Tag: Droupadi Murmu

  • ʼಪಾಕ್‌ ಸೆರೆ ಹಿಡಿದʼ ರಫೇಲ್‌ ಪೈಲಟ್‌ ಜೊತೆ ಫೋಟೋ ಕ್ಲಿಕ್ಕಿಸಿದ ದ್ರೌಪದಿ ಮುರ್ಮು!

    ʼಪಾಕ್‌ ಸೆರೆ ಹಿಡಿದʼ ರಫೇಲ್‌ ಪೈಲಟ್‌ ಜೊತೆ ಫೋಟೋ ಕ್ಲಿಕ್ಕಿಸಿದ ದ್ರೌಪದಿ ಮುರ್ಮು!

    ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ಅವರು ಸ್ಕ್ವಾಡ್ರನ್ ಲೀಡರ್ ಶಿವಾಂಗಿ ಸಿಂಗ್ (Squadron Leader Shivangi Singh) ಅವರ ಜೊತೆ ಫೋಟೋ ತೆಗೆಸಿಕೊಳ್ಳುವ ಮೂಲಕ ಪಾಕಿಸ್ತಾನಕ್ಕೆ ಟಾಂಗ್‌ ಕೊಟ್ಟಿದ್ದಾರೆ.

    ಸಶಸ್ತ್ರ ಪಡೆಗಳ ಅಧ್ಯಕ್ಷೆ ಮತ್ತು ಸುಪ್ರೀಂ ಕಮಾಂಡರ್ ಆಗಿರುವ 67 ವರ್ಷದ ದ್ರೌಪದಿ ಮುರ್ಮು ಅವರು ಇಂದು ಹರ್ಯಾಣದ ಅಂಬಾಲಾ ವಾಯುನೆಲೆಗೆ ತೆರಳಿ ರಫೇಲ್‌ ಯುದ್ಧ ವಿಮಾನದಲ್ಲಿ (Rafale Fighter Jet) ಹಾರಾಟ ನಡೆಸಿದರು. ಹಾರಾಟ ನಡೆಸಿದ ಬಳಿಕ ಶಿವಾಂಗಿ ಸಿಂಗ್ ಅವರ ಜೊತೆ ದ್ರೌಪದಿ ಮುರ್ಮು ಫೋಟೋ ಕ್ಲಿಕ್ಕಿಸಿದರು.


    ಯಾರಿದು ಶಿವಾಂಗಿ ಸಿಂಗ್‌?
    ಆಪರೇಷನ್‌ ಸಿಂಧೂರದ (Operation Sindoor) ಸಮಯದಲ್ಲಿ ಪಾಕಿಸ್ತಾನ (Pakistan) ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುಳ್ಳು ಸುದ್ದಿಗಳನ್ನು ಪ್ರಕಟಿಸುತ್ತಿತ್ತು. ಅದರಲ್ಲಿ ಶಿವಾಂಗಿ ಸಿಂಗ್ ಅವರನ್ನು ನಾವು ಸೆರೆ ಹಿಡಿದಿದ್ದೇವೆ ಎಂದು ಹೇಳಿತ್ತು. ಪತನಗೊಂಡ ರಫೇಲ್‌ ಯುದ್ಧ ವಿಮಾನದಿಂದ ಹಾರಿದ್ದ ಶಿವಾಂಗಿ ಸಿಂಗ್‌ ಅವರನ್ನು ನಾವು ಸೆರೆ ಹಿಡಿದಿದ್ದೇವೆ ಎಂದು ಹೇಳಿತ್ತು. ಇದನ್ನೂ ಓದಿರಫೇಲ್‌ನಲ್ಲಿ ಹಾರಾಟ ನಡೆಸಿ ದಾಖಲೆ ಬರೆದ ರಾಷ್ಟ್ರಪತಿ ದ್ರೌಪದಿ ಮುರ್ಮು

    ಭಾರತ ಇದಕ್ಕೆ ಪ್ರತಿಕ್ರಿಯಿಸಿ ನಮ್ಮ ಯಾವುದೇ ಪೈಲಟ್‌ಗಳನ್ನು ಪಾಕಿಸ್ತಾನ ಸೆರೆ ಹಿಡಿದಿಲ್ಲ. ಕಾರ್ಯಾಚರಣೆ ನಡೆಸಿ ನಮ್ಮ ಎಲ್ಲಾ ಪೈಲಟ್‌ಗಳು ಸುರಕ್ಷಿತವಾಗಿ ಮರಳಿದ್ದಾರೆ ಎಂದು ತಿಳಿಸಿತ್ತು.

    2023ರ ಏಪ್ರಿಲ್ 8ರಂದು ಅಸ್ಸಾಂನ ತೇಜ್‌ಪುರ ಏರ್‌ಬೇಸ್‌ನಲ್ಲಿ ಸುಖೋಯ್ -30 ಯುದ್ಧ ವಿಮಾನದಲ್ಲಿ ದ್ರೌಪದಿ ಮುರ್ಮು ಹಾರಾಟ ನಡೆಸಿದ್ದರು. ಇದಕ್ಕೂ ಮುನ್ನ ಭಾರತದ ಮಾಜಿ ರಾಷ್ಟ್ರಪತಿಗಳಾದ ಪ್ರತಿಭಾ ಪಾಟೀಲ್ ಮತ್ತು ಅಬ್ದುಲ್ ಕಲಾಂ ಅವರು ಸುಖೋಯ್-30 ಫೈಟರ್ ಜೆಟ್‌ಗಳಲ್ಲಿ ಹಾರಾಟ ನಡೆಸಿದ್ದರು.

    `ಆಪರೇಷನ್ ಸಿಂಧೂರ’ದ (Operation Sindoor) ವೇಳೆ ಅಂಬಾಲಾ ಏರ್‌ಬೇಸ್‌ನಿಂದ ಟೇಕಾಫ್ ಆದ ನಮ್ಮ ಫೈಟರ್ ಜೆಟ್‌ಗಳು ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳ ಮೇಲೆ ಏರ್‌ಸ್ಟ್ರೈಕ್‌ ಮಾಡಿದ್ದವು.

  • ರಫೇಲ್‌ನಲ್ಲಿ ಹಾರಾಟ ನಡೆಸಿ ದಾಖಲೆ ಬರೆದ ರಾಷ್ಟ್ರಪತಿ ದ್ರೌಪದಿ ಮುರ್ಮು

    ರಫೇಲ್‌ನಲ್ಲಿ ಹಾರಾಟ ನಡೆಸಿ ದಾಖಲೆ ಬರೆದ ರಾಷ್ಟ್ರಪತಿ ದ್ರೌಪದಿ ಮುರ್ಮು

    ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಹರಿಯಾಣದ ಅಂಬಾಲಾ ವಾಯುಪಡೆ ನೆಲೆಯಿಂದ ರಫೇಲ್ ಯುದ್ಧ ವಿಮಾನದಲ್ಲಿ (Rafale Fighter Jet) ಹಾರಾಟ ನಡೆಸಿದ್ದಾರೆ. ಈ ಮೂಲಕ ರಫೇಲ್‌ನಲ್ಲಿ ಹಾರಾಟ ನಡೆಸಿದ ಮೊದಲ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

    ಐದು ತಿಂಗಳ ಹಿಂದೆ, ಪಹಲ್ಗಾಮ್ ದಾಳಿಗೆ ಸೇಡು ತೀರಿಸಿಕೊಳ್ಳಲು ಭಾರತ ಆಪರೇಷನ್ ಸಿಂಧೂರ ನಡೆಸಿತು. ಇದೇ ವಾಯುನೆಲೆಯಿಂದ ರಫೇಲ್‌ಗಳು ಗಡಿಯುದ್ದಕ್ಕೂ ಭಯೋತ್ಪಾದಕ ಶಿಬಿರಗಳನ್ನು ನಾಶಮಾಡುವ ಕಾರ್ಯಾಚರಣೆ ನಡೆಸಿದ್ದವು. ಆ ಮೂಲಕ ಭಾರತವು ಭಯೋತ್ಪಾದನಾ ವಿರೋಧಿ ಸಂದೇಶ ರವಾನಿಸಿತ್ತು. ಇದನ್ನೂ ಓದಿ: ಕೆನಡಾದಲ್ಲಿ ಉದ್ಯಮಿ ಹತ್ಯೆ, ಗಾಯಕನ ಮನೆಗೆ ಬೆಂಕಿಯಿಟ್ಟ ಬಿಷ್ಣೋಯ್‌ ಗ್ಯಾಂಗ್‌

    ಮುರ್ಮು ಅವರು ಯುದ್ಧ ವಿಮಾನದಲ್ಲಿ ನಡೆಸುತ್ತಿರುವ ಎರಡನೇ ಹಾರಾಟ ಇದು. ಭಾರತದ ಸಶಸ್ತ್ರ ಪಡೆಗಳ ಸುಪ್ರೀಂ ಕಮಾಂಡರ್ 2023ರ ಏಪ್ರಿಲ್ 8 ರಂದು ಅಸ್ಸಾಂನ ತೇಜ್‌ಪುರ ವಾಯುಪಡೆ ನಿಲ್ದಾಣದಲ್ಲಿ ಸುಖೋಯ್-30 ಎಂಕೆಐ ಜೆಟ್‌ನಲ್ಲಿ ಮುರ್ಮು ಹಾರಾಟ ನಡೆಸಿದ್ದರು. ಹೀಗೆ ಹಾರಾಟ ನಡೆಸಿದ ಮೂರನೇ ರಾಷ್ಟ್ರಪತಿ ಮತ್ತು ಎರಡನೇ ಮಹಿಳಾ ರಾಷ್ಟ್ರಪತಿ ಎನಿಸಿಕೊಂಡರು.

    ಮುರ್ಮು ಅವರಿಗಿಂತ ಮೊದಲು, ಮಾಜಿ ರಾಷ್ಟ್ರಪತಿಗಳಾದ ಎಪಿಜೆ ಅಬ್ದುಲ್ ಕಲಾಂ ಮತ್ತು ಪ್ರತಿಭಾ ಪಾಟೀಲ್ ಅವರು ಪುಣೆ ಬಳಿಯ ಲೋಹೆಗಾಂವ್‌ನಲ್ಲಿ ಸುಖೋಯ್-30 ಎಂಕೆಐನಲ್ಲಿ ಹಾರಾಟ ನಡೆಸಿದ್ದರು. ಫ್ರೆಂಚ್ ಏರೋಸ್ಪೇಸ್ ದೈತ್ಯ ಡಸಾಲ್ಟ್ ಏವಿಯೇಷನ್ ​​ತಯಾರಿಸಿದ ರಫೇಲ್‌ನಲ್ಲಿ ಭಾರತದ ರಾಷ್ಟ್ರಪತಿಯೊಬ್ಬರು ಹಾರಾಟ ನಡೆಸಿದ್ದು ಇದೇ ಮೊದಲು. ಇದನ್ನೂ ಓದಿ: ಯುದ್ಧ ಪೀಡಿತ ಗಾಜಾ, ಸುಡಾನ್, ಉಕ್ರೇನ್‌ನಲ್ಲಿ ಆಯುಧವಾಗ್ತಿದೆ ಆಹಾರ!

  • ಹವಾಮಾನ ಬದಲಾವಣೆಯ ಜಾಗತಿಕ ಸವಾಲೆದುರಿಸಲು ಭಾರತ ಬದ್ಧ: ದ್ರೌಪದಿ ಮುರ್ಮು

    ಹವಾಮಾನ ಬದಲಾವಣೆಯ ಜಾಗತಿಕ ಸವಾಲೆದುರಿಸಲು ಭಾರತ ಬದ್ಧ: ದ್ರೌಪದಿ ಮುರ್ಮು

    – ಸೌರಶಕ್ತಿ ವಿದ್ಯುತ್ ಉತ್ಪಾದನೆ ಜತೆಗೆ ಸಬಲೀಕರಣ-ಸಮಗ್ರ ಅಭಿವೃದ್ಧಿಗೆ ಪೂರಕ
    – ಅಂತಾರಾಷ್ಟ್ರೀಯ ಸೌರ ಅಧಿವೇಶನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಶ್ಲಾಘನೆ

    ನವದೆಹಲಿ: ಹವಾಮಾನ ಬದಲಾವಣೆ ಪ್ರಪಂಚದಾದ್ಯಂತ ಪರಿಣಾಮ ಬೀರುತ್ತಿದ್ದು, ಇದನ್ನೆದುರಿಸಲು ಭಾರತ ಬದ್ಧವಾಗಿದೆ. ಈ ನಿಟ್ಟಿನಲ್ಲಿ ನವೀಕರಿಸಬಹುದಾದ ಇಂಧನ ಗುರಿ ಸಾಧನೆ ಮೂಲಕ ದೃಢವಾದ ಹೆಜ್ಜೆಯಿರಿಸಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಶ್ಲಾಘಿಸಿದರು.

    ನವದೆಹಲಿಯಲ್ಲಿ ಮಂಗಳವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಸೌರ ಒಕ್ಕೂಟದ (International Solar Alliance Assembly) 8ನೇ ಅಧಿವೇಶನವನ್ನು ಉದ್ಘಾಟಿಸಿ, ಹವಾಮಾನ ಬದಲಾವಣೆ ಎದುರಿಸಲು ಇಂದು ತುರ್ತು ಮತ್ತು ದೃಢವಾದ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ಸೌರಶಕ್ತಿ ಅಳವಡಿಕೆ ಮತ್ತು ಬಳಕೆ ಮೂಲಕ ಈ ಜಾಗತಿಕ ಸವಾಲೆದುರಿಸುವಲ್ಲಿ ಐಎಸ್‌ಎ ಮಹತ್ವದ ಪಾತ್ರವಹಿಸಿದೆ ಎಂದು ಪ್ರತಿಪಾದಿಸಿದರು.

    ಸೌರಶಕ್ತಿ ವಿದ್ಯುತ್ ಉತ್ಪಾದನೆಗೆ ಮಾತ್ರ ಸೀಮಿತವಾಗಿಲ್ಲ, ಬದಲಾಗಿ ಸಮಾಜ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಸಬಲೀಕರಣ, ಅಂತರ್ಗತ ಅಭಿವೃದ್ಧಿಗೂ ಪೂರಕವಾಗಿದೆ. ದೊಡ್ಡ ಪ್ರಮಾಣದ ಸೌರ ಸ್ಥಾಪನೆಗಳ ವಿಸ್ತರಣೆ ವೇಳೆ ಆಯಾ ಪ್ರದೇಶದ ಪರಿಸರ ಸಮತೋಲನ ಕಾಯ್ದುಕೊಳ್ಳಬೇಕಿದೆ ಎಂದು ಹೇಳಿದರು.

    ಸೌರಶಕ್ತಿಯನ್ನು ಘನತೆ ಮತ್ತು ಸಾಮೂಹಿಕ ಸಮೃದ್ಧಿಯ ಮೂಲವಾಗಿ ಬಳಸಿಕೊಳ್ಳುವುದು ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ನಾವು ಜಗತ್ತಿಗೆ ಮತ್ತು ಭವಿಷ್ಯದ ಪೀಳಿಗೆಗೆ ಹೆಚ್ಚಿನ ಸಮರ್ಪಣಾಭಾವದಿಂದ ಕೆಲಸ ಮಾಡಬೇಕು ಎಂದು ರಾಷ್ಟ್ರಪತಿ ಕರೆ ನೀಡಿದರು.

    ಭಾರತ ಮಹತ್ವದ ಮೈಲಿಗಲ್ಲು:
    ಸೌರಶಕ್ತಿ ಉತ್ಪಾದನೆಯಲ್ಲಿ ಭಾರತ ಒಂದು ಮಹತ್ವದ ಮೈಲಿಗಲ್ಲಾಗಿ ಕಾರ್ಯ ನಿರ್ವಹಿಸುತ್ತಿದೆ. ಜಗತ್ತಿಗೆ ವಿಶಿಷ್ಟ ಕೊಡುಗೆ ನೀಡುತ್ತಿದೆ. ಕೈಗೆಟುಕುವ ಮತ್ತು ಶುದ್ಧ ಇಂಧನ ಸಮುದಾಯಗಳನ್ನು ಸಬಲಗೊಳಿಸುತ್ತದೆ ಹಾಗೂ ಸ್ಥಳೀಯ ಆರ್ಥಿಕತೆಯನ್ನು ಮುನ್ನಡೆಸುತ್ತದೆ. ಸೌರಶಕ್ತಿ ವಿದ್ಯುತ್ ಉತ್ಪಾದನೆ ಮಾತ್ರವಲ್ಲ, ಸಬಲೀಕರಣ ಮತ್ತು ಸಮಗ್ರ ಅಭಿವೃದ್ಧಿಗೂ ಪೂರಕವಾಗಿದೆ ಎಂದು ದ್ರೌಪದಿ ಮುರ್ಮು ಪ್ರತಿಪಾದಿಸಿದರು.

    ಅಂತಾರಾಷ್ಟ್ರೀಯ ಸೌರ ಒಕ್ಕೂಟದ ಅಧ್ಯಕ್ಷ ಮತ್ತು ಎಲ್ಲಾ ಸದಸ್ಯ ರಾಷ್ಟ್ರಗಳು ಮೂಲಸೌಕರ್ಯ ಮತ್ತು ಜನಜೀವನದ ಮೇಲೆ ಕೇಂದ್ರೀಕರಿಸಬೇಕು. ಉದ್ಯೋಗ ಸೃಷ್ಟಿ, ಮಹಿಳಾ ನಾಯಕತ್ವ, ಗ್ರಾಮೀಣ ಜೀವನೋಪಾಯ ಮತ್ತು ಡಿಜಿಟಲ್ ಸೇರ್ಪಡೆಗೆ ನೆರವಾಗುವಂತೆ ಸೌರಶಕ್ತಿ ಸಾಮೂಹಿಕ ಕ್ರಿಯಾ ಯೋಜನೆ ಅಭಿವೃದ್ಧಿಪಡಿಸಬೇಕೆಂದು ರಾಷ್ಟ್ರಪತಿ ಇದೇ ವೇಳೆ ಸಲಹೆ ನೀಡಿದರು.

    ಸೌರ ಪ್ರಗತಿಯನ್ನು ಮೆಗಾವ್ಯಾಟ್ ಮೂಲಕ ಮಾತ್ರವಲ್ಲದೆ ಸುಧಾರಿತ ಕುಟುಂಬಗಳ ಸಂಖ್ಯೆ ಮತ್ತು ಸಮುದಾಯಗಳ ಸಂಖ್ಯೆ ಮೂಲಕ ಅಳೆಯಬೇಕು. ತಂತ್ರಜ್ಞಾನ ಅಭಿವೃದ್ಧಿಗೆ ಗಮನ ಹರಿಸಬೇಕು. ಸೌರ ಸ್ಥಾಪನೆಗಳ ವೇಳೆ ಪರಿಸರ ಸಂರಕ್ಷಣೆ, ಹಸಿರು ಶಕ್ತಿಯತ್ತ ಗಮನಹರಿಸಿ ಪ್ರದೇಶದ ಪರಿಸರ ಸಮತೋಲನಕ್ಕೆ ಆದ್ಯತೆ ನೀಡಬೇಕು ಎಂದು ಅಭಿಪ್ರಾಯಿಸಿದರು.

    125 ಸದಸ್ಯ ರಾಷ್ಟ್ರಗಳ ಸಹಿ: ಸೌರಶಕ್ತಿಯಲ್ಲಿ ಜಾಗತಿಕ ಸಹಕಾರ ಮತ್ತು ಹೂಡಿಕೆಯನ್ನು ತ್ವರಿತಗೊಳಿಸಲು 125 ಸದಸ್ಯ ರಾಷ್ಟ್ರಗಳು ಮತ್ತು ಪಾಲುದಾರರು, ಸಹಿ ಹಾಕಿದರು. ವಿವಿಧ ದೇಶಗಳ 550ಕ್ಕೂ ಹೆಚ್ಚು ಪ್ರತಿನಿಧಿಗಳು ಮತ್ತು 30 ಸಚಿವರು, ಸಹಾಯಕ ಸಚಿವರು ಭಾಗವಹಿಸಿದ್ದರು.

  • ನಾಳೆ ರಫೇಲ್‌ನಲ್ಲಿ ಹಾರಲಿದ್ದಾರೆ ರಾಷ್ಟ್ರಪತಿ ಮುರ್ಮು

    ನಾಳೆ ರಫೇಲ್‌ನಲ್ಲಿ ಹಾರಲಿದ್ದಾರೆ ರಾಷ್ಟ್ರಪತಿ ಮುರ್ಮು

    – ರಫೇಲ್ ಏರಿದ ಮೊದಲ ರಾಷ್ಟ್ರಪತಿ

    ಚಂಡೀಗಢ: ಭಾರತೀಯ ಸಶಸ್ತ್ರ ಪಡೆಗಳ ಸುಪ್ರೀಂ ಕಮಾಂಡರ್ ಆಗಿರುವ ರಾಷ್ಟ್ರಪತಿ ದ್ರೌಪದಿ (Droupadi Murmu) ಮುರ್ಮು ಬುಧವಾರ (ಅ.29) ರಫೇಲ್ ಫೈಟರ್ ಜೆಟ್‌ನಲ್ಲಿ (Rafale Fighter Jet) ಹಾರಾಟ ನಡೆಸಲಿದ್ದಾರೆ.

    67 ವರ್ಷದ ದ್ರೌಪದಿ ಮುರ್ಮು ಬುಧವಾರ (ಅ.29) ಹರಿಯಾಣದ ಅಂಬಾಲಾ ಏರ್‌ಬೇಸ್‌ಗೆ (Ambala Airbase) ತೆರಳಿ ಅಲ್ಲಿ ರಫೇಲ್ ಫೈಟರ್ ಜೆಟ್‌ನಲ್ಲಿ ಹಾರಾಟ ನಡೆಸಲಿದ್ದಾರೆ. ಈ ಮೂಲಕ ಮೊದಲ ಬಾರಿಗೆ ರಫೇಲ್ ಏರಿದ ರಾಷ್ಟ್ರಪತಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೀತಿಪಾಠ: ಪ್ರಹ್ಲಾದ್ ಜೋಶಿ

    ಈ ಮೊದಲು 2023ರ ಏಪ್ರಿಲ್ 8ರಂದು ಅಸ್ಸಾಂನ ತೇಜ್‌ಪುರ ಏರ್‌ಬೇಸ್‌ನಲ್ಲಿ ಸುಖೋಯ್ -30 ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದರು. ಇದಕ್ಕೂ ಮುನ್ನ ಭಾರತದ ಮಾಜಿ ರಾಷ್ಟ್ರಪತಿಗಳಾದ ಶ್ರೀಮತಿ ಪ್ರತಿಭಾ ಪಾಟೀಲ್ ಮತ್ತು ಅಬ್ದುಲ್ ಕಲಾಂ ಅಬ್ದುಲ್ ಅವರು ಸುಖೋಯ್-30 ಫೈಟರ್ ಜೆಟ್‌ಗಳಲ್ಲಿ ಹಾರಾಟ ನಡೆಸಿದ್ದರು.

    `ಆಪರೇಷನ್ ಸಿಂಧೂರ’ದ (Operation Sindoor) ವೇಳೆ ಅಂಬಾಲಾ ಏರ್‌ಬೇಸ್‌ನಿಂದ ಟೇಕಾಫ್ ಆದ ನಮ್ಮ ಫೈಟರ್ ಜೆಟ್‌ಗಳು ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳ ಮೇಲೆ ಏರ್‌ಸ್ಟ್ರೈಕ್‌ ಮಾಡಿದ್ದವು.ಇದನ್ನೂ ಓದಿ:ಮೊಂಥಾ ಎಫೆಕ್ಟ್: 100ಕ್ಕೂ ಹೆಚ್ಚು ರೈಲುಗಳು, 35 ವಿಮಾನಗಳ ಹಾರಾಟ ರದ್ದು

     

  • ಅ.22 ರಂದು ಶಬರಿಮಲೆಗೆ ದ್ರೌಪದಿ ಮುರ್ಮು ಭೇಟಿ

    ಅ.22 ರಂದು ಶಬರಿಮಲೆಗೆ ದ್ರೌಪದಿ ಮುರ್ಮು ಭೇಟಿ

    ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು(Droupadi Murmu) ಅವರು ತುಲಾ ಮಾಸ ಪೂಜೆಯ ಕೊನೆಯ ದಿನವಾದ ಅ.22 ರಂದು ಕೇರಳದಲ್ಲಿರುವ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ (Sabarimala Ayyappa Temple) ಭೇಟಿ ನೀಡಲಿದ್ದಾರೆ. ಈ ಮೂಲಕ ಅಯ್ಯಪ್ಪ ದೇವಸ್ಥಾನಕ್ಕೆ ಭೇಟಿ ನೀಡಿದ ಭಾರತದ ಮೊದಲ ಹಾಲಿ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

    ಅ.21 ರಂದು ಸಂಜೆ 6:20ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ತಿರುವನಂತಪುರಂಕ್ಕೆ (Kerala) ಆಗಮಿಸಲಿದ್ದು, ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಅ.22 ರಂದು ತಿರುವನಂತಪುರದಿಂದ ಹೆಲಿಕಾಪ್ಟರ್ ಮೂಲಕ ನೀಲಕ್ಕಲ್‌ಗೆ ಆಗಮಿಸಿ ಬಳಿಕ ರಸ್ತೆ ಮಾರ್ಗದಲ್ಲಿ ಪಂಪಾಗೆ ಆಗಮಿಸಲಿದ್ದಾರೆ.  ಇದನ್ನೂ ಓದಿ:  ಆರ್‌ಎಸ್‌ಎಸ್‌ ಚಟುವಟಿಕೆಯಲ್ಲಿ ಸರ್ಕಾರಿ ನೌಕರರು ಭಾಗವಹಿಸುವುದನ್ನು ನಿಷೇಧಿಸಬೇಕು: ದಿನೇಶ್‌ ಗುಂಡೂರಾವ್‌

    ಪಂಪಾದಿಂದ ಗೂರ್ಖಾ ಫೋರ್ಸ್ ವಾಹನದಲ್ಲಿ ದೇವಾಲಯಕ್ಕೆ ಆಗಮಿಸಿ ಮಧ್ಯಾಹ್ನ 12:20 ರಿಂದ 1 ಗಂಟೆಯ ಒಳಗೆ ಅಯ್ಯಪ್ಪ ದರ್ಶನ ಮಾಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ವಿಶೇಷ ವಾಹನದಲ್ಲಿ ಪಂಪಾದಿಂದ ನೀಲಕ್ಕಲ್‌ಗೆ ಆಗಮಿಸಿ ಅಲ್ಲಿಂದ ಹೆಲಿಕಾಪ್ಟರ್‌ನಲ್ಲಿ ತಿರುವನಂತಪುರಕ್ಕೆ ಮರಳಲಿದ್ದಾರೆ. ಇದನ್ನೂ ಓದಿ:  ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ: ಸಿಎಂ

    ರಾಷ್ಟ್ರಪತಿಗಳು ಅಕ್ಟೋಬರ್ 24 ರವರೆಗೆ ರಾಷ್ಟ್ರಪತಿಗಳು ಕೇರಳದಲ್ಲಿ ಇರಲಿದ್ದು ಈ ಸಮಯದಲ್ಲಿ ತಿರುವನಂತಪುರಂ ಮತ್ತು ಕೊಟ್ಟಾಯಂ ಪ್ರದೇಶಗಳಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

    ತುಲಾಮಾಸ ಪೂಜೆಗಾಗಿ ಶಬರಿಮಲೆ ದೇಗುಲದ ಬಾಗಿಲುಗಳನ್ನು ಅ.17 ರಂದು ತೆರೆದು ಅ.22 ರಂದು ಮುಚ್ಚಲಾಗುತ್ತದೆ.

  • ರಾಷ್ಟ್ರಪತಿ ಭವನದಲ್ಲಿ ‘ಕಾಂತಾರ’ ಪ್ರದರ್ಶನ – ರಿಷಬ್‌ ಚಿತ್ರತಂಡದ ಜೊತೆ ದ್ರೌಪದಿ ಮುರ್ಮು ಸಿನಿಮಾ ವೀಕ್ಷಣೆ

    ರಾಷ್ಟ್ರಪತಿ ಭವನದಲ್ಲಿ ‘ಕಾಂತಾರ’ ಪ್ರದರ್ಶನ – ರಿಷಬ್‌ ಚಿತ್ರತಂಡದ ಜೊತೆ ದ್ರೌಪದಿ ಮುರ್ಮು ಸಿನಿಮಾ ವೀಕ್ಷಣೆ

    ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಚಾಪ್ಟರ್‌ 1 (Kantara Chapter 1) ಸಿನಿಮಾ ವಿಶ್ವದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ರಾಷ್ಟ್ರಪತಿ ಭವನದಲ್ಲಿ ಇಂದು (ಭಾನುವಾರ) ದ್ರೌಪದಿ ಮುರ್ಮು (Droupadi Murmu) ಅವರು ಸಿನಿಮಾ ವೀಕ್ಷಿಸಲಿದ್ದಾರೆ.

    ನಟ, ನಿರ್ದೇಶಕ ರಿಷಬ್‌ ಶೆಟ್ಟಿ (Rishab Shetty), ನಟಿ ರುಕ್ಮಿಣಿ ವಸಂತ್‌, ನಿರ್ಮಾಪಕ ಚಲುವೆ ಗೌಡ ಸಮ್ಮುಖದಲ್ಲಿ ಸಿನಿಮಾ ಪ್ರದರ್ಶನ ಮಾಡಲಾಗುವುದು. ಬಳಿಕ ಚಿತ್ರತಂಡವನ್ನು ರಾಷ್ಟ್ರಪತಿಗಳು ಗೌರವಿಸಲಿದ್ದಾರೆ. ಇದನ್ನೂ ಓದಿ: ಕಾಂತಾರ ನಮ್ಮ ಗ್ರಹಿಕೆಯನ್ನು ಮೀರಿದ್ದು- ಹೊಗಳಿ ವೀಕ್ಷಿಸುವಂತೆ ಕನ್ನಡಿಗರಲ್ಲಿ ನಾರಾಯಣ ಗೌಡ ಮನವಿ

    ಅ.2 ರಂದು ಸಿನಿಮಾ ಬಿಡುಗಡೆಯಾದಾಗಿನಿಂದ ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ಬರೆಯುತ್ತಿದೆ. ರಿಲೀಸ್‌ ಆದ 3 ದಿನದಲ್ಲೇ 160ಕ್ಕೂ ಹೆಚ್ಚು ಕೋಟಿ ಗಳಿಕೆ ಮಾಡಿದೆ. ಈ ಸಿನಿಮಾವನ್ನು ಹೊಂಬಾಳೆ ಫಿಲಂಸ್‌ ಅಡಿ ವಿಜಯ್‌ ಕಿರಗಂದೂರು ಮತ್ತು ಚಲುವೆ ಗೌಡ ನಿರ್ಮಾಣ ಮಾಡಿದ್ದಾರೆ.

    ಕಾಂತಾರ ಚಾಪ್ಟರ್‌ 1 ಸಿನಿಮಾ ಬಗ್ಗೆ ಸ್ಟಾರ್‌ ನಟರು, ನಿರ್ದೇಶಕರು, ರಾಜಕಾರಣಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸಿನಿಮಾಗೆ ಪ್ರೇಕ್ಷಕರಿಂದಲೂ ಭರ್ಜರಿ ರೆಸ್ಪಾನ್ಸ್‌ ವ್ಯಕ್ತವಾಗಿದೆ. ಇದನ್ನೂ ಓದಿ: ಭಾನುವಾರವೂ ಹೌಸ್‌ಫುಲ್‌ – ಬೆಂಗಳೂರಿನಲ್ಲಿ ದಾಖಲೆ ಬರೆದ ಕಾಂತಾರ

  • ಇವರ‍್ಯಾರೂ ರಾಜವಂಶಸ್ಥರಲ್ಲ, ಸ್ವಂತ ಪರಿಶ್ರಮದಿಂದ ಮೇಲೆ ಬಂದವರು: ಮುರ್ಮು, ಮೋದಿ, ರಾಧಾಕೃಷ್ಣನ್‌ ಬಗ್ಗೆ ಬಿಎಲ್‌ ಸಂತೋಷ್‌ ಮಾತು

    ಇವರ‍್ಯಾರೂ ರಾಜವಂಶಸ್ಥರಲ್ಲ, ಸ್ವಂತ ಪರಿಶ್ರಮದಿಂದ ಮೇಲೆ ಬಂದವರು: ಮುರ್ಮು, ಮೋದಿ, ರಾಧಾಕೃಷ್ಣನ್‌ ಬಗ್ಗೆ ಬಿಎಲ್‌ ಸಂತೋಷ್‌ ಮಾತು

    – ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ ಒಟ್ಟಿಗೆ ಇರುವ ಫೋಟೊ ಶೇರ್‌ ಮಾಡಿ ಬಣ್ಣನೆ

    ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu), ನೂತನ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ (C.P.Radhakrishnan), ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಒಟ್ಟಿಗೆ ಕುಳಿತಿರುವ ಫೋಟೊವನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ (B.L.Santhosh) ಹಂಚಿಕೊಂಡಿದ್ದಾರೆ. ಇವರ‍್ಯಾರೂ ರಾಜವಂಶಸ್ಥರಲ್ಲ, ಸ್ವಂತ ಪರಿಶ್ರಮದಿಂದ ಮೇಲೆ ಬಂದವರು ಎಂದು ಬಣ್ಣಿಸಿದ್ದಾರೆ.

    ಇವರಿಗೆ ತಮ್ಮ ಹಕ್ಕುಗಳ ಪ್ರಜ್ಞೆಯೂ ಇಲ್ಲ. ಮೂವರೂ ಸ್ವಂತ ಪರಿಶ್ರಮದಿಂದ ಮೇಲೆ ಬಂದವರು. ಹಿಂದುಳಿದ ಸಮುದಾಯದಿಂದ ಬಂದವರು. ಜೀವನದ ಪ್ರತಿಯೊಂದು ಹಂತದಲ್ಲೂ ಮೆಟ್ಟಿಲುಗಳನ್ನು ಏರಿ ಬಂದಿದ್ದಾರೆ. ಅದು ಭಾರತದ ಪ್ರಜಾಪ್ರಭುತ್ವ ಮತ್ತು ನಾಗರಿಕತೆಯ ಶಕ್ತಿ ಎಂದು ಬಿಎಲ್‌ ಸಂತೋಷ್‌ ತಿಳಿಸಿದ್ದಾರೆ. ಇದನ್ನೂ ಓದಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ ಸ್ವೀಕಾರ

    ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾನ್ಯ ಕುಟುಂಬದಿಂದ ಬಂದವರು. ಚಿಕ್ಕ ವಯಸ್ಸಿನಲ್ಲಿ ಟೀ ಮಾರುತ್ತಿದ್ದ ವ್ಯಕ್ತಿ ಈಗ ಪ್ರಧಾನಿ ಹುದ್ದೆಯನ್ನು ಅಲಂಕರಿಸಿದ್ದಾರೆ. ಆರ್‌ಎಸ್‌ಎಸ್‌ ಕಾರ್ಯಕರ್ತನಾಗಿ, ರಾಜಕೀಯ ನಾಯಕನಾಗಿ ಹಲವಾರು ಹುದ್ದೆಗಳನ್ನು ಅಲಂಕರಿಸಿದವರು. ತುರ್ತು ಪರಿಸ್ಥಿತಿ ಸೇರಿ ಆಗಿನ ಕೇಂದ್ರ ಸರ್ಕಾರದ ಹಲವಾರು ಕ್ರಮಗಳ ವಿರುದ್ಧದ ಹೋರಾಟಗಳಲ್ಲೂ ಭಾಗಿಯಾಗಿದ್ದರು. ಸತತ ಮೂರು ಅವಧಿಗೆ ಪ್ರಧಾನಿಯಾಗಿ ದಾಖಲೆ ಕೂಡ ಬರೆದಿದ್ದಾರೆ.

    ದ್ರೌಪದಿ ಮುರ್ಮು ಅವರು ಪರಿಶಿಷ್ಟ ಬುಡಕಟ್ಟು ಸಮುದಾಯಕ್ಕೆ ಸೇರಿದವರು. ಸಾಮಾನ್ಯ ಕುಟುಂಬದಿಂದ ಬಂದ ಅವರು ಈಗ ರಾಷ್ಟ್ರಪತಿಯಾಗಿದ್ದಾರೆ. ಇವರು ಸಹ ಬಿಜೆಪಿಯ ಹಲವಾರು ಹುದ್ದೆಗಳನ್ನು ಕಾರ್ಯನಿರ್ವಹಿಸಿದ್ದಾರೆ.

    ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ಸಿ.ಪಿ.ರಾಧಾಕೃಷ್ಣನ್‌ ಅವರು ದೊಡ್ಡ ಕೌಟುಂಬಿಕ ಹಿನ್ನೆಲೆಯಿಂದ ಬಂದವರಲ್ಲ. ಚಿಕ್ಕ ವಯಸ್ಸಿನಲ್ಲೇ ಆರ್‌ಎಸ್‌ಎಸ್‌ನಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡರು. ನಂತರ ಬಿಜೆಪಿ ಸೇರಿ ತಮಿಳುನಾಡಿನಲ್ಲಿ ತಳಮಟ್ಟದಲ್ಲಿ ವ್ಯಾಪಕ ಕೆಲಸ ಮಾಡಿದ್ದಾರೆ. ಇದನ್ನೂ ಓದಿ: 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಇಂದು ಪ್ರಮಾಣವಚನ ಸ್ವೀಕಾರ

  • ಮೈಸೂರು ಅರಮನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ – ಸಂತಸ ವ್ಯಕ್ತಪಡಿಸಿದ ರಾಜಮಾತೆ

    ಮೈಸೂರು ಅರಮನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ – ಸಂತಸ ವ್ಯಕ್ತಪಡಿಸಿದ ರಾಜಮಾತೆ

    ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮೈಸೂರು ಅರಮನೆಗೆ (Mysuru Palace) ಭೇಟಿ ನೀಡಿದ್ದರು.

    ಈ ಬಗ್ಗೆ ರಾಜವಂಶಸ್ಥೆ ಪ್ರಮೋದಾದೇವಿ (Pramoda Devi Wadiyar) ಸಂತೋಷ ವ್ಯಕ್ತಪಡಿಸಿದ್ದಾರೆ. ಗಣ್ಯರನ್ನು ಸ್ವಾಗತಿಸಲು ನನಗೆ ಅಪಾರ ಸಂತೋಷ ಮತ್ತು ಹೆಮ್ಮೆ ಆಗಿದೆ. ನನ್ನ ಆಹ್ವಾನವನ್ನು ಸ್ವೀಕರಿಸಿ ಗೌರವಿಸಿದ್ದಕ್ಕಾಗಿ ಹೃತ್ಪೂರ್ವಕ ಧನ್ಯವಾದಗಳು ಎಂದು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತಿಗೆ ಕನ್ನಡ ಬರುತ್ತಾ ಅಂತ ಕೇಳಿದ ಸಿಎಂ – ಸ್ವಲ್ಪ ಸ್ವಲ್ಪ ಬರುತ್ತೆ; ಮುರ್ಮು ಉತ್ತರ

    ಅರಮನೆಯಲ್ಲಿ ಬೆಳ್ಳಿ ತಟ್ಟೆಯಲ್ಲಿ ಗಣ್ಯರಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. ಎಳನೀರು, ಕಿವಿ, ಪ್ಲಮ್ ಮತ್ತು ಪಪ್ಪಾಯಿ ಸೇರಿದಂತೆ ಹಲವು ಹಣ್ಣುಗಳು ಇಡಲಾಗಿತ್ತು. ಸಾಂಪ್ರದಾಯಿಕ ಮೈಸೂರು ಭಕ್ಷ್ಯಗಳಾದ, ಮೈಸೂರು ಮಸಾಲೆ ದೋಸೆ, ಇಡ್ಲಿ, ಸಾಂಬರ್, ಚಟ್ನಿ, ಶ್ಯಾವಿಗೆ ಉಪ್ಪಿಟ್ಟು, ಸಬ್ಬಕ್ಕಿ ವಡೆ, ಮೈಸೂರು ಪಾಕ್, ಗೋಧಿ ಹಾಲ್ಬಾಯಿ ಮತ್ತು ಬಾದಾಮ್ ಹಲ್ವಾವನ್ನು ಗಣ್ಯರಿಗೆ ಬಡಿಸಲಾಯಿತು. ಜೊತೆಗೆ ರಾಗಿ ಮತ್ತು ಗೋಧಿ ಬಿಸ್ಕೆಟ್, ಚಹಾ ಮತ್ತು ಕಾಫಿ ನೀಡಲಾಯಿತು.

    ಉಪಹಾರದ ಬಗ್ಗೆ ಸಂತೋಷ ವ್ಯಕ್ತಪಡಿಸಿರುವ ರಾಷ್ಟ್ರಪತಿಗಳು. ಉಪಹಾರದ ನಂತರ ಅರಮನೆಯ ಕೆಲವು ಮುಖ್ಯ ಭಾಗಗಳನ್ನು ವೀಕ್ಷಣೆ ಮಾಡಿದರು. ಉಪಹಾರದ ಬಳಿಕ ರಾಷ್ಟ್ರಪತಿಗಳ ಜೊತೆ ರಾಜವಂಶಸ್ಥರು ಫೋಟೊ ಕ್ಲಿಕ್ಕಿಸಿಕೊಂಡಿದ್ದಾರೆ. ಇದನ್ನೂ ಓದಿ: ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು – ರಾಜ್ಯಪಾಲ, ಸಿಎಂರಿಂದ ಆತ್ಮೀಯ ಸ್ವಾಗತ

  • ರಾಷ್ಟ್ರಪತಿಗೆ ಕನ್ನಡ ಬರುತ್ತಾ ಅಂತ ಕೇಳಿದ ಸಿಎಂ – ಸ್ವಲ್ಪ ಸ್ವಲ್ಪ ಬರುತ್ತೆ; ಮುರ್ಮು ಉತ್ತರ

    ರಾಷ್ಟ್ರಪತಿಗೆ ಕನ್ನಡ ಬರುತ್ತಾ ಅಂತ ಕೇಳಿದ ಸಿಎಂ – ಸ್ವಲ್ಪ ಸ್ವಲ್ಪ ಬರುತ್ತೆ; ಮುರ್ಮು ಉತ್ತರ

    – ರಾಜಮನೆತನದಿಂದ ಮಂಗಳವಾರ ಮುರ್ಮುಗೆ ಆತಿಥ್ಯ

    ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) 2 ದಿನಗಳ ಪ್ರವಾಸಕ್ಕೆ ಮೈಸೂರಿಗೆ ಆಗಮಿಸಿದ್ದಾರೆ. ಏರ್‌ಪೋರ್ಟ್‌ನಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದರು. ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರ ಮಹೋತ್ಸವದಲ್ಲಿ ಭಾಗಿಯಾಗಿದ್ದರು.

    ಮೊದಲು ಭಾಷಣ ಆರಂಭಿಸಿದ ಸಿಎಂ ಸಿದ್ದರಾಮಯ್ಯ (Siddaramaiah), ನಿಮಗೆ ಕನ್ನಡ ಬರುತ್ತಾ ಎಂದು ಪ್ರಶ್ನಿಸಿ, ಐ ಸ್ಪೀಕ್ ಕನ್ನಡ ಅಂದ್ರು. ಕೊನೆಯಲ್ಲಿ ಸಿಎಂ ಪ್ರಶ್ನೆಗೆ ಉತ್ತರ ಕೊಟ್ಟ ರಾಷ್ಟ್ರಪತಿ ದ್ರೌಪದಿ ಮುರ್ಮು, ಭಾರತದಲ್ಲಿ ಎಷ್ಟು ಭಾಷೆಗಳಿವೆ? ಎಷ್ಟು ಸಂಸ್ಕೃತಿಗಳಿವೆ? ಎಷ್ಟು ಪರಂಪರೆಗಳಿವೆ, ಅವೆಲ್ಲವೂ ನನಗಿಷ್ಟ. ಕನ್ನಡವು (Kannada Language) ಸ್ವಲ್ಪ ಸ್ವಲ್ಪ ಅರ್ಥ ಆಗುತ್ತೆ ಎಂದು ಹಾಸ್ಯ ಚಟಾಕಿ ಹಾರಿಸಿದ್ರು. ಇದನ್ನೂ ಓದಿ: ಕಾಮಿಡಿ ಸ್ಟಾರ್‌ಗೆ ಕಂಕಣ ಭಾಗ್ಯ – ಚಿಕ್ಕಣ್ಣನ ಬದುಕಿಗೆ ಮನಮೆಚ್ಚಿದ ಹುಡುಗಿ

    ಮಂಗಳವಾರವಾದ ನಾಳೆ ಮೈಸೂರು ಅರಮನೆಗೆ ಭೇಟಿ ಕೊಟ್ಟು, ರಾಜಮನೆತನ ಆತಿಥ್ಯ ಸ್ವೀಕರಿಸಲಿದ್ದಾರೆ. ಮಧ್ಯಾಹ್ನದ ನಂತರ ದೆಹಲಿಗೆ ವಾಪಸ್ ಆಗಲಿದ್ದಾರೆ. ಇದನ್ನೂ ಓದಿ: ಭಾರತ ಈಗ ಸುಂಕ ಕಡಿಮೆ ಮಾಡೋಕೆ ಮುಂದಾಗಿದೆ – ಭಾರತದ ಜೊತೆಗಿನ ಸಂಬಂಧವನ್ನ ವಿಪತ್ತು ಎಂದ ಟ್ರಂಪ್‌

    ಹುಟ್ಟೂರಲ್ಲಿ ಶಾಲೆ ಉದ್ಘಾಟಿಸಿದ ಸಿಎಂ
    ಇನ್ನೂ ಮೈಸೂರು ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಇವತ್ತು ಹುಟ್ಟೂರು ಸಿದ್ದರಾಮನ ಹುಂಡಿಗೆ ಭೇಟಿ ಕೊಟ್ಟು ʻಪಬ್ಲಿಕ್ ಶಾಲೆʼ ಉದ್ಘಾಟಿಸಿದ್ರು. ಸಿಎಂಗೆ ಶಾಲಾ ಆಡಳಿತ ಮಂಡಳಿ ಪೂರ್ಣಕುಂಭ ಸ್ವಾಗತ ನೀಡಿದ್ರು. ಬಳಿಕ ಮಾತನಾಡಿದ ಸಿಎಂ ಊರಿನ ಶಾಲೆಗೂ ನನಗೂ ಮುಗಿಯದ ಋಣ ಅಂತ ಗುಣಗಾನ ಮಾಡಿದ್ರು. ಇದಕ್ಕೂ ಮುನ್ನ, ಶಾರದಾದೇವಿ ನಗರದಲ್ಲಿನ ತಮ್ಮ ನಿವಾಸದ ಬಳಿ ಸಾರ್ವಜನಿಕರ ಅಹವಾಲು ಕೂಡ ಸ್ವೀಕರಿಸಿದ್ರು. ಮೈಸೂರಿನ ಅಗ್ರಹಾರದಲ್ಲಿರೋ ಮೈಲಾರಿ ಹೋಟೆಲ್‌ಗೂ ಭೇಟಿ ಕೊಟ್ಟು ಇಷ್ಟವಾದ ಇಡ್ಲಿ ಕೂಡ ಸವಿದ್ರು. ಇದನ್ನೂ ಓದಿ: ಪಿಜಿ ಅಲೈಡ್ ಹೆಲ್ತ್ ಸೈನ್ಸ್, ಎಂ.ಫಾರ್ಮ, ಫಾರ್ಮ-ಡಿಗೆ ಪ್ರವೇಶ ಪರೀಕ್ಷೆ: ಕೆಇಎ

  • ಸೋಮವಾರ ಮೈಸೂರಿಗೆ ರಾಷ್ಟ್ರಪತಿ ಮುರ್ಮು – ಅರಮನೆಗೆ ಭೇಟಿ, ಚಾಮುಂಡಿ ಬೆಟ್ಟದಲ್ಲೂ ವಿಶೇಷ ಪೂಜೆ

    ಸೋಮವಾರ ಮೈಸೂರಿಗೆ ರಾಷ್ಟ್ರಪತಿ ಮುರ್ಮು – ಅರಮನೆಗೆ ಭೇಟಿ, ಚಾಮುಂಡಿ ಬೆಟ್ಟದಲ್ಲೂ ವಿಶೇಷ ಪೂಜೆ

    ಮೈಸೂರು: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಾಳೆ ಮೈಸೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಬರಲಿದ್ದಾರೆ. ದ್ರೌಪದಿ ಮುರ್ಮು ರಾಷ್ಟ್ರಪತಿ ಆದ ನಂತರ ಎರಡನೇ ಬಾರಿಗೆ ಮೈಸೂರಿಗೆ (Mysuru) ಬರುತ್ತಿದ್ದಾರೆ.

    ಕಳೆದ ಬಾರಿ ದಸರಾ ಉದ್ಘಾಟನೆಗೆಗಾಗಿ ದ್ರೌಪದಿ ಮುರ್ಮು ಮೈಸೂರಿಗೆ ಬಂದಿದ್ದರು. ನಾಳೆ ಮಧ್ಯಾಹ್ನ 3:20ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ರಾಷ್ಟ್ರಪತಿ ಆಗಮಿಸಲಿದ್ದು, ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿಗಳನ್ನು ಸ್ವಾಗತಿಸಲಿದ್ದಾರೆ. ಅಲ್ಲಿಂದ ನೇರವಾಗಿ ರಾಷ್ಟ್ರಪತಿಗಳು ವಾಕ್ ಮತ್ತು ಶ್ರವಣ ಸಂಸ್ಥೆ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ರಾತ್ರಿ 8 ಗಂಟೆಗೆ ಚಾಮುಂಡಿ ಬೆಟ್ಟಕ್ಕೆ (Chamundi Hills) ಭೇಟಿ ನೀಡಿ ಚಾಮುಂಡಿ ತಾಯಿ ದರ್ಶನ ಪಡೆಯಲಿದ್ದಾರೆ. ಇದನ್ನೂ ಓದಿ: ತಲೆ ಮೇಲೆ ಕ್ಯಾಂಟರ್‌ ಹರಿದು ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

    ಸೆಪ್ಟೆಂಬರ್ 2ರಂದು ಬೆಳಗ್ಗೆ ಅರಮನೆಗೆ ಭೇಟಿ ನೀಡಿ ಕೆಲ ಕಾಲ ಅರಮನೆ (Mysuru Palace) ವೀಕ್ಷಿಸಲಿದ್ದಾರೆ. ನಂತರ ರಾಜವಂಶದ ಆತಿಥ್ಯ ಸ್ವೀಕರಿಸಲಿದ್ದಾರೆ. ರಾಜವಂಶದ ಆತಿಥ್ಯ ಮುಗಿಸಿ ಅಲ್ಲಿಂದ ನೇರವಾಗಿ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದು ದೆಹಲಿಗೆ ತೆರಳಲಿದ್ದಾರೆ. ಇದನ್ನೂ ಓದಿ: ನಾಳೆ ಎನ್‌ಐಎ ತನಿಖೆಗೆ ಆಗ್ರಹಿಸಿ ಬಿಜೆಪಿಯಿಂದ ಧರ್ಮಸ್ಥಳ ಚಲೋ, ಜಾಗೃತಿ ಸಮಾವೇಶ

    ರಾಷ್ಟ್ರಪತಿಗಳು ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದು, ಹೋಟೆಲ್ ಸುತ್ತ ಭದ್ರತೆ ಹೆಚ್ಚು ಮಾಡಿದ್ದಾರೆ. ರಾಷ್ಟ್ರಪತಿಗಳು ಸಂಚರಿಸುವ ಮಾರ್ಗಗಳ ರಸ್ತೆ ರಿಪೇರಿ ಕೂಡ ನಡೆದಿದೆ. ಈ ನಡುವೆ ಲಲಿತ್ ಮಹಲ್ ರಸ್ತೆಯ 50ಕ್ಕೂ ಹೆಚ್ಚು ಅಂಗಡಿಗಳ ತೆರವು ಕಾರ್ಯಾಚರಣೆ ಪಾಲಿಕೆ ಸಿಬ್ಬಂದಿ ಮಾಡಿದಕ್ಕೆ ವ್ಯಾಪಾರಿಗಳು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಡಿಕೆಶಿ ಒಂದು ಕಾಲು ಬಿಜೆಪಿಯಲ್ಲಿ ಇಟ್ಟಿದ್ದಾರೆ: ಯತ್ನಾಳ್ ಹೊಸ ಬಾಂಬ್