Tag: Dr Sudhakar K

  • ಮೂರನೇ ಅಲೆಯಲ್ಲಿ ಮಕ್ಕಳಿಗೆ ಯಾವುದೇ ಅಪಾಯವಿಲ್ಲ: ಡಾ.ಕೆ ಸುಧಾಕರ್

    ಮೂರನೇ ಅಲೆಯಲ್ಲಿ ಮಕ್ಕಳಿಗೆ ಯಾವುದೇ ಅಪಾಯವಿಲ್ಲ: ಡಾ.ಕೆ ಸುಧಾಕರ್

    – ದಾವಣಗೆರೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್ ನಿರ್ಮಾಣ

    ದಾವಣಗೆರೆ: ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಯಾವುದೇ ಅಪಾಯವಿಲ್ಲ ಎಂದು ತಜ್ಞರ ವರದಿಗಳಿವೆ ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.

    ದಾವಣಗೆರೆಯಲ್ಲಿ ಜಿಲ್ಲಾಸ್ಪತ್ರೆಯ ಭೇಟಿಗಿಂತ ಮೊದಲು ಜಿಎಂಐಟಿಯಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಯಾವುದೇ ಅಪಾಯವಿಲ್ಲ ಎಂದು ತಜ್ಞರ ವರದಿ ಹೇಳುತ್ತಿದ್ದು, ಹಾಗಂತ ಯಾವ ಪೋಷಕರು ಮೈಮರೆಯುವಂತಿಲ್ಲ. ಲಾಕ್‍ಡೌನ್ ಸಡಿಲಿಕೆ ಆಗಿದೆ ಎಂದು ಜನರು ಕೂಡ ಮೈಮೆರಯುವಂತಿಲ್ಲ. ಪ್ರತಿಯೊಬ್ಬರು ಎರಡನೇ ಡೋಸ್ ಪಡೆಯುವವರೆಗೂ ಎಲ್ಲರೂ ಕೊರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಈಗಾಗಲೇ ಕೇರಳ, ಮಹಾರಾಷ್ಟ್ರದಲ್ಲಿ ಕೊರೊನಾ ಕೇಸ್‍ಗಳ ಸಂಖ್ಯೆ ಹೆಚ್ಚಿದ್ದು, ಕೇರಳದಲ್ಲಿ ಪ್ರತಿದಿನ 15 ಸಾವಿರಕ್ಕೂ ಹೆಚ್ಚು ಕೇಸ್ ಬರುತ್ತಿದೆ. ಈ ಹಿನ್ನಲೆಯಲ್ಲಿ ಕರ್ನಾಟಕದ ಗಡಿಭಾಗದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದೇವೆ, ಕರ್ನಾಟಕದಲ್ಲಿ ಕೊರೊನಾ ಸಂಖ್ಯೆ ಇಳಿಮುಖವಾಗುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಮಳೆಗಾಲದ ಅಧಿವೇಶನದಲ್ಲಿ 20 ಮಸೂದೆ ಮಂಡನೆ: ಪ್ರಹ್ಲಾದ್ ಜೋ

    ಶೇ 1.5ರ ದರದಲ್ಲಿ ಕೇಸ್‍ಗಳು ದಾಖಲಾಗುತ್ತಿವೆ. ಪ್ರತಿದಿನ 1.50 ಲಕ್ಷದಷ್ಟು ಟೆಸ್ಟಿಂಗ್ ಮಾಡುತ್ತಿದ್ದೇವೆ. ಸಧ್ಯ ಕರ್ನಾಟಕದಲ್ಲಿ ಕೊರೊನಾ ನಿಯಂತ್ರಣದಲ್ಲಿದೆ. ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಎರಡನೇ ಪ್ಯಾಕೇಜ್‍ನಲ್ಲಿ ಕರ್ನಾಟಕಕ್ಕೆ 1500 ಕೋಟಿ ಬರುತ್ತಿದ್ದು, ಮೂರನೇ ಅಲೆ ಸಂಭ್ಯಾವದ ಹಿನ್ನಲೆಯಲ್ಲಿ ದೊರೆಯುತ್ತಿರುವ ವಿಶೇಷ ಪ್ಯಾಕೇಜ್ ಇದಾಗಿದೆ. ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರ, ಪಿಹೆಚ್‍ಸಿಗಳಲ್ಲಿ ಮಕ್ಕಳ ವಿಶೇಷ ವಾರ್ಡ್ ಸೇರಿದಂತೆ ವಿವಿಧ ಸೌಲಭ್ಯವು ಕಲ್ಪಿಸಲು ಹಣ ಸದ್ಭಳಕೆ ಮಾಡಿಕೊಳ್ಳಬಹುದಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಹರ್ಲೀನ್ ಡಿಯೋಲ್ ದಿ ಬೆಸ್ಟ್ ಕ್ಯಾಚ್ – ದಿಗ್ಗಜರು ಬೆರಗು

    ದಾವಣಗೆರೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್ ನಿರ್ಮಾಣಕ್ಕೆ ಸರ್ಕಾರ ನಿರ್ಧರಿಸಿದೆ. ಈ ಕುರಿತಾಗಿ ಪರಮಾರ್ಶೆ ಮಾಡಲಿಕ್ಕೆ ನಾನು ಇಂದು ದಾವಣಗೆರೆಗೆ ಬಂದಿದ್ದು, ದಾವಣಗೆರೆ ಅಲ್ಲದೇ 9 ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜ್ ನಿರ್ಮಾಣ ಆಗಲಿದೆ. ಈಗಾಗಲೇ ಸಿಎಂ ಯಡಿಯೂರಪ್ಪ ಅವರು ಸರ್ಕಾರದಿಂದ ಕಾಲೇಜ್ ಸ್ಥಾಪನೆಗೆ ನಿರ್ಧಾರಿಸಲಾಗಿದ್ದು, ಖಾಸಗಿ ಸಹಭಾಗಿತ್ವದಲ್ಲಿ ಪಿಪಿಪಿ ಮಾದರಿಯಲ್ಲಿ ಕಾಲೇಜ್ ನಿರ್ಮಾಣ ಮಾಡಲಾಗುವುದು. ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜ್ ಸ್ಥಾಪನೆ ಗುರಿಯನ್ನು ಸರ್ಕಾರ ಹೊಂದಿದೆ ಎಂದು ತಿಳಿಸಿದ್ದಾರೆ.

  • ಎತ್ತಿನಹೊಳೆ ಯೋಜನೆಗೆ ರಾಷ್ಟ್ರೀಯ ಸ್ಥಾನಮಾನಕ್ಕೆ ಸಚಿವ ಸುಧಾಕರ್ ಒತ್ತಾಯ

    ಎತ್ತಿನಹೊಳೆ ಯೋಜನೆಗೆ ರಾಷ್ಟ್ರೀಯ ಸ್ಥಾನಮಾನಕ್ಕೆ ಸಚಿವ ಸುಧಾಕರ್ ಒತ್ತಾಯ

    ನವದೆಹಲಿ: ಎತ್ತಿನಹೊಳೆ ಯೋಜನೆಗೆ ರಾಷ್ಟ್ರೀಯ ಸ್ಥಾನಮಾನ ನೀಡುವಂತೆ ಆರೋಗ್ಯ ಸಚಿವ ಕೆ. ಸುಧಾಕರ್ ಮನವಿ ಮಾಡಿದ್ದಾರೆ.

    ನವದೆಹಲಿಯಲ್ಲಿ ಇಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಚಿವ ಡಾ. ಕೆ ಸುಧಾಕರ್ ಅವರು ಭೇಟಿಯಾಗಿದ್ದಾರೆ. ರಾಜ್ಯದ ನೀರಾವರಿ ಮತ್ತು ಕುಡಿಯುವ ನೀರಿನ ಯೋಜನೆಗಳ ಕುರಿತಂತೆ ಮನವಿ ಸಲ್ಲಿಸಿದರು. ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಬಯಲು ಸೀಮೆ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಯೋಜನೆಗೆ ರಾಷ್ಟ್ರೀಯ ಯೋಜನೆ ಸ್ಥಾನಮಾನ ನೀಡುಬೇಕೆಂದು ಮನವಿ ಮಾಡಿದ್ದಾರೆ.

    ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕೆರೆಗಳಲ್ಲಿ ಹೂಳೆತ್ತಲು ವಿಶೇಷ ಯೋಜನೆ ರೂಪಿಸಬೇಕು. ಕೃಷ್ಣಾ ನದಿ ನೀರನ್ನು ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಿಂದ ಕರ್ನಾಟಕದ ಗಡಿ ಜಿಲ್ಲೆಗಳಿಗೆ ವಿಸ್ತರಿಸಲು ಸಹಕರಿಸುವಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ಬಳಿ ಚರ್ಚಿಸಿದ್ದಾರೆ.

  • ರಾಜ್ಯಕ್ಕೆ ಬರುವವರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ: ಡಾ.ಸುಧಾಕರ್

    ರಾಜ್ಯಕ್ಕೆ ಬರುವವರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ: ಡಾ.ಸುಧಾಕರ್

    ಬೆಂಗಳೂರು: ಡೆಲ್ಟ್ ಪ್ಲಸ್ ಆತಂಕದಿಂದಾಗಿ ಮಹರಾಷ್ಟ್ರ ಹಾಗೂ ಕೇರಳದಿಂದ ಬರುವವರ ಮೇಲೆ ವಿಶೇಷ ನಿಗ ವಹಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ. ಇದನ್ನೂ ಓದಿ: ಸಮಸ್ತ ಕನ್ನಡಿಗರ ಪಾಲಿಗೆ ಕೆಂಪಾಪುರವೂ ಒಂದು ಶ್ರದ್ಧಾಕೇಂದ್ರ: ಡಿಸಿಎಂ

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಹಾಗೂ ಕೇರಳದಿಂದ ಬರುವವರಿಗೆ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ ಎಂದಿದ್ದಾರೆ. ಡೆಲ್ಟಾ ಪ್ಲಸ್ ಸೋಂಕಿತರು ಸದ್ಯಕ್ಕೆ ಇಬ್ಬರು ಪತ್ತೆಯಾಗಿದ್ದಾರೆ. ಇನ್ನು ವರದಿ ಬರಬೇಕಿದೆ. ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ. ಮಹಾರಾಷ್ಟ್ರ ದಿಂದ ಬರುವವರ ಮೇಲೆ ನಿಗಾ ಇಟ್ಟು, ರ‍್ಯಾಂಡಮ್ ಟೆಸ್ಟ್ ಮಾಡುವಂತೆ ಸೂಚನೆ ನೀಡಿದ್ದೇವೆ ಎಂದಿದ್ದಾರೆ.

    ಕೋವಿಡ್ ಲಸಿಕೆ ಪಡೆಯದವರ ಮೇಲೆ ಡೆಲ್ಟಾ ಪ್ಲಸ್ ಹೆಚ್ಚಿನ ಪರಿಣಾಮ ಬೀರುತ್ತೆ. ಇದನ್ನ ತಡೆಯಲು ಲಸಿಕೆಯೊಂದೆ ದಾರಿ. ಎಲ್ಲರು ಲಸಿಕೆಯನ್ನ ಪಡೆಯಬೇಕು. ಗಡಿ ಭಾಗದಲ್ಲಿ ಈ ಬಗ್ಗೆ ಹೆಚ್ಚಿನ ನಿಗಾ ವಹಿಸುವಂತೆ ಸೂಚಿಸಿದ್ದೇವೆ. ಜಿಲ್ಲಾಧಿಕಾರಿಗಳಿಗೆ ಸೂಕ್ತ ನಿಗಾವಹಿಸುವಂತೆ ಆದೇಶ ಹೊರಡಿಸಿದ್ದೇವೆ. ವ್ಯಾಕ್ಸಿನ್ ಎಲ್ಲಾ ಕಡೆ ಕೊಡಲಾಗುತ್ತಿದೆ. ಬೆಂಗಳೂರು ಒಂದರಲ್ಲೇ ಸುಮಾರು 50 ಲಕ್ಷಮಂದಿ ಡೋಸ್ ಪಡೆದಿದ್ದಾರೆ. ದೇಶದಲ್ಲೇ ಇದೇ ಹೆಚ್ಚು ಲಸಿಕೆ ಪಡೆದ ಸಿಟಿಯಾಗಿದೆ ಎಂದಿದ್ದಾರೆ.

    10 ವರ್ಷದ ಮಕ್ಕಳ ಪೋಷಕರಿಗೆ ಲಸಿಕೆ ನೀಡುತ್ತೇವೆ. 10 ವರ್ಷದ ಮಕ್ಕಳು ಶಾಲೆಗೆ ತೆರಳು ಸಾಧ್ಯತೆ ಬಂದರೆ ಅವರ ಪೋಷಕರಿಗೆ ಲಸಿಕೆ ನೀಡುತ್ತೇವೆ. ಕೇರಳ ಹಾಗೂ ಮಹಾರಾಷ್ಟ್ರ ಗಡಿಭಾಗದಲ್ಲಿ ಆರ್ ಟಿಪಿಸಿಆರ್ ಕಡ್ಡಾಯವಾಗಿದೆ. ಹೀಗಾಗಿ ಗಡಿಭಾಗದಲ್ಲಿ ಕಟ್ಟೆಚ್ಚೇರ ವಹಿಸುತ್ತೇವೆ ಎಂದಿದ್ದಾರೆ.

  • ಡಾ.ದೇವಿಶೆಟ್ಟಿ ವರದಿ ಶಿಫಾರಸು 45 ದಿನಗಳಲ್ಲಿ ಅನುಷ್ಠಾನ: ಸಚಿವ ಸುಧಾಕರ್

    ಡಾ.ದೇವಿಶೆಟ್ಟಿ ವರದಿ ಶಿಫಾರಸು 45 ದಿನಗಳಲ್ಲಿ ಅನುಷ್ಠಾನ: ಸಚಿವ ಸುಧಾಕರ್

    ಬೆಂಗಳೂರು: ಕೊರೊನಾ 3ನೇ ಅಲೆ ನಿಯಂತ್ರಣಕ್ಕೆ ಸರ್ಕಾರ ರಚಿಸಿದ್ದ ತಜ್ಞರ ಸಮಿತಿ ಮಧ್ಯಂತರ ವರದಿ ನೀಡಿದ ಬೆನ್ನಲ್ಲೇ ವರದಿಯ ಶಿಫಾರಸು ಅನುಷ್ಠಾನಕ್ಕೆ ಸರ್ಕಾರ ಮುಂದಾಗಿದೆ. ತಜ್ಞರ ನೀಡಿರುವ ಸಲಹೆ, ಶಿಫಾರಸುಗಳನ್ನ 45 ದಿನಗಳಲ್ಲಿ ರಾಜ್ಯಾದ್ಯಂತ ಅನುಷ್ಠಾನ ಮಾಡೋದಾಗಿ ಆರೋಗ್ಯ ಸಚಿವ ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

    ಬೆಂಗಳೂರಿನಲ್ಲಿ ವರದಿ ಅನುಷ್ಠಾನ ಕುರಿತು ಮಾತನಾಡಿದ ಅವರು, ನಿನ್ನೆ ಡಾ. ದೇವಿ ಪ್ರಸಾದ್ ಶೆಟ್ಟಿ ನೇತೃತ್ವದ ಸಮಿತಿ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಕೆ ಮಾಡಿದೆ. 92 ಪುಟಗಳ ವರದಿಯಲ್ಲಿ ಅನೇಕ ಶಿಫಾರಸುಗಳನ್ನು ಮಾಡಿದೆ. ಸಮಿತಿಯ ಶಿಫಾರಸು ಅನುಷ್ಠಾನ ಮಾಡಲು ಸರ್ಕಾರ ಪ್ರಕ್ರಿಯೆ ಪ್ರಾರಂಭ ಮಾಡಿದೆ. 45 ದಿನಗಳಲ್ಲಿ ತಜ್ಞರು ಕೊಟ್ಟ ಶಿಫಾರಸನು ಅನುಷ್ಠಾನ ಮಾಡಲು ಕ್ರಮ ಕೈಗೊಳ್ಳಲಾಗುತ್ತೆ ಎಂದು ತಿಳಿಸಿದರು. ಇದನ್ನೂ ಓದಿ:  2 ಕೋಟಿ ಲಸಿಕೆ ನೀಡಿ ಇತಿಹಾಸ ನಿರ್ಮಿಸಿದ ಕರ್ನಾಟಕ: ಸುಧಾಕರ್

    ಜಿಲ್ಲೆಗಳಲ್ಲಿ ಮಕ್ಕಳಿಗಾಗಿ ಕೇರ್ ಸೆಂಟರ್ ಪ್ರಾರಂಭ, ವೈದ್ಯರು, ಸಿಬ್ಬಂದಿ ನೇಮಕ ಪ್ರಕ್ರಿಯೆ, ಐಸಿಯು ಬೆಡ್, ಆಕ್ಸಿಜನ್ ಬೆಡ್ ಹೆಚ್ಚಳ ಮಾಡುವುದು. ಸಿಬ್ಬಂದಿಗೆ ಅಗತ್ಯ ತರಬೇತಿ ನೀಡುವುದು ಸೇರಿದಂತೆ ಅನೇಕ ಶಿಫಾರಸುಗಳನ್ನ ಸಮಿತಿ ಮಾಡಿತ್ತು. ಸಮತಿ ವರದಿಯನ್ನು ಪ್ರತಿ ಜಿಲ್ಲೆಗಳಲ್ಲೂ ಅನುಷ್ಠಾನ ಮಾಡಲು ಕ್ರಮವಹಿಸಲಾಗುತ್ತೆ. ತಜ್ಞರ ಎಲ್ಲಾ ಸಲಹೆ, ಶಿಫಾರಸುಗಳನ್ನ ರಾಜ್ಯ ಸರ್ಕಾರ ಸಮರ್ಪಕವಾಗಿ ಅನುಷ್ಠಾನ ಮಾಡುವ ಕೆಲಸ ಮಾಡಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

    ಖಾಸಗಿ ಆಸ್ಪತ್ರೆಗಳ ಬೆಡ್ ವಾಪಸ್:

    ಕೊರೊನಾ ತೀವ್ರತೆಯಿಂದ ರೋಗಿಗಳಿಗೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳಿಂದ ಪಡೆದಿದ್ದ ಬೆಡ್‍ಗಳನ್ನು ತಾತ್ಕಾಲಿಕವಾಗಿ ಆಸ್ಪತ್ರೆಗಳಿಗೆ ವಾಪಸ್ ನೀಡಲು ಸರ್ಕಾರ ತೀರ್ಮಾನ ಮಾಡಿದೆ ಎಂದೂ ಅವರು ಇದೇ ವೇಳೆ ತಿಳಿಸಿದರು. ಕೊರೊನಾ ಕೇಸ್ ಕಡಿಮೆ ಆಗಿರುವುದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್ ಖಾಲಿ ಇವೆ. ಹೀಗಾಗಿ ಖಾಸಗಿ ಆಸ್ಪತ್ರೆಗಳ ಬೆಡ್ ಸದ್ಯಕ್ಕೆ ಕೊಡೋದು ಬೇಡ. ಮುಂದೆ ಏನಾದ್ರೂ ಕೇಸ್ ಹೆಚ್ಚಳ ಆದ್ರೆ, ಸರ್ಕಾರಕ್ಕೆ ಬೆಡ್ ಬೇಕು ಎಂದು ಕೇಳಿದ್ರೆ ಆಗ ಖಾಸಗಿ ಆಸ್ಪತ್ರೆಗಳು ಬೆಡ್ ಕೊಡಬೇಕು. ಸದ್ಯ ಕೋವಿಡೇತರ ರೋಗಿಗಳಿಗೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳಿಗೆ ಸೂಚನೆ ನೀಡಲಾಗುತ್ತೆ ಎಂದು ಸಚಿವರು ತಿಳಿಸಿದರು.

  • 2 ಕೋಟಿ ಲಸಿಕೆ ನೀಡಿ ಇತಿಹಾಸ ನಿರ್ಮಿಸಿದ ಕರ್ನಾಟಕ: ಸುಧಾಕರ್

    2 ಕೋಟಿ ಲಸಿಕೆ ನೀಡಿ ಇತಿಹಾಸ ನಿರ್ಮಿಸಿದ ಕರ್ನಾಟಕ: ಸುಧಾಕರ್

    ಬೆಂಗಳೂರು: ಇಡೀ ದೇಶದಲ್ಲಿ ಲಸಿಕೆ ಅಭಿಯಾನಕ್ಕೆ ವೇಗ ನೀಡಲಾಗಿದೆ. ಇದೇ ವೇಳೆ ಲಸಿಕೆ ನೀಡೋದ್ರಲ್ಲಿ ಕರ್ನಾಟಕ ರಾಜ್ಯ ಇತಿಹಾಸ ನಿರ್ಮಿಸಿದೆ. ಕರ್ನಾಟಕ ಇದುವರೆಗೂ 2 ಕೋಟಿ ಜನರಿಗೆ ಲಸಿಕೆ ನೀಡಿ ಹೊಸ ದಾಖಲೆಯನ್ನು ಬರೆದಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ. ಇದನ್ನೂ ಓದಿ:  ಹೋಟೆಲ್, ರೆಸಾರ್ಟ್, ವಸತಿ ಗೃಹಗಳ ವಿದ್ಯುತ್, ನೀರಿನ ಬಿಲ್ ಮನ್ನಾ ಮಾಡಿ: ಸಿದ್ದರಾಮಯ್ಯ ಪತ್ರ

    ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ಡಾ.ಸುಧಾಕರ್ ಕರ್ನಾಟಕ ಲಸಿಕೆ ನೀಡಿಕೆಯಲ್ಲಿ ಇತಿಹಾಸ ನಿರ್ಮಿಸಿದೆ ಇದೊಂದು ದೊಡ್ಡ ಸಾಧನೆ. ಇದಕ್ಕೆ ಕೆಲಸ ಮಾಡಿದ ಎಲ್ಲಾ ವೈದ್ಯರು, ದಾದಿಯರಿಗೆ, ಆಸ್ಪತ್ರೆಗಳಿಗೆ ಧನ್ಯವಾದ ಎಂದು ಅಂತ ಹೆಮ್ಮೆಯಿಂದ ವ್ಯಕ್ತಪಡಿಸಿದ್ದಾರೆ.

    ಇದೇ ವೇಳೆ ಜನರ ಲಸಿಕೆ ಉತ್ಸಾಹಕ್ಕೂ ಧನ್ಯವಾದ ತಿಳಿಸಿದ ಸಚಿವರು, ಜನರು ಕೂಡಾ ಲಸಿಕೆ ಹಾಕಿಸಿಕೊಳ್ಳೋಕೆ ಬರುತ್ತಿದ್ದಾರೆ. ಇದರಿಂದಾಗಿಯೇ ಲಸಿಕೆ ಅಭಿಯಾನ 2 ಕೋಟಿ ದಾಟಿದೆ. ಯೋಗ ದಿನದಂದು ಒಂದೇ ದಿನ 11 ಲಕ್ಷ ಲಸಿಕೆ ಕೊಟ್ಟಿದ್ದೇವೆ. ದೇಶದಲ್ಲಿ ಅತಿ ಹೆಚ್ಚು ಲಸಿಕೆ ಕೊಟ್ಟ ಎರಡನೇ ಸ್ಥಾನದಲ್ಲಿ ನಾವು ಇದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಧೋನಿ ಮಾಸ್ ಮೀಸೆಗೆ ಅಭಿಮಾನಿಗಳು ಫಿದಾ

    ಲಸಿಕೆ ಉಚಿತವಾಗಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವ್ರಿಗೆ ಧನ್ಯವಾದ. ಜನರು ಕೂಡಾ ಆತಂಕ ಇಲ್ಲದೆ ಎಲ್ಲರೂ ಲಸಿಕೆ ಪಡೆಯಬೇಕು. ಇದೇ ವೇಳೆ ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ಮಾತನಾಡಿದ ಅವರು, ಮಕ್ಕಳಿಗೆ ಲಸಿಕೆ ಟ್ರಯಲ್ ನಡೆಯುತ್ತಿದೆ. ಟ್ರಯಲ್ ಪ್ರಕ್ರಿಯೆ ಮುಗಿದ ಮೇಲೆ ಈ ಬಗ್ಗೆ ನಿರ್ಧಾರ ಮಾಡಲಾಗುತ್ತೆ ಎಂದು ಸ್ಪಷ್ಟಪಡಿಸಿದ್ದಾರೆ.

  • ಆರೋಗ್ಯ , ಕ್ಷೇಮ ಕೇಂದ್ರ ನಿರ್ಮಾಣದಲ್ಲಿ ಕರ್ನಾಟಕ ಮುಂಚೂಣಿ:  ಡಾ.ಕೆ.ಸುಧಾಕರ್

    ಆರೋಗ್ಯ , ಕ್ಷೇಮ ಕೇಂದ್ರ ನಿರ್ಮಾಣದಲ್ಲಿ ಕರ್ನಾಟಕ ಮುಂಚೂಣಿ: ಡಾ.ಕೆ.ಸುಧಾಕರ್

    ಬೆಂಗಳೂರು: ಗ್ರಾಮೀಣ ಪ್ರದೇಶಗಳ ಜನರಿಗೆ ಪ್ರಾಥಮಿಕ ಹಂತದ ಆರೋಗ್ಯ ಸೇವೆ ನೀಡುವ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಸ್ಥಾಪನೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ಈ ಯೋಜನೆಯ ಅನುಷ್ಠಾನದಲ್ಲಿ ಉತ್ತಮ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಅನುಷ್ಠಾನಗೊಂಡ ಈ ಯೋಜನೆಯಲ್ಲಿ, 2020-21 ನೇ ಸಾಲಿನಲ್ಲಿ ಕರ್ನಾಟಕ ಉತ್ತಮ ರಾಜ್ಯ ಎಂದೆನಿಸಿಕೊಂಡಿದೆ. ಉಪಕೇಂದ್ರಗಳ ವಿಭಾಗದಲ್ಲಿ 2,263 ಎಚ್‍ಡಬ್ಲ್ಯುಸಿ ಆರಂಭಿಸುವ ಗುರಿಯನ್ನು ಕೇಂದ್ರ ಸರ್ಕಾರ ನೀಡಿದ್ದು, ಮಾರ್ಚ್ 31ರವರೆಗೆ, 3,300 ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗಿದೆ. ನಿಗದಿತ ಗುರಿಗಿಂತ 146% ರಷ್ಟು ಸಾಧನೆಯಾಗಿದೆ.

    2,096 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಎಚ್‍ಡಬ್ಲ್ಯುಸಿ ಆಗಿಸುವ ಗುರಿಯನ್ನು ಕೇಂದ್ರ ಸರ್ಕಾರ ನೀಡಿದ್ದು, 2,168 ಪೂರ್ಣವಾಗಿದೆ. ಅಂದರೆ ನಿಗದಿತ ಗುರಿಗಿಂತ 103% ರಷ್ಟು ಸಾಧನೆಯಾಗಿದೆ. 294 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಎಚ್‍ಡಬ್ಲ್ಯುಸಿ ಆಗಿಸುವ ಗುರಿಯನ್ನು ಕೇಂದ್ರ ಸರ್ಕಾರ ನೀಡಿದ್ದು, 364 ಕೇಂದ್ರ ರೂಪಿಸಲಾಗಿದೆ. ನಿಗದಿತ ಗುರಿಗಿಂತ 124% ರಷ್ಟು ಸಾಧನೆಯಾಗಿದೆ. ರಾಜ್ಯದಲ್ಲಿ ಒಟ್ಟಾರೆಯಾಗಿ 4,653 ಎಚ್‍ಡಬ್ಲ್ಯುಸಿ ಸ್ಥಾಪಿಸುವ ಗುರಿಯನ್ನು ಕೇಂದ್ರ ಸರ್ಕಾರ ನೀಡಿದ್ದು, ಗುರಿಯನ್ನು ಮೀರಿ 5,832 ಕೇಂದ್ರಗಳನ್ನು ಆರಂಭಿಸಲಾಗಿದೆ. ಅಂದರೆ, ಒಟ್ಟಾರೆಯಾಗಿ 125% ರಷ್ಟು ಸಾಧನೆಯನ್ನು ರಾಜ್ಯ ಸರ್ಕಾರ ಮಾಡಿದೆ.

    ಜನಸಮುದಾಯಕ್ಕೆ ಸ್ಥಳೀಯ ಮಟ್ಟದಲ್ಲಿ ಉತ್ತಮ ಆರೋಗ್ಯ ಸೇವೆ ಕಲ್ಪಿಸಲು ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಪ್ರಾಥಮಿಕ ಆರೋಗ್ಯ ಸೇವೆಯನ್ನು ಬಲಪಡಿಸುವ ಉದ್ದೇಶ ಹೊಂದಲಾಗಿದೆ. ಇದಕ್ಕಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಎಲ್ಲ ಆರೋಗ್ಯ ಕೇಂದ್ರಗಳನ್ನು ಎಚ್‍ಡಬ್ಲ್ಯುಸಿ ಆಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. ರಾಜ್ಯದಲ್ಲಿ ಪ್ರಾಥಮಿಕ ಆರೋಗ್ಯ ಸೇವೆ ನೀಡುತ್ತಿರುವ 11,595 ಕೇಂದ್ರಗಳನ್ನು ಎಚ್‍ಡಬ್ಲ್ಯುಸಿ ಆಗಿ ಮೇಲ್ದರ್ಜೆಗೇರಿಸುವ ಗುರಿ ಇದೆ.

    ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಆರಂಭವಾಗಿರುವ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಹದಿಹರೆಯದವರಿಗೆ ಆಪ್ತ ಸಮಾಲೋಚನೆ, ಸಾರ್ವಜನಿಕರಿಗೆ ಯೋಗ ಶಿಕ್ಷಣ ಶಿಬಿರಗಳು, ಅರ್ಹ ದಂಪತಿಗೆ ತಾತ್ಕಾಲಿಕ ಹಾಗೂ ಶಾಶ್ವತ ಗರ್ಭ ನಿರೋಧಕ ವಿಧಾನಗಳ ಸೇವೆ, ಕಣ್ಣು, ಮೂಗು, ಗಂಟಲು ಮತ್ತು ಬಾಯಿ ಸಂಬಂಧಿ ರೋಗಗಳಿಗೆ ತಪಾಸಣೆ, ತುರ್ತು ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಅಗತ್ಯವಿದ್ದರೆ ಮೇಲ್ದರ್ಜೆಯ ಆಸ್ಪತ್ರೆಗಳಿಗೆ ಕಳುಹಿಸಿಕೊಡುವ ಸೌಲಭ್ಯಗಳಿವೆ.

    ಈ ಸಾಧನೆ ಕುರಿತು ಸಂತಸ ವ್ಯಕ್ತಪಡಿಸಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕರ್ನಾಟಕ ಇಡೀ ದೇಶದಲ್ಲಿಯೇ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಸ್ಥಾಪನೆಯಲ್ಲಿ ಮುಂಚೂಣಿಯಲ್ಲಿದೆ. ಗ್ರಾಮೀಣ ಪ್ರದೇಶಗಳಲ್ಲಿರುವ ಜನರು ದೂರದ ನಗರ ಪ್ರದೇಶಗಳಿಗೆ ಸಂಚರಿಸಿ ಆರೋಗ್ಯ ಸೇವೆ ಪಡೆಯುವ ಹೊರೆಯನ್ನು ತಪ್ಪಿಸಿ, ಸುಲಭವಾಗಿ ತಮ್ಮ ಮನೆಯ ಸಮೀಪದಲ್ಲೇ ಆರೋಗ್ಯ ಸೇವೆ ಪಡೆಯಬೇಕೆನ್ನುವುದು ನಮ್ಮ ಸರ್ಕಾರದ ಗುರಿ. ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು ಈ ನಿಟ್ಟಿನಲ್ಲಿ ಬಹಳ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಸಾಧನೆಗಾಗಿ ಶ್ರಮಿಸಿದ ಎಲ್ಲ ಅಧಿಕಾರಿಗಳು, ಸಿಬ್ಬಂದಿಯನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.

    ಈಗ ಆರೋಗ್ಯ ಕ್ಷೇತ್ರ ಕೋವಿಡ್ ನಿವಾರಿಸುವ ಕಡೆ ಹೆಚ್ಚು ಗಮನನೀಡಿದೆ. ಕೋವಿಡ್ ನಿಂದ ಆರ್ಥಿಕ ಸಂಕಷ್ಟವೂ ಉಂಟಾಗಿದೆ. ಇಷ್ಟಿದ್ದರೂ ರಾಜ್ಯದಲ್ಲಿ ಇತರೆ ಆರೋಗ್ಯ ಸೇವೆಗಳನ್ನು ಅಭಿವೃದ್ಧಿಪಡಿಸುವ ಕಾರ್ಯಕ್ಕೆ ಯಾವುದೇ ಹಿನ್ನೆಡೆಯಾಗದಂತೆ ಎಚ್ಚರ ವಹಿಸಲಾಗಿದೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ.