Tag: Drinking alcohol

  • ಮದ್ಯಪಾನ ಮಾಡಿ ಒಂದೇ ವಾರದಲ್ಲಿ ಐವರ ಸಾವು – ಗ್ರಾಮಸ್ಥರಲ್ಲಿ ಮೂಡಿದ ಆತಂಕ

    ಮದ್ಯಪಾನ ಮಾಡಿ ಒಂದೇ ವಾರದಲ್ಲಿ ಐವರ ಸಾವು – ಗ್ರಾಮಸ್ಥರಲ್ಲಿ ಮೂಡಿದ ಆತಂಕ

    ಮಡಿಕೇರಿ: ಆ ಊರಿನಲ್ಲಿ ಬಹುತೇಕ ಜನರು ಕೂಲಿ ಕಾರ್ಮಿಕರೇ. ದಿನ ನಿತ್ಯ ಕೆಲಸ ಮಾಡಿ ದುಡಿದ ಹಣದಲ್ಲಿ ಮದ್ಯಪಾನ (Drinking Alcohol) ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಆದರೆ ಕಳೆದ 1 ವಾರದಲ್ಲಿ ಮದ್ಯಪಾನ ಮಾಡಿ ಐವರು ಮೃತಪಟ್ಟಿದ್ದು ಊರಿನ ಜನರು ಇದೀಗ ಆತಂಕಕ್ಕೆ ಒಳಗಾಗಿದ್ದಾರೆ.

    ಈ ಘಟನೆ ಕೊಡಗು (Kodagu) ಜಿಲ್ಲೆಯ ಕುಶಾಲನಗರ ತಾಲೂಕಿನ ಹಾರಂಗಿ ಜಲಾಶಯದ ಮುಂಭಾಗದ ಗ್ರಾಮದಲ್ಲಿ ನಡೆದಿದೆ. ಈ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಡಿಮೆ ಬೆಲೆಯ ಮದ್ಯವನ್ನು ತಂದು ಇಲ್ಲಿರುವ ಕೂಲಿ ಕಾರ್ಮಿಕರಿಗೆ ದುಪ್ಪಟ್ಟು ಹಣಕ್ಕೆ ಮಾರಾಟ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಹಾಸನ ಜಿಲ್ಲೆಯಿಂದ ಕಡಿಮೆ ಬೆಲೆಗೆ ಮದ್ಯವನ್ನು ತಂದು ಈ ಊರಿನ ಕೆಲವು ಮನೆಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಬಾರ್‌ಗಳಲ್ಲಿ ಮದ್ಯ ಮಾರಾಟ ಮಾಡಲು ಸಮಯ ನಿಗದಿ ಇರುತ್ತದೆ. ಆದರೆ ಈ ಗ್ರಾಮದಲ್ಲಿ ಹಗಲು ರಾತ್ರಿ ಎನ್ನದೇ ಅನಧಿಕೃತವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.

    ಇದೀಗ ಒಂದೇ ವಾರದಲ್ಲಿ ಐವರು ಮೃತಪಟ್ಟ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅಲ್ಲಿನ ದೇವಾಲಯ ಮುಂಭಾಗದ ಹಲವು ಮನೆಗಳಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ಹಾರಂಗಿ ಪೋಲಿಸರಿಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿದ ಪೊಲೀಸರು ಮದ್ಯ ಮಾರಾಟ ಮಾಡುವ ಮನೆಗಳ ಮೇಲೆ ದಾಳಿ ನಡೆಸಿ ಮದ್ಯ ಮಾರಾಟ ಮಾಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಅನಧಿಕೃತವಾಗಿ ಮಾರಾಟ ಮಾಡಲು ಅವಕಾಶ ಇಲ್ಲ ಎಂದು ಹೇಳಿದ್ದಾರೆ. ಗ್ರಾಮದಲ್ಲಿ ಈಗಲೂ ಅನೇಕ ಮನೆಗಳಲ್ಲಿ ಅನಧಿಕೃತವಾಗಿ ಮದ್ಯ ಮಾರಾಟ ಮಾಡಲು ಕೆಲ ಜನರು ಮುಂದಾಗಿದ್ದಾರೆ. ಕೂಲಿ ಕಾರ್ಮಿಕರು ತಮ್ಮ ಮನೆಗಳ ಸಮೀಪವೇ ಮದ್ಯ ಸಿಗುವುದರಿಂದ ಯಾವ ಬ್ರ್ಯಾಂಡ್ ಎಂಬುವುದನ್ನು ನೋಡದೇ ಕಡಿಮೆ ಬೆಲೆಯ ಮದ್ಯ ಸೇವಿಸಿ ಸಾವನ್ನಪ್ಪುತ್ತಿದ್ದಾರೆ. ಇದನ್ನೂ ಓದಿ: ತಾಯಿಗೆ ದ್ರೋಹ ಮಾಡಿದ ಬಾಬುರಾವ್ ಚಿಂಚನಸೂರು – ಗಿರೀಶ್ ಮಟ್ಟಣ್ಣನವರ್

    ಇದೀಗ ಮದ್ಯ ಸೇವಿಸಿ ಐವರು ಸಾವನ್ನಪ್ಪಿರುವುದಕ್ಕೆ ಸಂಬಂಧಪಟ್ಟ ಇಲಾಖೆಯವರು ಭೇಟಿ ನೀಡಿ ಅನಧಿಕೃತವಾಗಿ ಮದ್ಯ ಮಾರಾಟ ಮಾಡುವವರ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ. ಒಟ್ಟಿನಲ್ಲಿ ಒಂದೇ ವಾರದಲ್ಲಿ ಕಡಿಮೆ ಬೆಲೆಯ ಮದ್ಯ ಸೇವಿಸಿ ಕೂಲಿ ಕಾರ್ಮಿಕರು ಬಲಿಯಾಗಿರುವುದಕ್ಕೆ ಇನ್ನಾದರೂ ಇಲಾಖೆಯವರು ಗ್ರಾಮಕ್ಕೆ ತೆರಳಿ ಕಾನೂನು ರೀತಿಯ ಕ್ರಮ ಕೈಗೊಳ್ಳುತ್ತಾರೋ ಎನ್ನುವುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: H3N2 ಇನ್‌ಫ್ಲುಯೆಂಜಾ ಭೀತಿ ಮಧ್ಯೆ ಹೆಚ್ಚುತ್ತಿದೆ ಕೋವಿಡ್ ಸೋಂಕಿತರ ಸಂಖ್ಯೆ

  • ಮದ್ಯ ಕುಡಿದು ಸತ್ತವರಿಗೆ ಪರಿಹಾರ ಕೊಡಲ್ಲ – ಸಿಎಂ ನಿತೀಶ್ ಕುಮಾರ್

    ಮದ್ಯ ಕುಡಿದು ಸತ್ತವರಿಗೆ ಪರಿಹಾರ ಕೊಡಲ್ಲ – ಸಿಎಂ ನಿತೀಶ್ ಕುಮಾರ್

    ಪಾಟ್ನಾ: ಮದ್ಯ (Liquor) ಕುಡಿದು ಸತ್ತವರಿಗೆ (ಸಂತ್ರಸ್ತ ಕುಟುಂಬಕ್ಕೆ) ಯಾವುದೇ ಪರಿಹಾರ ಕೊಡುವುದಿಲ್ಲ ಎಂದು ಬಿಹಾರದ (Bihar) ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಹೇಳಿದ್ದಾರೆ.

    ಅವರಿಂದು ವಿಧಾನಸಭೆಯನ್ನುದ್ದೇಶಿಸಿ (Bihar Assembly) ಮಾತನಾಡುತ್ತಾ, ಬಿಹಾರದ ಸರನ್ ಜಿಲ್ಲೆಯಲ್ಲಿ ಕಳ್ಳ ಬಟ್ಟಿ ಸೇವಿಸಿ 53 ಮಂದಿ ಸಾವನ್ನಪ್ಪಿದ ಘಟನೆಯನ್ನ ಉಲ್ಲೇಖಿಸಿದರು. ನಾವು ಮನವಿ ಮಾಡುತ್ತಲೇ ಇದ್ದೇವೆ, ಕುಡಿತವು ನಿಮಗೆ ಒಳ್ಳೆಯದನ್ನ ತಂದುಕೊಡಲ್ಲ ಎಂದು ಹೇಳುತ್ತಲೇ ಇದ್ದೇವೆ. ಆದರೂ ಕುಡಿದು ಸಾಯುತ್ತೀರಿ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಚೀನಾ-ಭಾರತ ಗಡಿ ಸಂಘರ್ಷ – ಚೀನಾ ಯಾಂಗ್‌ಟ್ಸೆ ಪ್ರದೇಶವನ್ನೇ ಟಾರ್ಗೆಟ್‌ ಮಾಡೋದೇಕೆ?

    ಇದೇ ವೇಳೆ `ಜೊ ಪಿಯೇಗಾ ವೋ ಮರೇಗಾ (ಯಾರು ಕುಡಿಯುತ್ತಾರೋ ಅವರು ಸಾಯುತ್ತಾರೆ)’ ಎಂಬ ನಿತೀಶ್‌ಕುಮಾರ್ ಹೇಳಿಕೆಯನ್ನ ಖಂಡಿಸಿ ಬಿಜೆಪಿ (BJP) ನಾಯಕರು ಪ್ರತಿಭಟನೆ (Protest) ನಡೆಸಿದರು, ರಾಜೀನಾಮೆಗೂ ಒತ್ತಾಯಿದರು. ಇದನ್ನೂ ಓದಿ: ಮದ್ಯಪಾನ ಮಾಡೋರು ಸಾಯ್ತಾರೆ: ಬಿಹಾರ್ ಸಿಎಂ

    ಬಿಹಾರದ ಛಾಪ್ರಾ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಕಳ್ಳಬಟ್ಟಿ ಸೇವಿಸಿ ಕನಿಷ್ಠ 38 ಮಂದಿ ಸಾವನ್ನಪ್ಪಿದ್ದು, ಇನ್ನಷ್ಟು ಸಾವು ಸಂಭವಿಸುವ ಭೀತಿ ಎದುರಾಗಿದೆ. ಈ ಬೆನ್ನಲ್ಲೇ ಬಿಹಾರದ ಸಿವಾನ್‌ನಲ್ಲಿ ನಕಲಿ ಮದ್ಯ ಸೇವಿಸಿ ನಾಲ್ವರು ಮೃತಪಟ್ಟಿರುವ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.

    ಏಪ್ರಿಲ್ 2016ರಲ್ಲಿ ನಿತೀಶ್ ಕುಮಾರ್ ಸರ್ಕಾರವು ಬಿಹಾರದಲ್ಲಿ ಮದ್ಯ ಮಾರಾಟ ಮತ್ತು ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿತು.

    Live Tv
    [brid partner=56869869 player=32851 video=960834 autoplay=true]

  • ಕುಡಿದ ಮತ್ತಿನಲ್ಲಿ ಸಿಬ್ಬಂದಿಯೊಂದಿಗೆ ಜಗಳ- ಕಲ್ಲುತೂರಾಟಕ್ಕೆ ಬಾರ್ ಪುಡಿ-ಪುಡಿ

    ಕುಡಿದ ಮತ್ತಿನಲ್ಲಿ ಸಿಬ್ಬಂದಿಯೊಂದಿಗೆ ಜಗಳ- ಕಲ್ಲುತೂರಾಟಕ್ಕೆ ಬಾರ್ ಪುಡಿ-ಪುಡಿ

    ಬೆಳಗಾವಿ: ಕುಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ಬಾರ್ ಮಾಲೀಕ ಹಾಗೂ ಗ್ರಾಮಸ್ಥರ ನಡುವಿನ ಜಗಳ ತಾರಕಕ್ಕೇರಿದ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ತಲ್ಲೂರು ಗ್ರಾಮದಲ್ಲಿ ನಡೆದಿದೆ.

    ನಡೆದಿದ್ದೇನು?: ಐಎಸ್ ಇರಕಾರ ಮಾಲೀಕತ್ವದ ಬಾರ್ ಗೆ ಭಾನುವಾರ ರಾತ್ರಿ ತಲ್ಲೂರು ಗ್ರಾಮದ ನಾಲ್ವರು ಬಂದಿದ್ದು, ಕುಡಿದ ಮತ್ತಿನಲ್ಲಿ ಬಾರ್ ಸಿಬ್ಬಂದಿಯೊಂದಿಗೆ ಜಗಳ ಮಾಡಿಕೊಂಡಿದ್ದರು. ಇಂದು ಬೆಳಗ್ಗೆ ಗ್ರಾಮಕ್ಕೆ ಬಂದ ಬಾರ್ ಸಿಬ್ಬಂದಿ ನಾಲ್ವರ ಮನೆಗೆ ಹೋಗಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಇದರಿಂದ ಕೋಪಗೊಂಡ ಗ್ರಾಮಸ್ಥರು ಬಾರ್‍ಗೆ ಬಂದು ಕಲ್ಲು ತೂರಾಟ ನಡೆಸಿದ್ದಾರೆ. ಗ್ರಾಮಸ್ಥರು ಕಲ್ಲು ತೂರಾಟ ಮಾಡುವುದರ ಜೊತೆಗೆ ಬಾರ್‍ನಲ್ಲಿದ್ದ ಮದ್ಯದ ಬಾಟಲಿಗಳನ್ನು ಒಡೆದು ಹಾಕಿದ್ದಾರೆ.

    ಗ್ರಾಮಸ್ಥರ ಆಕ್ರೋಶದ ಕಲ್ಲು ತೂರಾಟಕ್ಕೆ ಬಾರ್ ಅಂಗಡಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಲಾಟೆಯಲ್ಲಿ ನೂರಾರು ಸಂಂಖ್ಯೆಯಲ್ಲಿ ಗ್ರಾಮಸ್ಥರು ಸೇರಿದ್ದರಿಂದ ಗ್ರಾಮದಲ್ಲಿ ಇದೀಗ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

    ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    https://www.youtube.com/watch?v=Ocie8qPInnE

     

     

  • ಕುಡಿದ ಮತ್ತಲ್ಲಿ ಚರಂಡಿಗೆ ಬಿದ್ದ ಯುವಕ- ಗಂಟೆಗಟ್ಟಲೇ ಒದ್ದಾಡಿ ಅಲ್ಲೇ ನಿದ್ದೆ ಮಾಡ್ದ

    ಕುಡಿದ ಮತ್ತಲ್ಲಿ ಚರಂಡಿಗೆ ಬಿದ್ದ ಯುವಕ- ಗಂಟೆಗಟ್ಟಲೇ ಒದ್ದಾಡಿ ಅಲ್ಲೇ ನಿದ್ದೆ ಮಾಡ್ದ

    ಚಿಕ್ಕಬಳ್ಳಾಪುರ: ಕುಡಿದ ಅಮಲಿನಲ್ಲಿ ಯುವಕನೊಬ್ಬ ಚರಂಡಿಗೆ ಬಿದ್ದು ಒದ್ದಾಡಿ, ಅಲ್ಲೇ ನಿದ್ದೆ ಮಾಡಿದ ಘಟನೆ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ನಿನ್ನೆ ರಾತ್ರಿ ನಡೆದಿಒದೆ.

    ಹೌದು. ಪಾನಮತ್ತನಾದ ಯುವಕ ಕೆಲ ಗಂಟೆಗಳ ಕಾಲ ಚರಂಡಿಯಲ್ಲಿಯೇ ನಿದ್ದೆ ಮಾಡಿದ್ದಾನೆ. ರಾತ್ರಿ 10 ಗಂಟೆಯ ಸುಮಾರಿನಲ್ಲಿ ವಿದ್ಯುತ್ ಇಲ್ಲದ ವೇಳೆ ಯುವಕ ಆಯತಪ್ಪಿ ರಸ್ತೆ ಬದಿಯ ಚರಂಡಿಯಲ್ಲಿ ಬಿದ್ದಿದ್ದಾನೆ. ಕುಡಿದ ಅಮಲಿನಲ್ಲಿ ಮೇಲಕ್ಕೆ ಬರಲಾಗದೇ ಅಲ್ಲೆ ಕೆಲಕಾಲ ಮಲಗಿದ್ದಾನೆ. ಕೊನೆಗೆ ಸ್ಥಳೀಯರು ಯುವಕನನ್ನು ಮೇಲಕ್ಕೆ ಎತ್ತಿ ಕಳುಹಿಸಿದ್ದಾರೆ.

    ಇನ್ನು ಚರಂಡಿಯ ಮೇಲ್ಛವಾಣಿಯನ್ನು ಕೇವಲ ಅರ್ಧಭಾಗ ಮುಚ್ಚಿರುವುದು ಘಟನೆಗೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಲಾದರೂ ಪುರಸಭೆ ಅಧಿಕಾರಿಗಳು ಸಮರ್ಪಕವಾಗಿ ಚರಂಡಿಯ ಮೇಲ್ಛಾವಣಿಯನ್ನು ಮುಚ್ಚಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

    https://www.youtube.com/watch?v=nG8Z9baMukE