Tag: Drone Pratap

  • Breaking- ಮತ್ತೆ ಆಸ್ಪತ್ರೆ ಪಾಲಾದ ಡ್ರೋನ್ ಪ್ರತಾಪ್: ಹೆಚ್ಚಿದ ಆತಂಕ

    Breaking- ಮತ್ತೆ ಆಸ್ಪತ್ರೆ ಪಾಲಾದ ಡ್ರೋನ್ ಪ್ರತಾಪ್: ಹೆಚ್ಚಿದ ಆತಂಕ

    ನಿನ್ನೆ ರಾತ್ರಿಯಿಂದಲೇ ಬಿಗ್ ಬಾಸ್ (Bigg Boss Kannada) ಮನೆಯಲ್ಲಿ ಡ್ರೋನ್ ಪ್ರತಾಪ್ (Drone Pratap) ಕಾಣಿಸಿಕೊಂಡಿಲ್ಲ. ಹಾಗಾಗಿ ಸಹಜವಾಗಿಯೇ ಅವರ ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗಿದೆ. ಕಳೆದ ಬಾರಿ ಕಣ್ಣಿಗೆ ಸೋಪಿನ ನೀರು ಹಾಕಿಸಿಕೊಂಡು ಆಸ್ಪತ್ರೆ (Hospital) ಸೇರಿದ್ದರು. ಆದರೆ, ಈ ಬಾರಿ ಅವರಿಗೆ ಆಹಾರದಲ್ಲಿ ವ್ಯತ್ಯಾಸವಾಗಿ ಆಸ್ಪತ್ರೆ ಸೇರಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಇನ್ನೂ ಕೆಲವರು ಬಿಗ್ ಬಾಸ್ ಮನೆಗೆ ವಾಪಸ್ಸು ಆಗದೇ ಇರುವಂತಹ ಘಟನೆ ನಡೆದಿದೆ ಎಂದೂ ಬರೆದುಕೊಂಡಿದ್ದಾರೆ.

    ಫುಡ್ ಪಾಯಿಸನ್ ಆಗಿದೆ ಎಂದು ಕೆಲವು ಮೂಲಗಳು ಮಾಹಿತಿ ನೀಡಿದರೆ, ಇನ್ನೂ ಕೆಲವರು ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ಹೇಳುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಕೋವಿಡ್ ಸೋಂಕು ಏನಾದರೂ ತಗಲಿರಬಹುದಾ ಎನ್ನುವ ಪ್ರಶ್ನೆಯನ್ನೂ ಮಾಡಿದ್ದಾರೆ. ಹಾಗಾಗಿ ಸಹಜವಾಗಿಯೇ ಡ್ರೋನ್ ಪ್ರತಾಪ್ ಅವರ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ. ಪ್ರತಾಪ್ ಅವರಿಗೆ ಏನಾಗಿದೆ ಎಂದು ತಿಳಿಸಿ ಎಂದು ವಾಹಿನಿಗೆ ಸೋಷಿಯಲ್ ಮೀಡಿಯಾ ಮೂಲಕ ಕೇಳುತ್ತಿದ್ದಾರೆ.

    ಡ್ರೋನ್ ಪ್ರತಾಪ್ ಅವರ ಟೀಮ್ ಹ್ಯಾಂಡಲ್ ಮಾಡುವಂತಹ ಸೋಷಿಯಲ್ ಮೀಡಿಯಾದಲ್ಲಿ ಊಟದಲ್ಲಿ ಸ್ವಲ್ಪ ವ್ಯತ್ಯಾಸ ಉಂಟಾಗಿ ಹುಷಾರು ತಪ್ಪಿದ್ದಾರೆ. ಇನ್ನ ಸ್ವಲ್ಪ ಸಮಯದ ಒಳಗೆ ಬಿಗ್ ಬಾಸ್ ಮನೆಗೆ ನಿಮ್ಮ ಡ್ರೋನ್ ಪ್ರತಾಪ್ ಅವರು ತೆರಳಿದ್ದಾರೆ. ಅವರಿಗೆ ವೋಟ್ ಮಾಡಿ’ ಎಂದು ಪೋಸ್ಟ್ ಮಾಡಿದ್ದಾರೆ.

    ಬಿಗ್ ಬಾಸ್ ಮನೆಯ ಅಪ್ ಡೇಟ್ ನೀಡುವಂತಹ ಮತ್ತು ಅದರಲ್ಲಿ ಬಹುತೇಕ ವಿಷಯಗಳು ನಿಜವೂ ಆಗಿರುವಂತಹ ಬಿಬಿಕೆ ಅಪ್ ಡೇಟ್ ಸೋಷಿಯಲ್ ಮೀಡಿಯಾ ಬರೆದುಕೊಂಡಂತೆ ಮತ್ತೆ ಬಿಗ್ ಬಾಸ್ ಮನೆಗೆ ಪ್ರತಾಪ್ ಬರೋದು ಅನುಮಾನ ಎಂದು ಪೋಸ್ಟ್ ಮಾಡಲಾಗಿದೆ. ಹಾಗಾಗಿ ಡ್ರೋನ್ ಅವರಿಗೆ ಏನಾಗಿದೆ ಎನ್ನುವ ಆತಂಕ ಎಲ್ಲರದ್ದು.

  • ಡ್ರೋಣ್ ಪ್ರತಾಪ್ ಗೆ ಲೀಗಲ್ ನೋಟಿಸ್ ಕಳುಹಿಸಿದ ಡಾ.ಪ್ರಯಾಗ್

    ಡ್ರೋಣ್ ಪ್ರತಾಪ್ ಗೆ ಲೀಗಲ್ ನೋಟಿಸ್ ಕಳುಹಿಸಿದ ಡಾ.ಪ್ರಯಾಗ್

    ಬಿಗ್ ಬಾಸ್ ಮನೆಯಲ್ಲಿ ತಮ್ಮ ಬಗ್ಗೆ ತಪ್ಪು ಮಾಹಿತಿ ನೀಡಿದ್ದಲ್ಲದೇ, ಮಾನಹಾನಿ ಆಗುವಂತ ಮಾತುಗಳನ್ನು ಆಡಿರುವ ಕಾರಣದಿಂದಾಗಿ ಡ್ರೋಣ್ ಪ್ರತಾಪ್ ಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ ಡಾ.ಪ್ರಯಾಗ್ ಪರ ವಕೀಲರು. ಪಶು ವೈದ್ಯರಾಗಿರುವ ಡಾ.ಪ್ರಯಾಗ್ ಈ ಹಿಂದೆ ಬಿಬಿಎಂಪಿ ಯಲ್ಲಿ ನೋಡಲ್ ಅಧಿಕಾರಿಯಾಗಿದ್ದರು. ಕೊರೋನಾ ಅವಧಿಯಲ್ಲಿ ಅಧಿಕಾರಿ ಹೊಡೆದು ಟಾರ್ಚರ್ ಕೊಟ್ಟರು ಅಂತ ಬಿಗ್ ಬಾಸ್ ವೇದಿಕೆಯಲ್ಲಿ ಪ್ರತಾಪ್ ಮಾತನಾಡಿದ್ದರು.

    ಪ್ರತಾಪ್ ಬಿಗ್ ಬಾಸ್ ವೇದಿಕೆಯಲ್ಲಿಯೇ  ಕ್ಷಮೆಯಾಚನೆ ಮಾಡಬೇಕು. ಲಿಖಿತ ರೂಪದಲ್ಲಿ ಕ್ಷಮೆಯಾಚನೆ ಮಾಡಬೇಕು ಎಂದು ವಕೀಲರ ಮೂಲಕ ಲೀಗಲ್ ನೋಟಿಸ್‌ ಕಳುಹಿಸಿದ್ದಾರೆ. ಲಿಖಿತ ರೂಪದಲ್ಲಿ ಕ್ಷಮೆಯಾಚನೆಯನ್ನು ಬರೆಯದೇ ಇದ್ರೇ ಮಾನನಷ್ಟ ಮೊಕದ್ದಮೆ ಹಾಕೋದಾಗಿ ನೋಟಿಸ್ ಕಳುಹಿಸಿದ್ದಾರೆ ಡಾ.ಪ್ರಯಾಗ್.

    ಏನಿದು ಪ್ರಕರಣ?

    ಬಿಗ್‍ಬಾಸ್ ಸ್ಪರ್ಧಿ ಡ್ರೋಣ್ ಪ್ರತಾಪ್‍ಗೆ ಸಂಕಷ್ಟ ಎದುರಾಗಿದೆ. ಕ್ವಾರಂಟೈನ್ ಕಹಾನಿ ಹೇಳಿಕೊಂಡು ಡ್ರೋಣ್ ಪ್ರತಾಪ್ (Drone Prathap) ಬಿಬಿಎಂಪಿ ನೋಡಲ್ ಅಧಿಕಾರಿ ಮೇಲೆ ಗಂಭೀರ ಆರೋಪ ಮಾಡಿದ್ದರು. ಕ್ವಾರಂಟೈನ್ ಸಮಯದಲ್ಲಿ ಅಧಿಕಾರಿಯೊಬ್ಬರು ನನ್ನನ್ನು ಕೆಟ್ಟದಾಗಿ ನಡೆಸಿಕೊಂಡಿದ್ದರು. ಮೆಂಟಲಿ ಅನ್‍ಸ್ಟೇಬಲ್ ಅಂತಾ ಸಹಿ ಮಾಡುವಂತೆ ತಲೆತಲೆಗೆ ಹೊಡೆದು ಕಿರುಕುಳ ಕೊಟ್ಟರು. ಹೋಟೆಲ್‍ನಿಂದ ಕೆಳಗೆ ಬಂದ್ಮೇಲೆ ನನಗೆ ಏನೇನು ಮಾಡಿದ್ರೋ, ಅದನ್ನ ಸ್ವಲ್ಪ ಹೇಳಿದೆ. ಇವ್ನು ಹೇಗಿದ್ರೂ ಸುಳ್ಳು ಹೇಳ್ತಾನೆ. ಇವ್ನು ಹೇಳೋದೇ ಸುಳ್ಳು.. ನಂಬಬೇಡಿ ಎಂದು ಮಾಧ್ಯಮಗಳಿಗೆ ಹೇಳಿ ಕಳುಹಿಸಿದರು. ಕ್ವಾರಂಟೈನ್‍ನಲ್ಲಿ ಮಾನಸಿಕ ಹಿಂಸೆ ಕೊಟ್ರು, ಹುಚ್ಚ ಅಂತಾ ಪೇಪರ್ ಗೆ ಸಹಿಹಾಕು ಅಂತಾ ಹೇಳಿದ್ರು ಎಂದು ಡ್ರೋಣ್ ಪ್ರತಾಪ್ ಆರೋಪ ಮಾಡಿದ್ರು.

    ಪ್ರತಾಪ್ ಕ್ವಾರಂಟೈನ್ ರೂಲ್ಸ್ ಉಲ್ಲಂಘನೆ ವಿರುದ್ಧ ನಾನೇ ಕೇಸ್ ದಾಖಲಿಸಿದ್ದೆ. ಕಾನೂನು ಪ್ರಕಾರವೇ ನಾನು ಕಾರ್ಯನಿರ್ವಹಿಸಿದ್ದೆ. ಇಡೀ ಆತನ ಕ್ವಾರಂಟೈನ್ ಪ್ರಕ್ರಿಯೆಯಲ್ಲಿ ನಾನೇ ನೋಡಲ್ ಅಧಿಕಾರಿಯಾಗಿ ನಿಗಾ ವಹಿಸಿದ್ದೆ. ಆದರೆ ಈತ ಹೇಳುತ್ತಿರುವ ಮಾತುಗಳಲ್ಲಿ ಯಾವುದೇ ಹುರುಳಿಲ್ಲ. ಆತನಿಗೆ ನಾನು ಯಾವುದೇ ಮಾನಸಿಕ ಹಿಂಸೆ ಕೊಟ್ಟಿಲ್ಲ. ಆತನ ತಲೆಯ ಮೇಲೆ ಹೊಡೆದಿಲ್ಲ. ಪ್ರತಾಪ್ ಮಹಾನ್ ಸುಳ್ಳುಗಾರ, ಈತ ಹೇಳುವ ಮಾತಿಗೆ ಒಂದೇ ಒಂದು ಸಾಕ್ಷ್ಯ ಒದಗಿಸಲಿ. ಆತನ ಆರೋಪ ನಿಜವಾಗಿದ್ದರೆ ನಾನು ರಾಜೀನಾಮೆ ಕೊಟ್ಟು ಹೊರಟು ಹೋಗುತ್ತೇನೆ ಎಂದು ಬಿಬಿಎಂಪಿ (BBMP) ನೋಡಲ್ ಅಧಿಕಾರಿ ಹೇಳಿದ್ದರು.

     

    ಆತನ ವೈಯಕ್ತಿಕ ವಿಚಾರ…. ತಂಗಿ, ಮದುವೆ, ತಾಯಿ ಯಾವುದೂ ನಾನು ಮಾತಾನಾಡಿಲ್ಲ. ಪ್ರತಾಪ್ ತಂದೆ ಬಹಳ ಒಳ್ಳೆಯವರು. ಬೇಕಾದ್ರೇ ಅವರನ್ನು ಕೇಳಲಿ. ಇದುವರೆಗೆ ಆತನಿಗೆ ಹಿಂಸೆ ಆಗಿದ್ದರೆ ಯಾಕೆ ನನ್ನ ವಿರುದ್ಧ ದೂರು ಕೊಡಲಿಲ್ಲ..?. ಆತನ ಮನೆಯ ವಾಚ್ ಮ್ಯಾನ್ ಇದ್ದ. ನಾವು ಅಪಾರ್ಟ್‍ಮೆಂಟ್ ಬೀಗ ಒಡೆದಿಲ್ಲ. ಪ್ರತಾಪ್ ಸುಳ್ಳು ಹೇಳ್ಕೊಂಡು ಟೋಪಿ ಹಾಕೋನು. ಆತನನ್ನು ಒಳ್ಳೆ ಹೋಟೆಲ್‍ನಲ್ಲಿ ಇರಿಸಿ ಉತ್ತಮ ಊಟ ಕೊಟ್ಟು ಇರಿಸಿದ್ದೇವೆ. ಇನ್ನೆರಡು ದಿನದಲ್ಲಿ ಕ್ಷಮೆಯಾಚನೆ ಮಾಡದೇ ಇದ್ರೇ ಕಾನೂನು ಹೋರಾಟ ಮಾಡುತ್ತೇನೆ. ಬಿಗ್ ಬಾಸ್ ವೇದಿಕೆಯಲ್ಲಿ ಕ್ಷಮೆಯಾಚನೆ ಮಾಡದೆ ಇದ್ರೇ ಮಾನನಷ್ಟ ಮೊಕದ್ದಮೆ ಹಾಕ್ತೇನೆ ಅಂತ ವಾರ್ನಿಂಗ್ ಕೊಟ್ಟಿದ್ದರು. ಇದೀಗ ನೋಟಿಸ್ ಕಳುಹಿಸಿದ್ದಾರೆ.

  • ಪ್ರತಾಪ್, ಸಂಗೀತಾ ಕಣ್ಣಿಗೆ ಹಾನಿ: ಕನ್ನಡಕ ಹಾಕಿಕೊಂಡು ಎಂಟ್ರಿ

    ಪ್ರತಾಪ್, ಸಂಗೀತಾ ಕಣ್ಣಿಗೆ ಹಾನಿ: ಕನ್ನಡಕ ಹಾಕಿಕೊಂಡು ಎಂಟ್ರಿ

    ಬಿಗ್ ಬಾಸ್ (Bigg Boss Kannada) ಮನೆಯಲ್ಲಿ ಈ ವಾರವಿಡೀ  ಮನೆ ಪ್ರಕ್ಷುಬ್ದವಾಗಿಯೇ ಇತ್ತು. ರಕ್ಕಸರು-ಗಂಧರ್ವರ ನಡುವಿನ ಜಿದ್ದಾಜಿದ್ದಿ ವೈಯಕ್ತಿಕ ಮಟ್ಟಕ್ಕೆ ಇಳಿದು, ದೈಹಿಕವಾಗಿ ಗಾಯಗೊಳ್ಳುವ ಅತಿರೇಕಕ್ಕೂ ಹೋಯಿತು. ಪರಿಣಾಮವಾಗಿ ಸಂಗೀತಾ (Sangeeta Sringeri) ಮತ್ತು ಪ್ರತಾಪ್ (Drone Pratap) ಇಬ್ಬರೂ ಆಸ್ಪತ್ರೆ ಸೇರಿಕೊಳ್ಳುವಂತಾಗಿತ್ತು. ಅದೆಲ್ಲದ ಪರಿಣಾಮವಾಗಿ ಈ ವಾರದ ‘ಕಿಚ್ಚನ ಪಂಚಾಯ್ತಿ’ಯಲ್ಲಿ ಸುಂಟರಗಾಳಿಯೇ ಏಳುವ ಸಂಭವವಿದೆ. ಇದರ ಸೂಚನೆ JioCinema ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಸಿಕ್ಕಿದೆ.

    ಗಂಧರ್ವರು ರಕ್ಕಸರಾಗದ್ದಕ್ಕೆ, ರಕ್ಕಸರು ಕಟುಕರಾಗಿ ಬದಲಾಗಿದ್ದಕ್ಕೆ, ವಿನಂತಿಗಳು ಅಪ್ಪಣೆಗಳಾಗಿ ಬದಲಾಗಿದ್ದಕ್ಕೆ ಕಿಚ್ಚ ಸುದೀಪ್‌, ‘ಪಂಚಾಯ್ತಿ’ಯಲ್ಲಿ ಚರ್ಚೆ ನಡೆಸಿದ್ದಾರೆ. ಎರಡು ದಿನಗಳ ಹಿಂದೆಯೇ ಟಾಸ್ಕ್‌ನಲ್ಲಿ ಗಾಯಗೊಂಡು ತುರ್ತಾಗಿ ಪ್ರತಾಪ್-ಸಂಗೀತಾ ಆಸ್ಪತ್ರೆಗೆ ಸೇರಿದ್ದರು. ಅವರ ಬಗ್ಗೆ ಮನೆಯವರಿಗೆ ಸುಳಿವೇ ಇರಲಿಲ್ಲ. ಆದರೆ ಇಂದು ಕಿಚ್ಚನ ಪಂಚಾಯ್ತಿಗೆ ಎಲ್ಲರೂ ರೆಡಿಯಾಗಿ ಕೂತಿದ್ದಾಗ ಬಿಗ್‌ಬಾಸ್ ಮನೆಯ ಬಾಗಿಲು ತೆರೆದುಕೊಂಡಿದೆ. ತೆರೆದ ಬಾಗಿಲಿನಿಂದ ಪ್ರತಾಪ್ ಮತ್ತು ಸಂಗೀತಾ ಇಬ್ಬರೂ ಒಳಗೆ ಬಂದಿದ್ದಾರೆ. ಆದರೆ ಅವರನ್ನು ನೋಡಿ ಮನೆಯವರೆಲ್ಲರೂ ಶಾಕ್ ಆಗಿದ್ದಾರೆ. ತನಿಷಾ ಅವರಂತೂ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

    ಮನೆಯೊಳಗೆ ಬಂದ ಪ್ರತಾಪ್ ಮತ್ತು ಸಂಗೀತಾ ಇಬ್ಬರ ಕಣ್ಣಿಗೂ ಬಿಸಿಲುರಕ್ಷಕ ಕಡುಗಪ್ಪು ಕನ್ನಡಕವನ್ನು ಹಾಕಲಾಗಿದೆ. ಟಾಸ್ಕ್‌ನಲ್ಲಿ ಉಂಟಾದ ಹಾನಿಯ ಪರಿಣಾಮವಾಗಿ ಅವರು ಕನ್ನಡಕ ಧರಿಸಿಯೇ ಮನೆಯೊಳಗೆ ಪ್ರವೇಶಿಸಿದ್ದಾರೆ.

     

    ಹಾಗಾದರೆ, ಪ್ರತಾಪ್ ಮತ್ತು ಸಂಗೀತಾ ಆರೋಗ್ಯ ಈಗ ಹೇಗಿದೆ? ಅವರು ಬಿಗ್‌ಬಾಸ್ ಮನೆಯಲ್ಲಿ ಮುಂದುವರಿಯುವಷ್ಟು ಆರೋಗ್ಯವಂತರಾಗಿದ್ದಾರೆಯೇ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಈ ವಾರದ ವೀಕೆಂಡ್‌ ಎಪಿಸೋಡ್‌ನಲ್ಲಿ ಸಿಗಲಿದೆ.

  • ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡ್ರೋನ್, ಸಂಗೀತಾ

    ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡ್ರೋನ್, ಸಂಗೀತಾ

    ನಿನ್ನೆ ದಿಢೀರ್ ನೆ ದೊಡ್ಮನೆಯಿಂದ ಡ್ರೋನ್ ಪ್ರತಾಪ್ (Drone Pratap) ಮತ್ತು ಸಂಗೀತಾ ಶೃಂಗೇರಿ (Sangeetha Sringeri) ಹೊರ ಬಂದಿದ್ದಾರೆ. ಟಾಸ್ಕ್ ವೊಂದರಲ್ಲಿ ಅವರ ಮುಖಕ್ಕೆ ಕೆಮಿಕಲ್ ನೀರು ಹಾಕಿದ ಕಾರಣದಿಂದಾಗಿ ಅವರು ಅಸ್ವಸ್ಥಗೊಂಡಿದ್ದರು ಎಂದು ಹೇಳಲಾಗುತ್ತಿದೆ. ಕಣ್ಣಿಗೆ ಮತ್ತು ಮೂಗು, ಬಾಯಿಗೆ ನೀರು ಬಿದ್ದ ಪರಿಣಾಮದಿಂದ ಡ್ರೋನ್ ಮತ್ತು ಸಂಗೀತಾ ಒದ್ದಾಡಿದ್ದಾರೆ ಎನ್ನುವ ಮಾಹಿತಿ ಇದೆ. ಅವರೀಗ ಆಸ್ಪತ್ರೆಯಲ್ಲಿ (Hospital) ಚಿಕಿತ್ಸೆ ಪಡೆಯುತ್ತಿದ್ದಾರೆ.

    ಕಳೆದ ಎರಡು ದಿನಗಳಿಂದ ಗಂಧರ್ವರು ಮತ್ತು ರಾಕ್ಷಸರು ಎಂದು ಎರಡು ಗುಂಪುಗಳಾನ್ನಾಗಿ ಮಾಡಿ, ಹಲವು ಟಾಸ್ಕ್ ಗಳನ್ನು ನೀಡಲಾಗಿದೆ. ಈ ಟಾಸ್ಕ್ ನಲ್ಲಿ ಡ್ರೋನ್ ಮತ್ತು ಸಂಗೀತಾ ಗಾಯ ಮಾಡಿಕೊಂಡಿದ್ದಾರೆ ಎನ್ನುವುದು ಲೇಟೆಸ್ಟ್ ಅಪ್ ಡೇಟ್. ಈ ವಿಷಯದ ಕುರಿತಂತೆ ವಾಹಿನಿಯಾಗಲಿ ಅಥವಾ ಸಂಬಂಧಿಸಿದವರಾಗಲಿ ಯಾವುದೇ ಮಾಹಿತಿ ನೀಡಿಲ್ಲ. ಆದರೆ, ಸೋಷಿಯಲ್ ಮೀಡಿಯಾದಲ್ಲಿ ಮಾತ್ರ ನ್ಯೂಸ್ ಭರ್ಜರಿ ಸೇಲ್ ಆಗುತ್ತಿದೆ.

    ರಾಕ್ಷಸರು ಮತ್ತು ಗಂಧರ್ವರ ಗುಂಪುಗಳ ನಡುವೆ ಭಾರೀ ಕದನವೇ ನಡೆಯುತ್ತಿದೆ. ಹಲವರು ಟಾರ್ಗೆಟ್ ಮಾಡಿಕೊಂಡು ಆಡುತ್ತಿದ್ದಾರೆ. ಅದರಲ್ಲೂ ಸಂಗೀತಾ ಮತ್ತು ವಿನಯ್ ಮಧ್ಯ, ಕಾರ್ತಿಕ್ ಮತ್ತು ವಿನಯ್ ಮಧ್ಯ, ಸಂಗೀತಾ ಮತ್ತು ನಮ್ರತಾ ಮಧ್ಯ ಹೀಗೆ ವೈಯಕ್ತಿಕವಾಗಿ ಆಟಗಳನ್ನು ಆಡುತ್ತಿದ್ದಾರೆ. ಒಬ್ಬರಿಗೊಬ್ಬರನ್ನು ಕೆಣಕುತ್ತಿದ್ದಾರೆ. ಇದು ಎಲ್ಲೋ ಒಂದು ಕಡೆ ಅನಾಹುತ ಮಾಡಲಿದೆ ಎಂದೇ ಅಂದಾಜಿಸಲಾಗಿತ್ತು. ಬಹುಶಃ ಅದೇ ಆಗಿರಬಹುದು.

     

    ಕೆಮಿಕಲ್ ನೀರಿನ ಪರಿಣಾಮದಿಂದಾಗಿ ಸದ್ಯಕ್ಕೆ ಡ್ರೋನ್ ಮತ್ತು ಸಂಗೀತಾರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಹಿಂದೆ ತನಿಷಾರನ್ನು ಹೀಗೆಯೇ ಎರಡು ದಿನಗಳ ಕಾಲ ಆಸ್ಪತ್ರೆಯಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿತ್ತು. ಆನಂತರ ಬಿಗ್ ಬಾಸ್ (Bigg Boss Kannada) ಮನೆಗೆ ಕರೆತರಲಾಗಿತ್ತು. ಈ ಇಬ್ಬರನ್ನೂ ಹಾಗೆಯೇ ಮಾಡುವ ಸಾಧ್ಯತೆ ಇದೆ.

  • Breaking-‘ಬಿಗ್ ಬಾಸ್’ ಮನೆಯಿಂದ ಹೊರಬಂದ ಡ್ರೋನ್ ಮತ್ತು ಸಂಗೀತಾ

    Breaking-‘ಬಿಗ್ ಬಾಸ್’ ಮನೆಯಿಂದ ಹೊರಬಂದ ಡ್ರೋನ್ ಮತ್ತು ಸಂಗೀತಾ

    ದೊಡ್ಮನೆಯಿಂದ ಡ್ರೋನ್ ಪ್ರತಾಪ್ (Drone Pratap) ಮತ್ತು ಸಂಗೀತಾ ಶೃಂಗೇರಿ (Sangeetha Sringeri) ಹೊರ ಬಂದಿದ್ದಾರೆ ಎನ್ನುವ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಟಾಸ್ಕ್ ನಲ್ಲಿ ಇಬ್ಬರಿಗೂ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎನ್ನುವ ಮಾಹಿತಿ ಇದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ಟೆಲಿಕಾಸ್ಟ್ ಆಗುತ್ತಿದ್ದು, ಅಲ್ಲಿಯೂ ಇಬ್ಬರೂ ಕಾಣಿಸಿಕೊಳ್ಳುತ್ತಿಲ್ಲ.

    ಕಳೆದ ಎರಡು ದಿನಗಳಿಂದ ಗಂಧರ್ವರು ಮತ್ತು ರಾಕ್ಷಸರು ಎಂದು ಎರಡು ಗುಂಪುಗಳಾನ್ನಾಗಿ ಮಾಡಿ, ಹಲವು ಟಾಸ್ಕ್ ಗಳನ್ನು ನೀಡಲಾಗಿದೆ. ಈ ಟಾಸ್ಕ್ ನಲ್ಲಿ ಡ್ರೋನ್ ಮತ್ತು ಸಂಗೀತಾ ಗಾಯ ಮಾಡಿಕೊಂಡಿದ್ದಾರೆ ಎನ್ನುವುದು ಲೇಟೆಸ್ಟ್ ಅಪ್ ಡೇಟ್. ಈ ವಿಷಯದ ಕುರಿತಂತೆ ವಾಹಿನಿಯಾಗಲಿ ಅಥವಾ ಸಂಬಂಧಿಸಿದವರಾಗಲಿ ಯಾವುದೇ ಮಾಹಿತಿ ನೀಡಿಲ್ಲ. ಆದರೆ, ಸೋಷಿಯಲ್ ಮೀಡಿಯಾದಲ್ಲಿ ಮಾತ್ರ ನ್ಯೂಸ್ ಭರ್ಜರಿ ಸೇಲ್ ಆಗುತ್ತಿದೆ.

    ರಾಕ್ಷಸರು ಮತ್ತು ಗಂಧರ್ವರ ಗುಂಪುಗಳ ನಡುವೆ ಭಾರೀ ಕದನವೇ ನಡೆಯುತ್ತಿದೆ. ಹಲವರು ಟಾರ್ಗೆಟ್ ಮಾಡಿಕೊಂಡು ಆಡುತ್ತಿದ್ದಾರೆ. ಅದರಲ್ಲೂ ಸಂಗೀತಾ ಮತ್ತು ವಿನಯ್ ಮಧ್ಯ, ಕಾರ್ತಿಕ್ ಮತ್ತು ವಿನಯ್ ಮಧ್ಯ, ಸಂಗೀತಾ ಮತ್ತು ನಮ್ರತಾ ಮಧ್ಯ ಹೀಗೆ ವೈಯಕ್ತಿಕವಾಗಿ ಆಟಗಳನ್ನು ಆಡುತ್ತಿದ್ದಾರೆ. ಒಬ್ಬರಿಗೊಬ್ಬರನ್ನು ಕೆಣಕುತ್ತಿದ್ದಾರೆ. ಇದು ಎಲ್ಲೋ ಒಂದು ಕಡೆ ಅನಾಹುತ ಮಾಡಲಿದೆ ಎಂದೇ ಅಂದಾಜಿಸಲಾಗಿತ್ತು. ಬಹುಶಃ ಅದೇ ಆಗಿರಬಹುದು.

    ಸದ್ಯಕ್ಕೆ ಡ್ರೋನ್ ಮತ್ತು ಸಂಗೀತಾರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನುವ ಮಾಹಿತಿ ಕೇಳಿ ಬರುತ್ತಿದೆ. ಈ ಹಿಂದೆ ತನಿಷಾರನ್ನು ಹೀಗೆಯೇ ಎರಡು ದಿನಗಳ ಕಾಲ ಆಸ್ಪತ್ರೆಯಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿತ್ತು. ಆನಂತರ ಬಿಗ್ ಬಾಸ್ (Bigg Boss Kannada) ಮನೆಗೆ ಕರೆತರಲಾಗಿತ್ತು. ಈ ಇಬ್ಬರನ್ನೂ ಹಾಗೆಯೇ ಮಾಡುವ ಸಾಧ್ಯತೆ ಇದೆ.

  • Rapನಲ್ಲೇ ಕಂಟೆಸ್ಟೆಟ್ ಗೆ ಚಾಟಿ ಬೀಸಿದ ಇಶಾನಿ

    Rapನಲ್ಲೇ ಕಂಟೆಸ್ಟೆಟ್ ಗೆ ಚಾಟಿ ಬೀಸಿದ ಇಶಾನಿ

    ‘ಕವಿತೆ ಹುಟ್ಟಲು ಐಶಾರಾಮಿ ಜಾಗವೇ ಬೇಕಿಲ್ಲ, ಒಂದು ಪೆನ್ನು, ಒಂದು ಚೂರು ಖಾಲಿ ಕಾಗದ ಸಾಕು’ ಎಂಬ ಮಾತಿದೆ. ಇದು ಹೊರಜಗತ್ತಿನಲ್ಲಿ ಎಷ್ಟರಮಟ್ಟಿಗೆ ಸತ್ಯವೋ ಗೊತ್ತಿಲ್ಲ. ಆದರೆ ಬಿಗ್‌ಬಾಸ್ (Bigg Boss Kannada) ಮನೆಯಲ್ಲಿ ಮಾತ್ರ ಅಕ್ಷರಶಃ ಸತ್ಯವಾಗಿದೆ. ಏನಿದು ಕವಿಸಮಯ? JioCinemaದಲ್ಲಿ ನೇರಪ್ರಸಾರವಾಗುತ್ತಿರುವ ಬಿಗ್ ಬಾಸ್‌ ಕನ್ನಡದ ‘ಅನ್‌ಸೀನ್ ಕಥೆಗಳು’ ಸೆಗ್ಮೆಂಟ್‌ನಲ್ಲಿ ಈ ಪ್ರಶ್ನೆಗೆ ಉತ್ತರವಿದೆ.

    ಬಿಗ್‌ಬಾಸ್‌ ಸ್ಪರ್ಧಿಗಳಲ್ಲಿ ಪದ್ಯ ಬರೆಯುವ ಕೌಶಲ ಇರುವವರು ಇಶಾನಿ (Ishani) ಮಾತ್ರ. ರ್‍ಯಾಪ್ (Rap) ಹಾಡುಗಳನ್ನು ಕಟ್ಟಿ ಹಾಡುತ್ತಲೇ ಮುನ್ನಲೆಗೆ ಬಂದ ಇಶಾನಿ ಬಿಗ್ ಬಾಸ್‌ ಮನೆಯೊಳಗೆ ಸದ್ದುಮಡಿದ್ದು ಜೋರು ಧನಿಯ ಜಗಳ ಮತ್ತು ನಗುವಿನಿಂದಲೇ ಹೊರತು ರ್‍ಯಾಪ್ ಹಾಡುಗಳ ಮೂಲಕ ಅಲ್ಲ. ಹಿಂದೊಮ್ಮೆ ಅವರೊಂದು ಕನ್ನಡ ರ್‍ಯಾಪ್ ಸಾಂಗ್ ಕಟ್ಟಿದ್ದರಾದರೂ ಅದು ಅಷ್ಟೇನೂ ಸದ್ದು ಮಾಡಲಿಲ್ಲ. ಕಿಚನ್ ರೀಡಿಂಗ್‌ಗೇ ಮುಗಿದುಹೋಯಿತು. ಆದರೆ ಇಶಾನಿ ಪ್ರಯತ್ನವನ್ನು ಮಾತ್ರ ನಿಲ್ಲಿಸಿಲ್ಲ.

    ಮತ್ತೆ ಮತ್ತೆ ಕನ್ನಡದಲ್ಲಿ ರ್‍ಯಾಪ್ ಸಾಂಗ್ ಕಟ್ಟುವ ಪ್ರಯತ್ನ ನಡೆಸಿಯೇ ಇದ್ದಾರೆ. ಈ ಬಾರಿ ಅವರಿಗೆ ಸಿಕ್ಕಿದ್ದು ಟಿಶ್ಯೂ. ಟಿಶ್ಯೂ ಪೇಪರ್‍ ಮೇಲೆಯೇ ಇಂಗ್ಲಿಷ್‌ ಲಿಪಿಯಲ್ಲಿ ಕನ್ನಡದ ಸಾಲುಗಳನ್ನು ಬರೆಯುತ್ತ ಪದ್ಯ ಕಟ್ಟುತ್ತಿದ್ದಾರೆ ಇಶಾನಿ. ಪದ್ಯದ ಒಂದೊಂದು ಸಾಲೂ ಉಳಿದ ಸ್ಪರ್ಧಿಗಳನ್ನು ರೋಸ್ಟ್ ಮಾಡುವಂತಿದೆ. ಇಶಾನಿ ರ್‍ಯಾಪ್ ಸಾಂಗ್ ಲಿರಿಕ್ಸ್ ಹೇಗಿದೆ ಗೊತ್ತಾ?

    ನಾನ್ ಯಾರು ಅಂತ ನಿಮಗೆ ಗೊತ್ತಿಲ್ವಾ?

    ಗೊತ್ತಿಲ್ಲ ಅಂತ ತಿಳಿಸೋಕೆ ಬಂದ್ನಲ್ವಾ?

    ಉಪ್ಪಿನಕಾಯಿ ಟೇಸ್ಟು ನಿಮಗೆ ಸಾಲ್ತಿಲ್ವಾ?

    ತಿಳ್ಕೊಳ್ರೋ ಇನ್ನು ನೀವಲ್ಲ

    ಇನ್ಮುಂದೆ ನಿಮ್ದು ಏನು ನಡೆಯಲ್ಲ

    ಈ ರಾಜ್ಯಕ್ಕೆ ರಾಣಿನೇ ನಾನಲ್ವಾ

    ತಲೆಬಗ್ಸೀನೇ ನಡೀಬೇಕು ಈಗೆಲ್ಲ

    ಸುಮ್ನಿದ್ರೆ ಮಾಡ್ತೀರಾ ಸೈಕು

    ಹಿಡ್ದಿದ್ದೀನಿ ನಾನೀಗ ಮೈಕು

    ಹೋಗ್ತೀನಿ ಒಂದೇ ಟೇಕು

    ಮಾಡ್ತೀನಿ ನಿಮ್ ಈಗೊ ಬ್ರೇಕು

    ತೋರಿಸ್ತೀನಿ ಯಾರೆಲ್ಲ ಫೇಕು

    ತುಕಾಲಿಗೇ ಫಸ್ಟು ಸ್ಟ್ರೈಕು

    ಮಾಡಿದ್ರೆ ತುಕಾಲಿ ಜೋಕು

    ಪ್ರತಾಪ್‌ ನೀನಿರಲೇ ಬೇಕು

    ಕ್ಯಾಮೆರಾ ಮುಂದೆ ನೀ ಬರೀ ಫೇಕು

    ಇಲ್ದಿದ್ರೆ ನೀ ಸುಟ್ಟ ಕೇಕು

    ಹೀಗೆ ಇಶಾನಿ ಹಾಡು ಬೆಳೆಯುತ್ತಲೇ ಇದೆ. ಅದು ಎಲ್ಲಿಗೆ ಹೋಗಿ ಮುಟ್ಟುತ್ತದೆ? ಯಾವಾಗ ಪ್ರೆಸೆಂಟ್ ಆಗುತ್ತದೆ? ಗೊತ್ತಿಲ್ಲ. ಆದರೆ ಮನೆಯೊಳಗಂತೂ ಹೊಸ ಸಂಚಲನ ಹುಟ್ಟು ಹಾಕುವುದು ಗ್ಯಾರಂಟಿ. ಎಲ್ಲ ಸ್ಪರ್ಧಿಗಳಿಗೂ ಹಾಡಿನ ಮೂಲಕವೇ ಟಾಂಗ್ ಕೊಡಲು ಸಜ್ಜಾಗುತ್ತಿರುವ ಇಶಾನಿ ತಮ್ಮ ಯತ್ನದಲ್ಲಿ ಯಶಸ್ವಿಯಾಗ್ತಾರಾ?  ಕಾದು ನೋಡಬೇಕು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡ್ರೋನ್ ಪ್ರತಾಪ್ ಮತ್ತೆ ಟಾರ್ಗೆಟ್: ವಿನಯ್ ಮೇಲೆ ಪ್ರೀತಿ

    ಡ್ರೋನ್ ಪ್ರತಾಪ್ ಮತ್ತೆ ಟಾರ್ಗೆಟ್: ವಿನಯ್ ಮೇಲೆ ಪ್ರೀತಿ

    ಬಿಗ್ ಬಾಸ್ (Bigg Boss Kannada) ಮನೆಯಲ್ಲಿ ಡ್ರೋನ್ ಪ್ರತಾಪ್ ಮತ್ತೆ ಟಾರ್ಗೆಟ್ ಆಗಿದ್ದಾರೆ. ಮೊದಲ ವಾರದಲ್ಲಿ ಅವರಿಗೆ ವಿಪರೀತ ಎನ್ನುವಂತೆ ಮನೆಯ ಸದಸ್ಯರು ಕಾಟ ಕೊಟ್ಟಿದ್ದರು. ಅವುಗಳನ್ನು ತಾಳಲಾರದೇ ಆಗ ಪ್ರತಾಪ್ ಕಣ್ಣೀರಿಟ್ಟಿದ್ದರು. ಇದೀಗ ಮತ್ತೆ ಮನೆಮಂದಿ ಸೇರಿ ಪ್ರತಾಪ್ (Drone Pratap) ಅವರನ್ನು ಅಳಿಸಿದ್ದಾರೆ. ಒಂದರ ಮೇಲೊಂದು ಮಾತಿನ ಬಾಣ ಬಿಟ್ಟು ಕಣ್ಣೀರು ಹಾಕಿಸಿದ್ದಾರೆ. ಅವರ ಮಾತುಗಳನ್ನು ಅರಗಿಸಿಕೊಳ್ಳದ ಪ್ರತಾಪ್ ಅಕ್ಷರಶಃ ಅಕ್ಕಾಬಿಕ್ಕಿಯಾಗಿದ್ದಾರೆ.

    ನಿನ್ನೆಯಿಂದಲೇ ಡ್ರೋನ್ ಪ್ರತಾಪ್ ಮೇಲೆ ಮನೆಯ ಅನೇಕ ಸದಸ್ಯರು ಗರಂ ಆಗಿದ್ದರು. ಟೀಮ್‍ ವಿಚಾರದಲ್ಲಿ ವಿನಯ್ ಸಖತ್ ಬೆಂಡ್ ಎತ್ತಿದ್ದರು. ‘ಈ ಮನೆಯಲ್ಲಿ ನಿಮ್ಮದೇ ಆದ ಟೀಮ್ ಇದೆಯಾ? ಗುಂಪುಗಾರಿಕೆ ಮಾಡ್ತಿದ್ದೀರಾ?’ ಎಂದು ಪ್ರತಾಪ್ ಮೇಲೆ ನೇರವಾಗಿಯೇ ಆರೋಪ ಮಾಡಿದ್ದರು. ‘ಸಡನ್ ಆಗಿ ಶೈನ್ ಆಗೋಕೆ ಹೋಗಬೇಡ. ಇನ್ನೂ ಟೈಮ್ ಇದೆ. ಈಗ ಕಳೆದಿರೋದು ಕೇವಲ 15 ದಿನ ಮಾತ್ರ, ಇನ್ನೂ 75 ದಿವಸ ಇದ್ದಾವೆ. ನೆನಪಿಟ್ಕೋ.. ಬಾಲ ಬಿಚ್ಚರೆ ಅಷ್ಟೇ’ ಎನ್ನುವಂತೆ ವಾರ್ನ್ ಮಾಡಿದ್ದರು ವಿನಯ್. ವಿನಯ್ (Vinay Gowda) ಮಾತು ಕೇಳಿಸಿಕೊಂಡ ಪ್ರತಾಪ್‍್ ಗಾಬರಿಯಲ್ಲೇ ಕ್ಷಣ ಹೊತ್ತು ಕೂತಿದ್ದರು.

    ಪ್ರತಾಪ್ ವಿಷಯದಲ್ಲಿ ಕೇವಲ ವಿನಯ್ ಮಾತ್ರವಲ್ಲ, ನಮ್ರತಾ ಗೌಡ ಕೂಡ ತಾಳ್ಮೆ ಕಳೆದುಕೊಂಡು ಮಾತನಾಡಿದ್ದಾರೆ.  ಪ್ರತಾಪ್ ಅವರನ್ನೇ ಗುರಿಯಾಗಿಸಿಕೊಂಡು ‘ಆಚೆ ನೀವು ಪಾಪ.. ಅನ್ನೋ ಹಾಗೆ ಪೋಟ್ರೆ ಆಗ್ತಿದ್ದೀರಿ ಅಂತ ಅನಿಸ್ತಿದೆಯಾ?.. ನೋ.. ನೀವು ಮೂರ್ಖರಾಗ್ತಿದ್ದೀರಿ’ ಎಂದು ಖಾರವಾಗಿಯೇ ಹೇಳಿದರು. ನಮ್ರತಾ ಆಡಿದ ಅಷ್ಟೂ ಮಾತಿಗೂ ಪ್ರತಾಪ್ ಯಾವುದೇ ಉತ್ತರ ನೀಡಲಿಲ್ಲ. ಮನೆಯ ಕ್ಯಾಪ್ಟನ್ ರಕ್ಷಕ್ ಮತ್ತು ಡ್ರೋನ್ ಪ್ರತಾಪ್ ನಡುವೆಯೂ ಮಾತಿನ ಚಕಮಕಿ ನಡೆದಿದೆ.

    ಮನೆಯ ಕ್ಯಾಪ್ಟನ್ ಆಗಿರುವ ರಕ್ಷಕ್ ಕೆಟ್ಟ ಪದಗಳನ್ನು ಬಳಸಿದರು ಎಂದು ಡ್ರೋನ್ ಪ್ರತಾಪ್ ಆರೋಪಿಸುತ್ತಾರೆ. ‘ಹೌದು ಏನೀಗ?.. ಗೂಬೆ ಅಂತ ಇನ್ನೊಂದ್ ಸಲ ಕರೀತೀನಿ.. ಏನ್ ಮಾಡ್ತಿಯಾ?’ ಎಂದು ಪ್ರತಾಪ್ ಮೇಲೆ ಮುಗಿ ಬೀಳುತ್ತಾರೆ. ಡ್ರೋನ್ ಪ್ರತಾಪ್ ಮತ್ತು ಮನೆಯ ಸದಸ್ಯರ ನಡುವಿನ ಜಟಾಪಟಿ ಇವತ್ತಿಗೂ ಮುಂದುವರೆದಿದೆ. ಇವತ್ತು ಪ್ರತಾಪ್ ಮತ್ತು ವಿನಯ್ ಅವರನ್ನು ವೇದಿಕೆಯ ಮೇಲೆ ಕೂರಿಸಿಕೊಂಡು ಮನೆಯ ಸದಸ್ಯರು ಬೆಂಡ್ ಎತ್ತಿದ್ದಾರೆ. ಅದರಲ್ಲೂ ಪ್ರತಾಪ್ ಮೇಲೆಯೇ ಜಾಸ್ತಿ ಕಿಡಿಕಾರಿದ್ದಾರೆ. ಎಲ್ಲರ ಮಾತುಗಳನ್ನು ಕೇಳಿಸಿಕೊಂಡ ಪ್ರತಾಪ್ ಕಣ್ಣೀರು ಹಾಕಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಗ್ ಬಾಸ್ ಮನೆಯಲ್ಲಿ ಹರಿದ ಕಣ್ಣೀರು

    ಬಿಗ್ ಬಾಸ್ ಮನೆಯಲ್ಲಿ ಹರಿದ ಕಣ್ಣೀರು

    ಬಿಗ್ ಬಾಸ್ (Bigg Boss Kannada) ಮನೆಯಲ್ಲಿ ತಣ್ಣನೆಯ ರಾತ್ರಿ. ಆದರೆ ಎಲ್ಲರ ಕಣ್ಣಲ್ಲೂ ಕೋಡಿಯಾಗಿ ಹರಿಯುತ್ತಿದೆ ಬಿಸಿಯಾದ ಕಂಬನಿ. ಎದುರಲ್ಲಿ ಅಗ್ಗಷ್ಟಿಗೆ ಧಗಧಗ ಉರಿಯುತ್ತಿದ್ದರೆ, ಸ್ಪರ್ಧಿಗಳೆಲ್ಲ ಕುಟುಂಬದವರ ನೆನಪಲ್ಲಿ ಕರಗಿ ಕಣ್ಣೀರಾಗಿ ಹರಿಯುತ್ತಿದ್ದಾರೆ. ಅಪ್ಪ-ಅಮ್ಮನಿಗೆ ಕೊಟ್ಟ ಮಾತು, ಸಂಗಾತಿಯ ನೆನಪು,  ಈಡೇರದೇ ಉಳಿದುಬಿಟ್ಟ ಭಾಷೆ, ಕೊನೆಗೂ ಒಪ್ಪಿಕೊಳ್ಳದೇ ತಮ್ಮೊಳಗೆ ಒಂದಾಗಿಸಿಕೊಂಡು ಅಪ್ಪಿಕೊಳ್ಳದೇ ಹೋದ ಕುಟುಂಬ, ಹೆತ್ತವರ ಬೆಂಬಲಕ್ಕೆ ಪ್ರತಿಫಲ ನೀಡಲಾಗದ ಅಸಹಾಯಕತೆ, ಒಬ್ಬೊಬ್ಬರ ಹೃದಯದಲ್ಲಿಯೂ ಹೇಳಿಕೊಳ್ಳದೇ ಉಳಿದಿವೆಯಲ್ಲ ಎಷ್ಟೊಂದು ಕತೆ.

    ಮನುಷ್ಯ ಮನುಷ್ಯರ ನಡುವಿನ ಗೋಡೆ ಒಡೆಯಲು ನೋವಿಗಿಂತ ಬೇರೆ ಆಯುಧ ಬೇಕೆ? ಅಗ್ಗಷ್ಟಿಕೆಯ ಬೆಳಕಲ್ಲಿ, ನೆನಪುಗಳ ಕಾವಿನಲ್ಲಿ ನೋವಿನ ನೆಪದಲ್ಲಿ ಮನೆಯ ಸ್ಪರ್ಧಿಗಳೆಲ್ಲ ಒಂದಾಗಿದ್ದಾರೆ. ಒಬ್ಬರ ಕಣ್ಣೀರನ್ನು ಇನ್ನೊಬ್ಬರು ವರೆಸಿದ್ದಾರೆ. ಒಬ್ಬರ ದುಃಖಕ್ಕೆ ಇನ್ನೊಬ್ಬರು ಹೆಗಲಾಗಿದ್ದಾರೆ. ಒಬ್ಬರಿಗೊಬ್ಬರು ಒದಗಿಬರುತ್ತ ಎಲ್ಲರೂ ಒಂದೇ ಆಗಿದ್ದಾರೆ.

    ಈ ಎಲ್ಲ ಭಾವುಕ ಕ್ಷಣಗಳನ್ನು JioCinema ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಸೆರೆಯಾಗಿವೆ. ಆದರೆ ಎಷ್ಟು ಕಾಲ? ಎಲ್ಲಿಯವರೆಗೆ? ಬಿಗ್ ಬಾಸ್ ಮನೆಯೊಳಗಿನ ಪ್ರತಿ ಗಳಿಗೆಯೂ ವ್ಯಕ್ತಿತ್ವ ಪರೀಕ್ಷೆಯ ಅಗ್ನಿದಿವ್ಯವೇ.. ಈ ಆಟದಲ್ಲಿ ಒಂದಾಗಿರುವವರು ಮತ್ತೆ ಬೇರಾಗುತ್ತಾರಾ? ಪರಸ್ಪರ ಹೆಗಲುಕೊಟ್ಟವರು ತೊಡೆ ತಟ್ಟಿ ನಿಲ್ಲುತ್ತಾರಾ? ಕಾದು ನೋಡಬೇಕು.

    ಅದರಲ್ಲೂ ತಾರಾ (Tara) ಅವರು ಮನೆಗೆ ಬಂದಾದ ಮೇಲೆ ಭಾವುಕ ಕ್ಷಣಗಳನ್ನೂ ಇನ್ನೂ ಹೆಚ್ಚಾಗಿ ಡ್ರೋನ್ ಪ್ರತಾಪ್ (Drone Pratap) ಸೇರಿದಂತೆ ಹಲವರು ತಮ್ಮ ನೋವುಗಳನ್ನು ತೋಡಿಕೊಂಡು ಭಾವುಕರಾಗಿದ್ದಾರೆ. ಮನೆಯ ಸಂಕಟಗಳನ್ನು ತಾರಾ ಜೊತೆಗೇ ಹಲವರು ಹಂಚಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]