Tag: drinks

  • ವಿದ್ಯಾರ್ಥಿನಿಗೆ ವೋಡ್ಕಾ ಕುಡಿಯುವಂತೆ ಒತ್ತಾಯಿಸಿದ ಶಿಕ್ಷಕ

    ವಿದ್ಯಾರ್ಥಿನಿಗೆ ವೋಡ್ಕಾ ಕುಡಿಯುವಂತೆ ಒತ್ತಾಯಿಸಿದ ಶಿಕ್ಷಕ

    ಗಾಂಧಿನಗರ: ಶಿಕ್ಷಕನೊಬ್ಬ ವಿದ್ಯಾರ್ಥಿನಿಯ ಮೇಲೆ ಹಲ್ಲೆ ನಡೆಸಿ ತರಗತಿಯ ವೇಳೆ ತನ್ನೊಟ್ಟಿಗೆ ವೋಡ್ಕಾ ಕುಡಿಯುವಂತೆ ಒತ್ತಾಯಿಸಿದ ಘಟನೆ ಗುಜರಾತ್‍ನ ವಡೋದರಾದಲ್ಲಿ ನಡೆದಿದೆ.

    ಪ್ರಶಾಂತ್ ಖೋಸ್ಲಾ ಬಂಧಿತ ಶಿಕ್ಷಕ. ಈತ ನಿಜಾಂಪುರ ಪ್ರದೇಶದಲ್ಲಿ ಟ್ಯೂಷನ್ ತರಗತಿಗಳನ್ನು ನಡೆಸುತ್ತಿದ್ದ. ಹೀಗೆ ಟ್ಯೂಷನ್ ನಡೆಸುತ್ತಿದ್ದ ಸಂದರ್ಭದಲ್ಲಿ 10ನೇ ತರಗತಿಯ ವಿದ್ಯಾರ್ಥಿನಿಯ ಬಳಿ ತನ್ನೊಂದಿಗೆ ಕುಳಿತು ಮದ್ಯವನ್ನು ಕುಡಿಯುವಂತೆ ಒತ್ತಾಯಿಸಿದ್ದಾನೆ.

    POLICE JEEP

    ಅದಕ್ಕೆ ವಿದ್ಯಾರ್ಥಿನಿ ಒಪ್ಪದಕ್ಕೆ ಆಕೆಯ ಮೇಲೆ ದೈಹಿಕ ಹಲ್ಲೆ ನಡೆಸಿ ಮದ್ಯವನ್ನು ಕುಡಿಸಿದ್ದಾನೆ. ಇದಾದ ಬಳಿಕ ಬಾಲಕಿಯು ಪ್ರಜ್ಞಾಹೀನಳಾಗುತ್ತಿದ್ದಂತೆ ಮನೆಗೆ ಡ್ರಾಪ್ ಮಾಡಿದ್ದಾನೆ. ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗಳನ್ನು ನೋಡಿದ ಪೋಷಕರು ಆಕೆಯನ್ನು ನೋಡಿ ಆತಂಕಕ್ಕೆ ಒಳಗಾಗಿದ್ದಾರೆ. ತಕ್ಷಣ ಅವಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಆಕೆಗೆ ಚಿಕಿತ್ಸೆ ನೀಡಿದ್ದಾರೆ. ಇದನ್ನೂ ಓದಿ: Paytm ನಲ್ಲಿ ಸಮಸ್ಯೆ – ಪಾವತಿ ಕಷ್ಟವಾಗುತ್ತಿದೆ ಎನ್ನುತ್ತಿದ್ದಾರೆ ಬಳಕೆದಾರರು

    ವಿದ್ಯಾರ್ಥಿನಿಗೆ ಪ್ರಜ್ಞೆ ಬಂದ ನಂತರ ಮಹಿಳಾ ಪೊಲೀಸ್ ಅಧಿಕಾರಿ ಬಳಿ ಘಟನೆಯನ್ನು ವಿವರಿಸಿದ್ದಾಳೆ. ಘಟನೆ ಸಂಬಂಧಿಸಿ ಟ್ಯೂಷನ್ ಶಿಕ್ಷಕನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ‍್ಯ ಹೋರಾಟಗಾರರ ಮನೆಗಳಿಗೇ ತೆರಳಿ ಸನ್ಮಾನಿಸಲಿದ್ದಾರೆ ರಾಜ್ಯಪಾಲರು

    Live Tv
    [brid partner=56869869 player=32851 video=960834 autoplay=true]

  • ಯುವಕನ ಮೇಲೆ ಹಲ್ಲೆ ಮಾಡಿ ಕತ್ತು ಬಿಗಿದು, ರಸ್ತೆ ಬದಿಯಲ್ಲಿ ಮೃತದೇಹ ಎಸೆದ ದುಷ್ಕರ್ಮಿಗಳು

    ಯುವಕನ ಮೇಲೆ ಹಲ್ಲೆ ಮಾಡಿ ಕತ್ತು ಬಿಗಿದು, ರಸ್ತೆ ಬದಿಯಲ್ಲಿ ಮೃತದೇಹ ಎಸೆದ ದುಷ್ಕರ್ಮಿಗಳು

    ಹಾವೇರಿ: ದುಷ್ಕರ್ಮಿಗಳು ಯವಕನ ಮೇಲೆ ಹಲ್ಲೆ ಮಾಡಿ ಕತ್ತು ಬಿಗಿದು ಮೃತದೇಹ ಎಸೆದು ಹೋದ ಘಟನೆ ಹಾವೇರಿ ತಾಲೂಕಿನ ಸೋಮನಕಟ್ಟಿ ಗ್ರಾಮದ ಬಳಿ ನಡೆದಿದೆ.

    ಗದಗ ಜಿಲ್ಲೆಯ ನಿವಾಸಿ ನವೀನ್ ರಾಠೋಡ್ (26) ಮೃತ ವ್ಯಕ್ತಿ. ನವೀನ್ ಹಲವು ವರ್ಷಗಳಿಂದ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯಲ್ಲಿ ಚಿಕ್ಕಮ್ಮಳ ಮನೆಯಲ್ಲಿ ವಾಸವಾಗಿದ್ದ. ಆದರೆ ನವೀನ್‌ ದೊಡ್ಡವನಾಗುತ್ತಿದ್ದಂತೆ ದುಶ್ಚಟಕ್ಕೆ ದಾಸನಾಗಿದ್ದ. ಕುಡಿತದ ಜೊತೆಗೆ ಗಾಂಜಾವನ್ನು ರೂಢಿ ಮಾಡಿಕೊಂಡಿದ್ದ. ಅಷ್ಟೇ ಅಲ್ಲದೇ ನವೀನ್‌ ಮೇಲೆ ಕೆಲವೊಂದು ಕಳ್ಳತನದ ಪ್ರಕರಣಗಳಿವೆ. ನವೀನ್‌ನ ಸುಧಾರಣೆಗೆ ಆತನ ಮನೆಯವರು ಸಾಕಷ್ಟು ಪ್ರಯತ್ನಿಸಿದ್ರೂ ಆತ ಮಾತ್ರ ಸುಧಾರಣೆ ಆಗಿರಲಿಲ್ಲ.

    ಮನೆಯಲ್ಲಿ ಪ್ರತ್ಯೇಕ ಕೋಣೆಯಲ್ಲಿ ಇರುತ್ತಿದ್ದ ನವೀನ್ ಮನೆಗೆ ಯಾವಾಗ ಬರ್ತಾನೆ, ಎಲ್ಲಿಗೆ ಹೋಗ್ತಾನೆ ಅನ್ನೋದು ಆತನ ಮನೆಯವರಿಗೆ ಗೊತ್ತಾಗುತ್ತಿರಲಿಲ್ಲ. ಆದರೆ ನಿನ್ನೆ ರಾತ್ರಿ ಮನೆಯಿಂದ ಹೋಗಿದ್ದ ನವೀನ್‍ ಅನ್ನು ಯಾರೋ ಹೊಡೆದು, ಕುತ್ತಿಗೆ ಬಿಗಿದು ಹತ್ಯೆ ಮಾಡಿದ್ದಾರೆ. ನಂತರ ಮೃತದೇಹವನ್ನು ಸೋಮನಕಟ್ಟಿ ಗ್ರಾಮದ ಬಳಿ ಇರುವ ಹಾವೇರಿ-ಗುತ್ತಲ ರಸ್ತೆಯ ಪಕ್ಕದಲ್ಲಿ ಎಸೆದು ಹೋಗಿದ್ದಾರೆ. ಇದನ್ನೂ ಓದಿ: ಬಿಬಿಎಂಪಿ ಚುನಾವಣೆ ನಡೆಸಲು ನಾವು ಸಿದ್ಧ: ಆರ್. ಅಶೋಕ್

    ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಗುತ್ತಲ ಠಾಣೆ ಪೊಲೀಸರು, ಮೃತನ ಬಳಿ ದೊರೆತ ಡ್ರೈವಿಂಗ್ ಲೈಸೆನ್ಸ್ ಆಧಾರದ ಮೇಲೆ ಆತನ ಸಂಬಂಧಿಕರಿಗೆ ವಿಷಯ ಮುಟ್ಟಿಸಿದ್ದಾರೆ. ಘಟನೆಗೆ ಸಂಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪ್ರವೀಣ್ ಹತ್ಯೆ ಪ್ರಕರಣ- ಬಂಧಿತ ಕೆಲಸ ಮಾಡುತ್ತಿದ್ದ ಅಂಗಡಿಗೆ ಮುತ್ತಿಗೆ

    Live Tv
    [brid partner=56869869 player=32851 video=960834 autoplay=true]

  • ಕುಡಿದ ಅಮಲಿನಲ್ಲಿ ಕೂಲಿ ಹಣಕ್ಕಾಗಿ ಸ್ನೇಹಿತರ ಕಿತ್ತಾಟ – ಕೊಲೆಯಲ್ಲಿ ಅಂತ್ಯ

    ಕುಡಿದ ಅಮಲಿನಲ್ಲಿ ಕೂಲಿ ಹಣಕ್ಕಾಗಿ ಸ್ನೇಹಿತರ ಕಿತ್ತಾಟ – ಕೊಲೆಯಲ್ಲಿ ಅಂತ್ಯ

    ಚಿಕ್ಕಬಳ್ಳಾಪುರ: ಕುಡಿದ ಅಮಲಿನಲ್ಲಿ ಕೂಲಿ ಹಣಕ್ಕಾಗಿ ಇಬ್ಬರು ಸ್ನೇಹಿತರ ನಡುವೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬೊಮ್ಮೇಪಲ್ಲಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ರಾಜು ಹಾಗೂ ನಾರಾಯಣಸ್ವಾಮಿ ಇಬ್ಬರು ಸ್ನೇಹಿತರಾಗಿದ್ದರು. ಆದರೆ ಕಳೆದ ಶನಿವಾರ ಗಲಾಟೆ ನಡೆದಿದೆ. ಗಲಾಟೆ ವೇಳೆ ರಾಜುಗೆ ನಾರಾಯಣಸ್ವಾಮಿ ಚಾಕುವಿನಿಂದ ಇರಿದು ಇಟ್ಟಿಗೆಯಿಂದ ಹೊಡೆದಿದ್ದಾನೆ.

    crime

    ಗಾಯಗೊಂಡಿದ್ದ ರಾಜುವನ್ನು ಚಿಂತಾಮಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ಕೆರೆದಕೊಂಡು ಹೋಗುವಂತೆ ವೈದ್ಯರು ತಿಳಿಸಿದ್ದರು. ಆದರೆ ಹಣದ ಕೊರತೆಯಿಂದ ರಾಜು ಬೆಂಗಳೂರಿನ ಆಸ್ಪತ್ರೆಗೆ ಹೋಗಿರಲಿಲ್ಲ. ಇದರಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ರಾಜು ಮೃತಪಟ್ಟಿದ್ದಾನೆ.

    POLICE JEEP

    ಈ ಸಂಬಂಧ ಬಟ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ನಂತರ ಎಸ್ಪಿ ಡಿ ಎಲ್ ನಾಗೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಸಹ ನಡೆಸಿದ್ದು, ಪರಾರಿಯಾಗಿರುವ ಆರೋಪಿ ನಾರಾಯಣಸ್ವಾಮಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೊಡಗಿನ ಬಾರ್‌ಗಳಲ್ಲಿ ನೋ ಸ್ಟಾಕ್- ಮದ್ಯಪ್ರಿಯರಿಗೆ ನಿರಾಸೆ

    ಕೊಡಗಿನ ಬಾರ್‌ಗಳಲ್ಲಿ ನೋ ಸ್ಟಾಕ್- ಮದ್ಯಪ್ರಿಯರಿಗೆ ನಿರಾಸೆ

    ಮಡಿಕೇರಿ: ಆಯಾ ಜಿಲ್ಲೆಗಳಲ್ಲಿ ಇರುವ ಪಾನೀಯ ನಿಗಮದ ಡಿಪೋಗಳಲ್ಲಿ ನೇರವಾಗಿ ಹಣ ಪಾವತಿಸಿಕೊಂಡು ಮದ್ಯ ಸರಬರಾಜು ಮಾಡುತ್ತಿದ್ದ ಕೆಎಸ್ ಬಿಸಿಎಲ್ ಇದೀಗ ಆನ್‍ಲೈನ್ ಮೂಲಕ ಇಂಡೆಂಟ್ ಪಡೆದುಕೊಳ್ಳುತ್ತಿರುವ ಪರಿಣಾಮ ಕೊಡಗಿನ ಎಲ್ಲಾ ಮದ್ಯದಂಗಡಿಗಳಲ್ಲಿ ದಾಸ್ತಾನು ಇಲ್ಲದೆ ಎಲ್ಲವೂ ಖಾಲಿ ಖಾಲಿ ಹೊಡೆಯುತ್ತಿವೆ. ಪರಿಣಾಮ ಚಿಲ್ಡ್ ಮದ್ಯಗಳ ಮತ್ತಿನಲ್ಲಿ ಕೊಡಗಿನಲ್ಲಿ ಎಂಜಾಯ್ ಮಾಡಲು ಬರುತ್ತಿದ್ದ ಪ್ರವಾಸಿಗರು ನಿರಾಸೆ ಅನುಭವಿಸುವಂತೆ ಆಗಿದೆ. ಮತ್ತೊಂದೆಡೆ ಕೊಡಗಿನ ಮದ್ಯ ಮಾರಾಟಗಾರರು ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸುವಂತೆ ಆಗಿದೆ.

    ಏಪ್ರಿಲ್ ಒಂದರಿಂದ ಕೆಎಸ್ ಬಿಸಿಎಲ್ ಮದ್ಯ ಖರೀದಿಗೆ ಹೊಸ ನಿಯಮ ಜಾರಿ ಮಾಡಿದೆ. ಈ ನಿಯಮ ಪ್ರಕಾರ ಮದ್ಯ ಮಾರಾಟಗಾರರು ಆನ್‍ಲೈನ್ ನಲ್ಲಿಯೇ ಮದ್ಯ ಖರೀದಿಯ ಇಂಡೆಂಟ್ ಸಲ್ಲಿಸಬೇಕು. ಆ ಬಳಿಕ ಅವುಗಳ ಬಿಲ್ ಸಿದ್ಧಗೊಂಡಾಗಷ್ಟೇ ಮಾರಾಟಗಾರರು ಮದ್ಯ ಖರೀದಿ ಮಾಡಬೇಕಾಗಿದೆ. ಇದು ವ್ಯಾಪಾರಿಗಳಿಗೆ ತಲೆನೋವಾಗಿ ಪರಿಣಮಿಸಿದ್ದರೆ, ಮದ್ಯ ಪ್ರಿಯರಿಗೆ ತಮ್ಮಿಷ್ಟದ ಮದ್ಯ ಸಿಗದೆ ನಿರಾಸೆ ಅನುಭವಿಸುತ್ತಿದ್ದಾರೆ.

    ವೀಕೆಂಡ್ ದಿನಗಳಲ್ಲಿ ಕೊಡಗಿಗೆ ಬರುವ ಪ್ರವಾಸಿಗರಲ್ಲಿ ಬಹುತೇಕರು ಮದ್ಯವನ್ನು ಸೇವಿಸಿ ಎಂಜಾಯ್ ಮಾಡಿ ಹೋಗುತ್ತಾರೆ. ಆದರೆ ಆನ್‍ಲೈನ್ ಇಂಡೆಂಟ್ ಸಲ್ಲಿಸಿ ಮೂರು ನಾಲ್ಕು ದಿನಗಳಾದರೂ ಬಿಲ್ಲುಗಳು ಸಿದ್ಧಗೊಳ್ಳುತ್ತಿಲ್ಲ. ಹೀಗಾಗಿ ವಾರದ ಕೊನೆ ದಿನಗಳಲ್ಲಿ ಅಗತ್ಯವಿರುವಷ್ಟು ಮದ್ಯ ಇಲ್ಲದೆ ನಿತ್ಯ ಶೇ. 30 ರಿಂದ 40ರಷ್ಟು ನಷ್ಟ ಅನುಭವಿಸುತ್ತಿದ್ದೇವೆ ಎನ್ನುವುದು ಮದ್ಯ ವ್ಯಾಪಾರಿಗಳ ಅಳಲಾಗಿದೆ. ಇದನ್ನೂ ಓದಿ: ಪಾಪ ಸಿದ್ದರಾಮಯ್ಯಗೆ ಇತ್ತೀಚೆಗೆ ಏನಾಗ್ತಿದೆಯೋ ಗೊತ್ತಾಗ್ತಿಲ್ಲ: ಸುಧಾಕರ್ ತಿರುಗೇಟು

    ಇನ್ನು ಕೊಡಗಿಗೆ ಬರುವ ಪ್ರವಾಸಿಗರು ಸಹಜವಾಗಿ ಹೋಂಸ್ಟೇಗಳಲ್ಲಿ ತಂಗುತ್ತಾರೆ. ಈ ವೇಳೆ ತಮಗೆ ಇಷ್ಟವಾದ ಬ್ರ್ಯಾಂಡ್‍ಗಳ ಮದ್ಯವನ್ನು ಕೇಳುತ್ತಾರೆ. ಆದರೆ ಮದ್ಯದಂಗಡಿಗಳಲ್ಲಿ ದಾಸ್ತಾನುಗಳ ಸಮಸ್ಯೆಯಿಂದಾಗಿ ಪ್ರವಾಸಿಗರ ಇಷ್ಟದ ಬ್ರ್ಯಾಂಡ್‍ಗಳು ಸಿಗುತ್ತಿಲ್ಲ. ಇದರಿಂದ ಪ್ರವಾಸಿಗರು ನಿರಾಶರಾಗುತ್ತಿದ್ದು, ಕಳೆದ ಒಂದು ವಾರದಲ್ಲಿ ಕೊಡಗಿಗೆ ಬರುತ್ತಿರುವ ಪ್ರವಾಸಿಗರ ಸಂಖ್ಯೆಯೇ ಕಡಿಮೆ ಆಗಿದೆ ಎಂದು ಹೋಂಸ್ಟೇ ಮಾಲೀಕರು ಕೂಡ ಆತಂಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಡುಬೀದಿಯಲ್ಲೇ 25 ವರ್ಷದ ಮಗನಿಗೆ ಬೆಂಕಿ ಹಚ್ಚಿದ ತಂದೆ: ಸಾವು-ಬದುಕಿನ ನಡ್ವೆ ಹೋರಾಡ್ತಿದ್ದಾಗ ಅರ್ಪಿತ್ ಹೇಳಿದ್ದೇನು..?

    ಒಟ್ಟಿನಲ್ಲಿ ಕೆಎಸ್ ಬಿಸಿಎಲ್ ಮಾಡಿರುವ ಹೊಸ ನಿಯಮದಿಂದ ಕೊಡಗಿನ ಮದ್ಯ ಮಾರಾಟಗಾರರು ಕಳೆದು ಒಂದು ವಾರದಲ್ಲಿಯೇ ಕನಿಷ್ಟ ತಲಾ 4 ಲಕ್ಷ ರೂಪಾಯಿವರೆಗೆ ನಷ್ಟ ಅನುಭವಿಸಿದ್ದಾರೆ. ಮತ್ತೊಂದೆಡೆ ಪ್ರವಾಸಿಗರು ಕೊಡಗಿಗೆ ಬರುವ ಸಂಖ್ಯೆಯೇ ಕಡಿಮೆ ಆಗಿದ್ದು ಇದು ಹೋಂಸ್ಟೇ ಮತ್ತು ರೆಸಾರ್ಟ್ ಉದ್ದಿಮೆ ಮೇಲೂ ದುಷ್ಟರಿಣಾಮ ಬೀರಿದೆ.

  • ಸರ್ಕಾರಿ ಶಾಲೆಯಲ್ಲಿ ಎಣ್ಣೆ ಪಾರ್ಟಿ ಮಾಡಿದ ಪುಂಡರು!

    ಸರ್ಕಾರಿ ಶಾಲೆಯಲ್ಲಿ ಎಣ್ಣೆ ಪಾರ್ಟಿ ಮಾಡಿದ ಪುಂಡರು!

    ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ರಬ್ಬಣಕಲ್ ಕ್ಯಾಂಪ್ ನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಿಡಿಗೇಡಿಗಳು ಶಾಲೆ ಬೀಗ ಮುರಿದು, ತರಗತಿ ಕೊಠಡಿಗಳಲ್ಲಿ ಹೊಸ ವರ್ಷ ಆಚರಿಸಿ ಎಣ್ಣೆ ಪಾರ್ಟಿ ಮಾಡುವ ಮೂಲಕ ಪುಂಡಾಟ ಮೆರೆದಿದ್ದಾರೆ.

    ಶಾಲೆಯ ಎಲ್ಲಾ ದಾಖಲಾತಿಗಳನ್ನು ಚಲ್ಲಾಪಿಲ್ಲಿ ಮಾಡಿ, ಅಡುಗೆ ಕೋಣೆಯಲ್ಲಿನ ಮೊಟ್ಟೆ, ಹಾಲಿನಪುಡಿ, ಅಕ್ಕಿ, ಸಕ್ಕರೆ, ಅಡುಗೆ ಎಣ್ಣೆಯನ್ನು ಕಳ್ಳತನ ಮಾಡಿದ್ದಾರೆ. ಜೊತೆಗೆ ಮಕ್ಕಳಿಗಾಗಿ ನೀಡಲಾಗುತ್ತಿದ್ದ ಆಹಾರ ಪರಿಕರಗಳನ್ನೂ ಕದ್ದೊಯ್ದಿದ್ದಾರೆ. ಶಾಲಾ ದಾಖಲಾತಿಗಳ ಮೇಲೆ ಮದ್ಯದ ಪೌಚ್ ಇಟ್ಟು ವಿಕೃತಿ ಮೆರೆದಿದ್ದಾರೆ. ಇದನ್ನೂ ಓದಿ: ಶಾಲೆಗೆ ಕುಡಿದು ಬರುತ್ತಿದ್ದ ಮುಖ್ಯ ಶಿಕ್ಷಕನ ಎತ್ತಂಗಡಿ ಮಾಡಿಸಿದ ಗ್ರಾಮಸ್ಥರು

    ಶಾಲೆಯ ಕೊಠಡಿಗಳಲ್ಲಿ, ಆವರಣದಲ್ಲಿ ಮದ್ಯದ ಬಾಟಲ್‌ಗಳು, ಮಾಂಸದ ತುಂಡುಗಳು ಬಿದ್ದಿವೆ. ಘಟನೆ ಕುರಿತು ಶಾಲಾ ಮುಖ್ಯೋಪಾಧ್ಯಾಯಿನಿ ಮಾನ್ವಿ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳೀಯ ಪುಂಡ ಯುವಕರೇ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ. ವಿದ್ಯಾ ದೇಗುಲವನ್ನು ದುರ್ಬಳಕೆ ಮಾಡಿಕೊಂಡು ಕಳ್ಳತನ ಮಾಡಿರುವ ಪುಂಡರನ್ನು ಬಂಧಿಸಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಸ್ಥಳೀಯರು ಪೊಲೀಸರಿಗೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನ್ಯೂ ಇಯರ್ ಪಾರ್ಟಿ- ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಯುವಕರು

  • ಬಿಜೆಪಿ ಅಧಿಕಾರಕ್ಕೆ ಬಂದ್ರೆ 70 ರೂ.ಗೆ ಮದ್ಯ: ಆಂಧ್ರ ಬಿಜೆಪಿ ರಾಜ್ಯಾಧ್ಯಕ್ಷ

    ಬಿಜೆಪಿ ಅಧಿಕಾರಕ್ಕೆ ಬಂದ್ರೆ 70 ರೂ.ಗೆ ಮದ್ಯ: ಆಂಧ್ರ ಬಿಜೆಪಿ ರಾಜ್ಯಾಧ್ಯಕ್ಷ

    ಹೈದರಾಬಾದ್: 2024ರ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಒಂದು ಕೋಟಿ ಮತಗಳನ್ನು ನೀಡಿದರೆ ಉತ್ತಮ ಗುಣಮಟ್ಟದ ಮದ್ಯವನ್ನು ಕೇವಲ 70 ರೂಪಾಯಿಗೆ ನೀಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸೋಮು ವೀರರಾಜು ಹೇಳಿದ್ದಾರೆ. ಈ ಹೇಳಿಕೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಟ್ರೋಲ್ ಮಾಡಲು ಶುರು ಮಾಡಿದ್ದಾರೆ.

    ಮಂಗಳವಾರ ವಿಜಯವಾಡದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಹೀಗೆ ಭಿನ್ನವಾದ ಆಫರ್‌ವೊಂದನ್ನು ಜನರ ಮುಂದೆ ಇಡಲಾಗಿದೆ. ಆದರೆ ಇದು ವ್ಯಾಪಕ ಟೀಕೆಗೆ ಒಳಪಟ್ಟಿದೆ. ರಾಜ್ಯ ಸರ್ಕಾರ ಈಗ ನೀಡುತ್ತಿರುವ ಮದ್ಯ ಬಹಳ ಕಳಪೆ ಮಟ್ಟದ್ದಾಗಿದ್ದು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ನಾವು ಉತ್ತಮ ಗುಣಮಟ್ಟದ ಮದ್ಯವನ್ನು ಬಹಳ ಕಡಿಮೆ ಬೆಲೆಗೆ ಕೊಡುತ್ತೇವೆ ಎಂದು ಅವರು ಭರವಸೆ ನೀಡಿದ್ದಾರೆ.

    ಈಗ ಪ್ರತಿಯೊಬ್ಬ ವ್ಯಕ್ತಿಯೂ ತಿಂಗಳಿಗೆ 12 ಸಾವಿರ ರೂಪಾಯಿಗಳನ್ನು ಮದ್ಯಕ್ಕಾಗಿಯೇ ಖರ್ಚು ಮಾಡುತ್ತಾರೆ. ಇದು ಕೂಡಾ ಸರ್ಕಾರವೇ ನಾನಾ ಯೋಜನೆಗಳ ಹೆಸರಿನಲ್ಲಿ ನೀಡುತ್ತಿದೆ. ಆಂಧ್ರ ಪ್ರದೇಶದಲ್ಲಿ ಒಂದು ಕೋಟಿ ಜನ ಮದ್ಯಪಾನ ಮಾಡುತ್ತಾರೆ ಎನ್ನುವ ಅಂಕಿ ಅಂಶಗಳಿದ್ದು, ಈ ಒಂದು ಕೋಟಿ ಜನರೂ ಬಿಜೆಪಿಗೆ ವೋಟು ಹಾಕಿದರೆ ಉತ್ತಮ ಗುಣಮಟ್ಟದ ಮದ್ಯವನ್ನು ಕೇವಲ 70 ರೂಪಾಯಿ ಬೆಲೆಗೆ ನೀಡುತ್ತೇವೆ. ಮುಂದಿನ ದಿನಗಳಲ್ಲಿ ಇದರಿಂದ ಆದಾಯ ಹೆಚ್ಚಾದರೆ ಒಂದು ಕ್ವಾಟರ್‌ಗೆ 50 ರೂಪಾಯಿಗೆ ಕೊಡಲೂ ನಾವು ಸಿದ್ಧ ಎಂದು ತಿಳಿಸಿದರು. ಇದನ್ನೂ ಓದಿ: ಕರ್ನಾಟಕ ಬಂದ್‍ಗೆ ಎರಡೇ ದಿನ ಬಾಕಿ – ಹಲವು ವಲಯಗಳಿಂದ ಇನ್ನು ಸಿಕ್ಕಿಲ್ಲ ಪರಿಪೂರ್ಣ ಬೆಂಬಲ

    ರಾಜ್ಯ ಸರ್ಕಾರ ಕಳಪೆ ಗುಣಮಟ್ಟದ ಮದ್ಯವನ್ನು ಹೆಚ್ಚಿನ ದರಗಳಿಗೆ ಮಾರಾಟ ಮಾಡುತ್ತಿದೆ. ಸ್ಪೆಷಲ್ ಸ್ಟೇಟಸ್, ಗವರ್ನರ್ಸ್ ಮೆಡಲ್‌ನಂತಹ ಲೇಬಲ್‌ಗಳ ಅಡಿಯಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಬ್ರಾಂಡೆಡ್ ಮದ್ಯ ಮಾರಾಟ ಮಾಡುತ್ತಿಲ್ಲ. ಆಡಳಿತ ಪಕ್ಷ ಸಂಪೂರ್ಣ ಮದ್ಯ ನಿಷೇಧ ಎಂದು ಹೇಳಿದರೂ ಬ್ರಾಂಡಿ ತಯಾರಿಸಿ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಭಾರತದ ಮಹಿಳಾ ಯುವ ಉದ್ಯಮಿ ಪಂಖೂರಿ ಶ್ರೀವಾಸ್ತವ ಹೃದಯ ಸ್ತಂಭನದಿಂದ ನಿಧನ

    ಬ್ರಾಂಡ್‌ಗಳ ಮೇಲೆ ಹೆಚ್ಚಿನ ತೆರಿಗೆ ವಿಧಿಸುತ್ತಿರುವ ಕಾರಣ ರಾಜ್ಯದಲ್ಲಿ ಪ್ರಿಮಿಯಂ ಮದ್ಯ ಮಾರಾಟವಾಗುತ್ತಿದೆ. ರಾಜ್ಯ ಸರ್ಕಾರವು ಮದ್ಯದ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಕಡಿತಗೊಳಿಸಿದೆಯಾದರೂ ವಿಶೇಷ ಮಾರ್ಜಿನ್ ಸೇರಿಸಿರುವುದರಿಂದ ಬೆಲೆಗಳು ಬದಲಾಗಿಲ್ಲ. ಹೀಗಾಗಿ ಬೆಲೆ ಇಳಿಕೆಯ ಲಾಭಗಳು ಗ್ರಾಹಕರಿಗೆ ಲಭ್ಯವಾಗುತ್ತಿಲ್ಲ. ಬಡ ವರ್ಗದ ಜನರು ಮದ್ಯ ಸೇವನೆಯನ್ನು ಕಡಿಮೆ ಮಾಡುವ ಉದ್ದೇಶಕ್ಕಾಗಿ ಸರ್ಕಾರ ಮದ್ಯದ ಬೆಲೆ ಹೆಚ್ಚಿಸಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಮಹಡಿಯಿಂದ ಬಿದ್ದ ಎಂಬಿಬಿಎಸ್ ವಿದ್ಯಾರ್ಥಿ!

  • ರಸ್ತೆ ನಡುವೆಯೇ ಮದ್ಯ ತುಂಬಿದ್ದ ಬಾಕ್ಸ್‌ಗೆ ಬೆಂಕಿ ಹಚ್ಚಿದ ಯುವಕರು

    ರಸ್ತೆ ನಡುವೆಯೇ ಮದ್ಯ ತುಂಬಿದ್ದ ಬಾಕ್ಸ್‌ಗೆ ಬೆಂಕಿ ಹಚ್ಚಿದ ಯುವಕರು

    ಹಾಸನ: ಸಕಲೇಶಪುರ ತಾಲೂಕಿನ ಬ್ಯಾಕರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡರಜಗಲಿ ಗ್ರಾಮದಲ್ಲಿ ಯುವಕರೇ ಅಕ್ರಮ ಮದ್ಯ ಮಾರಾಟ ತಡೆಗೆ ಮುಂದಾಗಿದ್ದು, ಗ್ರಾಮಕ್ಕೆ ತಲುಪಿದ್ದ ಮದ್ಯ ವಶಕ್ಕೆ ಪಡೆದು ನಡು ರಸ್ತೆಯಲ್ಲಿಯೇ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    15 ದಿನಗಳ ಹಿಂದೆ ಗ್ರಾಮ ಚನ್ನಯ್ಯ ಅವರ ಪತ್ನಿ ಮದ್ಯ ಸೇವನೆಯಿಂದ ಮೃತಪಟ್ಟಿದ್ದರು. ಇದರಿಂದ ಎಚ್ಚೆತ್ತ ಗ್ರಾಮದ ಯುವಕರು ಗ್ರಾಮದಲ್ಲಿ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಲು ನಿರ್ಧರಿಸಿದ್ದರು. ಅದರಂತೆ ಬ್ಯಾಡರಜಗಲಿ ಗ್ರಾಮದಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ಬೈರಯ್ಯ ಹಾಗೂ ಮುತ್ತಣ್ಣ ಅವರನ್ನು ಕರೆಸಿ ಮದ್ಯ ಮಾರಾಟ ಮಾಡದಂತೆ ಎಚ್ಚರಿಕೆ ನೀಡಿದ್ದರು. ಅವರು ಮದ್ಯ ಮಾರಾಟ ನಿಲ್ಲಿಸುವುದಾಗಿ ಭರವಸೆ ನೀಡಿದ್ದರು.

    ಆದರೂ ಮಂಗಳವಾರ ರಾತ್ರಿ ಸಕಲೇಶಪುರ ಟೋಲ್ ಗೇಟ್ ನ ಬಾರ್‌ವೊಂದರಿಂದ ಬಂದ ವ್ಯಕ್ತಿ ಬೈಕಿನಲ್ಲಿ ಮದ್ಯದ ಬಾಕ್ಸನ್ನು ಮುತ್ತಣ್ಣ ಅವರ ಮನೆಗೆ ತಲುಪಿಸಿ ಹಿಂದಿರುಗುತ್ತಿದ್ದ. ವಿಷಯ ತಿಳಿದು ಯುವಕರು ಆತನನ್ನು ಅಡ್ಡಗಟ್ಟಿ 24 ಕ್ವಾಟರ್ ಒರಿಜಿನಲ್ ಚಾಯ್ಸ್ ಮದ್ಯದ ಪಾಕೆಟ್‌ಗಳನ್ನು ವಶಪಡಿಸಿಕೊಂಡು ರಸ್ತೆಯಲ್ಲಿಯೇ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಾನು ವಿಪಕ್ಷ ಶಾಸಕಿ ಅನ್ನಿಸಿಲ್ಲ, ಬೊಮ್ಮಾಯಿ, BSYಗೆ ನಮಸ್ಕಾರ: ಲಕ್ಷ್ಮಿ ಹೆಬ್ಬಾಳ್ಕರ್‌

    ಗ್ರಾಮದಲ್ಲಿ ಬಹುತೇಕ ಕೂಲಿ ಕಾರ್ಮಿಕರೇ ವಾಸವಿದ್ದಾರೆ. ಗ್ರಾಮದಲ್ಲಿಯೇ ಸುಲಭವಾಗಿ ಮದ್ಯ ಸಿಗುತ್ತಿರುವುದರಿಂದ ಅನೇಕರು ಕುಡಿತದ ಚಟಕ್ಕೆ ಬಲಿಯಾಗಿ ಬದುಕು ಹಾಗೂ ಆರೋಗ್ಯವನ್ನು ಕಳೆದುಕೊಳ್ಳುತ್ತಿದ್ದಾರೆ. ಜೊತೆಗೆ ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸ ಕೊಡಿಸುತ್ತಿಲ್ಲ. ಹಾಗಾಗಿ ಗ್ರಾಮದಲ್ಲಿ ಸಂಪೂರ್ಣವಾಗಿ ಮದ್ಯ ಮಾರಾಟ ನಿಲ್ಲಿಸಬೇಕು ಎಂದು ಗ್ರಾಮದ ಯುವಕರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಟೋಲ್ ಆದಾಯ ಮುಂದಿನ 3 ವರ್ಷಗಳಲ್ಲಿ 1.40 ಲಕ್ಷ ಕೋಟಿ ರೂ.ಗೆ ಏರಿಕೆ

  • ವಾರಕ್ಕೊಮ್ಮೆ ಕುಡಿತಿದ್ದೋರು ಇನ್ಮೇಲೆ ದಿನಾ ಕುಡಿಯಲು ಆರಂಭಿಸ್ತಾರೆ – ಮಹಿಳೆಯರ ಪ್ರತಿಭಟನೆ

    ವಾರಕ್ಕೊಮ್ಮೆ ಕುಡಿತಿದ್ದೋರು ಇನ್ಮೇಲೆ ದಿನಾ ಕುಡಿಯಲು ಆರಂಭಿಸ್ತಾರೆ – ಮಹಿಳೆಯರ ಪ್ರತಿಭಟನೆ

    ಚಿಕ್ಕಮಗಳೂರು: ಗಂಡಂದಿರು ವಾರಕ್ಕೆ ಒಮ್ಮೆ ಕುಡಿಯುತ್ತಿದ್ದರು, ಈಗ ದಿನ ಕುಡಿಯಲು ಆರಂಭಿಸುತ್ತಾರೆ. ಹಾಗಾಗಿ ನಮ್ಮ ಹಳ್ಳಿಗೆ ಬಾರ್ ಬೇಡವೇ ಬೇಡ ಎಂದು ಮಹಿಳೆಯರು ಬಾರ್ ಮುಂದೆ ಪ್ರತಿಭಟನೆ ನಡೆಸಿರೋ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಎಮ್ಮೆದೊಡ್ಡಿ ಸಮೀಪದ ಮುಸ್ಲಾಪುರ ಗ್ರಾಮದಲ್ಲಿ ನಡೆದಿದೆ.

    ಈ ಬಾರ್ ಶುಕ್ರವಾರ ತಾನೇ ಓಪನ್ ಆಗಿತ್ತು. ಬಾರಿನಿಂದ ಮುಂದಾಗೋ ಅನಾಹುತ, ತೊಂದರೆಯನ್ನ ಮನಗಂಡ ಹಳ್ಳಿ ಮಹಿಳೆಯರು ಒಂದೇ ದಿನಕ್ಕೆ ಬಾರ್ ಮುಂದೆ ಧರಣಿ ನಡೆಸಿ ನಮ್ಮ ಹಳ್ಳಿಗೆ ಬಾರ್ ಬೇಡವೇ ಬೇಡ ಎಂದು ಆಗ್ರಹಿಸಿದ್ದಾರೆ.

    ಎಮ್ಮೆದೊಡ್ಡಿಯ ಮುಸ್ಲಾಪುರ ಸುತ್ತಮುತ್ತ ಯಾವುದೇ ಬಾರ್ ಇರಲಿಲ್ಲ. ಹಾಗಾಗಿ ನಿನ್ನೆ ತಾನೇ ನೂತನ ಬಾರ್ ಓಪನ್ ಆಗಿತ್ತು. ಸಾಲದ್ದಕ್ಕೆ ಅದೇ ಮಾರ್ಗದಲ್ಲಿ ಶಾಲೆ ಬೇರೆ ಇದೆ. ಕುಡಿದು ದಾರಿಯಲ್ಲಿ ಹೋಗೋ-ಬರೋ ಹೆಣ್ಮಕ್ಕಳು, ಹೆಂಗಸರಿಗೆ ಕಿಟಲೆ ಮಾಡುವವರ ಸಂಖ್ಯೆಯೂ ಹೆಚ್ಚಾಗುತ್ತೆ. ಅಷ್ಟೆ ಅಲ್ಲದೆ ಈ ಭಾಗದಲ್ಲಿ ಇರುವವರೆಲ್ಲಾ ಕೂಲಿ ಕಾರ್ಮಿಕರು. ಅವರು ಇಷ್ಟು ದಿನ ದುಡಿದು ಜೀವನ ಮಾಡುತ್ತಿದ್ದರು ಎಂದಿದ್ದಾರೆ. ಇದನ್ನೂ ಓದಿ: ದೇಶದಲ್ಲಿ ನೀಡಿದ ಲಸಿಕೆಗಳ ಪೈಕಿ ಶೇ.11 ರಷ್ಟು ಪಾಲು ರಾಜ್ಯದ್ದು: ಡಾ.ಕೆ.ಸುಧಾಕರ್

    ಸುತ್ತಮುತ್ತ ಬಾರ್ ಇಲ್ಲದ ಕಾರಣ ವಾರಕ್ಕೊಮ್ಮೆ ಸಂತೆಗೆ ಹೋದಾಗ ಕುಡಿದು ಬರುತ್ತಿದ್ದರು. ಈಗ ಇಲ್ಲೇ ಬಾರ್ ಮಾಡಿದ್ದಾರೆ. ಇನ್ನು ಮುಂದೆ ದಿನಾ ಕುಡಿಯಲು ಆರಂಭಿಸುತ್ತಾರೆ. ದುಡಿದದ್ದನ್ನೆಲ್ಲಾ ಬಾರಿಗೆ ಹಾಕುತ್ತಾರೆ. ಆಗ ಹೆಂಡತಿ-ಮಕ್ಕಳ ಕಥೆ ಏನೆಂದು ಪ್ರಶ್ನಿಸಿರೋ ಈ ಬಾರಿನಿಂದ ಸುತ್ತಮುತ್ತಲಿನ 28 ಹಳ್ಳಿಗೆ ತೊಂದರೆಯಾಗಲಿದೆ. ಹಾಗಾಗಿ ನಮ್ಮ ಹಳ್ಳಿಗೆ ಬಾರ್ ಬೇಡವೇ ಬೇಡ ಎಂದು ಮಹಿಳೆಯರು-ಪುರುಷರು ಬಾರ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ಲಸಿಕೆಯಲ್ಲಿ ಭಾರತದ ವಿಶ್ವ ದಾಖಲೆ ನೋಡಿ ರಾಜಕೀಯ ಪಕ್ಷವೊಂದಕ್ಕೆ ಜ್ವರ ಬಂದಿದೆ: ಮೋದಿ

  • ದೊಣ್ಣೆಯಿಂದ ಹೊಡೆದು ಅಪ್ಪನನ್ನೇ ಕೊಂದ ಮಗ!

    ದೊಣ್ಣೆಯಿಂದ ಹೊಡೆದು ಅಪ್ಪನನ್ನೇ ಕೊಂದ ಮಗ!

    ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ತಂದೆ-ಮಗನ ನಡುವೆ ಜಗಳವಾಗಿದ್ದು, ದೊಣ್ಣೆಯಿಂದ ಹೊಡೆದು ಮಗನೇ ಅಪ್ಪನನ್ನು ಕೊಲೆ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಮಂಡೇನಕೊಪ್ಪದಲ್ಲಿ ನಡೆದಿದೆ.

    ಕೊಲೆಯಾದವರನ್ನು ಕುಮಾರನಾಯ್ಕ (55) ಎಂದು ಗುರುತಿಸಲಾಗಿದೆ. ಇವರನ್ನು ಮಗ ಮಧು (28) ಕೊಲೆ ಮಾಡಿದ್ದಾನೆ. ಭಾನುವಾರ ರಾತ್ರಿ ಇಬ್ಬರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಆರೋಪಿ ಮಧು ತನ್ನ ತಂದೆಗೆ ದೊಣ್ಣೆಯಿಂದ ಹೊಡೆದಿದ್ದಾನೆ.

    ದೊಣ್ಣೆಯಿಂದ ಹೊಡೆದ ರಭಸಕ್ಕೆ ಕುಮಾರನಾಯ್ಕನ ಕಿವಿಯಲ್ಲಿ ರಕ್ತಸ್ರಾವ ಆಗಿತ್ತು. ಮದ್ಯದ ಅಮಲಿನಲ್ಲಿ ಇದ್ದಿದ್ದರಿಂದ ಕುಮಾರನಾಯ್ಕನಿಗೆ ಇದು ಗೊತ್ತಾಗಿರಲಿಲ್ಲ. ಗಲಾಟೆಯಾದ ನಂತರ ಕುಮಾರನಾಯ್ಕ ಮನೆಯಿಂದ ಹೊರಗೆ ಹೋಗಿದ್ದಾನೆ. ತಡರಾತ್ರಿ ಮನೆಗೆ ವಾಪಸ್ಸಾಗಿ ಮನೆಯ ಜಗುಲಿ ಮೇಲೆ ಮಲಗಿಕೊಂಡಿದ್ದ. ಮಲಗಿದ್ದಲ್ಲಿಯೇ ಪ್ರಾಣ ಬಿಟ್ಟಿದ್ದಾನೆ. ಇದನ್ನೂ ಓದಿ: ಕಟ್ಟಡ ಕುಸಿತ- ಹಲವರು ನಾಪತ್ತೆ

    ತನ್ನ ತಂದೆಯ ಪ್ರಾಣ ಹೋಗಿದ್ದರಿಂದ ಮೃತ ಕುಮಾರನಾಯ್ಕನ ಪುತ್ರ, ಆರೋಪಿ ಮಧು ಯಾರಿಗೂ ತಿಳಿಸದೇ ಅಂತ್ಯ ಸಂಸ್ಕಾರಕ್ಕೆ ಮುಂದಾಗಿದ್ದ. ತನ್ನ ತಂದೆ ಮೃತಪಟ್ಟಿರುವ ವಿಷಯ ತಿಳಿಯುತ್ತಿದ್ದಂತೆ ಮನೆಯ ಬಳಿ ಬಂದ ಕುಮಾರನಾಯ್ಕನ ಪುತ್ರಿ ಶಿಲ್ಪಾಬಾಯಿ ನನ್ನ ತಂದೆಗೆ ಸಹೋದರ ಮಧು ಹಲ್ಲೆ ಮಾಡಿ ಕೊಲೆಗೈದಿದ್ದಾನೆ ಎಂದು ಆರೋಪಿಸಿ, ತುಂಗಾನಗರ ಠಾಣೆಗೆ ದೂರು ನೀಡಿದ್ದಾಳೆ.

    ದೂರು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಮಧುನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

  • ಎಣ್ಣೆಗಾಗಿ ಫ್ರಂಟ್ ಲೈನ್ ವರ್ಕರ್ಸ್ ವ್ಯಾಕ್ಸಿನ್ ಪಡೆದುಕೊಳ್ಳುವುದಕ್ಕೆ ಹಿಂದೇಟು!

    ಎಣ್ಣೆಗಾಗಿ ಫ್ರಂಟ್ ಲೈನ್ ವರ್ಕರ್ಸ್ ವ್ಯಾಕ್ಸಿನ್ ಪಡೆದುಕೊಳ್ಳುವುದಕ್ಕೆ ಹಿಂದೇಟು!

    ಮಡಿಕೇರಿ: ಕೋವಿಡ್ ವ್ಯಾಕ್ಸಿನ್ ಪಡೆದುಕೊಂಡರೆ ಎಣ್ಣೆ ಕುಡಿಯೋದಕ್ಕೆ ಕಂಟಕವಾಗುತ್ತದೆ ಎಂದು ಕೊಡಗಿನಲ್ಲಿ ಕೊರೊನಾ ವಾರಿಯರ್ಸ್ ವ್ಯಾಕ್ಸಿನ್ ಪಡೆದುಕೊಳ್ಳುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ ಎನ್ನುವ ಸತ್ಯ ಇದೀಗ ಬಹಿರಂಗವಾಗಿದೆ.

    ಕೊರೊನಾ ಮಹಾಮಾರಿಯನ್ನು ಬಗ್ಗು ಬಡಿಯಲು ಈಗಾಗಲೇ ಕೋವ್ಯಾಕ್ಸಿನ್ ಸಿದ್ಧಗೊಳಿಸಿ ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಫ್ರಂಟ್ ಲೈನ್ ವರ್ಕರ್ಸ್ ಗೆ ವಿತರಣೆ ಮಾಡಲಾಗುತ್ತಿದೆ. ಆದರೆ ವ್ಯಾಕ್ಸಿನ್ ಪಡೆದುಕೊಂಡರೆ ಎಣ್ಣೆಕುಡಿಯಲು ಸಾಧ್ಯವಾಗುವುದಿಲ್ಲ ಎಂದು ಅದನ್ನು ಪಡೆದುಕೊಳ್ಳುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ.

    ಕೊಡಗು ಜಿಲ್ಲೆಯಲ್ಲಿ ಪೋಲೀಸ್, ಹೋಂಗಾಡ್ರ್ಸ್ ಸೇರಿದಂತೆ ಫ್ರಂಟ್ ಲೈನ್ ನಲ್ಲಿ ಕೆಲಸ ಮಾಡುವ 6 ಸಾವಿರ ಸಿಬ್ಬಂದಿ ಇದ್ದಾರೆ. ಇವರಲ್ಲಿ ಕೇವಲ 1800 ಜನರು ಮಾತ್ರವೇ ಇದುವರೆಗೆ ವ್ಯಾಕ್ಸಿನ್ ಪಡೆದಿದ್ದಾರೆ. ವ್ಯಾಕ್ಸಿನ್ ಪಡೆದುಕೊಳ್ಳುವಂತೆ ಆರೋಗ್ಯ ಇಲಾಖೆ ಹಲವು ಬಾರಿ ಹೇಳಿದರೂ ವ್ಯಾಕ್ಸಿನ್ ಪಡೆದುಕೊಳ್ಳಲು ಫ್ರಂಟ್ ಲೈನ್ ವರ್ಕರ್ಸ್ ಮುಂದಾಗುತ್ತಿಲ್ಲ ಎಂದು ಆರೋಗ್ಯ ಇಲಾಖೆ ಹೇಳುತ್ತಿದೆ. ವ್ಯಾಕ್ಸಿನ್ ಪಡೆದುಕೊಳ್ಳುವುದಕ್ಕೆ ಒತ್ತಾಯ ಮಾಡುವಂತಿಲ್ಲ. ಹೀಗಾಗಿ ಫ್ರಂಟ್ ಲೈನ್ ವರ್ಕರ್ಸ್ ಕೂಡ ಸ್ವಯಂಪ್ರೇರಿತವಾಗಿ ವ್ಯಾಕ್ಸಿನ್ ಪಡೆದುಕೊಳ್ಳಲು ಮುಂದೆ ಬರುತ್ತಿಲ್ಲ.

    ಈ ಕುರಿತು ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಕೂಡ ಶೇ.50 ಕ್ಕಿಂತಲೂ ಕಡಿಮೆ ಪ್ರಮಾಣದಲ್ಲಿ ಫ್ರಂಟ್ ಲೈನ್ ವರ್ಕ್‍ರ್ಸ್ ವ್ಯಾಕ್ಸಿನ್ ಪಡೆದುಕೊಂಡಿಲ್ಲ ಎಂದಿದ್ದಾರೆ. ಕಾರಣವೇನು ಎಂದು ಕೇಳಿದರೆ ನಮ್ಮ ವೈಯಕ್ತಿಕ ಕಾರಣದಿಂದ ವ್ಯಾಕ್ಸಿನ್ ಪಡೆದುಕೊಳ್ಳುತ್ತಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಡಿಎಚ್‍ಓ ಹೇಳಿದ್ದಾರೆ. ಆರೋಗ್ಯ ಇಲಾಖೆಯಲ್ಲೂ ನಿರೀಕ್ಷಿತ ಪ್ರಮಾಣದಲ್ಲಿ ವ್ಯಾಕ್ಸಿನ್ ವಿತರಣೆಯ ಗುರಿ ತಲುಪಿಲ್ಲ. ಇಲ್ಲಿ ಕೂಡ ಶೇ.65 ರಷ್ಟು ಸಿಬ್ಬಂದಿ ಮಾತ್ರ ವ್ಯಾಕ್ಸಿನ್ ಪಡೆದುಕೊಂಡದ್ದಾರೆ. ಉಳಿದವರು ವ್ಯಾಕ್ಸಿನ್ ಪಡೆದುಕೊಂಡಿಲ್ಲ ಎನ್ನೋದು ಸ್ವತಃ ಆರೋಗ್ಯ ಇಲಾಖೆ ಅಧಿಕಾರಿಗಳೇ ಒಪ್ಪಿಕೊಂಡಿದ್ದಾರೆ.

    ಕೊಡಗಿನಲ್ಲಿ ಸಹಜವಾಗಿ ಮದ್ಯಪ್ರಿಯರ ಸಂಖ್ಯೆ ಹೆಚ್ಚಾಗಿದ್ದು, ವ್ಯಾಕ್ಸಿನ್ ಪಡೆದುಕೊಳ್ಳುವುದರ ಮೇಲೆ ಇದು ಪರಿಣಾಮ ಬೀರಿದೆ. ಆದರೆ ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಫ್ರಂಟ್ ಲೈನ್ ವರ್ಕರ್ಸ್ ವ್ಯಾಕ್ಸಿನ್ ಪಡೆದುಕೊಳ್ಳುವುದಕ್ಕೆ ಹಿಂದೇಟು ಹಾಕಿದರೆ, ಜನಸಾಮಾನ್ಯರು ಹೇಗೆ ವ್ಯಾಕ್ಸಿನ್ ಪಡೆದುಕೊಳ್ಳುತ್ತಾರೆ ಎನ್ನೋದು ಸಾಮಾಜಿಕ ಕಾರ್ಯಕರ್ತರ ಪ್ರಶ್ನೆಯಾಗಿದೆ.