ರಾಮನಗರ: ಧರ್ಮಸ್ಥಳ (Dharmasthala) ಸಂಸ್ಥೆಯ ಸಮಾಜಸೇವೆ ಜನರಿಗೆ ಗೊತ್ತಿದೆ. ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಮಾಡಬಾರದು. ಈ ಪ್ರಕರಣದ ಪಾತ್ರದಾರಿಗಳು ಹಾಗೂ ಸೂತ್ರದಾರಿಗಳನ್ನ ಕಂಡುಹಿಡಿದು ಸೂಕ್ತ ಶಿಕ್ಷೆ ಕೊಡಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ.ಮಂಜುನಾಥ್ (Dr Manjunath) ಹೇಳಿದ್ದಾರೆ.
ಧರ್ಮಸ್ಥದಲ್ಲಿ ಬಿಜೆಪಿ-ಜೆಡಿಎಸ್ ಪ್ರತ್ಯೇಕ ಸಮಾವೇಶ ನಡೆಸಿದ ವಿಚಾರ ಕುರಿತು ರಾಮನಗರದಲ್ಲಿ (Ramanagara) ಮಾತನಾಡಿದ ಅವರು, ಎರಡೂ ಪಕ್ಷ ಒಂದೇ ದಿನ ಸಮಾವೇಶ ಮಾಡಿದ್ರೆ ತುಂಬಾ ಓವರ್ ಕ್ರೌಡ್ ಆಗುತ್ತೆ. ಸೋಮವಾರ ಕೂಡ 40 ಸಾವಿರ ಜನ ಬಂದಿದ್ದರು. ಆದರೆ ಇಬ್ಬರ ಉದ್ದೇಶ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ತಡೆಯಬೇಕು. ಧರ್ಮಸ್ಥಳದಲ್ಲಿ ಸರ್ವ ಧರ್ಮ ಸಮ್ಮೇಳನ ಕೂಡಾ ನಡೆಯುತ್ತೆ. ಈ ಅಪಪ್ರಚಾರವನ್ನ ಸರ್ವ ಧರ್ಮಗಳೂ ಖಂಡನೆ ಮಾಡಬೇಕು ಎಂದರು. ಇದನ್ನೂ ಓದಿ: ಪವನ್ ಖೇರಾ ಬಳಿ 2 ವೋಟರ್ ಐಡಿ – ಬಿಜೆಪಿ ಬಾಂಬ್, EC ನೋಟಿಸ್ ಜಾರಿ
ಷಡ್ಯಂತ್ರ ಮಾಡಿರುವವರು ತಮಿಳುನಾಡು, ಕೇರಳದವರಿದ್ದಾರೆ. ಹೊರಗಿನವರ ಪಾತ್ರ ಇರುವ ಸಾಧ್ಯತೆ ಕೂಡ ಇದೆ. ಹಾಗಾಗಿ ಇದನ್ನ ಕೇಂದ್ರದ ಒಂದು ಏಜೆನ್ಸಿ ತನಿಖೆ ಮಾಡಬೇಕಿದೆ. ಆ ಭಾಗದ ಸಂಸದರು ಈಗಾಗಲೇ ಕೇಂದ್ರ ಗೃಹ ಸಚಿವರ ಜೊತೆ ಚರ್ಚೆ ಮಾಡಿದ್ದಾರೆ. ಎಸ್‌ಐಟಿ ತನಿಖೆಯ ವರದಿಯೂ ಬರಲಿ, ಕೇಂದ್ರದ ತನಿಖೆಯೂ ಆಗಲಿ ಎಂದು ತಿಳಿಸಿದರು. ಇದನ್ನೂ ಓದಿ: ಅಕ್ರಮ ಗಣಿಗಾರಿಕೆಯಲ್ಲಿ ಶಾಮೀಲು ಆರೋಪ – ಕಂದಾಯ ನಿರೀಕ್ಷಕ, ಗ್ರಾಮಾಡಳಿತ ಅಧಿಕಾರಿ ಸಸ್ಪೆಂಡ್
ರಾಮನಗರ: ಬಿಡದಿಯ (Bidadi) ಭದ್ರಾಪುರ (Bhadrapura) ಗ್ರಾಮದ ಅಪ್ರಾಪ್ತ ಬಾಲಕಿ ಹತ್ಯೆ ಪ್ರಕರಣ ಹಿನ್ನೆಲೆ ಇಂದು ಭದ್ರಾಪುರ ಗ್ರಾಮಕ್ಕೆ ಸಂಸದ ಡಾ.ಮಂಜುನಾಥ್ ಭೇಟಿ ನೀಡಿ ಮೃತ ಬಾಲಕಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಮೃತ ಬಾಲಕಿ ತಾಯಿಗೆ ಧೈರ್ಯ ತುಂಬಿದ ಸಂಸದರು, ಘಟನೆ ಕುರಿತು ಪೊಲೀಸರಿಂದಲೂ ಮಾಹಿತಿ ಸಂಗ್ರಹಿಸಿದ್ದಾರೆ. ವಿಕಲಚೇತನ ಬಾಲಕಿ ಹತ್ಯೆಗೆ ವಿಷಾದ ವ್ಯಕ್ತಪಡಿಸಿದ ಸಂಸದರು, ಈ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದರು. ಇದನ್ನೂ ಓದಿ: 13 ಎಟಿಎಂ ದೋಚಿದ್ದ ಖದೀಮನಿಗೆ ಪೊಲೀಸರಿಂದ ಗುಂಡೇಟು
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 14 ವರ್ಷದ ಬಾಲಕಿಯನ್ನ ಹತ್ಯೆ ಮಾಡಿರೋದು ವಿಕೃತಿ. ಯಾವ ಕಾರಣಕ್ಕೆ ಹತ್ಯೆಯಾಗಿದೆ ಎಂಬುದು ಮರಣೋತ್ತರ ವರದಿ ಹಾಗೂ ಎಫ್‌ಎಸ್‌ಎಲ್ ವರದಿಯಲ್ಲಿ ಬಹಿರಂಗವಾಗಬೇಕಿದೆ. ಈಗಾಗಲೇ ಎರಡು-ಮೂರು ತಂಡಗಳ ರಚನೆ ಮಾಡಿಕೊಂಡು ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಬಾಲಕಿ ಸಾವಿಗೆ ನ್ಯಾಯ ಒದಗಿಸುವ ಕೆಲಸ ಆಗಬೇಕು. ಗ್ರಾಮಕ್ಕೆ ಕೆಲ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಅದನ್ನೂ ಸರಿಪಡಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ತಿಳಿಸಿದರು. ಇದನ್ನೂ ಓದಿ: ಆಂಧ್ರ ಪ್ರದೇಶ ಬಹುಕೋಟಿ ಅಬಕಾರಿ ಹಗರಣ – ಪ್ರಮುಖ ಆರೋಪಿ ಬಾಲಾಜಿ ಗೋವಿಂದಪ್ಪ ಎಸ್‌ಐಟಿ ವಶಕ್ಕೆ
ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಗೆ (Bengaluru-Mysuru Expressway) ಹೊಸ ಎಂಟ್ರಿ-ಎಕ್ಸಿಟ್ (Entry-Exit) ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ರಾಮನಗರ-ಚನ್ನಪಟ್ಟಣ ನಡುವಿನ ಕಣ್ವ ಡ್ಯಾಂ ಜಂಕ್ಷನ್‌ನಲ್ಲಿ (Kanva Dam Junction) ಎಂಟ್ರಿ-ಎಕ್ಸಿಟ್ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಲಾಗಿದೆ. ಈ ಹಿನ್ನೆಲೆ ಇಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ.ಮಂಜುನಾಥ್ ಹಾಗೂ ಶಾಸಕ ಸಿ.ಪಿ.ಯೋಗೇಶ್ವರ್ ಸ್ಥಳ ಪರಿಶೀಲನೆ ನಡೆಸಿದರು.
ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆ ಸ್ಥಳ ವೀಕ್ಷಣೆ ಮಾಡಿ ಹೊಸ ಎಂಟ್ರಿ-ಎಕ್ಸಿಟ್‌ನಿಂದಾಗುವ ಅನುಕೂಲಗಳ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಡಾ.ಮಂಜುನಾಥ್ (Dr Manjunath), ಪ್ರವಾಸಿಗರು ಹಾಗೂ ವಾಹನ ಸವಾರರ ಅನುಕೂಲಕ್ಕಾಗಿ ಹೊಸ ಎಂಟ್ರಿ ಹಾಗೂ ಎಕ್ಸಿಟ್‌ಗೆ ಹೆದ್ದಾರಿ ಪ್ರಾಧಿಕಾರ ಅನುಮತಿ ನೀಡಿದೆ. ಚನ್ನಪಟ್ಟಣದ ರಾಂಪುರದ ಬಳಿ ಇದಕ್ಕೆ ಜಾಗ ಗುರುತಿಸಲಾಗಿತ್ತು. ಆದರೆ ಅಲ್ಲಿ ಸೂಕ್ತ ಜಾಗ ಇಲ್ಲದ್ದಕ್ಕೆ ಕಣ್ವ ಜಂಕ್ಷನ್ ಬಳಿ ಜಾಗ ಗುರುತು ಮಾಡಲಾಗಿದೆ. ಹಾಗಾಗಿ ಸ್ಥಳೀಯ ಶಾಸಕರು ಹಾಗೂ ಎನ್‌ಹೆಚ್‌ಎಐ (NHAI) ಅಧಿಕಾರಿಗಳ ಜೊತೆ ಸ್ಥಳ ಪರಿಶೀಲನೆ ಮಾಡಲಾಗಿದೆ. ಕಣ್ವ ಜಂಕ್ಷನ್‌ನಲ್ಲಿ ಎಕ್ಸಿಟ್-ಎಂಟ್ರಿ ನಿರ್ಮಾಣ ಆದರೆ ಪ್ರವಾಸೋದ್ಯಮಕ್ಕೂ ಅನುಕೂಲ. ಕಣ್ವ ಡ್ಯಾಂ, ಕೆಂಗಲ್ ಆಂಜನೇಯನ ದೇವಾಲಯ ಹಾಗೂ ಬೆಂ-ಮೈ ಹಳೇ ಹೆದ್ದಾರಿಗೆ ನೇರ ಸಂಪರ್ಕ ಕಲ್ಪಿಸುತ್ತದೆ. ಶೀಘ್ರದಲ್ಲೇ ಮೂರು ಕಡೆಗಳಲ್ಲಿ ಸ್ಕೈವಾಕ್ ಕಾಮಗಾರಿ ಸಂಪೂರ್ಣ ಆಗಲಿದೆ. ಚನ್ನಪಟ್ಟಣದ ಬಳಿ ಟಾಯ್ಸ್ ಪಾರ್ಕ್ ಕೂಡಾ ಬರಲಿದೆ. ಅದಕ್ಕೂ ಈಗಾಗಲೇ ಜಾಗ ಗುರುತು ಮಾಡಲಾಗಿದೆ. ಎಕ್ಸ್‌ಪ್ರೆಸ್ ಹೈವೇಯ ಎಲ್ಲಾ ಸಮಸ್ಯೆಗಳನ್ನ ಹಂತಹಂತವಾಗಿ ಬಗೆಹರಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಚೀನಾದ ಹೋಟೆಲ್‌ನಲ್ಲಿ ಭಾರೀ ಬೆಂಕಿ – 22 ಮಂದಿ ಸಾವು, ಮೂವರಿಗೆ ಗಾಯ
ಇನ್ನೂ ಇದೇವೇಳೆ ಪಹಲ್ಗಾಮ್ ದಾಳಿಗೆ ಕೇಂದ್ರದ ಭದ್ರತಾ ವೈಫಲ್ಯ ಕಾರಣ ಎಂಬ ವಿಪಕ್ಷಗಳ ಆರೋಪ ವಿಚಾರ ಕುರಿತು ಮಾತನಾಡಿ, ಈ ಸಂದರ್ಭದಲ್ಲಿ ಘಟನೆಗೆ ಯಾವ ರೀತಿ ಪ್ರತಿಕ್ರಿಯೆ ನೀಡಬೇಕು ಎಂಬುದು ಮುಖ್ಯ. ಈ ಕ್ಷಣಕ್ಕೆ ಭಯೋತ್ಪಾದನೆ ಹಾಗೂ ಭಯೋತ್ಪಾದಕರಿಗೆ ತಕ್ಕಪಾಠ ಕಲಿಸುವ ಬಗ್ಗೆ ಯೋಚನೆ ಮಾಡಬೇಕು. ಮಿಕ್ಕಿದ್ದೆಲ್ಲ ಆಮೇಲೆ ಮಾತನಾಡಬಹುದು. ಯುದ್ಧ ಎಂಬುದು ಸೂಕ್ಷ್ಮವಾದ ವಿಚಾರ. ಅದರ ಬಗ್ಗೆ ಎಲ್ಲೆಂದರಲ್ಲಿ ಚರ್ಚೆ ಮಾಡೋದು ಸೂಕ್ತ ಅಲ್ಲ ಎಂದರು. ಇದನ್ನೂ ಓದಿ: ಗಡಿಜಿಲ್ಲೆ ಬೀದರ್‌ನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ – ನೆಲಕ್ಕುರುಳಿದ ಬೃಹತ್ ಮರ
ರಾಮನಗರ: ಇದು ಜಾತ್ಯಾತೀತ ರಾಷ್ಟ್ರ, ಹಾಗಾಗಿ ಜಾತಿಗಣತಿಗೆ (Caste Census) ಯಾವುದೇ ಮಹತ್ವ ಇಲ್ಲ ಎಂದು ಸಂಸದ ಡಾ.ಮಂಜುನಾಥ್ (Dr Manjunath) ಹೇಳಿದ್ದಾರೆ.
ಸರ್ಕಾರ ಜಾತಿಗಣತಿ ವರದಿ ಸ್ವೀಕಾರಕ್ಕೆ ಮುಂದಾಗಿರುವ ವಿಚಾರದ ಕುರಿತು ರಾಮನಗರದಲ್ಲಿ (Ramanagara) ಮಾತನಾಡಿದ ಅವರು, ಇಂದು ಅಂಬೇಡ್ಕರ್ ಜಯಂತಿ ಆಚರಣೆ ಮಾಡಲಾಗುತ್ತಿದೆ. ನಮ್ಮ ಸಂವಿಧಾನವೇ ಜಾತಿ ವ್ಯವಸ್ಥೆ ಬೇಡ ಎಂದು ಹೇಳುತ್ತದೆ. ಇಂತಹ ಸಂದರ್ಭದಲ್ಲಿ ಜಾತಿಗಣತಿ ಯಾಕೆ ಬೇಕು ಎಂದು ಗೊತ್ತಾಗುತ್ತಿಲ್ಲ ಎಂದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಈ ವರ್ಷ 4,930 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹ
ಸಾಮಾಜಿಕ ಹಾಗೂ ಶೈಕ್ಷಣಿಕ ಮಟ್ಟದ ಬಗ್ಗೆ ಸಮೀಕ್ಷೆ ಮಾಡಿ. ಆದರೆ ಜಾತಿ ಜಾತಿಗಳ ನಡುವೆ ಕಂದಕ ಸೃಷ್ಟಿಸುವ ಕೆಲಸ ಮಾಡಬೇಡಿ. ಎಲ್ಲಾ ಜಾತಿಯಲ್ಲೂ ಬಡವರಿದ್ದಾರೆ. ಎಲ್ಲರನ್ನೂ ಮೇಲೆತ್ತುವ ಕೆಲಸ ಆಗಬೇಕು. ಏಕಾಏಕಿ ಜಾತಿಗಣತಿ ಸ್ವೀಕಾರ ಮಾಡುವುದಕ್ಕಿಂತ ಮೊದಲು ಚರ್ಚೆ ಆಗಬೇಕು. ವಿಧಾನಸಭೆ, ವಿಧಾನ ಪರಿಷತ್ ನಲ್ಲಿ ಚರ್ಚೆ ಮಾಡಬೇಕು. ತಜ್ಞರು, ಚಿಂತಕರು ಹಾಗೂ ಸಾರ್ವಜನಿಕರ ಅಭಿಪ್ರಾಯ ಪಡೆಯಬೇಕು. ಶಾಸಕಾಂಗ ಸಮಿತಿ ರಚನೆ ಮಾಡಿ ಈ ಬಗ್ಗೆ ಪರಿಶೀಲನೆ ಮಾಡಬೇಕು. ಸರ್ಕಾರದ ಆತುರದ ನಿರ್ಧಾರ ಸರಿಯಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ನಮ್ಮ ಮೆಟ್ರೋ ಎಡವಟ್ಟು – ಮೆಟ್ರೋ ಸ್ಟೇಷನ್ ಫುಲ್ ರಷ್
ರಾಮನಗರ: ಇಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಮಂಜುನಾಥ್ (Dr Manjunath) ನೇತೃತ್ವದಲ್ಲಿ ದಿಶಾ ಕಮಿಟಿ ಸಭೆ (Disha Committee Meeting) ನಡೆಸಲಾಯಿತು.
ರಾಮನಗರದ (Ramanagara) ಜಿ.ಪಂ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಜಿಲ್ಲಾಮಟ್ಟದ ಅಧಿಕಾರಿಗಳಿಂದ ಅಭಿವೃದ್ಧಿ ಕುರಿತು ಡಾ.ಮಂಜುನಾಥ್ ಮಾಹಿತಿ ಸಂಗ್ರಹ ಮಾಡಿದರು. ಆಸ್ಪತ್ರೆಗಳಲ್ಲಿ ವೈದ್ಯರ ಸಮಸ್ಯೆ, ನಗರ ವ್ಯಾಪ್ತಿಯ ಕಸದ ಸಮಸ್ಯೆ, ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಸುರಕ್ಷತಾ ಅಭಿಯಾನ, ಸ್ಮಶಾನ ಅಭಿವೃದ್ಧಿ, ತೋಟಗಾರಿಕೆ ಬೆಳೆಗಳಿಗೆ ಉತ್ತೇಜನ ನೀಡುವ ಬಗ್ಗೆ ಚರ್ಚೆ ನಡೆಸಿದರು. ಇದನ್ನೂ ಓದಿ: 2027ರ ವೇಳೆಗೆ ಮೈಸೂರು-ಕುಶಾಲನಗರ 4 ಪಥದ ರಸ್ತೆ ಕಾಮಗಾರಿ ಪೂರ್ಣ – ಯದುವೀರ್
ಇನ್ನೂ ಸಭೆ ಆರಂಭಕ್ಕೂ ಮುನ್ನ ಅಧಿಕಾರಿಗಳಿಗೆ ಸಂಸದ ಡಾ.ಮಂಜುನಾಥ್ ಶಿಸ್ತಿನ ಪಾಠ ಮಾಡಿದರು. ಸಭೆ ನಡುವೆ ಯಾರೂ ಮೊಬೈಲ್ ಬಳಕೆ ಮಾಡಬೇಡಿ. ಏನಾದರೂ ತುರ್ತು ಕರೆಗಳಿದ್ದರೆ ಮಾತ್ರ ಬಳಕೆ ಮಾಡಿ. ಅದರ ಹೊರತಾಗಿ ಸಾಮಾಜಿಕ ಜಾಲತಾಣ ನೋಡುತ್ತಾ ಕೂರಬೇಡಿ. ಇದರಿಂದ ಸಭೆಗೆ ಅಗೌರವ ಹಾಗೂ ಸಭೆ ಉದ್ದೇಶಕ್ಕೆ ಧಕ್ಕೆ ಆಗುತ್ತೆ. ಅಲ್ಲದೇ ನಿಮ್ಮ ಕೆಲಸಗಳು ಜನರ ಬಳಿ ತಲುಪಿದಾಗ ಮಾತ್ರ ಜನ ನಿಮ್ಮನ್ನ ನೆನಪಿಸಿಕೊಳ್ಳುತ್ತಾರೆ. ಇಲ್ಲವಾದರೆ ನೀವು ಬೇಗ ಇಲ್ಲಿಂದ ಹೋಗಿ ಎಂದು ಶಾಪ ಹಾಕುತ್ತಾರೆ. ಅಧಿಕಾರಿಗಳು ಮಾನವೀಯತೆ ಇಟ್ಟುಕೊಂಡು ಕೆಲಸ ಮಾಡಿ ಎಂದು ಸಲಹೆ ನೀಡಿದರು. ಇದನ್ನೂ ಓದಿ: ಬಾಣಂತಿಯರಿಗೆ ಕೊಡಗು ಸೇಫ್
ರಾಮನಗರ: ರಾಮನಗರ (Ramanagara) ಜಿಲ್ಲೆಗೆ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇವೆ. ಕನಕಪುರ ಕ್ಷೇತ್ರದಲ್ಲಿ ಸೋಲಾರ್ ಪ್ಲಾಂಟ್ ತಂದಿದ್ದೇನೆ. ಅದರ ಪಕ್ಕದಲ್ಲಿ ವಿದ್ಯಾರ್ಥಿ ವಸತಿ ನಿಲಯಕ್ಕೆ ಜಮೀನು ನೀಡಿದ್ದೇನೆ. ನಮ್ಮ ಅಜ್ಜಿ ಹೆಸರಿನಲ್ಲಿ ಖರೀದಿ ಮಾಡಿದ್ದ ಜಮೀನನ್ನು ಶಾಲೆಗೆ ಬರೆದುಕೊಟ್ಟಿದ್ದೇನೆ. ಕುಮಾರಸ್ವಾಮಿ (HD Kumaraswamy) ಅಥವಾ ಸಂಸದ ಮಂಜುನಾಥ್ (Dr Manjunath) ಅವರು ರಾಜ್ಯದಲ್ಲಿ ಯಾರಿಗಾದರೂ ಒಂದು ಎಕರೆ ದಾನ ಮಾಡಿದ್ದಾರಾ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಪ್ರಶ್ನಿಸಿದರು.
ಕನಕಪುರ ತಾಲೂಕಿನ ದೊಡ್ಡಾಲಹಳ್ಳಿ ಗ್ರಾಮದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಸಿ ಮಾತನಾಡಿದ ಅವರು, ನೀವು ನನ್ನನ್ನು ಬೆಳೆಸಿದ್ದೀರಿ. ಜಿಲ್ಲಾ ಪಂಚಾಯಿತಿ ಸದಸ್ಯ, ಶಾಸಕ, ಮಂತ್ರಿ ಹಾಗೂ ಉಪಮುಖ್ಯಮಂತ್ರಿ ಮಾಡಿದ್ದೀರಿ. ಸುರೇಶ್ ಅವರನ್ನು ಸಂಸದರನ್ನಾಗಿ ಮಾಡಿದ್ದೀರಿ ಎಂಬ ಕಾರಣಕ್ಕೆ ನಿಮ್ಮ ಋಣ ತೀರಿಸಲು ನಾನು ಈ ಕೆಲಸ ಮಾಡಿದ್ದೇನೆ. ನಮ್ಮ ಜೊತೆಯಲ್ಲಿದ್ದುಕೊಂಡು ತಟ್ಟೆಮರೆ ಏಟು ಕೊಟ್ಟವರಿಗೆ ನೀವು ಈ ವಿಚಾರ ತಿಳಿಸಿ. ಮುಂದೆ ನೀವು ಆತ್ಮಸಾಕ್ಷಿಗೆ ಮತ ಹಾಕುವಂತೆ ಹೇಳಬೇಕು ಎಂದರು. ಇದನ್ನೂ ಓದಿ: ಹಸುಗಳ ಮೇಲೆ ಪೈಶಾಚಿಕ ಕೃತ್ಯ ನಡೆಸಿದವರನ್ನು ಎನ್‍ಕೌಂಟರ್ ಮಾಡಿ ಬಿಸಾಕಿ: ರೇಣುಕಾಚಾರ್ಯ
ಸುರೇಶ್ ಅವರು ಸಂಸದರಾಗಿದ್ದಾಗ ಅವರ ಕ್ಷೇತ್ರದಲ್ಲಿ ಹೆಚ್ಚು ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ. ನಮ್ಮ ತಾಲೂಕಿನಲ್ಲಿ 120ಕ್ಕೂ ಹೆಚ್ಚು ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ. ಈ ಭಾಗದ ಜನರಲ್ಲಿ ಹೆಚ್ಚು ಕ್ಯಾನ್ಸರ್ ರೋಗ ಪತ್ತೆಯಾಗುತ್ತಿದೆ ಎಂದು ವೈದ್ಯರು ಹೇಳಿದಾಗ ಇದನ್ನು ತಪ್ಪಿಸಲು ಈ ಕುಡಿಯುವ ನೀರಿನ ಘಟಕ ಸ್ಥಾಪಿಸಿದೆವು. ನಾನು ಇಂಧನ ಸಚಿವನಾಗಿದ್ದಾಗ, ಸುರೇಶ್ ಸಂಸದರಾಗಿದ್ದಾಗ ಈ ಭಾಗದ ಪ್ರತಿ ಇಬ್ಬರು ರೈತರಿಗೆ ಪ್ರತ್ಯೇಕವಾಗಿ ಟ್ರಾನ್ಸ್ಫಾರ್ಮ್ ಅಳವಡಿಸಿದ್ದೆವು. ಈ ಲೋಕಸಭಾ ಕ್ಷೇತ್ರದಲ್ಲಿ ಮಾತ್ರ ಇಂತಹ ಯೋಜನೆ ಮಾಡಲಾಗಿದ್ದು, ರಾಜ್ಯದ ಬೇರೆ ಯಾವುದೇ ಜಿಲ್ಲೆಯಲ್ಲಿ ಹಾಗೂ ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ದೇಶದಲ್ಲಿ ಎಲ್ಲಿಯೂ ಇಂತಹ ಯೋಜನೆ ಮಾಡಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: IPL 2025: ಮಾರ್ಚ್ 23 ರಿಂದ ಐಪಿಎಲ್ ಆರಂಭ: ಬಿಸಿಸಿಐ ಉಪಾಧ್ಯಕ್ಷ ಘೋಷಣೆ
15-20 ವರ್ಷಗಳ ಹಿಂದೆ ಈ ಭಾಗದಲ್ಲಿ ಜಮೀನಿನ ಬೆಲೆ ಎಷ್ಟಿತ್ತು? ಈಗ ಎಷ್ಟು ಆಗಿದೆ? ನಿಮಗೆ ನೇರವಾಗಿ ಹಣ ನೀಡಲಾಗದಿದ್ದರೂ ನಿಮ್ಮ ಆಸ್ತಿ ಮೌಲ್ಯವನ್ನು ಹೆಚ್ಚಿಸಿ ನಿಮಗೆ ನೆರವಾಗಿದ್ದೇನೆ. ಆ ಮೂಲಕ ನಿಮ್ಮ ಬದುಕಿನಲ್ಲಿ ಬದಲಾವಣೆ ತಂದಿದ್ದೇನೆ. ಇನ್ನು ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ದೆಹಲಿಗೆ ಕಳುಹಿಸಲಾಗಿದೆ. ಕೇಂದ್ರ ಗೃಹ ಸಚಿವಾಲಯದಿಂದ ಇಂಟೆಲಿಜೆನ್ಸ್ನವರು ವರದಿ ಕಳುಹಿಸುವುದು ಬಾಕಿ ಇದೆ. ಈ ವಿಚಾರವಾಗಿ ಕೇಂದ್ರ ಸಚಿವರು ಹಾಗೂ ಪ್ರಧಾನಮಂತ್ರಿಗಳಿಗೆ ಒಂದೆರಡು ದಿನಗಳಲ್ಲಿ ಪತ್ರ ಬರೆಯಲಿದ್ದೇನೆ. ನಂತರ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಅಧಿಕೃತವಾಗಿ ಘೋಷಣೆಯಾಗಲಿದೆ ಎಂದು ಹೇಳಿದರು. ಇದನ್ನೂ ಓದಿ: ಮೂರು ಹೊಸ ಹಸುಗಳನ್ನು ನಾನೇ ಕೊಡಿಸುತ್ತೇನೆ: ಜಮೀರ್
ರಾಮನಗರವನ್ನು ಜಿಲ್ಲಾ ಕೇಂದ್ರವಾಗಿಯೇ ಉಳಿಯಲಿದೆ. ಹೀಗಾಗಿ ನೀವು ನಿಮ್ಮ ಆಸ್ತಿ ಮಾರಿಕೊಳ್ಳಬೇಡಿ. ನಾವು ಬೆಂಗಳೂರಿನವರು, ನಮ್ಮ ಈ ಗುರುತನ್ನು ನಾವು ಯಾಕೆ ಬಿಟ್ಟುಕೊಡಬೇಕು? ಭವಿಷ್ಯದಲ್ಲಿ ನಿಮ್ಮ ಜಮೀನಿನ ಬೆಲೆ ಏನಾಗುತ್ತದೆ ಎಂದು ನೀವು ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಈ ವಿಚಾರವಾಗಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಬಹಳ ಟೀಕೆ ಟಿಪ್ಪಣಿ ಮಾಡುತ್ತಿದ್ದಾರೆ. ಹಾಗಿದ್ದರೆ ಇವರುಗಳು ತಮ್ಮ ಊರು ಬಿಟ್ಟು ಇಲ್ಲಿಗೆ ಬಂದು ಯಾಕೆ ನೂರಾರು ಎಕರೆ ಜಮೀನು ಖರೀದಿ ಮಾಡಿದ್ದಾರೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಕನ್ನಡತಿ, ಮದ್ದೂರಿನ ಸೊಸೆಗೆ ಮಿಸೆಸ್ ಇಂಡಿಯಾ ಕಿರೀಟ
ರಾಮನಗರ: ಟಿಕೆಟ್ ಹಂಚಿಕೆ ವಿಚಾರದಲ್ಲಿ ಸಂಸದ ಡಾ.ಸಿ.ಎನ್.ಮಂಜುನಾಥ್ (CN Manjunath) ನನ್ನ ಪರವಾಗಿದ್ದಾರೆ. ದಂಪತಿ ಸಮೇತ ನನಗೆ ಬೆಂಬಲ ನೀಡುತ್ತಿದ್ದಾರೆ. ಅವರ ಆಶೀರ್ವಾದ ಯಾವಾಗಲೂ ನನ್ನ ಜೊತೆ ಇರುತ್ತದೆ. ಹಾಗಾಗಿ ಅವರ ಮೇಲೆ ನನಗೆ ಸದಾ ಗೌರವ ಇದೆ ಎಂದು ಮಾಜಿ ಸಚಿವ ಸಿಪಿ ಯೋಗೇಶ್ವರ್ (CP Yogeshwar) ಹೇಳಿದ್ದಾರೆ.
ಚನ್ನಪಟ್ಟಣ ಉಪಚುನಾವಣೆ (Channapatna Byelection) ಟಿಕೆಟ್ ಹಂಚಿಕೆ ಗೊಂದಲ ಮುಂದುವರಿದಿದ್ದು, ಮಾಜಿ ಸಚಿವ ಸಿಪಿವೈಗೆ ಟಿಕೆಟ್ ನೀಡುವ ಕುರಿತು ಸಂಸದ ಡಾ.ಮಂಜುನಾಥ್ ಬೆಂಬಲ ಇದ್ಯಾ ಎಂಬ ಪ್ರಶ್ನೆಗೆ ಸಿ.ಪಿ.ಯೋಗೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈಗಾಗಲೇ ಚನ್ನಪಟ್ಟಣ ಕ್ಷೇತ್ರದ ಐದು ಪಂಚಾಯ್ತಿ ವ್ಯಾಪ್ತಿಯ ಪ್ರಮುಖರ ಸಭೆ ಮಾಡಿದ್ದೇನೆ. ಬೆಳಗ್ಗೆ ಟೌನ್ ವ್ಯಾಪ್ತಿಯ ಸಭೆ ಮಾಡಿ ಅಭಿಪ್ರಾಯ ಸಂಗ್ರಹ ಮಾಡಿದ್ದೇನೆ. ಬುಧವಾರದಿಂದ ಹಳ್ಳಿಗಳಿಗೆ ಹೋಗಿ ಜನರನ್ನು ಭೇಟಿ ಆಗುತ್ತೇನೆ. ಜನ ನನಗೆ ಸೂಕ್ತ ಸ್ಪಂದನೆ ನೀಡುತ್ತಿದ್ದಾರೆ. ಎನ್‌ಡಿಎ (NDA) ಅಭ್ಯರ್ಥಿ ಆಗಿ ನಾನು ಬರುತ್ತೇನೆ. ಆಶೀರ್ವಾದ ಮಾಡಿ ಎಂದು ಕೇಳುತ್ತಿದ್ದೇನೆ. ಇದಕ್ಕೆ ಜನರ ಪ್ರತಿಕ್ರಿಯೆ ಚೆನ್ನಾಗಿ ಸಿಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಅಗತ್ಯ ಸಿದ್ಧತೆಗೆ ಬೋಸರಾಜು ಸೂಚನೆ
ಇನ್ನೂ ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಆಪರೇಷನ್ ಹಸ್ತ ಮಾಡುತ್ತಿರುವ ವಿಚಾರದ ಕುರಿತು ಮಾತನಾಡಿ, ಆಪರೇಷನ್ ಹಸ್ತದ ಪರಿಣಾಮ ಚುನಾವಣೆ ಮೇಲೆ ಬೀರಲ್ಲ. ದುಡ್ಡು ಕೊಟ್ಟು ಮುಖಂಡರನ್ನು ಸೆಳೆಯುವಂತಹ ಕೆಲಸ ನಡೆಯುತ್ತಿದೆ. ಪಾರ್ಲಿಮೆಂಟ್ ಚುನಾವಣೆಯಲ್ಲಿ ನಗರಸಭೆ ಸದಸ್ಯರನ್ನ ಕಾಂಗ್ರೆಸ್‌ನವರು ಸೆಳೆದಿದ್ದರು. ಆದರೆ ಅವರು ಕೂಡ ಈಗ ಮಾನಸಿಕವಾಗಿ ನಮಗೆ ಬೆಂಬಲ ನೀಡುತ್ತಿದ್ದಾರೆ. ಕ್ಷೇತ್ರದಲ್ಲಿ ನಿಖಿಲ್ ಕೂಡಾ ಸಭೆ ಮಾಡುತ್ತಿದ್ದಾರೆ. ನಾನೂ ಸಭೆ ಮಾಡುತ್ತಿದ್ದೇನೆ. ಎರಡೂ ಪಕ್ಷದ ಕಾರ್ಯಕರ್ತರನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದೇವೆ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಒಟ್ಟಾಗಿ ಚುನಾವಣೆ ಮಾಡುತ್ತೇವೆ. ಚುನಾವಣೆ ಘೋಷಣೆ ಆದಮೇಲೆ ಇದಕ್ಕೆಲ್ಲ ಉತ್ತರ ಸಿಗುತ್ತೆ. ನೂರಕ್ಕೆ ನೂರುಭಾಗ ಟಿಕೆಟ್ ಸಿಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಸೋಮವಾರ ನಾಗಮಂಗಲಕ್ಕೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ: ಅಶ್ವಥ್ ನಾರಾಯಣ್
ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಡಾ.ಮಂಜುನಾಥ್ (Dr Manjunath) ಗೆಲುವು ಸಾಧಿಸಿದ ಹಿನ್ನೆಲೆ ಪತ್ನಿ ಅನುಸೂಯ ಮಂಜುನಾಥ್ (Anusuya Manjunath) ಗ್ರಾಮಸ್ಥರ ಹರಕೆ ತೀರಿಸಿದ್ದಾರೆ. ಕನಕಪುರ (Kanakapura) ತಾಲೂಕಿನ ಚೀರಣಕುಪ್ಪೆ ಗ್ರಾಮದ ಬಸವೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಅನುಸೂಯ, ಗ್ರಾಮಸ್ಥರ ಜೊತೆ ಸೇರಿ ಹರಕೆ ತೀರಿಸಿದರು.
ಬೆಂಗಳೂರು (Bengaluru) ಗ್ರಾಮಾಂತರ ಕ್ಷೇತ್ರದಲ್ಲಿ ಡಾ.ಮಂಜುನಾಥ್ ಗೆಲುವು ಸಾಧಿಸಿದರೆ ಗ್ರಾಮದ ದೇವಾಲಯಕ್ಕೆ ಬಸವ ದಾನ ನೀಡುವುದಾಗಿ ಗ್ರಾಮಸ್ಥರು ಹರಕೆ ಕಟ್ಟಿಕೊಂಡಿದ್ದರು. ಬಳಿಕ ಚುನಾವಣೆಯಲ್ಲಿ ಮಂಜುನಾಥ್ ಭರ್ಜರಿ ಗೆಲುವು ಸಾಧಿಸಿದ್ದ ಹಿನ್ನೆಲೆ ಇಂದು ಗ್ರಾಮಕ್ಕೆ ಆಗಮಿಸಿದ ಅನಸೂಯಾ ಮಂಜುನಾಥ್, ದೇವಾಲಯಕ್ಕೆ ಬಸವನ ದಾನ ಮಾಡಿದ್ದಾರೆ. ಇದನ್ನೂ ಓದಿ: ಚುನಾವಣೆಗೂ ಮುನ್ನ ಮಹಾ ವಿಕಾಸ್ ಅಘಾಡಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವ ಅಗತ್ಯವಿಲ್ಲ: ಶರದ್ ಪವಾರ್
ಬೆಂಗಳೂರು: ರಾಜಕೀಯ ಪ್ರವೇಶದ ಬಳಿಕವೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ. ಮಂಜುನಾಥ್ (Dr C N Manjunath) ಅವರು ವೈದ್ಯಕೀಯ ವೃತ್ತಿ ಮುಂದುವರೆಸಿದ್ದಾರೆ.
ಮೂತ್ರಪಿಂಡ ವೈಫಲ್ಯ ಜೊತೆಗೆ ಹೃದಯ ಸಮಸ್ಯೆ ಹೊಂದಿದ್ದ 54 ವರ್ಷದ ರೋಗಿಗೆ ಹೃದಯದ ರಕ್ತನಾಳಗಳಲ್ಲಿ ಶೇ.90ರಷ್ಟು ರಕ್ತ ಪರಿಚಲನೆ ಸ್ಥಗಿತವಾಗಿತ್ತು. ಪರೀಕ್ಷೆ ನಡೆಸಿ ಹೊಸ ಆರ್ಬಿಟಲ್ ಅಥೆರೆಕ್ಟಮಿ ಸಾಧನ ಬಳಸಿ ಸಂಸದರು ಮತ್ತು ಹಿರಿಯ ವೈದ್ಯರಾದ ಡಾ.ಮಂಜುನಾಥ್ ನೇತೃತ್ವದಲ್ಲಿ ಶಸ್ತ್ರ ಚಿಕಿತ್ಸೆ ಯಶಸ್ವಿ ಮಾಡಲಾಯಿತು. ಇದನ್ನೂ ಓದಿ: ಪಿತ್ರಾರ್ಜಿತ ಆಸ್ತಿ ವಿವಾದ: ತಮ್ಮಂದಿರಿಂದಲೇ ಅಣ್ಣನ ಕೊಲೆ
Successfully performed a complex angioplasty and stent procedure on a 54-year-old patient with kidney failure, addressing a heavily calcified 90% blockage.
The procedure utilised the relatively new Orbital Atherectomy device, ensuring the patient received the best possible care… pic.twitter.com/So9HRnz8Lr
– ಕೋಲಾರವನ್ನು ಬೆಂಗಳೂರು ಪೂರ್ವ ಮಾಡ್ತೀರಾ? – ಚಿಕ್ಕಬಳ್ಳಾಪುರವನ್ನು ಬೆಂಗಳೂರು ಉತ್ತರ ಜಿಲ್ಲೆ ಮಾಡ್ತೀರಾ?
ರಾಮನಗರ: ಬೆಂಗಳೂರು ದಕ್ಷಿಣ (Bengaluru South) ಅಂತ ಹೆಸರು ಬದಲಾವಣೆಗೆ ಖಂಡತುಂಡವಾಗಿ ವಿರೋಧ ಮಾಡುತ್ತೇವೆ. ಯಾವುದೇ ಡಿಕ್ಷನರಿ ನೋಡಿದರೂ ರಾಮನಗರಕ್ಕಿಂತ (Ramanagara) ಒಳ್ಳೆಯ ಪದ ಬೇರೊಂದು ಸಿಗುವುದಿಲ್ಲ ಎಂದು ಬೆಂಗಳೂರು ಗ್ರಾಮಾಂತರದ ಬಿಜೆಪಿ ಸಂಸದ ಡಾ ಮಂಜುನಾಥ್ (Dr. CN Manjunath) ಹೇಳಿದ್ದಾರೆ.
ಬೆಂಗಳೂರು ನಗರದ ಒಳಗೆ ಬೆಂಗಳೂರು ದಕ್ಷಿಣ ತಾಲೂಕು ಇದೆ. ಇನ್ನೊಂದು ಬೆಂಗಳೂರು ದಕ್ಷಿಣ ಜಿಲ್ಲೆ ಅಂದರೆ ಜನರಿಗೆ ಗೊಂದಲ ಆಗುತ್ತದೆ. ಈ ರೀತಿ ಮಾಡುವುದಾದರೆ ʼಬ್ರಾಂಡ್ ರಾಮನಗರʼ ಎಂದು ಅಭಿವೃದ್ಧಿ ಮಾಡಿ. ಮುಂದೆ ಕೋಲಾರವನ್ನು ಬೆಂಗಳೂರು ಪೂರ್ವ ಜಿಲ್ಲೆ ಮಾಡ್ತೀರಾ? ಚಿಕ್ಕಬಳ್ಳಾಪುರವನ್ನು ಬೆಂಗಳೂರು ಉತ್ತರ ಜಿಲ್ಲೆ ಅಂತ ಮಾಡ್ತೀರಾ ಎಂದು ಪ್ರಶ್ನೆ ಕೇಳಿದರು. ಇದನ್ನೂ ಓದಿ: ಹಿಮಾಚಲದಲ್ಲಿ ಆರ್ಥಿಕ ಸಂಕಷ್ಟ – ತೆರಿಗೆ ಪಾವತಿಸೋ ಮಂದಿಗೆ ಉಚಿತ ವಿದ್ಯುತ್ ಕಟ್
ಬೆಂಗಳೂರು ಬೃಹತ್ ಆಗಿ ಬೆಳೆದಿದ್ದು ಅಲ್ಲೇ ಸಾಕಷ್ಟು ಮೂಲಭೂತ ಸಮಸ್ಯೆಗಳಿದೆ. ಭೂಮಿಗೆ ಬೆಲೆ ಜಾಸ್ತಿ ಆದರೆ ಪ್ರಯೋಜನ ಇಲ್ಲ. ಭೂಮಿಯಲ್ಲಿ ಬೆಳೆಯುವ ಬೆಳೆಗೆ ಬೆಲೆ ಜಾಸ್ತಿ ಆಗಬೇಕು. ಯಾವ ಉದ್ದೇಶಕ್ಕೆ ಈ ರೀತಿ ಮಾಡಲು ಹೊರಟಿದ್ದಾರೋ ಗೊತ್ತಿಲ್ಲ ಎಂದರು.
ರಾಮನಗರ ಹೆಸರನ್ನು ಬದಲಾವಣೆ ಮಾಡಬಾರದು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ. ಇದು ರೇಷ್ಮೆನಾಡಾಗಿಯೇ ಉಳಿಯಬೇಕು. ರೈತರ ಜಿಲ್ಲೆಯಾಗಿಯೇ ಉಳಿಯಬೇಕು. ಇದು ವೈಜ್ಞಾನಿಕವಾಗಿಯೂ ಸಮಂಜಸ ಅಲ್ಲ ಎಂದು ಎಂದು ಹೇಳಿದರು.