Tag: Dr suraj revanna

  • Breaking: ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ

    Breaking: ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ

    ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್‌ ರೇವಣ್ಣ (Suraj Revanna) ಅವರನ್ನ ಪೊಲೀಸರು ಬಂಧಿಸಿದ್ದಾರೆ.

    ಹಾಸನದ ಸೆನ್‌ ಪೊಲೀಸ್‌ ಠಾಣೆಯಲ್ಲಿಯೇ (SEN Police Hassan) ಪೊಲೀಸರು ಬಂಧಿಸಿದ್ದಾರೆ. ಶನಿವಾರ ಸಂತ್ರಸ್ತ ನೀಡಿದ್ದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ ) ಹಾಗೂ 506 (ಬೆದರಿಕೆ) ಅಡಿಯಲ್ಲಿ ಕೇಸ್‌ ದಾಖಲಾಗಿತ್ತು. ಡಿಜಿಪಿ ಕಚೇರಿಯಲ್ಲಿ ದೂರು ನೀಡಿದ್ದ ಸಂತ್ರಸ್ತ ಹಾಸನ ಎಸ್‌ಪಿಗೂ ದೂರಿನ ಪ್ರತಿಯನ್ನು ಇ-ಮೇಲ್ ಮಾಡಿದ್ದ. ಮೇಲ್ ಆಧರಿಸಿ ಸಂತ್ರಸ್ತನನ್ನ ಕರೆಸಿ ಮಾಹಿತಿ ಪಡೆದ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದರು. ಇದನ್ನೂ ಓದಿ: ವೆಬ್ ಆಪ್ ಬಳಸಿ ಮಾತನಾಡಿರೋ ಆರೋಪಿಗಳು- ರಿಮ್ಯಾಂಡ್ ಕಾಪಿಯಲ್ಲಿ ಸ್ಫೋಟಕ ಅಂಶ ಬಯಲು

    ಸೂರಜ್‌ ಲಾಕ್‌ ಆಗಿದ್ದು ಹೇಗೆ?
    ಶನಿವಾರ ರಾತ್ರಿ ತನ್ನ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿದ್ದ ಸಂತ್ರನ ವಿರುದ್ಧ ಪ್ರತಿದೂರು ನೀಡಲು ಸಂಜೆ 6 ಗಂಟೆ ವೇಳೆಗೆ ಹಾಸನದ ಸೆನ್‌ ಪೊಲೀಸ್‌ ಠಾಣೆಗೆ ತೆರಳಿದ್ದರು. ಅಲ್ಲಿಯೇ ಅವರನ್ನು ಬಂಧಿಸಿದ್ದ ಪೊಲೀಸರು ರಾತ್ರಿ ಸುಮಾರು 11:30ರ ವರೆಗೂ ವಿಚಾರಣೆ ನಡೆಸಿದ್ದರು. ಬಳಿಕ ಸೂರಜ್‌ ಜೊತೆಗೆ ನಿಗೂಢ ಸ್ಥಳಕ್ಕೆ ತೆರಳಿದ್ದ ಪೊಲೀಸರು ತಡರಾತ್ರಿ 1:30ರ ವರೆಗೂ ವಿಚಾರಣೆ ಮುಂದುವರಿಸಿದ್ದರು. ಪ್ರಕರಣದ ತನಿಖಾಧಿಕಾರಿ ಆಗಿರುವ ಸಕಲೇಶಪುರ ಡಿವೈಎಸ್‌ಪಿ ಪ್ರಮೋದ್‌ ಕುಮಾರ್‌ ಅವರು ಸೂರಜ್‌ ರೇವಣ್ಣ ಅವರನ್ನ ತೀವ್ರ ವಿಚಾರಣೆಗೆ ಒಳಪಡಿಸಿದ್ದರು.

    ಸಂತ್ರಸ್ತನ ದೂರಿನಲ್ಲಿ ಏನಿತ್ತು?
    ಸೂರಜ್ ರೇವಣ್ಣ ನನಗೆ ಚುನಾವಣೆ ಸಂದರ್ಭದಲ್ಲಿ ಪರಿಚಯವಾಗಿದ್ದರು. ನಾನು ಅವರ ತಮ್ಮ ಪ್ರಜ್ವಲ್ ರೇವಣ್ಣ ಪರ ಕೆಲಸ ಮಾಡಿದ್ದೇನೆ. ಆ ಸಂದರ್ಭದಲ್ಲಿ ನನ್ನ ನಂಬರನ್ನ ಸೂರಜ್ ತೆಗೆದುಕೊಂಡಿದ್ದರು. ಜೂ.14 ರಂದು ಸೂರಜ್ ನನಗೆ ಮೆಸೇಜ್ ಮಾಡಿದ್ದರು. ಮೆಸೇಜ್‍ನಲ್ಲಿ ನನ್ನ ಬಗ್ಗೆ ಎಲ್ಲಾ ಮಾಹಿತಿ ಪಡೆದಿದ್ದರು. ನಂತರ ಜೂ.16 ರಂದು ಹೊಳೆನರಸೀಪುರ ತಾಲೂಕಿನ, ಗನ್ನೀಕಡ ತೋಟಕ್ಕೆ ಸಂಜೆ ಬರಲು ಹೇಳಿದ್ದರು. ನಾನು ಹೋದ ಸಂದರ್ಭ ಮನೆಯಲ್ಲಿ ಒಬ್ಬರೇ ಇದ್ದರು. ನನಗೆ ಇಷ್ಟವಿಲ್ಲದಿದ್ದರೂ ಲೈಂಗಿಕ ಕಿರುಕುಳ ನೀಡಿದ್ದಾರೆ. ಆ ಸಂದರ್ಭ ನನಗೆ ಪುರುಷರನ್ನು ಕಂಡರೆ ಆಸಕ್ತಿ ಮಹಿಳೆಯರನ್ನು ಕಂಡರೆ ಆಸಕ್ತಿ ಇಲ್ಲ ಎಂದು ಹೇಳಿ ನನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿರುವುದಾಗಿ ತಿಳಿದು ಬಂದಿದೆ. ಇದನ್ನೂ ಓದಿ: ತಲೆಕೆಡಿಸಿಕೊಳ್ಳಬೇಡಿ ಸರ್- ಜೈಲುಪಾಲಾದ ದರ್ಶನ್‌ಗೆ ಧೈರ್ಯ ಹೇಳಿದ ಅಭಿಮಾನಿ

  • ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ: ಡಾ. ಸೂರಜ್‌ ರೇವಣ್ಣ

    ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ: ಡಾ. ಸೂರಜ್‌ ರೇವಣ್ಣ

    ಹಾಸನ: ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ಈ ಷಡ್ಯಂತ್ರ ಎಷ್ಟು ದಿನದಿಂದ ನಡೆಯುತ್ತಿದೆ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ (Dr Suraj Revanna) ಹೇಳಿದ್ದಾರೆ.

    ಹೊಳೆನರಸೀಪುರ ತಾಲೂಕಿನ ಗನ್ನಕಡ ಫಾರ್ಮ್‌ಹೌಸ್‌ನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಈ ಆರೋಪವನ್ನು ಖಡಾಖಂಡಿತವಾಗಿ ತಿರಸ್ಕಾರ ಮಾಡುತ್ತೇನೆ. ಕಾನೂನು ವ್ಯವಸ್ಥೆಯಲ್ಲಿ ಏನು ತೀರ್ಮಾನ ಆಗಬೇಕು ಆಗುತ್ತೆ. ಅವನ ಮೇಲೆಯೂ ಎಫ್‌ಐಆರ್ ಆಗಿದೆ ಎಂದರು.

    ಕಾನೂನಿನಲ್ಲಿ ತನಿಖೆ ಆಗಲಿ, ಸತ್ಯಾಸತ್ಯತೆ ಹೊರಗೆ ಬರಲಿ. ಸತ್ಯ ಏನಿದೆ ಅದು ಹೊರಗೆ ಬಂದೇ ಬರುತ್ತೆ. ನಾಡಿನ ಕಾನೂನಿನ ಮೇಲೆ ನನಗೆ ವಿಶ್ವಾಸವಿದೆ. ಇದು ಸಂಪೂರ್ಣ ರಾಜಕೀಯ ಷಡ್ಯಂತ್ರ. ಅದರ ಬಗ್ಗೆ ನಾನು ಇಂದು ಏನೂ ಪ್ರತಿಕ್ರಿಯೆ ಕೊಡಲ್ಲ ಎಂದು ಹೇಳಿದರು. ಇದನ್ನೂ ಓದಿ: ಡಾ.ಸೂರಜ್ ರೇವಣ್ಣ ವಿರುದ್ದ ಎಫ್ಐಆರ್ ದಾಖಲು

    ಇಂತಹವರು, ಅಂತಹವರು, ಅವರು, ಇವರು ಮಾಡಿದ್ರು ಅಂತ ನಾನು ಚರ್ಚೆ ಮಾಡಲು ಹೋಗಲ್ಲ. ತನಿಖೆ ಪ್ರಗತಿಯಲ್ಲಿದೆ, ಸತ್ಯಾಸತ್ಯತೆ ಹೊರಗೆ ಬರುತ್ತೆ. ಇಡೀ ರಾಜ್ಯದ ಜನತೆ ಅದನ್ನು ನೋಡುತ್ತಾರೆ ಎಂದು ಸೂರಜ್‌ ರೇವಣ್ಣ ತಿಳಿಸಿದ್ದಾರೆ.

  • ಡಾ.ಸೂರಜ್ ರೇವಣ್ಣ ವಿರುದ್ದ ಎಫ್ಐಆರ್ ದಾಖಲು

    ಡಾ.ಸೂರಜ್ ರೇವಣ್ಣ ವಿರುದ್ದ ಎಫ್ಐಆರ್ ದಾಖಲು

    ಹಾಸನ: ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ (Dr. Suraj Revanna) ವಿರುದ್ಧ ಕೇಸ್ ದಾಖಲಾಗಿದೆ.

    ಸಂತ್ರಸ್ತ ನೀಡಿದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ ) ಹಾಗೂ 506 ( ಬೆದರಿಕೆ) ಯಡಿ ಕೇಸ್ ದಾಖಲು ಮಾಡಲಾಗಿದೆ. ಇದನ್ನೂ ಓದಿ: ವೆಬ್ ಆಪ್ ಬಳಸಿ ಮಾತನಾಡಿರೋ ಆರೋಪಿಗಳು- ರಿಮ್ಯಾಂಡ್ ಕಾಪಿಯಲ್ಲಿ ಸ್ಫೋಟಕ ಅಂಶ ಬಯಲು

    ಶುಕ್ರವಾರ ಡಿಜಿ ಕಛೇರಿಯಲ್ಲಿ ಸಂತ್ರಸ್ತ ದೂರು ನೀಡಿದ್ದ. ಅಲ್ಲದೇ ಹಾಸನ ಎಸ್‌ಪಿಗೂ ದೂರಿನ ಪ್ರತಿ ಮೇಲ್ ಮಾಡಿದ್ದ. ಇದೀಗ ಮೇಲ್ ಆಧರಿಸಿ ಸಂತ್ರಸ್ತನನ್ನ ಕರೆಸಿ ಮಾಹಿತಿ ಪಡೆದು ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.

    ಸಂತ್ರಸ್ತ ದೂರು: ಸೂರಜ್ ರೇವಣ್ಣ ನನಗೆ ಚುನಾವಣೆ ಸಂದರ್ಭದಲ್ಲಿ ಪರಿಚಯವಾಗಿದ್ರು. ನಾನು ಅವರ ತಮ್ಮ ಪ್ರಜ್ವಲ್ ರೇವಣ್ಣ ಪರ ಕೆಲಸ ಮಾಡಿದ್ದೇನೆ. ಆ ಸಂದರ್ಭ ನನ್ನ ನಂಬರ್‍ನ್ನ ಸೂರಜ್ ತೆಗೆದುಕೊಂಡಿದ್ದರು. ಜೂ.14 ರಂದು ಸೂರಜ್ ನನಗೆ ಮೆಸೇಜ್ ಮಾಡಿದ್ದರು. ಮೆಸೇಜ್‍ನಲ್ಲಿ ನನ್ನ ಬಗ್ಗೆ ಎಲ್ಲಾ ಮಾಹಿತಿ ಪಡೆದಿದ್ದರು. ನಂತರ ಜೂ.16 ರಂದು ಹೊಳೆನರಸೀಪುರ ತಾಲೂಕಿನ, ಗನ್ನೀಕಡ ತೋಟಕ್ಕೆ ಸಂಜೆ ಬರಲು ಹೇಳಿದ್ದರು. ನಾನು ಹೋದ ಸಂದರ್ಭ ಮನೆಯಲ್ಲಿ ಒಬ್ಬರೇ ಇದ್ದರು. ನನಗೆ ಇಷ್ಟವಿಲ್ಲದಿದ್ದರೂ ಲೈಂಗಿಕ ಕಿರುಕುಳ ನೀಡಿದ್ದಾರೆ. ಆ ಸಂದರ್ಭ ನನಗೆ ಪುರುಷರನ್ನು ಕಂಡರೆ ಆಸಕ್ತಿ ಮಹಿಳೆಯರನ್ನು ಕಂಡರೆ ಆಸಕ್ತಿ ಇಲ್ಲ ಎಂದು ಹೇಳಿ ನನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿರುವುದಾಗಿ ತಿಳಿದು ಬಂದಿದೆ.