Tag: DOT

  • 67 ಪೋರ್ನ್ ವೆಬ್‌ಸೈಟ್‌ಗಳು ಬ್ಲಾಕ್ – ಕೇಂದ್ರ ಆದೇಶ

    67 ಪೋರ್ನ್ ವೆಬ್‌ಸೈಟ್‌ಗಳು ಬ್ಲಾಕ್ – ಕೇಂದ್ರ ಆದೇಶ

    ನವದೆದಲಿ: 2021ರ ಐಟಿ ನಿಯಮ (IT Rules) ಉಲ್ಲಂಘಿಸಿದ್ದಕ್ಕಾಗಿ 67 ಪೋರ್ನ್ ವೆಬ್‌ಸೈಟ್‌ಗಳನ್ನು (Pornographic Websites) ಬ್ಲಾಕ್ ಮಾಡಿವಂತೆ ಕೇಂದ್ರ ಸರ್ಕಾರ (Central Government) ಇಂರ್ಟರ್‌ನೆಟ್ ಸೇವಾ ಪೂರೈಕೆದಾರರಿಗೆ ನೋಟಿಸ್ ನೀಡಿದೆ.

    ಭಾರತದಲ್ಲಿ ಅಶ್ಲೀಲ ಅಥವಾ ಪೋರ್ನ್ ವೆಬ್‌ಸೈಟ್‌ಗಳನ್ನು ಪ್ರಕಟಿಸುವುದು ಅಥವಾ ವೀಕ್ಷಿಸುವುದು ಕಾನೂನು ಬಾಹಿರ. ಆದರೂ ವಿವಿಧ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 67 ಪೋರ್ನ್ ವೆಬ್‌ಸೈಟ್‌ಗಳನ್ನು ಬ್ಲಾಕ್ ಮಾಡಲು ಕೇಂದ್ರ ಸರ್ಕಾರ ಆದೇಶಿಸಿದೆ. ಇದನ್ನೂ ಓದಿ: ಸೂಕ್ತ ಒಳಉಡುಪು ಧರಿಸಲೇಬೇಕು – ಪಾಕ್ ವಿಮಾನಯಾನ ಸಂಸ್ಥೆ ಆದೇಶ

    ಪುಣೆ ನ್ಯಾಯಾಲಯದ (Pune Court) ಆದೇಶದ ಆಧಾರದ ಮೇಲೆ 63 ವೆಬ್‌ಸೈಟ್‌ಗಳು ಹಾಗೂ ಉತ್ತರಾಖಂಡ ಹೈಕೋರ್ಟ್ (Uttarakhand High court) ಆದೇಶದ ಆಧಾರದ ಮೇಲೆ 4 ವೆಬ್‌ಸೈಟ್‌ಗಳನ್ನು ನಿರ್ಬಂಧಿಸುವಂತೆ ಟೆಲಿಕಾಂ ಸಂಸ್ಥೆ (DOT) ಇಮೇಲ್ ಮೂಲಕ ಇಂಟರ್ನೆಟ್ ಸೇವಾ ಪೂರೈಕೆದಾರ ಕಂಪೆನಿಗಳಿಗೆ ಸೂಚಿಸಿದೆ. ಇದನ್ನೂ ಓದಿ: ದೇಗುಲಕ್ಕೆ 8 ಕೋಟಿ ಮೌಲ್ಯದ ನೋಟುಗಳಿಂದ ಅಲಂಕಾರ – ಗೋಡೆ, ನೆಲದಲ್ಲೆಲ್ಲ ನೋಟಿನ ದರ್ಬಾರ್

    ನ್ಯಾಯಾಲಯದ ಆದೇಶಗಳನ್ನು ಅನುಸರಿಸಿ ಮತ್ತು 2021ರಲ್ಲಿ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ ಹೊಸ ಐಟಿ ನಿಯಮಗಳ ಉಲ್ಲಂಘನೆಗಾಗಿ ಒಟ್ಟು 67 ಪೋರ್ನ್ ವೆಬ್‌ಸೈಟ್‌ಗಳಿಗೆ ಪ್ರವೇಶವನ್ನು ನಿರ್ಬಂಧಿಸಲು ಇಂಟರ್ನೆಟ್ ಸೇವಾ ಪೂರೈಕೆದಾರರಿಗೆ ಸರ್ಕಾರ ಆದೇಶಿಸಿದ್ದು, ಈ ಕುರಿತು ಕೂಡಲೇ ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ. ಇಂಟರ್ನೆಟ್ ಸರ್ವೀಸ್ ಪ್ರೊವೈಡರ್‌ಗಳಿಗೆ ವೆಬ್‌ಸೈಟ್‌ಗಳ ಮಾಹಿತಿ, ಯೂಆರ್‌ಎಲ್ ನೀಡಿರುವ ಸರ್ಕಾರ, ಈ ವೆಬ್‌ಸೈಟ್‌ನಲ್ಲಿ ಮಹಿಳೆಯರ ಘನತೆಗೆ ಕಳಂಕ ತರುವ ಅಶ್ಲೀಲ ವೀಡಿಯೋಗಳು ಇವೆ. ಈ ವೀಡಿಯೋಗಳು ಮಾರ್ಫ್ ಮಾಡಲಾಗಿರುವ ವೀಡಿಯೋಗಳಾಗಿವೆ ಎಂದು ನೋಟಿಸ್‌ನಲ್ಲಿ ಹೇಳಿದೆ.

    Live Tv
    [brid partner=56869869 player=32851 video=960834 autoplay=true]

  • ಅ.1 ರಿಂದ ದೇಶದಲ್ಲಿ 5G ಸೇವೆ ಆರಂಭ – ಮೋದಿ ಚಾಲನೆ

    ಅ.1 ರಿಂದ ದೇಶದಲ್ಲಿ 5G ಸೇವೆ ಆರಂಭ – ಮೋದಿ ಚಾಲನೆ

    ನವದೆಹಲಿ: ಇದೇ ಅಕ್ಟೋಬರ್ 1 ರಂದು ದೇಶದ ಪ್ರಮುಖ ನಗರಗಳಲ್ಲಿ 5ಜಿ ಸೇವೆ ಪ್ರಾರಂಭವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) 5ಜಿ ಸೇವೆಗೆ ಚಾಲನೆ ನೀಡಲಿದ್ದಾರೆ ಎಂದು ಸರ್ಕಾರದ ರಾಷ್ಟ್ರೀಯ ಬ್ರಾಡ್‌ಬ್ಯಾಂಡ್ ಮಿಷನ್ (National Broadband Mission) ಟ್ವೀಟ್ ಮಾಡಿದೆ.

    https://twitter.com/exploreIMC/status/1573563164100173824?cxt=HHwWgIClvYrXtdYrAAAA

    ಏಷ್ಯಾದ ಅತಿದೊಡ್ಡ ಟೆಲಿಕಾಂ ಸಂಸ್ಥೆಯಾದ ಇಂಡಿಯಾ ಮೊಬೈಲ್ ಕಾಂಗ್ರೆಸ್ (IMC), ದೂರ ಸಂಪರ್ಕ ಇಲಾಖೆ (DOT) ಹಾಗೂ ಸೆಕ್ಯೂಲರ್ ಆಪರೇಟರ್ಸ್‌ ಸೋಸಿಯೇಷನ್ ಆಫ್ ಇಂಡಿಯಾ (COAI) ಸಂಯುಕ್ತಾಶ್ರಯದಲ್ಲಿ ಅನಾವರಣಗೊಳ್ಳಲಿದ್ದು, ಈ ಮೂಲಕ ಡಿಜಿಟಲ್ ವೇದಿಕೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರಲಿದೆ. ಇದನ್ನೂ ಓದಿ: ಅಕ್ಟೋಬರ್‌ ವೇಳೆ ದೇಶದ ಮಹಾನಗರಗಳಲ್ಲಿ 5ಜಿ ಸೇವೆ ಲಭ್ಯ

    ಕೇಂದ್ರ ಸರ್ಕಾರ (Central Government) ಅತ್ಯಂತ ಕಡಿಮೆ ಅವಧಿಯಲ್ಲಿ ಶೇ.80 ಪ್ರತಿಶತದಷ್ಟು 5ಜಿ ಸೇವೆ (5G Service) ತಲುಪಿಸುವ ಗುರಿ ನೀಡಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ತಿಳಿಸಿಸಿದ್ದಾರೆ.

    ಅನೇಕ ದೇಶಗಳು ಶೇ.40 – 50 ಪ್ರತಿಶತದಷ್ಟು ಗುರಿ ತಲುಪುವುದಕ್ಕೇ ಹಲವು ವರ್ಷಗಳನ್ನು ತೆಗೆದುಕೊಂಡಿವೆ. ಆದರೆ ನಾವು ಟೈಮ್‌ಲೈನ್ ಗುರಿಯಾಗಿಸಿಕೊಂಡಿದ್ದು, ಕೇಂದ್ರ ಸರ್ಕಾರವೂ ನಿರ್ದಿಷ್ಟ ಗುರಿ ನೀಡಿದೆ. ಹಾಗಾಗಿ ನಾವು ಶೇ.80 ಪ್ರತಿಶತದಷ್ಟನ್ನು ತಲುಪಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: 5G ಹರಾಜು ಮುಕ್ತಾಯ – 1.5 ಲಕ್ಷ ಕೋಟಿ ತಲುಪಿದ ಒಟ್ಟು ಬಿಡ್ ಮೊತ್ತ

    ಈಗಾಗಲೇ 5ಜಿ ಸೇವೆ ಹೆಚ್ಚು ಪ್ರಯೋಜನಕಾರಿಯಾಗಲಿದೆ ಎಂದು ತಜ್ಞರು ಹೇಳಿದ್ದಾರೆ. ಇದು 2023 – 2024ರ ನಡುವೆ ಭಾರತಕ್ಕೆ 36.4 ಟ್ರಿಲಿಯನ್ ರೂ.ಗೆ ಆದಾಯ ವೃದ್ಧಿಸುವ ಸಾಧ್ಯತೆಯಿದೆ ಎಂದು ಇತ್ತೀಚಿನ ಜಾಗತಿಕ ಉದ್ಯಮ ಸಂಸ್ಥೆಗಳ ವರದಿ ಅಂದಾಜಿಸಿದೆ.

    5ಜಿ ಸೇವೆ ಎಲ್ಲಿ ಸಿಗುತ್ತೆ?
    2022ರ ಅಂತ್ಯಕ್ಕೆ ದೇಶದ ಪ್ರಮುಖ ನಗರಗಳಲ್ಲಿ 5ಜಿ ಸೇವೆ ಆರಂಭವಾಗಲಿದೆ. ಆರಂಭದಲ್ಲಿ ಅಹಮದಾಬಾದ್, ಬೆಂಗಳೂರು (Bengaluru), ಚಂಡೀಗಢ, ಚೆನ್ನೈ, ದೆಹಲಿ, ಗಾಂಧಿನಗರ, ಗುರುಗ್ರಾಮ, ಹೈದರಾಬಾದ್, ಜಾಮ್‌ನಗರ, ಕೋಲ್ಕತ್ತಾ, ಲಕ್ನೋ, ಮುಂಬೈ ಮತ್ತು ಪುಣೆಯಲ್ಲಿ 5ಜಿ ಸೇವೆ ಲಭ್ಯವಾಗಲಿದೆ.

    Live Tv
    [brid partner=56869869 player=32851 video=960834 autoplay=true]