Tag: Double Shade

  • ‘ದೇವರ’ ಸಿನಿಮಾದಲ್ಲಿ ಜಾಹ್ನವಿಯದ್ದು ಡಬಲ್ ಶೇಡ್ ಪಾತ್ರ

    ‘ದೇವರ’ ಸಿನಿಮಾದಲ್ಲಿ ಜಾಹ್ನವಿಯದ್ದು ಡಬಲ್ ಶೇಡ್ ಪಾತ್ರ

    ಜ್ಯೂನಿಯರ್ ಎನ್.ಟಿ.ಆರ್ ಜೊತೆ ನಟಿಸಿರುವ ದೇವರ (Devara) ಸಿನಿಮಾದಲ್ಲಿ ತಮ್ಮದು ಡಬಲ್ ಶೇಡ್  (Double Shade)ಪಾತ್ರವೆಂದು ಹೇಳಿಕೆ ನೀಡಿದ್ದಾರೆ ನಟಿ ಜಾಹ್ನವಿ ಕಪೂರ್. ಮೊದಲ ಸಿನಿಮಾದಲ್ಲೇ ತಮಗೆ ಅಂಥದ್ದೊಂದು ಪಾತ್ರ ಸಿಕ್ಕಿರುವುದು ಅದೃಷ್ಟವೆಂದೂ ಅವರು ಮಾತನಾಡಿದ್ದಾರೆ. ಎರಡೂ ಶೇಡ್ ಅನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ ಎನ್ನುವ ವಿಶ್ವಾಸವನ್ನೂ ವ್ಯಕ್ತಪಡಿಸಿದ್ದಾರೆ.

    ಈ ನಡುವೆ ಜಾಹ್ನವಿಗೆ ಸಾಕಷ್ಟು ಆಫರ್ಸ್ ಬರುತ್ತಿವೆ. ಮೊನ್ನೆಯಷ್ಟೇ ರಾಮ್ ಚರಣ್ (Ram Charan) ಮತ್ತು ಜಾಹ್ನವಿ ಕಪೂರ್ (Jahnavi Kapoor) ಕಾಂಬಿನೇಷನ್ ನ ಹೊಸ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಈ ಮುಹೂರ್ತ ಸಮಾರಂಭಕ್ಕೆ ರಾಮ್ ಚರಣ್ ತಂದೆ ಚಿರಂಜೀವಿ (Chiranjeevi), ಜಾಹ್ನವಿ ಕಪೂರ್ ತಂದೆ ಬೋನಿ ಕಪೂರ್ (Boney Kapoor) ಸಾಕ್ಷಿಯಾಗಿದ್ದು ವಿಶೇಷವಾಗಿತ್ತು. ತಮ್ಮ ಮಕ್ಕಳಿಗೆ ಈ ಸಿನಿಮಾ ಸಾಕಷ್ಟು ಗೆಲುವು ತಂದು ಕೊಡಲಿ ಎಂದು ಇಬ್ಬರೂ ತಮ್ಮ ತಮ್ಮ ಮಕ್ಕಳಿಗೆ ಹಾರೈಸಿದ್ದಾರೆ.

    ತ್ರಿಬಲ್ ಆರ್ ಸಿನಿಮಾದ ಯಶಸ್ಸಿನ ಬಳಿಕ ರಾಮ್ ಚರಣ್ ಗ್ಲೋಬಲ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಸದ್ಯ ಚೆರ್ರಿ ಶಂಕರ್ ನಿರ್ದೇಶನದ ಗೇಮ್ ಚೇಂಜರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಪ್ರಾಜೆಕ್ಟ್ ನಲ್ಲಿ ಬ್ಯುಸಿಯಾಗಿರುವ ರಾಮ್ ಚರಣ್ ಬುಚ್ಚಿ ಬಾಬು ಜೊತೆ ಕೈ ಜೋಡಿಸಿದ್ದಾರೆ. ಈ ಚಿತ್ರಕ್ಕೆ RC 16 ಎಂದು ಟೈಟಲ್ ಇಡಲಾಗಿದೆ. ಈ ಹೊಸ ಸಿನಿಮಾದ ಮುಹೂರ್ತ ಸಮಾರಂಭ  ನಿನ್ನೆ ಹೈದ್ರಾಬಾದ್ ನಲ್ಲಿ ನೆರವೇರಿದೆ.

     

    ನಿರ್ಮಾಪಕ ಅಲ್ಲು ಅರವಿಂದ್ ಅವರು ಬೌಂಡ್ ಸ್ಕ್ರಿಪ್ಟ್ ಅನ್ನು ನಿರ್ದೇಶಕ ಬುಚ್ಚಿ ಬಾಬು ಸನಾ ಅವರಿಗೆ ಹಸ್ತಾಂತರಿಸಿದರು. ರಾಮ್ ಚರಣ್ ಅವರ ಗೇಮ್ ಚೇಂಜರ್ ಚಿತ್ರವನ್ನು ನಿರ್ದೇಶಿಸುತ್ತಿರುವ ಸ್ಟಾರ್ ನಿರ್ದೇಶಕ ಶಂಕರ್ ಅವರು ಬೋನಿ ಕಪೂರ್ ಮತ್ತು ಅನ್ಮೋಲ್ ಶರ್ಮಾ ಕ್ಯಾಮೆರಾ ಚಾಲನೆ ನೀಡಿದರು.  ಮೆಗಾ ಸ್ಟಾರ್ ಚಿರಂಜೀವಿ ಕ್ಲಾಪ್ ಬೋರ್ಡ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು.

  • ‘ಕಾಟೇರ’ದಲ್ಲಿ ದರ್ಶನ್ ಡಬಲ್ ಶೇಡ್ ಪಾತ್ರ

    ‘ಕಾಟೇರ’ದಲ್ಲಿ ದರ್ಶನ್ ಡಬಲ್ ಶೇಡ್ ಪಾತ್ರ

    ನಾಳೆ ರಾಜ್ಯಾದ್ಯಂತ ಕಾಟೇರ ಸಿನಿಮಾ ಮುನ್ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಆಗುತ್ತಿದೆ. ಈಗಾಗಲೇ ಒಂದು ಲಕ್ಷ ಟಿಕೆಟ್ ಗಳು ಸೇಲ್ ಆಗಿದ್ದು, ಇಂದು ಮಧ್ಯರಾತ್ರಿಯಿಂದಲೇ ಹಲವು ಕಡೆ ಪ್ರದರ್ಶನಕ್ಕೆ ಏರ್ಪಾಟು ಮಾಡಲಾಗಿದೆ. ಈ ಸಿನಿಮಾದಲ್ಲಿ ದರ್ಶನ್ (Darshan) ಡಬಲ್ ಶೇಡ್ (Double Shade) ಪಾತ್ರವನ್ನು ಮಾಡಿದ್ದಾರೆ.

    ಕಾಟೇರ (Katera) ಸಿನಿಮಾದ ಟ್ರೈಲರ್ ಈಗಾಗಲೇ ರಿಲೀಸ್ ಆಗಿದೆ. ಅದ್ಭುತ ಪ್ರತಿಕ್ರಿಯೆ ಕೂಡ ವ್ಯಕ್ತವಾಗಿದೆ. ಹುಬ್ಬಳ್ಳಿಯಲ್ಲಿ ನಡೆದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ದರ್ಶನ್ ಸಿನಿಮಾ ಕುರಿತಾದ ಹಲವು ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಈ ಸಿನಿಮಾದ ಕಥೆಯು ನೈಜ ಘಟನೆಯನ್ನು ಆಧರಿಸಿದ್ದು, ಅದು ಇಂದಿರಾ ಗಾಂಧಿ (Indira Gandhi) ಕಾಲದ ಕಥೆಯಾಗಿದೆ ಎಂದು ಗುಟ್ಟು ಬಿಟ್ಟುಕೊಟ್ಟಿದ್ದಾರೆ.

    ಅದು 1974ರ ಕಾಲ. ಉಳುವವನೆ ಭೂಮಿಯ ಒಡೆಯ ಕಾನೂನು ಬಂದಾಗ ನಡೆದಿರುವ ಘಟನೆ. ಆವಾಗ ಬಾವಿಯೊಂದರಲ್ಲಿ ತುಂಬಾ ಜನರ ಮೂಳೆಗಳು ಸಿಕ್ಕಿದ್ದವು. ಆ ಮೂಳೆಗಳು ಯಾರವು ಅಂತ ಯಾರಿಗೂ ಗೊತ್ತಿಲ್ಲ. ಆ ಕಹಿ ಘಟನೆಯನ್ನು ಈ ಸಿನಿಮಾದಲ್ಲಿ ಹೇಳಲು ಹೊರಟಿದ್ದೇವೆ ಎಂದಿದ್ದಾರೆ ದರ್ಶನ್.

    ಟ್ರೈಲರ್, ಹಾಡುಗಳು ಅಭಿಮಾನಿಗಳ ಗಮನ ಸೆಳೆದಿವೆ. ಹಾಗಾಗಿ ಅಭಿಮಾನಿಗಳು ಫಸ್ಟ್ ಶೋ ನೋಡಲು ತುದಿಗಾಲಲ್ಲಿ ನಿಂತಿದ್ದಾರೆ. ಅಭಿಮಾನಿಗಳು ಹಬ್ಬದ ರೀತಿಯಲ್ಲಿ ಥಿಯೇಟರ್ ಗಳನ್ನು ಸಿಂಗಾರಗೊಳಿಸಿದ್ದಾರೆ.