Tag: Dr Sharan Praksh Patil

  • ಒಳಮೀಸಲಾತಿ ನಿರ್ಧಾರವಾಗುವವರೆಗೂ ಹುದ್ದೆ ಭರ್ತಿ ಇಲ್ಲ: ಡಾ. ಶರಣಪ್ರಕಾಶ್ ಪಾಟೀಲ್

    ಒಳಮೀಸಲಾತಿ ನಿರ್ಧಾರವಾಗುವವರೆಗೂ ಹುದ್ದೆ ಭರ್ತಿ ಇಲ್ಲ: ಡಾ. ಶರಣಪ್ರಕಾಶ್ ಪಾಟೀಲ್

    – ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಸಿಬ್ಬಂದಿ ಕೊರತೆ ಇಲ್ಲ
    – ಅಗತ್ಯವಿರುವ ಕಡೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ
    – ಮೀಸಲಾತಿ ವಿವಾದ ಮುಗಿದ ತಕ್ಷಣವೇ ಹುದ್ದೆಗಳ ಭರ್ತಿ

    ಬೆಂಗಳೂರು: ಒಳಮೀಸಲಾತಿ (Internal Reservation) ಸಂಬಂಧ ರಾಜ್ಯಸರ್ಕಾರ ಸ್ಪಷ್ಟವಾದ ತೀರ್ಮಾನ ತೆಗೆದುಕೊಂಡ ಮೇಲೆ ವೈದ್ಯಕೀಯ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ (Sharan Prakash Patil) ವಿಧಾನ ಪರಿಷತ್‌ನಲ್ಲಿ ಆಶ್ವಾಸನೆ ನೀಡಿದರು.

    ಸೋಮವಾರ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯ ಮಂಜೇಗೌಡ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನದಾಸ್ ಅವರು ಒಳಮೀಸಲಾತಿ ಕಲ್ಪಿಸುವ ಸಂಬಂಧ ಸರ್ಕಾರಕ್ಕೆ ವರದಿಯನ್ನು ನೀಡಿದ್ದಾರೆ. ಈ ವರದಿಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಮುಂದಿನ ವಿಶೇಷ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದರು. ಇದನ್ನೂ ಓದಿ: ರಾಯರ ಮಧ್ಯಾರಾಧನೆಯಲ್ಲಿ ನಟ ಜಗ್ಗೇಶ್ ಭಾಗಿ

    ಒಳಮೀಸಲಾತಿ ಕುರಿತು ಸರ್ಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳುವವರೆಗೂ ಯಾವುದೇ ಇಲಾಖೆಯಲ್ಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳದಂತೆ ಮುಖ್ಯಮಂತ್ರಿಯವರು ಸೂಚನೆ ಕೊಟ್ಟಿದ್ದಾರೆ. ಅಲ್ಲಿಯವರೆಗೂ ನಾವು ಏನು ಮಾಡಲೂ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಧರ್ಮಸ್ಥಳ ಕೇಸ್‌ ಬಗ್ಗೆ ಎಸ್‌ಐಟಿ ತನಿಖೆ ಮುಗಿಯೋವರೆಗೂ ನಾನು ಮಾತನಾಡಲ್ಲ: ಜಿ.ಪರಮೇಶ್ವರ್‌

    ವೈದ್ಯಕೀಯ ಕಾಲೇಜುಗಳಲ್ಲಿ (Medical College) ಒಟ್ಟು 21,860 ಹುದ್ದೆಗಳಿವೆ. ಇದರಲ್ಲಿ 9,413 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗಿದೆ. 12,447 ಹುದ್ದೆಗಳು ಖಾಲಿ ಇವೆ ಎಂದು ಅಂಕಿ ಅಂಶಗಳ ವಿವರ ನೀಡಿದರು. ಹುದ್ದೆಗಳು ಖಾಲಿ ಇದ್ದರೂ ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಬೋಧನೆ ಇಲ್ಲವೇ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲು ಯಾವುದೇ ರೀತಿಯ ಸಮಸ್ಯೆಯಾಗಿಲ್ಲ. ಸರ್ಕಾರ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಹೇಳಿದರು. ಇದನ್ನೂ ಓದಿ: ಕೆಎನ್‌ ರಾಜಣ್ಣ ಏನು ತಪ್ಪು ಹೇಳಿದ್ದಾರೆ – ಪುತ್ರ ರಾಜೇಂದ್ರ ಪಶ್ನೆ

    ಅಗತ್ಯವಿರುವ ಕಡೆ ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ವೈದ್ಯಕೀಯ ಕಾಲೇಜುಗಳ ನಿರ್ದೇಶಕರಿಗೆ ಮತ್ತು ಸಂಬಂಧಪಟ್ಟ ಆಸ್ಪತ್ರೆಯ ಮುಖ್ಯಸ್ಥರಿಗೂ ನಿರ್ದೇಶನ ನೀಡಲಾಗಿದೆ. ಯಾದಗಿರಿ, ರಾಯಚೂರು, ಕಲಬುರಗಿ ಸೇರಿದಂತೆ ಮತ್ತಿತರ ಕೆಲವು ವೈದ್ಯಕೀಯ ಕಾಲೇಜುಗಳಲ್ಲಿ ಸಿಬ್ಬಂದಿಗಳ ಕೊರತೆ ಇತ್ತು. ಈಗಾಗಲೇ ಅದನ್ನು ಭರ್ತಿ ಮಾಡಿದ್ದೇವೆ. ಯಾವುದೇ ಕಾಲೇಜು ಇಲ್ಲವೇ ಆಸ್ಪತ್ರೆಗಳಲ್ಲಿ ಸಮಸ್ಯೆ ಎದುರಾಗಿಲ್ಲ. ಹಾಗೊಂದು ವೇಳೆ ಸಮಸ್ಯೆ ಇರುವುದನ್ನು ನಮ್ಮ ಗಮನಕ್ಕೆ ತಂದರೆ ತಕ್ಷಣವೇ ಪರಿಹರಿಸುವುದಾಗಿ ಆಶ್ವಾಸನೆ ನೀಡಿದರು. ಇದನ್ನೂ ಓದಿ: ಕಾಶ್ಮೀರದಲ್ಲಿ 11ನೇ ದಿನಕ್ಕೆ ಕಾಲಿಟ್ಟ ಸೇನಾ ಕಾರ್ಯಾಚರಣೆ – ಉಗ್ರರ ಗುಹೆಗಳು ಉಡೀಸ್‌

  • ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಅಂಕಪಟ್ಟಿ ಗೋಲ್‌ಮಾಲ್: ಛಲವಾದಿ ನಾರಾಯಣಸ್ವಾಮಿ ಆರೋಪ

    ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಅಂಕಪಟ್ಟಿ ಗೋಲ್‌ಮಾಲ್: ಛಲವಾದಿ ನಾರಾಯಣಸ್ವಾಮಿ ಆರೋಪ

    – ಮುದ್ರಣದ ಕೆಲಸವನ್ನೇ ಮಾಡದ ಬ್ಲ್ಯಾಕ್‌ಲಿಸ್ಟೆಡ್ ಕಂಪನಿಗೆ ಟೆಂಡರ್

    ಬೆಂಗಳೂರು: ರಾಜ್ಯ ಸರ್ಕಾರ ಲೂಟಿಯಲ್ಲಿ ತೊಡಗಿದೆ. ಕಾನೂನುಬಾಹಿರವಾಗಿ ಟೆಂಡರ್‌ಗಳನ್ನು ಮಾಡುತ್ತಿದೆ. ತನಗೆ ಬೇಕಾದವರಿಗೇ ಅವಕಾಶ ನೀಡುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ(Chalavadi Narayanaswamy) ಆರೋಪಿಸಿದ್ದಾರೆ.

    ವಿಧಾನಸೌಧದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಪಬ್ಲಿಕ್ ಪ್ರೊಕ್ಯರ‍್ಮೆಂಟ್ ಪೋರ್ಟಲ್‌ನಲ್ಲಿ ಟೆಂಡರ್‌ಗಳನ್ನು ಹಾಕುತ್ತಾರೆ. ಮಾರ್ಕ್ಸ್ ಕಾರ್ಡ್ ಪ್ರಿಂಟ್ ಮಾಡುವ ಕಾರ್ಯದಲ್ಲಿ ನಮ್ಮ ಸರ್ಕಾರ ಇರುವಾಗಲೂ ಟೆಂಡರ್ ನೀಡಿದ್ದು, ಒಂದು ಮಾರ್ಕ್ ಕಾರ್ಡ್ ಮುದ್ರಿಸಲು 9.45 ರೂ.ಗೆ ಟೆಂಡರ್ ಕೊಡಲಾಗಿತ್ತು. ಈ ಸರ್ಕಾರ ಬಂದ ಬಳಿಕ ಪ್ಯಾರಾ ಮೆಡಿಕಲ್ ಬೋರ್ಡ್ನ (Para Medical Board) ಟೆಂಡರ್ ಕರೆದಿದ್ದು, ಒಂದು ಮಾರ್ಕ್ ಕಾರ್ಡ್ ಮುದ್ರಿಸಲು 100 ರೂ. ಕೋರಲಾಗಿತ್ತು. ಮಾತುಕತೆ ಬಳಿಕ 91 ರೂ.ಗೆ ಇಳಿಸಲಾಗಿದೆ ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ಜಡ್ಜ್‌ ನಿವಾಸದಲ್ಲಿ ಕಂತೆ ಕಂತೆ ನಗದು ಪತ್ತೆ ಕೇಸ್ – ಸಿಜೆಐ ಕೈ ಸೇರಿದ ತನಿಖಾ ವರದಿ

    ಕೆಲವೆಡೆ ವಿಷಯ ಹೊರಬಂದುದರಿಂದ ಮತ್ತೆ ಮಾತುಕತೆ ಮಾಡಿ, ಒಂದು ಮಾರ್ಕ್ ಕಾರ್ಡ್ ಮುದ್ರಿಸಲು 44 ರೂ., ಡಿಪ್ಲೊಮಾ ಸರ್ಟಿಫಿಕೇಟ್‌ಗೆ 47 ರೂ. ಎಂದು ಬದಲಿಸಿದ್ದರು. ಇಂಟರ್ನ್ಶಿಪ್ ಸರ್ಟಿಫಿಕೇಟ್‌ಗೆ 44 ರೂ. ನಿಗದಿ ಮಾಡಿ ವರ್ಕ್ ಆರ್ಡರ್ ಕೊಟ್ಟಿದ್ದಾರೆ. ಕಳೆದ ನವೆಂಬರ್ 29ರಂದು ಈ ವರ್ಕ್ ಆರ್ಡರ್ ಕೊಡಲಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ವಿಕ್ಟೋರಿಯಾ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದ ವಿಚಾರಣಾಧೀನ ಕೈದಿ ಪೊಲೀಸ್ ವಶಕ್ಕೆ

    ನಗರದ ಸಂಜಯನಗರದ ಊರ್ದವ್ ಮ್ಯಾನೇಜ್‌ಮೆಂಟ್ ಪ್ರೈವೇಟ್ ಲಿಮಿಟೆಡ್‌ಗೆ ಈ ವರ್ಕ್ ಆರ್ಡರ್ ಕೊಡಲಾಗಿದೆ. ಇದು ಗೊತ್ತಾಗಿ ಜನವರಿ 8ರಂದು ನಾನು ಸರ್ಕಾರದ ಕಾರ್ಯದರ್ಶಿಗೆ ಪತ್ರ ಬರೆದಿದ್ದೆ. ಕೆಟಿಪಿಪಿ ಕಾಯ್ದೆ ಉಲ್ಲಂಘನೆ ಆಗಿದೆ ಎಂದು ಅವರ ಗಮನ ಸೆಳೆದಿದ್ದೆ. ಇದುವರೆಗೂ ಉತ್ತರ ಕೊಟ್ಟಿಲ್ಲ. ಇದರ ಹಣಕಾಸಿನ ಬಿಡ್ 2024ರ ಏಪ್ರಿಲ್ 12ರಂದು ಅನುಮೋದನೆ ಪಡೆದಿದೆ. ಮೊದಲೇ ವರ್ಕ್ ಆರ್ಡರ್ ಕೊಡಲಾಗಿದೆ ಎಂದು ಆಕ್ಷೇಪಿಸಿ ಪತ್ರಗಳು ಹಾಗೂ ದಾಖಲೆಗಳನ್ನು ಪ್ರದರ್ಶಿಸಿದರು. ಇದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್‌ರ ಖಾತೆಗೆ ಸೇರಿದ್ದು ಎಂದರು. ಇದನ್ನೂ ಓದಿ: ನಟ ಉಪೇಂದ್ರ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು

    ಈ ಊರ್ದವ್ ಮ್ಯಾನೇಜ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಎಂಬುದು ಈವೆಂಟ್ ಮ್ಯಾನೇಜ್‌ಮೆಂಟ್ ಕಂಪನಿ. ಟೆಂಡರ್ ಅನ್ನು ಊರ್ದವ್ ಮ್ಯಾನೇಜ್‌ಮೆಂಟ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕ ವೆಂಕಟರೆಡ್ಡಿ ಡಿ. ಪಾಟೀಲ್‌ರಿಗೆ ಕೊಟ್ಟಿದ್ದು, ಅವರು ಸಚಿವ ಡಾ.ಶರಣಪ್ರಕಾಶ್ ಪಾಟೀಲ್‌ರ (Dr. ShrarnPraksh Patil) ಹತ್ತಿರದ ಸಂಬಂಧಿ ಎಂದು ಆರೋಪಿಸಿದರು.

    ಇದಕ್ಕೂ ಪ್ರಿಂಟಿಂಗ್‌ಗೂ ಏನೂ ಸಂಬಂಧ ಇಲ್ಲ. ಅವರು ಯಾವತ್ತೂ ಮುದ್ರಣದ ಕೆಲಸ ಮಾಡಿಲ್ಲ. ಸಚಿವರಿಗೆ ಬೇಕಾದವರಿಗೆ ಕೊಡಲು ಕ್ರಮ ಕೈಗೊಂಡಿದ್ದಾರೆ. ಇದು ಬ್ಲ್ಯಾಕ್ ಲಿಸ್ಟೆಡ್ ಕಂಪನಿ. ಇದರ ಮೇಲೆ ಸುಮಾರು 20ರಿಂದ 25 ಕೇಸ್‌ಗಳಿವೆ. ಇಂಥಾ ಕಂಪೆನಿಗೆ ಟೆಂಡರ್ ಕೊಡಲಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಯುದ್ಧ ಕಾರ್ಮೋಡ; ಭಾರತ ಸಮರಭ್ಯಾಸ – ಪಾಕ್‌ನಿಂದ ಫತಾಹ್ ಕ್ಷಿಪಣಿ ಪರೀಕ್ಷೆ

    ಬ್ಲ್ಯಾಕ್ ಲಿಸ್ಟೆಡ್ ಕಂಪೆನಿಗೆ ಟೆಂಡರ್ ಕೊಟ್ಟಿದ್ದಾರೆ. ಹಣಕಾಸಿನ ಬಿಡ್ ಇಲ್ಲದೆ ಟೆಂಡರ್ ನೀಡಿದ್ದಾರೆ. ಈ ಸಂಬಂಧ ನಾನು ಎರಡು-ಮೂರು ಪತ್ರ ಬರೆದರೂ ಮುಖ್ಯ ಕಾರ್ಯದರ್ಶಿ, ಇಲಾಖೆಯಿಂದ ಒಂದೇ ಒಂದು ಉತ್ತರ ಬಂದಿಲ್ಲ. ನಾವು 9 ರೂ. 45 ಪೈಸೆಗೆ ಕೊಟ್ಟಾಗ 2.45 ಲಕ್ಷ ರೂ. ಎಂದು ತಿಳಿಸಿದ್ದೆವು. ಈ ಬಿಡ್‌ನಲ್ಲಿ ಎಷ್ಟು ಸಂಖ್ಯೆಯ ಸರ್ಟಿಫಿಕೇಟ್ ಮುದ್ರಣ ಎಂದು ತಿಳಿಸಿಲ್ಲ. ಅಂದರೆ ಅವರು ಎಷ್ಟು ಬೇಕಿದ್ದರೂ ಸಂಖ್ಯೆ ಹೇಳಿಕೊಳ್ಳಬಹುದು ಎಂದು ಟೀಕಿಸಿದರು.

  • ರಾಯಚೂರಿಗೆ ಏಮ್ಸ್ ತರಲು ಸರ್ಕಾರ ಪ್ರಯತ್ನಿಸುತ್ತಿದೆ: ಡಾ.ಶರಣ ಪ್ರಕಾಶ್ ಪಾಟೀಲ್

    ರಾಯಚೂರಿಗೆ ಏಮ್ಸ್ ತರಲು ಸರ್ಕಾರ ಪ್ರಯತ್ನಿಸುತ್ತಿದೆ: ಡಾ.ಶರಣ ಪ್ರಕಾಶ್ ಪಾಟೀಲ್

    ರಾಯಚೂರು: ಏಮ್ಸ್ (AIIMS) ಹೋರಾಟ 460ನೇ ದಿನಕ್ಕೆ ಕಾಲಿಟ್ಟಿದ್ದು, ಹೋರಾಟ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ (Dr Sharana Praksh Patil) ಭೇಟಿ ನೀಡಿ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ನಮ್ಮ ಸಹಕಾರವಿದೆ. ಪಕ್ಷ ಭೇದ ಮರೆತು ರಾಯಚೂರಿಗೆ (Raichur) ಏಮ್ಸ್ ತರಲು ಒಗ್ಗಟ್ಟಾಗಿ ಪ್ರಯತ್ನಿಸಬೇಕಿದೆ ಎಂದು ಹೇಳಿದರು.

    ಜಿಲ್ಲೆಗೆ ಏಮ್ಸ್ ತರುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಅವರು, ಈಗಾಗಲೇ ಸಿಎಂ ಸಿದ್ದರಾಮಯ್ಯ (Siddaramaiah) ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ನಮ್ಮ ಪ್ರಣಾಳಿಕೆಯಲ್ಲೂ ರಾಯಚೂರಿಗೆ ಏಮ್ಸ್ ತರುವ ಭರವಸೆ ನೀಡಿದ್ದೇವೆ ಎಂದರು. ಕಲಬುರಗಿಗೆ ಏಮ್ಸ್ ಬೇಕು ಎಂದಿದ್ದ ಪ್ರಿಯಾಂಕ ಹೇಳಿಕೆಗೆ ಸ್ಪಷ್ಟನೆ ನೀಡಿದ ಅವರು, ಪ್ರಿಯಾಂಕ್ ಖರ್ಗೆಗೂ ರಾಯಚೂರಿಗೆ ಏಮ್ಸ್ ಬರಬೇಕು ಅನ್ನೋದಿದೆ. ಅವರ ಜೊತೆಗೆ ಮಾತನಾಡಿದ್ದೇನೆ. ಅವರ ಹೇಳಿಕೆಯಿಂದ ಯಾವುದೇ ಗೊಂದಲ ಸೃಷ್ಟಿಸುವುದು ಬೇಡ ಎಂದರು. ಇದನ್ನೂ ಓದಿ: KRSನಿಂದ ತಮಿಳುನಾಡಿಗೆ ಹೆಚ್ಚಿನ ನೀರು ಬಿಡುಗಡೆ

    ಕೇಂದ್ರಕ್ಕೆ ನಿಯೋಗ ಹೋಗಲು ಸಮಯ ಹೊಂದಾಣಿಕೆಯಾಗಿಲ್ಲ. ಶೀಘ್ರದಲ್ಲೇ ಕೇಂದ್ರಕ್ಕೆ ನಿಯೋಗ ಹೋಗಿ ಒತ್ತಾಯ ಮಾಡಲಿದ್ದೇವೆ ಎಂದು ಹೇಳಿದರು. ಕಳೆದ 460 ದಿನಗಳಿಂದ ಏಮ್ಸ್ ಹೋರಾಟ ಸಮಿತಿ ನಿರಂತರವಾಗಿ ಹೋರಾಟ ನಡೆಸಿದ್ದು, ಏಮ್ಸ್ ವಿಚಾರದಲ್ಲಿ ಗೊಂದಲ ಸೃಷ್ಟಿ ಮಾಡಬೇಡಿ. ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯನ್ನು ಉಳಿಸಿಕೊಳ್ಳಿ ಎಂದು ಏಮ್ಸ್ ಹೋರಾಟಗಾರರು ಸಚಿವರಿಗೆ ಒತ್ತಾಯಿಸಿದರು. ಇದನ್ನೂ ಓದಿ: ಮನೆಯಲ್ಲಿ ಧ್ವಜಾರೋಹಣ ಮಾಡ್ತಾರೆ: ಮುಂದಿನ ವರ್ಷ ಕೆಂಪು ಕೋಟೆಯಲ್ಲಿ ಮತ್ತೆ ಸಿಗೋಣ ಎಂದಿದ್ದ ಮೋದಿಗೆ ಖರ್ಗೆ ಟಾಂಗ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜೆಡಿಎಸ್ ಸರ್ಕಾರ ಇದ್ದಾಗಲೆಲ್ಲಾ ಭ್ರಷ್ಟಾಚಾರ ಇತ್ತು: ಡಾ.ಶರಣ ಪ್ರಕಾಶ್ ಪಾಟೀಲ್

    ಜೆಡಿಎಸ್ ಸರ್ಕಾರ ಇದ್ದಾಗಲೆಲ್ಲಾ ಭ್ರಷ್ಟಾಚಾರ ಇತ್ತು: ಡಾ.ಶರಣ ಪ್ರಕಾಶ್ ಪಾಟೀಲ್

    ರಾಯಚೂರು: ಜೆಡಿಎಸ್ (JDS) ಸರ್ಕಾರ ಇದ್ದಾಗಲೆಲ್ಲಾ ಭ್ರಷ್ಟಾಚಾರ (Corruption) ಇತ್ತು. ಅದು ಭ್ರಷ್ಟ ಸರ್ಕಾರ. ಹೆಚ್‌ಡಿ ಕುಮಾರಸ್ವಾಮಿ (H.D.Kumaraswamy) ಸರ್ಕಾರ ಇದ್ದಾಗ, ಈ ಹಿಂದೆ ಯಾವ ರೀತಿ ಆಡಳಿತ ನಡೆದಿದೆ ಎನ್ನುವುದು ಗೊತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ (Dr. Sharan Prakash Patil) ಆರೋಪಿಸಿದ್ದಾರೆ.

    ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಭ್ರಷ್ಟಾಚಾರ ಆರೋಪ ವಿಚಾರದ ಕುರಿತು ರಾಯಚೂರಿನ (Raichur) ಸಿಂಧನೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿಯವರು ಅಸಂಬದ್ಧ ಹೇಳಿಕೆ ನೀಡುತ್ತಾರೆ. ಅವರ ಸರ್ಕಾರ ಇದ್ದಾಗ, ಈ ಹಿಂದೆ ಯಾವ ರೀತಿ ಆಡಳಿತ ನಡೆದಿದೆ ಎನ್ನುವುದು ಗೊತ್ತಿದೆ. ಜೆಡಿಎಸ್ ಸರ್ಕಾರ ಇದ್ದಾಗಲೆಲ್ಲಾ ಅದು ಭ್ರಷ್ಟಾಚಾರವಿತ್ತು. ನಾನು ಸ್ಪಷ್ಟವಾಗಿ ಹೇಳಬೇಕಾದ ಅವಶ್ಯಕತೆ ಇಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಡಿಕೆಶಿ ಭಂಡ, ದ್ರೋಹಿ- ನವರಂಗಿ ನಾರಾಯಣ ಹೇಳಿಕೆಗೆ ಅಶ್ವಥ್ ನಾರಾಯಣ್ ತಿರುಗೇಟು

    ನಮ್ಮ ಜೊತೆ ಸಮ್ಮಿಶ್ರ ಸರ್ಕಾರದಲ್ಲಿ ಹೆಚ್‌ಡಿ ಕುಮಾರಸ್ವಾಮಿ ಇದ್ದರು. ಕಾಂಗ್ರೆಸ್‌ನಿಂದಲೇ ಮುಖ್ಯಮಂತ್ರಿ ಆಗಿದ್ದರು. ಸರ್ಕಾರ ಉಳಿಸಿಕೊಳ್ಳಲು ಆಗಲಿಲ್ಲ. ಸರ್ಕಾರ ಹೋಯಿತು ಎನ್ನುವ ಹತಾಶೆಯಲ್ಲಿ ಈ ರೀತಿಯಾಗಿ ಹೇಳುತ್ತಿದ್ದಾರೆ. ಅವರ ನಿರೀಕ್ಷೆಗೆ ತಕ್ಕ ಫಲಿತಾಂಶ ಬರಲಿಲ್ಲ. ನಮ್ಮ ಸರ್ಕಾರದಲ್ಲಿ ಭ್ರಷ್ಟಾಚಾರಕ್ಕೆ ಅವಕಾಶವಿಲ್ಲ ಎಂದರು. ಇದನ್ನೂ ಓದಿ: ರಾಜ್ಯದ ಇಬ್ಬರು IPS ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ – 18 ಮಂದಿಗೆ ವಿಶಿಷ್ಟ ಸೇವಾ ಪದಕ ಪ್ರದಾನ

    ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿ.ಟಿ ರವಿ (CT Ravi) ಕಮಿಷನ್ ದಂಧೆ ಆರೋಪದ ಕುರಿತು ಮಾತನಾಡಿದ ಅವರು, ಪಾಪ ಅವರ ಸಂಘ ದೋಷ ಅದು. ಹಿಂದೆ ಎಂಎಲ್‌ಎ ಇದ್ರಲ್ವಾ ಅವರು ಬಿಜೆಪಿ (BJP) ಎಂಎಲ್‌ಎಗಳ ಸಂಘ ದೋಷದಿಂದ ಹೀಗೆ ಮಾತನಾಡುತ್ತಾರೆ. 40% ಲಂಚ ತೆಗೆದುಕೊಂಡವರ ಜೊತೆಗಿದ್ದು ಅವರಿಗೆ ಹೀಗಾಗಿದೆ. ಕಾಮಾಲೆ ಇರುವವರಿಗೆ ಕಾಣೋದೆಲ್ಲಾ ಹಳದಿ ಎನ್ನುವ ರೀತಿ ಆಗಿದೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಅಶ್ವಥ್ ನಾರಾಯಣ ಅಲ್ಲ, ನವರಂಗಿ ನಾರಾಯಣ: ಡಿಕೆಶಿ ಕಿಡಿ

    ಕಾಂಗ್ರೆಸ್ ಸರ್ಕಾರ ಶೀಘ್ರವೇ ಬೀಳುತ್ತದೆ ಎನ್ನುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹೇಳಿಕೆಗೆ ಟಾಂಗ್ ಕೊಟ್ಟ ಅವರು, ಇದಕ್ಕೆ ಏನು ಹೇಳಬೇಕೋ ನನಗೆ ಅರ್ಥ ಆಗುತ್ತಿಲ್ಲ. ಹಗಲುಗನಸು ಎಂದು ಇರುತ್ತದೆ ಗೊತ್ತಾ? ಅದರ ಬಗ್ಗೆ ಕೇಳಿದ್ದೀರಾ? ಅದೇ ಹಗಲುಗನಸನ್ನು ಅವರು ಕಾಣುತ್ತಿದ್ದಾರೆ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ಸ್ವಾತಂತ್ರ್ಯೋತ್ಸವ ಸಂಭ್ರಮಕ್ಕೆ ಶಾಸಕ ಇಕ್ಬಾಲ್‌ ಹುಸೇನ್‌ರಿಂದ 2.70 ಲಕ್ಷ ಲಡ್ಡು ವಿತರಣೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]