Tag: Dr C N Ashwathnarayan

  • ಸ್ಮಾರ್ಟ್ ಮೀಟರ್ ಹಗರಣ – ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರು

    ಸ್ಮಾರ್ಟ್ ಮೀಟರ್ ಹಗರಣ – ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರು

    – ಸ್ಮಾರ್ಟ್ ಮೀಟರ್ ಮೂಲಕ ಸರ್ಕಾರದ ಹಗಲು ದರೋಡೆ; ಸಿ.ಎನ್ ಅಶ್ವಥ್ ನಾರಾಯಣ್ ಟೀಕೆ

    ಬೆಂಗಳೂರು: ಸ್ಮಾರ್ಟ್ ಮೀಟರ್ ಮೂಲಕ ಹಗಲು ದರೋಡೆ ಮಾತ್ರವಲ್ಲದೆ, ಗ್ರಾಹಕರಿಗೆ ಅನ್ಯಾಯವಾಗುತ್ತಿದೆ ಎಂದು ಮಾಜಿ ಡಿಸಿಎಂ, ಶಾಸಕ ಡಾ.ಸಿ.ಎನ್ ಅಶ್ವಥ್ ನಾರಾಯಣ್(Dr C N Ashwath Narayan) ಟೀಕಿಸಿದ್ದಾರೆ.

    ವಿರೋಧ ಪಕ್ಷದ ನಾಯಕ ಆರ್ ಅಶೋಕ್(R Ashok) ಮತ್ತು ಸಿ.ಎನ್ ಅಶ್ವಥ್ ನಾರಾಯಣ್ ಅವರ ನೇತೃತ್ವದ ಬಿಜೆಪಿ ನಿಯೋಗವು ಬುಧವಾರ ರಾಜ್ಯಪಾಲರನ್ನು ಭೇಟಿ ಮಾಡಿ ಹಗರಣದ ಸೂಕ್ತ ತನಿಖೆಗೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ದೂರು ನೀಡಿದರು. ಈ ಸಂದರ್ಭ ಮಾಧ್ಯಮಗಳ ಜೊತೆ ಮಾತನಾಡಿದ ಸಿ.ಎನ್ ಅಶ್ವಥ್ ನಾರಾಯಣ್ ಅವರು, ಸ್ಮಾರ್ಟ್ ಮೀಟರ್ ಕುರಿತಂತೆ ಗೌರವಾನ್ವಿತ ರಾಜ್ಯಪಾಲರ ಜೊತೆ ಚರ್ಚೆ ಮಾಡಿದ್ದೇವೆ ಎಂದು ವಿವರಿಸಿದರು. ಇದನ್ನೂ ಓದಿ: ಪಾಕಿಸ್ತಾನದಲ್ಲಿ ನನ್ನನ್ನು ಮದುವೆಯಾಗು: ಪಾಕ್‌ ಅಧಿಕಾರಿ ಮುಂದೆ ಆಸೆ ವ್ಯಕ್ತಪಡಿಸಿದ್ದ ಜ್ಯೋತಿ

    ಈ ಹಗರಣದಲ್ಲಿ ಗ್ರಾಹಕರಿಗೆ ಅನ್ಯಾಯವಾಗುತ್ತಿದೆ. ಸಾವಿರಾರು ಕೋಟಿ ಲೂಟಿ ನಡೆಯುತ್ತಿದೆ. ರಾಜ್ಯ ಸರ್ಕಾರ, ಇಂಧನ ಇಲಾಖೆ ಹಾಗೂ ಅಧಿಕಾರಿಗಳು ಇದರಲ್ಲಿ ಭಾಗಿ ಆಗಿರುವುದಾಗಿ ರಾಜ್ಯಪಾಲರಿಗೆ ತಿಳಿಸಲಾಗಿದೆ. ಈ ಕುರಿತು ದಾಖಲೆಗಳೊಂದಿಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದೇವೆ. ಇದುವರೆಗೂ ಎಫ್‌ಐಆರ್ ದಾಖಲಾಗಿಲ್ಲ. ಈ ಸಂಬಂಧ ಲೋಕಾಯುಕ್ತಕ್ಕೆ ಮತ್ತೊಮ್ಮೆ ದೂರು ನೀಡಲಾಗಿದೆ ಎಂದರು. ಇದನ್ನೂ ಓದಿ: ತುಮಕೂರು | ಕೆಮಿಕಲ್ ಸಂಪ್‍ ಕ್ಲೀನ್‌ ಮಾಡುವಾಗ ಇಬ್ಬರು ಕಾರ್ಮಿಕರು ಸಾವು, ಮತ್ತಿಬ್ಬರು ಅಸ್ವಸ್ಥ

    ಅಧಿಕಾರ ದುರ್ಬಳಕೆ ಮಾಡಿದ ಇಂಧನ ಸಚಿವರು, ಇತರ ಅಧಿಕಾರಿಗಳು ಗುತ್ತಿಗೆ ಕೊಟ್ಟು ಕಾನೂನಿನ ಉಲ್ಲಂಘನೆ ಮಾಡಿದ್ದಾರೆ. ಅಧಿಕಾರ ದುರ್ಬಳಕೆ, ಹಗಲು ದರೋಡೆ ಮಾಡಿದ ಸ್ಮಾರ್ಟ್ ಮೀಟರ್ ಹಗರಣಕ್ಕೆ(Smart Meter Scam) ತಾರ್ಕಿಕ ಅಂತ್ಯ ಕಾಣಿಸಲು ಯೋಜಿಸಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಆಪರೇಷನ್ ಸಿಂಧೂರ ಹೇಳಿಕೆ ವಿವಾದ – ಅಶೋಕ ವಿವಿ ಪ್ರೊಫೆಸರ್‌ಗೆ ಮಧ್ಯಂತರ ಜಾಮೀನು

    ರಾಜ್ಯ ವಿದ್ಯುತ್ ನಿಯಂತ್ರಣ ಆಯೋಗ ಮತ್ತು ಕೇಂದ್ರ ವಿದ್ಯುತ್ ಆಯೋಗದ ಕಾನೂನಿನಲ್ಲಿ ಅವಕಾಶ ಇಲ್ಲದಿದ್ದರೂ ಸ್ಮಾರ್ಟ್ ಮೀಟರ್ ಕಡ್ಡಾಯ ಮಾಡುತ್ತಿರುವುದು ಪ್ರಥಮ ಉಲ್ಲಂಘನೆ. ಇಲ್ಲಿ ದುಬಾರಿ ದರ ಇದೆ. ಅರ್ಹತೆ ಇಲ್ಲದ ಗುತ್ತಿಗೆದಾರರಿಗೆ ಗುತ್ತಿಗೆ ಕೊಡಲಾಗಿದೆ. ಕಾನೂನಿನ ಉಲ್ಲಂಘನೆ, ಅಧಿಕಾರ ದುರ್ಬಳಕೆ ಮಾಡಿದ ಕುರಿತು ಮಾನ್ಯ ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ. ಗೋಲ್ಡ್ ಸ್ಮಗ್ಲಿಂಗ್(Gold Smuggling) ಪ್ರಕರಣವು ತೀವ್ರ ತನಿಖೆ ನಡೆದು ಇನ್ನಷ್ಟು ವಿವರ ಹೊರಬರುವ ವಿಶ್ವಾಸವಿದೆ ಎಂದರು.

    ರತ್ನಗಂಬಳಿ ಹಾಸಿ ಸುಖದಲ್ಲಿ ತಮ್ಮ ಸಾಧನೆಗಳನ್ನು ಹೇಳಿಕೊಂಡಿದ್ದಾರೆ. ಕಾಂಗ್ರೆಸ್ಸಿನ(Congress) ಸಮರ್ಪಣಾ ಸಮಾವೇಶ, ಸಾಧನಾ ಸಮಾವೇಶ ಎಲ್ಲವೂ ಬೂಟಾಟಿಕೆ. ಇದು ಲೂಟಿ ಸರ್ಕಾರ. ರಾಜ್ಯದಲ್ಲಿ ಸಂತಸ ಮತ್ತು ಆನಂದವಾಗಿ ಇರುವವರು ಸಿಎಂ ಮತ್ತು ಅಧಿಕಾರದಲ್ಲಿರುವ ಸಚಿವ ಸಂಪುಟದ 35 ಜನರ ತಂಡ ಎಂದು ಆರೋಪಿಸಿದರು. ಇದನ್ನೂ ಓದಿ: ಮುಂದಿನ ಮಳೆಗಾಲದೊಳಗೆ ಸಮಸ್ಯೆ ಬಗೆಹರಿಯದಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡ್ತೇನೆ: ಬೈರತಿ ಬಸವರಾಜ್

    ವಿಪಕ್ಷ ನಾಯಕ ಆರ್. ಅಶೋಕ್, ಶಾಸಕ ಸಿ.ಎನ್ ಅಶ್ವಥ್ ನಾರಾಯಣ್, ಶಾಸಕ ಕೆ.ಗೋಪಾಲಯ್ಯ, ಶಾಸಕ ಧೀರಜ್ ಮುನಿರಾಜು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

  • ಜ್ವಲಂತ ಸಮಸ್ಯೆಗಳನ್ನು ಜೀವಂತ ಇಟ್ಟ ಕಾಂಗ್ರೆಸ್: ಡಿಸಿಎಂ ಕಿಡಿ

    ಜ್ವಲಂತ ಸಮಸ್ಯೆಗಳನ್ನು ಜೀವಂತ ಇಟ್ಟ ಕಾಂಗ್ರೆಸ್: ಡಿಸಿಎಂ ಕಿಡಿ

    ಬೆಂಗಳೂರು/ಬಳ್ಳಾರಿ: ದೇಶದಲ್ಲಿ 60 ವರ್ಷಕ್ಕೂ ಹೆಚ್ಚು ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷವೂ ಎಲ್ಲ ಜ್ವಲಂತ ಸಮಸ್ಯೆಗಳನ್ನು ಜೀವಂತವಾಗಿ ಇಡಲು ಪ್ರಯತ್ನ ಮಾಡಿತೇ ವಿನಾ ಅವುಗಳಿಗೆ ಪರಿಹಾರ ಕಂಡುಕೊಳ್ಳಲಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಟೀಕಿಸಿದರು. ಇದನ್ನೂಓದಿ:  ಕೆಲಸದ ಒತ್ತಡದಿಂದಾಗಿ ವ್ಯಕ್ತಿಗೆ ಖಾಲಿ ಸಿರಿಂಜ್ ಚುಚ್ಚಿದ ನರ್ಸ್..

    ಬಳ್ಳಾರಿ ಬಿಜೆಪಿ ಘಟಕ ಶುಕ್ರವಾರ ಹಮ್ಮಿಕೊಂಡಿದ್ದ ಈ-ಪ್ರಶಿಕ್ಷಣ ವರ್ಗ ಕಾರ್ಯಕ್ರಮದಲ್ಲಿ ಮೋದಿ ಸರಕಾರದ 7 ವರ್ಷಗಳ ಸಾಧನೆ ವಿಷಯದ ಬಗ್ಗೆ ವರ್ಚುವಲ್ ಮೂಲಕ ಮಾತನಾಡಿದ ಅವರು, ಕಾಂಗ್ರೆಸ್ ತನ್ನ ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಸಮಸ್ಯೆಗಳನ್ನು ನಿರಂತರವಾಗಿ ಬದುಕಿರುವಂತೆ ನೋಡಿಕೊಳ್ಳುತ್ತಿತ್ತು. ಆದರೆ, ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರಕಾರ ಅಂಥ ಸಮಸ್ಯೆಗಳಿಗೆ ಚರಮಗೀತೆ ಹಾಡುತ್ತಾ ಬರುತ್ತಿದೆ ಎಂದರು.

    ಕಾಶ್ಮೀರ, ರಾಮಮಂದಿರ, ವಲಸಿಗರ ದುಃಸ್ಥಿತಿ, ಉದ್ಯೋಗ, ಕೈಗಾರಿಕೆ, ಆರ್ಥಿಕತೆ, ಮೂಲಸೌಕರ್ಯ, ತೆರಿಗೆ, ಕಪ್ಪುಹಣ ಇತ್ಯಾದಿ ಅಂಶಗಳ ಬಗ್ಗೆ ಕಾಂಗ್ರೆಸ್ ಅದೆಷ್ಟು ಉಪೇಕ್ಷೆ ಮಾಡಿತ್ತು ಎಂಬುದನ್ನು ಬಿಡಿಸಿ ಹೇಳಬೇಕಿಲ್ಲ. ಇತಿಹಾಸವೇ ಎಲ್ಲ ಸತ್ಯಗಳನ್ನು ಬಿಚ್ಚಿಡುತ್ತಿದೆ. ಆದರೆ, ಬಿಜೆಪಿ ಸರಕಾರ ಈ ಎಲ್ಲ ಸಮಸ್ಯೆಗಳಿಂದ ದೇಶವನ್ನು ಹೊರ ತಂದಿದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು. ಇದನ್ನೂ ಓದಿ: ವಾರಾಂತ್ಯದ ಕರ್ಫ್ಯೂ ಸಮಯದಲ್ಲಿ ಬಿಎಂಟಿಸಿ ಸೇವೆಗಳ ಕಾರ್ಯಾಚರಣೆ ಕಡಿತ

    ಒಂದು ಭಾರತ- ಎರಡು ರಾಷ್ಟ್ರ ಎನ್ನುವುದು ಕಾಂಗ್ರೆಸ್ ನೀತಿ:
    ಒಂದು ಭಾರತ- ಎರಡು ರಾಷ್ಟ್ರ ಎನ್ನುವುದು ಕಾಂಗ್ರೆಸ್ ನೀತಿ. ಒಂದೇ ಭಾರತ-ಒಂದೇ ದೇಶ ಎನ್ನುವುದು ಬಿಜೆಪಿಯ ನೀತಿ. ಈ ಕಾರಣಕ್ಕಾಗಿಯೇ ಜಮ್ಮು ಮತ್ತು ಕಾಶ್ಮೀರಕ್ಕಿದ್ದ 370ನೇ ವಿಧಿಯನ್ನು ತೆಗೆಯಲಾಯಿತು. ಈಗ ಕಾಶ್ಮೀರವೂ ಭಾರತದ ಅಂತರ್ಭಾಗ. ಕಾಂಗ್ರೆಸ್‍ಗೆ ಇಂಥ ಇಚ್ಛಾಶಕ್ತಿ ಇರಲಿಲ್ಲ ಎಂದು ಅವರು ಕಿಡಿಕಾರಿದರು.

    ಈಶಾನ್ಯ ಭಾರತದಲ್ಲೂ ಸಮಸ್ಯೆಗಳ ಸರಮಾಲೆಯೇ ಇತ್ತು. ಬಾಂಗ್ಲಾ ಗಡಿಯಲ್ಲಿ ಒಳನುಸುಳುವಿಕೆ ಮಿತಿ ಮೀರಿತ್ತು. ಈಗ ಎಲ್ಲವೂ ನಿಂತಿದೆ. ರಾಷ್ಟ್ರದ ಹಿತಾಸಕ್ತಿಗೆ ಮಾರಕವಾಗುವ ಅಂಶಗಳನ್ನು ಇಟುಕೊಂಡೇ ಕಾಂಗ್ರೆಸ್ ರಾಜಕಾರಣ ಮಾಡುತ್ತಾ ಬಂದಿದೆ. ಇಂಥ ರಾಜಕೀಯ ಪ್ರವೃತ್ತಿಗೆ ಮೋದಿ ಅವರು ಇತಿಶ್ರೀ ಹಾಡುತ್ತಿದ್ದಾರೆ. ಇಷ್ಟು ಕಾಶ್ಮೀರ ಒಂದು ವಿಷಯವನ್ನಿಟ್ಟುಕೊಂಡು ಭಾರತದ ಮೇಲೆ ವಾಗ್ದಾಳಿ ನಡೆಸಲಾಗುತ್ತಿತ್ತು. ಈಗ ಜಗತ್ತಿಗೆ ಸತ್ಯದ ಅರಿವಾಗಿದೆ. ಆ ಹೆಗ್ಗಳಿಕೆ ಮೋದಿ ಅವರಿಗೆ ಸಲ್ಲಬೇಕು ಎಂದು ಡಿಸಿಎಂ ಹೇಳಿದರು. ಇದನ್ನೂ ಓದಿ:  ಬೆಂಗಳೂರು ಗ್ರಾ. ಉಸ್ತುವಾರಿ ಹೊಣೆ ಸಿಕ್ಕ ಬಳಿಕ ಚುರುಕಾದ ಸಚಿವ ಎಂಟಿಬಿ

    ಕೋವಿಡ್‍ನಿಂದಲೇ ಸ್ವಾವಲಂಬನೆಯತ್ತ:
    ಕೋವಿಡ್ ಸಂಕಷ್ಟ ಭಾರತಕ್ಕೆ ಬಂದಾಗ ಅದನ್ನೇ ಅವಕಾಶ ಮಾಡಿಕೊಂಡ ಮೋದಿ ಅವರು ಆತ್ಮನಿರ್ಭರ ಭಾರತ ಪರಿಕಲ್ಪನೆ ಅಡಿ ಕೈಗಾರಿಕೆ, ಉತ್ಪಾದನೆ, ಉದ್ಯೋಗ ಸೃಷ್ಠಿಗೆ ಉತ್ತೇಜನ ನೀಡಿದರು. ಕೇವಲ ಒಂದು ಪಿಪಿಇ ಕಿಟ್, ಮಾತ್ರೆ, ಔಷಧಿ, ಸ್ಯಾನಿಟೈಸರ್ ವಿಷಯದಲ್ಲಿ ಪರ ದೇಶಗಳ ಮೇಲೆ ಅವಲಂಭಿತವಾಗುತ್ತಿದ್ದ ಭಾರತವು ಕೇವಲ ಒಂದೂವರೆ ವರ್ಷದಲ್ಲೇ ಸಂಪೂರ್ಣ ಸ್ವಾವಲಂಭನೆ ಸಾಧಿಸಿತು. ಲಸಿಕೆ ತಯಾರಿಕೆಯಲ್ಲಿ ಜಗತ್ತಿನ ಅಗ್ರಮಾನ್ಯ ದೇಶವಾಗಿ ಹೊರಹೊಮ್ಮಿತು. ಇದು ಭಾರತದ ಸಾಧನೆ ಎಂದು ಡಿಸಿಎಂ ಒತ್ತಿ ಹೇಳಿದರು.

    ಕಾರ್ಯಕ್ರಮದಲ್ಲಿ ಬಳ್ಳಾರಿ ಜಿಲ್ಲೆಯ ಬಿಜೆಪಿ ಅಧ್ಯಕ್ಷ ಚನ್ನಬಸವ ಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ರಮೇಶ್, ಜಿಲ್ಲಾ ಪ್ರಭಾರಿ ಸಚ್ಚಿದಾನಂದ ಮುಂತಾದವರು ಭಾಗಿಯಾಗಿದ್ದರು.

  • ಯಲಹಂಕ ಆಸ್ಪತ್ರೆಯಲ್ಲಿ 14 ವೆಂಟಿಲೇಟರ್ ಬೆಡ್, 50 ಆಮ್ಲಜನಕ ಬೆಡ್ ವ್ಯವಸ್ಥೆ ಲೋಕಾರ್ಪಣೆ ಮಾಡಿದ ಡಿಸಿಎಂ

    ಯಲಹಂಕ ಆಸ್ಪತ್ರೆಯಲ್ಲಿ 14 ವೆಂಟಿಲೇಟರ್ ಬೆಡ್, 50 ಆಮ್ಲಜನಕ ಬೆಡ್ ವ್ಯವಸ್ಥೆ ಲೋಕಾರ್ಪಣೆ ಮಾಡಿದ ಡಿಸಿಎಂ

    ಬೆಂಗಳೂರು: ಯಲಹಂಕದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೊಸದಾಗಿ ಸ್ಥಾಪಿಸಿರುವ 14 ವೆಂಟಿಲೇಟರ್‍ಗಳ ಐಸಿಯು ಬೆಡ್ ವ್ಯವಸ್ಥೆ ಹಾಗೂ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ಶಾಲೆಯಲ್ಲಿ ಸ್ಥಾಪಿಸಿರುವ ಆಮ್ಲಜನಕ ಸಹಿತ 50 ಬೆಡ್‍ಗಳ ಆರೈಕೆ ಕೇಂದ್ರಕ್ಕೆ ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಸೋಮವಾರ ಚಾಲನೆ ನೀಡಿದರು.

    ‘ವಿಶ್ವವಾಣಿ’ ಫೌಂಡೇಶನ್ ಹಾಗೂ ‘ಅಜೀಂ ಪ್ರೇಮ್ ಜಿ’ ಫೌಂಡೇಶನ್ ಸಹಯೋಗದಲ್ಲಿ ಈ ಕೋವಿಡ್ ಐಸಿಯು ವೆಂಟಿಲೇಟರ್ ವಾರ್ಡ್ ಸ್ಥಾಪನೆಯಾಗಿದ್ದು, ಈ ಭಾಗದ ಸೋಂಕಿತರಿಗೆ ಹೆಚ್ಚು ಅನುಕೂಲವಾಗಲಿದೆ.

    ಉದ್ಘಾಟನೆ ನಂತರ ಮಾತನಾಡಿದ ಡಿಸಿಎಂ ಡಾ.ಅಶ್ವತ್ಥನಾರಾಯಣ, ಟೆಕ್ನಾಲಜಿಯನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಖಾಸಗಿಯವರ ಸಹಯೋಗದಲ್ಲಿ ಉತ್ತಮ ಆರೋಗ್ಯ ಮೂಲಸೌಕರ್ಯ ಒದಗಿಸುವ ಕೆಲಸ ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಆಗುತ್ತಿದೆ. ಈ ನಿಟ್ಟಿನಲ್ಲಿ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಪ್ರಯತ್ನ ಶ್ಲಾಘನೀಯ ಎಂದರು.

    ರಾಜ್ಯದ ಉದ್ದಗಲಕ್ಕೂ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಲು ಸರಕಾರ ಸರ್ವ ರೀತಿಯ ಕ್ರಮ ವಹಿಸಿದೆ. ಕಾಲಮಿತಿಯೊಳಗೆ ಈ ಕೆಲಸ ಮಾಡಿ ಮುಗಿಸಲಾಗುವುದು. ಸರಕಾರಿ & ಖಾಸಗಿ ಸಹಯೋಗದಲ್ಲಿ ಈ ಮಹತ್ಕಾರ್ಯವನ್ನು ಸಾಧಿಸಲಾಗುವುದು ಎಂದ ಅವರು, ಕೋವಿಡ್‍ನಂಥ ಸಾಂಕ್ರಾಮಿಕ ಮಾರಿಯನ್ನು ಎದುರಿಸಬೇಕಾದರೆ ನಮ್ಮಲ್ಲಿ ಅತ್ಯುತ್ತಮ ಗುಣಮಟ್ಟದ ವೈದ್ಯ ವ್ಯವಸ್ಥೆ ಇರಲೇಬೇಕು ಎಂದರು.

    ಯಲಹಂಕದಲ್ಲಿ ಕ್ಷೇತ್ರದ ಶಾಸಕರೂ ಆಗಿರುವ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು ಮಾತನಾಡಿ, ಕ್ಷೇತ್ರದಲ್ಲಿ ಯಾರೊಬ್ಬರೂ ಆರೋಗ್ಯ ಸೇವೆಯಿಂದ ವಂಚಿತರಾಗಬಾರದು ಎಂಬ ದೃಷ್ಟಿಯಿಂದ ಖಾಸಗಿ ಸಹಭಾಗಿತ್ವದಲ್ಲಿ ಉತ್ತಮ ರೀತಿಯ ಆರೋಗ್ಯ ಸೇವೆಯನ್ನು ಒದಗಿಸುತ್ತಿದ್ದೇವೆ. ಕ್ಷೇತ್ರದಲ್ಲಿ ಜನಸಾಮಾನ್ಯರಿಗೂ ವೆಂಟೆಲೇಟರ್ ಸೌಲಭ್ಯ ದೊರೆಯುವಂತೆ ಮಾಡುವ ಉದ್ದೇಶದಿಂದ ಸರ್ಕಾರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಇದರ ಉಪಯೋಗ ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.

    ಆಸ್ಪತ್ರೆಯಲ್ಲಿ ಅಜೀಂ ಪ್ರೇಮ್ ಜಿ ಪ್ರತಿಷ್ಠಾನ ಮತ್ತು ಡಾಕ್ಡರ್ಸ್ ಫಾರ್ ಯೂ ಸಂಸ್ಥೆಯ ಸಿಬ್ಬಂದಿ ರೋಗಿಗಳ ಆರೈಕೆಯಲ್ಲಿ ತೊಡಗಿದ್ದಾರೆ. ಕೋವಿಡ್ ಕೇರ್ ಕೇಂದ್ರದಲ್ಲಿ ಸೋಂಕಿತರಿಗೆ ರಿಕ್ರಿಯೇಷನ್ ಗೂ ಅವಕಾಶ ಇದ್ದು ಡಿಸಿಎಂ ಡಾ.ಅಶ್ವತ್ಥನಾರಾಯಣ ಅವರು ಕ್ರಿಕೆಟ್ ಆಡುವುದರ ಮೂಲಕ ಅದಕ್ಕೂ ಚಾಲನೆ ನೀಡಿದರು. ಕ್ರಿಕೆಟ್, ವಾಲಿಬಾಲ್, ಕೇರಂ ಇತ್ಯಾದಿ ಆಟಗಳಿಗೂ ಯಲಹಂಕ ದಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ವಿಶ್ವನಾಥ ತಿಳಿಸಿದರು.

    ಈ ಸಂದರ್ಭದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್, ಆಸ್ಪತ್ರೆ ಮುಖ್ಯಸ್ಥೆ ಡಾ.ಅಸ್ಮಾ, ಡಿಎಚ್‍ಒ ಡಾ.ಶ್ರೀನಿವಾಸ್, ಅಜೀಂ ಪ್ರೇಮ್ ಜಿ ಪ್ರತಿಷ್ಠಾನ ಮತ್ತು ಡಾಕ್ಟರ್ ಫಾರ್ ಯೂ ಸಂಸ್ಥೆಯ ಪ್ರತಿನಿಧಿಗಳು ಇದ್ದರು.