Tag: dr. k sudhakar

  • ಬೆಂಗಳೂರು ಉಪನಗರ ರೈಲು ಯೋಜನೆಯ ಲೊಕೇಶನ್ ಸರ್ವೆ ಶೀಘ್ರ ಪೂರ್ಣಗೊಳಿಸಿ – ಸಚಿವರಿಗೆ ಸುಧಾಕರ್ ಮನವಿ

    ಬೆಂಗಳೂರು ಉಪನಗರ ರೈಲು ಯೋಜನೆಯ ಲೊಕೇಶನ್ ಸರ್ವೆ ಶೀಘ್ರ ಪೂರ್ಣಗೊಳಿಸಿ – ಸಚಿವರಿಗೆ ಸುಧಾಕರ್ ಮನವಿ

    -ಚಿಕ್ಕಬಳ್ಳಾಪುರ ಹೆದ್ದಾರಿ ಯೋಜನೆಗಳಿಗೆ ಸಚಿವ ನಿತಿನ್ ಗಡ್ಕರಿಗೆ ಮನವಿ

    ಚಿಕ್ಕಬಳ್ಳಾಪುರ: ದೊಡ್ಡಬಳ್ಳಾಪುರ – ಚನ್ನಸಂದ್ರ ರೈಲು ನಿಲ್ದಾಣ ಮೇಲ್ದರ್ಜೆ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ರೈಲ್ವೇ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ (V.Somanna) ಅವರಿಗೆ ಸಂಸದ ಡಾ.ಕೆ ಸುಧಾಕರ್ (Dr.K Sudhakar) ಮನವಿ ಮಾಡಿದ್ದಾರೆ.

    ಬೆಂಗಳೂರು ಉಪನಗರ ರೈಲು ಯೋಜನೆಯಲ್ಲಿ ಎಫ್‍ಎಲ್‍ಎಸ್ ನಿರ್ಣಾಯಕವಾಗಿದ್ದು, ಕಾರಿಡಾರ್ 1 ಮತ್ತು 4 ರಲ್ಲಿ ಈ ಕಾರ್ಯವನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಆದ್ಯತೆ ನೀಡಬೇಕು. ಇದರಿಂದ ಪ್ರಯಾಣಿಕರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಅವರು ಪತ್ರದಲ್ಲಿ ಕೋರಿದ್ದಾರೆ. ಇದನ್ನೂ ಓದಿ: ಮಗುವಿಗೆ ಔಷಧಿ ತರಲು ತೆರಳಿದ್ದ ಮಹಿಳೆಯನ್ನು ನುಂಗಿದ ಹೆಬ್ಬಾವು!

    ಅಮೃತ ಭಾರತ ಯೋಜನೆಯಡಿ ನಡೆಯುತ್ತಿರುವ ದೊಡ್ಡಬಳ್ಳಾಪುರ ಮತ್ತು ಚನ್ನಸಂದ್ರ ರೈಲು ನಿಲ್ದಾಣ ಮೇಲ್ದರ್ಜೆಗೇರಿಸುವ ಕಾಮಗಾರಿಯನ್ನು ಕಾಲಮಿತಿ ಹಾಕಿಕೊಂಡು ಶೀಘ್ರ ಪೂರ್ಣಗೊಳಿಸಬೇಕು. ಹೊಸ ರೈಲು ಮಾರ್ಗ ಯೋಜನೆಗಳಾದ ಚಿಕ್ಕಬಳ್ಳಾಪುರ-ಗೌರಿಬಿದನೂರು (44 ಕಿ.ಮೀ.), ಚಿಕ್ಕಬಳ್ಳಾಪುರ-ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ (103 ಕಿ.ಮೀ.), ಶ್ರೀನಿವಾಸಪುರ-ಮದನಪಲ್ಲಿ (75 ಕಿ.ಮೀ.) ಮಾರಿಕುಪ್ಪಂ-ಕುಪ್ಪಂ (23.7 ಕಿ.ಮೀ.) ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಬೇಕು. ಬೆಂಗಳೂರು ಉಪನಗರ ರೈಲು ಯೋಜನೆಯ ಕಾರಿಡಾರ್ 1: ದೇವನಹಳ್ಳಿ-ಯಲಹಂಕ ಮತ್ತು ಕಾರಿಡಾರ್ 4: ರಾಜಾನುಕುಂಟೆ-ಯಲಹಂಕ ಮಾರ್ಗಗಳನ್ನು ಶೀಘ್ರ ಪೂರ್ಣಗೊಳಿಸಬೇಕೆಂದು ಅವರು ಕೋರಿದ್ದಾರೆ.

    ಹೆದ್ದಾರಿ ಯೋಜನೆಗಳಿಗೆ ಮನವಿ
    ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹೆದ್ದಾರಿ ಯೋಜನೆಗಳನ್ನು ಜಾರಿ ಮಾಡಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವಂತೆ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಗೆ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

    ಚಿಕ್ಕಬಳ್ಳಾಪುರ ನಗರದಲ್ಲಿ NH-44 ಮತ್ತು NH-69 ರ ನಡುವೆ ಚತುಷ್ಫಥ ಹೊರವರ್ತುಲ ರಸ್ತೆ ನಿರ್ಮಿಸಲು ಕಾರ್ಯಸಾಧ್ಯತಾ ವರದಿ/ವಿಸ್ತೃತ ಯೋಜನಾ ವರದಿ ರೂಪಿಸಲು ಒಪ್ಪಿಗೆ ನೀಡಬೇಕು. ಚಿಕ್ಕಬಳ್ಳಾಪುರದಲ್ಲಿ NH-7 ನ ಎಲ್‍ಸಿ ನಂ. 39 ರಲ್ಲಿ ಚತುಷ್ಪಥ ರೈಲು ಮೇಲ್ಸೇತುವೆ ನಿರ್ಮಿಸಲು 40 ಕೋಟಿ ರೂ. ಹೆಚ್ಚುವರಿ ಅನುದಾನ ನೀಡಬೇಕು. ಗೌರಿಬಿದನೂರಿನಲ್ಲಿ SH-9 ನಲ್ಲಿ ಚತುಷ್ಪಥ ರೈಲು ಮೇಲ್ಸೇತುವೆ ನಿರ್ಮಿಸಲು 75 ಕೋಟಿ ರೂ. ಅನುದಾನ ನೀಡಬೇಕು. NH-234 ರ ಅಗಲೀಕರಣದಿಂದ ಪ್ರಯಾಣದ ಅವಧಿ ಹಾಗೂ ದಟ್ಟಣೆ ಕಡಿಮೆಯಾಗಲಿದ್ದು, ಈ ಕುರಿತು ಕ್ರಮ ವಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಚನ್ನಪಟ್ಟಣ ಶೀಘ್ರದಲ್ಲೇ ಬೆಂಗಳೂರಿಗೆ ಸೇರುತ್ತೆ, ‌ನನ್ನ ಕೈ ಬಲಪಡಿಸಿ: ಡಿಕೆಶಿ ಮನವಿ

  • ರಾಜೀನಾಮೆ ಪತ್ರ ವೈರಲ್-‌ ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದ್ದೇನು?

    ರಾಜೀನಾಮೆ ಪತ್ರ ವೈರಲ್-‌ ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದ್ದೇನು?

    ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯಲ್ಲಿ ಕೆ. ಸುಧಾಕರ್‌ (K sudhakar) ಗೆಲುವಿನ ಬೆನ್ನಲ್ಲೇ ಶಾಸಕ ಪ್ರದೀಪ್ ಈಶ್ವರ್ ಹೆಸರಿನ ರಾಜೀನಾಮೆ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಈ ಸಂಬಂಧ ಸ್ವತಃ ಶಾಸಕರೇ ಸ್ಪಷ್ಟನೆ ನೀಡಿದ್ದಾರೆ.

    ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅವರು, ಇದೊಂದು ನಕಲಿ ಪತ್ರ. ಆ ಪತ್ರಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ಕಿಡಿಗೇಡಿಗಳು ನಕಲಿ ರಾಜೀನಾಮೆ ಪತ್ರ ಹರಿಬಿಟ್ಟಿದ್ದಾರೆ. ಈ ಬಗ್ಗೆ ನಾನು ಕಾನೂನು ರೀತಿಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

    ರಾಜೀನಾಮೆ ನೀಡ್ತೀನಿ ಅಂದಿದ್ದ ಶಾಸಕರು: ಚಿಕ್ಕಬಳ್ಳಾಪುರ (Chikkaballapur) ಲೋಕಸಭಾ ಚುನಾವಣಾ ಪ್ರಚಾರದ ವೇಳೆ ವಿಧಾನಸಭಾ ಕ್ಷೇತ್ರದಲ್ಲಿ ಡಾ. ಕೆ ಸುಧಾಕರ್ ಒಂದು ಮತ ಹೆಚ್ಚಿಗೆ ಲೀಡ್ ಪಡೆದರೆ ನಾನು ರಾಜೀನಾಮೆ ನೀಡುವುದಾಗಿ ಹೇಳಿಕೆ ಕೊಟ್ಟಿದ್ದರು. ಆ ಹೇಳಿಕೆ ಜೊತೆಯಲ್ಲಿ ಇದನ್ನ ಮಾಜಿ ಸಚಿವ ಡಾಕ್ಟರ್ ಕೆ ಸುಧಾಕರ್ ಸವಾಲಾಗಿ ಸ್ವೀಕರಿಸಬೇಕು ಎಂಬ ಆಗ್ರಹವನ್ನು ಕೂಡ ಮಾಡಿದ್ದರು. ಆದರೆ ಪ್ರದೀಪ್ ಈಶ್ವರ್ ಸವಾಲಿಗೆ ಡಾಕ್ಟರ್ ಕೆ ಸುಧಾಕರ್ ಯಾವುದೇ ಪ್ರತಿಕ್ರಿಯೆ ಕೊಟ್ಟಿರಲಿಲ್ಲ. ಇದನ್ನೂ ಓದಿ: ಎರಡಂಕಿ ಫಲಿತಾಂಶ ಬರದಿರಲು ನಮ್ಮ ನಾಯಕರ ಓವರ್ ಕಾನ್ಫಿಡೆನ್ಸ್ ಕಾರಣ – ಸತೀಶ್ ಜಾರಕಿಹೊಳಿ

    ಇತ್ತ ಕೆಲವು ಕಡೆ ಪ್ರದೀಪ್ ಈಶ್ವರ್ (Pradeep Eshwar) ತಮ್ಮ ಹಳೆಯ ಹೇಳಿಕೆಯನ್ನೇ ಮರು ಉಚ್ಚರಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ಹೇಳಿಕೆಯನ್ನು ಸಹ ಕೊಟ್ಟಿದ್ದರು. ಮಂಗಳವಾರ ಲೋಕಸಭಾ ಚುನಾವಣಾ ಫಲಿತಾಂಶದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮತ ಎಣಿಕೆ ನಂತರ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಡಾಕ್ಟರ್ ಕೆ ಸುಧಾಕರ್ 20,941 ಮತಗಳ ಅಂತರವನ್ನು ಕಾಯ್ದುಕೊಂಡಿದ್ದಾರೆ. ಹೀಗಾಗಿ ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆ ಕೊಡಬೇಕು ಅಂತ ಹಲವರು ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ಇಂದು ನಕಲಿ ರಾಜೀನಾಮೆ ಪತ್ರವೊಂದು ಸಾಕಷ್ಟು ವೈರಲ್ ಆಗಿ ಚರ್ಚೆಗೀಡಾಗಿದೆ.

  • ಯಲಹಂಕದಲ್ಲಿ ಸುಧಾಕರ್‌ಗೆ 1 ಲಕ್ಷ ಮತಗಳ ಲೀಡ್ ಕೊಡಿಸುತ್ತೇನೆ: ವಿಶ್ವನಾಥ್ ಪ್ರತಿಜ್ಞೆ

    ಯಲಹಂಕದಲ್ಲಿ ಸುಧಾಕರ್‌ಗೆ 1 ಲಕ್ಷ ಮತಗಳ ಲೀಡ್ ಕೊಡಿಸುತ್ತೇನೆ: ವಿಶ್ವನಾಥ್ ಪ್ರತಿಜ್ಞೆ

    ಚಿಕ್ಕಬಳ್ಳಾಪುರ: ಕಳೆದ ಬಾರಿ 2019ರಲ್ಲಿ ಯಲಹಂಕ (Yalahanka) ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ (BJP) 45,000 ಮತಗಳ ಲೀಡ್ ದೊರೆತಿತ್ತು. ಈ ಬಾರಿ ಎನ್‌ಡಿಎಗೆ (NDA) 1 ಲಕ್ಷಕ್ಕೂ ಹೆಚ್ಚು ಮತಗಳ ಲೀಡ್ ಸಿಗಲಿದೆ ಎಂದು ಶಾಸಕ ಎಸ್‌ಆರ್ ವಿಶ್ವನಾಥ್ (SR Vishwanath) ವಿಶ್ವಾಸ ವ್ಯಕ್ತಪಡಿಸಿದರು.

    ಯಲಹಂಕ ವಿಧಾನಸಭಾ ಕ್ಷೇತ್ರದ ತೋಟದಗುಡ್ಡಹಳ್ಳಿ, ಅಂಚೆಪಾಳ್ಯ ಮೊದಲಾದ ಕಡೆಗಳಲ್ಲಿ ಶಾಸಕ ಎಸ್‌ಆರ್ ವಿಶ್ವನಾಥ್ ಅವರೊಂದಿಗೆ ಡಾ.ಕೆ ಸುಧಾಕರ್ ಪ್ರಚಾರ ಮತ್ತು ಸಭೆ ನಡೆಸಿದರು. ಬಳಿಕ ಮಾತನಾಡಿದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ (Dr K Sudhakar), ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಂದಾದ ಬಳಿಕ ಕಾಂಗ್ರೆಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬ ಪರಿಸ್ಥಿತಿ ಉಂಟಾಗಿದೆ. 80% ರಷ್ಟು ಮತಗಳು ಬಿಜೆಪಿಗೆ ದೊರೆಯಲಿದೆ. ಆದರೆ ಕಾಂಗ್ರೆಸ್‌ಗೆ 20% ರಷ್ಟು ಮತಗಳು ದೊರೆಯುವುದು ಅನುಮಾನ. ಇದಕ್ಕೆ ಶಾಸಕರ ಅಭಿವೃದ್ಧಿ ಕಾರ್ಯಗಳೇ ಕಾರಣ ಎಂದರು. ಇದನ್ನೂ ಓದಿ: ರಾಜ್ಯದ ವಿವಿಧೆಡೆ ಮಳೆ ಅಬ್ಬರ; ಶಿವಮೊಗ್ಗ, ಬೀದರ್‌ನಲ್ಲಿ ವರುಣಾರ್ಭಟಕ್ಕೆ ಇಬ್ಬರು ಬಲಿ – ಇನ್ನೂ 3 ದಿನ ಮಳೆ ಮುನ್ಸೂಚನೆ

    ಯಲಹಂಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸಂಘಟನೆ ಶಕ್ತಿಯುತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಸಮಾಗಮದಿಂದ ಇಲ್ಲಿ ಹೆಚ್ಚು ಲಾಭವಾಗಲಿದೆ ಎಂದು ಹೇಳಿದರು. ಇದನ್ನೂ ಓದಿ: ದುಬೈ ಬರೋ ಪ್ಲ್ಯಾನ್ ಇದ್ದರೆ ಮುಂದಕ್ಕೆ ಹಾಕಿ- ಭಾರತದ ರಾಯಭಾರಿ ಸೂಚನೆ

  • ನಾನೇನು ತಪ್ಪು ಮಾಡಿಲ್ಲ, 10 ತಿಂಗ್ಳು ಅಜ್ಞಾತವಾಸ ಅನುಭವಿಸಿದ್ದೇನೆ: ಸುಧಾಕರ್ ಕಣ್ಣೀರು

    ನಾನೇನು ತಪ್ಪು ಮಾಡಿಲ್ಲ, 10 ತಿಂಗ್ಳು ಅಜ್ಞಾತವಾಸ ಅನುಭವಿಸಿದ್ದೇನೆ: ಸುಧಾಕರ್ ಕಣ್ಣೀರು

    ಚಿಕ್ಕಬಳ್ಳಾಪುರ: ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಡಾ.ಕೆ.ಸುಧಾಕರ್ (Dr. K. Sudhakar) ಇಂದು ಸಹಸ್ರಾರು ಕಾರ್ಯಕರ್ತರೊಂದಿಗೆ ನಾಮಪತ್ರ ಸಲ್ಲಿಕೆ ಮಾಡಿ ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ರೋಡ್ ಶೋ ನಡೆಸಿದರು.

    ಡಾ.ಕೆ ಸುಧಾಕರ್ ಪರವಾಗಿ ಮಾಜಿ ಸಿಎಂ ಕುಮಾರಸ್ವಾಮಿ ಮತಯಾಚನೆ ಮಾಡಿದರು. ಚಿಕ್ಕಬಳ್ಳಾಪುರ ನಗರದ ಶಿಡ್ಲಘಟ್ಟ ವೃತ್ತದಲ್ಲಿ ಸಾವಿರಾರು ಮಂದಿಯನ್ನ ಉದ್ದೇಶಿಸಿ ಮಾತನಾಡಿದ ಡಾ.ಕೆ.ಸುಧಾಕರ್, ನಾನು ಎಂದೂ ರಾಜಕೀಯ ಜಾತಿ ಮಾಡಿದವನಲ್ಲ. ನನ್ನನ್ನ ಜಾತಿಯಿಂದ ನೋಡಬೇಡಿ. ಎಲ್ಲ ಸಮುದಾಯಗಳನ್ನ ನಾನು ಸಮನಾಗಿ ಕಾಣುತ್ತೇನೆ ಅಂತ ಭಗವಂತನ ಮೇಲೆ ಪ್ರಮಾಣ ಮಾಡುತ್ತೇನೆ ಎಂದರು.

    ಮಣ್ಣಿನ ಮಗನಾಗಿ ನನಗೆ ಮತ್ತೊಮ್ಮೆ ಸೇವೆ ಮಾಡಲು ಅವಕಾಶ ಮಾಡಿಕೊಡಿ. ನನ್ನನ್ನು ದೂರ ಮಾಡಿದ್ದೀರಿ. 10 ತಿಂಗಳಿಂದ ನಾನು ಅಜ್ಞಾತವಾಸ ಅನುಭವಿಸಿದ್ದೇನೆ. ನಾನೇನು ತಪ್ಪು ಮಾಡಿಲ್ಲ, ನಿಮ್ಮ ಸೇವೆಯನ್ನ ಮಗನಾಗಿ ಮಾಡುತ್ತೇನೆ. ಮತ್ತೊಮ್ಮೆ ಅವಕಾಶ ಕೊಡಿ ಅಂತ ಭಾವುಕರಾಗಿ ಕಣ್ಣೀರಿಟ್ಟರು. ಇದನ್ನೂ ಓದಿ: ಸೋನು ಶ್ರೀನಿವಾಸ್ ಗೌಡಗೆ ಜಾಮೀನು

    ಬಳಿಕ ಮಾತನಾಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ (HD Kumaraswamy), ಜೆಡಿಎಸ್- ಬಿಜೆಪಿ (JDS- BJP) ಮೈತ್ರಿ ನಮ್ಮ ಸ್ವಾರ್ಥಕ್ಕಾಗಿ ಅಲ್ಲ. ಸುಧಾಕರ್ ಹಾಗೂ ನಾನು ಸೇರಿ ಬಯಲುಸೀಮೆಗೆ ಶಾಶ್ವತ ನೀರಾವರಿ ಯೋಜನೆಗಳನ್ನ ತರುತ್ತೇವೆ. ಇಲ್ಲವಾದಲ್ಲಿ ನಾವು ರಾಜಕೀಯದಿಂದಲೇ ನಿವೃತ್ತಿ ಆಗುತ್ತೇವೆ ಅಂತ ಸಾವಲು ಹಾಕಿದರು.

  • ಚಿಕ್ಕಬಳ್ಳಾಪುರ ಕ್ಷೇತ್ರವನ್ನು ವಿಶ್ವದಲ್ಲೇ ಮಾದರಿ ಕ್ಷೇತ್ರ ಮಾಡುವ ಪ್ರಯತ್ನ ಮಾಡ್ತೀನಿ: ಕೆ.ಸುಧಾಕರ್

    ಚಿಕ್ಕಬಳ್ಳಾಪುರ ಕ್ಷೇತ್ರವನ್ನು ವಿಶ್ವದಲ್ಲೇ ಮಾದರಿ ಕ್ಷೇತ್ರ ಮಾಡುವ ಪ್ರಯತ್ನ ಮಾಡ್ತೀನಿ: ಕೆ.ಸುಧಾಕರ್

    – ಮೋದಿ ಕಾಲಘಟ್ಟದಲ್ಲಿ ಅವಕಾಶ ಸಿಕ್ಕಿರೋದು ಜನ್ಮ-ಜನ್ಮಗಳ ಸೌಭಾಗ್ಯ
    – ಬಿಜೆಪಿ-ಜೆಡಿಎಸ್ ಹಾಲು, ಜೇನಿನಂತೆ ಬೆರೆತು ಕೆಲಸ ಮಾಡ್ತೀವಿ ಎಂದ ಸುಧಾಕರ್

    ಬೆಂಗಳೂರು: ನನ್ನ ಕ್ಷೇತ್ರವನ್ನು ವಿಶ್ವದಲ್ಲೇ ಮಾದರಿ ಕ್ಷೇತ್ರ ಮಾಡುವ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಸಚಿವ ಹಾಗೂ ಚಿಕ್ಕಬಳ್ಳಾಪುರ (Chikkaballapura) ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ಕೆ ಸುಧಾಕರ್ (Dr.K Sudhakar) ಹೇಳಿದ್ದಾರೆ.

    ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಅವರು, ಮಾಜಿ ಸಿಎಂ ಕುಮಾರಸ್ವಾಮಿಯವರನ್ನು (H.D Kumaraswamy) ಭೇಟಿಯಾಗಿ ಬೆಂಬಲ ಕೋರಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ (BJP) ಹೈಕಮಾಂಡ್ ನಾಯಕರು, ಮೋದಿ, ಯಡಿಯೂರಪ್ಪ, ಬೊಮ್ಮಾಯಿ, ವಿಜಯೇಂದ್ರ, ಕುಮಾರಸ್ವಾಮಿಯವರ ಸಹಕಾರದಿಂದ ಲೋಕಸಭಾ ಚುನಾವಣೆ ಎದುರಿಸುತ್ತಿದ್ದೇನೆ. ಎಲ್ಲರಿಗೂ ಹೃದಯ ಪೂರ್ವಕವಾಗಿ ಕೃತಜ್ಞತೆ ಹೇಳುತ್ತೇನೆ. ಮಾಜಿ ಶಾಸಕರಾದ ಎಂಟಿಬಿ ನಾಗರಾಜ್ ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಹಾಗೂ ಜೆಡಿಎಸ್ ಮುಖಂಡರೆಲ್ಲರೂ ಆಶೀರ್ವಾದ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರವನ್ನ ಮಾದರಿ ಲೋಕಸಭಾ ಕ್ಷೇತ್ರವನ್ನಾಗಿ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಮೋದಿಯವರ ಕಾಲಘಟ್ಟದಲ್ಲಿ ನನಗೆ ಅವಕಾಶ ಸಿಕ್ಕಿರುವುದು ಜನ್ಮ ಜನ್ಮಗಳ ಸೌಭಾಗ್ಯ ಎಂದಿದ್ದಾರೆ. ಇದನ್ನೂ ಓದಿ: ಟಿಕೆಟ್ ಘೋಷಣೆ ಆಗುತ್ತಿದ್ದಂತೆಯೇ ‘ಮಂಡಿ’ ಅಖಾಡದಲ್ಲಿ ಕಂಗನಾ

    ಹಾಲು-ಜೇನಿನಂತೆ ಬೆರೆತು ಕೆಲಸ ಮಾಡ್ತೀವಿ:
    ನಮ್ಮ ಕ್ಷೇತ್ರದಲ್ಲಿ 20 ಲಕ್ಷ ಮತದಾರರಿದ್ದಾರೆ. ಅವರಿಗೆ ಮನವಿ ಮಾಡ್ತೀನಿ. ನನ್ನ ಅವಧಿಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಅಭಿವೃದ್ಧಿ ನೋಡಿ. ಈ ಅಭಿವೃದ್ಧಿಯನ್ನ ಇಡೀ ಲೋಕಸಭಾ ಕ್ಷೇತ್ರಕ್ಕೆ ವಿಸ್ತರಣೆ ಮಾಡುವ ಪ್ರಯತ್ನ ಮಾಡುತ್ತೇನೆ. ಬಿಜೆಪಿ-ಜೆಡಿಎಸ್ ಸ್ವಾಭಾವಿಕ ಮೈತ್ರಿಯಾಗಿದ್ದು, ಎರಡೂ ಪಕ್ಷಗಳ ನಡುವೆ ಯಾವತ್ತೂ ವೈರತ್ವ ಇರುವ ಪಕ್ಷಗಳಲ್ಲ. ಸ್ಥಳೀಯ ಕಾರ್ಯಕರ್ತರು, ನಾಯಕರಿಗೆ ಒಟ್ಟಾಗಿ ಕೆಲಸ ಮಾಡ್ತಾರೆ. ಇದು ಸ್ವಾಭಾವಿಕ ಮೈತ್ರಿ. ಇಡೀ ರಾಜ್ಯದಲ್ಲಿ ಹಾಲು ಜೇನಿನಂತೆ ಬೆರತು ಬಿಜೆಪಿ-ಜೆಡಿಎಸ್ ನಾಯಕರು, ಕಾರ್ಯಕರ್ತರು ಕೆಲಸ ಮಾಡುತ್ತೇವೆ. ಒಳ್ಳೆಯ ಫಲಿತಾಂಶಕ್ಕಾಗಿ ರಾಜ್ಯದ ಜನ ತೀರ್ಮಾನ ಮಾಡಿದ್ದಾರೆ. ಮತ್ತೆ ಮೋದಿಯವರನ್ನು ಪ್ರಧಾನಿ ಮಾಡಲು ಜನ ಮತ ನೀಡಲಿದ್ದಾರೆ ಎಂದು ಹೇಳಿದ್ದಾರೆ.

    ವಿಶ್ವನಾಥ್ ಭದ್ರ ಕೋಟೆ ಕಟ್ಟಿದ್ದಾರೆ:
    ಶಾಸಕ ಎಸ್.ಆರ್ ವಿಶ್ವನಾಥ್ ಬಂಡಾಯ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಶಾಸಕ ವಿಶ್ವನಾಥ್ ಅವರ ಜೊತೆ ಮಾತನಾಡುತ್ತೇನೆ. ಅವರು ಹಿರಿಯರು, ಅವರ ಕ್ಷೇತ್ರದಲ್ಲಿ ಸಂಘಟನೆ ಮಾಡಿ ಭದ್ರಕೋಟೆ ಕಟ್ಟಿದ್ದಾರೆ. ನಾವಿಬ್ಬರು ಮೊದಲೇ ಮಾತಾಡಿಕೊಂಡಿದ್ದೇವೆ. ಯಾರಿಗೆ ಟಿಕೆಟ್ ಕೊಟ್ಟರೂ ಒಟ್ಟಾಗೆ ಕೆಲಸ ಮಾಡಬೇಕು. ಹೊರಗಡೆಯವರಿಗೆ ಟಿಕೆಟ್ ಕೊಡುವುದು ಬೇಡ ಎಂದು ಚರ್ಚಿಸಿದ್ದೆವು. ಅದಕ್ಕೆ ಹೈಕಮಾಂಡ್ ಮನ್ನಣೆ ಕೊಟ್ಟಿದೆ. ವಿಶ್ವನಾಥ್ ಪ್ರಬಲ ನಾಯಕರು. ಅವರ ಪಡೆ ಸಂಘಟನೆ ಉತ್ತಮವಾಗಿದೆ. ಪಕ್ಷಕ್ಕೆ ಪೂರಕವಾಗಿ ಅವರ ನಿರ್ಣಯ ಇರಲಿದೆ. ಅವರು ಪಕ್ಷದ ಪರ ಇದ್ದು, ನನಗೆ ಸಹಕಾರ ಕೊಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಶಾಸಕ ಜನಾರ್ದನ ರೆಡ್ಡಿ ಮತ್ತೆ ಬಿಜೆಪಿ ಸೇರ್ಪಡೆ

  • ಟೈಂ ಪಾಸ್ ಮಾಡಲು ಕಷ್ಟ, ಅದಕ್ಕೆ ಲೋಕಸಭೆಗೆ ಸ್ಪರ್ಧೆ – ಡಾ.ಕೆ.ಸುಧಾಕರ್ ಸ್ಪರ್ಧೆ ಬಗ್ಗೆ ಎಸ್‌.ಆರ್.ವಿಶ್ವನಾಥ್ ಹೇಳಿದ್ದೇನು?

    ಟೈಂ ಪಾಸ್ ಮಾಡಲು ಕಷ್ಟ, ಅದಕ್ಕೆ ಲೋಕಸಭೆಗೆ ಸ್ಪರ್ಧೆ – ಡಾ.ಕೆ.ಸುಧಾಕರ್ ಸ್ಪರ್ಧೆ ಬಗ್ಗೆ ಎಸ್‌.ಆರ್.ವಿಶ್ವನಾಥ್ ಹೇಳಿದ್ದೇನು?

    ನವದೆಹಲಿ: ವಿಧಾನಸಭೆಯಲ್ಲಿ ಸೋಲು‌ ಕಂಡಿರುವ ಮಾಜಿ ಸಚಿವ ಡಾ.ಕೆ.ಸುಧಾಕರ್ (K.Sudhakar) ನಾಲ್ಕು ವರ್ಷ ಸುಮ್ಮನೆ ಟೈಂ ಪಾಸ್ ಮಾಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಲೋಕಸಭೆಗೆ ಸ್ಪರ್ಧಿಸುತ್ತಿದ್ದೇನೆ ಎಂದು ನನ್ನ ಮುಂದೆ ಹೇಳಿದ್ದಾರೆ ಎಂದು ದೆಹಲಿಯಲ್ಲಿ ಶಾಸಕ ಎಸ್‌.ಆರ್.ವಿಶ್ವನಾಥ್ (S.R.Vishwanath) ತಿಳಿಸಿದ್ದಾರೆ. ದೆಹಲಿಯಲ್ಲಿ ಬಿ.ಎಸ್‌.ಯಡಿಯೂರಪ್ಪ (B.S.Yediyurappa) ಭೇಟಿ ಬಳಿಕ ಮಾತನಾಡಿದ ಅವರು ವಾಗ್ದಾಳಿ ನಡೆಸಿದರು.

    ಚಿಕ್ಕಬಳ್ಳಾಪುರದಲ್ಲಿ (Chikkaballapura) ಬಚ್ಚೇಗೌಡರು ರಾಜಕೀಯ ನಿವೃತ್ತಿ ಘೋಷಿಸಿದಾಗ ಯಾರು ಅಭ್ಯರ್ಥಿ ಇರಲಿಲ್ಲ. ಎಲ್ಲ ನಾಯಕರು ನನ್ನ ಪುತ್ರ ಅಲೋಕ್ ವಿಶ್ವಾನಾಥ್‌ನ ಕಣಕ್ಕಿಳಿಸಲು ಸೂಚಿಸಿದರು. ಈ ಹಿನ್ನೆಲೆ ನಾವು ಎಲ್ಲ ತಯಾರಿ ಮಾಡಿಕೊಂಡಿದ್ದೇವೆ. ಆದರೆ ಈ ನಡುವೆ ಬಂದ ಸುಧಾಕರ್ ನಾಲ್ಕು ವರ್ಷ ಇಲ್ಲಿ ಏನು ಮಾಡುವುದು? ಟೈಂ ಪಾಸ್ ಮಾಡಲು ಕಷ್ಟ. ಅದಕ್ಕೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಎಂದು ನನ್ನ ಮುಂದೆ ಹೇಳಿದ್ದಾರೆ. ಅದರೆ ಇದು ಟೈಂ ಪಾಸ್ ಮಾಡುವ ವಿಷಯವಲ್ಲ ಎಂದು ಹೇಳಿದರು. ಇದನ್ನೂ ಓದಿ: ಮಾ.22ರ ಬಳಿಕ ಬಿಜೆಪಿ ಅಂತಿಮ ಪಟ್ಟಿ; 5 ಕ್ಷೇತ್ರದಲ್ಲಿ ಎರಡು ಕಗ್ಗಂಟು – ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಡೌಟು

    ದೆಹಲಿಯಲ್ಲಿ ನಾನು ಯಾವ ನಾಯಕರನ್ನೂ ಭೇಟಿ ಮಾಡಿಲ್ಲ. ಬಿ.ಎಸ್.ಯಡಿಯೂರಪ್ಪ ಜೊತೆಗೆ ಬಂದಿದ್ದೇನೆ. ಅಲೋಕ್ ಮಗ ಎನ್ನುವುದಕ್ಕಿಂತ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾನೆ. ನ್ಯೂಯಾರ್ಕ್‌ನಿಂದ ಪದವಿ ಪಡೆದಿದ್ದಾನೆ. ಲಂಡನ್‌ನಲ್ಲಿ ಐವತ್ತು ದೇಶಗಳ ಆಡಳಿತ, ಪಾಲಿಸಿಗಳ ಅಧ್ಯಯನ ಮಾಡಿದ್ದಾನೆ. ಅವನು ರಾಜಕೀಯಕ್ಕೆ ಬಂದ್ರೆ ಪಕ್ಷಕ್ಕೆ, ಸಮಾಜಕ್ಕೆ ಅನುಕೂಲವಾಗಲಿದೆ ಎಂದರು.

    ಸರ್ವೆಯಲ್ಲೂ ಅಲೋಕ್ ಹೆಸರು ಇದೆ. ಸುಧಾಕರ್ ಅವರು ಈ‌ ಮೊದಲು ಲೋಕಸಭೆಗೆ ಕೇಳಿರಲಿಲ್ಲ. ಅವರು ನಿಲ್ಲಲ್ಲ ಅಂದಿದ್ದಕ್ಕೆ ನಾವು ಮಗನ ಸ್ಪರ್ಧೆಗೆ ಚಿಂತಿಸಿದ್ದೆವು. ಅಲೋಕ್‌ಗೆ ಟಿಕೆಟ್ ನೀಡಿದರೆ 25 ವರ್ಷ ಕ್ಷೇತ್ರ ಪಕ್ಷಕ್ಕೆ ಇರಲಿದೆ. ನಾವು ಈಗಾಗಲೇ ಪ್ರಚಾರ ಆರಂಭಿಸಿದ್ದೇವೆ. ಯಲಹಂಕ ಕ್ಷೇತ್ರ ದೊಡ್ಡ ಲೀಡ್ ಕೊಡಲಿದೆ. ಹೀಗಾಗಿ ಅಲೋಕ್ ಆದರೆ ಹೆಚ್ಚು ಲೀಡ್ ಸಿಗಲಿದೆ. ಮೋದಿ ಮುಖದ ಜೊತೆಗೆ ಜನ ಒಪ್ಪುವ ಅಭ್ಯರ್ಥಿ ಬೇಕು ಎಂದು ಮಾತನಾಡಿದರು. ಇದನ್ನೂ ಓದಿ: ಏ.19, 26ರ ಚುನಾವಣಾ ದಿನಾಂಕ ಬದಲಾಯಿಸುವಂತೆ ಆಯೋಗಕ್ಕೆ ಮುಸ್ಲಿಂ ಸಂಘಟನೆಗಳಿಂದ ಮನವಿ

  • ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ರೆ ತಿಂಗಳೊಳಗೆ ಸುಧಾಕರ್ ಜೈಲು ಸೇರ್ತಾರೆ: N.H ಶಿವಶಂಕರರೆಡ್ಡಿ

    ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ರೆ ತಿಂಗಳೊಳಗೆ ಸುಧಾಕರ್ ಜೈಲು ಸೇರ್ತಾರೆ: N.H ಶಿವಶಂಕರರೆಡ್ಡಿ

    ಚಿಕ್ಕಬಳ್ಳಾಪುರ: ಮಾಜಿ ಸಚಿವ ಡಾ.ಕೆ ಸುಧಾಕರ್ (Dr. K Sudhakar) ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ರೆ ಒಂದು ತಿಂಗಳೊಳಗೆ ಜೈಲು ಸೇರುತ್ತಾರೆ ಎಂದು ಮಾಜಿ ಸಚಿವ ಎನ್.ಎಚ್ ಶಿವಶಂಕರ ರೆಡ್ಡಿ ಹೇಳಿದ್ದಾರೆ.

    ಸುಧಾಕರ್ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುತ್ತಾರೆ ಅನ್ನೋ ವಿಚಾರ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಧಾಕರ್ ಮೇಷ್ಟ್ರು ಮಗ ಅಂತ ಹೇಳಿಕೊಂಡು ಭ್ರಷ್ಟಾಚಾರದ ಮೂಲಕ ಇಂದು ಸಾವಿರಾರು ಕೋಟಿಯ ಒಡೆಯನಾಗಿದ್ದಾನೆ. ಹಾಗಾಗಿ ಬಿಜೆಪಿಯವರೇ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ರೆ ಇಡಿ ಹಾಗೂ ಐಡಿ ರೇಡ್ ಮಾಡಿಸಿ ಜೈಲಿಗೆ ಹಾಕಿಸ್ತಾರೆ ಅಂತ ಟಾಂಗ್ ನೀಡಿದರು.

    ಸುಧಾಕರ್ ಅವಶ್ಯಕತೆ ಕಾಂಗ್ರೆಸ್ ಗೆ ಇಲ್ಲ. ಪಕ್ಷದ್ರೋಹ ಮೋಸ ಮಾಡಿರುವ ಸುಧಾಕರ್ ನ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಗೆ ಸೇರಿಸಿಕೊಳ್ಳೋದು ಬೇಡ. ಒಂದು ವೇಳೆ ಸೇರಿಸಿಕೊಂಡರೆ ತೀವ್ರ ವಿರೋಧ ಮಾಡುತ್ತೇವೆ ಅಂತ ಹೇಳಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇದ್ದಿದ್ರೆ ಬಾಂಬ್ ಸ್ಫೋಟ ಆಗ್ತಿರಲಿಲ್ಲ: ಗೋವಾ ಸಿಎಂ ಪ್ರಮೋದ್ ಸಾವಂತ್

    ನಾನು ಕಾಂಗ್ರೆಸ್ ಬಿಡೋದಿಲ್ಲ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಸಿಗದೆ ಹೋದರೆ ಪಕ್ಷ ಬಿಡುವ ಎಚ್ಚರಿಕೆ ನೀಡಿದ್ದ ಮಾಜಿ ಸಚಿವ ಎನ್ ಎಚ್ ಶಿವಶಂಕರರೆಡ್ಡಿ (N.H Shivashankar Reddy) ಯೂಟರ್ನ್ ಹೊಡೆದಿದ್ದಾರೆ. ಟಿಕೆಟ್ ವಿಚಾರವಾಗಿ ನನಗೆ ಮಣೆ ಹಾಕಲಿಲ್ಲ, ನಮ್ಮ ಹಿರಿಯ ನಾಯಕರು ಗಾಢ‌ನಿದ್ದೆಗೆ ಜಾರಿದ್ರು. ಹಾಗಾಗಿ ಕಾಲು ಚುಚ್ಚುವ ಶಾಕ್ ಟ್ರೀಟ್ ಮೆಂಟ್ ಕೊಟ್ಟೆ, ಆಗ ನನ್ನ ಕರೆಸಿ ಮಾತನಾಡಿದ್ರು. ಈಗ ನನ್ನ ಹೆಸರು ಸಹ ಎಐಸಿಸಿ ಗೆ ಕಳುಹಿಸಿದ್ದಾರೆ. ಟಿಕೆಟ್ ಸಿಗುವ ವಿಶ್ವಾಸವಿದೆ. ಸಿಗದಿದ್ರೂ ಪಕ್ಷದಲ್ಲಿ ಇರ್ತೇನೆ ಅಂತ ಹೇಳಿದರು.

  • ಮೆಡಿಕಲ್ ಕಾಲೇಜು ಆರಂಭ ಮಾಡದಿದ್ರೆ ಉಪವಾಸ ಸತ್ಯಾಗ್ರಹ ಮಾಡ್ತೇನೆ: ಸುಧಾಕರ್

    ಮೆಡಿಕಲ್ ಕಾಲೇಜು ಆರಂಭ ಮಾಡದಿದ್ರೆ ಉಪವಾಸ ಸತ್ಯಾಗ್ರಹ ಮಾಡ್ತೇನೆ: ಸುಧಾಕರ್

    ಚಿಕ್ಕಬಳ್ಳಾಪುರ: ಜಿಲ್ಲೆಯ ವೈದ್ಯಕೀಯ ಕಾಲೇಜು ನಿರ್ಮಾಣ ವಿಚಾರದಲ್ಲಿ ಯಾವ ತನಿಖೆ ಬೇಕಾದರೂ ಮಾಡಿ. ಆದರೆ ಆದಷ್ಟು ಬೇಗ ಕಾಲೇಜು ಕಟ್ಟಡ ಹ್ಯಾಂಡ್ ಓವರ್ ಮಾಡಿಕೊಳ್ಳಿ. ಇಲ್ಲವಾದರೆ ನಾನು ಮೆಡಿಕಲ್ ಕಾಲೇಜು (Medical College) ಮುಂದೆಯೇ ಉಪವಾಸ ಸತ್ಯಾಗ್ರಹ ಮಾಡುತ್ತೇನೆ ಎಂದು ಮಾಜಿ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ (Dr. K Sudhakar) ಹೇಳಿದ್ದಾರೆ.

    ಚಿಕ್ಕಬಳ್ಳಾಪುರ (Chikkaballapur) ನಗರದ ಗೃಹಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದರು. ಮಂತ್ರಿಗಳಾಗಿ ಎರಡು ತಿಂಗಳಾಗಿದೆ. ಜಿಲ್ಲಾಸ್ಪತ್ರೆಗೆ ಎಷ್ಟು ಬಾರಿ ಭೇಟಿ ಕೊಟ್ಟಿದ್ದೀರಿ. ಜಿಲ್ಲಾಸ್ಪತ್ರೆಯಲ್ಲಿ ಎಷ್ಟು ಐಸಿಯುಗಳಿವೆ ನಿಮಗೆ ಗೊತ್ತಾ. ನೀವು ಸಹ ವೈದ್ಯರಾಗಿದ್ದೀರಿ, ನಿಮಗೆ ಜವಾಬ್ದಾರಿ ಇಲ್ಲವಾ ಅಂತ ವಾಗ್ದಾಳಿ ನಡೆಸಿದರು.

    ನಾನು ಬಹಳ ಗಲಾಟೆ ಮಾಡಿ ಮೆಡಿಕಲ್ ಕಾಲೇಜು ತಂದಿದ್ದೇನೆ. ಶೀಘ್ರದಲ್ಲೇ ಕಾಲೇಜು ಆರಂಭ ಮಾಡಿ. ನಮ್ಮ ಜಿಲ್ಲೆಯಲ್ಲಿ ಆದ ಕಟ್ಟೆ ರಾಜ್ಯದಲ್ಲಿ ಎಲ್ಲೂ ಆಗಿಲ್ಲ. ಹೀಗಾಗಿ ನಿಮಗೆ ಹೊಟ್ಟೆ ಉರಿನಾ..? ನಾವ್ ಮಾಡೋಕೆ ಅಗಿಲ್ಲ ಅಂತ ಹೊಟ್ಟೆ ಉರಿನಾ..? ಒಳ್ಳೆಯ ಕೆಲಸ ಮಾಡಿದ್ರೂ ಸಹಿಸಲ್ಲ. ಕಾಲೇಜು ಪ್ರಾರಂಭ ಮಾಡದಿದ್ದರೆ ನಾನು ಮೆಡಿಕಲ್ ಕಾಲೇಜು ಮುಂದೆಯೇ ಉಪವಾಸ ಸತ್ಯಾಗ್ರಹ ಮಾಡುತ್ತೇನೆ ಎಂದರು. ಇದನ್ನೂ ಓದಿ: ಪ್ರದೀಪ್ ಈಶ್ವರ್ ಕನಸಲ್ಲೂ ನಾನು ಬರ್ತೀನಿ: ಸುಧಾಕರ್

    ಇದೇನು ಸಾಮ್ರಾಜ್ಯನಾ..? ರಾಜರ ಕಾಲ ಅಲ್ಲ. ಟಾರ್ಗೆಟ್ ಮಾಡಿದ್ದರಲ್ಲ ದ್ವೇಷದ ರಾಜಕಾರಣ ಮಾಡ್ತಿದ್ದರಲ್ಲ. ವೈಯಕ್ತಿಕವಾಗಿ ದ್ವೇಷ ಸಾಧಿಸೋದಾದರೆ ಮಾಡಿ. ಅದೇನು ಮಾಡಬೇಕೋ ಮಾಡಿ. ಕಾನೂನು ವ್ಯವಸ್ಥೆ ಇದೆ. ನಾನು ಹೆದರಿಕೊಳ್ಳೋದು ಇಲ್ಲ. ನನ್ನ ಜಿಲ್ಲೆಗೆ ಆದ ಅನ್ಯಾಯ ಸರಿಪಡಿಸಿ ಅಂತ ಆಗ್ರಹಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸ್ವಗ್ರಾಮ ಪೆರೇಸಂದ್ರದಲ್ಲಿ ಮಾಜಿ ಸಚಿವ ಡಾ.ಕೆ.ಸುಧಾಕರ್‌ಗೆ ಮುಖಭಂಗ?

    ಸ್ವಗ್ರಾಮ ಪೆರೇಸಂದ್ರದಲ್ಲಿ ಮಾಜಿ ಸಚಿವ ಡಾ.ಕೆ.ಸುಧಾಕರ್‌ಗೆ ಮುಖಭಂಗ?

    ಚಿಕ್ಕಬಳ್ಳಾಪುರ: ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಡಾ. ಕೆ.ಸುಧಾಕರ್‌ (Dr. K. Sudhakar) ಅವರಿಗೆ ಭಾರೀ ಮುಖಭಂಗವಾಗಿದೆ ಎಂದು ಹೇಳಲಾಗುತ್ತಿದೆ.

    ಚಿಕ್ಕಬಳ್ಳಾಪುರ (Chikkaballapura) ವಿಧಾನಸಭಾ ಕ್ಷೇತ್ರದ 29 ಗ್ರಾಮ ಪಂಚಾಯಿತಿಗಳಲ್ಲಿ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಡೆಯುತ್ತಿದೆ. ಮಾಜಿ ಸಚಿವ ಡಾ. ಕೆ.ಸುಧಾಕರ್ ಸ್ವಗ್ರಾಮ ಪೆರೇಸಂದ್ರ ಗ್ರಾಮ ಪಂಚಾಯಿತಿಯಲ್ಲಿ ಸುಧಾಕರ್ ಚಿಕ್ಕಪ್ಪ ರವೀಂದ್ರ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರು ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಸುಧಾಕರ್ ಅವರಿಗೆ ಮುಖಭಂಗ ಆಗಿದೆ ಅಂತ ವ್ಯಾಖ್ಯಾನ ಮಾಡಲಾಗುತ್ತಿದೆ. ಇದನ್ನೂ ಓದಿ: ಸುಧಾಕರ್ ನಮ್ಮೂರ ಹುಡ್ಗ, ಬೇರೆ ಕ್ಷೇತ್ರ ನೋಡಿಕೊಂಡ್ರೆ ಮುಂದಿನ ಸಲ ವಿಧಾನಸೌಧಕ್ಕೆ ಬರ್ತಾರೆ: ಪ್ರದೀಪ್ ಈಶ್ವರ್ ಟಾಂಗ್

    ಅಂದಹಾಗೆ ಬುಧವಾರ ನಡೆದ ಚುನಾವಣೆಯಲ್ಲಿ ಪೆರೇಸಂದ್ರ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷೆಯಾಗಿ ಕೆ.ಗಂಗರತ್ನಮ್ಮ ಹಾಗೂ ಉಪಾಧ್ಯಕ್ಷರಾಗಿ ಭೋಯಿನಹಳ್ಳಿ ಗ್ರಾಮದ ಸದಸ್ಯೆ ವೆಂಕಟಪತಿ ಆಯ್ಕೆಯಾಗಿದ್ದಾರೆ. ಇನ್ನೂ ಸುಧಾಕರ್ ಬೆಂಬಲಿತ ಸದಸ್ಯರಾದ ವಿ. ಗಂಗರತ್ನಮ್ಮ ಹಾಗೂ ಪಿ.ಎಲ್ ಅನಂದ್ ಸೋಲನುಭವಿಸಿದ್ದಾರೆ.

    ನೂತನ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷೆ ಕಾಂಗ್ರೆಸ್ ಬೆಂಬಲಿತರು ಅಂತಲೇ ಹೇಳಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಆಧಿಕಾರದ ಚುಕ್ಕಾಣಿ ಹಿಡಿದಿದ್ದು, ಇದು ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಅವರ ಗೆಲುವು ಅಂತ ಚರ್ಚೆ ಮಾಡಲಾಗುತ್ತಿದೆ. ಆದರೆ ಇದನ್ನ ಮಾಜಿ ಸಚಿವ ಸುಧಾಕರ್ ತಳ್ಳಿಹಾಕಿದ್ದಾರೆ. ಪೆರೇಸಂದ್ರ ಗ್ರಾಮ ಪಂಚಾಯಿತಿಯಲ್ಲಿ ಎಲ್ಲಾ ಸದಸ್ಯರು ನಮ್ಮವರೇ. ಎರಡು ಬಣಗಳಿವೆ. ಎರಡು ಬಣದವರೂ ನಮ್ಮವರೇ. ಕಾಂಗ್ರೆಸ್ ಆಧಿಕಾರ ಹಿಡಿದಿದೆ ಅನ್ನೋದು ಸುಳ್ಳು ಅಂತ ಹೇಳಿದ್ದಾರೆ. ಇದನ್ನೂ ಓದಿ: ಇಬ್ಬರೂ ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸೋಣ.. ಯಾರಿಗೆ ಎಷ್ಟು ವೋಟು ಬರುತ್ತೆ ನೋಡೋಣ – ಪ್ರದೀಪ್ ಈಶ್ವರ್‌ಗೆ ಸುಧಾಕರ್ ಸವಾಲು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಮ್ಮಿಶ್ರ ಸರ್ಕಾರದ ಪತನದಲ್ಲಿ ಸಿದ್ದರಾಮಯ್ಯ ಪಾತ್ರ ನಿರಾಕರಿಸಲು ಸಾಧ್ಯವೇ: ಸುಧಾಕರ್ ಬಾಂಬ್

    ಸಮ್ಮಿಶ್ರ ಸರ್ಕಾರದ ಪತನದಲ್ಲಿ ಸಿದ್ದರಾಮಯ್ಯ ಪಾತ್ರ ನಿರಾಕರಿಸಲು ಸಾಧ್ಯವೇ: ಸುಧಾಕರ್ ಬಾಂಬ್

    ಬೆಂಗಳೂರು: ಸಮ್ಮಿಶ್ರ ಸರ್ಕಾರದ (Coalition Government) ಪತನದಲ್ಲಿ ಸಿದ್ದರಾಮಯ್ಯ ಪಾತ್ರ ಕುರಿತು ಮಾಜಿ ಸಚಿವ ಡಾ.ಕೆ.ಸುಧಾಕರ್ (Dr.K.Sudhakar) ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.

    ಸಮ್ಮಿಶ್ರ ಸರ್ಕಾರದ ಪತನದಲ್ಲಿ ಸಿದ್ದರಾಮಯ್ಯ (Siddaramaiah) ಪಾತ್ರ ನಿರಾಕರಿಸಲು ಸಾಧ್ಯವೇ ಎಂದು ಪ್ರಶ್ನಿಸಿ ಟ್ವೀಟ್ (Tweet) ಮಾಡಿದ್ದಾರೆ. ಇದನ್ನೂ ಓದಿ: ಸಿಎಂ ರೇಸ್‌ ಫೈಟ್‌ – ಹೈಕಮಾಂಡ್‌ ನಾಯಕರಲ್ಲಿ ಯಾರು ಯಾರ ಪರ?

    ಟ್ವೀಟ್‌ನಲ್ಲಿ ಏನಿದೆ?
    2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು.

    2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಮಾನ್ಯ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು.

    ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು.

    ನಮ್ಮ ನಡೆಯಲ್ಲಿ ಮಾನ್ಯ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ? ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಅಮೆರಿಕಕ್ಕೆ ಹಾರಲಿದ್ದಾರೆ ರಾಹುಲ್ – 10 ದಿನ ಪ್ರವಾಸ