Tag: DP

  • ಯಶ್ ಹುಟ್ಟುಹಬ್ಬಕ್ಕೆ ಕಾಮನ್ ಡಿಪಿ ರಿಲೀಸ್ ಮಾಡಿದ ಶಿವಣ್ಣ

    ಯಶ್ ಹುಟ್ಟುಹಬ್ಬಕ್ಕೆ ಕಾಮನ್ ಡಿಪಿ ರಿಲೀಸ್ ಮಾಡಿದ ಶಿವಣ್ಣ

    ನವರಿ 8ರಂದು ಯಶ್ ಅವರ ಹುಟ್ಟು ಹಬ್ಬ. ಈ ಹುಟ್ಟು ಹಬ್ಬಕ್ಕಾಗಿ ಅಭಿಮಾನಿಗಳು ಕಾಮನ್ ಡಿಪಿ (DP) ರೆಡಿ ಮಾಡಿದ್ದಾರೆ. ಆ ಡಿಪಿಯನ್ನು ಸೆಂಚ್ಯುರಿ ಸ್ಟಾರ್ ಶಿವರಾಜ್ ಕುಮಾರ್ (Shivaraj Kumar) ಸೋಷಿಯಲ್ ಮೀಡಿಯಾ ಮೂಲಕ ಬಿಡುಗಡೆ ಮಾಡಿದ್ದಾರೆ. ಕಾಮನ್ ಡಿಪಿ ರಿಲೀಸ್ ಆದ ನಂತರ ಅನೇಕ ನಟರು ಮತ್ತು ನಿರ್ದೇಶಕರು ಡಿಪಿಯನ್ನು ಶೇರ್ ಮಾಡಿದ್ದಾರೆ.

    ಯಶ್ (Yash) ಸದ್ಯ ‘ಟಾಕ್ಸಿಕ್’ (Toxic Film) ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಯಶ್ ಅವರು ತಮ್ಮ ಅಭಿಮಾನಿಗಳಿಗೆ ಹುಟ್ಟುಹಬ್ಬದ ಕುರಿತಾಗಿ ಸಂದೇಶವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

    ಜನವರಿ 8, ನೀವು ನನ್ನ ಮೇಲಿಟ್ಟಿರುವ ಅಭಿಮಾನವನ್ನು ನನ್ನ ಜೊತೆ ಖುದ್ದು ವ್ಯಕ್ತಪಡಿಸಬೇಕೆಂದು ಅಪೇಕ್ಷೆ ಪಡುವ ದಿನ. ನನಗೂ ಅಷ್ಟೇ, ಜನ್ಮದಿನದ ನೆಪದಲ್ಲಿ ನಿಮ್ಮೊಂದಿಗೆ ಸಮಯ ಕಳೆಯುವ ಹಂಬಲ, ಆದರೆ ಸಿನಿಮಾದ ಕೆಲಸ ನನಗೆ ಬಿಡುವಿಲ್ಲದಂತೆ ಮಾಡಿದೆ. ಅನಿವಾರ್ಯವಾಗಿ ಪ್ರಯಾಣ ಮಾಡಲೇಬೇಕಿರುವುದರಿಂದ ಈ ಜನವರಿ 8 ನಿಮಗೆ ಸಿಗಲು ಸಾಧ್ಯವಾಗುತ್ತಿಲ್ಲ. ನಿಮ್ಮಗಳ ಅಭಿಮಾನ, ನನ್ನ ಅನುಪಸ್ಥಿತಿಯನ್ನು, ಅರ್ಥ ಮಾಡಿಕೊಳ್ಳುತ್ತದೆ ಎಂಬ ನಂಬಿಕೆ ನನ್ನದು. ಸದಾಕಾಲ ನನ್ನ ಜೊತೆ ಇರುವ ನಿಮ್ಮ ಪ್ರೀತಿ, ಅಭಿಮಾನವೇ ನನಗೆ ಹುಟ್ಟುಹಬ್ಬದ ಉಡುಗೊರೆ ಎಂದಿದ್ದಾರೆ ಯಶ್.

    ಯಶ್ 19ನೇ ‘ಟಾಕ್ಸಿಕ್’ ಸಿನಿಮಾದ ಘೋಷಣೆ ಮಾಡಿ ಒಂದು ತಿಂಗಳಾಗಿದೆ. ನೀವು ಅದಕ್ಕೆ ತೋರುತ್ತಿರುವ ಪ್ರೀತಿ, ಪ್ರಶಂಸೆ ನನಗೆ ಸರ್ವಸ್ವವೇ ಆಗಿದೆ. ನಿಮ್ಮ ಉತ್ಸಾಹ, ನಿರೀಕ್ಷೆ, ಕತೆಯ ಬಗ್ಗೆ ನೀವು ಯೋಚಿಸುತ್ತಿರುವ ರೀತಿ, ಹಂಚಿಕೊಳ್ಳುತ್ತಿರುವ ಅಭಿಪ್ರಾಯಗಳು ಇನ್ನೂ ಹೆಚ್ಚಿಗೆ ಕೆಲಸ ಮಾಡಲು ನನಗೆ ಸ್ಪೂರ್ತಿ ನೀಡುತ್ತಿವೆ ಎಂದಿದ್ದಾರೆ ಯಶ್.

     

    ನಿಮ್ಮೊಂದಿಗೆ ಖಾಸಗಿಯಾಗಿ ಬೆರೆಯುವುದು, ಮಾತನಾಡುವುದು ನಾನು ಉಳಿಸಿಕೊಳ್ಳುವ ಅತ್ಯಮೂಲ್ಯ ನೆನಪು, ಇದು ಸತ್ಯ. ಆದರೆ ಆ ಭೇಟಿಗೆ ಇನ್ನೂ ಸ್ವಲ್ಪ ದಿನ ಕಾಯಬೇಕಾಗಬಹುದು ಏಕೆಂದರೆ ಜನವರಿ 8ರಂದು ನಾನು ಲಭ್ಯವಿರಲು ಆಗುತ್ತಿಲ್ಲ. ವೈಯಕ್ತಿಕ ಭೇಟಿ ಸಾಧ್ಯವಾಗದಿದ್ದರೂ ನಿಮ್ಮ ಒಂದು ಹಾರೈಕೆ ನನಗೆ ಬಹಳ ಅಮೂಲ್ಯ ಎಂದು ಬರೆದುಕೊಂಡಿದ್ದಾರೆ.

  • ಪ್ರೊಫೈಲ್ ಫೋಟೋದಲ್ಲಿ ತಿರಂಗಾ ರಾರಾಜಿಸಲಿ – ಭಾರತೀಯರಿಗೆ ಪ್ರಧಾನಿ ಮೋದಿ ಕರೆ

    ಪ್ರೊಫೈಲ್ ಫೋಟೋದಲ್ಲಿ ತಿರಂಗಾ ರಾರಾಜಿಸಲಿ – ಭಾರತೀಯರಿಗೆ ಪ್ರಧಾನಿ ಮೋದಿ ಕರೆ

    ನವದೆಹಲಿ: ಸ್ವಾತಂತ್ರ್ಯ ದಿನದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನದಲ್ಲಿ (Har Ghar Tiranaga movement) ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾರತೀಯರಿಗೆ ಕರೆ ನೀಡಿದ್ದಾರೆ.

    ಸಾಮಾಜಿಕ ಮಾಧ್ಯಮಗಳ ಖಾತೆಗಳ ಪ್ರೊಫೈಲ್ ಚಿತ್ರಗಳನ್ನು (DP) ತ್ರಿವರ್ಣ ಧ್ವಜವಾಗಿ (Tricolor) ಬದಲಾಯಿಸಲು ಮೋದಿ ಭಾರತೀಯರಲ್ಲಿ ಮನವಿ ಮಾಡಿದ್ದಾರೆ. ಈ ಮೂಲಕ ದೇಶ ಹಾಗೂ ಭಾರತೀಯರ ನಡುವೆ ಬಾಂಧವ್ಯವನ್ನು ಗಾಢವಾಗಿಸೋಣ ಎಂದು ಅವರು ಹೇಳಿದ್ದಾರೆ.

    ಆಗಸ್ಟ್ 13ರಿಂದ 15ರ ನಡುವೆ ಹರ್ ಘರ್ ತಿರಂಗಾ ಅಭಿಯಾನವನ್ನು ಆಚರಿಸಿ. ತಿರಂಗಾ ಜೊತೆಗಿನ ಫೋಟೋ ತೆಗೆದು ಹರ್ ಘರ್ ತಿರಂಗಾ ವೆಬ್‌ಸೈಟ್‌ನಲ್ಲಿ (harghartiranga.com.) ಅಪ್‌ಲೋಡ್ ಮಾಡಿ. ಪ್ರತಿಯೊಬ್ಬ ಭಾರತೀಯನೂ ತ್ರಿವರ್ಣ ಧ್ವಜದೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದು, ಮತ್ತಷ್ಟು ರಾಷ್ಟ್ರೀಯ ಪ್ರಗತಿಗೆ ಶ್ರಮಿಸಲು ಇದು ನಮಗೆ ಸ್ಫೂರ್ತಿ ನೀಡುತ್ತದೆ ಎಂದು ಮೋದಿ ತಿಳಿಸಿದ್ದಾರೆ. ಇದನ್ನೂ ಓದಿ: BMTC ಬಸ್‍ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ- ಫ್ರೀ ಟಿಕೆಟ್ ನೀಡಲು ನಿರಾಕರಿಸಿ ನಿಂದನೆ

    ಸರ್ಕಾರದ ಹರ್ ಘರ್ ತಿರಂಗಾ ಅಭಿಯಾನ ಇಂದಿನಿಂದ (ಭಾನುವಾರ) ಪ್ರಾರಂಭವಾಗುತ್ತದೆ. ಹಾಗೂ 77ನೇ ಸ್ವಾತಂತ್ರ್ಯ ದಿನವಾದ ಆಗಸ್ಟ್ 15ರ ವರೆಗೆ ಮುಂದುವರಿಯುತ್ತದೆ. ನಾಗರಿಕರಲ್ಲಿ ದೇಶಭಕ್ತಿಯ ಪ್ರಜ್ಞೆಯನ್ನು ಬಲಪಡಿಸಲು ಹಾಗೂ ಆಜಾದಿ ಕಾ ಅಮೃತ್ ಮಹೋತ್ಸವವನ್ನು ಸ್ಮರಿಸುವ ಸಲುವಾಗಿ ಸಂಸೃತಿ ಸಚಿವಾಲಯ ಈ ಅಭಿಯಾನವನ್ನು ಆಯೋಜಿಸಿದೆ. ಇದನ್ನೂ ಓದಿ: ಲೋಕಸಭಾ ಟಿಕೆಟ್ ನೀಡುವ ವಿಚಾರದಲ್ಲಿ ರಾಜ್ಯ, ರಾಷ್ಟ್ರ ಸಮಿತಿಯವರು ತೀರ್ಮಾನ ಮಾಡ್ತಾರೆ: ಈಶ್ವರಪ್ಪ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಗಸ್ಟ್‌ 2 ವಿಶೇಷ ದಿನ; ನಾನು DP ಬದಲಾಯಿಸಿದ್ದೇನೆ, ನೀವೂ ಬದಲಾಯಿಸಿ – ಜನತೆಗೆ ಮೋದಿ ಕರೆ

    ಆಗಸ್ಟ್‌ 2 ವಿಶೇಷ ದಿನ; ನಾನು DP ಬದಲಾಯಿಸಿದ್ದೇನೆ, ನೀವೂ ಬದಲಾಯಿಸಿ – ಜನತೆಗೆ ಮೋದಿ ಕರೆ

    ನವದೆಹಲಿ: 75ನೇ ಸ್ವಾತಂತ್ರ್ಯ ದಿನೋತ್ಸವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಮಾಧ್ಯಮದ ತಮ್ಮ ಖಾತೆಗಳ ಡಿಪಿಯನ್ನು ಬದಲಾಯಿಸಿದ್ದು, ತ್ರಿವರ್ಣ ಧ್ವಜದ ಚಿತ್ರವನ್ನು ಹಾಕಿಕೊಂಡಿದ್ದಾರೆ. ದೇಶದ ಜನತೆಯೂ ತಮ್ಮ ಡಿಪಿಯಲ್ಲಿ ತ್ರಿವರ್ಣ ಧ್ವಜದ ಚಿತ್ರ ಹಾಕಿಕೊಳ್ಳುವಂತೆ ಕರೆ ನೀಡಿದ್ದಾರೆ.

    ʼಆಗಸ್ಟ್‌ 2 ವಿಶೇಷವಾದ ದಿನ! ನಾವು ಆಜಾದಿ ಕಾ ಅಮೃತ್ ಮಹೋತ್ಸವವನ್ನು ಆಚರಿಸುತ್ತಿರುವ ಸಮಯದಲ್ಲಿ, ನಮ್ಮ ರಾಷ್ಟ್ರವು ತ್ರಿವರ್ಣ ಧ್ವಜವನ್ನು ಗೌರವಿಸುವ ಸಾಮೂಹಿಕ ಆಂದೋಲನವಾದ ಹರ್‌ ಘರ್‌ ತಿರಂಗಾಗೆ ಸಿದ್ಧವಾಗಿದೆ. ನಾನು ನನ್ನ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ DP ಅನ್ನು ಬದಲಾಯಿಸಿದ್ದೇನೆ. ನೀವು ಕೂಡ ಹಾಗೆಯೇ ಮಾಡಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿ ತಿಳಿಸಿದ್ದಾರೆ. ಇದನ್ನೂ ಓದಿ: ಪೊಲೀಸರಿಗಿಂತ ಇಡಿಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ: ಮೋದಿ ವಿರುದ್ಧ ಅಶೋಕ್ ಗೆಹ್ಲೋಟ್ ಕಿಡಿ

    ರಾಷ್ಟ್ರಧ್ವಜವನ್ನು ವಿನ್ಯಾಸಗೊಳಿಸಿದ ಪಿಂಗಲಿ ವೆಂಕಯ್ಯ ಅವರ ಜನ್ಮದಿನಕ್ಕೆ ಈ ಮೂಲಕ ಪ್ರಧಾನಿ ಗೌರವ ಸಲ್ಲಿಸಿದರು.

    ಮಹಾನ್ ಪಿಂಗಲಿ ವೆಂಕಯ್ಯ ಅವರ ಜನ್ಮದಿನದಂದು ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ. ನಾವು ಹೆಮ್ಮೆಪಡುವ ತ್ರಿವರ್ಣ ಧ್ವಜವನ್ನು ನಮಗೆ ನೀಡಿದ ಅವರಿಗೆ ಎಂದೆಂದಿಗೂ ದೇಶ ಋಣಿಯಾಗಿದೆ. ತ್ರಿವರ್ಣ ಧ್ವಜದಿಂದ ಶಕ್ತಿ ಮತ್ತು ಸ್ಫೂರ್ತಿಯನ್ನು ಪಡೆದು ರಾಷ್ಟ್ರೀಯ ಪ್ರಗತಿ ಕೆಲಸವನ್ನು ಮುಂದುವರಿಸೋಣ ಎಂದು ಮತ್ತೊಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಬೆಲೆ ಏರಿಕೆ ವಿರೋಧಿಸಿ ಸದನದಲ್ಲಿ ಹಸಿ ಬದನೆಕಾಯಿ ತಿಂದ ಸಂಸದೆ

    ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಕೇಂದ್ರ ಗೃಹ ಸಚಿವ, ಜೆ.ಪಿ.ನಡ್ಡಾ ಸೇರಿದಂತೆ ಅನೇಕ ಬಿಜೆಪಿ ನಾಯಕರು ತಮ್ಮ ಸೋಷಿಯಲ್‌ ಮೀಡಿಯಾ ಖಾತೆಗಳ ಡಿಪಿಯಲ್ಲಿ ರಾಷ್ಟ್ರಧ್ವಜದ ಚಿತ್ರ ಹಾಕಿಕೊಂಡಿದ್ದಾರೆ.

    ಭಾನುವಾರದ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಪ್ರಧಾನ ಮಂತ್ರಿ ಅವರು ಆಗಸ್ಟ್ 2ರಿಂದ 15ರ ನಡುವೆ ಸಾಮಾಜಿಕ ಮಾಧ್ಯಮದಲ್ಲಿ ತ್ರಿವರ್ಣ ಧ್ವಜವನ್ನು ಎಲ್ಲರೂ ಪ್ರೊಫೈಲ್ ಚಿತ್ರವಾಗಿ ಬಳಸಿಕೊಂಡು ಹರ್‌ ಘರ್‌ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದ್ದರು.

    Live Tv
    [brid partner=56869869 player=32851 video=960834 autoplay=true]