ಬಾಲಿವುಡ್ (Bollywood0) ಖ್ಯಾತ ನಟ ಸನ್ನಿ ಡಿಯೋಲ್ (Sunny Deol) ರಸ್ತೆಯಲ್ಲಿ ಕಂಠಪೂರ್ತಿ ಕುಡಿದುಕೊಂಡು (Drinks) ಜೋಲಿ ಹೊಡೆಯುತ್ತಾ ಬರುತ್ತಿದ್ದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡಿತ್ತು. ಈ ವಿಡಿಯೋವನ್ನು ಫೋಟೋಗೆ ಕನ್ವರ್ಟ್ ಮಾಡಿಯೂ ಟ್ರೋಲ್ ಮಾಡಲಾಗಿತ್ತು. ಅನೇಕರು ನಾನಾ ರೀತಿಯಲ್ಲಿ ಕಾಮೆಂಟ್ ಕೂಡ ಮಾಡಿದ್ದರು. ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಡಿಯೋಲ್ ಅಲರ್ಟ್ ಆಗಿದ್ದಾರೆ.
ಬಾಲಿವುಡ್ ಪಾರ್ಟಿಗಳಲ್ಲಿ ತೂರಾಡಿಕೊಂಡು ಕಾರು ಹತ್ತುವುದು ಸಾಮಾನ್ಯ. ಅನೇಕ ನಟ ನಟಿಯರು ಪಾರ್ಟಿಗಳಿಂದ ಆಚೆ ಬರುವಾಗ ಜೋಲಿ ಹೊಡೆಯುವ ದೃಶ್ಯವನ್ನು ಅನೇಕರು ಸೆರೆ ಹಿಡಿದಿದ್ದಾರೆ. ಆದರೆ, ಸನ್ನಿ ಡಿಯೋಲ್ ತೂರಾಡಿಕೊಂಡು ರಸ್ತೆಯಲ್ಲಿ ನಡೆದುಕೊಂಡು ಬರುವ ವಿಡಿಯೋ ಅದಾಗಿತ್ತು. ಹಾಗಾಗಿ ವೈರಲ್ ಆಗಿತ್ತು.
ಆ ವಿಡಿಯೋ ಯಾವುದು, ಅದರ ಅಸಲಿತ್ತು ಏನು ಎನ್ನುವುದನ್ನು ಮತ್ತೊಂದು ವಿಡಿಯೋ ಮೂಲಕ ಸನ್ನಿ ಸ್ಪಷ್ಟ ಪಡಿಸಿದ್ದಾರೆ. ರಸ್ತೆಯಲ್ಲಿ ತೂರಾಡುತ್ತ ಬರುವ ಮತ್ತು ಆ ದೃಶ್ಯವನ್ನು ಹಲವು ಕ್ಯಾಮೆರಾಗಳು ಸೆರೆ ಹಿಡಿಯುತ್ತಿರುವ ವಿಡಿಯೋವನ್ನು ಶೇರ್ ಮಾಡಿ, ಗಾಳಿ ಸುದ್ದಿ ಪಯಣ ಇಲ್ಲಿಗೆ ಮುಗೀತು ಎಂದು ಬರೆದುಕೊಂಡಿದ್ದಾರೆ. ಅದು ಸಿನಿಮಾದ ದೃಶ್ಯವೆಂದು ಈ ಮೂಲಕ ಸ್ಪಷ್ಟ ಪಡಿಸಿದ್ದಾರೆ.
ನಟ ನಾಗಭೂಷಣ್ ಚಲಾಯಿಸುತ್ತಿದ್ದ ಕಾರು ದಂಪತಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮಹಿಳೆಯೋರ್ವರು ಮೃತಪಟ್ಟಿದ್ದು, ಅವರ ಪತಿಗೆ ಗಂಭೀರ ಗಾಯಗಳಾಗಿದ್ದವು. ಸದ್ಯ ಅವರು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಮಹಿಳೆಯ ಅಂತ್ಯಕ್ರಿಯೆ ಕೂಡ ಮಾಡಲಾಗಿದೆ. ಈ ನಡುವೆ ನಾಗಭೂಷಣ್ ಮದ್ಯಪಾನ (Drinks) ಮಾಡಿ ಕಾರು ಚಲಾಯಿಸುತ್ತಿದ್ದರಾ ಎನ್ನುವ ಪ್ರಶ್ನೆ ಮೂಡಿತ್ತು.
ನಿನ್ನೆಯಷ್ಟೇ ಪೊಲೀಸ್ ಅಧಿಕಾರಿಗಳು ನಾಗಭೂಷಣ್ ಅವರು ಮದ್ಯಪಾನ ಸೇವಿಸಿರಲಿಲ್ಲ ಎಂದು ಹೇಳಿಕೆ ನೀಡಿದ್ದರು. ಅದಕ್ಕೆ ಸಾಕ್ಷಿ ಎನ್ನುವಂತೆ ಬ್ಲಡ್ ರಿಪೋರ್ಟ್ (Report) ಕೂಡ ಬಂದಿದ್ದು, ನಾಗಭೂಷಣ್ ಮದ್ಯಪಾನ ಮಾಡಿರಲಿಲ್ಲ ಎಂದು ವರದಿಯಾಗಿದೆ. ನಾಳೆ ಅವರನ್ನು ಹೆಚ್ಚಿನ ವಿಚಾರಣೆಗೆ ಕರೆಯಲಾಗಿದ್ದು, ಈ ಸಂಬಂಧ ನೋಟಿಸ್ ನೀಡಿದ್ದಾರೆ.
ಘಟನೆ ಕುರಿತು ನಾಗಭೂಷಣ್ ಹೇಳೋದೇನು?
ಶನಿವಾರ ರಾತ್ರಿ 9 ಗಂಟೆಯ ಹೊತ್ತಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಾರು ಅಪಘಾತದಲ್ಲಿ (Car accident) ಪ್ರೇಮಾ ಎನ್ನುವ ಮಹಿಳೆ ಸಾವನ್ನಪ್ಪಿದ್ದು, ಅವರ ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪತಿ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ನಾಗಭೂಷಣ್ (Nagbhushan) ಈ ಅಪಘಾತಕ್ಕೆ ಕಾರಣವಾಗಿದ್ದು, ಸದ್ಯ ನಟನನ್ನು ಕುಮಾರಸ್ವಾಮಿ ಪೋಲಿಸರು ಬಂಧಿಸಿದ್ದಾರೆ. ಈ ಘಟನೆಯ ಕುರಿತು ಸ್ವತ ನಾಗಭೂಷಣ್ ಕೂಡ ಪೊಲೀಸರ ಮುಂದೆ ಹೇಳಿಕೆಯನ್ನು ದಾಖಲಿಸಿದ್ದಾರೆ.
ನಿನ್ನ ರಾತ್ರಿ ಸ್ನೇಹಿತರನ್ನು ಭೇಟಿ ಮಾಡಲು ಆರ್.ಆರ್ ನಗರಕ್ಕೆ ಹೋಗಿರುವುದಾಗಿ, ಅಲ್ಲಿಂದ ಜೆಪಿ ನಗರದಲ್ಲಿರುವ ತಮ್ಮ ಮನೆಗೆ ವಾಪಸ್ಸಾಗುವಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ನಾಗಭೂಷಣ್ ತಿಳಿಸಿದ್ದಾರೆ. ತಾವೇ ಸ್ವತಃ ಕಾರು ಚಾಲನೆ ಮಾಡಿಕೊಂಡು ಹೋಗುತ್ತಿರುವಾಗ ಅಪಾರ್ಟಮೆಂಟ್ ಹತ್ತಿರ ಒಬ್ಬ ಮಹಿಳೆ ಮತ್ತು ಒಬ್ಬರು ವ್ಯಕ್ತಿ ಫುಟ್ ಪಾತ್ ಮೇಲಿಂದ ರಸ್ತೆಗೆ ಕೆಳಗೆ ಇಳಿದು ರಸ್ತೆಗೆ ಬಂದರು. ಅವರು ಬಂದಿದ್ದನ್ನು ನೋಡಿ ನನಗೆ ಗಾಬರಿಯಾಗಿ ರಸ್ತೆಗೆ ಬಂದಿದ್ದವರಿಗೆ ಡಿಕ್ಕಿ ಮಾಡಿ, ನಂತರ ಫುಟ್ ಪಾತ್ ಮೇಲೆ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಮಾಡಿದೆನು ಎಂದು ಅವರು ಹೇಳಿಕೆಯನ್ನು ನೀಡಿದ್ದಾರೆ.
ಈ ಘಟನೆಯಾದಾಗ ಮಹಿಳೆಗೆ ತಲೆಗೆ ಮತ್ತು ಮುಖಕ್ಕೆ ಜಾಸ್ತಿ ಏಟಾಗಿತ್ತು. ಅವರು ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ಗಂಡಸಿಗೆ ಕಾಲುಗಳಿಗೆ ಮತ್ತು ಹೊಟ್ಟೆ ಹಾಗೂ ತಲೆಗೆ ಗಾಯವಾಗಿತ್ತು. ನನ್ನ ಕಾರು ಸ್ಟಾರ್ಟ್ ಆಗದೇ ಇರುವ ಕಾರಣಕ್ಕಾಗಿ ಆಟೋದಲ್ಲಿ ಅವರನ್ನು ಸ್ವತಃ ನಾನೇ ಆಸ್ಪತ್ರೆಗೆ ಕರೆದುಕೊಂಡು ಹೋದೆ. ಆಸ್ಪತ್ರೆಯ ವೈದ್ಯರು ಮಾರ್ಗಮಧ್ಯದಲ್ಲೇ ಮಹಿಳೆಯು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು. ಘಟನೆಯನ್ನು ತಿಳಿದು ಸಂಚಾರಿ ಪೊಲೀಸರು ಆಸ್ಪತ್ರೆಗೆ ಬಂದರು. ನಾನು ಕೂಡ ಅವರೊಂದಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆಗೆ ತೆರಳಿ ಮಾಹಿತಿ ನೀಡಿದೆ ಎಂದು ತಮ್ಮ ಹೇಳಿಕೆಯನ್ನು ನಾಗಭೂಷಣ್ ದಾಖಲಿಸಿದ್ದಾರೆ.
ಬೆಂಗಳೂರು: ಮದ್ಯದ ಅಮಲಿನಲ್ಲಿ ಭವಿಷ್ಯ ಹೇಳುತ್ತಿದ್ದ ಸ್ನೇಹಿತನಿಗೆ (Friend) ಕಲ್ಲಿನಿಂದ ಹೊಡೆದು ಹತ್ಯೆಗೈದಿದ್ದ ಘಟನೆ ಬೆಂಗಳೂರಿನ (Bengaluru) ಗೋವಿಂದರಾಜನಗರದಲ್ಲಿ ನಡೆದಿದೆ.
ನರೇಶ್ ಸಾವನ್ನಪ್ಪಿದ ವ್ಯಕ್ತಿ ಹಾಗೂ ಮಾರಿಮುತ್ತು ಬಂಧಿತ ವ್ಯಕ್ತಿ. ಮಾರಿಮುತ್ತು ಹೆಚ್ಚು ಯಾರೊಂದಿಗೂ ಬೆರೆಯದೇ ವಿಚಿತ್ರ ಮನಸ್ಥಿತಿಯವನಾಗಿದ್ದ. ಹನ್ನೊಂದು ವರ್ಷದವನಿದ್ದಾಗಲೇ ವಿಜಯನಗರ ವ್ಯಾಪ್ತಿಯಲ್ಲಿ ಹತ್ಯೆ ಮಾಡಿ ಸೆರೆವಾಸ ಅನುಭವಿಸಿ ಹೊರಬಂದಿದ್ದ. ಶನಿವಾರ ಮಧ್ಯಾಹ್ನ ಮಾರಿಮುತ್ತು ಜೊತೆ ನಾಗರಭಾವಿ ಮುಖ್ಯರಸ್ತೆಯಲ್ಲಿರುವ ಬಾರ್‌ನಲ್ಲಿ ಕುಡಿಯಲು ಬಂದಿದ್ದ ನರೇಶ್ ನಿನ್ನ ಭವಿಷ್ಯ ಹೇಳ್ತೀನಿ ಎಂದು ಆತನ ಬಳಿ ನಿನಗೆ ದುಶ್ಚಟಗಳಿವೆ, ಹುಡುಗಿಯರ ಸಹವಾಸ ಜಾಸ್ತಿ, ಕೆಲವೇ ವರ್ಷಗಳಲ್ಲಿ ನೀನು ಸಾಯುತ್ತೀಯ ಎಂದು ಆತನನ್ನ ವ್ಯಂಗ್ಯವಾಡಿದ್ದಾನೆ.
ಇದರಿಂದಾಗಿ ಸಿಟ್ಟಿಗೆದ್ದ ಮಾರಿಮುತ್ತು ಬಾರ್ ಒಳಗಡೆ ಪರಸ್ಪರ ಕಿತ್ತಾಡಿಕೊಂಡಿದ್ದರು. ಜಗಳವಾಡುತ್ತಲೇ ಇಬ್ಬರೂ ಹೊರಬಂದಿದ್ದರು. ಈ ವೇಳೆ ರಸ್ತೆ ಪಕ್ಕದಲ್ಲಿದ್ದ ಟೈಲ್ಸ್ ಕಲ್ಲಿನಿಂದ ನರೇಶ್ ತಲೆಗೆ ಹೊಡೆದು ಕೊಲೆ ಮಾಡಿ ಆರೋಪಿ ಪರಾರಿಯಾಗಿದ್ದ. ಪರಿಣಾಮ ತೀವ್ರ ರಕ್ತಸ್ರಾವ ಉಂಟಾಗಿ ಕುಸಿದುಬಿದ್ದು ನರೇಶ್ ಸಾವನ್ನಪ್ಪಿದ್ದ. ಇದನ್ನೂ ಓದಿ: ದೇವಿ ಹೇಳಿದಂತೆ ಎರಡು ಕ್ಷೇತ್ರದಲ್ಲಿ ನಿಲ್ಲಲು ಮುಂದಾದ್ರಾ ಸಿದ್ದರಾಮಯ್ಯ?
ಘಟನೆಗೆ ಸಂಬಂಧಿ ಗೋವಿಂದರಾಜನಗರ (Govindraj Nagar) ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು. ನಂತರ ನರೇಶ್ ಪತ್ನಿಯ ದೂರಿನ ಮೇರೆಗೆ ಕೇಸ್ ದಾಖಲಿಸಿಕೊಂಡಿದ್ದರು. ಪ್ರಕರಣ ದಾಖಲಾಗಿ 24 ಗಂಟೆ ಕಳೆಯುವಷ್ಟರಲ್ಲಿ ಗೋವಿಂದರಾಜನಗರ ಪೊಲೀಸರು ಆರೋಪಿ ಮಾರಿಮುತ್ತುನನ್ನು ಬಂದಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ವಾಹನಗಳ ಪರಿಶೀಲನೆ ಆರಂಭ – ಮೊದಲ ದಿನವೇ 10 ಕೆಜಿ ಬೆಳ್ಳಿ ವಶ
ಚಿಕ್ಕಬಳ್ಳಾಪುರ: ವ್ಯಕ್ತಿಯೋರ್ವ ಕುಡಿಯಲು ಹಣ ನೀಡಲಿಲ್ಲವೆಂದು ಪತ್ನಿಗೆ (Wife) ಅನೈತಿಕ ಸಂಬಂಧವಿದೆ ಎಂದು ಆರೋಪಿಸಿ ಆಕೆಯನ್ನು ಮನಸ್ಸೋ ಇಚ್ಛೆ ಹೊಡೆದು ಕೊಂಡು ಹಾಕಿದ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಚಿಕ್ಕದಿಬ್ಬೂರ ಹಳ್ಳಿಯಲ್ಲಿ ನಡೆದಿದೆ.
ಗಾಯತ್ರಿ (39) ಮೃತ ಮಹಿಳೆಯಾಗಿದ್ದು, ಅಶ್ವತ್ಥಪ್ಪ ಕೊಲೆ ಮಾಡಿದ ಆರೋಪಿ. ಗಾಯತ್ರಿ ಹಾಗೂ ಅಶ್ವತ್ಥಪ್ಪನಿಗೆ ಮದುವೆಯಾಗಿ 20 ವರ್ಷ ಕಳೆದಿದ್ದು, ಅವರಿಗೆ 18 ವಷದ ಮಗಳು ಹಾಗೂ 14 ವರ್ಷದ ಮಗನಿದ್ದಾನೆ. ಆದರೆ ಅಶ್ವತ್ಥಪ್ಪ ಪ್ರತಿದಿನ ಕುಡಿದು ಬಂದು ಹೆಂಡತಿ ಹಾಗೂ ಮಕ್ಕಳಿಗೆ ಹೊಡೆಯುವುದನ್ನು ಮಾಡುತ್ತಿದ್ದ. ಇದರಿಂದಾಗಿ ಬೇಸತ್ತ ಪತ್ನಿ ಗಾಯತ್ರಿ ಹಾಗೂ ಮಕ್ಕಳು ಪ್ರತಿನಿತ್ಯ ಅಶ್ವತ್ಥಪ್ಪನಿಂದ ತಪ್ಪಿಸಿಕೊಳ್ಳುತ್ತಿದ್ದರು. ಅಷ್ಟೇ ಅಲ್ಲದೇ ಮಕ್ಕಳನ್ನು ರಾತ್ರಿಯಾದ ಮೇಲೆ ಸಂಬಂಧಿಗಳ ಮನೆಗೆ ಕಳುಹಿಸುತ್ತಿದ್ದಳು. ಜೊತೆಗೆ ಹಣವಿಲ್ಲ ಮಗ ಶಾಲೆ ಬಿಟ್ಟು ಗ್ಯಾರೆಜ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ.
ಆದರೆ ಗುರುವಾರ ಮನೆಗೆ ಬಂದ ಅಶ್ವತ್ಥಪ್ಪ ಕುಡಿಯಲು ಪತ್ನಿ ಬಳಿ ಹಣ (Money) ಕೇಳಿದ್ದಾನೆ. ಆದರೆ ಈ ವೇಳೆ ಗಾಯತ್ರಿ ಹಣವನ್ನು ನೀಡುವುದಿಲ್ಲ ಎಂದು ತಿಳಿಸಿದ್ದಾಳೆ. ಇದರಿಂದಾಗಿ ಆಕೆ ಅನೈತಿಕ ಸಂಬಂಧವನ್ನು ಹೊಂದಿದ್ದಾಳೆ ಎಂದು ಶಂಕಿಸಿದ ಅಶ್ವತ್ಥಪ್ಪ ಆಕೆಗೆ ದೊಣ್ಣೆ ಹಾಗೂ ಮಾರಕಾಸ್ತ್ರಗಳಿಂದ ಹೊಡೆದಿದ್ದಾನೆ. ಈ ವೇಳೆ ಗಂಭೀರ ಗಾಯಗೊಂಡಿದ್ದ ಗಾಯತ್ರಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಇದನ್ನೂ ಓದಿ: ಬಾಬುರಾವ್ ಚಿಂಚನಸೂರ್ ಅಲ್ಲ, ಚಂಚಲ ಸೂರ: ರವಿಕುಮಾರ್
ಘಟನೆಗೆ ಸಂಬಂಧಿಸಿ ದಿಬ್ಬೂರಹಳ್ಳಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಶ್ವತ್ಥಪ್ಪನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಮೃತಳ ಸಂಬಂಧಿಕರು ಮಾತನಾಡಿ , ಕುಡಿಯುವುದಕ್ಕೆ ಹಣ ಇಲ್ಲವೆಂದರೆ ಅಶ್ವತ್ಥಪ್ಪ ತವರು ಮನೆಯಿಂದ ಒಡವೆ ಹಣ ಗಾಯತ್ರಿಗೆ ಹಿಂಸೆ ನೀಡುತ್ತಿದ್ದ. ಈಗ ಸ್ವತಃ ಪತ್ನಿಯನ್ನು ಹೊಡೆದು ಸಾಯಿಸಿದ್ದಾನೆ, ಅವನನ್ನು ಸುಮ್ಮನೆ ಬೀಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿ ಧೂಳಿಪಟವಾಗಲಿದೆ: ಬಾಬುರಾವ್ ಚಿಂಚನಸೂರ್
ಬೆಳಗಾವಿ: ಬಾರ್ ಹಾಗೂ ಪಬ್‌ಗಳಲ್ಲಿ (Bar And Pub) ಕುಳಿತು ಡ್ರಿಂಕ್ಸ್ (Drinks) ಮಾಡಲು ಮಾರುಕಟ್ಟೆಯಲ್ಲಿ ಈಗಾಗಲೇ ವಿಶೇಷ ಮಾಸ್ಕ್‌ಗಳನ್ನು (Speical Mask) ಬಿಡುಗಡೆ ಮಾಡಲಾಗಿದೆ. ಮಾಲೀಕರು ಅಥವಾ ನಿರ್ವಾಹಕರು ಆ ಮಾಸ್ಕ್‌ಗಳನ್ನು ಪಡೆದು ಬರುವ ಗ್ರಾಹಕರಿಗೆ ನೀಡಬೇಕು. ಇದರಿಂದ ಅವರು ಮಾಸ್ಕ್ ಹಾಕಿಕೊಂಡೇ ಡ್ರಿಂಕ್ಸ್ ಮಾಡಬಹುದು ಎಂದು ಸಚಿವ ಆರ್.ಅಶೋಕ್ (R Ashoka) ತಿಳಿಸಿದ್ದಾರೆ.
ನಗರದಲ್ಲಿ ಮಾಸ್ಕ್ ಕಡ್ಡಾಯಕ್ಕೆ ಪಬ್, ಬಾರ್ ಮಾಲೀಕರ ವಿರೋಧದ ಕುರಿತು ಮಾತನಾಡಿದ ಸಚಿವರು, ಬಾರ್, ಪಬ್‌ಗಳಲ್ಲಿ ಕುಳಿತು ಡ್ರಿಂಕ್ಸ್ ಮಾಡಲು ಸ್ಪೆಷಲ್ ಮಾಸ್ಕ್ ರಿಲೀಸ್ ಮಾಡಿದ್ದಾರೆ. ಬರುವ ಗ್ರಾಹಕರಿಗೆ ಆ ಮಾಸ್ಕ್ಗಳನ್ನು ನೀಡಬೇಕು. ಇದರಿಂದ ಯಾರಿಗೂ ತೊಂದರೆಯಾಗೋದಿಲ್ಲ. ಮಾಸ್ಕ್ ಹಾಕಿಕೊಂಡೇ ಡ್ರಿಂಕ್ಸ್ ಮಾಡಬಹುದು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: 74 ದಿನದ ಸಿಜೆಐ ಅವಧಿಯಲ್ಲಿ ಯುಯು ಲಲಿತ್‌ಗಿದ್ರು 40+ ಸಿಬ್ಬಂದಿ
ಜನರ ಪ್ರಾಣ ಉಳಿದರೆ ಎಲ್ಲಾ ಸಿಗುತ್ತದೆ. ಜನರ ಪ್ರಾಣಕ್ಕೇ ಕಂಟಕ ಬಂದ್ರೆ ಏನು ಸಿಗುತ್ತದೆ? ನಿಮಗ್ಯಾರಿಗೋ ಬಾರ್ ವ್ಯಾಪಾರ ಆಗಬೇಕು ಅಂತಾ ಜನರ ಪ್ರಾಣ ತೆಗೆಯೋದು ಒಳ್ಳೆಯದಲ್ಲ. ನಾನು ಅವರಲ್ಲಿ ವಿನಂತಿ ಮಾಡ್ತೀನಿ, ದಯಮಾಡಿ ಸಹಕಾರ ನೀಡಬೇಕು ಎಂದು ಕೋರಿದ್ದಾರೆ. ಇದನ್ನೂ ಓದಿ: ಚೀನಾದಲ್ಲಿ ವಿದೇಶಿಯರಿಗೆ ಟಫ್ ರೂಲ್ಸ್ – ಫೈಜರ್ ಲಸಿಕೆ ನೀಡಲು ನಿರ್ಧಾರ
ಕೋವಿಡ್ (Covid 19) ಮುನ್ನೆಚ್ಚರಿಕೆ ಕ್ರಮವಾಗಿ ಬೆಳಗಾವಿಯ ಆಸ್ಪತ್ರೆಯಲ್ಲಿ ಪರಿಶೀಲನೆ ನಡೆಸಲಾಗಿದೆ. ಕೋವಿಡ್ ಯೂನಿಟ್ಸ್, ಆಕ್ಸಿಜನ್ ಪ್ಲಾಂಟ್, ಐಸಿಯು (ICU) ಘಟಕ ಸೇರಿದಂತೆ ಎಲ್ಲ ಸೌಲಭ್ಯಗಳ ಪರಿಶೀಲನೆ ನಡೆಸಲಾಗಿದೆ. ಅಂತೆಯೇ ರಾಜ್ಯದ ಎಲ್ಲೆಡೆ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಪರಿಶೀಲನೆ ಮಾಡಬೇಕು. ಎಲ್ಲಿಯೂ ಸಹ ಆಕ್ಸಿಜನ್, ಅಂಬುಲೆನ್ಸ್ ಹಾಗೂ ಔಷಧಗಳ ಕೊರತೆ ಆಗಬಾರದು ಎಂದು ಸಲಹೆ ನೀಡಿದ್ದಾರೆ.
ಹೊಸ ವರ್ಷಾಚರಣೆಗೆ ಸಂಬಂಧಿಸಿದಂತೆ ಮಾತನಾಡಿ, ಏನೋ ಮಾಡಲು ಹೋಗಿ, ಇನ್ನೇನೋ ಆಗೋದು ಬೇಡ. ಎಲ್ಲರೂ ಜಾಗ್ರತೆಯಿಂದ ಇದ್ದು, ಸರ್ಕಾರಕ್ಕೆ ಸಹಕಾರ ನೀಡಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಳಗಾವಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ (Husband), ಪತ್ನಿ (Wife) ಹಾಗೂ ಪುಟ್ಟ ಮಗು ಸಾವನ್ನಪ್ಪಿದ ಘಟನೆ ಬೆಳಗಾವಿ (Belagavi) ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ನಡೆದಿದೆ.
ಹೊಳೆಪ್ಪ ಮಾರುತಿ ಮಸ್ತಿ (25), ಈತನ ಪತ್ನಿ ವಾಸಂತಿ (22) ಹಾಗೂ ಒಂದೂವರೆ ವರ್ಷದ ಮಗು ಮೃತ ದುರ್ದೈವಿ. ಮದ್ಯದ ಅಮಲಿನಲ್ಲಿ ಹೊಳೆಪ್ಪ ಪತ್ನಿಯೊಂದಿಗೆ ಜಗಳವಾಡಿದ್ದನು. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೆದರಿಸುವ ಉದ್ದೇಶದಿಂದ ವಿಷ ಕುಡಿದಿದ್ದನು.
ತಕ್ಷಣ ಸ್ನೇಹಿತರು ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಆತ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾನೆ. ಇದರಿಂದ ಮನನೊಂದ ಪತ್ನಿ ವಾಸಂತಿ ಕೂಡ ತಮ್ಮ ಒಂದೂವರೆ ವರ್ಷದ ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಿ, ನಂತರ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ:ಭೀಕರ ರಸ್ತೆ ಅಪಘಾತ – ಟ್ರಕ್‍ಗೆ ಗುದ್ದಿದ ಬಸ್ 14 ಸಾವು, 40 ಮಂದಿಗೆ ಗಾಯ
ಮಗುವನ್ನು ಎತ್ತಿಕೊಂಡು ಊರ ಹೊರಗಿನ ಹೊಲಕ್ಕೆ ಹೋಗಿದ್ದ ವಾಸಂತಿ ಮರಳಿ ಮನೆಗೆ ಬಂದಿರಲಿಲ್ಲ. ಇದರಿಂದ ಕುಟುಂಬದವರು ಹುಡುಕಾಟ ನಡೆಸಿದ್ದಾರೆ. ಮರಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ವಾಸಂತಿಯ ಶವ ಕಂಡುಬಂದಿದೆ. ವಾಸಂತಿ ಕಾಲಿನಡಿ ಪುಟ್ಟ ಮಗುವಿನ ಮೃತದೇಹ ಬಿದ್ದಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇವರಿಗೆ ಮೂರು ವರ್ಷದ ಮತ್ತೊಬ್ಬಳು ಪುತ್ರಿ ಇದ್ದು, ಆಟವಾಡಲು ಹೊರಗೆ ಹೋಗಿದ್ದರಿಂದ ಬದುಕುಳಿದಿದ್ದಾಳೆ. ಘಟನೆ ಬಗ್ಗೆ ಕಾಕತಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಇದನ್ನೂ ಓದಿ:ಕಳ್ಳತನಕ್ಕೆ ಬಂದ ಮನೆಯಲ್ಲೇ ಖದೀಮ ಆತ್ಮಹತ್ಯೆ
Live Tv
[brid partner=56869869 player=32851 video=960834 autoplay=true]
ಚಿಕ್ಕಬಳ್ಳಾಪುರ: ಬರ್ತ್ ಡೇ ಪಾರ್ಟಿಗೆಂದು (Birth Day Party) ಕರೆಸಿ ಯುವಕನಿಗೆ ಕಂಠಪೂರ್ತಿ ಕುಡಿಸಿ ನಂತರ ಆತನ ಸ್ನೇಹಿತರೇ (Friends) ಚಾಕುವಿನಿಂದ ಕೊಲೆ ಮಾಡಿದ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ.
ಚಿಂತಾಮಣಿಯ (Chintamani) ಅಂಜನಿ ಬಡಾವಣೆಯ ನಿವಾಸಿ ದುರ್ಗೇಶ್ ಅಲಿಯಾಸ್ ಚಿನ್ನಿ(24) ಮೃತ ದುರ್ದೈವಿ. ಈತ ಚಿಂತಾಮಣಿ ನಗರದ ಕನ್ನಂಪಲ್ಲಿ ಬಳಿಯ ನಿರ್ಜನಪ್ರದೇಶದಲ್ಲಿ ಹೇಮಂತ್ ಎಂಬಾತನ ಬರ್ತಡೇ ಪಾರ್ಟಿಗೆ ಹೋಗಿದ್ದ. ಆ ಪಾರ್ಟಿಯಲ್ಲಿ ಸುಮಾರು 10ಕ್ಕೂ ಅಧಿಕ ಜನರು ಸೇರಿದ್ದರು.
ಪಾರ್ಟಿ ವೇಳೆ ಹೇಮಂತ್ ಹಾಗೂ ಆತನ ಸ್ನೇಹಿತರಾದ ಶರತ್, ಮಧು, ಮಹೇಶ್ ಸೇರಿದಂತೆ ದುರ್ಗೇಶ್ ಕಂಠಪೂರ್ತಿ ಕುಡಿದಿದ್ದರು. ಅದಾದ ಬಳಿಕ ಗುರಾಯಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಶರತ್, ಹೇಮಂತ್, ದುರ್ಗೇಶ್ ಮಧ್ಯೆ ವಾಗ್ವಾದ ನಡೆದಿದೆ. ಜೊತೆಗೆ ಹೇಮಂತ್ ಹಾಗೂ ದುರ್ಗೇಶ್ ಮಧ್ಯೆ ಮೊದಲೇ ಹಳೇ ವೈಷಮ್ಯ ಇತ್ತು. ಇದೇ ಕ್ಷುಲ್ಲಕ ನೆಪದಿಂದ ಕುಡಿದ ಅಮಲಿನಲ್ಲಿ ಬರ್ತ್‍ಡೇ ಬಾಯ್ ಹೇಮಂತ್ ಕೇಕ್ ಕಟ್ ಮಾಡಲು ತಂದಿದ್ದ ಚಾಕುವಿನಿಂದ ಸ್ನೇಹಿತ ದುರ್ಗೇಶನ ಕತ್ತು ಸೀಳಿದ್ದಾನೆ. ಅದಕ್ಕೆ ಆತನ ಸ್ನೇಹಿತರಾದ ಶರತ್, ಮಧು, ಮಹೇಶ್ ಸಾಥ್ ನೀಡಿದ್ದಾರೆ. ದುರ್ಗೇಶ್‍ನ ಕೊಲೆಯಾಗುತ್ತಿದ್ದಂತೆ ಅಲ್ಲಿದ್ದ ಸ್ನೇಹಿತರು ಕಾಲ್ಕಿತ್ತಿದ್ದಾರೆ. ಇದನ್ನೂ ಓದಿ: SC-ST ಮೀಸಲಾತಿ ಹೆಚ್ಚಳಕ್ಕೆ ಸಂಪುಟ ಅಸ್ತು
ಪೊಲೀಸರು ಬೆಳಗ್ಗೆ ಘಟನಾ ಸ್ಥಳಕ್ಕೆ ಹೋದಾಗ ದುರ್ಗೇಶ್‍ನ ಹತ್ಯೆಯಾಗಿತ್ತು. ಆದರೂ ಯಾರೋಬ್ಬರೂ ಪೊಲೀಸರಿಗೆ ಬಾಯ್ಬಿಡದೇ ದುರ್ಗೇಶನ ಶವವಿರಿಸಿದ್ದ ಶವಾಗಾರದ ಬಳಿ ಜಮಾಯಿಸಿ ಅಮಾಯಕರಂತೆ ನಟಿಸಿದ್ದರು. ಈ ಹಿನ್ನೆಲೆಯಲ್ಲಿ ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು (Police) ತನಿಖೆ ಕೈಗೊಂಡಿದ್ದಾರೆ.
ಘಟನೆಗೆ ಸಂಬಂಧಿಸಿ ಬರ್ತ್ ಡೇ ಬಾಯ್ ಹೇಮಂತ್ ಸೇರಿದಂತೆ ಮೃತನ ಸ್ನೇಹಿತರಾದ ಶರತ್, ಮಧು ಮಹೇಶ್‍ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಬರ್ತ್‍ಡೇ ಪಾರ್ಟಿಗೆ ಸ್ನೇಹಿತ ಕರೆದಿದ್ದಾನೆಂದು ವೈಮನಸ್ಸು ಮರೆತು ದುರ್ಗೇಶ್ ಅಲಿಯಾಸ್ ಚಿನ್ನಿ ಮೈಮರೆತು ಕಂಠಪೂರ್ತಿ ಕುಡಿದಿದ್ದ. ಇದೇ ಸಂದರ್ಭವನ್ನು ಬಳಸಿಕೊಂಡ ಬರ್ತಡೇ ಬಾಯ್ ಹೇಮಂತ್ ಸ್ನೇಹಿತ ಎನ್ನುವುದನ್ನು ಮರೆತು ಕೇಕ್ ಕಟ್ ಮಾಡಿದಂತೆ ಕತ್ತು ಕಟ್ ಮಾಡಿ ಕೊಲೆ ಮಾಡಿದ್ದಾನೆ ಎನ್ನುವ ವಿಷಯ ಬಯಲಾಗಿದೆ. ಘಟನೆಗೆ ಸಂಬಂಧಿಸಿ 4 ಜನರನ್ನು ಬಂಧಿಸಿದ್ದಾರೆ. ಜೊತೆಗೆ ಚಾಕು ಪೂರೈಸಿದ್ದ ಆರೋಪದ ಮೇರೆಗೆ ಇನ್ನಿಬ್ಬರನ್ನ ಸಹ ಬಂಧಿಸಲಾಗಿದೆ. ಇದನ್ನೂ ಓದಿ: 60 ಸಾವಿರ ಹಸುಗಳನ್ನು ಬಲಿ ಪಡೆದ ಲಂಪಿ ವೈರಸ್ ಕರ್ನಾಟಕಕ್ಕೆ ಎಂಟ್ರಿ
Live Tv
[brid partner=56869869 player=32851 video=960834 autoplay=true]
ಕೋಲಾರ: ಪೊಲೀಸ್ ಠಾಣೆಯಲ್ಲೇ (Police Station) ಕುಳಿತು ಪೊಲೀಸ್ ಸಿಬ್ಬಂದಿ ಮದ್ಯಪಾನ (Drinks) ಮಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗುತ್ತಿದೆ.
ಕೆಲಸದ ಸಮಯದಲ್ಲಿ ಎಣ್ಣೆ ಹಾಕಿ ಮಜಾ ಮಾಡುತ್ತಿರುವ ಸಿಬ್ಬಂದಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗುತ್ತಿದ್ದು, ಸಿಬ್ಬಂದಿ ಪೊಲೀಸ್ ಠಾಣೆಯನ್ನೇ ಬಾರ್ ಆಗಿ ಪರಿವರ್ತಿಸಿದ್ದಾರೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಸೈಕಲ್‍ಗೆ ಬೈಕ್ ಡಿಕ್ಕಿ- ಪಲ್ಸರ್ ಸವಾರ ಸ್ಥಳದಲ್ಲೇ ಸಾವು
Live Tv
[brid partner=56869869 player=32851 video=960834 autoplay=true]
ರಾಂಚಿ: ವ್ಯಕ್ತಿಯೊಬ್ಬ ಕುಡಿದ ಮತ್ತಲ್ಲಿ ತನ್ನ ತಾಯಿಯನ್ನೇ ಥಳಿಸಿ ಹತ್ಯೆ ಮಾಡಿದ ಘಟನೆ ಜಾರ್ಖಂಡ್‍ನ ಗುಮ್ಲಾ ಜಿಲ್ಲೆಯಲ್ಲಿ ನಡೆದಿದೆ.
ಜಾರ್ಖಂಡ್‍ನ ಗುಮ್ಲಾ ಜಿಲ್ಲೆಯ ಸಾರೆದ್ ಗ್ರಾಮದಲ್ಲಿ ಮನೋಜ್ ಚೀಕ್ ಬಡೈಕ್ (28) ಎಂಬಾತ ಕುಡಿದು ಮನೆಗೆ ಬಂದು ತನ್ನ ತಾಯಿ ಮನ್ಮೈತ್ ದೇವಿ(60)ಯನ್ನು ಥಳಿಸಲು ಪ್ರಾರಂಭಿಸಿದ್ದಾನೆ. ಇದರ ಪರಿಣಾಮವಾಗಿ ಆಕೆ ಸ್ಥಳದಲ್ಲೇ ಮೃತಪಟ್ಟದ್ದಾಳೆ. ಇದಾದ ಬಳಿಕ ಮನೋಜ್ ತನ್ನ ತಾಯಿ ಸಾವನ್ನಪ್ಪಿರುವುದನ್ನು ಗಮನಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಇದನ್ನೂ ಓದಿ: 20ಕ್ಕೂ ಹೆಚ್ಚು ಎಮ್ಮೆ, ಹಸುಗಳ ಮೇಲೆ ಆ್ಯಸಿಡ್ ಎರಚಿದ ಕಿಡಿಗೇಡಿಗಳು!
ಗ್ರಾಮಸ್ಥರು ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಸ್ಥಳಕ್ಕಾಗಮಿಸಿ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಘಟನೆಗೆ ಸಂಬಂಧಿಸಿ ಘಾಘ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಪೊಲೀಸ್ ಠಾಣಾಧಿಕಾರಿ ಮಾತನಾಡಿ, ದೇಹದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ. ಈ ಕುರಿತು ವಿವಿಧ ಆಯಾಮಾದಲ್ಲಿ ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದು, ತಲೆಮರೆಸಿಕೊಂಡಿರುವ ಆರೋಪಿ ಮನೋಜ್‍ಗಾಗಿ ಪೊಲೀಸರು ಹುಡಕಾಡುತ್ತಿದ್ದಾರೆ. ಇದನ್ನೂ ಓದಿ: ಬಿಹಾರ ಸ್ಪೀಕರ್ ಸ್ಥಾನಕ್ಕೆ ವಿಜಯ್ ಕುಮಾರ್ ಸಿನ್ಹಾ ರಾಜೀನಾಮೆ
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಪ್ರತಿಷ್ಠಿತ ಬಾರ್‌ವೊಂದರಲ್ಲಿ ಕಿರುತೆರೆ ನಟ ಹಾಗೂ ಆತನ ಗೆಳೆಯರು ಕಂಠ ಪೂರ್ತಿ ಕುಡಿದು ಶಾಂಪೇನ್ ಬಾಟೆಲ್ ಓಪನ್ ಮಾಡುವ ವಿಚಾರಕ್ಕೆ ಗಲಾಟೆ ಮಾಡಿದ ಆರೋಪ ಬಂದಿದೆ.
ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತು ಆತನ ಗೆಳೆಯ ಚೇತನ್ ಗೌಡ ಶಾಂಪೇನ್ ಓಪನ್ ಮಾಡಿದ್ದಾಗ ಪಕ್ಕದಲ್ಲಿ ಇದ್ದ ಕೃಷ್ಣ ಮತ್ತು ಪ್ರಶಾಂತ್ ಮೇಲೆ ಚೆಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೃಷ್ಣ ಮತ್ತು ಪ್ರಶಾಂತ್ ಶಾಂಪೇನ್ ಚೆಲ್ಲಿದ್ದನ್ನು ಪ್ರಶ್ನಿಸಿದ್ದಕ್ಕೆ ಕೋಪಗೊಂಡ ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತು ಆತನ ಗೆಳೆಯ ಚೇತನ್ ಗೌಡ ಇಬ್ಬರು ಅವಾಚ್ಯ ಶಬ್ದದಿಂದ ಬೈದು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಚಿರತೆ ಆತಂಕ – ಶಾಲೆಗಳಿಗೆ ರಜೆ
ಘಟನೆ ಸಂಬಂಧಿಸಿ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಶಾಂತ್ ದೂರು ದಾಖಲಿಸಿದ್ದು, ಅಪರಿಚಿತ ವ್ಯಕ್ತಿಗಳು ನಮ್ಮ ಜೊತೆಗೆ ಗಲಾಟೆ ಮಾಡಿ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಇನ್ನೂ ಸುನಾಮಿ ಕಿಟ್ಟಿ ಹಾಗೂ ಆತನ ಸ್ನೇಹಿತ ದೂರು ನೀಡಿದ್ದು, ಮದ್ಯ ಚಲ್ಲಿದ್ದ ಕಾರಣಕ್ಕೆ ಗಲಾಟೆ ಮಾಡಿ ಹಲ್ಲೆ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಸದ್ಯ ಎರಡು ಕೇಸ್ ದಾಖಲು ಮಾಡಿಕೊಂಡಿರುವ ಕಬ್ಬನ್ ಪಾರ್ಕ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ:500ಮೀ. ದೂರದವರೆಗೆ ಕಾರನ್ನು ಎಳೆದೊಯ್ದ ಟ್ರಕ್- ಸಮಾಜವಾದಿ ಮುಖಂಡನಿದ್ದ ಕಾರು ಜಖಂ
Live Tv
[brid partner=56869869 player=32851 video=960834 autoplay=true]