Tag: Dravidian Ideology

  • ನಟ ವಿಜಯ್ ಬಿಜೆಪಿಯ ʻಸಿʼ ಟೀಂ – ತಮಿಳುನಾಡು ಡಿಎಂಕೆ ಸಚಿವ ಟೀಕೆ

    ನಟ ವಿಜಯ್ ಬಿಜೆಪಿಯ ʻಸಿʼ ಟೀಂ – ತಮಿಳುನಾಡು ಡಿಎಂಕೆ ಸಚಿವ ಟೀಕೆ

    ಚೆನ್ನೈ: 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಬೇಕೆಂಬ ಗುರಿ ಹೊಂದಿರುವ ತಮಿಳಗ ವೆಟ್ರಿ ಕಳಗಂ (TVK) ವಿರುದ್ಧ ಡಿಎಂಕೆ ಹಾಗೂ ಎಐಡಿಎಂಕೆ ನಾಯಕರು (AIDMK Leaders) ಮುಗಿಬಿದ್ದಿದ್ದಾರೆ. ವಿಜಯ್‌ ನಾಯಕತ್ವದ ಟಿವಿಕೆ ಪಕ್ಷವು ಬಿಜೆಪಿಯ ʻಸಿʼಟೀಂ ಎಂದು ಡಿಎಂಕೆ ಕರೆದರೆ, ಎಐಡಿಎಂಕೆ ಹೊಸ ಬಾಟಲಿಯಲ್ಲಿ ಹಳೆಯ ವೈನ್‌ ಮಿಕ್ಸ್‌ ಮಾಡಿದಂತಿದೆ ಎಂದು ಟೀಕಿಸಿದೆ.

    ತಮಿಳಿಗ ವೆಟ್ರಿಕಳಗಂ ಪಕ್ಷದ ತತ್ವ ಸಿದ್ಧಾಂತಗಳು ವಿವಿಧ ಪಕ್ಷಗಳ ಪ್ರಸ್ತುತ ರಾಜಕೀಯ ನಿಲುವುಗಳ ಕಾಕ್‌ಟೈಲ್ ಆಗಿದೆ ಎಂದು ಗುಡುಗಿರುವ ಎಐಎಡಿಎಂಕೆ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಟ ಕಮಲ್ ಹಾಸನ್ ಅವರ ಮಕ್ಕಳ ನೀಡಿ ಮೈಯಮ್ (MNM) ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದೆ.‌ ಇದನ್ನೂ ಓದಿ: 2026ರ ಚುನಾವಣೆಯಲ್ಲಿ ಬಹುದೊಡ್ಡ ಪಕ್ಷವಾಗಿ ಗೆಲ್ತೀವಿ – ದಳಪತಿ ವಿಜಯ್‌ ʻವಿಕ್ಟರಿʼ ಮಾತು

    ಭಾನುವಾರ ನಡೆದ ಪಕ್ಷದ ಮೊದಲ ರಾಜ್ಯಮಟ್ಟದ ಸಮಾವೇಶದಲ್ಲಿ ಮಾತನಾಡಿದ್ದ ವಿಜಯ್ (Thalapathy Vijay) ಅವರು, ಬಿಜೆಪಿ ಹಾಗೂ ಭ್ರಷ್ಟ ಡಿಎಂಕೆಯು ನಮ್ಮ ಸೈದ್ಧಾಂತಿಕ ಮತ್ತು ರಾಜಕೀಯ ವಿರೋಧಿಗಳು ಎಂದು ಘೋಷಿಸಿದ್ದರು. ಇದೇ ವೇಳೆ ಜಾತ್ಯತೀತತೆ ಮತ್ತು ‘ಸಾಮಾಜಿಕ ನ್ಯಾಯವು ಟಿವಿಕೆಯ ಸಿದ್ಧಾಂತಗಳು ಎಂದು ಪ್ರಕಟಿಸಿದರು. ದ್ರಾವಿಡವಾದ ಹಾಗೂ ತಮಿಳು ರಾಷ್ಟ್ರೀಯತೆಯನ್ನು ತಮಿಳುನಾಡಿನ ಎರಡು ಕಣ್ಣುಗಳು ಎಂದು ಬಣ್ಣಿಸಿದ್ದರು. ಟಿವಿಕೆಯ ಸಿದ್ಧಾಂತ ಮತ್ತು ನನ್ನ ನಾಯಕತ್ವ ಒಪ್ಪಿಕೊಳ್ಳುವ ರಾಜಕೀಯ ಪಕ್ಷಗಳೊಂದಿಗೆ ಅಧಿಕಾರ ಹಂಚಿಕೊಳ್ಳಲು ಸಿದ್ಧನಿದ್ದೇನೆ ಎಂದು ದಳಪತಿ ವಿಜಯ್‌ ಹೇಳಿದ್ದಾರೆ.

    ನಟ ವಿಜಯ್‌ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ತಮಿಳುನಾಡು ಕಾನೂನು ಸಚಿವ ರಘುಪತಿ, ವಿಜಯ್‌ ಅವರ ತಮಿಳಿಗ ವೆಟ್ರಿ ಕಳಗಂ ಪಕ್ಷವು. ಎ ಟೀಂ, ಬಿ ಟೀಂ ಅಲ್ಲ, ಬಿಜೆಪಿಯ ಸಿ ಟೀಂ. ದ್ರಾವಿಡ ಮಾದರಿಯ ಆಡಳಿತವನ್ನು ಜನರ ಮನಸ್ಸಿನಿಂದ ತೆಗೆದುಹಾಕಲು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ತೇಜಸ್ವಿ ಸೂರ್ಯ ಈಗ ಐರನ್ ಮ್ಯಾನ್ – 70.3 ರೇಸ್‌ನಲ್ಲಿ ವಿಜೇತರಾದ ಪ್ರಥಮ ಜನಪ್ರತಿನಿಧಿ!

    ಡಿಎಂಕೆ ನಾಯಕ ಇವಿಕೆಎಸ್ ಇಳಂಗೋವನ್ ಪ್ರತಿಕ್ರಿಯಿಸಿ, ನಮ್ಮ ಪಕ್ಷದ ನೀತಿಗಳನ್ನು ವಿಜಯ್ ಕಾಪಿ ಮಾಡಿ, ಹೊಸದಾಗಿ ಘೋಷಿಸಿದ್ದಾರೆ. ಅವರು (ವಿಜಯ್) ಏನು ಹೇಳಿದ್ದಾರೋ ಅದನ್ನು ನಾವು ಈಗಾಗಲೇ ಹೇಳಿದ್ದೇವೆ ಮತ್ತು ನಾವು ಅನುಸರಿಸುತ್ತಿದ್ದೇವೆ. ನಮ್ಮ ಪಕ್ಷವು (ಡಿಎಂಕೆ) ಜನರ ಸಮಸ್ಯೆಗಳಿಗಾಗಿ ನಿರಂತರವಾಗಿ ಹೋರಾಟ ನಡೆಸಿದೆ. ಆದರೆ, ವಿಜಯ್ ಅವರ ಪಕ್ಷವು ರಾಜಕೀಯಕ್ಕೆ ಪ್ರವೇಶಿಸಿದ ತಕ್ಷಣವೇ ಅಧಿಕಾರದಲ್ಲಿರಲು ಹಾತೊರೆಯುತ್ತಿದೆ. ಇದಲ್ಲದೇ, ಟಿವಿಕೆ ನಾಯಕರು ಡಿಎಂಕೆ ನಾಯಕರಂತೆ ಜೈಲಿಗೆ ಹೋಗಿ ಜನರಿಗಾಗಿ ಹೋರಾಡುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

    ಎಐಡಿಎಂಕೆ ವಕ್ತಾರ ಕೋವೈ ಸತ್ಯನ್‌ ಮಾತನಾಡಿ, ಡಿಎಂಕೆ, ಟಿವಿಕೆ ಸೇರಿದಂತೆ ಇತರ ಪಕ್ಷಗಳ ನಡುವಿನ ವ್ಯತ್ಯಾಸವೆಂದರೆ ನಾವು ಅವರಿಗಿಂತ ಹೆಚ್ಚು ಬಲಿಷ್ಠರಾಗಿದ್ದೇವೆ. ಜನರಿಂದ, ಜನರಿಗಾಗಿ, ಜನರಿಗೋಸ್ಕರವೇ ಕೆಲಸ ಮಾಡುತ್ತೇವೆ. ಹೊಸದಾಗಿ ರಾಜಕೀಯಕ್ಕೆ ಬಂದಿರುವ ವಿಜಯ್ ಅವರಿಗೆ ಅಭಿನಂದನೆಗಳು ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಸರ್ಕಾರದ ಮುಖ್ಯಸ್ಥರ ಭೇಟಿಯಾದ್ರೆ ಡೀಲ್ ಎಂದರ್ಥವಲ್ಲ: ಮೋದಿ ಭೇಟಿ ಬಗ್ಗೆ ಮೌನ ಮುರಿದ ಸಿಜೆಐ

    ಟಿವಿಕೆ ಪಕ್ಷದ ಸಿದ್ಧಾಂತವು ಇತರೆ ಪಕ್ಷಗಳ ಸಿದ್ಧಾಂತ ಮತ್ತು ಹೊಸ ಬಾಟಲಿಯಲ್ಲಿ ಹಳೆಯ ವೈನ್ ಮಿಕ್ಸ್‌ ಮಾಡಿದಂತಿದೆ. ತಮಿಳುನಾಡಿನ ಎಲ್ಲಾ ರಾಜಕೀಯ ಪಕ್ಷಗಳಿಂದ ತೆಗೆದುಕೊಂಡ ಕಾನ್ಸೆಲ್ ಸಿದ್ಧಾಂತವಾಗಿದೆ. ವಿಜಯ್ ಅವರು ಜಾತಿಗಣತಿ ಸೇರಿದಂತೆ ಹಲವು ಹಲವಾರು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಇದನ್ನು ಕಾರ್ಯರೂಪಕ್ಕೆ ತರಲು ನಾವು ಅವರಿಗೆ ಸಮಯ ನೀಡುತ್ತೇವೆ ಎಂದು ಸತ್ಯನ್ ತಿಳಿಸಿದ್ದಾರೆ.

  • 2026ರ ಚುನಾವಣೆಯಲ್ಲಿ ಬಹುದೊಡ್ಡ ಪಕ್ಷವಾಗಿ ಗೆಲ್ತೀವಿ – ದಳಪತಿ ವಿಜಯ್‌ ʻವಿಕ್ಟರಿʼ ಮಾತು

    2026ರ ಚುನಾವಣೆಯಲ್ಲಿ ಬಹುದೊಡ್ಡ ಪಕ್ಷವಾಗಿ ಗೆಲ್ತೀವಿ – ದಳಪತಿ ವಿಜಯ್‌ ʻವಿಕ್ಟರಿʼ ಮಾತು

    – ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ?

    ಚೆನ್ನೈ: ತಮಿಳುನಾಡಿನ ರಾಜಕಾರಣದಲ್ಲಿ ನಟ ಇಳಯ ದಳಪತಿ ವಿಜಯ್ (Thalapathy Vijay) ಸಂಚಲನ ಸೃಷ್ಟಿಸಿದ್ದಾರೆ. ವಿಲ್ಲುಪುರಂನ ವಿಕ್ರವಾಂಡಿಯಲ್ಲಿ `ತಮಿಳಿಗ ವೆಟ್ರಿ ಕಾಳಗಂʼ (Tamizhaga Vetri Kazhagam) ಪಕ್ಷದ ಮೊದಲ ಬೃಹತ್ ಸಮಾವೇಶ ನಡೆಯಿತು. ಮೆಗಾ ರ‍್ಯಾಲಿಯಲ್ಲಿ ಕಣ್ಣು ಹಾಯಿಸಿದ ದೂರವೂ ಜನಸಾಗರವೇ ಸೇರಿತ್ತು. `ನಮ್ಮ ನಾಡು’ ಹೆಸರಿನಲ್ಲಿ ನಡೆಸಿದ ಮೊದಲ ರಾಜಕೀಯ ಭಾಷಣದಲ್ಲೇ ವಿಜಯ್ ಅಬ್ಬರದ ಭಾಷಣ ಮಾಡಿದರು.

    ಇನ್ಮೇಲೆ ನಾನು..ನೀನು.. ಅವರು.. ಇವರು.. ಅನ್ನೋದಿಲ್ಲ. ಇನ್ನು ಮಂದೆ ತಮಿಳುನಾಡಿನಲ್ಲಿ `ನಾವುʼ ಆಗಿ ಹೋರಾಡೋಣ. ಕೇವಲ ವಿಜ್ಞಾನ ತಂತ್ರಜ್ಞಾನ ಬದಲಾದರೆ ಸಾಕಾ..? ಯಾಕೆ ರಾಜಕೀಯ.. ರಾಜಕಾರಣಿಗಳು ಬದಲಾಗಬಾರದಾ? ಇನ್ಮೇಲೆ ರಾಜಕಿಯವನ್ನು ಬದಲಾಯಿಸೋಣ.. ಅಭಿವೃದ್ಧಿ ರಾಜಕಾರಣ ಮಾಡೋಣ. ಪೆರಿಯಾರ್, ಕಾಮರಾಜ್ ಅವರ ಮಾರ್ಗದರ್ಶನ, ಮಹಾನ್ ನಾಯಕ ಅಂಬೇಡ್ಕರ್ ಸಂವಿಧಾನದ ಮಾರ್ಗದಲ್ಲಿ ನಡೆಯೋಣ ಅಂತ ಸಮಾಜಸುಧಾರಕಾರು ಹಾಗೂ ತಮಿಳುನಾಡಿನ ಹೋರಾಟಗಾರರನ್ನು ನೆನೆದು ವಿಜಯ್ ಭಾಷಣ ಮಾಡಿದರು.

    ಅಲ್ಲದೇ, ನಮ್ಮನ್ನು ನೋಡಿದವರಿಗೆ ಇವರಿಗೆ ವಿವೇಕ ಇದೆ ಅಂತ ಮಾತಾಡಬೇಕು. ಯಾವುದೇ ಕಾರಣಕ್ಕೂ ನಮ್ಮ ರಾಜಕೀಯದಲ್ಲಿ ರಾಜೀ ಅನ್ನೋ ಪದವೇ ಇಲ್ಲ. ಹೆಜ್ಜೆ ಮುಂದಿಟ್ಟಾಗಿದೆ, ಪರಿಣಾಮ ಎದುರಿಸಿ ಮುನ್ನಡೆಯೋಣ. ಹಿಂದೆ ಸರಿಯುವ ಮಾತೇ ಇಲ್ಲ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ತೇಜಸ್ವಿ ಸೂರ್ಯ ಈಗ ಐರನ್ ಮ್ಯಾನ್ – 70.3 ರೇಸ್‌ನಲ್ಲಿ ವಿಜೇತರಾದ ಪ್ರಥಮ ಜನಪ್ರತಿನಿಧಿ!

    ಭ್ರಷ್ಟಾಚಾರದ ವಿರುದ್ಧ ನಮ್ಮದು ಶೂನ್ಯ ಸಹಿಷ್ಣುತೆ. ನಾನು ಪಕ್ಕಾ ಪ್ರಾಕ್ಟಿಕಲ್, ಈಜೋಕೆ ಬರದವನು ಮೀನು ಹಿಡೀತಾನಾ ಅಂತ ಟೀಕಿಸ್ತಿದ್ದಾರೆ. ನಾವು ಮೀನು ಹಿಡಿದೇ ತೋರಿಸೋಣ. ಆಲ್ಟರ್‌ನೇಟಿವ್‌ ಪಾಲಿಟಿಕ್ಸ್ ಮಾತಿಲ್ಲ. ನಾನು ಎಕ್ಟ್ರಾ ಲಗೇಜ್ ಆಗಲು ಇಲ್ಲಿ ಬಂದಿಲ್ಲ. ನಮ್ಮ ನಾಡಿಗಾಗಿ ಎಕ್ಟ್ರಾ ಮಾಡಲು ಬಂದಿದ್ದೇನೆ. ಇಲ್ಲಿ ನೀವೆಲ್ಲಾ ಸೇರಿರೋದು ಹಣದಿಂದ ಅಲ್ಲ. ಒಂದು ಒಳ್ಳೇ ಕಾರಣಕ್ಕಾಗಿ ಸ್ವಯಂಪ್ರೇರಿತವಾಗಿ ಸೇರಿದ್ದೀರಿ. ನಾವೆಲ್ಲಾ ಒಳ್ಳೆಯದನ್ನು ಮಾಡಲು ಇರುವ ಸೈನಿಕರಿದ್ದಂತೆ. ಸೋಷಿಯಲ್ ಮೀಡಿಯಾದ ಟ್ರೋಲ್‌ಗೆಲ್ಲಾ ಅಂಜಲ್ಲ. ಅಂದ್ರು. 2026ರ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರದಲ್ಲಿ ನಿಲ್ತೇವೆ, ಬಹುದೊಡ್ಡ ಪಕ್ಷವಾಗಿ ಗೆಲ್ತೇವೆ ಅಂತ ವಿಜಯ ಹೇಳಿದ್ದಾರೆ. ಇದನ್ನೂ ಓದಿ: ವಕ್ಫ್‌ ಆಸ್ತಿ ವಿವಾದ | 1964-1974ರ ದಾಖಲೆ ಪರಿಶೀಲಿಸಿ ಕ್ರಮವಹಿಸಲು ಟಾಸ್ಕ್ ಫೋರ್ಸ್ ರಚನೆ