Tag: Dr. Ashwathnarayan

  • ಶ್ರೀರಾಮನ ಹೆಸರು ಕೇಳಿದ್ರೆ ಕೆಲವರಿಗೆ ನಡುಕ ಶುರುವಾಗುತ್ತೆ: ಅಶ್ವಥ್ ನಾರಾಯಣ

    ಶ್ರೀರಾಮನ ಹೆಸರು ಕೇಳಿದ್ರೆ ಕೆಲವರಿಗೆ ನಡುಕ ಶುರುವಾಗುತ್ತೆ: ಅಶ್ವಥ್ ನಾರಾಯಣ

    ರಾಮನಗರ: ರಾಮದೇವರ ಬೆಟ್ಟವು (RamaDevra Betta)  ಅನೇಕ ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾಗಿದೆ. ಹೀಗಾಗಿ ಜೀರ್ಣೋದ್ಧಾರ ಅಭಿವೃದ್ಧಿಗೆ ಡಿಪಿಆರ್ ಸಿದ್ಧ ಪಡಿಸಲಾಗುತ್ತಿದೆ. ಈ ಯೋಜನೆಯನ್ನು ಯಾರು ನಿಲ್ಲಿಸಲು ಸಾಧ್ಯವಿಲ್ಲ ಎಂದು ರಾಮನಗರದಲ್ಲಿ ಉಸ್ತುವಾರಿ ಸಚಿವ ಅಶ್ವಥ್ ನಾರಾಯಣ (Dr. Ashwathnarayan) ತಿಳಿಸಿದ್ದಾರೆ.

    ರಾಮದೇವರ ಬೆಟ್ಟ ಅಭಿವೃದ್ಧಿ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶ್ರೀರಾಮನ ಹೆಸರು ಕೇಳಿದ್ರೆ ಕೆಲವರಿಗೆ ನಡುಕ ಶುರುವಾಗುತ್ತೆ. ರಾಮನಗರದಲ್ಲಿ ಈವರೆಗೂ ರಾಮದೇವರ ಬೆಟ್ಟ ಅಭಿವೃದ್ಧಿ ಆಗಿಲ್ಲ. ಕೆಲವರು ಅಸಹಾಯಕರಾಗಿದ್ದಾರೆ. ಬೇರೆ ಪಕ್ಷದ ಯಾರೊಬ್ಬರು ಬೆಟ್ಟ ನೋಡಿಲ್ಲ. ರಾಮಜನ್ಮ ಭೂಮಿ ಬಿಟ್ಟರೆ, ರಾಮನಗರದ ರಾಮದೇವರ ಬೆಟ್ಟ ಮತ್ತೊಂದು ಪವಿತ್ರ ಕ್ಷೇತ್ರವಾಗಲಿದೆ. ಎಲ್ಲಾ ಸೂಕ್ಷ್ಮತೆಗಳನ್ನು ಗಮನಿಸಿ ಕಾನೂನಿನ ಚೌಕಟ್ಟಿನ ಪರಿದಿಯೊಳಗೆ ರಾಮದೇವರ ಬೆಟ್ಟ ಅಭಿವೃದ್ಧಿ ಮಾಡಿಯೇ ತಿರುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಮೋದಿ ಹೇಳೋದು ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತೆ: ಬಿಕೆ ಹರಿಪ್ರಸಾದ್ ಕಿಡಿ

    ಡಿ.ಕೆ.ಶಿವಕುಮಾರ್ (D.K Shivakumar)  ಸಿಡಿ ಮಾಡಿಸಿದ್ದರು ಎಂದು ರಮೇಶ್ ಜಾರಕಿಹೊಳಿ (Ramesh Jarkiholi)  ಹೇಳಿಕೆ ಬಗ್ಗೆ ಮಾತನಾಡಿದ ಸಚಿವರು, ಈ ಬಗ್ಗೆ ತನಿಖೆ ನಡೆದು ಸತ್ಯಾಂಶ ಹೊರಬರಬೇಕು. ಷಡ್ಯಂತ್ರ ಮಾಡುವವರು, ಬ್ಲಾಕ್ ಮೇಲರ್‌ಗಳಿಗೆ ತಕ್ಕ ಪಾಠ ಕಲಿಸುವ ಕೆಲಸ ಆಗಬೇಕು. ಈ ಬಗ್ಗೆ ಜಾರಕಿಹೊಳಿ ಸಹ ತನಿಖೆ ನಡೆಸಿ ಎಂದಿದ್ದಾರೆ. ಅದನ್ನು ಸ್ವಾಗತಿಸುತ್ತೇನೆ ಎಂದು ಪರೋಕ್ಷವಾಗಿ ಡಿಕೆಶಿ ವಿರುದ್ಧ ಅಶ್ವಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮೋದಿ ಪದೇ ಪದೇ ರಾಜ್ಯಕ್ಕೆ ಬರುವುದರಿಂದ JDS, ಕಾಂಗ್ರೆಸ್‍ಗೆ ಭಯ ಶುರುವಾಗಿದೆ: ಶಂಕರ್ ಪಾಟೀಲ್ ಮುನೇನಕೊಪ್ಪ

    ಸಚಿವ ಸುಧಾಕರ್ ಆರೋಗ್ಯ ಇಲಾಖೆಯಲ್ಲಿ ಅವ್ಯವಹಾರ ಮಾಡಿದ್ದಾರೆ ಎಂಬ ಸಿದ್ದರಾಮಯ್ಯ (Siddaramaiah)  ಆರೋಪ ಕುರಿತು ಪ್ರತಿಕ್ರಿಯಿಸಿದ ಅವರು, ಈ ಕುರಿತು ಚರ್ಚೆ ಮಾಡಲು ಸದನ ಇದೆ. ಕಮಿಟಿ ಇದೆ. ಅಲ್ಲಿ ಆರೋಗ್ಯ ಇಲಾಖೆ ಬಗ್ಗೆ ಮಾತನಾಡಬೇಕಿತ್ತು. ಅದನ್ನು ಬಿಟ್ಟು ನಿರಾಧಾರವಾಗಿ ಆರೋಗ್ಯ ಇಲಾಖೆಯಲ್ಲಿ ಹಗರಣ ನಡೆದಿದೆ ಎಂದು ಹೇಳಿಕೆ ನೀಡುವುದು ಸರಿ ಅಲ್ಲ. ಮೈ ಪರಚಿಕೊಂಡು ಅಪದಾನೆ ಮಾಡಿದ್ರೆ ಸುಳ್ಳು ಸತ್ಯವಾಗುವುದಿಲ್ಲ ಎಂದು ಟಾಂಗ್ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜ.21 ರಿಂದ ಬಿಜೆಪಿಯ ವಿಜಯ ಸಂಕಲ್ಪ ಅಭಿಯಾನ – ಡಬಲ್ ಇಂಜಿನ್ ಸರ್ಕಾರಗಳ ರಿಪೋರ್ಟ್ ಕಾರ್ಡ್ ಅನಾವರಣ

    ಜ.21 ರಿಂದ ಬಿಜೆಪಿಯ ವಿಜಯ ಸಂಕಲ್ಪ ಅಭಿಯಾನ – ಡಬಲ್ ಇಂಜಿನ್ ಸರ್ಕಾರಗಳ ರಿಪೋರ್ಟ್ ಕಾರ್ಡ್ ಅನಾವರಣ

    ಬೆಂಗಳೂರು: ಬಿಜೆಪಿ (BJP) ವಿಜಯ ಸಂಕಲ್ಪ ಅಭಿಯಾನವನ್ನು (Vijaya Sankalpa Abhiyan) ಇದೇ ಜನವರಿ 21 ರಿಂದ 29 ರವರೆಗೆ ಹಮ್ಮಿಕೊಳ್ಳಲಾಗುವುದು. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (JP Nadda) ವಿಜಯಪುರದ ಸಿಂಧಗಿಯಲ್ಲಿ ಅಭಿಯಾನಕ್ಕೆ ಚಾಲನೆ ಕೊಡಲಿದ್ದಾರೆ ಎಂದು ಅಭಿಯಾನದ ರಾಜ್ಯ ಸಂಚಾಲಕ ಮತ್ತು ರಾಜ್ಯದ ಉನ್ನತ ಶಿಕ್ಷಣ, ಐಟಿ ಮತ್ತು ಬಿಟಿ ಸಚಿವ ಡಾ ಸಿ.ಎನ್.ಅಶ್ವಥ್‍ ನಾರಾಯಣ (Dr. Ashwathnarayan) ತಿಳಿಸಿದರು.

    ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ನಿಕಟಪೂರ್ವ ಸಿಎಂ ಮತ್ತು ಮಾರ್ಗದರ್ಶಕರಾದ ಬಿ.ಎಸ್.ಯಡಿಯೂರಪ್ಪ (B.S Yediyurappa), ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ (Nalinkumar Kateel) ಅವರು 21 ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕೇಂದ್ರ- ರಾಜ್ಯ ಸರ್ಕಾರಗಳ ಸಾಧನೆ, ಕೊಡುಗೆ, ಕಾರ್ಯಕ್ರಮಗಳ ಕುರಿತು ಕರಪತ್ರಗಳನ್ನು ಹಂಚಿಕೆ ಮಾಡಲಾಗುವುದು. 2 ಕೋಟಿಗಿಂತ ಹೆಚ್ಚು ಮತದಾರರ ಸಂಪರ್ಕ ಮಾಡಿ, ಅವರ ಮನೆಮನೆಗೆ ತೆರಳಿ ಕರಪತ್ರ ಹಂಚಲಿದ್ದೇವೆ. ಫಲಾನುಭವಿಗಳನ್ನು ಮಾತನಾಡಿಸಿ ಒಂದು ಕೋಟಿಗಿಂತ ಹೆಚ್ಚು ಕುಟುಂಬಗಳನ್ನು ಸಂಪರ್ಕಿಸಲಿದ್ದೇವೆ. ಬಿಜೆಪಿ ಸರ್ಕಾರಗಳ ಯೋಜನೆಗಳಿಂದ ಈ ಕುಟುಂಬಗಳ ಸಬಲೀಕರಣ ಆದುದನ್ನು ತಿಳಿಸಲಿದ್ದೇವೆ. ವಾಹನಗಳ ಮೇಲೆ ಸ್ಟಿಕರ್ ಹಾಕಿಸುವ ಕೆಲಸವೂ ನಡೆಯಲಿದೆ. ಇದಕ್ಕಾಗಿ ಪೂರ್ವಭಾವಿ ಸಭೆಗಳನ್ನು ಈಗಾಗಲೇ 10 ವಿಭಾಗ ಮಟ್ಟದಲ್ಲಿ ನಡೆಸಲಾಗಿದೆ. 39 ಸಂಘಟನಾತ್ಮಕ ಜಿಲ್ಲೆಗಳು, 312 ಮಂಡಲಗಳಲ್ಲಿ ಸಭೆಗಳನ್ನು ಏರ್ಪಡಿಸಿ ಸಮಿತಿಗಳನ್ನೂ ರಚಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ರಾಮ ಮಂದಿರದ ಜೊತೆ ಬಡವರಿಗೆ ಮನೆ ನಿರ್ಮಿಸೋಣ: ವರ್ಷದೊಳಗೆ 6 ಮನೆ ಕಟ್ಟಿಸಲು ಪೇಜಾವರ ಶ್ರೀ ನಿರ್ಧಾರ

     

     

    ಏಕಕಾಲದಲ್ಲಿ ಎಲ್ಲ ಬೂತ್‍ಗಳಲ್ಲೂ, ಮಂಡಲಗಳಲ್ಲೂ ಅಭಿಯಾನ ಮುಂದುವರಿಯಲಿದೆ. ಕೇಂದ್ರ- ರಾಜ್ಯಗಳ ಸಚಿವರು, ಲೋಕಸಭೆ, ರಾಜ್ಯಸಭೆ ಸದಸ್ಯರು, ವಿಧಾನಸಭೆ, ವಿಧಾನಪರಿಷತ್ತಿನ ಸದಸ್ಯರು, ಪಕ್ಷದ ಪ್ರಮುಖರು ಈ ಕಾರ್ಯದಲ್ಲಿ ಕೈಜೋಡಿಸಲಿದ್ದಾರೆ. ಮಿಸ್ಡ್ ಕಾಲ್ ಕೊಡುವ ಮೂಲಕ ಸದಸ್ಯತ್ವ ನೋಂದಣಿ ಅಭಿಯಾನವೂ ನಡೆಯಲಿದೆ. ಒಂದು ಕೋಟಿಗೂ ಹೆಚ್ಚು ಸದಸ್ಯರನ್ನು ನೋಂದಾಯಿಸುವ ಗುರಿ ಹೊಂದಿದ್ದೇವೆ. ಸಮಾಜದ ಸಮಸ್ತರನ್ನು ಪಕ್ಷದ ಜೊತೆ ಸೇರ್ಪಡೆ ಮಾಡಿ, ದೇಶ ಕಟ್ಟುವ ಕಾರ್ಯದಲ್ಲಿ ಎಲ್ಲರನ್ನೂ ಜೊತೆಗೂಡಿಸಲಾಗುವುದು. ಬಿಜೆಪಿ ನೇತೃತ್ವದ ಸರ್ಕಾರವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಬೂತ್ ವಿಜಯ ಅಭಿಯಾನವನ್ನು ಪಕ್ಷವು ಈಗಾಗಲೇ ಯಶಸ್ವಿಯಾಗಿ- ಅಭೂತಪೂರ್ವವಾಗಿ ಪೂರ್ಣಗೊಳಿಸಿದೆ ಎಂದು ಅವರು ತಿಳಿಸಿದರು. 58 ಸಾವಿರಕ್ಕೂ ಹೆಚ್ಚು ಬೂತ್ ಇದ್ದು, ಆ ಪೈಕಿ 51 ಸಾವಿರಕ್ಕೂ ಹೆಚ್ಚು ಸಮಿತಿಗಳನ್ನು ರಚಿಸಲಾಗಿದೆ. ಪೇಜ್ ಪ್ರಮುಖರನ್ನು ನೇಮಿಸಿದ್ದು, 32 ಲಕ್ಷಕ್ಕೂ ಹೆಚ್ಚು ಮನೆಗಳ ಮೇಲೆ ಬಿಜೆಪಿ ಧ್ವಜಗಳನ್ನು ಹಾರಿಸಿದ್ದರ ವಿವರ ನೀಡಿದರು. ಪಕ್ಷವನ್ನು ಸದೃಢವಾಗಿ ಬೆಳೆಸಲಾಗುವುದು. ಪ್ರತಿ ಬೂತ್‍ನಲ್ಲಿ ಪಕ್ಷವನ್ನು ಸದೃಢ ಪಡಿಸಲಾಗುತ್ತಿದೆ. ‘ಮನ್ ಕಿ ಬಾತ್’ ಕಾರ್ಯಕ್ರಮವನ್ನು ಕನಿಷ್ಠ ಶೇ.90 ಬೂತ್‍ಗಳಲ್ಲಿ ಕೇಳಲಿದ್ದೇವೆ. ಕನಿಷ್ಠ 5 ಲಕ್ಷ ಗೋಡೆ ಬರಹಗಳನ್ನೂ ಮಾಡುತ್ತೇವೆ. ಕಾರು, ಬೈಕ್ ಮತ್ತಿತರ ವಾಹನಗಳ ಮೇಲೆ ಹಚ್ಚಲು ಕನಿಷ್ಠ 3 ಕೋಟಿ ಸ್ಟಿಕರ್ ಹಂಚಲಿದ್ದೇವೆ ಎಂದು ತಿಳಿಸಿದರು.

    ಕೆಲವರು ಬಸ್ ಮೂಲಕ ಕೆಲವಷ್ಟು ಜನರನ್ನು ತಲುಪಬಹುದು. ನಾವು ಮನೆಮನೆಗೆ ತೆರಳಲಿದ್ದೇವೆ. ಇದನ್ನು ಎದುರಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ನುಡಿದರು. ಕಿಸಾನ್ ಸಮ್ಮಾನ್, ಉಜ್ವಲ, ಮುದ್ರಾ ಸೇರಿದಂತೆ ನಾವು ಜಾರಿಗೊಳಿಸಿದ ಹತ್ತಾರು ಕಾರ್ಯಕ್ರಮಗಳ ಬಗ್ಗೆ ಜನಜಾಗೃತಿ ಮೂಡಿಸುತ್ತೇವೆ ಎಂದು ವಿವರಿಸಿದರು. ಇದನ್ನೂ ಓದಿ: ನನಗೆ ಯಾವುದೇ ನೋಟಿಸ್‌ ಬಂದಿಲ್ಲ: ಯತ್ನಾಳ್‌

    ಕಾಂಗ್ರೆಸ್ ಸೀಟಿನ ಸಂಖ್ಯೆ ಇನ್ನಷ್ಟು ಕುಸಿತ:
    ಸಮಸ್ಯೆ ಆಗಿರುವುದೇ ಕಾಂಗ್ರೆಸ್ (Congress). ಅತಿವೃಷ್ಟಿ, ಬರ ಬಂದರೆ ಮಲಗಿಯೇ ಇರುತ್ತೇವೆ. 120 ಸೀಟಿದ್ದುದು ಕಳೆದ ಬಾರಿ 80 ಆದುದೇ ಕಾಂಗ್ರೆಸ್ ಸಾಧನೆ. ಅವರಲ್ಲಿ ಒಗ್ಗಟ್ಟಿಲ್ಲ. ಸೀಟನ್ನು 50ಕ್ಕಿಂತ ಕಡಿಮೆ ಮಾಡಿಕೊಳ್ಳುವುದೇ ಅವರ ಸಾಧನೆ ಆಗಲಿದೆ. ನಮ್ಮ ಗ್ರಾಫ್ ಪೂರ್ತಿ ಓಡುತ್ತಿದೆ. ದುರ್ಬಲ ಬೂತ್ ಇದ್ದ ಕಡೆ ಅದನ್ನು ಸಶಕ್ತ ಮಾಡಿದ್ದೇವೆ. 51 ಸಾವಿರ ಬೂತ್‍ಗಳಲ್ಲಿ ಬೂತ್ ವಿಜಯ ಅಭಿಯಾನ ಮಾಡಿದ್ದೇವೆ. ಬೇರೆಯವರಂತೆ ಕೆಲಸ ಅರ್ಧದಲ್ಲಿ ನಿಲ್ಲುವುದಿಲ್ಲ. ಜನಸಂಕಲ್ಪ ಯಾತ್ರೆಗಳು ನೂರಾರು ಜಾಗಗಳಲ್ಲಿ ನಡೆದಿದೆ. ವಿವಿಧ ಸಮಾವೇಶಗಳನ್ನು ಮಾಡಿದ್ದೇವೆ. 58 ಸಾವಿರ ಬೂತ್, 312 ಮಂಡಲ, 38 ಸಂಘಟನಾ ಜಿಲ್ಲೆಗಳಲ್ಲಿ ವಿಜಯ ಸಂಕಲ್ಪ ಅಭಿಯಾನ ನಡೆಯಲಿದೆ ಎಂದು ತಿಳಿಸಿದರು.

    ನೆರೆ ಸಂದರ್ಭದಲ್ಲಿ ಪರಿಹಾರ ಹೆಚ್ಚಳ, ಬೆಳೆ ನಷ್ಟಕ್ಕೆ ಗರಿಷ್ಠ ಸಹಾಯಧನ ನೀಡಲಾಗಿದೆ. ಬೆಳೆ ನಷ್ಟವಾದಾಗ ಕೇವಲ ಒಂದು ವಾರದಲ್ಲಿ ಪರಿಹಾರ ಕೊಟ್ಟಿದ್ದೇವೆ. 2 ವರ್ಷಕ್ಕಿಂತ ಹೆಚ್ಚು ಕಾಲ ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡಿದ್ದೇವೆ. ಎಲ್ಲ ಸುಧಾರಣೆಗಳನ್ನೂ ಸಮರ್ಪಕವಾಗಿ ತಲುಪಿಸಿದ್ದೇವೆ. ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ನೂರು ರೂಪಾಯಿಗೆ 15 ರೂಪಾಯಿ ಫಲಾನುಭವಿಗೆ ತಲುಪುತ್ತಿತ್ತು. ಇದು ಜನರಿಗೆ ತಿಳಿದಿದೆ. ಆದ್ದರಿಂದ, ಜನರು ಬಿಜೆಪಿಯನ್ನು ಬೆಂಬಲಿಸುತ್ತಾರೆ. ಕರ್ನಾಟಕದಲ್ಲಿ ಅತಿ ಕಡಿಮೆ ನಿರುದ್ಯೋಗ ಪ್ರಮಾಣ ಇದೆ. ಗರಿಷ್ಠ ಎಫ್‍ಡಿಐ, ಇನೊವೇಟಿವ್ ರಾಜ್ಯ, ತಂತ್ರಜ್ಞಾನ, ಕಂದಾಯ ಕಾಯ್ದೆ, ರೈತರ ಸಮಸ್ಯೆ ಪರಿಹಾರ ಮಾಡಿದ್ದೇವೆ. ಜಲ್‍ಜೀವನ್ ಮಿಷನ್‍ನಡಿ ಪ್ರತಿ ಮನೆಗೆ ಕುಡಿಯುವ ನೀರು ಕೊಡುತ್ತಿದ್ದೇವೆ. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಗರಿಷ್ಠ ಅನುದಾನ ಕೊಟ್ಟಿದ್ದೇವೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. 300 ನಮ್ಮ ಕ್ಲಿನಿಕ್, ತಾಲೂಕು- ಜಿಲ್ಲಾ ಆಸ್ಪತ್ರೆಗಳ ಅಭಿವೃದ್ಧಿ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿ ಆಗಿದೆ. ಹಾಸ್ಟೆಲ್‍ಗಳ ನಿರ್ಮಾಣ ಸೇರಿ ಎಲ್ಲ ವರ್ಗದವರಿಗೆ ತಲುಪುತ್ತಿದ್ದೇವೆ. ಗುಣಮಟ್ಟದ ಶಿಕ್ಷಣ ಕೊಡುತ್ತಿದ್ದೇವೆ ಎಂದು ವಿವರ ನೀಡಿದರು. ಇದನ್ನೂ ಓದಿ: ಯತ್ನಾಳ್‌ಗೆ ಶಾಕ್‌ ಕೊಟ್ಟ ಬಿಜೆಪಿ ಹೈಕಮಾಂಡ್‌

    150 ಕ್ಷೇತ್ರಗಳಲ್ಲಿ ಗೆಲುವು ಖಚಿತ
    150 ಕ್ಷೇತ್ರಗಳಲ್ಲಿ ಗೆಲುವಿನ ಮಿಷನ್ ಅನ್ನು ಈಡೇರಿಸಲು ಬಿಜೆಪಿ ಸಿದ್ಧಗೊಂಡಿದೆ. ಪವರ್ ಕಟ್ ಮಾಡಿದ, ಕತ್ತಲಲ್ಲಿ ಬಜೆಟ್ ಮಂಡಿಸಿದ ಸಿದ್ದರಾಮಯ್ಯರವರು ಎಲ್ಲಿಂದ ಉಚಿತ ವಿದ್ಯುತ್ ಕೊಡಲು ಸಾಧ್ಯ ಎಂದು ಅವರು ಪ್ರಶ್ನಿಸಿದರು. ಕಾಂಗ್ರೆಸ್ ಹದಗೆಡಿಸಿದ್ದನ್ನು ನಾವು ಸರಿಪಡಿಸಿದ್ದೇವೆ. ರಾಮಮಂದಿರ ನಿರ್ಮಾಣ, 370ನೇ ವಿಧಿ ರದ್ದತಿ, ತ್ರಿವಳಿ ತಲಾಖ್ ರದ್ದು, ಗೋಹತ್ಯಾ ನಿಷೇಧ ಸೇರಿ ಅನೇಕ ಮಹತ್ವದ ನಿರ್ಧಾರಗಳನ್ನು ನಮ್ಮ ಡಬಲ್ ಎಂಜಿನ್ ಸರ್ಕಾರ ತೆಗೆದುಕೊಂಡಿದೆ. ಮಹದಾಯಿ, ಕಾವೇರಿ, ಕೃಷ್ಣಾ, ಎತ್ತಿನಹೊಳೆ ಸೇರಿ ನೀರಾವರಿಗೆ ಆದ್ಯತೆ ಕೊಟ್ಟಿದ್ದೇವೆ. ಮೂಲಸೌಕರ್ಯ ಅಭಿವೃದ್ಧಿಗೆ ಗರಿಷ್ಠ ಆದ್ಯತೆ ಕೊಟ್ಟಿದ್ದೇವೆ ಎಂದು ಮಾಹಿತಿ ಹಂಚಿಕೊಂಡರು.

    ಪಕ್ಷದ ವಿರುದ್ಧ ಇದ್ದರೆ ಅದರದೇ ಆದ ಕ್ರಮವನ್ನು ಅವರು ಎದುರಿಸಬೇಕಾಗುತ್ತದೆ. ಪಕ್ಷದ ಚೌಕಟ್ಟಿನಲ್ಲಿ ಎಲ್ಲರೂ ಇರಬೇಕಾಗುತ್ತದೆ. ಕಾಂಗ್ರೆಸ್ ಎಲ್ಲಾ ಕಡೆ ಮುಳುಗುವ ಹಡಗಾಗಿದೆ. ಅಪ್ರಸ್ತುತ ಪಕ್ಷವಾಗಿದೆ. ಆ ಪಕ್ಷದವರಿಗೆ ಸ್ಪಷ್ಟತೆ ಇಲ್ಲ. ಕೋವಿಡ್ ಲಸಿಕೆ ಪಡೆಯಬೇಡಿ ಎಂದ ಪಕ್ಷವದು. ಈ ಮಟ್ಟದಲ್ಲಿ ‘ನಾ ನಾಯಕಿ’ ಕಾರ್ಯಕ್ರಮ ಅದಲ್ಲ. ನಾ ನಾಲಾಯಕ್ ಕಾರ್ಯಕ್ರಮವದು. ಉತ್ತರ ಪ್ರದೇಶದಂತೆ ರಾಜ್ಯದಲ್ಲೂ ಕಾಂಗ್ರೆಸ್ ಪಕ್ಷವನ್ನು ಜನರು ತಿರಸ್ಕರಿಸಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಅಭಿಯಾನದ ಸಹ ಸಂಚಾಲಕ ಸಿದ್ದರಾಜು, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ ಮಾಧ್ಯಮಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಾಮನಿಗೂ ಅಶ್ವಥ್ ನಾರಾಯಣಗೂ ಏನು ಸಂಬಂಧ, ತುಂಬಾ ಮಾತನಾಡುವುದು ಬೇಡ: HDD ವಾರ್ನಿಂಗ್‌

    ರಾಮನಿಗೂ ಅಶ್ವಥ್ ನಾರಾಯಣಗೂ ಏನು ಸಂಬಂಧ, ತುಂಬಾ ಮಾತನಾಡುವುದು ಬೇಡ: HDD ವಾರ್ನಿಂಗ್‌

    ರಾಯಚೂರು: ರಾಮನಿಗೂ (Rama) ಸಚಿವ ಅಶ್ವಥ್ ನಾರಾಯಣಗೂ (Dr. Ashwathnarayan) ಏನು ಸಂಬಂಧ, ಅಶ್ವಥ್ ನಾರಾಯಣ ತುಂಬಾ ಮಾತನಾಡುವುದು ಬೇಡ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (H.D Devegowda) ಕಿಡಿಕಾರಿದ್ದಾರೆ.

    ರಾಯಚೂರಿನ ಮಾನ್ವಿಯಲ್ಲಿ ಶಾಸಕ ವೆಂಕಟಪ್ಪ ನಾಯಕ್ ಸಹೋದರನ ಮದುವೆ, ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ರಾಮನಗರದಲ್ಲಿ ರಾಮಮಂದಿರ ನಿರ್ಮಾಣ ಮಾಡ್ತೀವಿ ಅನ್ನೋ ವಿಚಾರದ ಕುರಿತಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ದೇವೇಗೌಡರು, ಅಶ್ವಥ್ ನಾರಾಯಣ ಬಗ್ಗೆ ಅವರ ವಿಚಾರಗಳ ಬಗ್ಗೆ ವಿಧಾನಸೌಧದಲ್ಲಿ ಸಾಕಷ್ಟು ಚರ್ಚೆ ಆಗಿವೆ ಎಂದು ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ತಾಯಿ ಹೀರಾಬೆನ್ ಆಸ್ಪತ್ರೆಗೆ ದಾಖಲು

    ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಎಲ್ಲಿಂದ ಚುನಾವಣೆಗೆ ಸ್ಪರ್ಧೆ ಮಾಡಬೇಕು ಅನ್ನೋ ವಿಚಾರವಾಗಿ ಮಾತನಾಡಿ, ಜನ ಈ ಬಗ್ಗೆ ತಿರ್ಮಾನ ಮಾಡ್ತಾರೆ. ಅವನಿಗೆ B ಫಾರ್ಮ್ ಕೊಡುವವನು ನಾನು. ಮಂಡ್ಯದಲ್ಲಿ ಸ್ಪರ್ಧೆ ಮಾಡ್ತಾನೆ, ಕನಕಪುರ ಅದೆಲ್ಲಾ ಊಹಾಪೋಹಗಳು. ಜನ ಪ್ರೀತಿಯಿಂದ ಹೇಳುತ್ತಾರೆ ಅಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಅಶ್ವಥ್ ನಾರಾಯಣನ ಮಂದಿರವಾದರೂ ಕಟ್ಟಲಿ ನಾವೇನೂ ಸಿಟ್ಟಾಗಲ್ಲ: ಡಿಕೆಶಿ

    ಚುನಾವಣೆ ಮುಂದೆ ಇಟ್ಟುಕೊಂಡೆ ಈ ವಯಸ್ಸಿನಲ್ಲಿ ಓಡಾಡುತ್ತಿದ್ದೇನೆ. ಇಲ್ಲಿವರೆಗೆ ಏನೇನು ಕಾರ್ಯಕ್ರಮಗಳನ್ನು ಮಾಡಿದ್ದೇವೆ ಎಂದು ಸಾರ್ವಜನಿಕವಾಗಿ ಹೇಳಬೇಕಿದೆ. ಹಾಗಾಗಿ ಪಂಚರತ್ನ ಕಾರ್ಯಕ್ರಮ ಮಾಡಿದ್ದೇವೆ. ನಮ್ಮ ಯೋಜನೆಗಳನ್ನು ಜನರ ಮುಂದೆ ಇಟ್ಟಿದ್ದೀವಿ. ಕುಮಾರಸ್ವಾಮಿಗೆ ತುಮಕೂರು ಜಿಲ್ಲೆಯಲ್ಲಿ ಕಾರ್ಯಕ್ರಮ ಇದೆ. ನನಗೆ ಮಾನ್ವಿ ತಾಲೂಕಿಗೆ ಹೋಗಬೇಕು. ಇಲ್ಲಿಗೆ ಬರಲೇ ಬೇಕು ಅಂತ ಬಂದಿದ್ದೇನೆ. ನಿಖಿಲ್ ಬರಬೇಕಿತ್ತು, ಬೇರೆ ಕಾರಣದಿಂದ ಬರಲು ಆಗಲಿಲ್ಲ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬೆಳಗಾವಿಯಲ್ಲಿ ಹೂಡಿಕೆಗೆ ಅಮೆರಿಕದ ರಾಕ್ ಸ್ಪೇಸ್ ಕಂಪನಿ ಆಸಕ್ತಿ – ಸಚಿವರರೊಂದಿಗೆ ಮಾತುಕತೆ

    ಬೆಳಗಾವಿಯಲ್ಲಿ ಹೂಡಿಕೆಗೆ ಅಮೆರಿಕದ ರಾಕ್ ಸ್ಪೇಸ್ ಕಂಪನಿ ಆಸಕ್ತಿ – ಸಚಿವರರೊಂದಿಗೆ ಮಾತುಕತೆ

    ಬೆಳಗಾವಿ: ಅಮೆರಿಕದ ರಾಕ್ ಸ್ಪೇಸ್ ಕಂಪನಿಯು (America Rock Space Company) ಬೆಳಗಾವಿಯಲ್ಲಿ (Belagavi) ತನ್ನ ಕ್ಲೌಡ್ ತಂತ್ರಜ್ಞಾನದ ನಾವೀನ್ಯತಾ ಕೇಂದ್ರವನ್ನು ಸ್ಥಾಪಿಸುವ ಸಂಬಂಧ ಐಟಿ-ಬಿಟಿ ಸಚಿವ ಡಾ.ಸಿ.ಎನ್ ಅಶ್ವಥ್ ನಾರಾಯಣ Dr. (Ashwathnarayan) ಅವರೊಂದಿಗೆ ಪೂರ್ವಭಾವಿ ಮಾತುಕತೆ ನಡೆಸಿದೆ.

    ಇಲ್ಲಿನ ಸುವರ್ಣಸೌಧದ ವಿಧಾನಪರಿಷತ್ ಮೊಗಸಾಲೆಯಲ್ಲಿ ನಡೆದ ಮಾತುಕತೆಯಲ್ಲಿ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿ ಮುಂತಾದ ಪ್ರಮುಖ ಅಂಶಗಳನ್ನು ಕುರಿತು ವಿಚಾರ ವಿನಿಮಯ ಮಾಡಿಕೊಳ್ಳಲಾಯಿತು. ಕಂಪನಿಯ ಪರವಾಗಿ ಅದರ ಸಿಇಒ ಅಮರ್ ಮಲೆತೀರ ಇದ್ದರು. ಇದನ್ನೂ ಓದಿ: ಕೊರಿಯರ್ ಶಾಪ್‍ನಲ್ಲಿ ಮಿಕ್ಸಿ ಸ್ಫೋಟ ಕೇಸ್- ಬಾಂಬ್ ನಿಷ್ಕ್ರಿಯದಳ, ತಜ್ಞರಿಂದ ಪರಿಶೀಲನೆ

    ಈ ವೇಳೆ ಮಾತನಾಡಿದ ಸಚಿವ ಅಶ್ವಥ್ ನಾರಾಯಣ, ಕರ್ನಾಟಕವು ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಯ ಅತ್ಯುತ್ತಮ ಕಾರ್ಯ ಪರಿಸರ ಹೊಂದಿದೆ. ಜೊತೆಗೆ ಸರ್ಕಾರದ ನೀತಿಗಳು ಸಂಶೋಧನೆ ಮತ್ತು ಅಭಿವೃದ್ಧಿ, ಹಾಗೂ ಉತ್ಪಾದನೆಗೆ ಪೂರಕವಾಗಿವೆ. ಇದರ ಜೊತೆಗೆ ಕೌಶಲ್ಯಪೂರ್ಣ ಮಾನವ ಸಂಪನ್ಮೂಲ ಒದಗಿಸಲು ಸೂಕ್ತ ವ್ಯವಸ್ಥೆ ಇದೆ. ರಾಕ್ ಸ್ಪೇಸ್ ಕಂಪನಿಯು ಬೆಳಗಾವಿಯಲ್ಲಿ ನೆಲೆಯೂರಿದರೆ ಅಪಾರ ಬಂಡವಾಳ ಹರಿದು ಬರಲಿದ್ದು, ಸ್ಥಳೀಯ ಪ್ರತಿಭಾವಂತರಿಗೆ ಉದ್ಯೋಗದ ಅವಕಾಶಗಳ ಬಾಗಿಲು ತೆರೆಯಲಿದೆ. ಇದರಿಂದ ಅನಗತ್ಯ ವಲಸೆ ತಪ್ಪಿ, ಪ್ರಾದೇಶಿಕ ಅಸಮತೋಲನ ನಿವಾರಣೆಯೂ ಆಗಲಿದೆ ಎಂದು ಅವರು ನುಡಿದರು. ಬೆಂಗಳೂರಿನ ಆಚೆಗೂ ಉದ್ಯಮಗಳು ಬರಬೇಕು ಎನ್ನುವುದು ಸರ್ಕಾರದ ನೀತಿಯಾಗಿದೆ. ರಾಕ್ ಸ್ಪೇಸ್ ಕಂಪನಿಯು ಬೆಳಗಾವಿಯನ್ನು ಆಯ್ದುಕೊಂಡಿರುವುದು ಸ್ವಾಗತಾರ್ಹ ಎಂದರು. ಇದನ್ನೂ ಓದಿ: ನನಗೆ ನಿದ್ದೆಯಿಲ್ಲ, ಆರೋಗ್ಯದಲ್ಲಿ ಸಮಸ್ಯೆ ಇದೆ: ಹೆಚ್‌ಡಿಕೆ

    ಚರ್ಚೆಯಲ್ಲಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಸಿಇಒ ಸಂಜೀವ್ ಗುಪ್ತ ಭಾಗಿಯಾಗಿದ್ದರು.

    Live Tv
    [brid partner=56869869 player=32851 video=960834 autoplay=true]

  • ಎಲ್ಲರಿಗೂ ರೌಡಿ ಶೀಟರ್ ಅಂತ ನಾಮಕರಣ ಮಾಡೋದು ತಪ್ಪು – ರೌಡಿಗಳ ಬಿಜೆಪಿ ಸೇರ್ಪಡೆ ಸಮರ್ಥಿಸಿಕೊಂಡ ಅಶ್ವಥ್ ನಾರಾಯಣ

    ಎಲ್ಲರಿಗೂ ರೌಡಿ ಶೀಟರ್ ಅಂತ ನಾಮಕರಣ ಮಾಡೋದು ತಪ್ಪು – ರೌಡಿಗಳ ಬಿಜೆಪಿ ಸೇರ್ಪಡೆ ಸಮರ್ಥಿಸಿಕೊಂಡ ಅಶ್ವಥ್ ನಾರಾಯಣ

    ಬೆಂಗಳೂರು: ಸಮಾಜದಲ್ಲಿ ಎಲ್ಲರಿಗೂ ಬಾಳಿ ಬದುಕುವ ಅವಕಾಶವಿದೆ. ಉತ್ತಮವಾಗಿ ಬದುಕುವವರಿಗೆ ಅವಕಾಶ ಮಾಡಿಕೊಡಬೇಕು. ಎಲ್ಲರಿಗೂ ರೌಡಿ ಶೀಟರ್ (Rowdy Sheeter) ಅಂತ ನಾಮಕರಣ ಮಾಡೋದು ತಪ್ಪು ಎಂದು ಫೈಟರ್ ರವಿ ಮತ್ತು ಸೈಲೆಂಟ್ ಸುನೀಲನ ಬಿಜೆಪಿ (BJP) ಸೇರ್ಪಡೆ ಬಗ್ಗೆ ಪರೋಕ್ಷವಾಗಿ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ (Dr. Ashwathnarayan) ಸಮರ್ಥನೆ ಮಾಡಿಕೊಂಡಿದ್ದಾರೆ.

    ರೌಡಿ ಶೀಟರ್‌ಗಳನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾನೂನು ಎಲ್ಲರಿಗೆ ಅನ್ವಯ. ಕಾನೂನು ಎಲ್ಲರಿಗೂ ಒಂದೇ. ಯಾರೇ ತಪ್ಪು ಮಾಡಿದರು ಕ್ರಮ ಆಗುತ್ತೆ. ಕಾನೂನು ಮೀರಿ ಯಾರು ನಡೆಯಲು ಸಾಧ್ಯವಿಲ್ಲ. ಆದ್ರೆ ಎಲ್ಲರಿಗೂ ನಾವು ರೌಡಿ ಶೀಟರ್ ಅಂತ ನಾಮಕರಣ ಮಾಡೋದು ತಪ್ಪು. ಸಮಾಜದಲ್ಲಿ ಎಲ್ಲರಿಗೂ ಬಾಳಿ ಬದುಕಲು ಅವಕಾಶ ಇದೆ. ಉತ್ತಮವಾಗಿ ಬದುಕಲು ಅವಕಾಶ ಕೊಡದೆ ನಿಂದನೆ ಮಾಡಬಾರದು. ಕಾನೂನಿನಲ್ಲಿ ಶಿಕ್ಷೆ ಆಗದಿದ್ದರೆ ಕೇಳಬೇಕು. ತಪ್ಪು-ಒಪ್ಪು ಇಲ್ಲದೆ ಆಪಾದನೆ ಇಲ್ಲದೆ ಬದುಕಲು ಅವಕಾಶ ಮಾಡಿಕೊಡಬೇಕು. ಉತ್ತಮವಾಗಿ ಬದುಕಲು ಕಾನೂನಿನಲ್ಲಿ ಎಲ್ಲರಿಗೂ ಅವಕಾಶ ಇದೆ. ತಪ್ಪು ಮಾಡಿದ್ರೆ ಶಿಕ್ಷೆ ಆಗಿದ್ದರೆ ಯಾರೂ ಕೂಡಾ ಅವರ ಪರವಾಗಿ ಇರುವುದಿಲ್ಲ. ಉತ್ತಮವಾಗಿ ಬದುಕುತ್ತೇನೆ ಎಂದಾಗ ನಾವು ನಿಂದನೆ ಮಾಡಬಾರದು ಎಂದು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ರಾಜಕಾರಣಿಗಳ ಮಧ್ಯೆ ರೌಡಿಶೀಟರ್ ಸೈಲೆಂಟ್ ಸುನೀಲನ ದರ್ಬಾರ್ – ಪೊಲೀಸರು ಗಪ್‍ಚುಪ್

    ಒಕ್ಕಲಿಗರ (Vokkaliga) ಮೀಸಲಾತಿ (Reservation)  ಹೆಚ್ಚಳಕ್ಕೆ ಬೇಡಿಕೆ ವಿಚಾರವಾಗಿ ಮಾತನಾಡಿ, ಒಕ್ಕಲಿಗರ ಮೀಸಲಾತಿ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚೆ ಮಾಡಿ ಮುಂದಿನ ತೀರ್ಮಾನ ಮಾಡಲಾಗುತ್ತದೆ. ಮೀಸಲಾತಿ ಹೆಚ್ಚಳಕ್ಕೆ ಒಕ್ಕಲಿಗ ಸಮುದಾಯದ ಒತ್ತಾಯ ಇದೆ. ಸ್ವಾಮೀಜಿಗಳು ಸೇರಿ ಎಲ್ಲರೂ ಒತ್ತಾಯ ಮಾಡಿದ್ದಾರೆ. ಕೇವಲ ಒಕ್ಕಲಿಗ ಸಮುದಾಯ ಮಾತ್ರವಲ್ಲ. ಅನೇಕ ಸಮುದಾಯಗಳು ಮೀಸಲಾತಿ ಹೆಚ್ಚಳದ ಬೇಡಿಕೆ ಇಟ್ಟಿದ್ದಾರೆ. ಎಲ್ಲರ ಬೇಡಿಕೆಗಳನ್ನು ಗಮನಕ್ಕೆ ತೆಗೆದುಕೊಂಡು ಚರ್ಚೆ ಮಾಡಿ ಮುಂದಿನ ತೀರ್ಮಾನ ಮಾಡ್ತೀವಿ. ನಾನು ಸರ್ಕಾರದ ಭಾಗವಾಗಿರುವುದರಿಂದ ವೈಯಕ್ತಿಕ ಅಭಿಪ್ರಾಯ ಹೇಳಲು ಸಾಧ್ಯವಿಲ್ಲ. ಕಾನೂನಿನ ಅವಕಾಶ ಬಳಕೆ ಮಾಡಿ, ಬೇಡಿಕೆ ಪರಿಶೀಲನೆ ಮಾಡಿ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ಮೀಸಲಾತಿ ಹೆಚ್ಚಳದಲ್ಲಿ ಸರ್ಕಾರ ಯಾವುದೇ ಇಕ್ಕಟ್ಟಿನಲ್ಲಿ ಇಲ್ಲ. ಜನರು ಕೊಟ್ಟ ಅವಕಾಶವನ್ನು ನಾವು ಉಪಯೋಗ ಮಾಡಿಕೊಳ್ಳಬೇಕು. ಎಲ್ಲಾ ವಿಚಾರ ಚರ್ಚೆ ಮಾಡಿ ಏನು ಮಾಡಬೇಕೋ ಅದನ್ನು ಮಾಡ್ತೀವಿ. ಚರ್ಚೆ ಮಾಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಹಳೆ ಮೈಸೂರು ಭಾಗದಲ್ಲಿ ಆಪರೇಷನ್ ಕಮಲ- ಬಿಜೆಪಿಗೆ ಸುಮಲತಾ ಆಪ್ತ ಸಚ್ಚಿದಾನಂದ ಸೇರ್ಪಡೆ

    Live Tv
    [brid partner=56869869 player=32851 video=960834 autoplay=true]

  • ಮತದಾರರ ಪಟ್ಟಿ ದುರ್ಬಳಕೆ ಹಿಂದೆ ಕಾಂಗ್ರೆಸ್ ಮಾಡಿದ್ದನ್ನೇ ಈಗ ಬಿಜೆಪಿ ಮಾಡುತ್ತಿದೆ: ಹೆಚ್‍ಡಿಕೆ

    ಮತದಾರರ ಪಟ್ಟಿ ದುರ್ಬಳಕೆ ಹಿಂದೆ ಕಾಂಗ್ರೆಸ್ ಮಾಡಿದ್ದನ್ನೇ ಈಗ ಬಿಜೆಪಿ ಮಾಡುತ್ತಿದೆ: ಹೆಚ್‍ಡಿಕೆ

    ರಾಮನಗರ: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಬಿಜೆಪಿ (BJP) ಅಕ್ರಮವೆಸಗಿದೆ ಎಂಬ ಕಾಂಗ್ರೆಸ್ (Congress) ಆರೋಪಕ್ಕೆ ಸಂಬಂಧಿಸಿದಂತೆ ಹಿಂದೆ ಕಾಂಗ್ರೆಸ್ಸಿಗರು ಮಾಡಿದ ಕೆಲಸವನ್ನು ಇಂದು ಬಿಜೆಪಿಯವರು ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಅಕ್ರಮ ಮಾಡಲು ಖಾಸಗಿ ಸಂಸ್ಥೆಗೆ ಗುತ್ತಿಗೆ ಕೊಟ್ಟಿದ್ದಾರೆ. ಇದು ಮಂತ್ರಿಗಳ ಬೇನಾಮಿ ಹೆಸರಿನಲ್ಲಿ ಇರುವ ಕಂಪನಿ ಎಂದು ಪರೋಕ್ಷವಾಗಿ ಅಶ್ವಥ್ ನಾರಾಯಣ (Dr. Ashwathnarayan) ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಕಿಡಿಕಾರಿದ್ದಾರೆ.

    ASHWATH NARAYAN 1

    ಚನ್ನಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೇನಾಮಿ ಹೆಸರಿನಲ್ಲಿ ಮಲ್ಲೇಶ್ವರಂನಲ್ಲಿ ಇರುವ ಕಂಪನಿ ಅದು. ಹಿಂದೆ ಬಿಬಿಎಂಪಿಯಲ್ಲಿ ಅಕ್ರಮ ನಡೆದಿತ್ತು. ಅದಕ್ಕೆ ಸಂಬಂಧಿಸಿದ ಕಡತಗಳಿಗೆ ಇದೇ ಕಂಪನಿ ರಾತ್ರೋರಾತ್ರಿ ಬೆಂಕಿ ಇಟ್ಟಿತ್ತು. ಹಿಂದೆ ಕಾಂಗ್ರೆಸ್‍ನವರು ಇಂತಹ ಹಲವು ಚಟುವಟಿಕೆಗಳಲ್ಲಿ ಶಾಮೀಲಾಗಿದ್ದಾರೆ. ಈಗ ದೊಡ್ಡದಾಗಿ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಮುಂದೆ ನಮ್ಮದೇ ಸರ್ಕಾರ ಬರುತ್ತೆ: ಹೆಚ್‍ಡಿಕೆ

    ಮುಂದೆ ಕಾಂಗ್ರೆಸ್‍ನವರು ಅಧಿಕಾರಕ್ಕೆ ಬಂದರೂ ಇಂಥದ್ದೇ ಕೆಲಸಗಳನ್ನು ಮುಂದುವರಿಸುತ್ತಾರೆ. ಇವಿಎಂ (EVM) ಇರುವವರೆಗೆ ಬಿಜೆಪಿಗೆ ಯಾವುದೇ ಸಮಸ್ಯೆ ಇಲ್ಲ. ಈ ಬಗ್ಗೆ ಸ್ವತಃ ತೆಲಂಗಾಣ ಸಿಎಂ ಮಾತನಾಡಿದ್ದಾರೆ. ಅಕ್ರಮದ ರೀತಿಯಲ್ಲೇ ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿ ಪ್ರಯತ್ನಿಸುತ್ತಿದೆ. ಇದರ ಬಗ್ಗೆ ನಾನು ಹೆಚ್ಚಾಗಿ ತಲೆ ಕೆಡಿಸಿಕೊಳ್ಳುವುದಿಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳ ಬಗ್ಗೆ ಜನರು ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಮತದಾರರ ಪಟ್ಟಿ ಪರಿಷ್ಕರಣೆ ಹಗರಣದಲ್ಲಿ CM ಸೇರಿ ಬಿಜೆಪಿಯ ಹಿರಿಯ ಸಚಿವರೆಲ್ಲರೂ ಭಾಗಿಯಾಗಿದ್ದಾರೆ: ಸಿದ್ದರಾಮಯ್ಯ

    ಸಚಿವ ಅಶ್ವಥ್ ನಾರಾಯಣ ವಿರುದ್ಧ ನಾನು ಸಾಫ್ಟ್ ಆಗಿಲ್ಲ. ಬಿಜೆಪಿ ಎಷ್ಟೇ ಕುತಂತ್ರ ಮಾಡಿದರೂ ಅಧಿಕಾರಕ್ಕೆ ಬರಲು ಆಗುವುದಿಲ್ಲ. ಮುಂದೆ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ. ಆಗ ಅಕ್ರಮ ಎಸಗಿರುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಭಿವೃದ್ಧಿ ಆಗಬಾರದೆಂದು ನಾನು ಭಾವಿಸಿದ್ದರೆ ನೀವು ಮಲ್ಲೇಶ್ವರಂನಲ್ಲಿ ಶಾಸಕರೇ ಆಗುತ್ತಿರಲಿಲ್ಲ: ಹೆಚ್‍ಡಿಕೆ

    ಅಭಿವೃದ್ಧಿ ಆಗಬಾರದೆಂದು ನಾನು ಭಾವಿಸಿದ್ದರೆ ನೀವು ಮಲ್ಲೇಶ್ವರಂನಲ್ಲಿ ಶಾಸಕರೇ ಆಗುತ್ತಿರಲಿಲ್ಲ: ಹೆಚ್‍ಡಿಕೆ

    ಬೆಂಗಳೂರು: ಅಧಿಕಾರವೂ ತಪ್ಪಬಾರದು, ಅಭಿವೃದ್ಧಿಯೂ ಆಗಬಾರದು ಎಂದು ನಾನು ಭಾವಿಸಿದ್ದಿದ್ದರೆ ನೀವು ಮಲ್ಲೇಶ್ವರಂನಲ್ಲಿ ಶಾಸಕರೇ ಆಗುತ್ತಿರಲಿಲ್ಲ. ಆ ದಿನಗಳನ್ನು ಒಮ್ಮೆ ನೆನಪು ಮಾಡಿಕೊಳ್ಳಿ ಎಂದು ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ (H.D.Kumaraswamy) ಸರಣಿ ಟ್ವೀಟ್‍ಗಳ ಮೂಲಕ ಸಚಿವ ಅಶ್ವಥ್‍ನಾರಾಯಣ (Dr. Ashwathnarayan) ವಿರುದ್ಧ ಕೆಂಡಕಾರಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    ಅಭಿವೃದ್ಧಿ ಕೆಲಸ ಎಂದರೇನು ಅಶ್ವಥ್‍ನಾರಾಯಣ ಅವರೇ? ವಾಮಮಾರ್ಗ ಎಂದರೆ ಯಾವುದು? ಇವೆರಡರಲ್ಲೂ ತಮಗೆ ಒಳ್ಳೇ ಅನುಭವವೇ ಇದೆ. ಅಧಿಕಾರಿಗಳನ್ನು ಬುಟ್ಟಿಗೆ ಹಾಕಿಕೊಂಡು ‘ಕಳ್ಳಮಾರ್ಗ’ದಲ್ಲಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲು ಹೊರಟಿದ್ದು, ಕ್ಷೇತ್ರದ ಶಾಸಕರನ್ನೇ ಕತ್ತಲೆಯಲ್ಲಿ ಇಟ್ಟಿದ್ದನ್ನು ಏನೆಂದು ಕರೆಯಬೇಕು? ಇದೇನಾ ನೀವು ಹೇಳುವ ‘ರಾಜಮಾರ್ಗ’? ‘ಅಧಿಕಾರವೂ ತಪ್ಪಬಾರದು, ಅಭಿವೃದ್ಧಿಯೂ ಆಗಬಾರದು’ ಎಂದು ನಾನು ಭಾವಿಸಿದ್ದಿದ್ದರೆ ನೀವು ಮಲ್ಲೇಶ್ವರಂನಲ್ಲಿ ಶಾಸಕರೇ ಆಗುತ್ತಿರಲಿಲ್ಲ. ಆ ದಿನಗಳನ್ನು ಒಮ್ಮೆ ನೆನಪು ಮಾಡಿಕೊಳ್ಳಿ. ಇದನ್ನೂ ಓದಿ: ನಾನು ಬ್ಲ್ಯಾಕ್‌ ಇದ್ದೇನೆ, ಆದ್ರೆ ಬ್ಲ್ಯಾಕ್‌ ಮೇಲರ್ ಅಲ್ಲ: ಹೆಚ್‌ಡಿಕೆ ಪಂಚ್

    ಅಭಿವೃದ್ಧಿ ಬಗ್ಗೆ ಉಪದೇಶ ಮಾಡಿದ್ದೀರಿ, ನಿಮ್ಮ ಮಾದರಿಯಲ್ಲಿ ಅಭಿವೃದ್ಧಿ ಮಾಡಿಕೊಳ್ಳುವುದು ನನಗೆ ಗೊತ್ತಿಲ್ಲ, ನನ್ನಿಂದ ಆಗುವುದೂ ಇಲ್ಲ. ಅಶ್ವಥ್‍ನಾರಾಯಣ ಅವರೇ, ಅಧಿಕಾರ ಬರುತ್ತದೆ, ಹೋಗುತ್ತದೆ ಎಂದು ವೇದಾಂತ ಹೇಳಿದ್ದೀರಿ. ಹೌದು, ಇಂಥ ಉದಾತ್ತ, ಆದರ್ಶ ಚಿಂತನೆಯ, ವಿಶಾಲ ಹೃದಯ ವೈಶಾಲ್ಯವುಳ್ಳ ನಿಮ್ಮಂಥ ಪ್ರಾಜ್ಞರೇ ಆಪರೇಶನ್ ಕಮಲ ಎಂಬ ಪಾಪ ಎಸಗಿದ್ದೇಕೆ? ನಮ್ಮ ಶಾಸಕರ ಮನೆಯಲ್ಲಿ ಹಣ ಇಟ್ಟು ಬಂದ್ದಿದ್ದು ಯಾಕೆ? ಅಧಿಕಾರ ಬೇಕಿದ್ದರೆ ನೀವು ಚುನಾವಣೆಯಲ್ಲಿ ಪೂರ್ಣ ಬಹುಮತ ಸಿಗುವವರೆಗೂ ಕಾಯಬಹುದಿತ್ತಲ್ಲವೇ? ಆದರೆ, ಹಪಾಹಪಿಯಿಂದ ‘ಅಡ್ಡಮಾರ್ಗ’ ಹಿಡಿದಿದ್ದು ಏಕೆ? ಅಕ್ಕಪಕ್ಕದ ಪಕ್ಷಗಳ ಶಾಸಕರನ್ನು ಅಪಹರಿಸಿ ಆಪರೇಷನ್ ಕಮಲದ ಸರ್ಕಾರ ಮಾಡಿದ್ದು ಯಾಕೆ? ಇದು ವಾಮಮಾರ್ಗವೋ? ಸನ್ಮಾರ್ಗವೋ? ಸ್ಪಲ್ಪ ಹೇಳಿ ಅಶ್ವಥ್‍ನಾರಾಯಣ ಅವರೇ. ಇದನ್ನೂ ಓದಿ: BMS ಟ್ರಸ್ಟ್ ಖಾಸಗಿಗೆ ವಹಿಸಿದ್ರಾ ಅಶ್ವಥ್‍ ನಾರಾಯಣ್?- ಹೆಚ್‍ಡಿಕೆ ದಾಖಲೆ ರಿಲೀಸ್

    ಬಿಜೆಪಿ (BJP) ಸರ್ಕಾರ ಬಂದ ಮೇಲೆ ರಾಮನಗರ ಜಿಲ್ಲೆಯಲ್ಲಿ ಎಷ್ಟು ಅಭಿವೃದ್ಧಿ ಆಗಿದೆ ಎಂಬುದನ್ನು ಬಹಿರಂಗ ಚರ್ಚೆ ಮಾಡೋಣ ಬನ್ನಿ. ಆಗ ಯಾರ ಆತ್ಮಸಾಕ್ಷಿ ಏನು ಎಂಬುದು ಜನರಿಗೂ ತಿಳಿಯುತ್ತದೆ. ‘ಎಂಎಲ್‍ಸಿ ಕೋರಿಕೆ ಮೇರೆಗೆ..’ ಎಂದು ಬಿಡುಗಡೆ ಮಾಡಿದ 50 ಕೋಟಿ ರೂ. ಒಳಗುಟ್ಟಿನ ಬಗ್ಗೆಯೂ ಚರ್ಚಿಸೋಣ ಬನ್ನಿ. ನಾನು ತಯಾರಿದ್ದೇನೆ ಎಂದು ಟ್ವೀಟ್ ಮೂಲಕ ಆಹ್ವಾನ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿಭಿನ್ನ ಪಾತ್ರಗಳಿಗೆ ಜೀವ ತುಂಬಿದ ಕಲಾವಿದೆ ಜಯಂತಿ: ಗಣ್ಯರ ಸಂತಾಪ

    ವಿಭಿನ್ನ ಪಾತ್ರಗಳಿಗೆ ಜೀವ ತುಂಬಿದ ಕಲಾವಿದೆ ಜಯಂತಿ: ಗಣ್ಯರ ಸಂತಾಪ

    -ನನ್ನ ಇಷ್ಟದ ನಟಿ ಜಯಂತಿಯವರ ನಿಧನ ಅತೀವ ದುಃಖವಾಗಿದೆ

    ಬೆಂಗಳೂರು: ಸ್ಯಾಂಡಲ್‍ವುಡ್ ಹಿರಿಯ ಕಲಾವಿದೆ ಜಯಂತಿ ಅವರ ನಿಧನಕ್ಕೆ ಗಣ್ಯರು ಟ್ವೀಟ್ ಮಾಡುವ ಮೂಲಕವಾಗಿ ಸಂತಾಪ ಸೂಚಿಸಿದ್ದಾರೆ.

    ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಜಯಂತಿ ಅವರ ನಿಧನಕ್ಕೆ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.ಪ್ರಖ್ಯಾತ ಹಿರಿಯ ಕಲಾವಿದೆ, ಅಭಿನಯ ಶಾರದೆ ಜಯಂತಿ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕನ್ನಡ ಕಲಾಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಅವರ ಕುಟುಂಬ, ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.

    ಅಭಿಜಾತ ಪ್ರತಿಭೆಯ ಮೂಲಕ ದಶಕಗಳ ಕಾಲ ಚಿತ್ರಪ್ರೇಮಿಗಳ ಮನಗೆದ್ದಿದ್ದ ನಟಿ ಜಯಂತಿ ಅವರು ನಿಧನರಾಗಿದ್ದರೆ. ನನ್ನ ಇಷ್ಟದ ನಟಿ ಅಭಿನಯ ಶಾರದೆ ಜಯಂತಿಯವರ ನಿಧನದಿಂದ ಅತೀವ ದುಃಖ ವಾಗಿದೆ. ಜಯಂತಿ ಅವರು ತಮ್ಮ ಚಿತ್ರಗಳ ಮೂಲಕ ಸದಾಕಾಲ ನಮ್ಮೆಲ್ಲರ ಮನದಲ್ಲಿ ಅಜರಾಮಾರರಾಗಿ ಇರುತ್ತಾರೆ. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

    ಅಭಿನಯ ಶಾರದೆ ಜಯಂತಿ ಅವರು ನಿಧನರಾದ ಸಂಗತಿ ಬೇಸರ ತರಿಸಿದೆ. ಕನ್ನಡ, ತೆಲಗು, ತಮಿಳು, ಮಲಯಾಳಂ, ಹಿಂದಿಯಲ್ಲಿ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಜಯಂತಿ ಅವರು ದಕ್ಷಿಣ ಭಾರತದ ಪ್ರಖ್ಯಾತ ನಟಿ ಎನಿಸಿಕೊಂಡಿದ್ದರು. ಅವರು ಕನ್ನಡಿಗರೆಂಬುದೇ ನಮ್ಮ ಹೆಮ್ಮೆ. ಅವರಿಗೆ ಸದ್ಗತಿ ದೊರೆಯಲಿ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಟ್ವೀಟ್ ಮಾಡುವ ಮೂಲವಾಗಿ ಎಚ್ ಡಿ ಕುಮಾರಸ್ವಾಮಿಯವರು ಸಂತಾಪ ಸೂಚಿಸಿದ್ದಾರೆ.

    ಹಿರಿಯ ನಟಿ, ಅಭಿನಯ ಶಾರದೆ ಶ್ರೀಮತಿ ಜಯಂತಿ ಅವರ ನಿಧನ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. 6 ಭಾಷೆಗಳ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಅವರು ಒನಕೆ ಓಬವ್ವ ರೀತಿಯ ಪೌರಾಣಿಕ ಪಾತ್ರ ಸೇರಿದಂತೆ ಅನೇಕ ವಿಭಿನ್ನ ಪಾತ್ರಗಳಿಗೆ ಜೀವ ತುಂಬಿದ್ದಾರೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಆರೋಗಹ್ಯ ಸಚಿವ ಕೆ ಸುಧಾಕರ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

     

  • ಪಬ್ಲಿಕ್ ಟಿವಿ ವರದಿಗಾರ ಹನುಮಂತು ನಿಧನಕ್ಕೆ ಸಿಎಂ ಸಂತಾಪ

    ಪಬ್ಲಿಕ್ ಟಿವಿ ವರದಿಗಾರ ಹನುಮಂತು ನಿಧನಕ್ಕೆ ಸಿಎಂ ಸಂತಾಪ

    – ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಡಿಕೆಶಿ, ಅಶ್ವತ್ಥನಾರಾಯಣ, ಎಚ್‌ಡಿಕೆ

    ಬೆಂಗಳೂರು: ರಸ್ತೆ ಅಪಘಾತದಲ್ಲಿ ಇಂದು ಮೃತಪಟ್ಟ ಪಬ್ಲಿಕ್ ಟಿವಿಯ ರಾಮನಗರ ಜಿಲ್ಲಾ ವರದಿಗಾರ ಹನುಮಂತು ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

    ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ ಅವರು, ಭಗವಂತನು ಹನುಮಂತು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಅಕಾಲಿಕ ನಿಧನದ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

    ಸಂಸದ ಡಿ.ಕೆ.ಸುರೇಶ್ ಟ್ವೀಟ್ ಮಾಡಿ, ಪಬ್ಲಿಕ್ ಟಿವಿಯ ರಾಮನಗರ ಜಿಲ್ಲಾ ವರದಿಗಾರ ಹನುಮಂತು ಅವರ ನಿಧನಕ್ಕೆ ಎಲ್ಲೆಡೆಯಿಂದ ತೀವ್ರ ಸಂತಾಪ ವ್ಯಕ್ತವಾಗಿದೆ. ಅದರಂತೆ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಹನುಮಂತು ಅವರ ನಿಧನಕ್ಕೆ ಸಂತಾಪ ಸೂಚಿಸಿ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ ಎಂದು ಹೇಳಿದ್ದಾರೆ.

    ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಅವರು ಟ್ವೀಟ್ ಮಾಡಿ, ಹನುಮಂತು ಅವರ ಅಕಾಲಿಕ ಮರಣ ದುಃಖ ತಂದಿದೆ. ಸದಾ ಕ್ರಿಯಾಶೀಲ, ಉತ್ಸಾಹಿ, ದಿಟ್ಟ ಪತ್ರಕರ್ತರಾಗಿದ್ದ ಅವರು ಪ್ರಾಮಾಣಿತೆಯನ್ನು ನಂಬಿದ್ದರು. ಅಗಲಿಕೆಯ ದುಃಖ ಭರಿಸುವ ಶಕ್ತಿ ಭಗವಂತ ಅವರ ಕುಟುಂಬಕ್ಕೆ ನೀಡಲಿ. ಕುಟುಂಬಕ್ಕೆ ವೈಯಕ್ತಿಕವಾಗಿ 5 ಲಕ್ಷ ರೂಪಾಯಿಗಳ ಆರ್ಥಿಕ ನೆರವು ನೀಡುತ್ತೇನೆ ಎಂದು ತಿಳಿಸಿದ್ದಾರೆ.

    ತಮ್ಮ ಪ್ರಾಮಾಣಿಕತೆಯಿಂದಲೇ ಗುರುತಿಸಿಕೊಂಡಿದ್ದ ಹನುಮಂತು, ರಾಮನಗರದಲ್ಲಿ ಚಿರಪರಿಚಿತರು. ತಮ್ಮ ವರದಿಗಳಿಂದಲೇ ಮಾಧ್ಯಮ ಲೋಕದಲ್ಲಿ ಹನುಮಂತು ಗುರುತಿಸಿಕೊಂಡಿದ್ದರು. ಹನುಮಂತು ಕಳೆದುಕೊಂಡು ಪಬ್ಲಿಕ್ ಟಿವಿ ಕುಟುಂಬ ಬಡವಾಗಿದೆ. ಇನ್ನು ಹನುಮಂತು ನಿಧನಕ್ಕೆ ಶಾಸಕಿ ಅನಿತಾ ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಸಹ ಸಂತಾಪ ಸೂಚಿಸಿ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.