ನವದೆಹಲಿ: ಬ್ರಿಟನ್ ರಾಣಿ(Queen of Britain) 2ನೇ ಎಲಿಜಬೆತ್(Elizabeth II) ಅವರ ಅಂತ್ಯಕ್ರಿಯೆಯಲ್ಲಿ(Funeral) ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು(Droupadi Murmu) ಭಾಗಿಯಾಗಲಿದ್ದಾರೆ ಹಾಗೂ ಭಾರತದ ಪರವಾಗಿ ಸಂತಾಪ ಸೂಚಿಸಲಿದ್ದಾರೆ.
ಬ್ರಿಟನ್ ರಾಷ್ಟ್ರದ ಮಾಜಿ ಮುಖ್ಯಸ್ಥೆ ಮತ್ತು ಕಾಮನ್‌ವೆಲ್ತ್ ರಾಷ್ಟ್ರಗಳ ಮುಖ್ಯಸ್ಥೆ ರಾಣಿ 2ನೇ ಎಲಿಜಬೆತ್ ಅವರು ಸೆಪ್ಟೆಂಬರ್ 8 ರಂದು ನಿಧನರಾದರು. ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪಾಧ್ಯಕ್ಷ ಜಗದೀಪ್ ಧನಖರ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಗಣ್ಯರು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಟೇಕ್ ಆಫ್ ಆಗುವ ಮೊದಲೇ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಇಂಜಿನ್‍ನಲ್ಲಿ ಬೆಂಕಿ
ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ರಾಣಿಯ ಅಗಲಿಕೆಗೆ ದೇಶದ ವತಿಯಿಂದ ಸಂತಾಪ ಸೂಚಿಸಲು ಸೆಪ್ಟೆಂಬರ್ 12 ರಂದು ನವದೆಹಲಿಯಲ್ಲಿರುವ ಬ್ರಿಟಿಷ್ ಹೈಕಮಿಷನ್‌ಗೆ ಭೇಟಿ ನೀಡಿದ್ದರು. ಸೆಪ್ಟೆಂಬರ್ 11ರಂದು ಭಾರತ ರಾಷ್ಟ್ರೀಯ ಶೋಕಾಚರಣೆಯನ್ನು ಆಚರಿಸಿತು.
Live Tv
[brid partner=56869869 player=32851 video=960834 autoplay=true]
ಭುವನೇಶ್ವರ: ಕೊಹಿನೂರ್ ವಜ್ರವು (Kohinoor Diamond) ಜಗನ್ನಾಥ ದೇವರಿಗೆ ಸೇರಿದ್ದು, ಬ್ರಿಟನ್‌ನಿಂದ ಅದನ್ನು ಐತಿಹಾಸಿಕ ಪುರಿ ಜಗನ್ನಾಥ ದೇವಾಲಯಕ್ಕೆ (Jagannath) ವಾಪಸ್ ತರಲು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಮಧ್ಯಸ್ಥಿಕೆಯಲ್ಲಿ ಕ್ರಮವಹಿಸಬೇಕು ಎಂದು ಒಡಿಶಾದ ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆ ಮನವಿ ಮಾಡಿದೆ.
ರಾಣಿ ಎಲಿಜಬೆತ್-2 (Queen Elizabeth II) ನಿಧನ ನಂತರ, ಆಕೆಯ ಹಿರಿಯ ಪುತ್ರ ಪ್ರಿನ್ಸ್ ಚಾರ್ಲ್ಸ್ (Prince Charles) ಬ್ರಿಟನ್ ರಾಜನಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ನಿಯಮಗಳ ಪ್ರಕಾರ, 105 ಕ್ಯಾರೆಟ್ ವಜ್ರವಿರುವ ಕಿರೀಟವನ್ನು ಚಾರ್ಲ್ಸ್ ಪತ್ನಿ ಕಾರ್ನ್‌ವಾಲ್ ಕ್ಯಾಮಿಲ್ಲಾ ಅವರು ಧರಿಸಲಿದ್ದಾರೆ. ಇದನ್ನೂ ಓದಿ: ಆಹಾರ ಪದಾರ್ಥಗಳು ದುಬಾರಿ – ಚಿಲ್ಲರೆ ಹಣದುಬ್ಬರ ಶೇ.7ಕ್ಕೆ ಏರಿಕೆ
12ನೇ ಶತಮಾನದ ದೇಗುಲಕ್ಕೆ ಕೊಹಿನೂರ್ ವಜ್ರವನ್ನು ಮರಳಿ ತರುವ ಪ್ರಕ್ರಿಯೆಯನ್ನು ಸುಗಮಗೊಳಿಸಲು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಪುರಿ ಮೂಲದ ಶ್ರೀ ಜಗನ್ನಾಥ ಸೇನೆಯು ರಾಷ್ಟ್ರಪತಿಗಳಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಿತು.
ಕೊಹಿನೂರ್ ವಜ್ರವು ಶ್ರೀ ಜಗನ್ನಾಥ ಭಾಗ್ಬನ್ ಅವರದ್ದು. ಅದು ಈಗ ಇಂಗ್ಲೆಂಡ್ ರಾಣಿ ಬಳಿ ಇದೆ. ಮಹಾರಾಜ ರಂಜಿತ್ ಸಿಂಗ್ ಅವರು ತಮ್ಮ ಇಚ್ಛೆಯ ಮೇರೆಗೆ ಅದನ್ನು ಜಗನ್ನಾಥ ದೇವರಿಗೆ ದಾನ ಮಾಡಿದಂತೆ, ಅದನ್ನು ಭಾರತಕ್ಕೆ ತರಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಪ್ರಧಾನಿಯವರಲ್ಲೂ ವಿನಂತಿಸುತ್ತೇವೆ ಎಂದು ಕೋರಿದೆ. ಇದನ್ನೂ ಓದಿ: ಆಟೋ ಚಾಲಕನ ಮನೆಯಲ್ಲಿ ಊಟ ಮಾಡಿದ ಕೇಜ್ರಿವಾಲ್ – ರಿಕ್ಷಾದಲ್ಲೇ ಪ್ರಯಾಣಿಸಿ ಸರಳತೆ ಮೆರೆದ್ರು
ಪಂಜಾಬ್‌ನ ಮಹಾರಾಜ ರಂಜಿತ್ ಸಿಂಗ್ ಅವರು ಅಫ್ಘಾನಿಸ್ತಾನದ ನಾದಿರ್ ಶಾ ವಿರುದ್ಧದ ಯುದ್ಧದಲ್ಲಿ ಗೆದ್ದ ನಂತರ ಪುರಿ ಭಗವಂತನಿಗೆ ವಜ್ರವನ್ನು ದಾನ ಮಾಡಿದ್ದಾರೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ರಣಜಿತ್ ಸಿಂಗ್ 1839 ರಲ್ಲಿ ನಿಧನರಾದರು. 10 ವರ್ಷಗಳ ನಂತರ ಬ್ರಿಟಿಷರು ಕೊಹಿನೂರ್ ವಜ್ರವನ್ನು ರಣಜಿತ್ ಅವರ ಮಗ ದುಲೀಪ್ ಸಿಂಗ್‌ನಿಂದ ಕಿತ್ತುಕೊಂಡರು ಎಂದು ಇತಿಹಾಸಕಾರ ಮತ್ತು ಸಂಶೋಧಕ ಅನಿಲ್ ಧೀರ್ ಮಾಹಿತಿ ನೀಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಸುಪ್ರೀಂ ಕೋರ್ಟ್ನ 49ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಯು.ಯು ಲಲಿತ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಬೋಧಿಸಿದ್ದಾರೆ.
ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ವಕೀಲ ವರ್ಗದಿಂದ ನೇರವಾಗಿ ಪದೋನ್ನತಿ ಪಡೆದ 2ನೇ ಸಿಜೆಐ ಆಗಿದ್ದಾರೆ. ಪದೋನ್ನತಿ ಪಡೆದ ಮೊದಲ ಸಿಜೆಐ ಆಗಿ ಎಸ್.ಎಂ ಸಿಕ್ರಿ ಅವರು 1971 ರಿಂದ ಏಪ್ರಿಲ್ 1973ರ ವರೆಗೆ ಸೇವೆ ಸಲ್ಲಿಸಿದ್ದರು. ಇದನ್ನೂ ಓದಿ: ಬಿಗ್ ಬಾಸ್ ಮನೆಯಿಂದ ಉದಯ್ ಸೂರ್ಯ ಔಟ್
ನ್ಯಾಯಮೂರ್ತಿ ಲಲಿತ್ ಅವರು ಹಿರಿಯ ವಕೀಲ ಯು.ಆರ್ ಲಲಿತ್ ಪುತ್ರನಾಗಿ 1957ರ ನವೆಂಬರ್ 9ರಲ್ಲಿ ಜನಿಸಿದರು. 1983ರ ಜೂನ್‌ನಲ್ಲಿ ವಕೀಲರಾಗಿ ಸೇವೆ ಆರಂಭಿಸಿದ ಲಲಿತ್ ಅವರು ಡಿಸೆಂಬರ್ 1985ರ ವರೆಗೆ ಬಾಂಬೆ ಹೈಕೋರ್ಟ್ನಲ್ಲಿ ಅಭ್ಯಾಸ ಮಾಡಿದರು. 1986ರಲ್ಲಿ ರಾಷ್ಟ್ರ ರಾಜಧಾನಿಗೆ ತೆರಳಿ ಅಲ್ಲಿ ವಕೀಲರಾಗಿ ಸೇವೆ ಸಲ್ಲಿಸಿದ ಅವರು 2004ರ ಏಪ್ರಿಲ್‌ನಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡರು. ಇದನ್ನೂ ಓದಿ: 2 ಮಕ್ಕಳ ತಾಯಿಯೊಂದಿಗೆ ಪರಾರಿಯಾಗಿ ಜೀವನಕ್ಕೆ ಗಾರೆ ಕೆಲಸ ಮಾಡ್ತಿದ್ದ BE ಗ್ರ್ಯಾಜುಯೆಟ್ – ಪೊಲೀಸರ ಅತಿಥಿ
ಮುಂದೆ ಅವರು 2014ರ ಆಗಸ್ಟ್ 13ರಂದು ವಕೀಲ ವರ್ಗದಿಂದ ನೇರವಾಗಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪದೋನ್ನತಿ ಪಡೆದರು. ಇದೇ ವರ್ಷ ನವೆಂಬರ್ 8 ರಂದು ಅವರು ಸಿಜೆಐ ಹುದ್ದೆಯಿಂದ ನಿವೃತ್ತರಾಗಲಿದ್ದಾರೆ.
Live Tv
[brid partner=56869869 player=32851 video=960834 autoplay=true]
ಗಾಂಧಿನಗರ: 2002ರ ಬಿಲ್ಕಿಸ್ ಬಾನು ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 11 ಅಪರಾಧಿಗಳನ್ನು ಬಿಡುಗಡೆ ಮಾಡಿರುವ ನಿರ್ಧಾರವನ್ನು ಹಿಂಪಡೆಯಲು ಕೇಂದ್ರ ಗೃಹ ಸಚಿವಾಲಯ ಹಾಗೂ ರಾಜ್ಯ ಸರ್ಕಾರಕ್ಕೆ ಸೂಚಿಸಬೇಕು ಎಂದು ಗುಜರಾತ್‍ನ ಕಾಂಗ್ರೆಸ್‍ನ ಮೂವರು ಶಾಸಕರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.
ಮೂವರು ಶಾಸಕರಾದ ಗ್ಯಾಸುದ್ದೀನ್ ಶೇಖ್, ಇಮ್ರಾನ್ ಖೇದವಾಲಾ ಮತ್ತು ಜಾವೇದ್ ಪಿರ್ಜಾದಾ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ ಎಂದು ಶೇಖ್ ತಿಳಿಸಿದ್ದಾರೆ.
ಈ ಪತ್ರದಲ್ಲಿ 11 ಅಪರಾಧಿಗಳನ್ನು ಬಿಡುಗಡೆ ಮಾಡಲು ಆದೇಶಿಸಿದ ಗುಜರಾತ್ ಸರ್ಕಾರದ ನಿರ್ಧಾರವು ನಾಚಿಕೆಗೇಡು ಹಾಗೂ ನ್ಯಾಯಕ್ಕಾಗಿ ಹೋರಾಡುತ್ತಿರುವವರಿಗೆ ನಿರಾಶಾದಾಯಕವಾದದ್ದಾಗಿದೆ ಎಂದು ಕಿಡಿಕಾರಿದ್ದಾರೆ.
ಕ್ಷಮಾದಾನ ನೀತಿಯಡಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಬಾರದು ಎಂದು ಕೇಂದ್ರ ಸರ್ಕಾರ ಸ್ಪಷ್ಟ ಮಾರ್ಗಸೂಚಿ ಹೊಂದಿದ್ದರೂ, ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳಿಗೆ ಕ್ಷಮಾದಾನ ನೀಡುವ ಮೂಲಕ ಗುಜರಾತ್‍ನ ಬಿಜೆಪಿ ಸರ್ಕಾರ ತನ್ನ ಅಸೂಕ್ಷ್ಮತೆಯನ್ನು ಪ್ರದರ್ಶಿಸಿದೆ. ಇದರಿಂದಾಗಿ ನ್ಯಾಯಕ್ಕಾಗಿ ಹೋರಾಡುತ್ತಿರುವವರಿಗೆ ನಿರಾಶಾದಾಯಕ ನಿರ್ಧಾರವಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಗುಜರಾತ್‌ನಲ್ಲಿ 2002ರಲ್ಲಿ ನಡೆದ ಬಿಲ್ಕಿಸ್ ಬಾನು ಮೇಲಿನ ಅತ್ಯಾಚಾರ ಮತ್ತು ಅವರ ಕುಟುಂಬದ 7 ಮಂದಿಯ ಹತ್ಯೆ ಪ್ರಕರಣದ 11 ಅಪರಾಧಿಗಳನ್ನು 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭ ಬಿಡುಗಡೆ ಮಾಡಲಾಗಿದೆ. ಆಗ ಬಿಲ್ಕಿಸ್ ಬಾನು ಅವರು 5 ತಿಂಗಳ ಗರ್ಭಿಣಿಯಾಗಿದ್ದರು. ಬಾನು ಅವರ ಮೂರು ವರ್ಷದ ಮಗು ಸೇರಿ ಏಳು ಮಂದಿಯನ್ನು ಹತ್ಯೆ ಮಾಡಲಾಗಿತ್ತು. ಇದನ್ನೂ ಓದಿ: ಕೆಲಸವಿಲ್ಲದೇ ಊಟಕ್ಕೂ ಗತಿಯಿಲ್ಲವೆಂದು 11 ತಿಂಗಳ ಮಗುವನ್ನು ಕಾಲುವೆಗೆ ಎಸೆದ
Live Tv
[brid partner=56869869 player=32851 video=960834 autoplay=true]
ನವದೆಹಲಿ: ದೇಶವು 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶವನ್ನುದ್ದೇಶಿಸಿ ಮಾಡಿದ ತಮ್ಮ ಚೊಚ್ಚಲ ಭಾಷಣದಲ್ಲಿ, ರಾಷ್ಟ್ರಕವಿ ಕುವೆಂಪು ಅವರ ಕವನದ ಸಾಲನ್ನು ಹೇಳುವ ಮೂಲಕ ಕನ್ನಡ ಹಿರಿಮೆಯನ್ನು ಸ್ಮರಿಸಿದ್ದಾರೆ.
ದ್ರೌಪದಿ ಮುರ್ಮು ಅವರು ರಾಷ್ಟ್ರಕವಿ ಕುವೆಂಪು ಅವರ ನಾನಳಿವೆ ನಿನಳಿವೆ ಕವನದ ಸಾಲುಗಳನ್ನು ಕನ್ನಡದಲ್ಲೇ ಹೇಳುವುದರ ಜೊತೆಗೆ ಅದರ ಅರ್ಥವನ್ನು ತಿಳಿಸಿದ್ದಾರೆ. ಕನ್ನಡ ಭಾಷೆಯ ಮೂಲಕ ಭಾರತೀಯ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಮಹಾನ್ ಕವಿ ಕುವೆಂಪು ಅವರು ಒಂದು ಕವಿತೆಯಲ್ಲಿ ನಾನು ಅಳಿವೇ, ನೀನು ಅಳುವೆ, ನಮ್ಮ ಎಲುಬುಗಳ ಮೇಲೆ ಮೂಡುವುದು- ಮೂಡುವುದು ನವ ಭಾರತ ಲೀಲೆ ಎಂದು ಹೇಳಿದ್ದಾರೆ.
हमारे पास जो कुछ भी है वह हमारी मातृभूमि का दिया हुआ है। इसलिए हमें अपने देश की सुरक्षा, प्रगति और समृद्धि के लिए अपना सब कुछ अर्पण कर देने का संकल्प लेना चाहिए। pic.twitter.com/Uib2axfaDz
2047ರ ವೇಳೆಗೆ ದೇಶವನ್ನು ಕಟ್ಟಲು ಯುವಜನರಿಗೆ ಕರೆ ನೀಡಿದ ಅವರು, ಮಾತೃಭೂಮಿಯ ಉನ್ನತಿಗಾಗಿ ತ್ಯಾಗ ಮಾಡುವಂತೆ ಮನವಿ ಮಾಡಿದರು. ಇದೇ ವೇಳೆ ಭಾರತ ನದಿ, ಬೆಟ್ಟ, ಗುಡ್ಡ, ಬಯಲು, ಕಾಡು, ಕೃಷಿ ಸೇರಿದಂತೆ ಪ್ರಕೃತಿ ಸೌಂದರ್ಯದಿಂದ ಕೂಡಿದ ದೇಶವಾಗಿದೆ. ಈ ಸಂಪದ್ಭರಿತ ದೇಶವನ್ನು ಮುಂದಿನ ಪೀಳಿಗೆಗೆ ನೀಡುವ ಅತೀ ದೊಡ್ಡ ಜವಾಬ್ದಾರಿಯೂ ನಮ್ಮ ಮೇಲಿದೆ ಎಂದು ಹೇಳಿದರು. ಇದನ್ನೂ ಓದಿ:75ನೇ ಸ್ವಾತಂತ್ರ್ಯೋತ್ಸವ – ರಾಷ್ಟ್ರಪತಿಯಾಗಿ ದೇಶವನ್ನುದ್ದೇಶಿಸಿ ಚೊಚ್ಚಲ ಭಾಷಣ ಮಾಡಿದ ದ್ರೌಪದಿ ಮುರ್ಮು
Live Tv
[brid partner=56869869 player=32851 video=960834 autoplay=true]
ನವದೆಹಲಿ: ದೇಶವು 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶವನ್ನುದ್ದೇಶಿಸಿ ತಮ್ಮ ಚೊಚ್ಚಲ ಭಾಷಣ ಮಾಡಿದ್ದಾರೆ. ಈ ವೇಳೆ ವಸಾಹತುಶಾಹಿ ಆಡಳಿತದಿಂದ ಭಾರತವನ್ನು ಮುಕ್ತಗೊಳಿಸಿದ ಸ್ವಾತಂತ್ರ್ಯ ಹೋರಾಟಗಾರರ ಅಪಾರ ತ್ಯಾಗವನ್ನು ರಾಷ್ಟ್ರಪತಿ ಸ್ಮರಿಸಿದ್ದಾರೆ.
Many heroes & their struggles were forgotten, especially among peasants & tribals. Govt's decision to observe November 15 as ‘Janajatiya Gaurav Divas’ is welcome as our tribal heroes aren't merely local or regional icons but inspire entire nation: President Droupadi Murmu pic.twitter.com/NM5EEAWcZa
2047 ರ ವೇಳೆಗೆ, ನಾವು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ಸಂಪೂರ್ಣವಾಗಿ ಸಾಕಾರಗೊಳಿಸುತ್ತೇವೆ. ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್ ಅವರ ನೇತೃತ್ವದಲ್ಲಿ ಸಂವಿಧಾನವನ್ನು ರಚಿಸಿದವರ ದೂರದೃಷ್ಟಿಗೆ ನಾವು ಕಾಂಕ್ರೀಟ್ ರೂಪವನ್ನು ನೀಡುತ್ತೇವೆ ಎಂದು ಹೇಳಿದ್ದಾರೆ.
ಕೋವಿಡ್ ನಿರ್ವಹಣೆ ಕುರಿತು ಮಾತನಾಡಿದ ಅವರು, ಕೊರೊನಾ ಸಂಕಷ್ಟದ ನಡುವೆ ಇತಿಹಾಸದಲ್ಲೇ ಅತಿದೊಡ್ಡ ಲಸಿಕೆ ಅಭಿಯಾನವನ್ನು ಪ್ರಾರಂಭಿಸಿದ್ದೇವೆ. 200 ಕೋಟಿ ಡೋಸ್‌ಗಳ ಒಟ್ಟು ಲಸಿಕೆ ವ್ಯಾಪ್ತಿಯನ್ನು ದಾಟಿದ್ದೇವೆ ಎಂದು ಉಲ್ಲೇಖಿಸಿದ್ದಾರೆ.
ಲಿಂಗ ಅಸಮಾನತೆ ಕಡಿಮೆಯಾಗುತ್ತಿದೆ. ಹೆಣ್ಣು ಮಕ್ಕಳು ದೇಶದ ಭವಿಷ್ಯದ ದೊಡ್ಡ ಭರವಸೆಯಾಗಿದ್ದಾರೆ ಎಂದರಲ್ಲದೇ, ಪ್ರಜಾಪ್ರಭುತ್ವದ ನೈಜ ಸಾಮರ್ಥ್ಯವನ್ನು ಕಂಡುಹಿಡಿಯಲು ಜಗತ್ತಿಗೆ ಸಹಾಯ ಮಾಡಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ ಎಂದು ಹೇಳಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಪ್ರತಿಕ್ರಿಯಿಸಿ, ಈ ನೀತಿಯು ಮುಂದಿನ ಹಂತದ ಕೈಗಾರಿಕಾ ಕ್ರಾಂತಿಗೆ ಭವಿಷ್ಯದ ಪೀಳಿಗೆಯನ್ನು ಸಿದ್ಧಪಡಿಸುವ ಗುರಿಯನ್ನು ಹೊಂದಿದೆ ಎಂದು ಬಣ್ಣಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಜಗದೀಪ್ ಧನಕರ್ ಅವರಿಂದು ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಭಾರತದ 14ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 71 ವರ್ಷದ ಧನಕರ್ ಅವರಿಗೆ ಪ್ರಮಾಣವಚನ ಬೋಧಿಸಿದ್ದು, ಧನಕರ್ ಹಿಂದಿಯಲ್ಲೇ ಪ್ರಮಾಣವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ನಿರ್ಗಮಿತ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹಾಗೂ ಹಲವು ಗಣ್ಯರು ಪಾಲ್ಗೊಂಡಿದ್ದರು.
ವೃತ್ತಿಯಲ್ಲಿ ವಕೀಲರಾಗಿದ್ದ ಧನಕರ್ 1989ರಲ್ಲಿ ರಾಜಕೀಯ ಪ್ರವೇಶಿಸಿದರು. ರಾಜಸ್ಥಾನದ ಝುಂಝುನು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದರು. 1990ರಲ್ಲಿ ಕೇಂದ್ರ ಸಚಿವರಾಗಿ, ರಾಜಾಸ್ಥಾನದ ಹೈಕೋರ್ಟ್ ವಕೀಲರ ಸಂಘದ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ. ಇದನ್ನೂ ಓದಿ: ನನ್ನ ತಂದೆ-ತಾಯಿ ಮೆಚ್ಚುವ ರೀತಿ ನಾನು ಕಾಲೇಜು ಜೀವನ ಕಳೆಯಲಿಲ್ಲ: ರಾಕಿಂಗ್ ಸ್ಟಾರ್
1993 ರಿಂದ 1998ರ ವರೆಗೆ ರಾಜಾಸ್ಥಾನ ವಿಧಾನಸಭೆಯ ಸದಸ್ಯರೂ ಆಗಿದ್ದರು. ಜನತಾ ದಳ (ಜೆಡಿಯು)ದಿಂದ ರಾಜಕೀಯ ಜೀವನ ಆರಂಭಿಸಿದ್ದ ಅವರು, ನಂತರ ಕಾಂಗ್ರೆಸ್ ಸೇರಿದ್ದರು. 2003ರಲ್ಲಿ ಕಾಂಗ್ರೆಸ್ ತೊರೆದು ಅವರು ಬಿಜೆಪಿ ಸೇರಿದರು. 2019ರಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ಅವರನ್ನು ನೇಮಿಸಲಾಯಿತು. ಅಧಿಕಾರ ವಹಿಸಿಕೊಂಡ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದೊಂದಿಗಿನ ತಿಕ್ಕಾಟದಿಂದಲೇ ಆಗಾಗ ಸುದ್ದಿಯಾಗುತ್ತಿದ್ದರು.
ಉಪ ರಾಷ್ಟ್ರಪತಿ ಹುದ್ದೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅವರು, ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿ ಮಾರ್ಗರೇಟ್ ಆಳ್ವ ಅವರನ್ನು ಚುನಾವಣೆಯಲ್ಲಿ ಮಣಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಸಂದರ್ಶನವೊಂದರಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ʼರಾಷ್ಟ್ರಪತ್ನಿʼ ಎಂದು ಹೇಳುವ ಮೂಲಕ ಭಾರೀ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಅವರು ಕ್ಷಮೆಯಾಚಿಸಿದ್ದಾರೆ. ಈ ಸಂಬಂಧ ರಾಷ್ಟ್ರಪತಿ ಮುರ್ಮು ಅವರಿಗೆ ಪತ್ರ ಬರೆದು ಚೌಧರಿ ಕ್ಷಮೆ ಕೋರಿದ್ದಾರೆ.
ನೀವು ಹೊಂದಿರುವ ಸ್ಥಾನದ ಬಗ್ಗೆ ತಪ್ಪಾಗಿ ಪದ ಬಳಸಿ ಮಾತನಾಡಿದ್ದಕ್ಕೆ ವಿಷಾದಿಸುತ್ತೇನೆ. ಬಾಯಿತಪ್ಪಿ ಈ ಹೇಳಿಕೆ ಬಂದಿದೆಯಷ್ಟೆ. ನನ್ನ ಹೇಳಿಕೆಗೆ ಕ್ಷಮೆಯಾಚಿಸುತ್ತೇನೆ. ನೀವು ಕ್ಷಮೆಯನ್ನು ಸ್ವೀಕರಿಸುವಂತೆ ವಿನಂತಿಸುತ್ತೇನೆ ಎಂದು ಚೌಧರಿ ಅವರು ಬುಡಕಟ್ಟು ಸಮುದಾಯದಿಂದ ದೇಶದ ಮೊದಲ ರಾಷ್ಟ್ರಪತಿಯಾಗಿರುವ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಸಿಂಗಾಪುರ ಭೇಟಿ ರದ್ದು – ನಾನು ಯಾರನ್ನೂ ದೂಷಿಸಲ್ಲ: ಕೇಜ್ರಿವಾಲ್
ತಮ್ಮ ಪಕ್ಷದ ನಾಯಕಿ ಬಗ್ಗೆ ಚೌಧರಿ ನೀಡಿದ್ದ ಹೇಳಿಕೆಗೆ ಬಿಜೆಪಿ ಭಾರೀ ಟೀಕೆ ವ್ಯಕ್ತಪಡಿಸಿತ್ತು. ಅಲ್ಲದೇ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಸಹ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಒತ್ತಾಯಿಸಿತ್ತು.
ಇದು ಬಾಯಿ ತಪ್ಪಿ ಹೇಳಿದ ಮಾತಲ್ಲ. ಸಂದರ್ಶನದ ದೃಶ್ಯಾವಳಿಗಳನ್ನು ನೋಡಿದರೆ, ಅಧೀರ್ ರಂಜನ್ ಚೌಧರಿ ಅವರು ರಾಷ್ಟ್ರಪತಿಯನ್ನು ಎರಡು ಬಾರಿ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ನಂತರ ಅವರನ್ನು ರಾಷ್ಟ್ರಪತ್ನಿ ಎಂದು ಕರೆದಿದ್ದಾರೆ. ಇಂತಹ ವಿಷಯಗಳನ್ನು ಲಘುವಾಗಿ ಸ್ವೀಕರಿಸಬಾರದು ಎಂದು ಕಾನೂನು ಸಚಿವ ಕಿರಣ್ ರಿಜಿಜು ಹೇಳಿಕೆ ನೀಡಿದ್ದರು. ಅಲ್ಲದೇ ಚೌಧರಿ ವಿರುದ್ಧ ಸಂಸತ್‌ನಲ್ಲಿ ಗುರುವಾರ ಬಿಜೆಪಿ ನಾಯಕರು ಗದ್ದಲ ಎಬ್ಬಿಸಿದ್ದರು. ಇದನ್ನೂ ಓದಿ: ಭಾರೀ ಬೆಂಕಿಗೆ ಹೊತ್ತಿ ಉರಿದ ಮುಂಬೈ ಶಾಪ್ – ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ
Live Tv
[brid partner=56869869 player=32851 video=960834 autoplay=true]
ನವದೆಹಲಿ: ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತ್ನಿ ಎಂದು ಕರೆದಿದ್ದ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ಕ್ಷಮೆ ಕೋರಿದ್ದಾರೆ.
ಅಧೀರ್ ರಂಜನ್ ಚೌಧರಿ ಅವರು, ತಮ್ಮ ಪಕ್ಷದಿಂದ ನಡೆಸುತ್ತಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುವಾಗ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಎನ್ನುವ ಬದಲು ರಾಷ್ಟ್ರಪತ್ನಿ ಎಂದಿದ್ದರು. ಈ ಬಗ್ಗೆ ಆಡಳಿತ ಪಕ್ಷದವರು ಸೋನಿಯಾ ಗಾಂಧಿ ಹಾಗೂ ಅಧೀರ್ ರಂಜನ್ ಚೌಧರಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಮಾತನಾಡಿದ ಅಧೀರ್ ರಂಜನ್ ಚೌಧರಿ, ದ್ರೌಪದಿ ಮುರ್ಮು ಅವರನ್ನು ಖುದ್ದಾಗಿ ಭೇಟಿಯಾಗುವುದಾಗಿ ಹಾಗೂ ಅವರಿಗೆ ನೋವಾಗಿದ್ದರೆ ಕ್ಷಮೆ ಕೇಳುವುದಾಗಿ ತಿಳಿಸಿದ್ದಾರೆ.
ರಾಷ್ಟ್ರಪತಿ ಅವರನ್ನು ಅವಮಾನಿಸುವ ಯೋಚನೆಯೂ ಇರಲಿಲ್ಲ. ಅಧ್ಯಕ್ಷರಿಗೆ ನೋವಾಗಿದ್ದರೆ ನಾನೇ ಖುದ್ದು ಭೇಟಿಯಾಗಿ ಕ್ಷಮೆ ಕೇಳುತ್ತೇನೆ. ಅವರು ಬೇಕಾದರೆ ನನ್ನನ್ನು ಗಲ್ಲಿಗೇರಿಸಬಹುದು. ಶಿಕ್ಷೆಗೆ ನಾನು ಸಿದ್ಧನಿದ್ದೇನೆ. ಆದರೆ ಸೋನಿಯಾ ಗಾಂಧಿ ಅವರನ್ನು ವಿನಃ ಕರೆತರಲಾಗುತ್ತಿದೆ ಎಂದರು.
ಎನ್‍ಡಿಎ ಸರ್ಕಾರ ರಾಷ್ಟ್ರಪತಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರನ್ನು ಹೆಸರಿಸಿದಾಗಿನಿಂದಲೂ ಕಾಂಗ್ರೆಸ್, ಮುರ್ಮು ಅವರನ್ನು ದುರುದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡಿದೆ. ಮತ್ತು ಕಾಂಗ್ರೆಸ್‍ನ ನಾಯಕರು ಅವರನ್ನು ಕೈಗೊಂಬೆ ಮತ್ತು ರಬ್ಬರ್ ಸ್ಟಾಂಪ್ ಎಂದು ಕರೆದಿದ್ದರು ಎಂದು ಬಿಜೆಪಿ ಆರೋಪಿಸಿತ್ತು.
ಈ ಬಗ್ಗೆ ಸಚಿವೆ ಸ್ಮೃತಿ ಇರಾನಿ ಕಿಡಿಕಾರಿದ್ದು, ದ್ರೌಪದಿ ಮುರ್ಮು ಅವರು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಆಯ್ಕೆಯಾದ ನಂತರವೂ ಈ ವಾಗ್ದಾಳಿಗಳು ನಿಲ್ಲುವಂತೆ ಕಾಣುತ್ತಿಲ್ಲ. ಚೌಧರಿಯವರ ಈ ಹೇಳಿಕೆಯು ಮುರ್ಮು ಅವರು ಪ್ರತಿನಿಧಿಸುವ ಶ್ರೀಮಂತ ಬುಡಕಟ್ಟು ಪರಂಪರೆಗೆ ಮತ್ತು ಕಠಿಣ ಪರಿಶ್ರಮದ ಮೂಲಕ ಮೇಲೆ ಬರುವ ಬಡವರಿಗೆ ಮಾಡುವ ಅವಮಾನವಾಗಿದೆ ಎಂದು ಹೇಳಿದ್ದರು. ಇದನ್ನೂ ಓದಿ: ಪಾಪಿಗೂ ಭವಿಷ್ಯವಿದೆ – ಅತ್ಯಾಚಾರಿಗೆ ಗಲ್ಲು ಶಿಕ್ಷೆ ವಿಧಿಸಲು ನಿರಾಕರಿಸಿದ ಸುಪ್ರೀಂ
ಭಾರತದ ಮೊದಲ ಬುಡಕಟ್ಟು ಜನಾಂಗದಿಂದ ರಾಷ್ಟ್ರಪತಿಯಾಗಿರುವ ದ್ರೌಪದಿ ಮುರ್ಮು ಅವರು ಹೋರಾಟಗಳನ್ನು ನಡೆಸಿಕೊಂಡು ಬಂದಂತವರು. ಮತ್ತು ಪಂಚಾಯಿತಿಯಿಂದ ಸಂಸತ್ತಿನವರೆಗೆ ದೇಶದ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತಾರೆ. ಅಧ್ಯಕ್ಷೆ ಸೋನಿಯಾ ಗಾಂಧಿಯವರ ನೇತೃತ್ವದಲ್ಲಿ ಕಾಂಗ್ರೆಸ್ ಪದೇ ಪದೆ ಮಹಿಳೆಯರನ್ನು ಗುರಿಯಾಗಿಸಿಕೊಂಡಿದೆ ಎಂದು ಸ್ಮೃತಿ ಇರಾನಿ ಆರೋಪಿಸಿದ್ದರು.
ಇದಲ್ಲದೆ ಸದನದ ಒಳಗೂ ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡ ಸ್ಮೃತಿ ಇರಾನಿ, ಸೋನಿಯಾ ಗಾಂಧಿ ಅವರೇ, ನೀವು ದ್ರೌಪದಿ ಮುರ್ಮು ಅವರ ಅವಮಾನವನ್ನು ಅನುಮೋದಿಸಿರುವಿರಿ. ಅತ್ಯುನ್ನತ ಸಾಂವಿಧಾನಿಕ ಹುದ್ದೆಯಲ್ಲಿ ಮಹಿಳೆಯನ್ನು ಅವಮಾನಿಸಲು ಸೋನಿಯಾ ಗಾಂಧಿ ಅವರು ಅನುಮತಿ ನೀಡಿದ್ದಾರೆ ಎಂದು ಹೇಳಿದ್ದರು. ಇದನ್ನೂ ಓದಿ: ಬಿಬಿಎಂಪಿ ಚುನಾವಣೆ ನಡೆಸಲು ನಾವು ಸಿದ್ಧ: ಆರ್. ಅಶೋಕ್
Live Tv
[brid partner=56869869 player=32851 video=960834 autoplay=true]
ನವದೆಹಲಿ: ದ್ರೌಪದಿ ಮುರ್ಮು ಅವರು ಇಂದು 15ನೇ ಭಾರತದ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಮೂಲಕ ಎರಡನೇ ಮಹಿಳಾ ರಾಷ್ಟ್ರಪತಿ ಹಾಗೂ ಬುಡಕಟ್ಟು ಜನಾಂಗದ ಮೊದಲ ರಾಷ್ಟ್ರಪತಿಯಾಗಿ ಆಯ್ಕೆ ಆಗಿದ್ದಾರೆ. ಆದರೆ ಇವರು ಪ್ರಮಾಣವಚನ ಸ್ವೀಕರಿಸಿದ ಈ ದಿನಾಂಕಕ್ಕೂ ಹಾಗೂ ರಾಷ್ಟ್ರಪತಿ ಹುದ್ದೆಗೂ 1977ರಂದಲೂ ಅವಿನಾಭಾವ ನಂಟಿದೆ.
ಹೌದು. ಇದೇ ದಿನಾಂಕ ಅಂದರೆ ಜುಲೈ 25ರಂದು 10 ರಾಷ್ಟ್ರಪತಿಗಳು ಪ್ರಮಾಣವಚನ ಸ್ವೀಕರಿಸಿದ್ದಾರೆ. ಆದರೆ ಕುತೂಹಲಕಾರಿ ವಿಷಯವೆನೆಂದರೆ ರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆಯಾಗುವವರು ಇದೇ ದಿನಾಂಕದಂದು ಪ್ರಮಾಣ ವಚನ ಸ್ವೀಕರಿಸಬೇಕೆಂಬ ಯಾವುದೇ ಲಿಖಿತ ನಿಯಮಗಳಿಲ್ಲ. ಇದಕ್ಕೆ ವ್ಯತಿರಿಕ್ತವಾಗಿ 1977ರ ಹಿಂದಿನ ರಾಷ್ಟ್ರಪತಿಗಳಾಗಿದ್ದ ರಾಜೇಂದ್ರ ಪ್ರಸಾದ್, ಸರ್ವಪಲ್ಲಿ ರಾಧಾಕೃಷ್ಣನ್, ಜಾಕೀರ್ ಹುಸೇನ್ ಹಾಗೂ ಫಕ್ರುದ್ದೀನ್ ಅಲಿ ಅಹಮದ್ ಅವರು ಬೇರೆ ಬೇರೆ ದಿನಾಂಕದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದರು.
ದೇಶದಲ್ಲಿ ಮೊದಲ ರಾಷ್ಟ್ರಪತಿಯಾಗಿದ್ದ ರಾಜೇಂದ್ರ ಪ್ರಸಾದ್ ಅವರು 1950ರ ಜನವರಿ 26ರಂದು ಪ್ರಮಾಣವಚನ ಸ್ವೀಕರಿಸಿದ್ದರು. ಸರ್ವಪಲ್ಲಿ ರಾಧಾಕೃಷ್ಣನ್ ಅವರು 1962ರ ಮೇ 13 ರಾಷ್ಟ್ರಪತಿ ಆಗಿ ಅಧಿಕಾರ ಸ್ವೀಕರಿಸಿದ್ದರು. ಅದಾದ ಬಳಿಕ ಜಾಕಿರ್ ಹುಸೇನ್ ಮತ್ತು ಫಕ್ರುದ್ದೀನ್ ಅಲಿ ಅಹ್ಮದ್ ಅವರು ಬೇರೆ ಬೇರೆ ದಿನಾಂಕದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರೂ, ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿಲ್ಲ. ಇದನ್ನೂ ಓದಿ:ಭಾರತದ ಗಡಿಯನ್ನು ಅಕ್ರಮವಾಗಿ ಪ್ರವೇಶಿದ್ದ ಪೋಲೆಂಡ್ ಪ್ರಜೆ ಅರೆಸ್ಟ್
ಅದಾದ ಬಳಿಕ ಭಾರತದ ಆರನೇ ರಾಷ್ಟ್ರಪತಿ ನೀಲಂ ಸಂಜೀವ ರೆಡ್ಡಿ ಅವರು 1977ರ ಜುಲೈ 25ರಂದು ಪ್ರಮಾಣ ವಚನ ಸ್ವೀಕರಿಸಿದ್ದರು. ಇದಾದ ನಂತರ ಬಂದ ಗಿಯಾನಿ ಜೈಲ್ ಸಿಂಗ್, ಆರ್. ವೆಂಕಟರಾಮನ್, ಶಂಕರ್ ದಯಾಳ್ ಶರ್ಮಾ, ಕೆ.ಆರ್. ನಾರಾಯಣನ್, ಎಪಿಜೆ ಅಬ್ದುಲ್ ಕಲಾಂ, ಪ್ರತಿಭಾ ಪಾಟೀಲ್, ಪ್ರಣಬ್ ಮುಖರ್ಜಿ ಮತ್ತು ರಾಮ್‍ನಾಥ್ ಕೋವಿಂದ್, ದ್ರೌಪದಿ ಮುರ್ಮು ಸೇರಿದಂತೆ ಎಲ್ಲಾ ರಾಷ್ಟ್ರಪತಿಗಳು ಇದೇ ದಿನಾಂಕದಂದೂ ಪ್ರಮಾಣವಚನ ಸ್ವೀಕರಿಸಿರುವುದು ವಿಶೇಷವಾಗಿದೆ. ಇದನ್ನೂ ಓದಿ:ಮಹಿಳಾ ಸಬಲೀಕರಣ ನನ್ನ ಮೊದಲ ಆದ್ಯತೆ – ಅಧಿಕಾರ ಸ್ವೀಕರಿಸಿದ ದ್ರೌಪದಿ ಮುರ್ಮು
Live Tv
[brid partner=56869869 player=32851 video=960834 autoplay=true]