Tag: Drought Relief Funds

  • ಕಾಂಗ್ರೆಸ್ ಗ್ಯಾರಂಟಿಯಿಂದ ಜನ ಬದುಕ್ತಿದ್ದಾರೆ: ಡಿಕೆಶಿ

    ಕಾಂಗ್ರೆಸ್ ಗ್ಯಾರಂಟಿಯಿಂದ ಜನ ಬದುಕ್ತಿದ್ದಾರೆ: ಡಿಕೆಶಿ

    ಬೆಂಗಳೂರು: ರಾಜ್ಯದಲ್ಲಿ ಜನ ಕಾಂಗ್ರೆಸ್‍ನ ಗ್ಯಾರಂಟಿ ಯೋಜನೆಯಿಂದ (Congress Guarantee) ಜೀವನ ಮಾಡುತ್ತಿದ್ದಾರೆ. ನಮ್ಮ ಗ್ಯಾರಂಟಿ ಜನರನ್ನು ರಕ್ಷಿಸುತ್ತಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar) ಹೇಳಿದ್ದಾರೆ.

    ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಕೇಂದ್ರ ಸರ್ಕಾರ ನೀಡಿದ 3,454 ಕೋಟಿ ರೂ. ಬರ ಪರಿಹಾರ (Drought Relief Funds) ಅಲ್ಪ ಪ್ರಮಾಣದ್ದು ಎಂದು ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಈ ವೇಳೆ ರಾಜ್ಯ ಸರ್ಕಾರ ನೀಡುತ್ತಿರುವ ಗ್ಯಾರಂಟಿಯಿಂದ ಜನಕ್ಕೆ ಅನುಕೂಲವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ನಾವು ಗ್ಯಾರಂಟಿಗೆ ಹಣ ಕೇಳಿಲ್ಲ, ಕೇಳೋದು ಇಲ್ಲ – ರೈತರಿಗಾಗಿ ಹಣ ಕೇಳಿದ್ವಿ: ಬಿಜೆಪಿ ವಿರುದ್ಧ ಸಿಎಂ ಕಿಡಿ

    ಕರ್ನಾಟಕ ಸೆಪ್ಟೆಂಬರ್‌ನಲ್ಲಿ ಬರ ಪರಿಹಾರಕ್ಕೆ ಅರ್ಜಿ ಕೊಟ್ವಿತ್ತು. ಸೆಪ್ಟೆಂಬರ್‍ನಿಂದ ಇಲ್ಲಿವರೆಗೂ 50 ಸಾವಿರ ಕೋಟಿ ರೂ. ಮತ್ತೆ ನಷ್ಟ ಆಗಿದೆ. ನಾವೇನು ಭಿಕ್ಷೆ ಅಥವಾ ಅವರ ಮನೆಯ ದುಡ್ಡನ್ನು ಕೇಳಿದ್ದಾ? ನಾವು ರಾಜ್ಯದ ಜನರಿಗಾಗಿ ಪರಿಹಾರ ಕೇಳಿದ್ದೇವೆ. ಇಲ್ಲಿಯವರೆಗೆ ನಮ್ಮ ಕೈಲಾದ ಅನುದಾನ ನಾವು ಕೊಟ್ಟಿದ್ದೇವೆ. ಕರ್ನಾಟಕದ ಜನರಿಗೆ ನಿಮ್ಮ ಭಿಕ್ಷೆ ಬೇಡ. ನಮ್ಮ ಹಕ್ಕನ್ನು ನಮಗೆ ಕೊಡಿ ಎಂದು ಅವರು ವಾಗ್ದಾಳಿ ನಡೆಸಿದರು.

    ಸೆಪ್ಟೆಂಬರ್‍ನಿಂದ ಇಲ್ಲಿವರೆಗೂ ಆಗಿರುವ ನಷ್ಟವನ್ನು ಸೇರಿ ಪರಿಹಾರ ಕೊಡಬೇಕು. ಕೋರ್ಟ್‍ನಲ್ಲಿ ಉಗಿದ ಮೇಲೆ ಹಣ ಕೊಡುತ್ತಿದ್ದಾರೆ. ನಾವು ಯಾವಾಗ ಹಂಚೋದು? ಕೇಂದ್ರದ ಅನ್ಯಾಯದ ವಿರುದ್ಧ ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ. ಬಿಜೆಪಿ ಹಾಗೂ ಜೆಡಿಎಸ್ ರಾಜ್ಯ ದ್ರೋಹಿಗಳಾಗಿದ್ದು, ರಾಜ್ಯಕ್ಕಾಗಿ ಅವರು ಧ್ವನಿ ಎತ್ತಿಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: Prajwal Revanna Case: ಸರ್ಕಾರ ಗಂಭೀರವಾಗಿ ಪರಿಗಣಿಸಿದೆ, ಕೆಲವೇ ಹೊತ್ತಲ್ಲಿ ಎಸ್‌ಐಟಿ ರಚನೆ: ಪರಮೇಶ್ವರ್‌

  • ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಿಸಿದ ಕೇಂದ್ರ

    ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಿಸಿದ ಕೇಂದ್ರ

    ನವದೆಹಲಿ: ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ (Drought Relief Funds) ಘೋಷಣೆ ಮಾಡಿದೆ. ಕರ್ನಾಟಕ ಮಾತ್ರವಲ್ಲದೆ ತಮಿಳುನಾಡಿಗೆ ಚಂಡಮಾರುತ ಹಾಗೂ ಪ್ರವಾಹ ಪರಿಹಾರವೆಂದು 275 ಕೋಟಿ ರೂ. ನೀಡಿದೆ.

    ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ರಾಜ್ಯ ಸರ್ಕಾರ  (Karnataka Government) ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,174 ಕೋಟಿ ರೂ. ಹಣದ ಬೇಡಿಕೆ ಇಟ್ಟಿತ್ತು. ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿರದ ಹಿನ್ನೆಲೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‍ನ (Supreme Court of India) ಮೊರೆ ಹೋಗಿತ್ತು. ಬಳಿಕ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಸುಪ್ರೀಂಕೋರ್ಟ್‍ಗೆ ಹೇಳಿತ್ತು. ಅದರಂತೆ ಇದೀಗ ಕೇಂದ್ರ ಸರ್ಕರ ಬರ ಪರಿಹಾರ ಘೋಷಣೆ ಮಾಡಿದೆ. ಇದನ್ನೂ ಓದಿ: ಬರ ಪರಿಹಾರ ಬಿಡುಗಡೆಗೆ ಈ ವಾರದಲ್ಲಿ ಕ್ರಮ – ಸುಪ್ರೀಂಗೆ ಕೇಂದ್ರ ಸರ್ಕಾರದ ಭರವಸೆ

    ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್‍ಗೆ ಸಲ್ಲಿಸಿದ್ದ ಅರ್ಜಿಯನ್ನು ಏಪ್ರಿಲ್ 22 ರಂದು ನ್ಯಾ.ಬಿ.ಆರ್ ಗವಾಯಿ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆ ನಡೆಸಿತ್ತು. ವಿಚಾರಣೆ ಆರಂಭವಾಗುತ್ತಿದ್ದಂತೆ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ ಅಟಾರ್ನಿ ಜನರಲ್ ಆರ್.ವೆಂಕಟರಮಣಿ, ಚುನಾವಣಾ ಆಯೋಗದ ಜೊತೆಗೆ ಈ ಬಗ್ಗೆ ಚರ್ಚಿಸಲಾಗಿದ್ದು, ಬರ ಪರಿಹಾರ ಬಿಡುಗಡೆಗೆ ಆಯೋಗ ಅನುಮತಿ ನೀಡಿದೆ. ಹೀಗಾಗಿ ಈ ವಾರದೊಳಗೆ ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದರು.

    ಕೇಂದ್ರ ಸರ್ಕಾರ ಭರವಸೆ ನೀಡಿರುವ ಬೆನ್ನಲ್ಲೇ ಮಧ್ಯಪ್ರವೇಶ ಮಾಡಿದ ನ್ಯಾ.ಬಿ.ಆರ್ ಗವಾಯಿ, ಒಕ್ಕೂಟ ವ್ಯವಸ್ಥೆಯಲ್ಲಿ ಇಂತಹ ವಿಷಯಗಳನ್ನು ಸೌರ್ಹಾದಯುತವಾಗಿ ಬಗೆಹರಿಸಿಕೊಳ್ಳಬೇಕು. ಸುಪ್ರೀಂಕೋರ್ಟ್ ತನಕ ಈ ಪ್ರಕರಣ ಬರಬಾರದು ಎಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿದ್ದರು. ಬಳಿಕ ಅರ್ಜಿ ವಿಚಾರಣೆಯನ್ನು ಕೋರ್ಟ್ ಏ.29ಕ್ಕೆ ಮುಂದೂಡಿತ್ತು.

    ಕೇಂದ್ರ, ರಾಜ್ಯಕ್ಕೆ ಗೃಹ ಇಲಾಖೆ ಷರತ್ತು

    ಕೇಂದ್ರದಿಂದ ಕರ್ನಾಟಕಕ್ಕೆ ಬರ ಪರಿಹಾರ ಬಿಡುಗಡೆಯಾದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಇಲಾಖೆ, ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಕೆಲವು ಷರತ್ತುಗಳನ್ನು ವಿಧಿಸಿದೆ. ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಅನ್ವಯವಾಗುವಂತೆ ಷರತ್ತನ್ನು ವಿಧಿಸಲಾಗಿದೆ.

    ಬರ ಪರಿಹಾರ ಬಿಡುಗಡೆಯನ್ನು ರಾಜಕೀಯವಾಗಿ ಬಳಸಿಕೊಳ್ಳುವಂತಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ಜಾಹೀರಾತು ನೀಡುವಂತಿಲ್ಲ. ರಾಜಕೀಯ ಭಾಷಣಗಳಲ್ಲೂ ಈ ಬಗ್ಗೆ ಉಲ್ಲೇಖಿಸುವಂತಿಲ್ಲ. ಬರ ಪರಿಹಾರದ ವಿಚಾರವಾಗಿ ಸುದ್ದಿಗೋಷ್ಠಿಯನ್ನು ನಡೆಸುವಂತಿಲ್ಲ. ಬರ ಪರಿಹಾರದ ಹಣವನ್ನು ಬದಲಿ ಕಾರ್ಯಗಳಿಗೆ ಬಳಸಿಕೊಳ್ಳುವಂತಿಲ್ಲ ಹಾಗೂ ನೀತಿ ಸಂಹಿತೆ ನಡುವೆ ಹೊಸ ಕಾರ್ಯಗಳನ್ನು ಮಾಡುವಂತಿಲ್ಲ ಎಂದು ಇಲಾಖೆ ಎಚ್ಚರಿಸಿದೆ. ಇದನ್ನೂ ಓದಿ: ರಾಜ್ಯದ ಅತಿದೊಡ್ಡ ಶೈಕ್ಷಣಿಕ ಮೇಳ ಪಬ್ಲಿಕ್‌ ಟಿವಿ ವಿದ್ಯಾಪೀಠಕ್ಕೆ ಚಾಲನೆ

  • ಕೇಂದ್ರ, ರಾಜ್ಯದ ನಡುವೆ ಸ್ಪರ್ಧೆ ಬೇಡ – ಬರ ಪರಿಹಾರ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಸಲಹೆ

    ಕೇಂದ್ರ, ರಾಜ್ಯದ ನಡುವೆ ಸ್ಪರ್ಧೆ ಬೇಡ – ಬರ ಪರಿಹಾರ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಸಲಹೆ

    – ಎರಡು ವಾರದಲ್ಲಿ ಕೇಂದ್ರಕ್ಕೆ ಪ್ರತಿಕ್ರಿಯಿಸಲು ಸೂಚನೆ

    ನವದೆಹಲಿ: ವಿವಿಧ ರಾಜ್ಯಗಳು ನ್ಯಾಯಾಲಯವನ್ನು ಸಂಪರ್ಕಿಸುವ ಬೆಳವಣಿಗೆ ಹೆಚ್ಚುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಈ ರೀತಿಯ ಯಾವುದೇ ಪೈಪೋಟಿ ಬೇಡ ಎಂದು ಸುಪ್ರೀಂಕೋರ್ಟ್ (Supreme Court) ಸಲಹೆ ನೀಡಿದೆ. ಬರ ಪರಿಹಾರ ನಿಧಿ (Drought Relief Funds) ಬಿಡುಗಡೆಗೆ ನಿರ್ದೇಶನ ಕೋರಿ ಕರ್ನಾಟಕ ಸರ್ಕಾರ (Government of Karnataka) ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ (Central Government) ಸೂಚಿಸಿದೆ.

    ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಬಿ.ಆರ್ ಗವಾಯಿ ಮತ್ತು ಸಂದೀಪ್ ಮೆಹ್ತಾ ನೇತೃತ್ವದ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಸ್ಪರ್ಧೆ ಬೇಡ ಎಂದು ಪೀಠ ಕಿವಿಮಾತು ಹೇಳಿದೆ. ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಕಪಿಲ್ ಸಿಬಲ್ ಇನ್ನೊಂದು ತಿಂಗಳಲ್ಲಿ ಬರ ಪರಿಹಾರ ಬಿಡುಗಡೆ ಬಗ್ಗೆ ಕೇಂದ್ರ ಸರ್ಕಾರ ನಿರ್ಧರಿಸಬೇಕು ಎಂದರು. ಇದನ್ನೂ ಓದಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕೆ.ಕವಿತಾ ಬಂಧನ – ಜಾಮೀನು ನೀಡಲು ದೆಹಲಿ ಕೋರ್ಟ್ ನಿರಾಕರಣೆ

    ಕೇಂದ್ರ ಸರ್ಕಾರದ ಪರ ವಾದಿಸಿದ ಸಾಲಿಸಿಟರ್ ಜನರಲ್ (ಎಸ್‍ಜಿ) ತುಷಾರ್ ಮೆಹ್ತಾ, ಆರ್ಟಿಕಲ್ 32ರ ಅಡಿಯಲ್ಲಿ ಅರ್ಜಿ ಸಲ್ಲಿಸುವ ಬದಲು ರಾಜ್ಯ ಸರ್ಕಾರ ಕೇಂದ್ರದೊಂದಿಗೆ ಸಂವಹನ ನಡೆಸಬಹುದಿತ್ತು ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕಪಿಲ್ ಸಿಬಲ್ ನೋಟಿಸ್ ನೀಡುವಂತೆ ಮನವಿ ಮಾಡಿದರು. ಮೆಹ್ತಾ ಮಧ್ಯಪ್ರವೇಶಿಸಿ ನೋಟಿಸ್ ನೀಡಬೇಡಿ, ಅನಗತ್ಯ ಸುದ್ದಿಯಾಗುತ್ತದೆ ಎಂದು ಮನವಿ ಮಾಡಿಕೊಂಡರು.

    ಬಳಿಕ ಪ್ರತಿಕ್ರಿಯಿಸಿದ ನ್ಯಾಯಾಲಯ, ಎರಡು ವಾರದಲ್ಲಿ ಸರ್ಕಾರದೊಂದಿಗೆ ಚರ್ಚಿಸಿ ಪ್ರತಿಕ್ರಿಯೆ ನೀಡಿ ಎಂದು ಸಾಲಿಸಿಟಿರ್ ಜನರಲ್ ತುಷಾರ್ ಮೆಹ್ತಾ ಮತ್ತು ಈ ವಿಷಯದಲ್ಲಿ ಹಾಜರಾಗಿದ್ದ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಅವರಿಗೆ ಸೂಚಿಸಿತು.

    ವಿಚಾರಣೆಯಲ್ಲಿ ಭಾಗಿಯಾದ ಬಳಿಕ ದೆಹಲಿಯಲ್ಲಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda), ಸಮಸ್ಯೆ ಬಗೆಹರಿಸುತ್ತೇವೆ ಎಂದು ಸುಪ್ರೀಂಕೋರ್ಟ್‍ನಲ್ಲಿ ಕೇಂದ್ರ ಸರ್ಕಾರ ಹೇಳಿದೆ. ಇಂದಿನ ವಿಚಾರಣೆಯಲ್ಲಿ ಅಟಾರ್ನಿ ಜನರಲ್ ಹಾಗೂ ಸಾಲಿಸಿಟರ್ ಜನರಲ್ ಇಬ್ಬರೂ ಹಾಜರಾಗಿದ್ದರು. ಎರಡು ವಾರದಲ್ಲಿ ಪ್ರತಿಕ್ರಿಯೆ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ ಎಂದರು.

    ರಾಜ್ಯಗಳು ಸುಪ್ರೀಂಕೋರ್ಟ್‍ಗೆ ಬರುತ್ತಿರುವ ಬಗ್ಗೆ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿದೆ. ನೊಟೀಸ್ ಕೊಡಬೇಡಿ ಎಂದು ಕೂಡ ಸುಪ್ರೀಂಕೋರ್ಟ್ ನಲ್ಲಿ ಕೇಳಿಕೊಂಡಿದ್ದಾರೆ. ಎಲ್ಲಿ ಕೇಂದ್ರ ಸರ್ಕಾರಕ್ಕೆ ಮುಜುಗರ ಆಗುತ್ತೋ ಎನ್ನುವ ಆತಂಕವಿದೆ ಹಾಗಾಗೀ ನೊಟೀಸ್ ಕೊಡಬೇಡಿ ಎಂದು ಹೇಳಿದ್ದಾರೆ.

    ಕಳೆದ ಸೆಪ್ಟೆಂಬರ್‌ನಲ್ಲಿ ನಾವು ಬರ ಪರಿಹಾರಕ್ಕೆ ಮನವಿ ಮಾಡಿದ್ದೇವೆ. ಅಕ್ಟೋಬರ್‍ನಲ್ಲಿ ಕೇಂದ್ರದ ಅಧ್ಯಯನ ತಂಡ ಬಂದು ಹೋಗಿದೆ. ನವೆಂಬರ್‌ನಲ್ಲಿ ಪರಿಹಾರ ಬಿಡುಗಡೆಯಾಗಬೇಕಿತ್ತು. ಪರಿಹಾರ ಕೋರಿ ಪ್ರಧಾನಿ ನರೇಂದ್ರ ಮೋದಿ ಆದಿಯಾಗಿ ಎಲ್ಲರನ್ನೂ ಭೇಟಿಯಾದರೂ ಪರಿಹಾರ ಬಿಡುಗಡೆ ಮಾಡಿಲ್ಲ. ಮನವಿ ಮಾಡಿದ ಒಂದು ತಿಂಗಳಲ್ಲಿ ಪರಿಹಾರ ನೀಡಬೇಕು. ಮಾರ್ಚ್ ಬಂದರೂ ಇನ್ನೂ ಬಿಡುಗಡೆ ಮಾಡಿಲ್ಲ ಎಂದ ಆರೋಪಿಸಿದರು.

    ಮಾರ್ಚ್ 23 ರಂದು ನಾವು ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದೇವೆ ಎಂದು ಗೊತ್ತಾದ ಮೇಲೆ ಮಾರ್ಚ್ 28 ರಂದು ಅರ್ಜಿ ಸಲ್ಲಿಸಿದೆ. ಪ್ರಕೃತಿ ವಿಕೋಪಗಳಿಗೆ ಪರಿಹಾರ ನೀಡಲು ಯಾವುದೇ ನಿಯಮ ಅಡ್ಡಿ ಬರಲ್ಲ. ಪರಿಹಾರ ನೀಡದೆ ಕೇಂದ್ರ ನುಣಿಕೊಳ್ಳುತ್ತಿದೆ. ಕೇಂದ್ರ ಪರಿಹಾರ ನೀಡಿದರೆ ಸುಮಾರು 14 ಸಾವಿರ ಕೊಡಬಹುದು. ಹೀಗಾಗಿ ನಾವು ಬಾಯಿ ಮುಚ್ಚಿ ಕೂರಲ್ಲ, ಹೋರಾಟ ಮಾಡುತ್ತೇವೆ ಎಂದರು. ಇದನ್ನೂ ಓದಿ: 5,8,9ನೇ ತರಗತಿ ಪಬ್ಲಿಕ್ ಪರೀಕ್ಷೆ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ ತಡೆ