ್ತಿದ್ದಾರೆ. ಇದನ್ನು ನಾವು ನಿಲ್ಲಿಸಬೇಕು ಎಂದು ಹೇಳಿದ್ದಾರೆ.

    ತನ್ನ ಒತ್ತಡಕ್ಕೆ ಭಾರತ (India) ಬಗ್ಗದೇ ಸೆಡ್ಡು ಹೊಡೆದ ಬೆನ್ನಲ್ಲೇ ಹತಾಶೆಗೊಂಡಿರುವ ಟ್ರಂಪ್‌ (Donald Trump) ಸರ್ಕಾರದ ಅಧಿಕಾರಿಗಳು ಈಗ ನರೇಂದ್ರ ಮೋದಿ (Narendra Modi) ವಿರುದ್ಧ ಬಾಯಿಗೆ ಬಂದಂತೆ ಹೇಳಿಕೆ ನೀಡಲು ಆರಂಭಿಸಿದ್ದಾರೆ. ಇದನ್ನೂ ಓದಿ: ಭಾರತಕ್ಕೆ 50% ತೆರಿಗೆ ಹಾಕಿ ಯುರೋಪ್‌ಗೆ ಅಮೆರಿಕ ಮನವಿ

    ಹಿಂದೆ ಪೀಟರ್ ನವರೊ ಹೇಳಿದ್ದೇನು?
    ರಷ್ಯಾದ ಇಂಧನವನ್ನು ಭಾರತ ನಿರಂತರವಾಗಿ ಖರೀದಿಸುತ್ತಿರುವುದರಿಂದ ಉಕ್ರೇನ್‌ ಮೇಲೆ ರಷ್ಯಾ ಆಕ್ರಮಣ ನಡೆಸುತ್ತಿದೆ. ಮಾಸ್ಕೋದಿಂದ ರಿಯಾಯಿತಿ ದರದಲ್ಲಿ ಕಚ್ಚಾ ತೈಲ ಖರೀದಿಸುವುದನ್ನು ನಿಲ್ಲಿಸಿದರೆ ಅಮೆರಿಕ ಭಾರತದ ಮೇಲೆ ವಿಧಿಸಿದ 25% ಸುಂಕ ಕಡಿತ ಕಾಣಬಹುದು.

    ರಷ್ಯಾದಿಂದ ಭಾರತ ರಿಯಾಯಿತಿ ದರದಲ್ಲಿ ತೈಲವನ್ನು ಖರೀದಿಸುತ್ತದೆ. ಖರೀದಿಸಿದ ಕಚ್ಚಾತೈಲವನ್ನು ರಿಫೈನರಿಯಲ್ಲಿ ಸಂಸ್ಕರಿಸಿ ಬೇರೆ ದೇಶಗಳಿಗೆ ಮಾರಾಟ ಮಾಡುವ ಮೂಲಕ ಲಾಭ ಮಾಡುತ್ತಿದೆ. ಈ ನಿರ್ಧಾರದಿಂದ ಭಾರತ ರಷ್ಯಾಕ್ಕೆ ಸಹಾಯ ಮಾಡಿದರೆ ಅಮೆರಿಕಕ್ಕೆ ಹಾನಿ ಮಾಡುತ್ತಿದೆ. ಇದನ್ನೂ ಓದಿಒಂದಲ್ಲ, 4 ಬಾರಿ ಟ್ರಂಪ್‌ ಕರೆ ಮಾಡಿದ್ರೂ ಉತ್ತರಿಸದ ಮೋದಿ!

    ಭಾರತ ಮಾಡುತ್ತಿರುವ ಕೆಲಸದಿಂದಾಗಿ ಅಮೆರಿಕದಲ್ಲಿ ಪ್ರತಿಯೊಬ್ಬರೂ ನಷ್ಟ ಅನುಭವಿಸುತ್ತಾರೆ. ಭಾರತದ ಹೆಚ್ಚಿನ ಸುಂಕಗಳು ನಮ್ಮ ಉದ್ಯೋಗಗಳು, ಕಾರ್ಖಾನೆಗಳನ್ನು ಕಸಿದುಕೊಳ್ಳುತ್ತಿದೆ. ಅಮೆರಿಕನ್ನರು ಆರ್ಥಿಕವಾಗಿ ಬಳಲುತ್ತಿರುವಾಗ ಉಕ್ರೇನ್‌ ಯುದ್ಧಕ್ಕೆ ರಷ್ಯಾಕ್ಕೆ ಹಣಕಾಸಿನ ಸಹಾಯ ಮಾಡುತ್ತಿದೆ. ಇನ್ನೊಂದು ಕಡೆ ಉಕ್ರೇನ್‌ ನೆರವು ನೀಡುವಂತೆ ಅಮೆರಿಕ ಮತ್ತು ಯುರೋಪ್‌ ದೇಶವನ್ನು ಕೇಳಿಕೊಳ್ಳುತ್ತಿದೆ.

    ಭಾರತಕ್ಕೆ ಈಗ ಅಹಂಕಾರ ಬಂದಿದೆ. ನಮಗೆ ಹೆಚ್ಚಿನ ಸುಂಕಗಳು ಇಲ್ಲ. ನಮ್ಮದು ಸಾರ್ವಭೌಮ ಹೊಂದಿದ ದೇಶ. ನಾವು ಯಾರಿಂದ ಬೇಕಾದರೂ ತೈಲ ಖರೀದಿಸಬಹುದು ಎಂಬಂತೆ ಭಾರತ ವರ್ತಿಸುತ್ತಿದೆ. ಭಾರತ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿದೆ ಹೌದು. ಆದರೆ ಅಮೆರಿಕದ ವಿಶ್ವದ ದೊಡ್ಡ ಆರ್ಥಿಕತೆತಯನ್ನು ಹೊಂದಿದ ದೇಶವಾಗಿದೆ. ಭಾರತ ಮಾಡುತ್ತಿರುವ ಕೆಲಸಗಳಿಂದ ಅಮೆರಿಕದಲ್ಲಿರುವ ಪ್ರತಿಯೊಬ್ಬರೂ ನಷ್ಟ ಅನುಭವಿಸುತ್ತಿದ್ದಾರೆ ಎಂದರು.

  • ಭಾರತಕ್ಕೆ 50% ತೆರಿಗೆ ಹಾಕಿ – ಯುರೋಪ್‌ಗೆ ಅಮೆರಿಕ ಮನವಿ

    ಭಾರತಕ್ಕೆ 50% ತೆರಿಗೆ ಹಾಕಿ – ಯುರೋಪ್‌ಗೆ ಅಮೆರಿಕ ಮನವಿ

    ವಾಷಿಂಗ್ಟನ್‌: ಭಾರತದ (India) ಮೇಲೆ ತಾನು ಹೇಗೆ ಸುಂಕ ವಿಧಿಸಿದ್ದೇನೋ ಅದೇ ರೀತಿ ನೀವು ಸುಂಕ ವಿಧಿಸಬೇಕೆಂದು ಯುರೋಪಿಯನ್‌ ಒಕ್ಕೂಟಗಳಿಗೆ (European Union) ಟ್ರಂಪ್‌ ಸರ್ಕಾರ ಒತ್ತಾಯಿಸುತ್ತಿದೆ ಎಂದು ವರದಿಯಾಗಿದೆ.

    ಆರಂಭದಲ್ಲಿ ಭಾರತದಿಂದ ಆಮದಾಗುವ ವಸ್ತುಗಳಿಗೆ 25% ತೆರಿಗೆ ವಿಧಿಸಿದ ಅಮೆರಿಕ ಈಗ ರಷ್ಯಾದಿಂದ (Russia) ಕಚ್ಚಾ ತೈಲವನ್ನು (Crude Oil) ಆಮದು ಮಾಡುತ್ತಿರುವುದಕ್ಕೆ ದಂಡದ ರೂಪದಲ್ಲಿ 25% ತೆರಿಗೆ ವಿಧಿಸಿದೆ. ಹೀಗಾಗಿ ಭಾರತದಿಂದ ಆಮದಾಗುವ ಕೆಲ ವಸ್ತುಗಳಿಗೆ 50% ಸುಂಕ ಹೇರಿದೆ. ಇದನ್ನೂ ಓದಿ: ಆಮದು ಸುಂಕ ಕಾನೂನುಬಾಹಿರ: ಟ್ರಂಪ್‌ಗೆ ಯುಎಸ್ಕೋರ್ಟ್‌ನಿಂದಲೇ ಛೀಮಾರಿ

     

    ತಾನು ಹೇರಿದ ಸುಂಕಾಸ್ತ್ರ ಅಷ್ಟೊಂದು ಪರಿಣಾಮ ಬೀರದ ಕಾರಣ ಅಮೆರಿಕ ಈಗ ಯುರೋಪ್‌ ದೇಶಗಳನ್ನು ಒತ್ತಾಯಿಸುತ್ತಿದೆ. ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸದೇ ಇದ್ದರೆ ಯುರೋಪ್ ಭಾರತದ ಮೇಲೆ ದ್ವಿತೀಯ ಸುಂಕಗಳನ್ನು ವಿಧಿಸಬೇಕೆಂದು ಶ್ವೇತ ಭವನ (White House) ಅಧಿಕಾರಿಯೊಬ್ಬರು ಹೇಳಿದ್ದಾರೆ.  ಇದನ್ನೂ ಓದಿ: PublicTV Explainer: ಟ್ರಂಪ್ ಟ್ಯಾರಿಫ್ ವಾರ್ ಭಾರತದ ಯಾವ ವಲಯಗಳ ಮೇಲೆ ಪ್ರಭಾವ ಹೆಚ್ಚು?

    ರಷ್ಯಾ ಕಚ್ಚಾ ತೈಲವನ್ನು ಖರೀದಿಸುವುದನ್ನು ಮುಂದುವರಿಸುತ್ತಿರುವುದರಿಂದ ರಷ್ಯಾ ಉಕ್ರೇನ್‌ನಲ್ಲಿ ಯುದ್ಧಕ್ಕೆ ಭಾರತ ಸಹಕಾರ ನೀಡುತ್ತಿದೆ ಎಂದು ಅಮೆರಿಕ ಆರೋಪಿಸಿದೆ.

    ಚೀನಾದ ಟಿಯಾಂಜಿನ್‌ನಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಮಾತುಕತೆ ನಡೆಸಲಿರುವ ಬೆನ್ನಲ್ಲೇ ಅಮೆರಿಕದ ಒತ್ತಡ ಹೆಚ್ಚಾಗುತ್ತಿದೆ.

  • PublicTV Explainer: ಟ್ರಂಪ್ ಟ್ಯಾರಿಫ್ ವಾರ್ – ಭಾರತದ ಯಾವ ವಲಯಗಳ ಮೇಲೆ ಪ್ರಭಾವ ಹೆಚ್ಚು?

    PublicTV Explainer: ಟ್ರಂಪ್ ಟ್ಯಾರಿಫ್ ವಾರ್ – ಭಾರತದ ಯಾವ ವಲಯಗಳ ಮೇಲೆ ಪ್ರಭಾವ ಹೆಚ್ಚು?

    ಜಗತ್ತಿನ ದೊಡ್ಡಣ್ಣ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಂದಲ್ಲ ಒಂದು ವಿಷಯದಲ್ಲಿ ಸುದ್ದಿಯಲ್ಲಿರುತ್ತಾರೆ. ಇತ್ತೀಚಿನ ದಿನಗಳಲ್ಲಂತೂ ಟ್ಯಾರಿಫ್ ವಿಷಯವಾಗಿ ಭಾರಿ ಚರ್ಚೆಯಲ್ಲಿದ್ದಾರೆ. ಪ್ರತಿ ದಿನ ಬೇರೆ ಬೇರೆ ದೇಶಗಳ ಮೇಲೆ ಸುಂಕ ಸಮರವನ್ನ ಸಾರುತ್ತಲೇ ಬರುತ್ತಿದ್ದಾರೆ. ಹೀಗಿರುವಾಗ ಇದೀಗ ಮತ್ತೆ ಭಾರತದ ಮೇಲೆ ಆಮದು ಸುಂಕ ಹೆಚ್ಚಿಸಿದ್ದಾರೆ.

    ಏನಿದು ಟ್ಯಾರಿಫ್ ವಾರ್/ಸುಂಕ ಸಮರ?

    ಎರಡು ಅಥವಾ ಹೆಚ್ಚು ದೇಶಗಳು ಪರಸ್ಪರ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಹೆಚ್ಚುವರಿ ಸುಂಕವನ್ನ ವಿಧಿಸುತ್ತವೆ. ಈ ಮೂಲಕ ಆರ್ಥಿಕ ಒತ್ತಡವನ್ನ ಸೃಷ್ಟಿಸುವ ಪರಿಸ್ಥಿತಿ ಉಂಟು ಮಾಡಲಾಗುತ್ತದೆ. ಉದಾಹರಣೆಗೆ, ಒಂದು ದೇಶ ತನ್ನ ಮಾರುಕಟ್ಟೆಯ ನಿಯಂತ್ರಣಕ್ಕೋಸ್ಕರ ಇನ್ನೊಂದು ದೇಶದಿಂದ ಬರುವ ವಸ್ತುಗಳ ಮೇಲೆ ಹೆಚ್ಚುವರಿ ಸುಂಕವನ್ನ ವಿಧಿಸುತ್ತದೆ. ಇದಕ್ಕೆ ಪ್ರತಿಯಾಗಿ ರಫ್ತು ಮಾಡುವ ದೇಶವು ಆಮದು ಮಾಡಿಕೊಳ್ಳುವ ದೇಶದ ಮೇಲೆ ಸುಂಕ ವಿಧಿಸುತ್ತದೆ. ಹೀಗೆ ಈ ಸುಂಕ ಸಮರದಿಂದಾಗಿ ಸರಕು, ಸಾಗಾಣೆ ದರ ಹೆಚ್ಚಾಗುತ್ತದೆ, ಜೊತೆಗೆ ವ್ಯಾಪಾರದ ಮೇಲೆಯೂ ಪರಿಣಾಮ ಬೀರುತ್ತದೆ, ಕೆಲವೊಮ್ಮೆ ಆರ್ಥಿಕ ಹಾನಿ ಉಂಟುಮಾಡುವ ಸಾಧ್ಯತೆಯೂ ಇರುತ್ತದೆ.

    ಅಮೆರಿಕಾ ಮತ್ತು ಭಾರತದ ನಡುವಿನ ಸುಂಕ ಸಮರ ಹೇಗಿದೆ?

    ಮೊದಲ ಬಾರಿಗೆ 2017ರಲ್ಲಿ ಡೊನಾಲ್ಡ್ ಟ್ರಂಪ್ ಅಮೆರಿಕಾದ ಅಧ್ಯಕ್ಷರಾದ ಬಳಿಕ ಈ ಸುಂಕ ಸಮರವನ್ನ ಪ್ರಾರಂಭಿಸಿದರು. 2018ರಲ್ಲಿ ಮೊದಲ ಬಾರಿಗೆ ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೆಚ್ಚುವರಿ ಸುಂಕ ವಿಧಿಸಿದರು. ಉಕ್ಕು ಮತ್ತು ಅಲ್ಯೂಮಿನಿಯಂ ಆಮದುಗಳ ಮೇಲೆ ಹೆಚ್ಚುವರಿ ಸುಂಕ ವಿಧಿಸಿದ ನಂತರ ಭಾರತವು ಪ್ರತಿಯಾಗಿ ಬಾದಾಮಿ, ಸೇಬು ಸೇರಿದಂತೆ ಇನ್ನಿತರ ವಸ್ತುಗಳ ಮೇಲೆಯೂ ಹೆಚ್ಚುವರಿ ಸುಂಕ ವಿಧಿಸಿತ್ತು. ಅದಾದ ಬಳಿಕ ಮತ್ತೆ 2019 ರಲ್ಲಿ ಅಮೆರಿಕಾ ಭಾರತಕ್ಕೆ ನೀಡಿದ ಜಿಎಸ್‌ಪಿ (GSP) ಸೌಲಭ್ಯವನ್ನು ರದ್ದುಗೊಳಿಸಿತು.

    ಏನಿದು ಜಿಎಸ್‌ಪಿ?

    Generalized System of Preferences ಅಂದರೆ ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಿಗೆ ನೀಡುವ ವಿಶೇಷ ವ್ಯಾಪಾರ ಸೌಲಭ್ಯವೇ ಇದು. ಈ GSP ಅಡಿಯಲ್ಲಿ ಕೆಲವು ಉತ್ಪನ್ನಗಳನ್ನು ಸುಂಕವಿಲ್ಲದೆ ಅಥವಾ ಕಡಿಮೆ ಸುಂಕದಲ್ಲಿ ಆಮದು ಮಾಡುವ ಅವಕಾಶವಿರುತ್ತದೆ.

    ಅದರಂತೆ ಅಮೆರಿಕಾ ಭಾರತಕ್ಕೆ ನೀಡಿದ್ದ GSP ಸೌಲಭ್ಯವನ್ನು ರದ್ದುಗೊಳಿಸಿತು. ಈ ಮೂಲಕ ಭಾರತೀಯ ವಸ್ತುಗಳು, ಆಭರಣಗಳು, ಕೈಮಗ್ಗ ಉತ್ಪನ್ನಗಳು ಸೇರಿದಂತೆ ಹಲವು ವಸ್ತುಗಳ ಮೇಲೆ ಪರಿಣಾಮ ಬೀರಿತು. ಇದಕ್ಕೆ ಪ್ರತಿಯಾಗಿ ಭಾರತ ಅಮೆರಿಕಾದ 28 ವಸ್ತುಗಳ ಮೇಲೆ ಹೆಚ್ಚುವರಿ ಸುಂಕ ವಿಧಿಸಿತು.

    ಇನ್ನು 2020ರಲ್ಲಿ ಕೋವಿಡ್ ಸ್ಥಿತಿಯಿಂದಾಗಿ ಜಾಗತಿಕ ವ್ಯಾಪಾರದಲ್ಲಿ ಕುಸಿತ ಕಂಡಿತು. ಆದರೆ ಔಷಧಿ, ವೈದ್ಯಕೀಯ ಕ್ಷೇತ್ರಗಳಲ್ಲಿ ಬಳಸಲಾಗುವ ಸಾಧನಗಳ ವಿಚಾರದಲ್ಲಿ ಭಾರತ ಮತ್ತು ಅಮೆರಿಕಾದ ನಡುವಿನ ಹೊಂದಾಣಿಕೆ ಚೆನ್ನಾಗಿತ್ತು. ಈ ಸಮಯದಲ್ಲಿ ಸುಂಕ ಸಮರ ತಾತ್ಕಾಲಿಕವಾಗಿ ಕಡಿಮೆಯಾಗಿತ್ತು. ಅದಾದ ಬಳಿಕ ಡೊನಾಲ್ಡ್ ಟ್ರಂಪ್ ಅಧಿಕಾರವಧಿ ಮುಗಿದು ಜೋ ಬೈಡನ್ ಅಮೆರಿಕಾ ಅಧ್ಯಕ್ಷರಾದರು. ಈ ಸಮಯದಲ್ಲಿ ಭಾರತದಿಂದ ಬರುವ ಕೆಲವು ಉತ್ಪನ್ನಗಳ ಮೇಲೆ ಅಮೆರಿಕಾ ಸುಂಕ ಸಡಿಲಿಕೆ ಮಾಡಿತು. ಇದೇ ಸಮಯದಲ್ಲಿ ಡಿಜಿಟಲ್ ತೆರಿಗೆ ವಿಷಯವಾಗಿ ಕೆಲವು ಒಪ್ಪಂದಗಳು ಆಗಿದ್ದವು.

    2024ರಲ್ಲಿ ಅಮೆರಿಕಾವು ಭಾರತಕ್ಕೆ ಪ್ರಮುಖ ರಫ್ತು ತಾಣವಾಗಿತ್ತು. ಆ ಸಮಯದಲ್ಲಿ 87.3 ಶತಕೋಟಿ ಡಾಲರ್ ಮೌಲ್ಯದ ಸರಕುಗಳನ್ನ ಕಳಿಸಿಕೊಟ್ಟಿತ್ತು. ಆದರೆ 2025ರಲ್ಲಿ ಟ್ರಂಪ್ ಮರು ಆಯ್ಕೆಯಾಗಿ ಅಧಿಕಾರಕ್ಕೆ ಬಂದ ನಂತರ ಜುಲೈ 30ರಂದು, ಭಾರತದ ಮೇಲೆ ಹೆಚ್ಚುವರಿ ಯಾಗಿ ಶೇಕಡಾ 25ರಷ್ಟು ಸುಂಕ ಘೋಷಿಸಿದರು.

    ಈಗ ರಷ್ಯಾದಿಂದ ಕಚ್ಚಾ ತೈಲವನ್ನು ಆಮದು ಮಾಡುತ್ತಿರುವುದಕ್ಕೆ ದಂಡವಾಗಿ 25% ಸುಂಕವನ್ನು ಟ್ರಂಪ್‌ ಘೋಷಿಸಿದ್ದಾರೆ. ಪರಿಣಾಮ ಅಮೆರಿಕಾಕ್ಕೆ ಹೋಗುವ ಹಲವು ವಸ್ತುಗಳಿಗೆ 50% ತೆರಿಗೆ ವಿಧಿಸಲಾಗಿದೆ.

    ಈ ನಿರ್ಧಾರದಿಂದ ವಜ್ರ, ಆಭರಣ, ಮೀನುಗಾರಿಕೆ ಹಾಗೂ ರಾಸಾಯನಿಕ ವಸ್ತುಗಳ ಮೇಲೆ ಭಾರಿ ಹೊಡೆತ ಉಂಟಾಗಿದೆ. ಹೀಗಾಗಿ ಭಾರತ ಪರ್ಯಾಯ ಮಾರುಕಟ್ಟೆ ವ್ಯವಸ್ಥೆಗಾಗಿ ಹಾಗೂ ಹೊಸ ವಾಣಿಜ್ಯ ಒಪ್ಪಂದಗಳಿಗೆ ಸಹಿ ಹಾಕಲು ಮುಂದಾಗಿದೆ.

    ಅಮೆರಿಕಾದ ಕಸ್ಟಮ್ಸ್ ಅಧಿಸೂಚನೆಯ ಪ್ರಕಾರ ಆಗಸ್ಟ್ 27ರ ಮಧ್ಯರಾತ್ರಿಯಿಂದ ಈ ಆಮದು ಸುಂಕಗಳ ನಿಯಮ ಜಾರಿಯಾಗಿದೆ.

    ಯಾವ ವಲಯಗಳಿಗೆ ಹೆಚ್ಚು ಹೊಡೆತ?

    ಆಭರಣ, ಚಿನ್ನ:

    ಭಾರತದಿಂದ ಅಮೆರಿಕಾ ಬಹುದೊಡ್ಡ ಮಟ್ಟದಲ್ಲಿ ಆಭರಣ ಮತ್ತು ವಜ್ರಗಳನ್ನ ಆಮದು ಮಾಡಿಕೊಳ್ಳುತ್ತದೆ. ಈ ವಲಯದಲ್ಲಿ ವರ್ಷಕ್ಕೆ ಸುಮಾರು 10 ಬಿಲಿಯನ್ ಡಾಲರ್ ಮೌಲ್ಯದ ವಸ್ತುಗಳು ಭಾರತದಿಂದ ಅಮೆರಿಕಾಕ್ಕೆ ರಫ್ತು ಮಾಡಲಾಗುತ್ತದೆ. ಇದೀಗ ಅಮೆರಿಕಾ ಹೆಚ್ಚುವರಿ ಸುಂಕದಿಂದಾಗಿ ಭಾರತದಿಂದ ಅಮೆರಿಕಕ್ಕೆ ಈ ವಸ್ತುಗಳ ಆಮದು ಕಡಿಮೆಯಾಗುವ ಸಾಧ್ಯತೆ ಇದೆ.

    ಗೃಹ ಉತ್ಪನ್ನಗಳು:

    ಈ ಸುಂಕ ಸಮರದಿಂದಾಗಿ ಕೈಮಗ್ಗ, ಕಸೂತಿ ಕೆಲಸಗಳಿಂದ ತಯಾರಾದ ಕೆಲವು ವಸ್ತುಗಳ ಆಮದು ಕಡಿಮೆಯಾಗುತ್ತದೆ. ಈ ಮೊದಲು ಭಾರತದಿಂದ ಅಮೆರಿಕಕ್ಕೆ ಈ ವಸ್ತುಗಳು ಜಿ ಎಸ್ ಪಿ ಅಡಿಯಲ್ಲಿ ಸುಂಕ ವಿಲ್ಲದೆ ರಫ್ತು ಮಾಡಲಾಗುತ್ತಿತ್ತು. ಹೀಗಾಗಿ ಈ ವಲಯದ ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ಯಮಗಳ ಅಭಿವೃದ್ಧಿ ಮೇಲೆ ಪರಿಣಾಮ ಬೀರಿ, ಭಾರಿ ಪ್ರಮಾಣದ ನಷ್ಟ ಉಂಟಾಗುವ ಸಾಧ್ಯತೆ ಇದೆ.

    ಮೀನುಗಾರಿಕಾ ವಲಯ:

    ಭಾರತದ ಮೀನುಗಾರಿಕೆ ಮತ್ತು ಸೀ ಫುಡ್ ಉತ್ಪನ್ನಗಳ ಮೇಲೆ ಅಮೆರಿಕ ಭಾರಿ ಬೇಡಿಕೆ ಹೊಂದಿತ್ತು. ಹೀಗಾಗಿ ಸದ್ಯ ವಿಧಿಸಿರುವ ಶೇಕಡಾ 50ರಷ್ಟು ಸುಂಕದಿಂದಾಗಿ ಈ ವಲಯದ ರಫ್ತು ಶೇಕಡ 40ರಷ್ಟು ಕುಸಿಯುವ ಸಾಧ್ಯತೆ ಇದೆ.

    ವೈದ್ಯಕೀಯ ಹಾಗೂ ತಂತ್ರಜ್ಞಾನ ಉತ್ಪನ್ನಗಳು:

    ಔಷಧಿ ಸೇರಿದಂತೆ ಇನ್ನಿತರ ವೈದ್ಯಕೀಯ ವಲಯದ ಉತ್ಪನ್ನಗಳ ಮೇಲೆ ಈ ಸುಂಕದಿಂದಾಗಿ ಹೆಚ್ಚಿನ ಪರಿಣಾಮ ಬೀರುವುದಿಲ್ಲ. ಇದಲ್ಲದೆ ಮಸಾಲೆ ಪದಾರ್ಥಗಳು, ಬಾಸ್ಮತಿ ಹಾಗೂ ಚಹಾ ಸೇರಿದಂತೆ ಕೃಷಿ ಉತ್ಪನ್ನಗಳ ಪರಿಣಾಮ ಬೀರಲಿದೆ. ಅಮೇರಿಕಾದಲ್ಲಿನ ಆಮದುದಾರರು ಮೆಕ್ಸಿಕನ್ ಹಾಗೂ ಯುರೋಪ್ ದೇಶದ ವಸ್ತುಗಳ ಮೇಲೆ ಹೆಚ್ಚು ಒಲವು ತೋರುತ್ತಿರುವುದರಿಂದ ಭಾರತದ ಕೈಗಾರಿಕಾ ಯಂತ್ರೋಪಕರಣಗಳು ಹಾಗೂ ವಾಹನ ರಫ್ತುಗಳ ಮೇಲೆ ಹೊಡೆತ ಬೀಳಲಿದೆ. ಜೊತೆಗೆ ಸೂರತ್ ಮತ್ತು ಮುಂಬೈನಲ್ಲಿ ಉದ್ಯೋಗಗಳ ಮೇಲೆಯೂ ಇದು ಪರಿಣಾಮ ಬೀರಲಿದೆ. ಇನ್ನು ಬಟ್ಟೆ ಹಾಗೂ ಜವಳಿ ವಸ್ತುಗಳ ಮೇಲೆ ಪರಿಣಾಮ ಬೀರಲಿದ್ದು, ಎನ್ ಸಿ ಆರ್ ಹಾಗೂ ಬೆಂಗಳೂರು ಪ್ರದೇಶಗಳ ಮೇಲೆಯೂ ಪ್ರಭಾವ ಬೀರುತ್ತದೆ.

    ಈ ಸುಂಕದಿಂದಾಗಿ ಭಾರತದಿಂದ ಅಮೆರಿಕಾಕ್ಕೆ ರಫ್ತು ಮಾಡಲಾಗುವ ವಸ್ತುಗಳ ಪೈಕಿ 60.2 ಬಿಲಿಯನ್ ಡಾಲರ್ ನಷ್ಟವಾಗಬಹುದು ಎಂದು ಅಂದಾಜಿಸಲಾಗಿದೆ. ಈ ಸುಂಕ ಜಾರಿಯಾದ ಬಳಿಕ ಇದರ ಮೌಲ್ಯ 18.6 ಬಿಲಿಯನ್ ಡಾಲರ್ ಗೆ ಇಳಿಯುವ ಸಾಧ್ಯತೆಯಿದ್ದು, ಒಟ್ಟು ಭಾರತದಿಂದ ಅಮೆರಿಕಾಕ್ಕೆ ಶೇಕಡ 43ರಷ್ಟು ರಫ್ತು ಆಗುವ ಸಾಧ್ಯತೆ ಇದೆ. ಅದಲ್ಲದೆ ಇದರಿಂದಾಗಿ ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ಯಮಗಳ ಮೇಲೆ ಭಾರಿ ಹೊಡೆತ ಬೀಳಲಿದ್ದು, ಹೆಚ್ಚಿನ ಜನರು ನಿರುದ್ಯೋಗಿಗಳಾಗುವ ಸಾಧ್ಯತೆ ಇದೆ.

    ಶೇಕಡಾವಾರು ಪ್ರಭಾವಿತ ವಲಯಗಳು:

    • ಆಭರಣ ಮತ್ತು ವಜ್ರ – 53.2%
    • ಬಟ್ಟೆ ಸೇರಿದಂತೆ ಇನ್ನಿತರ ಉತ್ಪನ್ನಗಳು – 63.05%
    • ಸೀ ಫುಡ್ ಹಾಗೂ ಮೀನುಗಾರಿಕೆ – 58.5%
    • ರಾಸಾಯನಿಕಗಳು – 54%
    • ಯಂತ್ರೋಪಕರಣಗಳು- 51.3%

    ಈ ಸುಂಕದಿಂದಾಗಿ ದೇಶದ ವಿವಿಧ ವಲಯಗಳ ಮೇಲೆ ಹೆಚ್ಚಿನ ಪರಿಣಾಮ ಬೀರಲಿದ್ದು, ಔಷಧ ಹಾಗೂ ಎಲೆಕ್ಟ್ರಾನಿಕ್ಸ್ ಗಳಾದ ಮೊಬೈಲ್, ಲ್ಯಾಪ್ಟಾಪ್ ಗಳು ಇವುಗಳಿಂದ ಹೊರತಾಗಿವೆ. ಕಾರಣ ಅಮೆರಿಕಾದ ಜನರು ಈ ಎಲೆಕ್ಟ್ರಾನಿಕ್ಸ್ ಗಳ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಒಂದು ವೇಳೆ ಇವುಗಳ ಮೇಲೆ ಹೆಚ್ಚುವರಿ ಸುಂಕ ವಿಧಿಸಿದರೆ ಅಮೆರಿಕಾದ ಆರ್ಥಿಕತೆಯ ಮೇಲೆ ಒತ್ತಡ ಬೀಳುತ್ತದೆ. ಹೀಗಾಗಿ ಈ ವಸ್ತುಗಳನ್ನು ಸುಂಕಪಟ್ಟಿಯಿಂದ ಹೊರಗಿರಿಸಲಾಗಿದೆ.

  • ಭಾರತ-ಪಾಕ್‌ ಸಂಘರ್ಷದಲ್ಲಿ ಟ್ರಂಪ್ ಮಧ್ಯಸ್ಥಿಕೆ ವಹಿಸಲು ಸಾಧ್ಯವಾಗದಿದ್ದಕ್ಕೆ 50% ಸುಂಕ: ಯುಎಸ್‌ ಬ್ಯಾಂಕ್ ವರದಿ

    ಭಾರತ-ಪಾಕ್‌ ಸಂಘರ್ಷದಲ್ಲಿ ಟ್ರಂಪ್ ಮಧ್ಯಸ್ಥಿಕೆ ವಹಿಸಲು ಸಾಧ್ಯವಾಗದಿದ್ದಕ್ಕೆ 50% ಸುಂಕ: ಯುಎಸ್‌ ಬ್ಯಾಂಕ್ ವರದಿ

    – ಭಾರತ ತನ್ನ ರೈತರನ್ನು ರಕ್ಷಿಸುವ ಗುರಿ ಹೊಂದಿದೆ; ವರದಿಯಲ್ಲಿ ಉಲ್ಲೇಖ

    ವಾಷಿಂಗ್ಟನ್‌: ಭಾರತ ಮತ್ತು ಪಾಕ್‌ ಸಂಘರ್ಷದಲ್ಲಿ (India Pakistan Conflict) ಡೊನಾಲ್ಡ್‌ ಟ್ರಂಪ್‌ ಮಧ್ಯಸ್ಥಿಕೆ ವಹಿಸಲು ಸಾಧ್ಯವಾಗದೇ ಇದ್ದ ಕಾರಣ, ಭಾರತದ ಮೇಲೆ 50% ಸುಂಕ ವಿಧಿಸಿದ್ದಾರೆ ಎಂದು ಅಮೆರಿಕದ ಬಹುರಾಷ್ಟ್ರೀಯ ಹೂಡಿಕೆ ಬ್ಯಾಂಕ್ ಮತ್ತು ಹಣಕಾಸು ಸೇವೆಗಳ ಸಂಸ್ಥೆ ಜೆಫರೀಸ್ ವರದಿ (Jefferies Bank Report) ಹೇಳಿದೆ.

    ದಕ್ಷಿಣ ಏಷ್ಯಾದ ಎರಡು ಪರಮಾಣು ಶಕ್ತಿ ರಾಷ್ಟ್ರಗಳ ನಡುವೆ ಮಧ್ಯಪ್ರವೇಶಿಸಲು ಟ್ರಂಪ್‌ (Donald Trump) ಆಶಿಸಿದ್ದರು. ಆದ್ರೆ ಭಾರತ ಮತ್ತು ಪಾಕಿಸ್ತಾನ ನಡುವಿನ ದೀರ್ಘಕಾಲ ದ್ವೇಷವನ್ನು ಕೊನೆಗೊಳಿಸುವಲ್ಲಿ ಪಾತ್ರ ವಹಿಸಲು ಅವಕಾಶ ಸಿಗಲಿಲ್ಲ. ಇದು ಅಮೆರಿಕ ಅಧ್ಯಕ್ಷರ ವೈಯಕ್ತಿಕ ದ್ವೇಷಕ್ಕೆ ಕಾರಣವಾಗಿದ್ದು, ಹೆಚ್ಚುವರಿ ಸುಂಕವನ್ನು ಭಾರತದ ಮೇಲೆ ವಿಧಿಸಿದ್ದಾರೆ ಎಂದು ವರದಿ ಹೇಳಿದೆ.

    ನೊಬೆಲ್ ಶಾಂತಿ ಪ್ರಶಸ್ತಿಗೆ ಶ್ವೇತಭವನ ಒತ್ತಾಯ
    ಕೆಲ ದಿನಗಳ ಹಿಂದಷ್ಟೇ ಟ್ರಂಪ್‌ಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಬೇಕೆಂದು ಹೇಳಿತ್ತು. ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ಸೇರಿದಂತೆ ವಿಶ್ವದಾದ್ಯಂತ ಹಲವಾರು ಯುದ್ಧಗಳನ್ನು ಕೊನೆಗೊಳಿಸಿದ್ದಾರೆ ಅವರಿಗೆ ಪ್ರಶಸ್ತಿ ನೀಡುವಂತೆ ಕೇಳಿಕೊಂಡಿತ್ತು. ಆದ್ರೆ ಭಾರತ ಮಾತ್ರ ಟ್ರಂಪ್‌ ಹಸ್ತಕ್ಷೇಪವನ್ನು ತಳ್ಳಿಹಾಕುತ್ತಲೇ ಬಂದಿದೆ.

    ಈ ವರದಿಯ ಮತ್ತೊಂದು ಅಂಶವೆಂದರೆ, ಭಾರತ ತನ್ನ ರೈತರನ್ನು ರಕ್ಷಣೆಗಾಗಿ ನಿಂತಿರುವ ಉದ್ದೇಶವನ್ನು ಒತ್ತಿ ಹೇಳಿದೆ. ಹೌದು. ಸುಮಾರು 250 ಮಿಲಿಯನ್ ರೈತರು ಮತ್ತು ಕಾರ್ಮಿಕರು ತಮ್ಮ ಜೀವನೋಪಾಯಕ್ಕಾಗಿ ಕೃಷಿಯನ್ನು ಅವಲಂಬಿಸಿದ್ದಾರೆ. ಭಾರತದಲ್ಲಿ ಶೇಕಡಾ 40 ರಷ್ಟು ಉದ್ಯೋಗಿಗಳು ಕೃಷಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಭಾರತ ತನ್ನ ರೈತರನ್ನು ರಕ್ಷಿಸುವ ಸಲುವಾಗಿ ಕೃಷಿ ವಲಯವನ್ನು ಆಮದುಗಳಿಗೆ ಮುಕ್ತಗೊಳಿಸಲು ಒಪ್ಪಿಕೊಂಡಿಲ್ಲ ಎಂಬುದನ್ನು ತೋರಿಸಿದೆ.

  • ರಾಷ್ಟ್ರಪತಿಗಳಿಗೆ ಬಂದ ರಹಸ್ಯ ಪತ್ರದಿಂದ ಭಾರತ, ಚೀನಾ ಸಂಬಂಧ ಸುಧಾರಣೆ!

    ರಾಷ್ಟ್ರಪತಿಗಳಿಗೆ ಬಂದ ರಹಸ್ಯ ಪತ್ರದಿಂದ ಭಾರತ, ಚೀನಾ ಸಂಬಂಧ ಸುಧಾರಣೆ!

    ನವದೆಹಲಿ: ಟ್ರಂಪ್‌ (Donald Trump) ಸುಂಕ ಸಮರ (Tariffs War) ಆರಂಭಿಸಿದ ಬೆನ್ನಲ್ಲೇ ಭಾರತ (India) ಮತ್ತು ಚೀನಾದ (China) ಸಂಬಂಧ ಈಗ ಉತ್ತಮವಾಗುತ್ತಿದೆ. ಈಗ ಎರಡು ದೇಶಗಳ ಮಧ್ಯೆ ಉತ್ತಮ ಸಂಬಂಧ ಬೆಳೆಯಲು ರಹಸ್ಯ ಪತ್ರ ಕಾರಣ ಎಂಬ ವಿಚಾರ ಬೆಳಕಿಗೆ ಬಂದಿದೆ.

    ಈ ವರ್ಷದ ಆರಂಭದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾದೊಂದಿಗಿನ ವ್ಯಾಪಾರ ಸಮರ ಆರಂಭಿಸಿದ್ದರು. ಈ ಸಂದರ್ಭದಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ (Xi Jinping) ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರಿಗೆ ಖಾಸಗಿ ಪತ್ರವನ್ನು ಬರೆದಿದ್ದರು ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಭಾರತದ ಜೊತೆ ಸಂಬಂಧವನ್ನು ಮರುಸ್ಥಾಪಿಸಲು ಚೀನಾ ಬಯಸಿದೆ ಎಂದು ಜಿನ್‌ಪಿಂಗ್‌ ಪತ್ರದಲ್ಲಿ ಉಲ್ಲೇಖಿಸಿದರು. ಈ ಪತ್ರವನ್ನು ರಾಷ್ಟ್ರಪತಿಗಳು ಕೂಡಲೇ ಪ್ರಧಾನಿ ಸಚಿವಾಲಯಕ್ಕೆ ಕಳುಹಿಸಿದ್ದರು. ಈ ಪತ್ರದ ಬಳಿಕ ಹದಗೆಟ್ಟಿದ್ದ ಭಾರತ ಮತ್ತು ಚೀನಾ ನಡುವಿನ ಸಂಬಂಧ ಹಂತ ಹಂತವಾಗಿ ಸುಧಾರಣೆಯಾಗತೊಡಗಿತು. ಇದನ್ನೂ ಓದಿ: ಒಂದಲ್ಲ, 4 ಬಾರಿ ಟ್ರಂಪ್‌ ಕರೆ ಮಾಡಿದ್ರೂ ಉತ್ತರಿಸದ ಮೋದಿ!

    ಟ್ರಂಪ್ ಸುಂಕ ನೀತಿ ಪರಿಣಾಮ ಎರಡೂ ದೇಶಗಳು ಭಿನ್ನಾಭಿಪ್ರಾಯ ಬದಿಗೊತ್ತಿ ಮಾತುಕತೆ ನಡೆಸಲು ಮುಂದಾಯಿತು ಎಂದು ವರದಿಯಾಗಿದೆ. ನಂತರದ ದಿನ ವಿದೇಶಾಂಗ ಸಚಿವ ಜೈಶಂಕರ್‌ ಚೀನಾ ಪ್ರವಾಸ ಕೈಗೊಂಡು ಕ್ಸಿ ಜಿನ್‌ಪಿಂಗ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.

    ಭಾರತ ಮತ್ತು ಚೀನಾ ನಡುವಿನ ನೇರ ಪ್ರಯಾಣಿಕ ವಿಮಾನಗಳು ಕೆಲ ದಿನಗಳಲ್ಲಿ ಆರಂಭಗೊಳ್ಳುವ ಸಾಧ್ಯತೆಯಿದೆ. ಚೀನಾ ಭಾರತಕ್ಕೆ ಯೂರಿಯಾ ಸಾಗಣೆಯ ಮೇಲಿನ ನಿರ್ಬಂಧಗಳನ್ನು ಸಡಿಲಿಸಿದೆ. ಇನ್ನೊಂದು ಕಡೆ ಭಾರತ ಚೀನಿ ಪ್ರಜೆಗಳಿಗೆ ಪ್ರವಾಸಿ ವೀಸಾಗಳನ್ನು ಮತ್ತೆ ತೆರೆದಿದೆ. ಇದನ್ನೂ ಓದಿ: ಜಪಾನ್‌ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ

    ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಗಾಗಿ ಈ ವಾರದ ಕೊನೆಯಲ್ಲಿ ನಡೆಯಲಿರುವ ತಮ್ಮ ಚೀನಾ ಪ್ರವಾಸದಲ್ಲಿ ಪ್ರಧಾನಿ ಮೋದಿ ಅಧ್ಯಕ್ಷ ಕ್ಸಿ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. 7 ವರ್ಷದ ನಂತರ ಮೋದಿಯವರು ಚೀನಾಗೆ ಭೇಟಿ ನೀಡುತ್ತಿದ್ದಾರೆ. ಕಳೆದ ವರ್ಷ ರಷ್ಯಾದ ಕಜಾನ್‌ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಇಬ್ಬರೂ ನಾಯಕರು ಕೊನೆಯ ಬಾರಿಗೆ ವೇದಿಕೆ ಹಂಚಿಕೊಂಡಿದ್ದರು.

  • ಉಕ್ರೇನ್ ರಷ್ಯಾ ಯುದ್ಧವನ್ನು ಮೋದಿ ಯುದ್ಧ ಎಂದು ಕರೆದ ಅಮೆರಿಕ

    ಉಕ್ರೇನ್ ರಷ್ಯಾ ಯುದ್ಧವನ್ನು ಮೋದಿ ಯುದ್ಧ ಎಂದು ಕರೆದ ಅಮೆರಿಕ

    – ಭಾರತಕ್ಕೆ ಈಗ ಅಹಂಕಾರ ಬಂದಿದೆ
    – ಟ್ರಂಪ್‌ ಆಯ್ತು ಈಗ ಅಧಿಕಾರಿಗಳಿಂದ ಟೀಕೆ

    ವಾಷಿಂಗ್ಟನ್: ತನ್ನ ಒತ್ತಡಕ್ಕೆ ಭಾರತ (India) ಬಗ್ಗದೇ ಸೆಡ್ಡು ಹೊಡೆದ ಬೆನ್ನಲ್ಲೇ ಹತಾಶೆಗೊಂಡಿರುವ ಟ್ರಂಪ್‌ (Donald Trump) ಸರ್ಕಾರದ ಅಧಿಕಾರಿಗಳು ಈಗ ನರೇಂದ್ರ ಮೋದಿ (Narendra Modi) ವಿರುದ್ಧ ಬಾಯಿಗೆ ಬಂದಂತೆ ಹೇಳಿಕೆ ನೀಡಲು ಆರಂಭಿಸಿದ್ದಾರೆ.

    ಹೌದು. ವಿಶ್ವದ ಮೇಲೆ ತೆರಿಗೆ ಸಮರ (Tariff War) ಆರಂಭಿಸಲು ಟ್ರಂಪ್‌ಗೆ ಸಲಹೆ ನೀಡಿರುವ ಶ್ವೇತ ಭವನದ (White House) ವ್ಯಾಪಾರ ಸಲಹೆಗಾರ ಪೀಟರ್ ನವರೊ (Peter Navarro) ರಷ್ಯಾ- ಉಕ್ರೇನ್‌ ಯುದ್ಧಕ್ಕೆ (Russia-Ukraine) ಹೊಸ ವಾಖ್ಯಾನ ನೀಡಿದ್ದಾರೆ. ಇದು ಮೋದಿ ನಡೆಸುತ್ತಿರುವ ಯುದ್ಧ (Modi’s War) ಎಂದು ಬಣ್ಣಿಸಿದ್ದಾರೆ.

    ರಷ್ಯಾದಿಂದ ಕಚ್ಚಾತೈಲವನ್ನು ಖರೀದಿಸುವುದಕ್ಕೆ ದಂಡದ ರೂಪದಲ್ಲಿ ಅಮೆರಿಕ 25% ಸುಂಕ ವಿಧಿಸಿದ ಆದೇಶ ಅಧಿಕೃತವಾಗಿ ಜಾರಿಯಾದ ಬಳಿಕ ಈ ಹೇಳಿಕೆ ಬಂದಿರುವುದು ವಿಶೇಷ. ಇಲ್ಲಿಯವರೆಗೆ ಡೊನಲ್ಡ್‌ ಟ್ರಂಪ್‌ ಭಾರತವನ್ನು ದೂರುತ್ತಿದ್ದರು. ಆದರೆ ಈಗ ಶ್ವೇತ ಭವನದ ಅಧಿಕಾರಿಗಳು ದೂರಲು ಆರಂಭಿಸಿರುವುದು ಮತ್ತೊಂದು ವಿಶೇಷ.

     

    ಮಾಧ್ಯಮಕ್ಕೆ ಸಂದರ್ಶನ ನೀಡಿದ ಅವರು, ರಷ್ಯಾದ ಇಂಧನವನ್ನು ಭಾರತ ನಿರಂತರವಾಗಿ ಖರೀದಿಸುತ್ತಿರುವುದರಿಂದ ಉಕ್ರೇನ್‌ ಮೇಲೆ ರಷ್ಯಾ ಆಕ್ರಮಣ ನಡೆಸುತ್ತಿದೆ. ಮಾಸ್ಕೋದಿಂದ ರಿಯಾಯಿತಿ ದರದಲ್ಲಿ ಕಚ್ಚಾ ತೈಲ ಖರೀದಿಸುವುದನ್ನು ನಿಲ್ಲಿಸಿದರೆ ಅಮೆರಿಕ ಭಾರತದ ಮೇಲೆ ವಿಧಿಸಿದ 25% ಸುಂಕ ಕಡಿತ ಕಾಣಬಹುದು ಎಂದು ಹೇಳಿದರು.

    ಭಾರತ ಮಾಡುತ್ತಿರುವ ಕೆಲಸದಿಂದಾಗಿ ಅಮೆರಿಕದಲ್ಲಿ ಪ್ರತಿಯೊಬ್ಬರೂ ನಷ್ಟ ಅನುಭವಿಸುತ್ತಾರೆ. ಭಾರತದ ಹೆಚ್ಚಿನ ಸುಂಕಗಳು ನಮ್ಮ ಉದ್ಯೋಗಗಳು, ಕಾರ್ಖಾನೆಗಳನ್ನು ಕಸಿದುಕೊಳ್ಳುತ್ತಿದೆ. ಅಮೆರಿಕನ್ನರು ಆರ್ಥಿಕವಾಗಿ ಬಳಲುತ್ತಿರುವಾಗ ಉಕ್ರೇನ್‌ ಯುದ್ಧಕ್ಕೆ ರಷ್ಯಾಕ್ಕೆ ಹಣಕಾಸಿನ ಸಹಾಯ ಮಾಡುತ್ತಿದೆ. ಇನ್ನೊಂದು ಕಡೆ ಉಕ್ರೇನ್‌ ನೆರವು ನೀಡುವಂತೆ ಅಮೆರಿಕ ಮತ್ತು ಯುರೋಪ್‌ ದೇಶವನ್ನು ಕೇಳಿಕೊಳ್ಳುತ್ತಿದೆ.  ಈ ಕಾರಣಕ್ಕೆ 50% ಸುಂಕ ವಿಧಿಸಲಾಗಿದೆ ಎಂದು ಟ್ರಂಪ್‌ ಸರ್ಕಾರದ ನಿರ್ಧಾರಗಳನ್ನು ಸಮರ್ಥಿಸಿದರು.  ಇದನ್ನೂ ಓದಿ: ಒಂದಲ್ಲ, 4 ಬಾರಿ ಟ್ರಂಪ್‌ ಕರೆ ಮಾಡಿದ್ರೂ ಉತ್ತರಿಸದ ಮೋದಿ!

    ಭಾರತಕ್ಕೆ ಈಗ ಅಹಂಕಾರ ಬಂದಿದೆ. ನಮಗೆ ಹೆಚ್ಚಿನ ಸುಂಕಗಳು ಇಲ್ಲ. ನಮ್ಮದು ಸಾರ್ವಭೌಮ ಹೊಂದಿದ ದೇಶ. ನಾವು ಯಾರಿಂದ ಬೇಕಾದರೂ ತೈಲ ಖರೀದಿಸಬಹುದು ಎಂಬಂತೆ ಭಾರತ ವರ್ತಿಸುತ್ತಿದೆ ಎಂದು ದೂರಿದರು.

    ಭಾರತ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿದೆ ಹೌದು. ಆದರೆ ಅಮೆರಿಕದ ವಿಶ್ವದ ದೊಡ್ಡ ಆರ್ಥಿಕತೆತಯನ್ನು ಹೊಂದಿದ ದೇಶವಾಗಿದೆ. ಭಾರತ ಮಾಡುತ್ತಿರುವ ಕೆಲಸಗಳಿಂದ ಅಮೆರಿಕದಲ್ಲಿರುವ ಪ್ರತಿಯೊಬ್ಬರೂ ನಷ್ಟ ಅನುಭವಿಸುತ್ತಿದ್ದಾರೆ ಎಂದರು.

    ರಷ್ಯಾದಿಂದ ಭಾರತ ರಿಯಾಯಿತಿ ದರದಲ್ಲಿ ತೈಲವನ್ನು ಖರೀದಿಸುತ್ತದೆ. ಖರೀದಿಸಿದ ಕಚ್ಚಾತೈಲವನ್ನು ರಿಫೈನರಿಯಲ್ಲಿ ಸಂಸ್ಕರಿಸಿ ಬೇರೆ ದೇಶಗಳಿಗೆ ಮಾರಾಟ ಮಾಡುವ ಮೂಲಕ ಲಾಭ ಮಾಡುತ್ತಿದೆ. ಈ ನಿರ್ಧಾರದಿಂದ ಭಾರತ ರಷ್ಯಾಕ್ಕೆ ಸಹಾಯ ಮಾಡಿದರೆ ಅಮೆರಿಕಕ್ಕೆ ಹಾನಿ ಮಾಡುತ್ತಿದೆ ಎಂದು ಹೇಳಿದರು.

  • ಟ್ರಂಪ್‌ ಸೂಚಿಸಿದ 5 ಗಂಟೆಗಳೊಳಗೆ ಪಾಕ್‌ ವಿರುದ್ಧ ಮೋದಿ ಯುದ್ಧ ನಿಲ್ಲಿಸಿದ್ರು: ರಾಹುಲ್‌ ಗಾಂಧಿ ಕಿಡಿ

    ಟ್ರಂಪ್‌ ಸೂಚಿಸಿದ 5 ಗಂಟೆಗಳೊಳಗೆ ಪಾಕ್‌ ವಿರುದ್ಧ ಮೋದಿ ಯುದ್ಧ ನಿಲ್ಲಿಸಿದ್ರು: ರಾಹುಲ್‌ ಗಾಂಧಿ ಕಿಡಿ

    ನವದೆಹಲಿ: ಡೊನಾಲ್ಡ್‌ ಟ್ರಂಪ್‌ ಸೂಚಿಸಿದ 5 ಗಂಟೆಗಳ ಒಳಗಾಗಿ ಪಾಕ್‌ ವಿರುದ್ಧದ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಧಾನಿ ಮೋದಿ ನಿಲ್ಲಿಸಿದರು ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಟೀಕಿಸಿದ್ದಾರೆ.

    ಭಾರತ-ಪಾಕಿಸ್ತಾನ ಸಂಘರ್ಷದ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ರಾಹುಲ್‌ ಗಾಂಧಿ, ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಟ್ರಂಪ್ ಅವರ 24 ಗಂಟೆಗಳ ಅಂತಿಮ ಗಡುವು ನೀಡಿದಾಗ, ಐದು ಗಂಟೆಗಳಲ್ಲಿ ಪ್ರಧಾನಿ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಿದ್ದಾರೆಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಪ್ರವಾಹದಲ್ಲಿ ಸಿಲುಕಿದ್ದ 22 ಸಿಆರ್‌ಪಿಎಫ್‌ ಸಿಬ್ಬಂದಿ ರಕ್ಷಿಸಿದ ಸೇನಾ ಹೆಲಿಕಾಪ್ಟರ್‌

    ರಾಹುಲ್ ಗಾಂಧಿಯವರ ಹೇಳಿಕೆಗೆ ತಿರುಗೇಟು ನೀಡಿದ ಬಿಜೆಪಿ ನಾಯಕಿ ಮತ್ತು ಮುಂಬೈ ಬಿಜೆಪಿಯ ಸಹ-ಸಂಚಾಲಕಿ ಪಲ್ಲವಿ ಸಿಟಿ, ಮೋದಿಜಿ ಟ್ರಂಪ್ ಅವರ ಮಾತು ಕೇಳಿ ಆಪರೇಷನ್ ಸಿಂಧೂರ್ ಅನ್ನು ನಿಲ್ಲಿಸಿದ್ದರೆ, ಟ್ರಂಪ್ ಭಾರತದ ಮೇಲೆ ಸುಂಕ ವಿಧಿಸಿದ್ದು ಏಕೆ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿಯ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ, ರಾಹುಲ್ ಗಾಂಧಿ ಸ್ಥಳೀಯ ಗೂಂಡಾಗಳಂತೆ ಮಾತನಾಡುತ್ತಾರೆ ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಕುಟುಕಿದ್ದಾರೆ.

    ಶ್ವೇತಭವನದಲ್ಲಿ ನಡೆದ ಕ್ಯಾಬಿನೆಟ್ ಸಭೆಯನ್ನುದ್ದೇಶಿಸಿ ಮಾತನಾಡಿದ ಟ್ರಂಪ್, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿದ್ದೇನೆ ಎಂದು ಹೇಳಿಕೊಂಡರು. ಮೋದಿ ಅದ್ಭುತ ವ್ಯಕ್ತಿ ಎಂದು ಬಣ್ಣಿಸಿದ್ದರು. ಇದನ್ನೂ ಓದಿ: ಒಂದಲ್ಲ, 4 ಬಾರಿ ಟ್ರಂಪ್‌ ಕರೆ ಮಾಡಿದ್ರೂ ಉತ್ತರಿಸದ ಮೋದಿ!

    ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಮಳೆಗಾಲದ ಅಧಿವೇಶನದಲ್ಲಿ, ಆಪರೇಷನ್ ಸಿಂಧೂರ ಸಂದರ್ಭದಲ್ಲಿ ಪ್ರಧಾನಿ ಮೋದಿ ಜೊತೆ ಮಾತನಾಡಿದ್ದೆ. ಯುದ್ಧ ನಿಲ್ಲಿಸಿದ್ದು ನಾನೇ ಎಂಬ ಟ್ರಂಪ್ ಅವರ ನಿರಂತರ ಹೇಳಿಕೆಗಳನ್ನು ಈಗಾಗಲೇ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.

  • ಒಂದಲ್ಲ, 4 ಬಾರಿ ಟ್ರಂಪ್‌ ಕರೆ ಮಾಡಿದ್ರೂ ಉತ್ತರಿಸದ ಮೋದಿ!

    ಒಂದಲ್ಲ, 4 ಬಾರಿ ಟ್ರಂಪ್‌ ಕರೆ ಮಾಡಿದ್ರೂ ಉತ್ತರಿಸದ ಮೋದಿ!

    – ಜರ್ಮನಿಯ ಮಾಧ್ಯಮಗಳಲ್ಲಿ ವರದಿ
    – ಸುಂಕ ಸಮರ ಆರಂಭಿಸಿದಕ್ಕೆ ಪ್ರತಿಕ್ರಿಯಿಸದ ಮೋದಿ

    ಬರ್ಲಿನ್‌: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) 4 ಬಾರಿ ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಜೊತೆ ಮಾತನಾಡಲು ಪ್ರಯತ್ನಿಸಿದ್ದರು. ಆದರೆ ಮೋದಿ ಅವರು ಟ್ರಂಪ್‌ ಜೊತೆ ದೂರವಾಣಿಯಲ್ಲಿ ಮಾತನಾಡಲು ನಿರಾಕರಿಸಿದ್ದಾರೆ ಎಂದು ಜರ್ಮನಿಯ ಮಾಧ್ಯಮವೊಂದು ವರದಿ ಮಾಡಿದೆ

    ಭಾರತದ ಮೇಲೆ ಸುಂಕ ಸಮರ (Tariff War) ಆರಂಭಿಸಿದ ಬಳಿಕ ಟ್ರಂಪ್‌ ಕರೆ ಮಾಡಿ ಮಾತನಾಡಲು ಮುಂದಾಗಿದ್ದರು ಎಂದು ಜರ್ಮನ್ ಪತ್ರಿಕೆ ಫ್ರಾಂಕ್‌ಫರ್ಟರ್ ಆಲ್ಗೆಮೈನ್ ವರದಿ ಮಾಡಿದೆ.

    ಜುಲೈ 20 ರಂದು ಅಮೆರಿಕ ಭಾರತದಿಂದ ಆಮದಾಗುವ ವಸ್ತುಗಳ ಮೇಲೆ 25% ಸುಂಕವನ್ನು ವಿಧಿಸಿತ್ತು. ನಂತರ ರಷ್ಯಾದಿಂದ (Russia) ಕಚ್ಚಾ ತೈಲವನ್ನು ಆಮದು ಮಾಡುತ್ತಿರುವುದಕ್ಕೆ ಭಾರತದಿಂದ ಆಮದಾಗುವ ವಸ್ತುಗಳ ಮೇಲೆ ಮತ್ತೆ 25% ಸುಂಕವನ್ನು ಡೊನಾಲ್ಡ್‌ ಟ್ರಂಪ್‌ ಹಾಕಿದ್ದಾರೆ. ಸದ್ಯ ಬ್ರೆಜಿಲ್ ಹೊರತುಪಡಿಸಿ ಅತಿ ಹೆಚ್ಚು ಸುಂಕ ಭಾರತದ ಮೇಲೆ ವಿಧಿಸಿದ್ದಾರೆ.

    ಟ್ರಂಪ್‌ ನಿರ್ಧಾರದಿಂದ ಅಮೆರಿಕ ಭಾರತದ ನಡುವೆ ಬಿಕ್ಕಟ್ಟು ಆರಭವಾಗಿದೆ. ಬಿಕ್ಕಟ್ಟು ಪರಿಹಾರಕ್ಕೆ ಕರೆ ಮಾಡಿ ಮೋದಿಯನ್ನು ಮಣಿಯುವಂತೆ ಮಾಡಲು ಟ್ರಂಪ್‌ ನಾಲ್ಕೈದು ಬಾರಿ ಕರೆ ಮಾಡಿದ್ದಾರೆ. ಆದರೆ ಮೋದಿ ಟ್ರಂಪ್‌ ಕರೆಯನ್ನು ಸ್ವೀಕರಿಸಲಿಲ್ಲ ಎಂದು ಹೇಳಿದೆ. ಇದನ್ನೂ ಓದಿ: ಭಾರತದ ಮೇಲೆ 50%ರಷ್ಟು ಸುಂಕ ಅಮೆರಿಕದಿಂದ ಅಧಿಸೂಚನೆ

    ಭಾರತದ ವಿದೇಶಾಂಗ ಸಚಿವಾಲಯ (MEA) ಪ್ರಕಾರ, ಜೂನ್ 17 ರಂದು ಅಧ್ಯಕ್ಷರ ಕೋರಿಕೆಯ ಮೇರೆಗೆ ಮೋದಿ ಟ್ರಂಪ್ ಅವರೊಂದಿಗೆ ಕೊನೆಯದಾಗಿ ಮಾತನಾಡಿದರು. ಕೆನಡಾದಲ್ಲಿ ನಡೆದ G7 ಶೃಂಗಸಭೆಯ ಸಂದರ್ಭದಲ್ಲಿ ಇಬ್ಬರೂ ಭೇಟಿಯಾಗಬೇಕಿತ್ತು. ಆದರೆ ಟ್ರಂಪ್ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಅಮೆರಿಕಕ್ಕೆ ಮರಳಿದ್ದರಿಂದ ಭೇಟಿಯಾಗಿರಲಿಲ್ಲ.

    ರಷ್ಯಾದಿಂದ ಕಚ್ಚಾ ತೈಲವನ್ನು ಖರೀದಿಸುತ್ತಿರುವುದಕ್ಕೆ ಟ್ರಂಪ್‌ ಭಾರತದ ಆರ್ಥಿಕತೆಯನ್ನು ಡೆಡ್‌ ಎಕಾನಮಿ ವ್ಯಂಗ್ಯವಾಡಿದ್ದರು. ಈ ಹೇಳಿಕೆಗೆ ಪ್ರತಿಯಾಗಿ ಮೋದಿ, ಭಾರತವು ವಿಶ್ವದ ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದಾಗುವತ್ತ ಸಾಗುತ್ತಿದೆ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದರು.

    ಟ್ರಂಪ್‌ ಸುಂಕ ಸಮರಕ್ಕೆ ತಲೆ ಕೆಡಿಸಿಕೊಳ್ಳದ ಮೋದಿ, ರೈತರು (Faramers) ಮತ್ತು ಮೀನುಗಾರರಿಗೆ (Fishermen) ಸಮಸ್ಯೆಯಾಗುವ ಯಾವುದೇ ಹಿತಾಸಕ್ತಿಯ ಜೊತೆ ಭಾರತ (India) ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದರು. ಇದನ್ನೂ ಓದಿ: ಮೋದಿ, ಪುಟಿನ್‌ರನ್ನು ಖುದ್ದಾಗಿ ಸ್ವಾಗತಿಸಲಿದ್ದಾರೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

    ರೈತರ ಹಿತಾಸಕ್ತಿ ನಮ್ಮ ಪ್ರಮುಖ ಆದ್ಯತೆಯಾಗಿದೆ. ಭಾರತ ತನ್ನ ರೈತರು, ಜಾನುವಾರು ಮಾಲೀಕರು ಮತ್ತು ಮೀನುಗಾರರ ಹಿತಾಸಕ್ತಿಗಳೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಸರ್ಕಾರದ ನಿರ್ಧಾರದಿಂದ ಭಾರೀ ಬೆಲೆ ತೆರಬೇಕಾಗುತ್ತದೆ ಎನ್ನುವುದು ನನಗೆ ತಿಳಿದಿದೆ. ಇದಕ್ಕೆ ನಾನು ಸಿದ್ಧನಿದ್ದೇನೆ. ದೇಶದ ರೈತರು, ಮೀನುಗಾರರು ಮತ್ತು ಜಾನುವಾರು ಮಾಲೀಕರ ಹಿತದೃಷ್ಟಿಯಿಂದ ಭಾರತ ಎಲ್ಲದ್ದಕ್ಕೂ ಸಿದ್ಧವಾಗಿದೆ ಎಂದು ಹೇಳಿದ್ದರು.

    ಟ್ರಂಪ್‌ ಒತ್ತಡಕ್ಕೆ ಮಣಿಯದ್ದು ಯಾಕೆ?
    ಟ್ರಂಪ್‌ ಸುಂಕ ಸಮರ ಆರಂಭಿಸಿದ ಕೂಡಲೇ ಭಾರತ ಸೇರಿದಂತೆ 100ಕ್ಕೂ ಹೆಚ್ಚು ದೇಶಗಳ ಮೇಲೆ ತೆರಿಗೆ ಸಮರ ಆರಂಭಿಸಿದ್ದರು. ನಂತರ ಉಳಿದ ದೇಶಗಳು ವ್ಯಾಪಾರ ಸಂಬಂಧ ಮಾತುಕತೆ ನಡೆಸಲು ಆಸಕ್ತಿ ತೋರಿದ ಬೆನ್ನಲ್ಲೇ ಅಮೆರಿಕ ಸುಂಕ ಸಮರವನ್ನು ತಡೆ ಹಿಡಿದಿತ್ತು. ಈ ಸಂದರ್ಭದಲ್ಲಿ ಭಾರತ ಅಮೆರಿಕದ ಜೊತೆ ವ್ಯಾಪಾರ ಮಾತುಕತೆ ನಡೆಸತೊಡಗಿತು.

    ಬಹುತೇಕ ವಿಚಾರಗಳ ಮಧ್ಯೆ ಭಾರತ ಮತ್ತು ಅಮೆರಿಕ ಒಪ್ಪಿಗೆ ನೀಡಿದರೂ ಮಹತ್ವದ ಕೆಲ ವಿಚಾರಗಳ ಭಾರತಕ್ಕೆ ಒಪ್ಪಿಗೆ ನೀಡಿಲ್ಲ. ಮುಖ್ಯವಾಗಿ ಕೃಷಿ, ಹೈನು ಉತ್ಪನ್ನಗಳ ವಲಯ. ಮೀನುಗಾರಿಕೆ ಸಂಬಂಧಿಸಿದಂತೆ ಅಮೆರಿಕದ ಉತ್ಪನ್ನಗಳಿಗೆ ಮುಕ್ತವಾಗಿಸಲು ಕೇಂದ್ರ ಸರ್ಕಾರವು ಒಪ್ಪಿಗೆ ನೀಡಿಲ್ಲ. ಅಮೆರಿಕ ಉಕ್ಕು, ಅಲ್ಯೂಮಿನಿಯಂ ಮತ್ತು ಆಟೋಮೊಬೈಲ್‌ ಉತ್ಪನ್ನಗಳ ಮೇಲೆ ಹೆಚ್ಚಿನ ಸುಂಕ ವಿಧಿಸಬಾರದು ಎಂದು ಭಾರತ ಇರಿಸಿರುವ ಬೇಡಿಕೆಯನ್ನು ಒಪ್ಪಿಲ್ಲ.

    ಅಮೆರಿಕದ ಡೈರಿ ಉತ್ಪನ್ನಗಳಿಗೆ ಭಾರತ ಅನುಮತಿ ನೀಡಿಲ್ಲ ಯಾಕೆ ಎನ್ನುವುದಕ್ಕೆ ಕಾರಣ ಇದೆ. ಭಾರತದಲ್ಲಿ ದನಗಳಿಗೆ ಹುಲ್ಲು, ಒಣಗಿದ ಮೇವು, ಧಾನ್ಯಗಳು, ಮತ್ತು ಪಶು ಆಹಾರವನ್ನು ನೀಡಲಾಗುತ್ತದೆ. ಆದರೆ ಅಮೆರಿಕದಲ್ಲಿ ಹಾಗಲ್ಲ. ಅಮೆರಿಕದಲ್ಲಿ ಜಾನುವಾರುಗಳಿಗೆ ಆಹಾರವಾಗಿ ನಾನ್‌ ವೆಜ್‌ ಆಹಾರಗಳನ್ನು ನೀಡಲಾಗುತ್ತದೆ. ಮಾಂಸ ಮತ್ತು ಮೂಳೆ ಊಟ, ಒಣಗಿದ ರಕ್ತ ಮತ್ತು ಕೋಳಿ ತ್ಯಾಜ್ಯ ಸೇರಿದಂತೆ ಪ್ರಾಣಿ ಉತ್ಪನ್ನಗಳನ್ನು ಜಾನುವಾರು ಆಹಾರದಲ್ಲಿ ಬಳಸಲು ಅವಕಾಶ ನೀಡುತ್ತವೆ. ತ್ಯಾಜ್ಯವನ್ನು ಕಡಿಮೆ ಮಾಡಲು ಮತ್ತು ಮೇವಿನ ವೆಚ್ಚವನ್ನು ಕಡಿಮೆ ಮಾಡಲು ಅಮೆರಿಕದ ರೈತರು ಈ ಆಹಾರವನ್ನು ನೀಡುತ್ತಾರೆ. ಈ ರೀತಿಯ ಆಹಾರ ನೀಡಲು ಅಮೆರಿಕದ ಕಾನೂನಿನಲ್ಲಿ ಅನುಮತಿ ಇದೆ.

    ಭಾರತದಲ್ಲಿ ಹಸುಗಳನ್ನು ಪವಿತ್ರ ಮತ್ತು ಪೂಜ್ಯ ಭಾವದಿಂದ ನೋಡಲಾಗುತ್ತದೆ. ಹಸುಗಳು ತಿಂದ ಪ್ರಾಣಿ ಉತ್ಪನ್ನಗಳಿಂದ ಬರುವ ಹಾಲು ಸೇವಿಸುವುದನ್ನು ಸಾಂಸ್ಕೃತಿಕ ಮತ್ತು ಧಾರ್ಮಿಕ ನಂಬಿಕೆಗಳ ಉಲ್ಲಂಘನೆ ಎಂದು ಪರಿಗಣಿಸಲಾಗುತ್ತದೆ. ಭಾರತದಲ್ಲಿ ಸುಮಾರು 8 ಕೋಟಿಗೂ ಅಧಿಕ ಮಂದಿ ಹೈನುಗಾರಿಕೆ ಉದ್ಯಮದಲ್ಲಿ ತೊಡಗಿದ್ದಾರೆ. ಭಾರತದ ಜಿಡಿಪಿಗೆ ಹೈನುಗಾರಿಕೆ 5% ಕೊಡುಗೆ ನೀಡುತ್ತದೆ.

    ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಇರುವ ಕಾರಣ ಭಾರತದ ಮಾರುಕಟ್ಟೆ ಪ್ರವೇಶಿಲು ಅಮೆರಿಕ ಮೊದಲಿನಿಂದಲೂ ಭಾರೀ ಪ್ರಯತ್ನ ಮಾಡುತ್ತಿದೆ. ಒಂದು ವೇಳೆ ಭಾರತ ಅನುಮತಿ ನೀಡಿದರೆ ರೈತರು ಬೀದಿಗೆ ಇಳಿಯುವ ಎಚ್ಚರಿಕೆ ನೀಡಿದ್ದಾರೆ. ಅಷ್ಟೇ ಅಲ್ಲದೇ ಸರ್ಕಾರವೇ ಪತನ ಹೊಂದುವ ಸಾಧ್ಯತೆಯಿದೆ. ಈ ಕಾರಣಕ್ಕೆ ಇಲ್ಲಿಯವರೆಗೆ ಯಾವುದೇ ಸರ್ಕಾರಗಳು ಭಾರತದ ಮಾರುಕಟ್ಟೆಗೆ ಅಮೆರಿಕದ ಡೈರಿ ಉತ್ಪನ್ನ ಪ್ರವೇಶಕ್ಕೆ ಅನುಮತಿ ನೀಡಿಲ್ಲ.

  • ಭಾರತದ ಮೇಲೆ 50%ರಷ್ಟು ಸುಂಕ – ಅಮೆರಿಕದಿಂದ ಅಧಿಸೂಚನೆ

    ಭಾರತದ ಮೇಲೆ 50%ರಷ್ಟು ಸುಂಕ – ಅಮೆರಿಕದಿಂದ ಅಧಿಸೂಚನೆ

    ನವದೆಹಲಿ: ಭಾರತದ (India) ಸರಕುಗಳ ಮೇಲಿನ ಆಮದು ಸುಂಕವನ್ನು (Tariffs) 50% ಹೆಚ್ಚಿಸುವುದಾಗಿ ಅಮೆರಿಕದ (America) ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಕಳೆದ ತಿಂಗಳು ಘೋಷಿಸಿದ್ದರು. ಅದರಂತೆ, ಭಾರತದಿಂದ ಆಮದು ಮಾಡಿಕೊಳ್ಳುವ ಉತ್ಪನ್ನಗಳ ಮೇಲೆ ಹೆಚ್ಚುವರಿ ಸುಂಕಗಳನ್ನು ಜಾರಿಗೆ ತರುವ ಕುರಿತು ಅಮೆರಿಕದ ಕಸ್ಟಮ್ಸ್ ಮತ್ತು ಗಡಿ ರಕ್ಷಣೆ ಕರಡು ಅಧಿಸೂಚನೆ ಹೊರಡಿಸಿದೆ.

    `ರಷ್ಯನ್ ಒಕ್ಕೂಟದ ಸರ್ಕಾರದಿಂದ ಯುನೈಟೆಡ್ ಸ್ಟೇಟ್ಸ್‌ಗೆ ಇರುವ ಬೆದರಿಕೆ ಪರಿಹರಿಸುವುದು’ ಎಂಬ ಶೀರ್ಷಿಕೆಯ ಪತ್ರಕ್ಕೆ ಆ.6 ರಂದು ಟ್ರಂಪ್ ಸಹಿ ಹಾಕಿದ್ದರು. ಈ ಆದೇಶ ಜಾರಿಗೆ ತರಲು ಹೆಚ್ಚುವರಿ ಸುಂಕಗಳನ್ನು ವಿಧಿಸಲಾಗುತ್ತಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಧಿಸೂಚನೆಯು ಭಾರತದ ಆಮದಿನ ಮೇಲೆ ಹೊಸ ಸುಂಕ ದರವನ್ನು ನಿಗದಿಪಡಿಸಲಾಗುತ್ತದೆ. ಇದನ್ನೂ ಓದಿ: ಚೀನಾವನ್ನ ಎದುರಿಸಬೇಕಾದ್ರೆ ಭಾರತ-ಅಮೆರಿಕ ಸಂಬಂಧವನ್ನ ಹಳಿಗೆ ತನ್ನಿ – ಟ್ರಂಪ್‌ಗೆ ನಿಕ್ಕಿ ಹ್ಯಾಲಿ ಮತ್ತೆ ಎಚ್ಚರಿಕೆ

    ಆ.27ರ ಮಧ್ಯರಾತ್ರಿಯಿಂದ ಈ ನಿಯಮ ಜಾರಿಗೆ ಬರಲಿದೆ. ಟ್ರಂಪ್ ಅವರ ಕಾರ್ಯಕಾರಿ ಆದೇಶಕ್ಕೆ ಅನುಗುಣವಾಗಿ ಅಮೆರಿಕದ ಹಾರ್ಮೋನೈಸ್ಡ್ ಟ್ಯಾರಿಫ್ ವೇಳಾಪಟ್ಟಿಯನ್ನು ಮಾರ್ಪಡಿಸುವುದು ಅಗತ್ಯವೆಂದು ಅಲ್ಲಿನ ಅಧಿಕಾರಿಗಳು ಹೇಳಿದ್ದಾರೆ.

    ಜುಲೈ 30 ರಂದು, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ಹೆಚ್ಚುವರಿಯಾಗಿ 25% ರಷ್ಟು ಸುಂಕ ಘೋಷಿಸಿದ್ದರು. ಹೆಚ್ಚುವರಿ ಸುಂಕದಿಂದ ಭಾರತದ ಮೇಲೆ ಹಲವು ಪರಿಣಾಮ ಬೀರಲಿವೆ. 2024ರಲ್ಲಿ ಅಮೆರಿಕವು ಭಾರತಕ್ಕೆ ಪ್ರಮುಖ ರಫ್ತು ತಾಣವಾಗಿದ್ದು, 87.3 ಶತಕೋಟಿ ಡಾಲರ್ ಮೌಲ್ಯದ ಸರಕುಗಳನ್ನು ಕಳಿಸಿಕೊಟ್ಟಿತ್ತು. ಅಮೆರಿಕಕ್ಕೆ ಆಮದಾಗುವ ಭಾರತದ ಸರಕುಗಳ ಮೇಲೆ ವಿಧಿಸಿರುವ 50% ಸುಂಕವು ಆ. 27ರಿಂದ ಜಾರಿಯಾಗಲಿದ್ದು, ಇದು ಭಾರತದ ಆರ್ಥಿಕತೆ (Indian Economy) ಮೇಲೆ ಹೊಡೆತ ಬೀಳಲಿದೆ ಅನ್ನೋದು ತಜ್ಞರ ಅಭಿಪ್ರಾಯವಾಗಿದೆ. ಇದನ್ನೂ ಓದಿ: ವರ್ಷಾಂತ್ಯದಲ್ಲಿ ಭಾರತಕ್ಕೆ ಪುಟಿನ್‌, ಝೆಲೆನ್ಸ್ಕಿ ಭೇಟಿ – ಅಮೆರಿಕ ತೈಲ ವಾರ್‌ ನಡ್ವೆ ಹೆಚ್ಚಾಯ್ತು ಭಾರತದ ಪ್ರಾಬಲ್ಯ

  • ಆ.27ರಿಂದ ಟ್ರಂಪ್ ಸುಂಕ ಜಾರಿ – ಮಂಗಳವಾರ ಮೋದಿ ನೇತೃತ್ವದಲ್ಲಿ ಹೈವೋಲ್ಟೇಜ್‌ ಸಭೆ ಸಾಧ್ಯತೆ

    ಆ.27ರಿಂದ ಟ್ರಂಪ್ ಸುಂಕ ಜಾರಿ – ಮಂಗಳವಾರ ಮೋದಿ ನೇತೃತ್ವದಲ್ಲಿ ಹೈವೋಲ್ಟೇಜ್‌ ಸಭೆ ಸಾಧ್ಯತೆ

    ನವದೆಹಲಿ: ಅಮೆರಿಕಕ್ಕೆ ಆಮದಾಗುವ ಭಾರತದ ಸರಕುಗಳ ಮೇಲೆ ವಿಧಿಸಿರುವ ಶೇ.50 ಸುಂಕವು ಆಗಸ್ಟ್‌ 27ರಿಂದ ಜಾರಿಯಾಗಲಿದೆ. ಇದು ಭಾರತದ ಆರ್ಥಿಕತೆ (Indian Economy) ಮೇಲೆ ಹೊಡೆತ ಬೀಳಲಿದೆ ಅನ್ನೋದು ತಜ್ಞರ ಅಭಿಪ್ರಾಯವಾಗಿದೆ. ಈ ಹಿನ್ನೆಲೆ ಮಂಗಳವಾರ (ಆ.26) ಪ್ರಧಾನಿ ಕಚೇರಿ (PM Office) ಮಹತ್ವದ ಸಭೆಗೆ ಮುಂದಾಗಿದೆ.

    ಭಾರತೀಯ ರಫ್ತುದಾರರು ಎದುರಿಸುತ್ತಿರುವ ಪರಿಣಾಮಗಳಿಗೆ ಪರಿಹಾರ ಕಂಡುಕೊಳ್ಳುವುದು ಈ ಸಭೆಯ ಪ್ರಮುಖ ಉದ್ದೇಶವಾಗಿದೆ. ಹಾಗಾಗಿ ಕ್ರಮಗಳನ್ನು ಪರಿಶೀಲಿಸಲು ಪ್ರಧಾನಿ ಮೋದಿ (PM Modi) ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ಕರೆಯುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಚೀನಾವನ್ನ ಎದುರಿಸಬೇಕಾದ್ರೆ ಭಾರತ-ಅಮೆರಿಕ ಸಂಬಂಧವನ್ನ ಹಳಿಗೆ ತನ್ನಿ – ಟ್ರಂಪ್‌ಗೆ ನಿಕ್ಕಿ ಹ್ಯಾಲಿ ಮತ್ತೆ ಎಚ್ಚರಿಕೆ

    Narendra Modi great friend of mine Donald Trump Announces 26 percentage Discounted Reciprocal Tariff On India

    ಅಮೆರಿಕದಲ್ಲಿ ಮಾರಾಟ ಮಾಡಲಾಗುವ ಭಾರತದ ಸರಕುಗಳಿಗೆ ವಿಧಿಸಲಾಗಿದ್ದ ಶೇ.50 ರಷ್ಟು ಸುಂಕ ಬುಧವಾರದಿಂದ ಜಾರಿಗೆ ಬರಲಿದೆ. ಅದರಂತೆ ಆ.27ರಿಂದ ಅಮೆರಿಕದ ಮಾರುಕಟ್ಟೆಗೆ ಪ್ರವೇಶಿಸುವ ಭಾರತೀಯ ಸರಕುಗಳು 50% ಸುಂಕಕ್ಕೆ ಒಳಪಟ್ಟಿರುತ್ತವೆ. ಇದನ್ನೂ ಓದಿ: ವರ್ಷಾಂತ್ಯದಲ್ಲಿ ಭಾರತಕ್ಕೆ ಪುಟಿನ್‌, ಝೆಲೆನ್ಸ್ಕಿ ಭೇಟಿ – ಅಮೆರಿಕ ತೈಲ ವಾರ್‌ ನಡ್ವೆ ಹೆಚ್ಚಾಯ್ತು ಭಾರತದ ಪ್ರಾಬಲ್ಯ

    ಟ್ರಂಪ್‌ ಸುಂಕ ವಿಧಿಸಿದ್ದೇಕೆ?
    ರಷ್ಯಾದ ತೈಲ ಖರೀದಿ ಮೂಲಕ ಭಾರತ ಉಕ್ರೇನ್‌ ವಿರುದ್ಧದ ಯುದ್ಧಕ್ಕೆ ಫಂಡಿಂಗ್‌ ಮಾಡುತ್ತಿದೆ ಅನ್ನೋದು ಟ್ರಂಪ್‌ (Donald Trump) ನಂಬಿಕೆಯಾಗಿದೆ. ಹೀಗಾಗಿ ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವಂತೆ ಹಲವು ಬಾರಿ ಟ್ರಂಪ್‌ ಹೇಳಿದರು. ಅಲ್ಲದೇ ಅಮೆರಿಕದ ರಾಜತಾಂತ್ರಿಕರೂ ಭಾರತಕ್ಕೆ ತೈಲ ಖರೀದಿ ನಿಲ್ಲಿಸುವಂತೆ ಎಚ್ಚರಿಸಿದರು. ಆದರೆ ರಷ್ಯಾದ ಸ್ನೇಹ ಬಿಟ್ಟುಕೊಡದ ಭಾರತ, ತೈಲ ಖರೀದಿಯನ್ನ ಮುಂದುವರಿಸಿದೆ. ಹೀಗಾಗಿ ಆಗಸ್ಟ್‌ 27ರಿಂದ ಜಾರಿಗೆ ಬರುವಂತೆ ಹೆಚ್ಚುವರಿ 25% ಸುಂಕ ವಿಧಿಸಿದ್ದಾರೆ. ಇದನ್ನೂ ಓದಿ: ಹೌತಿಗಳ ವಿರುದ್ಧ ಸಿಡಿದೆದ್ದ ಇಸ್ರೇಲ್‌ – ಯೆಮೆನ್ ಮೇಲೆ ವೈಮಾನಿಕ ದಾಳಿ

    Trump Modi Putin 1

    ಈಗಿರುವ ಸುಂಕ ಎಷ್ಟು?
    * 41% ಸುಂಕ – ಸಿರಿಯಾ
    * 40% ಸುಂಕ – ಲಾವೋಸ್, ಮ್ಯಾನ್ಮಾರ್ (ಬರ್ಮಾ)
    * 39% ಸುಂಕ – ಸ್ವಿಟ್ಜರ್ಲೆಂಡ್
    * 35% ಸುಂಕ – ಇರಾಕ್, ಸೆರ್ಬಿಯಾ
    * 30% ಸುಂಕ – ಅಲ್ಜೀರಿಯಾ, ಬೋಸ್ನಿಯಾ ಮತ್ತು ಹರ್ಜೆಗೋವಿನಾ, ಲಿಬಿಯಾ, ದಕ್ಷಿಣ ಆಫ್ರಿಕಾ
    * 25% ಸುಂಕ – ಭಾರತ, ಬ್ರೂನಿ, ಕಝಾಕಿಸ್ತಾನ್, ಮೊಲ್ಡೊವಾ, ಟುನೀಶಿಯಾ
    * 20% ಸುಂಕ – ಬಾಂಗ್ಲಾದೇಶ, ಶ್ರೀಲಂಕಾ, ತೈವಾನ್, ವಿಯೆಟ್ನಾಂ
    * 19% ಸುಂಕ – ಪಾಕಿಸ್ತಾನ, ಮಲೇಷ್ಯಾ, ಇಂಡೋನೇಷ್ಯಾ, ಕಾಂಬೋಡಿಯಾ, ಫಿಲಿಪೈನ್ಸ್, ಥೈಲ್ಯಾಂಡ್
    * 18% ಸುಂಕ – ನಿಕರಾಗುವಾ
    * 15% ಸುಂಕ – ಇಸ್ರೇಲ್, ಜಪಾನ್, ಟರ್ಕಿ, ನೈಜೀರಿಯಾ, ಘಾನಾ ಮತ್ತು ಇತರ ಹಲವು ದೇಶಗಳು
    * 10% ಸುಂಕ – ಬ್ರೆಜಿಲ್, ಯುನೈಟೆಡ್ ಕಿಂಗ್‌ಡಮ್ (ಯುಕೆ), ಫಾಕ್‌ಲ್ಯಾಂಡ್ ದ್ವೀಪಗಳು

    ಭಾರತಕ್ಕಿಂತ ಪಾಕ್‌ಗೆ ಕಡಿಮೆ ಸುಂಕ
    ಈಗಾಗಲೇ ಆಗಸ್ಟ್‌ 7ರಿಂದ ಭಾರತದ ಎಲ್ಲ ಆಮದು ಸರಕುಗಳಿಗೆ ಶೇ.25ರಷ್ಟು ಸುಂಕ ವಿಧಿಸಿದ್ದಾರೆ. ಆದ್ರೆ ಪಾಕಿಸ್ತಾನಕ್ಕೆ 19% ಸುಂಕ ವಿಧಿಸಿದ್ದಾರೆ.