Tag: Draupadi Murmu

  • ಬೆಳ್ತಂಗಡಿಯ ಅಮೈ ದೇವರಾವ್‌ಗೆ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ಪ್ರಶಸ್ತಿ ಪ್ರದಾನ

    ಬೆಳ್ತಂಗಡಿಯ ಅಮೈ ದೇವರಾವ್‌ಗೆ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ಪ್ರಶಸ್ತಿ ಪ್ರದಾನ

    ನವದೆಹಲಿ: ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್ (ICAR) ಆಯೋಜಿಸಿದ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡದ ಬೆಳ್ತಂಗಡಿಯ ಕಿಲ್ಲೂರಿನ ಅಮೈ ದೇವ ರಾವ್ (Deva Rao) ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu)  ಅವರು ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ಪ್ರಶಸ್ತಿ 2020-21 ನೀಡಿ ಪುರಸ್ಕರಿಸಿದರು.

    ರೈತರ ಹಕ್ಕುಗಳ ಕುರಿತ ಮೊದಲ ಜಾಗತಿಕ ವಿಚಾರ ಸಂಕಿರಣ (First Global Symposium on Farmers’ Rights) ದೆಹಲಿಯಲ್ಲಿ ಇಂದು ಆರಂಭಗೊಂಡಿದ್ದು ಸೆ.15ರವರೆಗೆ ನಡೆಯಲಿದೆ. ಈ ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ರಾಷ್ಟ್ರಪತಿಗಳು ಕೃಷಿಯಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ನೀಡಿ ಪುರಸ್ಕರಿಸಿದರು.   ಇದನ್ನೂ ಓದಿ: G20 ಶೃಂಗಸಭೆಗೆ ನಿಗದಿಗಿಂತ 300 ಪಟ್ಟು ಅಧಿಕ ಹಣ ಖರ್ಚು- ಆರೋಪ ತಳ್ಳಿ ಹಾಕಿದ ಕೇಂದ್ರ ಸರ್ಕಾರ

    ಅಮೈ ದೇವರಾವ್‌ ಅವರಿಗೆ ಈ ಹಿಂದೆ 2019ರಲ್ಲಿ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಪುರಸ್ಕರಿಸಿತ್ತು. ಈ ಕೃಷಿ ಕೆಲಸಕ್ಕೆ ʼತಳಿ ತಪಸ್ವಿʼ ಬಿರುದು ಸಿಕ್ಕಿದೆ.  ರಾಷ್ಟ್ರಮಟ್ಟದ ಪ್ರತಿಷ್ಠಿತ ʼಸೃಷ್ಟಿ ಸಮ್ಮಾನ್‌ʼ ಪ್ರಶಸ್ತಿಯೂ ದೊರಕಿದೆ.

    ಯಾರು ಅಮೈ ದೇವರಾವ್‌?
    ತಮ್ಮ ಐದು ಎಕರೆ ಗದ್ದೆಯಲ್ಲಿ 175ಕ್ಕೂ ಅಧಿಕ ಭತ್ತದ (P addy) ತಳಿಗಳನ್ನು ಬೆಳೆದಿರುವ ಸಾಧಕ.  ವರ್ಷಕ್ಕೆ ಎರಡು ಬೆಳೆ ಬೆಳೆಯುತ್ತಿದ್ದು,  ಪ್ರತಿಸಲವೂ 50 ಕ್ವಿಂಟಾಲ್‌ಗಿಂತಲೂಅಧಿಕ ಇಳುವರಿ ಸಿಗುತ್ತಿದೆ.

    ಹಿಂದೆ ಏಳು ಜೋಡು ಎತ್ತುಗಳಿಂದ ಗದ್ದೆಯನ್ನು ಹಸನು ಮಾಡಿ ಕೃಷಿ ಮಾಡುತ್ತಿದ್ದ ಇವರು 25 ವರ್ಷಗಳಿಂದ ಟಿಲ್ಲರ್ ಉಪಯೋಗಿಸಿಕೊಂಡು ಗದ್ದೆಯನ್ನು ಉಳುತ್ತಿದ್ದಾರೆ. ಒಂದೇ ಗದ್ದೆಯಲ್ಲಿ ಅನೇಕ ಬಗೆಯ ತಳಿಗಳನ್ನು ನಾಟಿ ಮಾಡುವ ದೇವರಾವ್ ಇದು ಯಾವ ತಳಿ ಎಂಬುದನ್ನು ಗುರುತಿಸುವ ಸಾಮರ್ಥ್ಯ ಹೊಂದಿದ್ದಾರೆ.

    ಹಿಂದೆ ನಾಲ್ಕು ಬೆಳೆಯನ್ನು ಬೆಳೆಯುತ್ತಿದ್ದ ದೇವರಾವ್ ಅವರು, ಕೆಲ ವರ್ಷಗಳಿಂದ ಎಣೆಲು ಮತ್ತು ಸುಗ್ಗಿ ಬೆಳೆಯನ್ನು ಬೆಳೆಯುತ್ತಿದ್ದಾರೆ. ಭತ್ತದ ವಿವಿಧ ತಳಿಗಳಲ್ಲೂ ದೀರ್ಘಾವಧಿ ಬೆಳೆ ಹಾಗೂ ಅಲ್ಪಾವಧಿ ಬೆಳೆಯನ್ನು ಮಾಡುತ್ತಿದ್ದಾರೆ.

    1988 ರಿಂದ ರಾಸಾಯನಿಕ ಬಳಕೆಗೆ ಸಂಪೂರ್ಣ ವಿದಾಯ ಹೇಳಿದ್ದಾರೆ. ಹಟ್ಟಿಯ ಗೊಬ್ಬರನ್ನು ಬಳಸುವ ಇವರು ಭತ್ತವನ್ನು ಮನೆಯಲ್ಲಿಯೇ ಒಣಗಿಸಿ ಸ್ವಂತ ಹಲ್ಲರಿನಲ್ಲಿ ಅಕ್ಕಿ ಮಾಡುತ್ತಾರೆ. ದೇವ ರಾವ್ ಮನೆಗೇ ಬಂದು ಜನರು ಅಕ್ಕಿ ಖರೀದಿಸುತ್ತಿರುವುದು ವಿಶೇಷ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬದಲಾಗುತ್ತಾ ದೇಶದ ಹೆಸರು – ‘ಇಂಡಿಯಾ’ ಬದಲಿಗೆ ‘ರಿಪಬ್ಲಿಕ್‌ ಆಫ್‌ ಭಾರತ್‌’ ಅಂತ ಮರುನಾಮಕರಣ?

    ಬದಲಾಗುತ್ತಾ ದೇಶದ ಹೆಸರು – ‘ಇಂಡಿಯಾ’ ಬದಲಿಗೆ ‘ರಿಪಬ್ಲಿಕ್‌ ಆಫ್‌ ಭಾರತ್‌’ ಅಂತ ಮರುನಾಮಕರಣ?

    – ಸಂಸತ್‌ನಲ್ಲಿ ನಿರ್ಣಯ ಮಂಡನೆಗೆ ಸರ್ಕಾರ ಸಜ್ಜು
    – ವಿಪಕ್ಷಗಳ ಒಕ್ಕೂಟಕ್ಕೆ ಠಕ್ಕರ್‌ ಕೊಡಲು ಕೇಂದ್ರ ಪ್ಲ್ಯಾನ್?

    ನವದೆಹಲಿ: ಬಿಜೆಪಿ (BJP) ಕೇಂದ್ರ ಸರ್ಕಾರವು ದೇಶದ ಹೆಸರನ್ನು `ಇಂಡಿಯಾ’ ಬದಲಿಗೆ `ರಿಪಬ್ಲಿಕ್‌ ಆಫ್‌ ಭಾರತ್‌’ (Republic Of Bharat) ಎಂದು ಮರುನಾಮಕರಣ ಮಾಡುವ ಹೊಸ ನಿರ್ಣಯವನ್ನು ಸಂಸತ್ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

    `ಇಂಡಿಯಾ’ (India) ಬದಲು ದೇಶದ ಹೆಸರನ್ನು `ರಿಪಬ್ಲಿಕ್‌ ಆಫ್‌ ಭಾರತ್‌’ ಎಂದು ಕರೆಯಬೇಕು ಎಂಬುದಾಗಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಲಹೆ ನೀಡಿದ್ದ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ನಿರ್ಣಯಕ್ಕೆ ಮುಂದಾಗಿದೆ ಎಂದು ಹೇಳಲಾಗಿದೆ. ಜಿ20 ಶೃಂಗಸಭೆಗೆ ರಾಷ್ಟ್ರಪತಿಗಳು ಗಣ್ಯರಿಗೆ ನೀಡಿದ ಆಹ್ವಾನ ಪತ್ರಿಕೆಯಲ್ಲಿ `ಪ್ರೆಸಿಡೆಂಟ್ ಆಫ್ ಇಂಡಿಯಾ’ ಬದಲಿಗೆ `ಪ್ರೆಸಿಡೆಂಟ್ ಆಫ್ ಭಾರತ್’ ಎಂದು ಉಲ್ಲೇಖಿಸಿದ ನಂತರ ಈ ಚರ್ಚೆ ಹುಟ್ಟಿಕೊಂಡಿದೆ.

    ಈ ನಡುವೆ ರಿಪಬ್ಲಿಕ್‌ ಆಫ್‌ ಭಾರತ್‌ ಎಂಬ ಪದವನ್ನು ಉಲ್ಲೇಖಿಸಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆ. “ರಿಪಬ್ಲಿಕ್‌ ಆಫ್‌ ಭಾರತ್‌ (ಭಾರತ್ ಗಣರಾಜ್ಯ) – ನಮ್ಮ ನಾಗರಿಕತೆಯು ಅಮೃತ ಕಾಲದ ಕಡೆಗೆ ಧೈರ್ಯದಿಂದ ಮುನ್ನಡೆಯುತ್ತಿರುವುದಕ್ಕೆ ಸಂತೋಷ ಮತ್ತು ಹೆಮ್ಮೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: 9 ವರ್ಷದಲ್ಲಿ ಒಂದು ದಿನವೂ ರಜೆ ಇಲ್ಲದೇ ಪ್ರಧಾನಿ ಮೋದಿ ಕೆಲಸ – 3,000 ಕಾರ್ಯಕ್ರಮಗಳಲ್ಲಿ ಭಾಗಿ

    ಜಿ20 ಸಭೆಗೆ ಬರುವ ಗಣ್ಯರಿಗೆ ಸೆಪ್ಟೆಂಬರ್ 9 ರಂದು ರಾಷ್ಟ್ರಪತಿ ಭವನದಲ್ಲಿ ಬೃಹತ್ ಔತಣಕೂಟ ಏರ್ಪಡಿಸಲಾಗಿದೆ. ಗಣ್ಯರಿಗೆ ನೀಡಿದ ಆಹ್ವಾನ ಪತ್ರಿಕೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರು `ಪ್ರೆಸಿಡೆಂಟ್ ಆಫ್ ಭಾರತ್’ ಎಂದು ತಮ್ಮ ಹುದ್ದೆಯನ್ನು ಉಲ್ಲೇಖಿಸಿದ್ದಾರೆ. ಈವರೆಗೆ ಪ್ರೆಸಿಡೆಂಟ್ ಆಫ್ ಇಂಡಿಯಾ ಎಂದು ರಾಷ್ಟ್ರಪತಿಗಳು ತಮ್ಮ ಹುದ್ದೆಯನ್ನು ಉಲ್ಲೇಖಿಸುತ್ತಿದ್ದರು.

    ಬಿಜೆಪಿ ಅನೇಕ ನಾಯಕರು ಇದಕ್ಕೆ ಬೆಂಬಲ ಸೂಚಿಸಿದ್ದರೆ, ದೇಶದ ಹೆಸರನ್ನೇ ಬದಲಾಯಿಸಲು ಸರ್ಕಾರ ಮುಂದಾಗಿದೆ ಎಂದು ಐಎನ್‌ಡಿಐಎ ಒಕ್ಕೂಟ ತೀವ್ರವಾಗಿ ಖಂಡಿಸಿದೆ. ಇದನ್ನೂ ಓದಿ: ಜಿ20 ಶೃಂಗಸಭೆಗೆ ಅಮೆರಿಕ ಅಧ್ಯಕ್ಷರ ಪ್ರವಾಸ – ಬೈಡನ್ ಪ್ರವಾಸಕ್ಕೂ ಮುನ್ನ ಜಿಲ್ ಬೈಡನ್‍ಗೆ ಕೊರೊನಾ ಸೋಂಕು

    ವಿಪಕ್ಷಗಳಿಗೆ ಠಕ್ಕರ್‌?
    ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಎನ್‌ಡಿಎ ಮೈತ್ರಿಕೂಟವನ್ನು ಮಣಿಸಲು ವಿಪಕ್ಷಗಳು ‘ಐಎನ್‌ಡಿಐಎ’ ಮೈತ್ರಿಕೂಟ ಮಾಡಿಕೊಂಡಿವೆ. ಹೆಸರು ‘ಇಂಡಿಯಾ’ ಎಂದು ಇರುವುದರಿಂದ ಮೈತ್ರಿಕೂಟಕ್ಕೆ ಠಕ್ಕರ್‌ ಕೊಡಲು, ದೇಶದ ಹೆಸರು ಮರುನಾಮಕರಣಕ್ಕೆ ಕೇಂದ್ರ ಮುಂದಾಗಿದೆ ಎಂಬ ಚರ್ಚೆಯೂ ನಡೆಯುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಿರಿಯ ನಟ ದಿ.ಎನ್.ಟಿ.ರಾಮರಾವ್ ಸ್ಮರಣಾರ್ಥ 100 ರೂಪಾಯಿ ನಾಣ್ಯ ರಿಲೀಸ್

    ಹಿರಿಯ ನಟ ದಿ.ಎನ್.ಟಿ.ರಾಮರಾವ್ ಸ್ಮರಣಾರ್ಥ 100 ರೂಪಾಯಿ ನಾಣ್ಯ ರಿಲೀಸ್

    ತೆಲುಗು ಚಿತ್ರರಂಗದ ದಂತಕಥೆ, ಮಾಜಿ ಸಿಎಂ ದಿವಗಂತ ಎನ್.ಟಿ.ರಾಮರಾವ್  (NT Rama Rao)ಅವರ ಜನ್ಮ ಶತಮಾನೋತ್ಸವ ನೆನಪಿಗಾಗಿ 100 ರೂಪಾಯಿ ಮುಖಬೆಲೆಯ ನಾಣ್ಯವನ್ನು (Coin) ಬಿಡುಗಡೆ ಮಾಡಲಾಗಿದೆ. ನವದೆಹಲಿಯ ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ನಾಣ್ಯವನ್ನು ರಿಲೀಸ್ ಮಾಡಿದ್ದಾರೆ.

    ಆಂಧ್ರ ಪ್ರದೇಶದಲ್ಲಿ ಎನ್.ಟಿ.ಆರ್ ಅವರ ಜನ್ಮ ಶತಮಾನೋತ್ಸವದನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇವುಗಳ ಜೊತೆಗೆ ನೂರು ರೂಪಾಯಿ ನಾಣ್ಯ ಕೂಡ ರಿಲೀಸ್ ಆಗಿದೆ. ಈ ಕಾರ್ಯಕ್ರಮದಲ್ಲಿ ಎನ್.ಟಿ.ಆರ್ ಪುತ್ರರು ಹಾಗೂ ಪುತ್ರಿಯರು ಹಾಜರಿದ್ದರು.

     

    ಕೇಂದ್ರ ಸರಕಾರ ರಿಲೀಸ್ ಮಾಡಿರುವ ನೂರು ರೂಪಾಯಿ ಮುಖಬೆಲೆಯ ನಾಣ್ಯವು, ಶೇಕಡಾ 50ರಷ್ಟು ಬೆಳ್ಳಿ, ಶೇಕಡಾ 40ರಷ್ಟು ತಾಮ್ರ ಮತ್ತು ಶೇಕಡಾ 5ರಷ್ಟು ಸತು ಇದೆ. ಒಂದು ಬದಿಯಲ್ಲಿ ‘ನಂದಮೂರಿ ತಾರಕ ರಾಮರಾವ್ ಶತಜಯಂತಿ’ ಎಂದು ಬರೆದಿದ್ದರೆ ಮತ್ತೊಂದು ಬದಿಯಲ್ಲಿ ಮೂರು ಸಿಂಹ ಹಾಗೂ ಅಶೋಕ ಚಕ್ರವಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಪಕ್ಷಗಳ ಬಹಿಷ್ಕಾರಕ್ಕೆ ದೊಡ್ಡಗೌಡರ ಡೋಂಟ್ ಕೇರ್ – ಸಂಸತ್ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲು ನಿರ್ಧಾರ

    ವಿಪಕ್ಷಗಳ ಬಹಿಷ್ಕಾರಕ್ಕೆ ದೊಡ್ಡಗೌಡರ ಡೋಂಟ್ ಕೇರ್ – ಸಂಸತ್ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲು ನಿರ್ಧಾರ

    ಬೆಂಗಳೂರು: ಮೇ 28 ರಂದು ಉದ್ಘಾಟನೆಗೊಳ್ಳಲಿರುವ ನೂತನ ಸಂಸತ್ ಭವನದ (New Parliament House) ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಾಜಿ ಪ್ರಧಾನಿ ದೇವೇಗೌಡರು (HD Deve Gowda) ಭಾಗಿಯಾಗಲು ನಿರ್ಧರಿಸಿದ್ದಾರೆ. ಈ ಮೂಲಕ ಕಾರ್ಯಕ್ರಮವನ್ನು ಬಹಿಷ್ಕರಿಸಿರುವ ವಿಪಕ್ಷಗಳ ನಿರ್ಧಾರಕ್ಕೆ ಅವರು ಡೋಂಟ್‍ಕೇರ್ ಎಂದಿದ್ದಾರೆ.

    ಗುರುವಾರ ಜೆಡಿಎಸ್ (JDS) ಸಭೆಯಲ್ಲಿ ಜಿಲ್ಲಾಧ್ಯಕ್ಷರು ಹಾಗೂ ಪಕ್ಷದ ಎಲ್ಲಾ ಶಾಸಕರ ಅಭಿಪ್ರಾಯವನ್ನು ಆಲಿಸಿದ್ದಾರೆ. ಈ ವೇಳೆ ಶಾಸಕರು ಹಾಗೂ ನಾಯಕರು ಕಾರ್ಯಕ್ರಮಕ್ಕೆ ಹೋಗುವಂತೆ ಸಲಹೆ ಕೊಟ್ಟಿದ್ದಾರೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಅಮುಲ್ ಹಾಲು ಸಂಗ್ರಹಿಸುವುದನ್ನು ನಿಲ್ಲಿಸಿ: ಅಮಿತ್‌ ಶಾಗೆ ಸ್ಟಾಲಿನ್‌ ಪತ್ರ

    ಸಲಹೆಯ ಹಿನ್ನಲೆಯಲ್ಲಿ ಅವರು ನೂತನ ಸಂಸತ್ ಭವನದ ಉದ್ಘಾಟನೆಯಲ್ಲಿ ಪಾಲ್ಗೊಳ್ಳುವ ತೀರ್ಮಾನ ಕೈಗೊಂಡಿದ್ದಾರೆ. ದೇವೇಗೌಡರ ಜೊತೆ ಹಾಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಭಾಗಿಯಾಗಲಿದ್ದಾರೆ.

    ಇದೇ ತಿಂಗಳ 28ರಂದು ಪ್ರಧಾನಿ ನರೇಂದ್ರ ಮೋದಿಯವರಿಂದ (Narendra Modi) ಹೊಸ ಸಂಸತ್ ಭವನ ಉದ್ಘಾಟನೆಗೊಳ್ಳಲಿದೆ. ಮೋದಿ ಉದ್ಘಾಟನೆಗೆ ಆಕ್ಷೇಪ ವ್ಯಕ್ತಪಡಿಸಿರುವ 19 ವಿಪಕ್ಷಗಳು ಈ ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಿವೆ. ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರು ಸಂಸತ್ ಕಟ್ಟಡವನ್ನು ಲೋಕಾರ್ಪಣೆ ಮಾಡಬೇಕೆಂದು ಆಗ್ರಹಿಸಿವೆ. ಇದನ್ನೂ ಓದಿ: New Parliament Building – ಕರ್ನಾಟಕ ವಿಧಾನಸೌಧದ ಉದಾಹರಣೆ ನೀಡಿ ಕಾಂಗ್ರೆಸ್‌ಗೆ ಸಂಬಿತ್‌ ಪಾತ್ರ ತಿರುಗೇಟು

  • ನನ್ನ ಸರ್ಕಾರ ಬಡವರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ತಿದೆ: ಮುರ್ಮು

    ನನ್ನ ಸರ್ಕಾರ ಬಡವರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ತಿದೆ: ಮುರ್ಮು

    ನವದೆಹಲಿ: ಇಂದಿನಿಂದ ಕೇಂದ್ರ ಬಜೆಟ್ ಅಧಿವೇಶನ (Central Budget Session) ಆರಂಭವಾದ ಹಿನ್ನೆಲೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಜಂಟಿ ಅಧಿವೇಶನ ಉದ್ದೇಶಿಸಿ ಮೊದಲ ಬಾರಿಗೆ ಮಾತನಾಡಿದರು. ತಮ್ಮ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಎರಡು ಅವಧಿಯ ಸರ್ಕಾರದ ಸಾಧನೆಗಳನ್ನು ಶ್ಲಾಘಿಸಿದರು.

    ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸುವುದರಿಂದ ಹಿಡಿದು ತ್ರಿವಳಿ ತಲಾಖ್ (Talaq) ರದ್ದುಗೊಳಿಸುವವರೆಗೆ, ನನ್ನ ಸರ್ಕಾರವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ. ನಮ್ಮ ಸರ್ಕಾರ ಭಯೋತ್ಪಾದನೆಯನ್ನು ಹತ್ತಿಕ್ಕಿದೆ, ಎಲ್‍ಒಸಿ ಮತ್ತು ಎಲ್‍ಎಸಿಯಲ್ಲಿ ಸೂಕ್ತ ಪ್ರತಿಕ್ರಿಯೆಯನ್ನು ನೀಡಿದೆ ಎಂದು ತಮ್ಮ ಭಾಷಣದಲ್ಲಿ ಹೇಳಿದರು.

    ಬಡತನದ ವಿಷಯದ ಕುರಿತು ಮಾತನಾಡಿದ ರಾಷ್ಟ್ರಪತಿ ಮುರ್ಮು, ‘ಗರೀಬೋ ಹಠಾವೋ’ ಇನ್ನು ಮುಂದೆ ಘೋಷಣೆಯಲ್ಲ, ನನ್ನ ಸರ್ಕಾರ ಬಡವರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮತ್ತು ಅವರನ್ನು ಸಬಲೀಕರಣಗೊಳಿಸಲು ಕೆಲಸ ಮಾಡುತ್ತಿದೆ. ಸೂಪರ್ ಸ್ಪೀಡ್ ಸ್ಕಿಲ್ ವರ್ಕ್, ಹೊಸ ತಂತ್ರಜ್ಞಾನ ಬಳಸಿಕೊಂಡು ಕೆಲಸ ಮಾಡುವ ಸರ್ಕಾರ ಸಿಕ್ಕಿದೆ. ಎರಡು ಬಾರಿ ಸ್ಥಿರ ಸರ್ಕಾರ ಆಯ್ಕೆ ಮಾಡಿದ ಜನರಿಗೆ ನಾನು ಧನ್ಯವಾದ ಸಲ್ಲಿಸುತ್ತೇನೆ ಎಂದರು.

    ಭ್ರಷ್ಟಾಚಾರವು ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ನ್ಯಾಯದ ದೊಡ್ಡ ಶತ್ರು, ಪರಾರಿಯಾಗಿರುವ ಆರ್ಥಿಕ ಅಪರಾಧಿಗಳ ಆಸ್ತಿಯನ್ನು ವಶಪಡಿಸಿಕೊಳ್ಳಲು ನನ್ನ ಸರ್ಕಾರವು ಪ್ಯುಗಿಟಿವ್ ಆರ್ಥಿಕ ಅಪರಾಧಿಗಳ ಕಾಯಿದೆಯನ್ನು ಜಾರಿಗೆ ತಂದಿದೆ. ಬೇನಾಮಿ ಆಸ್ತಿಗಳನ್ನು ಗುರುತಿಸಿ ವಶಪಡಿಸಿಕೊಳ್ಳುತ್ತಿದೆ. ಇದನ್ನೂ ಓದಿ: ಕಾಂಗ್ರೆಸ್ ಷಡ್ಯಂತ್ರಕ್ಕೆ ರಮೇಶ್ ಜಾರಕಿಹೊಳಿ ಬಲಿಯಾಗಿದ್ದಾರೆ: ರೇಣುಕಾಚಾರ್ಯ

    ಈ ಮೊದಲು ಸಮಸ್ಯೆಗಳನ್ನು ಇತ್ಯರ್ಥಪಡಿಸಲು ವಿಶ್ವದ ನೆರವು ಕೇಳುತ್ತಿತ್ತು, ಈಗ ಜಾಗತಿಕ ಸಮಸ್ಯೆಗಳ ಇತ್ಯರ್ಥಕ್ಕೆ ವಿಶ್ವ ಭಾರತದತ್ತ ನೋಡುತ್ತಿದೆ. ದೇಶದಲ್ಲಿ ಮೂಲಸೌಕರ್ಯಗಳು ಹೆಚ್ಚುತ್ತಿದೆ. ಬಸವೇಶ್ವರರ ಕಾಯಕವೇ ಕೈಲಾಸ ಮಾತಿನಂತೆ ನನ್ನ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಅಭಿನಂದಿಸಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕೇಂದ್ರ ಬಜೆಟ್ ಮೇಲೆ ಜಗತ್ತು ಕಣ್ಣಿಟ್ಟಿದೆ: ಮೋದಿ

    ಕೇಂದ್ರ ಬಜೆಟ್ ಮೇಲೆ ಜಗತ್ತು ಕಣ್ಣಿಟ್ಟಿದೆ: ಮೋದಿ

    ನವದೆಹಲಿ: ಜಾಗತಿಕ ಅನಿಶ್ಚಿತತೆಯ ನಡುವೆ ಭಾರತದ ಬಜೆಟ್ ಮೇಲೆ ಜಗತ್ತು ಕಣ್ಣಿಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದರು.

    ಈ ಬಾರಿಯ ಬಜೆಟ್ ಅಧಿವೇಶನಕ್ಕೂ (Parliament) ಮುನ್ನ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ನಾಳೆ (ಬುಧವಾರ) ಕೇಂದ್ರ ಬಜೆಟ್ ಮಂಡಿಸಲಿರುವ ವಿತ್ತ ಸಚಿವರು ಮಹಿಳೆಯಾಗಿದ್ದು, ಭಾರತ ಮಾತ್ರವಲ್ಲ, ಇಡೀ ವಿಶ್ವವೇ ನಮ್ಮ ಬಜೆಟ್ ಮೇಲೆ ಕಣ್ಣಿಟ್ಟಿದೆ. ನಿರ್ಮಲಾ ಸೀತಾರಾಮನ್ ಅವರು ಎಲ್ಲಾ ನಿರೀಕ್ಷೆಗಳನ್ನು ಪೂರೈಸುತ್ತಾರೆ ಎಂದು ಖಾತ್ರಿಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಸಂಸತ್ತಿನಲ್ಲಿ ಮೊದಲ ಬಾರಿಗೆ ಹೊಸ ಸಂಸದರು ಮಾತನಾಡುವಾಗ ಇಡೀ ಸಂಸತ್ತು ಅವರಿಗೆ ಗೌರವವನ್ನು ನೀಡಿ ವಿಶ್ವಾಸವನ್ನು ನೀಡುವ ವಾತಾವರಣವನ್ನು ಸೃಷ್ಟಿಸುವುದು ಸಂಸತ್ತಿನಲ್ಲಿ ಸಂಪ್ರದಾಯವಾಗಿದೆ. ಅದೇ ರೀತಿ ಇಂದಿನ ಭಾಷಣವು ರಾಷ್ಟ್ರಪತಿಯವರ ಮೊದಲ ಭಾಷಣವಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರು ಮೊದಲ ಬಾರಿಗೆ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದು ಬುಡಕಟ್ಟು ಸಮಾಜಕ್ಕೆ ಹೆಮ್ಮೆಯ ದಿನವಾಗಿದೆ ಎಂದು ಅಭಿಪ್ರಾಯ ಪಟ್ಟರು.

    ದೇಶ ಮೊದಲು ಎನ್ನುವುದೇ ನಮ್ಮೆಲ್ಲರ ಇರುವುದು ಉದ್ದೇಶವಾಗಿದೆ. ಸದನದಲ್ಲಿ ಪ್ರತಿ ವಿಷಯದ ಬಗ್ಗೆಯೂ ಉತ್ತಮವಾಗಿ ಚರ್ಚೆ ಮಾಡುತ್ತೇವೆ. ಎಲ್ಲ ಸಂಸದರು ಈ ಅಧಿವೇಶನದಲ್ಲಿ ಸಂಪೂರ್ಣ ಸಿದ್ಧತೆಯೊಂದಿಗೆ ಭಾಗವಹಿಸುತ್ತಾರೆ. ಈ ಅಧಿವೇಶನವು ನಮಗೆಲ್ಲರಿಗೂ ಮಹತ್ವದ್ದಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಹಿಂದೂ ಸಮಾಜವನ್ನು ಅಶ್ಲೀಲ ಎನ್ನುವರು ಹಿಂದೂಗಳ ಮತ ಬೇಡವೆಂದು ಹೇಳಲಿ: ಕಟೀಲ್

    ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಬಜೆಟ್‌ ಅನ್ನು ಮಂಡಿಸಲಿದ್ದು, ಈ ವರ್ಷ, ಮುಖ್ಯ ಆರ್ಥಿಕ ಸಲಹೆಗಾರ ವಿ. ಅನಂತ ನಾಗೇಶ್ವರನ್ ಅವರ ಮೇಲ್ವಿಚಾರಣೆಯಲ್ಲಿ ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಆರ್ಥಿಕ ವಿಭಾಗವು ಸಮೀಕ್ಷೆಯನ್ನು ಸಿದ್ಧಪಡಿಸಿದೆ. ಭಾರತದ ವಾರ್ಷಿಕ ಪೂರ್ವ-ಬಜೆಟ್ ಆರ್ಥಿಕ ಸಮೀಕ್ಷೆಯು 2023-24ರಲ್ಲಿ GDP ಬೆಳವಣಿಗೆಯನ್ನು 6-6.8% ಕ್ಕೆ ನಿಗದಿಪಡಿಸುವ ಸಾಧ್ಯತೆಯಿದೆ ಎಂದು ಮೂಲವನ್ನು ಉಲ್ಲೇಖಿಸಿದೆ. ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್‍ಗೆ ಜೀವ ಬೆದರಿಕೆ- ವ್ಯಕ್ತಿ ಅರೆಸ್ಟ್

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹೆದ್ದಾರಿಗಳಿಗೆ ಹೆಸರಿಡುವ ಸಂಪ್ರದಾಯ ಇಲ್ಲ – ನಿತಿನ್ ಗಡ್ಕರಿ ಸ್ಪಷ್ಟನೆ

    ಹೆದ್ದಾರಿಗಳಿಗೆ ಹೆಸರಿಡುವ ಸಂಪ್ರದಾಯ ಇಲ್ಲ – ನಿತಿನ್ ಗಡ್ಕರಿ ಸ್ಪಷ್ಟನೆ

    ರಾಮನಗರ: ಹೆದ್ದಾರಿಗಳಿಗೆ (National Highway) ಹೆಸರಿಡುವ ಸಂಪ್ರದಾಯ ಇಲ್ಲ. ನಾವು ಹೆದ್ದಾರಿಗಳಿಗೆ ನಂಬರ್ ಅಷ್ಟೇ ಕೊಡೋದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಸ್ಪಷ್ಟನೆ ನೀಡಿದರು.

    ಬೆಂಗಳೂರು-ಮೈಸೂರು ದಶಪಥ ರಸ್ತೆ (Bengaluru Mysuru Expressway) ವೈಮಾನಿಕ ಸಮೀಕ್ಷೆ ನಡೆಸಿದ ನಿತಿನ್ ಗಡ್ಕರಿ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಇದನ್ನೂ ಓದಿ: ಮುಂದಿನ ತಿಂಗಳು ಪ್ರಧಾನಿ, ರಾಷ್ಟ್ರಪತಿಗಳಿಂದ ದಶಪಥ ರಸ್ತೆ ಲೋಕಾರ್ಪಣೆ

    ಹೆದ್ದಾರಿಗೆ ಹೆಸರು ಇಡುವಂತೆ ಕೇಳಿದ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಅವರು, ಬೆಂಗಳೂರು-ಮೈಸೂರು ದಶಪಥ ರಸ್ತೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿಡುವಂತೆ ಒತ್ತಾಯ ಕೇಳಿಬರುತ್ತಿದೆ. ಮಾಜಿ ಸಿಎಂ ಎಸ್.ಎಂ ಕೃಷ್ಣ (SM Krishna) ಅವರು ಈ ಬಗ್ಗೆ ಮನವಿ ಸಲ್ಲಿಸಿದ್ದಾರೆ. ನಾನು ಕೂಡ ಆ ಪತ್ರವನ್ನ ನೋಡಿದ್ದೇನೆ. ಆದರೆ ಹೆದ್ದಾರಿಗಳಿಗೆ ಹೆಸರಿಡುವ ಸಂಪ್ರದಾಯ ಇಲ್ಲ. ನಾವು ಹೆದ್ದಾರಿಗೆ ನಂಬರ್ ಅಷ್ಟೇ ಕೊಡುತ್ತೇವೆ. ಈ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುತ್ತೇವೆ. ಬಳಿಕ ಪ್ರಧಾನಿಯವರ ಒಪ್ಪಿಗೆ ಪಡೆದು ಆಲೋಚನೆ ಮಾಡುತ್ತೇವೆ ಎಂದು ತಿಳಿಸಿದರು.

    ಫೆಬ್ರವರಿಯಲ್ಲಿ ದಶಪಥ ರಸ್ತೆ ಉದ್ಘಾಟನೆ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಫೆಬ್ರವರಿ ಅಂತ್ಯಕ್ಕೆ ಉದ್ಘಾಟನೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ದ್ರೌಪದಿ ಮುರ್ಮು ಅವರು ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಗಡ್ಕರಿ ತಿಳಿಸಿದರು. ಇದನ್ನೂ ಓದಿ: ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲು ಲಾಟರಿ ಮಾರಾಟ ಆರಂಭಿಸಿ – 15 ವರ್ಷಗಳ ಬಳಿಕ ರಾಜ್ಯದಲ್ಲಿ ಮತ್ತೆ ಲಾಟರಿ ಮಾರಾಟ?

    ಈ ಹೆದ್ದಾರಿಯು ಕರ್ನಾಟಕದ (Karnataka) ಆರ್ಥಿಕ ಪ್ರಗತಿಗೆ ಹೊಸ ಭಾಷ್ಯ ಬರೆಯಲಿದೆ. ಕೈಗಾರಿಕೆಗಳ ಪ್ರಗತಿಗೆ ನೂತನ ಹೆದ್ದಾರಿ ಅನುಕೂಲ ಆಗಲಿದೆ. ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಹಾಗೂ ಕೆಲ ಸಂಚಾರ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಈ ಹೆದ್ದಾರಿಯಿಂದ ಮೈಸೂರು (Mysuru) ಭಾಗದಲ್ಲಿ ಆರ್ಥಿಕ ಚಟುವಟಿಕೆ ಅಭಿವೃದ್ಧಿಗೂ ಸಹಕಾರಿಯಾಗಲಿದೆ. ಮಾಲಿನ್ಯ, ಟ್ರಾಫಿಕ್ ಜಾಮ್ ಜೊತೆ ಅಪಘಾತಗಳ ಸಂಖ್ಯೆ ಕ್ಷೀಣಿಸುವಂತೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

    ಹೊಸಕೋಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ರಾಮನಗರ ಡಾಬಸ್ ಪೇಟೆ ಸೇರಿದಂತೆ ಪ್ರಮುಖ ನಗರಗಳನ್ನ ಬೆಸೆಯಲು ವರ್ತುಲ ರಸ್ತೆ ನಿರ್ಮಾಣ ಮಾಡಲಾಗುತ್ತದೆ. ಪ್ರಯಾಣದ ಸಮಯ ತಗ್ಗಿಸುವುದು ನಮ್ಮ ಉದ್ದೇಶವಾಗಿದ್ದು ಉತ್ತರ ಕರ್ನಾಟಕದ ಪ್ರವಾಸೋದ್ಯಮ ಅಭಿವೃದ್ಧಿ ಉದ್ದೇಶದಿಂದ ಆ ಭಾಗದ ರಸ್ತೆಗಳನ್ನೂ ಸಹ ಅಭಿವೃದ್ಧಿಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮುಂದಿನ ತಿಂಗಳು ಪ್ರಧಾನಿ, ರಾಷ್ಟ್ರಪತಿಗಳಿಂದ ದಶಪಥ ರಸ್ತೆ ಲೋಕಾರ್ಪಣೆ

    ಮುಂದಿನ ತಿಂಗಳು ಪ್ರಧಾನಿ, ರಾಷ್ಟ್ರಪತಿಗಳಿಂದ ದಶಪಥ ರಸ್ತೆ ಲೋಕಾರ್ಪಣೆ

    ಬೆಂಗಳೂರು: ಮುಂದಿನ ಫೆಬ್ರವರಿ ತಿಂಗಳಿನಿಂದಲೇ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರಿಂದ ಬಹುನಿರೀಕ್ಷಿತ ಬೆಂಗಳೂರು – ಮೈಸೂರು ದಶಪಥ ರಸ್ತೆ (Bengaluru Mysuru Expressway) ಲೋಕಾರ್ಪಣೆಗೊಳ್ಳಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಮಹತ್ವದ ಘೋಷಣೆ ಮಾಡಿದ್ದಾರೆ.

    ರಾಷ್ಟ್ರಪತಿಗಳು ಹಾಗೂ ಪ್ರಧಾನಮಂತ್ರಿಗಳು ದಶಪಥ ರಸ್ತೆ ಉದ್ಘಾಟನೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ರೂಪುರೇಷೆಗೆ ದಿನಾಂಕ ನಿಗದಿ ಮಾಡುತ್ತೇವೆ. ಇನ್ಮುಂದೆ ಬೆಂಗಳೂರು-ಮೈಸೂರು ನಡುವಿನ ಪ್ರಯಾಣ 1:10 ಗಂಟೆಗೆ ಇಳಿಯಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಚಹಾದಲ್ಲಿ ಸಕ್ಕರೆ ಹಾಕಿಲ್ಲ ಎಂದು ಹೋಟೆಲ್ ಮಾಲೀಕನಿಗೆ ಚಾಕು ಇರಿದ

    ಮುಂದುವರಿದು ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ (Bengaluru Chennai Expressway) ಕಾರಿಡಾರ್ ಬಗ್ಗೆ ಗಡ್ಕರಿ ಮಾಹಿತಿ ನೀಡಿದ್ದಾರೆ. 17 ಸಾವಿರ ಕೋಟಿ ವೆಚ್ಚದಲ್ಲಿ ಬೆಂಗಳೂರು-ಚೆನ್ನೈ ಹೆದ್ದಾರಿ ನಿರ್ಮಾಣ ಆಗಲಿದೆ. ಇವತ್ತು ಕಾಮಗಾರಿಯ ಪರಿವೀಕ್ಷಣೆ ನಡೆಸಿದ್ದೇನೆ. ಮೂರು ಹಂತಗಳಲ್ಲಿ ಹೆದ್ದಾರಿ ಕಾಮಗಾರಿ ನಡೆಯಲಿದೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ಆಂಧ್ರ-ತಮಿಳುನಾಡು ನಡುವೆ ಎಕ್ಸ್ಪ್ರೆಸ್ ವೇ ನಿರ್ಮಾಣ ಆಗಲಿದೆ. ಕರ್ನಾಟಕದಲ್ಲಿ 5,069 ಕೋಟಿ ವೆಚ್ಚದಲ್ಲಿ ಮೂರು ಹಂತಗಳಲ್ಲಿ 71 ಕಿಮೀ ಕಾಮಗಾರಿ ನಡೆಯಲಿದೆ. ಈಗಾಗಲೇ ಶೇ.32 ರಿಂದ ಶೇ.36 ರಷ್ಟು ಕಾಮಗಾರಿ ಮುಗಿದಿದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಬಹುತೇಕ ಖಚಿತ- ಜ. 9ಕ್ಕೆ ಅಧಿಕೃತ ಘೋಷಣೆ?

    ಕಾಮಗಾರಿ ಪೂರ್ಣಗೊಂಡರೆ ಬೆಂಗಳೂರು-ಚೆನ್ನೈ ನಡುವೆ 2.15 ಗಂಟೆಯಲ್ಲಿ ಪ್ರಯಾಣಿಸಬಹುದು. ಗಂಟೆಗೆ 120 ಕಿ.ಮೀ ವೇಗದಲ್ಲಿ ಸಂಚಾರ ಮಾಡಬಹುದು. ಎಕ್ಸ್ಪ್ರೆಸ್‌ವೇ ಪೂರ್ಣಗೊಂಡರೆ 38 ಕಿ.ಮೀ ಕಡಿತವಾಗಲಿದೆ. ಸದ್ಯ ಬೆಂ-ಚೆನ್ನೆöÊ ಮಧ್ಯೆ ಪ್ರಯಾಣಿಸಲು 5 ಗಂಟೆ ಸಮಯ ಆಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜಾರ್ಖಂಡ್‍ನಲ್ಲಿ ನಿರುದ್ಯೋಗಿಗಳಿಗೆ ತಿಂಗಳಿಗೆ 1,000 ರೂ. ಭತ್ಯೆ

    ಜಾರ್ಖಂಡ್‍ನಲ್ಲಿ ನಿರುದ್ಯೋಗಿಗಳಿಗೆ ತಿಂಗಳಿಗೆ 1,000 ರೂ. ಭತ್ಯೆ

    ರಾಂಚಿ: ಜಾರ್ಖಂಡ್ ಕ್ಯಾಬಿನೆಟ್ (Jharkhand Cabinet) ನಿರುದ್ಯೋಗಿಗಳಿಗೆ (Unemployed) ಅನುಕೂಲವಾಗುವಂತೆ ರಾಜ್ಯೋತ್ಸವದ ದಿನವಾದ ನವೆಂಬರ್ 15 ರಂದು ಮುಖ್ಯಮಂತ್ರಿ ಸಾರಥಿ ಯೋಜನೆ ಸೇರಿದಂತೆ ನಾಲ್ಕು ಪ್ರಮುಖ ಯೋಜನೆಗಳನ್ನು ಪ್ರಾರಂಭಿಸಲು ಮತ್ತು ಜಾರಿಗೆ ತರಲು ಅನುಮೋದನೆ ನೀಡಿದೆ.

    ನವೆಂಬರ್ 15 ರಂದು ಕುಂತಿ ಮತ್ತು ರಾಂಚಿಯಲ್ಲಿ ಆಯೋಜಿಸಲಾದ ರಾಜ್ಯೋತ್ಸವ ದಿನಾಚರಣೆ ಸಮಾರಂಭಕ್ಕೆ ಆಗಮಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಸೂಚಿಸಿದ್ದು, ಎಲ್ಲಾ ಯೋಜನೆಗಳಿಗೂ ಚಾಲನೆ ನೀಡಲಿದ್ದಾರೆ. ಇದನ್ನೂ ಓದಿ: ಪೊಲೀಸ್ ಠಾಣೆಯಲ್ಲೇ ಕಳ್ಳತನ – ಯೂನಿಫಾರ್ಮ್, ಪಿಸ್ತೂಲ್ ಜೊತೆಗೆ ಕಿರಾತಕರು ಜೂಟ್

    ಜಾರ್ಖಂಡ್ ಸರ್ಕಾರ ರಾಜ್ಯದಲ್ಲಿರುವ ನಿರುದ್ಯೋಗಿ ಯುವಕರಿಗೆ ಉದ್ಯೋಗ ಸಿಗುವವರೆಗೆ ತಿಂಗಳಿಗೆ 1,000 ರೂಪಾಯಿ ಭತ್ಯೆ ನೀಡುವುದಾಗಿ ಘೋಷಿಸಿದೆ. ಈ ಯೋಜನೆಯಡಿಯಲ್ಲಿ ಮಹಿಳೆಯರು ಮತ್ತು ವಿಶೇಷಚೇತನರಿಗೆ ತಿಂಗಳಿಗೆ 1,500 ರೂ. ಭತ್ಯೆ ಒದಗಿಸಲಾಗುವುದು. ಇದನ್ನೂ ಓದಿ: ಭಯಂಕರವಾಗಿ ಆಡಿದ್ರೂ ಭಾರತ ಸೋಲೋದಕ್ಕೆ ಅರ್ಹವಾಗಿತ್ತು- ಅಖ್ತರ್ ಟೀಕೆ

    ಮತ್ತೊಂದು ಪ್ರಮುಖ ಯೋಜನೆಯೆಂದರೆ ಮುಖ್ಯಮಂತ್ರಿ ಶಿಕ್ಷಾ ಪ್ರೋತ್ಸಾಹನ್ ಯೋಜನೆಯಾಗಿದೆ. ವೈದ್ಯಕೀಯ, ಇಂಜಿನಿಯರಿಂಗ್, ಕ್ಲಾಟ್, ಹೋಟೆಲ್ ಮ್ಯಾನೇಜ್‍ಮೆಂಟ್ ಇತ್ಯಾದಿಗಳಿಗೆ ತಯಾರಾಗುತ್ತಿರುವ, ಆರ್ಥಿಕವಾಗಿ ದುರ್ಬಲರಾಗಿರುವ 8,000 ಆಕಾಂಕ್ಷಿಗಳು ಕೋಚಿಂಗ್‍ಗಾಗಿ ಹಣಕಾಸಿನ ನೆರವು ಪಡೆಯಲಿದ್ದಾರೆ. ದುರ್ಬಲ ಸಾಮಾಜಿಕ-ಆರ್ಥಿಕ ಹಿನ್ನೆಲೆಯಿಂದ ಬಂದವರಿಗೆ ಹಾಸ್ಟೆಲ್‍ನಲ್ಲಿ ಉಳಿದುಕೊಂಡಿರುವವರಿಗೆ ತಿಂಗಳಿಗೆ 2,500 ರೂ. ನೀಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ರಾಜ್ಯಪಾಲರನ್ನು ಕೂಡಲೇ ವಜಾಗೊಳಿಸಿ – ರಾಷ್ಟ್ರಪತಿಗಳಿಗೆ ಡಿಎಂಕೆ ಪತ್ರ

    ರಾಜ್ಯಪಾಲರನ್ನು ಕೂಡಲೇ ವಜಾಗೊಳಿಸಿ – ರಾಷ್ಟ್ರಪತಿಗಳಿಗೆ ಡಿಎಂಕೆ ಪತ್ರ

    ಚೆನ್ನೈ: ತಮಿಳುನಾಡು (Tamilnadu) ರಾಜ್ಯಪಾಲ ಆರ್.ಎನ್. ರವಿ (Governor RN Ravi) ಅವರನ್ನು ಕೂಡಲೇ ವಜಾಗೊಳಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ಅವರಿಗೆ ಪತ್ರದ ಮೂಲಕ ಆಡಳಿತರೂಢ ಪಕ್ಷ ಡಿಎಂಕೆ ಮನವಿ ಮಾಡಿದೆ.

    ರಾಜ್ಯಪಾಲ ಆರ್.ಎನ್.ರವಿ ಅವರು “ಶಾಂತಿಗೆ ಬೆದರಿಕೆ” ಆಗಿದ್ದು, ಪ್ರಜಾಸತ್ತಾತ್ಮಕವಾಗಿ ಚುನಾಯಿತಗೊಂಡಿರುವ ಸರ್ಕಾರಕ್ಕೆ ಮತ್ತು ಜನರ ಸೇವೆಗೆ ಅಡ್ಡಿಪಡಿಸಿದ್ದಾರೆ. ಕೋಮು ದ್ವೇಷವನ್ನು ಪ್ರಚೋದಿಸುತ್ತಾರೆ. ಹೀಗಾಗಿ ಅವರನ್ನು ಪದಚ್ಯುತಿಗೊಳಿಸಬೇಕು ಎಂದು ರಾಷ್ಟ್ರಪತಿಗಳಿಗೆ ಡಿಎಂಕೆ (DMK) ಪತ್ರದ ಮೂಲಕ ಮನವಿ ಸಲ್ಲಿಸಿದೆ.

    ಸಂವಿಧಾನ ಮತ್ತು ಕಾನೂನನ್ನು ಸಂರಕ್ಷಿಸಲು, ರಕ್ಷಿಸಲು ಮತ್ತು ಸಮರ್ಥಿಸಿಕೊಳ್ಳುತ್ತೇನೆ ಎಂಬ ಪ್ರಮಾಣ ವಚನವನ್ನು ರಾಜ್ಯಪಾಲ ಆರ್.ಎನ್.ರವಿ ಉಲ್ಲಂಘಿಸಿದ್ದಾರೆ. ಅಸೆಂಬ್ಲಿ ಅಂಗೀಕರಿಸಿದ ಮಸೂದೆಗಳಿಗೆ ಸಮ್ಮತಿ ನೀಡಲು ಅವರು ಅನಗತ್ಯವಾಗಿ ವಿಳಂಬ ಮಾಡುತ್ತಿದ್ದಾರೆ ಎಂದು ಪತ್ರದಲ್ಲಿ ಡಿಎಂಕೆ ಆರೋಪಿಸಿದೆ. ಇದನ್ನೂ ಓದಿ: ಬಳ್ಳಾರಿಯಲ್ಲಿ ಮರ್ಯಾದಾ ಹತ್ಯೆ- ಅನ್ಯ ಕೋಮಿನ ಯುವಕನ ಪ್ರೀತಿ ಮಾಡಿದ್ದಕ್ಕೆ ತಂದೆಯಿಂದ್ಲೇ ಮಗಳ ಕೊಲೆ

    ರಾಜ್ಯಪಾಲರ ಹೇಳಿಕೆಗಳು ಸರ್ಕಾರದ ಬಗ್ಗೆ ಅಸಮಾಧಾನವನ್ನು ಪ್ರಚೋದಿಸಲು ಪ್ರಯತ್ನಿಸುತ್ತಿರುವಂತೆ ಇದ್ದು, ಕೆಲವರು ಅವರು ದೇಶದ್ರೋಹಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎನ್ನುತ್ತಿದ್ದು, ಆರ್.ಎನ್. ರವಿ ಅವರು ಸಾಂವಿಧಾನಿಕ ಕಚೇರಿಗೆ ಅನರ್ಹರು, ಅವರನ್ನು ಕೂಡಲೇ ವಜಾಗೊಳಿಸಿ ಎಂದು ಡಿಎಂಕೆ ಆಗ್ರಹಿಸಿದೆ. ಇದನ್ನೂ ಓದಿ: ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿದ ಕೂಡಲೇ ಒಕ್ಕಲಿಗರು ಬಿಜೆಪಿ ಹಿಂದೆ ಹೋಗೋದಿಲ್ಲ: ಕುಮಾರಸ್ವಾಮಿ

    Live Tv
    [brid partner=56869869 player=32851 video=960834 autoplay=true]