Tag: Dowry

  • ವರದಕ್ಷಿಣೆ ಕಿರುಕುಳಕ್ಕೆ ಬಲಿಯಾಗಿದ್ದವಳು 2 ವರ್ಷದ ಬಳಿಕ ಪ್ರತ್ಯಕ್ಷ – ಕಾನೂನು ಕುಣಿಕೆಯಿಂದ ಪತಿ, ಅತ್ತೆ, ಮಾವ ಪಾರು!

    ವರದಕ್ಷಿಣೆ ಕಿರುಕುಳಕ್ಕೆ ಬಲಿಯಾಗಿದ್ದವಳು 2 ವರ್ಷದ ಬಳಿಕ ಪ್ರತ್ಯಕ್ಷ – ಕಾನೂನು ಕುಣಿಕೆಯಿಂದ ಪತಿ, ಅತ್ತೆ, ಮಾವ ಪಾರು!

    ಲಕ್ನೋ: 2023ರಲ್ಲಿ ಉತ್ತರ ಪ್ರದೇಶದಲ್ಲಿ (Uttar Pradesh) ವರದಕ್ಷಿಣೆ (Dowry) ಕಿರುಕುಳ ನೀಡಿ ಮಹಿಳೆಯೊಬ್ಬಳನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಮಹಿಳೆ 2 ವರ್ಷದ ಬಳಿಕ ಪತ್ತೆಯಾಗಿದ್ದು, ಪ್ರಕರಣದಲ್ಲಿ ಸಿಲುಕಿದ್ದ ಮಹಿಳೆಯ ಪತಿ, ಆಕೆಯ ಅತ್ತೆ ಹಾಗೂ ಮಾವ ಸೇರಿದಂತೆ 6 ಮಂದಿ ಕಾನೂನಿನ ಕುಣಿಕೆಯಿಂದ ಪಾರಾಗಿದ್ದಾರೆ.

    2023 ರಲ್ಲಿ ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ಪತಿಯ ಮನೆಯಿಂದ 20 ವರ್ಷದ ಮಹಿಳೆ ನಾಪತ್ತೆಯಾಗಿದ್ದಳು. ಈ ಸಂಬಂಧ 2023ರ ಅಕ್ಟೋಬರ್‌ 23 ರಂದು ನಾಪತ್ತೆಯಾದ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿತ್ತು. ತೀವ್ರ ಹುಡುಕಾಟದ ಬಳಿಕವೂ ಆಕೆ ಪತ್ತೆ ಆಗದೇ ಇದ್ದಿದ್ದರಿಂದ ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ಆಕೆಯ ಪೋಷಕರು ಪತಿ ಹಾಗೂ ಆತನ ಕುಟುಂಬಸ್ಥರ ವಿರುದ್ಧ ಆರೋಪಿಸಿದ್ದರು. ಬಳಿಕ ವರದಕ್ಷಿಣೆ ಕಿರುಕುಳ ನೀಡಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ಸಹ ನೀಡಿದ್ದರು. ಇದನ್ನೂ ಓದಿ: ಹೊನ್ನಾವರ | ಮನೆಕೆಲಸದಾಕೆ ಮುಂದೆ ಬೆತ್ತಲಾಗಿ ಓಡಾಟ, ಸೆಕ್ಸ್‌ಗೆ ಒತ್ತಾಯ – ಮಾಲೀಕನ ವಿರುದ್ಧ ಎಫ್‌ಐಆರ್‌

    ತನಿಖೆ ನಡೆಸಿದ್ದ ಪೊಲೀಸರಿಗೆ ಮಹಿಳೆಯ ಯಾವ ಕುರುಹುಗಳು ಪತ್ತೆಯಾಗಿರಲಿಲ್ಲ. ನ್ಯಾಯಾಲಯದ ಆದೇಶದಂತೆ ಮಹಿಳೆಯ ಪತಿ ಹಾಗೂ 6 ಮಂದಿಯ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು. ಈಗ ಮಹಿಳೆ ಮಧ್ಯಪ್ರದೇಶದಲ್ಲಿ ಪ್ರತ್ಯಕ್ಷಳಾಗಿದ್ದಾಳೆ.

    ಮಹಿಳೆ ಮಧ್ಯಪ್ರದೇಶದಲ್ಲಿ ಏನು ಮಾಡುತ್ತಿದ್ದಳು ಮತ್ತು ಇಷ್ಟು ದಿನ ಆಕೆ ಕುಟುಂಬಸ್ಥರನ್ನು ಏಕೆ ಸಂಪರ್ಕಿಸಲಿಲ್ಲ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಈಗಾಗಲೇ ನ್ಯಾಯಾಲಯದಲ್ಲಿ ನಡೆಯುತ್ತಿರುವ ವರದಕ್ಷಿಣೆ ಹತ್ಯೆ ಪ್ರಕರಣದ ಮೇಲೆ ಇದು ಪರಿಣಾಮ ಬೀರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಸರ್ಕಾರಿ ಕೆಲಸ ಉಳಿಸಿಕೊಳ್ಳಲು ಹಸುಗೂಸನ್ನು ಕಾಡಿಗೆ ಎಸೆದ ದಂಪತಿ

  • ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ – ಎಸ್.ನಾರಾಯಣ್, ಪತ್ನಿ, ಪುತ್ರನಿಗೆ ನೋಟಿಸ್

    ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ – ಎಸ್.ನಾರಾಯಣ್, ಪತ್ನಿ, ಪುತ್ರನಿಗೆ ನೋಟಿಸ್

    -3 ದಿನದೊಳಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್

    ಬೆಂಗಳೂರು: ಸೊಸೆಗೆ ವರದಕ್ಷಿಣೆ ಕಿರುಕುಳ ನೀಡುತ್ತಿರುವ ಆರೋಪದ ಮೇಲೆ ಸಿನಿಮಾ ನಿರ್ದೇಶಕ ಎಸ್.ನಾರಾಯಣ್, ಪತ್ನಿ ಹಾಗೂ ಪುತ್ರನ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ.

    ಎಸ್.ನಾರಾಯಣ್ ಅವರ ಎರಡನೇ ಮಗನ ಪತ್ನಿ ಪವಿತ್ರಾ ಗುರುವಾರ (ಸೆ.11) ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮದುವೆಯಲ್ಲಿ ವರದಕ್ಷಿಣೆ ಕೊಟ್ಟಿದ್ದರೂ ಹೆಚ್ಚಿನ ಹಣಕ್ಕೆ ಒತ್ತಾಯ ಮಾಡುತ್ತಿದ್ದಾರೆ. ಹಲ್ಲೆ ನಡೆಸಿ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು. ದೂರಿನನ್ವಯ ಪ್ರಕರಣ ದಾಖಲಾಗಿದ್ದು, ಸದ್ಯ ಪೊಲೀಸರು ಮೂರು ದಿನದೊಳಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.ಇದನ್ನೂ ಓದಿ: ಎಲ್ಲಾ ಹೆಣ್ಮಕ್ಕಳು ಮಾಡೋದು ವರದಕ್ಷಿಣೆ ಆರೋಪವೊಂದೇ ತಾನೆ – ಎಸ್‌. ನಾರಾಯಣ್‌

    ಈಗಾಗಲೇ ಪವಿತ್ರಾ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರ್.ಆರ್.ನಗರದಲ್ಲಿರುವ ಎಸ್.ನಾರಾಯಣ್ ನಿವಾಸದಲ್ಲಿ ಮಹಜರು ನಡೆಸಿದ್ದಾರೆ. ಜೊತೆಗೆ ಮಹಜರು ವೇಳೆ ಎಸ್.ನಾರಾಯಣ್ ಹಾಗೂ ಕುಟುಂಬಸ್ಥರಿಂದ ಪ್ರಾಥಮಿಕ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಇನ್ನೂ ದೂರು ನೀಡಿರುವ ಪವಿತ್ರಾ ಅವರಿಗೂ ಕೂಡ ಪೊಲೀಸರು ನೋಟಿಸ್ ನೀಡಿದ್ದು, ದೂರಿನಲ್ಲಿ ಉಲ್ಲೇಖಿಸಿದಂತೆ ಸಾಕ್ಷ್ಯಾಧಾರಗಳನ್ನು ಒದಗಿಸುವಂತೆ ತಿಳಿಸಿದ್ದಾರೆ.

    ಪವಿತ್ರಾ ದೂರಿನಲ್ಲಿ ಏನಿದೆ?
    ಸಿನಿಮಾ ಆಡಿಷನ್‌ನಲ್ಲಿ ಎಸ್.ನಾರಾಯಣ್ ಪುತ್ರ ಪವನ್ ಪರಿಚಯವಾಗಿತ್ತು, ಅಲ್ಲಿಂದ ಪ್ರೇಮ ಶುರುವಾಗಿ ಬಳಿಕ ನಾನು ಹಾಗೂ ಪವನ್ 2021ರಲ್ಲಿ ಮದುವೆಯಾದೆವು. ನಮ್ಮದು ಲವ್ ಕಮ್ ಅರೇಂಜ್ ಮ್ಯಾರೇಜ್. 2022ರಲ್ಲಿ ಎಸ್.ನಾರಾಯಣ್ ನಿವಾಸದಿಂದ ಹೊರಬಂದು ಬೇರೆಡೆ ಪ್ರತ್ಯೇಕವಾಗಿ ವಾಸವಾಗಿದ್ವಿ. ಪವನ್ ಓದಿರದ ಕಾರಣ ಕೆಲಸ ಇಲ್ಲದೆ ಮನೆಯಲ್ಲಿಯೇ ಇದ್ದರು. ಇದರಿಂದಾಗಿ ನಾನೇ ಕೆಲಸಕ್ಕೆ ಹೋಗಿ ಮನೆ ಸಾಗಿಸುತ್ತಿದ್ದೆ. ನಂತರ ಪವನ್ ಕಲಾ ಸಾಮ್ರಾಟ್ ಟೀಂ ಅಕಾಡೆಮಿ ಎಂಬ ಫಿಲ್ಮ್ ಇನ್ಸ್ಟಿಟ್ಯೂಟ್ ಪ್ರಾರಂಭಿಸಬೇಕೆಂದು ಯೋಚಿಸಿದ್ದರು. ಇದಕ್ಕಾಗಿ ನನ್ನ ಬಳಿ ದುಡ್ಡು ಕೇಳಿದ್ದರು. ಆಗ ನನ್ನ ತಾಯಿಯ ಒಡವೆ ಕೊಟ್ಟಿದ್ದೆ. ಆದ್ರೆ ಬಳಿಕ ಲಾಸ್ ಆಗಿ ಇನ್‌ಸ್ಟಿಟ್ಯೂಟ್‌ ಮುಚ್ಚಬೇಕಾದ ಪರಿಸ್ಥಿತಿ ಬಂತು.

    ಮದುವೆಯಲ್ಲಿ 1 ಲಕ್ಷ ರೂ. ಮೌಲ್ಯದ ಉಂಗುರ ಹಾಗೂ ಮದುವೆ ಖರ್ಚು ನೋಡಿಕೊಂಡಿದ್ದೆವು. ವರದಕ್ಷಿಣೆ ಕೊಟ್ರೂ ಹಲ್ಲೆ ನಡೆಸಿ ಹೆಚ್ಚಿನ ಹಣಕ್ಕೆ ಒತ್ತಾಯಿಸಿದ್ದಾರೆ. ಹೀಗಾಗಿ ಜಗಳ ಆಗಿ ನನ್ನನ್ನು ಮನೆಯಿಂದ ಆಚೆ ಹಾಕಿದ್ದರು. ಇದರಿಂದ ನನಗೆ ಹಾಗೂ ನನ್ನ ಮಗನಿಗೆ ತೊಂದರೆಯಾಗುತ್ತೆ, ಒಂದು ವೇಳೆ ಏನಾದರೂ ಆದರೆ ಇವರುಗಳೇ ಕಾರಣ ಎಂದು ಆರೋಪಿಸಿ, ಕ್ರಮಕ್ಕಾಗಿ ಮನವಿ ಮಾಡಿಕೊಂಡಿದ್ದರು.ಇದನ್ನೂ ಓದಿ: ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ – ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್

  • ಎಲ್ಲಾ ಹೆಣ್ಮಕ್ಕಳು ಮಾಡೋದು ವರದಕ್ಷಿಣೆ ಆರೋಪವೊಂದೇ ತಾನೆ – ಎಸ್‌. ನಾರಾಯಣ್‌

    ಎಲ್ಲಾ ಹೆಣ್ಮಕ್ಕಳು ಮಾಡೋದು ವರದಕ್ಷಿಣೆ ಆರೋಪವೊಂದೇ ತಾನೆ – ಎಸ್‌. ನಾರಾಯಣ್‌

    – ಒಂದು ವರ್ಷದ ಹಿಂದೆಯೇ ಮನೆಬಿಟ್ಟು ಹೋಗಿದ್ದಾರೆ
    – ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪಕ್ಕೆ ಪ್ರತಿಕ್ರಿಯೆ

    ಬೆಂಗಳೂರು: ಒಂದು ವರ್ಷದ ಹಿಂದೆಯೇ ಸೊಸೆ ಮನೆ ಬಿಟ್ಟು ಹೋಗಿದ್ರು. ಈಗ ದೂರು ವರದಕ್ಷಿಣೆ (Dowry0 ಕಿರುಕುಳ ಅಂತ ದೂರು ಕೊಟ್ಟಿದ್ದಾರೆ. ರೆಗ್ಯೂಲರ್‌ ಆಗಿ ನಮ್ಮ ದೇಶದಲ್ಲಿ ಎಲ್ಲಾ ಹೆಣ್ಮಕ್ಕಳು ಮಾಡೋದು ಅದೊಂದೇ ತಾನೆ ಎಂದ‌ ನಿರ್ದೇಶಕ ಎಸ್‌. ನಾರಾಯಣ್‌ (S Narayana) ಹೇಳಿದ್ದಾರೆ.

    ಸೊಸೆ ಕೊಟ್ಟ ದೂರಿನ ಬಗ್ಗೆ ʻಪಬ್ಲಿಕ್‌ ಟಿವಿʼಗೆ (Public TV0 ಅವರು ಪ್ರತಿಕ್ರಿಯೆ ನೀಡಿದ್ದಾರೆ. ನಾವೇನೋ ಹಿಂಸೆ ಕೊಟ್ಟಿದ್ದೇವೆ ಅಂತ ದೂರು ಕೊಟ್ಟಿದ್ದಾರೆ. ಅದು ಕೋರ್ಟಿಗೆ ಹೋಗಿದೆ. ನಾವು ಅದರ ಬಗ್ಗೆ ಹೇಳಿದ್ರೆ ಅವರಿಗೇ ಅವಮಾನ ಮಾಡಿದಂತೆ ಆಗುತ್ತೆ. ಪಾಪ ಹೆಣ್ಮಗು ಅಲ್ವಾ? ಅವರಿಗೆ ತೇಜೋವಧೆ ಮಾಡಬಾರದು ಅಂತ ಹೇಳಿದ್ದಾರೆ. ಇದನ್ನೂ ಓದಿ: ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ – ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್

    ಇನ್ನೂ ವರದಕ್ಷಿಣ ಕಿರುಕುಳ ಅಂತ ಆರೋಪ ಮಾಡಿದ್ದರೆ ಅನ್ನೋ ಪ್ರಶ್ನೆಗೆ ಪ್ರತಿಕ್ರಿಯಿಸಿ, ರೆಗ್ಯೂಲರ್‌ ಆಗಿ ನಮ್ಮ ದೇಶದಲ್ಲಿ ಎಲ್ಲಾ ಹೆಣ್ಮಕ್ಕಳು ಮಾಡೋದು ಅದೊಂದೇ ತಾನೆ. ಬೇರೆ ಇನ್ನೇನಾದ್ರೂ ಸಿಗುತ್ತಾ? ಅವರು ಮನೆ ಬಿಟ್ಟು ಹೋಗಿ ಒಂದು ವರ್ಷ ಆಯ್ತು. ಈಗ ದೂರು ಕೊಟ್ಟಿದ್ದಾರೆ. ಅವರಿಗೆ ಸುಃಖ, ಸಂತೋಷ ಎಲ್ಲಿ ಸಿಗುತ್ತೋ ಅಲ್ಲಿಗೆ ಹೋಗಿದ್ದಾರೆ. ನನ್ನ ವ್ಯಕ್ತಿತ್ವ ಎಲ್ಲರಿಗೂ ಗೊತ್ತು, ನಾವು ಸದಾ ಹೆಣ್ಮಕ್ಕಳನ್ನ ಗೌರವರಿಂದ ಕಾಣುವಂತಹವರು ಅಂತ ತಿಳಿಸಿದ್ದಾರೆ. ಇದನ್ನೂ ಓದಿ: ದರ್ಶನ್‌ಗೆ 40 ನಿಮಿಷ ಜೈಲಿನಲ್ಲಿ ವಾಕಿಂಗ್‌ಗೆ ಅವಕಾಶ

    ಎಫ್‌ಐಆರ್‌ ಏಕೆ?
    ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಖ್ಯಾತ ಚಿತ್ರ ನಿರ್ದೇಶಕ ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಸ್.ನಾರಾಯಣ್ ಅವರ 2ನೇ ಮಗನ ಪತ್ನಿ ಪವಿತ್ರಾ ದೂರು ದಾಖಲಿಸಿದ್ದಾರೆ. ದೂರಿನನ್ವಯ ಎಸ್.ನಾರಾಯಣ್, ಪತ್ನಿ ಭಾಗ್ಯಲಕ್ಷ್ಮಿ, ಪತಿ ಪವನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮದುವೆಯಲ್ಲಿ ವರದಕ್ಷಿಣೆ ಕೊಟ್ಟಿದ್ದರೂ ಹೆಚ್ಚಿನ ಹಣಕ್ಕೆ ಒತ್ತಾಯ ಮಾಡುತ್ತಿದ್ದಾರೆ. ಹಲ್ಲೆ ನಡೆಸಿ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಅಮೆರಿಕದಲ್ಲಿ ವಿನಯ್ & ವಂದಿತಾ ಜೊತೆ ರಮ್ಯಾ ಸುತ್ತಾಟ

    ದೂರಿನಲ್ಲಿ ಏನಿದೆ?
    ನಾನು ಹಾಗೂ ಎಸ್.ನಾರಾಯಣ್ ಪುತ್ರ ಪವನ್ 2021ರಲ್ಲಿ ಮದುವೆಯಾದೆವು. ಪವನ್ ಓದಿರದ ಕಾರಣ ಕೆಲಸ ಇಲ್ಲದೆ ಮನೆಯಲ್ಲಿಯೇ ಇದ್ದರು. ಇದರಿಂದಾಗಿ ನಾನೇ ಕೆಲಸಕ್ಕೆ ಹೋಗಿ ಮನೆ ಸಾಗಿಸುತ್ತಿದ್ದೆ. ನಂತರ ಪವನ್ ಕಲಾ ಸಾಮ್ರಾಟ್ ಟೀಂ ಅಕಾಡೆಮಿ ಎಂಬ ಫಿಲ್ಮ್ ಇನ್ಸ್ಟಿಟ್ಯೂಟ್ ಪ್ರಾರಂಭಿಸಬೇಕೆಂದು ಯೋಚಿಸಿದ್ದರು. ಇದಕ್ಕಾಗಿ ನನ್ನ ಬಳಿ ದುಡ್ಡು ಕೇಳಿದ್ದರು. ಆಗ ನನ್ನ ತಾಯಿಯ ಒಡವೆ ಕೊಟ್ಟಿದ್ದೆ. ಆದ್ರೆ ಬಳಿಕ ಲಾಸ್ ಆಗಿ ಇನ್ಸ್ಟಿಟ್ಯೂಟ್ ಮುಚ್ಚಬೇಕಾದ ಪರಿಸ್ಥಿತಿ ಬಂತು.

    ಮದುವೆಯಲ್ಲಿ 1 ಲಕ್ಷ ರೂ. ಮೌಲ್ಯದ ಉಂಗುರ ಹಾಗೂ ಮದುವೆ ಖರ್ಚು ನೋಡಿಕೊಂಡಿದ್ದೆವು. ವರದಕ್ಷಿಣೆ ಕೊಟ್ರೂ ಹಲ್ಲೆ ನಡೆಸಿ ಹೆಚ್ಚಿನ ಹಣಕ್ಕೆ ಒತ್ತಾಯಿಸಿದ್ದಾರೆ. ಹೀಗಾಗಿ ಜಗಳ ಆಗಿ ನನ್ನನ್ನು ಮನೆಯಿಂದ ಆಚೆ ಹಾಕಿದ್ದರು. ಇದರಿಂದ ನನಗೆ ಹಾಗೂ ನನ್ನ ಮಗನಿಗೆ ತೊಂದರೆಯಾಗುತ್ತೆ, ಒಂದು ವೇಳೆ ಏನಾದರೂ ಆದರೆ ಇವರುಗಳೇ ಕಾರಣ ಎಂದು ಆರೋಪಿಸಿ, ಕ್ರಮಕ್ಕಾಗಿ ಮನವಿ ಮಾಡಿಕೊಂಡಿದ್ದಾರೆ.

  • ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ – ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್

    ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ – ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್

    ಬೆಂಗಳೂರು: ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಖ್ಯಾತ ಚಿತ್ರ ನಿರ್ದೇಶಕ ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

    ಈ ಕುರಿತು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಸ್.ನಾರಾಯಣ್ ಅವರ ಎರಡನೇ ಮಗನ ಪತ್ನಿ ಪವಿತ್ರಾ ದೂರು ದಾಖಲಿಸಿದ್ದಾರೆ. ದೂರಿನನ್ವಯ ಎಸ್.ನಾರಾಯಣ್, ಪತ್ನಿ ಭಾಗ್ಯಲಕ್ಷ್ಮಿ, ಪತಿ ಪವನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮದುವೆಯಲ್ಲಿ ವರದಕ್ಷಿಣೆ ಕೊಟ್ಟಿದ್ದರೂ ಹೆಚ್ಚಿನ ಹಣಕ್ಕೆ ಒತ್ತಾಯ ಮಾಡುತ್ತಿದ್ದಾರೆ. ಹಲ್ಲೆ ನಡೆಸಿ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.ಇದನ್ನೂ ಓದಿ: ದರ್ಶನ್‌ಗೆ 40 ನಿಮಿಷ ಜೈಲಿನಲ್ಲಿ ವಾಕಿಂಗ್‌ಗೆ ಅವಕಾಶ

    ದೂರಿನಲ್ಲಿ ಏನಿದೆ?
    ನಾನು ಹಾಗೂ ಎಸ್.ನಾರಾಯಣ್ ಪುತ್ರ ಪವನ್ 2021ರಲ್ಲಿ ಮದುವೆಯಾದೆವು. ಪವನ್ ಓದಿರದ ಕಾರಣ ಕೆಲಸ ಇಲ್ಲದೆ ಮನೆಯಲ್ಲಿಯೇ ಇದ್ದರು. ಇದರಿಂದಾಗಿ ನಾನೇ ಕೆಲಸಕ್ಕೆ ಹೋಗಿ ಮನೆ ಸಾಗಿಸುತ್ತಿದ್ದೆ. ನಂತರ ಪವನ್ ಕಲಾ ಸಾಮ್ರಾಟ್ ಟೀಂ ಅಕಾಡೆಮಿ ಎಂಬ ಫಿಲ್ಮ್ ಇನ್ಸ್ಟಿಟ್ಯೂಟ್ ಪ್ರಾರಂಭಿಸಬೇಕೆಂದು ಯೋಚಿಸಿದ್ದರು. ಇದಕ್ಕಾಗಿ ನನ್ನ ಬಳಿ ದುಡ್ಡು ಕೇಳಿದ್ದರು. ಆಗ ನನ್ನ ತಾಯಿಯ ಒಡವೆ ಕೊಟ್ಟಿದ್ದೆ. ಆದ್ರೆ ಬಳಿಕ ಲಾಸ್ ಆಗಿ ಇನ್ಸ್ಟಿಟ್ಯೂಟ್ ಮುಚ್ಚಬೇಕಾದ ಪರಿಸ್ಥಿತಿ ಬಂತು.

    ಮದುವೆಯಲ್ಲಿ 1 ಲಕ್ಷ ರೂ. ಮೌಲ್ಯದ ಉಂಗುರ ಹಾಗೂ ಮದುವೆ ಖರ್ಚು ನೋಡಿಕೊಂಡಿದ್ದೆವು. ವರದಕ್ಷಿಣೆ ಕೊಟ್ರೂ ಹಲ್ಲೆ ನಡೆಸಿ ಹೆಚ್ಚಿನ ಹಣಕ್ಕೆ ಒತ್ತಾಯಿಸಿದ್ದಾರೆ. ಹೀಗಾಗಿ ಜಗಳ ಆಗಿ ನನ್ನನ್ನು ಮನೆಯಿಂದ ಆಚೆ ಹಾಕಿದ್ದರು. ಇದರಿಂದ ನನಗೆ ಹಾಗೂ ನನ್ನ ಮಗನಿಗೆ ತೊಂದರೆಯಾಗುತ್ತೆ, ಒಂದು ವೇಳೆ ಏನಾದರೂ ಆದರೆ ಇವರುಗಳೇ ಕಾರಣ ಎಂದು ಆರೋಪಿಸಿ, ಕ್ರಮಕ್ಕಾಗಿ ಮನವಿ ಮಾಡಿಕೊಂಡಿದ್ದಾರೆ.ಇದನ್ನೂ ಓದಿ: ಅಮೆರಿಕದಲ್ಲಿ ವಿನಯ್ & ವಂದಿತಾ ಜೊತೆ ರಮ್ಯಾ ಸುತ್ತಾಟ

  • ಗಂಡನ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ವರದಕ್ಷಿಣೆ ಕಿರುಕುಳ – ನೇಣಿಗೆ ಶರಣಾದ ಗೃಹಿಣಿ

    ಗಂಡನ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ವರದಕ್ಷಿಣೆ ಕಿರುಕುಳ – ನೇಣಿಗೆ ಶರಣಾದ ಗೃಹಿಣಿ

    ಬೆಂಗಳೂರು: ವರದಕ್ಷಿಣೆ ಕಿರುಕುಳ (Dowry Harassment) ತಾಳಲಾರದೇ ಗೃಹಿಣಿಯೊಬ್ಬರು ನೇಣಿಗೆ (Suicide) ಶರಣಾದ ಘಟನೆ ಬೆಂಗಳೂರು (Bengaluru) ಹೊರವಲಯ ಟಿ.ದಾಸರಹಳ್ಳಿಯ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸಿಡೇದಹಳ್ಳಿಯಲ್ಲಿ ನಡೆದಿದೆ.

    ಪೂಜಶ್ರೀ(28) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಈಗ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ.

    ಮೂರು ವರ್ಷದ ಹಿಂದೆ ಮನೆಯವರ ನಿಶ್ಚಯದಂತೆ ಪೂಜಾಶ್ರೀ ಮತ್ತು ನಂದೀಶ್‌ ಮದುವೆಯಾಗಿದ್ದು ಹೆಣ್ಣು ಮಗುವಿದೆ. ದಂಪತಿ ಇಬ್ಬರೂ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

    ಒಂದು ವರ್ಷದ ನಂತರ ನಂದೀಶ್‌ಗೆ ಅಕ್ರಮ ಸಂಬಂಧ ಇರುವ ವಿಚಾರ ಪೂಜಾಗೆ ಗೊತ್ತಾಗಿದೆ. ಇದೇ ವಿಚಾರಕ್ಕೆ ಪ್ರಶ್ನೆ ಮಾಡಿದ್ದಕ್ಕೆ ನಂದೀಶ್ ನಿಮ್ಮ ತಾಯಿ ಮನೆಯಿಂದ ವರದಕ್ಷಿಣೆ ತೆಗೆದುಕೊಂಡು ಬಾ ಎಂದು ಹೇಳಿ ಜಗಳವಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಬೆಂಗಳೂರು | ಲೇಡಿಸ್ ಪಿಜಿಗೆ ನುಗ್ಗಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ

    ಎರಡು ಮೂರು ಬಾರಿ ಹಿರಿಯರ ಸಮ್ಮುಖದಲ್ಲಿ ಇಬ್ಬರ ಮಧ್ಯೆ ರಾಜಿ ಪಂಚಾಯಿತಿ ನಡೆದಿತ್ತು. ಈ ವೇಳೆ ನಾನು ಪತ್ನಿಗೆ ಕಿರುಕುಳ ನೀಡುವುದಿಲ್ಲ ಎಂದು ನಂದೀಶ್‌ ಭರವಸೆ ನೀಡಿದ್ದ.

    ಮೂರು ದಿನಗಳ ಹಿಂದೆ ಇದೇ ರೀತಿ ಜಗಳ ಮಾಡಿ ನಂದೀಶ್ ಹಲ್ಲೆ ಮಾಡಿದ್ದ. ಪತಿಯ ಕಿರುಕುಳ ತಾಳಲಾರದೇ ಪೂಜಾಶ್ರೀ ತವರು ಮನೆಗೆ ಬಂದಿದ್ದರು. ಈ ವಿಚಾರ ತಿಳಿದು ನಂದೀಶ್‌ ಅತ್ತೆ ಮನೆಗೆ ಬಂದು ಕಥೆ ಕಟ್ಟಿ ಮತ್ತೆ ಪತ್ನಿಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿದ್ದ. ಆದರೆ ಭಾನುವಾರ ಬೆಳಗ್ಗೆ ಪೂಜಶ್ರೀ ಶವ ನೇಣು ಬಿಗಿದ ಸ್ಥಿತಿಯಲ್ಲಿ‌ ಪತ್ತೆಯಾಗಿದೆ.

    ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳದ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

  • ವರದಕ್ಷಿಣೆ ಕಿರುಕುಳ ನೀಡಿ ಪತ್ನಿಗೆ ಬೆಂಕಿ ಇಟ್ಟ ಪೊಲೀಸ್‌ ಕಾನ್‌ಸ್ಟೇಬಲ್‌ ‌

    ವರದಕ್ಷಿಣೆ ಕಿರುಕುಳ ನೀಡಿ ಪತ್ನಿಗೆ ಬೆಂಕಿ ಇಟ್ಟ ಪೊಲೀಸ್‌ ಕಾನ್‌ಸ್ಟೇಬಲ್‌ ‌

    – ಗ್ರೇಟರ್‌ ನೋಯ್ಡಾದಲ್ಲಿ ಮಹಿಳೆ ಭೀಕರ ಸಾವು ಪ್ರಕರಣ ಮಾಸುವ ಮುನ್ನವೇ ಮತ್ತೊಂದು ದೌರ್ಜನ್ಯ

    ಲಕ್ನೋ: ಗ್ರೇಟರ್ ನೋಯ್ಡಾದಲ್ಲಿ 26 ವರ್ಷದ ನಿಕ್ಕಿ ಭಾಟಿಯ ಭೀಕರ ಸಾವಿನ ನಂತರ, ಉತ್ತರ ಪ್ರದೇಶದಲ್ಲಿ ಮತ್ತೊಂದು ವರದಕ್ಷಿಣೆ ಸಂಬಂಧಿತ ಹಿಂಸಾಚಾರ ಪ್ರಕರಣ ಬೆಳಕಿಗೆ ಬಂದಿದೆ.

    ಅಮ್ರೋಹಾ ಜಿಲ್ಲೆಯ ಪೊಲೀಸ್‌ ಕಾನ್‌ಸ್ಟೇಬಲ್‌ವೊಬ್ಬರು ತಮ್ಮ ಪತ್ನಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ವೃತ್ತಿಯಲ್ಲಿ ನರ್ಸ್ ಆಗಿರುವ ಪಾರುಲ್ (32) ಗಂಭೀರ ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಪೊಲೀಸ್ ಕಾನ್‌ಸ್ಟೇಬಲ್ ಸೇರಿದಂತೆ ಒಂದೇ ಕುಟುಂಬದ ಆರು ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

    ಉತ್ತರ ಪ್ರದೇಶ ಪೊಲೀಸ್ ಇಲಾಖೆಯಲ್ಲಿ ಕಾನ್‌ಸ್ಟೇಬಲ್ ಆಗಿರುವ ಪಾರುಲ್‌ ಅವರ ಪತಿ ದೇವೇಂದ್ರ ಇತ್ತೀಚೆಗೆ ರಾಂಪುರದಿಂದ ಬರೇಲಿಗೆ ವರ್ಗಾವಣೆಗೊಂಡು ರಜೆಯ ಮೇಲೆ ಮನೆಯಲ್ಲಿದ್ದ. ವರದಕ್ಷಿಣೆ ಕಿರುಕುಳ ನೀಡಿ ಆಕೆಗೆ ಬೆಂಕಿ ಇಟ್ಟು, ಜೀವಂತವಾಗಿ ಸುಟ್ಟುಹಾಕಲು ಯತ್ನಿಸಿದ್ದಾರೆ ಎನ್ನಲಾಗಿದೆ.

    ಪಾರುಲ್ ಸಹೋದರ ದೂರು ದಾಖಲಿಸಿದ್ದು, ಆಕೆಯ ಪತಿ ದೇವೇಂದ್ರ, ಆತನ ತಾಯಿ ಮತ್ತು ಸೋನು, ಗಜೇಶ್, ಜಿತೇಂದ್ರ, ಸಂತೋಷ್ ಎಂಬ ನಾಲ್ವರು ಪುರುಷ ಸಂಬಂಧಿಕರ ವಿರುದ್ಧ ಆರೋಪ ಹೊರಿಸಲಾಗಿದೆ. ಕೌಟುಂಬಿಕ ಹಿಂಸೆ ಮತ್ತು ಕೊಲೆಯತ್ನದ ಗಂಭೀರ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ.

    ಆರು ಆರೋಪಿಗಳು ನಾಪತ್ತೆಯಾಗಿದ್ದಾರೆ. ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಮುಂಜಾನೆ ನೆರೆಹೊರೆಯವರು ತಮಗೆ ಮಾಹಿತಿ ನೀಡಿದ್ದರು ಎಂದು ಪಾರುಲ್ ತಾಯಿ ಅನಿತಾ ವಿವರಿಸಿದ್ದಾರೆ.

    ನಾನು ಸ್ಥಳಕ್ಕೆ ತಲುಪಿದಾಗ, ನನ್ನ ಮಗಳು ನೋವಿನಿಂದ ನರಳುತ್ತಿದ್ದಳು. ತೀವ್ರವಾಗಿ ಸುಟ್ಟು ಹೋಗಿದ್ದಳು. ಅವಳನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಆಕೆಯ ಸ್ಥಿತಿ ಗಂಭೀರವಾದ ಕಾರಣ ದೆಹಲಿಗೆ ಕರೆದೊಯ್ಯಬೇಕಾಯಿತು. ಅವಳು ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ ಎಂದು ತಾಯಿ ಕಣ್ಣೀರಿಟ್ಟಿದ್ದಾರೆ.

  • ಪತ್ನಿಗೆ ಬೆಂಕಿ ಹಚ್ಚಿ ಕೊಂದವನ ಕಾಲಿಗೆ ಗುಂಡೇಟು – ನನಗ್ಯಾವ ಪಶ್ಚಾತ್ತಾಪ ಇಲ್ಲ ಎಂದ ಪಾಪಿ!

    ಪತ್ನಿಗೆ ಬೆಂಕಿ ಹಚ್ಚಿ ಕೊಂದವನ ಕಾಲಿಗೆ ಗುಂಡೇಟು – ನನಗ್ಯಾವ ಪಶ್ಚಾತ್ತಾಪ ಇಲ್ಲ ಎಂದ ಪಾಪಿ!

    ಲಕ್ನೋ: ಗ್ರೇಟರ್ ನೋಯ್ಡಾದಲ್ಲಿ (Greater Noida) ವರದಕ್ಷಿಣೆಗಾಗಿ (Dowry) ಪತ್ನಿಯ ಮೇಲೆ ಹಲ್ಲೆ ಮಾಡಿ ಬೆಂಕಿ ಹಚ್ಚಿ ಹತ್ಯೆ ಮಾಡಿದ್ದ ಪ್ರಮುಖ ಆರೋಪಿ ವಿಪಿನ್ ಭಾಟಿ ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ.

    ಆರೋಪಿ ವಿಪಿನ್‌ನನ್ನು ಪೊಲೀಸರು ಸ್ಥಳಮಹಜರಿಗೆ ಕರೆದೊಯ್ಯುತ್ತಿದ್ದಾಗ ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಅಲ್ಲದೇ ಪೊಲೀಸರ ಕೈಯಿಂದ ಪಿಸ್ತೂಲ್‌ ಕಸಿದುಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ, ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಬಳಿಕ ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಕೊಲೆಯಾದ ನಿಕ್ಕಿ (28) ತಂದೆ ಬಿಖಾರಿ ಸಿಂಗ್ ಪೈಲಾ ಅವರು, ಆರೋಪಿಗಳಿಗೆ ಗುಂಡು ಹಾರಿಸಬೇಕು ಎಂದು ಮಾಧ್ಯಮಗಳ ಮುಂದೆ ಹೇಳಿದ್ದರು. ಈ ಹೇಳಿಕೆ ನೀಡಿ ಕೆಲವೇ ಗಂಟೆಗಳ ನಂತರ ಪ್ರಮುಖ ಆರೋಪಿಯ ಕಾಲಿಗೆ ಗುಂಡು ಹಾರಿಸಲಾಗಿದೆ. ಇದನ್ನೂ ಓದಿ: ನನ್ನ ಮಗಳನ್ನು ಕೊಂದ ಪಾಪಿಯನ್ನು ಎನ್‌ಕೌಂಟರ್ ಮಾಡಿ: ನಿಕ್ಕಿ ತಂದೆ ಕಣ್ಣೀರು

    ಆರೋಪಿ ವಿಪಿನ್‌ ಆಸ್ಪತ್ರೆಯ ಬೆಡ್‌ ಮೇಲೆ, ತನ್ನ ಕೃತ್ಯಕ್ಕೆ ಯಾವುದೇ ಪಶ್ಚಾತ್ತಾಪ ಇಲ್ಲ ಎಂದಿದ್ದಾನೆ. ತಾನು ಪತ್ನಿಯನ್ನು ಕೊಂದಿಲ್ಲ ಮತ್ತು ಅವಳು ತಾನಾಗಿಯೇ ಬೆಂಕಿ ಹಚ್ಚಿಕೊಂಡು ಮೃತಪಟ್ಟಿದ್ದಾಳೆ. ಗಂಡ ಹೆಂಡತಿಯರ ನಡುವೆ ಆಗಾಗ ಜಗಳಗಳು ನಡೆಯುತ್ತವೆ. ಇದು ತುಂಬಾ ಸಾಮಾನ್ಯ ಎಂದು ಹೇಳಿಕೊಂಡಿದ್ದಾನೆ. ಇದನ್ನೂ ಓದಿ: ಅಮ್ಮನ ಕೆನ್ನೆಗೆ ಹೊಡೆದು ಬೆಂಕಿ ಹಚ್ಚಿದ್ರು – ವರದಕ್ಷಿಣೆ ಕೊಲೆಗೆ ಸಾಕ್ಷಿಯಾದ ಪುಟ್ಟ ಕಂದ

    ಏನಿದು ಪ್ರಕರಣ?
    ಗ್ರೇಟರ್ ನೋಯ್ಡಾದಲ್ಲಿ 26 ವರ್ಷದ ನಿಕ್ಕಿ ಎಂಬ ಮಹಿಳೆಯನ್ನು ಆಕೆಯ ಪತಿ, ಅತ್ತೆ ಮಾವ ಬೆಂಕಿ ಹಚ್ಚಿ ಕೊಲೆ ಮಾಡಿದ್ದರು. ಮಹಿಳೆಯ ಪತಿ ಮತ್ತು ಆಕೆಯ ಅತ್ತೆ, ಮಹಿಳೆಯ ತಲೆ ಕೂದಲನ್ನು ಹಿಡಿದು ಥಳಿಸುತ್ತಿರುವ ವೀಡಿಯೊದಲ್ಲಿ ವೈರಲ್ ಆಗಿತ್ತು. ಅಲ್ಲದೇ ಬಳಿಕ ಬೆಂಕಿ ಹೊತ್ತಿ ಉರಿಯುವಾಗ ಆಕೆ ಮೆಟ್ಟಿಲಿನಿಂದ ಇಳಿದು, ನೆಲದ ಮೇಲೆ ಕುಳಿತಿರುವುದು ವೀಡಿಯೋದಲ್ಲಿ ಸೆರೆಯಾಗಿದೆ. ಆಕೆಯನ್ನು ನೆರೆಹೊರೆಯವರ ಸಹಾಯದಿಂದ ಫೋರ್ಟಿಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಳಿಕ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ರವಾನಿಸುವ ವೇಳೆ ಮಾರ್ಗ ಮಧ್ಯೆಯೇ ನಿಕ್ಕಿ ಸಾವನ್ನಪ್ಪಿದ್ದಳು. ಇದನ್ನೂ ಓದಿ: ವರದಕ್ಷಿಣೆ ಕಿರುಕುಳ; ಬೆಂಕಿ ಹಚ್ಚಿ ಮಹಿಳೆ ಕೊಂದ ಪತಿ, ಅತ್ತೆ-ಮಾವ

  • ನನ್ನ ಮಗಳನ್ನು ಕೊಂದ ಪಾಪಿಯನ್ನು ಎನ್‌ಕೌಂಟರ್ ಮಾಡಿ: ನಿಕ್ಕಿ ತಂದೆ ಕಣ್ಣೀರು

    ನನ್ನ ಮಗಳನ್ನು ಕೊಂದ ಪಾಪಿಯನ್ನು ಎನ್‌ಕೌಂಟರ್ ಮಾಡಿ: ನಿಕ್ಕಿ ತಂದೆ ಕಣ್ಣೀರು

    ಲಕ್ನೋ: ವರದಕ್ಷಿಣೆ ((Dowry) ಕಿರುಕುಳ ನೀಡಿ ನಿಕ್ಕಿ ಎಂಬ ಮಹಿಳೆಯನ್ನು ಆಕೆಯ ಪತಿ, ಅತ್ತೆ-ಮಾವ ಬೆಂಕಿ ಹಚ್ಚಿ ಕೊಲೆ ಮಾಡಿದ ಘಟನೆ ಗ್ರೇಟರ್ ನೋಯ್ಡಾದಲ್ಲಿ (Greater Noida) ನಡೆದಿತ್ತು. ಇದೀಗ ಮಗಳನನ್ನು ಕೊಂದ ಪಾಪಿಯನ್ನು ಎನ್‌ಕೌಂಟರ್ ಮಾಡಿ ಕೊಲ್ಲಬೇಕೆಂದು ಮೃತ ನಿಕ್ಕಿ ತಂದೆ ಕಣ್ಣೀರು ಹಾಕಿದ್ದಾರೆ.

    ಮಗಳ ಗಂಡ ವಿಪಿನ್ ಭಾಟಿ, ಬೇರೊಬ್ಬರೊಂದಿಗೆ ಸಂಬಂಧ ಹೊಂದಿದ್ದ. ಆದ್ದರಿಂದ ನಿಕ್ಕಿಯನ್ನು ದೂರವಿಡಲು ಬಯಸುತ್ತಿದ್ದ. ವಿಪಿನ್ ಭಾಟಿ ಹಾಗೂ ಆತನ ಕುಟುಂಬಸ್ಥರು ಕೊಲೆಗಾರರು ಅವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದಿದ್ದಾರೆ. ಇದನ್ನೂ ಓದಿ: ವರದಕ್ಷಿಣೆ ಕಿರುಕುಳ; ಬೆಂಕಿ ಹಚ್ಚಿ ಮಹಿಳೆ ಕೊಂದ ಪತಿ, ಅತ್ತೆ-ಮಾವ

    ನನ್ನ ಮಗಳು ಪಾರ್ಲರ್ ನಡೆಸುತ್ತಿದ್ದಳು. ಅದರಲ್ಲಿ ಬಂದ ಹಣದಿಂದ ತನ್ನ ಮಗನನ್ನು ಬೆಳೆಸುತ್ತಿದ್ದಳು. ಆದರೆ ಆಕೆಯ ಪತಿ ಹಾಗೂ ಅತ್ತೆ-ಮಾವ ಹಣಕ್ಕಾಗಿ ಅವಳನ್ನು ಹಿಂಸಿಸುತ್ತಿದ್ದರು. ಈಗ ಇಡೀ ಕುಟುಂಬವೇ ಪಿತೂರಿ ಮಾಡಿ ನನ್ನ ಮಗಳನ್ನು ಕೊಂದರು ಎಂದು ದುಃಖಿಸಿದ್ದಾರೆ. ಇದನ್ನೂ ಓದಿ: ಅಮ್ಮನ ಕೆನ್ನೆಗೆ ಹೊಡೆದು ಬೆಂಕಿ ಹಚ್ಚಿದ್ರು – ವರದಕ್ಷಿಣೆ ಕೊಲೆಗೆ ಸಾಕ್ಷಿಯಾದ ಪುಟ್ಟ ಕಂದ

    ಮೊದಲು ಅವರು ವರದಕ್ಷಿಣೆಯಾಗಿ ಸ್ಕಾರ್ಪಿಯೋಗೆ ಬೇಡಿಕೆ ಇಟ್ಟರು. ಅದನ್ನು ನೀಡಲಾಯಿತು. ನಂತರ, ಅವರು ಬುಲೆಟ್ ಬೈಕ್ ಕೇಳಿದ್ದರು. ಅದನ್ನೂ ಸಹ ನೀಡಲಾಯಿತು. ಆದರೂ, ಅವರು ನನ್ನ ಮಗಳನ್ನು ಹಿಂಸಿಸುತ್ತಲೇ ಇದ್ದರು. ಇತ್ತೀಚೆಗೆ ನಾನು ಮರ್ಸಿಡಿಸ್ ಖರೀದಿಸಿದ್ದೆ. ಇದು ವಿಪಿನ್ ಕಣ್ಣಿಗೆ ಬಿದ್ದಿತ್ತು. ಅದನ್ನು ಸಹ ನೀಡುವಂತೆ ಒತ್ತಾಯಿಸುತ್ತಿದ್ದರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: `ಪರಮಾತ್ಮ ಬರ್ತಾನೆ ಜೀವ ಒಯ್ಯೂತ್ತಾನೆ’ – ದೇವರನ್ನ ನೋಡಲು ದೇಹ ತ್ಯಾಗಕ್ಕೆ ನಿರ್ಧರಿಸಿದ್ದ 21 ಭಕ್ತರು!

    ಆರೋಪಿ ಪತಿ ವಿಪಿನ್‌ನನ್ನು ಎನ್‌ಕೌಂಟರ್ ಮಾಡಿ ಕೊಲ್ಲಬೇಕು. ಯೋಗಿಯವರು ಪಿಕ್‌ಪಾಕೆಟ್ ಮಾಡಿದವರ ಕಾಲಿಗೆ ಗುಂಡು ಹಾರಿಸುತ್ತಾರೆ. ಆದರೆ ಇವರೆಲ್ಲ ಕೊಲೆಗಾರರು ಅವರನ್ನು ಕೊಲ್ಲುವುದಿಲ್ಲವೇ ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದಾರೆ.

    ಏನಿದು ಪ್ರಕರಣ?
    ಗ್ರೇಟರ್ ನೋಯ್ಡಾದಲ್ಲಿ 26 ವರ್ಷದ ನಿಕ್ಕಿ ಎಂಬ ಮಹಿಳೆಯನ್ನು ಆಕೆಯ ಪತಿ, ಅತ್ತೆ ಮಾವ ಬೆಂಕಿ ಹಚ್ಚಿ ಕೊಲೆ ಮಾಡಿದ್ದರು. ಮಹಿಳೆಯ ಪತಿ ಮತ್ತು ಆಕೆಯ ಅತ್ತೆ, ಮಹಿಳೆಯ ಕೂದಲನ್ನು ಹಿಡಿದು ಥಳಿಸುತ್ತಿರುವ ವೀಡಿಯೊದಲ್ಲಿ ವೈರಲ್ ಆಗಿತ್ತು. ಅಲ್ಲದೇ ಬಳಿಕ ಬೆಂಕಿ ಹೊತ್ತಿ ಉರಿಯುವಾಗ ಆಕೆ ಮೆಟ್ಟಿಲಿನಿಂದ ಇಳಿದು, ನೆಲದ ಮೇಲೆ ಕುಳಿತಿರುವುದು ವೀಡಿಯೋದಲ್ಲಿ ಸೆರೆಯಾಗಿದೆ. ಆಕೆಯನ್ನು ನೆರೆಹೊರೆಯವರ ಸಹಾಯದಿಂದ ಫೋರ್ಟಿಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಳಿಕ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ರವಾನಿಸುವ ವೇಳೆ ಮಾರ್ಗ ಮಧ್ಯೆಯೇ ನಿಕ್ಕಿ ಸಾವನ್ನಪ್ಪಿದ್ದಾಳೆ.

  • ಅಮ್ಮನ ಕೆನ್ನೆಗೆ ಹೊಡೆದು ಬೆಂಕಿ ಹಚ್ಚಿದ್ರು – ವರದಕ್ಷಿಣೆ ಕೊಲೆಗೆ ಸಾಕ್ಷಿಯಾದ ಪುಟ್ಟ ಕಂದ

    ಅಮ್ಮನ ಕೆನ್ನೆಗೆ ಹೊಡೆದು ಬೆಂಕಿ ಹಚ್ಚಿದ್ರು – ವರದಕ್ಷಿಣೆ ಕೊಲೆಗೆ ಸಾಕ್ಷಿಯಾದ ಪುಟ್ಟ ಕಂದ

    ಲಕ್ನೋ: ವರದಕ್ಷಿಣೆ (Dowry) ಕಿರುಕುಳ ನೀಡಿ ಮಹಿಳೆಯನ್ನು ಆಕೆಯ ಪತಿ ಮತ್ತು ಅತ್ತೆ-ಮಾವ ಹತ್ಯೆ ಮಾಡಿರುವ ಘಟನೆ ಗ್ರೇಟರ್‌ ನೋಯ್ಡಾದಲ್ಲಿ (Greater Noida) ನಡೆದಿದೆ. ಇದೀಗ ಮಹಿಳೆಯ ಹತ್ಯೆಯ ಭಯಾನಕ ದೃಶ್ಯ ಕಂಡ ಆಕೆಯ ಪುಟ್ಟ ಮಗ, ಮಾಧ್ಯಮಗಳ ಮುಂದೆ ತಂದೆ, ಅಜ್ಜ ಹಾಗೂ ಅಜ್ಜಿಯ ಕ್ರೌರ್ಯವನ್ನು ಬಿಚ್ಚಿಟ್ಟಿದ್ದಾನೆ.

    ಬಾಲಕ ಮಾಧ್ಯಮಗಳ ಮುಂದೆ, ಅಪ್ಪ, ಅಜ್ಜ ಮತ್ತು ಅಜ್ಜಿ ಸೇರಿ ಅಮ್ಮನ ಕೆನ್ನೆಗೆ ಹೊಡೆದ್ರೂ, ಆಮೇಲೆ ಅಮ್ಮನ ಮೇಲೆ ಏನೋ ಹಾಕಿ ಬೆಂಕಿ ಹಚ್ಚಿದ್ರೂ ಎಂದು ಹೇಳಿದ್ದಾನೆ. ಇದನ್ನೂ ಓದಿ: ವರದಕ್ಷಿಣೆ ಕಿರುಕುಳ; ಬೆಂಕಿ ಹಚ್ಚಿ ಮಹಿಳೆ ಕೊಂದ ಪತಿ, ಅತ್ತೆ-ಮಾವ

    ನಿಕ್ಕಿ (26) ಕೊಲೆಯಾದ ಮಹಿಳೆ. ಪತಿ ಮತ್ತು ಅತ್ತೆ-ಮಾವ ಸೇರಿಕೊಂಡು ಆಕೆಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ್ದಾರೆ. ಮಹಿಳೆಗೆ 36 ಲಕ್ಷ ರೂ. ವರದಕ್ಷಿಣೆಗಾಗಿ ಬೇಡಿಕೆ ಇಟ್ಟು, ಚಿತ್ರಹಿಂಸೆ ನೀಡುತ್ತಿದ್ದರು ಎಂದು ಮೃತ ಮಹಿಳೆಯ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.

    ಸಂತ್ರಸ್ತೆಯ ಪತಿ ಮತ್ತು ಆಕೆಯ ಅತ್ತೆ, ಮಹಿಳೆಯ ಕೂದಲನ್ನು ಹಿಡಿದು ಥಳಿಸುತ್ತಿರುವ ವೀಡಿಯೊದಲ್ಲಿ ವೈರಲ್‌ ಆಗಿದೆ. ಅಲ್ಲದೇ ಬಳಿಕ ಬೆಂಕಿ ಹೊತ್ತಿ ಉರಿಯುವಾಗ ಆಕೆ ಮೆಟ್ಟಿಲಿನಿಂದ ಇಳಿದು, ನೆಲದ ಮೇಲೆ ಕುಳಿತಿರುವುದು ವೀಡಿಯೋದಲ್ಲಿ ಸೆರೆಯಾಗಿದೆ. ಆಕೆಯನ್ನು ನೆರೆಹೊರೆಯವರ ಸಹಾಯದಿಂದ ಫೋರ್ಟಿಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಳಿಕ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮಾರ್ಗ ಮಧ್ಯೆಯೇ ಮಹಿಳೆ ಸಾವನ್ನಪ್ಪಿದ್ದಾಳೆ.

    ಆಕೆಯ ಸಹೋದರಿ ನೀಡಿದ ದೂರಿನ ಮೇರೆಗೆ, ಕಸ್ನಾ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ಪತಿ, ಭಾವ ರೋಹಿತ್ ಭಾಟಿ, ಅತ್ತೆ ದಯಾ ಮತ್ತು ಮಾವ ಸತ್ವೀರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಕೆಯ ಪತಿಯನ್ನು ಬಂಧಿಸಿದ್ದು, ಇತರೆ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಕೊಲ್ಲಾಪುರದಲ್ಲಿ ಅನ್ಯಕೋಮಿನ ಗುಂಪುಗಳ ನಡುವೆ ಘರ್ಷಣೆ – 10ಕ್ಕೂ ಹೆಚ್ಚು ಮಂದಿಗೆ ಗಾಯ

  • ವರದಕ್ಷಿಣೆ ಕಿರುಕುಳ; ಬೆಂಕಿ ಹಚ್ಚಿ ಮಹಿಳೆ ಕೊಂದ ಪತಿ, ಅತ್ತೆ-ಮಾವ

    ವರದಕ್ಷಿಣೆ ಕಿರುಕುಳ; ಬೆಂಕಿ ಹಚ್ಚಿ ಮಹಿಳೆ ಕೊಂದ ಪತಿ, ಅತ್ತೆ-ಮಾವ

    ಲಕ್ನೋ: ವರದಕ್ಷಿಣೆ ಕಿರುಕುಳ ನೀಡಿ ಮಹಿಳೆಯನ್ನು ಆಕೆಯ ಪತಿ ಮತ್ತು ಅತ್ತೆ-ಮಾವ ಹತ್ಯೆ ಮಾಡಿರುವ ಘಟನೆ ಗ್ರೇಟರ್‌ ನೋಯ್ಡಾದಲ್ಲಿ (Greater Noida) ನಡೆದಿದೆ.

    ನಿಕ್ಕಿ (26) ಕೊಲೆಯಾದ ಮಹಿಳೆ. ಪತಿ ಮತ್ತು ಅತ್ತೆ-ಮಾವ ಸೇರಿಕೊಂಡು ಆಕೆಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ್ದಾರೆ. ಇದರ ಭಯಾನಕ ದೃಶ್ಯಗಳು ಹೊರಬಿದ್ದಿವೆ. 36 ಲಕ್ಷ ರೂ. ವರದಕ್ಷಿಣೆಗಾಗಿ ಬೇಡಿಕೆ ಇಟ್ಟು, ಚಿತ್ರಹಿಂಸೆ ನೀಡುತ್ತಿದ್ದರು ಎಂದು ಮೃತ ಮಹಿಳೆಯ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಸಂಸತ್ತಿನಲ್ಲಿ ಭದ್ರತಾ ಲೋಪ | ಗಜ ದ್ವಾರದ ಬಳಿಯ ಮರ ಶಿಫ್ಟ್‌ಗೆ ನಿರ್ಧಾರ

    ಮೃತ ಮಹಿಳೆ ನಿಕ್ಕಿ 2016 ರಲ್ಲಿ ಗ್ರೇಟರ್ ನೋಯ್ಡಾದ ಸಿರ್ಸಾ ಗ್ರಾಮದ ವಿಪಿನ್‌ ಎಂಬಾತನನ್ನು ವಿವಾಹವಾಗಿದ್ದರು. ಕೇವಲ ಆರು ತಿಂಗಳ ನಂತರ ವರದಕ್ಷಿಣೆಗಾಗಿ ಹಿಂಸೆ ಪ್ರಾರಂಭವಾಯಿತು. ನಿಕ್ಕಿಯನ್ನು ಅವರ ಅತ್ತೆ-ಮಾವಂದಿರು ಥಳಿಸಿ, ನಂತರ ಮಗನ ಮುಂದೆ ಬೆಂಕಿ ಹಚ್ಚಿದ್ದಾರೆ ಎಂದು ಆಕೆಯ ಸಹೋದರಿ ಆರೋಪಿಸಿದ್ದಾರೆ.

    ನಿಕ್ಕಿಯ ಪತಿ ವಿಪಿನ್ ಮತ್ತು ಇನ್ನೊಬ್ಬ ಮಹಿಳೆ ಆಕೆಯ ಕೂದಲನ್ನು ಹಿಡಿದು ಎಳೆಯುತ್ತಿರುವುದನ್ನು ವೀಡಿಯೊದಲ್ಲಿದೆ. ವಿಪಿನ್ ಶರ್ಟ್ ಧರಿಸಿರಲಿಲ್ಲ. ನಂತರ ಮಹಿಳೆಗೆ ಬೆಂಕಿ ಹಚ್ಚಿದ್ದಾರೆ. ಸುಟ್ಟಗಾಯಗಳಿಂದ ನರಳುತ್ತಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಷ್ಟರಲ್ಲಾಗಲೇ ಆಕೆ ಮೃತಪಟ್ಟಿದ್ದಾಳೆ. ಇದನ್ನೂ ಓದಿ: ವಾಟ್ಸಪ್‌ನಲ್ಲಿ ಬಂತು ಮದುವೆ ಕಾರ್ಡ್ – ಕ್ಲಿಕ್ ಮಾಡ್ತಿದ್ದಂಗೆ 2 ಲಕ್ಷ ರೂ. ಕಳೆದುಕೊಂಡ ಸರ್ಕಾರಿ ನೌಕರ

    ಗುರುವಾರ ರಾತ್ರಿ ಆಸ್ಪತ್ರೆಗೆ ಮಹಿಳೆಯೊಬ್ಬರು ಸುಟ್ಟ ಗಾಯಗಳಿಂದ ದೆಹಲಿಯ ಸಫ್ದರ್ಜಂಗ್‌ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಮಾರ್ಗ ಮಧ್ಯೆಯೇ ಆಕೆ ಮೃತಪಟ್ಟಿದ್ದಾರೆ. ಮೃತ ಮಹಿಳೆಯ ಸಹೋದರಿ ನೀಡಿದ ದೂರನ್ನು ಆಧರಿಸಿ ಪ್ರಕರಣ ದಾಖಲಿಸಲಾಗಿದೆ. ಮೃತಳ ಪತಿಯನ್ನು ಬಂಧಿಸಲಾಗಿದೆ ಎಂದು ಗ್ರೇಟರ್ ನೋಯ್ಡಾ ಹೆಚ್ಚುವರಿ ಉಪ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.