Tag: dresscode

  • ಚಿಕ್ಕಮಗಳೂರು ದೇವೀರಮ್ಮ ದೇವಾಲಯಕ್ಕೆ ಸ್ಕರ್ಟ್, ಮಿಡಿ, ಪ್ಯಾಂಟ್ ಹಾಕ್ಕೊಂಡು ಬರುವಂತಿಲ್ಲ

    ಚಿಕ್ಕಮಗಳೂರು ದೇವೀರಮ್ಮ ದೇವಾಲಯಕ್ಕೆ ಸ್ಕರ್ಟ್, ಮಿಡಿ, ಪ್ಯಾಂಟ್ ಹಾಕ್ಕೊಂಡು ಬರುವಂತಿಲ್ಲ

    – ದೇವೀರಮ್ಮನ ದೇಗುಲಕ್ಕೆ ಡ್ರೆಸ್ ಕೋಡ್ ಜಾರಿ, ಮೊಬೈಲ್ ಫೋನ್‌ಗೂ ನಿಷೇಧ

    ಚಿಕ್ಕಮಗಳೂರು: ದೇವಿರಮ್ಮನ ದೇಗುಲಕ್ಕೆ (Deviramma Temple) ಡ್ರೆಸ್‌ಕೋಡ್ (Dresscode) ಆದೇಶ ಜಾರಿಯಾಗಿದ್ದು, ಸಾಂಪ್ರದಾಯಿಕ ಉಡುಗೆಯಲ್ಲಿ ಆಗಮಿಸಲು ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನ ಆಡಳಿತ ಮಂಡಳಿ ಸೂಚನೆ ನೀಡಿದೆ.

    ಇನ್ನು ಮುಂದೆ ಚಿಕ್ಕಮಗಳೂರು (Chikkamagaluru) ತಾಲೂಕಿನ ಇತಿಹಾಸ ಪ್ರಸಿದ್ಧ ಬಿಂಡಿಗ ದೇವಿರಮ್ಮನ ದೇವಾಲಯದಲ್ಲಿ ಸ್ಕರ್ಟ್, ಮಿಡಿ, ಸ್ಲೀವ್‌ಲೆಸ್ ಡ್ರೆಸ್, ಪ್ಯಾಂಟ್, ಸಾಕ್ಸ್ ಹಾಕಿ ದೇವಾಲಯಕ್ಕೆ ಬರುವಂತಿಲ್ಲ. ದೇವಾಲಯದ ಆವರಣದೊಳಗೆ ಮೊಬೈಲ್ (Mobile) ಫೋನ್‌ಗೂ ನೀಷೇಧ ಹೇರಲಾಗಿದೆ. ದೀಪಾವಳಿ ವೇಳೆ ಲಕ್ಷಾಂತರ ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಪ್ರತಿವರ್ಷ ಲಕ್ಷಾಂತರ ಭಕ್ತರು ದೇವಿರಮ್ಮನ ಬೆಟ್ಟ ಹತ್ತುತ್ತಾರೆ. ಮಧ್ಯರಾತ್ರಿಯೇ ಪಿರಮಿಡ್ ಆಕಾರದ ಬೆಟ್ಟ ಹತ್ತಿ ಭಕ್ತಿ ಸಮರ್ಪಿಸುತ್ತಾರೆ. ಇದನ್ನೂ ಓದಿ: ‘ಗೃಹಜ್ಯೋತಿ’ ಗ್ಯಾರಂಟಿಗೆ ಇಂದು ಚಾಲನೆ; ಕಲಬುರಗಿಯಲ್ಲಿ ಸಿಎಂ ಉದ್ಘಾಟನೆ – ಖರ್ಗೆ ತವರಲ್ಲಿ ಸಿದ್ಧತೆ

    ಮಕ್ಕಳಿಂದ ವೃದ್ಧರವರೆಗೂ ಬೆಟ್ಟ ಹತ್ತಿ ಬೆಟ್ಟದ ತಾಯಿಗೆ ಕೈಮುಗಿಯುತ್ತಾರೆ. ಯುವಕ-ಯುವತಿಯರೂ ಬರುತ್ತಾರೆ. ಅವರಲ್ಲಿ ಪ್ರೇಮಿಗಳು ಸಹಾ ಇರುತ್ತಾರೆ. ಯಾರೇ ಬಂದರೂ ಸಾಂಪ್ರದಾಯಿಕ ಉಡುಗೆಯಲ್ಲೇ ಬರಬೇಕೆಂದು ದೇವಾಲಯ ಸೂಚನೆ ನೀಡಿದೆ. ದೇವಾಯದ ಆವರಣದಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಹಾಗೂ ರೀಲ್ಸ್‌ಗೆ ಅವಕಾಶವಿಲ್ಲ ಎಂದು ಸಂದೇಶ ನೀಡಿದೆ. ಇದನ್ನೂ ಓದಿ: ಚಂದ್ರನಿಗೆ ಹತ್ತಿರ.. ಹತ್ತಿರ..; ಇಂದು ಚಂದ್ರನ ಕಕ್ಷೆಗೆ ಇಸ್ರೋ ಬಾಹ್ಯಾಕಾಶ ನೌಕೆ – ಮುಂದೇನು?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಸ್ತ್ರಸಂಹಿತೆ ವಾರ್ ಮತ್ತೆ ಮುನ್ನೆಲೆಗೆ- ಚಾಮುಂಡಿ ದೇವಿ ದರ್ಶನಕ್ಕೆ ಡ್ರೆಸ್‍ಕೋಡ್‍ಗೆ ಆರ್ಡರ್

    ವಸ್ತ್ರಸಂಹಿತೆ ವಾರ್ ಮತ್ತೆ ಮುನ್ನೆಲೆಗೆ- ಚಾಮುಂಡಿ ದೇವಿ ದರ್ಶನಕ್ಕೆ ಡ್ರೆಸ್‍ಕೋಡ್‍ಗೆ ಆರ್ಡರ್

    ಮೈಸೂರು: ದೇವಸ್ಥಾನಗಳಲ್ಲಿ ಡ್ರೆಸ್‍ಕೋಡ್ (Dresscode in Temple) ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ (Chamundeshwari Temple) ಕ್ಕೆ ಆಗಮಿಸುವ ಭಕ್ತರಿಗೆ ಡ್ರೆಸ್‍ಕೋಡ್ ಕಡ್ಡಾಯ ಮಾಡಬೇಕೆಂಬ ಕೂಗು ಜೋರಾಗಿದೆ. ಈ ಬಗ್ಗೆ ಹಲವು ಮಹಿಳಾ ಸಂಘಟನೆಗಳು ಹಾಗೂ ಕನ್ನಡ ಪರ ಸಂಘಟನೆಗಳೂ ಕೂಡ ಧ್ವನಿಗೂಡಿಸಿವೆ.

    ರಾಜ್ಯದ ಹಾಗೂ ಹೊರ ರಾಜ್ಯದ ಪ್ರಮುಖ ದೇವಸ್ಥಾನಗಳ ಪ್ರವೇಶಕ್ಕೆ ವಸ್ತ್ರಸಂಹಿತೆ ಇದೆ. ಇದೇ ರೀತಿ ನಾಡದೇವತೆ ಚಾಮುಂಡಿ ದರ್ಶನಕ್ಕೂ ವಸ್ತ್ರಸಂಹಿತೆ ಜಾರಿ ಮಾಡುವಂತೆ ಆಗ್ರಹಿಸಲಾಗಿದೆ. ಚಾಮುಂಡಿ ದೇವಸ್ಥಾನದಲ್ಲಿ ಈವರೆಗೂ ಯಾವುದೇ ಡ್ರೆಸ್‍ಕೋಡ್ ಇರಲಿಲ್ಲ. ಹೀಗಾಗಿ ದೇವಾಲಯಕ್ಕೆ ಬರುವ ಭಕ್ತರು ತಮಗಿಷ್ಟ ಬಂದ ಉಡುಪು ಧರಿಸಿ ದೇವಸ್ಥಾನಕ್ಕೆ ಬರುತ್ತಿದ್ರು. ಇದೀಗ ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ವಸ್ತ್ರಸಂಹಿತೆ ಕಡ್ಡಾಯಗೊಳಿಸುವಂತೆ ಮೈಸೂರಿನ ಹಲವು ಮಹಿಳಾ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಮನವಿ ಮಾಡ್ತಿದ್ದಾರೆ. ಇದನ್ನೂ ಓದಿ: ಆರ್‌ಎಸ್‍ಎಸ್ ಭಾರತೀಯ ಸಂಸ್ಕೃತಿ, ಮೌಲ್ಯಗಳನ್ನು ಶ್ರೀಮಂತಗೊಳಿಸುತ್ತಿದೆ: ರವೀಂದ್ರ ಜಡೇಜಾ

    ದೇವಸ್ಥಾನಕ್ಕೆ ಬರುವ ಕೆಲವು ಮಹಿಳೆಯರು, ಯುವತಿಯರು ಅರೆಬರೆ ಬಟ್ಟೆ ಹಾಕಿಕೊಂಡು ಬರುತ್ತಾರೆ. ಪುರುಷರು ಅರ್ಧ ಚಡ್ಡಿ ಧರಿಸಿ ಬರುತ್ತಾರೆ. ಇದು ದೇವಸ್ಥಾನದ ಗೌರವ, ಪಾವಿತ್ರ್ಯತೆ ವಾತಾವರಣ ಹಾಳು ಮಾಡುತ್ತದೆ. ಹೀಗಾಗಿ ಮಹಿಳೆಯರಿಗೆ ದೇವಸ್ಥಾನ ಪ್ರವೇಶಕ್ಕೆ ಸೀರೆ ಅಥವಾ ಚೂಡಿದಾರ, ಪುರುಷರಿಗೆ ದೇವಸ್ಥಾನ ಪ್ರವೇಶಕ್ಕೆ ಪಂಚೆ ಅಥವಾ ಪ್ಯಾಂಟ್ ಕಡ್ಡಾಯ ಮಾಡಿ ವಸ್ತ್ರ ಸಂಹಿತೆ ಜಾರಿಗೆ ತರಬೇಕೆಂದು ಹೋರಾಟ ಆರಂಭಿಸಿದ್ದಾರೆ. ಇನ್ನು ಈ ಬಗ್ಗೆ ಸರ್ಕಾರಕ್ಕೆ, ಚಾಮುಂಡಿ ದೇವಸ್ಥಾನದ ಅಧಿಕಾರಿಗಳಿಗೆ ಮನವಿ ಕೊಟ್ಟು ವಸ್ತ್ರಸಂಹಿತೆ ಜಾರಿಗೆ ಆಗ್ರಹಿಸಿದ್ದಾರೆ. ಸರ್ಕಾರ ಇದಕ್ಕೆ ಸ್ಪಂದಿಸದೆ ಇದ್ದರೆ ಬೀದಿಗೆ ಇಳಿದು ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ.

    ಇತ್ತ ಮಹಿಳಾ ಹಾಗೂ ಕನ್ನಡ ಪರ ಸಂಘಟನೆಗಳ ಕೂಗಿಗೆ ಮೈಸೂರು ಸಂಸದ ಪ್ರತಾಪ್ ಸಿಂಹ (Pratap Simha) ಕೂಡ ದನಿಗೂಡಿಸಿದ್ದು ವಸ್ತ್ರಸಂಹಿತೆ ಅಗತ್ಯವಿದೆ ಎಂದು ಹೇಳುವ ಮೂಲಕ ಹೋರಾಟಕ್ಕೆ ಬಲ ತುಂಬಿದ್ದಾರೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ದೇವಾಸ್ಥಾನದ ಆಡಳಿಯ ಮಂಡಳಿ ಹಾಗೂ ಜಿಲ್ಲಾಡಳಿತ ಯಾವ ಕ್ರಮ ಕೈಗೊಳ್ಳಲಿದೆ ಅನ್ನೋದನ್ನ ಕಾದು ನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ವಿಧಾನಸಭೆಯಲ್ಲಿ ಡ್ರೆಸ್ ಕೋಡ್ ವಿಚಾರ ಪ್ರಸ್ತಾಪಿಸಿದ ಸಿದ್ದರಾಮಯ್ಯ

    ವಿಧಾನಸಭೆಯಲ್ಲಿ ಡ್ರೆಸ್ ಕೋಡ್ ವಿಚಾರ ಪ್ರಸ್ತಾಪಿಸಿದ ಸಿದ್ದರಾಮಯ್ಯ

    ಬೆಂಗಳೂರು: ವಿಧಾನಸಭೆಯಲ್ಲಿ ಪದವಿ ಕಾಲೇಜುಗಳಲ್ಲಿ ಡ್ರೆಸ್ ಕೋಡ್ ವಿಚಾರವನ್ನು ಸಿದ್ದರಾಮಯ್ಯ ಪ್ರಸ್ತಾಪಿಸಿದ್ರು. ಚಾಮರಾಜನಗರದಲ್ಲಿ ನಿನ್ನೆ ಅಶ್ವಥ್ ನಾರಾಯಣ್ ಡಿಗ್ರಿ ಕಾಲೇಜ್‍ಗಳಲ್ಲಿ ಸಮವಸ್ತ್ರ ಕಡ್ಡಾಯ ಅಲ್ಲ ಅಂತ ಹೇಳಿದ್ದಾರೆ. ಈ ಬಗ್ಗೆ ಸಿಎಂ ಸ್ಪಷ್ಟನೆ ಕೊಡ್ಬೇಕು. ಅದಕ್ಕೆ ಬದ್ಧರಾಗಿರಬೇಕು ಅಂದ್ರು.

    ಸಿಎಂ ಬೊಮ್ಮಾಯಿ ಉತ್ತರಿಸಿ, ಎಲ್ಲಿ ಡ್ರೆಸ್ ಕೋಡ್ ಇದೆ. ಅಲ್ಲಿ ನಿಯಮ ಫಾಲೋ ಮಾಡಿ ಅಂತ ಹೈಕೋರ್ಟ್ ಆದೇಶವೂ ಸ್ಪಷ್ಟವಾಗಿದೆ. ಉನ್ನತ ಶಿಕ್ಷಣ ಸಚಿವರು ಕ್ಲಿಯರ್ ಆಗಿ ಹೇಳಿದ್ದಾರೆ. ಅದಕ್ಕೆ ಮತ್ತೆ ಸ್ಪಷ್ಟೀಕರಣ ಅಗತ್ಯ ಇಲ್ಲ ಅಂದ್ರು. ಸಚಿವರು ಹೇಳಿದ್ದು ಸರಿ, ನೀವು ಸ್ಪಷ್ಟನೆ ಕೊಡಿ ಅಂತ ಸಿದ್ದರಾಮಯ್ಯ ಕೇಳಿದ್ರು. ಸಚಿವರೇ ಹೇಳಿದ್ಮೇಲೆ ನನ್ನ ಸ್ಪಷ್ಟನೆ ಅನಗತ್ಯ ಅಂತ ಸಿಎಂ ಉತ್ತರಿಸಿದ್ರು.

    ಇತ್ತ ಸದನದಲ್ಲಿ ಕಾಂಗ್ರೆಸ್ ಸದಸ್ಯರು ನಡೆದುಕೊಂಡ ರೀತಿ ಸರಿಯಲ್ಲ ಅಂತ ಸಿಎಂ ಬೊಮ್ಮಾಯಿ ಕಿಡಿಕಾರಿದ್ದಾರೆ. ರಾಷ್ಟ್ರಧ್ವಜವನ್ನು ರಾಜಕೀಯ ತೆವಲಿಗೆ ದುರ್ಬಳಕೆ ಮಾಡಿಕೊಳ್ತಿದ್ದಾರೆ. ಕಾನೂನಾತ್ಮಕವಾಗಿ ಈಶ್ವರಪ್ಪನವರು ಮಾತನಾಡಿರುವುದರಲ್ಲಿ ತಪ್ಪಿಲ್ಲ ಅಂದ್ರು. ಈಶ್ವರಪ್ಪ ಮಾತಾಡಿ, ನಾನು ಭಗವಾಧ್ವಜ ಹಾರಿಸಿದ್ದೇನೆ ಅಂತ ಹೇಳಿದ್ದರೆ ಈಗಲೇ ರಾಜೀನಾಮೆ ಕೊಡುತ್ತೇನೆ ಅಂದ್ರು.

    ಘಟನೆ ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ-ಡಿಕೆಶಿ, ಈಶ್ವರಪ್ಪ ಅವರನ್ನು ಅಮಾನತು ಮಾಡದಿದ್ದರೆ ನಾಳೆ ಬೆಳಗ್ಗೆ 11 ಗಂಟೆಗೆ ಅಹೋರಾತ್ರಿ ಧರಣಿ ಬಗ್ಗೆ ತೀರ್ಮಾನ ಮಾಡ್ತೇವೆ. ಇನ್ನು, ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯಿಸಿ, ಯಾವ ಪುರುಷಾರ್ಥಕ್ಕೆ ಧರಣಿ ಮಾಡ್ತಿದ್ದಾರೆ. ಓಟ್‍ಗಾಗಿ 2 ರಾಷ್ಟ್ರೀಯ ಪಕ್ಷಗಳು ರಾಜ್ಯವನ್ನೇ ಹಾಳು ಮಾಡಲು ಹೊರಟಿವೆ ಅಂತ ವಾಗ್ದಾಳಿ ನಡೆಸಿದ್ರು.

  • ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಡ್ರೆಸ್ ಕೋಡ್ ಜಾರಿಯಾಗಲಿದೆ: ವಿಎಚ್‍ಪಿ

    ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಡ್ರೆಸ್ ಕೋಡ್ ಜಾರಿಯಾಗಲಿದೆ: ವಿಎಚ್‍ಪಿ

    ಮಂಗಳೂರು: ದೇವಸ್ಥಾನಗಳಿಗೆ ಭಕ್ತರು ತಮ್ಮಿಷ್ಟದಂತೆ ಡ್ರೆಸ್ ತೊಟ್ಟು ಬರುತ್ತಾರೆ. ಆದರೆ ಇದು ಕೆಲವು ಮಂದಿಯ ಅಸಮಾಧಾನಕ್ಕೆ ಕಾರಣವಾಗಿದ್ದು, ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಡ್ರೆಸ್ ಕೋಡ್ ಜಾರಿಗೆ ಸರ್ಕಾರಕ್ಕೆ ತರಲು ಒತ್ತಾಯಿಸಿದ್ದಾರೆ. ಅದರಲ್ಲೂ ವಿಶ್ವ ಹಿಂದೂ ಪರಿಷತ್, ರಾಜ್ಯದ ನಂಬರ್ ಒನ್ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರುವಂತೆ ಪಣತೊಟ್ಟಿದೆ.

    ನೆರೆಯ ರಾಜ್ಯಗಳಾದ ಕೇರಳ ಮತ್ತು ಆಂಧ್ರದಲ್ಲಿರುವಂತೆ ರಾಜ್ಯದ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಕಡ್ಡಾಯಗೊಳಿಸಲು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಸರ್ಕಾರವನ್ನು ಆಗ್ರಹಿಸಿದೆ. ಇದಕ್ಕೆ ಪೂರ್ವಭಾವಿ ಎಂಬಂತೆ ರಾಜ್ಯದ ನಂಬರ್ ಒನ್ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸುವಂತೆ ಮುಜರಾಯಿ ಇಲಾಖೆಗೆ ಮನವಿ ಮಾಡಿದ್ದು, ಇಲಾಖೆ ಸಕಾರಾತ್ಮಕವಾಗಿ ಸ್ಪಂದಿಸಿದೆ.

    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೆಲ ಭಕ್ತರು ಅಸಭ್ಯವಾಗಿ ಡ್ರೆಸ್ ಹಾಕುವ ಬಗ್ಗೆ ಕೆಲ ಭಕ್ತ ಗಣ ಸ್ಥಳೀಯ ವಿಎಚ್‌ಪಿ ಮುಖಂಡರ ಬಳಿ ದೂರು ಕೊಟ್ಟಿದ್ದು, ಇದೇ ದೂರಿನ ಅನುಸಾರವಾಗಿ ವಿಎಚ್‍ಪಿ ಮತ್ತು ಬಜರಂಗ ದಳದ ಪ್ರಮುಖರು ದೇವಸ್ಥಾನದ ಕಾರ್ಯನಿರ್ವಹಣಾ ಅಧಿಕಾರಿಗೆ ವಸ್ತ್ರ ಸಂಹಿತೆ ಜಾರಿಗೆ ತರುವಂತೆ ಮನವಿ ಮಾಡಿದೆ.

    ಕೆಲವರ ಡ್ರೆಸ್ ಕೋಡ್ ನಿಂದ ಭಕ್ತರ ಮನಸ್ಸು ಚಂಚಲಗೊಳ್ಳುತ್ತಿದ್ದು, ಪುರುಷರು ಪಂಚೆ ಅಥವಾ ಧೋತಿ, ಮಹಿಳೆಯರು ಸೀರೆಯಲ್ಲಿ ದೇವಸ್ಥಾನಕ್ಕೆ ಬರಲು ಆದೇಶಿಸುವಂತೆ ಮನವಿ ಮಾಡಲಾಗಿದೆ ಎಂದು ವಿಎಚ್‍ಪಿಯ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದ್ದಾರೆ.

    ಕಾಂಗ್ರೆಸ್ ಮಾತ್ರ ವಿಎಚ್‍ಪಿ ಮನವಿ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಭಕ್ತರ ಒತ್ತಡ ಹೇರಿಕೆಯ ಕೆಲಸವಾಗುತ್ತಿದ್ದು, ಭಕ್ತರ ಸ್ವಾತಂತ್ರ್ಯಕ್ಕೆ ಬಿಟ್ಟು ಬಿಡಬೇಕು. ಸರ್ಕಾರ ದೇವಸ್ಥಾನಗಳಲ್ಲಿ ಯಾವುದೇ ಹಸ್ತಕ್ಷೇಪ ಮಾಡದೆ ಭಕ್ತರು ಈ ಹಿಂದೆ ಬರುತ್ತಿದ್ದಂತೆಯೇ ಮುಂದುವರಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ.

    ಈ ಗೊಂದಲ ಬಗ್ಗೆ ಸರ್ಕಾರ ಯಾವುದೇ ನಿರ್ಧಾರಕ್ಕೆ ಬರಲಿಲ್ಲ. ಆದರೆ ಹಲವು ದೇವಸ್ಥಾನಗಳಿಂದ ವಸ್ತ್ರ ಸಂಹಿತೆ ಜಾರಿಗೊಳಿಸುವ ಬಗ್ಗೆ ಮನವಿಗಳು ಬಂದಿದ್ದು, ಧಾರ್ಮಿಕ ಪರಿಷತ್ ಸಭೆಯಲ್ಲಿ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುವುದಾಗಿ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯಿಸಿದ್ದಾರೆ. ಆದರೆ ಸರ್ಕಾರ ಭಕ್ತರಿಗೆ ವಸ್ತ್ರ ಸಂಹಿತೆಯ ನಿಯಮ ವಿಧಿಸುತ್ತಾ ಅಥವಾ ಭಕ್ತರ ಇಷ್ಟಾನುಸಾರವಾಗಿ ಬಿಟ್ಟುಕೊಡುತ್ತಾ ಅನ್ನೋದೇ ಸದ್ಯದ ಕುತೂಹಲವಾಗಿದೆ.

  • ಅಧಿವೇಶನದಲ್ಲಿಂದು ಬರದ ಚರ್ಚೆ- ಸರ್ಕಾರದ ತರಾಟೆಗೆ ವಿಪಕ್ಷಗಳು ಸಜ್ಜು

    – ಕ್ಲಬ್ ಡ್ರೆಸ್‍ಕೋಡ್ ಬಗ್ಗೆ ವರದಿ ಮಂಡನೆ

    ಬೆಂಗಳೂರು: ವಿಧಾನಸಭೆ ಅಧಿವೇಶನದ ಎರಡನೇ ದಿನವಾದ ಇವತ್ತು ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆ ನಡೆಯಲಿದೆ. ಪ್ರತಿಪಕ್ಷ ಬಿಜೆಪಿ ವಂದನಾರ್ಪಣೆ ನಿರ್ಣಯದ ಚರ್ಚೆ ವೇಳೆ ಸರ್ಕಾರದ ವಿರುದ್ಧ ಅಸ್ತ್ರ ಪ್ರಯೋಗಿಸಲು ನಿರ್ಧರಿಸಿದೆ.

    ಬರ ಪರಿಹಾರ ಅಸಮರ್ಪಕ ನಿರ್ವಹಣೆ, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಅಂತಾ ಹಾಗೂ ಐಟಿ ದಾಳಿ ವಿಚಾರಗಳನ್ನು ಮುಂದಿಟ್ಟುಕೊಂಡು ಸರ್ಕಾರದ ಮೇಲೆ ಸವಾರಿ ನಡೆಸಲು ಬಿಜೆಪಿ ಸಿದ್ಧತೆ ನಡೆಸಿದೆ.

    ಈ ನಡುವೆ ಕಲಾಪದಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಕ್ಲಬ್‍ಗಳ ಕಾರ್ಯಚಟುವಟಿಕೆಗಳು ಮತ್ತು ನಿಯಂತ್ರಣದ ಅಧ್ಯಯನದ ಸಮಿತಿ ವರದಿಯನ್ನ ಅಧ್ಯಕ್ಷ ಎನ್.ಎ.ಹ್ಯಾರಿಸ್ ಮಂಡಿಸಲಿದ್ದಾರೆ. ಕ್ಲಬ್‍ಗಳ ಡ್ರೆಸ್‍ಕೋಡ್‍ಗೆ ಕಡಿವಾಣ, ಅನಧಿಕೃತ ಬಾರ್ ಕೌಂಟರ್‍ಗಳ ಮೇಲೆ ಕಡಿವಾಣ ಸೇರಿದಂತೆ ಹಲವು ಪ್ರಮುಖ ಶಿಫಾರಸುಗಳನ್ನು ಮಾಡುವ ಸಾಧ್ಯತೆ ಇದೆ.

     

  • ಶಿವಮೊಗ್ಗದ ಕಾಲೇಜಿನಲ್ಲಿ ಬುರ್ಖಾ ವಿವಾದ- ಕೇಸರಿ ಶಾಲು ಧರಿಸಿ ಬರ್ತಿರೋ ವಿದ್ಯಾರ್ಥಿಗಳು

    ಶಿವಮೊಗ್ಗ: ಮಲೆನಾಡಿನ ಶಿಕ್ಷಣ ಸಂಸ್ಥೆಗಳಿಗೂ ವಸ್ತ್ರಸಂಹಿತೆ ವಿವಾದ ಕಾಲಿಟ್ಟಿದೆ. ಕುವೆಂಪು ವಿವಿಯ ಸಹ್ಯಾದ್ರಿ ಕಾಲೇಜು ಕ್ಯಾಂಪಸ್ ನಲ್ಲಿ ಬುರ್ಖಾ ವಿವಾದ ಆರಂಭಗೊಂಡಿದೆ.

    ಕಾಲೇಜಿನಲ್ಲಿ ಇದೂವರೆಗೂ ಸಮವಸ್ತ್ರ ಕಡ್ಡಾಯವಾಗಿತ್ತು. ಆದರೆ ಕೆಲವರು ಶಾಲಾ ಕೊಠಡಿಯೊಳಗೆ ಬುರ್ಖಾ ಧರಿಸಿ ಬರುತ್ತಿದ್ದರು. ಇದನ್ನು ಖಂಡಿಸಿ ಗುರುವಾರದಂದು ಕೆಲ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು. ಸಂಜೆ ವೇಳೆ ವಿವಿ ಕುಲಸಚಿವ ಭೋಜಾನಾಯ್ಕ ಪತ್ರಿಕಾ ಹೇಳಿಕೆ ನೀಡಿ, ಕ್ಯಾಂಪಸ್ ನಲ್ಲಿ ಸಮವಸ್ತ್ರ ಕಡ್ಡಾಯವಿಲ್ಲ. ಆದರೆ, ಐಡಿ ಕಾರ್ಡ್ ಕಡ್ಡಾಯ ಎಂದು ತಿಳಿಸಿದ್ದರು. ಇದು ವಿದ್ಯಾರ್ಥಿಗಳ ಇನ್ನಷ್ಟು ಕೆರಳಿಸಿದೆ.

    ಸಾವಿರಾರು ರೂ. ವೆಚ್ಚ ಮಾಡಿ ಸಮವಸ್ತ್ರ ಕೊಂಡಿದ್ದೇವೆ. ಈಗ ಸಮವಸ್ತ್ರ ಕಡ್ಡಾಯವಿಲ್ಲ ಎನ್ನುತ್ತಿದ್ದಾರೆ. ಕ್ಯಾಂಪಸ್ ನಲ್ಲಿ ಬುರ್ಖಾ ನಿಷೇಧಿಸುವ ಬದಲು ಸಮವಸ್ತ್ರವನ್ನೇ ರದ್ದು ಮಾಡಿದ್ದಾರೆ. ತುಘಲಕ್ ದರ್ಬಾರ್ ಮಾಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

    ಇಂದು ಕೂಡ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬರುತ್ತಿದ್ದಾರೆ. ಕಾಲೇಜು ಆವರಣದಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.