ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ (Ayodhya Ram Mandir) ಪ್ರತಿಷ್ಠಾಪನೆಗೊಂಡಿರುವ ಬಾಲಕರಾಮನಿಗೆ (Ramlala) ಪ್ರತಿ ದಿನ ಬೆಳಗ್ಗೆ 6:30 ಕ್ಕೆ ಆರತಿ ಬೆಳಗಲಾಗುವುದು. ಇದನ್ನು ದೂರದರ್ಶನದಲ್ಲಿ ನೇರ ಪ್ರಸಾರ ಮಾಡಲಾಗುವುದು.
ಈಗ ಪ್ರತಿದಿನವೂ ಭಗವಾನ್ ರಾಮಲಲ್ಲಾನ ದಿವ್ಯ ದರ್ಶನವಾಗುತ್ತದೆ. ಅಯೋಧ್ಯೆಯ ಬಾಲಕರಾಮನಿಗೆ ಪ್ರತಿ ದಿನ ಆರತಿ ಬೆಳಗುವುದರ ನೇರ ಪ್ರಸಾರವನ್ನು ವೀಕ್ಷಿಸಬಹುದು. ಪ್ರತಿದಿನ ಬೆಳಗ್ಗೆ 6:30 ಕ್ಕೆ #DDNational ನೇರ ಪ್ರಸಾರವಾಗಲಿದೆ ಎಂದು ಸಾರ್ವಜನಿಕ ಪ್ರಸಾರಕರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಲೋಕಸಭಾ ಚುನಾವಣೆ ಸ್ಪರ್ಧೆಗೆ ಮಲ್ಲಿಕಾರ್ಜುನ ಖರ್ಗೆ ಹಿಂದೇಟು?
ರಾಮನ ವಿಗ್ರಹದ ಪ್ರತಿಷ್ಠಾಪನೆಯ ನಂತರ, ನಾವು ಬೆಳಗ್ಗೆ ದೈನಂದಿನ ಆರತಿಯ ನೇರ ಪ್ರಸಾರಕ್ಕೆ ಅನುಮತಿ ಪಡೆಯಲು ಪ್ರಯತ್ನಿಸುತ್ತಿದ್ದೆವು. ಈಗ ಅನುಮೋದನೆ ನೀಡಲಾಗಿದೆ. ವಿವಿಧ ಕಾರಣಗಳಿಂದ ಅಯೋಧ್ಯೆಗೆ ಭೇಟಿ ನೀಡಲು ಸಾಧ್ಯವಾಗದ ಎಲ್ಲ ಭಕ್ತರು ಡಿಡಿ ನ್ಯಾಷನಲ್ ಮೂಲಕ ಶ್ರೀರಾಮನ ಮಂಗಳಕರ ದರ್ಶನವನ್ನು ಪಡೆಯಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಿರುವನಂತಪುರಂ: ಮಲಯಾಳಂನ ಖ್ಯಾತ ನಟ ಕೊಟ್ಟಾಯಂ ಪ್ರದೀಪ್ ಅಂತ ಕರೆಯಲ್ಪಡುವ ಪ್ರದೀಪ್ ಕೆ. ಆರ್ (61) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಪ್ರದೀಪ್ ಅವರು ಕೊಟ್ಟಾಯಂ ಎಂಬ ತಮ್ಮ ಸ್ಥಳೀಯ ಸ್ಥಳದ ಹೆಸರನ್ನು ತಮ್ಮ ಹೆಸರಿಗೆ ಸೇರಿಸಿಕೊಂಡಿದ್ದರು. ಜೂನಿಯರ್ ಕಲಾವಿದರಾಗಿ ತಮ್ಮ ಚಲನಚಿತ್ರ ವೃತ್ತಿಜೀವನವನ್ನು ಪ್ರಾರಂಭಿಸಿದ್ದರು. ಅವರು ರಂಗಭೂಮಿ ಮತ್ತು ದೂರದರ್ಶನ ಉದ್ಯಮದ ಭಾಗವಾಗಿದ್ದರು.
ಪ್ರದೀಪ್ ಅವರಿಗೆ ಇಂದು ಬೆಳಗ್ಗೆ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ಅಡ್ಮಿಟ್ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಪ್ರದೀಪ್ ತಮ್ಮ ಶಾಲಾ ದಿನಗಳಿಂದಲೂ ನಟನೆಯಲ್ಲಿ ತುಂಬಾ ಆಸಕ್ತಿ ಹೊಂದಿದ್ದರು. ಅವರು ಶಾಲೆ ಮತ್ತು ಕಾಲೇಜಿನಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು. 10 ನೇ ತರಗತಿಯಲ್ಲಿದ್ದಾಗ, ಅವರು ಎನ್‍ಎನ್ ಪಿಳ್ಳೈ ಅವರ ನಾಟಕದಲ್ಲಿ ಬಾಲ ಕಲಾವಿದರಾಗಿ ನಟನಾ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ್ದರು. ಇದನ್ನೂ ಓದಿ: ರಣವೀರ್ ಹೊಸ ಸ್ಟೈಲ್‍ಗೆ ಆಲಿಯಾ ಬೌಲ್ಡ್
ಪ್ರದೀಪ್ ಅವರು ನಟನೆಯಲ್ಲದೇ ಎಲ್‍ಐಸಿ ಜೀವ ವಿಮಾ ನಿಗಮದ ಎಜೆಂಟ್ ಆಗಿ ಸಹ ಕೆಲಸಕ್ಕೆ ಸೇರಿದ್ದರು. ಕೆಲಸಕ್ಕೆ ಸೇರಿದ ನಂತರವೂ ತಮ್ಮ ನಟನಾ ಪ್ರವೃತ್ತಿಯನ್ನು ಮುಂದುವರಿಸಿದ್ದರು. 90ರ ದಶಕದ ಆರಂಭದಲ್ಲಿ, ಟಿವಿ ಧಾರಾವಾಹಿಯೊಂದರಲ್ಲಿ ಸ್ಕ್ರೀನ್ ಟೆಸ್ಟ್‍ಗಾಗಿ ಅವರು ತಮ್ಮ ಮಗನ ಜೊತೆ ಹೋಗಿದ್ದರು. ಈ ವೇಳೆ ಧಾರಾವಾಹಿಯ ನಿರ್ಮಾಪಕರು ಅವರಿಗೆ ಅದೇ ಧಾರಾವಾಹಿಯಲ್ಲಿ ಪಾತ್ರವನ್ನು ನೀಡಿದ್ದರು. ಇದನ್ನೂ ಓದಿ: ಪುನೀತ್ ಕುಟುಂಬಕ್ಕೆ ಸಾಂತ್ವಾನ ಹೇಳಿದ ಅರ್ಜುನ್ ಸರ್ಜಾ
1999 ರಲ್ಲಿ ಅವರು ಹಿರಿಯ ಐ.ವಿ.ಶಶಿ ನಿರ್ದೇಶನದ ಚಲನಚಿತ್ರದಲ್ಲಿ ನಟಿಸುವ ಅವಕಾಶವನ್ನು ಪಡೆದರು. ನಂತರ ಅವರು 70 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಹಾಸ್ಯ ಪಾತ್ರಗಳಲ್ಲಿ ನಟಿಸಿದ್ದಾರೆ.
ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರದೀಪ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅವರು ನಟಿಸಿರುವ ಸಣ್ಣ ಪಾತ್ರಗಳಿಂದಲೇ ಚಿತ್ರರಂಗದಲ್ಲಿ ತಮ್ಮದೇ ಆದ ಜಾಗವನ್ನು ಸೃಷ್ಟಿಸಿಕೊಂಡಿದ್ದರು.
ಐವಿ ಶಶಿಯವರ ಈ ನಾಡು ಇನ್ನಲೇ ವರೇ (2001) ಅವರ ಮೊದಲ ಚಿತ್ರವಾಗಿದೆ. ಅವರು ತಮಿಳು, ತೆಲುಗು ಮತ್ತು ಹಿಂದಿ ಸೇರಿದಂತೆ 70ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ತಮ್ಮ ಹಾಸ್ಯ ಪಾತ್ರಗಳಿಗೆ ಹೆಸರುವಾಸಿಯಾಗಿದ್ದ ಅವರ ಕೆಲವು ಪಾತ್ರಗಳು ಮತ್ತು ಸಂಭಾಷಣೆಗಳು ಇಂದಿಗೂ ಜನಪ್ರಿಯವಾಗಿವೆ.
ಗೌತಮ್ ಮೆನನ್ ಅವರ ವಿನೈತಾಂಡಿ ವರುವಾಯಾ ಮತ್ತು ಅದರ ಹಿಂದಿ, ತಮಿಳು ಮತ್ತು ತೆಲುಗು ರಿಮೇಕ್‍ಗಳ ಮೂಲಕ ಅವರು ಬೆಳಕಿಗೆ ಬಂದಿದ್ದರು. 2 ನೇ ಏಷ್ಯಾನೆಟ್ ಕಾಮಿಡಿ ಅವಾಡ್ರ್ಸ್ 2016 ರಲ್ಲಿ ವಿವಿಧ ಪಾತ್ರಗಳಿಗಾಗಿ ಪ್ರದೀಪ್ ಅತ್ಯುತ್ತಮ ಪೋಷಕ ನಟ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಮುಂಬರುವ ಮೋಹನ್ ಲಾಲ್ ಅಭಿನಯದ ಚಿತ್ರ ‘ಆರಟ್ಟು’ ಅವರ ಕೊನೆಯ ಸಿನಿಮಾವಾಗಿದೆ.
ಗುರುವಾರದಂದು ಪ್ರದೀಪ್ ಅವರ ಅಂತ್ಯಕ್ರಿಯೆ ನಡೆಯಲಿದೆ, ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ನವದೆಹಲಿ: ಕೊರೊನಾ ವೈರಸ್ ಲಾಕ್‍ಡೌನ್ ಸಂದರ್ಭದಲ್ಲಿ ಕಾಲ ಕಳೆಯಲು ಅನುಕೂಲವಾಗುವಂತೆ ಸರ್ಕಾರ ಹಳೆಯ ‘ರಾಮಾಯಣ’ ಧಾರಾವಾಹಿಯನ್ನು ಪ್ರಸಾರ ಮಾಡಿತ್ತು. ಆದರೆ 33 ವರ್ಷಗಳ ನಂತರ ಮತ್ತೆ ಸೀರಿಯಲ್ ಪ್ರಾರಂಭವಾದರೂ ಇದೀಗ ‘ರಾಮಾಯಣ’ ಧಾರಾವಾಹಿ ವಿಶ್ವ ದಾಖಲೆ ನಿರ್ಮಿಸಿದೆ.
ಲಾಕ್‍ಡೌನ್ ಅವಧಿಯಲ್ಲಿ ಜನರ ಬೇಸರ ಕಳೆಯುವ ಉದ್ದೇಶದಿಂದ ದೂರದರ್ಶನ ‘ರಾಮಾಯಣ’ ಧಾರಾವಾಹಿಯನ್ನು ದಿನದ ಎರಡು ಸಮಯ ಮರು ಪ್ರಸಾರ ಆರಂಭಿಸಿತ್ತು. ಇದು ನಿರೀಕ್ಷೆಗೂ ಮೀರಿದ ಜನಪ್ರಿಯತೆ ಪಡೆದುಕೊಂಡಿತು. ಈ ಬಗ್ಗೆ ಸ್ವತಃ ದೂರದರ್ಶನ ಟ್ವೀಟ್ ಮಾಡುವ ಮೂಲಕ ಖುಷಿಯ ವಿಚಾರವನ್ನು ಹಂಚಿಕೊಂಡಿದೆ.
ದೂರದರ್ಶನ ಮಾಹಿತಿ ನೀಡಿರುವ ಪ್ರಕಾರ ಮರು ಪ್ರಸಾರವಾದ ‘ರಾಮಾಯಣ’ ವಿಶ್ವದಾಖಲೆಯನ್ನೇ ಬರೆದಿದೆ. ಜಗತ್ತಿನಲ್ಲಿಯೇ ಅತಿ ಹೆಚ್ಚು ವೀಕ್ಷಿಸಿದ ಮನರಂಜನಾ ಕಾರ್ಯಕ್ರಮ ಎಂಬ ಹೆಗ್ಗಳಿಕೆಯನ್ನು ಸಹ ‘ರಾಮಾಯಣ’ ಪಡೆದುಕೊಂಡಿದೆ. ಅಷ್ಟೇ ಅಲ್ಲದೇ ದೂರದರ್ಶನದಲ್ಲಿ ‘ರಾಮಾಯಣ’ ಸೀರಿಯಲ್ ಮರು ಪ್ರಸಾರವು ವಿಶ್ವದಾದ್ಯಂತ ವೀಕ್ಷಕರ ದಾಖಲೆಗಳನ್ನು ಬ್ರೇಕ್ ಮಾಡಿದೆ. ಏಪ್ರಿಲ್ 16ರ ವೇಳೆಗೆ 7.7 ಕೋಟಿ ವೀವರ್ಸ್ ಪಡೆದುಕೊಳ್ಳುವ ಮೂಲಕ ವಿಶ್ವದ ಅತಿ ಹೆಚ್ಚು ವೀಕ್ಷಿಸಿದ ಮನರಂಜನಾ ಕಾರ್ಯಕ್ರಮ ಎನಿಸಿಕೊಂಡಿದೆ” ಎಂದು ದೂರದರ್ಶನ ಟ್ವೀಟ್ ಮಾಡಿದೆ.
ಸಾರ್ವಜನಿಕ ಬೇಡಿಕೆಯ ಮೇರೆಗೆ ಮಾರ್ಚ್ 28ರಿಂದ ಮತ್ತೆ ರಾಮಾನಂದ್ ಸಾಗರ್ ನಿರ್ದೇಶನದ ‘ರಾಮಾಯಣ’ ಧಾರಾವಾಹಿಯನ್ನು ಪ್ರಸಾರ ಮಾಡಲಾಗುತ್ತಿತ್ತು. ಈ ಸೀರಿಯಲ್ ದಿನಕ್ಕೆ ಎರಡು ಬಾರಿ ಡಿಡಿ ನ್ಯಾಷನಲ್ ಚಾನೆಲ್‍ನಲ್ಲಿ ಪ್ರಸಾರವಾಗುತ್ತಿತ್ತು. ದೂರದರ್ಶನವು ‘ರಾಮಾಯಣ’ ಸೀರಿಯಲ್ ಮಾತ್ರವಲ್ಲದೇ ‘ಮಹಾಭಾರತ’, ‘ಶ್ರೀ ಕೃಷ್ಣ’ ಮತ್ತು ‘ಉತ್ತರ ರಾಮಾಯಣ’ ಮುಂತಾದ ಪೌರಾಣಿಕ ಧಾರಾವಾಹಿಗಳನ್ನು ಮರು ಪ್ರಸಾರ ಮಾಡುತ್ತಿದೆ.
‘ರಾಮಾಯಣ’ ಧಾರಾವಾಹಿ ದೇಶದಲ್ಲಿ ಮೊದಲ ಬಾರಿಗೆ ಜನವರಿ 25, 1987 ರಿಂದ ಜುಲೈ 31, 1988 ರವರೆಗೆ ಪ್ರಸಾರವಾಗಿದೆ. 1987 ರಿಂದ 1988 ರವರೆಗೆ ‘ರಾಮಾಯಣ’ ವಿಶ್ವದಲ್ಲೇ ಹೆಚ್ಚು ವೀಕ್ಷಿಸಿದ ಧಾರಾವಾಹಿ ಆಗಿತ್ತು. ಅಲ್ಲದೇ ಇದು ಲಿಮ್ಕಾ ಬುಕ್ ಆಫ್ ರೆಕಾರ್ಟ್ ನಲ್ಲಿ ‘ವಿಶ್ವದ ಅತಿ ಹೆಚ್ಚು ವೀಕ್ಷಿಸಿದ ಪೌರಾಣಿಕ ಧಾರಾವಾಹಿ’ ಎಂದು ದಾಖಲೆ ಬರೆದಿತ್ತು.
ಲಾಕ್‍ಡೌನ್ ಸಂದರ್ಭದಲ್ಲಿ ಅತಿ ಹೆಚ್ಚು ವೀಕ್ಷಣೆಗೊಳಗಾಗುತ್ತಿರುವ ಚಾನೆಲ್‍ಗಳ ಪಟ್ಟಿಯಲ್ಲಿ ಡಿಡಿ ನ್ಯಾಷನಲ್ ಮೊದಲ ಸ್ಥಾನದಲ್ಲಿ ಮುಂದುವರಿದಿದೆ. ಆದರೆ ‘ರಾಮಾಯಣ’ ಧಾರಾವಾಹಿ ಏಪ್ರಿಲ್ 18ರಂದು ಮುಕ್ತಾಯವಾದ ನಂತರ ಅದರ ವೀಕ್ಷಕರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ.
Rebroadcast of #Ramayana on #Doordarshan smashes viewership records worldwide, the show becomes most watched entertainment show in the world with 7.7 crore viewers on 16th of April pic.twitter.com/edmfMGMDj9
ನವದೆಹಲಿ: ಮಹಾಮಾರಿ ಕೊರೊನಾ ವೈರಸ್‍ನಿಂದಾಗಿ ದೇಶಾದ್ಯಂತ ಏಪ್ರಿಲ್ 14ರವರೆಗೆ ಲಾಕ್‍ಡೌನ್ ಘೋಷಿಸಲಾಗಿದೆ. ಹೀಗಾಗಿ ಕೆಲವರು ಮನೆಯಲ್ಲಿ ಕುಳಿತು ಎಲ್ಲಾ ವೆಬ್ ಸಿರೀಸ್‍ಗಳನ್ನು ನೋಡಿ ಮುಗಿಸುತ್ತಿದ್ದಾರೆ. ಹೀಗಾಗಿ ಜನರಿಗೆ ಮನರಂಜನೆ ನೀಡಲು ಸರ್ಕಾರ ರಾಮಬಾಣವನ್ನು ಬಿಟ್ಟಿದ್ದು, 80ರ ದಶಕದ ಪ್ರಸಿದ್ಧ ಟಿವಿ ಧಾರಾವಾಹಿ ರಾಮಾಯಣವು ಮತ್ತೊಮ್ಮೆ ದೂರದರ್ಶನ ಚಾನೆಲ್‍ನಲ್ಲಿ ನಾಳೆ ಆರಂಭವಾಗಲಿದೆ.
ಈ ಕುರಿತು ಟ್ವೀಟ್ ಮಾಡಿರುವ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವ್ಡೇಕರ್, ಸಾರ್ವಜನಿಕರ ಬೇಡಿಕೆಯ ಮೇರೆಗೆ ದೂರದರ್ಶನದ ರಾಷ್ಟ್ರೀಯ ಚಾನೆಲ್‍ನಲ್ಲಿ ಮಾರ್ಚ್ 28ರ ಶನಿವಾರ ‘ರಾಮಾಯಣ’ ಪ್ರಸಾರ ಮತ್ತೆ ಪ್ರಾರಂಭವಾಗಲಿದೆ. ಮೊದಲ ಎಪಿಸೋಡ್ ಬೆಳಗ್ಗೆ 9ಕ್ಕೆ ಮತ್ತು ಎರಡನೇ ಎಪಿಸೋಡ್ ರಾತ್ರಿ 9ಕ್ಕೆ ಪ್ರಸಾರವಾಗಲಿದೆ ಎಂದು ತಿಳಿಸಿದ್ದಾರೆ.
Happy to announce that on public demand, we are starting retelecast of 'Ramayana' from tomorrow, Saturday March 28 in DD National, One episode in morning 9 am to 10 am, another in the evening 9 pm to 10 pm.@narendramodi@PIBIndia@DDNational
ಅಷ್ಟೇ ಅಲ್ಲ ಬಿ.ಆರ್.ಚೋಪ್ರಾ ಅವರ ಪ್ರಸಿದ್ಧ ಧಾರಾವಾಹಿ ‘ಮಹಾಭಾರತ’ವನ್ನು ಮರು ಪ್ರಸಾರ ಮಾಡುವ ಸಾಧ್ಯತೆಯನ್ನೂ ಸರ್ಕಾರ ಪರಿಶೀಲಿಸುತ್ತಿದೆ. ರಾಮಾನಂದ್ ಸಾಗರ್ ಅವರ ‘ರಾಮಾಯಣ’ ಮೊದಲ ಬಾರಿಗೆ 1987ರಲ್ಲಿ ಪ್ರಸಾರವಾಗಿತ್ತು. ಬಿ.ಆರ್.ಚೋಪ್ರಾ ಅವರ ‘ಮಹಾಭಾರತ’ 1988ರಲ್ಲಿ ದೂರದರ್ಶನದಲ್ಲಿ ಮೊದಲ ಬಾರಿಗೆ ಪ್ರಸಾರವಾಗಿತ್ತು.
ಕೊರೊನಾ ವೈರಸ್ ಸೋಂಕಿನಿಂದಾಗಿ 21 ದಿನಗಳ ಲಾಕ್‍ಡೌನ್ ಘೋಷಣೆಯಾದಾಗಿನಿಂದಲೂ ಜನರು ಸಾಮಾಜಿಕ ಜಾಲತಾಣದಲ್ಲಿ ‘ರಾಮಾಯಣ’ ಮತ್ತು ‘ಮಹಾಭಾರತ’ವನ್ನು ದೂರದರ್ಶನದಲ್ಲಿ ಮರು ಪ್ರಸಾರ ಮಾಡುವಂತೆ ಸಚಿವರಿಗೆ ಒತ್ತಾಯಿಸಿದ್ದರು. ಇದರಿಂದಾಗಿ ಸಚಿವ ಪ್ರಕಾಶ್ ಜಾವ್ಡೇಕರ್ ಅವರ ಸಲಹೆಯಿಂದ ಪ್ರಸಾರ ಭಾರತಿ ಸಿಇಒ ಶಶಿ ಶೇಖರ್ ಅವರು ‘ರಾಮಾಯಣ’ ಮತ್ತು ‘ಮಹಾಭಾರತ’ ಹಕ್ಕುದಾರರೊಂದಿಗೆ ಮಾತುಕತೆ ನಡೆಸಿದ್ದಾರೆ.
— Prasar Bharati प्रसार भारती (@prasarbharati) March 27, 2020
80ರ ದಶಕದ ಉತ್ತರಾರ್ಧದಲ್ಲಿ ‘ರಾಮಾಯಣ’ ಮತ್ತು ‘ಮಹಾಭಾರತ’ ಧಾರಾವಾಹಿಗಳು ತಮ್ಮ ಪ್ರಸಾರದ ಸಮಯದಲ್ಲಿ ರಸ್ತೆಗಳಲ್ಲಿ ಜನರನ್ನು ನಿರ್ಜನಗೊಳಿಸುತ್ತಿದ್ದವು. ಎರಡೂ ಧಾರಾವಾಹಿಗಳನ್ನು ಭಾರತೀಯ ಟಿವಿ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ಧಾರಾವಾಹಿಗಳೆಂದು ಪರಿಗಣಿಸಲಾಗಿದೆ. ‘ರಾಮಾಯಣ’ ಮತ್ತು ‘ಮಹಾಭಾರತ’ಗಳನ್ನು 55 ದೇಶಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಜನರು ವೀಕ್ಷಿಸಿದ್ದರು.
ನವದೆಹಲಿ: ದೂರದರ್ಶನ ಐಕಾನಿಕ್ ಲೋಗೋ ಶೀಘ್ರವೇ ಇತಿಹಾಸ ಸೇರಲಿದೆ. ಈ ಸಂಬಂಧ 5 ಹೊಸ ಲೋಗೋಗಳನ್ನು ಶಾರ್ಟ್ ಲಿಸ್ಟ್ ಮಾಡಿದ್ದು, ಇವುಗಳ ಪೈಕಿ ಅಂತಿಮವಾಗಿ ಒಂದು ಆಯ್ಕೆ ಅಗಲಿದೆ.
2017 ಜುಲೈ ಮತ್ತು ಆಗಸ್ಟ್ ನಡುವೆ ದೂರದರ್ಶನ್ ಲೋಗೋ ಸ್ಪರ್ಧೆ ನಡೆಸಿತ್ತು. ಈ ಸ್ಪರ್ಧೆಯಲ್ಲಿ 10 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು. ಈಗ 5 ಲೋಗೋಗಳನ್ನು ಅಂತಿಮ ಹಂತದ ಸುತ್ತಿಗೆ ಆಯ್ಕೆ ಮಾಡಲಾಗಿದೆ.
— Shashi Shekhar Vempati शशि शेखर (@shashidigital) May 20, 2019
ಪ್ರಸಾರ ಭಾರತಿಯ ಸಿಇಒ ಶಶಿ ಶೇಖರ್ ಟ್ವೀಟ್ ಮಾಡಿ 10 ಸಾವಿರ ಎಂಟ್ರಿಯಲ್ಲಿ ಟಾಪ್ 5 ಲೋಗೋವನ್ನು ಆಯ್ಕೆ ಮಾಡಲಾಗಿದೆ. ಈ ಲೋಗೋ ಪೈಕಿ ಅಂತಿಮವಾಗಿ ಒಂದನ್ನು ಅಂತಿಮಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಡಿಡಿಗೆ ಹೊಸ ಬ್ರಾಂಡ್ ನೀಡಲು ಮತ್ತು ದೂರದರ್ಶನದತ್ತ ಯುವ ಜನರನ್ನು ಸೆಳೆಯಲು ಈ ಲೋಗೋ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಮೊದಲ ಸ್ಥಾನ ಪಡೆದವರಿಗೆ 10 ಸಾವಿರ ರೂ. ನಗದು ಬಹುಮಾನ ನೀಡಲಾಗುತ್ತದೆ.
ಯುವಕನೊಬ್ಬ ಟಿಕ್ ಟಾಕ್‍ನಲ್ಲಿ ದೂರದರ್ಶನದ ಟ್ಯೂನಿಗೆ ಡ್ಯಾನ್ಸ್ ಮಾಡಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಯುವಕನ ಡ್ಯಾನ್ಸ್ ನೋಡಿ ಸ್ವತಃ ದೂರದರ್ಶನ ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದೆ.
ವೈಶಾಕ್ ನಾಯರ್ ದೂರದರ್ಶನದ ಟ್ಯೂನಿಗೆ ಡ್ಯಾನ್ಸ್ ಮಾಡಿದ್ದು, ಈ ವಿಡಿಯೋವನ್ನು @Ya5Ne ತನ್ನ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿಕೊಂಡಿದ್ದಾರೆ. ಪ್ರತಿ ನ್ಯೂಸ್ ಬುಲೆಟಿನ್ ಶುರುವಾಗುವ ಮೊದಲು ಹಾಗೂ ಯಾವುದೇ ಕಾರ್ಯಕ್ರಮ ಶುರುವಾಗುವ ಮೊದಲು ದೂರದರ್ಶನ ಈ ಟ್ಯೂನ್ ಬಳಸುತ್ತಿತ್ತು.
ವೈರಲ್ ಆಗಿರುವ ಈ ವಿಡಿಯೋದಲ್ಲಿ ವೈಶಾಕ್ ನಾಯರ್ ಆ ಟ್ಯೂನಿಗೆ ತಕ್ಕಂತೆ ಹಜ್ಜೆ ಹಾಕಿದ್ದಾರೆ. ಅಲ್ಲದೇ ಮ್ಯೂಸಿಕ್ ಚೇಂಚ್ ಆಗುತ್ತಿದ್ದಂತೆ ತನ್ನ ಬಾಡಿ ಮೂವ್‍ಮೆಂಟ್ಸ್ ಕೂಡ ಚೇಂಜ್ ಮಾಡಿ ಡ್ಯಾನ್ಸ್ ಮಾಡಿದ್ದು, ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ವಿಡಿಯೋ ನೋಡಿ ದೂರದರ್ಶನದ ಡೈರೆಕ್ಟರ್ ಜನರಲ್ ಸುಪ್ರಿಯಾ ಸಾಹು ಈ ವಿಡಿಯೋವನ್ನು ಟ್ವೀಟ್ ಮಾಡಿ ಅದಕ್ಕೆ, “ಅದ್ಭುತವಾದ ಡ್ಯಾನ್ಸ್. ಡಿಡಿ ಟ್ಯೂನ್ ಅದ್ಭುತ ಹಾಗೂ ಶಕ್ತಿಯುತವಾದದ್ದು, ಇದು ಭಾರತದ ಹೃದಯಬಡಿತ. ದೇಶ್ ಕೀ ದಡಕನ್” ಎಂದು ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸದ್ಯ ಈ ವಿಡಿಯೋ ಇದುವರೆಗೂ 2 ಲಕ್ಷಕ್ಕೂ ಹೆಚ್ಚು ವ್ಯೂ ಪಡೆದಿದ್ದು, 13 ಸಾವಿರಕ್ಕೂ ಹೆಚ್ಚು ಮಂದಿ ಲೈಕ್ ಮಾಡಿದ್ದಾರೆ. ಅಲ್ಲದೇ 5 ಸಾವಿರಕ್ಕೂ ಹೆಚ್ಚು ಮಂದಿ ರೀ-ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Fabulous act 😁! Absolutely fantastic and energetic like the iconic DD tune .. India’s heartbeat – Desh ki Dhadkan Video courtesy – Whatsapp pic.twitter.com/Gw0kCCqEAA
ಮುಂಬೈ: ಬೆಳಗ್ಗೆ ವಾಕಿಂಗ್ ಹೋಗುತ್ತಿದ್ದ ಸಂದರ್ಭದಲ್ಲಿ ತಲೆ ಮೇಲೆ ತೆಂಗಿನ ಮರ ಬಿದ್ದ ಪರಿಣಾಮ ದೂರದರ್ಶನದ ಮಾಜಿ ನಿರೂಪಕಿ ಹಾಗೂ ಯೋಗ ಶಿಕ್ಷಕಿ ಗಂಭೀರವಾಗಿ ಗಾಯಗೊಂಡು ಸಾವನಪ್ಪಿದ ಘಟನೆ ಮುಂಬೈನ ಚೆಂಬೂರ್‍ನಲ್ಲಿ ನಡೆದಿದೆ.
58 ವರ್ಷದ ಕಂಚನ್ ನಾಥ್ ಮೃತ ದುರ್ದೈವಿ ಮಹಿಳೆ. ಈ ಘಟನೆ ಗುರುವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ನಡೆದಿದೆ. ಕಂಚನ್ ಎಂದಿನಂತೆ ಗುರುವಾರ ಬೆಳಗ್ಗೆ ಮನೆಯ ಬಳಿ ವಾಕಿಂಗ್ ಹೋಗಿದ್ದರು. ವಾಕಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಆಕೆಯ ತಲೆಯ ಮೇಲೆ ಹಠಾತ್ತನೆ ತೆಂಗಿನ ಮರವೊಂದು ಬಿದ್ದಿದೆ. ಪರಿಣಾಮ ಕಂಚನ್ ರಸ್ತೆಯಲ್ಲೇ ಕುಸಿದು ಬಿದ್ದಿದ್ದಾರೆ. ಅವರ ತಲೆಗೆ ಗಂಭೀರವಾಗಿ ಗಾಯಗಳಾಗಿದ್ದು, ಕೂಡಲೇ ಸ್ಥಳೀಯರು ಕಂಚನ್ ಅವರನ್ನು ತೆಂಗಿನ ಮರದಡಿಯಿಂದ ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯ ಹತ್ತಿರದ ಅಂಗಡಿಯಲ್ಲಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮುಂಬೈ ಮಹಾನಗರ ಪಾಲಿಕೆಯ ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿದೆ. ಈ ಮರ ಯಾವ ಸಮಯದಲ್ಲಾದ್ರೂ ಬೀಳಬಹುದು ಎಂದು ತಿಳಿಸಿದ್ದರೂ ಕೂಡ ಮರವನ್ನು ಕಡಿಯಲು ಸೊಸೈಟಿಗೆ ಅವಕಾಶ ನೀಡಿರಲಿಲ್ಲ ಅಂತ ಕಂಚನ್ ಅವರ ಪತಿ ರಜತ್‍ನಾಥ್ ಹೇಳಿಕೆ ನೀಡಿದ್ದಾರೆ.
ಆದ್ರೆ ಮರ ಒಳ್ಳೆಯ ಸ್ಥಿತಿಯಲ್ಲೇ ಇದ್ದಿದ್ದರಿಂದ ಅದನ್ನು ಕಡಿಯಲು ಅನುಮತಿ ನಿರಾಕರಿಸಲಾಗಿತ್ತು ಎಂದು ಸ್ಥಳೀಯ ಕಾರ್ಪೊರೇಟರ್ ಆಶಾ ಮರಾಠೆ ಹೇಳಿದ್ದಾರೆ.