Tag: Dr CN Ashwathnarayan

  • ಚೆನ್ನಮ್ಮ ವಿವಿ: ಡಿಪ್ಲೊಮಾ ಪಡೆದವರಿಗೆ ಬಿ.ಕಾಂ. 3ನೇ ಸೆಮಿಸ್ಟರ್‌ಗೆ ಪ್ರವೇಶ, ಕಾಲಾವಧಿ 3 ದಿನ ವಿಸ್ತರಣೆ

    ಚೆನ್ನಮ್ಮ ವಿವಿ: ಡಿಪ್ಲೊಮಾ ಪಡೆದವರಿಗೆ ಬಿ.ಕಾಂ. 3ನೇ ಸೆಮಿಸ್ಟರ್‌ಗೆ ಪ್ರವೇಶ, ಕಾಲಾವಧಿ 3 ದಿನ ವಿಸ್ತರಣೆ

    ಬೆಳಗಾವಿ/ಬೆಂಗಳೂರು: ಕಮರ್ಷಿಯಲ್ ಪ್ರಾಕ್ಟೀಸ್ ಡಿಪ್ಲೊಮಾ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ನೇರವಾಗಿ ಬಿ.ಕಾಂ. 3ನೇ ಸೆಮಿಸ್ಟರಿಗೆ ಪ್ರವೇಶ ಪಡೆಯಲು ಇದ್ದ ಕಾಲಾವಕಾಶವನ್ನು ಡಿ.23ರವರೆಗೆ ವಿಸ್ತರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್‌ ನಾರಾಯಣ್ ತಿಳಿಸಿದ್ದಾರೆ.

    ಈ ಬಗ್ಗೆ ಇಂದು ಮಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಸೂಚನೆಯಂತೆ ಕಡ್ಡಾಯ ಮುಚ್ಚಳಿಕೆ ಪತ್ರವನ್ನು ಬರೆಸಿಕೊಂಡು ಅರ್ಹ ವಿದ್ಯಾರ್ಥಿಗಳಿಗೆ ಪ್ರವೇಶ ಕೊಡಬಹುದು. ರಾಣಿ ಚೆನ್ನಮ್ಮ ವಿವಿ ವ್ಯಾಪ್ತಿಗೆ ಬರುವ ಕಾಲೇಜುಗಳು ಇಂತಹ ವಿದ್ಯಾರ್ಥಿಗಳ ಪಟ್ಟಿಯನ್ನು ನಂತರ ವಿಶ್ವವಿದ್ಯಾಲಯಕ್ಕೆ ಕಳಿಸಿಕೊಡಬೇಕು. ಬಳಿಕ ಇಂತಹ ಪ್ರವೇಶಗಳಿಗೆ ಅನುಮೋದನೆ ಕೊಡಲಾಗುವುದು ಎಂದರು. ಇದನ್ನೂ ಓದಿ: ಬೊಮ್ಮಾಯಿ ಭಾವನಾತ್ಮಕ ಹೇಳಿಕೆ ಹೃದಯ ಇದ್ದವರಿಗೆ ಮಾತ್ರ ಅರ್ಥವಾಗುತ್ತದೆ: ಎಚ್‍ಡಿಕೆ

    ಈಗ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೂ ನಿಗದಿತ ಪಠ್ಯಕ್ರಮವನ್ನು ಸಂಪೂರ್ಣವಾಗಿ ಬೋಧಿಸಲಾಗುವುದು. ಆದ್ದರಿಂದ ಆಸಕ್ತ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ. ವಿದ್ಯಾರ್ಥಿಗಳ ಕೋರಿಕೆ ಮೇರೆಗೆ ಸಚಿವರು ಈ ಕ್ರಮ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಶಾಂತಿ ಕದಡುವುದೇ ನಾಡದ್ರೋಹಿ ಕಾಂಗ್ರೆಸ್ ಉದ್ದೇಶ – ಕೈ ವಿರುದ್ಧ ಬಿಜೆಪಿ ಟ್ವೀಟ್ ದಾಳಿ

  • ಡಿ.23ರಂದು ಬೆಳಗಾವಿಯಲ್ಲಿ ಉದ್ಯೋಗ ಮೇಳ: ಅಶ್ವಥ್ ನಾರಾಯಣ

    ಡಿ.23ರಂದು ಬೆಳಗಾವಿಯಲ್ಲಿ ಉದ್ಯೋಗ ಮೇಳ: ಅಶ್ವಥ್ ನಾರಾಯಣ

    ಬೆಳಗಾವಿ: ಬೆಳಗಾವಿಯ ಉದ್ಯಮ್ ಬಾಗ್‍ನಲ್ಲಿ ಇರುವ ಗೋಗಟೆ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಎಂಜಿನಿಯರಿಂಗ್, ಡಿಪ್ಲೊಮಾ ಮತ್ತು ಐಟಿಐ ಪದವೀಧರರಿಗೆ ಡಿ.23ರಂದು ಉದ್ಯೋಗ ಮೇಳ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ತಿಳಿಸಿದ್ದಾರೆ.

    ಜಿಲ್ಲೆಯ ಸಚಿವರು ಮತ್ತು ಜನಪ್ರತಿನಿಧಿಗಳ ಜತೆ ಶುಕ್ರವಾರ ಇಲ್ಲಿನ ಸುವರ್ಣ ಸೌಧದಲ್ಲಿ ಸಭೆ ನಡೆಸಿದ ಅವರು, ಓಲಾ, ಎಚ್‍ಪಿ ಸೇರಿದಂತೆ 34 ಕಂಪನಿಗಳು ಈಗಾಗಲೇ ಮೇಳದಲ್ಲಿ ಪಾಲ್ಗೊಳ್ಳಲು ಒಪ್ಪಿಗೆ ಸೂಚಿಸಿದ್ದು, ಇನ್ನೂ 70 ಕಂಪನಿಗಳು ಉತ್ಸುಕವಾಗಿವೆ. ಮೇಳವು ಸಂಪೂರ್ಣ ವಾಗಿ ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ‘ಸ್ಕಿಲ್ ಕನೆಕ್ಟ್  ಪೋರ್ಟಲ್‌ನಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಅತ್ಯಾಚಾರ ಕುರಿತ ರಮೇಶ್‌ ಕುಮಾರ್‌ ಹೇಳಿಕೆಗೆ ಕಾಂಗ್ರೆಸ್‌ ನಾಯಕರಿಂದಲೇ ಟೀಕೆ

    ನೋಂದಣಿ ಮಾಡಿಕೊಂಡ ನಂತರ ಉದ್ಯೋಗದ ಸ್ವರೂಪ, ಯಾವ ಕಂಪನಿಯು ಅಭ್ಯರ್ಥಿಯನ್ನು ಸಂದರ್ಶಿಸಲಿದೆ ಎನ್ನುವ ಅಗತ್ಯ ಮಾಹಿತಿಗಳನ್ನು ಒದಗಿಸಲಾಗುವುದು. ಡಿ.23ರಂದು ನಡೆಯುವ ಮೊದಲ ಸುತ್ತಿನ ಸಂದರ್ಶನದಲ್ಲಿ ಆಯ್ಕೆಯಾಗುವವರಿಗೆ ಮರು ದಿನವಾದ ಡಿ.24 ರಂದು ಎರಡನೇ ಸುತ್ತಿನ ಸಂದರ್ಶನ ನಡೆಯಲಿದೆ ಎಂದು ಸಚಿವರು ಹೇಳಿದರು. ಇದನ್ನೂ ಓದಿ: ಕೈಗಾರಿಕೆ ಪ್ರಾರಂಭ ಮಾಡದ 500ಕ್ಕೂ ಹೆಚ್ಚು ಕೈಗಾರಿಕೆಗಳ ಜಮೀನು ವಾಪಸ್: ನಿರಾಣಿ

    ಸಂದರ್ಶನದಲ್ಲಿ ವಿಫಲರಾಗುವ ಅಭ್ಯರ್ಥಿಗಳಿಗೆ ಏನು ಕೊರತೆ ಇದೆ ಎನ್ನುವುದನ್ನು ಕಂಡುಕೊಂಡು, ಅಂತಹವರಿಗೆ ಸೂಕ್ತ ಮತ್ತು ಅಗತ್ಯ ಕೌಶಲ್ಯ ತರಬೇತಿಗೆ ವ್ಯವಸ್ಥೆ ಮಾಡಲಾಗುವುದು. 80 ಸಾವಿರ ಉದ್ಯೋಗಾಕಾಂಕ್ಷಿಗಳಲ್ಲಿ 40 ಸಾವಿರ ಜನರಲ್ಲಿ ಸರಿಯಾದ ಕೌಶಲ್ಯಗಳೇ ಇಲ್ಲ. ಈ ಕೊರತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಇನ್ಮುಂದೆ ಎಚ್ಚರಿಕೆಯಿಂದ ಮಾತಾಡ್ತೀನಿ- ಕ್ಷಮೆಯಾಚಿಸಿದ ರಮೇಶ್ ಕುಮಾರ್