Tag: donald trump

  • ಎಷ್ಟೇ ಒತ್ತಡ ಬಂದ್ರೂ ತಡೆದುಕೊಳ್ಳುವ ಶಕ್ತಿ ನಮಗಿದೆ – ಟ್ರಂಪ್‌ಗೆ ಮೋದಿ ಖಡಕ್‌ ಸಂದೇಶ

    ಎಷ್ಟೇ ಒತ್ತಡ ಬಂದ್ರೂ ತಡೆದುಕೊಳ್ಳುವ ಶಕ್ತಿ ನಮಗಿದೆ – ಟ್ರಂಪ್‌ಗೆ ಮೋದಿ ಖಡಕ್‌ ಸಂದೇಶ

    – ಗುಜರಾತ್‌ನಲ್ಲಿದ್ದ ಕರ್ಫ್ಯೂ ದಿನಗಳನ್ನ ಇಂದಿನ ಯುವ ಪೀಳಿಗೆ ನೋಡಿಲ್ಲ; ಪಿಎಂ

    ನವದೆಹಲಿ: ರಷ್ಯಾದಿಂದ ತೈಲ ಖರೀದಿಸುತ್ತಿರುವ ಕಾರಣಕ್ಕೆ ಭಾರತದ ಮೇಲೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿಧಿಸಿರುವ ಶೇ.50ರಷ್ಟು ಸುಂಕ ಅಧಿಕೃತವಾಗಿ ಜಾರಿಯಾಗಲು ಇನ್ನೆರಡು ದಿನ ಬಾಕಿ ಇದೆ (ಇಂದು ಸೇರಿದಂತೆ). ಆದ್ರೆ ಗಡುವು ಮೀರುವ ಮುನ್ನವೇ ಪ್ರಧಾನಿ ನರೇಂದ್ರ ಮೋದಿ (Narendra Modi), ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಅವರಿಗೆ ಖಡಕ್‌ ಅಂದೇಶ ಕೊಟ್ಟಿದ್ದಾರೆ.

    ಅಹಮದಾಬಾದ್‌ನಲ್ಲಿ (Ahmedabad) ನಡೆದ‌ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಮೋದಿ, ಅಮೆರಿಕದ ಒತ್ತಡದ ಹೊರತಾಗಿಯೂ ನಾವು ಪರಿಹಾರ ಕಂಡುಕೊಳ್ಳುತ್ತೇವೆ. ಒತ್ತಡದಿಂದ ಹೊರಬರುವುದಕ್ಕೆ ನಮ್ಮ ಸರ್ಕಾರ ಬೇರೆ ಮಾರ್ಗವನ್ನು ಕಂಡುಕೊಳ್ಳುತ್ತದೆ ಎಂದಿದ್ದಾರೆ.

    ಎಷ್ಟೇ ಒತ್ತಡ ಬಂದರೂ, ಅದನ್ನ ತಡೆದುಕೊಳ್ಳುವ ಶಕ್ತಿ ಬೆಳೆಸಿಕೊಂಡಿದ್ದೇವೆ. ನಮ್ಮ ದೇಶದ ಸಣ್ಣ ಉದ್ಯಮಿಗಳು, ರೈತರಿಗೆ ನಾನು ಭರವಸೆ ಕೊಡ್ತೇನೆ. ಈ ಮೋದಿಗೆ ನಿಮ್ಮ ಹಿತಾಸಕ್ತಿಗಳೇ ಮುಖ್ಯ. ನನ್ನ ಸರ್ಕಾರವು ಸಣ್ಣ ಉದ್ಯಮಿಗಳು, ರೈತರು ಮತ್ತು ಜಾನುವಾರು ಮಾಲೀಕರಿಗೆ ತೊಂದರೆ ಮಾಡಲು ಎಂದಿಗೂ ಅವಕಾಶ ಕೊಡಲ್ಲ. ಎಷ್ಟೇ ಒತ್ತಡ ಬಂದರೂ ಅದನ್ನು ತಡೆದು ಪರಿಹಾರ ಕಂಡುಕೊಳ್ಳುವ ಹಾಗೂ ನಮ್ಮ ಶಕ್ತಿ ಹೆಚ್ಚಿಸಿಕೊಳ್ಳುತ್ತೇವೆ ಎಂದು ಮೋದಿ ಗುಡುಗಿದ್ದಾರೆ.

    ಮುಂದುವರಿದು.. ʻಆತ್ಮನಿರ್ಭರ ಭಾರತʼ (Atmanirbhar Bharat) ಅಭಿಯಾನವು ಗುಜರಾತ್‌ನಿಂದ ಸಾಕಷ್ಟು ಶಕ್ತಿಯನ್ನ ಪಡೆಯುತ್ತಿದೆ. ಪ್ರತಿದಿನ ಇಲ್ಲಿ ಕರ್ಫ್ಯೂ ವಿಧಿಸಲಾಗುತ್ತಿತ್ತು. ಆದ್ರೆ ಆ ದಿನಗಳನ್ನ ಇಂದಿನ ಯುವ ಪೀಳಿಗೆ ನೋಡಿಲ್ಲ. ಇಲ್ಲಿ ವ್ಯಾಪಾರ ಮಾಡುವುದೂ ಕಷ್ಟಕರವಾಗಿತ್ತು. ಆದರಿಂದು ಅಹಮದಾಬಾದ್ ದೇಶದ ಸುರಕ್ಷಿತ ನಗರಗಳಲ್ಲಿ ಒಂದಾಗಿದೆ. ಇದರ ಹಿಂದೆ 2 ದಶಕಗಳ ಕಠಿಣ ಪರಿಶ್ರಮವಿದೆ ಎಂದು ಬಣ್ಣಿಸಿದರು.

    ಗುಜರಾತ್‌ನಲ್ಲಿ (Gujarat) ಶಾಂತಿ ಮತ್ತು ಭದ್ರತೆಯ ವಾತಾವರಣವು ಉತ್ತಮ ಫಲಿತಾಂಶ ಕೊಡುತ್ತಿರುವುದನ್ನು ನಾವು ನೋಡ್ತಿದ್ದೇವೆ. ನಮ್ಮ ರಾಜ್ಯವು ಉತ್ಪಾದನಾ ಕೇಂದ್ರವಾಗಿ ಮಾರ್ಪಟ್ಟಿರುವುದನ್ನ ನೋಡಿ ಇಡೀ ಗುಜರಾತ್ ಹೆಮ್ಮೆಪಡುತ್ತದೆ ಎಂದು ಶ್ಲಾಘಿಸಿದರು.

  • ಭಾರತದ ರಾಯಭಾರಿಯಾಗಿ ಟ್ರಂಪ್ ಆಪ್ತ ಸಹಾಯಕ ಸೆರ್ಗಿಯೊ ಗೋರ್ ನೇಮಕ

    ಭಾರತದ ರಾಯಭಾರಿಯಾಗಿ ಟ್ರಂಪ್ ಆಪ್ತ ಸಹಾಯಕ ಸೆರ್ಗಿಯೊ ಗೋರ್ ನೇಮಕ

    ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಆಪ್ತ ರಾಜಕೀಯ ಸಹಾಯಕ ಮತ್ತು ಶ್ವೇತಭವನದ ಪ್ರಮುಖ ಅಧಿಕಾರಿಯಾದ ಸೆರ್ಗಿಯೊ ಗೋರ್ (Sergio Gor) ಅವರನ್ನು ಅಮೆರಿಕಾದ ಭಾರತೀಯ ರಾಯಭಾರಿಯಾಗಿ (Ambassador) ಶುಕ್ರವಾರ ನೇಮಕ ಮಾಡಲಾಗಿದೆ.

    ಭಾರತದೊಂದಿಗೆ ಅಮೆರಿಕ ಸಂಬಂಧ ಸೂಕ್ಷ್ಮ ಹಂತದಲ್ಲಿರುವಾಗ ಟ್ರಂಪ್ ತಮ್ಮ ಅತ್ಯಂತ ನಂಬಿಕಸ್ಥ ಅಧಿಕಾರಿಯನ್ನು ಈ ಹುದ್ದೆಗೆ ಆಯ್ಕೆ ಮಾಡಿದ್ದಾರೆ. ಗೋರ್ ಅವರನ್ನು ಭಾರತ ರಾಯಭಾರಿ ಮಾತ್ರವಲ್ಲದೇ ದಕ್ಷಿಣ ಮತ್ತು ಮಧ್ಯ ಏಷ್ಯಾಕ್ಕೆ ವಿಶೇಷ ರಾಯಭಾರಿಯಾಗಿಯೂ ಟ್ರಂಪ್ ನೇಮಿಸಿದ್ದಾರೆ. ಇದನ್ನೂ ಓದಿ: ಬಳ್ಳಾರಿಯ ಸಮೀರ್ ನಿವಾಸಕ್ಕೆ ಪೊಲೀಸ್ ನೋಟಿಸ್‌ – ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ

    ಈ ಕುರಿತು ತಮ್ಮ ಟ್ರೂತ್ ಸೋಶಿಯಲ್ ವೇದಿಕೆಯಲ್ಲಿ ಪೋಸ್ಟ್ ಮಾಡಿರುವ ಡೊನಾಲ್ಡ್ ಟ್ರಂಪ್, ವಿಶ್ವದ ಅತ್ಯಂತ ಜನನಿಬಿಡ ಪ್ರದೇಶದಲ್ಲಿ ನನ್ನ ಕಾರ್ಯಸೂಚಿಯನ್ನು ಜಾರಿಗೊಳಿಸಲು ಮತ್ತು ಅಮೆರಿಕವನ್ನು ಮತ್ತೆ ಶ್ರೇಷ್ಠವಾಗಿಸಲು ನಾನು ಸಂಪೂರ್ಣವಾಗಿ ವಿಶ್ವಾಸ ಇಡಬಹುದಾದ ವ್ಯಕ್ತಿ ಇರುವುದು ಮುಖ್ಯ. ಆದ್ದರಿಂದ ಸೆರ್ಗಿಯೊ ಗೋರ್ ಅವರನ್ನು ಭಾರತದ ರಾಯಭಾರಿಯಾಗಿ ನೇಮಿಸುತ್ತಿದ್ದು, ಗೋರ್ ಅವರನ್ನು ಭಾರತ ಗಣರಾಜ್ಯಕ್ಕೆ ನಮ್ಮ ಮುಂದಿನ ಅಮೆರಿಕದ ರಾಯಭಾರಿಯಾಗಿ ಬಡ್ತಿ ನೀಡುತ್ತಿದ್ದೇನೆ ಎಂದು ಘೋಷಿಸಲು ನನಗೆ ಸಂತೋಷವಾಗುತ್ತಿದೆ. ಅವರು ದಕ್ಷಿಣ ಮತ್ತು ಮಧ್ಯ ಏಷ್ಯಾ ವ್ಯವಹಾರಗಳಿಗೆ ವಿಶೇಷ ರಾಯಭಾರಿಯಾಗಿಯೂ ಸೇವೆ ಸಲ್ಲಿಸಲಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಉತ್ತರಾಖಂಡದ ಚಮೋಲಿಯಲ್ಲಿ ಮೇಘಸ್ಫೋಟ – ಮನೆಗಳು ಸರ್ವನಾಶ, ಹಲವರು ನಾಪತ್ತೆ ಶಂಕೆ

    ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರಕ್ಕೆ ಅವರನ್ನು ನೇಮಕ ಮಾಡಲಾಗಿದೆ. ನನ್ನ ಕಾರ್ಯಸೂಚಿಯನ್ನು ಪೂರೈಸಲು ಮತ್ತು ಅಮೆರಿಕವನ್ನು ಮತ್ತೆ ಶ್ರೇಷ್ಠವಾಗಿಸಲು ನಮಗೆ ಸಹಾಯ ಮಾಡಲು ನಾನು ಸಂಪೂರ್ಣವಾಗಿ ನಂಬಬಹುದಾದ ವ್ಯಕ್ತಿಯನ್ನು ಹೊಂದಿರುವುದು ಮುಖ್ಯ. ಸೆರ್ಗಿಯೊ ಅದ್ಭುತ ರಾಯಭಾರಿಯಾಗುತ್ತಾರೆ. ಅಭಿನಂದನೆಗಳು ಸೆರ್ಗಿಯೊ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮೈಕ್ರೋ ಫೈನಾನ್ಸ್‌ ಕಿರುಕುಳ ಆರೋಪ – ಗೃಹಿಣಿ ಆತ್ಮಹತ್ಯೆ

    ಇನ್ನು ಈ ಕುರಿತು ಸೆರ್ಗಿಯೊ ಗೋರ್ ಪ್ರತಿಕ್ರಿಯಿಸಿ, ಭಾರತಕ್ಕೆ ಮುಂದಿನ ಅಮೆರಿಕಾ ರಾಯಭಾರಿ ಮತ್ತು ದಕ್ಷಿಣ ಮತ್ತು ಮಧ್ಯ ಏಷ್ಯಾ ವ್ಯವಹಾರಗಳ ವಿಶೇಷ ರಾಯಭಾರಿಯಾಗಿ ನಾಮನಿರ್ದೇಶನ ಮಾಡುವಲ್ಲಿ ಟ್ರಂಪ್ ನಂಬಿಕೆ ಮತ್ತು ವಿಶ್ವಾಸಕ್ಕಾಗಿ ನಾನು ಅವರಿಗೆ ಕೃತಜ್ಞನಾಗಿದ್ದೇನೆ ಎಂದು ಹೇಳಿದ್ದಾರೆ. ಅಲ್ಲದೇ ಅಮೆರಿಕವನ್ನು ಪ್ರತಿನಿಧಿಸುವುದು ನನ್ನ ಜೀವನದ ಗೌರವವಾಗಿರುತ್ತದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ, ಮಾಜಿ ಸಂಸದ ಸುರವರಂ ಸುಧಾಕರ ರೆಡ್ಡಿ ನಿಧನ

    ಮೇ 2023 ರಿಂದ ಜನವರಿ 2025ರವರೆಗೆ ರಾಯಭಾರಿಯಾಗಿ ಸೇವೆ ಸಲ್ಲಿಸಿದ ಎರಿಕ್ ಗಾರ್ಸೆಟ್ಟಿಯವರ ಸ್ಥಾನವನ್ನು ಗೋರ್ ತುಂಬಲಿದ್ದಾರೆ. ಅಮೆರಿಕಾ ಹಾಗೂ ಭಾರತದ ನಡುವಿನ ಸುಂಕದ ಉದ್ವಿಗ್ನತೆಯ ನಡುವೆ ಟ್ರಂಪ್ ಸೆರ್ಗಿಯೊ ಗೋರ್ ಅವರನ್ನು ಭಾರತದ ರಾಯಭಾರಿಯಾಗಿ ನೇಮಿಸಿದ್ದಾರೆ. ಇದನ್ನೂ ಓದಿ: ಮಹೇಶ್ ಶೆಟ್ಟಿ ತಿಮರೋಡಿಗೆ ಜೈಲಾ? ಬೇಲಾ? – ಇಂದು ಉಡುಪಿ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ

  • ಭಾರತದ ಪರ ಮಾತನಾಡಿದ್ದ ಅಮೆರಿಕ ಮಾಜಿ NSA ಬೋಲ್ಟನ್‌ ಮನೆಗೆ ಎಫ್‌ಬಿಐ ದಾಳಿ

    ಭಾರತದ ಪರ ಮಾತನಾಡಿದ್ದ ಅಮೆರಿಕ ಮಾಜಿ NSA ಬೋಲ್ಟನ್‌ ಮನೆಗೆ ಎಫ್‌ಬಿಐ ದಾಳಿ

    ವಾಷಿಂಗ್ಟನ್‌: ಅಮೆರಿಕದ (USA) ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ (NSA), ಡೊನಾಲ್ಡ್‌ ಟ್ರಂಪ್‌ ಅವರ ಆಪ್ತ, ಜಾನ್‌ ಬೋಲ್ಟನ್‌ (John Bolton) ಅವರ ಮನೆಗೆ ಎಫ್‌ಬಿಐ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದೆ. ಶುಕ್ರವಾರ ಬೆಳಗ್ಗೆ ಜಾನ್ ಬೋಲ್ಟನ್ ಅವರ ವಾಷಿಂಗ್ಟನ್ ಡಿಸಿಯಲ್ಲಿರುವ ನಿವಾಸದ ಮೇಲೆ ಎಫ್‌ಬಿಐ (FBI) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    ಡೊನಾಲ್ಡ್‌ ಟ್ರಂಪ್‌ (Donald Trump) ಅವರ ಮೊದಲ ಅವಧಿಯಲ್ಲಿ ಭದ್ರತಾ ಸಲಹೆಗಾರಾಗಿದ್ದ ಜಾನ್‌ ಬೋಲ್ಟನ್‌ ಈಗ ಟ್ರಂಪ್‌ ಸುಂಕ ನೀತಿಗಳನ್ನು ಕಟು ಪದಗಳಿಂದ ಟೀಕಿಸುತ್ತಿದ್ದರು.

    ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಅವರು, ಭಾರತ ಮತ್ತು ಅಮೆರಿಕ ಸಂಬಂಧ ಈಗ ಬಹಳಷ್ಟು ಹದಗೆಟ್ಟಿದೆ. ರಷ್ಯಾದಿಂದ ಕಚ್ಚಾ ತೈಲ ಆಮದು ಮಾಡುತ್ತಿರುವ ಭಾರತದ ಮೇಲೆ ದಂಡವಾಗಿ 25% ಸುಂಕ ಹೇರುತ್ತಿರುವ ಟ್ರಂಪ್‌ ಚೀನಾಗೆ ವಿನಾಯಿತಿ ನೀಡಿದ್ದು ಯಾಕೆ ಎಂದು ಪ್ರಶ್ನಿಸಿದ್ದರು. ಇದನ್ನೂ ಓದಿಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್‌ ವಿಕ್ರಮಸಿಂಘೆ ಬಂಧನ

    ಟ್ರಂಪ್ ಪುಟಿನ್ ಅವರನ್ನು ಸಭೆಗೆ ಅಲಾಸ್ಕಾಗೆ ಆಹ್ವಾನಿಸಿದ್ದನ್ನು ಬೋಲ್ಟನ್ ಟೀಕಿಸಿದ್ದರು. ಸಭೆಗೂ ಮೊದಲೇ ಅಮೆರಿಕದ ಮಣ್ಣಿಗೆ ಸ್ವಾಗತಿಸಿದ್ದು ಪುಟಿನ್ ಅವರು ಜಯಗಳಿಸಿದ್ದಾರೆ ಎಂದು ತಿಳಿಸಿದ್ದರು. ಬೋಲ್ಟನ್‌ ಅವರ ಈ ವಿಶ್ಲೇಷಣೆಯನ್ನು ಟ್ರಂಪ್‌ ಇದು ಮೂರ್ಖತನದ ಹೇಳಿಕೆ ಎಂದು ಟೀಕಿಸಿದ್ದರು.

    17 ತಿಂಗಳುಗಳ ಕಾಲ ಡೊನಾಲ್ಡ್ ಟ್ರಂಪ್ ಅವರಿಗೆ ಭದ್ರತಾ ಸಲಹೆಗಾರರಾಗಿದ್ದ ಬೋಲ್ಟನ್‌ ಇರಾನ್, ಅಫ್ಘಾನಿಸ್ತಾನ ಮತ್ತು ಉತ್ತರ ಕೊರಿಯಾ ಸೇರಿದಂತೆ ವಿಷಯಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾಗ ಇಬ್ಬರ ಮಧ್ಯೆ ಭಿನ್ನಾಭಿಪ್ರಾಯ ವ್ಯಕ್ತವಾಗುತ್ತಿತ್ತು ಎಂದು ವರದಿಯಾಗಿದೆ. ಇದನ್ನೂ ಓದಿ: ಪುಟಿನ್‌-ಝೆಲೆನ್ಸ್ಕಿ ಮೊದಲು ನೇರ ಮಾತುಕತೆ ನಡೆಸಬೇಕು – ಬ್ರೋಕರ್‌ ಕೆಲಸದಿಂದ ಹಿಂದೆ ಸರಿಯಲು ಟ್ರಂಪ್‌ ನಿರ್ಧಾರ

    ಬೋಲ್ಟನ್ ಅವರ ಪುಸ್ತಕದ ಬಿಡುಗಡೆಯನ್ನು ತಡೆಯಲು ಟ್ರಂಪ್ ಸರ್ಕಾರ ಬಹಳ ಪ್ರಯತ್ನಿಸಿತ್ತು. ಈ ವರ್ಷದ ಆರಂಭದಲ್ಲಿ ಅಧ್ಯಕ್ಷ ಟ್ರಂಪ್ ಅವರು ಅಧಿಕಾರಕ್ಕೆ ಮರಳಿದಾಗ 40 ಕ್ಕೂ ಹೆಚ್ಚು ಮಾಜಿ ಗುಪ್ತಚರ ಅಧಿಕಾರಿಗಳ ಭದ್ರತಾ ಅನುಮತಿಗಳನ್ನು ರದ್ದುಗೊಳಿಸಿದ್ದರು. ಈ ಪಟ್ಟಿಯಲ್ಲಿ ಬೋಲ್ಟನ್ ಅವರ ಹೆಸರೂ ಸೇರಿತ್ತು. ಭದ್ರತಾ ಅನುಮತಿಗಳನ್ನು  ರದ್ದುಗೊಳಿಸಿದ ಮೂವರು ಮಾಜಿ ಟ್ರಂಪ್ ಸಹಾಯಕರಲ್ಲಿ ಅವರು ಒಬ್ಬರಾಗಿದ್ದರು.

  • ಪುಟಿನ್‌-ಝೆಲೆನ್ಸ್ಕಿ ಮೊದಲು ನೇರ ಮಾತುಕತೆ ನಡೆಸಬೇಕು – ಬ್ರೋಕರ್‌ ಕೆಲಸದಿಂದ ಹಿಂದೆ ಸರಿಯಲು ಟ್ರಂಪ್‌ ನಿರ್ಧಾರ

    ಪುಟಿನ್‌-ಝೆಲೆನ್ಸ್ಕಿ ಮೊದಲು ನೇರ ಮಾತುಕತೆ ನಡೆಸಬೇಕು – ಬ್ರೋಕರ್‌ ಕೆಲಸದಿಂದ ಹಿಂದೆ ಸರಿಯಲು ಟ್ರಂಪ್‌ ನಿರ್ಧಾರ

    ವಾಷಿಂಗ್ಟನ್‌: ರಷ್ಯಾ-ಉಕ್ರೇನ್‌ ಯುದ್ಧ (Russia Ukraine War) ಕೊನೆಗೊಳಿಸಲು ಶತಪ್ರಯತ್ನ ನಡೆಸುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಈಗ‌ ಇದ್ದಕ್ಕಿದ್ದಂತೆ ಯೂಟರ್ನ್‌ ಹೊಡೆದಿದ್ದಾರೆ. ಯುದ್ಧ ಕೊನೆಗೊಳಿಸುವ ಪ್ರಯತ್ನದಲ್ಲಿ ನೇರ ಹಸ್ತಕ್ಷೇಪದಿಂದ ಹಿಂದೆ ಸರಿಯಲು ಟ್ರಂಪ್‌ ನಿರ್ಧರಿಸಿದ್ದಾರೆ. ಅಮೆರಿಕದ ಮಧ್ಯಸ್ಥಿಕೆ ಇಲ್ಲದೇ ಪುಟಿನ್‌ – ಝಲೆನ್ಸ್ಕಿ ಮೊದಲು ಮುಖಾಮುಖಿ ಭೇಟಿಯಾಗಬೇಕು, ನೇರ ಮಾತುಕತೆ ನಡೆಸಬೇಕು ಎಂದು ಹೇಳಿದ್ದಾರೆ.

    ಶ್ವೇತಭವನದ (White House) ಆಡಳಿತಾಧಿಕಾರಿಗಳು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಕುರಿತು ಮಾತನಾಡಿದ್ದಾರೆ. ಮುಂದಿನ ಹಂತದ ಶಾಂತಿ ಮಾತುಕತೆಗಳಲ್ಲಿ ಟ್ರಂಪ್‌ ನೇರವಾಗಿ ಭಾಗಿಯಾಗದಿರಲು ನಿರ್ಧರಿಸಿದ್ದಾರೆ. ಬದಲಾಗಿ ರಷ್ಯಾ ಅಧ್ಯಕ್ಷ ಪುಟಿನ್‌, ಉಕ್ರೇನ್‌ ಅಧ್ಯಕ್ಷ ಝಲೆನ್ಸ್ಕಿ (Volodymyr Zelenskyy) ಮೊದಲು ಪರಸ್ಪರ ಭೇಟಿಯಾಗಬೇಕೆಂದು ಅವರು ಬಯಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಷ್ಯಾ ಮೇಲೆ ಒತ್ತಡ ಹೇರಲು ಭಾರತದ ಮೇಲೆ ಸುಂಕ – ವೈಟ್‌ ಹೌಸ್‌

    ಟ್ರಂಪ್‌ ದೃಷ್ಟಿಕೋನದಲ್ಲಿ ಯುದ್ಧ ಕೊನೆಗೊಳಿಸುವ ಮುಂದಿನ ಹೆಜ್ಜೆ ಪುಟಿನ್‌, ಝಲೆನ್ಸ್ಕಿ ನಡುವಿನ ದ್ವಿಪಕ್ಷೀಯ ಸಭೆ. ಈ ಸಭೆ ನಿಜವಾಗ್ಲೂ ನಡೆಯುತ್ತದೆಯೋ, ಇಲ್ಲವೋ? ಅನ್ನೋದು ಖಚಿತವಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದನ್ನೂ ಓದಿ: ರಷ್ಯಾ-ಉಕ್ರೇನ್‌ ಯುದ್ಧ ನಿಲ್ಲಿಸಲು ಮುಂದಾದ ಟ್ರಂಪ್‌ಗೆ ಯುರೋಪಿಯನ್ ಒಕ್ಕೂಟ ಬೆಂಬಲ – ನಾಳೆಯ ಸಭೆ ಮೇಲೆ ನಿಗಾ

    ಟ್ರಂಪ್‌ ಉತ್ತರವೇನು?
    ರೇಡಿಯೋವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಖುದ್ದು ಮಾತನಾಡಿದ ಟ್ರಂಪ್‌, ಇಬ್ಬರೂ ಮಾತುಕತೆಗೆ ತಯಾರಿ ನಡೆಸುತ್ತಿದ್ದಾರೆ. ದ್ವಿಪಕ್ಷೀಯ ಸಭೆಯಲ್ಲಿ ಏನಾಗುತ್ತದೆ ಎಂಬುದನ್ನು ನಾನು ಕಾದು ನೋಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಚೀನಾವನ್ನ ಎದುರಿಸಬೇಕಾದ್ರೆ ಭಾರತ-ಅಮೆರಿಕ ಸಂಬಂಧವನ್ನ ಹಳಿಗೆ ತನ್ನಿ – ಟ್ರಂಪ್‌ಗೆ ನಿಕ್ಕಿ ಹ್ಯಾಲಿ ಮತ್ತೆ ಎಚ್ಚರಿಕೆ

    ಶ್ವೇತಭವನದಲ್ಲಿ ಏನಾಗಿತ್ತು?
    ಇತ್ತೀಚೆಗಷ್ಟೇ ಶ್ವೇತಭವನದಲ್ಲಿ ಉಕ್ರೇನ್‌ ಮತ್ತು ಯುರೋಪಿಯನ್‌ ಒಕ್ಕೂಟದ ನಾಯಕರ ಜೊತೆ ಟ್ರಂಪ್‌ ಸಭೆ ನಡೆಸಿದ್ದರು. ಸಭೆ ಮುಗಿದ ಬಳಿಕ ಟ್ರಂಪ್‌ ಈ ಎಲ್ಲಾ ನಾಯಕರನ್ನು ತನ್ನ ಓವಲ್ ಕಚೇರಿಯ ಕ್ಯಾಬಿನ್‌ಗೆ ಕರೆಸಿ ರಷ್ಯಾದ ಅಧ್ಯಕ್ಷ ಪುಟಿನ್‌ಗೆ ನೇರವಾಗಿ ಕರೆ ಮಾಡಿದ್ದರು. ರಷ್ಯಾ ಮತ್ತು ಉಕ್ರೇನಿಯನ್ ನಿಯೋಗಗಳ ನಡುವೆ ನೇರ ಮಾತುಕತೆಗಳನ್ನು ಮುಂದುವರಿಸಲು ಪುಟಿನ್‌ಗೆ ಕರೆ ನೀಡಿದ್ದರು. ಇಬ್ಬರು ನಾಯಕರ ಮಧ್ಯೆ ಒಟ್ಟು 40 ನಿಮಿಷಗಳ ಮಾತುಕತೆ ನಡೆದಿತ್ತು. ಈ ವೇಳೆ ಇತ್ತೀಚಿನ ಅಲಾಸ್ಕಾ ಭೇಟಿಯ ಸಮಯದಲ್ಲಿ ಟ್ರಂಪ್ ನೀಡಿದ ಆತಿಥ್ಯ ಮತ್ತು ಅಲಾಸ್ಕಾದಲ್ಲಿ ನಡೆದ ಶೃಂಗಸಭೆಯಲ್ಲಿ ಸಾಧಿಸಿದ ಪ್ರಗತಿಗೆ ಪುಟಿನ್‌ ಟ್ರಂಪ್‌ಗೆ ಧನ್ಯವಾದ ಹೇಳಿದರು. ಇದನ್ನೂ ಓದಿ: ಝೆಲೆನ್‌ಸ್ಕಿ, EU ನಾಯಕರನ್ನು ಕಚೇರಿಗೆ ಕರೆಸಿ ಪುಟಿನ್‌ಗೆ ಕಾಲ್‌ – ಬ್ರೋಕರ್‌ ಕೆಲ್ಸ ಮಾಡಿ ಯುದ್ಧ ಕೊನೆಯಾಗಲಿದೆ ಎಂದ ಟ್ರಂಪ್‌

  • ಚೀನಾವನ್ನ ಎದುರಿಸಬೇಕಾದ್ರೆ ಭಾರತ-ಅಮೆರಿಕ ಸಂಬಂಧವನ್ನ ಹಳಿಗೆ ತನ್ನಿ – ಟ್ರಂಪ್‌ಗೆ ನಿಕ್ಕಿ ಹ್ಯಾಲಿ ಮತ್ತೆ ಎಚ್ಚರಿಕೆ

    ಚೀನಾವನ್ನ ಎದುರಿಸಬೇಕಾದ್ರೆ ಭಾರತ-ಅಮೆರಿಕ ಸಂಬಂಧವನ್ನ ಹಳಿಗೆ ತನ್ನಿ – ಟ್ರಂಪ್‌ಗೆ ನಿಕ್ಕಿ ಹ್ಯಾಲಿ ಮತ್ತೆ ಎಚ್ಚರಿಕೆ

    ವಾಷಿಂಗ್ಟನ್: ಜಾಗತೀಕ ಮಾರುಕಟ್ಟೆಯ ಮೇಲೆ ನಿಯಂತ್ರಣ ಸಾಧಿಸಬೇಕಾದ್ರೆ, ಚೀನಾವನ್ನ ಎದುರಿಸಬೇಕಾದ್ರೆ ಭಾರತ ಮತ್ತು ಅಮೆರಿಕ (India – USA) ಸಂಬಂಧವನ್ನ ಹಳಿಗೆ ತನ್ನಿ ಎಂದು ವಿಶ್ವಸಂಸ್ಥೆಯ ಅಮೆರಿಕದ ಮಾಜಿ ರಾಯಭಾರಿ ನಿಕ್ಕಿ ಹ್ಯಾಲಿ (Nikki Haley) ಟ್ರಂಪ್‌ಗೆ ಮತ್ತೆ ಎಚ್ಚರಿಕೆ ನೀಡಿದ್ದಾರೆ.

    ರಷ್ಯಾದ ತೈಲ ಖರೀದಿಸುತ್ತಿರುವ (Russian Oil Trade) ಭಾರತದ ಮೇಲೆ 50% ಸುಂಕ ವಿಧಿಸಿರುವ ಸಂಬಂಧ ʻನ್ಯೂಸ್ ವೀಕ್’ ನಲ್ಲಿ ಬರೆದ ತಮ್ಮ ಲೇಖನದಲ್ಲಿ ಈ ನಿಲುವನ್ನು ಪ್ರತಿಪಾದಿಸಿದ್ದಾರೆ. ಭಾರತವನ್ನು ಅಮೂಲ್ಯವಾದ ಮುಕ್ತ ಮತ್ತು ಪ್ರಜಾಪ್ರಭುತ್ವ ಪಾಲುದಾರನಂತೆ ಪರಿಗಣಿಸಬೇಕೇ ಹೊರತು ಚೀನಾದಂತೆ ಎದುರಾಳಿಯನ್ನಾಗಿ ಅಲ್ಲ ಎಂದು ಒತ್ತಿ ಹೇಳಿದ್ದಾರಲ್ಲದೇ ಭಾರತದ ಸಂಬಂಧ ಕಡಿತಗೊಳಿಸುವುದು ಕಡಿತಗೊಳಿಸುವುದು ಕಾರ್ಯತಂತ್ರದ ವಿಪತ್ತು ಎಂದು ಬಣ್ಣಿಸಿದ್ದಾರೆ.

    ಚೀನಾ, ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರೆಸಿದ್ದರೂ ಈವರೆಗೆ ಯಾವುದೇ ಪ್ರಮುಖ ನಿರ್ಬಂಧಗಳನ್ನ ಎದುರಿಸುತ್ತಿಲ್ಲ. ಹೀಗಿರುವಾಗ ಭಾರತವನ್ನ ಶಿಕ್ಷಿಸುವುದು ಅಮೆರಿಕದ ಏಷ್ಯಾ ಕಾರ್ಯತಂತ್ರವನ್ನ ದುರ್ಬಲಗೊಳಿಸಬಹುದು. ಹಾಗಾಗಿ ಭಾರತ ಸಂಬಂಧವನ್ನು ಉಳಿಸಿಕೊಂಡರೆ, ಅಮೆರಿಕದ ಪೂರೈಕೆ ಸರಪಳಿಯನ್ನು ಚೀನಾದಿಂದ ಬೇರ್ಪಡಿಸಲು ಸಹಾಯವಾಗುತ್ತೆ. ಜವಳಿ, ಅಗ್ಗದ ಮೊಬೈಲ್ ಫೋನ್‌ಗಳು ಮತ್ತು ಸೌರ ಫಲಕಗಳ ದೊಡ್ಡ ಪ್ರಮಾಣದ ಉತ್ಪಾದನೆಯಲ್ಲಿ ಪ್ರಮುಖ ಪಾಲುದಾರನಾಗಬಹುದು ಎಂದು ಬರೆದಿದ್ದಾರೆ.

    ರಷ್ಯಾದ ತೈಲ ಖರೀದಿ ಮೂಲಕ ಭಾರತ ಉಕ್ರೇನ್‌ ವಿರುದ್ಧದ ಯುದ್ಧಕ್ಕೆ ಫಂಡಿಂಗ್‌ ಮಾಡುತ್ತಿದೆ ಅನ್ನೋದು ಟ್ರಂಪ್‌ ನಂಬಿಕೆಯಾಗಿದೆ. ಭಾರತ-ಪಾಕಿಸ್ತಾನ ಕದನ ವಿರಾಮ ಮಾತುಕತೆಯಲ್ಲಿ ಅಮೆರಿಕದ ಪಾತ್ರವು ಪ್ರಶ್ನಾರ್ಹವಾದಾಗ ಈ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಅಮೆರಿಕ ಮುಂದೆ ಜಾಗತೀಕ ಮಾರುಕಟ್ಟೆಯ ಮೇಲೆ ನಿಯಂತ್ರಣ ಸಾಧಿಸಲು ಬಯಸಿದ್ರೆ, ಟ್ರಂಪ್‌ (Donald Trump) ವಿದೇಶಾಂಗ ನೀತಿಯ ಗುರಿಗಳನ್ನು ಸಾಧಿಸಬೇಕಾದ್ರೆ, ಚೀನಾವನ್ನು ಸೋಲಿಸಬೇಕಾದ್ರೆ ಮತ್ತು ತನ್ನ ಬಲದಿಂದ ಶಾಂತಿ ಸಾಧಿಸಬೇಕಾದ್ರೆ ಭಾರತ ಮತ್ತು ಅಮೆರಿಕ ನಡುವಿನ ಸಂಬಂಧವನ್ನು ಮೊದಲಿನಂತೆ ಉಳಿಸಿಕೊಳ್ಳುವುದು ನಿರ್ಣಾಯಕವಾಗಿದೆ ಎಂದು ತಿಳಿಸಿದ್ದಾರೆ.

    ಭಾರತಕ್ಕಿಂತ ಪಾಕ್‌ಗೆ ಕಡಿಮೆ ಸುಂಕ
    ಈಗಾಗಲೇ ಆಗಸ್ಟ್‌ 7ರಿಂದ ಅನ್ವಯವಾಗುವಂತೆ `ಭಾರತದಿಂದ ಆಮದು ಮಾಡಿಕೊಳ್ಳುವ ಎಲ್ಲ ಸರಕುಗಳಿಗೂ ಶೇ.25ರಷ್ಟು ಸುಂಕ ವಿಧಿಸುವ ಆದೇಶಕ್ಕೆ ಟ್ರಂಪ್‌ ಸಹಿ ಹಾಕಿದ್ದಾರೆ. ಆದ್ರೆ ಪಾಕಿಸ್ತಾನಕ್ಕೆ 19% ಸುಂಕ ವಿಧಿಸಿದ್ದಾರೆ. ಬೃಹತ್‌ ಪ್ರಮಾಣದಲ್ಲಿ ರಷ್ಯಾದ ಸೇನಾ ಉಪಕರಣಗಳು, ಕಚ್ಚಾ ತೈಲ ಖರೀದಿಸುತ್ತಿರುವ ಭಾರತದ ಮೇಲೆ ದಂಡ ವಿಧಿಸಲಾಗುವುದು ಎಂದು ಹೇಳಿದ್ದರು. ಆ ಬಳಿಕ ಭಾರತದ ಮೇಲೆ 50% ಸುಂಕ ವಿಧಿಸಿದ್ದು, ಈ ನೀತಿಯು ಇದೇ ಆಗಸ್ಟ್‌ 27ರಿಂದ ಅನ್ವಯವಾಗಲಿದೆ.

  • ರಷ್ಯಾ ಮೇಲೆ ಒತ್ತಡ ಹೇರಲು ಭಾರತದ ಮೇಲೆ ಸುಂಕ – ವೈಟ್‌ ಹೌಸ್‌

    ರಷ್ಯಾ ಮೇಲೆ ಒತ್ತಡ ಹೇರಲು ಭಾರತದ ಮೇಲೆ ಸುಂಕ – ವೈಟ್‌ ಹೌಸ್‌

    – ಭಾರತ-ಪಾಕ್‌ ಯುದ್ಧ ನಿಲ್ಲಿಸಿದ್ದು ಟ್ರಂಪ್‌ – ಶ್ವೇತಭವನದಲ್ಲೂ ಅದೇ ರಾಗ

    ವಾಷಿಂಗ್ಟನ್: ಉಕ್ರೇನ್‌ ವಿರುದ್ಧದ ಯುದ್ಧ (Russia Ukraine War) ಮುಂದುವರಿಸದಂತೆ ರಷ್ಯಾವನ್ನು ತಡೆಯಲು ಟ್ರಂಪ್‌ ಭಾರತದ ಮೇಲೆ ಸುಂಕ ವಿಧಿಸಿದ್ದಾರೆ ಎಂದು ಅಮೆರಿಕದ cಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ (Karoline Leavitt) ಹೇಳಿದ್ದಾರೆ.

    ಶ್ವೇತಭವನದಲ್ಲಿ (US White House) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಾರತದ ಮೇಲೆ 50% ಆಮದು ಸುಂಕ ವಿಧಿಸುವುದರ ಹಿಂದಿನ ಉದ್ದೇಶ ರಷ್ಯಾದ ಮೇಲೆ ಒತ್ತಡ ತರುವುದಾಗಿತ್ತು. ಏಕೆಂದ್ರೆ ರಷ್ಯಾ-ಉಕ್ರೇನ್‌ ಯುದ್ಧ ಕೊನೆಗಾಣಿಸಲು ಸಾರ್ವಜನಿಕರಿಂದ ಭಾರೀ ಒತ್ತಡವಿತ್ತು. ಹಾಗಾಗಿಯೇ ಟ್ರಂಪ್‌ (Donald Trump) ಈ ಕ್ರಮ ತೆಗೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

    ಯಾವುದೇ ಸಭೆ ನಡೆಯುವುದಕ್ಕೂ ಮುನ್ನ ಇನ್ನೊಂದು ತಿಂಗಳು ಕಾಯಬೇಕು ಎಂಬ ಇತರರ ಸಲಹೆಗಳನ್ನು ಅಧ್ಯಕ್ಷರು ತಿರಸ್ಕರಿಸಿದ್ದಾರೆ. ಆದಷ್ಟು ಬೇಗ ಈ ಯುದ್ಧವನ್ನು ಕೊನೆಗಾಣಿಸಲು ಟ್ರಂಪ್‌ ಬಯಸಿದ್ದಾರೆ ಎಂದು ಲೀವಿಟ್‌ ತಿಳಿಸಿದ್ದಾರೆ. ಇದನ್ನೂ ಓದಿ: ಝೆಲೆನ್‌ಸ್ಕಿ, EU ನಾಯಕರನ್ನು ಕಚೇರಿಗೆ ಕರೆಸಿ ಪುಟಿನ್‌ಗೆ ಕಾಲ್‌ – ಬ್ರೋಕರ್‌ ಕೆಲ್ಸ ಮಾಡಿ ಯುದ್ಧ ಕೊನೆಯಾಗಲಿದೆ ಎಂದ ಟ್ರಂಪ್‌

    ಇದಕ್ಕೂ ಮುನ್ನ ಟ್ರಂಪ್ ಶ್ವೇತಭವನದಲ್ಲಿ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನ ಭೇಟಿಯಾದರು, ಮಾಜಿ ಅಧ್ಯಕ್ಷರು ಉಕ್ರೇನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸಲು ಮಾತುಕತೆ ನಡೆಸಲು ಪುಟಿನ್ ಅವರೊಂದಿಗೆ ತ್ರಿಪಕ್ಷೀಯ ಸಭೆ ನಡೆಸುವುದಾಗಿ ತಿಳಿಸಿದ್ದರು.

    ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ಟ್ರಂಪ್‌
    ಭಾರತ ಹಾಗೂ ಪಾಕಿಸ್ತಾನ ನಡುವಣ ಯುದ್ಧವನ್ನು ಕೊನೆಗೊಳಿಸಲು ಟ್ರಂಪ್ ಮಧ್ಯಸ್ಥಿಕೆ ವಹಿಸಿದ್ದಾರೆ ಎಂದೂ ಕ್ಯಾರೋಲಿನ್ ಮಗದೊಮ್ಮೆ ಪುನರುಚ್ಚರಿಸಿದ್ದಾರೆ. ಇದನ್ನೂ ಓದಿ: ಭಾರತ-ಪಾಕ್‌ ಪರಿಸ್ಥಿತಿಯನ್ನ ಅಮೆರಿಕ ಸೂಕ್ಷ್ಮವಾಗಿ ಗಮನಿಸ್ತಿದೆ – ಕದನ ವಿರಾಮ ಕುಸಿಯಬಹುದು: ಮಾರ್ಕೊ ರೂಬಿಯೊ

    ವ್ಯಾಪಾರ ವಿಷಯವನ್ನು ಮುಂದಿಟ್ಟುಕೊಂಡು ಭಾರತ-ಪಾಕ್ ಮಿಲಿಟರಿ ಸಂಘರ್ಷವನ್ನು ಟ್ರಂಪ್ ಕೊನೆಗೊಳಿಸಿದ್ದಾರೆ. ಸಂಘರ್ಷ ಅಂತ್ಯಗೊಳಿಸಿರುವುದನ್ನು ನಾವು ನೋಡಿದ್ದೇವೆ. ಇಲ್ಲದಿದ್ದರೇ ನ್ಯೂಕ್ಲಿಯರ್‌ ಯುದ್ಧಕ್ಕೆ ಕಾರಣವಾಗುತ್ತಿತ್ತು ಎಂದು ಹೇಳಿದ್ದಾರೆ. ಇದನ್ನೂ ಓದಿ: ರಷ್ಯಾ-ಉಕ್ರೇನ್‌ ಯುದ್ಧ ನಿಲ್ಲಿಸಲು ಮುಂದಾದ ಟ್ರಂಪ್‌ಗೆ ಯುರೋಪಿಯನ್ ಒಕ್ಕೂಟ ಬೆಂಬಲ – ನಾಳೆಯ ಸಭೆ ಮೇಲೆ ನಿಗಾ

  • ಝೆಲೆನ್‌ಸ್ಕಿ, EU ನಾಯಕರನ್ನು ಕಚೇರಿಗೆ ಕರೆಸಿ ಪುಟಿನ್‌ಗೆ ಕಾಲ್‌ – ಬ್ರೋಕರ್‌ ಕೆಲ್ಸ ಮಾಡಿ ಯುದ್ಧ ಕೊನೆಯಾಗಲಿದೆ ಎಂದ ಟ್ರಂಪ್‌

    ಝೆಲೆನ್‌ಸ್ಕಿ, EU ನಾಯಕರನ್ನು ಕಚೇರಿಗೆ ಕರೆಸಿ ಪುಟಿನ್‌ಗೆ ಕಾಲ್‌ – ಬ್ರೋಕರ್‌ ಕೆಲ್ಸ ಮಾಡಿ ಯುದ್ಧ ಕೊನೆಯಾಗಲಿದೆ ಎಂದ ಟ್ರಂಪ್‌

    ವಾಷಿಂಗ್ಟನ್‌: ಉಕ್ರೇನ್‌- ರಷ್ಯಾ ಯುದ್ಧ ಕೊನೆಗೊಳಿಸಲು ಪ್ರಯತ್ನ ನಡೆಸುತ್ತಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಈಗ ವ್ಲಾದಿಮಿರ್‌ ಪುಟಿನ್‌ ಮತ್ತು ಝೆಲೆನ್‌ಸ್ಕಿ ಮಾತುಕತೆಗೆ ಮಧ್ಯವರ್ತಿಯಾಗಿ ಕೆಲಸ ಮಾಡಿದ್ದಾರೆ.

    ಅಲಾಸ್ಕಾದಲ್ಲಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ (Vladimir Putin) ಅವರನ್ನು ಭೇಟಿಯಾಗಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಈಗ ಶ್ವೇತಭವನದಲ್ಲಿ ಉಕ್ರೇನ್‌ ಅಧ್ಯಕ್ಷ ಝೆಲೆನ್‌ಸ್ಕಿ (Zelensky) ಮತ್ತು ಯೋಪಿಯನ್‌ ನಾಯಕರ (European Leaders) ಜೊತೆ ಸಭೆ ನಡೆಸಿದರು.

    ಝೆಲೆನ್‌ಸ್ಕಿ ಭೇಟಿ ವೇಳೆ ಮಾತನಾಡಿದ ಟ್ರಂಪ್, ಯುದ್ಧ ಕೊನೆಗೊಳ್ಳಲಿದೆ. ಅದು ಯಾವಾಗ ಕೊನೆಗೊಳ್ಳುತ್ತದೆ ಎಂದು ನಾನು ನಿಮಗೆ ಹೇಳಲಾರೆ. ಆದರೆ ಈ ಯುದ್ಧ ನಿಲ್ಲಲಿದೆ. ಪುಟಿನ್ ಯುದ್ಧ ನಿಲ್ಲಿಸಲು ಬಯಸುತ್ತಿದ್ದು ಝೆಲೆನ್ಸ್ಕಿ ಕೂಡ ಒಪ್ಪಿಕೊಂಡರೆ ಶೀಘ್ರದಲ್ಲೇ ಯುದ್ಧ ನಿಲ್ಲುತ್ತದೆ ಅಂತ ಹೇಳಿದ್ದಾರೆ. ಇದನ್ನೂ ಓದಿ: ರಷ್ಯಾ ಮಾರಾಟ ಮಾಡಿದ್ದ ಅಲಾಸ್ಕಾ ಈಗ ಅಮೆರಿಕಾದ ಚಿನ್ನದ ಮೊಟ್ಟೆ!

    ಇಡೀ ಜಗತ್ತು ಈ ಯುದ್ಧದಿಂದ ಬೇಸತ್ತಿದೆ. ನಾವು ಅದನ್ನು ಕೊನೆಗೊಳಿಸುತ್ತೇವೆ. ನಾನು 6 ಯುದ್ಧಗಳನ್ನು ಕೊನೆಗೊಳಿಸಿದ್ದೇನೆ. ಅದರಲ್ಲಿ ಭಾರತ -ಪಾಕ್ ಯುದ್ಧವೂ ಒಂದು ಎಂದು ಟ್ರಂಪ್ ಹೇಳಿದರು.

    ಟ್ರಂಪ್ ಮತ್ತು ಝೆಲೆನ್ಸ್ಕಿ ಅವರೊಂದಿಗೆ ಶ್ವೇತಭವನದಲ್ಲಿ ನಡೆದ ಸಭೆಯಲ್ಲಿ ಜರ್ಮನ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್, ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್, ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್, ಇಟಾಲಿಯನ್ ಪ್ರಧಾನಿ ಜಾರ್ಜಿಯಾ ಮೆಲೋನಿ, ಫಿನ್ಲೆಂಡ್ ಅಧ್ಯಕ್ಷ ಅಲೆಕ್ಸಾಂಡರ್ ಸ್ಟಬ್, ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಮತ್ತು ನ್ಯಾಟೋ ಪ್ರಧಾನ ಕಾರ್ಯದರ್ಶಿ ಮಾರ್ಕ್ ರುಟ್ಟೆ ಉಪಸ್ಥಿತರಿದ್ದರು.

    ಡೊನಾಲ್ಡ್ ಟ್ರಂಪ್ ಮತ್ತು ಯುರೋಪಿಯನ್ ನಾಯಕರ ನಡುವೆ ನಡೆದ ಮಹತ್ವದ ಮಾತುಕತೆಗಳ ನಂತರ ಪುಟಿನ್ ಮತ್ತು ಝೆಲೆನ್ಸ್ಕಿ ಶಾಂತಿ ಮಾತುಕತೆಗೆ ಒಪ್ಪಿದ್ದಾರೆ ಎಂದು ವರದಿಯಾಗಿದೆ.

    ಶ್ವೇತಭವನದಲ್ಲಿ ಏನಾಯ್ತು?
    ಆರಂಭದಲ್ಲಿ ಉಕ್ರೇನ್‌ ಮತ್ತು ಯುರೋಪಿಯನ್‌ ಒಕ್ಕೂಟದ ನಾಯಕರ ಜೊತೆ ಟ್ರಂಪ್‌ ಸಭೆ ನಡೆಸಿದರು. ಬಳಿಕ ಟ್ರಂಪ್‌ ಈ ಎಲ್ಲಾ ನಾಯಕರನ್ನು ತನ್ನ ಓವಲ್ ಕಚೇರಿಯ ಕ್ಯಾಬಿನ್‌ಗೆ ಕರೆಸಿ ರಷ್ಯಾದ ಅಧ್ಯಕ್ಷ ಪುಟಿನ್‌ಗೆ ನೇರವಾಗಿ ಕರೆ ಮಾಡಿದರು.

    ಯುರೋಪಿಯನ್ ನಾಯಕರು ಮತ್ತು ಝೆಲೆನ್ಸ್ಕಿ ಅವರೊಂದಿಗಿನ ಮಾತುಕತೆಗಳ ಬಗ್ಗೆ ಟ್ರಂಪ್ ವಿವರಿಸಿದರು. ರಷ್ಯಾ ಮತ್ತು ಉಕ್ರೇನಿಯನ್ ನಿಯೋಗಗಳ ನಡುವೆ ನೇರ ಮಾತುಕತೆಗಳನ್ನು ಮುಂದುವರಿಸಲು ಪುಟಿನ್‌ಗೆ ಕರೆ ನೀಡಿದರು. ಇಬ್ಬರು ನಾಯಕರ ಮಧ್ಯೆ ಒಟ್ಟು 40 ನಿಮಿಷಗಳ ಮಾತುಕತೆ ನಡೆಯಿತು. ಈ ವೇಳೆ ಇತ್ತೀಚಿನ ಅಲಾಸ್ಕಾ ಭೇಟಿಯ ಸಮಯದಲ್ಲಿ ಟ್ರಂಪ್ ನೀಡಿದ ಆತಿಥ್ಯ ಮತ್ತು ಅಲಾಸ್ಕಾದಲ್ಲಿ ನಡೆದ ಶೃಂಗಸಭೆಯಲ್ಲಿ ಸಾಧಿಸಿದ ಪ್ರಗತಿಗೆ ಪುಟಿನ್‌ ಟ್ರಂಪ್‌ಗೆ ಧನ್ಯವಾದ ಹೇಳಿದರು.

  • ಟ್ರಂಪ್ ಜೊತೆ ಅಲಾಸ್ಕ ಸಭೆ ಬಳಿಕ ಮೋದಿಗೆ ಫೋನ್ ಮಾಡಿದ ಪುಟಿನ್

    ಟ್ರಂಪ್ ಜೊತೆ ಅಲಾಸ್ಕ ಸಭೆ ಬಳಿಕ ಮೋದಿಗೆ ಫೋನ್ ಮಾಡಿದ ಪುಟಿನ್

    – ಯುದ್ಧದ ವಿಚಾರದಲ್ಲಿ ಶಾಂತಿಯುತ ನಿರ್ಣಯಕ್ಕೆ ಭಾರತದ ಸಲಹೆ

    ನವದೆಹಲಿ: ಉಕ್ರೇನ್‌ ಮೇಲಿನ ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸುವ ಬಗ್ಗೆ ಚರ್ಚಿಸಲು ಅಲಾಸ್ಕದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭೇಟಿಯಾದ ಬಳಿಕ, ಪ್ರಧಾನಿ ಮೋದಿಗೆ (PM Modi) ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಫೋನ್‌ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ.

    2022 ರ ಫೆಬ್ರವರಿಯಿಂದ ನಡೆಯುತ್ತಿರುವ ಯುದ್ಧದ ಬಗ್ಗೆ ಭಾರತದ ನಿಲುವನ್ನು ಪ್ರಧಾನಿ ಒತ್ತಿ ಹೇಳಿದರು. ಸಂಘರ್ಷದ ಶಾಂತಿಯುತ ಪರಿಹಾರಕ್ಕಾಗಿ ಅವರು ಕರೆ ನೀಡಿದ್ದಾರೆ ಎಂದು ಅವರ ಕಚೇರಿ ತಿಳಿಸಿದೆ. ಈ ನಿಟ್ಟಿನಲ್ಲಿ ಭಾರತ ತನ್ನ ಸಂಪೂರ್ಣ ಬೆಂಬಲವನ್ನು ನೀಡುತ್ತದೆ ಎಂದು ಪುಟಿನ್‌ಗೆ ಮೋದಿ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ-ಪಾಕ್‌ ಪರಿಸ್ಥಿತಿಯನ್ನ ಅಮೆರಿಕ ಸೂಕ್ಷ್ಮವಾಗಿ ಗಮನಿಸ್ತಿದೆ – ಕದನ ವಿರಾಮ ಕುಸಿಯಬಹುದು: ಮಾರ್ಕೊ ರೂಬಿಯೊ

    ಮೋದಿ ಮತ್ತು ಪುಟಿನ್ (Vladimir Putin) ಅವರು ದ್ವಿಪಕ್ಷೀಯ ಸಹಕಾರದ ವಿಷಯಗಳ ಬಗ್ಗೆಯೂ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಬ್ಬರೂ ನಾಯಕರು ನಿಕಟ ಸಂಪರ್ಕದಲ್ಲಿರಲು ಒಪ್ಪಿಕೊಂಡಿದ್ದಾರೆ.

    ಮಾತುಕತೆ ಬಳಿಕ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ನನಗೆ ದೂರವಾಣಿ ಕರೆ ಮಾಡಿದ್ದಕ್ಕಾಗಿ ಮತ್ತು ಅಲಾಸ್ಕದಲ್ಲಿ ಅಧ್ಯಕ್ಷ ಟ್ರಂಪ್ ಅವರೊಂದಿಗಿನ ಇತ್ತೀಚಿನ ಭೇಟಿಯ ಕುರಿತು ಒಳನೋಟಗಳನ್ನು ಹಂಚಿಕೊಂಡಿದ್ದಕ್ಕಾಗಿ ನನ್ನ ಸ್ನೇಹಿತ, ರಷ್ಯಾ ಅಧ್ಯಕ್ಷ ಪುಟಿನ್‌ಗೆ ಧನ್ಯವಾದಗಳು. ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕಾಗಿ ಭಾರತ ನಿರಂತರವಾಗಿ ಕರೆ ನೀಡಿದೆ. ಈ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನಗಳನ್ನು ಬೆಂಬಲಿಸುತ್ತದೆ ಎಂದು ತಿಳಿಸಿದ್ದಾರೆ.

    ಟ್ರಂಪ್ (Donald Trump) ಅವರನ್ನು ಭೇಟಿಯಾದ ನಂತರ, ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್ ಮೇಲಿನ ಯುದ್ಧವನ್ನು ನ್ಯಾಯಯುತ ಆಧಾರದ ಮೇಲೆ ಕೊನೆಗೊಳಿಸುವ ಮಾರ್ಗಗಳ ಬಗ್ಗೆ ಚರ್ಚಿಸಿದ್ದಾರೆ. ಚರ್ಚೆಯು ಸಮಯೋಚಿತ ಮತ್ತು ಉಪಯುಕ್ತವಾಗಿತ್ತು ಎಂದು ಪುಟಿನ್‌ ತಿಳಿಸಿದ್ದಾರೆ.

    ನಾವು ಬಹಳ ಸಮಯದಿಂದ ಈ ರೀತಿಯ ನೇರ ಮಾತುಕತೆಗಳನ್ನು ನಡೆಸಿರಲಿಲ್ಲ. ನಮ್ಮ ನಿಲುವನ್ನು ಶಾಂತವಾಗಿ ಮತ್ತು ವಿವರವಾಗಿ ಪುನರುಚ್ಚರಿಸಲು ನಮಗೆ ಅವಕಾಶ ಸಿಕ್ಕಿತು. ಸಂಭಾಷಣೆ ಸ್ಪಷ್ಟವಾಗಿ, ಅರ್ಥಪೂರ್ಣವಾಗಿತ್ತು ಎಂದು ಪುಟಿನ್‌ ಹೇಳಿದ್ದಾರೆ. ಇದನ್ನೂ ಓದಿ: ರಷ್ಯಾ ಮಾರಾಟ ಮಾಡಿದ್ದ ಅಲಾಸ್ಕಾ ಈಗ ಅಮೆರಿಕಾದ ಚಿನ್ನದ ಮೊಟ್ಟೆ!

    ಈ ಬಗ್ಗೆ ಪ್ರತಿಕ್ರಿಯಿಸಿದ್ದ ಟ್ರಂಪ್‌, ಚರ್ಚೆಗೆ ಶ್ಲಾಘನೆ ವ್ಯಕ್ತಪಡಿಸಿದ್ದರು. ಆದರೆ, ಈ ಬಗ್ಗೆ ನಿರ್ದಿಷ್ಟ ವಿವರಗಳನ್ನು ನೀಡಲು ನಿರಾಕರಿಸಿದ್ದರು. ನಾವು ಇನ್ನೂ ಆ ಹಂತಕ್ಕೆ ತಲುಪಿಲ್ಲ. ಆದರೆ, ನಾವು ಪ್ರಗತಿ ಸಾಧಿಸಿದ್ದೇವೆ. ಒಪ್ಪಂದವಾಗುವ ವರೆಗೆ ಯಾವುದೇ ಒಪ್ಪಂದವಿಲ್ಲ ಎಂದು ತಿಳಿಸಿದ್ದಾರೆ.

  • ಭಾರತ-ಪಾಕ್‌ ಪರಿಸ್ಥಿತಿಯನ್ನ ಅಮೆರಿಕ ಸೂಕ್ಷ್ಮವಾಗಿ ಗಮನಿಸ್ತಿದೆ – ಕದನ ವಿರಾಮ ಕುಸಿಯಬಹುದು: ಮಾರ್ಕೊ ರೂಬಿಯೊ

    ಭಾರತ-ಪಾಕ್‌ ಪರಿಸ್ಥಿತಿಯನ್ನ ಅಮೆರಿಕ ಸೂಕ್ಷ್ಮವಾಗಿ ಗಮನಿಸ್ತಿದೆ – ಕದನ ವಿರಾಮ ಕುಸಿಯಬಹುದು: ಮಾರ್ಕೊ ರೂಬಿಯೊ

    – ಯುದ್ಧ ನಿಲ್ಲಿಸಿದ್ದು ನಾನೇ ನಾನೇ – ಟ್ರಂಪ್‌ ಅದೇ ರಾಗ

    ವಾಷಿಂಗ್ಟನ್‌: ಭಾರತ ಮತ್ತು ಪಾಕಿಸ್ತಾನ ನಡುವಿನ ಪರಿಸ್ಥಿತಿ (India-Pakistan Situation) ಹಾಗೂ ವಿಶ್ವದಾದ್ಯಂತ ಉದ್ವಿಗ್ನತೆ ಇರುವ ಇತರ ತಾಣಗಳ ಮೇಲೆ ಅಮೆರಿಕ ಪ್ರತಿದಿನ ನಿಗಾ ಇಡುತ್ತಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ (Marco Rubio) ಹೇಳಿದ್ದಾರೆ.

    ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಘರ್ಷ ಏರ್ಪಡುವ ಸುಳಿವು ನೀಡಿದ್ದಾರೆ. ಇದನ್ನೂ ಓದಿ: ರಷ್ಯಾ ಮಾರಾಟ ಮಾಡಿದ್ದ ಅಲಾಸ್ಕಾ ಈಗ ಅಮೆರಿಕಾದ ಚಿನ್ನದ ಮೊಟ್ಟೆ!

    ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮ (Ceasefires) ಒಪ್ಪಂದಗಳು ದುರ್ಬಲವಾಗಿವೆ. ಅವುಗಳನ್ನ ನಿರ್ವಹಣೆ ಮಾಡುವುದು ಸವಾಲಿನ ಕೆಲಸವಾಗಿದೆ. ಆದ್ದರಿಂದ ಕದನ ವಿರಾಮ ಶೀಘ್ರದಲ್ಲೇ ಸ್ಥಗಿತಗೊಳ್ಳಬಹುದು ಎಂದು ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ರಷ್ಯಾ-ಉಕ್ರೇನ್‌ ಯುದ್ಧ ನಿಲ್ಲಿಸಲು ಮುಂದಾದ ಟ್ರಂಪ್‌ಗೆ ಯುರೋಪಿಯನ್ ಒಕ್ಕೂಟ ಬೆಂಬಲ – ನಾಳೆಯ ಸಭೆ ಮೇಲೆ ನಿಗಾ

    ಪ್ರತಿದಿನ ನಾವು ಭಾರತ-ಪಾಕಿಸ್ತಾನದ ನಡುವೆ ಏನಾಗುತ್ತಿದೆ? ಕಾಂಬೋಡಿಯಾ – ಥೈಲ್ಯಾಂಡ್‌ ನಡ್ವೆ ಏನಾಗುತ್ತಿದೆ? ಅನ್ನೋದರ ಮೇಲೆ ಕಣ್ಣಿಟ್ಟಿದ್ದೇವೆ. ಈ ನಿಟ್ಟಿನಲ್ಲಿ ನೋಡಿದಾಗ ಭಾರತ-ಪಾಕ್‌ ಕದನ ವಿರಾಮ ಸ್ಥಗಿತವಾಗಬಹುದು ಅನ್ನಿಸಿರುವುದಾಗಿ ತಿಳಿಸಿದರು.

    ಟ್ರಂಪ್‌ ಹಾಡಿ ಹೊಗಳಿದ ರುಬಿಯೊ
    ಇದೇ ವೇಳೆ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ನಿಲ್ಲಿಸಿದ್ದು ಟ್ರಂಪ್‌ ಅಂತ ರೂಬಿಯೋ ಕೂಡ ಬೊಬ್ಬೆ ಹೊಡೆದಿದ್ದಾರೆ. ನಾವು ತುಂಬಾ ಅದೃಷ್ಟವಂತರು. ಶಾಂತಿ ಮತ್ತು ಶಾಂತಿ ಸಾಧನೆಯನ್ನೇ ತಮ್ಮ ಆಡಳಿತದ ಆದ್ಯತೆಯನ್ನಾಗಿ ಮಾಡಿಕೊಂಡ ಅಧ್ಯಕ್ಷರನ್ನ ಹೊಂದಿರುವುದಕ್ಕೆ ಕೃತಜ್ಞರಾಗಿರಬೇಕು ಎಂದು ಟ್ರಂಪ್‌ ಗುಣಗಾನ ಮಾಡಿದ್ದಾರೆ.

    ಒಂದು ದಿನದ ಹಿಂದೆಯಷ್ಟೆ ಟ್ರಂಪ್‌ ಮಾಧ್ಯಮದಲ್ಲಿ ಮಾತನಾಡುವಾಗ ಭಾರತ ಮತ್ತು ಪಾಕ್‌ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಮತ್ತೆ ಹೇಳಿಕೊಂಡಿದ್ದರು. ಇದನ್ನೂ ಓದಿ: 2-3 ವಾರದ ನಂತ್ರ ಹೊಸ ಸುಂಕದ ಬಗ್ಗೆ ಯೋಚಿಸ್ತೀನಿ – ಭಾರತಕ್ಕೆ ಸಿಗುತ್ತಾ ಸುಂಕ ವಿನಾಯ್ತಿ?

     

  • ರಷ್ಯಾ ಮಾರಾಟ ಮಾಡಿದ್ದ ಅಲಾಸ್ಕಾ ಈಗ ಅಮೆರಿಕಾದ ಚಿನ್ನದ ಮೊಟ್ಟೆ!

    ರಷ್ಯಾ ಮಾರಾಟ ಮಾಡಿದ್ದ ಅಲಾಸ್ಕಾ ಈಗ ಅಮೆರಿಕಾದ ಚಿನ್ನದ ಮೊಟ್ಟೆ!

    ಸಾಮಾನ್ಯವಾಗಿ ಒಂದಿಲ್ಲೊಂದು ಚರ್ಚೆಯಲ್ಲಿರುವ ಟ್ರಂಪ್ ಇದೀಗ ರಷ್ಯಾದ (Russia) ಜೊತೆಗಿನ ಸಭೆ ಮೂಲಕ ಮತ್ತೊಂದು ಚರ್ಚೆಗಿಳಿದಿದ್ದಾರೆ. ಪುಟಿನ್ (Putin) ಜೊತೆ ನಡೆದ ಸಭೆ ಯಾವುದೇ ಒಪ್ಪಂದಗಳಿಲ್ಲದೆ ಅಂತ್ಯಗೊಂಡರೂ ಕೂಡ ಅಲಾಸ್ಕಾದಲ್ಲಿ ನಡೆದಿದ್ದು ಕೂತುಹಲಕ್ಕೆ ಎಡೆಮಾಡಿಕೊಟ್ಟಿದೆ. 

    ಕಳೆದ ಐದು ವರ್ಷಗಳಲ್ಲಿ ಮೊದಲ ಬಾರಿಗೆ ಟ್ರಂಪ್ ಹಾಗೂ ಪುಟಿನ್ ಭೇಟಿಯಾಗಿದ್ದಾರೆ. ಆಗಸ್ಟ್‌ 15 ರಂದು ಉಭಯ ನಾಯಕರಾದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ನಡುವೆ ಅಂಕೊರೇಜ್‌ನಲ್ಲಿ ಅಮೆರಿಕದ ಸೇನಾ ಮೂಲಸೌಕರ್ಯವಿರುವ ಜಾಯಿಂಟ್ ಬೇಸ್ ಎಲೆಂಡಾರ್ಫ್–ರಿಚರ್ಡ್‌ಸನ್‌ನಲ್ಲಿ (JBER) ಸುಮಾರು ಮೂರು ಗಂಟೆ ಸಭೆ ನಡೆಯಿತು. ಸಭೆಯ ಬಳಿಕ ನಡೆದ ಸುದ್ದಿಗೋಷ್ಠಿ ನಡೆಸಿದರು.  ಈ ಸಭೆಗೆ ಆಗಮಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಸ್ವತಃ ಡೊನಾಲ್ಡ್ ಟ್ರಂಪ್ ಅವರು ವೇದಿಕೆಗೆ ಕರೆದುಕೊಂಡು ಬಂದರು. ಈ ವೇಳೆ ಅಮೆರಿಕ ಸೇನೆಯ ಬಾಂಬರ್ ಫೈಟರ್ ಜೆಟ್ B-2 bomber ಹಾರಾಡಿದ್ದು, ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಪ್ರಶ್ನಿಸಿದಾಗ ಟ್ರಂಪ್‌ ಅವರು ಅತಿಥಿಗಳಿಗೆ ಅಮೆರಿಕದ ಸೇನಾ ಗೌರವ ಎಂದು ತಿಳಿಸಿದ್ದಾರೆ. ಇದು ಜಗತ್ತಿನಾದ್ಯಂತ ವ್ಯಾಪಕ ಟೀಕೆಗೆ ಕಾರಣವಾಗಿದೆ. 

    ಸುದ್ದಿಗೋಷ್ಠಿಯಲ್ಲಿ ಟ್ರಂಪ್‌ ಮಾತನಾಡಿ, ಈ ಸಭೆಯಲ್ಲಿ ಅನೇಕ ಮಾತುಕತೆಗಳಿಗೆ ಒಪ್ಪಿಗೆ ಸೂಚಿಸಿದ್ದು, ಕೆಲವೇ ಕೆಲವು ಬಾಕಿ ಉಳಿದಿವೆ. ರಷ್ಯಾ ಜೊತೆಗೆ ಕೆಲವು ಬಗೆಹರಿಸಲಾಗದ ಸಮಸ್ಯೆಗಳಿವೆ. ಅಲ್ಲಿಗೆ ತಲುಪಲು ನಮಗೆ ಉತ್ತಮ ಅವಕಾಶವೂ ಇದೆ. ಅವೆಲ್ಲದರ ಒಪ್ಪಂದವಾಗುವವರೆಗೆ ಅಮೆರಿಕ ರಷ್ಯಾ ನಡುವೆ ಯಾವುದೇ ಒಪ್ಪಂದವಿಲ್ಲ. ಪುಟಿನ್‌ ಜೊತೆ ಉಕ್ರೇನ್‌ ಕುರಿತ ಮಾತುಕತೆಯಲ್ಲಿ ಒಂದಿಷ್ಟು ಪ್ರಗತಿ ಕಂಡುಬಂದಿದೆ. ಆದ್ರೆ ಗುರಿ ಸಾಧನೆ ಆಗುವವರೆಗೆ ಸಂಪೂರ್ಣ ಒಪ್ಪಂದವಾಗವುದಿಲ್ಲ ಎಂದು ನೇರವಾಗಿ ಹೇಳಿದ್ದಾರೆ. 

    ಇದೇ ವೇಳೆ ಮಾತನಾಡಿದ ಪುಟಿನ್‌, ದೇಶದ ಭದ್ರತೆಗೆ ಆತಂಕವಿರುವುದರಿಂದ ಉಕ್ರೇನ್‌ಗೆ ಸಂಬಂಧಿಸಿದಂತೆ ನಮ್ಮ ನಿಲುವು ಬದಲಾಗುವುದಿಲ್ಲ ಎಂದು ಖಚಿತಪಡಿಸಿದರು. ಅಲ್ಲದೇ ಮಾತುಕತೆಯು ದೀರ್ಘಕಾಲೀನವಾಗಿಸಬೇಕಾದ್ರೆ, ಸಂಘರ್ಷಕ್ಕೆ ಕಾರಣವಾದ ಎಲ್ಲ ಅಂಶಗಳನ್ನೂ ಸರಿಪಡಿಸಬೇಕು ಎಂಬುದು ನಮಗೆ ಮನವರಿಕೆಯಾಗಿದೆ. ಆ ಮೂಲಕ, ಉಕ್ರೇನ್ ಮತ್ತು ಅದರ ಪ್ರದೇಶ ಪಶ್ಚಿಮದ ಭಾಗವಾಗುವುದನ್ನು ಒಪ್ಪಲಾಗದು ಎಂಬ ರಷ್ಯಾ ನಿಲುವನ್ನು ಮುಂದಿಟ್ಟಿದ್ದಾರೆ.

    ಅಲಾಸ್ಕಾ ಮಿಲಿಟರಿ ನೆಲೆಯನ್ನೇ ಆಯ್ಕೆ ಮಾಡಿಕೊಂಡಿದ್ದು ಯಾಕೆ? 
    ಡೊನಾಲ್ಡ್ ಟ್ರಂಪ್ ಮತ್ತು ರಷ್ಯಾ ಅಧ್ಯಕ್ಷ ಪುಟಿನ್ ತಮ್ಮ ಭೇಟಿಗಾಗಿ ಅಲಾಸ್ಕಾ ಪ್ರದೇಶವನ್ನು ಆಯ್ಕೆ ಮಾಡಿದ್ದೆ ಯಾಕೆ ಎನ್ನುವಂತಹ ಪ್ರಶ್ನೆ ಚರ್ಚೆಗೆ ಗ್ರಾಸವಾಗಿದೆ. ಅಲಾಸ್ಕಾ ಪ್ರದೇಶವು ಎಲ್ಮೆಂಡಾರ್ಫ್ ವಾಯು ಸೇನೆ ಹಾಗೂ ಪೋರ್ಟ್ ರಿಚರ್ಡ್ಸನ್ ಸೇನಾ ನೆಲೆಯನ್ನು ವಿಲೀನಗೊಳಿಸಿದ ಆಂಕಾರೇಜ್‌ನಲ್ಲಿರುವ ಎಲ್ಮೆಂಡಾರ್ಫ್  ರಿಚರ್ಡ್ಸನ್ ಜಂಟಿ ನೆಲೆಯಾಗಿದೆ.

    ಅಲಾಸ್ಕಾ 1867ರಲ್ಲಿ ಅಮೆರಿಕ ಆಡಳಿತಕ್ಕೆ ಬಂದಿತ್ತು. ಹೀಗಾಗಿ ಈ ಐತಿಹಾಸಿಕ ಸಂಬಂಧವನ್ನು ಇದು ಪ್ರತಿಬಿಂಬಿಸುತ್ತದೆ. ಈ ಪ್ರದೇಶ ರಷ್ಯಾ ದೇಶಕ್ಕೆ ಹತ್ತಿರವಾಗಿದ್ದು, ಅಮೆರಿಕಾದ ಪ್ರಮುಖ ರಕ್ಷಣಾ ಕೇಂದ್ರಗಳು ಇಲ್ಲಿವೆ. ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧವನ್ನ ಕೊನೆಗೊಳಿಸುವ ನಿಟ್ಟಿನಲ್ಲಿ ಈ ಸಭೆ ಪ್ರಮುಖವಾಗಿತ್ತು. ಈ ಪ್ರದೇಶ ಭೌಗೋಳಿಕವಾಗಿ ಸಮೀಪವಾಗಿದ್ದರೂ ಸಾಂಕೇತಿಕ ಮಹತ್ವವನ್ನು ಹೊಂದಿದೆ. ಅದಲ್ಲದೆ ಸುರಕ್ಷಿತ ನಿಯಂತ್ರಣ ಹೊಂದಿದ ಪ್ರದೇಶ ಇದಾಗಿದ್ದು, ಸಭೆ ಕೈಗೊಳ್ಳಲು ಸೂಕ್ತ ಪ್ರದೇಶ. ಅದಲ್ಲದೆ ಶೃಂಗಸಭೆಗೆ ಕೂಡ ಇದೊಂದು ಸೂಕ್ತ ಸ್ಥಳ ಎನ್ನಲಾಗಿದೆ.

    ಅಲಾಸ್ಕಾ ಇತಿಹಾಸ:
    ಒಂದು ಕಾಲದಲ್ಲಿ ರಷ್ಯಾದ ಆಡಳಿತದಲ್ಲಿದ್ದ ಅಲಾಸ್ಕಾ ಪ್ರದೇಶ ಇದೀಗ ಅಮೆರಿಕದ ಒಡೆತನದಲ್ಲಿದೆ. ಅಮೆರಿಕದಲ್ಲಿರುವ ಒಂದು ಅತ್ಯಂತ ವಿಸ್ತೀರ್ಣವುಳ್ಳ ಪ್ರದೇಶವೂ ಇದಾಗಿದೆ. ಉತ್ತರ ಅಮೆರಿಕ ಖಂಡದ ವಾಯುವ್ಯ ತುದಿಯಲ್ಲಿರುವ 15,18,800 ಚದರ ಕಿ.ಮೀ ಇರುವ ಈ  ಪ್ರದೇಶದಲ್ಲಿ ಸ್ಥಳೀಯ ಜನಾಂಗಗಳು ವಾಸವಾಗಿವೆ.

    ಪ್ರಾರಂಭದಲ್ಲಿ ಇನ್ಯೂಟ್, ಯುಪಿಕ್, ಅಲೆಟ್ ಜನಾಂಗಗಳು ವಾಸವಾಗಿದ್ದವು. ರಷ್ಯಾದ ಅನ್ವೇಷಕ ವಿಟಸ್ ಬೇರಿಂಗ್ ಎಂಬುವರು 1741ರಲ್ಲಿ ಈ ಅಲಾಸ್ಕಾವನ್ನು ಕಂಡುಹಿಡಿದರು. ಅದಾದ ಬಳಿಕ ಸುಮಾರು ವರ್ಷಗಳ ಕಾಲ ಚರ್ಮ ವ್ಯಾಪಾರ ನಡೆಸಲು ವ್ಯಾಪಾರಿಗಳು ಇಲ್ಲಿಗೆ ಬರುತ್ತಿದ್ದರು. ಈ ಸಮಯದಲ್ಲಿ ಈ ಪ್ರದೇಶ ರಷ್ಯಾದ ನಿಯಂತ್ರಣದಲ್ಲಿತ್ತು. ಅದಾದ ಬಳಿಕ 1867ರಲ್ಲಿ ಅಮೆರಿಕದ ಕಾರ್ಯದರ್ಶಿ ವಿಲಿಯಂ ಹೆನ್ರಿ ಸಿವರ್ಡ್ ಅವರು ರಷ್ಯಾದಿಂದ ಅಲಾಸ್ಕಾನ್ನು 7.2 ಮಿಲಿಯನ್ ಡಾಲರ್‌ಗೆ ಖರೀದಿಸಿದರು. ಆ ಸಮಯದಲ್ಲಿ ಇದು ಸಿವರ್ಡ್ ಮೂರ್ಖತನ ಎಂದು ಟೀಕಿಸಿದರು. ಕಾರಣ ಹಿಮಾಚ್ಛಾದಿತವಾಗಿದ್ದ ಈ ಪ್ರದೇಶ ಯಾವುದಕ್ಕೂ ಉಪಯೋಗವಿಲ್ಲದೆ ಖರೀದಿಸಿದ್ದು ಮೂರ್ಖತನ ಎನಿಸಿತ್ತು. 1890ರ ದಶಕದಲ್ಲಿ ಇದೇ ಅಲಾಸ್ಕಾ ಪ್ರದೇಶದಲ್ಲಿ ಚಿನ್ನ ಪತ್ತೆಯಾಗಿತ್ತು ಇದಾದ ನಂತರ ಸಾವಿರಾರು ಜನ ಈ ಪ್ರದೇಶಕ್ಕೆ ವಲಸೆ ಬರಲು ಪ್ರಾರಂಭಿಸಿದರು. ಇದು  ಅಲಾಸ್ಕಾದ ಆರ್ಥಿಕತೆಯನ್ನು ಬದಲಾಯಿಸಿತು. ಬಳಿಕ 1959 ರಲ್ಲಿ ಅಲಾಸ್ಕ್ ಅಧಿಕೃತವಾಗಿ ಅಮೆರಿಕಾದ 49ನೇ ರಾಜ್ಯವಾಗಿ ಘೋಷಣೆ ಆಯಿತು.  ಅಲಾಸ್ಕಾದಲ್ಲಿ 2025ರ ಪ್ರಕಾರ ಸುಮಾರು 7.3 ಲಕ್ಷ ಜನರು ವಾಸಿಸುತ್ತಾರೆ. ಜೊತೆಗೆ ಅಮೆರಿಕಾದ ವಾಯುಪಡೆ ಹಾಗೂ ಸೇನಾ ಶಿಬಿರದ ಕೇಂದ್ರಗಳು ಇಲ್ಲಿದೆ.

    20ನೇ ಶತಮಾನದಲ್ಲಿ  ಅಲಾಸ್ಕಾ ಪ್ರದೇಶದಲ್ಲಿ ತೈಲ ಹಾಗೂ ನೈಸರ್ಗಿಕ ಅನಿಲ ಪತ್ತೆಯಾಯಿತು. ಇದರಿಂದ ಈ ಪ್ರದೇಶ ಅಮೆರಿಕಾದ ಪ್ರಮುಖ ಶಕ್ತಿ ಕೇಂದ್ರವಾಗಿ ಪರಿವರ್ತನೆಯಾಯಿತು. ಇಂದಿಗೂ ಕೂಡ ಈ ಪ್ರದೇಶವು ತನ್ನ ಪ್ರಕೃತಿ ಸಂಪತ್ತು, ಹಿಮ ಪರ್ವತಗಳು ಹಾಗೂ ವನ್ಯಜೀವಿ ಸಂಪತ್ತಿಗಾಗಿ ಪ್ರಸಿದ್ಧಿಯನ್ನು ಪಡೆದಿದೆ. ಇದೀಗ ಡೊನಾಲ್ಡ್ ಟ್ರಂಪ್ ಹಾಗೂ ಪುಟಿನ್ ಸಭೆಯು ಕೆಲವು ಪ್ರಶ್ನೆಗಳನ್ನು ಮುಂದಿಟ್ಟಿದೆ. ಹೀಗಾಗಿ ಪುಟಿನ್  ಅಲಾಸ್ಕಾ ಪ್ರದೇಶವನ್ನು ಮತ್ತೆ ರಷ್ಯಾದ ಭಾಗವಾಗಿ ಹಿಂಪಡೆಯುತ್ತಾರಾ? ಎಂಬ ಪ್ರಶ್ನೆಯು ಕೇಳಿಬಂದಿದೆ.